Tag: kolkata

  • ಟಿಎಂಸಿ ನಾಯಕನಿಗೆ ಶೂನಲ್ಲಿ ಹೊಡೆಯುತ್ತೇವೆ: ವಿವಾದ ಸೃಷ್ಟಿಸಿದ ದಿಲೀಪ್ ಘೋಷ್ ಹೇಳಿಕೆ

    ಟಿಎಂಸಿ ನಾಯಕನಿಗೆ ಶೂನಲ್ಲಿ ಹೊಡೆಯುತ್ತೇವೆ: ವಿವಾದ ಸೃಷ್ಟಿಸಿದ ದಿಲೀಪ್ ಘೋಷ್ ಹೇಳಿಕೆ

    ಕೋಲ್ಕತ್ತಾ: ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಷ್ಟ್ರೀಯ ಉಪಾಧ್ಯಕ್ಷ ದಿಲೀಪ್ ಘೋಷ್ ಅವರು, ತಮ್ಮ ಪಕ್ಷದ ವಿರೋಧಿಗಳನ್ನು ಟೀಕಿಸಿ ಭಾಷಣ ಮಾಡುವ ಸಂದರ್ಭದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕ ಸುಗತ ರಾಯ್ ಬೂಟುಗಳಿಂದ ಹೊಡೆತ ತಿನ್ನಬೇಕಾಗುತ್ತದೆ ಎಂದು ಹೇಳುವ ಮೂಲಕ ಎಚ್ಚರಿಕೆ ನೀಡಿದ್ದಾರೆ.

    ಬಿಜೆಪಿ ನಾಯಕರಿಗೆ ಔಪಚಾರಿಕ ಶಿಕ್ಷಣ ಸಿಕ್ಕಿಲ್ಲ ಎಂದು ಸುಗತ ರಾಯ್ ಹೇಳಿದ್ದಕ್ಕೆ ಪ್ರತಿಕ್ರಿಯಿಸಿದ ದಿಲೀಪ್ ಘೋಷ್ ಅವರು, ಬಿಜೆಪಿ ಪಕ್ಷದ ಬೆಂಬಲ ಕಳೆದುಕೊಂಡ ನಂತರ ಅವರು ಟಿಎಂಸಿಯೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಪಶ್ಚಿಮ ಬಂಗಾಳದ ಚುನಾವಣೆ ಹಿನ್ನೆಲೆಯಲ್ಲಿ ಸದ್ಯದಲ್ಲೇ ದಿಲೀಪ್ ಘೋಷ್ ಬಿಜೆಪಿ ಬಿಟ್ಟು ಟಿಎಂಸಿ ಸೇರಲು ಪ್ಲಾನ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಪತ್ನಿ ಜೊತೆಗೆ ದೇವಾಲಯಕ್ಕೆ ರಿಷಿ ಸುನಕ್ ಭೇಟಿ

    ಟಿಎಂಸಿಯ ನಾಯಕರಾದ ಪಾರ್ಥ ಚಟರ್ಜಿ ಮತ್ತು ಅನುಬ್ರತಾ ಮೊಂಡಲ್ ಅವರನ್ನು ಬೇರೆ, ಬೇರೆ ಪ್ರಕರಣಗಳಲ್ಲಿ ಬಂಧಿಸಿದ ನಂತರ ಸುಗತ ರಾಯ್ ಪ್ರತಿಭಟನೆಯ ನೆಪದಲ್ಲಿ ಪಕ್ಷವನ್ನು ಕೆಡಿಸುವ ಮೂಲಕ ತಪ್ಪಿಸಿಕೊಳ್ಳಬಹುದು ಎಂದು ಅಂದುಕೊಂಡಿರುವವರ ಚರ್ಮವನ್ನು ಸುಲಿದು ಶೂಗಳನ್ನು ತಯಾರಿಸಲಾಗುವುದು ಎಂದು ಹೇಳಿದ್ದರು. ವಿರೋಧ ಪಕ್ಷವಾದ ಬಿಜೆಪಿ ವಿರುದ್ಧ ಟೀಕಿಸುವವರು ಕೊನೆಗೆ ಅವರೇ ಅದರ ಪರಿಣಾಮವನ್ನು ಅನುಭವಿಸಬೇಕಾಗುತ್ತದೆ ಎಂದು ಕಿಡಿಕಾರಿದ್ದಾರೆ.

    ಸೌಗತಾ ರಾಯ್ ಒಬ್ಬ ಹಿರಿಯ ರಾಜಕಾರಣಿ. ಅವರು ಒಂದು ಕಾಲದಲ್ಲಿ ಪ್ರಾಧ್ಯಾಪಕರಾಗಿದ್ದರು. ಆದರೆ ಅವರು ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಭಾಷೆ ಸರಿಯಿಲ್ಲ. ಚರ್ಮ ಸುಲಿದು ಶೂ ತಯಾರಿಸಲಾಗುವುದು ಎಂದು ಪಕ್ಷದ ಕಾರ್ಯಕರ್ತರಿಗೆ ಹೇಳುತ್ತಿದ್ದಾರೆ. ಜನ ಅವರಿಗೆ ಚಪ್ಪಲಿಯಿಂದ ಹೊಡೆಯುವ ದಿನ ದೂರವಿಲ್ಲ. ರಾಜ್ಯದ ವಿವಿಧೆಡೆ ಟಿಎಂಸಿ ನಾಯಕರನ್ನು ಶೂಗಳಿಂದ ಥಳಿಸಲಾಗುವುದು ಎಂದು ಘೋಷ್ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ನಿಮ್ಮನ್ನು ಮುಗಿಸಲಾಗುವುದು- ಎನ್‍ಸಿಬಿ ಮಾಜಿ ಅಧಿಕಾರಿ ಸಮೀರ್ ವಾಂಖೆಡೆಗೆ ಜೀವ ಬೆದರಿಕೆ

    ಈ ಬಗ್ಗೆ ಮಾತನಾಡಿದ ಸುಗತ ರಾಯ್, ದಿಲೀಪ್ ಘೋಷ್ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ. ಔಪಚಾರಿಕ ಶಿಕ್ಷಣವಿಲ್ಲದ ವ್ಯಕ್ತಿ ಏನು ಹೇಳುತ್ತಿದ್ದಾರೆ ಎಂಬುದರ ಕುರಿತು ಪ್ರತಿಕ್ರಿಯಿಸುವುದು ನನ್ನ ಘನತೆಗೆ ತಕ್ಕದ್ದಲ್ಲ. ದಿಲೀಪ್ ಘೋಷ್ ಅವರಿಗೆ ಬಿಜೆಪಿ ನಾಯಕತ್ವದ ವಿಶ್ವಾಸವಿಲ್ಲದ ಕಾರಣ ನಮ್ಮ ಪಕ್ಷದೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

    ಶಾಲಾ ನೇಮಕಾತಿ ವಂಚನೆಯಲ್ಲಿನ ಅಕ್ರಮಕ್ಕಾಗಿ ಪಾರ್ಥ ಚಟರ್ಜಿ ಅವರನ್ನು ಇಡಿ ಬಂಧಿಸಿತ್ತು. ದನ ಕಳ್ಳಸಾಗಣೆ ಪ್ರಕರಣದಲ್ಲಿ ಅನುಬ್ರತಾ ಮೊಂಡಲ್ ಅವರನ್ನು ಸಿಬಿಐ ಬಂಧಿಸಿತ್ತು. ಇವರಿಬ್ಬರ ಬಂಧನದ ನಂತರ ಬಿಜೆಪಿ ಮತ್ತು ಟಿಎಂಸಿ ನಾಯಕರ ನಡುವೆ ಈ ಕೆಸರೆರಚಾಟ ನಡೆದಿದೆ.

