Tag: kolkata

  • ಮಮತಾ ಬ್ಯಾನರ್ಜಿಗೆ ಸಾಹಿತ್ಯ ಗೌರವ ಸಿಗುತ್ತಿರುವುದು ಅವಮಾನ: ಪ್ರಶಸ್ತಿ ಹಿಂದಿರುಗಿಸಿದ ಲೇಖಕಿ

    ಮಮತಾ ಬ್ಯಾನರ್ಜಿಗೆ ಸಾಹಿತ್ಯ ಗೌರವ ಸಿಗುತ್ತಿರುವುದು ಅವಮಾನ: ಪ್ರಶಸ್ತಿ ಹಿಂದಿರುಗಿಸಿದ ಲೇಖಕಿ

    ಕೋಲ್ಕತ್ತಾ: ಸಾಹಿತ್ಯದ ಕೊಡುಗೆಗಾಗಿ ವಿಶೇಷ ಪ್ರಶಸ್ತಿಯನ್ನು ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ನೀಡಲು ಸಾಹಿತ್ಯ ಅಕಾಡೆಮಿ ನಿರ್ಧರಿಸಿದೆ. ಆದರೆ ಬಂಗಾಳಿ ಲೇಖಕಿ ಮತ್ತು ಜಾನಪದ ಸಂಸ್ಕೃತಿ ಸಂಶೋಧಕಿ ಇದನ್ನು ವಿರೋಧಿಸಿ ತನಗೆ ಬಂದಿದ್ದ ಪ್ರಶಸ್ತಿಯನ್ನು ಹಿಂದಿರುಗಿಸಿದ್ದಾರೆ.

    2019 ರಲ್ಲಿ ‘ಪಶ್ಚಿಮಬಂಗಾ ಬಾಂಗ್ಲಾ ಅಕಾಡೆಮಿ’ ರತ್ನಾ ರಶೀದ್ ಬ್ಯಾನರ್ಜಿ ಅವರಿಗೆ ‘ಅನ್ನದ ಶಂಕರ್ ಸ್ಮಾರಕ ಸಮ್ಮಾನ್’ ಪ್ರಶಸ್ತಿ ಕೊಟ್ಟು ಗೌರವಿಸಿತ್ತು. ಆದರೆ ಇದನ್ನು ರತ್ನಾ ರಶೀದ್ ಬ್ಯಾನರ್ಜಿ ಹಿಂದಿರುಗಿಸಿದ್ದಾರೆ. ಈ ಕುರಿತು ರತ್ನಾ ರಶೀದ್ ಅವರು ಶಿಕ್ಷಣ ಸಚಿವೆ ಮತ್ತು ಅಕಾಡೆಮಿ ಅಧ್ಯಕ್ಷೆ ಬ್ರತ್ಯಾ ಬಸು ಅವರಿಗೆ ಪತ್ರ ಬರೆದಿದ್ದು, ರವೀಂದ್ರನಾಥ ಟ್ಯಾಗೋರ್ ಜನ್ಮದಿನದಂದು ಸಿಎಂಗೆ ಹೊಸ ಸಾಹಿತ್ಯ ಪ್ರಶಸ್ತಿ ಪ್ರದಾನ ಮಾಡಲು ನಿರ್ಧರಿಸಲಾಗಿದೆ. ಇದರಿಂದ ನನಗೆ ನೀಡಿರುವ ಪ್ರಶಸ್ತಿ ಮುಳ್ಳಿನ ಕಿರೀಟವಾಗಿ ಪರಿಣಮಿಸಿದೆ. ಅದಕ್ಕೆ ನಾನು ಈ ಪತ್ರವನ್ನು ಹಿಂದಿರುಗಿಸಲು ನಿರ್ಧರಿಸಿದ್ದೇನೆ ಎಂದು ಬರೆದಿದ್ದಾರೆ. ಇದನ್ನೂ ಓದಿ: 80ಕ್ಕೂ ಹೆಚ್ಚು ಮಕ್ಕಳನ್ನ ಕಾಡುತ್ತಿದೆ ಟೊಮೆಟೊ ಜ್ವರ – ಏನಿದರ ಲಕ್ಷಣ? 

    ಸಿಎಂಗೆ ಸಾಹಿತ್ಯ ಪ್ರಶಸ್ತಿ ನೀಡುವ ಕ್ರಮದಿಂದ ಬರಹಗಾರ್ತಿಯಾಗಿ ನನಗೆ ಅವಮಾನವಾಗಿದೆ. ಇದು ಕೆಟ್ಟ ನಿರ್ಧಾರವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಸೋಮವಾರ ಬಾಂಗ್ಲಾ ಅಕಾಡೆಮಿ ಟ್ಯಾಗೋರ್ ಅವರ ಜನ್ಮದಿನದ ಹಿನ್ನೆಲೆ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಕಾರ್ಯಕ್ರಮಕ್ಕೆ ಮಮತಾ ಬ್ಯಾನರ್ಜಿ ಅವರು ಆಗಮಸಿದ್ದರು. ಈ ವೇಳೆ ಅಕಾಡೆಮಿಯು ಮಮತಾ ಬ್ಯಾನರ್ಜಿ ಅವರ 900ಕ್ಕೂ ಹೆಚ್ಚು ಕವನ ಸಂಕಲನ ‘ಕಬಿತಾ ಬಿಟನ್’ ಪುಸ್ತಕ ಈ ವರ್ಷ ಅತ್ಯುತ್ತಮ ಪುಸ್ತಕ ಎಂದು ಹೇಳಿ ಪ್ರಶಸ್ತಿ  ಘೋಷಿಸಿತು. ಈ ಕಾರ್ಯಕ್ರಮದಲ್ಲಿ ಸಿಎಂ ಉಪಸ್ಥಿತರಿದ್ದರೂ ಬಸು ಅವರ ಪರವಾಗಿ ಪ್ರಶಸ್ತಿಯನ್ನು ಸ್ವೀಕರಿಸಿದ್ದರು.

    Ratna Rashid Banerjee Returns Award As Mamata Banerjee Gets Literary Honour

    ರತ್ನಾ ರಶೀದ್ ಬ್ಯಾನರ್ಜಿ ಅವರು 30ಕ್ಕೂ ಹೆಚ್ಚು ಲೇಖನಗಳು ಮತ್ತು ಸಣ್ಣ ಕಥೆಗಳನ್ನು ಬರೆದಿದ್ದಾರೆ. ಅವರು ಸಮಾಜದ ಅಂಚಿನಲ್ಲಿರುವ ವರ್ಗಗಳನ್ನು ಒಳಗೊಂಡಂತೆ ಜಾನಪದ ಸಂಸ್ಕೃತಿಯ ಕುರಿತು ಸಂಶೋಧನಾ ಕಾರ್ಯಗಳನ್ನು ಮಾಡಿದ್ದಾರೆ. ಇದನ್ನೂ ಓದಿ: ಕರ್ತವ್ಯದ ವೇಳೆ ಕಂಠಪೂರ್ತಿ ಕುಡಿದು ರಂಪಾಟ ಮಾಡಿದ ಸರ್ಕಾರಿ ನೌಕರ 

    2020ರ ಅಂತಾರಾಷ್ಟ್ರೀಯ ಕೋಲ್ಕತ್ತಾ ಪುಸ್ತಕ ಮೇಳದಲ್ಲಿ ಮಮತಾ ಬ್ಯಾನರ್ಜಿ ಅವರ ‘ಕಬಿತಾ ಬಿಟಾನ್’  ಕವನ ಸಂಕಲನ ಬಿಡುಗಡೆಯಾಗಿತ್ತು.

