ಕೊಲ್ಕತ್ತಾ: ಪಶ್ಚಿಮ ಬಂಗಾಳದ ಪಾನಿಹಟಿ ಪುರಸಭೆಯಲ್ಲಿ ನಡೆದ ತೃಣಮೂಲ ಕಾಂಗ್ರೆಸ್ ಕೌನ್ಸಿಲರ್‌ನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಉತ್ತರ 24 ಪರಗಣ ಜಿಲ್ಲೆಯ ಪಾನಿಹಟಿ ಪುರಸಭೆಯ ವಾರ್ಡ್ ಸಂಖ್ಯೆ 8ರ ಟಿಎಂಸಿ ಕೌನ್ಸಿಲರ್ ಅನುಪಮ್ ದತ್ತಾ ಮೃತ ವ್ಯಕ್ತಿ ಹಾಗೂ ಶಂಭುನಾಥ್ ಪಂಡಿತ್ ಆರೋಪಿಯಾಗಿದ್ದಾರೆ. ಘಟನೆಗೆ ಸಂಬಂಧಿಸಿ ಅನುಪಮ್ ದತ್ತಾ ಅವರನ್ನು ಶಂಭುನಾಥ್ ಅವರು ಕೊಲೆ ಮಾಡುತ್ತಿರುವ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದರ ಆಧಾರದ ಮೇಲೆ ಪೊಲೀಸರು ಶಂಭುನಾಥ್ ಅವರನ್ನು ಬಂಧಿಸಿದ್ದಾರೆ.
ಅನುಪಮ್ ದತ್ತಾ ಸಂಜೆ ಅಗರ್ಪಾರಾದ ಉತ್ತರ ಸ್ಟೇಷನ್ ರಸ್ತೆಯಲ್ಲಿದ್ದಾಗ ಗುಂಡಿನ ದಾಳಿ ನಡೆದಿದೆ. ಇದರಿಂದಾಗಿ ಅನುಪಮ್ ಅವರ ತಲೆಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಬೆಂಗಳೂರು ಮ್ಯಾಚ್ ವೇಳೆ ಕ್ರೀಡಾಂಗಣಕ್ಕೆ ನುಗ್ಗಿದ ಅಭಿಮಾನಿಗಳು – ನಾಲ್ವರು ಅರೆಸ್ಟ್
ಪೊಲೀಸ್ ಕಮಿಷನರ್ ಮನೋಜ್ ಕುಮಾರ್ ವರ್ಮಾ ಮಾತನಾಡಿ, ಅನುಪಮ್ ದತ್ತಾ ಅಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ. ಕೊಲೆಯ ಹಿನ್ನೆಲೆಯ ಕುರಿತು ಶಂಭುನಾಥ್ ಪಂಡಿತ್ ಅವರನ್ನು ವಿಚಾರಣೆ ನಡೆಸುತ್ತಿದ್ದು, ಘಟನೆಗೆ ಸಂಬಂಧಿಸಿ ಇನ್ನಷ್ಟು ಮಂದಿಯನ್ನು ಬಂಧಿಸುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಳಪೆ ಪ್ರದರ್ಶನದ ನಂತರವೂ ಗಾಂಧಿ ಕುಟುಂಬಕ್ಕೆ ಸೀಮಿತವಾಯ್ತು ಪಕ್ಷ: ಸುಶೀಲ್ ಮೋದಿ ವಾಗ್ದಾಳಿ
ಕೋಲ್ಕತ್ತಾ: ಬೆಂಗಾಳಿ, ಹಿಂದಿ ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ನಟಿಸಿರುವ ರೂಪಾ ದತ್ತಾ, ಪಿಕ್‍ಪಾಕೆಟ್ ಪ್ರಕರಣದಲ್ಲಿ ಪೊಲೀಸರ ಅತಿಥಿಯಾಗಿದ್ದಾರೆ.
