– ಕಳೆದ ವರ್ಷ ಟ್ರೈನಿ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ಸುದ್ದಿಯಾಗಿತ್ತು ಕಾಲೇಜು
ಕೋಲ್ಕತ್ತಾ: ಟ್ರೈನಿ ವೈದ್ಯಯೊಬ್ಬರ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ದೇಶಾದ್ಯಂತ ಸುದ್ದಿಯಾಗಿತ್ತು. ಈಗ ಅದೇ ಕಾಲೇಜು ಮತ್ತೊಂದು ವಿಷಯಕ್ಕೆ ಸುದ್ದಿಯಲ್ಲಿದೆ.
ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಕಮರ್ಹಟಿಯಲ್ಲಿರುವ ಇಎಸ್‌ಐ ಆಸ್ಪತ್ರೆ ಕ್ವಾರ್ಟರ್ಸ್‌ನಲ್ಲಿ ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವುದು ಪತ್ತೆಯಾಗಿದೆ.
ವಿದ್ಯಾರ್ಥಿನಿಯ ತಾಯಿ ತನ್ನ ಮಗಳಿಗೆ ಕರೆ ಮಾಡಿದರೂ ಉತ್ತರಿಸದ ಕಾರಣ ಭಯಭೀತರಾಗಿದ್ದರು. ವಿದ್ಯಾರ್ಥಿನಿ ಇವಿ ಪ್ರಸಾದ್ ತನ್ನ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ವರದಿಗಾಗಿ ಕಾಯಲಾಗುತ್ತಿದೆ. ಮೃತ ವಿದ್ಯಾರ್ಥಿಯ ತಂದೆ ಬ್ಯಾಂಕಿನಲ್ಲಿ ಕೆಲಸ ಮಾಡುತ್ತಿದ್ದು, ಮುಂಬೈನಲ್ಲಿ ವಾಸಿಸುತ್ತಿದ್ದಾರೆ.
ಕಳೆದ ವರ್ಷ ಆ. ರಂದು ಆರ್‌ಜಿ ಕಾರ್ ಆಸ್ಪತ್ರೆಯ ಸೆಮಿನಾರ್ ಕೊಠಡಿಯಲ್ಲಿ ಸ್ನಾತಕೋತ್ತರ ತರಬೇತಿ ವೈದ್ಯರೊಬ್ಬರ ಶವ ಪತ್ತೆಯಾಗಿತ್ತು.
ಕೋಲ್ಕತ್ತಾ: ಪ್ರಾಧ್ಯಾಪಕರೊಬ್ಬರು ಕಾಲೇಜು ವಿದ್ಯಾರ್ಥಿಯನ್ನು ತರಗತಿಯಲ್ಲೇ ವಿವಾಹ ಆಗುತ್ತಿರುವ ವೀಡಿಯೋ ವೈರಲ್ ಆಗಿದ್ದು, ತನಿಖೆಗೆ ಆದೇಶ ಹೊರಡಿಸಲಾಗಿದೆ. ಪಶ್ಚಿಮ ಬಂಗಾಳದಲ್ಲಿ ಈ ಘಟನೆ ನಡೆದಿದೆ.
ಕೋಲ್ಕತ್ತಾದಿಂದ ಸುಮಾರು 150 ಕಿಮೀ ದೂರದಲ್ಲಿರುವ ನಾಡಿಯಾದಲ್ಲಿರುವ ಹರಿಂಗಟಾ ಟೆಕ್ನಾಲಜಿ ಕಾಲೇಜಿನ ಸೈಕಾಲಜಿ ವಿಭಾಗದಲ್ಲಿ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೌಲಾನಾ ಅಬುಲ್ ಕಲಾಂ ಆಜಾದ್ ಯೂನಿವರ್ಸಿಟಿ ಆಫ್ ಟೆಕ್ನಾಲಜಿ (MAKAUT) ಅಡಿಯಲ್ಲಿ ಕಾಲೇಜು ಕಾರ್ಯನಿರ್ವಹಿಸುತ್ತದೆ.
