Tag: kolkata

  • ಆರ್‌ಜಿ ಕರ್ ಅತ್ಯಾಚಾರ ಅಪರಾಧಿಯ ಅಪ್ರಾಪ್ತ ಸೊಸೆ ಶವ ಮನೆ ಕಪಾಟಿನಲ್ಲಿ ಪತ್ತೆ

    ಆರ್‌ಜಿ ಕರ್ ಅತ್ಯಾಚಾರ ಅಪರಾಧಿಯ ಅಪ್ರಾಪ್ತ ಸೊಸೆ ಶವ ಮನೆ ಕಪಾಟಿನಲ್ಲಿ ಪತ್ತೆ

    •  ಚಿತ್ರಹಿಂಸೆ ಆರೋಪ – ತಂದೆ, ಮಲತಾಯಿಗೆ ಧರ್ಮದೇಟು

    ಕೋಲ್ಕತ್ತಾ: ಆರ್‌ಜಿಕರ್ ಅತ್ಯಾಚಾರ ಅಪರಾಧಿಯ (RG Kar Case) 11 ವರ್ಷದ ಸೊಸೆಯ ಶವ ಮನೆಯ ಕಪಾಟಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

    ಸಾವನ್ನಪ್ಪಿದ ಬಾಲಕಿಯನ್ನು ಸುರಂಜನಾ ಸಿಂಗ್ ಎಂದು ಗುರುತಿಸಲಾಗಿದೆ. ಬಾಲಕಿ ಆರ್‌ಜಿಕರ್ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಅಪರಾಧಿಯಾದ ಸಂಜಯ್ ರಾಯ್‌ನ ಸೊಸೆಯಾಗಿದ್ದಾಳೆ. ಬಾಲಕಿಯ ಅನುಮಾನಾಸ್ಪದ ಸಾವಿನಿಂದ ಕೋಪಗೊಂಡ ಸ್ಥಳೀಯರು ಆಕೆಯ ತಂದೆ ಮತ್ತು ಮಲತಾಯಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರತಿಭಟನೆ ನಿಲ್ಲಿಸಿ, ದುರ್ಗಾಪೂಜೆಗೆ ಗಮನ ಹರಿಸಿ – ದೀದಿ ಹೇಳಿಕೆಗೆ ಮೃತ ಟ್ರೈನಿ ವೈದ್ಯೆಯ ತಾಯಿ ಆಕ್ರೋಶ

    ಬಾಲಕಿಯ ಶವ ಪತ್ತೆಯಾಗುತ್ತಿದ್ದಂತೆ ಆಕೆಯ ತಂದೆ ಭೋಲಾ ಸಿಂಗ್ ಮತ್ತು ಅವನ ಪತ್ನಿ ಪೂಜಾ ದಂಪತಿ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ, ನೆರೆಹೊರೆಯವರು ಮಲತಾಯಿಯ ಕೂದಲನ್ನು ಎಳೆದುಕೊಂಡು ಹೋಗಿ ಹೊಡೆದಿದ್ದಾರೆ. ಅಲ್ಲದೇ ಭೋಲಾ ಸಿಂಗ್‌ ಮೇಲೆ ಶೂಗಳಿಂದ ಥಳಿಸಿದ್ದಾರೆ. ಬಳಿಕ ಪೊಲೀಸರು ಉದ್ರಿಕ್ತರಿಂದ ರಕ್ಷಿಸಿ ಅಲಿಪೋರ್ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.

    ಭೋಲಾ ಸಿಂಗ್‌ ಈ ಹಿಂದೆ ಸಂಜಯ್ ರಾಯ್‌ನ ಅಕ್ಕ ಬಬಿತಾ ಅವರನ್ನು ವಿವಾಹವಾಗಿದ್ದು, ಸುರಂಜನಾ ಅವರ ಏಕೈಕ ಮಗಳಾಗಿದ್ದಳು. ಕೆಲವು ವರ್ಷಗಳ ಹಿಂದೆ ಬಬಿತಾ ಆತ್ಮಹತ್ಯೆ ಮಾಡಿಕೊಂಡ ನಂತರ, ಆತ ಆಕೆಯ ತಂಗಿ ಪೂಜಾಳನ್ನು ಮದುವೆಯಾಗಿದ್ದ.

    ಪೋಷಕರು ಬಾಲಕಿಗೆ ದೈಹಿಕವಾಗಿ ಮತ್ತು ಮಾನಸಿಕವಾಗಿ ನಿರಂತರವಾಗಿ ಕಿರುಕುಳ ನೀಡುತ್ತಿದ್ದರು. ಮಗುವನ್ನು ರಾತ್ರಿ ವೇಳೆ ಮನೆಯಿಂದ ಹೊರಗೆ ಹಾಕಲಾಗುತ್ತಿತ್ತು. ಕೆಲವೊಮ್ಮೆ ಬೆಳಗಿನ ಜಾವ 2 ಗಂಟೆಯವರೆಗೂ ಹೊರಗೆ ಹಾಕಲಾಗುತ್ತಿತ್ತು. ಈ ದೌರ್ಜನ್ಯ ಆಕೆಯನ್ನು ತೀವ್ರವಾಗಿ ನೋಯಿಸಿತ್ತು ಎಂದು ನೆರೆಹೊರೆಯವರು ಆರೋಪಿಸಿದ್ದಾರೆ.

    ಬಾಲಕಿಯ ಅಜ್ಜಿ, ಪೋಷಕರು ಆಕೆಗೆ ಬೆಲ್ಟ್‌ಗಳಿಂದ ಹೊಡೆಯುತ್ತಿದ್ದರು. ಆಕೆಯ ತಲೆಯನ್ನು ಗೋಡೆಗಳಿಗೆ ಹೊಡೆಸುತ್ತಿದ್ದರು ಎಂದು ಆರೋಪಿಸಿದ್ದಾರೆ. ಇದರ ನಡುವೆ ʻನನ್ನ ಮಗು ಉಳಿದಿಲ್ಲ, ನನ್ನ ಜೀವನಕ್ಕೆ ಅರ್ಥವಿಲ್ಲʼ ಎಂದು ಬಾಲಕಿಯ ತಂದೆ ಕಣ್ಣೀರಿಟ್ಟಿದ್ದಾನೆ ಎನ್ನಲಾಗಿದೆ.

    ಪ್ರಾಥಮಿಕ ತನಿಖೆಯಲ್ಲಿ ಆತ್ಮಹತ್ಯೆ ಎನ್ನಲಾಗುತ್ತಿದೆ. ಅಲ್ಲದೇ ಕೊಲೆಯ ಶಂಕೆಯೂ ಇದೆ. ನಿಖರ ಕಾರಣ ತಿಳಿಯಲು ಮರಣೋತ್ತರ ಪರೀಕ್ಷೆ ಮತ್ತು ವಿಧಿವಿಜ್ಞಾನ ವರದಿಗಳಿಗಾಗಿ ಕಾಯುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿ ಶವವಾಗಿ ಪತ್ತೆ

  • ಪಶ್ಚಿಮ ಬಂಗಾಳದಲ್ಲಿ ಭಾರೀ ಮಳೆ – 7 ಮಂದಿ ಬಲಿ

    ಪಶ್ಚಿಮ ಬಂಗಾಳದಲ್ಲಿ ಭಾರೀ ಮಳೆ – 7 ಮಂದಿ ಬಲಿ

    – ಜನವಸತಿ ಪ್ರದೇಶಕ್ಕೆ ನುಗ್ಗಿದ ನೀರು, ದುರ್ಗಾ ಪೂಜೆಗೆ ಅಡ್ಡಿ

    ಕೋಲ್ಕತ್ತಾ: ಸೋಮವಾರ ರಾತ್ರಿಯಿಡೀ ಪಶ್ಚಿಮ ಬಂಗಾಳದ ಕೋಲ್ಕತ್ತಾ (Kolkata) ಹಾಗೂ ಉಪನಗರಗಳಲ್ಲಿ ರಾತ್ರಿಯಿಡೀ ಸುರಿದ ಧಾರಾಕಾರ ಮಳೆಗೆ (Rain) ಹಲವು ಪ್ರದೇಶಗಳು ಜಲಾವೃತವಾಗಿದೆ. ಮಳೆಯ ಅವಾಂತರಕ್ಕೆ ಒಟ್ಟು 7 ಮಂದಿ ಮೃತಪಟ್ಟಿದ್ದಾರೆ.

