Tag: Kolkata Knight Riders

  • ರೋಚಕ ಪಂದ್ಯದಲ್ಲಿ ಕೆಕೆಆರ್‌ಗೆ 1 ರನ್‌ ಜಯ, ಪ್ಲೇ ಆಫ್‌ ಕನಸು ಜೀವಂತ – ಹೋರಾಡಿ ಸೋತ ರಾಜಸ್ಥಾನ್‌

    ರೋಚಕ ಪಂದ್ಯದಲ್ಲಿ ಕೆಕೆಆರ್‌ಗೆ 1 ರನ್‌ ಜಯ, ಪ್ಲೇ ಆಫ್‌ ಕನಸು ಜೀವಂತ – ಹೋರಾಡಿ ಸೋತ ರಾಜಸ್ಥಾನ್‌

    ಕೋಲ್ಕತ್ತಾ: ಕೊನೆಯವರೆಗೂ ಜಿದ್ದಾಜಿದ್ದಿಯಿಂದ ಕೂಡಿದ್ದ ಪಂದ್ಯದಲ್ಲಿ ಕೋಲ್ಕತ್ತಾ ನೈಟ್‌ರೈಡರ್ಸ್‌ ತಂಡವು ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ 1 ರನ್‌ಗಳ ರೋಚಕ ಗೆಲುವು ಸಾಧಿಸಿದೆ. ಈ ಮೂಲಕ 11 ಪಂದ್ಯಗಳಲ್ಲಿ 5ರಲ್ಲಿ ಗೆಲುವು ಸಾಧಿಸಿರುವ ಕೆಕೆಆರ್‌ 11 ಅಂಕಗಳೊಂದಿಗೆ ಪ್ಲೇ ಆಫ್‌ ಕನಸನ್ನು ಜೀವಂತವಾಗಿರಿಸಿಕೊಂಡಿದೆ.

    ಟಾಸ್​ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್‌ ಕಳೆದುಕೊಂಡು ರಾಜಸ್ಥಾನ್​​ ರಾಯಲ್ಸ್‌ಗೆ 207 ರನ್‌ಗಳ ಗುರಿ ನೀಡಿತು. ಈ ಗುರಿಯನ್ನು ಬೆನ್ನಟ್ಟಿದ ಆರ್‌ಆರ್‌ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 205 ರನ್‌ ಗಳಿಸಿ ಸೋಲೊಪ್ಪಿಕೊಂಡಿತು.

    ರಾಜಸ್ಥಾನದ ಪರ ರಿಯಾನ್ ಪರಾಗ್ 45 ಎಸೆತಗಳಲ್ಲಿ 6 ಬೌಂಡರಿ, 8 ಸಿಕ್ಸರ್‌ ಸಿಡಿಸಿ 95 ರನ್‌ ಕಲೆ ಹಾಕಿದರು. ಯಶಸ್ವಿ ಜೈಸ್ವಾಲ್‌ 21 ಎಸೆತಗಳಲ್ಲಿ 1 ಸಿಕ್ಸರ್‌ 5 ಬೌಂಡರಿ ನೆರವಿನಿಂದ 34 ರನ್‌, ಶಿಮ್ರಾನ್ ಹೆಟ್ಮೆಯರ್ 23 ಎಸೆತಗಲ್ಲಿ 29 ರನ್‌, ಶುಭಂ ದುಬೆ 14 ಎಸೆತಗಳಲ್ಲಿ 25 ರನ್‌ ಕಲೆ ಹಾಕಿದರು.

    ಕೆಕೆಆರ್‌ ಪರ ವರುಣ್ ಚಕ್ರವರ್ತಿ 2, ಹರ್ಷಿತ್ ರಾಣಾ 2, ಮೊಯಿನ್ ಅಲಿ 2, ವೈಭವ್ ಅರೋರಾ 1 ವಿಕೆಟ್‌ ಕಬಳಿಸಿದರು.

    ಕೆಕೆಆರ್ ಪರ ಆ್ಯಂಡ್ರೆ ರಸೆಲ್ 25 ಎಸೆತಗಳಲ್ಲಿ ಅಜೇಯ 57 ರನ್​ ಗಳಿಸಿ ಬೃಹತ್ ಮೊತ್ತಕ್ಕೆ ನೆರವಾದರು. ಅಜಿಂಕ್ಯ ರಹಾನೆ 30,ಅಂಗ್​​ಕ್ರಿಸ್​ ರಘುವಂಶಿ 44, ರಹ್ಮನುಲ್ಹಾ ಗುರ್ಬಜ್​ 35 ರನ್​ ಗಳಿಸಿ ತಂಡದ ಮೊತ್ತ ಹೆಚ್ಚಿಸಿದರು.

    ಬ್ಯಾಟಿಂಗ್ ಆರಂಭಿಸಿದ ಕೆಕೆಆರ್ ಕೇವಲ 13 ರನ್​ಗಳಾಗುವಷ್ಟರಲ್ಲಿ ಮೊದಲ ವಿಕೆಟ್ ಕಳೆದುಕೊಂಡಿತು. ಸುನಿಲ್ ನರೈನ್ ಕೇವಲ ಯುಧ್ವೀರ್ ಸಿಂಗ್ ಬೌಲಿಂಗ್​​ನಲ್ಲಿ ಕ್ಲೀನ್ ಬೌಲ್ಡ್ ಆದರು. 2ನೇ ವಿಕೆಟ್​ಗೆ ರೆಹ್ಮನುಲ್ಲಾ ಗುರ್ಬಜ್ ಹಾಗೂ ಅಜಿಂಕ್ಯ ರಹಾನೆ 56 ರನ್​ಗಳಿಸಿದರು. ಗುರ್ಬಜ್ 25 ಎಸೆತಗಳಲ್ಲಿ 4 ಬೌಂಡರಿ, 1 ಸಿಕ್ಸರ್ ಸಹಿತ 35 ರನ್​ಗಳಿಸಿ ತೀಕ್ಷಣ ಬೌಲಿಂಗ್​​ನಲ್ಲಿ ಹೆಟ್ಮೇಯರ್​ಗೆ ಕ್ಯಾಚ್ ನೀಡಿದರು. ನಂತರ ರಹಾನೆ ಜೊತೆಗೂಡಿದ ರಘವಂಶಿ ನಿಧಾನವಾಗಿ ವಿಕೆಟ್ ಉಳಿಸಿಕೊಂಡು 31 ಎಸೆತಗಳಲ್ಲಿ 42 ರನ್​ಗಳ ಜೊತೆಯಾಟ ಆಡಿದರು.

    ರಹಾನೆ 24 ಎಸೆತಗಳಲ್ಲಿ 2 ಬೌಂಡರಿ, 2 ಸಿಕ್ಸರ್ ಸಹಿತ 30 ರನ್​ಗಳಿಸಿದರೆ, ರಘವಂಶಿ 31 ಎಸೆತಗಳಲ್ಲಿ 5 ಬೌಂಡರಿ ಸಹಿತ 44 ರನ್​ಗಳಿಸಿದರು. ರಘುವಂಶಿ ರಸೆಲ್ ಜೊತೆಗೆ 61 ರನ್​ಗಳ ಜೊತೆಯಾಟ ಆಡಿದರು.

    ಆರ್‌ಆರ್‌ ಪರ ಜೋಫ್ರಾ ಆರ್ಚರ್, ಯುದ್ವೀರ್ ಸಿಂಗ್, ಮಹೇಶ್ ತೀಕ್ಷಣ, ರಿಯಾನ್ ಪರಾಗ್ ತಲಾ ಒಂದೊಂದು ವಿಕೆಟ್‌ ಕಬಳಿಸಿದರು.

  • ಗಿಲ್‌ ಸ್ಫೋಟಕ ಬ್ಯಾಟಿಂಗ್‌ – ಕೋಲ್ಕತ್ತಾ ವಿರುದ್ಧ ಗುಜರಾತ್‌ಗೆ 39 ರನ್‌ಗಳ ಭರ್ಜರಿ ಜಯ

    ಗಿಲ್‌ ಸ್ಫೋಟಕ ಬ್ಯಾಟಿಂಗ್‌ – ಕೋಲ್ಕತ್ತಾ ವಿರುದ್ಧ ಗುಜರಾತ್‌ಗೆ 39 ರನ್‌ಗಳ ಭರ್ಜರಿ ಜಯ

    ಕೋಲ್ಕತ್ತಾ: ಆರಂಭಿಕ ಬ್ಯಾಟರ್‌ಗಳಾದ ಸಾಯಿ ಸುದರ್ಶನ್ ಹಾಗೂ ಶುಭಮನ್ ಗಿಲ್, ಜೋಸ್ ಬಟ್ಲರ್ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಗುಜರಾತ್ ಟೈಟನ್ಸ್ 39 ರನ್‌ಗಳ ಭರ್ಜರಿ ಜಯ ಗಳಿಸಿದೆ.