    Live Tv
    [brid partner=56869869 player=32851 video=960834 autoplay=true]

  • ಸ್ವಾತಂತ್ರ್ಯ ದಿನಕ್ಕೂ ಮೊದಲೇ ದಾಳಿಯ ಆತಂಕ – 2,000 ಬುಲೆಟ್, ಡ್ರೋನ್‌ಗಳು ಪತ್ತೆ

    ಸ್ವಾತಂತ್ರ್ಯ ದಿನಕ್ಕೂ ಮೊದಲೇ ದಾಳಿಯ ಆತಂಕ – 2,000 ಬುಲೆಟ್, ಡ್ರೋನ್‌ಗಳು ಪತ್ತೆ

    ನವದೆಹಲಿ: 75 ನೇ ಸ್ವಾತಂತ್ರ್ಯ ದಿನಕ್ಕೂ ಮೊದಲೇ ದಾಳಿಯ ಆತಂಕ ಉಂಟಾಗಿದೆ. ದೆಹಲಿ ಪೊಲೀಸರು ಶುಕ್ರವಾರ ಆನಂದ್ ವಿಹಾರ್ ಪ್ರದೇಶದಲ್ಲಿ 2 ಚೀಲಗಳಲ್ಲಿ ಜೀವಂತ ಗುಂಡುಗಳನ್ನು ವಶಪಡಿಸಿಕೊಂಡಿದ್ದು, ಅದನ್ನು ಕಳ್ಳಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ 6 ಜನರನ್ನು ಬಂಧಿಸಿದ್ದಾರೆ.

    ಜೀವಂತ ಗುಂಡುಗಳನ್ನು ಸಾಗಿಸುತ್ತಿದ್ದ ಆರೋಪಿಗಳು ಅದನ್ನು ಲಕ್ನೋಗೆ ಸರಬರಾಜು ಮಾಡಲು ಪ್ರಯತ್ನಿಸುತ್ತಿದ್ದರು ಎಂದು ಪೊಲೀಸ್ ಕಮಿಷನರ್ ವಿಕ್ರಮಜಿತ್ ಸಿಂಗ್ ತಿಳಿಸಿದ್ದಾರೆ.

    ಪೊಲೀಸರ ಪ್ರಕಾರ, ಪ್ರಸ್ತುತ ಮೀರತ್ ಜೈಲಿನಲ್ಲಿರುವ ಅನಿಲ್ ಈ ಕೃತ್ಯದಲ್ಲಿ ಭಾಗಿಯಾಗಿದ್ದಾನೆ ಎನ್ನಲಾಗಿದೆ. ಬಂಧಿತ 6 ಜನರಲ್ಲಿ ಒಬ್ಬ ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿರುವ ಗನ್ ಹೌಸ್ ಮಾಲೀಕನೂ ಆಗಿದ್ದಾನೆ. ಇದರ ಬೆನ್ನಲ್ಲೇ ಕೋಲ್ಕತ್ತಾದಲ್ಲಿ ವಿಕ್ಟೋರಿಯಾ ಸ್ಮಾರಕದ ಮೇಲೆ ಡ್ರೋನ್ ಹಾರಿಸಿದ ಆರೋಪದ ಮೇಲೆ ಪೊಲೀಸರು ಇಬ್ಬರು ಬಾಂಗ್ಲಾದೇಶೀ ಪ್ರಜೆಗಳನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ – ಅಧಿಕೃತ ಆದೇಶ

    ವಿಕ್ಟೋರಿಯಾ ಮೆಮೊರಿಯಲ್ ಹಾಲ್‌ನ ಮೊದಲ ಮಹಡಿಯ ಬಾಲ್ಕನಿಯಲ್ಲಿ ಕ್ಯಾಮೆರಾಗಳನ್ನು ಅಳವಡಿಸಿದ್ದ ಡ್ರೋನ್‌ಗಳನ್ನು ಹಾರಿಸಿ, ಸುತ್ತಲಿನ ಛಾಯಾಚಿತ್ರಗಳನ್ನು ತೆಗೆದುಕೊಳ್ಳುವುದು ಕಂಡುಬಂದಿದೆ. ಡ್ರೋನ್ ಹಾರಿಸಿದ ಕಾರಣ ಬಾಂಗ್ಲಾದೇಶದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ಸ್ವಾತಂತ್ರ್ಯ ದಿನಾಚರಣೆಗೂ ಮೊದಲು ದೆಹಲಿ ಸೇರಿದಂತೆ ದೇಶದ ಪ್ರಮುಖ ಸ್ಥಳಗಳಲ್ಲಿ ಭಯೋತ್ಪಾದಕ ಗುಂಪುಗಳಿಂದ ದಾಳಿಯ ಬೆದರಿಕೆಗಳಿರುವುದಾಗಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಬೆದರಿಕೆಯ ನಡುವೆ ಗುರುವಾರ ಹೈದರಾಬಾದ್‌ನಲ್ಲಿ ಭದ್ರತೆಗಳನ್ನು ಹೆಚ್ಚಿಸಲಾಗಿದೆ. ಇದನ್ನೂ ಓದಿ: ಪಂಚಾಯತ್‌ ದಲಿತ ಅಧ್ಯಕ್ಷರು ಕುರ್ಚಿಯಲ್ಲಿ ಕೂರುವಂತಿಲ್ಲ, ಸ್ವಾತಂತ್ರ್ಯ ದಿನ ಧ್ವಜ ಹಾರಿಸುವಂತಿಲ್ಲ: ಸರ್ವೇಯಿಂದ ತಾರತಮ್ಯ ಬೆಳಕಿಗೆ

    Live Tv
    [brid partner=56869869 player=32851 video=960834 autoplay=true]

  • ಕೋಲ್ಕತ್ತಾದಲ್ಲಿ ಹೆಚ್ಚಾಗ್ತಿದೆ ಕಾಂಡೋಮ್ ಮಾರಾಟ – ಕಾರಣವೇನು ಗೊತ್ತಾ?