    ಈ ಮಳೆಯು ನವರಾತ್ರಿಯ ದುರ್ಗಾ ಪೂಜೆ ಆಚರಣೆಗಳ ಮೇಲೆ ವ್ಯಾಪಕ ಪರಿಣಾಮ ಬೀರಿದೆ. ಹವಾಮಾನ ಇಲಾಖೆ ಪ್ರಕಾರ ಕೊಲ್ಕತ್ತಾ ನಗರದಲ್ಲಿ ಕೇವಲ ಮೂರು ಗಂಟೆಗಳಲ್ಲಿ 185 ಮಿ.ಮೀ ಮಳೆಯಾಗಿದ್ದು, ಈ ವರ್ಷದಲ್ಲೇ ಇದು ಅತಿ ಹೆಚ್ಚು ಮಳೆ ಎನ್ನಲಾಗಿದೆ. ಜಲಾವೃತ ಪ್ರದೇಶಗಳಲ್ಲಿ ವಿದ್ಯುತ್ ಆಘಾತದಿಂದ ಐದು ಜನರು ಸೇರಿ ಮಳೆಯಿಂದ ಏಳು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇದನ್ನೂ ಓದಿ: ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ 2 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ

    ರಸ್ತೆ ತುಂಬೆಲ್ಲ ಮಳೆ ನೀರು ನಿಂತಿದ್ದರಿಂದ ಸಂಚಾರಕ್ಕೆ ಅಡ್ಡಿಯಾಗಿ, ವಾಹನ ಸವಾರರು ಪರದಾಡಿದ್ದಾರೆ. ಜೊತೆಗೆ ಉಪನಗರ ರೈಲು ಮತ್ತು ಮೆಟ್ರೋ ಸೇವೆಗಳಿಗೂ ಅಡ್ಡಿಯಾಗಿದೆ. ಮಳೆ ನೀರು ನಗರದ ತಗ್ಗು ಪ್ರದೇಶಗಳಿಗೆ ನುಗ್ಗಿ ಅಪಾರ ನಷ್ಟ ಉಂಟಾಗಿದೆ. ಭಾರೀ ಮಳೆ ಹಿನ್ನೆಲೆ ನಗರದ ಹಲವೆಡೆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಇದನ್ನೂ ಓದಿ: ಪ್ಯಾಲೆಸ್ಟೈನ್ ಪ್ರತ್ಯೇಕ ದೇಶಕ್ಕಾಗಿ ಇಟಲಿಯಲ್ಲಿ ತೀವ್ರ ಪ್ರತಿಭಟನೆ – ಬಂದರಿಗೆ ಬೆಂಕಿ, 60 ಪೊಲೀಸರಿಗೆ ಗಾಯ

    ಕೋಲ್ಕತ್ತಾದ ದಕ್ಷಿಣ ಮತ್ತು ಪೂರ್ವ ಭಾಗಗಳು ಅತಿ ಹೆಚ್ಚು ಹಾನಿಗೊಳಗಾಗಿದ್ದು, ಗರಿಯಾ ಕಾಮದಹರಿಯಲ್ಲಿ 332 ಮಿಮೀ ಮಳೆಯಾಗಿದೆ. ಜೋಧ್‌ಪುರ ಪಾರ್ಕ್ನಲ್ಲಿ 285 ಮಿ.ಮೀ, ಕಾಳಿಘಾಟ್‌ನಲ್ಲಿ 280 ಮಿ.ಮೀ, ಟಾಪ್ಸಿಯಾದಲ್ಲಿ 275 ಮಿ.ಮೀ, ಬ್ಯಾಲಿಗಂಜ್‌ನಲ್ಲಿ 264 ಮಿ.ಮೀ ಮತ್ತು ಉತ್ತರ ಕೋಲ್ಕತ್ತಾದ ಥಂಟಾನಿಯಾದಲ್ಲಿ 195 ಮಿ.ಮೀ ಮಳೆಯಾಗಿದೆ ಕೋಲ್ಕತ್ತಾ ಮಹಾನಗರ ಪಾಲಿಕೆ ಮಾಹಿತಿ ನೀಡಿದೆ.

    ಜನ ವಸತಿ ಪ್ರದೇಶಗಳಿಗೆ ಮಳೆ ನೀರು ನುಗ್ಗಿದ ಪರಿಣಾಮ ದುರ್ಗಾ ಪೂಜೆಯ ಸಿದ್ಧತೆಗಳಿಗೆ ಅಡ್ಡಿಯುಂಟಾಗಿದೆ. ಮನೆಗಳು, ಮಾರುಕಟ್ಟೆಗಳು ಮತ್ತು ಪೆಂಡಲ್ ನಿರ್ಮಾಣ ಸ್ಥಳಗಳು ಸಹ ಜಲಾವೃತವಾಗಿದೆ.

    ಕೋಲ್ಕತ್ತಾ ವಿಮಾನ ನಿಲ್ದಾಣದ ರನ್ ವೇಗಳಲ್ಲೂ ನೀರು ನಿಂತಿದ್ದು, ಏರ್ ಇಂಡಿಯಾ ಹಾಗೂ ಇಂಡಿಗೋ ವಿಮಾನ ಹಾರಾಟದಲ್ಲಿ ವಿಳಂಬವಾಗಬಹುದು ಎಂದು ಗ್ರಾಹಕರಿಗೆ ಮಾಹಿತಿ ನೀಡಿದೆ.

    ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಪೂರ್ವ ಮತ್ತು ಪಶ್ಚಿಮ ಮೇದಿನಿಪುರ, ದಕ್ಷಿಣ 24 ಪರಗಣ, ಜಾರ್ಗ್ರಾಮ್ ಮತ್ತು ಬಂಕುರಾ ಸೇರಿದಂತೆ ದಕ್ಷಿಣ ಬಂಗಾಳ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಸೆ.25 ವರೆಗೂ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಎಚ್ಚರಿಸಿದೆ.

  • ಬರ್ತ್‌ಡೇ ಪಾರ್ಟಿಗೆ ಕರೆದೊಯ್ದು ಪರಿಚಯಸ್ಥರಿಂದಲೆ ಮಹಿಳೆಯ ಗ್ಯಾಂಗ್‌ ರೇಪ್‌

    ಬರ್ತ್‌ಡೇ ಪಾರ್ಟಿಗೆ ಕರೆದೊಯ್ದು ಪರಿಚಯಸ್ಥರಿಂದಲೆ ಮಹಿಳೆಯ ಗ್ಯಾಂಗ್‌ ರೇಪ್‌

    ಕೋಲ್ಕತ್ತಾ: ಮಹಿಳೆಯೊಬ್ಬಳ ಹುಟ್ಟುಹಬ್ಬದ (Birthday) ದಿನವೇ ಆಕೆಯ ಮೇಲೆ ಇಬ್ಬರು ಪರಿಚಯಸ್ಥರು ಸೇರಿ ಸಾಮೂಹಿಕ ಅತ್ಯಾಚಾರ (Gang-Rape) ಎಸಗಿರುವುದು ಕೋಲ್ಕತ್ತಾದಲ್ಲಿ (Kolkata) ನಡೆದಿದೆ.

