Tag: kolkata

  • ಕೋಲ್ಕತ್ತಾ ಗ್ಯಾಂಗ್‌ ರೇಪ್‌ | ಕಾಲಿಗೆ ಬಿದ್ದರೂ ನನ್ನನ್ನು ಬಿಡಲಿಲ್ಲ – ಸಂತ್ರಸ್ತೆ ದೂರಿನಲ್ಲಿ ಉಲ್ಲೇಖ

    ಕೋಲ್ಕತ್ತಾ ಗ್ಯಾಂಗ್‌ ರೇಪ್‌ | ಕಾಲಿಗೆ ಬಿದ್ದರೂ ನನ್ನನ್ನು ಬಿಡಲಿಲ್ಲ – ಸಂತ್ರಸ್ತೆ ದೂರಿನಲ್ಲಿ ಉಲ್ಲೇಖ

    ಕೋಲ್ಕತ್ತಾ: ನಾನು ಅವನ ಕಾಲಿಗೆ ಬಿದ್ದರೂ ನನ್ನನ್ನು ಬಿಡದೇ ನನ್ನ ಮೇಲೆ ಅತ್ಯಾಚಾರ ಎಸಗಿದರು ಎಂದು ಕೋಲ್ಕತ್ತಾದಲ್ಲಿ (Kolkata) ಸಾಮೂಹಿಕ ಅತ್ಯಾಚಾರಕ್ಕೊಳಗಾದ 24 ವರ್ಷದ ಕಾನೂನು ವಿದ್ಯಾರ್ಥಿನಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

    ಪ್ರಮುಖ ಆರೋಪಿಯ ವಿವಾಹ ಪ್ರಸ್ತಾಪವನ್ನು ತಿರಸ್ಕರಿಸಿದ ನಂತರ ಕೋಲ್ಕತ್ತಾ ಕಾನೂನು ಕಾಲೇಜಿನೊಳಗೆ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ ಎಂದು ಪೊಲೀಸರ ಮುಂದೆ ಸಂತ್ರಸ್ತೆ ಹೇಳಿಕೆ ದಾಖಲಿಸಿದ್ದಾಳೆ. ಇದನ್ನೂ ಓದಿ: ಕೋಲ್ಕತ್ತಾದಲ್ಲಿ ಕಾನೂನು ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್‌; ಟಿಎಂಸಿ ನಾಯಕ ಸೇರಿ ಮೂವರ ಬಂಧನ

    ಕಸ್ಬಾ ಪ್ರದೇಶದಲ್ಲಿ ಕಾನೂನು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ (Gangrape) ನಡೆದಿತ್ತು. ಈ ಪ್ರಕರಣದಲ್ಲಿ ಮೂವರನ್ನು ಬಂಧಿಸಲಾಗಿದೆ. ಬಂಧಿತ ಮೂವರಲ್ಲಿ ಇಬ್ಬರು ವಿದ್ಯಾರ್ಥಿಗಳು, ಮತ್ತೊಬ್ಬ ಮಾಜಿ ವಿದ್ಯಾರ್ಥಿ ಎಂದು ತಿಳಿದು ಬಂದಿದೆ.

    ಬುಧವಾರ ಸಂಜೆ ಕಾಲೇಜು ಆವರಣದಲ್ಲಿ ತನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದು ಯುವತಿ ಆರೋಪಿಸಿ ದೂರು ನೀಡಿದ್ದರು. ದೂರಿನನ್ವಯ ಕಸ್ಬಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ತನಿಖೆ ಆರಂಭಿಸಲಾಗಿದೆ. ಪ್ರಕರಣದಲ್ಲಿ 31 ವರ್ಷದ ಮೊನೊಜಿತ್ ಮಿಶ್ರಾ (ಕಾಲೇಜಿನ ಮಾಜಿ ಘಟಕದ ಅಧ್ಯಕ್ಷ, ಹಾಲಿ ಟಿಎಂಸಿ ನಾಯಕ), 19 ವರ್ಷದ ಜೈಬ್ ಅಹ್ಮದ್ ಮತ್ತು 20 ವರ್ಷದ ಪ್ರಮಿತ್ ಮುಖೋಪಾಧ್ಯಾಯನನ್ನು ಬಂಧಿಸಲಾಗಿದೆ.

    ಜೂನ್ 26 ರ ಸಂಜೆ ಕೋಲ್ಕತ್ತಾದ ತಲ್ಬಗನ್ ಕ್ರಾಸಿಂಗ್ ಬಳಿಯ ಸಿದ್ಧಾರ್ಥ ಶಂಕರ್ ಶಿಶು ರಾಯ್ ಉದ್ಯಾನ್ ಎದುರುಗಡೆಯಿಂದ ಮೊನೊಜಿತ್ ಮತ್ತು ಅಹ್ಮದ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಯಿತು. ಬಂಧನದ ಸಮಯದಲ್ಲಿ ಅವರ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಜೂನ್ 27 ರಂದು ಬೆಳಗ್ಗೆ 12:30 ಕ್ಕೆ ಮೂರನೇ ಆರೋಪಿ ಪ್ರಮಿತ್‌ನನ್ನು ಆತನ ಮನೆಯಿಂದ ಬಂಧಿಸಲಾಯಿತು. ಆತನ ಮೊಬೈಲ್ ಫೋನ್ ಅನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಸದ್ಯ ನ್ಯಾಯಾಲಯವು ಜುಲೈ 1 ರ ಮಂಗಳವಾರದವರೆಗೆ ಪೊಲೀಸ್ ಕಸ್ಟಡಿ ನೀಡಿದೆ.

    ಜೂನ್ 25 ರ ಸಂಜೆ ವಿದ್ಯಾರ್ಥಿನಿ ಕಾಲೇಜಿಗೆ ಹೋಗಿದ್ದಾಗ ಮೂವರು ಆರೋಪಿಗಳು ಆಕೆಯನ್ನು ಸಂಸ್ಥೆಯೊಳಗಿನ ಕೋಣೆಗೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ. ವಿದ್ಯಾರ್ಥಿನಿ ಕಸ್ಬಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣವು ಪ್ರಸ್ತುತ ಪ್ರಾಥಮಿಕ ಹಂತದಲ್ಲಿದೆ. ವಿದ್ಯಾರ್ಥಿನಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: 25ರ ಅಳಿಯನ ಜೊತೆ 55ರ ಅತ್ತೆ ಪರಾರಿ – ಮತ್ತೆ ವಾಪಸ್ ಬಂದು ಗಂಡ, ಮಗಳ ಜೊತೆ ಕಿರಿಕ್!

  • ಕೋಲ್ಕತ್ತಾದಲ್ಲಿ ಕಾನೂನು ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್‌; ಟಿಎಂಸಿ ನಾಯಕ ಸೇರಿ ಮೂವರ ಬಂಧನ

    ಕೋಲ್ಕತ್ತಾದಲ್ಲಿ ಕಾನೂನು ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್‌; ಟಿಎಂಸಿ ನಾಯಕ ಸೇರಿ ಮೂವರ ಬಂಧನ

    ಕೋಲ್ಕತ್ತಾ: ಕಸ್ಬಾ ಪ್ರದೇಶದಲ್ಲಿ ಕಾನೂನು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ (Gangrape) ನಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಮೂವರನ್ನು ಬಂಧಿಸಲಾಗಿದೆ. ಬಂಧಿತ ಮೂವರಲ್ಲಿ ಇಬ್ಬರು ವಿದ್ಯಾರ್ಥಿಗಳು, ಮತ್ತೊಬ್ಬ ಮಾಜಿ ವಿದ್ಯಾರ್ಥಿ ಎಂದು ತಿಳಿದು ಬಂದಿದೆ.

