Tag: Kolkata Doctor

  • ಬೇಡಿಕೆ ಈಡೇರಿಸಲು ಸ್ವಲ್ಪ ಸಮಯ ಕೊಡಿ: ಪ್ರತಿಭಟನಾ ನಿರತ ಕಿರಿಯ ವೈದ್ಯರಿಗೆ ಸಿಎಂ ಮಮತಾ ಬ್ಯಾನರ್ಜಿ ಮನವಿ

    ಬೇಡಿಕೆ ಈಡೇರಿಸಲು ಸ್ವಲ್ಪ ಸಮಯ ಕೊಡಿ: ಪ್ರತಿಭಟನಾ ನಿರತ ಕಿರಿಯ ವೈದ್ಯರಿಗೆ ಸಿಎಂ ಮಮತಾ ಬ್ಯಾನರ್ಜಿ ಮನವಿ

    ಕೋಲ್ಕತ್ತಾ: ಆರ್‌ಜಿ ಕಾರ್ ಮೆಡಿಕಲ್ ಕಾಲೇಜ್- ಆಸ್ಪತ್ರೆಯಲ್ಲಿ ತರಬೇತಿ ನಿರತ ಮಹಿಳಾ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಸಂತ್ರಸ್ತೆ ಮತ್ತು ಆಕೆಯ ಕುಟುಂಬಕ್ಕೆ ನ್ಯಾಯ ಕೊಡಿಸಲಾಗುವುದು. ಅಗತ್ಯವಿದ್ದರೆ ನಾನು ರಾಜೀನಾಮೆ ನೀಡಲೂ ಸಿದ್ಧ ಎಂದು ಸಿಎಂ ಮಮತಾ ಬ್ಯಾನರ್ಜಿ (Mamata Banerjee) ಮತ್ತೊಮ್ಮೆ ಹೇಳಿದ್ದಾರೆ‌.

    ಪ್ರತಿಭಟನಾ ನಿರತ ಕಿರಿಯ ವೈದ್ಯರು ಮತ್ತು ರಾಜ್ಯ ಸರ್ಕಾರದ ನಡುವೆ ಸಂಘರ್ಷ ಮುಂದುವರೆದಿದ್ದು, ಈ ನಡುವೆ ವೈದ್ಯರ ಪ್ರತಿಭಟನೆ ನಡೆಸುತ್ತಿದ್ದ ಸ್ವಾಸ್ಥ್ಯ ಭವನಕ್ಕೆ ಸಿಎಂ ಮಮತಾ ಬ್ಯಾನರ್ಜಿ ಭೇಟಿ ನೀಡಿದರು. ಈ ವೇಳೆ ವೈದ್ಯರು ನಮಗೆ ನ್ಯಾಯ ಬೇಕು ಎಂದು ಘೋಷಣೆ ಕೂಗಿದರು. ವೈದ್ಯರನ್ನು ಭೇಟಿಯಾಗಲು ನಾನು ಸಿಎಂ ಆಗಿ ಅಲ್ಲ. ಬದಲಿಗೆ ಸಹೋದರಿಯಾಗಿ ಇಲ್ಲಿಗೆ ಬಂದಿದ್ದೇನೆ ಎಂದು ಮಮತಾ ಬ್ಯಾನರ್ಜಿ ಹೇಳಿದರು. ಇದನ್ನೂ ಓದಿ: ಜೀವನವು ಖಟಾ-ಖಟ್ ಅಲ್ಲ, ಕಠಿಣ ಪರಿಶ್ರಮ ಬೇಕು: ರಾಹುಲ್‌ಗೆ ಜೈಶಂಕರ್‌ ಟಾಂಗ್‌

    ನಿಮ್ಮ ಬೇಡಿಕೆಗಳನ್ನು ಕೇಳಿದ ಬಳಿಕ ಅಧ್ಯಯನ ನಡೆಸುತ್ತೇನೆ. ನಾನೊಬ್ಬಳೆ ಸರ್ಕಾರ ನಡೆಸುತ್ತಿಲ್ಲ. ಖಂಡಿತಾ ನಿಮ್ಮ ಬೇಡಿಕೆಗಳನ್ನು ಹಿರಿಯ ಅಧಿಕಾರಿಗಳೊಂದಿಗೆ ಅಧ್ಯಯನ ಮಾಡಿ ಪರಿಹಾರ ಕಂಡುಕೊಳ್ಳುತ್ತೇನೆ. ತಪ್ಪಿತಸ್ಥರು ಯಾರೇ ಆಗಿರಲಿ ಅವರಿಗೆ ಖಂಡಿತ ಶಿಕ್ಷೆಯಾಗುತ್ತದೆ. ನಾನು ನಿಮ್ಮಿಂದ ಸ್ವಲ್ಪ ಸಮಯ ಕೇಳುತ್ತಿದ್ದೇನೆ. ನಿಮ್ಮ (ಪ್ರತಿಭಟನಾನಿರತ ವೈದ್ಯರು) ವಿರುದ್ಧ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಕೆಲಸಕ್ಕೆ ಮರಳಲು ನಾನು ನಿಮ್ಮನ್ನು ವಿನಂತಿಸುತ್ತೇನೆ.

    ಆಸ್ಪತ್ರೆಯ ಅಭಿವೃದ್ಧಿ, ಮೂಲಸೌಕರ್ಯ, ಭದ್ರತೆಗೆ ಸಂಬಂಧಿಸಿದ ಎಲ್ಲಾ ಕೆಲಸಗಳು ಪ್ರಾರಂಭವಾಗಿದ್ದು, ಮುಂದೆಯೂ ಮಾಡಲಾಗುತ್ತದೆ. ಸಿಪಿಐಎಂ ಅಧಿಕಾರದಲ್ಲಿದ್ದಾಗ ನಾನು 26 ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸಿದ್ದೆ. ನಾನೇ ವಿದ್ಯಾರ್ಥಿ ಚಳವಳಿ ಮೂಲಕ ಮುಂದೆ ಬಂದಿದ್ದೇನೆ. ನನ್ನ ಜೀವನದಲ್ಲಿಯೂ ಸಾಕಷ್ಟು ಹೋರಾಟ ಮಾಡಿದ್ದೇನೆ. ನಿಮ್ಮ ಹೋರಾಟ ನನಗೆ ಅರ್ಥವಾಗಿದೆ. ನನ್ನ ಸ್ಥಾನದ ಬಗ್ಗೆ ನನಗೆ ಚಿಂತೆಯಿಲ್ಲ. ರಾತ್ರಿಯಿಡೀ ಮಳೆ ಸುರಿಯಿತು. ನೀವು ಪ್ರತಿಭಟನೆಗೆ ಕುಳಿತಿದ್ದೀರಿ. ನಾನು ರಾತ್ರಿಯಿಡೀ ಚಿಂತೆ ಮಾಡುತ್ತಿದ್ದೆ. ಇದು ನನ್ನ ಕೊನೆಯ ಪ್ರಯತ್ನವಾಗಿದ್ದು, ಯಾರಿಗೂ ಅನ್ಯಾಯವಾಗುವುದಿಲ್ಲ ಎಂದು ಭರವಸೆ ನೀಡುತ್ತೇನೆ ಎಂದರು. ಇದನ್ನೂ ಓದಿ: ಜನಸಂಖ್ಯೆ ಇಳಿಕೆ, ಆರ್ಥಿಕ ಸಂಕಷ್ಟ – ಚೀನಾದಲ್ಲಿ ನಿವೃತ್ತಿ ವಯಸ್ಸು ಏರಿಕೆ

    ಮಮತಾ ಬ್ಯಾನರ್ಜಿ ಅಲಿಸಿದ ಬಳಿಕ ಅಧಿಕಾರಿಗಳೊಂದಿಗೆ ಚರ್ಚಿಸಲು ನಾವು ಸಿದ್ಧ ಎಂದು ವೈದ್ಯರು ಹೇಳಿದರು. ನಮ್ಮ ಐದು ಬೇಡಿಕೆಗಳ ಬಗ್ಗೆ ಸರ್ಕಾರದೊಂದಿಗೆ ಯಾವುದೇ ಚರ್ಚೆಗೆ ನಾವು ಸಿದ್ಧರಿದ್ದೇವೆ ಎಂದರು. ಇದು ಅಸಮಂಜಸ ಬೇಡಿಕೆಯಲ್ಲ, ನಮ್ಮ‌ ಬೇಡಿಕೆ ನ್ಯಾಯ ಬದ್ಧವಾಗಿವೆ ಎಂದರು.