    ಶುಕ್ರವಾರ ನಗರದ ದಕ್ಷಿಣ ಹೊರವಲಯದಲ್ಲಿರುವ ರೀಜೆಂಟ್ ಪಾರ್ಕ್ ಪ್ರದೇಶದಲ್ಲಿ ಅತ್ಯಾಚಾರ ನಡೆದಿದೆ. ಕೃತ್ಯ ಎಸಗಿ ನಾಪತ್ತೆಯಾಗಿದ್ದ ಇಬ್ಬರು ಆರೋಪಿಗಳನ್ನು ಚಂದನ್ ಮಲಿಕ್ ಮತ್ತು ದೀಪ್ ಎಂದು ಗುರುತಿಸಲಾಗಿದೆ. ದೀಪ್ ಸರ್ಕಾರಿ ಉದ್ಯೋಗಿ ಎಂದು ವರದಿಯಾಗಿದೆ. ಇದನ್ನೂ ಓದಿ: ಅಪ್ರಾಪ್ತೆ ಮೇಲೆ 2 ಮಕ್ಕಳ ತಂದೆಯಿಂದ ನಿರಂತರ ಅತ್ಯಾಚಾರ – ಹೆರಿಗೆಯಾದ ಅರ್ಧ ಗಂಟೆಯಲ್ಲೇ ಮಗು ಸಾವು

    ಹರಿದೇವ್‌ಪುರದ ಮಹಿಳೆಯನ್ನು ಹುಟ್ಟುಹಬ್ಬದ ಆಚರಣೆ ನೆಪದಲ್ಲಿ ಚಂದನ್, ದೀಪ್ ಮನೆಗೆ ಕರೆದುಕೊಂಡು ಹೋಗಿದ್ದ. ಈ ವೇಳೆ ಹಲ್ಲೆ ನಡೆಸಿ ಆಕೆಯ ಮೇಲೆ ಅತ್ಯಾಚಾರ ಎಸಗಲಾಗಿದೆ. ಬಳಿಕ ಶನಿವಾರ ಬೆಳಗ್ಗೆ ಮಹಿಳೆ ಅಲ್ಲಿಂದ ತಪ್ಪಿಸಿಕೊಂಡು ಬಂದು ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಳು.

    ಈ ಸಂಬಂಧ ಮಹಿಳೆಯ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದು, ಎಫ್‌ಐಆರ್‌ ದಾಖಲಾಗಿದೆ. ದೂರಿನಲ್ಲಿ, ಮಹಿಳೆಗೆ ಚಂದನ್ ಹಲವು ದಿನಗಳಿಂದ ಪರಿಚಯವಾಗಿದ್ದ. ಆತ ತನ್ನನ್ನು ದಕ್ಷಿಣ ಕೋಲ್ಕತ್ತಾದಲ್ಲಿರುವ ದುರ್ಗಾ ಪೂಜಾ ಸಮಿತಿಯ ಮುಖ್ಯಸ್ಥ ಎಂದು ಹೇಳಿಕೊಂಡಿದ್ದ. ಅಲ್ಲದೇ ಆತ ದೀಪ್‌ನನ್ನು ಪರಿಚಯ ಮಾಡಿಕೊಟ್ಟಿದ್ದ. ಮಹಿಳೆಯನ್ನೂ ಸಮಿತಿಯಲ್ಲಿ ಸೇರಿಸಿಕೊಳ್ಳುವುದಾಗಿ ಭರವಸೆ ನೀಡಿದ್ರು ಎಂದು ಉಲ್ಲೇಖಿಸಲಾಗಿದೆ.

    ಜೂನ್ 25 ರಂದು ದಕ್ಷಿಣ ಕಲ್ಕತ್ತಾ ಕಾನೂನು ಕಾಲೇಜು ಆವರಣದಲ್ಲಿ ಕಾನೂನು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆದಿತ್ತು. ಈ ಸಂಬಂಧ ಕಾಲೇಜಿನ ಹಳೆಯ ವಿದ್ಯಾರ್ಥಿ ಮೋನೋಜಿತ್ ಮಿಶ್ರಾನನ್ನು ಬಂಧಿಸಲಾಗಿತ್ತು. ಇನ್ನೂ ಕಳೆದ ವರ್ಷ ಆರ್‌ಜಿಕರ್‌ ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿತ್ತು. ಈ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಇತ್ತೀಚೆಗೆ ನಗರದಲ್ಲಿ ಹೆಚ್ಚಾಗಿರುವ ಅತ್ಯಾಚಾರ, ಅಪರಾಧ ಪ್ರಕರಣಗಳ ಬಗ್ಗೆ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಮದುವೆ ಆಗೋದಾಗಿ ನಂಬಿಸಿ ಅತ್ಯಾಚಾರ ಆರೋಪ – ಎಸ್‌ಎಎಫ್ ಪೊಲೀಸ್ ಕಾನ್‌ಸ್ಟೆಬಲ್ ಅರೆಸ್ಟ್

  • ಸ್ಯಾನ್‌ಫ್ರ್ಯಾನ್ಸಿಸ್ಕೋ-ಮುಂಬೈ ವಿಮಾನದಲ್ಲಿ ಜಿರಳೆ ಪತ್ತೆ – ಕ್ಷಮೆಯಾಚಿಸಿದ ಏರ್‌ಇಂಡಿಯಾ

    ಸ್ಯಾನ್‌ಫ್ರ್ಯಾನ್ಸಿಸ್ಕೋ-ಮುಂಬೈ ವಿಮಾನದಲ್ಲಿ ಜಿರಳೆ ಪತ್ತೆ – ಕ್ಷಮೆಯಾಚಿಸಿದ ಏರ್‌ಇಂಡಿಯಾ

    ಕೋಲ್ಕತ್ತಾ: ಸ್ಯಾನ್‌ಫ್ರ್ಯಾನ್ಸಿಸ್ಕೋದಿಂದ ಮುಂಬೈಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವೊಂದರಲ್ಲಿ ಜಿರಳೆ ಕಾಣಿಸಿಕೊಂಡಿದೆ. ಈ ಹಿನ್ನೆಲೆ ಏರ್‌ಇಂಡಿಯಾ (Air India)ವಿಮಾನಯಾನ ಸಂಸ್ಥೆ ಪ್ರತಿಕಾ ಹೇಳಿಕೆ ಬಿಡುಗಡೆಗೊಳಿಸಿ, ಪ್ರಯಾಣಿಕರಲ್ಲಿ ಕ್ಷಮೆಯಾಚಿಸಿದೆ.

