ಕೋಲಾರ: ಪೊಲೀಸ್ ಬ್ಯಾರಿಕೇಡ್‌ಗೆ ಬೈಕ್ ಡಿಕ್ಕಿಯಾದ ಪರಿಣಾಮ ಬೈಕ್‌ನಲ್ಲಿದ್ದ ಪೊಲೀಸ್ ಪೇದೆ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ (Kolara) ನಡೆದಿದೆ.
ಕೆಜಿಎಫ್ ಡಿಎಆರ್ ಪೊಲೀಸ್ ಪೇದೆ ಚಿರಂಜೀವಿ (37) ಅಪಘಾತದಲ್ಲಿ ಮೃತಪಟ್ಟವರು. ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ಮಾರಿಕುಪ್ಪಂ ಬಳಿ ಮೂರು ದಿನದ ಹಿಂದೆ ಬ್ಯಾರಿಕೇಡ್‌ಗೆ ಬೈಕ್ ಡಿಕ್ಕಿಯಾಗಿ ತೀವ್ರವಾಗಿ ಗಾಯಗೊಂಡಿದ್ದರು. ಇದನ್ನೂ ಓದಿ: ಪತ್ನಿ ಕೊಲೆಗೈದು ನಾಪತ್ತೆ ಕತೆ ಕಟ್ಟಿದ ಪತಿ – 2 ತಿಂಗಳ ಬಳಿಕ ಪ್ರಕರಣ ಬಯಲು
ಅವರನ್ನು ಆಸ್ಪತ್ರೆಗೆ ಚಿಕಿತ್ಸೆ ದಾಖಲಿಸಲಾಗಿತ್ತು. ಆದರೆ ಪೊಲೀಸ್ ಪೇದೆ ಚಿರಂಜೀವಿ ಇಂದು (ಶುಕ್ರವಾರ) ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅಂಡರ್‌ಸನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಮಿಣಸಂದ್ರ ಗ್ರಾಮದವರಾದ ಹಾಲಿ ಜಯಮಂಗಲ ಗ್ರಾಮ ಪಂಚಾಯಿತಿ ಸದಸ್ಯನಾಗಿರುವ ಮೃತ ಅನಿಲ್ ಕಾಂಗ್ರೆಸ್ ಪಕ್ಷದ ಬೆಂಬಲಿತ ಸದಸ್ಯರಾಗಿದ್ದರು. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹಳೆ ದ್ವೇಷದ ಹಿನ್ನೆಲೆ ಕೊಲೆ ಮಾಡಿರುವ ಸಾಧ್ಯತೆ ಇದ್ದು, ಆರೋಪಿಗಳು ಇನ್ನೂ ಪತ್ತೆಯಾಗಿಲ್ಲ.
ಮೀಣಸಂದ್ರ ಗ್ರಾಮದ ಅನಿಲ್ ಕುಮಾರ್ ದ್ವಿಚಕ್ರ ವಾಹನದಲ್ಲಿ ಲಕ್ಕೂರು ಗೇಟ್‌ಗೆ ಬರುತ್ತಿದ್ದಾಗ ಮದ್ಯ ದಾರಿಯಲ್ಲಿ ಅಪರಿಚಿತ ವ್ಯಕ್ತಿಗಳು ಮಾರಣಾಂತಿಕ ಆಯುಧದಿಂದ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಜಿಲ್ಲಾ ವರಿಷ್ಠಾಧಿಕಾರಿ ನಾರಾಯಣ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಾಲೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಬೆಲೆ ಬೀಸಿದ್ದಾರೆ. ಇದನ್ನೂ ಓದಿ: ಚಲಿಸುತ್ತಿದ್ದ ಬೈಕ್‌ಗೆ ಕಾರು ಡಿಕ್ಕಿ – ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವು
ಕೋಲಾರ : ಬಂಗಾರಪೇಟೆ ನಗರದ (Bangarpet) ಮಸೀದಿ ಬಳಿ ರಾತ್ರೋ ರಾತ್ರಿ ನಿಮಾರ್ಣವಾಗಿದ್ದ ವಿವಾದಿತ ಕ್ಲಾಕ್ ಟವರ್ (Clock Tower) ಮಾದರಿಯನ್ನು ಪೊಲೀಸರು (Police) ತೆರವುಗೊಳಿಸಿದ್ದಾರೆ.
ಕೋಲಾರ ಜಿಲ್ಲೆ ಬಂಗಾರಪೇಟೆ ಪಟ್ಟಣದಲ್ಲಿ ಇಂದು ಕೋಲಾರದ ಕ್ಲಾಕ್ ಟವರ್ ಮಾದರಿ ನಿರ್ಮಾಣ ಮಾಡಲಾಗಿತ್ತು. ಬಂಗಾರಪೇಟೆ ಪಟ್ಟಣದ ನ್ಯೂಟೌನ್ ಮಸೀದಿ (New Town Mosque) ಬಳಿ ನಿರ್ಮಾಣ ಮಾಡಲಾಗಿದ್ದ ಕ್ಲಾಕ್ ಟವರ್ ಮಾದರಿ ಇದಾಗಿದ್ದು, ಟವರ್ ಮಾದರಿ ನಿರ್ಮಿಸಿ ಹಸಿರು ಬಟ್ಟೆ ಸುತ್ತಿದ್ದ ಸ್ಥಳೀಯರು ವಿವಾದಕ್ಕೆ ಗುರಿಯಾಗಿದ್ದರು.