    ಕೋಲ್ಕತ್ತಾದಲ್ಲಿ ಹೆಚ್ಚಾಗ್ತಿದೆ ಕಾಂಡೋಮ್ ಮಾರಾಟ – ಕಾರಣವೇನು ಗೊತ್ತಾ?

    ಕೋಲ್ಕತ್ತಾ: ಕಾಂಡೋಮ್‍ಗಳ ಮಾರಾಟ ಹೆಚ್ಚಾಗುತ್ತಿರುವ ಬಗ್ಗೆ ಆಗಾಗಾ ಸುದ್ದಿಯಾಗುತ್ತಲೇ ಇರುತ್ತದೆ. ಆದರೆ ಪಶ್ಚಿಮ ಬಂಗಾಳದಲ್ಲಿ ದಿಢೀರನೇ ಕಾಂಡೋಮ್ ಮಾರಾಟ ಹೆಚ್ಚಳವಾಗಿರುವ ವಿಚಾರ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ.

    ಹೌದು, ಪಶ್ಚಿಮ ಬಂಗಾಳದ ದುರ್ಗಾಪುರದ ವಿದ್ಯಾರ್ಥಿಗಳು ಹೆಚ್ಚಾಗಿ ಕಾಂಡೋಮ್‍ಗಳನ್ನು ಖರೀದಿಸುತ್ತಿದ್ದಾರೆ. ಆದರೆ ಗರ್ಭನಿರೋಧಕವಾಗಿ ಬಳಸಲು ಅಲ್ಲ. ಬದಲಿಗೆ ಅದನ್ನು ಮಾದಕತೆಯಾಗಿ ಬಳಸುತ್ತಿದ್ದಾರೆ. ಈ ವಿಲಕ್ಷಣ ಪ್ರವೃತ್ತಿಯು ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಅವುಗಳಲ್ಲಿ ಹಲವಾರು ವಿದ್ಯಾರ್ಥಿಗಳ ಆರೋಗ್ಯದ ಮೇಲಿನ ಪರಿಣಾಮದ ಬಗ್ಗೆ ಆಂತಕ ಮೂಡಿಸುತ್ತಿದೆ.

    ಈ ಕುರಿತಂತೆ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ ಮೆಡಿಕಲ್ ಶಾಪ್ ವ್ಯಾಪಾರಿ, ಪ್ರತಿನಿತ್ಯ ಮಾರಾಟವಾಗುವ ಕಾಂಡೋಮ್ ಪ್ಯಾಕೆಟ್‍ಗಳ ಸಂಖ್ಯೆ ಇದೀಗ ಹಲವು ಪಟ್ಟು ಹೆಚ್ಚಾಗಿದೆ. ದುರ್ಗಾಪುರದ ಹಲವಾರು ಭಾಗಗಳಾದ ದುರ್ಗಾಪುರ ಸಿಟಿ ಸೆಂಟರ್, ಬಿಧಾನನಗರ, ಬೆನಚಿಟಿ ಮತ್ತು ಮುಚಿಪಾರದಲ್ಲಿ ಸುವಾಸನೆಯ ಕಾಂಡೋಮ್‍ಗಳ ಮಾರಾಟವು ಬಹಳ ಹೆಚ್ಚಾಗಿದೆ ಎಂದು ತಿಳಿಸಿದ್ದಾರೆ.

    ಕಾಂಡೋಮ್ ಮಾರಾಟ ಮತ್ತು ಖರೀದಿ ಹೆಚ್ಚಾಗಿರುವುದರ ಹಿಂದಿನ ಕಾರಣವೇನು ಎಂದು ಪ್ರಶ್ನಿಸಿದಾಗ, ಅಂಗಡಿಯವರು ಕಾಂಡೋಮ್ ಅನ್ನು ಹೆಚ್ಚಾಗಿ ಖರೀದಿಸುತ್ತಿರುವವರು ಯುವಕರು ಎಂದು ಪ್ರತಿಕ್ರಿಸಿದ್ದಾರೆ. ಇದನ್ನೂ ಓದಿ: ರಾಖಿ ಕಟ್ಟಿದ ಸಹೋದರಿಗೆ ಎಲೆಕ್ಟ್ರಿಕ್‌ ಸ್ಕೂಟರ್‌ ಗಿಫ್ಟ್‌ ಕೊಡಲು ಕಳ್ಳತನ ಮಾಡುತ್ತಿದ್ದ ಯುವಕನ ಬಂಧನ

    ಕಾಂಡೋಮ್‍ಗಳನ್ನು ಬಿಸಿ ನೀರಿನಲ್ಲಿ ದೀರ್ಘಕಾಲ ನೆನೆಸುವುದರಿಂದ ಆಲ್ಕೋಹಾಲ್ ಸಂಯುಕ್ತಗಳನ್ನು ರಚಿಸುತ್ತದೆ. ಇದು ಯುವಕರನ್ನು ನಶೆಯಲ್ಲಿಡುತ್ತಿದೆ  ಎಂದು ರಸಾಯನಶಾಸ್ತ್ರದ ಶಿಕ್ಷಕರು ಪ್ರತಿಕ್ರಿಯಿಸಿದ್ದಾರೆ.

    ಇದನ್ನೂ ಓದಿ: ಈತನ ಹೊಟ್ಟೆಯಲ್ಲಿತ್ತು 1 ರೂಪಾಯಿಯ 63 ನಾಣ್ಯಗಳು – ಎಕ್ಸ್‌ರೇ ನೋಡಿ ವೈದ್ಯರೂ ಶಾಕ್

    ಕಾಂಡೋಮ್‍ನಲ್ಲಿರುವ ಆರೊಮ್ಯಾಟಿಕ್ ಸಂಯುಕ್ತವು ಅಮಲೇರಿಸುವ ಅಂಶವಿದ್ದು, ಈ ಸಂಯುಕ್ತವು ಡೆಂಡ್ರೈಟ್‍ಗಳಲ್ಲಿಯೂ ಸಹ ಇರುತ್ತದೆ. ಇದು ಮಾದಕತೆಗಾಗಿ ಸಾಮಾನ್ಯವಾಗಿ ಬಳಸುವ ಉತ್ಪನ್ನವಾಗಿದೆ.

    ಅಮಲು ಬಂದಾಗ ಜನರು ವಿಚಿತ್ರವಾದ ಆಯ್ಕೆಗಳನ್ನು ಹೊಂದಿರುತ್ತಾರೆ. ಕೆಲವು ವಿಲಕ್ಷಣವಾದವುಗಳಲ್ಲಿ ಕೆಮ್ಮು ಸಿರಪ್ ಕುಡಿಯುವುದು, ಅಂಟು ಉತ್ಪನ್ನಗಳನ್ನು ಸ್ನಿಫಿಂಗ್ ಮಾಡುವುದು, ಬಣ್ಣ, ನೇಲ್ ಪಾಲಿಷ್ ಮತ್ತು ವೈಟ್‌ನರ್‌ಗಳ ವಾಸನೆಯ ಉಸಿರು ತೆಗೆದುಕೊಳ್ಳುವುದನ್ನು ಕಾಣಬಹುದಾಗಿದೆ.