    ಸೋಮವಾರ (ಆ.4) ಸ್ಯಾನ್‌ಫ್ರ್ಯಾನ್ಸಿಸ್ಕೋದಿಂದ ಮುಂಬೈಗೆ ಹೊರಟಿದ್ದ ಏರ್‌ಇಂಡಿಯಾ AI180 ವಿಮಾನ ಇಂಧನ ಭರ್ತಿಗಾಗಿ ಕೋಲ್ಕತ್ತಾದಲ್ಲಿ ನಿಲುಗಡೆಯಾಗಿತ್ತು. ಈ ವೇಳೆ ಇಬ್ಬರು ಪ್ರಯಾಣಿಕರು ಕುಳಿತಿದ್ದ ಆಸನದ ಕೆಳಗೆ ಜಿರಳೆ ಕಾಣಿಸಿಕೊಂಡಿದೆ. ಈ ಕುರಿತು ಪ್ರಯಾಣಿಕರು ಸಿಬ್ಬಂದಿಗೆ ಮಾಹಿತಿ ನೀಡಿದ್ದು, ಬಳಿಕ ಪ್ರಯಾಣಿಕರನ್ನು ಅದೇ ಕ್ಯಾಬಿನ್‌ನ ಇನ್ನೊಂದು ಆಸನಕ್ಕೆ ಬದಲಾಯಿಸಿದರು.ಇದನ್ನೂ ಓದಿ:ಗ್ರಾ.ಪಂ ಸದಸ್ಯನ ಕಿಡ್ನ್ಯಾಪ್‌ಗೆ ಯತ್ನಿಸಿ ವಿಫಲ – ಚಾಕು ಇರಿದು ದುಷ್ಕರ್ಮಿಗಳು ಎಸ್ಕೇಪ್

    ಈ ಕುರಿತು ಏರ್‌ಇಂಡಿಯಾ ಸಂಸ್ಥೆ ಪ್ರತಿಕಾ ಹೇಳಿಕೆ ಬಿಡುಗಡೆಗೊಳಿಸಿದ್ದು, ವಿಷಾದ ವ್ಯಕ್ತಪಡಿಸಿದೆ. ಪ್ರಯಾಣಿಕರಲ್ಲಿ ಕ್ಷಮೆಯಾಚಿಸಿದ್ದು, ಈ ಕುರಿತು ತನಿಖೆ ನಡೆಸುವುದಾಗಿ ತಿಳಿಸಿದೆ. ಪ್ರಯಾಣಿಕರಿಗೆ ಜಿರಳೆಯಿಂದ ಸಮಸ್ಯೆಯಾದಾಗ ನೆಲವನ್ನು ಶುಚಿಗೊಳಿಸಲಾಯಿತು. ಅಲ್ಲಿಂದ ವಿಮಾನ ಸರಿಯಾದ ಸಮಯಕ್ಕೆ ಮುಂಬೈ ತಲುಪಿದೆ. ನಾವು ನಿರಂತರವಾಗಿ ವಿಮಾನವನ್ನು ಸ್ವಚ್ಛವಾಗಿಟ್ಟರೂ ಕೂಡ ಕೆಲವೊಮ್ಮೆ ಕೀಟಗಳು ವಿಮಾನವನ್ನು ಪ್ರವೇಶಿಸುತ್ತವೆ. ಈ ರೀತಿಯ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳುತ್ತೇವೆ ಎಂದು ಏರ್ ಇಂಡಿಯಾ ತಿಳಿಸಿದೆ.

    ಜೂ.12ರಂದು ಸಂಭವಿಸಿದ್ದ ಏರ್‌ಇಂಡಿಯಾ ದುರಂತದ ಬಳಿಕ ಸಂಸ್ಥೆಯು ತಾಂತ್ರಿಕ ದೋಷ ಸೇರಿದಂತೆ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಇದಕ್ಕೂ ಮುನ್ನ ದೆಹಲಿಯಿಂದ ನ್ಯೂಯಾರ್ಕ್‌ಗೆ ಹೊರಟಿದ್ದ ವಿಮಾನದಲ್ಲಿ ಪ್ರಯಾಣಿಕರೊಬ್ಬರು ತೆಗೆದುಕೊಂಡಿದ್ದ ಆಮ್ಲೆಟ್‌ನಲ್ಲಿ ಜಿರಳೆ ಕಾಣಿಸಿಕೊಂಡಿದ್ದಾಗಿ ವರದಿಯಾಗಿತ್ತು.ಇದನ್ನೂ ಓದಿ: ಸಿರಾಜ್‌, ಕೃಷ್ಣ ಮ್ಯಾಜಿಕ್‌ – ಭಾರತಕ್ಕೆ ರೋಚಕ 6 ರನ್‌ಗಳ ಜಯ

  • ED ಭರ್ಜರಿ ಬೇಟೆ – ಟಿಎಂಸಿ ಮಾಜಿ ಸಂಸದನ ಪುತ್ರನಿಗೆ ಸೇರಿದ 127 ಕೋಟಿ ಮೌಲ್ಯದ ಷೇರು ಜಪ್ತಿ

    ED ಭರ್ಜರಿ ಬೇಟೆ – ಟಿಎಂಸಿ ಮಾಜಿ ಸಂಸದನ ಪುತ್ರನಿಗೆ ಸೇರಿದ 127 ಕೋಟಿ ಮೌಲ್ಯದ ಷೇರು ಜಪ್ತಿ

    ಕೋಲ್ಕತ್ತಾ: ಮನಿ ಲಾಂಡರಿಂಗ್ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್‌ನ (Trinamool Congress) ಮಾಜಿ ಸಂಸದ ಮತ್ತು ಉದ್ಯಮಿ ಕನ್ವರ್ ದೀಪ್ ಸಿಂಗ್ (Kanwar Deep Singh) ಅವರ ಪುತ್ರನ 127 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಷೇರುಗಳನ್ನು ಜಾರಿ ನಿರ್ದೇಶನಾಲಯ (Enforcement Directorate) ಜಪ್ತಿ ಮಾಡಿದೆ.

    ಪಂಚಕುಲದಲ್ಲಿರುವ ಆಲ್ಕೆಮಿಸ್ಟ್ ಆಸ್ಪತ್ರೆ (40.94%) ಮತ್ತು ಓಜಾಸ್ ಆಸ್ಪತ್ರೆ (37.24%) ಷೇರನ್ನು ವಶಪಡಿಸಿಕೊಳ್ಳಲಾಗಿದೆ. 2002 ರ ಮನಿ ಲಾಂಡರಿಂಗ್ ತಡೆ ಕಾಯ್ದೆಯ (ಪಿಎಂಎಲ್‌ಎ) ನಿಬಂಧನೆಗಳ ಅಡಿಯಲ್ಲಿ ಷೇರುಗಳನ್ನು ಜಪ್ತಿ ಮಾಡಲಾಗಿದೆ ಎಂದು ಇ.ಡಿ ಅಧಿಕಾರಿಗಳು ಹೇಳಿದ್ದಾರೆ. ಇದನ್ನೂ ಓದಿ: ಇಂದು ಜಾಮೀನು ಭವಿಷ್ಯ; ಕೋರ್ಟ್‌ ತೀರ್ಪಿಗೂ ಮುನ್ನವೇ ರಾಯರ ಮೊರೆ ಹೋದ ಪವಿತ್ರಾಗೌಡ

    ಕೋಲ್ಕತ್ತಾ (Kolkata) ಪೊಲೀಸರು ಮತ್ತು ಕೇಂದ್ರ ತನಿಖಾ ದಳ ಹಾಗೂ ಲಕ್ನೋದ ಭ್ರಷ್ಟಾಚಾರ ನಿಗ್ರಹ ದಳ ಸಲ್ಲಿಸಿದ ಎಫ್‌ಐಆರ್ ಆಧಾರದ ಮೇಲೆ ತನಿಖೆ ನಡೆಸಲಾಗುತ್ತಿದೆ. ಈ ಸಂಬಂಧ ಐಪಿಸಿ ಸೆಕ್ಷನ್ 120-ಬಿ (ಕ್ರಿಮಿನಲ್ ಪಿತೂರಿ) ಮತ್ತು 420 (ವಂಚನೆ) ಅಡಿಯಲ್ಲಿ ಮೆಸ್ಸರ್ಸ್ ಆಲ್ಕೆಮಿಸ್ಟ್ ಟೌನ್‌ಶಿಪ್ ಪ್ರೈವೇಟ್ ಲಿಮಿಟೆಡ್, ಮೆಸ್ಸರ್ಸ್ ಆಲ್ಕೆಮಿಸ್ಟ್ ಇನ್ಫ್ರಾ ರಿಯಾಲ್ಟಿ ಪ್ರೈವೇಟ್ ಲಿಮಿಟೆಡ್ ಮತ್ತು ಕನ್ವರ್ ದೀಪ್ ಸಿಂಗ್ ಸೇರಿದಂತೆ ಅವರ ನಿರ್ದೇಶಕರ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವು ಅಕ್ರಮ ಸಾಮೂಹಿಕ ಹೂಡಿಕೆ ಮೂಲಕ ಸಾರ್ವಜನಿಕ ಹಣವನ್ನು ವಂಚಿಸುವ ಬೃಹತ್ ಕ್ರಿಮಿನಲ್ ಪಿತೂರಿಯಂತೆ ಕಾಣುತ್ತದೆ ಎಂದು ಇ.ಡಿ ಆರೋಪಿಸಿತ್ತು.

