Tag: Kolkata Highcourt

  • ಟ್ರೈನಿ ವೈದ್ಯೆ ಮೇಲೆ ಅತ್ಯಾಚಾರ ಎಸಗಿರೋದು ದೃಢ – ಸಿಬಿಐ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ

    ಟ್ರೈನಿ ವೈದ್ಯೆ ಮೇಲೆ ಅತ್ಯಾಚಾರ ಎಸಗಿರೋದು ದೃಢ – ಸಿಬಿಐ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ

    ಕೋಲ್ಕತ್ತಾ: ಆರ್‌.ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ (RG Kar Medical College and Hospital) ಕರ್ತವ್ಯನಿರತ ಟ್ರೈನಿ ವೈದ್ಯೆ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಂಜಯ್ ರಾಯ್ ವಿರುದ್ಧ ಕೇಂದ್ರೀಯ ತನಿಖಾ ದಳ (CBI) ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಸಿದೆ.

    ಸೋಮವಾರ ಮಧ್ಯಾಹ್ನ ಸೀಲ್ದಾಹ್‌ನಲ್ಲಿರುವ ಕೋಲ್ಕತ್ತಾದ ವಿಶೇಷ ನ್ಯಾಯಾಲಯಕ್ಕೆ ಸಿಬಿಐ ದೋಷಾರೋಪ ಪಟ್ಟಿ (Chargesheet) ಸಲ್ಲಿಸಿದೆ. ವಿರಾಮದ ಸಮಯದಲ್ಲಿ ಟ್ರೈನಿ ವೈದ್ಯೆ ಆಸ್ಪತ್ರೆ ಸೆಮಿನಾರ್ ಕೊಠಡಿಯಲ್ಲಿ ವಿಶ್ರಾಂತಿಗೆ ಹೋದಾಗ ಆರೋಪಿ ಕೃತ್ಯ ಎಸಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಸಿಬಿಐ ಮೂಲಗಳ ಪ್ರಕಾರ, ಚಾರ್ಚ್ಶೀಟ್‌ನಲ್ಲಿ ಆರೋಪಿ ಸಂಜಯ್ ರಾಯ್ ಹೆಸರಿಸಿರುವ ಸುಮಾರು 200 ಜನರ ಹೇಳಿಕೆಗಳನ್ನ ದಾಖಲಿಸಲಾಗಿದೆ. ಈ ಸಂದರ್ಭದಲ್ಲಿ ಕೆಲವರು ಗ್ಯಾಂಗ್ ರೇಪ್ ಆಗಿರಬಹುದು ಎಂದು ಶಂಕಿಸಿ ಹೇಳಿಕೆ ನೀಡಿದ್ದಾರೆ ಎಂದು ಚಾರ್ಚ್ಶೀಟ್‌ನಲ್ಲಿ ಉಲ್ಲೇಖಿಸಿರುವುದಾಗಿ ವರದಿಯಾಗಿದೆ.

    ಆಗಸ್ಟ್ 9ರಂದು ಟ್ರೈನಿ ವೈದ್ಯೆ ಹತ್ಯೆಗೀಡಾದ ನಂತರ ತನಿಖಾ ಹಂತದಲ್ಲಿ ಒಂದೊಂದೇ ಭಯಾನಕ ಸತ್ಯಗಳು ಬಯಲಾಗುತ್ತಾ ಹೋದವು. ಇದರಿಂದ ದೇಶವ್ಯಾಪಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಇದರಿಂದ ಎಚ್ಚೆತ್ತ ಹೈಕೋರ್ಟ್ ಕೋಲ್ಕತ್ತಾ ಪೊಲೀಸರಿಂದ ಸಿಬಿಐಗೆ ತನಿಖೆ ವಹಿಸುವಂತೆ ಸೂಚಿಸಿತು. ಬಳಿಕ ಆರೋಪಿ ಹೇಳಿಕೆ ಆಧರಿಸಿ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ ಸಿಬಿಐ ಅಂದಿನ ಪ್ರಾಂಶುಪಾಲನಾಗಿದ್ದ ಸಂದೀಪ್ ಘೋಷ್ ಅವರನ್ನೂ ಬಂಧಿಸಿ ತನಿಖೆ ನಡೆಸಿತು.