ಪ್ರೊಫೆಸರ್ ಪಾಯಲ್ ಬ್ಯಾನರ್ಜಿ ವಧುವಿನ ಉಡುಗೆ ತೊಟ್ಟು ಹೂಮಾಲೆ ಧರಿಸಿರುವುದು ವೀಡಿಯೋದಲ್ಲಿದೆ. ಆದರೆ, ಇದು ನಿಜವಾದ ಮದುವೆಯಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಶೈಕ್ಷಣಿಕ ಉದ್ದೇಶಕ್ಕಾಗಿ ಈ ರೀತಿಯ ಮಾದರಿ ತೋರಿಸಲಾಗಿದೆ ಎಂದು ಹೇಳಿದ್ದಾರೆ.
ಆಕೆಯನ್ನು ತನಿಖೆಗಾಗಿ ರಜೆಯ ಮೇಲೆ ಕಳುಹಿಸಲಾಗಿದೆ. ಇದಕ್ಕಾಗಿ ಅಧಿಕಾರಿಗಳು ಮೂರು ಸದಸ್ಯರ ಸಮಿತಿಯನ್ನು ರಚಿಸಿದ್ದಾರೆ. ಸೂಕ್ತ ತನಿಖೆ ಇಲ್ಲದೆ ನಾವು ಯಾವುದೇ ಕಠಿಣ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವೀಡಿಯೋಗಳಲ್ಲಿ, ಹಿಂದೂ ವಿವಾಹ ಪದ್ಧತಿಯಂತೆ ವಿದ್ಯಾರ್ಥಿಯ ಮೇಲೆ ‘ಹಲ್ದಿ’ ಬಳಿದಿರುವುದನ್ನು ತೋರಿಸಲಾಗಿದೆ. ಇನ್ನೊಂದರಲ್ಲಿ, ಇಬ್ಬರು ಹೂಮಾಲೆಗಳನ್ನು ವಿನಿಮಯ ಮಾಡಿಕೊಳ್ಳುತ್ತಿದ್ದಾರೆ. ಪವಿತ್ರ ಅಗ್ನಿಯನ್ನು ಸೂಚಿಸುವ ಮೇಣದಬತ್ತಿಯ ಸುತ್ತಲೂ ಏಳು ಹೆಜ್ಜೆ ಹಾಕುತ್ತಿದ್ದಾರೆ.
ಒಬ್ಬರನ್ನೊಬ್ಬರು ತಮ್ಮ ಸಂಗಾತಿಯಾಗಿ ಸ್ವೀಕರಿಸುವ ಪ್ರಾಧ್ಯಾಪಕ ಮತ್ತು ವಿದ್ಯಾರ್ಥಿಯ ಸಹಿಯೊಂದಿಗೆ ವಿಶ್ವವಿದ್ಯಾಲಯದ ಲೆಟರ್‌ಹೆಡ್ ಕೂಡ ವೈರಲ್ ಆಗಿದೆ. ಪತ್ರ ಮೂರು ಸಾಕ್ಷಿಗಳ ಸಹಿಯನ್ನು ಹೊಂದಿದೆ.
ಕೋಲ್ಕತ್ತಾ: ಆರ್‌ಜಿ ಕರ್ (RG Kar Case) ಆಸ್ಪತ್ರೆಯ ಟ್ರೈನಿ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಸಂಜಯ್ ರಾಯ್‌ನ ತಾಯಿ ಮಾಲತಿ ರಾಯ್ ಭಾನುವಾರ ತಮ್ಮ ಮಗ ತಪ್ಪಿತಸ್ಥನಾಗಿದ್ದರೆ ಗಲ್ಲಿಗೆ ಏರಿಸಿದರೂ ಬೇಸರ ಇಲ್ಲ ಎಂದು ಹೇಳಿದ್ದಾರೆ.