    ಕಂಪನಿಗಳು ಹೆಚ್ಚಿನ ಲಾಭ, ಪ್ಲಾಟ್‌ಗಳು ಮತ್ತು ವಿಲ್ಲಾಗಳಂತಹ ವಸತಿ ಘಟಕಗಳ ಹಂಚಿಕೆಯ ಸುಳ್ಳು ಭರವಸೆಗಳೊಂದಿಗೆ ಹೂಡಿಕೆದಾರರನ್ನು ಆಕರ್ಷಿಸಿವೆ. ಅಲ್ಲದೇ 1,848 ಕೋಟಿ ರೂ. ಹಣವನ್ನು ಸಾರ್ವಜನಿಕರಿಂದ ಅಕ್ರಮವಾಗಿ ಸಂಗ್ರಹಿಸಲಾಗಿದೆ. ನಂತರ ಆ ಹಣವನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ತನಿಖೆ ವೇಳೆ ತಿಳಿದು ಬಂದಿದೆ. ಈ ಹಣವನ್ನು ಕಾನೂನುಬದ್ಧ ಹೂಡಿಕೆ ಎಂದು ಬಿಂಬಿಸಲು ಎರಡು ಆಸ್ಪತ್ರೆಗಳನ್ನು ನಿರ್ಮಿಸಲಾಗಿದೆ ಎಂದು ಇ.ಡಿ ಆರೋಪ ಮಾಡಿದೆ.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು 2021ರ ಜನವರಿಯಲ್ಲಿ ಕನ್ವರ್ ದೀಪ್ ಸಿಂಗ್ ಅವರನ್ನು ಬಂಧಿಸಿತ್ತು. ಈವರೆಗೆ, ಪ್ರಕರಣಕ್ಕೆ ಸಂಬಂಧಿಸಿದ 238.42 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ಹೆಚ್ಚುವರಿ ಆಸ್ತಿಗಳನ್ನು ಪತ್ತೆಹಚ್ಚಲು ಮತ್ತು ಈ ದೊಡ್ಡ ಪ್ರಮಾಣದ ಹಣಕಾಸು ವಂಚನೆಯಲ್ಲಿ ಭಾಗಿಯಾಗಿರುವ ಸಂಪೂರ್ಣ ಹಣದ ಮೂಲವನ್ನು ಪತ್ತೆಹಚ್ಚಲು ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ಇನ್‌ಸ್ಟಾದಲ್ಲಿ ಯುವತಿಯರ ಅಸಭ್ಯ ಫೋಟೋ, ವಿಡಿಯೋ ಪೋಸ್ಟ್ – ಕಾಮುಕ ಅರೆಸ್ಟ್

  • ಕೋಲ್ಕತ್ತಾ | ಬಾಯ್ಸ್ ಹಾಸ್ಟೆಲ್‌ನಲ್ಲಿ ಯುವತಿಯ ರೇಪ್ ಕೇಸ್ – ಬಾಗಲಕೋಟೆ ಆರೋಪಿಗೆ ಜಾಮೀನು

    ಕೋಲ್ಕತ್ತಾ | ಬಾಯ್ಸ್ ಹಾಸ್ಟೆಲ್‌ನಲ್ಲಿ ಯುವತಿಯ ರೇಪ್ ಕೇಸ್ – ಬಾಗಲಕೋಟೆ ಆರೋಪಿಗೆ ಜಾಮೀನು

    ಬಾಗಲಕೋಟೆ: ಕೋಲ್ಕತ್ತಾ ಐಐಎಂ (IIM) ಕಾಲೇಜು ಹಾಸ್ಟೆಲ್‌ಗೆ ಕರೆಸಿಕೊಂಡು ಯುವತಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆ (Bagalkote) ಮೂಲದ ವಿದ್ಯಾರ್ಥಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದೆ.

    ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಲೋಕಾಪುರ ಪಟ್ಟಣದ ನಿವಾಸಿಯಾಗಿರುವ ಆರೋಪಿ ಪರಮಾನಂದ ಟೋಪಣ್ಣನವರ್‌ಗೆ ಕೋಲ್ಕತ್ತಾದ (Kalkata) ಅಲಿಪುರ 9 ಜೆಎಂಎಫ್‌ಸಿ ಕೋರ್ಟ್ ಶನಿವಾರ ಸಂಜೆ ಜಾಮೀನು ಮಂಜೂರು ಮಾಡಿದೆ. ಆರೋಪಿ ಪರಮಾನಂದ ಪರ ವಕೀಲ ವರುಣ್ ಪಾಟೀಲ್, ಮಹೇಂದ್ರ.ಜಿ ಬೇಲ್ ಅರ್ಜಿ ಸಲ್ಲಿಸಿದ್ದರು. ಇದನ್ನೂ ಓದಿ: ಒಂದೇ ವಧುವನ್ನು ಮದುವೆಯಾದ ಸಹೋದರರು!

    ಜಾಮೀನು ಅರ್ಜಿ ವಿಚಾರಣೆ ಮಾಡಿದ ಕೋರ್ಟ್ 50,000 ರೂ. ಬಾಂಡ್ ನೀಡುವಂತೆ ಸೂಚಿಸಿತು. ಪಾಸ್‌ಪೋರ್ಟ್ ಜಪ್ತಿ ಮಾಡಿದ್ದು, ಕೋಲ್ಕತ್ತಾದಿಂದ ಹೊರ ಹೋಗದಂತೆ ಷರತ್ತು ವಿಧಿಸಿದೆ ಎಂದು ವಕೀಲ ವರುಣ್ ಪಾಟೀಲ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಲಿವ್-ಇನ್-ಪಾರ್ಟ್ನರ್‌ನ ಕೊಂದು ಆಕೆ ಕೆಲಸ ಮಾಡ್ತಿದ್ದ ಠಾಣೆಗೆ ಹೋಗಿ ಶರಣಾದ ಯೋಧ

    ಆರೋಪಿಯು ಕೊಲ್ಕತ್ತಾದ ಜೋಕಾದಲ್ಲಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ (IIM)ನಲ್ಲಿ 2ನೇ ವರ್ಷದ ಎಂಬಿಎ ವ್ಯಾಸಾಂಗ ಮಾಡುತ್ತಿದ್ದ. ಆರೋಪಿಯ ವಿರುದ್ಧ ಯುವತಿಯು, ಹಾಸ್ಟೆಲ್‌ಗೆ ಕರೆಸಿಕೊಂಡು ಪಿಜ್ಜಾ ತಿನ್ನಿಸಿ, ಮತ್ತು ಬರುವ ಪಾನೀಯ ಕುಡಿಸಿ ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಿ ಹರಿದೇವಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಳು. ಎಫ್‌ಐಆರ್ ದಾಖಲಿಸಿಕೊಂಡ ಪೊಲೀಸರು, ಜು.12ರಂದು ಪರಮಾನಂದನನ್ನ ಬಂಧಿಸಿದ್ದರು.