    ಕೋಲ್ಕತ್ತಾ ಪ್ರಕರಣ ಏನು?
    ಕಳೆದ ಆ.9ರಂದು ಬೆಳಗ್ಗೆ ಸ್ನಾತಕೋತ್ತರ ತರಬೇತಿ ನಿರತ ವೈದ್ಯೆಯ ಶವ ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಅತ್ಯಾಚಾರ ಮತ್ತು ಕೊಲೆಯಾದ ರೀತಿಯಲ್ಲಿ ಪತ್ತೆಯಾಗಿತ್ತು. ಬಳಿಕ ಕೃತ್ಯ ನಡೆಸಿದ್ದ ಆರೋಪಿ ಸಂಜಯ್‌ನನ್ನು ಪೊಲೀಸರು ಬಂಧಿಸಿದ್ದರು. ಅಶ್ಲೀಲ ವೀಡಿಯೋಗಳಿಗೆ ವ್ಯಸನಿಯಾಗಿದ್ದ ಸಂಜಯ್ ಕೊಲೆಯ ನಂತರ ಸಾಕ್ಷ್ಯ ನಾಶಪಡಿಸಲು ರಕ್ತಸಿಕ್ತ ಬಟ್ಟೆಯನ್ನು ತೊಳೆದಿದ್ದ ಎನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದರು. ಈ ಹಿಂದೆ ಪೊಲೀಸ್ ಸ್ವಯಂ ಸೇವಕನಾಗಿದ್ದ ಈತ 4 ಬಾರಿ ಮದುವೆಯಾಗಿದ್ದು, ಪತ್ನಿಯರಿಗೆ ಆಗಾಗ ಕಿರುಕುಳ ನೀಡುತ್ತಿದ್ದ ಎಂದು ತನಿಖೆಯಿಂದ ತಿಳಿದುಬಂದಿತ್ತು. ಈ ಪ್ರಕರಣದ ತನಿಖೆ ಹೊಣೆ ಹೊತ್ತಿದ್ದ ಸಿಬಿಐ ಇದೀಗ ದೋಷಾರೋಪ ಪಟ್ಟಿ ಸಲ್ಲಿಸಿದೆ.

  • Kolkata Horror | 36 ಗಂಟೆಗಳ ಅಮಾನುಷ ಶಿಫ್ಟ್ ಸರಿಯಲ್ಲ ಎಂದ ಸುಪ್ರೀಂ – ಸುಳ್ಳುಪತ್ತೆ ಪರೀಕ್ಷೆಗೆ ಅಸ್ತು!

    Kolkata Horror | 36 ಗಂಟೆಗಳ ಅಮಾನುಷ ಶಿಫ್ಟ್ ಸರಿಯಲ್ಲ ಎಂದ ಸುಪ್ರೀಂ – ಸುಳ್ಳುಪತ್ತೆ ಪರೀಕ್ಷೆಗೆ ಅಸ್ತು!

    36 ಗಂಟೆಗಳ ಅಮಾನುಷ ಶಿಫ್ಟ್ ಸರಿಯಲ್ಲ ಎಂದ ಸುಪ್ರೀಂ

    ನವದೆಹಲಿ/ಕೋಲ್ಕತ್ತಾ: ವೈದ್ಯರನ್ನು 36 ಗಂಟೆಗಳ ಕಾಲ ನಿರಂತರವಾಗಿ ದುಡಿಸಿಕೊಳ್ಳುವುದು ಅಮಾನವೀಯ ಎಂದು ಸುಪ್ರೀಂ ಕೋರ್ಟ್‌ (Supreme Court)  ಗುರುವಾರ ಹೇಳಿದೆ.

    ಕೋಲ್ಕತ್ತಾ ಆರ್.ಜಿ ಕರ್ ಸರ್ಕಾರಿ ವೈದ್ಯಕೀಯ ಕಾಲೇಜಿನ ಟ್ರೈನಿ ವೈದ್ಯೆ ಅತ್ಯಾಚಾರ- ಕೊಲೆ ಪ್ರಕರಣದ ವಿಚಾರನೆ ನಡೆಸಿದ ಸಿಜೆಐ ಡಿ.ವೈ ಚಂದ್ರಚೂಡ್ (DYChandrachud) ನೇತೃತ್ವದ ತ್ರಿಸದಸ್ಯ ಪೀಠ ದೇಶಾದ್ಯಂತ ವೈದ್ಯರ ಕರ್ತವ್ಯದ ಅವಧಿ ಬಗ್ಗೆ ಕಳವಳ ವ್ಯಕ್ತಪಡಿಸಿತು. ಅಲ್ಲದೇ ಈ ಬಗ್ಗೆ ಕ್ರಮ ಕಾರ್ಯಪಡೆ ರಚಿಸಿ ಕ್ರಮ ಕೈಗೊಳ್ಳುವಂತೆ ಸೂಚಿಸಿತು.