  • ಅನುಮಾನಸ್ಪದವಾಗಿ ಬಿಜೆಪಿ ಕಾರ್ಯಕರ್ತನ ಶವ ಪತ್ತೆ

    ಅನುಮಾನಸ್ಪದವಾಗಿ ಬಿಜೆಪಿ ಕಾರ್ಯಕರ್ತನ ಶವ ಪತ್ತೆ

    ಕೋಲ್ಕತ್ತಾ: ಬಿಜೆಪಿ ಕಾರ್ಯಕರ್ತರೊಬ್ಬರು ನಿಗೂಢವಾಗಿ ಸಾವನ್ನಪ್ಪಿದ್ದು, ಉತ್ತರ ಕೋಲ್ಕತ್ತಾದ ಕಾಶಿಪುರ ಪ್ರದೇಶದಲ್ಲಿ ಶುಕ್ರವಾರ ಬೆಳಗ್ಗೆ ಮೃತದೇಹ ಪತ್ತೆಯಾಗಿದೆ.

    ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಅರ್ಜುನ್ ಚೌರಾಸಿಯಾ ಅವರ ಮೃತದೇಹವು ಘೋಷ್ ಬಗಾನ್ ಪ್ರದೇಶದ ಕಟ್ಟಡವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಘಟನೆ ಕುರಿತು ಬಿಜೆಪಿಯು ಆಡಳಿತಾರೂಢ ಟಿಎಂಸಿ ವಿರುದ್ಧ ಕೊಲೆಗೈದಿದ್ದಾರೆ ಎಂದು ಆರೋಪಿಸಿದೆ. ಆದರೆ ಈ ಆರೋಪವನ್ನು ಟಿಎಂಸಿಯು ನಿರಾಕರಿಸಿದೆ.

    ಈ ಮಧ್ಯೆ ಎರಡು ದಿನಗಳ ರಾಜ್ಯ ಪ್ರವಾಸದಲ್ಲಿರುವ ಶಾ ಇಂದು ಮಧ್ಯಾಹ್ನ ಚೌರಾಸಿಯಾ ನಿವಾಸಕ್ಕೆ ಭೇಟಿ ನೀಡಿದ್ದಾರೆ ಎಂದು ರಾಜ್ಯ ಬಿಜೆಪಿಯ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ. ಅವರು ಪಕ್ಷದ ದಕ್ಷ ಕಾರ್ಯಕರ್ತರಾಗಿದ್ದರು ಎಂದು ರಾಜ್ಯ ಬಿಜೆಪಿ ವಕ್ತಾರ ಸಾಮಿಕ್ ಭಟ್ಟಾಚಾರ್ಯ ಹೇಳಿದ್ದಾರೆ. ಈ ಸುದ್ದಿ ಕೇಳಿದ ನಂತರ ಅಮಿತ್ ಶಾ ಬೇಸರಗೊಂಡಿದ್ದಾರೆ. ಘಟನೆ ಹಿನ್ನೆಲೆ ಎನ್‍ಎಸ್‍ಸಿ ಬೋಸ್ ವಿಮಾನ ನಿಲ್ದಾಣದಲ್ಲಿ ಅವರ ಭವ್ಯ ಸ್ವಾಗತವನ್ನು ರದ್ದುಗೊಳಿಸಲು ಅವರು ನಮಗೆ ಹೇಳಿದ್ದಾರೆ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ. ಇದನ್ನೂ ಓದಿ: ರಾಯಚೂರಿನಲ್ಲಿ ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ ಪೊಲೀಸರ ಜಂಟಿ ಸಭೆ

    ಶಾ ಅವರು ತಮ್ಮ ಎರಡು ದಿನಗಳ ಭೇಟಿಯ ಎರಡನೇ ಹಂತದಲ್ಲಿ ಉತ್ತರ ಬಂಗಾಳದಿಂದ ನಗರಕ್ಕೆ ಆಗಮಿಸಲಿದ್ದಾರೆ. ಬಿಜೆಪಿ ಆರೋಪವನ್ನು ತಳ್ಳಿಹಾಕಿದ ಟಿಎಂಸಿ ಸಂಸದ ಸಂತಾನು ಸೇನ್, ನಮ್ಮ ವಿರುದ್ಧದ ಆರೋಪಗಳು ಆಧಾರ ರಹಿತವಾಗಿವೆ. ಪೊಲೀಸರು ಈ ವಿಷಯವನ್ನು ತನಿಖೆ ಮಾಡಲಿ ಎಂದು ಹೇಳಿದ್ದಾರೆ.

    ಘಟನೆಯ ಕುರಿತು ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಚೌರಾಸಿಯಾ ಅವರ ಕುಟುಂಬದವರು ಅವರ ಸಾವಿನ ಬಗ್ಗೆ ಸಿಬಿಐ ತನಿಖೆಗೆ ಒತ್ತಾಯಿಸಿದ್ದಾರೆ. ಆದರೆ ಪೊಲೀಸರು ಸ್ಥಳದಿಂದ ಶವವನ್ನು ತೆಗೆದುಕೊಂಡು ಹೋಗಲು ಪ್ರಯತ್ನಿಸಿದಾಗ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇದನ್ನೂ ಓದಿ: ಬಿಜೆಪಿ ನಾಯಕನನ್ನು ದೆಹಲಿ ಪೊಲೀಸರಿಗೆ ಮಾತ್ರ ಹಸ್ತಾಂತರಿಸುತ್ತೇವೆ: ಹರಿಯಾಣ ಗೃಹ ಸಚಿವ

    ಘಟನಾ ಸ್ಥಳಕ್ಕೆ ದೌಡಾಯಿಸಿ ಭಾರೀ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಪರಿಸ್ಥಿತಿ ನಿಯಂತ್ರಿಸಲು ಮುಂದಾಗಿದ್ದಾರೆ. ಕೇಂದ್ರ ಗೃಹ ಸಚಿವರು ರಾಜ್ಯದಲ್ಲಿದ್ದಾಗ ಬಿಜೆಪಿ ಕಾರ್ಯಕರ್ತನನ್ನು ಹತ್ಯೆ ಮಾಡಿರುವುದು ನಾಚಿಕೆಗೇಡಿನ ಸಂಗತಿ ಎಂದು ಕೇಂದ್ರ ಶಿಕ್ಷಣ ಖಾತೆ ರಾಜ್ಯ ಸಚಿವ ಸುಭಾಸ್ ಸರ್ಕಾರ್ ಹೇಳಿದ್ದಾರೆ.

    ಶಾ ಅವರ ಭೇಟಿಯ ಸಂದರ್ಭದಲ್ಲಿ ಸಮಸ್ಯೆಯನ್ನು ಸೃಷ್ಟಿಸಲು ಕೇಸರಿ ಪಾಳಯದಲ್ಲಿನ ಆಂತರಿಕ ಕಲಹದಿಂದ ಇದು ಆತ್ಮಹತ್ಯೆಯೇ ಅಥವಾ ಕೊಲೆಯೇ ಎಂದು ಟಿಎಂಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕುನಾಲ್ ಘೋಷ್ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಕೇಸರಿ ಪಾಳಯದವರು ನಿರ್ಮಿಸಿರುವ ಚಿತ್ರಕಥೆ ಇದು ಎಂದರು. ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಹತ್ಯೆಗಳ ಕುರಿತು ಶಾ ಗುರುವಾರ ಟಿಎಂಸಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.