    ಈ ಸಂಯುಕ್ತಗಳೊಂದಿಗೆ ನಿಯಮಿತವಾಗಿ ಅಮಲೇರಿದ ಯುವಕರು ಎದೆ ನೋವು ಹಾಗೂ ದೀರ್ಘಕಾಲದ ತಲೆನೋವಿನಂತಹ ಗಂಭೀರವಾದ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಾರೆ. ಇದು ವ್ಯಸನಗಳ ಮೇಲೆ ಅವರ ಅವಲಂಬನೆಯನ್ನು ಹೆಚ್ಚಿಸುತ್ತದೆ.

    Live Tv
    [brid partner=56869869 player=32851 video=960834 autoplay=true]

  • ಬಿಜೆಪಿಯವರು ಕಡ್ಲೆಪುರಿ ತಿನ್ನುವುದನ್ನು ನಿಲ್ಲಿಸುತ್ತಾರೆಯೇ?: GST ವಿರುದ್ಧ ಬ್ಯಾನರ್ಜಿ ವಾಗ್ದಾಳಿ

    ಬಿಜೆಪಿಯವರು ಕಡ್ಲೆಪುರಿ ತಿನ್ನುವುದನ್ನು ನಿಲ್ಲಿಸುತ್ತಾರೆಯೇ?: GST ವಿರುದ್ಧ ಬ್ಯಾನರ್ಜಿ ವಾಗ್ದಾಳಿ

    ಕೋಲ್ಕತ್ತಾ: ಬಿಜೆಪಿ ಕಡ್ಲೆಪುರಿ ತಿನ್ನುವುದನ್ನು ನಿಲ್ಲಿಸುತ್ತದೆಯೇ? ಎಂದು ಬಿಜೆಪಿ ನೇತೃತ್ವದ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಜಿಎಸ್‍ಟಿ ಏರಿಕೆ ವಿರುದ್ಧ ಕಿಡಿಕಾರಿದರು.

    ಕೋಲ್ಕತ್ತಾದಲ್ಲಿ ಶಹೀದ್ ದಿವಸ್(ಹುತಾತ್ಮರ ದಿನ) ರ‍್ಯಾಲಿಯಲ್ಲಿ ಮಮತಾ ಬ್ಯಾನರ್ಜಿ ಮಾತನಾಡಿದ್ದು, ಕಡ್ಲೆಪುರಿಗೂ ಜಿಎಸ್‍ಟಿ ಬಂದಿದೆ. ಬಿಜೆಪಿ ಸ್ನೇಹಿತರು ಈಗ ಕಡ್ಲೆಪುರಿಯನ್ನು ತಿನ್ನುವುದಿಲ್ಲ. ಕಡ್ಲೆಪುರಿ, ಸಿಹಿತಿಂಡಿಗಳು, ಲಸ್ಸಿ, ಮೊಸರು ಮತ್ತು ಬೇವಿನ ಸೊಪ್ಪಿನ ಮೇಲೆ ಎಷ್ಟು ಜಿಎಸ್‍ಟಿ ವಿಧಿಸಲಾಗಿದೆ? ನಾವು ಏನು ತಿನ್ನುತ್ತೇವೆ? ಹೇಗೆ ತಿನ್ನಬೇಕು? ಎಂದು ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ಭ್ರಷ್ಟಾಚಾರದ ಹೆಮ್ಮರವೊಂದಕ್ಕೆ ಕೊಡಲಿ ಪೆಟ್ಟು ಬಿದ್ದಿದ್ದಕ್ಕೆ ಬೀದಿಗಿಳಿದಿದ್ದಾರೆ: ಬಿಜೆಪಿ 


    ರೋಗಿಯನ್ನು ಆಸ್ಪತ್ರೆಗೆ ಸೇರಿಸುವುದರಿಂದಲೂ ಜಿಎಸ್‍ಟಿಯನ್ನು ವಿಧಿಸಲಾಗಿದೆ. ಈ ವಿಧಾನ ನಮಗೆ ಬೇಡ. ಅದಕ್ಕೆ ನಮ್ಮ ಬಳಿ ತೆಗೆದುಕೊಂಡ ಎಲ್ಲವನ್ನು ಹಿಂತಿರುಗಿಸಿ. ಇಲ್ಲವಾದರೆ ನೀವು ಹೊರಟು ಹೋಗಿ ಎಂದು ಬಿಜೆಪಿ ವಿರುದ್ಧ ತಿರುಗೇಟು ಕೊಟ್ಟರು.

    ಕಳೆದ ವರ್ಷ, ಛತ್ತೀಸ್‍ಗಢದ ಬಿಜೆಪಿ ಶಾಸಕ ಬ್ರಿಜ್‍ಮೋಹನ್ ಅಗರ್ವಾಲ್ ಅವರು ಸರಕುಗಳ ಬೆಲೆ ಏರಿಕೆಯನ್ನು ಸಮಸ್ಯೆ ಎಂದು ಭಾವಿಸುವವರು ತಿನ್ನುವುದನ್ನು ನಿಲ್ಲಿಸಬೇಕು ಎಂದು ವಿಚಿತ್ರ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಆಕ್ರೋಶಗೊಂಡ ಜನರು, ನಾವು ಸತ್ತರೆ ಎಷ್ಟು ಜಿಎಸ್‍ಟಿ ಅನ್ವಯವಾಗುತ್ತೆ? ಮೃತದೇಹವನ್ನು ಸಾಗಿಸಲು ಹಾಸಿಗೆಗೆ ಎಷ್ಟು ಎಂದು ಕಿಡಿಕಾರಿದ್ದರು. ಇದನ್ನೂ ಓದಿ:  ಇಡಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ – ಬ್ಯಾರಿಕೇಡ್ ಮೇಲಿಂದ ಹಾರಿದ ಡಿಕೆಶಿ ವಶ 

    1993 ರ ಯೂತ್‌ ಕಾಂಗ್ರೆಸ್‍ನ ರ‍್ಯಾಲಿಯಲ್ಲಿ ಪೊಲೀಸರ ಗುಂಡಿನ ದಾಳಿಗೆ 13 ಜನರು ಸಾವನ್ನಪ್ಪಿದ್ದರು. ಅವರ ನೆನಪಿಗಾಗಿ ಟಿಎಂಸಿ ಪ್ರತಿ ವರ್ಷ ಜುಲೈ 21 ರಂದು ಹುತಾತ್ಮರ ದಿನವನ್ನು ಆಚರಿಸುತ್ತದೆ. ಈ ವೇಳೆ ಮಮತಾ ಬ್ಯಾನರ್ಜಿ ಅವರು ನಾಯಕಿಯಾಗಿದ್ದರು.