    ದೇಶಾದ್ಯಂತ ವೈದ್ಯರ ಕರ್ತವ್ಯದ ಅವಧಿ ಬಗ್ಗೆ ನಾವು ತೀವ್ರ ಕಳವಳ ವ್ಯಕ್ತಪಡಿಸಿದ್ದೇವೆ. ಕೆಲ ವೈದ್ಯರು 36 ಗಂಟೆಗಳ ಪಾಳಿಯಲ್ಲಿ ಕೆಲಸ ಮಾಡುತ್ತಾರೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಹೇಳಿದ್ದಾರೆ. ನೇಮಕಗೊಂಡ 10 ಮಂದಿ ಸದಸ್ಯರ ಕಾರ್ಯಪಡೆ ಈ ಬಗ್ಗೆ ತನಿಖೆ ನಡೆಸಿ ಎಲ್ಲಾ ವೈದ್ಯರ (Kolkata Doctor) ಕರ್ತವ್ಯದ ಸಮಯವನ್ನು ಸುವ್ಯವಸ್ಥಿತಗೊಳಿಸಲು ಪರಿಶೀಲಿಸಬೇಕು ಪೀಠ ತಾಕೀತು ಮಾಡಿದೆ. ಇದನ್ನೂ ಓದಿ: ಧರ್ಮಗುರುಗಳ ಮೂಲಕ ಮುಸ್ಲಿಮರ ವಿವಾಹ ನೋಂದಣಿಗೆ ತಡೆ – ಹೊಸ ಮಸೂದೆಗೆ ಅಸ್ಸಾಂ ಕ್ಯಾಬಿನೆಟ್ ಅನುಮೋದನೆ

    ಅಲ್ಲದೇ ನ್ಯಾಯಮೂರ್ತಿಗಳಾದ ಜೆ.ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠ, ಕೋಲ್ಕತ್ತಾ ಪೊಲೀಸರ ತನಿಖೆಯಲ್ಲಿನ ವಿಳಂಬ ಮತ್ತು ಸ್ಪಷ್ಟ ಅಕ್ರಮಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿತು. ಅಸ್ವಾಭಾವಿಕ ಸಾವು ಎಂದು ಪ್ರಕರಣ ದಾಖಲಿಸಲು ಪೊಲೀಸರು ವಿಳಂಬ ಮಾಡಿರುವುದು ಅತ್ಯಂತ ಗೊಂದಲದ ಸಂಗತಿ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತು.

    ಮೋದಿಗೆ ದೀದಿ ಪತ್ರ:
    ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಗುರುವಾರ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಮನವಿ ಮಾಡಿದ್ದಾರೆ. ಈ ಪತ್ರದ ಪ್ರತಿಯನ್ನು ತಮ್ಮ ಎಕ್ಸ್‌ ಖಾತೆಯಲ್ಲೂ ಹಂಚಿಕೊಂಡಿದ್ದಾರೆ. ಈ ದಿನ ನಾನು ಮೋದಿ ಅವರಿಗೆ ಪತ್ರ ಬರೆದಿದ್ದೇನೆ. ದಿನೇ ದಿನೇ ದೇಶಾದ್ಯಂತ ಹೆಚ್ಚಾಗುತ್ತಿರುವ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ಬಗ್ಗೆ ನಿಮ್ಮ ಗಮನಕ್ಕೆ ತರಲು ನಾನು ಬಯಸುತ್ತೇನೆ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕಬೇಕೆಂದರೆ ಕಟ್ಟುನಿಟ್ಟಿನ ಕಾನೂನು ಜಾರಿಯಾದರೆ ಮಾತ್ರ ಸಾಧ್ಯ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