    ಟಾಸ್ ಸೋತು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟನ್ಸ್, ನಿಗದಿತ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 198 ರನ್ ಪೇರಿಸಿತು. ಟೈಟನ್ಸ್‌ ನೀಡಿದ ಗುರಿಯನ್ನು ಬೆನ್ನಟ್ಟಿದ ಕೋಲ್ಕತ್ತಾ ನಿಗದಿತ ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 159 ರನ್‌ ಗಳಿಸಿ ಸೋಲಿಗೆ ಶರಣಾಯಿತು.

    ಕೋಲ್ಕತ್ತಾ ಪರ ಅಜಿಂಕ್ಯ ರಹಾನೆ 36 ಎಸೆತಗಳಲ್ಲಿ 5 ಬೌಂಡರಿ, 1 ಸಿಕ್ಸರ್‌ ನೆರವಿಂದ 50 ರನ್‌, ಆಂಡ್ರೆ ರಸೆಲ್ 15 ಎಸೆತಗಳಲ್ಲಿ 1 ಸಿಕ್ಸರ್‌, 3 ಬೌಂಡರಿ ನೆರವಿಂದ 21 ರನ್‌, ಸುನಿಲ್ ನರೈನ್ 13 ಎಸೆತಗಳಲ್ಲಿ 2 ಬೌಂಡರಿ, 1 ಸಿಕ್ಸರ್‌ ನೆರವಿಂದ 17 ರನ್‌ ಗಳಿಸಿದರು. ಅಂಗ್‌ಕ್ರಿಶ್ ರಘುವಂಶಿ 13 ಎಸೆತಗಳಲ್ಲಿ 27 ರನ್‌ ಕಲೆಹಾಕಿ ಔಟಾಗದೆ ಉಳಿದರು.

    ಗುಜರಾತ್ ಪರ ಮೊಹಮ್ಮದ್ ಸಿರಾಜ್, ರಶೀದ್ ಖಾನ್, ಪ್ರಸಿದ್ಧ್ ಕೃಷ್ಣ ತಲಾ 2 ವಿಕೆಟ್‌, ವಾಷಿಂಗ್ಟನ್ ಸುಂದರ್, ಸಾಯಿ ಕಿಶೋರ್, ಇಶಾಂತ್ ಶರ್ಮಾ ತಲಾ ಒಂದೊಂದು ವಿಕೆಟ್‌ ಕಬಳಿಸಿದರು.

    ಗುಜರಾತ್ ಪರ ಶುಭಮನ್ ಗಿಲ್‌ 55 ಎಸೆತಗಳಲ್ಲಿ 3 ಸಿಕ್ಸರ್‌, 10 ಬೌಂಡರಿಗಳ ನೆರವಿನಿಂದ 90 ರನ್ ಗಳಿಸಿ ಮಿಂಚಿದರು. ಸಾಯಿ ಸುದರ್ಶನ್ 36 ಎಸೆತಗಳಲ್ಲಿ 52 ರನ್ ಕಲೆಹಾಕಿದರು. ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಬಟ್ಲರ್ 23 ಎಸೆತಗಳಲ್ಲಿ 41 ರನ್ ಕಲೆ ಹಾಕಿ ಔಟಾಗದೆ ಉಳಿದರು.

    ಕೊಲ್ಕತ್ತಾ ಪರ ಹರ್ಷಿತ್ ರಾಣಾ, ವೈಭವ್ ಅರೋರಾ ಹಾಗೂ ರಸೆಲ್‌ ತಲಾ ಒಂದು ವಿಕೆಟ್ ಉರುಳಿಸಿದರು.

  • ಅಶ್ವನಿ ವೇಗಕ್ಕೆ ಕೊನೆಯ ಸ್ಥಾನಕ್ಕೆ ಜಾರಿದ ಕೋಲ್ಕತ್ತಾ – ಮುಂಬೈಗೆ ಭರ್ಜರಿ ಜಯ

    ಅಶ್ವನಿ ವೇಗಕ್ಕೆ ಕೊನೆಯ ಸ್ಥಾನಕ್ಕೆ ಜಾರಿದ ಕೋಲ್ಕತ್ತಾ – ಮುಂಬೈಗೆ ಭರ್ಜರಿ ಜಯ

    ಮುಂಬೈ: ಚೊಚ್ಚಲ ಪಂದ್ಯವಾಡಿದ ಅಶ್ವನಿ ಕುಮಾರ್‌ (Ashwani Kumar) ಅವರ ಮಾರಕ ಬೌಲಿಂಗ್‌ ನೆರವಿನಿಂದ ಮುಂಬೈ ಇಂಡಿಯನ್ಸ್‌ (Mumbai Indians) ಕೋಲ್ಕತ್ತಾ ನೈಟ್‌ರೈಡರ್ಸ್‌ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.

    ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಕೋಲ್ಕತ್ತಾ (Kolkata Knight Riders) 16.2 ಓವರ್‌ಗಳಲ್ಲಿ 116 ರನ್‌ಗಳಿಗೆ ಆಲೌಟ್‌ ಆಯ್ತು. ಸುಲಭದ ಸವಾಲನ್ನು ಬೆನ್ನಟ್ಟಿದ ಮುಂಬೈ 12.5 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 121 ರನ್‌ ಹೊಡೆದು ಟೂರ್ನಿಯಲ್ಲಿ ಮೊದಲ ಜಯ ಸಾಧಿಸಿತು. ಇದನ್ನೂ ಓದಿ: ಮುಂಬೈ ಪ್ಲೇಯಿಂಗ್‌ ಇಲೆವೆನ್‌ನಲ್ಲಿ ರೋಹಿತ್‌ಗೆ ಇಲ್ಲ ಸ್ಥಾನ

    ಈ ಸೋಲಿನೊಂದಿಗೆ 6ನೇ ಸ್ಥಾನದಲ್ಲಿದ್ದ ಕೋಲ್ಕತ್ತಾ 10ನೇ ಸ್ಥಾನಕ್ಕೆ ಜಾರಿದರೆ, ಕೊನೆಯ ಸ್ಥಾನದಲ್ಲಿದ್ದ ಮುಂಬೈ ಉತ್ತಮ ನೆಟ್‌ ರನ್‌ ರೇಟ್‌ನಿಂದ 6ನೇ ಸ್ಥಾನಕ್ಕೆ ಜಿಗಿದಿದೆ.

    ಸುಲಭ ಸವಾಲನ್ನು ಬೆನ್ನಟ್ಟಿದ ಮುಂಬೈ 13 ರನ್‌ ಗಳಿಸಿದ ರೋಹಿತ್‌ ವಿಕೆಟ್‌ ಆರಂಭದಲ್ಲೇ ಕಳೆದುಕೊಂಡರೂ ರಯಾನ್ ರಿಕಲ್ಟನ್ ಔಟಾಗದೇ 62 ರನ್‌(41 ಎಸೆತ, 4 ಬೌಂಡರಿ, 5 ಸಿಕ್ಸ್‌), ವಿಲ್‌ ಜಾಕ್ಸ್‌ 16 ರನ್‌, ಕೊನೆಯಲ್ಲಿ ಸೂರ್ಯಕುಮಾರ್‌ ಯಾದವ್‌ 27 ರನ್‌(9 ಎಸೆತ, 3 ಬೌಂಡರಿ, 2 ಸಿಕ್ಸ್‌) ನೆರವಿನಿಂದ ಜಯಗಳಿಸಿತು. ಇದನ್ನೂ ಓದಿ: ಐಪಿಎಲ್‌ನಿಂದ ಬ್ಯಾನ್‌ ಮಾಡಿ – ರಿಯಾನ್‌ ಪರಾಗ್‌ ವಿರುದ್ಧ ರೊಚ್ಚಿಗೆದ್ದ ಫ್ಯಾನ್ಸ್‌


    ಕೋಲ್ಕತ್ತಾ ಆರಂಭದಲ್ಲೇ 2 ವಿಕೆಟ್‌ ಕಳೆದುಕೊಂಡಿತ್ತು. 74 ರನ್‌ಗಳಿಸುವಷ್ಟರಲ್ಲೇ 6 ಪ್ರಮುಖ ವಿಕೆಟ್‌ ಕಳೆದುಕೊಂಡಿತ್ತು. ಇಂಪ್ಯಾಕ್ಟ್‌ ಪ್ಲೇಯರ್‌ ರಘುವಂಶಿ 26 ರನ್‌, ರಮನ್‌ದೀಪ್‌ ಸಿಂಗ್‌ 22 ರನ್‌ ಹೊಡೆದು ಔಟಾದರು.