ಸೀಲ್ಡಾ ನ್ಯಾಯಾಲಯವು (Court) ಸಂಜಯ್‌ನನ್ನು ದೋಷಿ ಎಂದು ತೀರ್ಪು ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಅವರು ಮಾಧ್ಯಮಗಳ ಜೊತೆ ಮಾತಾಡಿದ್ದಾರೆ. ಈ ವೇಳೆ, ನಾನು ಒಂಟಿಯಾಗಿದ್ದಾಗ ಅಳುತ್ತೇನೆ, ಆದರೆ ಅವನ ಶಿಕ್ಷೆಯನ್ನು ವಿಧಿ ಎಂದು ಸ್ವೀಕರಿಸುತ್ತೇನೆ. ಮಹಿಳೆಯಾಗಿ ಮತ್ತು ಮೂರು ಹೆಣ್ಣು ಮಕ್ಕಳ ತಾಯಿಯಾಗಿ, ನನ್ನ ಮಗಳಂತಿರುವ ಮಹಿಳಾ ವೈದ್ಯೆಯ ತಾಯಿಯ ಯಾತನೆ ಮತ್ತು ನೋವನ್ನು ನಾನು ಅನುಭವಿಸಬಲ್ಲೆ. ಅವನ ಅಪರಾಧವು ಕಾನೂನಿನ ದೃಷ್ಟಿಯಲ್ಲಿ ಸಾಬೀತಾಗಿರುವುದರಿಂದ ನನಗೆ ಯಾವುದೇ ಆಕ್ಷೇಪವಿಲ್ಲ ಎಂದಿದ್ದಾರೆ.
ನ್ಯಾಯಾಲಯದ ವಿಚಾರಣೆಯ ಸಮಯದಲ್ಲಿ, ಜೈಲಿನಲ್ಲಿ ಮಗನನ್ನು ಭೇಟಿಯಾಗಿದ್ದೀರಾ ಎಂಬ ಪ್ರಶ್ನೆಗೆ, ಇಲ್ಲ, ನಾನು ಏಕೆ ಭೇಟಿ ಮಾಡಬೇಕು? ಆರೋಪಗಳು ಸುಳ್ಳು ಎಂದು ಕಂಡುಬಂದಿದ್ದರೆ ನಾನು ಭೇಟಿ ಮಾಡಲು ಪ್ರಯತ್ನಿಸುತ್ತಿದ್ದೆ ಎಂದಿದ್ದಾರೆ.
ಸಂಜಯ್ ಸಹೋದರಿ ಪ್ರತಿಕ್ರಿಯಿಸಿ, ಅವನು ತಪ್ಪಿತಸ್ಥನೆಂದು ಸಾಬೀತಾದರೆ, ಕಾನೂನು ಅವನಿಗೆ ಶಿಕ್ಷೆ ನೀಡಲಿ. ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುವುದಿಲ್ಲ ಎಂದಿದ್ದಾರೆ.
ಏನಿದು ಪ್ರಕರಣ?
ಕಳೆದ ಆಗಸ್ಟ್ 9ರಂದು ಬೆಳಗ್ಗೆ ಸ್ನಾತಕೋತ್ತರ ತರಬೇತಿ ನಿರತ ವೈದ್ಯೆಯ ಶವ ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಅತ್ಯಾಚಾರ ಮತ್ತು ಕೊಲೆಯಾದ ರೀತಿಯಲ್ಲಿ ಪತ್ತೆಯಾಗಿತ್ತು. ಬಳಿಕ ಕೃತ್ಯ ನಡೆಸಿದ್ದ ಆರೋಪಿ ಸಂಜಯ್‌ನನ್ನು ಪೊಲೀಸರು ಬಂಧಿಸಿದ್ದರು. ಅಶ್ಲೀಲ ವೀಡಿಯೋಗಳಿಗೆ ವ್ಯಸನಿಯಾಗಿದ್ದ ಸಂಜಯ್ ಕೊಲೆಯ ನಂತರ ಸಾಕ್ಷ್ಯ ನಾಶಪಡಿಸಲು ರಕ್ತಸಿಕ್ತ ಬಟ್ಟೆಯನ್ನು ತೊಳೆದಿದ್ದ ಎನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದರು. ಈ ಹಿಂದೆ ಪೊಲೀಸರಿಗೆ ಸೇವಕನಾಗಿದ್ದ ಈತ 4 ಮದುವೆಯಾಗಿದ್ದು, ಪತ್ನಿಯರಿಗೆ ಆಗಾಗ ಕಿರುಕುಳ ನೀಡುತ್ತಿದ್ದ ಎಂದು ತನಿಖೆಯಿಂದ ತಿಳಿದುಬಂದಿತ್ತು.