ಕೋಲಾರ: ಟೊಮೆಟೋ ಬೆಳೆ ಕೋಲಾರ (Kolara) ಜಿಲ್ಲೆಯ ರೈತರ ಪಾಲಿಗೆ ಜೂಜಾಟದ ಬೆಳೆಯಾಗಿ ಪರಿಣಮಿಸಿದೆ. ಬೆಳೆ ಇದ್ದಾಗ ಬೆಲೆ ಇರಲ್ಲ, ಬೆಲೆ ಇದ್ದಾಗ ಬೆಳೆ ಬರಲ್ಲ ಇದು ಟೊಮೆಟೋ ಬೆಳೆಗಾರರ ಸ್ಥಿತಿ. ಕಳೆದ ನಾಲ್ಕು ದಿನಗಳಲ್ಲಿ ಟೊಮೆಟೋ (Tomato) ಬೆಲೆ 900 ರಿಂದ 1000 ರೂಪಾಯಿವರೆಗೆ ಇಳಿಕೆಯಾಗಿದೆ. ಬೆಳೆ ಇಳಿಕೆಯಾದ ಬೆನ್ನಲ್ಲೇ ರೈತರಿಗೆ ಆತಂಕ ಶುರುವಾಗಿದ್ದರೆ ಗ್ರಾಹಕರು ಕೊಂಚ ನಿರಾಳವಾಗುತ್ತಿದ್ದಾರೆ.
ಕಳೆದ 2 ತಿಂಗಳಿನಿಂದ ಕೋಲಾರ ಎಪಿಎಂಸಿ ಮಾರುಕಟ್ಟೆ (Kolara APMC Market) ಷೇರು ಮಾರುಕಟ್ಟೆಯಂತಾಗಿ ರೈತರು ಹಾಗೂ ವ್ಯಾಪಾರಿಗಳಿಗೆ ಹೂಡಿಕೆ ಮಾಡುವ ಕೇಂದ್ರವಾಗಿ ಪರಿಣಮಿಸಿತ್ತು. ಆದರೆ ನಾಲ್ಕು ದಿನಗಳಿಂದ ಟೊಮೆಟೋ ಬೆಲೆ ನಿರಂತರವಾಗಿ ಕುಸಿಯುವ ಮೂಲಕ ರೈತರ ಆತಂಕಕ್ಕೆ ಕಾರಣವಾಗಿದೆ. ನಾಲ್ಕು ದಿನದ ಮೊದಲು ಸರಾಸರಿ 15 ಕೆಜಿಯ ಟೊಮೆಟೋ ಬಾಕ್ಸ್ 2,500- 2,800 ರೂ.ಗೆ ಮಾರಾಟವಾಗುತ್ತಿತ್ತು. ಭಾನುವಾರ ಅತಿ ಹೆಚ್ಚು ಗುಣಮಟ್ಟ ಇರುವ ಸರಾಸರಿ 15 ಕೆಜಿಯ ಟೊಮೆಟೋ ಬಾಕ್ಸ್ ಬೆಲೆ ಕೇವಲ 1,500 ರೂಪಾಯಿಗೆ ಮಾರಾಟವಾಗಿದೆ. ಶನಿವಾರ, ಶುಕ್ರವಾರಕ್ಕೆ ಹೋಲಿಕೆ ಮಾಡಿದರೆ 900 ರಿಂದ 1000 ರೂ. ಕಡಿಮೆಯಾಗಿದೆ. ಸದ್ಯ ಕೋಲಾರ ಎಪಿಎಂಸಿ ಮಾರುಕಟ್ಟೆಗೆ ತಮಿಳುನಾಡು, ಆಂಧ್ರಪ್ರದೇಶದಿಂದಲೂ ಟೊಮೆಟೋ ಬರುತ್ತಿದ್ದು, ಬೆಲೆ ಇಳಿಮುಖವಾಗುತ್ತಿದೆ.
