Tag: Kolkata Police

  • ವಿದ್ಯಾರ್ಥಿನಿಯ ಮೇಲೆ ದೌರ್ಜನ್ಯ ನಡೆಸಿದ ಖ್ಯಾತ ಗಾಯಕ ಸಂಜಯ್ ಚಕ್ರವರ್ತಿ ಅರೆಸ್ಟ್

    ವಿದ್ಯಾರ್ಥಿನಿಯ ಮೇಲೆ ದೌರ್ಜನ್ಯ ನಡೆಸಿದ ಖ್ಯಾತ ಗಾಯಕ ಸಂಜಯ್ ಚಕ್ರವರ್ತಿ ಅರೆಸ್ಟ್

    ಮುಂಬೈ: ವಿದ್ಯಾರ್ಥಿನಿಯ ಮೇಲೆ ದೌರ್ಜನ್ಯ ಎಸಗಿದ ಆರೋಪದ ಮೇಲೆ ಖ್ಯಾತ ಗಾಯಕ ಸಂಜಯ್ ಚಕ್ರವರ್ತಿಯನ್ನು (SanjayChakraborty ) ಕೋಲ್ಕತ್ತಾ ಪೊಲೀಸರು (KolkattaPolice) ಬಂಧಿಸಿದ್ದಾರೆ.

    ಖ್ಯಾತ ಗಾಯಕ ಮತ್ತು ಸಂಯೋಜಕ, ಪಂಡಿತ್ ಅಜೋಯ್ ಚಕ್ರವರ್ತಿ ಅವರ ಸಹೋದರ ಸಂಜಯ್ ಚಕ್ರವರ್ತಿಯನ್ನು ಚಾರು ಮಾರ್ಕೆಟ್ ಪೊಲೀಸ್ ತಂಡ ಇಂದು (ಶುಕ್ರವಾರ) ಮುಂಬೈನಲ್ಲಿ ಬಂಧಿಸಿದ್ದಾರೆ.

    ಈ ಘಟನೆಯು ಜೂನ್ ತಿಂಗಳಲ್ಲಿ ನಡೆದಿದ್ದು, ಗಾಯಕ ತಾನು ನಡೆಸುತ್ತಿದ್ದ ಗಾಯನ ಸಂಸ್ಥೆಯಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳಿಗೆ ಕಿರುಕುಳ ನೀಡಿದ್ದಾರೆ. ಆಕೆಯ ಪೋಷಕರು ದೂರು ನೀಡಿದ್ದಾರೆ. ಗಾಯಕ ಎಸಗಿರುವ ಆರೋಪದ ಮೇಲೆ ತನಿಖೆ ಆತನ್ನು ಬಂಧಿಸಲಾಗಿದೆ. ದೂರಿನ ಪ್ರಕಾರ, ತರಗತಿ ಮುಗಿದ ನಂತರ ಚಕ್ರವರ್ತಿ ಅಲ್ಲೇ ಉಳಿದುಕೊಂಡು ಎಲ್ಲಾ ವಿದ್ಯಾರ್ಥಿಗಳು ಹೋದ ನಂತರ, ಬಾಲಕಿಗೆ ಕಿರುಕುಳ ನೀಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: ವೃದ್ಧನಿಗೆ ಬೆದರಿಸಿ 41 ಲಕ್ಷ ವಂಚಿಸಿದ್ದ ನಕಲಿ ಸಿಬಿಐ ಅಧಿಕಾರಿಗಳು ಅರೆಸ್ಟ್‌!

    ಸಂತ್ರಸ್ತೆಯನ್ನು ಆಕೆಯ ಪೋಷಕರು ಮಾನಸಿಕ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ದ ನಂತರ ಈ ಘಟನೆ ಬೆಳಕಿಗೆ ಬಂದಿದೆ. ಚಿಕಿತ್ಸೆಯ ಸಮಯದಲ್ಲಿ ವಿದ್ಯಾರ್ಥಿನಿ ವೈದ್ಯರಿಗೆ ನಡೆದಂತಹ ಎಲ್ಲಾ ಘಟನೆಗಳನ್ನು ಬಹಿರಂಗಪಡಿಸಿದಳು. ನಂತರ ಆಕೆಯ ಪೋಷಕರಿಗೆ ಈ ವಿಷಯ ತಿಳಿಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: 75 ಕೋಟಿ ಮೌಲ್ಯದ ಚಾಪರ್‌ನಲ್ಲಿ ಸೆಕ್ಸ್‌ ಮಾಡುತ್ತಲೇ ಸಿಕ್ಕಿಬಿದ್ದ ಬ್ರಿಟನ್‌ ಸೈನಿಕರು

    ಆರಂಭಿಕ ದೂರಿನ ಪ್ರಕಾರ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಬೆಲ್ಘಾರಿಯಾ ಪೊಲೀಸ್ ಠಾಣೆಗೆ ಸಂತ್ರಸ್ಥೆಯ ಪೋಷಕರು ದೂರನ್ನು ಕೊಟ್ಟಿದ್ದರು. ಬ್ಯಾರಕ್‌ಪೋರ್ ಪೊಲೀಸರು ದಾಖಲಿಸಿದ ಶೂನ್ಯ ಎಫ್‌ಐಆರ್ ಮೂಲಕ ಪ್ರಕರಣವನ್ನು ಕೊಲ್ಕತ್ತಾ ಪೊಲೀಸರ ಚಾರು ಮಾರ್ಕೆಟ್ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದ್ದು, ಸಿಸಿಟಿವಿ ಕ್ಯಾಮೆರಾ ದಶ್ಯಗಳನ್ನು ಪರಿಶೀಲಿಸುವುದರ ಜೊತೆಗೆ ಆ ಸಮಯದಲ್ಲಿ ತರಗತಿಯಲ್ಲಿ ಇದ್ದ ವಿದ್ಯಾರ್ಥಿಗಳ ತನಿಖೆಗೆ ಪೊಲೀಸರು ಮುಂದಾಗಿದ್ದಾರೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ದೆಹಲಿಗೆ ಹೊರಟ ನಂದಿನಿ – ನ.21ರಿಂದ ರಾಷ್ಟ್ರ ರಾಜಧಾನಿಯಲ್ಲೂ ಸಿಗಲಿದೆ ಕೆಎಂಎಫ್ ಉತ್ಪನ್ನಗಳು

  • ರೋಟಿ-ಸಬ್ಜಿಯಿಂದ ತೃಪ್ತಿಯಾಗ್ತಿಲ್ಲ, ಮೊಟ್ಟೆ ಊಟ ಕೊಡಿ; ಕೋಲ್ಕತ್ತಾ ವೈದ್ಯೆ ರೇಪ್‌ ಆರೋಪಿ ಡಿಮ್ಯಾಂಡ್‌