    ಐಪಿಎಲ್‌ ಪಾದಾರ್ಪಣೆ ಮಾಡಿದ ಅಶ್ವನಿ ಕುಮಾರ್‌ 3 ಓವರ್‌ ಎಸೆದು 4 ವಿಕೆಟ್‌ ಕಿತ್ತು ಕೋಲ್ಕತ್ತಕ್ಕೆ ದೊಡ್ಡ ಹೊಡೆತ ನೀಡಿದರು. ದೀಪಕ್‌ ಚಹರ್‌ 2 ವಿಕೆಟ್‌ ಕಿತ್ತರೆ ಬೌಲ್ಟ್‌, ದೀಪಕ್‌ ಚಹರ್‌, ಪಾಂಡ್ಯ, ವಿಘ್ನೇಶ್‌ ಪುತೂರ್‌, ಸ್ಯಾಂಟ್ನರ್‌ ತಲಾ ಒಂದೊಂದು ವಿಕೆಟ್‌ ಪಡೆದರು.

  • IPL 2025: ಕೊಹ್ಲಿ, ಸಾಲ್ಟ್‌ ಫಿಫ್ಟಿ ಆಟ – 7 ವಿಕೆಟ್‌ ಜಯದೊಂದಿಗೆ ಆರ್‌ಸಿಬಿಗೆ ಶುಭಾರಂಭ; ತವರಲ್ಲಿ ಕೆಕೆಆರ್‌ಗೆ ಮುಖಭಂಗ

    IPL 2025: ಕೊಹ್ಲಿ, ಸಾಲ್ಟ್‌ ಫಿಫ್ಟಿ ಆಟ – 7 ವಿಕೆಟ್‌ ಜಯದೊಂದಿಗೆ ಆರ್‌ಸಿಬಿಗೆ ಶುಭಾರಂಭ; ತವರಲ್ಲಿ ಕೆಕೆಆರ್‌ಗೆ ಮುಖಭಂಗ

    ಕೋಲ್ಕತ್ತಾ: ಫಿಲ್‌ ಸಾಲ್ಟ್‌ (Phil Salt), ವಿರಾಟ್‌ ಕೊಹ್ಲಿ (Virat Kohli) ಆಕರ್ಷಕ ಅರ್ಧಶತಕ ನೆರವಿನಿಂದ ಆರ್‌ಸಿಬಿ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಆ ಮೂಲಕ ಐಪಿಎಲ್‌ 2025ರಲ್ಲಿ (IPL 2025) ಆರ್‌ಸಿಬಿ (RCB) ಶುಭಾರಂಭ ಪಡೆದಿದೆ. ತವರಲ್ಲೇ ಕೋಲ್ಕತ್ತಾ ನೈಟ್‌ ರೈಡರ್ಸ್‌ (KKR) ಮುಖಭಂಗ ಅನುಭವಿಸಿದೆ.

    ಟಾಸ್‌ ಗೆದ್ದ ಆರ್‌ಸಿಬಿ ನಾಯಕ ರಜತ್‌ ಪಾಟೀದಾರ್‌ ಫೀಲ್ಡಿಂಗ್‌ ಆಯ್ದುಕೊಂಡರು. ಮೊದಲು ಬ್ಯಾಟಿಂಗ್‌ ಮಾಡಿದ ಕೆಕೆಆರ್‌ 8 ವಿಕೆಟ್‌ ನಷ್ಟಕ್ಕೆ 174 ರನ್‌ ಗಳಿಸಿತು. 175 ರನ್‌ಗಳ ಗುರಿ ಬೆನ್ನತ್ತಿದ ಆರ್‌ಸಿಬಿ 3 ವಿಕೆಟ್‌ ನಷ್ಟಕ್ಕೆ 16.2 ಓವರ್‌ಗಳಿಗೆ 177 ರನ್‌ ಗಳಿಸಿ ಗೆದ್ದು ಬೀಗಿತು.

    ಮೊದಲು ಬ್ಯಾಟ್‌ ಮಾಡಿದ ಕೆಕೆಆರ್‌ ಮೊದಲ ಓವರ್‌ನಲ್ಲೇ ಕ್ವಿಂಟನ್‌ ಡಿಕಾಕ್‌ (4) ವಿಕೆಟ್‌ ಕಳೆದುಕೊಂಡು ಆಘಾತ ಎದುರಿಸಿತು. ಈ ವೇಳೆ ಜೊತೆಯಾದ ಸುನಿಲ್ ನರೈನ್ ಮತ್ತು ಅಜಿಂಕ್ಯಾ ರಹಾನೆ ಬಿರುಸಿನ ಆಟದ ಮೂಲಕ ಗಮನ ಸೆಳೆದರು. ಆರ್‌ಸಿಬಿ ಬೌಲರ್‌ಗಳ ಬೆವರಿಳಿಸಿದ ರಹಾನೆ ಕೇವಲ 25 ಬಾಲ್‌ಗಳಿಗೆ ಫಿಫ್ಟಿ ಬಾರಿಸಿ ಅಬ್ಬರಿಸಿದರು.

    ಇತ್ತ ಅಜಿಂಕ್ಯಾ 31 ಎಸೆತಕ್ಕೆ 56 ರನ್‌ (6 ಫೋರ್‌, 4 ಸಿಕ್ಸರ್‌) ಗಳಿಸಿದ್ದರು. ಅತ್ತ ನರೈನ್‌ 26 ಬಾಲ್‌ಗೆ 44 ರನ್‌ (5 ಫೋರ್‌, 3 ಸಿಕ್ಸರ್) ಬಾರಿಸಿದ್ದರು. ರಹಾನೆ ಮತ್ತು ನರೈನ್‌ ಶತಕದ ಜೊತೆಯಾಟ ಆರ್‌ಸಿಬಿಗೆ ನುಂಗಲಾರದ ತುತ್ತಾಗಿತ್ತು.‌‌ ಈ ವೇಳೆ ರಶಿಕ್‌ ಸಲಾಮ್‌ ಬೌಲಿಂಗ್‌ನಲ್ಲಿ ನರೈನ್‌ ಕ್ಯಾಚ್‌ ನೀಡಿ ನಿರ್ಗಮಿಸಿದರು. ಸ್ಪಿನ್‌ ಜಾದು ಮಾಡಿದ ಕೃಣಾಲ್‌ ಪಾಂಡ್ಯ, ಕೆಕೆಆರ್‌ ಓಟಕ್ಕೆ ಬ್ರೇಕ್‌ ಹಾಕಿದರು. ಪ್ರಮುಖ ಬ್ಯಾಟರ್‌ಗಳಾದ ವೆಂಕಟೇಶ್‌ ಅಯ್ಯರ್‌ (6), ರಿಂಕು ಸಿಂಗ್‌ (12) ಇಬ್ಬರನ್ನೂ ಹೊರಹಾಕುವಲ್ಲಿ ಯಶಸ್ವಿಯಾದರು.

    ಅಂಗ್‌ಕ್ರಿಶ್ ರಘುವಂಶಿ (30) ರನ್‌ ಗಳಿಸಿ ಕೆಕೆಆರ್‌ ಸವಾಲಿನ ಮೊತ್ತ ಪೇರಿಸಲು ಸಹಕಾರಿಯಾದರು. ಕೊನೆಗೆ ಆರ್‌ಸಿಬಿ ಬೌಲರ್‌ಗಳ ಪರಾಕ್ರಮ ಮುಂದುವರಿದು 174 ರನ್‌ಗಳಿಗೆ ಕೆಕೆಆರ್‌ ಅನ್ನು ಕಟ್ಟಿಹಾಕಿದರು.

    ಆರ್‌ಸಿಬಿ ಪರ ಕೃಣಾಲ್‌ ಪಾಂಡ್ಯ ಉತ್ತಮ ಬೌಲಿಂಗ್‌ ಪ್ರದರ್ಶನ ತೋರಿ 3 ವಿಕೆಟ್‌ ಕಿತ್ತು. ಜೋಶ್‌ ಹ್ಯಾಜಲ್‌ವುಡ್‌ ಕೂಡ ಕಡಿಮೆ ರನ್‌ ಕೊಟ್ಟು 2 ವಿಕೆಟ್‌ ಕಬಳಿಸಿ ಗಮನ ಸೆಳೆದರು. ಇನ್ನು ಯಶ್‌ ದಯಾಳ್‌, ರಶಿಕ್‌ ಸಲಾಮ್, ಸುಯೇಶ್‌ ಶರ್ಮಾ ತಲಾ 1 ವಿಕೆಟ್‌ ಕಿತ್ತರು.