ಅಷ್ಟೇ ಅಲ್ಲದೇ ಟೊಮೆಟೋ ಖರೀದಿಗೆ ಹೊರ ರಾಜ್ಯದ ವ್ಯಾಪಾರಿಗಳು ಮುಂದಕ್ಕೆ ಬರುತ್ತಿಲ್ಲ. ಇದರೊಂದಿಗೆ ಏಷ್ಯಾದಲ್ಲೇ ಅತಿ ದೊಡ್ಡ ಟೊಮೆಟೋ ಮಾರುಕಟ್ಟೆ ನಾಸಿಕ್‌ನಲ್ಲೂ ಟೊಮೆಟೋ ಹೆಚ್ಚಾಗಿ ಆವಕ ಬಂದಿದೆ. ಅಲ್ಲದೆ ಬೇರೆ ಬೇರೆ ರಾಜ್ಯಗಳಲ್ಲಿ ಮಳೆ ಹೆಚ್ಚಾಗಿ ಅಲ್ಲಿನ ವ್ಯಾಪಾರಿಗಳು ಟೊಮೆಟೋ ಖರೀದಿ ಮಾಡುತ್ತಿಲ್ಲ. ಪರಿಣಾಮ ಟೊಮೆಟೋ ಬೆಲೆ ಒಂದೇ ಸಮನೆ ಕುಸಿಯುತ್ತಿದೆ.
ವಿಶೇಷವಾಗಿ ಇದು ಆಗಸ್ಟ್ ತಿಂಗಳಾಗಿರುವುದರಿಂದ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಗೆ ಆಫ್ಘಾನಿಸ್ತಾನ ಹಾಗೂ ಪಾಕಿಸ್ತಾನಕ್ಕೆ ಕಳುಹಿಸುವ ಟೊಮೆಟೋ ಕೂಡ ಬಂದ್ ಆಗಿದೆ. ಇವೆಲ್ಲದರ ಮಧ್ಯೆ ಕೋಲಾರ ಜಿಲ್ಲೆಯಲ್ಲಿ ರೈತರು ಹೆಚ್ಚಾಗಿ ಟೊಮೆಟೋ ಬೆಳೆಯಲು ಮುಂದಾಗಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಟೊಮೆಟೋ ಬೆಲೆ ಮತ್ತಷ್ಟು ಕುಸಿಯುವ ಸಾಧ್ಯತೆಯಿದೆ.
ಕೋಲಾರ: 21 ಲಕ್ಷ ರೂ. ಮೌಲ್ಯದ ಟೊಮೆಟೋ (Tomato) ಹೊತ್ತುಕೊಂಡು ಕೋಲಾರದಿಂದ (Kolara) ರಾಜಸ್ಥಾನಕ್ಕೆ ತೆರಳುತ್ತಿದ್ದ ಲಾರಿ ಕಳ್ಳತನಕ್ಕೆ (Lorry Theft) ಟ್ವಿಸ್ಟ್ ಸಿಕ್ಕಿದೆ.
ಚಾಲಕ ಹಾಗೂ ಲಾರಿ ಸಂಪರ್ಕಕ್ಕೆ ಸಿಗದ ಹಿನ್ನೆಲೆ ಕೋಲಾರ ನಗರ ಠಾಣೆಗೆ ಮಂಡಿ ಮಾಲೀಕರು ದೂರು ನೀಡಿದ್ದರು. ಪ್ರಕರಣ ಕೈಗೆತ್ತಿಕೊಂಡ ಪೊಲೀಸರು ತನಿಖೆ ಶುರು ಮಾಡಿದಾಗ ಟೊಮೆಟೋವನ್ನು ಗುಜರಾತ್‍ನ (Gujarat) ಅಹಮದಾಬಾದ್‌ನಲ್ಲಿ ಮಾರಾಟ ಮಾಡಿರುವುದು ಬೆಳಕಿಗೆ ಬಂದಿದೆ. ಟೊಮೆಟೋ ಮಾರಾಟ ಮಾಡಿ ಹಣ ಪಡೆದು ಚಾಲಕ ಹಾಗೂ ಕ್ಲೀನರ್ ನಾಪತ್ತೆಯಾಗಿದ್ದಾರೆ.
ಏನಿದು ಪ್ರಕರಣ?
ಕೋಲಾರ ಎಪಿಎಂಸಿ ಮಾರುಕಟ್ಟೆಯ (APMC Market) ಎ.ಜಿ.ಟ್ರೇಡರ್ಸ್‌ನ ಸಕ್ಲೇನ್ ಹಾಗೂ ಎಸ್.ವಿ.ಟಿ. ಟ್ರೇಡರ್ಸ್‌ನ ಮುನಿರೆಡ್ಡಿ ಎಂಬುವರು ಸುಮಾರು 21 ಲಕ್ಷ ಮೌಲ್ಯದ ಸುಮಾರು 750 ಕ್ರೇಟ್ (11 ಟನ್) ಟೊಮೆಟೋವನ್ನು ಜುಲೈ 27ರಂದು ರಾಜಸ್ಥಾನದ ಜೈಪುರಕ್ಕೆ ಮೆಹತ್ ಟ್ರಾನ್ಸ್‌ಪೋರ್ಟ್‌ಗೆ ಸೇರಿದ ಲಾರಿಯ ಮೂಲಕ ಕಳುಹಿಸಿಕೊಟ್ಟಿದ್ದರು.