  • ತನಗಿಂತ 28 ವರ್ಷ ಚಿಕ್ಕವಳ ಕೈಹಿಡಿದ ಮಾಜಿ ಕ್ರಿಕೆಟಿಗ ಅರುಣ್ ಲಾಲ್

    ತನಗಿಂತ 28 ವರ್ಷ ಚಿಕ್ಕವಳ ಕೈಹಿಡಿದ ಮಾಜಿ ಕ್ರಿಕೆಟಿಗ ಅರುಣ್ ಲಾಲ್

    ಕೋಲ್ಕತ್ತಾ: ಭಾರತದ ಮಾಜಿ ಕ್ರಿಕೆಟಿಗ ಅರುಣ್ ಲಾಲ್ ನಿನ್ನೆ ತನಗಿಂತ 28 ವರ್ಷ ಚಿಕ್ಕವಳಾಗಿರುವ ಶಿಕ್ಷಕಿ ಬುಲ್ ಬುಲ್ ಸಹಾಳನ್ನು ವರಿಸಿದ್ದಾರೆ.

    ಸೋಮವಾರ ಕೋಲ್ಕತ್ತಾದಲ್ಲಿ  ಬುಲ್ ಬುಲ್ ಶಾ ಅವರನ್ನು ಅರುಣ್ ಲಾಲ್ ಕೈಹಿಡಿದಿದ್ದಾರೆ. ಬಳಿಕ ನವದಂಪತಿ ಕೇಕ್ ಕಟ್ ಮಾಡಿದ್ದಾರೆ. ಇತ್ತ ಬುಲ್ ಬುಲ್ ಅವರು ಕೈಗೆ ಮೆಹಂದಿ ಹಾಕಿ ಫೋಟೋ ತೆಗೆಸಿಕೊಂಡಿದ್ದಾರೆ. ಇದೀಗ ಈ ಎರಡು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿವೆ. ಅಲ್ಲದೆ ಕುಟುಂಬದವರಿಗೆ ಹಾಗೂ ಗೆಳೆಯರಿಗೆ ನವದಂಪತಿ ಸೋಶಿಯಲ್ ಮೀಡಿಯಾ ಮೂಲಕ ಧನ್ಯವಾದಗಳನ್ನು ತಿಳಿಸಿದ್ದಾರೆ.

    66 ವರ್ಷದ ಅರುಣ್ ಲಾಲ್ ಪ್ರಸ್ತುತ ಪಶ್ಚಿಮ ಬಂಗಾಳದ ಮುಖ್ಯ ಕೋಚ್ ಆಗಿದ್ದಾರೆ. ವರದಿಗಳ ಪ್ರಕಾರ, ಲಾಲ್ ಮತ್ತು ಸಹಾ ಬಹುಕಾಲದಿಂದ ಸಂಬಂಧ ಹೊಂದಿದ್ದರು. ಲಾಲ್ ಅವರ ಮೊದಲ ಪತ್ನಿ ರೀನಾ ಅವರಿಂದ ಒಪ್ಪಿಗೆ ಪಡೆದ ನಂತರವೇ ಅವರು ಈ 2ನೇ ಮದುವೆ ಪ್ಲ್ಯಾನ್ ಮಾಡಿದ್ದಾರೆ. ಇದನ್ನೂ ಓದಿ: ಬಂಧನದಲ್ಲಿರುವ ರಾಣಾ ದಂಪತಿ ನಿವಾಸದಲ್ಲಿ ಅಕ್ರಮ ಕಟ್ಟಡ – ಬಿಎಂಸಿ ನೋಟೀಸ್

    ಈಗಾಗಲೇ ಅವರು ತಮ್ಮ ಮೊದಲ ಪತ್ನಿಯೊಂದಿಗೆ ವಿಚ್ಛೇದನ ಪಡೆದಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಮೊದಲ ಪತ್ನಿಯೊಂದಿಗೆ ಸದ್ಯಕ್ಕೆ ಲಾಲ್ ವಾಸಿಸುತ್ತಿದ್ದಾರೆ. ಲಾಲ್ ಅವರ ಮುದುವೆಯ ಆಮಂತ್ರಣ ಪತ್ರಿಕೆಯ ಚಿತ್ರವೂ ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ಭಾರೀ ಸುದ್ದಿಯಾಗಿತ್ತು.

    ಅರುಣ್ ಲಾಲ್ ಅವರು ಭಾರತಕ್ಕಾಗಿ ಒಟ್ಟು 29 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು, 850 ರನ್‍ಗಳನ್ನು ಗಳಿಸಿದ್ದಾರೆ ಮತ್ತು 7 ವಿಕೆಟ್‍ಗಳನ್ನು ಕಬಳಿಸಿದ್ದಾರೆ. ನಂತರ ಅವರು 2016ರಲ್ಲಿ ದವಡೆಯ ಕ್ಯಾನ್ಸರ್‌ ಗೆ ಒಳಗಾಗಿದ್ದರು. ಮೊದಲು ಬಹುಪಾಲು ದೇಶೀಯ ಮತ್ತು ಅಂತರಾಷ್ಟ್ರೀಯ ಪಂದ್ಯಗಳಿಗೆ ಕಾಮೆಂಟರಿ ಬಾಕ್ಸ್ ನಲ್ಲಿ ಪ್ರಮುಖ ಮುಖವಾಗಿದ್ದವರು.

  • ಹೃದಯಗಳ ರಾಣಿ ಮಮತಾ ಲೋಕಸಭೆ ಚುನಾವಣೆಯಲ್ಲಿ ಗೇಮ್ ಚೇಂಜರ್ ಆಗಲಿದ್ದಾರೆ: ಶತ್ರುಘ್ನ ಸಿನ್ಹಾ

    ಹೃದಯಗಳ ರಾಣಿ ಮಮತಾ ಲೋಕಸಭೆ ಚುನಾವಣೆಯಲ್ಲಿ ಗೇಮ್ ಚೇಂಜರ್ ಆಗಲಿದ್ದಾರೆ: ಶತ್ರುಘ್ನ ಸಿನ್ಹಾ

    ಕೋಲ್ಕತ್ತಾ: 2024ರ ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಳ ಸಿಎಂ ಮತ್ತು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ನಿಜವಾದ ಗೇಮ್ ಚೇಂಜರ್ ಆಗಲಿದ್ದಾರೆ ಎಂದು ಸಂಸದ ಶತ್ರುಘ್ನ ಸಿನ್ಹಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಈ ತಿಂಗಳ ಆರಂಭದಲ್ಲಿ ನಡೆದ ಉಪಚುನಾವಣೆಯಲ್ಲಿ ಅಸನ್ಸೋಲ್ ಲೋಕಸಭಾ ಕ್ಷೇತ್ರವನ್ನು ಗೆದ್ದ ಶತ್ರುಘ್ನ ಸಿನ್ಹಾ ಮಾಧ್ಯಮದ ಜೊತೆ ಮಾತನಾಡಿ, ನಾನು ಹೃದಯಗಳ ರಾಣಿ ಮಮತಾ ಬ್ಯಾನರ್ಜಿ ಅವರಿಂದ ಪ್ರಭಾವಿತನಾಗಿದ್ದೇನೆ. ಅವರು ಎಲ್ಲರೂ ಗೌರವಿಸಲ್ಪಡುವ ನಾಯಕಿಯಾಗಿದ್ದಾರೆ. 2024ರ ಚುನಾವಣೆಯಲ್ಲಿ ಅವರು ನಿಜವಾದ ಆಟ ಬದಲಾಯಿಸುವವರು ಎಂಬುದನ್ನು ನೋಡಲು ನಾವು ನಮ್ಮ ಕೈಲಾದಷ್ಟು ಪ್ರಯತ್ನಿಸುತ್ತೇವೆ ಎಂದರು. ಇದನ್ನೂ ಓದಿ: ಹನುಮಾನ್ ಚಾಲೀಸಾ ವಿಚಾರದಲ್ಲಿ ಬಿಜೆಪಿ ಜನರ ದಾರಿ ತಪ್ಪಿಸುತ್ತಿದೆ: ಸಂಜಯ್ ರಾವತ್