  • West Bengal: ಕರ್ತವ್ಯದಲ್ಲಿದ್ದ ನರ್ಸ್ ಖಾಸಗಿ ಅಂಗ ಮುಟ್ಟಿ ಕಿರುಕುಳ ಕೊಟ್ಟ ರೋಗಿ

    West Bengal: ಕರ್ತವ್ಯದಲ್ಲಿದ್ದ ನರ್ಸ್ ಖಾಸಗಿ ಅಂಗ ಮುಟ್ಟಿ ಕಿರುಕುಳ ಕೊಟ್ಟ ರೋಗಿ

    ಕೊಲ್ಕತ್ತಾ: ಬಂಗಾಳದ ಆಸ್ಪತ್ರೆಯೊಂದರಲ್ಲಿ ಕರ್ತವ್ಯದಲ್ಲಿದ್ದ ನರ್ಸ್ ಗೆ ರೋಗಿಯೊಬ್ಬ ಖಾಸಗಿ ಅಂಗ ಸ್ಪರ್ಶಿಸಿ ಕಿರುಕುಳ ನೀಡಿರುವ ಘಟನೆ ನಡೆದಿದೆ.

    ಆರ್.ಜಿ ಕರ್ ಮೆಡಿಕಲ್ ಕಾಲೇಜಿನಲ್ಲಿ ಟ್ರೈನಿ ವೈದ್ಯೆ ಅತ್ಯಾಚಾರ ಪ್ರಕರಣದ ತನಿಖೆ ಪ್ರಗತಿಯಲ್ಲಿರುವಾಗಲೇ ಬಂಗಾಳದ (Bengal) ಬಿರ್ಭಮ್‌ನ ಇಲಂಬಜರ್ ಆರೋಗ್ಯ ಕೇಂದ್ರದಲ್ಲಿ ಘಟನೆ ನಡೆಸಿದೆ. ನರ್ಸ್ ಚಿಕಿತ್ಸೆ ನೀಡುತ್ತಿದ್ದ ವೇಳೆ ರೋಗಿಯೊಬ್ಬ ಕಿರುಕುಳ ನೀಡಿದ್ದಾನೆ. ಇದನ್ನೂ ಓದಿ:  ಸಿದ್ದರಾಮಯ್ಯ ಅನುಮತಿ ಕೊಟ್ರೆ ನಾನು ಸಿಎಂ ಆಗ್ತೀನಿ: ಆರ್‌.ವಿ ದೇಶಪಾಂಡೆ

    ವೈದ್ಯರ ಸೂಚನೆಯಂತೆ ನಾನು ಚಿಕಿತ್ಸೆ ನೀಡುತ್ತಿದೆ. ಈ ವೇಳೆ ರೋಗಿಯು ನನ್ನೊಂದಿಗೆ ಅನುಚಿತವಾಗಿ ವರ್ತಿಸತೊಡಗಿದ, ನನ್ನ ಖಾಸಗಿ ಅಂಗಗಳನ್ನು ಮುಟ್ಟಿ ಕಿರುಕುಳ ನೀಡುವ ಜೊತೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಎಂದು ನರ್ಸ್ ಬೇಸರ ವ್ಯಕ್ತಪಡಿಸಿದ್ದಾರೆ. ಕೃತ್ಯವೆಸಗುವ ವೇಳೆ ರೋಗಿಯ ಕುಟುಂಬಸ್ಥರು ಜೊತೆಗೆ ಇದ್ದರು ಎಂದು ಆರೋಪಿಸಿದ್ದಾರೆ.

    ಭದ್ರತೆಯ ಕೊರತೆಯಿಂದಾಗಿ ಇಂತಹ ಕೃತ್ಯಗಳು ನಡೆಯುತ್ತವೆ. ಇಲ್ಲವಾದರೆ ರೋಗಿಯೊಬ್ಬನಿಗೆ ಕರ್ತವ್ಯದಲ್ಲಿರುವವರ ಜೊತೆ ಈ ರೀತಿಯಾಗಿ ನಡೆದುಕೊಳ್ಳಲು ಧೈರ್ಯವಾದರೂ ಹೇಗೆ ಬಂದಿತು ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಡಿಕೆಶಿ ಓಡಿಸುತ್ತಿದ್ದ ಹಳೇ ಬೈಕ್‌ಗೆ ಹೊಸ ರೂಪ – 1981 ರ ಮಾಡೆಲ್ ಎಝಡಿ ರೋಡ್ ಕಿಂಗ್ ಬೈಕ್

    ಟ್ರೈನಿ ವೈದ್ಯೆಯ ಅತ್ಯಾಚಾರ ಪ್ರಕರಣದ ನಂತರ ಈ ಘಟನೆಯು ಜನರಲ್ಲಿ ಆಕ್ರೋಶವನ್ನು ಹುಟ್ಟುಹಾಕಿದೆ. ಇದರಿಂದಾಗಿ ಬಿಜೆಪಿಯು (BJP) ಆಡಳಿತ ರೂಢ ತೃಣಮೂಲ ಕಾಂಗ್ರೆಸ್ ಪಕ್ಷವನ್ನು ಟೀಕಿಸಿದೆ.

    36 ಗಂಟೆಗಳ ಶಿಫ್ಟ್ ಅಮಾನುಷ ಎಂದಿದ್ದ ಸುಪ್ರೀಂ:
    ವೈದ್ಯರನ್ನು 36 ಗಂಟೆಗಳ ಕಾಲ ನಿರಂತರವಾಗಿ ದುಡಿಸಿಕೊಳ್ಳುವುದು ಅಮಾನವೀಯ ಎಂದು ಪ್ರಕರಣದ ವಿಚಾರಣೆಯ ಆರಂಭದಲ್ಲೇ ಸುಪ್ರೀಂ ಕೋರ್ಟ್ (Supreme Court) ಆಕ್ಷೇಪ ವ್ಯಕ್ತಪಡಿಸಿತ್ತು. ಕೋಲ್ಕತ್ತಾ ಆರ್.ಜಿ ಕರ್ ಸರ್ಕಾರಿ ವೈದ್ಯಕೀಯ ಕಾಲೇಜಿನ ಟ್ರೈನಿ ವೈದ್ಯೆ ಅತ್ಯಾಚಾರ- ಕೊಲೆ ಪ್ರಕರಣದ ವಿಚಾರಣೆ ನಡೆಸಿದ ಸಿಜೆಐ ಡಿ.ವೈ ಚಂದ್ರಚೂಡ್ (DYChandrachud) ನೇತೃತ್ವದ ತ್ರಿಸದಸ್ಯ ಪೀಠ ದೇಶಾದ್ಯಂತ ವೈದ್ಯರ ಕರ್ತವ್ಯದ ಅವಧಿ ಬಗ್ಗೆ ಕಳವಳ ವ್ಯಕ್ತಪಡಿಸಿತ್ತು. ಅಲ್ಲದೇ ಈ ಬಗ್ಗೆ ಕ್ರಮ ಕಾರ್ಯಪಡೆ ರಚಿಸಿ ಕ್ರಮ ಕೈಗೊಳ್ಳುವಂತೆ ಸೂಚಿಸಿತ್ತು.