    175 ರನ್‌ ಗುರಿ ಬೆನ್ನತ್ತಿದ ಆರ್‌ಸಿಬಿ ಆರಂಭದಲ್ಲೇ ಅಬ್ಬರಿಸಿತು. ಓಪನರ್‌ಗಳಾಗಿ ಕಣಕ್ಕಿಳಿದ ಫಿಲ್‌ ಸಾಲ್ಟ್‌ ಮತ್ತು ವಿರಾಟ್‌ ಕೊಹ್ಲಿ ಜೊತೆಯಾಟ ತಂಡದ ಭದ್ರಬುನಾದಿ ಹಾಕಿಕೊಟ್ಟಿತು. ಇಬ್ಬರು ಕೂಡ ಅರ್ಧಶತಕ ಸಿಡಿಸಿ ಮಿಂಚಿದರು. ಸಾಲ್ಟ್‌ 31 ಬಾಲ್‌ಗೆ 56 ರನ್‌ (9 ಫೋರ್‌, 2 ಸಿಕ್ಸರ್‌) ಹಾಗೂ ಕೊಹ್ಲಿ 36 ಬಾಲ್‌ಗೆ 56 ರನ್‌ (4 ಫೋರ್‌, 3 ಸಿಕ್ಸರ್‌) ಬಾರಿಸಿದರು.

    ಹೊಸ ನಾಯಕನಾಗಿ ಬಂದ ರಜತ್‌ ಪಾಟೀದಾರ್‌ ಕೂಡ ಜವಾಬ್ದಾರಿಯುತ (34 ರನ್‌, 16 ಬಾಲ್‌, 5 ಫೋರ್‌, 1 ಸಿಕ್ಸರ್‌) ಆಟ ಆಡಿದರು. ದೇವದತ್‌ ಪಡಿಕಲ್‌ (10), ಲಿಯಾಮ್‌ ಲಿವಿಂಗ್‌ಸ್ಟೋನ್‌ 15 ರನ್‌ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

  • IPL 2024: ಫೈನಲ್‌ ಪಂದ್ಯಕ್ಕೆ ʻರೆಮಲ್‌ʼ ಚಂಡಮಾರುತದ ಆತಂಕ – ಮಳೆ ಅಡ್ಡಿಯಾದ್ರೆ ವಿಜೇತರನ್ನ ನಿರ್ಧರಿಸೋದು ಹೇಗೆ?

    IPL 2024: ಫೈನಲ್‌ ಪಂದ್ಯಕ್ಕೆ ʻರೆಮಲ್‌ʼ ಚಂಡಮಾರುತದ ಆತಂಕ – ಮಳೆ ಅಡ್ಡಿಯಾದ್ರೆ ವಿಜೇತರನ್ನ ನಿರ್ಧರಿಸೋದು ಹೇಗೆ?

    ಚೆನ್ನೈ: ಸನ್‌ ರೈಸರ್ಸ್‌ ಹೈದರಾಬಾದ್‌ ಹಾಗೂ ಕೆಕೆಆರ್‌ ನಡುವಿನ ಐಪಿಎಲ್‌ ಫೈನಲ್‌ (IPL Final) ಪಂದ್ಯವು ಇಲ್ಲಿನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ಸೂಪರ್‌ ಸಂಡೇ (ಮೇ 26) ನಡೆಯಲಿದೆ. ಅಂದು ಸಂಜೆ 7:30ಕ್ಕೆ ಪಂದ್ಯ ಆರಂಭವಾಗಲಿದೆ. ಆದ್ರೆ ಫೈನಲ್‌ ಪಂದ್ಯಕ್ಕೆ ಇದೀಗ ʻರೆಮಲ್‌ʼ ಚಂಡಮಾರುತದ (Cyclone Remal) ಆತಂಕ ಎದುರಾಗಿದೆ. ಬಂಗಾಳಕೊಲ್ಲಿಯಲ್ಲಿ ಹವಾಮಾನ ವೈಪರಿತ್ಯದಿಂದ ತೀವ್ರ ಚಂಡಮಾರುತ ಎದುರಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಹೇಳಿದೆ.

    ಫೈನಲ್‌ ಪಂದ್ಯವು ಮಳೆಗೆ ಬಲಿಯಾದರೆ ವಿಜೇತರು ಯಾರಾಗ್ತಾರೆ? ನಿಯಮಗಳು ಹೇಗೆ ಅನ್ವಯವಾಗುತ್ತದೆ ಅನ್ನೋ ಬಗ್ಗೆ ತಿಳಿಯುವ ಕುತೂಹಲ ನಿಮಿಗಿದ್ದರೆ ಮುಂದೆ ಓದಿ..

    ಭಾನುವಾರ ಚೆನ್ನೈ ಹವಾಮಾನ ಹೇಗಿರಲಿದೆ?
    ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ತಮಿಳುನಾಡಿನ ಚೆನ್ನೈನಲ್ಲಿ (Chennai weather) ಭಾನುವಾರ ಬಿಸಿಲು ಹಾಗೂ ಮೋಡ ಮುಸುಕಿದ ವಾತಾವರಣ ಇರಲಿದೆ. 20% ಮಳೆ ಸಾಂದ್ರತೆಯಿರಲಿದ್ದು, 56% ತೇವಾಂಶ ಇರಲಿದೆ. ಗಂಟೆಗೆ 23 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ. ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್‌ ಇರಲಿದ್ದು, ಕನಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದನ್ನೂ ಓದಿ: 2024ರ ಐಪಿಎಲ್‌ಗೆ ವಿದಾಯ; ಅಭಿಮಾನಿಗಳೊಂದಿಗೆ ಸಿಹಿ-ಕಹಿ ನೆನಪು ಹಂಚಿಕೊಂಡ ಆರ್‌ಸಿಬಿ!

    ಮಳೆ ಅಡ್ಡಿಯಾದ್ರೆ ಮೀಸಲು ದಿನ ಇದೆಯೇ?
    ಲೀಗ್‌ ಹಂತದ ಯಾವುದೇ ಪಂದ್ಯಗಳಿಗೆ ಮೀಸಲು ದಿನ ಇರಲಿಲ್ಲ. ಫೈನಲ್​ ಪಂದ್ಯಕ್ಕೆ ಮೀಸಲು ದಿನವನ್ನು ನಿಗದಿಪಡಿಸಲಾಗಿದೆ. ಪೂರ್ಣ ಪಂದ್ಯ ನಡೆಸಲು ಹೆಚ್ಚುವರಿ 120 ನಿಮಿಷಗಳನ್ನು ನೀಡಲಾಗಿದೆ. ಈ ಸಮಯದಲ್ಲಿಯೂ ಪಂದ್ಯ ನಡೆಯದೇ ಹೋದರೆ ಆಗ ಡಕ್​ವರ್ತ್​ ಲೂಯಿಸ್‌ (DSL) ನಿಯಮದ ಅನುಸಾರ ಓವರ್​ ಕಡಿತಗೊಳಿಸಿ ಪಂದ್ಯ ನಡೆಸಲಾಗುತ್ತದೆ. ಈ ವೇಳೆಯೂ ಪಂದ್ಯ ನಡೆಯದೇ ಇದ್ದರೆ ಪಂದ್ಯವನ್ನು ಮೀಸಲು ದಿನಕ್ಕೆ ಮುಂದೂಡಲಾಗುತ್ತದೆ. ಒಂದೊಮ್ಮೆ ಮೀಸಲು ದಿನದ ಮೊದಲಿನ ದಿನ ಪಂದ್ಯ ಅರ್ಧಕ್ಕೆ ನಿಂತಿದ್ದರೆ, ಅಲ್ಲಿಂದಲೇ ಮರುದಿನ ಪಂದ್ಯ ಆರಂಭಿಸಲಾಗುತ್ತದೆ. ಕಳೆದ ವರ್ಷ ಏಕದಿನ ಏಷ್ಯಾಕಪ್‌ (ODI Asia Cup) ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಈ ನಿಯಮವನ್ನು ಅನ್ವಯಿಸಲಾಗಿತ್ತು. ಇದನ್ನೂ ಓದಿ: ಕೋಚ್‌ ಹುದ್ದೆಗೆ ಆಸ್ಟ್ರೇಲಿಯಾದ ಯಾವುದೇ ಆಟಗಾರರನ್ನು ಬಿಸಿಸಿಐ ಸಂಪರ್ಕಿಸಿಲ್ಲ: ಜಯ್‌ಶಾ