    ಸುಳ್ಳುಪತ್ತೆ ಪರೀಕ್ಷೆಗೆ ಅಸ್ತು:
    ಕೋಲ್ಕತ್ತಾ ಆರ್.ಜಿ ಕರ್ ಸರ್ಕಾರಿ ವೈದ್ಯಕೀಯ ಕಾಲೇಜಿನ ಟ್ರೈನಿ ವೈದ್ಯೆ ಅತ್ಯಾಚಾರ- ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಮತ್ತು ಇತರ ನಾಲ್ವರು ವೈದ್ಯರ ಮೇಲೆ ಪಾಲಿಗ್ರಾಫ್ ಪರೀಕ್ಷೆ (ಸುಳ್ಳು ಪತ್ತೆ ಪರೀಕ್ಷೆ) ನಡೆಸಲು ಸುಪ್ರೀಂ ಕೋರ್ಟ್ ಸಿಬಿಐಗೆ ಅನುಮತಿ ನೀಡಿದೆ. ಏತನ್ಮಧ್ಯೆ ಪ್ರಕರಣವನ್ನು ತಿರುಚಲು ಮತ್ತು ಮುಚ್ಚಿಹಾಕಲು ಕೋಲ್ಕತ್ತಾ ಪೊಲೀಸರು ಪ್ರಯತ್ನಿಸಿದ್ದಾರೆ ಎಂದು ಸಿಬಿಐ ಗಂಭೀರ ಆರೋಪ ಮಾಡಿದೆ. ಇದನ್ನೂ ಓದಿ: Kolkata Horror | ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಮರಳಿ – ವೈದ್ಯರಿಗೆ ಸುಪ್ರೀಂ ಸೂಚನೆ!

    ಗುರುವಾರ ಪ್ರಕರಣದ ವಿಚಾರಣೆ ನಡೆಸಿದ ಸಿಜೆಐ ಡಿ.ವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠ ಸಿಬಿಐ ಅನ್ನು ಪ್ರತಿನಿಧಿಸುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಂದ ಮಾಹಿತಿ ಪಡೆಯಿತು. ಇದೇ ವೇಳೆ ಪ್ರಕರಣಕ್ಕೆ ಸಂಬಂಧಿಸಿ ಕಾಲೇಜಿನ ಮಾಜಿ ಪ್ರಾಂಶುಪಾಲ ಮತ್ತು ಇತರ ನಾಲ್ವರು ವೈದ್ಯರನ್ನು ಸಿಬಿಐ ಬಂಧಿಸಿ ಕಳೆದ ಒಂದು ವಾರದಿಂದ ವಿಚಾರಣೆ ನಡೆಸುತ್ತಿದೆ. ಆದರೆ ಅವರಿಂದ ಸರಿಯಾದ ಉತ್ತರ ಸಿಗದಿರುವ ಹಿನ್ನೆಲೆಯಲ್ಲಿ ಪಾಲಿಗ್ರಾಫ್ ಟೆಸ್ಟ್ ನಡೆಸಲು ಸುಪ್ರೀಂ ಕೋರ್ಟಿನ ಅನುಮತಿ ಕೋರಿದ್ದು ಕೋರ್ಟ್ ಅಸ್ತು ಎಂದಿದೆ.

  • Kolkata Horror | ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಮರಳಿ – ವೈದ್ಯರಿಗೆ ಸುಪ್ರೀಂ ಸೂಚನೆ!

    ಕೋಲ್ಕತ್ತಾ: ಟ್ರೈನಿ ವೈದ್ಯೆ ಅತ್ಯಾಚಾರ ಮತ್ತು ಕೊಲೆ ಪ್ರಕರಣ (Kolkata Doctor Case) ಸಂಬಂಧ ಸುಪ್ರೀಂ ಕೋರ್ಟ್ (Supreme Court) ವಿಚಾರಣೆ ಮುಂದುವರಿಸಿದೆ. ಘಟನೆ ಖಂಡಿಸಿ ಕಳೆದ ಕೆಲ ದಿನಗಳಿಂದ ನಡೆಸ್ತಿರುವ ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಮರಳುವಂತೆ ವೈದ್ಯರಿಗೆ ಸೂಚನೆ ನೀಡಿದೆ.