    ದೇಶಾದ್ಯಂತ ವೈದ್ಯರ ಕರ್ತವ್ಯದ ಅವಧಿ ಬಗ್ಗೆ ನಾವು ತೀವ್ರ ಕಳವಳ ವ್ಯಕ್ತಪಡಿಸಿದ್ದೇವೆ. ಕೆಲ ವೈದ್ಯರು 36 ಗಂಟೆಗಳ ಪಾಳಿಯಲ್ಲಿ ಕೆಲಸ ಮಾಡುತ್ತಾರೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಹೇಳಿದ್ದರು. ನೇಮಕಗೊಂಡ 10 ಮಂದಿ ಸದಸ್ಯರ ಕಾರ್ಯಪಡೆ ಈ ಬಗ್ಗೆ ತನಿಖೆ ನಡೆಸಿ ಎಲ್ಲಾ ವೈದ್ಯರ (Kolkata Doctor) ಕರ್ತವ್ಯದ ಸಮಯವನ್ನು ಸುವ್ಯವಸ್ಥಿತಗೊಳಿಸಲು ಪರಿಶೀಲಿಸಬೇಕು ಪೀಠ ತಾಕೀತು ಮಾಡಿತ್ತು. ಈ ಬೆಳವಣಿಗೆಯ ಮಧ್ಯೆಯೇ ರಾತ್ರಿಪಾಳಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ನರ್ಸ್ವೊಬ್ಬರು ರೋಗಿಯಿಂದಲೇ ಕಿರುಕುಳಕ್ಕೆ ಒಳಗಾಗಿರುವ ಘಟನೆ ನಡೆದಿದೆ. ಇದನ್ನೂ ಓದಿ: ಸಿಎಂ ಯಾವತ್ತಿಗೂ ಟಗರೇ, ಭಯ ಬೀಳೋ ಪ್ರಶ್ನೆನೇ ಬರಲ್ಲ: ಜಮೀರ್

  • Kolkata Horror | ಕಿರಿಯ ವೈದ್ಯರಿಗೆ ನಾನು ಎಂದಿಗೂ ಬೆದರಿಕೆ ಹಾಕಿಲ್ಲ: ಮಮತಾ ಬ್ಯಾನರ್ಜಿ

    Kolkata Horror | ಕಿರಿಯ ವೈದ್ಯರಿಗೆ ನಾನು ಎಂದಿಗೂ ಬೆದರಿಕೆ ಹಾಕಿಲ್ಲ: ಮಮತಾ ಬ್ಯಾನರ್ಜಿ

    ನವದೆಹಲಿ: ಕೋಲ್ಕತ್ತಾ ವೈದ್ಯಕೀಯ ಕಾಲೇಜಿನಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ (Kolkata Trainee Doctor Case) ಖಂಡಿಸಿ ಪ್ರತಿಭಟಿಸುತ್ತಿರುವ ವೈದ್ಯರಿಗೆ ನಾನು ಎಂದಿಗೂ ಬೆದರಿಕೆ ಹಾಕಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಸ್ಪಷ್ಟನೆ ನೀಡಿದ್ದಾರೆ.

    ಧರಣಿ ನಿರತ ಕಿರಿಯ ವೈದ್ಯರಿಗೆ ಬೆದರಿಕೆ ಹಾಕಿದ್ದಾರೆ ಎನ್ನುವ ಬಿಜೆಪಿ (BJP) ಆರೋಪ ಸಂಪೂರ್ಣ ಸುಳ್ಳು ಎಂದು ತಳ್ಳಿಹಾಕಿದ್ದಾರೆ. ಇದನ್ನೂ ಓದಿ:  ಯುಪಿಯಲ್ಲಿ 7 ಮಕ್ಕಳನ್ನು ಕೊಂದ ತೋಳ – ಆಪರೇಷನ್ ಭೇಡಿಯಾ ನಡೆಸಿ ಸೆರೆ

    ಟಿಎಂಸಿ ವಿದ್ಯಾರ್ಥಿ ಘಟಕದ (TMC Student Wing) ಸಂಸ್ಥಾಪನಾ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇದು ದುರುದ್ದೇಶಪೂರಿತ ತಪ್ಪು ಮಾಹಿತಿ ಅಭಿಯಾನ. ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ಕಿರಿಯ ವೈದ್ಯರ ವಿರುದ್ಧ ಒಂದು ಪದವನ್ನೂ ನಾನು ಹೇಳಿಲ್ಲ. ಮುಷ್ಕರ ನಿರತ ವೈದ್ಯರ ವಿರುದ್ಧ ಎಫ್‌ಐಆರ್‌ ದಾಖಲಿಸಲು ಬಯಸುವುದಿಲ್ಲ ಎಂದರು ಇದೇ ವೇಳೆ ವಿರಾಮದಲ್ಲಿರುವ ಸರ್ಕಾರಿ ಆಸ್ಪತ್ರೆಗಳಲ್ಲಿನ ಕಿರಿಯ ವೈದ್ಯರನ್ನು ಕೆಲಸಕ್ಕೆ ಮರಳುವಂತೆ ಒತ್ತಾಯಿಸಿದರು.

    ನಾನು ಅವರ ಚಳುವಳಿಯನ್ನು ಸಂಪೂರ್ಣವಾಗಿ ಬೆಂಬಲಿಸುತ್ತೇನೆ ಅವರ ಚಳುವಳಿ ನಿಜವಾದದ್ದು. ಕೆಲವರು ನನ್ನ ಮೇಲೆ ಆರೋಪ ಮಾಡುತ್ತಿರುವಂತೆ ನಾನು ಅವರಿಗೆ ಎಂದಿಗೂ ಬೆದರಿಕೆ ಹಾಕಲಿಲ್ಲ. ಈ ಆರೋಪ ಸಂಪೂರ್ಣ ಸುಳ್ಳು. ಕೇಂದ್ರದ ಬೆಂಬಲದೊಂದಿಗೆ ಬಿಜೆಪಿಯು ಪಶ್ಚಿಮ ಬಂಗಾಳದಲ್ಲಿ ಪ್ರಜಾಪ್ರಭುತ್ವಕ್ಕೆ ಬೆದರಿಕೆ ಹಾಕುತ್ತಿದೆ ಮತ್ತು ಅರಾಜಕತೆ ಮತ್ತು ಕಾನೂನುಬಾಹಿರತೆಯನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ಅವರು ಆರೋಪಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯ ರಾಜೀನಾಮೆ ಪಕ್ಕ – ಅವರ ಪಾಪ ಅವರನ್ನು ಸುಮ್ಮನೆ ಬಿಡಲ್ಲ: ವಿಜಯೇಂದ್ರ