    Live Tv
    [brid partner=56869869 player=32851 video=960834 autoplay=true]

  • ಚಿಕ್ಕ ವಯಸ್ಸಿನ ಮಾಡೆಲ್ ಪೂಜಾ ಸರ್ಕಾರ್ ಆತ್ಮಹತ್ಯೆ: ಕೋಲ್ಕತ್ತಾದಲ್ಲಿ ಮುಂದುವರೆದ ಸಾವಿನ ಸರಣಿ

    ಚಿಕ್ಕ ವಯಸ್ಸಿನ ಮಾಡೆಲ್ ಪೂಜಾ ಸರ್ಕಾರ್ ಆತ್ಮಹತ್ಯೆ: ಕೋಲ್ಕತ್ತಾದಲ್ಲಿ ಮುಂದುವರೆದ ಸಾವಿನ ಸರಣಿ

    ಕೋಲ್ಕತ್ತಾ ಮೂಲದ ಮಾಡೆಲ್ ಗಳ ಸಾವಿನ ಸರಣಿ ಮುಂದುವರೆದಿದೆ. ಇದೀಗ ಮತ್ತೋರ್ವ ಮಾಡೆಲ್ ಟವಲ್ ಬಳಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮಾಡೆಲಿಂಗ್ ಕ್ಷೇತ್ರದಲ್ಲಿ ಸಾಕಷ್ಟು ಹೆಸರು ಮಾಡಿದ್ದ ಮತ್ತು ಇನ್ನೂ ಕಾಲೇಜಿನಲ್ಲಿ ಓದುತ್ತಿದ್ದ 24ರ ಹರೆಯದ ಪೂಜಾ ತಾನು ವಾಸಿಸುತ್ತಿದ್ದ ಮನೆಯಲ್ಲೇ ಕುತ್ತಿಗೆಗೆ ಟವಲ್ ಸುತ್ತಿಕೊಂಡು ನೇಣಿಗೆ ಶರಣಾಗಿದ್ದಾರೆ.

    ಪೊಲೀಸ್ ಮಾಹಿತಿಯ ಪ್ರಕಾರ, ಸಾಯುವ ದಿನ ಪೂಜಾ ಹೋಟೆಲ್ ಗೆ ಹೋಗಿದ್ದರಂತೆ. ಅಲ್ಲಿಂದ ಬಂದ ನಂತರ ಮಲಗಿದ್ದಾರೆ. ಏಕಾಏಕಿ ಅವರಿಗೆ ಮಧ್ಯರಾತ್ರಿ ಕರೆ ಬಂದಿದೆ. ಈ ಕರೆಯನ್ನು ಸ್ವೀಕರಿಸಿದ ನಂತರ ಅವರು ರೂಮ್ ಗೆ ಹೋಗಿ ನೇಣಿಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಈ ಸಾವಿಗೆ ಅವರ ಬಾಯ್ ಫ್ರೆಂಡ್ ಕಾರಣ ಎನ್ನುವುದು ಪೂಜಾಳ ಸಂಬಂಧಿಕರ ಆರೋಪ. ಇದನ್ನೂ ಓದಿ:ಪೊನ್ನಿಯನ್ ಸೆಲ್ವನ್ ವಿವಾದ : ಮಣಿರತ್ನಂ ಮತ್ತು ವಿಕ್ರಮ್ ಗೆ ನೋಟಿಸ್

    ಪೂಜಾ ರೂಮ್ ಗೆ ಹೋದ ವಿಷಯ ತಿಳಿಯುತ್ತಿದ್ದಂತೆಯೇ ಹಲವರು ಕರೆ ಮಾಡಿದ್ದಾರೆ. ಕರೆ ಸ್ವೀಕರಿಸದೇ ಇದ್ದಾಗ ಮನೆಗೆ ಬಂದು ಬಾಗಿಲು ತೆಗೆಯುವ ಪ್ರಯತ್ನ ಮಾಡಿದ್ದಾರೆ. ಒಳಗಿಂದ ಯಾವುದೇ ಪ್ರತಿಕ್ರಿಯೆ ಬಾರದೇ ಇರುವ ಕಾರಣಕ್ಕಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಾಗಿಲು ಒಡೆದು ನೋಡಿದಾಗ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪೂಜಾ ಅವರ ಮೃತದೇಹ ದೊರೆತಿದೆ ಎನ್ನಲಾಗುತ್ತಿದೆ. ಆದರೆ, ರೂಮ್ ನಲ್ಲಿ ಯಾವುದೇ ಡೆತ್ ನೋಟ್ ಮತ್ತು ಸಾವಿನ ಕುರುಹು ದೊರೆತಿಲ್ಲ ಎಂದು ತಿಳಿದು ಬಂದಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಭಾರತಕ್ಕೂ ಬಂತಾ ಮಂಕಿಪಾಕ್ಸ್? – ರೋಗ ಲಕ್ಷಣವಿರುವ ಯುವಕ ಆಸ್ಪತ್ರೆಗೆ, ಸ್ಯಾಂಪಲ್ ಪರೀಕ್ಷೆಗೆ

    ಭಾರತಕ್ಕೂ ಬಂತಾ ಮಂಕಿಪಾಕ್ಸ್? – ರೋಗ ಲಕ್ಷಣವಿರುವ ಯುವಕ ಆಸ್ಪತ್ರೆಗೆ, ಸ್ಯಾಂಪಲ್ ಪರೀಕ್ಷೆಗೆ

    ಕೋಲ್ಕತ್ತಾ: ಭಾರತದಲ್ಲಿ ಮೊದಲ ಬಾರಿಗೆ ಮಂಕಿಪಾಕ್ಸ್ ಶಂಕಿತ ಪ್ರಕರಣ ವರದಿಯಾಗಿದೆ. ಕೋಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಯುವಕನಿಗೆ ಮಂಕಿಪಾಕ್ಸ್ ಸೋಂಕು ತಗುಲಿರುವ ಶಂಕೆಯನ್ನು ವೈದ್ಯರು ವ್ಯಕ್ತಪಡಿಸಿದ್ದಾರೆ.