ನಡೆದಿದ್ದೇನು?: ಕೋಲ್ಕತ್ತಾದಲ್ಲಿ ಅಂತಾರಾಷ್ಟ್ರೀಯ ಮೇಳದಲ್ಲಿ ಭಾಗವಹಿಸಿದ್ದರು. ಈ ವೇಳೆ ರೂಪಾ ದತ್ತಾ, ಪರ್ಸ್‍ವೊಂದನ್ನು ಕಸದ ಬುಟ್ಟಿಗೆ ಎಸೆಯುತ್ತಿರುವುದನ್ನು ಪೊಲೀಸರೊಬ್ಬರು ನೋಡಿದ ನಂತರ ಶನಿವಾರ ಅವರನ್ನು ಬಂಧಿಸಲಾಗಿದೆ ಎಂದು ಬಿದಾನ್ ನಗರ್ ಉತ್ತರ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಬಂಧನದ ನಂತರ ವಿಚಾರಣೆ ವೇಳೆಯಲ್ಲಿ ಆಕೆ ನೀಡಿದ್ದ ಉತ್ತರಗಳು ಸಮರ್ಪಕವಾಗಿರಲಿಲ್ಲ. ಶೋಧನೆ ವೇಳೆ ಆಕೆಯ ಬ್ಯಾಗ್‍ನಿಂದ ಅನೇಕ ಪರ್ಸ್‍ಗಳು ಮತ್ತು 75 ಸಾವಿರ ರೂ. ನಗದು ಪತ್ತೆಯಾಗಿದೆ. ಆದರೆ ಈ ಹಣದ ಮೂಲದ ಬಗ್ಗೆ ರೂಪಾ ಯಾವುದೇ ಖಚಿತ ಮಾಹಿತಿ ನೀಡಿಲ್ಲ. ಗಮನ ಬೇರೆಡೆ ಸೆಳೆದು ಕಳ್ಳತನ ಆರೋಪದ ಮೇರೆಗೆ ನಟಿಯನ್ನು ಬಂಧಿಸಲಾಗಿದೆ. ಈ ಅಪರಾಧದಲ್ಲಿ ಹೆಚ್ಚಿನ ಜನರು ತೊಡಗಿಸಿಕೊಂಡರಬಹುದೇ ಎಂಬುದನ್ನು ತಿಳಿಯಲು ಹೆಚ್ಚಿನ ತನಿಖೆ ಮುಂದುವರೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ಇದನ್ನೂ ಓದಿ: ‘ಜೇಮ್ಸ್’ ಜೊತೆ ‘ಬೈರಾಗಿ’ ಟೀಸರ್ – ಪುನೀತ್ ಹುಟ್ಟುಹಬ್ಬಕ್ಕೆ ಶಿವಣ್ಣನ ಝಲಕ್
ಪ್ರಸ್ತುತ ರೂಪಾ ದತ್ತಾಗೆ ಒಂದು ದಿನದ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪೊಲೀಸರು ವಶಪಡಿಸಿಕೊಂಡ ಬ್ಯಾಗ್ ತನ್ನದಲ್ಲ ಎಂದಿರುವ ನಟಿ, ಅದು ಡಸ್ಟ್‌ಬಿನ್‌ನಿಂದ ಎತ್ತಿಕೊಂಡಿರುವ ಚೀಲ ಎಂದು ಹೇಳಿದ್ಧಾರೆ. ಇದನ್ನೂ ಓದಿ: ಭಾವುಕರಾಗಿ ಕಾರ್ಯಕ್ರಮ ಶುರು ಮಾಡಿದ ಅನುಶ್ರೀ
ಈ ಹಿಂದೆ ಅನುರಾಗ್ ಕಶ್ಯಪ್ ತಮಗೆ ಅನುಚಿತ ಸಂದೇಶ ಕಳುಹಿಸುತ್ತಿದ್ದಾರೆ ಎಂದು ನಟಿ ಆರೋಪಿಸಿದ್ದರು. ಕೆಲ ಕಾಲದ ನಂತರ ಅದು ನಿರ್ದೇಶಕ ಅನುರಾಗ್ ಕಶ್ಯಪ್ ಅಲ್ಲ, ಬೇರೆ ಅನುರಾಗ್ ಎನ್ನುವುದು ತಿಳಿದುಬಂದಿತ್ತು. ಇದೀಗ ಪಿಕ್ ಪಾಕೆಟ್ ಪ್ರಕರಣದಲ್ಲಿ ಪೊಲೀಸರ ಅಥಿತಿಯಾಗಿದ್ದಾರೆ.
ಕೋಲ್ಕತ್ತಾ: ಕಚ್ಚಾ ಬಾದಾಮ್ ಹಾಡನ್ನು ಹಾಡುವ ಮೂಲಕ ಫೇಮಸ್ ಆದ ಭುಬನ್ ಬಡ್ಯಾಕರ್ ಕೆಲವು ದಿನಗಳ ಹಿಂದೆ ನಾನು ಸೆಲೆಬ್ರಿಟಿಯಾಗಿದ್ದೇನೆ. ಹಾಗಾಗಿ ಕಡಲೆಕಾಯಿ ಮಾರಾಟ ಮಾಡುವ ತಮ್ಮ ಹಳೆಯ ಕೆಲಸಕ್ಕೆ ಹಿಂದಿರುಗುವುದಿಲ್ಲ ಎಂದಿದ್ದರು. ಆದರೀಗ ನಾನು ಕಡಲೆಕಾಯಿ ಮಾರಾಟ ಮಾಡುವುದನ್ನು ಎಂದಿಗೂ ನಿಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ.
ಇತ್ತೀಚೆಗಷ್ಟೇ ಭುಬನ್ ಬಡ್ಯಾಕರ್ ತಾವು ಖರೀದಿಸಿದ್ದ ಸೆಕೆಂಡ್ ಹ್ಯಾಂಡ್ ಕಾರನ್ನು ಓಡಿಸಲು ಕಲಿಯುತ್ತಿದ್ದ ವೇಳೆ ಗಾಯಗೊಂಡು ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಇದೀಗ ಗುಣಮುಖರಾಗಿರುವ ಭುಬನ್ ಬಡ್ಯಾಕರ್ ಇತ್ತೀಚೆಗೆ ಬೋಲ್ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ತಮ್ಮ ಕಡಲೆಕಾಯಿ ಮಾರಾಟ ಮಾಡುವ ಕೆಲಸವನ್ನು ಬಿಡುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಕಚ್ಚಾ ಬದಾಮ್ ಎಂದು ಹಾಡಿದ್ದವನ ಆತಂಕವೇನು ಗೊತ್ತಾ?