    ನನ್ನನ್ನು ನಿಂದಿಸಲಾಗಿದೆ ಮತ್ತು ಅಗೌರವಿಸಲಾಗಿದೆ. ನಾನು ಅದರ ಬಗ್ಗೆ ಯೋಚಿಸಿದೆ. ನಾನು ಅವರ ವಿರುದ್ಧ ಯಾವುದೇ ಸೇಡು ತೀರಿಸಿಕೊಂಡಿಲ್ಲ. ಎಫ್‌ಐಆರ್ ದಾಖಲಿಸಿದರೆ ಕಿರಿಯ ವೈದ್ಯರ ಭವಿಷ್ಯ ಹಾಳಾಗುತ್ತದೆ, ಪಾಸ್‌ಪೋರ್ಟ್-ವೀಸಾ ಸಿಗುವುದಿಲ್ಲ ಎಂದು ಹೇಳಿದ್ದೆ. ಇದೇ ಹೇಳಿಕೆಯನ್ನು ಬಿಜೆಪಿ ನಾಯಕರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: MUDA Scam; ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್‌ – ಆ.31 ಕ್ಕೆ ವಿಚಾರಣೆ ಮುಂದೂಡಿಕೆ

  • Kolkata Horror | ʻಹತ್ಯಾʼಚಾರಿಗೆ ಸುಳ್ಳುಪತ್ತೆ ಪರೀಕ್ಷೆ – ಆಸ್ಪತ್ರೆಗಳಲ್ಲಿ ಶೇ.25 ಭದ್ರತೆ ಹೆಚ್ಚಳಕ್ಕೆ ಸೂಚನೆ!

    – ದೀದಿ ನಿಂದಕರ ಬೆರಳು ಕತ್ತರಿಸಿ ಎಂದು ನಾಲಿಗೆ ಹರಿಬಿಟ್ಟ ಟಿಎಂಸಿ ಸಚಿವ

    ಕೋಲ್ಕತ್ತಾ: ದೇಶದಲ್ಲಿ ಭಾರೀ ಸಂಚಲನಕ್ಕೆ ಕಾರಣವಾದ ಬಂಗಾಳದ ಯುವವೈದ್ಯೆ ಹತ್ಯಾಚಾರ ಪ್ರಕರಣ ದಿನೇ ದಿನೇ ಹೊಸ ಆಯಾಮ ಪಡೆದುಕೊಳ್ತಿದೆ. ತಮ್ಮ ಪುತ್ರಿಯ ಡೈರಿಯಲ್ಲಿ ಒಂದು ಪುಟ ಕಾಣೆಯಾಗಿದೆ ಎಂದು ಮೃತರ ತಂದೆ ಆರೋಪ ಮಾಡಿದ್ದಾರೆ.

    ಮೃತರ ಶರೀರದ ಮೇಲೆ 14 ಗಾಯಗಳು ಕಂಡುಬಂದಿವೆ ಎಂದು ಮರಣೋತ್ತರ ಪರೀಕ್ಷಾ ವರದಿಯಲ್ಲಿ ಉಲ್ಲೇಖವಾಗಿದೆ ಅಂತಾ ಹೇಳಲಾಗಿದೆ. ಆರೋಪಿಯನ್ನು ಸುಳ್ಳುಪತ್ತೆ ಪರೀಕ್ಷೆಗೆ ಒಳಪಡಿಸಲು ಹೈಕೋರ್ಟ್ ಅನುಮತಿ ನೀಡಿದೆ. ಮೆಡಿಕಲ್ ಕಾಲೇಜ್ ಮಾಜಿ ಪ್ರಾಂಶುಪಾಲನನ್ನು ಸಿಬಿಐ ತೀವ್ರ ವಿಚಾರಣೆಗೆ ಒಳಪಡಿಸಿದೆ. ಇನ್ನೂ ಬಂಗಾಳ ಹೆಣ್ಮಕ್ಕಳಿಗೆ ಸುರಕ್ಷಿತವಲ್ಲ.. ಈ ವಿಚಾರದಲ್ಲಿ ಮಮತಾ ಸರ್ಕಾರ ವಿಫಲವಾಗಿದೆ ಎಂದು ರಾಜ್ಯಪಾಲ ಆನಂದ್ ಬೋಸ್ ಆಕ್ರೋಶ ಹೊರಹಾಕಿದ್ದಾರೆ.

    ಮಮತಾ ಬ್ಯಾನರ್ಜಿ ರಾಜೀನಾಮೆಗೆ ವಿಪಕ್ಷಗಳು ಪಟ್ಟು ಹಿಡಿದಿವೆ. ಆದ್ರೆ, ಅಭಿಷೇಕ್ ಬ್ಯಾನರ್ಜಿ ಸದ್ದು ಇಲ್ಲದೇ ಇರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಹೊತ್ತಲ್ಲೇ ದೀದಿ ನಿಂದಕರ ಬೆರಳು ಕತ್ತರಿಸಿ ಎಂದು ಟಿಎಂಸಿ ಸಚಿವ ಉದ್ಯಾನ್ ಗುಹಾ ಪ್ರಚೋದನೆ ನೀಡಿದ್ದಾರೆ. ಇನ್ನೂ ಸೋಷಿಯಲ್ ಮೀಡಿಯಾ ಮೂಲಕ ಸಿಎಂಗೆ ಬೆದರಿಕೆ ಹಾಕಿದ್ದ ಬಿಕಾಂ ವಿದ್ಯಾರ್ಥಿಯೊಬ್ಬನನ್ನು ಬಂಗಾಳ ಪೊಲೀಸರು ಬಂಧಿಸಿದ್ದಾರೆ. ಕೋಲ್ಕತ್ತಾ ಪೊಲೀಸ್ ಆಯುಕ್ತರನ್ನು ಸಿಬಿಐ ವಿಚಾರಣೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದ್ದ ಸುವೆಂದು ಶೇಖರ್‌ಗೆ ಸಮನ್ಸ್ ಜಾರಿಯಾಗಿದೆ.

    ಹೀಗಾಗಿ ಬಂಧನದಿಂದ ರಕ್ಷಣೆ ಕೋರಿ ಸುವೆಂದು ಶೇಖರ್ ಹೈಕೋರ್ಟ್ ಮೊರೆ ಹೋಗಿದ್ದಾರೆ. ಅಂದ ಹಾಗೆ, ಕೋಲ್ಕತ್ತಾ ಪ್ರಕರಣವನ್ನು ಸುಮೋಟೋ ಆಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್, ಮಂಗಳವಾರ ವಿಚಾರಣೆ ಕೈಗೆತ್ತಿಕೊಳ್ಳಲಿದೆ.