ನಿಗದಿ ಪ್ರಕಾರ ಶನಿವಾರ ರಾತ್ರಿ ಜೈಪುರಕ್ಕೆ ಲಾರಿ ತಲುಪಬೇಕಿತ್ತು. ಶನಿವಾರ ಮಧ್ಯಾಹ್ನದವರೆಗೆ ವ್ಯಾಪಾರಿಗಳ ಜೊತೆ ಲಾರಿ ಚಾಲಕ ಅನ್ವರ್ ಸಂಪರ್ಕದಲ್ಲಿದ್ದ. ಆ ನಂತರ ಆತನ ಸಂಪರ್ಕ ಕಡಿತವಾಗಿದೆ. ಈ ಹಿನ್ನೆಲೆಯಲ್ಲಿ ಕೋಲಾರ ಠಾಣೆಯಲ್ಲಿ ದೂರು ನೀಡಿದ ಬಳಿಕ ಚಾಲಕ ಗುಜರಾತ್‌ನಲ್ಲಿ ಟೊಮೆಟೋ ಮಾರಾಟ ಮಾಡಿರುವ ವಿಷಯ ತಿಳಿದು ಬಂದಿದೆ.
ಕೋಲಾರ ಎಪಿಎಂಸಿ ಮಾರುಕಟ್ಟೆಯು ದೇಶದಲ್ಲಿ ಟೊಮೆಟೋ ಎರಡನೇ ಅತಿದೊಡ್ಡ ಮಾರುಕಟ್ಟೆಯಾಗಿದೆ. ಇಲ್ಲಿಂದ ಹೊರ ರಾಜ್ಯಗಳು ಸೇರಿದಂತೆ ಬೇರೆ ಬೇರೆ ದೇಶಗಳಿಗೆ ಟೊಮೆಟೋವನ್ನು ಕಳುಹಿಸಿಕೊಡಲಾಗುತ್ತದೆ. ಆದರೆ ಕಳೆದ ಕೆಲ ದಿನಗಳಿಂದ ಟೊಮೆಟೋ ಬಂಗಾರವಾಗಿದ್ದು ರೈತರು ಜಮೀನಿನಲ್ಲಿ ಕಾಯುತ್ತಿದ್ದರೆ ಇತ್ತ ಮಾರುಕಟ್ಟೆಯಲ್ಲಿ ಸಿಸಿ ಟಿವಿ ಹಾಗೂ ಪೊಲೀಸ್ ಕಣ್ಗಾವಲನ್ನು ಇರಿಸಲಾಗಿದೆ.
ರಾಜ್ಯದಲ್ಲೇ ಅತಿ ಹೆಚ್ಚು ಟೊಮೆಟೋವನ್ನು ಕೋಲಾರದ ರೈತರು ಬೆಳೆಯುತ್ತಾರೆ. ಅದರಲ್ಲೂ ಉತ್ತಮ ಗುಣಮಟ್ಟದ ಟೊಮೆಟೋ ಬೆಳೆದರೂ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದರು. ಈಗ ಹಲವು ಮಾರಕ ಕಾಯಿಲೆಗಳು ಬಂದ ಹಿನ್ನೆಲೆ ಟೊಮೆಟೋ ಇಳುವರಿ ಕಡಿಮೆಯಾಗಿದ್ದು ಬೆಲೆ ಭಾರೀ ಏರಿಕೆಯಾಗಿದೆ.
ಚಿಕ್ಕಮಗಳೂರು: ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಇನ್ನೋವಾ ಕಾರೊಂದು (Innova Car) ಸುಮಾರು 20 ಅಡಿ ಎತ್ತರದಿಂದ ಕೆಳಕ್ಕೆ ಬಿದ್ದಿರುವ ಘಟನೆ ಜಿಲ್ಲೆಯ ಕಳಸ (Kalasa) ತಾಲೂಕಿನ ಕಲ್ಮಕ್ಕಿ ಗ್ರಾಮದಲ್ಲಿ ನಡೆದಿದೆ.
ಕಾರಿನಲ್ಲಿ ಮಗು ಸೇರಿ 9 ಜನ ಕೋಲಾರ ಜಿಲ್ಲೆಯಿಂದ ಹೊರನಾಡು ಅನ್ನಪೂರ್ಣೇಶ್ವರಿ ದರ್ಶನಕ್ಕೆ (Horanadu Annapoorneshwari Temple) ಹೊರಟಿದ್ದರು. ಕಾರು ಕಳಸ ತಾಲೂಕಿನ ಕಲ್ಮಕ್ಕಿಗೆ ಬರುತ್ತಿದ್ದಂತೆ ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಇದನ್ನೂ ಓದಿ: ಶವ ಸಾಗಿಸ್ತಿದ್ದ ಅಂಬುಲೆನ್ಸ್ ಪಲ್ಟಿ – ಪ್ರಾಣಾಪಾಯದಿಂದ ಚಾಲಕ ಪಾರು
ಕಾರು ಸುಮಾರು 20 ಅಡಿ ಎತ್ತರದಿಂದ ಬಿದ್ದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಮನೆಯ ಮುಂಭಾಗಕ್ಕೆ ಬಿದ್ದ ಕಾರು ಮನೆ ಮೇಲೆ ಬಿದ್ದಿದ್ದರೆ ದೊಡ್ಡ ಅನಾಹುತವೇ ಸಂಭವಿಸುತ್ತಿತ್ತು. ಮನೆ ಕೂಡ ಬಹುತೇಕ ನಜ್ಜುಗುಜ್ಜಾಗಿ, ಸಾವು ಸಂಭವಿಸುವ ಮಟ್ಟಕ್ಕೂ ಅನಾಹುತವಾಗುತ್ತಿತ್ತು. ಆದರೆ ಕಾರು ಮನೆ ಮುಂಭಾಗ ಬಿದ್ದಿದ್ದರಿಂದ ಭಾರೀ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದಂತಾಗಿದೆ.
ಕಾರು 20 ಅಡಿ ಎತ್ತರದಿಂದ ಬಿದ್ದ ಪರಿಣಾಮ ಕಾರಿನಲ್ಲಿದ್ದ ಒಂಬತ್ತು ಜನರಿಗೆ ದೊಡ್ಡ ಮಟ್ಟದ ಗಾಯಗಳಾಗಿವೆ. ಅದರಲ್ಲಿ ಮೂವರ ಪರಿಸ್ಥಿತಿ ಗಂಭೀರವಾಗಿದೆ. ಅಪಘಾತವಾದ ಕೂಡಲೇ ಗಾಯಾಳುಗಳನ್ನು ಕಳಸ ಆಸ್ಪತ್ರೆಗೆ ಸೇರಿಸಿ ಪ್ರಾಥಮಿಕ ಚಿಕಿತ್ಸೆಯ ಬಳಿಕ ಎಲ್ಲರನ್ನೂ ಹೆಚ್ಚಿನ ಚಿಕಿತ್ಸೆಗಾಗಿ ಎರಡು ಅಂಬುಲೆನ್ಸ್‌ನಲ್ಲಿ ಮಂಗಳೂರಿನ ವೆನ್‍ಲಾಕ್ ಆಸ್ಪತ್ರೆಗೆ ರವಾನಿಸಲಾಗಿದೆ. ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೋಲಾರ: ಟೊಮೆಟೋ (Tomato) ಬೆಳೆದ ಜಿಲ್ಲೆಯ ಕುಟುಂಬವೊಂದು ಒಂದೇ ದಿನ ಲಕ್ಷಗಟ್ಟಲೇ ಹಣವನ್ನು ಸಂಪಾದಿಸಿದೆ. ಎರಡು ಸಾವಿರ ಬಾಕ್ಸ್ ಟೊಮೆಟೋವನ್ನು ಹರಾಜು ಹಾಕಿ ಜಿಲ್ಲೆಯ ಕುಟುಂಬವೊಂದು 38 ಲಕ್ಷ ರೂ. ಆದಾಯ ಸಂಪಾದಿಸಿದೆ.
ಬೇತಮಗಲದ ಪ್ರಭಾಕರ್ ಗುಪ್ತಾ ಮತ್ತು ಅವರ ಸಹೋದರರು ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿ (Kolara APMC Market) ಬಾಕ್ಸ್‌ಗೆ 1,900 ರೂ.ನಂತೆ ಮಾರಾಟ ಮಾಡಿದ್ದಾರೆ.
ಕೆಜಿಎಫ್ (KGF) ತಾಲೂಕಿನ ಜಯಮಂಗಲ, ಬಡಮಕಾನಹಳ್ಳಿ, ಬೇತಮಂಗಲ ಸುತ್ತಮುತ್ತ 40 ಎಕರೆ ಜಮೀನನ್ನು ಹೊಂದಿರುವ ಗುಪ್ತಾ ಕುಟುಂಬ ಕಳೆದ ಹಲವು ವರ್ಷಗಳಿಂದ ಹಣ್ಣು, ಹೂ, ತರಕಾರಿ ಕೃಷಿ ಮಾಡುತ್ತಿದೆ. ಇವರು ಮೂಲತಃ ರಸಗೊಬ್ಬರ ಮತ್ತು ಕೀಟನಾಶಕಗಳ ವ್ಯಾಪಾರಿಗಳಾಗಿದ್ದು, ಕೃಷಿ ಹಾಗೂ ಕೃಷಿಯಲ್ಲಿ ಅಪಾರ ಪರಿಣಿತಿ ಹೊಂದಿದ್ದಾರೆ. ಎರಡು ವರ್ಷಗಳ ಹಿಂದೆಯೂ ಟೊಮೆಟೋಗೆ ಉತ್ತಮ ಬೆಲೆ ಸಿಕ್ಕಿತ್ತು ಎಂದು ಗುಪ್ತಾ ಕುಟುಂಬಸ್ಥರು ಹೇಳುತ್ತಾರೆ. ಇದನ್ನೂ ಓದಿ: ಆಂಧ್ರ, ಕರ್ನಾಟಕ, ಮಹಾರಾಷ್ಟ್ರದಿಂದ ಟೊಮೆಟೋ ಖರೀದಿಗೆ ಕೇಂದ್ರ ಸೂಚನೆ
ಕೋಲಾರದಿಂದ ಪ್ರತಿ ದಿನ 8,000 ಮೆಟ್ರಿಕ್ ಟನ್ ಟೊಮೆಟೋ ಪೂರೈಕೆಯಾಗುತ್ತಿತ್ತು. ಆದರೆ ಈಗ ಕೇವಲ 1,000 ಮೆಟ್ರಿಕ್ ಟೊಮೊಟೋ ಪೂರೈಕೆ ಆಗುತ್ತಿದೆ. ಜಿಲ್ಲೆಯಲ್ಲಿ ಟೊಮೆಟೋ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಟೊಮೆಟೋ ಬೆಳೆಯುವ ರೈತರು ಹಗಲಿರುಳು ಜಮೀನಿನಲ್ಲಿ ಕಾವಲು ಕಾಯುತ್ತಿದ್ದಾರೆ.