    ಬಿಜೆಪಿ, ಟಿಎಂಸಿಗೆ ಬುದ್ಧಿವಾದ
    ವಿಚಾರಣೆ ವೇಳೆ ಘಟನೆಗೆ ಸಂಬಂಧಿಸಿದಂತೆ ಟಿಎಂಸಿ (TMC) ಮತ್ತು ಬಿಜೆಪಿಗೆ (BJP( ಬುದ್ಧಿವಾದ ಹೇಳಿದ ನ್ಯಾಯಾಲಯ ಇತ್ತ ಸಿಬಿಐ ಮತ್ತು ಪಶ್ಚಿಮ ಬಂಗಾಳ ಸರ್ಕಾರ ರಾಜಕೀಯ ಲಾಭ ಪಡೆಯಲು ಹವಣಿಸುತ್ತಿರುವುದನ್ನು ಟೀಕಿಸಿದೆ. ʻಮಮತಾ ಬ್ಯಾನರ್ಜಿ ಕಡೆಗೆ ಕೈತೋರುವವರ ಬೆರಳು ಕತ್ತರಿಸಲಾಗುವುದುʼ ಎಂಬ ಬಂಗಾಳ ಸಚಿವರೊಬ್ಬರ ಹೇಳಿಕೆಯನ್ನು ಸಿಬಿಐ ಪರವಾಗಿ ವಾದ ಮಂಡಿಸಿದ ಸಾಲಿಸಿಟರ್ ಜನರಲ್ (SG) ತುಷಾರ್ ಮೆಹ್ತಾ ಪ್ರಸ್ತಾಪಿಸಿದರು.

    ಆಗ ಪಶ್ಚಿಮ ಬಂಗಾಳ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಪ್ರತಿಪಕ್ಷದ ನಾಯಕ ಸುವೇಂದು ಅಧಿಕಾರಿ ಗುಂಡು ಹಾರಿಸಲಾಗುವುದು ಅಂತ ಹೇಳಿರುವುದಾಗಿ ಕೋರ್ಟ್‌ ಗಮನಕ್ಕೆ ತಂದರು. ಆ ಸಂದರ್ಭದಲ್ಲಿ ನ್ಯಾಯಾಲಯ ಪರಿಸ್ಥಿತಿಯನ್ನು ರಾಜಕೀಯಗೊಳಿಸಬೇಡಿ ಕಾನೂನು ತನ್ನ ಹಾದಿಯನ್ನು ಕಂಡುಕೊಳ್ಳಲಿದೆ ಎಂಬುದಾಗಿ ತಿಳಿಸಿತು.

    ಕರ್ತವ್ಯ ಮಾಡುತ್ತಲೇ ಮುಷ್ಕರ ನಡೆಸ್ತಿರೋದಾಗಿ ವೈದ್ಯರ ಸಂಘ ತಿಳಿಸಿದೆ. ಇದೇ ವೇಳೆ ಯುವವೈದ್ಯೆಯ ಅತ್ಯಾಚಾರ ಪ್ರಕರಣದ ತನಿಖಾ ಪ್ರಗತಿಯ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸುಪ್ರೀಂ ಕೋರ್ಟ್‌ಗೆ ಸಿಬಿಐ (CBI) ಸಲ್ಲಿಸಿದೆ. ಅತ್ಯಾಚಾರ & ಹತ್ಯೆ ಮುಚ್ಚಿಹಾಕುವ ಪ್ರಯತ್ನ ನಡೆದಿತ್ತು. ಅಪ್ಪ-ಅಪ್ಪನಿಗೂ ಸರಿಯಾದ ಮಾಹಿತಿ ನೀಡದೇ ದಾರಿ ತಪ್ಪಿಸುವ ಪ್ರಯತ್ನವೂ ಆಗಿತ್ತು. ಶವ ದಹನದ ಬಳಿಕವೇ ಎಫ್‌ಐಆರ್ (FIR) ನಮೂದಿಸಿದ್ರು. ಘಟನಾ ಸ್ಥಳದಲ್ಲಿ ಸಾಕ್ಷ್ಯಾಧಾರಗಳನ್ನ ಧ್ವಂಸ ಮಾಡುವ ಪ್ರಯತ್ನಗಳು ನಡೆದಿವೆ ಎಂದು ಸಿಬಿಐ ತನ್ನ ವರದಿಯಲ್ಲಿ ಉಲ್ಲೇಖಿಸಿದೆ. ಇದನ್ನೂ  ಓದಿ: ಟ್ರೈನಿ ವೈದ್ಯೆ ಮೇಲೆ ನಡೆದಿರೋದು ಗ್ಯಾಂಗ್‌ ರೇಪ್‌ ಅಲ್ಲ – ಪ್ರಾಥಮಿಕ ತನಿಖೆ ಬಳಿಕ CBI ಮೂಲಗಳಿಂದ ಮಾಹಿತಿ