    ಮೀಸಲು ದಿನಕ್ಕೂ ಮಳೆ ಬಂದರೆ ಕಥೆ ಏನು?
    ಒಂದು ವೇಳೆ ಪಂದ್ಯ ಮಳೆಯಿಂದ ರದ್ದಾಗಿ ಮೀಸಲು ದಿನಕ್ಕೂ ಅಡ್ಡಿ ಪಡಿಸಿದರೆ ಸೂಪರ್ ಓವರ್​ಗೆ ಅವಕಾಶವಿದೆ. ಇದಕ್ಕೂ ಕೂಡ ಮಳೆ ಅನುವುಮಾಡಿಕೊಡದೇ ಇದ್ದಾಗ ಅಂತಿಮವಾಗಿ ಲೀಗ್​ ಹಂತದ ಅಂಕಪಟ್ಟಿಯಲ್ಲಿ ಪಡೆದ ರನ್‌ರೇಟ್‌, ಅಂಕಗಳ ಮೇಲೆ ವಿಜೇತರನ್ನು ನಿರ್ಧರಿಸಲಾಗುತ್ತದೆ. ಒಂದು ವೇಳೆ ಪಾಯಿಂಟ್ಸ್‌ ಪಟ್ಟಿಯಲ್ಲಿ ವಿಜೇತರನ್ನ ನಿರ್ಧರಿಸುವುದಾದರೆ ಕೋಲ್ಕತ್ತಾ ನೈಟ್‌ರೈಡರ್ಸ್‌ ತಂಡವೇ ಚಾಂಪಿಯನ್‌ ಆಗಲಿದೆ, ಸನ್‌ ರೈಸರ್ಸ್‌ ರನ್ನರ್‌ ಅಪ್‌ ಪ್ರಶಸ್ತಿಗೆ ತೃಪ್ತಿಪಟ್ಟುಕೊಳ್ಳಲಿದೆ. ಏಕೆಂದರೆ 14 ಪಂದ್ಯಗಳ ಪೈಕಿ 9ರಲ್ಲಿ ಗೆಲುವು ಸಾಧಿಸಿರುವ ಕೋಲ್ಕತ್ತಾ ನೈಟ್‌ರೈಡರ್ಸ್‌ 20 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಸನ್‌ರೈಸರ್ಸ್‌ ಹೈದರಾಬಾದ್‌ ತಂಡವು 14 ಪಂದ್ಯಗಳ ಪೈಕಿ 8ರಲ್ಲಿ ಗೆಲುವು ಸಾಧಿಸಿ 17 ಅಂಕಗಳೊಂದಿಗೆ 2ನೇ ಸ್ಥಾನದಲ್ಲಿದೆ.

  • ರಾಜಸ್ಥಾನಕ್ಕೆ ಹೀನಾಯ ಸೋಲು – 36 ರನ್‌ಗಳ ಜಯ, ಫೈನಲಿಗೆ ಹೈದರಾಬಾದ್‌

    ರಾಜಸ್ಥಾನಕ್ಕೆ ಹೀನಾಯ ಸೋಲು – 36 ರನ್‌ಗಳ ಜಯ, ಫೈನಲಿಗೆ ಹೈದರಾಬಾದ್‌

    ಚೆನ್ನೈ: ಅತ್ಯುತ್ತಮ ಬ್ಯಾಟಿಂಗ್‌, ಬೌಲಿಂಗ್‌, ಫೀಲ್ಡಿಂಗ್‌ನಿಂದಾಗಿ ಎರಡನೇ ಕ್ವಾಲಿಫೈಯರ್‌ನಲ್ಲಿ ರಾಜಸ್ಥಾನ ರಾಯಲ್ಸ್‌ (Rajasthan Royals) ವಿರುದ್ಧ 36 ರನ್‌ಗಳಿಂದ ಜಯ ಸಾಧಿಸಿದ ಸನ್‌ ರೈಸರ್ಸ್‌ ಹೈದರಾಬಾದ್‌ (Sunrisers Hyderabad) ಮೂರನೇ ಬಾರಿ ಐಪಿಎಲ್‌ ಫೈನಲ್‌ (IPL Final) ಪ್ರವೇಶಿಸಿದೆ.

    ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಹೈದರಾಬಾದ್‌ 9 ವಿಕೆಟ್‌ ನಷ್ಟಕ್ಕೆ 175 ರನ್‌ ಹೊಡೆಯಿತು. ಈ ಮೊತ್ತವನ್ನು ಬೆನ್ನಟ್ಟಿದ ರಾಜಸ್ಥಾನ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 139 ರನ್‌ ಹೊಡೆದು ಸೋಲನ್ನು ಒಪ್ಪಿಕೊಂಡಿತು.

    ರಾಜಸ್ಥಾನ ಪರ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್‌ 42 ರನ್(‌ 21 ಎಸೆತ, 4 ಬೌಂಡರಿ, 3 ಸಿಕ್ಸರ್‌) ಧ್ರುವ್‌ ಜುರೇಲ್‌ ಔಟಾಗದೇ 56 ರನ್‌ (35 ಎಸೆತ, 7 ಬೌಂಡರಿ, 2 ಸಿಕ್ಸರ್‌) ಹೊಡೆದು ಸ್ವಲ್ಪ ಪ್ರತಿರೋಧ ತೋರಿದರು. ಶಹಬಾಜ್ ಅಹಮದ್ 3 ವಿಕೆಟ್‌, ಅಭಿಷೇಕ್‌ ಶರ್ಮಾ 2 ವಿಕೆಟ್‌ ಪಡೆದರು.

    ಹೈದರಾಬಾದ್‌ ಪರ ಆರಂಭಿಕ ಆಟಗಾರ ಅಭಿಷೇಕ್‌ ಶರ್ಮಾ 5 ಎಸೆತಗಳಲ್ಲಿ 12 ರನ್‌ ಸಿಡಿಸಿ ಔಟಾದರು. ಟ್ರಾವಿಸ್‌ ಹೆಡ್‌ 34 ರನ್‌(28 ಎಸೆತ, 3 ಬೌಂಡರಿ, 1 ಸಿಕ್ಸರ್‌) ಹೊಡೆದರೆ ರಾಹುಲ್‌ ತ್ರಿಪಾಠಿ 37 ರನ್‌(15 ಎಸೆತ, 5 ಬೌಂಡರಿ, 2 ಸಿಕ್ಸರ್‌) ಸಿಡಿಸಿ ಔಟಾದರು. ವಿಕೆಟ್‌ ಉರುಳುತ್ತಿದ್ದರೂ ಹೆನ್ರಿಕ್ ಕ್ಲಾಸೆನ್ ಅವರು ಗಟ್ಟಿಯಾಗಿ ನಿಂತು 50 ರನ್‌ (34 ಎಸೆತ, 4 ಸಿಕ್ಸರ್)‌ ಸಿಡಿಸಿ ವಿಕೆಟ್‌ ಒಪ್ಪಿಸಿದರು.

    ಚೆನ್ನೈ ಸ್ಟೇಡಿಯಂನಲ್ಲಿ ಮೇ 26 ಭಾನುವಾರ ಫೈನಲ್‌ ಪಂದ್ಯ ನಡೆಯಲಿದ್ದು ಇಂದು ಜಯಗಳಿಸಿದ ಹೈದರಾಬಾದ್‌ ಮತ್ತು ಕೋಲ್ಕತ್ತಾ ಕಪ್‌ಗಾಗಿ ಹೋರಾಟ ನಡೆಸಲಿವೆ.

    ಮೊದಲ ಕ್ವಾಲಿಫೈಯರ್‌ನಲ್ಲಿ ಕೋಲ್ಕತ್ತಾ (Kolkata Knight Riders) ಮತ್ತು ಹೈದರಾಬಾದ್‌ ಸೆಣಸಾಡಿದ್ದವು. ಈ ಪಂದ್ಯವನ್ನು ಕೋಲ್ಕತ್ತಾ 8 ವಿಕೆಟ್‌ಗಳಿಂದ ಗೆದ್ದುಕೊಂಡಿತ್ತು. ಮೊದಲು ಬ್ಯಾಟ್‌ ಮಾಡಿದ್ದ ಹೈದರಾಬಾದ್‌ 159 ರನ್‌ಗಳಿಗೆ ಆಲೌಟ್‌ ಆಗಿತ್ತು. ಕೋಲ್ಕತ್ತಾ ಇನ್ನೂ 38 ಎಸೆತ ಬಾಕಿ ಇರುವಂತೆಯೇ 2 ವಿಕೆಟ್‌ ನಷ್ಟಕ್ಕೆ 164 ರನ್‌ ಹೊಡೆದು ಫೈನಲ್‌ ಪ್ರವೇಶಿಸಿತ್ತು.