    ಪಶ್ಚಿಮ ಬಂಗಾಳದ ಮಿಡ್ನಾಪುರದ ಯುವಕ ಕೆಲವು ದಿನಗಳ ಹಿಂದೆ ಯುರೋಪಿಯನ್ ದೇಶದಿಂದ ಭಾರತಕ್ಕೆ ಮರಳಿದ್ದ. ಇದೀಗ ಯುವಕನ ದೇಹದಲ್ಲಿ ಕೆಲವು ಗುಳ್ಳೆಗಳು ಹಾಗೂ ರೋಗದ ಲ್ಷಣಗಳು ಕಂಡುಬಂದಿದೆ. ಇದು ಮಂಕಿಪಾಕ್ಸ್ ಇರಬಹುದು ಎಂದು ಶಂಕಿಸಲಾಗುತ್ತಿದ್ದು, ಆತನ ರಕ್ತದ ಮಾದರಿಯನ್ನು ಪುಣೆಯ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ(ಎನ್‌ಐವಿ)ಗೆ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಇದನ್ನೂ ಓದಿ: ಶಿಂಜೋ ಅಬೆ ಹತ್ಯೆಗೆ ಕಾರಣ ತಿಳಿಸಿದ ಯಮಗಾಮಿ – ತಾನೇ ತಯಾರಿಸಿದ್ದ ಗನ್ ಬಳಕೆ

    MONKEY

    ಇದೀಗ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದ್ದು, ಯುವಕನಿಗೆ ಮಂಕಿಪಾಕ್ಸ್ ಇದೆಯೇ ಇಲ್ಲವೇ ಎಂಬುದು ಬಳಿಕ ದೃಢವಾಗಲಿದೆ. ಆತನನ್ನು ಪ್ರತ್ಯೇಕವಾಗಿ ಇರಿಸಲಾಗಿದ್ದು, ಆತನ ಸಂಪರ್ಕದಲ್ಲಿದ್ದವರು ಹಾಗೂ ಕುಟುಂಬಕ್ಕೆ ಪಶ್ಚಿಮ ಬಂಗಾಳ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಅಮರನಾಥ ಮೇಘಸ್ಫೋಟ: ಸಾವಿನ ಸಂಖ್ಯೆ 15ಕ್ಕೆ ಏರಿಕೆ, 40 ಮಂದಿ ನಾಪತ್ತೆ – ಯಾತ್ರೆಯಲ್ಲಿ ಸಿಲುಕಿದವರಿಗೆ ಕರ್ನಾಟಕ ಸರ್ಕಾರದಿಂದ ಸಹಾಯವಾಣಿ

    ಮೂಲಗಳ ಪ್ರಕಾರ ಒಬ್ಬನ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ, ಏಕೆಂದರೆ ಆತ ಕಳೆದ ಕೆಲವು ದಿನಗಳ ಹಿಂದೆ ವಿದೇಶದಿಂದ ಹಿಂತಿರುಗಿದ್ದ. ಈ ಬಗ್ಗೆ ಆರೋಗ್ಯ ಇಲಾಖೆ ಯಾವುದೇ ಕ್ರಮವನ್ನು ಸದ್ಯ ತೆಗೆದುಕೊಂಡಿಲ್ಲ. ಪಶ್ಚಿಮ ಬಂಗಾಳದಲ್ಲಿ ಮಂಕಿಪಾಕ್ಸ್ ಶಂಕಿತ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿರುವುದು ಇದೇ ಮೊದಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಕೂಡಲೇ ವಿಚಾರಣೆಗೆ ಹಾಜರಾಗಿ – ಬಂಗಾಳ ಪೊಲೀಸರಿಂದ ನೂಪುರ್‌ಗೆ ಕೊನೆಯ ಎಚ್ಚರಿಕೆ

    ಕೂಡಲೇ ವಿಚಾರಣೆಗೆ ಹಾಜರಾಗಿ – ಬಂಗಾಳ ಪೊಲೀಸರಿಂದ ನೂಪುರ್‌ಗೆ ಕೊನೆಯ ಎಚ್ಚರಿಕೆ

    ಕೋಲ್ಕತ್ತಾ: ಪ್ರವಾದಿ ಮೊಹಮ್ಮದ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಮಾಜಿ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ವಿರುದ್ಧ ದೇಶ-ವಿದೇಶಗಳಲ್ಲಿ ಹೊತ್ತಿ ಉರಿಯುವಂತಾಗಿದೆ. ಆದರೆ ಈ ಘಟನೆಯ ಬಳಿಕ ಇಲ್ಲಿಯವರೆಗೆ ನೂಪುರ್ ಎಲ್ಲಿಯೂ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ಇದೀಗ ನೂಪುರ್ ವಿಚಾರಣೆಗೆ ಇನ್ನಷ್ಟು ಸಮಯಾವಕಾಶ ನೀಡಲು ಕೋಲ್ಕತ್ತಾ ಪೊಲೀಸರು ನಿರಾಕರಿಸಿದ್ದಾರೆ.

    ವಿವಾದಾತ್ಮಕ ಹೇಳಿಕೆ ನೀಡಿದ ಬಳಿಕ ಅವರ ವಿರುದ್ಧ ನಾರ್ಕೆಲ್ಡಂಗಾ ಹಾಗೂ ಅಮ್ಹೆರ್ಸ್ಟ್ ಸ್ಟ್ರೀಟ್ ಪೊಲೀಸ್ ಠಾಣೆಗಳಲ್ಲಿ ಎಫ್‌ಐಆರ್ ದಾಖಲಾಗಿದೆ. ಎಫ್‌ಐಆರ್ ದಾಖಲಾಗಿದ್ದರೂ, ತನ್ನ ಜೀವಕ್ಕೆ ಅಪಾಯವಿದೆ, ಪೊಲೀಸ್ ಠಾಣೆಗೆ ಹಾಜರಾಗಲು ಸ್ವಲ್ಪ ಕಾಲಾವಕಾಶ ಬೇಕು ಎಂದು ಇ-ಮೇಲ್ ಮೂಲಕ ತಿಳಿಸಿದ್ದಾರೆ. ಇದನ್ನೂ ಓದಿ: ನೇರವಾಗಿ ಒಪಿಡಿಗೆ ಓಡಿಬಂದ ಕತ್ತೆ- ಗಾಬರಿಗೊಂಡ ರೋಗಿಗಳು

    ಈಗ ಪೊಲೀಸರು ನೂಪುರ್‌ಗೆ ಇನ್ನಷ್ಟು ಸಮಯಾವಕಾಶ ನೀಡಲು ಹಿಂದೇಟು ಹಾಕುತ್ತಿದ್ದಾರೆ. ಈ ಕೂಡಲೇ ವಿಚಾರಣೆಗೆ ಹಾಜರಾಗಬೇಕೆಂದು ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ.