    ಘಟನೆ ನಡೆದ 5ನೇ ದಿನ ತಮ್ಮ ಕೈಗೆ ತನಿಖಾ ವರದಿಯನ್ನು ಪೊಲೀಸರು ಸಲ್ಲಿಸಿದ್ರು. ಅಷ್ಟರೊಳಗೆ ಸಾಕಷ್ಟು ವರದಿಗಳನ್ನು ಬದಲಾಯಿಸಿದ್ರು ಎಂದು ಸಾಲಿಸಿಟರ್ ಜನರೆಲ್ ಆರೋಪಿಸಿದರು. ಆದ್ರೆ ಪ್ರತಿಯೊಂದರ ವಿಡಿಯೋ ಚಿತ್ರೀಕರಣ ನಡೆದಿದೆ ಎಂದು ಬಂಗಾಳ ಸರ್ಕಾರದ ಪರ ವಕೀಲ ಕಪಿಲ್ ಸಿಬಲ್ ಸ್ಪಷ್ಟಪಡಿಸಿದ್ರು. ವೈದ್ಯರು ಒತ್ತಡ ತಂದಿದ್ದಕ್ಕೆ ವೀಡಿಯೋ ಚಿತ್ರೀಕರಣ ನಡೆದಿದೆ ಎಂದು ತುಷಾರ್ ಮೆಹ್ತಾ ಟಾಂಗ್ ಕೊಟ್ರು. ಈ ಮಧ್ಯೆಯೇ, ಯುವವೈದ್ಯೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿಲ್ಲ. ಒಬ್ಬನೇ ವ್ಯಕ್ತಿ ಕೃತ್ಯ ಎಸಗಿದ್ದಾನೆ ಎಂದು ಸಿಬಿಐ ಮೂಲಗಳು ತಿಳಿಸಿವೆ. ಇದನ್ನೂ  ಓದಿ: ಧರ್ಮಗುರುಗಳ ಮೂಲಕ ಮುಸ್ಲಿಮರ ವಿವಾಹ ನೋಂದಣಿಗೆ ತಡೆ – ಹೊಸ ಮಸೂದೆಗೆ ಅಸ್ಸಾಂ ಕ್ಯಾಬಿನೆಟ್ ಅನುಮೋದನೆ

    ಕೋಲ್ಕತ್ತಾ ಪ್ರಕರಣ ಏನು?
    ಇದೇ ತಿಂಗಳ ಆ.9ರಂದು ಬೆಳಗ್ಗೆ ಸ್ನಾತಕೋತ್ತರ ತರಬೇತಿ ನಿರತ ವೈದ್ಯೆಯ ಶವ ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಅತ್ಯಾಚಾರ ಮತ್ತು ಕೊಲೆಯಾದ ರೀತಿಯಲ್ಲಿ ಪತ್ತೆಯಾಗಿತ್ತು. ಬಳಿಕ ಕೃತ್ಯ ನಡೆಸಿದ್ದ ಆರೋಪಿ ಸಂಜಯ್‌ನನ್ನು ಪೊಲೀಸರು ಬಂಧಿಸಿದ್ದರು. ಅಶ್ಲೀಲ ವೀಡಿಯೋಗಳಿಗೆ ವ್ಯಸನಿಯಾಗಿದ್ದ ಸಂಜಯ್ ಕೊಲೆಯ ನಂತರ ಸಾಕ್ಷ್ಯ ನಾಶಪಡಿಸಲು ರಕ್ತಸಿಕ್ತ ಬಟ್ಟೆಯನ್ನು ತೊಳೆದಿದ್ದ ಎನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದರು. ಈ ಹಿಂದೆ ಪೊಲೀಸ್ ಸ್ವಯಂ ಸೇವಕನಾಗಿದ್ದ ಈತ 4 ಬಾರಿ ಮದುವೆಯಾಗಿದ್ದು, ಪತ್ನಿಯರಿಗೆ ಆಗಾಗ ಕಿರುಕುಳ ನೀಡುತ್ತಿದ್ದ ಎಂದು ತನಿಖೆಯಿಂದ ತಿಳಿದುಬಂದಿತ್ತು. ಸದ್ಯ ಈ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ (CBI) ತನಿಖೆ ನಡೆಸುತ್ತಿದೆ. ಈ ಬೆನ್ನಲ್ಲೇ ಸ್ವಯಂಪ್ರೇರಿತವಾಗಿ ದೂರು ದಾಖಳಿಸಿಕೊಂಡ ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸುತ್ತಿದೆ. ಇದನ್ನೂ  ಓದಿ: J&K Assembly Polls | ಎನ್‌ಸಿ-ಕಾಂಗ್ರೆಸ್ ಮೈತ್ರಿ ಬಹುತೇಕ ಖಚಿತ; ಮುಂದುವರಿದ ಸೀಟು ಹಂಚಿಕೆ ಮಾತುಕತೆ