  • 4ನೇ ಬಾರಿಗೆ ಫೈನಲ್‌ಗೆ – ಕೋಲ್ಕತ್ತಾ ಅಬ್ಬರಕ್ಕೆ ಮುಳುಗಿದ ಸನ್‌ ರೈಸರ್ಸ್‌

    4ನೇ ಬಾರಿಗೆ ಫೈನಲ್‌ಗೆ – ಕೋಲ್ಕತ್ತಾ ಅಬ್ಬರಕ್ಕೆ ಮುಳುಗಿದ ಸನ್‌ ರೈಸರ್ಸ್‌

    ಅಹಮದಾಬಾದ್‌: ಬ್ಯಾಟಿಂಗ್‌ ಮತ್ತು ಬೌಲಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ ಕೋಲ್ಕತ್ತಾ ನೈಟ್‌ ರೈಡರ್ಸ್‌ (Kolkata Knight Riders) ಮೊದಲ ಕ್ವಾಲಿಫೈಯರ್‌ನಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ (Sunrisers Hyderabad) ವಿರುದ್ಧ8  ವಿಕೆಟ್‌ಗಳ ಭರ್ಜರಿ ಜಯಗಳಿಸಿ ನಾಲ್ಕನೇ ಬಾರಿ ಐಪಿಎಲ್ ಫೈನಲ್‌ (IPL Final) ಪ್ರವೇಶಿಸಿದೆ.

    ಗೆಲ್ಲಲು 160 ರನ್‌ಗಳ ಗುರಿಯನ್ನು ಪಡೆದ ಕೋಲ್ಕತ್ತಾ ಇನ್ನೂ 38 ಎಸೆತ ಬಾಕಿ ಇರುವಂತೆಯೇ 2 ವಿಕೆಟ್‌ ನಷ್ಟಕ್ಕೆ 164 ರನ್‌ ಹೊಡೆಯುವ ಮೂಲಕ ಜಯಗಳಿಸಿತು.‌ ಇಲ್ಲಿಯವರೆಗೆ 2012, 2014, 2021ರಲ್ಲಿ ಕೋಲ್ಕತ್ತಾ ಫೈನಲ್‌ ಪ್ರವೇಶಿಸಿತ್ತು. 2012 ಮತ್ತು 2014ರಲ್ಲಿ ಚಾಂಪಿಯನ್‌ ಆಗಿ ಹೊರಹೊಮ್ಮಿತ್ತು.

    ಸುಲಭದ ಸವಾಲನ್ನು ಬೆನ್ನಟ್ಟಿದ ಕೋಲ್ಕತ್ತಾ ಆರಂಭಿಕ ಆಟಗಾರರು ಆರಂಭದಿಂದಲೇ ಆಕ್ರಮಣಕ್ಕೆ ಇಳಿದಿದ್ದರು. ಮೊದಲ ವಿಕೆಟಿಗೆ 20 ಎಸೆತಗಳಲ್ಲಿ 44 ರನ್‌ ಬಂದಿತ್ತು. ರಹಮಾನುಲ್ಲಾ ಗುರ್ಬಾಜ್ 23 ರನ್‌ (14 ಎಸೆತ, 2 ಬೌಂಡರಿ, 2 ಸಿಕ್ಸರ್)‌, ಸುನಿಲ್‌ ನರೈನ್‌ 21 ರನ್‌ (16 ಎಸೆತ, 4 ಬೌಂಡರಿ) ಹೊಡೆದು ಔಟಾದರು.

    ನಂತರ ಜೊತೆಯಾದ ನಾಯಕ ಶ್ರೇಯಸ್‌ ಅಯ್ಯರ್‌ ಮತ್ತು ವೆಂಕಟೇಶ್‌ ಅಯ್ಯರ್‌ ಮುರಿಯದ 3ನೇ ವಿಕೆಟಿಗೆ 44 ಎಸೆತಗಳಲ್ಲಿ 97 ರನ್‌ ಜೊತೆಯಾಟವಾಡುವ ಮೂಲಕ ತಂಡಕ್ಕೆ ಜಯವನ್ನು ತಂದುಕೊಟ್ಟರು. ಶ್ರೇಯಸ್‌ ಅಯ್ಯರ್‌ 58 ರನ್‌ (24 ಎಸೆತ, 5 ಬೌಂಡರಿ, 4 ಸಿಕ್ಸರ್‌), ವೆಂಕಟೇಶ್‌ ಅಯ್ಯರ್‌ 51 ರನ್‌(28 ಎಸೆತ, 5 ಬೌಂಡರಿ, 4 ಸಿಕ್ಸರ್‌) ಸಿಡಿಸಿದರು.

    ಹೈದರಾಬಾದ್‌ ಬೌಲಿಂಗ್‌ ಕಳಪೆಯಾಗಿತ್ತು. ಉತ್ತಮ ಬೌಲಿಂಗ್‌ ಮಾಡುತ್ತಿದ್ದ ನಾಯಕ ಪ್ಯಾಟ್‌ ಕಮ್ಮಿನ್ಸ್‌ 3 ಓವರ್‌ ಎಸೆದು 38 ರನ್‌ ನೀಡಿದ್ದರು. ಅಷ್ಟೇ ಅಲ್ಲದೇ ಹಲವು ಕ್ಯಾಚ್‌ಗಳನ್ನು ಕೈಚೆಲ್ಲಿದ ಪರಿಣಾಮ ಹೈದರಾಬಾದ್‌ ಸೋಲನ್ನು ಅನುಭವಿಸಿತು.

    ಕಳಪೆ ಬ್ಯಾಟಿಂಗ್‌: ಟಾಸ್‌ ಗೆದ್ದ ಕೋಲ್ಕತ್ತಾ ನಾಯಕ ಶ್ರೇಯಸ್‌ ಅಯ್ಯರ್‌ (Shreyas Iyer) ಫೀಲ್ಡಿಂಗ್‌ ಆಯ್ಕೆ ಮಾಡಿದರು. ಈ ನಿರ್ಧಾರ ಮೊದಲ ಓವರ್‌ನಲ್ಲಿ ಫಲ ನೀಡಿತು. ಲೀಗ್‌ನಲ್ಲಿ ಅಬ್ಬರಿಸಿದ್ದ ಟ್ರಾವಿಸ್‌ ಹೆಡ್‌ ಅವರನ್ನು ಮಿಚೆಲ್‌ ಸ್ಟಾರ್ಕ್‌ ಶೂನ್ಯಕ್ಕೆ ಬೌಲ್ಡ್‌ ಮಾಡಿ ಆರಂಭಿಕ ಮುನ್ನಡೆ ತಂದುಕೊಟ್ಟರು. ಎರಡನೇ ಓವರ್‌ನಲ್ಲಿ ಸಿಕ್ಸರ್‌ ವೀರ ಅಭಿಷೇಕ್‌ ಶರ್ಮಾ 3 ರನ್‌ ಗಳಿಸಿ ವಿಕೆಟ್‌ ಒಪ್ಪಿಸಿದರು. 39 ರನ್‌ಗಳಿಸುವಷ್ಟರಲ್ಲಿ ನಿತೀಶ್‌ ಕುಮಾರ್‌ ರೆಡ್ಡಿ ಸಹ ಔಟಾದರು.

    ಈ ಹಂತದಲ್ಲಿ ಜೊತೆಯಾದ ರಾಹುಲ್‌ ತ್ರಿಪಾಠಿ ಮತ್ತು ಕ್ಲಾಸೆನ್‌ 37 ಎಸೆತಗಳಲ್ಲಿ 62 ರನ್‌ ಜೊತೆಯಾಟವಾಡಿ ತಂಡಕ್ಕೆ ಸ್ವಲ್ಪ ಚೇತರಿಕೆ ನೀಡಿದರು.

     

    ಸಿಕ್ಸ್‌ ಸಿಡಿಸಲು ಹೋಗಿ ಕ್ಲಾಸೆನ್‌ 32 ರನ್‌ (21 ಎಸೆತ, 3 ಬೌಂಡರಿ, 1 ಸಿಕ್ಸರ್‌), ರಾಹುಲ್‌ ತ್ರಿಪಾಠಿ 55 ರನ್‌ (35 ಎಸೆತ, 7 ಬೌಂಡರಿ, 1 ಸಿಕ್ಸರ್)‌ ಸಿಡಿಸಿ ರನೌಟ್‌ಗೆ ಬಲಿಯಾರು.

    ನಾಯಕ ಪ್ಯಾಟ್‌ ಕಮ್ಮಿನ್ಸ್‌ 30 ರನ್‌ (24 ಎಸೆತ, 2 ಬೌಂಡರಿ, 2 ಸಿಕ್ಸರ್‌) ಸಿಡಿಸಿ ಔಟಾದರು. ಮಧ್ಯಮ ಕ್ರಮಾಂಕದಲ್ಲಿ ಉತ್ತಮ ಜೊತೆಯಾಟ ನಡೆಯದ ಕಾರಣ ಅಂತಿಮವಾಗಿ 19.3 ಓವರ್‌ಗಳಲ್ಲಿ 159 ರನ್‌ಗಳಿಗೆ ಹೈದರಾಬಾದ್‌ ಆಲೌಟ್‌ ಆಯ್ತು. ಹೈದರಾಬಾದ್‌ 8 ಆಟಗಾರರು ಎರಡಂಕಿಯನ್ನು ದಾಟಲಿಲ್ಲ.  4 ಆಟಗಾರರು ಶೂನ್ಯಕ್ಕೆ ಔಟಾಗಿದ್ದರು.