    ಯುವತಿ ಆರೋಪದ ಬೆನ್ನಲ್ಲೇ ಆಕೆಯ ತಂದೆ, ಅತ್ಯಾಚಾರ ನಡೆದಿದೆ ಎಂಬ ವಿಚಾರವನ್ನು ಅಲ್ಲಗಳೆದಿದ್ದರು. ಆಕೆ ಆಟೋದಲ್ಲಿ ಹೋಗುವಾಗ ಬಿದ್ದಿದ್ದಳು. ಆರೋಗ್ಯವಾಗಿದ್ದಾಳೆ ಎಂದು ಹೇಳಿಕೊಂಡಿದ್ದರು. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.

  • ಪಾಟ್ನಾ ಆಸ್ಪತ್ರೆಯಲ್ಲಿ ಐಸಿಯುಗೆ ನುಗ್ಗಿ ಗ್ಯಾಂಗ್‌ಸ್ಟರ್‌ ಹತ್ಯೆ – ಐವರು ಆರೋಪಿಗಳು ಕೋಲ್ಕತ್ತಾದಲ್ಲಿ ಅರೆಸ್ಟ್‌

    ಪಾಟ್ನಾ ಆಸ್ಪತ್ರೆಯಲ್ಲಿ ಐಸಿಯುಗೆ ನುಗ್ಗಿ ಗ್ಯಾಂಗ್‌ಸ್ಟರ್‌ ಹತ್ಯೆ – ಐವರು ಆರೋಪಿಗಳು ಕೋಲ್ಕತ್ತಾದಲ್ಲಿ ಅರೆಸ್ಟ್‌

    ಪಾಟ್ನಾ: ಇಲ್ಲಿನ ಆಸ್ಪತ್ರೆಯಲ್ಲಿ ಐಸಿಯುಗೆ ನುಗ್ಗಿ ದರೋಡೆಕೋರ ಚಂದನ್ ಮಿಶ್ರಾನನ್ನ (Chandan Mishra) ಗುಂಡಿಕ್ಕಿ (Firing) ಕೊಂದ್ದಿದ್ದ ಐವರು ಆರೋಪಿಗಳನ್ನು ಕೋಲ್ಕತ್ತಾದಲ್ಲಿ (Kolkata) ಪೊಲೀಸರು ಶನಿವಾರ (ಇಂದು) ಬಂಧಿಸಿದ್ದಾರೆ.

    ಬಿಹಾರ ಪೊಲೀಸರು (Bihar Police) ಮತ್ತು ಪಶ್ಚಿಮ ಬಂಗಾಳ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ, ಕೋಲ್ಕತ್ತಾದ ಉಪನಗರದ ವಸತಿ ಸಂಕೀರ್ಣದಲ್ಲಿ ಬಂಧಿಸಿದ್ದಾರೆಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ‘Sher’ Will Roar | ನಿಮಿಷಕ್ಕೆ 700 ಬುಲೆಟ್‌ ಹಾರಿಸಬಲ್ಲ `AK-203′ ರೈಫಲ್‌ ಸೇನೆಗೆ!

    ಆ ದಿನ ಆಸ್ಪತ್ರೆ ವಾರ್ಡ್‌ನಲ್ಲಿ ನಡೆದಿದ್ದೇನು?
    ಪೆರೋಲ್ ಮೇಲೆ ಹೊರಗಿದ್ದ ದರೋಡೆಕೋರ ಚಂದನ್ ಮಿಶ್ರಾನನ್ನ ಪಾಟ್ನಾದ ಆಸ್ಪತ್ರೆಯ ಐಸಿಯುನಲ್ಲೇ ಗುಂಡು ಹಾರಿಸಿ ಐವರು ದುಷ್ಕರ್ಮಿಗಳು ಕೊಂದಿದ್ದರು. ಕ್ರಿಮಿನಲ್ ಹಿನ್ನೆಲೆ ಹೊಂದಿದ್ದ ಗ್ಯಾಂಗ್‌ಸ್ಟಾರ್ ಚಂದನ್ ಮಿಶ್ರಾನನ್ನು ವೈದ್ಯಕೀಯ ಚಿಕಿತ್ಸೆಗಾಗಿ ಪೆರೋಲ್ ಮೇಲೆ ಪಾಟ್ನಾದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದನ್ನೂ ಓದಿ: ಮೈದುನನ ಜೊತೆ ಲವ್ವಿಡವ್ವಿ – ಪತಿ ಕೊಂದು ಆಕಸ್ಮಿಕ ಸಾವು ಅಂತ ಬಿಂಬಿಸಿದ್ದ ಮಹಿಳೆ ಬಂಧನ

    ಇದನ್ನರಿತ ಎದುರಾಳಿ ಗ್ಯಾಂಗ್‌ನವರು ಗನ್ ಸಮೇತ ಆಸ್ಪತ್ರೆಗೆ ನುಗ್ಗಿ ಮನಸೋ ಇಚ್ಛೆ ಗುಂಡಿನ ಸುರಿಮಳೆಗೈದಿದ್ದರು. ಚಂದನ್ ಮಿಶ್ರಾ ದೇಹಕ್ಕೆ 12 ಬುಲೆಟ್ ಹೊಕ್ಕಿದ್ದು, ಆಸ್ಪತ್ರೆಯಲ್ಲೆ ಹತನಾಗಿದ್ದ. ಫೈರಿಂಗ್ ಬಳಿಕ ದಾಳಿಕೋರರು ಎಸ್ಕೇಪ್ ಆಗಿದ್ದರು. ಪಾಟ್ನಾದಿಂದ ಪರಾರಿಯಾಗಿ ಕೋಲ್ಕತ್ತಾದ ನ್ಯೂ ಟೌನ್‌ ವಸತಿ ಪ್ರದೇಶದಲ್ಲಿ ಅಡಗಿಕೊಂಡಿದ್ದರು. ಇತ್ತ ಪ್ರಕರಣ ದಾಖಲಿಸಿಕೊಂಡಿದ್ದ ಬಿಹಾರ ಪೊಲೀಸರು ಆಸ್ಪತ್ರೆಯ ಸಿಸಿಟಿವಿ ದೃಶ್ಯಾವಳಿಗಳನ್ನಾಧರಿಸಿ ತನಿಖೆ ಆರಂಭಿಸಿದ್ದರು. ಇದನ್ನೂ ಓದಿ: Uttar Pradesh | ಮಥುರಾದ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ – 6 ಜನ ದುರ್ಮರಣ

    ಈ ಮಧ್ಯೆ ಎಲ್ಲಾ ಆರೋಪಿಗಳು ಕೋಲ್ಕತ್ತಾದ ನ್ಯೂ ಟೌನ್‌ ಪ್ರದೇಶದ ವಸತಿ ಸಂಕೀರ್ಣದ ಫ್ಲಾಟ್‌ನಲ್ಲಿ ಅಡಗಿರುವುದಾಗಿ ಪೊಲೀಸರಿಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಬಳಿಕ ಬಂಗಾಳ ಪೊಲೀಸರ ಸಹಾಯ ಪಡೆದು ದಾಳಿ ನಡೆಸಿದ ಪೊಲೀಸರು ಐವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರ ಪೈಕಿ ನಾಲ್ವರು ಆರೋಪಿಗಳು ನೇರವಾಗಿ ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ಐದನೇ ಆರೋಪಿ ಅಪರಾಧದಲ್ಲಿ ಭಾಗಿಯಾಗಿದ್ದನೇ ಅಥವಾ ಕೊಲೆಗಾರರು ಅಡಗಿಕೊಳ್ಳಲು ಸಹಾಯ ಮಾಡಿದ್ದನೇ ಎಂಬುದರ ಬಗ್ಗೆ ತರನಿಖೆ ನಡೆಸಲಾಗುತ್ತಿದೆ.