ಕೋಲಾರ ಎಪಿಎಂಸಿ ಮಾರುಕಟ್ಟೆಯು ದೇಶದಲ್ಲಿ ಟೊಮೆಟೋ ಎರಡನೇ ಅತಿದೊಡ್ಡ ಮಾರುಕಟ್ಟೆಯಾಗಿದೆ. ಇಲ್ಲಿಂದ ಹೊರ ರಾಜ್ಯಗಳು ಸೇರಿದಂತೆ ಬೇರೆ ಬೇರೆ ದೇಶಗಳಿಗೆ ಟೊಮೆಟೋವನ್ನು ಕಳುಹಿಸಿಕೊಡಲಾಗುತ್ತದೆ. ಆದರೆ ಕಳೆದ 15 ದಿನಗಳಿಂದ ಟೊಮೆಟೋ ಬಂಗಾರವಾಗಿದ್ದು ರೈತರು ಜಮೀನಿನಲ್ಲಿ ಕಾಯುತ್ತಿದ್ದರೆ ಇತ್ತ ಮಾರುಕಟ್ಟೆಯಲ್ಲಿ ಸಿಸಿ ಟಿವಿ ಹಾಗೂ ಪೊಲೀಸ್ ಕಣ್ಗಾವಲನ್ನು ಇರಿಸಲಾಗಿದೆ.
ರಾಜ್ಯದಲ್ಲೇ ಅತಿ ಹೆಚ್ಚು ಟೊಮೆಟೋವನ್ನು ಕೋಲಾರದ ರೈತರು ಬೆಳೆಯುತ್ತಾರೆ. ಅದರಲ್ಲೂ ಉತ್ತಮ ಗುಣಮಟ್ಟದ ಟೊಮೆಟೋ ಬೆಳೆದರೂ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದರು. ಈಗ ಹಲವು ಮಾರಕ ಕಾಯಿಲೆಗಳು ಬಂದ ಹಿನ್ನೆಲೆ ಟೊಮೆಟೋ ಇಳುವರಿ ಕಡಿಮೆಯಾಗಿದ್ದು ಬೆಲೆ ಭಾರೀ ಏರಿಕೆಯಾಗಿದೆ.
ನವದೆಹಲಿ: ಎಲ್ಲವೂ ನಿಗದಿಯಂತೆ ನಡೆದರೆ ಮುಂದಿನ ದಿನಗಳಲ್ಲಿ ಟಾಟಾ ಕಂಪನಿ (Tata Company) ಕೋಲಾರದಲ್ಲಿ (Kolara) ತಯಾರಿಸಿದ ಮೇಡ್ ಇನ್ ಇಂಡಿಯಾ ಐಫೋನ್ (iPhone) ಗ್ರಾಹಕರ ಕೈ ಸೇರಲಿದೆ.
ಹೌದು. ಟಾಟಾ ಕಂಪನಿ ತೈವಾನಿನ ವಿಸ್ಟ್ರಾನ್ ಕಂಪನಿಯ ಭಾರತದ ಘಟಕವನ್ನು ಖರೀದಿಸುವ ಮಾತುಕತೆ ಅಂತಿಮ ಹಂತದಲ್ಲಿದೆ. ಎಲ್ಲವೂ ನಿಗದಿಯಂತೆ ನಡೆದರೆ ಈ ಆಗಸ್ಟ್‌ನಲ್ಲೇ ಟಾಟಾ ಕಂಪನಿ ವಿಸ್ಟ್ರನ್ ಕಂಪನಿಯನ್ನು (Wistron Corp) ಖರೀದಿಸಲಿದೆ.