    ರಾಜಕೀಯದಲ್ಲಿ ತಮ್ಮ ಪ್ರಯಾಣದ ಕುರಿತು ಮಾತನಾಡಿದ ಅವರು, ನನ್ನ ಸಾಮಾಜಿಕ ಜವಾಬ್ದಾರಿಯನ್ನು ಪೂರೈಸಲು ನಾನು ರಾಜಕೀಯಕ್ಕೆ ಬಂದಿದ್ದೇನೆ. ನಾನು ರಾಜಕೀಯ ನಾಯಕ ಜಯಪ್ರಕಾಶ್ ನಾರಾಯಣರಿಂದ ಪ್ರಭಾವಿತನಾಗಿದ್ದೆ ಎಂದು ತಿಳಿಸಿದರು. ಇದನ್ನೂ ಓದಿ: ನಿರ್ಗತಿಕನಿಗೆ ಸ್ನಾನ ಮಾಡಿಸಿದ ಪೊಲೀಸ್ ಆಫೀಸರ್ – ಸಾರ್ವಜನಿಕರಿಂದ ಭಾರೀ ಮೆಚ್ಚುಗೆ

    ಇದಲ್ಲದೆ ಬಿಜೆಪಿಯು ಪ್ರಜಾಪ್ರಭುತ್ವದಿಂದ ನಿರಂಕುಶ ಪ್ರಭುತ್ವವಾಗಿ ಮಾರ್ಪಟ್ಟಿರುವುದರಿಂದ ಬಿಜೆಪಿಯನ್ನು ತೊರೆದು ಅಖಿಲ ಭಾರತ ತೃಣಮೂಲ ಕಾಂಗ್ರೆಸ್‍ಗೆ ಸೇರಿದ್ದೇನೆ ಎಂದು ಹೇಳಿದರು.

    ಅಟಲ್ ಬಿಹಾರಿ ವಾಜಪೇಯಿ ಅವರ ಸಂಪುಟದಲ್ಲಿ ಸಚಿವರಾಗಿದ್ದ ಅವರು, ವಾಜಪೇಯಿ ಮತ್ತು ಎಲ್ ಕೆ ಅಡ್ವಾಣಿಯವರಿದ್ದಾಗ ಬಿಜೆಪಿ ಪ್ರಜಾಸತ್ತಾತ್ಮಕ ಪಕ್ಷವಾಗಿತ್ತು. ಆದರೆ ಪ್ರಧಾನಿ ಮೋದಿ ನಡೆಸುತ್ತಿರುವ ಇಂದಿನ ಬಿಜೆಪಿ ನಿರಂಕುಶ ಪ್ರಭುತ್ವವಾಗಿದೆ ಎಂದು ದೂರಿದರು.

    ಉಪಚುನಾವಣೆಯಲ್ಲಿ ಬಿಜೆಪಿಯ ಅಗ್ನಿಮಿತ್ರ ಪಾಲ್ ಅವರನ್ನು 3 ಲಕ್ಷಕ್ಕೂ ಹೆಚ್ಚು ಮತಗಳಿಂದ ಶತ್ರುಘ್ನ ಸಿನ್ಹಾ ಸೋಲಿಸಿದ್ದರು. ಈ ಹಿಂದೆ ಪಶ್ಚಿಮ ಬಂಗಾಳದ ಅಸನ್ಸೋಲ್‍ನಲ್ಲಿ ಟಿಎಂಸಿ ಹಿಂದೆಂದೂ ಗೆದ್ದಿರಲಿಲ್ಲ.

  • ಇಲ್ಲಿ ಮಸೀದಿ, ಮಂದಿರಗಳೆಲ್ಲವೂ ನಮ್ಮ ದೇಹದಂತೆ ಒಟ್ಟಿಗೆ ಇರುತ್ತವೆ: ಮಮತಾ

    ಇಲ್ಲಿ ಮಸೀದಿ, ಮಂದಿರಗಳೆಲ್ಲವೂ ನಮ್ಮ ದೇಹದಂತೆ ಒಟ್ಟಿಗೆ ಇರುತ್ತವೆ: ಮಮತಾ

    ಕೋಲ್ಕತ್ತಾ: ನಮ್ಮ ಸರ್ಕಾರ ಜಾತಿ ಅಥವಾ ಧರ್ಮದ ಆಧಾರದ ಮೇಲೆ ಜನರನ್ನು ವಿಭಜಿಸುವುದಿಲ್ಲ. ಇಲ್ಲಿ ಮಸೀದಿ, ಮಂದಿರ, ಗುರುದ್ವಾರಗಳೆಲ್ಲವೂ ನಮ್ಮ ದೇಹಗಳಂತೆ ಒಟ್ಟಿಗೆ ಇರುತ್ತವೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

    WEST BENGAL

    ಕೋಲ್ಕತ್ತಾದ ಬೆಂಗಾಲ್ ಜಾಗತಿಕ ವ್ಯಾವಹಾರಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ದೇಶದ ಯಾವುದೇ ಭಾಗದಿಂದ ಬಂದವರಾಗಿದ್ದರೂ, ಬಂಗಾಳದಲ್ಲಿ ನಮ್ಮ ಕುಟುಂಬದ ಭಾಗವಾಗಿದ್ದಾರೆ. ಇಲ್ಲಿ ಎಲ್ಲರೂ ಆರಾಮದಾಯಕವಾಗಿರಬೇಕು. ಇಲ್ಲಿ ನೀವು ಗುಜರಾತ್ ಅಥವಾ ಮಹಾರಾಷ್ರದವರು ಎಂಬುದನ್ನು ಮರೆತುಬಿಡಿ, ನೀವೂ ನಮ್ಮ ಕುಟುಂಬದ ಸದಸ್ಯರಿದ್ದಂತೆ. ಇಲ್ಲಿನ ಮಸೀದಿ, ಮಂದಿರ, ಗುರುದ್ವಾರಗಳೆಲ್ಲವೂ ನಮ್ಮ ದೇಹಗಳಂತೆ ಒಟ್ಟಿಗೇ ಇರುತ್ತವೆ ಎಂದು ತಿಳಿಸಿದರು. ಇದನ್ನೂ ಓದಿ: ರಾಜ್ಯದಲ್ಲಿ ಎಲ್ಲಿಯೇ ಕೋಮು ಗಲಭೆ ನಡೆದರೂ ಅದಕ್ಕೆ ಕಾಂಗ್ರೆಸ್ ನೇರ ಹೊಣೆ: ಅಶೋಕ್

    ಇದೇ ವೇಳೆ ಏಜೆನ್ಸಿಗಳಿಂದ ಕೈಗಾರಿಕೋದ್ಯಮಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧಂಖರ್ ಅವರಿಗೆ ಒತ್ತಾಯಿಸಿದರು.