ಕೋಲ್ಕತ್ತಾ: ಇಲ್ಲಿನ (Kolkata) ಆರ್‌ಜಿ ಕರ್ ಆಸ್ಪತ್ರೆಯಲ್ಲಿ ನಡೆದಿದ್ದ ವೈದ್ಯೆಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ (RG Kar Hospital Case) ಸಂಬಂಧಿಸಿದಂತೆ ಕೋಲ್ಕತ್ತಾದ ಸೀಲ್ದಾ ನ್ಯಾಯಾಲಯವು (Court) ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಮತ್ತು ತಾಲಾ ಪೊಲೀಸ್ ಠಾಣೆಯ ಮಾಜಿ ಅಧಿಕಾರಿ ಅಭಿಜಿತ್ ಮೊಂಡಲ್‌ಗೆ ಜಾಮೀನು ಮಂಜೂರು ಮಾಡಿದೆ.
ಕೋಲ್ಕತ್ತಾ ಹೈಕೋರ್ಟ್‌ನಿಂದ ಪ್ರಕರಣದ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಿಲಾಗಿತ್ತು. ಸಿಬಿಐ 90 ದಿನಗಳ ಅವಧಿಯಲ್ಲಿ ಆರೋಪಿಗಳ ವಿರುದ್ಧ ಆರೋಪಪಟ್ಟಿ ಸಲ್ಲಿಸಲು ವಿಫಲವಾಗಿದೆ. ಇದು ಆರೋಪಗಳಿಗೆ ಜಾಮೀನು ಸಿಗಲು ಕಾರಣವಾಯಿತು.
ಈ ಬಗ್ಗೆ ಪ್ರತಿಕ್ರಿಯಿಸಿರುವ ಸಂತ್ರಸ್ತ ವೈದ್ಯೆಯ ತಾಯಿ, ಸಿಬಿಐ ತನಿಖೆಯನ್ನು ಚುರುಕುಗೊಳಿಸುತ್ತದೆ ಮತ್ತು ನ್ಯಾಯ ಸಿಗುವಂತೆ ಮಾಡುತ್ತದೆ ಎಂದು ನಾವು ಭಾವಿಸಿದ್ದೆವು. ಆದರೆ ಈಗ, ಆರೋಪಿಗಳಿಗೆ ಜಾಮೀನು ನೀಡಿರುವುದರಿಂದ, ವ್ಯವಸ್ಥೆ ನಮ್ಮನ್ನು ವಿಫಲಗೊಳಿಸುತ್ತಿದೆ ಎಂದು ಭಾಸವಾಗುತ್ತಿದೆ. ಅಲ್ಲದೇ ಪ್ರತಿದಿನ ಪ್ರಭಾವಶಾಲಿಗಳು ಶಿಕ್ಷೆಯಿಲ್ಲದೆ ತಪ್ಪಿಸಿಕೊಳ್ಳುವ ಮತ್ತೊಂದು ಪ್ರಕರಣ ಇದಾಗಲಿದೆಯೇ ಎಂದು ವಿಷಾಧ ವ್ಯಕ್ತಪಡಿಸಿದ್ದಾರೆ.
ಬಂಧಿತ ಪೊಲೀಸ್ ಅಧಿಕಾರಿಯು ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಲು ವಿಳಂಬ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಸಂದೀಪ್ ಘೋಷ್ ಸಾಕ್ಷ್ಯವನ್ನು ನಾಶಗೊಳಿಸಿದ ಆರೋಪವನ್ನು ಎದುರಿಸುತ್ತಿದ್ದಾರೆ. ಇಬ್ಬರನ್ನೂ ಸಿಬಿಐ ಬಂಧಿಸಿತ್ತು.
ನ್ಯಾಯಾಲಯದ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮೊಂಡಾಲ್ ಅವರ ವಕೀಲರು, ಶೀಘ್ರದಲ್ಲೇ ಅವರನ್ನು ನ್ಯಾಯಾಂಗ ಬಂಧನದಿಂದ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಆರ್‌ಜಿ ಕರ್ ಆಸ್ಪತ್ರೆಯಲ್ಲಿ ಹಣಕಾಸು ಅವ್ಯವಹಾರದ ಪ್ರತ್ಯೇಕ ಪ್ರಕರಣದಲ್ಲಿ ಆರೋಪಿಯಾಗಿರುವ ಸಂದೀಪ್ ಘೋಷ್, ಅತ್ಯಾಚಾರ-ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿದ್ದರೂ ಸಹ ಬಂಧನದಲ್ಲಿಯೇ ಇರಲಿದ್ದಾರೆ ಎಂದು ಅವರ ವಕೀಲರು ತಿಳಿಸಿದ್ದಾರೆ.