    ರೋಟಿ-ಸಬ್ಜಿಯಿಂದ ತೃಪ್ತಿಯಾಗ್ತಿಲ್ಲ, ಮೊಟ್ಟೆ ಊಟ ಕೊಡಿ; ಕೋಲ್ಕತ್ತಾ ವೈದ್ಯೆ ರೇಪ್‌ ಆರೋಪಿ ಡಿಮ್ಯಾಂಡ್‌

    ಕೋಲ್ಕತ್ತಾ: ಸದ್ಯ ಜೈಲು ವಾಸಿಯಾಗಿರುವ ಕೋಲ್ಕತ್ತಾ ಅತ್ಯಾಚಾರ ಪ್ರಕರಣದ (Kolkata Horror) ರೇಪ್‌ ಆರೋಪಿ ಜೈಲಿನಲ್ಲಿ ನೀಡುತ್ತಿರುವ ಊಟದ ಬಗ್ಗೆ ಅಸಮಾಧಾನ ಹೊರಹಾಕಿದ್ದಾನೆ. ಅಲ್ಲದೇ ರೋಟಿ-ಸಬ್ಜಿಯಿಂದ ನನಗೆ ತೃಪ್ತಿಯಾಗ್ತಿಲ್ಲ. ಮೊಟ್ಟೆ ಚೌಮೆನ್‌ (ಮೊಟ್ಟೆ ಮಿಶ್ರಿತ ನೂಡಲ್ಸ್‌) (Egg Chowmein) ತಿನ್ನಲು ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದ್ದಾನೆ.

    ಹೌದು. ಪ್ರೆಸಿಡೆನ್ಸಿ ಜೈಲಿನಲ್ಲಿರುವ ಅತ್ಯಾಚಾರ ಆರೋಪಿ ಸಂಜಯ್‌ ರಾಯ್‌ಗೆ (Sanjay Roy) ಸದ್ಯ ಸಾಮಾನ್ಯ ಕೈದಿಗಳಂತೆ ಜೈಲಿನಲ್ಲಿ ತಯಾರಿಸಿದ ಆಹಾರವನ್ನೇ ನೀಡಲಾಗುತ್ತಿದೆ. ಶನಿವಾರವೂ ಸಹ ಎಂದಿನಂತೆ ರೋಟಿ ಮತ್ತು ಸಬ್ಜಿಯನ್ನು ನೀಡಿದಾಗ ರಾಯ್‌ ಅಸಮಾಧಾನಗೊಂಡಿದ್ದಾನೆ. ಇದರಿಂದ ಜೈಲು ಸಿಬ್ಬಂದಿಯೇ ಆತನಿಗೆ ಬಿಸಿಮುಟ್ಟಿಸಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: Kolkata Horror | ಕಿರಿಯ ವೈದ್ಯರಿಗೆ ನಾನು ಎಂದಿಗೂ ಬೆದರಿಕೆ ಹಾಕಿಲ್ಲ: ಮಮತಾ ಬ್ಯಾನರ್ಜಿ

    ಆಗಾಗ್ಗೆ ಗೊಣಗುತ್ತಿದ್ದ:
    ಈ ಮೊದಲು ಸಂಜಯ್‌ ರಾಜ್‌ನನ್ನು ಸಿಬಿಐ ಕಸ್ಟಡಿಯಿಂದ ಪ್ರೆಸಿಡೆನ್ಸಿ ಕರೆಕ್ಷನಲ್ ಹೋಮ್‌ಗೆ (ಜೈಲು) ಕರೆ ತಂದಾಗ ಮಲಗಲು ಸ್ವಲ್ಪ ಜಾಗ ಕೊಡುವಂತೆ ಕೇಳಿದ್ದ. ನಂತರ ಆಗಾಗ್ಗೆ ಗೊಣಗುವುದನ್ನು ಶುರು ಮಾಡಿದ್ದ. ಕೆಲ ದಿನಗಳ ನಂತರ ರಾಯ್‌ ಸಹಜ ಸ್ಥಿತಿಗೆ ಮರಳಿದ ಎಂದು ತಿಳಿದುಬಂದಿದೆ. ಇದನ್ನೂ ಓದಿ: ವೇಶ್ಯೆ ಗೃಹಕ್ಕೆ ಹೋಗಿದ್ದ, ಗರ್ಲ್‌ಫ್ರೆಂಡ್‌ಗೆ ಬೆತ್ತಲೆ ಫೋಟೋ ಕಳಿಸುವಂತೆ ಕೇಳಿದ್ದ – ರೇಪ್‌ ಆರೋಪಿಯ ಕರಾಳ ಮುಖ ಬಯಲು

    ಸದ್ಯ ಆರ್‌.ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಟ್ರೈನಿ ವೈದ್ಯೆ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ (CBI) ತನಿಖೆ ನಡೆಸುತ್ತಿದೆ. ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅವರನ್ನ ಸಿಬಿಐ ತಂಡ ಮತ್ತೆ ವಿಚಾರಣೆಗೊಳಪಡಿಸಿದೆ. ಬಳಿಕ ಕೋರ್ಟ್‌ಗೆ ಒಪ್ಪಿಸಿ 14 ದಿನ ತನ್ನ ಕಸ್ಟಡಿಗೆ ತೆಗೆದುಕೊಂಡಿದೆ. ಈಗಾಗಲೇ 140 ಗಂಟೆಗಳಿಗೂ ಹೆಚ್ಚು ಕಾಲ ಅವರನ್ನ ವಿಚಾರಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಕೋಲ್ಕತ್ತಾ ಟ್ರೈನಿ ವೈದ್ಯೆ ರೇಪ್‌ & ಮರ್ಡರ್‌ ಪ್ರಕರಣವನ್ನು ಕಳೆದ ಆಗಸ್ಟ್‌ 13ರಂದು ಹೈಕೋರ್ಟ್ ಕೋಲ್ಕತ್ತಾ ಪೊಲೀಸರಿಂದ ಸಿಬಿಐಗೆ ವರ್ಗಾಯಿಸಲು ಆದೇಶಿಸಿತು. ಆಗಸ್ಟ್‌ 14 ರಿಂದ ಸಿಬಿಐ ತನಿಖೆ ಆರಂಭಿಸಿದೆ. ಇದನ್ನೂ ಓದಿ: Kolkata Horror | ಕ್ರಿಮಿನಲ್‌ ಮನಸ್ಥಿತಿ ಬರೋದು ಏಕೆ? ಮನೋವಿಜ್ಞಾನಿಗಳು ಏನ್‌ ಹೇಳ್ತಾರೆ?