  • 15 ವರ್ಷದ ಹುಡುಗಿ ಮೇಲೆ ಅತ್ಯಾಚಾರ- ಇಬ್ಬರು ಅಪ್ರಾಪ್ತರು ಸೇರಿ ನಾಲ್ವರ ಬಂಧನ

    ಕೋಲ್ಕತ್ತಾ: ಇತ್ತೀಚೆಗಷ್ಟೇ ಹಿಂಸಾಚಾರ ಕೃತ್ಯ ನಡೆದು, ತನಿಖೆ ಸಿಬಿಐ ಹಂತದಲ್ಲಿರುವಾಗಲೇ ಪಶ್ಚಿಮ ಬಂಗಳಾದ ಬೀರ್ಭುಮ್ ಜಿಲ್ಲೆಯಲ್ಲಿ ಅಪ್ರಾಪ್ತ ಹುಡುಗಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಏಪ್ರಿಲ್ 14ರ ರಾತ್ರಿ 15 ವರ್ಷದ ಅಪ್ರಾಪ್ತ ಹುಡುಗಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಇಂದು ಬೆಳಕಿಗೆ ಬಂದಿದೆ.

    CRIME 2

    ಘಟನೆಗೆ ಸಂಬಂಧಿಸಿದಂತೆ 14 ವರ್ಷದ ಇಬ್ಬರು ಹುಡುಗರು ಸೇರಿ ನಾಲ್ವರು ಆರೋಪಿಗಳನ್ನು ಬೀರ್ಭುಮ್ ಜಿಲ್ಲೆಯಲ್ಲಿ ಬಂಧಿಸಲಾಗಿದ್ದು, ಆರೋಪಿಗಳು ಸ್ಥಳೀಯ ಬುಡಕಟ್ಟು ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಲಕ್ಷ್ಮೀರಾಮ್ ಸೂರೇನ್ ಮತ್ತು ಸುನೀಲ್ ಇಬ್ಬರು ಯುವಕರನ್ನು ಭಾನುವಾರ ತಡರಾತ್ರಿ ಪರುಯಿ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರದೇಶದಲ್ಲಿ ಬಂಧಿಸಿದ ಕೆಲವೇ ಗಂಟೆಗಳಲ್ಲಿ ಅಪ್ರಾಪ್ತ ಬಾಲಕರನ್ನೂ ಪತ್ತೆಹಚ್ಚಲಾಗಿದೆ ಎಂದು ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದಾರೆ. ಇದನ್ನೂ ಓದಿ: ತಂದೆಯನ್ನು ಕೊಂದ ಮಾನಸಿಕ ಅಸ್ವಸ್ಥೆ ಅರೆಸ್ಟ್

    ಹುಡುಗಿಯು ಇಲ್ಲಿನ ಶಾಂತಿನಿಕೇತನ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರದೇಶದಲ್ಲಿ ಸ್ಥಳೀಯ ಯುವಕನೊಂದಿಗೆ ಕುಳಿತಿದ್ದಾಗ, ಆತನನ್ನು ಗೆಳೆಯನೆಂದು ಭಾವಿಸಿ, ಕೆಲ ಯುವಕರು ಇಬ್ಬರ ಮೇಲೆ ಮೇಲೆ ಹಲ್ಲೆ ನಡೆಸಿ, ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದೆ.

    CRIME (1)

    ಸ್ಥಳೀಯ ನ್ಯಾಯಾಲಯವು ಸೋಮವಾರ ಇಬ್ಬರು ಯುವಕರನ್ನು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ಅಪ್ರಾಪ್ತ ಬಾಲಕರನ್ನು ರಿಮ್ಯಾಂಡ್ ರೂಂಗೆ ಕಳುಹಿಸಲಾಗಿದೆ. ಪೊಲೀಸರು ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಅತ್ಯಾಚಾರದಲ್ಲಿ ನಾಲ್ವರು ಭಾಗಿಯಾಗಿದ್ದಾರೆಯೇ ಇಲ್ಲವೇ ಎಂಬುದನ್ನು ತನಿಖೆ ನಡೆಸಲಾಗುತ್ತಿದೆ ಎಂದು ಬಿರ್ಭೂಮ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಂದ್ರ ನಾಥ್ ತ್ರಿಪಾಠಿ ಎಚ್‌ಟಿಗೆ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇದನ್ನೂ ಓದಿ: ಸಿನಿಮೀಯ ರೀತಿ ದರೋಡೆಕೋರನನ್ನೇ ಹಿಡಿದ ಮನೆಯವರು

    ಪಶ್ಚಿಮ ಬಂಗಾಳ ಮಹಿಳಾ ಆಯೋಗದ ಅಧ್ಯಕ್ಷೆ ಲೀನಾ ಗಂಗೋಪಾಧ್ಯಾಯ ಅವರು ಬಾಲಕಿಯನ್ನು ಭೇಟಿಯಾಗಿ, ಆಕೆಯ ಕುಟುಂಬಸ್ಥರು ಹಾಗೂ ಪೊಲೀಸರೊಂದಿಗೆ ಮಾತುಕತೆ ನಡೆಸಿದ್ದಾರೆ.

  • ಗ್ಯಾಂಗ್ ರೇಪ್‍ಗೈದು ಗುಪ್ತಾಂಗಕ್ಕೆ ಸೀಮೆಎಣ್ಣೆ ಸುರಿದು ಸಜೀವ ದಹನಕ್ಕೆ ಯತ್ನ

    ಕೋಲ್ಕತ್ತಾ: 40 ವರ್ಷದ ಮಹಿಳೆಯೊಬ್ಬಳ ಮೇಲೆ ಐವರು ಸಾಮೂಹಿಕ ಅತ್ಯಾಚಾರ ಎಸಗಿದ್ದು, ಆರೋಪಿಗಳು ಮಹಿಳೆಯ ಗುಪ್ತಾಂಗಕ್ಕೆ ಸೀಮೆಎಣ್ಣೆ ಸುರಿದು ಸಜೀವ ದಹನ ಮಾಡಲು ಯತ್ನಿಸಿದ ಘಟನೆ ಪಶ್ಚಿಮ ಬಂಗಾಳದ ನಮ್ಖಾನಾ ಗ್ರಾಮದಲ್ಲಿ ನಡೆದಿದೆ.

    ದೂರಿನ ಪ್ರಕಾರ, ಮಹಿಳೆಯು ಬೆಳಗ್ಗೆ 4 ಗಂಟೆ ಸುಮಾರಿಗೆ ವಾಶ್‍ರೂಮ್ ಬಳಸಲು ಹೊರಗೆ ಹೋದಾಗ ಅಪಹರಿಸಿದ್ದಾರೆ. ಮನೆಯಲ್ಲಿ ಒಬ್ಬಳೇ ಇದ್ದಾಗ ಆರೋಪಿಗಳು ಆಕೆಯನ್ನು ಅಪಹರಿಸಿ ಎರಡನೇ ಮಹಡಿಗೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದರು. ನಂತರ ಆರೋಪಿಗಳು ಆಕೆಯ ಗುಪ್ತಾಂಗಕ್ಕೆ ಸೀಮೆಎಣ್ಣೆ ಸುರಿದು ಸಜೀವ ದಹನ ಮಾಡಲು ಯತ್ನಿಸಿದ್ದಾರೆ. ಇದನ್ನೂ ಓದಿ: ನಿನ್ನ ಪತ್ನಿಯನ್ನು ರಾತ್ರಿ ಕಳುಹಿಸು ಎಂದ ಬಾಸ್ – ಬೆಂಕಿ ಹಚ್ಚಿಕೊಂಡು ವ್ಯಕ್ತಿ ಆತ್ಮಹತ್ಯೆ