    ವರದಿಗಳ ಪ್ರಕಾರ ಕೋಲ್ಕತ್ತಾ ಪೊಲೀಸರು ಶನಿವಾರ ನೂಪುರ್ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದು, ಇದಕ್ಕೆ ನೂಪುರ್ ಮಂಗಳವಾರ ಪ್ರತಿಕ್ರಿಯಿಸಿದ್ದಾರೆ. ನರ್ಕೆಲ್ಡಂಗಾ ಪೊಲೀಸ್ ಠಾಣೆಗೆ ಇ-ಮೇಲ್ ಮೂಲಕ ಮತ್ತೆ ಜೀವಭಯ ವ್ಯಕ್ತಪಡಿಸಿ ಹೆಚ್ಚಿನ ಸಮಯಾವಕಾಶ ಕೋರಿದ್ದಾರೆ. ಆದರೆ ಇನ್ನು ಸಮಯಾವಕಾಶ ನೀಡಲು ನಿರಾಕರಿಸಿರುವ ಪೊಲೀಸರು, ತಕ್ಷಣವೇ ವಿಚಾರಣೆಗೆ ಹಾಜರಾಗದಿದ್ದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಮೈದಾ, ರವೆ ಸೇರಿದಂತೆ ಹಿಟ್ಟಿನ ರಫ್ತಿಗೆ ನಿಷೇಧ ಹೇರಿದ ಭಾರತ

    ನೂಪುರ್ ಶರ್ಮಾ ಅವರ ಒಂದು ವಿವಾದಾತ್ಮಕ ಹೇಳಿಕೆಗೆ ದೇಶಾದ್ಯಂತ ಭೀಕರ ಹಿಂಸಾಚಾರಗಳು ನಡೆದಿದ್ದು, ಈ ಹಿನ್ನೆಲೆ ಸುಪ್ರೀಂ ಕೋರ್ಟ್ ಇದೆಲ್ಲದಕ್ಕೂ ಹೊಣೆ ನೂಪುರ್ ಶರ್ಮಾ ಎಂದು ಹೇಳಿತ್ತು. ಅವರ ಹೇಳಿಕೆಯಿಂದ ದೇಶದಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಯಾಗಿದ್ದು, ಇದೆಲ್ಲದಕ್ಕೂ ಆಕೆ ಇಡೀ ದೇಶಕ್ಕೆ ಕ್ಷಮೆ ಕೇಳಬೇಕು ಎಂದು ಹೇಳಿದೆ.

    Live Tv
    [brid partner=56869869 player=32851 video=960834 autoplay=true]

  • ಆಸ್ಪತ್ರೆಯ 8ನೇ ಮಹಡಿಯಿಂದ ಜಿಗಿದ ರೋಗಿ – ವೀಡಿಯೋ ವೈರಲ್

    ಆಸ್ಪತ್ರೆಯ 8ನೇ ಮಹಡಿಯಿಂದ ಜಿಗಿದ ರೋಗಿ – ವೀಡಿಯೋ ವೈರಲ್

    ಕೋಲ್ಕತ್ತಾ: ಕೋಲ್ಕತ್ತಾದ ಇನ್‍ಸ್ಟಿಟ್ಯೂಟ್ ಆಫ್ ನ್ಯೂರೋ ಸೈನ್ಸ್ ಆಸ್ಪತ್ರೆಯ ಎಂಟನೇ ಮಹಡಿಯಿಂದ ಜಿಗಿದು ರೋಗಿಯೊಬ್ಬ ತೀವ್ರವಾಗಿ ಗಾಯಗೊಂಡಿದ್ದಾನೆ.

    ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿ ತನ್ನ ಬೆಡ್‍ನಿಂದ ತಪ್ಪಿಸಿಕೊಂಡು 8ನೇ ಮಹಡಿಯಲ್ಲಿದ್ದ ಕಿಟಕಿಯಿಂದ ತೂರಿಕೊಂಡು ಹೊರಬಂದು ಕಾರ್ನಿಸ್‍ನ ಅಂಚಿನಲ್ಲಿ ಕುಳಿತುಕೊಂಡಿದ್ದನು. ಈ ವೇಳೆ ಅಗ್ನಿಶಾಮಕ ದಳ, ಪೊಲೀಸರು ಮತ್ತು ಆಸ್ಪತ್ರೆ ಅಧಿಕಾರಿಗಳು ಆತನನ್ನು ಮರಳಿ ಬರುವಂತೆ ಒತ್ತಾಯಿಸಿದರು. ವ್ಯಕ್ತಿಯನ್ನು ಕೆಳಗೆ ಇಳಿಸಲು ಹಲವಾರು ಪ್ರಯತ್ನಗಳನ್ನು ಮಾಡಿದರು. ಆದರೆ ಯಾರನ್ನು ಕೂಡ ವ್ಯಕ್ತಿ ತನ್ನ ಸಮೀಪ ಬರಲು ಬಿಡಲಿಲ್ಲ. ಇದನ್ನೂ ಓದಿ: ಅಗ್ನಿಪಥ್ ಯೋಜನೆಯನ್ನು ಕಾಂಗ್ರೆಸ್ ಸರ್ಕಾರ ರೂಪಿಸಿದೆ: ಅಚ್ಚರಿ ಹೇಳಿಕೆ ಕೊಟ್ಟ ಸವದಿ

    ರೋಗಿಯನ್ನು ಸುಧೀರ್ ಎಂದು ಗುರುತಿಸಲಾಗಿದ್ದು, ಮಧ್ಯಾಹ್ನ 1:10ರ ಸುಮಾರಿಗೆ ಮೇಲಿನಿಂದ ಕೆಳಗೆ ಬಿದ್ದಿದ್ದಾನೆ. ಘಟನೆಯಲ್ಲಿ ವ್ಯಕ್ತಿ ತೀವ್ರವಾಗಿ ಗಾಯಗೊಂಡಿದ್ದು, ಆತನ ತಲೆಬುರುಡೆ, ಪಕ್ಕೆಲುಬು ಮತ್ತು ಎಡಗೈಗೆ ತೀವ್ರ ಪೆಟ್ಟಾಗಿದೆ. ಸದ್ಯ ಸುಧೀರ್ ಸ್ಥಿತಿ ಗಂಭಿರವಾಗಿದ್ದು, ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಕುಟುಂಬ ರಾಜಕಾರಣ ಮಾಡೋರಿಗೆ ಮಹಾರಾಷ್ಟ್ರದಲ್ಲಿ ತಕ್ಕ ಪಾಠವಾಗಿದೆ: ಪ್ರತಾಪ್ ಸಿಂಹ

    Live Tv

  • ನನ್ನ ಜೀವಕ್ಕೆ ಅಪಾಯವಿದೆ, 4 ವಾರ ಕಾಲಾವಕಾಶ ನೀಡಿ: ಪೊಲೀಸರಿಗೆ ನೂಪುರ್ ಮೇಲ್

    ನನ್ನ ಜೀವಕ್ಕೆ ಅಪಾಯವಿದೆ, 4 ವಾರ ಕಾಲಾವಕಾಶ ನೀಡಿ: ಪೊಲೀಸರಿಗೆ ನೂಪುರ್ ಮೇಲ್

    ಕೋಲ್ಕತ್ತಾ: ಅಮಾನತುಗೊಂಡ ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾಗೆ ಕೋಲ್ಕತ್ತಾ ಪೊಲೀಸ್ ಠಾಣೆ ನೋಟಿಸ್ ಜಾರಿಗೊಳಿಸಿದ್ದು, ಇದಕ್ಕೆ ನೂಪುರ್ ಶರ್ಮಾ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ಜೀವಕ್ಕೆ ಅಪಾಯವಿದೆ, ಪೊಲೀಸ್ ಠಾಣೆಗೆ ಹಾಜರಾಗಲು 4 ವಾರಗಳ ಕಾಲಾವಕಾಶ ನೀಡಿ ಎಂದು ಕೋರಿದ್ದಾರೆ.