  • ವೇಶ್ಯೆ ಗೃಹಕ್ಕೆ ಹೋಗಿದ್ದ, ಗರ್ಲ್‌ಫ್ರೆಂಡ್‌ಗೆ ಬೆತ್ತಲೆ ಫೋಟೋ ಕಳಿಸುವಂತೆ ಕೇಳಿದ್ದ – ರೇಪ್‌ ಆರೋಪಿಯ ಕರಾಳ ಮುಖ ಬಯಲು

    ವೇಶ್ಯೆ ಗೃಹಕ್ಕೆ ಹೋಗಿದ್ದ, ಗರ್ಲ್‌ಫ್ರೆಂಡ್‌ಗೆ ಬೆತ್ತಲೆ ಫೋಟೋ ಕಳಿಸುವಂತೆ ಕೇಳಿದ್ದ – ರೇಪ್‌ ಆರೋಪಿಯ ಕರಾಳ ಮುಖ ಬಯಲು

    – ಮೃತ ವೈದ್ಯೆ ದೇಹದಲ್ಲಿ 25ಕ್ಕೂ ಹೆಚ್ಚು ಗಾಯಗಳು ಪತ್ತೆ
    – ಕೊಲೆ ಮಾಡುವ ಮುನ್ನ ಕ್ರೂರವಾಗಿ ಹಿಂಸೆ

    ಬೆಂಗಳೂರು: ಕೋಲ್ಕತ್ತಾ ಅತ್ಯಾಚಾರ ಪ್ರಕರಣಕ್ಕೆ (Kolkata Horror) ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದ ಪ್ರಮುಖ ಆರೋಪಿ ಸಂಜಯ್ ರಾಯ್‌ಗೆ ಮಾಡಿದ ಪಾಲಿಗ್ರಾಫ್ ಪರೀಕ್ಷೆಯ ವರದಿ ಹೊರಬಿದ್ದಿದೆ. ಕೃತ್ಯ ನಡೆದ ದಿನ ತಾನು ರೆಡ್‌ಲೈಟ್ ಏರಿಯಾಗೆ ಹೋಗಿದ್ದೆ. ಆಸ್ಪತ್ರೆಗೆ ಬರುವ ಹೊತ್ತಿಗೆ ಯುವ ವೈದ್ಯೆ ಸಾವನ್ನಪ್ಪಿದ್ರು ಎಂದು ಸಂಜಯ್ ರಾಯ್ (Sanjay Roy) ಹೇಳಿದ್ದಾನೆ ಎಂದು ವರದಿಯಾಗಿದೆ. ಇದರೊಂದಿಗೆ ಆರೋಪಿ ವಿಕೃತ ಮನಸ್ಥಿತಿಗೆ ಕನ್ನಡಿ ಹಿಡಿದಂತೆ ಇನ್ನಷ್ಟು ವಿಚಾರಗಳು ಬಯಲಾಗಿದೆ.

    ಸುಳ್ಳು ಪತ್ತೆ ಪರೀಕ್ಷೆ ವೇಳೆ ಸಂಜಯ್‌ ರಾಯ್‌ ಸಿಬಿಐ (CBI) ಅಧಿಕಾರಿಗಳ ಮುಂದೆ ವೈದ್ಯೆಯ ಕೊಲೆಯ ಮುನ್ನ ನಗರದ ಎರಡು ವೇಶ್ಯಾಗೃಹಗಳಿಗೆ (Red light area) ಭೇಟಿ ನೀಡಿರುವುದಾಗಿ ತಿಳಿಸಿದ್ದಾನೆ. ಆದರೆ ಈ ವೇಳೆ ಲೈಂಗಿಕ ಕ್ರಿಯೆ ನಡೆಸಿಲ್ಲ ಎಂದು ಹೇಳಿದ್ದಾನೆ. ಇದೇ ವೇಳೆ ಬೀದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿಗೆ ಕಿರುಕುಳ ನೀಡಿರುವುದನ್ನೂ ಒಪ್ಪಿಕೊಂಡಿದ್ದಾನೆ. ಜೊತೆಗೆ ತನ್ನ ಗೆಳತಿಗೆ ಕರೆ ಮಾಡಿ ಆಕೆಯ ಗ್ನ ಫೋಟೊ ಕಳಿಸುವಂತೆ ಕೇಳಿದ್ದ ಎಂದು ಒಪ್ಪಿಕೊಂಡಿರುವುದಾಗಿ ವರದಿಗಳಲ್ಲಿ ಉಲ್ಲೇಖವಾಗಿದೆ.

    ಕರಾಳ ಮುಖ ಬಯಲು:
    ಅತ್ಯಾಚಾರ ಘಟನೆ ನಡೆದ ರಾತ್ರಿ ಸಂಜಯ್ ರಾಯ್ ತನ್ನ ಸ್ನೇಹಿತನೊಂದಿಗೆ ಮದ್ಯಪಾನ ಮಾಡಿದ್ದ. ನಂತರ ವೇಶ್ಯಾಗೃಹಕ್ಕೆ ತೆರಳಿದ್ದ. ಅಲ್ಲಿಂದ ಹೊರಬಂದ ಆತ ದಕ್ಷಿಣ ಕೋಲ್ಕತ್ತಾದ ಮತ್ತೊಂದು ರೆಡ್‌ಲೈಟ್‌ ಏರಿಯಾ ಚೆಟ್ಲಾಕ್ಕೆ ಭೇಟಿ ನೀಡಿದ್ದ. ಚೆಟ್ಲಾಕ್ಕೆ ತೆರಳುವ ಮಾರ್ಗಮಧ್ಯೆ ಆತ ಬಾಲಕಿಯೊಬ್ಬಳಿಗೆ ಕಿರುಕುಳ ನೀಡಿದ್ದ. ಬಳಿಕ ಆರ್‌.ಜಿ ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಬಂದಿದ್ದ. ಮುಂಜಾನೆ 4 ಗಂಟೆ ಸುಮಾರಿಗೆ ಆತ ವೈದ್ಯೆ ಮೃತಪಟ್ಟ ಸೆಮಿನಾರ್‌ ಹಾಲ್‌ಗೆ ಪ್ರವೇಶಿಸುತ್ತಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಇದನ್ನೂ ಓದಿ: ಉಕ್ರೇನ್‌ ಮೇಲೆ ಮತ್ತೆ ರಷ್ಯಾ ವಾರ್‌ – 100 ಕ್ಷಿಪಣಿ, 100 ಅಟ್ಯಾಕಿಂಗ್‌ ಡ್ರೋನ್‌ಗಳಿಂದ ದಾಳಿ

    ಟ್ರೈನಿ ವೈದ್ಯೆಯ ಹತ್ಯೆಯ ಬಳಿಕ ಆತ ತನ್ನ ಸ್ನೇಹಿತ ಅನುಪಮ್‌ ದತ್ತ ಎಂಬಾತನ ಮನೆಗೆ ತೆರಳಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅದಾಗ್ಯೂ ಸುಳ್ಳು ಪತ್ತೆ ಪರೀಕ್ಷೆ ವೇಳೆ ಸಂಜಯ್‌ ರಾಯ್‌ ಅಧಿಕಾರಿಗಳ ದಾರಿ ತಪ್ಪಿಸುವ ಹೇಳಿಕೆ ನೀಡಿದ್ದಾನೆ ಎಂದು ವರದಿಯೊಂದು ತಿಳಿಸಿದೆ.