    ಸಂತ್ರಸ್ತೆಯ ಕಿರುಚಾಟವು ಆಕೆಯ ಅಕ್ಕ ಪಕ್ಕದ ಮನೆಗೆ ಕೇಳಿಸಿದೆ. ಕೂಡಲೇ ಅವರು ಅವಳ ಸಹಾಯಕ್ಕೆ ಬಂದಿದ್ದಾರೆ. ನೆರೆಹೊರೆಯವರು ಬರುತ್ತಿರುವುದನ್ನು ಕಂಡ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನೆಯಿಂದ ಭಯಭೀತಳಾಗಿದ್ದ ಮಹಿಳೆ ತಕ್ಷಣ ಪೊಲೀಸರಿಗೆ ದೂರು ನೀಡಲಿಲ್ಲ. ಆದರೆ, ಶನಿವಾರದಿಂದ ಆಕೆಯ ಆರೋಗ್ಯ ಹದಗೆಡಲಾರಂಭಿಸಿತು. ಹೀಗಾಗಿ ಆರಂಭದಲ್ಲಿ ಆಕೆಯನ್ನು ನಮ್ಖಾನಾ ಬ್ಲಾಕ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಭಾನುವಾರ ಆಕೆಯನ್ನು ಕಾಕದ್ವೀಪ್ ಆಸ್ಪತ್ರೆಗೆ ವರ್ಗಾಯಿಸಲಾಗಿದೆ. ಇದನ್ನೂ ಓದಿ: ಕೇಂದ್ರೀಯ ವಿವಿ ವಿದ್ಯಾರ್ಥಿಗಳ ಮೇಲೆ ಹಲ್ಲೆ – ಮೂವರ ವಿರುದ್ಧ FIR

    ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಖಾನಾ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಸಂತ್ರಸ್ತೆಯ ಪತಿಯ ಹಿರಿಯ ಸಹೋದರ ಮತ್ತು ಸಂಬಂಧಿ ಎಂದು ಗುರುತಿಸಲಾಗಿದೆ. ಈಗಾಗಲೇ ಸಾಮೂಹಿಕ ಅತ್ಯಾಚಾರದ ಪ್ರಕರಣ ದಾಖಲಾಗಿದ್ದು, ವೈದ್ಯಕೀಯ ವರದಿಗಾಗಿ ಕಾಯಲಾಗುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸುಂದರಬನ್ ಭಾಸ್ಕರ್ ಮುಖರ್ಜಿ ತಿಳಿಸಿದ್ದಾರೆ.

    ದಕ್ಷಿಣ 24 ಪರಗಣದ ನಮ್ಖಾನಾ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯಲ್ಲಿ ಈ ಘಟನೆ ಸಂಭವಿಸಿದೆ.

  • ಇದು ಅತ್ಯಾಚಾರವೋ? ಅಥವಾ ಅವಳು ಗರ್ಭಿಣಿಯೋ?: ಮಮತಾ ಬ್ಯಾನರ್ಜಿ ಪ್ರಶ್ನೆ

    ಇದು ಅತ್ಯಾಚಾರವೋ? ಅಥವಾ ಅವಳು ಗರ್ಭಿಣಿಯೋ?: ಮಮತಾ ಬ್ಯಾನರ್ಜಿ ಪ್ರಶ್ನೆ

    ಕೊಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಂಗಳವಾರದಂದು ನಾಡಿಯಾ ಜಿಲ್ಲೆಯಲ್ಲಿ 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೊಳಗಾದ ವರದಿಗಳ ಬಗ್ಗೆ ಇದು ಅತ್ಯಾಚಾರವೋ? ಅಥವಾ ಅವಳು ಗರ್ಭಿಣಿಯಾಗಿದ್ದಾಳೋ? ಎಂದು ಬಿಜೆಪಿ ಮತ್ತು ಮಾಧ್ಯಮಗಳ ವಿರುದ್ಧ ಕಿಡಿಕಾರಿದ್ದಾರೆ.

    ಅತ್ಯಾಚಾರದಿಂದ ಅಪ್ರಾಪ್ತ ಬಾಲಕಿ ಸಾವನ್ನಪ್ಪಿದ್ದಾರೆ ಎಂದು ಬಿಜೆಪಿಯವರು ತೋರಿಸುತ್ತಿರುವ ಈ ಕಥೆಯನ್ನು ನೀವು ಅತ್ಯಾಚಾರ ಎಂದು ಕರೆಯುತ್ತೀರಾ? ಅವಳು ಗರ್ಭಿಣಿಯಾಗಿದ್ದಳೋ ಅಥವಾ ಪ್ರೇಮ ಸಂಬಂಧ ಹೊಂದಿದ್ದಾಳೋ? ಅವರು ವಿಚಾರಿಸಿದ್ದಾರೆಯೇ? ಈ ಕುರಿತು ನಾನು ಸ್ವತಃ ಪೊಲೀಸರನ್ನು ಕೇಳಿದೆ. ಅವರು ಈಗಾಗಲೇ ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಆ ಬಾಲಕಿಗೆ ಹುಡುಗನ ಜೊತೆ ಅನೈತಿಕ ಸಂಬಂಧ ಇದೆ ಅಂತಾನೂ ತಿಳಿಸಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್- ಟಿಎಂಸಿ ಮುಖಂಡನ ಮಗ ಬಂಧನ

    STOP RAPE

    ಹುಟ್ಟುಹಬ್ಬದ ಪಾರ್ಟಿಗೆ ಹೋದಾಗ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಲಾಗಿದ್ದು, ಬಾಲಕಿಯು ಇದೇ ಮಂಗಳವಾರ ನಿಧನರಾಗಿದ್ದಾಳೆ. ಸಂತ್ರಸ್ತೆಯ ಕುಟುಂಬವು ಸ್ಥಳೀಯ ತೃಣಮೂಲ ಕಾಂಗ್ರೆಸ್ ಪಂಚಾಯತ್ ನಾಯಕನ ಒತ್ತಡದ ಮೇರೆಗೆ ಶವಪರೀಕ್ಷೆ ಇಲ್ಲದೆ ಶವವನ್ನು ಸುಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಅವರ ಮಗ ಬ್ರಜ್ ಗೋಪಾಲ್ ಗೋಲಾ (21) ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದಾನೆ. ಘಟನೆ ನಡೆದ ಐದು ದಿನಗಳ ನಂತರ ಪೊಲೀಸ್ ದೂರು ದಾಖಲಾಗಿದೆ.

    ಎಪ್ರಿಲ್ 5 ರಂದು ಆಕೆ ಸಾವನ್ನಪ್ಪಿದ್ದು, ಅವಳ ಕುಟುಂಬ ಘಟನೆ ನಡೆದ ದಿನ ಪೊಲೀಸರ ಹತ್ತಿರ ಯಾಕೆ ಹೋಗಲಿಲ್ಲ? ಈಗಾಗಲೇ ಅವಳ ಶವವನ್ನು ಅವರು ಸುಟ್ಟುಹಾಕಿದ್ದಾರೆ. ಹಾಗಾದರೆ ಪೊಲೀಸರಿಗೆ ಎಲ್ಲಿ ಸಾಕ್ಷಿ ಸಿಗುತ್ತದೆ ಎಂದು ಮಮತಾ ಪ್ರಶ್ನಿಸಿದರು. ಇದನ್ನೂ ಓದಿ: ಶೀಘ್ರವೇ ಸ್ವಯಂ ಚಾಲಿತ ಕಾರುಗಳನ್ನು ಬಿಡುಗಡೆ ಮಾಡಲಿದ್ದಾರೆ ಮಸ್ಕ್