ನಾನು ಕಡಲೆಕಾಯಿ ಮಾರಾಟ ಮಾಡುವುದನ್ನು ಎಂದಿಗೂ ನಿಲ್ಲಿಸುವುದಿಲ್ಲ. ಏಕೆಂದರೆ ಅದು ನನ್ನ ಕುಟುಂಬಕ್ಕೆ ಆಹಾರ ಮತ್ತು ಬಟ್ಟೆಗಳನ್ನು ನೀಡಿದೆ. ನನ್ನ ಕೆಲಸ ನನಗೆ ಪವಿತ್ರವಾದದ್ದು, ಆದ್ದರಿಂದ ನಾನು ಅದನ್ನು ಬಿಡುವುದಿಲ್ಲ. ನಾನು ಸರಳ ವ್ಯಕ್ತಿ ಮತ್ತು ನಾನು ಸರಳವಾಗಿ ಇರಲು ಬಯಸುತ್ತೇನೆ ಎಂದು ತಿಳಿಸಿದ್ದಾರೆ.
ನಿಮಗೆ ಲಭಿಸಿರುವ ಖ್ಯಾತಿ ಕಡಲೆಕಾಯಿ ವ್ಯಾಪಾರದ ಮೇಲೆ ಪರಿಣಾಮ ಬೀರುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ನನಗೆ ಜನರ ಬೆಂಬಲ ಇರುವವರೆಗೆ, ಕಡಲೆಕಾಯಿ ಮಾರಾಟ ಮಾಡಲು ಹಳ್ಳಿಗಳಿಗೆ ಹೋಗಲು ನನಗೆ ಯಾವುದೇ ತೊಂದರೆ ಇಲ್ಲ ಎಂದಿದ್ದಾರೆ. ಇದನ್ನೂ ಓದಿ: ಇನ್‌ಸ್ಟಾಗ್ರಾಮ್ ನಲ್ಲಿ ಟ್ರೆಂಡ್ ಆಯ್ತು ಕಡಲೆಕಾಯಿ ಮಾರುವವನ ಹಾಡು
ಕೋಲ್ಕತ್ತಾ: ಮುಂಬರುವ 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಗೆಲುವು ರಾಷ್ಟ್ರದ ಚಿತ್ತವನ್ನು ಪ್ರತಿಬಿಂಬಿಸುತ್ತದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನಿರಾಕರಿಸಿದ್ದು, ಬಿಜೆಪಿಯವರು ಹಗಲುಗನಸು ಕಾಣುವುದನ್ನು ಬಿಡಬೇಕು ಎಂದು ಟಾಂಗ್ ನೀಡಿದರು.
ಬಿಜೆಪಿ ಗೆಲುವು ಜನಾದೇಶವಲ್ಲ. ಚುನಾವಣಾ ಯಂತ್ರಗಳು, ಕೇಂದ್ರ ಪಡೆಗಳು ಮತ್ತು ಏಜೆನ್ಸಿಗಳ ಸಹಾಯದಿಂದ ಗೆದ್ದಿದೆ ಎಂದು ಇತರ ರಾಜ್ಯಗಳ ಜೊತೆಗೆ ಉತ್ತರ ಪ್ರದೇಶದಲ್ಲಿ ಬಿಜೆಪಿ ಗೆಲುವಿನ ದಾಖಲೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದರು. ಇದನ್ನೂ ಓದಿ: ನಾನೊಬ್ಬ ಅಧ್ಯಕ್ಷ, ಆದರೆ ಅದಕ್ಕೂ ಮೊದಲು 2 ಮಕ್ಕಳ ತಂದೆ: ಉಕ್ರೇನ್ ಅಧ್ಯಕ್ಷ
2024 ರಲ್ಲಿ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಲೆಕ್ಕ ಹಾಕುತ್ತಿದೆ ಎಂಬ ಮಾತಿಗೆ ಅರ್ಥವಿಲ್ಲ. ರಾಜ್ಯ ಚುನಾವಣಾ ಫಲಿತಾಂಶಗಳು ಕೇಂದ್ರದಲ್ಲಿ ಆಡಳಿತ ಪಕ್ಷಕ್ಕೆ ಭಾರಿ ಉತ್ತೇಜನ ನೀಡಿರುವುದು ವಿರೋಧ ಪಕ್ಷಗಳ ಸಂಯುಕ್ತ ಒಕ್ಕೂಟಗಳನ್ನು ಪುನರುಜ್ಜೀವನಗೊಳಿಸಿದೆ ಎಂದರು.