    ಸದ್ಯ ಬಂಧಿತ ಆರೋಪಿಗಳನ್ನು ಕೋರ್ಟ್‌ಗೆ ಹಾಜರು ಪಡಿಸಿ ಕೋಲ್ಕತ್ತಾದಿಂದ ಬಿಹಾರಕ್ಕೆ ಕರೆತರುವ ಪ್ರಕ್ರಿಯೆಗಳು ನಡೆಯುತ್ತಿವೆ. ಇದನ್ನೂ ಓದಿ: ಅಪ್ರಾಪ್ತನ ಜೊತೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ – ಇಬ್ಬರು ಬಾಲಕರು ಅರೆಸ್ಟ್‌

  • ಕೋಲ್ಕತ್ತಾ | ಬಾಯ್ಸ್‌ ಹಾಸ್ಟೆಲ್‌ನಲ್ಲಿ ಯುವತಿಯ ರೇಪ್‌ ಕೇಸ್ – ಬಾಗಲಕೋಟೆ ಯುವಕ ಅರೆಸ್ಟ್‌

    ಕೋಲ್ಕತ್ತಾ | ಬಾಯ್ಸ್‌ ಹಾಸ್ಟೆಲ್‌ನಲ್ಲಿ ಯುವತಿಯ ರೇಪ್‌ ಕೇಸ್ – ಬಾಗಲಕೋಟೆ ಯುವಕ ಅರೆಸ್ಟ್‌

    ಕೋಲ್ಕತ್ತಾ\ ಬಾಗಲಕೋಟೆ: ಯುವತಿಯನ್ನು ಹಾಸ್ಟೆಲ್‌ಗೆ ಕರೆಸಿಕೊಂಡು ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಬಾಗಲಕೋಟೆ (Bagalkote) ಮೂಲದ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

    ಬಂಧಿತ ಆರೋಪಿಯನ್ನು ಲೋಕಾಪುರ ಪಟ್ಟಣದ ನಿವಾಸಿ ಪರಮಾನಂದ ಟೋಪಣ್ಣನವರ್ ಎಂದು ಗುರುತಿಸಲಾಗಿದೆ. ಈತ ಕೊಲ್ಕತ್ತಾದ (Kolkata) ಜೋಕಾದಲ್ಲಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್‌ನಲ್ಲಿ ಎರಡೇ ವರ್ಷದ ಎಂಬಿಎ ವ್ಯಾಸಾಂಗ ಮಾಡುತ್ತಿದ್ದ. ಇದನ್ನೂ ಓದಿ: ಕೋಲ್ಕತ್ತಾ IIM ಬಾಯ್ಸ್ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ – ಆರೋಪಿ ಅರೆಸ್ಟ್

    ಆರೋಪಿಯ ವಿರುದ್ಧ ಯುವತಿ, ಹಾಸ್ಟೆಲ್‌ಗೆ ಕರೆಸಿಕೊಂಡು ಫಿಜ್ಜಾ ತಿನ್ನಿಸಿ ಮತ್ತು ಬರುವ ಪಾನೀಯ ಕುಡಿಸಿ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಜು.12 ರಂದು ಆರೋಪಿ ಪರಮಾನಂದನನ್ನ ಪೊಲೀಸರು ಬಂಧಿಸಿದ್ದರು. ಇದರ ನಡುವೆ ಅತ್ಯಾಚಾರ ಆರೋಪವನ್ನು ಯುವತಿ ಕುಟುಂಬಸ್ಥರು ತಳ್ಳಿಹಾಕಿದ್ದರು.

    ಪರಮಾನಂದ ಬಂಧನದ ಮಾಹಿತಿಯನ್ನು ಆತನ ಸ್ನೇಹಿತರು ಕುಟುಂಬಸ್ಥರಿಗೆ ನೀಡಿದ್ದು, ಕೊಲ್ಕತ್ತಾಗೆ ಆತನ ಪೋಷಕರು ತೆರಳಿದ್ದಾರೆ.

    ಸಂತ್ರಸ್ತ ಮತ್ತು ಆಕೆಯ ಕುಟುಂಬ ಸದಸ್ಯರು ತನಿಖೆಗೆ ಸಹಕರಿಸುತ್ತಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಅತ್ಯಾಚಾರದ ತನಿಖೆಗಾಗಿ ಕೋಲ್ಕತ್ತಾ ಪೊಲೀಸರು 9 ಸದಸ್ಯರ ಎಸ್‌ಐಟಿಯನ್ನು ರಚಿಸಿದ್ದಾರೆ. ಶಿಕ್ಷಣ ಸಂಸ್ಥೆಯಿಂದ ಸಿಸಿಟಿವಿ ದೃಶ್ಯಾವಳಿಗಳನ್ನು ಕೊಡುವಂತೆ ಸೂಚಿಸಿದ್ದಾರೆ. ಇದನ್ನೂ ಓದಿ: ಬೈಕ್‌ಗೆ ಡಿಕ್ಕಿಯಾಗಿ ಕಾಲುವೆಗೆ ಪಲ್ಟಿಯಾದ ಕಾರು – 7 ಮಂದಿ ದುರ್ಮರಣ

  • ಕೋಲ್ಕತ್ತಾ ಅತ್ಯಾಚಾರ ಕೇಸ್ – ವಿಡಿಯೋ ಮಾಡಿ, ಬ್ಲ್ಯಾಕ್‌ಮೇಲ್‌ ಮಾಡಲು ಪ್ಲ್ಯಾನ್‌ ಮಾಡಿದ್ದ ಆರೋಪಿಗಳು

    ಕೋಲ್ಕತ್ತಾ ಅತ್ಯಾಚಾರ ಕೇಸ್ – ವಿಡಿಯೋ ಮಾಡಿ, ಬ್ಲ್ಯಾಕ್‌ಮೇಲ್‌ ಮಾಡಲು ಪ್ಲ್ಯಾನ್‌ ಮಾಡಿದ್ದ ಆರೋಪಿಗಳು

    • ಆರೋಪಿಗಳ ಮೊಬೈಲ್‌ನಲ್ಲಿ ಹಲವಾರು ಅಶ್ಲೀಲ ವಿಡಿಯೋ ಪತ್ತೆ 

    ಕೋಲ್ಕತ್ತಾ: ಕಸ್ಬಾದಲ್ಲಿ ಕಾನೂನು ವಿದ್ಯಾರ್ಥಿನಿಯ ಮೇಲಿನ ಅತ್ಯಾಚಾರ ನಡೆಸಿದ್ದ ಆರೋಪಿ ಮೊನೊಜಿತ್ ಮಿಶ್ರಾ ಸಂತ್ರಸ್ತೆಯನ್ನು ಟಾರ್ಗೆಟ್‌ ಮಾಡಿ ಅತ್ಯಾಚಾರ ಎಸಗಿದ್ದ. ಅಲ್ಲದೇ ಕೃತ್ಯದ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್ ಮಾಡಲು ಯೋಜನೆ ರೂಪಿಸಿಕೊಂಡಿದ್ದ ಎಂದು ತನಿಖೆ ವೇಳೆ ತಿಳಿದು ಬಂದಿದೆ.