    ಇದು ಒಂದು ಪ್ರೇಮ ಸಂಬಂಧವಾಗಿತ್ತು. ಕುಟುಂಬಕ್ಕೆ ತಿಳಿದಿದ್ದರಿಂದ ಅದು ದೃಢೀಕರಿಸಲ್ಪಟ್ಟಿದೆ. ದಂಪತಿ ಸಂಬಂಧದಲ್ಲಿದ್ದರೆ ನಾನು ಅದನ್ನು ನಿಲ್ಲಿಸಬಹುದೇ? ಇದು ಯುಪಿ ಅಲ್ಲ. ನಾವು ಇಲ್ಲಿ ಲವ್ ಜಿಹಾದ್ ಮಾಡುವುದಿಲ್ಲ. ಇದು ಅವರ ವೈಯಕ್ತಿಕ ಸ್ವಾತಂತ್ರ್ಯ. ಆದರೆ ಯಾವುದೇ ಅವ್ಯವಹಾರ ನಡೆದರೆ ಪೆÇಲೀಸರು ಆರೋಪಿಗಳನ್ನು ಬಂಧಿಸುತ್ತಾರೆ. ಒಬ್ಬ ಶಂಕಿತನನ್ನು ಈಗಾಗಲೇ ಬಂಧಿಸಲಾಗಿದೆ ಎಂದು ತಿಳಿಸಿದರು.

    ಬಿಜೆಪಿ ಮತ್ತು ಮಾಧ್ಯಮಗಳನ್ನು ಮತ್ತಷ್ಟು ತರಾಟೆಗೆ ತೆಗೆದುಕೊಂಡ ಅವರು ಬೆಳಗ್ಗೆ ಬಿಜೆಪಿ ಮುಖ್ಯಾಂಶ ಏನೆಂದು ನಿರ್ಧರಿಸುತ್ತದೆ. ಸುದ್ದಿ ವಾಹಿನಿಗಳು ಅದನ್ನು ಅನುಸರಿಸುತ್ತವೆ. ಇಂಧನ ಬೆಲೆ ಏರಿಕೆ ಕುರಿತು ಅವರು ಎಷ್ಟು ಬಾರಿ ಚರ್ಚಿಸಿದ್ದಾರೆ ಹೇಳಿ? ದೆಹಲಿ ಗಲಭೆ, ಎನ್‍ಆರ್‌ಸಿ ಕುರಿತು ಅವರು ಎಷ್ಟು ಬಾರಿ ಚರ್ಚಿಸಿದ್ದಾರೆ ಹೇಳಿ ಎಂದು ಪ್ರಶ್ನೆಗಳ ಸುರಿಮಳೆಗೈದರು.

    ಈ ನಡುವೆ ಮೃತರಿಗೆ ನ್ಯಾಯ ದೊರಕಿಸಿಕೊಡುವಂತೆ ಆಗ್ರಹಿಸಿ ಸೋಮವಾರ ರಾಣಾಘಾಟ್‍ನಲ್ಲಿ ಬಿಜೆಪಿ 12 ಗಂಟೆಗಳ ಬಂದ್‍ಗೆ ಕರೆ ನೀಡಿದ್ದು, ಮೌನ ಪ್ರತಿಭಟನೆ ನಡೆಸುತ್ತಿದೆ. ಬಿಜೆಪಿ ನಾಯಕಿ ಅರ್ಚನಾ ಮಜುಂದಾರ್ ಕೂಡ ಸಂತ್ರಸ್ತ ಕುಟುಂಬವನ್ನು ಭೇಟಿ ಮಾಡಿದ್ದಾರೆ.

  • 2023ರಲ್ಲಿ ಭಾರತದ ಮೊದಲ ನೀರೊಳಗಿನ ಮೆಟ್ರೋ ಸುರಂಗ ಮಾರ್ಗ ಆರಂಭ

    2023ರಲ್ಲಿ ಭಾರತದ ಮೊದಲ ನೀರೊಳಗಿನ ಮೆಟ್ರೋ ಸುರಂಗ ಮಾರ್ಗ ಆರಂಭ

    ಕೋಲ್ಕತ್ತಾ: ಭಾರತದ ಮೊದಲ ನೀರೊಳಗಿನ ಮೆಟ್ರೋ ಸುರಂಗ ಮಾರ್ಗ ನಿರ್ಮಾಣವಾಗುತ್ತಿದ್ದು, ಇದು 2023ರ ವೇಳೆಗೆ ಪ್ರಯಾಣಕ್ಕೆ ಲಭ್ಯವಾಗಲಿದೆ.

    ಭಾರತದ ಮೊದಲ ನೀರೊಳಗಿನ ಮೆಟ್ರೋ ಸುರಂಗ ಮಾರ್ಗ ಪಶ್ಚಿಮ ಬಂಗಾಳ ರಾಜ್ಯದಲ್ಲಿ ನಿರ್ಮಾಣವಾಗುತ್ತಿದ್ದು, ಈ ಸುರಂಗ ಮಾರ್ಗ ಹೌರಾ ಹಾಗೂ ಕೋಲ್ಕತ್ತಾ ನಡುವೆ ಸಂಪರ್ಕವನ್ನು ಕಲ್ಪಿಸಲಿದೆ. 16.6 ಕಿ.ಮೀ ಉದ್ದದ ಸುರಂಗ ಮಾರ್ಗದ 520 ಮೀ. ನದಿ ತಳದಲ್ಲಿ ಇರಲಿದೆ. 33 ಮೀ. ನದಿಯ ತಳದ ವರೆಗೆ ಸುರಂಗವನ್ನು ನಿರ್ಮಿಸಲಾಗಿದೆ.

    ನೀರೊಳಗೆ ಸುರಕ್ಷತಾ ಕ್ರಮ:
    ನೀರೊಳಗಿನ ಮೆಟ್ರೋ ಸುರಂಗ ಮಾರ್ಗದ ಯೋಜನೆಯಲ್ಲಿ ಒದಗಿಸಲಾದ ಸೌಲಭ್ಯ ಹಾಗೂ ಸುರಕ್ಷತಾ ಕ್ರಮಗಳ ಕುರಿತು ಮಾತನಾಡಿದ ಸೈಟ್ ಮೇಲ್ವಿಚಾರಕ ಮಿಥುನ್ ಘೋಷ್, ತುರ್ತು ಸಂದರ್ಭಗಳಲ್ಲಿ ಪ್ರಯಾಣಿಕರನ್ನು ಸ್ಥಳಾಂತರಿಸಲು ಸುರಂಗಗಳಲ್ಲಿ ವಾಕ್‌ವೇಗಳು ಇರುತ್ತವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ದ್ವಿತೀಯ ಪಿಯುಸಿ ಪರಿಷ್ಕೃತ ವೇಳಾಪಟ್ಟಿ ಪ್ರಕಟ


    ನೀರಿನ ಸುರಂಗದ ಪ್ರದೇಶದಲ್ಲಿ ತಾಂತ್ರಿಕ ಸಮಸ್ಯೆ ಎದುರಾದರೆ, ವಿಶೇಷ ಮಾರ್ಗದ ಮೂಲಕ ಪ್ರಯಾಣಿಕರನ್ನು ಹೊರಕ್ಕೆ ಕರೆದೊಯ್ಯಬಹುದು. ಇದನ್ನು ಗಮನದಲ್ಲಿಟ್ಟುಕೊಂಡು ಪ್ರಮುಖ ಪ್ಯಾಸೇಜ್ ಕಾಮಗಾರಿಯನ್ನೂ ಮಾಡಲಾಗಿದೆ ಎಂದು ಮಿಥುನ್ ತಿಳಿಸಿದರು. ಇದನ್ನೂ ಓದಿ: ಅಡುಗೆ ಎಣ್ಣೆಯಿಂದ ತಯಾರಿಸಿದ ಇಂಧನದಲ್ಲಿ 3 ಗಂಟೆ ಹಾರಾಡಿತು ವಿಮಾನ

    ಪೂರ್ವ-ಪಶ್ಚಿಮ ಹೌರಾ ಮೆಟ್ರೋ ನಿಲ್ದಾಣದ ಸುಮಾರು ಶೇ.80 ರಷ್ಟು ಕೆಲಸ ಪೂರ್ಣಗೊಂಡಿದೆ. ಇದು 2023 ರಲ್ಲಿ ಪೂರ್ಣ ಪ್ರಮಾಣದ ಸೇವೆ ಪ್ರಾರಂಭಿಸುವ ನಿರೀಕ್ಷೆಯಿದೆ ಎಂದು ಹೇಳಿದರು.