    ಇದೇ ವೇಳೆ ಸಿಬಿಐ ಅಧಿಕಾರಿಗಳು ಆತನ ಹಿನ್ನೆಲೆ ಪರೀಶೀಲಿಸಿದ್ದು ಈ ವೇಳೆ ಆತ ಅಶ್ಲೀಲ ಚಿತ್ರಗಳ ವೀಕ್ಷಿಸುವ ಚಟ ಹೊಂದಿದ್ದ ಎನ್ನುವುದನ್ನು ಕಂಡುಕೊಂಡಿದ್ದಾರೆ. ಇದಕ್ಕೆ ಪೂರಕವಾಗಿ ಆತನ ಮೊಬೈಲ್‌ ಫೋನ್‌ನಲ್ಲಿ ಹಲವು ಅಶ್ಲೀಲ ಚಿತ್ರಗಳ ತುಣಕುಗಳು ಸಿಕ್ಕಿವೆ. ಮೃತ ತರಬೇತಿ ವೈದ್ಯೆಯ ದೇಹದಲ್ಲಿ 25ಕ್ಕೂ ಹೆಚ್ಚು ಗಾಯಗಳು ಪತ್ತೆಯಾಗಿದ್ದು, ಕೊಲೆ ಮಾಡುವ ಮುನ್ನ ಕ್ರೂರವಾಗಿ ಹಿಂಸಸಲಾಗಿದೆ ಎಂದು ತಜ್ಞರು ತಿಳಿಸಿದ್ದಾರೆ. ಇದನ್ನೂ ಓದಿ: ದರ್ಶನ್ ಜೊತೆ ಜೈಲಲ್ಲಿ ಪೋಸ್ ಕೊಟ್ಟ ರೌಡಿಶೀಟರ್ ನಾಗ ಧರಿಸಿದ್ದ ಟಿ-ಶರ್ಟ್ ಬೆಲೆ ಕೇಳಿದ್ರೆ ಬೆಚ್ಚಿಬೀಳ್ತೀರಾ!

    ಆಗಸ್ಟ್‌ 9ರಂದು ಮುಂಜಾನೆ 4 ಗಂಟೆ ಸುಮಾರಿಗೆ ಟ್ರೈನಿ ವೈದ್ಯೆಯ ಮೃತದೇಹ ಪತ್ತೆಯಾಗಿತ್ತು. ಅಂದು ಕರ್ತವ್ಯದಲ್ಲಿದ್ದ ವೈದ್ಯರು ಮತ್ತು ಇಂಟರ್ನ್‌ಗಳೊಂದಿಗೆ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅವರ ಉತ್ತರಗಳನ್ನು ಸಿಬಿಐ ಪರಿಶೀಲಿಸುತ್ತಿದೆ. ಸಂದೀಪ್ ಘೋಷ್ ಅವರನ್ನೂ ಸುಳ್ಳು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: J&K Election | ಇಂಡಿಯಾ ಒಕ್ಕೂಟದ ಸೀಟು ಹಂಚಿಕೆ ಒಪ್ಪಂದ ಸುಖಾಂತ್ಯ – ಎನ್‌ಸಿ 51, ಕಾಂಗ್ರೆಸ್‌ 32 ಸ್ಥಾನಗಳಲ್ಲಿ ಸ್ಪರ್ಧೆ

  • ತರಬೇತಿ ವೈದ್ಯೆ ಮೇಲೆ ಅತ್ಯಾಚಾರ ಕೇಸ್‌ – ಅವಮಾನ ಸಹಿಸಲಾರದೇ ಪ್ರಾಂಶುಪಾಲ ರಾಜೀನಾಮೆ

    ತರಬೇತಿ ವೈದ್ಯೆ ಮೇಲೆ ಅತ್ಯಾಚಾರ ಕೇಸ್‌ – ಅವಮಾನ ಸಹಿಸಲಾರದೇ ಪ್ರಾಂಶುಪಾಲ ರಾಜೀನಾಮೆ

    ಕೋಲ್ಕತ್ತಾ: ತರಬೇತಿ ವೈದ್ಯೆ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಖಂಡಿಸಿ ವ್ಯಾಪಕ ಪ್ರತಿಭಟನೆ ನಡೆಸುತ್ತಿರುವ ಹೊತ್ತಿನಲ್ಲೇ ಕೋಲ್ಕತ್ತಾದ ಆರ್‌ಜಿ ಕರ್‌ ವೈದ್ಯಕೀಯ ಕಾಲೇಜು ಪ್ರಾಂಶುಪಾಲ (RG Kar Medical College Principal) ಡಾ.ಸಂದೀಪ್ ಘೋಷ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

    ಅತ್ಯಾಚಾರ ಪ್ರಕರಣದ ಬಳಿಕ ಸೋಷಿಯಲ್‌ ಮೀಡಿಯಾದಲ್ಲಿ (Social Media) ನನ್ನ ಬಗ್ಗೆ ಕೀಳಾಗಿ ಮಾತನಾಡುತ್ತಿದ್ದಾರೆ. ಈ ಅವಮಾನ ನನ್ನಿಂದ ಸಹಿಸಲಾಗುತ್ತಿಲ್ಲ ಎಂದು ಹೇಳಿ ಘೋಷ್‌ (Dr. Sandip Ghosh) ರಾಜೀನಾಮೆ ಘೋಷಿಸಿದ್ದಾರೆ. ಇದನ್ನೂ ಓದಿ: ಶ್ರಾವಣ ಸೋಮವಾರ ಬಾಬಾ ಸಿದ್ಧೇಶ್ವರನಾಥ ದೇವಸ್ಥಾನದಲ್ಲಿ ಕಾಲ್ತುಳಿತ – 7 ಭಕ್ತರು ಸಾವು