    ಸರ್ಕಾರಿ ಆಸ್ಪತ್ರೆಗಳಲ್ಲಿ ಶೇ.25 ಭದ್ರತೆ ಹೆಚ್ಚಳ:
    ಟ್ರೈನಿ ವೈದ್ಯೆ ಖಂಡಿಸಿ ದೇಶವ್ಯಾಪಿ ಪ್ರತಿಭಟನೆ ಭುಗಿಲೆದ್ದಿರುವ ಹೊತ್ತಿನಲ್ಲೇ ಕೇಂದ್ರ ಸಚಿವಾಲಯವು ಎಲ್ಲಾ ಕೇಂದ್ರ ಸರ್ಕಾರಿ ಆಸ್ಪತ್ರೆಗಳಲ್ಲಿ ಭದ್ರತೆಯನ್ನು ಶೇ.25 ರಷ್ಟು ಹೆಚ್ಷಿಸಲು ಅನುಮತಿ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಟ್ಯಾಂಡರ್ಡ್ ಸೆಕ್ಯುರಿಟಿ ಪ್ರೋಟೋಕಾಲ್‌ ಹೊರತಾಗಿ, ಸರ್ಕಾರಿ ಆಸ್ಪತ್ರೆಗಳು ತಮ್ಮ ಭದ್ರತಾ ಮೌಲ್ಯಮಾಪನವನ್ನು ನಡೆಸಿದ ನಂತರ ವೈಯಕ್ತಿಕ ಬೇಡಿಕೆಗಳ ಆಧಾರದ ಮೇಲೆ ಮಾರ್ಷಲ್‌ಗಳ ನಿಯೋಜನೆಗೆ ಅನುಮೋದಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಇನ್ನೂ ರಾಷ್ಟ್ರವ್ಯಾಪಿ ಪ್ರತಿಭಟನೆ ಬೆನ್ನಲ್ಲೇ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿರುವ ಸುಪ್ರೀಂ ಕೋರ್ಟ್‌ ಮಂಗಳವಾರ (ಆ.20) ಪ್ರಕರಣದ ವಿಚಾರಣೆ ನಡೆಸಲಿದೆ.

  • ಟ್ರೈನಿ ವೈದ್ಯೆ ಅತ್ಯಾಚಾರ & ಹತ್ಯೆ ಕೇಸ್‌; ಸ್ವಯಂಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ

    ಟ್ರೈನಿ ವೈದ್ಯೆ ಅತ್ಯಾಚಾರ & ಹತ್ಯೆ ಕೇಸ್‌; ಸ್ವಯಂಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ

    ನವದೆಹಲಿ: ಕೋಲ್ಕತಾದ ಆರ್‌ಜಿ ಕರ್‌ ವೈದ್ಯಕೀಯ ಕಾಲೇಜಿನಲ್ಲಿ (RG Kar Medical College) ನಡೆದಿರುವ ಟ್ರೈನಿ ವೈದ್ಯೆ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣ ಖಂಡಿಸಿ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಯುತ್ತಿದೆ. ಈ ಹೊತ್ತಿನಲ್ಲೇ ಸುಪ್ರೀಂ ಕೋರ್ಟ್‌ (Supreme Court) ಮಧ್ಯ ಪ್ರವೇಶ ಮಾಡಿದ್ದು, ಸ್ವಪ್ರೇರಿತವಾಗಿ ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡಿದೆ.

    ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ (DY Chandrachud) ನೇತೃತ್ವದ ತ್ರಿಸದಸ್ಯ ಪೀಠವು ಮಂಗಳವಾರ ಈ ಪ್ರಕರಣದ ವಿಚಾರಣೆ ನಡೆಸಲಿದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಈಗಾಗಲೇ ಈ ಪ್ರಕರಣವನ್ನು ಕೋಲ್ಕತ್ತಾ ಹೈಕೋರ್ಟ್‌ನಲ್ಲಿ (Kolkata High Court) ವಿಚಾರಣೆ ನಡೆಸಲಾಗುತ್ತಿದೆ. ಈ ಮಧ್ಯೆ ಸಿಬಿಐ ಸಹ ಪ್ರಕರಣದ ಬೆನ್ನುಹತ್ತಿದೆ.

    ಕೋಲ್ಕತ್ತಾ ಪ್ರಕರಣ ಏನು?
    ಕಳೆದ ಆ.9ರಂದು ಬೆಳಗ್ಗೆ ಸ್ನಾತಕೋತ್ತರ ತರಬೇತಿ ನಿರತ ವೈದ್ಯೆಯ ಶವ ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಅತ್ಯಾಚಾರ ಮತ್ತು ಕೊಲೆಯಾದ ರೀತಿಯಲ್ಲಿ ಪತ್ತೆಯಾಗಿತ್ತು. ಕೃತ್ಯ ನಡೆಸಿದ್ದ ಆರೋಪಿ ಸಂಜಯ್‌ನನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. ಅಶ್ಲೀಲ ವೀಡಿಯೋಗಳಿಗೆ ವ್ಯಸನಿಯಾಗಿದ್ದ ಸಂಜಯ್ ಕೊಲೆಯ ನಂತರ ಸಾಕ್ಷ್ಯ ನಾಶಪಡಿಸಲು ರಕ್ತಸಿಕ್ತ ಬಟ್ಟೆಯನ್ನು ತೊಳೆದಿದ್ದ ಎನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಈ ಹಿಂದೆ ಪೊಲೀಸ್ ಸ್ವಯಂಸೇವಕನಾಗಿದ್ದ ಈತ 4 ಬಾರಿ ಮದುವೆಯಾಗಿದ್ದು, ಪತ್ನಿಯರಿಗೆ ಆಗಾಗ ಕಿರುಕುಳ ನೀಡುತ್ತಿದ್ದ ಎಂದು ತನಿಖೆಯಿಂದ ತಿಳಿದುಬಂದಿದೆ. ಸದ್ಯ ಈ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ (CBI) ತನಿಖೆ ನಡೆಸುತ್ತಿದೆ.

    ಪೊಲೀಸರ ವಿರುದ್ಧ ಬಿಜೆಪಿ ಆರೋಪ:
    ಕೋಲ್ಕತ್ತಾ ಟ್ರೈನಿ ವೈದ್ಯೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಪೊಲೀಸರು ತಪ್ಪಿತಸ್ಥರನ್ನು ರಕ್ಷಿಸುವ ದಂಧೆಯಲ್ಲಿ ತೊಡಗಿದ್ದಾರೆ, ಇತರ ಸಾಕ್ಷ್ಯಗಳನ್ನು ತಿರುಚಲಾಗಿದೆ ಎಂದು ಬಿಜೆಪಿ ನಾಯಕ ಸುವೇಂದು ಅಧಿಕಾರಿ ಆರೋಪಿಸಿದ್ದಾರೆ. ಅಲ್ಲದೇ ತಮ್ಮ ಸೋಷಿಯಲ್‌ ಮೀಡಿಯಾ ಎಕ್ಸ್‌ ಖಾತೆಯಲ್ಲಿ ಹಲವು ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಈ ಮಾಹಿತಿಯನ್ನು ಕೇಂದ್ರೀಯ ತನಿಖಾ ದಳ ಪ್ರಧಾನ ಕಚೇರಿ ಖಾತೆಗೆ ಟ್ಯಾಗ್‌ ಮಾಡಿದ್ದಾರೆ.

    ನಿರ್ಭಯಾ ತಾಯಿ ಆಕ್ರೋಶ:
    ಪಶ್ವಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಪ್ರತಿಭಟನೆ ನಡೆಸುವ ಮೂಲಕ ಜನರ ಗಮನ ಬೇರೆಡೆಗೆ ತಿರುಗಿಸಲು ಯತ್ನಿಸುತ್ತಿದ್ದಾರೆ ಎಂದು ನಿರ್ಭಯಾ ತಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಮಮತಾ ಬ್ಯಾನರ್ಜಿ ತಮ್ಮ ಬೆಂಬಲಿಗರೊಂದಿಗೆ ಟ್ರೈನಿ ವೈದ್ಯೆಯ ಕೊಲೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದರು. ತಮ್ಮ ಅಧಿಕಾರ ಬಳಸಿ ಅಪರಾಧಿಯ ವಿರುದ್ಧ ಕ್ರಮ ಕೈಗೊಳ್ಳುವುದನ್ನು ಬಿಟ್ಟು ಮಮತಾ ಬ್ಯಾನರ್ಜಿ ಪ್ರತಿಭಟನೆಯ ಹೆಸರಿನಲ್ಲಿ ಜನರ ಗಮನ ಬೇರೆಡೆ ತಿರುಗಿಸಲು ಯತ್ನಿಸುತ್ತಿದ್ದಾರೆ ಎಂದು ನಿರ್ಭಯಾ ತಾಯಿ ಟೀಕಿಸಿದ್ದಾರೆ.