ಏನಿದು ಕೇಸ್?
ಈ ವರ್ಷ ಆಗಸ್ಟ್‌ನಲ್ಲಿ ಕೋಲ್ಕತ್ತಾದ ಸರ್ಕಾರಿ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಮಹಿಳಾ ಸ್ನಾತಕೋತ್ತರ ತರಬೇತಿ (ಪಿಜಿಟಿ) ವೈದ್ಯೆಯ ಶವ ಅರೆನಗ್ನ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮರಣೋತ್ತರ ಪರೀಕ್ಷೆ ನಡೆಸಿದಾಗ ಮಹಿಳಾ ವೈದ್ಯೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ಬೆಳಕಿಗೆ ಬಂದಿತ್ತು. ಈ ಸಂಬಂಧ ಸಂಜಯ್ ರಾಯ್ ಎಂಬಾತನನ್ನು ಬಂಧಿಸಲಾಗಿತ್ತು. ಅಲ್ಲದೇ ಕೆಲವು ಪ್ರಮುಖ ಆರೋಪಿಗಳನ್ನು ಸಿಬಿಐ ಬಂಧಿಸಿದ್ದು, ತನಿಖೆ ನಡೆಸುತ್ತಿದೆ.
ನವದೆಹಲಿ: ವಿಶ್ವದ 121 ಅತ್ಯಂತ ಕಲುಷಿತ ನಗರಗಳ ಪಟ್ಟಿಯಲ್ಲಿ ಭಾರತದ ಮೂರು ನಗರಗಳು ಸ್ಥಾನ ಪಡೆದುಕೊಂಡಿದೆ. ರಾಷ್ಟ್ರ ರಾಜಧಾನಿ ದೆಹಲಿ (Delhi) ಮಾಲಿನ್ಯಕ್ಕೆ ಪ್ರಪಂಚದಲ್ಲೇ ಮೊದಲ ಸ್ಥಾನ ಪಡೆದುಕೊಂಡರೆ, ಮುಂಬೈ (Mumbai) ಮತ್ತು ಕೋಲ್ಕತ್ತಾ (Kolkata) ಅತಿ ಮಾಲಿನ್ಯಯುತ ನಗರಗಳ ಪಟ್ಟಿಯಲ್ಲಿವೆ.
ಸ್ವಿಸ್ ಸಂಸ್ಥೆ IQAirನ ಲೈವ್ ಪಟ್ಟಿಯಲ್ಲಿ, ರಾಜಧಾನಿ ದೆಹಲಿಯು 515 ವಾಯು ಗುಣಮಟ್ಟ ಸೂಚ್ಯಂಕ (AQI) ಯೊಂದಿಗೆ ಇಡೀ ಪ್ರಪಂಚದಲ್ಲಿ ಅತ್ಯಂತ ಕಲುಷಿತ ನಗರವಾಗಿದೆ. ಪಾಕಿಸ್ತಾನದ ಲಾಹೋರ್ ಎಕ್ಯೂಐ 432ನೊಂದಿಗೆ ಎರಡನೇ ಸ್ಥಾನದಲ್ಲಿದೆ. ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯದ ಕಿನ್ಶಾಸಾ ನಗರ ಎಕ್ಯೂಐ 193ನೊಂದಿಗೆ ಕಲುಷಿತ ನಗರಗಳಲ್ಲಿ ಮೂರನೇ ಸ್ಥಾನದಲ್ಲಿದೆ. ಇದನ್ನೂ ಓದಿ: ಬಿಹಾರದ ಕಾರ್ಯಕ್ರಮದಲ್ಲಿ ಮೋದಿ ಪಾದಸ್ಪರ್ಶಕ್ಕೆ ನಿತೀಶ್ ಯತ್ನ – ವೀಡಿಯೋ ವೈರಲ್