ಕೋಲ್ಕತ್ತಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚುನಾವಣಾ ಯಂತ್ರಗಳು ಮತ್ತು ಕೇಂದ್ರೀಯ ಪಡೆಗಳು, ಏಜೆನ್ಸಿಗಳ ಸಹಾಯದಿಂದ ಬಿಜೆಪಿಯವರು ಗೆದ್ದಿದ್ದಾರೆ. ಕೆಲವು ರಾಜ್ಯಗಳಲ್ಲಿ ಈಗ ಅವರು ಜಿಗಿಯುತ್ತಿದ್ದಾರೆ. ಸದ್ಯ ಕೆಟಲ್ ಡ್ರಮ್ ಭಾರಿಸುತ್ತಿದ್ದರೂ ಅವರಿಗೆ ಸಂಗೀತ ನುಡಿಸಲು ಸಾಧ್ಯವಿಲ್ಲ. ಏಕೆಂದರೆ ಸಂಗೀತಕ್ಕೆ ನಿಮಗೆ ಹಾರ್ಮೋನಿಯಂ ಅಗತ್ಯವಿದೆ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಉಕ್ರೇನ್ ಮೇಯರ್ ಕಿಡ್ನಾಪ್ ಮಾಡಿದ ರಷ್ಯಾ ಸೇನೆ
ಇವಿಎಂ ತೆಗೆದಿದ್ದಕ್ಕಾಗಿ ವಾರಣಾಸಿಯ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರನ್ನು ಅಮಾನತುಗೊಳಿಸಲಾಗಿತ್ತು. ಇದು ದೊಡ್ಡ ವಿಷಯವಾಗಿದೆ. ಹೀಗಾಗಿ ಅಖಿಲೇಶ್ ಯಾದವ್ ಅವರನ್ನು ಸೋಲುವಂತೆ ಮಾಡಲಾಗಿದೆ ಎಂದು ನಾನು ಭಾವಿಸುತ್ತೇನೆ. ಇದರಲ್ಲಿ ಲೂಟಿ ನಡೆದಿದೆ. ಅಖಿಲೇಶ್ ಅವರು ಈ ವಿಚಾರವಾಗಿ ಖಿನ್ನತೆಗೆ ಒಳಗಾಗಬಾರದು ಮತ್ತು ಅಸಮಾಧಾನಗೊಳ್ಳಬಾರದು. ಅವರು ಜನರ ಬಳಿಗೆ ಹೋಗಿ ಈ ಬಗ್ಗೆ ತಿಳಿಸಿ ಬಿಜೆಪಿ ವಿರುದ್ಧ ಸವಾಲು ಹಾಕಬೇಕು ಎಂದು ತಿಳಿಸಿದರು. ಇದನ್ನೂ ಓದಿ: ರಷ್ಯಾ ಉಕ್ರೇನ್ ಮೇಲೆ ವ್ಯಾಕ್ಯೂಮ್ ಬಾಂಬ್ ಹಾಕುವುದು ಖಚಿತ ಎಂದ ಬ್ರಿಟನ್
ಜನರು ಮತ ಚಲಾಯಿಸಲು ಬಳಸಿದ ಮತ್ತು ನಂತರ ಎಣಿಕೆಗೆ ತಂದ ಯಂತ್ರಗಳೇ ಎಂಬುದನ್ನು ನೋಡಲು ಎಲ್ಲಾ ಇವಿಎಂಗಳನ್ನು ಫೋರೆನ್ಸಿಕ್ ಪರೀಕ್ಷೆಗೆ ಒಳಪಡಿಸಬೇಕು. ಬಿಜೆಪಿ ಗೆದ್ದಿದ್ದರೆ, ಅದು ಜನಮತದಿಂದ ಗೆದ್ದಿಲ್ಲ, ಇದು ಜನಾದೇಶವಲ್ಲ, ಯಂತ್ರೋಪಕರಣಗಳ ಆದೇಶ ಎಂದು ಹೇಳಿದರು.
ಇದೇ ವೇಳೆ 2024ರ ಚುನಾವಣೆಯ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ವಿರುದ್ಧ ಹೋರಾಡಲು ಬಯಸುವ ಎಲ್ಲಾ ರಾಜಕೀಯ ಪಕ್ಷಗಳು ಒಟ್ಟಾಗಿ ಕೆಲಸ ಮಾಡಬೇಕು ಎಂದು ನಾನು ಹೇಳುತ್ತೇನೆ. ಕಾಂಗ್ರೆಸ್ ಅನ್ನು ಅವಲಂಬಿಸುವುದರಲ್ಲಿ ಯಾವುದೇ ಅರ್ಥವಿಲ್ಲ. ಕಾಂಗ್ರೆಸ್ ಮೊದಲು ತಮ್ಮ ಸಂಘಟನೆಯ ಮೂಲಕ ಇಡೀ ದೇಶವನ್ನು ವಶಪಡಿಸಿಕೊಳ್ಳುತ್ತಿತ್ತು. ಆದರೆ ಈಗ ಅವರಿಗೆ ಆಸಕ್ತಿ ಇಲ್ಲ ಮತ್ತು ಜನರು ಅವರ ಮೇಲೆ ಇಟ್ಟಿರುವ ವಿಶ್ವಾಸವನ್ನು ಕಳೆದುಕೊಳ್ಳುತ್ತಿದ್ದಾರೆ. ಹಲವಾರು ಪ್ರಾದೇಶಿಕ ರಾಜಕೀಯ ಪಕ್ಷಗಳಿವೆ. ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು. ಆಗ ಈ ಬಗ್ಗೆ ಖಂಡಿತವಾಗಿಯೂ ನಿರ್ಧಾರ ತೆಗೆದುಕೊಳ್ಳಬಹುದು ಎಂದರು.