  • ಮಳೆಗೆ ಪಂದ್ಯ ಬಲಿ – ಪ್ಲೇ ಆಫ್‌ ರೇಸ್‌ನಿಂದ ಗುಜರಾತ್‌ ಔಟ್‌

    ಮಳೆಗೆ ಪಂದ್ಯ ಬಲಿ – ಪ್ಲೇ ಆಫ್‌ ರೇಸ್‌ನಿಂದ ಗುಜರಾತ್‌ ಔಟ್‌

    ಅಹಮದಾಬಾದ್‌: ಗುಜರಾತ್‌ ಟೈಟಾನ್ಸ್‌ (Gujarat Titans) ಐಪಿಎಲ್‌ ಪ್ಲೇ ಆಫ್‌ ರೇಸ್‌ನಿಂದ ಹೊರ ಬಿದ್ದಿದೆ. ಗುಜರಾತ್‌ ಮತ್ತು ಕೋಲ್ಕತ್ತಾ ನೈಟ್‌ ರೈಡರ್ಸ್‌ (Kolkata Knight Riders) ವಿರುದ್ಧದ ಪಂದ್ಯ ಭಾರೀ ಮಳೆಯಿಂದ ರದ್ದಾಗಿದೆ.

    ಪ್ಲೇ ಆಫ್‌ಗೆ ಹೋಗಲು ಇಂದಿನ ಪಂದ್ಯವನ್ನು ಗುಜರಾತ್‌ಗೆ ಗೆಲ್ಲಲೇ ಬೇಕಿತ್ತು. ಆದರೆ ಭಾರೀ ಮಳೆಯಿಂದ (Rain) ಒಂದು ಎಸೆತ ಕಾಣದೇ ಪಂದ್ಯ ರದ್ದಾದ ಪರಿಣಾಮ ಗುಜರಾತ್‌ ಕನಸು ಭಗ್ನಗೊಂಡಿದೆ.

    ಪಂದ್ಯ ರದ್ದಾದ ಪರಿಣಾಮ ಕೋಲ್ಕತ್ತಾ ಮತ್ತು ಗುಜರಾತ್‌ಗೆ ತಲಾ ಒಂದೊಂದು ಅಂಕವನ್ನು ಹಂಚಲಾಗಿದೆ. ಈಗಾಲೇ ಪ್ಲೇ ಆಫ್‌ ಪ್ರವೇಶಿಸಿರುವ ಕೋಲ್ಕತ್ತಾಗೆ ಒಟ್ಟು 19 ಅಂಕ ಸಂಪಾದಿಸಿದರೆ ಗುಜರಾತ್‌ 12 ಪಂದ್ಯಗಳಿಂದ ಒಟ್ಟು 11 ಅಂಕ ಸಂಪಾದಿಸಿದೆ.

     ಚೆನ್ನೈ ಮತ್ತು ಹೈದರಾಬಾದ್‌ ತಲಾ 14 ಅಂಕ ಗಳಿಸಿ ಪ್ಲೇ ಆಫ್‌ ರೇಸ್‌ನಲ್ಲಿದೆ. ಈ ಒಂದು ವೇಳೆ ಈ ಪಂದ್ಯವನ್ನು ಉತ್ತಮ ರನ್‌ ರೇಟ್‌ನೊಂದಿಗೆ ಗೆದ್ದಿದ್ದರೆ ಗುಜರಾತ್‌ಗೆ ಪ್ಲೇ ಆಫ್‌ ಪ್ರವೇಶಿಸುವ ಸಾಧ್ಯತೆ ಇತ್ತು. ಆದರೆ ಈ ಪಂದ್ಯದ ರದ್ದಾದ ಪರಿಣಾಮ 2022 ಚಾಂಪಿಯನ್‌, 2023ರ ದ್ವಿತೀಯ ಸ್ಥಾನಿ ಗುಜರಾತ್‌ ಐಪಿಎಲ್‌ ಪ್ಲೇ ಆಫ್‌ ರೇಸ್‌ನಿಂದ ಅಧಿಕೃತವಾಗಿ ಹೊರ ಬಿದ್ದಿದೆ.

  • ಪ್ಲೇ-ಆಫ್‌ಗೆ ಎಂಟ್ರಿ ಕೊಟ್ಟ ಕೆಕೆಆರ್‌

    ಪ್ಲೇ-ಆಫ್‌ಗೆ ಎಂಟ್ರಿ ಕೊಟ್ಟ ಕೆಕೆಆರ್‌

    ಕೋಲ್ಕತ್ತಾ: ಎರಡು ಬಾರಿ ಚಾಂಪಿಯನ್‌ ಆಗಿರುವ ಕೋಲ್ಕತ್ತಾ ನೈಟ್‌ ರೈಡರ್ಸ್‌ 17ನೇ ಆವೃತ್ತಿಯ ಐಪಿಎಲ್‌ನಲ್ಲಿ ಅಧಿಕೃತವಾಗಿ ಪ್ಲೇ-ಆಫ್‌ಗೆ ಎಂಟ್ರಿ ಕೊಟ್ಟಿದೆ. ತವರಿನಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಮುಂಬೈ ವಿರುದ್ಧ ಕೆಕೆಆರ್ 18 ರನ್‌ಗಳ ಜಯ ಸಾಧಿಸಿದೆ. 9 ಪಂದ್ಯಗಳ ಗೆಲುವಿನೊಂದಿಗೆ ಪಾಯಿಂಟ್‌ ಪಟ್ಟಿಯಲ್ಲಿ ನಂ.1 ಸ್ಥಾನಕ್ಕೇರಿದೆ.

    ಮಳೆ ಪರಿಣಾಮವಾಗಿ ಮ್ಯಾಚ್‌ ತಡವಾಗಿ ಆರಂಭವಾಯಿತು. ಪಂದ್ಯಕ್ಕೂ ಮುನ್ನ ಮಳೆ ಬಂದ ಕಾರಣ ಇನ್ನಿಂಗ್ಸ್‌ ಅನ್ನು 16 ಓವರ್‌ಗಳಿಗೆ ನಿಗದಿಪಡಿಸಲಾಯಿತು. ಟಾಸ್‌ ಗೆದ್ದ ಮುಂಬೈ ಮೊದಲು ಬೌಲಿಂಗ್‌ ಆಯ್ದುಕೊಂಡಿತು.

    ಮೊದಲು ಬ್ಯಾಟ್‌ ಮಾಡಿದ ಕೋಲ್ಕತ್ತಾ 16 ಓವರ್‌ಗಳಿಗೆ 7 ವಿಕೆಟ್‌ ನಷ್ಟಕ್ಕೆ 157 ರನ್‌ ಗಳಿಸಿತು. 158 ರನ್‌ಗಳ ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್‌ ತಂಡವನ್ನು ಕೋಲ್ಕತ್ತಾ ಬೌಲರ್ಸ್‌ ಕಟ್ಟಿಹಾಕಿದರು. 16 ಓವರ್‌ಗಳಲ್ಲಿ 8 ವಿಕೆಟ್‌ಗೆ 138 ರನ್‌ ಗಳಿಸಲಷ್ಟೇ ಸಾಧ್ಯವಾಗಿ ಸೋಲೊಪ್ಪಿಕೊಂಡಿತು.

    ಕೋಲ್ಕತ್ತಾ ಬ್ಯಾಟಿಂಗ್‌ನಲ್ಲಿ ಆರಂಭಿಕ ಆಘಾತ ಎದುರಿಸಿತು. ಓಪನರ್‌ ಜೋಡಿ ಸುನಿಲ್ ನರೈನ್ (0) ಮತ್ತು ಫಿಲಿಪ್ ಸಾಲ್ಟ್ (6) ಅವರನ್ನು ತಂಡ ಬೇಗನೆ ಕಳೆದುಕೊಂಡಿತು. ಆದರೆ ವೆಂಕಟೇಶ್ ಅಯ್ಯರ್ 21 ಎಸೆತಗಳಲ್ಲಿ 42 ರನ್‌ಗಳ ನಿರ್ಣಾಯಕ ಪಾತ್ರವನ್ನು ವಹಿಸಿದರು. ನಾಯಕ ಶ್ರೇಯಸ್‌ ಅಯ್ಯರ್‌ ಕೇವಲ 7 ರನ್‌ ಗಳಿಸಿ ಔಟಾದರು.