    ನನ್ನಿಂದ ರಾಜೀನಾಮೆ ಪಡೆಯಲು ವಿದ್ಯಾರ್ಥಿಗಳನ್ನ (Medical Student) ಎತ್ತಿಕಟ್ಟಿದ್ದಾರೆ. ಸುಮ್ಮನೆ ನನ್ನ ಮಾನಹಾನಿ ಮಾಡಲಾಗುತ್ತಿದೆ. ನಾನು ಸಂತ್ರಸ್ತರನ್ನ ನೋಯಿಸುವ ಯಾವುದೇ ಟೀಕೆ ಮಾಡಿಲ್ಲ. ಅತ್ಯಾಚಾರ ಮತ್ತು ಕೊಲೆ ಆರೋಪಿಗೆ ಶಿಕ್ಷೆ ಆಗಬೇಕೆಂದು ಈಗಲೂ ಬಯಸುತ್ತೇನೆ. ಮೃತ ಬಾಲಕಿ ನನ್ನ ಮಗಳಿದ್ದಂತೆ, ನನಗೂ ತಂದೆ-ತಾಯಿ ಇದ್ದಾರೆ. ಆದ್ರೆ ಸೋಷಿಯಲ್‌ ಮೀಡಿಯಾದಲ್ಲಿ ನನ್ನ ವಿರುದ್ಧ ನೀಡುತ್ತಿರುವ ಕೀಳು ಮಟ್ಟದ ಹೇಳಿಕೆಗಳಿಂದ ತುಂಬಾ ನೋವಾಗುತ್ತಿದೆ. ಆದ್ದರಿಂದ ನನ್ನ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಅವರು ಪತ್ರದಲ್ಲಿ ಬರೆದಿರುವುದಾಗಿ ವರದಿಯಾಗಿದೆ. ಇದನ್ನೂ ಓದಿ: ಪ್ರೀತಿಸಿ ಎಲ್ಲಾ ಮುಗಿದ್ಮೇಲೆ ಕೈಕೊಟ್ಟ ಪ್ರಿಯಕರ – ಮದುವೆ ದಿನವೇ ಆಸಿಡ್‌ ದಾಳಿಗೆ ಮುಂದಾದ ವಿಧವೆ ಪ್ರೇಯಸಿ!

    ಕೃತ್ಯದ ನಂತರ ಸಂದೀಪ್‌ ರಾಜೀನಾಮೆ ನೀಡಲ್ಲ ಅಂತ ಎಲ್ಲರೂ ಹೇಳ್ತಿದ್ದರು. ಆದ್ರೆ ನಾನು ಪ್ರಾಮಾಣಿಕನಾಗಿ ರಾಜೀನಾಮೆ ನೀಡಿದ್ದೇನೆ. ನಾನು ಅಧಿಕಾರ ವಹಿಸಿಕೊಂಡ ಬಳಿಕ ವೈದ್ಯಕೀಯ ಕಾಲೇಜಿನಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿದ್ದೆ. ಆಸ್ಪತ್ರೆಯ ಅಭಿವೃದ್ಧಿ ಮತ್ತು ರೋಗಿಗಳ ಹಿತದೃಷ್ಟಿಯಿಂದ ಕೆಲಸ ಮಾಡಿಕೊಂಡು ಬಂದಿದ್ದೇನೆ. ಆದ್ರೆ ಈ ಘಟನೆಯನ್ನು ಕೆಲವರು ಲಾಭಕ್ಕಾಗಿ ಬಳಸಿಕೊಂಡಿದ್ದು, ನನ್ನ ವಿರುದ್ಧ ಪಿತೂರಿ ಮಾಡಿದ್ದಾರೆ ಎಂದು ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

    ಏನಿದು ಪ್ರಕರಣ?
    ಕಳೆದ ಶುಕ್ರವಾರ ಬೆಳಗ್ಗೆ ಕೋಲ್ಕತ್ತಾದ ಸರ್ಕಾರಿ ಆರ್‌ಜಿ ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಮಹಿಳಾ ಸ್ನಾತಕೋತ್ತರ ತರಬೇತಿ (ಪಿಜಿಟಿ) ವೈದ್ಯೆಯ ಶವ ಅರೆನಗ್ನ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿ ಮರಣೋತ್ತರ ಪರೀಕ್ಷೆ ನಡೆಸಿದಾಗ ತರಬೇತಿ ವೈದ್ಯೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ನಂತರ ಕೊಲೆ ಮಾಡಿರುವುದು ವರದಿಯಲ್ಲಿ ಬಹಿರಂಗವಾಯಿತು. ಇದನ್ನೂ ಓದಿ: ಸರ್ಕಾರಿ ಕೆಲಸ ತಿರಸ್ಕರಿಸಿದ ಒಲಿಂಪಿಕ್ಸ್‌ ಶೂಟಿಂಗ್‌ನಲ್ಲಿ ಕಂಚು ಗೆದ್ದ ಸರಬ್ಜೋತ್‌ ಸಿಂಗ್‌

    ಆರೋಪಿಗೆ 14 ದಿನ ಪೊಲೀಸ್ ಕಸ್ಟಡಿ:
    ಸ್ನಾತಕೋತ್ತರ ತರಬೇತಿ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಬಂಧಿತ ಆರೋಪಿಯನ್ನು 14 ದಿನಗಳವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಆರೋಪಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 64 (ಅತ್ಯಾಚಾರ) ಮತ್ತು 103ರ (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ತರಬೇತಿ ವೈದ್ಯೆ ಮೇಲೆ ಅತ್ಯಾಚಾರ ಕೇಸ್‌ – ವಿಚಾರಣೆ ವೇಳೆ ಕಾಮುಕನ ಮೊಬೈಲ್‌ನಲ್ಲಿ ಸೆಕ್ಸ್‌ ವೀಡಿಯೋಗಳು ಪತ್ತೆ!

  • ತರಬೇತಿ ವೈದ್ಯೆ ಮೇಲೆ ಅತ್ಯಾಚಾರ ಕೇಸ್‌ – ವಿಚಾರಣೆ ವೇಳೆ ಕಾಮುಕನ ಮೊಬೈಲ್‌ನಲ್ಲಿ ಸೆಕ್ಸ್‌ ವೀಡಿಯೋಗಳು ಪತ್ತೆ!

    ತರಬೇತಿ ವೈದ್ಯೆ ಮೇಲೆ ಅತ್ಯಾಚಾರ ಕೇಸ್‌ – ವಿಚಾರಣೆ ವೇಳೆ ಕಾಮುಕನ ಮೊಬೈಲ್‌ನಲ್ಲಿ ಸೆಕ್ಸ್‌ ವೀಡಿಯೋಗಳು ಪತ್ತೆ!