    ಪ್ರಕರಣದ ಇನ್ನಿಬ್ಬರು ಆರೋಪಿಗಳಾದ ಜೈಬ್ ಅಹ್ಮದ್ ಮತ್ತು ಪ್ರಮಿತ್ ಮುಖೋಪಾಧ್ಯಾಯ ಈ ವಿಚಾರವನ್ನು ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾರೆ. ಇದರಿಂದಾಗಿ ಸಂತ್ರಸ್ತೆ ಪೊಲೀಸರಿಗೆ ದೂರು ನೀಡದಂತೆ ತಡೆಯಲು ಮತ್ತು ವಿಚಾರ ಬಹಿರಂಗ ಪಡಿಸದಂತೆ ತಡೆಯಲು ಈ ರೀತಿ ಯೋಜಿಸಿದ್ದರು ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಕೋಲ್ಕತ್ತಾ ಗ್ಯಾಂಗ್‌ ರೇಪ್‌ | ಕಾಲಿಗೆ ಬಿದ್ದರೂ ನನ್ನನ್ನು ಬಿಡಲಿಲ್ಲ – ಸಂತ್ರಸ್ತೆ ದೂರಿನಲ್ಲಿ ಉಲ್ಲೇಖ

    ಯುವತಿ ತಕ್ಷಣವೇ ಹತ್ತಿರದ ಪೊಲೀಸ್ ಠಾಣೆಗೆ ದೂರು ನೀಡಿದ್ದರಿಂದ ಆರೋಪಿಗಳ ಎಲ್ಲಾ ಯೋಜನೆಗಳು ವಿಫಲವಾಗಿವೆ. ಇನ್ನೂ ಕೃತ್ಯದ ವಿಡಿಯೋ ಕ್ಲಿಪ್‌ನ್ನು ಯಾರೊಂದಿಗಾದರೂ ಹಂಚಿಕೊಂಡಿದ್ದಾರೆಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.

    ಮೂವರು ಆರೋಪಿಗಳ ಮೊಬೈಲ್ ಫೋನ್‌ಗಳಲ್ಲಿ, ವಿಶೇಷವಾಗಿ ಮಿಶ್ರಾ ಮೊಬೈಲ್ ಫೋನ್‌ನಲ್ಲಿ ಹಲವಾರು ಅಶ್ಲೀಲ ವೀಡಿಯೊಗಳು ಇರುವುದು ಬೆಳಕಿಗೆ ಬಂದಿದೆ.

    ಬುಧವಾರ ಸಂಜೆ ಕಾಲೇಜು ಆವರಣದಲ್ಲಿ ತನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದು ಯುವತಿ ಆರೋಪಿಸಿ ದೂರು ನೀಡಿದ್ದರು. ದೂರಿನನ್ವಯ ಕಸ್ಬಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪ್ರಕರಣದ ಆರೋಪಿಗಳಾದ ಮೊನೊಜಿತ್ ಮಿಶ್ರಾ (31) (ಕಾಲೇಜಿನ ಮಾಜಿ ಘಟಕದ ಅಧ್ಯಕ್ಷ, ಹಾಲಿ ಟಿಎಂಸಿ ನಾಯಕ), ವರ್ಷದ ಜೈಬ್ ಅಹ್ಮದ್ (19) ಮತ್ತು ಪ್ರಮಿತ್ ಮುಖೋಪಾಧ್ಯಾಯನನ್ನು (20) ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಕೋಲ್ಕತ್ತಾದಲ್ಲಿ ಕಾನೂನು ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್‌; ಟಿಎಂಸಿ ನಾಯಕ ಸೇರಿ ಮೂವರ ಬಂಧನ

  • ಕೋಲ್ಕತ್ತಾ ಗ್ಯಾಂಗ್‌ ರೇಪ್ ಕೇಸ್ – ವಿದ್ಯಾರ್ಥಿನಿಯನ್ನು ಎಳೆದೊಯ್ಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ

    ಕೋಲ್ಕತ್ತಾ ಗ್ಯಾಂಗ್‌ ರೇಪ್ ಕೇಸ್ – ವಿದ್ಯಾರ್ಥಿನಿಯನ್ನು ಎಳೆದೊಯ್ಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ

    ಕೋಲ್ಕತ್ತಾ: ಕಾನೂನು ವಿದ್ಯಾರ್ಥಿನಿಯ (Law Student) ಮೇಲೆ ಸಾಮೂಹಿಕ ಅತ್ಯಾಚಾರ (Gang Rape) ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    ವಿದ್ಯಾರ್ಥಿನಿಯನ್ನು ಎಳೆದೊಯ್ಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆರೋಪಿಗಳು ಸಂತ್ರಸ್ತೆಯನ್ನು ಕಾಲೇಜಿನೊಳಗೆ ಎಳೆದೊಯ್ಯುತ್ತಿರುವುದು ದೃಶ್ಯದಲ್ಲಿ ಕಂಡುಬಂದಿದೆ. ವಿದ್ಯಾರ್ಥಿನಿಯನ್ನು ಇಬ್ಬರು ಆರೋಪಿಗಳು ಕಾಲೇಜು ಗೇಟ್‌ನಿಂದ ಕಾಲೇಜು ಕ್ಯಾಂಪಸ್‌ನೊಳಗೆ ಎಳೆದುಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ – ಹೆಜ್ಜೆ ಹೆಜ್ಜೆಗೂ ಪೊಲೀಸರ ನಿಗಾ

    ಪ್ರಮುಖ ಆರೋಪಿ ಮನೋಜಿತ್ ಮಿಶ್ರಾ ವಿದ್ಯಾರ್ಥಿನಿಯನ್ನು ಬಲವಂತವಾಗಿ ಕಾವಲುಗಾರರ ಕೋಣೆಗೆ ಕರೆದೊಯ್ಯಲು ಇತರ ಇಬ್ಬರು ಆರೋಪಿಗಳಿಗೆ ಹೇಳಿದ್ದಾನೆ. ಅದರಂತೆ ಇಬ್ಬರು ಸಂತ್ರಸ್ತೆಯನ್ನು ಎಳೆದೊಯ್ದಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳು ಸಂತ್ರಸ್ತೆಯ ಆರೋಪಗಳನ್ನು ದೃಢಪಡಿಸುತ್ತವೆ. ಮೂವರು ಆರೋಪಿಗಳು, ಭದ್ರತಾ ಸಿಬ್ಬಂದಿ ಮತ್ತು ಸಂತ್ರಸ್ತೆಯನ್ನು ಸಿಸಿಟಿವಿ ದೃಶ್ಯದಲ್ಲಿ ಕಾಣಬಹುದಾಗಿದೆ. ಸದ್ಯ ಪಶ್ಚಿಮ ಬಂಗಾಳ ಪೊಲೀಸರು ದೃಶ್ಯಗಳನ್ನು ಪರಿಶೀಲಿಸುತ್ತಿದ್ದಾರೆ. ಇದನ್ನೂ ಓದಿ: ಚಾರ್‌ಧಾಮ್ ಯಾತ್ರೆಗಿದ್ದ ನಿರ್ಬಂಧ ತೆರವು

    ಕಸ್ಬಾ ಪ್ರದೇಶದಲ್ಲಿ ಕಾನೂನು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಈ ಪ್ರಕರಣದಲ್ಲಿ ಸೆಕ್ಯೂರಿಟಿ ಗಾರ್ಡ್ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಪ್ರಮುಖ ಆರೋಪಿಯ ವಿವಾಹ ಪ್ರಸ್ತಾಪವನ್ನು ತಿರಸ್ಕರಿಸಿದ ನಂತರ ಕೋಲ್ಕತ್ತಾ ಕಾನೂನು ಕಾಲೇಜಿನೊಳಗೆ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ ಎಂದು ಪೊಲೀಸರ ಮುಂದೆ ಸಂತ್ರಸ್ತೆ ಹೇಳಿಕೆ ದಾಖಲಿಸಿದ್ದಾಳೆ. ಇದನ್ನೂ ಓದಿ: ಕಸದ ಲಾರಿಯಲ್ಲಿ ಶವ ಪತ್ತೆ | ದಿನಾ ಕುಡಿದು ಬಂದು ರಂಪಾಟ ಮಾಡಿದ್ದಕ್ಕೆ ಮಹಿಳೆಯ ಕೊಲೆ!