  • ಟ್ರೈನಿ ವೈದ್ಯೆ ಮೇಲೆ ನಡೆದಿರೋದು ಗ್ಯಾಂಗ್‌ ರೇಪ್‌ ಅಲ್ಲ – ಪ್ರಾಥಮಿಕ ತನಿಖೆ ಬಳಿಕ CBI ಮೂಲಗಳಿಂದ ಮಾಹಿತಿ

    ಟ್ರೈನಿ ವೈದ್ಯೆ ಮೇಲೆ ನಡೆದಿರೋದು ಗ್ಯಾಂಗ್‌ ರೇಪ್‌ ಅಲ್ಲ – ಪ್ರಾಥಮಿಕ ತನಿಖೆ ಬಳಿಕ CBI ಮೂಲಗಳಿಂದ ಮಾಹಿತಿ

    ನವದೆಹಲಿ: ಕೋಲ್ಕತ್ತಾದ ಆರ್‌.ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ಟ್ರೈನಿ ವೈದ್ಯೆಯ (Kolkata Doctor Case) ಮೇಲೆ‌ ನಡೆದ ಅತ್ಯಾಚಾರ ಸಾಮೂಹಿಕ ಅತ್ಯಚಾರವಲ್ಲ. ಇದು ಓರ್ವ ವ್ಯಕ್ತಿಯಿಂದ ನಡೆದಿದೆ ಎಂದು ಸಿಬಿಐ (CBI) ಮೂಲಗಳು ಹೇಳಿವೆ.

    5 ದಿನಗಳ ಪ್ರಾಥಮಿಕ ತನಿಖೆಯಲ್ಲಿ ಈ ಮಾಹಿತಿ ಲಭ್ಯವಾಗಿದ್ದು ಆಸ್ಪತ್ರೆಯಲ್ಲಿದ್ದ ನಾಗರಿಕ ಸ್ವಯಂ ಸೇವಕ ಸಂಜೋಯ್ ರಾಯ್ ಎಂಬ ವ್ಯಕ್ತಿ ಪ್ರಕರಣದಲ್ಲಿ ಭಾಗಿಯಾಗಿರುವುದು ಕಂಡುಬಂದಿದೆ. ಇದನ್ನೂ ಓದಿ: Valmiki Scam | ಜೈಲಿಗೆ ಹೋಗೋ ಭಯಕ್ಕೆ ಚಂದ್ರಶೇಖರ್‌ ಆತ್ಮಹತ್ಯೆ