    ನಿತೀಶ್ ರಾಣಾ (33), ಆಂಡ್ರೆ ರಸೆಲ್ (24), ರಿಂಕು ಸಿಂಗ್‌ (20), ರಮಣ್‌ದೀಪ್‌ ಸಿಂಗ್‌ (17) ತಂಡದ ಪರವಾಗಿ ಉತ್ತಮ ಬ್ಯಾಟಿಂಗ್‌ ಪ್ರದರ್ಶನ ನೀಡಿ ಸವಾಲಿನ ಮೊತ್ತ ದಾಖಲಿಸಲು ನೆರವಾದರು. ಮುಂಬೈ ಪರ ಜಸ್ಪ್ರೀತ್ ಬುಮ್ರಾ, ಪಿಯೂಷ್ ಚಾವ್ಲಾ ತಲಾ 2 ಹಾಗೂ ನುವಾನ್ ತುಷಾರ, ಅಂಶುಲ್ ಕಾಂಬೋಜ್ ತಲಾ 1 ವಿಕೆಟ್‌ ಕಿತ್ತರು.

    ಕೋಲ್ಕತ್ತಾ ನೀಡಿದ 158 ರನ್‌ ಗುರಿ ಬೆನ್ನತ್ತಿದ ಮುಂಬೈ ತಂಡಕ್ಕೆ ಇಶಾನ್‌ ಕಿಶನ್‌ 22 ಎಸೆತಗಳಿಗೆ 40 ರನ್‌ ಗಳಿಸಿ ಭದ್ರಬುನಾದಿ ಹಾಕಿಕೊಟ್ಟರು. ಆದರೆ ಇತರೆ ಆಟಗಾರರು ಬ್ಯಾಟಿಂಗ್‌ ವೈಫಲ್ಯ ಅನುಭವಿಸಿದರು. ರೋಹಿತ್‌ (19), ಸೂರ್ಯಕುಮಾರ್‌ ಯಾದವ್‌ (11) ಮಿಂಚಲಿಲ್ಲ. ತಿಲಕ್‌ ವರ್ಮಾ 17 ಎಸೆತಕ್ಕೆ 32 ರನ್‌ ಗಳಿಸಿ ಮುಂಬೈಗೆ ಗೆಲುವಿನ ಭರವಸೆ ಮೂಡಿಸಿದ್ದರು. ಆದರೆ ಯಾವೊಬ್ಬ ಬ್ಯಾಟರ್‌ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ಉಳಿಯದ ಕಾರಣ ಮುಂಬೈ ಸೋಲನುಭವಿಸಿತು.

    ಕೋಲ್ಕತ್ತಾ ಪರ ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ಆಂಡ್ರೆ ರಸೆಲ್ ತಲಾ 2 ವಿಕೆಟ್‌ ಕಿತ್ತು ತಂಡದ ಗೆಲುವಿಗೆ ಆಸರೆಯಾದರು. ಸುನಿಲ್ ನರೈನ್ 1 ವಿಕೆಟ್‌ ಕಿತ್ತರು.

  • KKR vs MI ಹೈವೋಲ್ಟೇಜ್‌ ಕದನಕ್ಕೆ ಮಳೆ ಅಡ್ಡಿ – 5 ಓವರ್‌ಗಳ ಪಂದ್ಯ ನಡೆಸಲು ತಜ್ಞರ ಸಲಹೆ!

    KKR vs MI ಹೈವೋಲ್ಟೇಜ್‌ ಕದನಕ್ಕೆ ಮಳೆ ಅಡ್ಡಿ – 5 ಓವರ್‌ಗಳ ಪಂದ್ಯ ನಡೆಸಲು ತಜ್ಞರ ಸಲಹೆ!

    ಕೋಲ್ಕತ್ತ: ಇಲ್ಲಿನ ಈಡನ್‌ ಗಾರ್ಡನ್‌ನಲ್ಲಿ (Eden Gardens) ಆಯೋಜನೆಗೊಂಡಿರುವ ಮುಂಬೈ ಇಂಡಿಯನ್ಸ್‌ ಮತ್ತು ಕೋಲ್ಕತ್ತಾ ನೈಟ್‌ರೈಡರ್ಸ್‌ ನಡುವಿನ ಹೈವೋಲ್ಟೇಜ್‌ ಪಂದ್ಯಕ್ಕೆ ಮಳೆ (Rain) ಅಡ್ಡಿಯಾಗಿದೆ.

    ಸುಮಾರು 40 ನಿಮಿಷಗಳ ಕಾಲ ಸುರಿದ ಭಾರೀ ಮಳೆಯಿಂದಾಗಿ ಮ್ಯಾಚ್‌ ತಡವಾಗಿ ಆರಂಭಿಸಲಾಗುತ್ತಿದೆ. 40 ನಿಮಿಷಗಳ ಬಳಿಕ ವರುಣ ಬಿಡುವು ನೀಡಿದ್ದು, ಸಿಬ್ಬಂದಿ ಮೈದಾನವನ್ನು ಹದಗೊಳಿಸುತ್ತಿದ್ದಾರೆ. ಇದನ್ನೂ ಓದಿ: ಆರ್​ಸಿಬಿ ವಿರುದ್ಧದ ಪಂದ್ಯಕ್ಕೆ ಪಂತ್‌ ಔಟ್‌; ಡೆಲ್ಲಿ ತಂಡಕ್ಕೆ ಹೊಸ ನಾಯಕ – ಬೆಂಗಳೂರು ಬಾಯ್ಸ್‌ ಕೈಹಿಡಿಯುತ್ತಾ ಲಕ್‌?

    ಸದ್ಯ ಭಾರೀ ಮಳೆ ಹಿನ್ನೆಲೆಯಲ್ಲಿ ಮೈದಾನವನ್ನು (Cricket Field) ಹದಗೊಳಿಸಲು ಸಿಬ್ಬಂದಿ ಕನಿಷ್ಠ ಒಂದು ಗಂಟೆ ಸಮಯ ಕೇಳಿದ್ದಾರೆ. ಸುಮಾರು 8:45ರ ವೇಳೆ ಪಿಚ್‌ ಕ್ಯೂರೇಟರ್‌ಗಳೊಂದಿಗೆ ಅಂಪೈರ್‌ಗಳು ಮತ್ತು ತಂಡದ ನಾಯಕರು ಪಿಚ್‌ ಪರಿಶೀಲಿಸಲಿದ್ದಾರೆ. ಇದರಿಂದ 9:30ರ ನಂತರ ಪಂದ್ಯ ಆರಂಭಗೊಳ್ಳುವ ನಿರೀಕ್ಷೆಯಿದ್ದು, 20 ಓವರ್‌ಗಳ ಪಂದ್ಯ ನಡೆಯುವುದು ಅನುಮಾನವಾಗಿದೆ. ಒಂದು ವೇಳೆ 10 ಗಂಟೆಯ ನಂತರ ಪಂದ್ಯ ಆರಂಭಗೊಂಡರೆ 5 ಅಥವಾ 10 ಓವರ್‌ಗಳಿಗೆ ಪಂದ್ಯ ನಡೆಯುವ ಸಾಧ್ಯತೆಯಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

    ಪ್ರಾಥಮಿಕ ಮೂಲಗಳ ಪ್ರಕಾರ ಮೈದಾನ ಹದಗೊಳಿಸಲು ಕನಿಷ್ಠ 75 ನಿಮಿಷಗಳು ಬೇಕಾಗುತ್ತದೆ. ಆದ್ದರಿಂದ 5 ಓವರ್‌ಗಳ ಪಂದ್ಯ ಆರಂಭಿಸುವುದು ಸೂಕ್ತ ಎಂದು ಕ್ರಿಕೆಟ್‌ ತಜ್ಞರು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ರಿಷಭ್‌ ಸೇರಿದಂತೆ ಇಡೀ ಡೆಲ್ಲಿ ತಂಡಕ್ಕೆ ಭಾರೀ ದಂಡ – ಪಂತ್‌ ಒಂದು ಪಂದ್ಯದಿಂದ ಅಮಾನತು!

    ಸದ್ಯ 11 ಪಂದ್ಯಗಳ ಪೈಕಿ 8ರಲ್ಲಿ ಗೆಲುವು ಸಾಧಿಸಿರುವ ಕೋಲ್ಕತ್ತಾ ನೈಟ್‌ರೈಡರ್ಸ್‌ (KKR) ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಪ್ಲೇ ಆಫ್‌ಗೆ ಅಧಿಕೃತ ಪ್ರವೇಶ ಪಡೆಯಲು ಇನ್ನೊಂದು ಪಂದ್ಯ ಗೆಲ್ಲಬೇಕಿದೆ. ಆದ್ರೆ 12ರಲ್ಲಿ ಕೇವಲ 4 ಪಂದ್ಯ ಗೆದ್ದಿರುವ ಮುಂಬೈ 9ನೇ ಸ್ಥಾನದಲ್ಲಿದೆ.