    – ಬ್ಲೂಟೂತ್‌ ನೀಡಿತು ಕಾಮುಕನ ಸುಳಿವು!
    – ಆರೋಪಿಗೆ ಮರಣ ದಂಡನೆ ವಿಧಿಸಲು ದೀದಿ ಆಗ್ರಹ

    ಕೋಲ್ಕತ್ತಾ: ಸ್ನಾತಕೋತ್ತರ ತರಬೇತಿ ವೈದ್ಯೆಯ (Trainee Doctor) ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಬಂಧಿತ ಆರೋಪಿ ಸಂಜಯ್‌ ರಾಯ್‌ನನ್ನು 14 ದಿನಗಳವರೆಗೆ ಪೊಲೀಸ್ (Kolkata Police) ಕಸ್ಟಡಿಗೆ ಒಪ್ಪಿಸಿದೆ. ತನಿಖೆಯಲ್ಲಿ ಸ್ಫೋಟಕ ರಹಸ್ಯಗಳು ಬಯಲಾಗಿವೆ.

    ಪೊಲೀಸ್‌ ಕಸ್ಟಡಿಗೆ ಪಡೆದು ಆರೋಪಿ ವಿಚಾರಣೆ ನಡೆಸುತ್ತಿದ್ದ ವೇಳೆ ಆತನ ಮೊಬೈಲ್‌ನಲ್ಲಿ ಪೋರ್ನ್‌ ವೀಡಿಯೋಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಇದು ಮೋದಿ ಭಾರತ, ಬಾಂಗ್ಲಾದೇಶದಂತಹ ಪರಿಸ್ಥಿತಿ ಉಂಟಾಗಲ್ಲ; ಕಾಂಗ್ರೆಸ್‌ಗೆ ಶೇಖಾವತ್ ತಿರುಗೇಟು

    ಸಿಸಿಟಿವಿಯಲ್ಲಿ ದೃಶ್ಯ ಸೆರೆ:
    ಮೂಲಗಳ ಪ್ರಕಾರ, ಆರೋಪಿ ಸಂಜಯ್‌ ರಾಜ್‌ ಖಾಸಗಿ ಸ್ವಯಂ ಸೇವಕರಾಗಿ ಕೆಲಸ ಮಾಡುತ್ತಿದ್ದ. ಇದರಿಂದ ಅನೇಕರು ಅವರನ್ನು ಫ್ರೆಂಡ್ಸ್‌ ಆಫ್‌ ಪೊಲೀಸ್‌ ಎಂದೂ ಜನ ಕರೆಯುತ್ತಿದ್ದರು. ಬಂಗಾಳ ಪೊಲೀಸರ ಸಹಕಾರಕ್ಕಾಗಿ ಪ್ರಬಲ ಪೊಲೀಸ್ ಕಲ್ಯಾಣ ಮಂಡಳಿಯ ಭಾಗವಾಗಿ ರಚಿಸಿದ್ದ ತಂಡದಲ್ಲಿ ರಾಯ್‌ ಇದ್ದ. ಇದರಿಂದ ಆಸ್ಪತ್ರೆಗೆ ಪ್ರವೇಶಿಸಲು ಸುಲಭವಾಗಿ ಪ್ರವೇಶ ಸಿಕ್ಕಿತ್ತು. ಶುಕ್ರವಾರ ಮುಂಜಾನೆ 4 ಗಂಟೆ ಸುಮಾರಿಗೆ ರಾಯ್‌ ಆಸ್ಪತ್ರೆ ಒಳಗೆ ಹೋಗಿರುವುದು ಸಿಸಿಟಿವಿ (CCTV) ದೃಶ್ಯಾವಳಿಯಲ್ಲಿ ಸೆರೆಯಾಗಿದೆ. ಈ‌ ದೃಶ್ಯಾವಳಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

    ಬ್ಲೂಟೂತ್‌ ನೀಡಿದ ಸುಳಿವು:
    ಕಾಮುಕ ಸಂಜಯ್‌ ರಾಯ್‌ ವಿಚಾರಣೆ ವೇಳೆ, ಎಲ್ಲ ಶಂಕಿತರ ಮೊಬೈಲ್‌ಗಳನ್ನ ಅಧಿಕಾರಿಗಳು ವಶಪಡಿಸಿಕೊಂಡಿದ್ದರು. ನಂತರ ಪರಿಶೀಲನೆ ವೇಳೆ ಸಿಕ್ಕ ಬ್ಲೂಟೂತ್‌, ಇಯರ್‌ ಫೋನ್‌ ಅನ್ನು ಎಲ್ಲ ಶಂಕಿತರ ಮೊಬೈಲ್ ಫೋನ್‌ಗಳೊಂದಿಗೆ ಲಿಂಕ್ ಮಾಡಲು ಪ್ರಯತ್ನಿಸಿದರು. ಈ ವೇಳೆ ಬ್ಲೂಟೂತ್‌ ಮತ್ತು ಇಯರ್‌ ಫೋನ್‌ ಆರೋಪಿ ಸಂಜಯ್ ರಾಯ್‌ನ ಮೊಬೈಲ್‌ ಫೋನ್‌ಗೆ ಸ್ವಯಂಚಾಲಿತವಾಗಿ ಕನೆಕ್ಟ್ ಆಗಿದೆ. ಇದನ್ನೇ ಸಾಕ್ಷಿಯನ್ನಾಗಿ ಪರಿಗಣಿಸಿದ ಪೊಲೀಸರು ಆತನನ್ನ ಅಲ್ಲೇ ವಶಕ್ಕೆ ಪಡೆಸಿದ್ದಾರೆ. ಪೊಲೀಸ್ ತಂಡವು ವಿಚಾರಣೆ ನಡೆಸಿದಾಗ, ಸಂಜಯ್ ಆರಂಭದಲ್ಲಿ ವಿಭಿನ್ನ ಹೇಳಿಕೆಗಳನ್ನು ನೀಡಿದ್ದರೂ, ನಂತರ ತಗಲಾಕ್ಕೊಂಡಿದ್ದಾನೆ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

    ಆರೋಪಿ ಮರಣ ದಂಡನೆಗೆ ದೀದಿ ಆಗ್ರಹ:
    ಅತ್ಯಾಚಾರ ಆರೋಪಿಗೆ ಮರಣದಂಡನೆ ವಿಧಿಸುವಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ನ್ಯಾಯಾಲಯಕ್ಕೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಪ್ಯಾರಿಸ್‌ ಒಲಿಂಪಿಕ್ಸ್‌ ಹಬ್ಬಕ್ಕಿಂದು ಅದ್ಧೂರಿ ತೆರೆ – ಭಾರತದ ಧ್ವಜಧಾರಿಯಾಗಲಿದ್ದಾರೆ ಮನು ಭಾಕರ್‌