    ನಾಗರಿಕ ಸ್ವಯಂ ಸೇವಕ ಸಂಜೋಯ್ ರಾಯ್ ಎಂಬಾತ ವೈದ್ಯರ ಮೇಲೆ ಅತ್ಯಾಚಾರ ಎಸಗಿ ಕೊಂದಿದ್ದಾನೆ ಎಂದು ವಿಧಿವಿಜ್ಞಾನ ವರದಿಯೂ ಸೂಚಿಸಿದೆ. ಒಬ್ಬ ವ್ಯಕ್ತಿಯ ಕೈವಾಡವನ್ನು ಡಿಎನ್‌ಎ ವರದಿಯೂ (DNA Report) ದೃಢಪಡಿಸಿದೆ. ವೈದ್ಯೆಯನ್ನು ಹತ್ಯೆಗೈದ ಕಟ್ಟಡಕ್ಕೆ ರಾಯ್ ಪ್ರವೇಶಿಸಿದ ಸಿಸಿಟಿವಿ ದೃಶ್ಯಾವಳಿಗಳನ್ನ ಸಿಬಿಐ ಪರಿಶೀಲಿಸಿದೆ ಎಂದು ಮೂಲಗಳು ಹೇಳಿವೆ. ಇದನ್ನೂ ಓದಿ: ನರ್ಸರಿ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ – ಭುಗಿಲೆದ್ದ ಹಿಂಸಾಚಾರ; 72 ಮಂದಿ ಅರೆಸ್ಟ್‌!

    ಕೌಟುಂಬಿಕ ದೌರ್ಜನ್ಯದ ಇತಿಹಾಸ ಹೊಂದಿರುವ ಮತ್ತು ಆಸ್ಪತ್ರೆಯ ಎಲ್ಲಾ ವಿಭಾಗಗಳಿಗೆ ಪ್ರವೇಶವನ್ನು ಹೊಂದಿದ್ದ ರಾಯ್ ಅವರ ಬ್ಲೂಟೂತ್ ಹೆಡ್‌ಸೆಟ್ ಅಪರಾಧದ ಸ್ಥಳದಲ್ಲಿ ಪತ್ತೆಯಾದ ನಂತರ ಅವರನ್ನು ಬಂಧಿಸಲಾಯಿತು. ಪ್ರಕರಣದಲ್ಲಿ ಇನ್ನಷ್ಟು ಮಂದಿ ಭಾಗಿಯಾಗಿರುವ ಕುರಿತು ಸಿಬಿಐ ತನಿಖೆಯನ್ನು ಇನ್ನೂ ಮುಕ್ತಾಯಗೊಳಿಸಿಲ್ಲ. ಅಂತಿಮ ಅಭಿಪ್ರಾಯ ಪಡೆಯಲು ಸ್ವತಂತ್ರ ತಜ್ಞರಿಗೆ ಫೊರೆನ್ಸಿಕ್ ವರದಿಯನ್ನು ಕಳುಹಿಸುವ ಸಾಧ್ಯತೆಯಿದೆ.

    ಈ ಹಿಂದೆ ಸಂತ್ರಸ್ಥೆಯ ಯೋನಿ ಸ್ವ್ಯಾಬ್ ಪರೀಕ್ಷೆಯಲ್ಲಿ 151 ಗ್ರಾಂ ದ್ರವ ಕಂಡು ಬಂದಿದ ಹಿನ್ನಲೆ ಸಾಮೂಹಿಕ ಅತ್ಯಾಚಾರ ನಡೆದಿರಬಹುದು ಎಂದು ವೈದ್ಯರು ಹೇಳಿದ್ದರು. ಸಂತ್ರಸ್ತೆಯ ಪೋಷಕರು ಕೋಲ್ಕತ್ತಾ ಹೈಕೋರ್ಟ್‌ನಲ್ಲಿ ಇದೇ ಅಂಶವನ್ನು ಮುಖ್ಯವಾಗಿ ವಾದವನ್ನು ಮಂಡಿಸಿದ್ದರು. ಪ್ರಶಿಕ್ಷಣಾರ್ಥಿ ವೈದ್ಯರ ಮೇಲೆ ಉಂಟಾಗುವ ಗಾಯಗಳ ಸ್ವರೂಪವು ಒಬ್ಬ ವ್ಯಕ್ತಿಯ ಕೈಕೆಲಸವಾಗಿರಲು ಸಾಧ್ಯವಿಲ್ಲ ಎಂದು ಡಾ. ಸುವರ್ಣ ಗೋಸ್ವಾಮಿ ಅಭಿಪ್ರಾಯಪಟ್ಟಿದ್ದರು. ಇದನ್ನೂ ಓದಿ: Bharat Bandh| ಮಕ್ಕಳಿದ್ದ ಶಾಲಾ ಬಸ್ಸಿಗೆ ಬೆಂಕಿ ಹಚ್ಚಲು ಮುಂದಾದ ಪ್ರತಿಭಟನಾಕಾರರು