    ಬುಧವಾರ ಸಂಜೆ ಕಾಲೇಜು ಆವರಣದಲ್ಲಿ ತನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದು ಮಹಿಳೆ ಆರೋಪಿಸಿ ದೂರು ನೀಡಿದ್ದರು. ದೂರಿನನ್ವಯ ಕಸ್ಬಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ತನಿಖೆ ಆರಂಭಿಸಲಾಗಿದೆ. ಪ್ರಕರಣದಲ್ಲಿ 31 ವರ್ಷದ ಮೊನೊಜಿತ್ ಮಿಶ್ರಾ (ಕಾಲೇಜಿನ ಮಾಜಿ ಘಟಕದ ಅಧ್ಯಕ್ಷ, ಹಾಲಿ ಟಿಎಂಸಿ ನಾಯಕ), 19 ವರ್ಷದ ಜೈಬ್ ಅಹ್ಮದ್ ಮತ್ತು 20 ವರ್ಷದ ಪ್ರಮಿತ್ ಮುಖೋಪಾಧ್ಯಾಯನನ್ನು ಬಂಧಿಸಲಾಗಿದೆ. ಇದನ್ನೂ ಓದಿ: 2,000 ರೂ.ಗೆ ಸೆಕ್ಸ್ ಲೈವ್‌ಸ್ಟ್ರೀಮ್‌ ಮಾಡಿದ ಹೈದರಾಬಾದ್ ಜೋಡಿ ಅರೆಸ್ಟ್!

    ಜೂನ್ 26 ರ ಸಂಜೆ ಕೋಲ್ಕತ್ತಾದ ತಲ್ಬಗನ್ ಕ್ರಾಸಿಂಗ್ ಬಳಿಯ ಸಿದ್ಧಾರ್ಥ ಶಂಕರ್ ಶಿಶು ರಾಯ್ ಉದ್ಯಾನ್ ಎದುರುಗಡೆಯಿಂದ ಮೊನೊಜಿತ್ ಮತ್ತು ಅಹ್ಮದ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಯಿತು. ಬಂಧನದ ಸಮಯದಲ್ಲಿ ಅವರ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಜೂನ್ 27 ರಂದು ಬೆಳಗ್ಗೆ 12:30 ಕ್ಕೆ ಮೂರನೇ ಆರೋಪಿ ಪ್ರಮಿತ್‌ನನ್ನು ಆತನ ಮನೆಯಿಂದ ಬಂಧಿಸಲಾಯಿತು. ಆತನ ಮೊಬೈಲ್ ಫೋನ್ ಅನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಸದ್ಯ ನ್ಯಾಯಾಲಯವು ಜುಲೈ 1 ರ ಮಂಗಳವಾರದವರೆಗೆ ಪೊಲೀಸ್ ಕಸ್ಟಡಿ ನೀಡಿದೆ.

    ಜೂನ್ 25 ರ ಸಂಜೆ ವಿದ್ಯಾರ್ಥಿನಿ ಕಾಲೇಜಿಗೆ ಹೋಗಿದ್ದಾಗ ಮೂವರು ಆರೋಪಿಗಳು ಆಕೆಯನ್ನು ಸಂಸ್ಥೆಯೊಳಗಿನ ಕೋಣೆಗೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ. ವಿದ್ಯಾರ್ಥಿನಿ ಕಸ್ಬಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣವು ಪ್ರಸ್ತುತ ಪ್ರಾಥಮಿಕ ಹಂತದಲ್ಲಿದೆ. ವಿದ್ಯಾರ್ಥಿನಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಹನಿಮೂನ್ ಮರ್ಡರ್‌ನಂತೆಯೇ ಆಂಧ್ರದಲ್ಲೂ ಮರ್ಡರ್ – ಮೇಘಾಲಯ ಹತ್ಯೆ ವಿಚಾರದ ಬಗ್ಗೆಯೂ ಮಾತಾಡಿದ್ರಂತೆ ಆರೋಪಿಗಳು

    ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ವಿಜಯಾ ರಹತ್ಕರ್ ಅವರು ಕೋಲ್ಕತ್ತಾ ಪೊಲೀಸ್ ಆಯುಕ್ತರಿಗೆ ಪತ್ರ ಬರೆದು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. BNSS ನ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ತಕ್ಷಣದ, ಕಾಲಮಿತಿಯ ತನಿಖೆಗೆ ನಿರ್ದೇಶಿಸಿದ್ದಾರೆ. BNSS ನ ಸೆಕ್ಷನ್ 396 ರ ಅಡಿಯಲ್ಲಿ ಪರಿಹಾರದ ಜೊತೆಗೆ ಸಂತ್ರಸ್ತೆಗೆ ಸಂಪೂರ್ಣ ವೈದ್ಯಕೀಯ, ಮಾನಸಿಕ ಮತ್ತು ಕಾನೂನು ನೆರವು ನೀಡುವ ಅಗತ್ಯವನ್ನು ಅವರು ಒತ್ತಿ ಹೇಳಿದ್ದಾರೆ. ಆಯೋಗವು 3 ದಿನಗಳಲ್ಲಿ ವಿವರವಾದ ಕ್ರಮ ಕೈಗೊಂಡ ವರದಿಯನ್ನು ಕೋರಿದೆ.

  • ಏರ್ ಇಂಡಿಯಾದ ಮತ್ತೊಂದು ವಿಮಾನದಲ್ಲಿ ತಾಂತ್ರಿಕ ದೋಷ – ಕೋಲ್ಕತ್ತಾದಲ್ಲಿ ಪ್ರಯಾಣಿಕರನ್ನು ಕೆಳಗಿಳಿಸಿದ ಸಿಬ್ಬಂದಿ

    ಏರ್ ಇಂಡಿಯಾದ ಮತ್ತೊಂದು ವಿಮಾನದಲ್ಲಿ ತಾಂತ್ರಿಕ ದೋಷ – ಕೋಲ್ಕತ್ತಾದಲ್ಲಿ ಪ್ರಯಾಣಿಕರನ್ನು ಕೆಳಗಿಳಿಸಿದ ಸಿಬ್ಬಂದಿ

    ನವದೆಹಲಿ: ಮಂಗಳವಾರ ಮುಂಜಾನೆ ಸ್ಯಾನ್ ಫ್ರಾನ್ಸಿಸ್ಕೋದಿಂದ ಕೋಲ್ಕತ್ತಾ ಮೂಲಕ ಮುಂಬೈಗೆ ತೆರಳುತ್ತಿದ್ದ ಏರ್ ಇಂಡಿಯಾ (Air India) ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಕೋಲ್ಕತ್ತಾದಲ್ಲಿ ಪ್ರಯಾಣಿಕರನ್ನು ಕೆಳಗಿಳಿಸಲಾಗಿದೆ.

    ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿಗದಿತ ನಿಲುಗಡೆಯ ಸಮಯದಲ್ಲಿ ಪ್ರಯಾಣಿಕರು ಇಳಿಯಬೇಕಾಯಿತು. ಎಡ ಎಂಜಿನ್‌ನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ಕಾರಣ ಕೋಲ್ಕತ್ತಾದಿಂದ ಮುಂಬೈಗೆ ಟೇಕಾಫ್ ಆಗುವುದು ವಿಳಂಬವಾಯಿತು. ಇದನ್ನೂ ಓದಿ: Iran-Israel Conflict | ಕರ್ನಾಟಕಕ್ಕೆ ಬರುತ್ತಿದ್ದ ಮಸಾಲೆ, ಡ್ರೈಫ್ರೂಟ್ಸ್‌ ಸಪ್ಲೈ ಬಂದ್

    ಏರ್ ಇಂಡಿಯಾ ವಿಮಾನ AI180 ಸ್ಯಾನ್ ಫ್ರಾನ್ಸಿಸ್ಕೋ ವಿಮಾನ ನಿಲ್ದಾಣದಿಂದ ವೇಳಾಪಟ್ಟಿಯ ಪ್ರಕಾರ ಹೊರಟಿತು. ಆದಾಗ್ಯೂ, ಅದು ಬೆಳಗ್ಗೆ 12:45 ಕ್ಕೆ ಕೋಲ್ಕತ್ತಾ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ, ಎಡ ಎಂಜಿನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತು.

    ನಾಲ್ಕು ಗಂಟೆಗಳಿಗೂ ಹೆಚ್ಚು ಸಮಯದ ನಂತರ, ಬೆಳಗ್ಗೆ 5:20 ಕ್ಕೆ, ಎಲ್ಲಾ ಪ್ರಯಾಣಿಕರನ್ನು ವಿಮಾನದಿಂದ ಇಳಿಯುವಂತೆ ಪ್ರಕಟಣೆ ಹೊರಡಿಸಲಾಯಿತು. ವಿಮಾನ ಸುರಕ್ಷತೆಯ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕ್ಯಾಪ್ಟನ್ ಪ್ರಯಾಣಿಕರಿಗೆ ತಿಳಿಸಿದರು. ಇದನ್ನೂ ಓದಿ: ಭಾರತದ ಮನವಿಗೆ ಸ್ಪಂದಿಸಿ ಭೂ ಗಡಿ ತೆರೆದ ಇರಾನ್‌

    ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ AI-171, ಟೇಕ್ ಆಫ್ ಆದ ಕೆಲವೇ ಸೆಕೆಂಡುಗಳಲ್ಲಿ ಬಿಜೆ ವೈದ್ಯಕೀಯ ಕಾಲೇಜು ಹಾಸ್ಟೆಲ್ ಕಟ್ಟಡಕ್ಕೆ ಅಪ್ಪಳಿಸಿತ್ತು. ಪರಿಣಾಮವಾಗಿ 270 ಮಂದಿ ದುರ್ಮರಣಕ್ಕೀಡಾದರು. ಈ ಅವಘಡವಾದ ಐದು ದಿನಗಳ ನಂತರ ಮತ್ತೊಂದು ಸಮಸ್ಯೆ ಕಾಣಿಸಿಕೊಂಡಿದೆ.

  • Ghaziabad| ಏರ್‌ ಇಂಡಿಯಾ ಟೇಕಾಫ್‌ ವೇಳೆ ತಾಂತ್ರಿಕ ದೋಷ – ತಪ್ಪಿದ ಅನಾಹುತ

    Ghaziabad| ಏರ್‌ ಇಂಡಿಯಾ ಟೇಕಾಫ್‌ ವೇಳೆ ತಾಂತ್ರಿಕ ದೋಷ – ತಪ್ಪಿದ ಅನಾಹುತ

    ಲಕ್ನೋ: ಉತ್ತರ ಪ್ರದೇಶದ ಗಾಜಿಯಾಬಾದ್‌ನ (Ghaziabad) ಹಿಂಡನ್ ವಿಮಾನ ನಿಲ್ದಾಣದಿಂದ (Hindon Airport) ಕೋಲ್ಕತ್ತಾಗೆ (Kolkata) ಹೊರಟಿದ್ದ ಏರ್ ಇಂಡಿಯಾ (Air India) ಎಕ್ಸ್‌ಪ್ರೆಸ್ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಟೇಕಾಫ್‌ಗೆ ಸ್ವಲ್ಪ ಸಮಯ ಬಾಕಿ ಇರುವಾಗ ತಾಂತ್ರಿಕ ದೋಷ ಕಾಣಿಸಿದ್ದು, ಅನಾಹುತವೊಂದು ತಪ್ಪಿದಂತಾಗಿದೆ.

    ಏರ್ ಇಂಡಿಯಾ IX 1511 ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ರನ್‌ವೇಯಲ್ಲಿದ್ದಾಗ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ, ವಿಮಾನ ಹಾರಾಟ ಒಂದು ಗಂಟೆ ಕಾಲ ವಿಳಂಬವಾಯಿತು. ಇದರಿಂದ ಪ್ರಯಾಣಿಕರಿಗೆ ಉಂಟಾದ ಅನಾನುಕೂಲಕ್ಕೆ ಏರ್‌ ಇಂಡಿಯಾ ಕ್ಷಮೆಯಾಚಿಸಿದೆ. ಇದನ್ನೂ ಓದಿ: ಬ್ರಿಟನ್‌ನ F-35 ಫೈಟರ್‌ ಜೆಟ್‌ ಕೇರಳದಲ್ಲಿ ತುರ್ತು ಭೂಸ್ಪರ್ಶ – ಕಾರಣ ಏನು?

    ವಿಮಾನದಲ್ಲಿನ ತಾಂತ್ರಿಕ ದೋಷದಿಂದಾಗಿ ಹಾರಾಟ ವಿಳಂಬವಾಗಿದೆ. ಪ್ರಯಾಣಿಕರಿಗೆ ಉಚಿತ ಟಿಕೆಟ್ ಮರುಹೊಂದಿಕೆ ಅಥವಾ ರದ್ದತಿಯನ್ನು ಪೂರ್ಣ ಮರುಪಾವತಿಯೊಂದಿಗೆ ಮಾಡಿಕೊಡಲಾಗಿದೆ. ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗೆ ನಾವು ವಿಷಾದಿಸುತ್ತೇವೆ ಎಂದು ಏರ್‌ ಇಡಿಯಾ ವಕ್ತಾರರು ತಿಳಿಸಿದ್ದಾರೆ.

    ವಿಮಾನವು ರನ್‌ವೇಗೆ ಬಂದು ನಿರ್ಗಮನಕ್ಕೆ ಸಿದ್ಧತೆ ನಡೆಸುತ್ತಿದ್ದಾಗ ಸಿಬ್ಬಂದಿಗೆ ಕೊನೆಯ ಕ್ಷಣದಲ್ಲಿ ತೊಂದರೆ ಕಂಡುಬಂದಿದೆ. ಕೂಡಲೇ ಇಂಜಿನಿಯರ್‌ಗಳನ್ನು ಕರೆಸಿ ಪರಿಶೀಲಿಸಲಾಯಿತು ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.