155 ವರ್ಷ ಇತಿಹಾಸ ಹೊಂದಿರುವ ಟಾಟಾ ಗ್ರೂಪ್ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳನ್ನು ಮಾರಾಟ ಮಾಡುತ್ತಿದೆ. ಆದರೆ ಈಗ ಮೊದಲ ಬಾರಿಗೆ ಫೋನ್ ಉತ್ಪದನಾ ಕ್ಷೇತ್ರಕ್ಕೆ ಕೈ ಹಾಕಿದೆ. ಈ ಡೀಲ್ ಪೂರ್ಣಗೊಂಡ ಬಳಿಕ ಐಫೋನ್ ತಯಾರಿಸಿದ ದೇಶದ ಮೊದಲ ಕಂಪನಿ ಎಂಬ ಹೆಗ್ಗಳಿಕೆಗೆ ಟಾಟಾ ಗ್ರೂಪ್ ಪಾತ್ರವಾಗಲಿದೆ.
ಇದು 600 ದಶಲಕ್ಷ ಡಾಲರ್ (ಅಂದಾಜು 4,950 ಕೋಟಿ ರೂ.) ಮೊತ್ತದ ಖರೀದಿ ಡೀಲ್ ಆಗಿದ್ದು ಕಳೆದ ವರ್ಷವೇ ಮಾತುಕತೆ ಆರಂಭವಾಗಿತ್ತು. ಈಗ ಮಾತುಕತೆ ಅಂತಿಮ ಹಂತಕ್ಕೆ ಬಂದಿದೆ ಎಂದು ವರದಿಯಾಗಿದೆ.
2022-23ರ ಹಣಕಾಸು ವರ್ಷದಲ್ಲಿನ ಮೊಬೈಲ್ ರಫ್ತುಗಳ ಪೈಕಿ ಐಫೋನ್ ಪಾಲು ಶೇ.40 ರಷ್ಟಿದೆ ಎಂದು ನೀತಿ ಆಯೋಗದ ಮಾಜಿ ಸಿಇಒ, ಜಿ20 ಶೆರ್ಪಾ ಅಮಿತಾಬ್ ಕಾಂತ್(Amitabh Kant) ಈ ಹಿಂದೆ ತಿಳಿಸಿದ್ದರು.
2008ರಲ್ಲಿ ಐಫೋನ್ ಬಿಡುಗಡೆಯಾದಾಗ ಭಾರತದಲ್ಲಿ 50 ಸಾವಿರ ಫೋನುಗಳು ಮಾರಾಟವಾಗಿತ್ತು. 2021ರಲ್ಲಿ 50 ಲಕ್ಷ ಐಫೋನ್ ಮಾರಾಟವಾಗಿದ್ದರೆ 2022ರಲ್ಲಿ 70 ಲಕ್ಷಕ್ಕೂ ಅಧಿಕ ಫೋನ್ ಮಾರಾಟವಾಗಿದೆ. ಮಾರಾಟ ಹೆಚ್ಚಾಗುತ್ತಿದ್ದಂತೆ ಆಪಲ್ ಭಾರತದಲ್ಲೇ ಹೆಚ್ಚು ಐಫೋನ್ ಉತ್ಪಾದನೆಗೆ ಮುಂದಾಗಿದೆ.
ವಿಶ್ವದ ಐಫೋನ್ ಮಾರಾಟದಲ್ಲಿ ಕಳೆದ ವರ್ಷ ಭಾರತದ ಘಟಕದ ಪಾಲು ಶೇ.3 ಇದ್ದರೆ 2022ರಲ್ಲಿ ಶೇ.5-7ಕ್ಕೆ ಏರಿಕೆಯಾಗಿದೆ. 2022ರಲ್ಲಿ ಭಾರತದಲ್ಲಿ ಮಾರಾಟವಾದ ಐಫೋನ್ ಪೈಕಿ ಶೇ.85 ರಷ್ಟು ಫೋನುಗಳು ಮೇಡ್ ಇನ್ ಇಂಡಿಯಾ ಫೋನ್ ಆಗಿರುವುದು ವಿಶೇಷ.
ಎಲೆಕ್ಟ್ರಾನಿಕ್ಸ್ ಕ್ಷೇತ್ರದಲ್ಲಿ ಚೀನಾವನ್ನು ಹಿಂದಿಕ್ಕಿ ಸ್ವಾವಲಂಬಿಯಾಗಲು ಆತ್ಮನಿರ್ಭರ್ ಯೋಜನೆಯ ಭಾಗವಾಗಿ ಕೇಂದ್ರ ಸರ್ಕಾರ ಭಾರತದ ತಯಾರಕರನ್ನು ಜಾಗತಿಕವಾಗಿ ಸ್ಪರ್ಧಾತ್ಮಕವಾಗಿಸಲು, ಹೂಡಿಕೆಗಳನ್ನು ಆಕರ್ಷಿಸಿ ರಫ್ತುಗಳನ್ನು ಹೆಚ್ಚಿಸಲು, ಜಾಗತಿಕ ಪೂರೈಕೆ ಸರಪಳಿಯಲ್ಲಿ ಭಾರತವನ್ನು ಸಂಯೋಜಿಸಲು ಮತ್ತು ಆಮದುಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು 14 ವಲಯಗಳಲ್ಲಿ ಉತ್ಪಾದನೆ ಆಧಾರಿತ ಪ್ರೋತ್ಸಾಹಧನ (Production Linked Incentive) ಯೋಜನೆ ಪ್ರಾರಂಭಿಸಿದೆ.