  • ಇಂದು ಸರ್ಕಾರಿ, ಖಾಸಗಿ ಆಸ್ಪತ್ರೆಗಳ ಓಪಿಡಿ ಬಂದ್ – ಹೊರರೋಗಿಗಳಿಗಿಲ್ಲ ಚಿಕಿತ್ಸೆ

    ಇಂದು ಸರ್ಕಾರಿ, ಖಾಸಗಿ ಆಸ್ಪತ್ರೆಗಳ ಓಪಿಡಿ ಬಂದ್ – ಹೊರರೋಗಿಗಳಿಗಿಲ್ಲ ಚಿಕಿತ್ಸೆ

    – ಕೋಲ್ಕತ್ತ ವೈದ್ಯೆಯ ಹತ್ಯೆ ಖಂಡಿಸಿ ಐಎಂಎ ಪ್ರತಿಭಟನೆಗೆ ಕರೆ; ಸರ್ಕಾರಿ ವೈದ್ಯರ ಬೆಂಬಲ
    – ತುರ್ತು ಸೇವೆಗಳು ಮಾತ್ರ ಲಭ್ಯ

    ಬೆಂಗಳೂರು: ಕೋಲ್ಕತ್ತ ವೈದ್ಯೆಯ (Kolkata Doctor) ಹತ್ಯೆ ಖಂಡಿಸಿ ಐಎಂಎ ಪ್ರತಿಭಟನೆಗೆ ಕರೆ ಕೊಟ್ಟಿದ್ದು, ರಾಜ್ಯದಲ್ಲಿ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ಓಪಿಡಿ ಇಂದು ಬಂದ್ (OPD Bandh) ಆಗಲಿವೆ. ತುರ್ತು ಸೇವೆಗಳು ಮಾತ್ರ ಲಭ್ಯವಿರಲಿವೆ.

    ಕೋಲ್ಕತ್ತದಲ್ಲಿ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಹತ್ಯೆಯನ್ನ ಖಂಡಿಸಿ ಇಂದು ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಪ್ರತಿಭಟನೆಗೆ ಕರೆ ಕೊಟ್ಟಿದೆ. ಐಎಂಎ ಕೊಟ್ಟಿರುವ ಕರೆಗೆ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ, ಖಾಸಗಿ ಆಸ್ಪತ್ರೆಗಳ ಒಕ್ಕೂಟ ಮತ್ತು ಹಲವು ವೈದ್ಯಕೀಯ ಅಸೋಸಿಯೇಶನ್‌ಗಳು ಬೆಂಬಲ ಕೊಟ್ಟಿದ್ದು, ಇಂದು ಬೆಳಗ್ಗೆ 6 ಗಂಟೆಯಿಂದ ನಾಳೆ ಬೆಳಗ್ಗೆ 6 ಗಂಟೆಯವರೆಗೂ ಓಪಿಡಿ ಬಂದ್ ಆಗಲಿದೆ. ಅಂದರೆ 24 ಗಂಟೆಗಳ ಕಾಲ ಓಪಿಡಿ ಸೇವೆ ಸ್ಥಗಿತ ಆಗಲಿದೆ. ಇದನ್ನೂ ಓದಿ: ಸುಡಾನ್ ಅರೆಸೇನಾ ಪಡೆಯಿಂದ ನಾಗರಿಕರ ಮೇಲೆ ದಾಳಿ – 80 ಜನರ ಬಲಿ

    ಓಪಿಡಿ ಸೇವೆ ಬಂದ್ ಆಗುವ ಕಾರಣ ರೋಗಿಗಳು ಆಸ್ಪತ್ರೆಗೆ ಹೋದರೆ ಚಿಕಿತ್ಸೆ ಸಿಗುವುದಿಲ್ಲ. ತುರ್ತು ಸೇವೆ ಮಾತ್ರ ಲಭ್ಯವಿರಲಿದೆ. ಬೆಂಗಳೂರಿನಲ್ಲಿ ಇರುವ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲೂ ಪ್ರತಿಭಟನೆ ಕಾವು ಜೋರಾಗಿ ಇರಲಿದೆ.

    ಇಂದಿನ ವೈದ್ಯರ ಪ್ರತಿಭಟನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೂಡ ಪರೋಕ್ಷವಾಗಿ ಬೆಂಬಲಿಸಿದ್ದಾರೆ. ಪ್ರತಿಭಟನೆ ಉದ್ದೇಶ ಸರಿ ಇದೆ. ಅವರ ಹಕ್ಕನ್ನ ಅವರು ವ್ಯಕ್ತಪಡಿಸಲಿ. ಸಾರ್ವಜನಿಕರಿಗೆ ತೊಂದರೆ ಆಗದೇ ಇರೋಥರ ಮಾಡಲಿ ಎಂದಿದ್ದಾರೆ. ಜೊತೆಗೆ ಪ್ರತಿಭಟನೆ ಇರುವ ಹಿನ್ನೆಲೆ ಇಂದು ವೈದ್ಯರಿಗೆ ರಜೆ ಮಂಜೂರು ಮಾಡದಂತೆ ಸರ್ಕಾರ ಕೂಡ ಆದೇಶ ಮಾಡಿದೆ. ಇದನ್ನೂ ಓದಿ: ಐಫೋನ್ ತಯಾರಕ ಫಾಕ್ಸ್‌ಕಾನ್ ಕಂಪನಿ ಮುಖ್ಯಸ್ಥನ ಜೊತೆ ಸಿಎಂ, ಡಿಸಿಎಂ ಡಿನ್ನರ್

    ಪ್ರತಿಭಟನೆಗೆ ಯರ‍್ಯಾರ ಬೆಂಬಲ?
    ರಾಜ್ಯಾದ್ಯಂತ ಐಎಂಎ ವ್ಯಾಪ್ತಿಯಲ್ಲಿ 30,000 ವೈದ್ಯರಿದ್ದು, ಪ್ರತಿಭಟನೆಗೆ ಎಲ್ಲರೂ ಬೆಂಬಲ ವ್ಯಕ್ತಪಡಿಸಿದ್ದಾರೆ. ಖಾಸಗಿ ಆಸ್ಪತ್ರೆಗಳ ಒಕ್ಕೂಟ, ಸರ್ಕಾರಿ ವೈದ್ಯಾಧಿಕಾರಿಗಳ ಅಸೋಸಿಯೇಶನ್, ಮಕ್ಕಳ ವೈದ್ಯರ ಅಸೋಸಿಯೇಶನ್, ಅರ್ಥೋಪಿಡಿಕ್ ಅಸೋಸಿಯೇಶನ್, ಮೆಡಿಕಲ್ ಕಾಲೇಜ್ ವೈದ್ಯರ ಅಸೋಸಿಯೇಶನ್, ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿವೆ.