ಈಜಿಪ್ಟ್ನ ಕೈರೋ (AQI 184) ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದೆ. ವಿಯೆಟ್ನಾಂನ ರಾಜಧಾನಿ ಹನೋಯಿ (AQI 168) ಐದನೇ ಸ್ಥಾನದಲ್ಲಿದೆ. ಕತಾರ್‌ನ ದೋಹಾ ನಗರವು (AQI 166) ಆರನೇ ಸ್ಥಾನದಲ್ಲಿದೆ. ಇದಲ್ಲದೆ ಸೌದಿ ಅರೇಬಿಯಾದ ರಿಯಾದ್ ಏಳನೇ ಸ್ಥಾನದಲ್ಲಿದೆ. ನೇಪಾಳದ ರಾಜಧಾನಿ ಕಠ್ಮಂಡು, ಮಂಗೋಲಿಯಾದ ಉಲಾನ್‌ಬಾತರ್, ಬಾಂಗ್ಲಾದೇಶದ ರಾಜಧಾನಿ ಢಾಕಾ ನಂತರದ ಸ್ಥಾನಗಳಲ್ಲಿದೆ. ಇದನ್ನೂ ಓದಿ: MUDA Scam | ಬ್ಲ್ಯಾಕ್‌ಮೇಲ್ ಆರೋಪ – ಸ್ನೇಹಮಯಿ ಕೃಷ್ಣ ವಿರುದ್ಧ ಎಫ್‌ಐಆರ್
ದೆಹಲಿಯಲ್ಲಿ ದೀಪಾವಳಿ ಹಬ್ಬದ ಮುನ್ನ ಮಾಲಿನ್ಯದ ಪ್ರಮಾಣ ತೀವ್ರವಾಗುತ್ತದೆ. ಪಟಾಕಿ, ವಾಹನಗಳ ಮಾಲಿನ್ಯ, ಕಟ್ಟಡ ತಾಜ್ಯದ ಧೂಳು ಹಾಗೂ ನೆರೆಯ ರಾಜ್ಯಗಳಲ್ಲಿ ಕೃಷಿ ರಾಜ್ಯ ಸುಡುವುದು ಮಾಲಿನ್ಯಕ್ಕೆ ಪ್ರಮುಖ ಕಾರಣವಾಗಿದೆ. ಇತ್ತಿಚಿಗೆ ಪ್ರಕರಣದ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ವರ್ಷವಿಡೀ ಪಟಾಕಿ ನಿಷೇಧಿಸುವ ಬಗ್ಗೆ ನಿರ್ಧರಿಸಲು ಸೂಚಿಸಿದೆ. ಇದನ್ನೂ ಓದಿ: Chitradurga| ಮನೆ ಕಾಂಪೌಂಡ್ ಒಳಗೆ ನುಗ್ಗಿ ಮಹಿಳೆಯ ಕೊರಳಲ್ಲಿದ್ದ ಸರ ಕದ್ದು ಆರೋಪಿ ಪರಾರಿ
ಡೆಹ್ರಾಡೂನ್: ಉತ್ತರಾಖಂಡದ (Uttarakhand) ಹೋಟೆಲ್‌ವೊಂದರಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ಕೋಲ್ಕತ್ತಾದ (Kolkatta) ಜಾದವ್‌ಪುರ ವಿಶ್ವವಿದ್ಯಾಲಯದ ಪ್ರಾಧ್ಯಾಪಕರ ಶವ ಪತ್ತೆಯಾಗಿದೆ.
ಪ್ರಾಧ್ಯಾಪಕರನ್ನು ಮೈನಕ್ ಪಾಲ್ (44) ಎಂದು ಗುರುತಿಸಲಾಗಿದೆ. ಫಿಲಾಸಫಿ ವಿಭಾಗದ ಪ್ರೊಫೆಸರ್ ಮೈನಾಕ್ ಪಾಲ್ ಅವರ ಶವ ನ.8 ರಂದು ವಾಶ್ ರೂಂನಲ್ಲಿ ಪತ್ತೆಯಾಗಿದೆ. ಕುತ್ತಿಗೆ ಮತ್ತು ಕೈಗಳ ಮೇಲೆ ಗಾಯವಾಗಿತ್ತು. ಪ್ರಾಥಮಿಕ ವರದಿ ಪ್ರಕಾರ, ಮೈನಕ್ ಪಾಲ್ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಇಸ್ರೇಲ್ ಮೇಲೆ 150 ರಾಕೆಟ್‌ಗಳ ಸುರಿಮಳೆ – ಹಿಜ್ಬುಲ್ಲಾ ಭೀಕರ ದಾಳಿಗೆ ಹಲವೆಡೆ ಹಾನಿ!