    ಇತ್ತೀಚೆಗೆ ಅಹಮದಾಬಾದ್‌ನಲ್ಲಿ ಟೆಕಾಫ್‌ ಆದ ಕೆಲವೇ ಕ್ಷಣದಲ್ಲಿ‌ ಏರ್‌ ಇಂಡಿಯಾ ವಿಮಾನ ಪತನಗೊಂಡು, ವಿಮಾನದಲ್ಲಿದ್ದ 242 ಮಂದಿ ಪೈಕಿ 241 ಮಂದಿ ಸಾವನ್ನಪ್ಪಿದ್ದರು. ಪವಾಡ ಸದೃಶ್ಯ ಎಂಬಂತೆ ಓರ್ವ ಪ್ರಯಾಣಿಕ ಬದುಕುಳಿದಿದ್ದ. ಇದನ್ನೂ ಓದಿ: Explainer: ವಿಮಾನ ಸುಟ್ಟು ಬೂದಿಯಾದರೂ ‘ಬ್ಲ್ಯಾಕ್‌ಬಾಕ್ಸ್‌’ಗೆ ಏನಾಗಲ್ಲ – ಏನಿದು ಪೆಟ್ಟಿಗೆ? ಫ್ಲೈಟ್‌ ಆಕ್ಸಿಡೆಂಟ್‌ಗಳಲ್ಲಿ ಏಕೆ ಮುಖ್ಯ?

  • ಪಹಲ್ಗಾಮ್‌ ದಾಳಿಯಲ್ಲಿ ತಂದೆ ಕಳೆದುಕೊಂಡ ಹುಡುಗಿಗೆ ಐಎಸ್‌ಸಿ ಬೋರ್ಡ್‌ ಪರೀಕ್ಷೆಯಲ್ಲಿ ಶೇ.87 ಅಂಕ

    ಪಹಲ್ಗಾಮ್‌ ದಾಳಿಯಲ್ಲಿ ತಂದೆ ಕಳೆದುಕೊಂಡ ಹುಡುಗಿಗೆ ಐಎಸ್‌ಸಿ ಬೋರ್ಡ್‌ ಪರೀಕ್ಷೆಯಲ್ಲಿ ಶೇ.87 ಅಂಕ

    – ತನ್ನ ಕಣ್ಮುಂದೆಯೇ ಉಗ್ರರ ಗುಂಡಿಗೆ ತಂದೆ ಬಲಿಯಾಗಿದ್ದನ್ನು ಕಂಡು ಆಘಾತಗೊಂಡಿದ್ದ ವಿದ್ಯಾರ್ಥಿನಿ

    ಕೋಲ್ಕತ್ತಾ: ಕಾಶ್ಮೀರದ ಪಹಲ್ಗಾಮ್‌ನ (Pahalgam) ಬೈಸರನ್ ಕಣಿವೆಯಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ತನ್ನ ತಂದೆಯನ್ನು ಕಳೆದುಕೊಂಡ ಹುಡುಗಿ ಐಎಸ್‌ಸಿ ಬೋರ್ಡ್‌ ಪರೀಕ್ಷೆಯಲ್ಲಿ ಶೇ.87 ಅಂಕ ಪಡೆದುಕೊಂಡು ಸಾಧನೆ ಮಾಡಿದ್ದಾರೆ.

    17 ವಯಸ್ಸಿನ ಶುಭಂಗಿ ಗುಹಾ ಈ ಸಾಧನೆ ಮಾಡಿದ್ದಾರೆ. ಈಕೆಯ ತಂದೆ ಸಮೀರ್‌ ಗುಹಾ ಅವರು ಪಹಲ್ಗಾಮ್‌ ದಾಳಿಯಲ್ಲಿ ಉಗ್ರರ ಗುಂಡಿಗೆ ಬಲಿಯಾದರು. ತನ್ನ ಕಣ್ಣ ಮುಂದೆಯೇ ತಂದೆಗೆ ಗುಂಡು ಹಾರಿಸಿದ್ದನ್ನು ಕಂಡು ಆಘಾತಕ್ಕೆ ಒಳಗಾಗಿದ್ದಳು. ತಂದೆ ಸಾವಿನ ನೋವಿನ ಮಧ್ಯೆಯೂ ಬೋರ್ಡ್‌ ಪರೀಕ್ಷೆ ಬರೆದಿದ್ದಳು. ಇದನ್ನೂ ಓದಿ: ಭಾರತದ ವಾಯುಸೀಮೆ ಬಂದ್‌ – ಪಾಕ್‌ಗೆ ಮತ್ತೊಂದು ಶಾಕ್‌

    ತಂದೆಗೆ ಇದ್ದ ಆಸೆಯಂತೆಯೇ ಐಎಸ್‌ಸಿ ಬೋರ್ಡ್ ಪರೀಕ್ಷೆಗೆ ಹಾಜರಾದ ಶುಭಂಗಿ 90% ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸುವ ನಿರೀಕ್ಷೆಯಿತ್ತು. ಆದರೆ ಮನೋವಿಜ್ಞಾನ ಮತ್ತು ರಾಜ್ಯಶಾಸ್ತ್ರದ ಅಂಕಗಳು ಆಕೆಯ ಶೇಕಡಾವಾರು ಪ್ರಮಾಣವನ್ನು ಸ್ವಲ್ಪ ಕಡಿಮೆ ಮಾಡಿದ್ದರಿಂದ 87% ಕ್ಕೆ ತೃಪ್ತಿಪಡಬೇಕಾಯಿತು.

    ಮಗಳ ಸಾಧನೆ ಬಗ್ಗೆ ತಾಯಿ ಸಬರಿ ಗುಹಾ ಭರವಸೆಯ ಮಾತುಗಳನ್ನಾಡಿದ್ದಾರೆ. ತಮ್ಮ ಕುಟುಂಬದ ಬಗ್ಗೆ ಸುಳ್ಳು ಸುದ್ದಿ ಹರಡದಂತೆ ಇದೇ ವೇಳೆ ಮನವಿ ಮಾಡಿಕೊಂಡಿದ್ದಾರೆ. ಪಹಲ್ಗಾಮ್‌ ದಾಳಿಯಲ್ಲಿ ಪತಿಯನ್ನು ಕಳೆದುಕೊಂಡ ನನಗೆ 1.7 ಕೋಟಿ ರೂ. ಮರಣ ಪರಿಹಾರ ನೀಡಲಾಗಿದೆ ಎಂದು ಸುಳ್ಳು ಸುದ್ದಿ ಹರಡಲಾಗುತ್ತಿದೆ. ಇದು ಆಧಾರರಹಿತ. ನಮಗೆ ಆಧಾರ ಸ್ತಂಭವಾಗಿದ್ದವರನ್ನು ಕಳೆದುಕೊಂಡು ನಮ್ಮ ಕುಟುಂಬ ಆಘಾತದಲ್ಲಿದೆ ಎಂದು ಸಬರಿ ಕಣ್ಣೀರಿಟ್ಟಿದ್ದಾರೆ. ಇದನ್ನೂ ಓದಿ: ಪಹಲ್ಗಾಮ್‌ ದಾಳಿಗೆ ಮುನೀರ್‌, ಪಾಕ್‌ ಸೇನೆ, ಇಸ್ಲಾಮಿಕ್ ಉಗ್ರರು ಕಾರಣ – ಪಾಕ್‌ ನಟಿ ಕೆಂಡಾಮಂಡಲ