    ಏನಿದು ಕೇಸ್?‌
    ಕಳೆದ ಶುಕ್ರವಾರ ಬೆಳಗ್ಗೆ ಕೋಲ್ಕತ್ತಾದ ಸರ್ಕಾರಿ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಮಹಿಳಾ ಸ್ನಾತಕೋತ್ತರ ತರಬೇತಿ (ಪಿಜಿಟಿ) ವೈದ್ಯೆಯ ಶವ ಅರೆನಗ್ನ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಆಕೆಯನ್ನು ಅತ್ಯಾಚಾರ ಎಸಗಿ, ಬಳಿಕ ಕೊಲೆ ಮಾಡಿರುವುದು ಗೊತ್ತಾಗಿತ್ತು. ವೈದ್ಯಕೀಯ ವಿದ್ಯಾರ್ಥಿನಿಯ ಮೃತದೇಹವು ರಕ್ತದ ಕಲೆಗಳ ಸಹಿತ ಹಾಸಿಗೆಯ ಮೇಲೆ ಬಿದ್ದಿರುವುದು ಪತ್ತೆಯಾಗಿತ್ತು. ಜೊತೆಗೆ ಆಕೆಯ ಕಣ್ಣು ಮತ್ತು ಬಾಯಿಯಿಂದ ರಕ್ತ ಹರಿಯುತ್ತಿತ್ತು. ಘಟನೆ ಬೆಳಕಿಗೆ ಬಂದ ಬಳಿಕ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಮರಣೋತ್ತರ ಪರೀಕ್ಷೆ ನಡೆಸಿದಾಗ ಮಹಿಳಾ ವೈದ್ಯೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ವರದಿಯಲ್ಲಿ ಬಹಿರಂಗವಾಯಿತು.

    ಆರೋಪಿ 14 ದಿನ ಪೊಲೀಸ್‌ ಕಸ್ಟಡಿಗೆ:
    ಸ್ನಾತಕೋತ್ತರ ತರಬೇತಿ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಬಂಧಿತ ಆರೋಪಿಯನ್ನು 14 ದಿನಗಳವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಆರೋಪಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 64 (ಅತ್ಯಾಚಾರ) ಮತ್ತು 103ರ (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಸೀಲ್ಲಾ ನ್ಯಾಯಾಲಯದ ಎದುರು ಆರೋಪಿಯನ್ನು ಹಾಜರುಪಡಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆಗಾಗಿ 14 ದಿನಗಳವರೆಗೆ ಪೊಲೀಸ್ ವಶಕ್ಕೆ ನೀಡುವಂತೆ ಪ್ರಾಸಿಕ್ಯೂಷನ್‌ ಮನವಿಯನ್ನು ನ್ಯಾಯಾಧೀಶರು ಪುರಸ್ಕರಿಸಿದರು. ಇದನ್ನೂ ಓದಿ: ಕೇಂದ್ರ ಸರ್ಕಾರವು ಕೇರಳ ಜೊತೆಗಿದೆ: ವಯನಾಡು ಭೂಕುಸಿತ ಸಂತ್ರಸ್ತರಿಗೆ ಮೋದಿ ಅಭಯ

    ವ್ಯಾಪಕ ಪ್ರತಿಭಟನೆ:
    ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣವನ್ನು ಖಂಡಿಸಿ ಆರ್‌ಜಿ ಕರ್‌ ವೈದ್ಯಕೀಯ ಕಾಲೇಜು, ರಾಷ್ಟ್ರೀಯ ವೈದ್ಯಕೀಯ ಕಾಲೇಜು ಮತ್ತು ಕೋಲ್ಕತ್ತಾದ ವೈದ್ಯಕೀಯ ಕಾಲೇಜು ಸೇರಿದಂತೆ ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿ ಕಿರಿಯ ವೈದ್ಯರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಆರೋಪಿಗೆ ಮರಣದಂಡನೆ ವಿಧಿಸುವಂತೆ ಆಗ್ರಹಿಸಿದ್ದಾರೆ.

  • ಕೋಲ್ಕತ್ತಾದಲ್ಲಿ ಹಿಂಸಾತ್ಮಕ ಪ್ರತಿಭಟನೆ ಸಾಧ್ಯತೆ – ಮೇ 28 ರಿಂದ 60 ದಿನ 144 ಸೆಕ್ಷನ್ ಜಾರಿ

    ಕೋಲ್ಕತ್ತಾದಲ್ಲಿ ಹಿಂಸಾತ್ಮಕ ಪ್ರತಿಭಟನೆ ಸಾಧ್ಯತೆ – ಮೇ 28 ರಿಂದ 60 ದಿನ 144 ಸೆಕ್ಷನ್ ಜಾರಿ

    ಕೋಲ್ಕತ್ತಾ: ಹಿಂಸಾತ್ಮಕ ಪ್ರತಿಭಟನೆಗಳು ನಡೆಯುವ ಮಾಹಿತಿಯ ಮೇರೆಗೆ ಕೋಲ್ಕತ್ತಾ (Kolkata) ನಗರದಲ್ಲಿ ಮೇ 28 ರಿಂದ 60 ದಿನಗಳ ಸುದೀರ್ಘ ಕಾಲ ಸೆಕ್ಷನ್ 144  (Section 144) ಜಾರಿಗೊಳಿಸಲಾಗಿದೆ.

    ಮೇ 28 ರಿಂದ ಜು.26 ರವರೆಗೆ 60 ದಿನಗಳವರೆಗೆ ಹಿಂಸಾತ್ಮಕ ಪ್ರತಿಭಟನೆಗಳು ನಡೆಯುವ ಸಾಧ್ಯತೆ ಇದೆ. ಮಾಹಿತಿ ಆಧಾರದ ಮೇಲೆ ಮುಂದಿನ ಆದೇಶದವರೆಗೆ ಐಪಿಸಿಯ ಸೆಕ್ಷನ್ 144ನ್ನು ಕೋಲ್ಕತ್ತಾ ಪೊಲೀಸ್ ಕಮಿಷನರ್ ವಿಧಿಸಿದ್ದಾರೆ. ಇದನ್ನೂ ಓದಿ: ಮಾನನಷ್ಟ ಕೇಸ್‌- ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ದೋಷಿ