  • ನಮ್ಮ ಮೇಲೆ ಅತ್ಯಾಚಾರ ಮಾಡೋದನ್ನ ಈಗಲಾದ್ರೂ ನಿಲ್ಲಿಸಿ; ಟ್ರೈನಿ ವೈದ್ಯೆ ಕೇಸ್‌ ಬಗ್ಗೆ ಪೂನಂ ಪಾಂಡೆ ಪ್ರತಿಕ್ರಿಯೆ

    ನಮ್ಮ ಮೇಲೆ ಅತ್ಯಾಚಾರ ಮಾಡೋದನ್ನ ಈಗಲಾದ್ರೂ ನಿಲ್ಲಿಸಿ; ಟ್ರೈನಿ ವೈದ್ಯೆ ಕೇಸ್‌ ಬಗ್ಗೆ ಪೂನಂ ಪಾಂಡೆ ಪ್ರತಿಕ್ರಿಯೆ

    – ನಾವು ಹೇಗೆ ಬಟ್ಟೆ ಹಾಕ್ತೀವಿ? ನಡೆಯುತ್ತೇವೆ? ಮಾತಾಡ್ತೇವೆ? ಎಲ್ಲವನ್ನೂ ಕೇಳೋದೇಕೆ?

    ಮುಂಬೈ: ದಯವಿಟ್ಟು ನಮ್ಮ ಮೇಲೆ ಅತ್ಯಾಚಾರ ಮಾಡೋದನ್ನ ಈಗಲಾದ್ರೂ ನಿಲ್ಲಿಸಿ ಎಂದು ಮಾದಕ ನಟಿ ಪೂನಂ ಪಾಂಡೆ (Poonam Pandey) ಭಾವುಕ ಸಂದೇಶವೊಂದನ್ನ ಹಂಚಿಕೊಂಡಿದ್ದಾರೆ.

    ಕೋಲ್ಕತ್ತಾದಲ್ಲಿ ಇತ್ತೀಚೆಗೆ ತರಬೇತಿ ವೈದ್ಯೆಯ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ (Kolkata Rape Murder Case) ಕುರಿತು ತಮ್ಮ ಸೋಷಿಯಲ್‌ ಮೀಡಿಯಾ ಇನ್‌ಸ್ಟಾಗ್ರಾಮ್‌ (Instagram) ಖಾತೆಯಲ್ಲಿ ಸಂದೇಶವೊಂದನ್ನು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಟ್ರೈನಿ ವೈದ್ಯೆ ಹತ್ಯೆ ಪ್ರಕರಣ: ಆರೋಪಿಯ ಹೊಡೆತಕ್ಕೆ ಕನ್ನಡಕ ಒಡೆದು ಬಿದ್ದ ಗಾಜಿನಿಂದ ಕಣ್ಣಲ್ಲಿ ರಕ್ತ!

     

    View this post on Instagram

     

    A post shared by Poonam Pandey (@poonampandeyreal)

    ಪೂನಂ ಪಾಂಡೆ ಇನ್‌ಸ್ಟಾದಲ್ಲಿ ಏನಿದೆ?
    ನಾಚಿಕೆಯಾಗಬೇಕು ನಮಗೆ?…
    ಅತ್ಯಾಚಾರಿಗಳು ಮುಕ್ತವಾಗಿ ನಡೆಯುವ, ಹಿಂಬಾಲಕರು ಕತ್ತಲಲ್ಲಿ ಅಡಗಿರುವ ಹಾಗೂ ಮಹಿಳೆಯರು ನಿರಂತರವಾಗಿ ಅಸುರಕ್ಷಿತರಾಗಿರುವ ಈ ಜಗತ್ತಿನಲ್ಲಿ ನಾವು ಏಕೆ ವಾಸಿಸುತ್ತಿದ್ದೇವೆ? ನಾವು ಇದನ್ನ ಪ್ರತಿದಿನ ಸಹಿಸಿಕೊಳ್ಳಲು ಏಕೆ ಒತ್ತಾಯಿಸಲ್ಪಡುತ್ತೇವೆ? ಅಸುರಕ್ಷತೆ ನಮಗೆ ಸಂಭವಿಸುತ್ತಿದೆ ಅದಕ್ಕೆ ನಾವು ದೂಷಿಸುತ್ತೇವೆ? ಇದನ್ನೂ ಓದಿ: ದೇಶ ಮೊದಲು.. ಭಾರತವನ್ನು ಬಲಪಡಿಸಲು ದೊಡ್ಡ ಸುಧಾರಣೆಗಳಿಗೆ ಬದ್ಧ: ಪ್ರಧಾನಿ ಮೋದಿ ಪ್ರತಿಜ್ಞೆ

    ನಾವು ಹೇಗೆ ಬಟ್ಟೆ ಧರಿಸುತ್ತೇವೆ? ಹೇಗೆ ನಡೆಯುತ್ತೇವೆ? ಹೇಗೆ ಮಾತನಾಡುತ್ತೇವೆ ಎಂಬುದನ್ನು ಕೇಳುತ್ತಾರೆ? ಏನು ಮಾಡಬೇಕು ಎಂಬುದನ್ನು ಹೇಳುತ್ತಾರೆ? ಆದ್ರೆ ನಾವು ಭಯವಿಲ್ಲದೇ ಬದುಕುವುದಕ್ಕೆ ಏಕೆ ಸಾಧ್ಯವಿಲ್ಲ? ಕಿರುಕುಳ ಅನುಭವಿಸದೇ ಏಕೆ ಅಸ್ತಿತ್ವದಲ್ಲಿರಲು ಧ್ಯವಿಲ್ಲ? ನಾವು ಸುರಕ್ಷತೆ, ಘನತೆ ಮತ್ತು ಗೌರವ ಬಯಸಿದಾಗ ನಮ್ಮ ಧ್ವನಿಯನ್ನು ಏಕೆ ಮೌನಗೊಳಿಸುತ್ತಾರೆ? ಇದನ್ನೂ ಓದಿ: Independence Day: ಕೆಂಪುಕೋಟೆಯಲ್ಲಿ ಸ್ವಾತಂತ್ರೋತ್ಸವದ ಸಂಭ್ರಮ – ಧ್ವಜಾರೋಹಣ ನೆರವೇರಿಸಿದ ಪ್ರಧಾನಿ

    ನಾವು ಬೇಡುವುದು ಒಂದೇ.. ದಯವಿಟ್ಟು ಇನ್ನಾದರೂ ನಮ್ಮ ಮೇಲೆ ಅತ್ಯಾಚಾರ ಮಾಡುವುದನ್ನು ನಿಲ್ಲಿಸಬಹುದೇ? ನಮ್ಮನ್ನು ಹಿಂಬಾಲಿಸುವುದನ್ನ ನಿಲ್ಲಿಸಬಹುದೇ? ದಯವಿಟ್ಟು ನಮಗೆ ಕಿರುಕುಳ ನೀಡೋದನ್ನ ನಿಲ್ಲಿಸಬಹುದೇ? ನಾವು ಭಯದಿಂದ ಬದುಕಲು ಬೇಸತ್ತಿದ್ದೇವೆ, ನಮ್ಮ ವಿರುದ್ಧ ಹಿಂಸಾಚಾರ ನಡೆದರೂ ಅಂತ್ಯವಿಲ್ಲದ ಸಮರ್ಥನೆಗಳಿಂದ ಬೇಸತ್ತಿದ್ದೇವೆ. ಇದೆಲ್ಲವೂ ನಿಲ್ಲಬೇಕಾದ ಅಗತ್ಯವಿದೆ. ಏಕೆಂದರೆ ನಾವು ಸಹ ಎಲ್ಲರಂತೆ ಯಾವುದೇ ಬೆದರಿಕೆಯಿಲ್ಲದೇ ಸರಳವಾಗಿ ಬದುಕಲು ಅರ್ಹರಿದ್ದೇವೆ ಎಂದು ಅವರು ಬರೆದುಕೊಂಡಿದ್ದಾರೆ.