  • ಕೋಲ್ಕತ್ತಾ ಹೋಟೆಲ್‌ನಲ್ಲಿ ಬೆಂಕಿ ಅವಘಡ: 14 ಮಂದಿ ಸಾವು

    ಕೋಲ್ಕತ್ತಾ ಹೋಟೆಲ್‌ನಲ್ಲಿ ಬೆಂಕಿ ಅವಘಡ: 14 ಮಂದಿ ಸಾವು

    ಕೋಲ್ಕತ್ತಾ: ಕೇಂದ್ರ ಕೋಲ್ಕತ್ತಾದ ಹೋಟೆಲ್‌ನಲ್ಲಿ (Kolkata Hotel) ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ರಿತುರಾಜ್ ಹೋಟೆಲ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಕೋಲ್ಕತ್ತಾ ಪೊಲೀಸ್ ಆಯುಕ್ತ ಮನೋಜ್ ಕುಮಾರ್ ವರ್ಮಾ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಕಾಶ್ಮೀರದ ಬುದ್ಗಾಮ್‌ನಲ್ಲಿ ಕಮರಿಗೆ ಉರುಳಿದ ಸೇನಾ ವಾಹನ – 10 ಮಂದಿಗೆ ಗಾಯ

    14 ಶವಗಳನ್ನು ಹೊರತೆಗೆಯಲಾಗಿದೆ. ಹಲವಾರು ಜನರನ್ನು ರಕ್ಷಿಸಲಾಗಿದೆ. ತನಿಖೆಗಾಗಿ ವಿಶೇಷ ತಂಡವನ್ನು ಸಹ ರಚಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ.

    ಕೇಂದ್ರ ಸಚಿವ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಸುಕಾಂತ ಮಜುಂದಾರ್, ಸಂತ್ರಸ್ತರಿಗೆ ಅಗತ್ಯ ಚಿಕಿತ್ಸಾ ನೆರವು ನೀಡುವಂತೆ ಸೂಚಿಸಿದ್ದಾರೆ. ಭವಿಷ್ಯದಲ್ಲಿ ಇಂತಹ ದುರಂತ ಘಟನೆಗಳನ್ನು ತಡೆಗಟ್ಟಲು ಅಗ್ನಿ ಸುರಕ್ಷತಾ ಕ್ರಮಗಳ ಬಗ್ಗೆ ಕಟ್ಟುನಿಟ್ಟಿನ ಮೇಲ್ವಿಚಾರಣೆ ನಡೆಸಬೇಕೆಂದು ತಿಳಿಸಿದ್ದಾರೆ. ಇದನ್ನೂ ಓದಿ: 52ನೇ ಸಿಜೆಐ ಆಗಿ ನ್ಯಾ.ಬಿಆರ್ ಗವಾಯಿ ನೇಮಕ

    ಇದು ಒಂದು ದುರಂತ ಘಟನೆ. ಬೆಂಕಿ ಅವಘಡ ಸಂಭವಿಸಿದೆ. ಕಟ್ಟಡದಲ್ಲಿ ಇನ್ನೂ ಬಹಳಷ್ಟು ಜನರು ಸಿಲುಕಿಕೊಂಡಿದ್ದಾರೆ. ಯಾವುದೇ ಸುರಕ್ಷತೆ ಅಥವಾ ಭದ್ರತೆ ಇರಲಿಲ್ಲ. ನಿಗಮ ಏನು ಮಾಡುತ್ತಿದೆ ಎಂದು ನನಗೆ ತಿಳಿದಿಲ್ಲ ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷ ಶುಭಂಕರ್ ಸರ್ಕಾರ್ ಅಸಮಾಧಾನ ಹೊರಹಾಕಿದ್ದಾರೆ.

  • ಕೋಲ್ಕತ್ತಾ, ಅಹಮದಾಬಾದಲ್ಲಿ ವಕ್ಫ್ ಮಸೂದೆ ವಿರುದ್ಧ ಭಾರೀ ಪ್ರತಿಭಟನೆ – ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ

    ಕೋಲ್ಕತ್ತಾ, ಅಹಮದಾಬಾದಲ್ಲಿ ವಕ್ಫ್ ಮಸೂದೆ ವಿರುದ್ಧ ಭಾರೀ ಪ್ರತಿಭಟನೆ – ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ

    – ಶುಕ್ರವಾರದ ಪ್ರಾರ್ಥನೆ ಬಳಿಕ ಪ್ರತಿಭಟನೆ ಆರಂಭ

    ಕೋಲ್ಕತ್ತಾ/ ಅಹಮದಾಬಾದ್‌: ವಕ್ಫ್‌ ತಿದ್ದುಪಡಿ ಮಸೂದೆ (Waqf Amendment Bill) ಸಂಸತ್ತಿನಲ್ಲಿ ಅಂಗೀಕಾರವಾಗಿದ್ದು, ಇದರ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು (Protest) ಆರಂಭಗೊಂಡಿವೆ. ಶುಕ್ರವಾರ ಪ್ರಾರ್ಥನೆಯ ಬಳಿಕ ಕೋಲ್ಕತ್ತಾ (Kolkata), ಚೆನ್ನೈ (Chennai) ಮತ್ತು ಅಹಮದಾಬಾದ್‌ನಲ್ಲಿ (Ahmedabad) ಸಾವಿರಾರು ಜನ ಬೀದಿಗಿಳಿದು ಪ್ರತಿಭಟಿಸಿದ್ದು, ಪ್ರತಿಭಟನಾಕಾರರ ನಿಯಂತ್ರಣಕ್ಕೆ ಪೊಲೀಸರು ಹರಸಾಹಸಪಟ್ಟಿದ್ದಾರೆ.

    ಕೋಲ್ಕತ್ತಾದಲ್ಲಿ ರಾಷ್ಟ್ರಧ್ವಜ ಹಿಡಿದು, ‘ನಾವು ವಕ್ಫ್ ತಿದ್ದುಪಡಿಯನ್ನು ತಿರಸ್ಕರಿಸುತ್ತೇವೆ’ ಎಂಬ ಪೋಸ್ಟರ್‌ಗಳನ್ನು ಹಿಡಿದು ಸಾವಿರಾರು ಜನ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ. ಈ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಪರದಾಡಿದ್ದಾರೆ. ಇದನ್ನೂ ಓದಿ: ರಾಜ್ಯಸಭೆಯಲ್ಲೂ ವಕ್ಫ್‌ ತಿದ್ದುಪಡಿ ಮಸೂದೆ ಮಂಡನೆ

    ಅಹಮದಾಬಾದ್‌ನಲ್ಲಿ ನಡೆದ ಪ್ರತಿಭಟನೆ ವೇಳೆ ರಸ್ತೆಯಲ್ಲಿ ಕುಳಿತಿದ್ದ ಪ್ರತಿಭಟನಾಕಾರರನ್ನು ಬಲವಂತವಾಗಿ ಪೊಲೀಸರು ಹತ್ತಿಕ್ಕಲು ಪ್ರಯತ್ನಿಸಿದ್ದಾರೆ. ಉದ್ರಿಕ್ತರನ್ನು ನಿಯಂತ್ರಿಸಲು ಪೊಲೀಸರು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀಮ್ (ಎಐಎಂಐಎಂ) ರಾಜ್ಯ ಘಟಕದ ಮುಖ್ಯಸ್ಥ ಮತ್ತು ಅದರ 40 ಸದಸ್ಯರನ್ನು ವಶಕ್ಕೆ ಪಡೆದರು.