  • ಯುಗಾದಿ ಹಬ್ಬಕ್ಕೆ ಗ್ರಾಹಕರಿಗೆ ಎಲ್‌ಪಿಜಿ ಶಾಕ್- ಬರೋಬ್ಬರಿ 250 ರೂ. ಏರಿಕೆ

    ಯುಗಾದಿ ಹಬ್ಬಕ್ಕೆ ಗ್ರಾಹಕರಿಗೆ ಎಲ್‌ಪಿಜಿ ಶಾಕ್- ಬರೋಬ್ಬರಿ 250 ರೂ. ಏರಿಕೆ

    ನವದೆಹಲಿ: ಕಳೆದ ಒಂದು ವಾರದಿಂದ ಸತತವಾಗಿ ಏರಿಕೆಯಾಗುತ್ತಿರುವ ಪೆಟ್ರೋಲ್-ಡೀಸೆಲ್ ದರದ ನಡುವೆ ವಾಣಿಜ್ಯ ಗ್ಯಾಸ್‌ ಸಿಲಿಂಡರ್ ಬೆಲೆಯೂ ಏರಿಕೆಯಾಗಿರುವುದು ಯುಗಾದಿ ಹಬ್ಬಕ್ಕೂ ಮುನ್ನವೇ ಗ್ರಾಹಕರಿಗೆ ಶಾಕ್ ನೀಡಿದಂತಾಗಿದೆ.

    ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು ಎಲ್‌ಪಿಜಿ ಸಿಲಿಂಡರ್ ಬೆಲೆಗಳನ್ನು ಮತ್ತೆ ಏರಿಕೆ ಮಾಡಿದೆ. ದೇಶದ ಅತಿದೊಡ್ಡ ತೈಲ ಕಂಪನಿಯಾದ ಇಂಡಿಯನ್ ಆಯಿಲ್ 19 ಕೆಜಿ ಸಿಲಿಂಡರ್ ಬೆಲೆಯನ್ನು ಬರೋಬ್ಬರಿ 250 ರೂ. ಗಳಷ್ಟು ಹೆಚ್ಚಿಸಿದೆ. ಎಲ್‌ಪಿಜಿ ಪರಿಷ್ಕೃತ ದರವನ್ನು ಇಂದು ಬಿಡುಗಡೆ ಮಾಡಲಾಗಿದ್ದು, ಎಲ್‌ಪಿಜಿ ಸಿಲಿಂಡರ್ ಬೆಲೆ ಇದೇ ಮೊದಲಬಾರಿಗೆ 250 ರೂ. ಏರಿಕೆಯಾಗಿರುವುದು ಕಂಡುಬಂದಿದೆ. ಇದನ್ನೂ ಓದಿ: ಎಲ್‌ಪಿಜಿ ಬಳಕೆದಾರರಿಗೆ ಶುಭಸುದ್ದಿ – ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 102.5 ರೂ. ಕಡಿತ

    LPG

    2021ರ ಅಕ್ಟೋಬರ್ 6 ರಿಂದ ದೇಶೀಯ ಎಲ್‌ಪಿಜಿ ಸಿಲಿಂಡರ್‌ಗಳ ದರದಲ್ಲಿ ಯಾವುದೇ ಬದಲಾವಣೆ ಕಂಡುಬಂದಿರಲಿಲ್ಲ. ಕಳೆದ ಮಾರ್ಚ್ 22ರಂದು ಪೆಟ್ರೋಲ್, ಡೀಸೆಲ್ ದರದೊಂದಿಗೆ ವಾಣಿಜ್ಯ ಗ್ಯಾಸ್‌ ಸಿಲಿಂಡರ್ ಬೆಲೆಯೂ 50 ರೂ. ಏರಿಕೆಯಾಗಿತ್ತು. ಇದರಿಂದ ಎಲ್‌ಪಿಜಿ ಸಿಲಿಂಡರ್ ಬೆಲೆ ದೆಹಲಿಯಲ್ಲಿ 949.50 ರೂ., ಕೋಲ್ಕತಾದಲ್ಲಿ 976 ರೂ., ಮುಂಬೈನಲ್ಲಿ 949.50 ರೂ., ಚೆನ್ನೈನಲ್ಲಿ 965.50 ರೂ.ಗೆ ಮಾರಾಟವಾಗುತ್ತಿತ್ತು. ಇದೀಗ 14 ಕೆ.ಜಿ. ಸಿಲಿಂಡರ್ ಬೆಲೆ ಯಥಾಸ್ಥಿತಿಯಲ್ಲಿದ್ದರೂ 19 ಕೆಜಿ ಸಿಲಿಂಡರ್ ಬೆಲೆಯನ್ನು ಹೆಚ್ಚಿಸಲಾಗಿದೆ. ಬೆಂಗಳೂರಿನಲ್ಲಿ 14 ಕೆ.ಜಿ. ಎಲ್‌ಪಿಜಿ ಸಿಲಿಂಡರ್‌ಗೆ 954.50 ರೂ. ಇದ್ದು, 19 ಕೆಜಿ ಎಲ್‌ಪಿಜಿ ಸಿಲಿಂಡರ್ ದರ 1685.50 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಇದನ್ನೂ ಓದಿ: ಪೆಟ್ರೋಲ್‌, ಡೀಸೆಲ್‌, ಎಲ್‌ಪಿಜಿ ಆಯ್ತು ಈಗ ಸಿಎನ್‌ಜಿ, ಪಿಎನ್‌ಜಿ ದರದಲ್ಲೂ ಏರಿಕೆ

    ಇಂದಿನಿಂದ ಬೆಲೆ ಹೆಚ್ಚಳ
    ಇಂದಿನಿಂದಲೇ ಬೆಲೆ ಹೆಚ್ಚಳವಾಗಿದ್ದು ರಾಷ್ಟ್ರ ರಾಜಧಾನಿಯಲ್ಲಿ 19 ಕೆಜಿ ಸಿಲಿಂಡರ್‌ನ ಬೆಲೆ ಪ್ರತಿ ಯೂನಿಟ್‌ಗೆ 2,253 ರೂ., ಕೋಲ್ಕತ್ತಾದಲ್ಲಿ ಸಿಲಿಂಡರ್ ಬೆಲೆ 2,351 ರೂ., ಮುಂಬೈ ಮತ್ತು ಚೆನ್ನೈನಲ್ಲಿ, ಇದು ಕ್ರಮವಾಗಿ ರೂ 2,205 ಮತ್ತು 2,406 ಬೆಲೆಗೆ ಮಾರಾಟವಾಗುತ್ತಿದೆ.