    ಕೋಲ್ಕತ್ತಾ ಪ್ರಕರಣ ಏನು?
    ಕಳೆದ ಆ.9ರಂದು ಬೆಳಗ್ಗೆ ಸ್ನಾತಕೋತ್ತರ ತರಬೇತಿ ನಿರತ ವೈದ್ಯೆಯ ಶವ ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಅತ್ಯಾಚಾರ ಮತ್ತು ಕೊಲೆಯಾದ ರೀತಿಯಲ್ಲಿ ಪತ್ತೆಯಾಗಿತ್ತು. ಕೃತ್ಯ ನಡೆಸಿದ್ದ ಆರೋಪಿ ಸಂಜಯ್‌ನನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. ಅಶ್ಲೀಲ ವೀಡಿಯೋಗಳಿಗೆ ವ್ಯಸನಿಯಾಗಿದ್ದ ಸಂಜಯ್ ಕೊಲೆಯ ನಂತರ ಸಾಕ್ಷ್ಯ ನಾಶಪಡಿಸಲು ರಕ್ತಸಿಕ್ತ ಬಟ್ಟೆಯನ್ನು ತೊಳೆದಿದ್ದ ಎನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಈ ಹಿಂದೆ ಪೊಲೀಸ್ ಸ್ವಯಂಸೇವಕನಾಗಿದ್ದ ಈತ 4 ಬಾರಿ ಮದುವೆಯಾಗಿದ್ದು, ಪತ್ನಿಯರಿಗೆ ಆಗಾಗ ಕಿರುಕುಳ ನೀಡುತ್ತಿದ್ದ ಎಂದು ತನಿಖೆಯಿಂದ ತಿಳಿದುಬಂದಿದೆ. ಸದ್ಯ ಈ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ (CBI) ತನಿಖೆ ನಡೆಸುತ್ತಿದೆ.

  • ಟ್ರೈನಿ ವೈದ್ಯೆ ಹತ್ಯೆ ಪ್ರಕರಣ: ಆರೋಪಿಯ ಹೊಡೆತಕ್ಕೆ ಕನ್ನಡಕ ಒಡೆದು ಬಿದ್ದ ಗಾಜಿನಿಂದ ಕಣ್ಣಲ್ಲಿ ರಕ್ತ!

    ಟ್ರೈನಿ ವೈದ್ಯೆ ಹತ್ಯೆ ಪ್ರಕರಣ: ಆರೋಪಿಯ ಹೊಡೆತಕ್ಕೆ ಕನ್ನಡಕ ಒಡೆದು ಬಿದ್ದ ಗಾಜಿನಿಂದ ಕಣ್ಣಲ್ಲಿ ರಕ್ತ!

    ಕೋಲ್ಕತ್ತಾ: ಆರ್‌ಜಿ ಕಾರ್ ವೈದ್ಯಕೀಯ ಕಾಲೇಜಿನಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ (Kolkata doctor rape and murder Case) ಮರಣೋತ್ತರ ಪರೀಕ್ಷೆಯ ವರದಿ ಬಂದಿದೆ. ಇದರಲ್ಲಿ ಆರೋಪಿಯ ಅಮಾನುಷ ಕೃತ್ಯಗಳು ಬಹಿರಂಗವಾಗಿದೆ. ಆರೋಪಿ ಸಂಜಯ್ ರಾಯ್ ವೈದ್ಯೆ ಮೇಲೆ ಅಮಾನುಷವಾಗಿ ಥಳಿಸಿದ್ದಾನೆ. ಅವನ ಹೊಡೆತಕ್ಕೆ ಟ್ರೈನಿ ವೈದ್ಯೆಯ ಕನ್ನಡಕ ಒಡೆದು ಕಣ್ಣಿಗೆ ಗಾಜು ಬಿದ್ದಿದೆ. ಇದರಿಂದಾಗಿ ಕಣ್ಣಿನಲ್ಲಿ ರಕ್ತ ಬಂದಿದೆ ವರದಿಯಲ್ಲಿದೆ.

    ಎಲ್ಲಿ ನೋಡಿದರೂ ರಕ್ತ..!
    ವೈದ್ಯೆಯ (Doctor) ಕಣ್ಣು ಮತ್ತು ಬಾಯಿ ಎರಡರಲ್ಲೂ ರಕ್ತ ಸುರಿಯುತ್ತಿತ್ತು. ವೈದ್ಯೆಯ ಮುಖವು ಗಾಯಗಳಿಂದ ತುಂಬಿದೆ. ಸಂತ್ರಸ್ತೆಯ ಖಾಸಗಿ ಅಂಗಗಳಲ್ಲಿಯೂ ತೀವ್ರ ರಕ್ತಸ್ರಾವವಾಗಿತ್ತು. ಹೊಟ್ಟೆ, ಎಡಗಾಲು, ಕುತ್ತಿಗೆ, ಬಲಗೈ, ಉಂಗುರ ಬೆರಳು ಮತ್ತು ತುಟಿಯ ಮೇಲೆ ಗಾಯಗಳಾಗಿವೆ ಎಂದು ಮರಣೋತ್ತರ ಪರೀಕ್ಷೆ ವರದಿಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ದೇಶದ್ಯಾಂತ ಪ್ರತಿಭಟನೆ

    ಪ್ರಕರಣ ಏನು?
    ಕಳೆದ ಶುಕ್ರವಾರ ಬೆಳಗ್ಗೆ ಸ್ನಾತಕೋತ್ತರ ತರಬೇತಿ ನಿರತ ವೈದ್ಯೆಯ ಶವ ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಅತ್ಯಾಚಾರ ಮತ್ತು ಕೊಲೆಯಾದ ರೀತಿಯಲ್ಲಿ ಪತ್ತೆಯಾಗಿತ್ತು. ಕೃತ್ಯ ನಡೆಸಿದ್ದ ಆರೋಪಿ ಸಂಜಯ್‌ನನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. ಅಶ್ಲೀಲ ವೀಡಿಯೋಗಳಿಗೆ ವ್ಯಸನಿಯಾಗಿದ್ದ ಸಂಜಯ್ ಕೊಲೆಯ ನಂತರ ಸಾಕ್ಷ್ಯ ನಾಶಪಡಿಸಲು ರಕ್ತಸಿಕ್ತ ಬಟ್ಟೆಯನ್ನು  ತೊಳೆದಿದ್ದ ಎನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಈ ಹಿಂದೆ ಪೊಲೀಸ್ ಸ್ವಯಂಸೇವಕನಾಗಿದ್ದ ಈತ 4 ಬಾರಿ ಮದುವೆಯಾಗಿದ್ದು, ಪತ್ನಿಯರಿಗೆ ಆಗಾಗ ಕಿರುಕುಳ ನೀಡುತ್ತಿದ್ದ ಎಂದು ತನಿಖೆಯಿಂದ ತಿಳಿದು ಬಂದಿದೆ.  ಇದನ್ನೂ ಓದಿ: ತರಬೇತಿ ವೈದ್ಯೆ ಮೇಲೆ ಅತ್ಯಾಚಾರ ಕೇಸ್‌ – ಅವಮಾನ ಸಹಿಸಲಾರದೇ ಪ್ರಾಂಶುಪಾಲ ರಾಜೀನಾಮೆ