    ಚೆನ್ನೈನಲ್ಲಿ ಸಹ ಪ್ರತಿಭಟನೆಯ ಕಾವು ಹೆಚ್ಚಾಗಿತ್ತು. ನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿತ್ತು. ಚೆನ್ನೈ ಮತ್ತು ಕೊಯಮತ್ತೂರು ಮತ್ತು ತಿರುಚಿರಾಪಳ್ಳಿಯಂತಹ ಪ್ರಮುಖ ನಗರಗಳಲ್ಲಿ ಟಿವಿಕೆ ಕಾರ್ಯಕರ್ತರು ಜಮಾಯಿಸಿ ವಕ್ಫ್ ಮಸೂದೆಯ ವಿರುದ್ಧ ಘೋಷಣೆ ಕೂಗಿದರು.

    ನಟ ವಿಜಯ್‌ ಪ್ರತಿಕ್ರಿಯಿಸಿ, ವಕ್ಫ್ ಮಸೂದೆಯನ್ನು ಪ್ರಜಾಪ್ರಭುತ್ವ ವಿರೋಧಿಯಾಗಿದೆ. ಅದರ ಅಂಗೀಕಾರವು ಭಾರತದ ಜಾತ್ಯತೀತ ಅಡಿಪಾಯವನ್ನು ಪ್ರಶ್ನಿಸುತ್ತದೆ ಎಂದು ಟೀಕಿಸಿದರು.

    ಏ.2 ರಂದು ವಿಪಕ್ಷಗಳ ವ್ಯಾಪಕ ವಿರೋಧದ ನಡುವೆಯೂ ಲೋಕಸಭೆಯಲ್ಲಿ ವಕ್ಫ್‌ ತಿದ್ದುಪಡಿ ಮಸೂದೆಯನ್ನು ಮಂಡಿಸಲಾಗಿತ್ತು. ಕೇಂದ್ರ ಸಂಸದೀಯ ವ್ಯವಹಾರ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್‌ ರಿಜಿಜು (Kiran Rijiju) ಮಸೂದೆಯನ್ನು ಮಂಡಿಸಿದ್ದರು. ಲೋಕಸಭೆ ಅಂಗೀಕಾರದ ನಂತರ ಅವರು ಗುರುವಾರ ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ (Waqf Amendment Bill) ಮಂಡಿಸಿದ್ದರು. ಇದನ್ನೂ ಓದಿ: ಬಿಜೆಪಿ ಅಧಿಕಾರಕ್ಕೆ ಬಾರದೇ ಇದ್ದರೆ ಈ ಸಂಸತ್ತನ್ನೇ ಕಾಂಗ್ರೆಸ್‌ ವಕ್ಫ್‌ಗೆ ನೀಡ್ತಿತ್ತು: ಕಿರಣ್‌ ರಿಜಿಜು

  • ‌IPL 2025 | ಆರ್‌ಸಿಬಿ vs ಕೆಕೆಆರ್‌ ನಡುವಿನ ಉದ್ಘಾಟನಾ ಪಂದ್ಯಕ್ಕೆ ಮಳೆ ಭೀತಿ

    ‌IPL 2025 | ಆರ್‌ಸಿಬಿ vs ಕೆಕೆಆರ್‌ ನಡುವಿನ ಉದ್ಘಾಟನಾ ಪಂದ್ಯಕ್ಕೆ ಮಳೆ ಭೀತಿ

    ಕೋಲ್ಕತ್ತಾ: 18ನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಆರಂಭಕ್ಕೆ ಕ್ಷಣಗಣನೆ ಬಾಕಿಯಿದೆ. ಶನಿವಾರ 7:30ಕ್ಕೆ ಆರ್‌ಸಿಬಿ ಮತ್ತು ಕೆಕೆಆರ್‌ ನಡುವೆ ಮೊದಲ ಪಂದ್ಯ ನಡೆಯಲಿದೆ. ಆದ್ರೆ ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ಈಡನ್‌ಗಾರ್ಡನ್‌ನಲ್ಲಿ ನಿಗದಿಯಾಗಿರುವ ಉದ್ಘಾಟನಾ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ.

    18ನೇ ಆವೃತ್ತಿಯ ಐಪಿಎಲ್ ಟೂರ್ನಿಯನ್ನು ವರ್ಣರಂಜಿತ ಉದ್ಘಾಟನಾ ಸಮಾರಂಭದ ಮೂಲಕ ಪ್ರತಿಷ್ಠಿತ ಮೈದಾನದಲ್ಲಿ ಚಾಲನೆ ನೀಡಲು ಐಪಿಎಲ್‌ ಮಂಡಳಿ ಹಾಗೂ ಬಿಸಿಸಿಐ ಸಕಲ ಸಿದ್ಧತೆ ಮಾಡಿಕೊಂಡಿದೆ. ಆದ್ರೆ ಹವಾಮಾನ ಇಲಾಖೆಯ ಮುನ್ಸೂಚನೆ ಅಭಿಮಾನಿಗಳ ಆಸೆಗೆ ತಣ್ಣೀರು ಎರಚಬಹುದು. ಇದನ್ನೂ ಓದಿ: ಟಿಬಿ ಜಾಗೃತಿ ಕ್ರಿಕೆಟ್ ಆಡಲಿದ್ದಾರೆ ಬಿಗ್ ಬಿ, ಎಸ್‌ಆರ್‌ಕೆ, ಸಲ್ಮಾನ್ ಖಾನ್

    ಈ ಬಾರಿಯು ಐಪಿಎಲ್ ಟೂರ್ನಿಯು ಮಾ.22ರಿಂದ ಕೋಲ್ಕತಾದಲ್ಲಿ ಆರಂಭವಾಗಿ ಮೇ 25ರಂದು ಕೋಲ್ಕತ್ತಾದಲ್ಲಿಯೇ ಕೊನೆಯಾಗಲಿದೆ. ಮೇ 18ರ ತನಕ ಲೀಗ್ ಹಂತದ ಪಂದ್ಯ ನಡೆಯಲಿದ್ದು, ಮೇ 20ರಂದು ಮೊದಲ ಕ್ವಾಲಿಫೈಯರ್, ಮೇ 21ರಂದು ಎಲಿಮಿನೇಟರ್ ಸುತ್ತು ಹೈದರಾಬಾದ್‌ನಲ್ಲಿ ನಡೆಯಲಿದೆ. ಮೇ 23ರಂದು ಕ್ವಾಲಿಫೈಯರ್-2 ಕೋಲ್ಕತಾದಲ್ಲಿ ನಿಗದಿಯಾಗಿದೆ. ಒಟ್ಟು 10 ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದು, 13 ನಗರಗಳಲ್ಲಿ 65 ದಿನಗಳ ಕಾಲ ಒಟ್ಟು 74 ಪಂದ್ಯಗಳು ನಡೆಯಲಿವೆ. ಡಬಲ್‌ ಹೆಡರ್‌ ಪಂದ್ಯಗಳು ಇರುವಾಗ ಮಧ್ಯಾಹ್ನದ ಪಂದ್ಯ 3:30 ಹಾಗೂ ರಾತ್ರಿ ಪಂದ್ಯ 7:30ಕ್ಕೆ ಆರಂಭವಾಗಲಿದೆ.