ಭಾರತವನ್ನು ಮೊಬೈಲ್ ಉತ್ಪಾದನಾ ಹಬ್ ದೇಶವನ್ನಾಗಿ ಪರಿವರ್ತಿಸಲು ಕೇಂದ್ರ ಸರ್ಕಾರ ಉತ್ಪಾದನೆ ಆಧಾರಿತ ಪ್ರೋತ್ಸಾಹ (ಪಿಎಲ್‍ಐ) ಯೋಜನೆಯನ್ನು 2021 ರಿಂದ ಆರಂಭಿಸಿತ್ತು. ಉದ್ಯೋಗ ಸೃಷ್ಟಿಗಾಗಿ ಆರಂಭಿಸಲಾದ ಈ ಯೋಜನೆ ಅಡಿ ಮುಂದಿನ 5 ವರ್ಷದಲ್ಲಿ 1.5 ಲಕ್ಷ ಕೋಟಿ ಮೌಲ್ಯದ ಮೊಬೈಲ್ ಫೋನ್ ಹಾಗೂ ಬಿಡಿಭಾಗಗಳನ್ನು ಉತ್ಪಾದಿಸುವ ಗುರಿಯನ್ನು ಹಾಕಿಕೊಳ್ಳಲಾಗಿದೆ. ಪಿಎಲ್‍ಐ ಯೋಜನೆ ಅಡಿ ಲಾಭ ಪಡೆದುಕೊಳ್ಳಲು ದೇಶದ ಮತ್ತು ವಿಶ್ವದ ಹಲವು ಕಂಪನಿಗಳು ಆಯ್ಕೆಯಾಗಿವೆ.
ಕೋಲಾರ: ಅನಾರೋಗ್ಯದಿಂದ ಮೃತಪಟ್ಟ ಮಹಿಳೆಯ ಅಂತಿಮ ಶವ ಯಾತ್ರೆ ವೇಳೆ ಶವಕ್ಕೆ ಸಿಂಗರಿಸಿದ್ದ ಪಲ್ಲಕ್ಕಿಗೆ ವಿದ್ಯುತ್ ಸ್ಪರ್ಶವಾಗಿ, ಶವ ಪಲ್ಲಕ್ಕಿ ಹೊರುತ್ತಿದ್ದ ಮೂವರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ (Andhra Pradesh) ಚಿತ್ತೂರಲ್ಲಿ ನಡೆದಿದೆ.
ಕೋಲಾರದ (Kolara) ಗಡಿ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಕುಪ್ಪಂನಲ್ಲಿ ಶುಕ್ರವಾರ ಸಂಜೆ ಈ ಘಟನೆ ನಡೆದಿದ್ದು, ಕುಪ್ಪಂ ನಗರದ 5 ನೇ ವಾರ್ಡ್‌ನ ತಂಬಿಗಾನಪಲ್ಲಿ ರಾಣಮ್ಮ (65) ಮೃತಪಟ್ಟಿದ್ದರು. ಮಹಿಳೆ ಅಂತ್ಯಸಂಸ್ಕಾರಕ್ಕೆ ಕಬ್ಬಿಣದಿಂದ ಮಾಡಿದ ಪಲ್ಲಕ್ಕಿ ಹೊತ್ತು ತೆರಳುತ್ತಿದ್ದ ವೇಳೆ ಕರೆಂಟ್ ಶಾಕ್ ಹೊಡೆದಿದೆ. ಕಬ್ಬಿಣದಿಂದ ಶವ ಹೊರಲು ಮಾಡಿದ್ದ ಪಲ್ಲಕ್ಕಿಗೆ ವಿದ್ಯುತ್ ತಂತಿ ತಗುಲಿ ಅವಘಡ ಸಂಭವಿಸಿದೆ. ಇದನ್ನೂ ಓದಿ: ರಾತ್ರಿ ಮಲಗಲು ಜಾಗ ಸಿಗದೆ ಸ್ಮಶಾನದಲ್ಲೇ ಟೆಂಟ್ ಹಾಕಿದ ವಿದೇಶಿಗರು – ಹೌಹಾರಿದ ಜನ
ವಿದ್ಯುತ್ ಸ್ಪರ್ಶದಿಂದ ಅಂತಿಮ ಶವಯಾತ್ರೆಯಲ್ಲಿ ಶವಕ್ಕೆ ಹೆಗಲು ಕೊಟ್ಟಿದ್ದ ಮುನೆಪ್ಪ (45), ತಿರುಪತಿ ರಾವ್ (28), ರವೀಂದ್ರ (30) ಮೃತಪಟ್ಟಿದ್ದಾರೆ.