    ಕೋಲ್ಕತ್ತಾ ಪೊಲೀಸರ ನೋಟಿಸ್‌ಗೆ ಪ್ರತಿಕ್ರಿಯೆಯಾಗಿ ಇ-ಮೇಲ್ ಕಳುಹಿಸಿರುವ ನೂಪುರ್ ಶರ್ಮಾ, 4 ವಾರಗಳ ನಂತರ ಪೊಲೀಸ್ ಠಾಣೆಗೆ ಹಾಜರಾಗುತ್ತೇನೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಪೊಲೀಸರಿಗೆ ಯಾವ ದಿನಾಂಕದಂದು ಹಾಜರಾಗುತ್ತಾರೆ ಎಂದು ಸ್ಪಷ್ಟಪಡಿಸಿಲ್ಲ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಕೇಂದ್ರ ಸಚಿವೆ ಸ್ಮೃತಿ ಇರಾನಿಗೆ ಕೊರೊನಾ

    ಪ್ರವಾದಿ ಮೊಹಮ್ಮದ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಬಳಿಕ ದೇಶದ ವಿವಿಧ ಭಾಗಗಳಲ್ಲಿ ನೂಪುರ್ ವಿರುದ್ಧ ಬೆಂಕಿ ಹೊತ್ತಿಕೊಂಡಿತ್ತು. ಪಶ್ಚಿಮ ಬಂಗಾಳ, ಕೋಲ್ಕತ್ತಾ ಸೇರಿದಂತೆ ಹಲವೆಡೆ ನೂಪುರ್ ಹೆಸರಿನಲ್ಲಿ ಎಫ್‌ಐಆರ್ ದಾಖಲಾಗಿದೆ. ಇದನ್ನೂ ಓದಿ: ಆಕ್ಸಿಜನ್ ಕೊಡೋಕೆ ಆಗದವರು ಈಗ ಯೋಗ ಮಾಡುವುದಕ್ಕೆ ಬಂದಿದ್ದಾರೆ: ಸಿದ್ದರಾಮಯ್ಯ

    ನೂಪುರ್ ವಿರುದ್ಧದ ದೂರಿನ ಆಧಾರದ ಮೇಲೆ ಕೋಲ್ಕತ್ತಾದ ನರಕೊಂಡ ಪೊಲೀಸ್ ಠಾಣೆ ನೂಪುರ್‌ಗೆ ಜೂನ್ 20ರ ಒಳಗಾಗಿ ಹಾಜರಾಗುವಂತೆ ನೋಟಿಸ್ ಕಳುಹಿಸಿತ್ತು. ಆದರೆ ಇದನ್ನು ಮುಂದೂಡುವಂತೆ ನೂಪುರ್ ಮನವಿ ಮಾಡಿದ್ದಾರೆ.

    Live Tv

  • ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ – ಇಂಟರ್‌ನೆಟ್ ಸ್ಥಗಿತ, 70 ಮಂದಿ ಅರೆಸ್ಟ್

    ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ – ಇಂಟರ್‌ನೆಟ್ ಸ್ಥಗಿತ, 70 ಮಂದಿ ಅರೆಸ್ಟ್

    ಕೋಲ್ಕತ್ತಾ: ಪ್ರವಾದಿ ಮೊಹಮ್ಮದ್ ಪೈಗಂಬರ್ ಅವಹೇಳನ ಮಾಡಿದ್ದನ್ನು ಖಂಡಿಸಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಹೌರಾ ಪೊಲೀಸರು 70 ಜನರನ್ನು ಬಂಧಿಸಿದ್ದಾರೆ.

    ಹಿಂಸಾಚಾರದ ಹಿನ್ನೆಲೆಯಲ್ಲಿ ಹೌರಾ ಜಿಲ್ಲೆಯಲ್ಲಿ ಜೂನ್ 13 ಬೆಳಗ್ಗೆ 6 ಗಂಟೆಯವರಗೆ ಇಂಟರ್‌ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಇದನ್ನೂ ಓದಿ: ಕೋಮು ದ್ವೇಷಭಾಷಣ – ಓವೈಸಿ, ನೂಪುರ್ ಶರ್ಮಾ ವಿರುದ್ಧ FIR

    ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಪಡೆಗಳನ್ನು ನಿಯೋಜಿಸುವಂತೆ ಗೃಹ ಸಚಿವ ಅಮಿತ್ ಶಾ ಅವರನ್ನು ಬಿಜೆಪಿ ಒತ್ತಾಯಿಸಿದೆ. ಬಿಜೆಪಿ ಸಂಸದ ಮತ್ತು ಪಶ್ಚಿಮ ಬಂಗಾಳದ ಬಿಜೆಪಿ ಉಪಾಧ್ಯಕ್ಷ ಸೌಮಿತ್ರಾ ಖಾನ್ ಅವರು ಅಮಿತ್ ಶಾ ಅವರಿಗೆ ರಾಜ್ಯದಲ್ಲಿ ಕೇಂದ್ರ ಪಡೆಗಳನ್ನು ನಿಯೋಜಿಸುವಂತೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಪ್ರವಾದಿ ವಿರುದ್ಧ ಅವಹೇಳನ – ಕ್ರಮಕ್ಕೆ ಆಗ್ರಹಿಸಿ ದೇಶಾದ್ಯಂತ ಮುಸ್ಲಿಮರ ಪ್ರತಿಭಟನೆ, ಬುರ್ಕಾ ಧರಿಸಿ ಬೀದಿಗಿಳಿದ ಮಹಿಳೆಯರು

    ಶುಕ್ರವಾರದ ಪ್ರಾರ್ಥನೆಯ ನಂತರ ಜಮ್ಮುಕಾಶ್ಮೀರ, ದೆಹಲಿ, ಉತ್ತರ ಪ್ರದೇಶ, ತೆಲಂಗಾಣ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಪ್ರತಿಭಟನಾಕಾರರು ನೂಪುರ್ ಶರ್ಮಾ ಅವರ ಬಂಧನಕ್ಕೆ ಆಗ್ರಹಿಸಿ ಫಲಕಗಳನ್ನು ಹಿಡಿದುಕೊಂಡು ಪ್ರತಿಭಟಿಸುತ್ತಿದ್ದಾರೆ.