ಕೋಲ್ಕತ್ತಾ: ಬರ್ದ್ವಾನ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಕೋವಿಡ್ ವಾರ್ಡ್‍ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೋವಿಡ್ ಸೋಂಕಿತ ಸಾವನ್ನಪ್ಪಿದ್ದಾನೆ. ಇದರಿಂದ ಹಲವಾರು ಮಂದಿ ಗಾಬರಿಗೊಂಡಿದ್ದಾರೆ.
ಮೃತ ಸೋಂಕಿತ ಪೂರ್ವ ಬರ್ದ್ವಾನ್ ಜಿಲ್ಲೆಯ ನಿವಾಸಿ ಸಂಧ್ಯಾ ರಾಯ್ (60) ಎಂದು ಗುರುತಿಸಲಾಗಿದೆ. ಆಸ್ಪತ್ರೆಯೆ ರಾಧಾರಾಣಿ ವಾರ್ಡ್‍ನಲ್ಲಿ ಶನಿವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡಿದ್ದು, ಕೊರೊನಾ ಹೆಚ್ಚಾದಾಗಲಿಂದ ಇದನ್ನು ಕೋವಿಡ್ ವಾರ್ಡ್ ಆಗಿ ಪರಿವರ್ತಿಸಲಾಗಿದೆ. ಬೆಂಕಿ ಕಾಣಿಸಿಕೊಂಡಾಗ ಆರಂಭದಲ್ಲಿ ರೋಗಿಯ ಸಂಬಂಧಿಕರು ಬೆಂಕಿ ನಂದಿಸಲು ಯತ್ನಿಸಿದರು. ನಂತರ ಸ್ಥಳಕ್ಕೆ ಪೊಲೀಸರು ಆಗಮಿಸಿ ಅಗ್ನಿಶಾಮಕ ದಳವನ್ನು ಕರೆಸಲಾಯಿತು. ಇದನ್ನೂ ಓದಿ: ಗಟ್ಟಿಮೇಳ ಸೀರಿಯಲ್ ಖ್ಯಾತಿಯ ನಟ ರಕ್ಷಿತ್ ಆಯಂಡ್ ಗ್ಯಾಂಗ್‌ನಿಂದ ರಂಪಾಟ
ಒಂದು ಗಂಟೆಗಳ ಕಾಲ ಬೆಂಕಿ ನಂದಿಸುವ ಕಾರ್ಯ ಪೂರ್ಣಗೊಂಡ ಬಳಿಕ ಆಸ್ಪತ್ರೆ ತಮ್ಮ ಕಡೆಯಿಂದ ಯಾವುದೇ ತಪ್ಪಿಲ್ಲ ಎಂದು ಹೇಳುತ್ತಿದೆ. ಹೀಗಾಗಿ ಘಟನೆ ಕುರಿತಂತೆ ತನಿಖೆ ನಡೆಸಲು 5 ಸದಸ್ಯರ ತನಿಖಾ ತಂಡವನ್ನು ರಚಿಸಲಾಗಿದ್ದು, ಫೋರೆನ್ಸಿಕ್ ತನಿಖೆಯನ್ನೂ ನಡೆಸಲಾಗುವುದಾಗಿ ಬರ್ದ್ವಾನ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಪ್ರಾಂಶುಪಾಲ ಪ್ರಬೀರ್ ಸೇನ್‍ಗುಪ್ತಾ ತಿಳಿಸಿದ್ದಾರೆ. ಇದನ್ನೂ ಓದಿ: ಸಂಗೀತ್ ಕಾರ್ಯಕ್ರಮದಲ್ಲಿ ಸೂರಜ್ ಜೊತೆ ಮೌನಿ ರಾಯ್ ಲಿಪ್‍ಲಾಕ್
ಕೋಲ್ಕತ್ತಾ: ಕೋಲ್ಕತ್ತಾದ ರಸ್ತೆ ಅಪಘಾತದಲ್ಲಿ ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರಾ ಗಾಯಗೊಂಡಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಮದನ್ ಮಿತ್ರಾ ಅವರು ತೆರಳುತ್ತಿದ್ದ ವೇಳೆ ನಗರದ ಬಿಟಿ ರಸ್ತೆಯಲ್ಲಿ ಬೈಕ್‍ಗೆ ಲಾರಿ ಡಿಕ್ಕಿ ಹೊಡೆದಿದೆ. ಆದರೆ ಸ್ಥಳೀಯರು ಹೇಳುವಂತೆ ಮದನ್ ಮಿತ್ರಾ ಅವರಿಗೆ ಯಾವುದೇ ಗಂಭೀರವಾದ ಗಾಯಗಳು ಆಗಿಲ್ಲ. ಇದೀಗ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಇದನ್ನೂ ಓದಿ: IPS ರವಿ ಚೆನ್ನಣ್ಣವರ್ ವರ್ಗ ಆದೇಶಕ್ಕೆ ಬ್ರೇಕ್
Kolkata, West Bengal | TMC leader Madan Mitra met with an accident at BT road after a lorry hit his bike while he was on the way to attend a program, this evening. pic.twitter.com/AJq86aNvKW
ಟ್ರಾಫಿಕ್‍ನಿಂದ ತಪ್ಪಿಸಿಕೊಳ್ಳಲು ಕಾರಿನ ಬದಲು ಬೈಕಿನಲ್ಲಿ ತೆರಳಿದ್ದರು. ಈ ವೇಳೆ ನಗರದ ಬಿಟಿ ರಸ್ತೆಯಲ್ಲಿ ಬೈಕ್‍ಗೆ ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಕಳೆದ ವಾರ ಕಮಲದ ಹೂವತ್ತು ಕಿತ್ತು ದುರ್ಗ ಮಾತೆಗೆ ಅರ್ಪಿಸುವುದಿಲ್ಲ ಎಂದು ಹೇಳುವ ಮೂಲಕ ಭಾರೀ ಸುದ್ದಿಯಲ್ಲಿದ್ದರು. ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಇದನ್ನೂ ಓದಿ: ಹೂ ಕಟ್ಟುತ್ತಿದ್ದ ಯುವತಿ ಈಗ ಪಿಎಸ್‍ಐ..!