    ಈಡನ್ ಗಾರ್ಡನ್ಸ್ ಸ್ಟೇಡಿಯಂ ಸುತ್ತಮುತ್ತ ಭಾರೀ ಮೋಡ ಕವಿದಿದ್ದು, ಗುರುವಾರ ಮುನ್ನಚ್ಚರಿಕೆಯ ಕ್ರಮವಾಗಿ ಮೈದಾನದ ಸಿಬ್ಬಂದಿ ಆಡುವ ಪ್ರದೇಶದಲ್ಲಿ ಹೊದಿಕೆಗಳನ್ನು ಹಾಸಿದ್ದಾರೆ. ಇದನ್ನೂ ಓದಿ: ಐಪಿಎಲ್ 2025: ಮೊದಲ 3 ಪಂದ್ಯಗಳಿಗೆ ರಾಜಸ್ಥಾನ ರಾಯಲ್ಸ್‌ಗೆ ರಿಯಾನ್ ಪರಾಗ್ ಕ್ಯಾಪ್ಟನ್

    ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಈ ಪ್ರದೇಶದಲ್ಲಿ ‘ಆರೆಂಜ್ ಅಲರ್ಟ್‌‘ಘೋಷಿಸಿದೆ. ಶನಿವಾರದ ತನಕ ಗುಡುಗು, ಮಿಂಚು ಹಾಗೂ ಬಿರುಗಾಳಿಯೊಂದಿಗೆ ಹಗುರ ಹಾಗೂ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಮುನ್ಸೂಚನೆ ನೀಡಿದೆ. ಇಂದು ಸಹ ಕೋಲ್ಕತ್ತಾದಲ್ಲಿ ಮಳೆಯಾಗಿದ್ದರಿಂದ ಅಭ್ಯಾಸ ಪಂದ್ಯವನ್ನು ರದ್ದುಗೊಳಿಸಲಾಗಿದೆ. ಐಪಿಎಲ್‌ನ ಉದ್ಘಾಟನಾ ದಿನವಾದ ಮಾರ್ಚ್ 22ರಂದು ಗರಿಷ್ಠ ಪ್ರಮಾಣದ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆ ಪಂದ್ಯ ರದ್ದಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಒಂದು ವೇಳೆ ಪಂದ್ಯ ರದ್ದಾದ್ರೆ, ಉಭಯ ತಂಡಗಳಿಗೆ ತಲಾ ಒಂದೊಂದು ಅಂಕ ಸಿಗಲಿದೆ. ಇದನ್ನೂ ಓದಿ: IPl 2025 | ರನ್‌ ಹೊಳೆ, ದಾಖಲೆಗಳ ಸುರಿಮಳೆ – ಇಲ್ಲಿದೆ ಐತಿಹಾಸಿಕ ದಾಖಲೆಗಳ ಪಟ್ಟಿ

  • ಕೋಲ್ಕತ್ತಾ| ತಂದೆ, ಮಗಳು ನೇಣಿಗೆ ಶರಣು – ಮಗಳ ಅನಾರೋಗ್ಯಕ್ಕೆ ಬೇಸತ್ತು ಆತ್ಮಹತ್ಯೆ ಶಂಕೆ

    ಕೋಲ್ಕತ್ತಾ: ಕೋಲ್ಕತ್ತಾದ (Kolkata) ಪರ್ಣಶ್ರೀ (Parnashree) ಪ್ರದೇಶದಲ್ಲಿ ತಂದೆ, ಮಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಮಗಳ ಅನಾರೋಗ್ಯಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

    ಪಶ್ಚಿಮ ಬಂಗಾಳದ (West Bengal) ದಕ್ಷಿಣ 24 ಪರಗಣ ಜಿಲ್ಲೆಯ ರಾಮೇಶ್ವರಪುರ ನಿವಾಸಿಗಳಾದ ಸಜನ್ ದಾಸ್ (53), ಶ್ರೀಜಾ ದಾಸ್ (22) ತಂದೆ, ಮಗಳು ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಅಮಲಾ ಪೌಲ್ ಪ್ಯಾಂಟ್‌ಲೆಸ್ ಫೋಟೋಶೂಟ್ ನೋಡಿ ಕಾಲೆಳೆದ ನೆಟ್ಟಿಗರು

    ಸಜನ್, ಚಿಮಣಿ ಹಾಗೂ ವಾಟರ್ ಪ್ಯೂರಿಫೈಯರ್‌ಗಳ ರಿಪೇರಿ ಮಾಡುವ ಕೆಲಸವನ್ನು ಮಾಡುತ್ತಿದ್ದರು. ಮಗಳು ಶ್ರೀಜಾ ಹುಟ್ಟಿನಿಂದಲೇ ಆಟಿಸಂ ಖಾಯಿಲೆಯಿಂದ ಬಳಲುತ್ತಿದ್ದರಿಂದ ನಿರಂತರ ಔಷಧಿಗಳನ್ನು ಪಡೆಯುತ್ತಿದ್ದಳು. ಸಜನ್ ತಮ್ಮ ಮಗಳ ಅನಾರೋಗ್ಯದ ಬಗ್ಗೆ ಮತ್ತು ವೈದ್ಯಕೀಯ ಖರ್ಚಿನ ಬಗ್ಗೆ ಚಿಂತಿತರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: 15 ವರ್ಷ ಹಳೆಯ ವಾಹನಗಳಿಗೆ ಇನ್ಮುಂದೆ ಸಿಗಲ್ಲ ಪೆಟ್ರೋಲ್‌, ಡೀಸೆಲ್‌ – ದೆಹಲಿಯಲ್ಲಿ ಹೊಸ ರೂಲ್ಸ್‌