    ಸಾರ್ವಜನಿಕ ಶಾಂತಿ ಕಾಪಾಡಲು ಈ ಆದೇಶ ಅಗತ್ಯವಾಗಿದೆ. ಇದರ ಅನ್ವಯ ಪೊಲೀಸರು (Kolkata Police) ನಿರ್ದೇಶನದ ಅನುಸಾರವಾಗಿ ಶಾಂತಿ ಕದಡುವವರ ವಿರುದ್ಧ ಕಾರ್ಯಾಚರಣೆಗಿಳಿಯಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಬೌಬಜಾರ್ ಪೊಲೀಸ್ ಠಾಣೆ, ಹೇರ್ ಸ್ಟ್ರೀಟ್ ಪೊಲೀಸ್ ಠಾಣೆ ಮತ್ತು ಕೋಲ್ಕತ್ತಾ ಟ್ರಾಫಿಕ್ ಗಾರ್ಡ್ ಹೆಡ್‍ಕ್ವಾರ್ಟರ್‌ಗಳು  ವ್ಯಾಪ್ತಿಯಲ್ಲಿರುವ ಬೆಂಟಿಕ್ ಸ್ಟ್ರೀಟ್ ಹೊರತುಪಡಿಸಿ, ಕೆಸಿ ದಾಸ್ ಕ್ರಾಸಿಂಗ್‍ನಿಂದ ವಿಕ್ಟೋರಿಯಾ ಹೌಸ್ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಿಗೆ ಸೆಕ್ಷನ್ 144 ಜಾರಿಗೊಳಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಮೇ 28 ರಂದು ಕೋಲ್ಕತ್ತಾದಲ್ಲಿ ರೋಡ್ ಶೋ ನಡೆಸಲಿದ್ದಾರೆ. ಈ ರೋಡ್ ಶೋ ತಪ್ಪಿಸಬೇಕೆಂದು ಮಮತಾ ಬ್ಯಾನರ್ಜಿ ಉದ್ದೇಶ ಪೂರ್ವಕವಾಗಿ ನಿಷೇಧಾಜ್ಞೆ ಹೇರಿದ್ದಾರೆ. ಇದನ್ನು ಪ್ರಶ್ನಿಸಿ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು ಎಂದು ಬಿಜೆಪಿ ಹೇಳಿದೆ. ಇದನ್ನೂ ಓದಿ: ತಮಿಳುನಾಡಿನಲ್ಲಿ ಗೂಗಲ್‌ ಕಂಪನಿಯ ಫೋನ್‌ – ಹೂಡಿಕೆ ಕಳೆದುಕೊಂಡ ಕರ್ನಾಟಕ

  • ಬಾಲಕಿಯನ್ನ ಮನೆಗೆ ಕರೆಸಿ ಊಟ ಹಾಕಿ, ಮಗನಿಂದಲೇ ರೇಪ್ ಮಾಡಿಸಿದ್ಳು

    ಬಾಲಕಿಯನ್ನ ಮನೆಗೆ ಕರೆಸಿ ಊಟ ಹಾಕಿ, ಮಗನಿಂದಲೇ ರೇಪ್ ಮಾಡಿಸಿದ್ಳು

    ಕೋಲ್ಕತ್ತಾ: ಮಹಿಳೆಯೊಬ್ಬಳು (Women) ತನ್ನ ಬಳಿ ಬ್ಯೂಟಿಷಿಯನ್ ಕೋರ್ಸ್ (Beautician Course) ಕಲಿಯುತ್ತಿದ್ದ ಬಾಲಕಿಯನ್ನ ಮನೆಗೆ ಕರೆದು ಊಟ ಹಾಕಿ, ತನ್ನ ಮಗನಿಂದಲೇ ಅತ್ಯಾಚಾರ ಮಾಡಿಸಿರುವ ಅಮಾನವೀಯ ಘಟನೆ ಕೋಲ್ಕತ್ತಾದ (Kolkata) ಹರಿದೇವಪುರ ಪ್ರದೇಶದಲ್ಲಿ ನಡೆದಿದೆ.

    ಎರಡು ತಿಂಗಳ ಹಿಂದೆ ನಡೆದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ತಾಯಿ ಹಾಗೂ ಕಾಮುಕ ಮಗ ಇಬ್ಬರನ್ನೂ ಕೋಲ್ಕತ್ತಾ ಪೊಲೀಸರು (Kolkata Police) ಬಂಧಿಸಿದ್ದು, ಪೋಕ್ಸೋ ಕೇಸ್ (POCSO Case) ದಾಖಲಿಸಿದ್ದಾರೆ. ಇದನ್ನೂ ಓದಿ: `ಹಿಂದೂ’ ಪದ ಅಶ್ಲೀಲ ಅನ್ನೋನು ಸನ್ನಿ ಲಿಯೋನ್ ಮಗನಾ? – ಧನಂಜಯ ಭಾಯ್ ವಿವಾದಿತ ಹೇಳಿಕೆ

    ಸಂತ್ರಸ್ತ ಬಾಲಕಿ ಆರೋಪಿ ಮಹಿಳೆ ಬಳಿ ಬ್ಯೂಟಿಷಿಯನ್ ಕೋರ್ಸ್ ಕಲಿಯುತ್ತಿದ್ದಳು. ಹೀಗಿರುವಾಗ ಮಹಿಳೆ ಅಕ್ಟೋಬರ್‌ನಲ್ಲಿ ತನ್ನ ಮನಗೆ ಆಹ್ವಾನಿಸಿದ್ದಳು. ಈ ವೇಳೆ ಆಕೆಗೆ ಊಟ ಕೊಡುವಾಗ ಅದರಲ್ಲಿ ಮಾದಕವಸ್ತು ಮಿಶ್ರಣ ಮಾಡಿಕೊಟ್ಟಿದ್ದಾಳೆ. ಊಟ ಸೇವಿಸಿದ ಬಾಲಕಿ ಕೆಲ ಕ್ಷಣಗಳಲ್ಲೇ ಪ್ರಜ್ಞೆತಪ್ಪಿದ್ದಾಳೆ. ನಂತರ ಕಾಮುಕ ಮಗ ಎರಡು ಬಾರಿ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ಜಾತಿ ಆಧಾರದಲ್ಲಿ ಸಿಎಂ ಆಯ್ಕೆ ಮಾಡಲ್ಲ- ಜಿ.ಪರಮೇಶ್ವರ್

    ಸಂತ್ರಸ್ತೆ ಪೊಲೀಸರಿಗೆ ದೂರು ನೀಡಲು ಹೆದರುತ್ತಿದ್ದಳು. ನಂತರ ಆಕೆಯ ಸ್ನೇಹಿತರ ಸಹಕಾರದೊಂದಿಗೆ ದೂರು ನೀಡಿದ್ದು, ಕೇಸ್ ದಾಖಲಿಸಲಾಯಿತು. ಇದೀಗ ತಾಯಿ-ಮಗ ಇಬ್ಬರನ್ನೂ ಬಂಧಿಸಿದ್ದು, ತನಿಖೆ ಮುಂದುವರಿದಿದೆ.

    Live Tv
    [brid partner=56869869 player=32851 video=960834 autoplay=true]