ಕೋಲ್ಕತ್ತಾ: ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮದಿನವಾದ ಕಾರಣ ಎಲ್ಲೆಡೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದೇ ರೀತಿ ಕೋಲ್ಕತ್ತಾ ಬಳಿಯ ಪಶ್ಚಿಮ ಬಂಗಾಳದ ಭಟ್ಪರಾ ಪಟ್ಟಣದಲ್ಲಿ ನೇತಾಜಿ ಕಾರ್ಯಕ್ರಮದಲ್ಲಿ ನಡೆಯುತ್ತಿ ವೇಳೆ ಟಿಎಂಸಿ (ತೃಣಮೂಲ ಕಾಂಗ್ರೆಸ್) ಮತ್ತು ಬಿಜೆಪಿ ಬೆಂಬಲಿಗರ ನಡುವೆ ಘರ್ಷಣೆ ಸಂಭವಿಸಿದೆ.
ಭಾಟ್ಪಾರಾದಲ್ಲಿ ನೇತಾಜಿಗೆ ಪುಷ್ಪ ನಮನ ಸಲ್ಲಿಸುತ್ತಿದ್ದಾಗ ಟಿಎಂಸಿ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರ ಮೇಲೆ ಮೇಲೆ ಕಲ್ಲು ತೂರಿದರು. ಪರಿಣಾಮ ಈ ಘರ್ಷಣೆಯನ್ನು ತಡೆಯಲು ಅರ್ಜುನ್ ಸಿಂಗ್ ಅವರ ಭದ್ರತಾ ಸಿಬ್ಬಂದಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ ಎಂದು ಬ್ಯಾರಕ್‍ಪುರ ಸಂಸದ ಅರ್ಜುನ್ ಸಿಂಗ್ ಆರೋಪಿಸಿದ್ದಾರೆ. ಇದನ್ನೂ ಓದಿ: ಸಲ್ಮಾನ್ ಫಾರ್ಮ್‍ಹೌಸ್‍ನಲ್ಲಿ ಸೆಲೆಬ್ರಿಟಿಗಳ ಶವ, ಮಕ್ಕಳ ಕಳ್ಳ ಸಾಗಾಣಿಕೆ ನಡೆಯುತ್ತೆ ಎಂದ ನೆರೆಮನೆಯವ!
ಈ ಗಲಾಟೆಯ ವೇಳೆ ಪೊಲೀಸ್ ವಾಹನ ಸೇರಿದಂತೆ ಎರಡು ಕಾರುಗಳನ್ನು ಧ್ವಂಸಗೊಳಿಸಲಾಗಿದೆ. ಬಿಜೆಪಿ ಸಂಸದರನ್ನು ರಕ್ಷಿಸಿ ಸುರಕ್ಷಿತವಾಗಿ ಅವರ ನಿವಾಸಕ್ಕೆ ಕಳುಹಿಸಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಧ್ರುಬಾ ಜ್ಯೋತಿ ಡೇ ತಿಳಿಸಿದ್ದಾರೆ. ಘಟನಾ ಸ್ಥಳದಲ್ಲಿ ಹಿರಿಯ ಅಧಿಕಾರಿಗಳ ಜೊತೆಗೆ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದರು.
ಏನಿದು ಘಟನೆ?