    ಸಜನ್ ಫೆ.28 ರಂದು ಮಗಳನ್ನು ಕೋಲ್ಕತ್ತಾದ ಎಸ್‌ಎಸ್‌ಕೆಎಂ ಆಸ್ಪತ್ರೆಗೆ ಕರೆದೊಯ್ದಿದ್ದರು. ಮಧ್ಯಾಹ್ನ ಆಸ್ಪತ್ರೆಗೆ ತಲುಪಿರುವ ಬಗ್ಗೆ ಪತ್ನಿಗೆ ಕರೆ ಮಾಡಿ ತಿಳಿಸಿದ್ದರು. ಬಳಿಕ ಸಜನ್, ಪತ್ನಿಯ ಕರೆ ಸ್ವೀಕರಿಸದಿದ್ದಾಗ ಗಾಬರಿಗೊಂಡ ಪತ್ನಿ ಕುಟುಂಬದ ಸ್ನೇಹಿತ ರಂಜಿತ್ ಕುಮಾರ್ ಸಿಂಗ್‌ಗೆ ಮಾಹಿತಿ ನೀಡಿದ್ದರು. ರಂಜಿತ್, ಸಜನ್ ಅಂಗಡಿ ಬಳಿ ತೆರಳಿ ಬಾಗಿಲು ತೆರೆದಾಗ ತಂದೆ, ಮಗಳು ನೇಣಿಗೆ ಶರಣಾಗಿರುವುದು ಪತ್ತೆಯಾಗಿದೆ. ಬಳಿಕ ಅವರು ಸಜನ್ ಪತ್ನಿಗೆ ಮಾಹಿತಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಮಾ.8 ರಿಂದ ಮಣಿಪುರದ ಮುಕ್ತ ಸಂಚಾರಕ್ಕೆ ಅಮಿತ್ ಶಾ ಸೂಚನೆ

    ಘಟನಾ ಸ್ಥಳಕ್ಕೆ ಪರ್ಣಶ್ರೀ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ ಪೊಲೀಸರು, ವರದಿಗಳ ಬಳಿಕವೇ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ಹೇಳಿದ್ದಾರೆ.

  • 7 ತಿಂಗಳ ಮಗು ರೇಪ್ ಮಾಡಿದವನಿಗೆ ಗಲ್ಲು ಶಿಕ್ಷೆ – ಕೋಲ್ಕತ್ತಾ ವಿಶೇಷ ಕೋರ್ಟ್‌ನಿಂದ ತೀರ್ಪು

    7 ತಿಂಗಳ ಮಗು ರೇಪ್ ಮಾಡಿದವನಿಗೆ ಗಲ್ಲು ಶಿಕ್ಷೆ – ಕೋಲ್ಕತ್ತಾ ವಿಶೇಷ ಕೋರ್ಟ್‌ನಿಂದ ತೀರ್ಪು

    ಕೋಲ್ಕತ್ತಾ: 7 ತಿಂಗಳ ಮಗುವಿನ ಮೇಲೆ ಅತ್ಯಾಚಾರವೆಸಗಿದ ಕಾಮುಕನಿಗೆ ಕೋಲ್ಕತ್ತಾ (Kolkata) ವಿಶೇಷ ನ್ಯಾಯಾಲಯವು (Special Court) ಗಲ್ಲು ಶಿಕ್ಷೆ ವಿಧಿಸಿದೆ.

    ನಗರದ ಬರ್ತೊಲ್ಲಾ (Burtoll) ಪ್ರದೇಶದಿಂದ ಮಗುವಿನ ಅಪಹರಣ, ಅತ್ಯಾಚಾರ ಮತ್ತು ಕೊಲೆಗೆ ಯತ್ನಿಸಿದ ಆರೋಪದ ಮೇಲೆ ರಜೀಬ್ ಘೋಷ್‌ನನ್ನು ಪೊಲೀಸರು ಬಂಧಿಸಿದ್ದರು. ಬ್ಯಾಂಕ್‌ಶಾಲ್ ನ್ಯಾಯಾಲಯದ ಮಕ್ಕಳ ರಕ್ಷಣಾ ಕಾಯ್ದೆ (ಪೋಕ್ಸೊ) ನ್ಯಾಯಾಲಯವು ಸೋಮವಾರ ತೀರ್ಪು ಪ್ರಕಟಿಸಿದೆ. ಇದನ್ನೂ ಓದಿ: ದೆಹಲಿ ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತ – ಮಹಿಳಾ ಸಿಎಂ ಬಿಜೆಪಿ ಮಣೆ; ನಾಳೆ ಪ್ರಮಾಣವಚನ

    `ಅಪರೂಪದಲ್ಲಿ ಅಪರೂಪದ’ ವರ್ಗಕ್ಕೆ ಈ ಪ್ರಕರಣ ಸೇರಿರುವುದರಿಂದ ಮರಣದಂಡನೆ ವಿಧಿಸಬೇಕೆಂದು ವಕೀಲರು ವಾದಿಸಿದ ಬಳಿಕ ಅಂತಿಮ ಸುತ್ತಿನ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ಶಿಕ್ಷೆ ಪ್ರಕಟಿಸಿದೆ. ಇದನ್ನೂ ಓದಿ: ಮುಡಾ ಕೇಸ್‌ನಲ್ಲಿ ಬಿ ರಿಪೋರ್ಟ್ ಲೋಕಾಯುಕ್ತದಿಂದ ಪೂರ್ವ ನಿಯೋಜಿತ: ಅಶೋಕ್ ಕೆಂಡ

    ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 65(2), 140(4), 137(2) ಮತ್ತು 118 ಮತ್ತು ಪೋಕ್ಸೊ ಕಾಯ್ದೆಯ ಸೆಕ್ಷನ್ 6ರ ಅಡಿಯಲ್ಲಿ ರಜೀಬ್ ಘೋಷ್‌ಗೆ ನ್ಯಾಯಮೂರ್ತಿ ಇಂದ್ರಿಲಾ ಮುಖರ್ಜಿ ಶಿಕ್ಷೆ ವಿಧಿಸಿದ್ದಾರೆ. ಇದನ್ನೂ ಓದಿ: ಶೋಕಾಸ್ ನೋಟಿಸ್‌ಗೆ ಯತ್ನಾಳ್ ಕೊಟ್ಟ ಉತ್ತರ ಒಪ್ಪದ ಬಿಜೆಪಿ ಶಿಸ್ತು ಸಮಿತಿ

    ಕಳೆದ ವರ್ಷ ನವಂಬರ್ 30ರಂದು ರಜೀಬ್ ಘೋಷ್, ಮಗುವಿನ ಮೇಲೆ ಅತ್ಯಾಚಾರವೆಸಗಿದ್ದ. ಡಿ.5ರಂದು ಜಹರ್‌ಗ್ರಾಮ್ ಜಿಲ್ಲೆಯ ಗೋಪಿಬಲ್ಲವಪುರದ ನಿವಾಸದಲ್ಲಿ ರಜೀಬ್‌ನನ್ನು ಪೊಲೀಸರು ಬಂಧಿಸಿದ್ದರು. ಇದನ್ನೂ ಓದಿ: ಕಾರವಾರ | ಭೀಕರ ಅಪಘಾತ – ಒಂದೇ ಕುಟುಂಬದ ಮೂವರು ಸಾವು

    ರಸ್ತೆ ಬದಿಯ ಗುಡಿಸಲು ನಿವಾಸಿಯಾಗಿರುವ ಸಂತ್ರಸ್ತೆಯು, ಸರ್ಕಾರಿ ಸ್ವಾಮ್ಯದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವಿಶೇಷ ಸರ್ಕಾರಿ ಅಭಿಯೋಜಕ ಬಿಭಾಸ್ ಚಟರ್ಜಿ ತಿಳಿಸಿದ್ದಾರೆ.