ಈ ಕುರಿತು ಅರ್ಜುನ್ ಸಿಂಗ್ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಇಂದು ಬೆಳಗ್ಗೆ 10:30ಕ್ಕೆ, ನಮ್ಮ ಶಾಸಕ ಪವನ್ ಸಿಂಗ್ ನೇತಾಜಿಗೆ ಶ್ರದ್ಧಾಂಜಲಿ ಸಲ್ಲಿಸಲು ಹೋಗಿದ್ದರು. ಟಿಎಂಸಿಯ ಕಾರ್ಯಕರ್ತರು ಅವರ ಮೇಲೆ ದಾಳಿ ಮಾಡಿದ್ದು, ಅವರ ಮೇಲೆ ಗುಂಡು ಹಾರಿಸಿದರು. ಇಟ್ಟಿಗೆಗಳನ್ನು ಎಸೆದು ದಾಳಿ ಮಾಡಲು ಪ್ರಯತ್ನಿಸಿದ್ದಾರೆ. ನಾನು ಅಲ್ಲಿಗೆ ಹೋದಾಗ ನನ್ನ ಮೇಲೂ ದಾಳಿ ಮಾಡಿದರು. ನನ್ನ ಕಾರಿನ ಮೇಲೆಯೂ ದಾಳಿ ಮಾಡಿದ್ದಾರೆ ಎಂದು ವಿವರಿಸಿದರು. ಇದನ್ನೂ ಓದಿ: ಜಿಲ್ಲೆಗೊಂದು ಮಠ ಮಾಡಲಿ ಮೂರನೇ ಪಂಚಮಸಾಲಿ ಪೀಠಕ್ಕೆ ನಮ್ಮ ಬೆಂಬಲ: ವಚನಾನಂದ ಸ್ವಾಮೀಜಿ
ಶನಿವಾರ ರಾತ್ರಿ, ಪಾನಿಹಟಿ ಪ್ರದೇಶದ ಬಿಟಿ ರಸ್ತೆಯಲ್ಲಿರುವ ಟಿಎಂಸಿ ಪಕ್ಷದ ಕಚೇರಿಯ ಮೇಲೆ ಬಿಜೆಪಿ ಕಾರ್ಯಕರ್ತರು ಬಾಂಬ್‍ಗಳನ್ನು ಎಸೆದು ದಾಳಿ ಮಾಡಿದ್ದಾರೆ. ಈ ಹಿನ್ನೆಲೆ ಅವರು ಬಿಜೆಪಿ ಮೇಲೆ ದಾಳಿ ಮಾಡಿಸಿದ್ದಾರೆ. ಎರಡೂ ಘಟನೆಗಳ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು, ಇನ್ನೂ ಯಾರನ್ನು ಬಂಧಿಸಿಲ್ಲ ಎಂದು ಪೊಲೀಸರು ತಿಳಿಸಿದರು.
ಕೋಲ್ಕತ್ತಾ: ಥರ್ಮಾಕೋಲ್ ಫ್ಯಾಕ್ಟರಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಪಶ್ಚಿಮ ಬಂಗಾಳದ ಹೌರಾದಲ್ಲಿ ನಡೆದಿದೆ.
ಈ ಬಗ್ಗೆ ಕಾರ್ಖಾನೆಯ ಕಾರ್ಮಿಕ ಪಂಚನ್ ಮಲ್ಲಿಕ್ ಮಾತನಾಡಿ, ಬೆಂಕಿ ಹೊತ್ತಿಕೊಂಡಾಗ ಕಾರ್ಮಿಕರು ಕಾರ್ಖಾನೆಯೊಳಗೆ ಕೆಲಸ ಮಾಡುತ್ತಿದ್ದರು. ಒಟ್ಟಾರೆಯಾಗಿ ಕಾರ್ಖಾನೆಯೊಳಗೆ 200-250 ಮಂದಿ ಕೆಲಸ ಮಾಡುತ್ತಿದ್ದಾರೆ. ಆರಂಭದಲ್ಲಿ ಬೆಂಕಿಯನ್ನು ನಿಯಂತ್ರಿಸಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ನಂತರ ಮೂರು ಅಗ್ನಿಶಾಮಕ ದಳದ ವಾಹನಗಳು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದೆ ಎಂದು ತಿಳಿಸಿದರು.
ಕಂಪನಿ ಮೇಲ್ವಿಚಾರಕಿ ಸುನೇತ್ರಾ ಚಟ್ಟೋಪಾಧ್ಯಾಯ ಮಾತನಾಡಿ, ಬೆಂಕಿಯಲ್ಲಿ ಸಿಲುಕಿದ್ದ ಎಲ್ಲಾ ಕಾರ್ಮಿಕರನ್ನು ರಕ್ಷಿಸಲಾಗಿದೆ. ಕಾರ್ಖಾನೆಯೊಳಗೆ ಬೆಂಕಿ ನಂದಿಸುವ ವ್ಯವಸ್ಥೆ ಇದ್ದರೂ ಬೆಂಕಿಯ ತೀವ್ರತೆ ಹೆಚ್ಚಿದ್ದರಿಂದ ನಂದಿಸಲು ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಸುಮಾರು ಒಂದು ಲಕ್ಷ ರೂಪಾಯಿ ನಷ್ಟವಾಗಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ವೈದ್ಯನ ಎಡವಟ್ಟು – ತಪ್ಪಾದ ಇಂಜೆಕ್ಷನ್ ನೀಡಿದ್ದರಿಂದ ರೋಗಿ ಸಾವು
ಈ ಕಾರ್ಖಾನೆಯು ಹೌರಾದ ದೊಮ್ಜೂರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾಜಾಪುರ ಪ್ರದೇಶದಲ್ಲಿದೆ. ಬೆಂಕಿಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಅಗ್ನಿಶಾಮಕ ದಳದ ಅಧಿಕಾರಿಗಳು ಕಾರ್ಖಾನೆಯಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ. ಅಧಿಕಾರಿಗಳು ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಳ್ಳಲು ಕಾರಣವೇನು ಎನ್ನುವುದರ ಕುರಿತು ತನಿಖೆ ಆರಂಭವಾಗಿದೆ. ಇದನ್ನೂ ಓದಿ: ಪ್ರಿಯತಮೆ ಕೈಕೊಟ್ಟಿದ್ದಕ್ಕೆ ಆಕೆಯ ಸಹೋದರನನ್ನೇ ಕಿಡ್ನಾಪ್ ಮಾಡಿದ ಭೂಪ
ಕೊಲ್ಕತ್ತಾ: ದಂಪತಿ ಮೈಗೆ ಬೆಂಕಿ ಹೊತ್ತಿಕೊಂಡಿದ್ದರೂ, ರಸ್ತೆ ತುಂಬಾ ಚಿರುತ್ತಾ ಓಡಿರುವ ಘಟನೆ ಕೊಲ್ಕತ್ತಾದಲ್ಲಿ ನಡೆದಿದೆ.
ಬುಧವಾರ ಸಂಜೆ 5 ಗಂಟೆ ಸುಮಾರಿಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ದಂಪತಿ ಅಪಾರ್ಟ್‍ಮೆಂಟ್‍ನಿಂದ ಬೀದಿಗೆ ಓಡಿ ಬಂದಿದ್ದಾರೆ. ರಸ್ತೆಯಲ್ಲಿ ಕಿರುಚಾಡುತ್ತಿದ್ದ ಆ ಇಬ್ಬರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.
ಪತ್ನಿ ಅಡುಗೆ ಮಾಡುತ್ತಿದ್ದಾಗ ಇದ್ದಕ್ಕಿದ್ದಂತೆ ಆಕಸ್ಮಿಕವಾಗಿ ಆಕೆಗೆ ಬೆಂಕಿ ಹೊತ್ತಿಕೊಂಡಿದೆ. ಆಕೆಯನ್ನ ಗಂಡ ರಕ್ಷಿಸಲು ಹೋದಾಗ, ಆತನಿಗೆ ಕೂಡ ಬೆಂಕಿ ಆವರಿಸಿದೆ ಎನ್ನಲಾಗಿದೆ. ಹೀಗಾಗಿ, ತಮ್ಮ ಪ್ರಾಣ ಉಳಿಸಿಕೊಳ್ಳಲು ಕಟ್ಟಡದಿಂದ ಹೊರ ಬಂದಿದ್ದು, ಯಾರಾದರೂ ಬೆಂಕಿ ನಂದಿಸಲಿ ಎಂದು ಕಿರುಚಾಡಿದ್ದಾರೆ. ಆದರೆ, ಆ ದಿನ ನಡೆದಿದ್ದು ಏನೆಂಬ ಬಗ್ಗೆ ದಂಪತಿಗೆ ಪ್ರಜ್ಞೆ ಬಂದ ನಂತರ ಗೊತ್ತಾಗಲಿದೆ. ಇದನ್ನೂ ಓದಿ:190 ವರ್ಷದ ಆಮೆ- ಗಿನ್ನಿಸ್ ಪುಟಕ್ಕೆ ಸೇರ್ಪಡೆ
ಕೋಲ್ಕತ್ತಾ: ಕೇವಲ 24 ಗಂಟೆಗಳಲ್ಲಿ ಕೋಲ್ಕತ್ತಾದ ಮೂರು ವಿವಿಧ ಆಸ್ಪತ್ರೆಗಳಲ್ಲಿ ವೈದ್ಯರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅದರಲ್ಲಿ ನೂರಕ್ಕೂ ಹೆಚ್ಚಿನ ವೈದ್ಯರಲ್ಲಿ ಕೋವಿಡ್-19 ಸೋಂಕು ಕಂಡುಬಂದಿದೆ.
ಕೋಲ್ಕತ್ತಾದ ರಾಷ್ಟ್ರೀಯ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ 70 ವೈದ್ಯರು, ಕಾಳಿಘಾಟ್‌ನ ಚಿತ್ತರಂಜನ್ ಸೇವಾ ಸದನ್ ಆಸ್ಪತ್ರೆಯ 24 ವೈದ್ಯರು ಹಾಗೂ ಪ್ರಾದೇಶಿಕ ನೇತ್ರವಿಜ್ಞಾನ ಸಂಸ್ಥೆಯ 12 ವೈದ್ಯರಿಗೆ ಸೋಂಕು ತಗುಲಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ರಾಜ್ಯಕ್ಕೆ ಮೂರನೇ ಅಲೆ ಬಂದಿದೆ: ಡಾ.ಕೆ.ಸುಧಾಕರ್
ಸೋಂಕಿತ ವೈದ್ಯರಿಗೆ ತಮ್ಮ ಸಂಸ್ಥೆಯಲ್ಲೇ ಕ್ವಾರಂಟೈನ್‌ನಲ್ಲಿ ಇರುವಂತೆ ಸೂಚಿಸಲಾಗಿದೆ. ಇದರೊಂದಿಗೆ ಸೋಮವಾರ ಕೋಲ್ಕತ್ತಾದಲ್ಲಿ 2,801 ಹೊಸ ಪ್ರಕರಣಗಳು ದಾಖಲಾಗಿದೆ. ಇದನ್ನೂ ಓದಿ: ಬಿಜೆಪಿ ನಾಯಕ ಮನೋಜ್ ತಿವಾರಿಗೆ ಕೊರೊನಾ ಪಾಸಿಟಿವ್