ಶಿಕ್ಷಕ ಮಂಡಳಿಯ ಪ್ರಧಾನ ಕಾರ್ಯದರ್ಶಿ ಪಾರ್ಥ ಪ್ರತಿಮ್ ರಾಯ್ ಮಾತನಾಡಿ, ಮೈನಕ್ ಪಾಲ್ ಅವರ ಸಾವಿನ ಸುದ್ದಿ ಕೇಳಿದಾಗಿನಿಂದ ನಾವು ತೀವ್ರ ಆಘಾತಕ್ಕೆ ಒಳಗಾಗಿದ್ದೇವೆ. ಪಾಲ್ ಅವರು ಪ್ರೀತಿಯ ವ್ಯಕ್ತಿಯಾಗಿದ್ದರು. ವಿದ್ಯಾರ್ಥಿಗಳು ಮತ್ತು ಸಹೋದ್ಯೋಗಿಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಶಿಕ್ಷಕರಾಗಿ ಮತ್ತು ಸಂಶೋಧಕರಾಗಿ ಮೈನಕ್ ಪಾಲ್ ಉತ್ತಮ ಸೇವೆ ಸಲ್ಲಿಸಿದ್ದಾರೆ, ಎಂದು ಹೇಳಿದ್ದಾರೆ. ಇದನ್ನೂ ಓದಿ: ಯಾಸೀರ್ ಪಠಾಣ್ ಮೇಲೆ ಯಾವುದೇ ರೌಡಿಶೀಟ್ ಇಲ್ಲ: ಎಸ್ಪಿ ಸ್ಪಷ್ಟನೆ
ಘಟನೆಯ ಬಳಿಕ 40 ನಿಮಿಷಗಳ ಕಾಲ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ದಕ್ಷಿಣೇಶ್ವರ-ಡಮ್‌ಡಮ್ ಮತ್ತು ಸೆಂಟ್ರಲ್-ಕವಿ ಸುಭಾಸ್ ನಿಲ್ದಾಣಗಳ ನಡುವೆ ಮೆಟ್ರೋ ಸೇವೆಗೆ ಅಡ್ಡಿಯುಂಟಾಯಿತು.
– 4 ವಾರದೊಳಗೆ ನವಿಕರಿಸಿದ ವರದಿ ಸಲ್ಲಿಸಲು ಎನ್‌ಟಿಎಫ್‌ಗೆ ಸೂಚನೆ
ನವದೆಹಲಿ: ಕೋಲ್ಕತ್ತಾದ (Kolkata) ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಯುವ ವೈದ್ಯೆಯ ಮೇಲೆ ನಡೆದಿದ್ದ ಅತ್ಯಾಚಾರ-ಕೊಲೆ ಪ್ರಕರಣದ ವಿಚಾರಣೆಯನ್ನು ಪಶ್ಚಿಮ ಬಂಗಾಳದಿಂದ (West Bengal) ಬೇರೆ ರಾಜ್ಯಕ್ಕೆ ವರ್ಗಾಯಿಸಲು ಸುಪ್ರೀಂ ಕೋರ್ಟ್ (Supreme Court) ನಿರಾಕರಿಸಿದೆ.
ಕೆಲವು ವಕೀಲರು ಸ್ವಯಂಪ್ರೇರಿತವಾಗಿ ಪ್ರಕರಣದ ವಿಚಾರಣೆಯನ್ನು ಪಶ್ಚಿಮ ಬಂಗಾಳದಿಂದ ಬೇರೆ ರಾಜ್ಯಕ್ಕೆ ವರ್ಗಾಯಿಸುವಂತೆ ಮನವಿ ಮಾಡಿದ್ದರು. ಈ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಅಲ್ಲದೇ ಮಣಿಪುರದಂತಹ ಹಿಂಸಾಚಾರದ ಪ್ರಕರಣ ಸೇರಿದಂತೆ, ಕೆಲವು ಗಂಭೀರ ಪ್ರಕರಣಗಳನ್ನು ನಾವು ರಾಜ್ಯದಿಂದ ಹೊರಗೆ ವರ್ಗಾಯಿಸಿದ್ದೇವೆ. ಅಲ್ಲದೇ ವಿಚಾರಣಾ ನ್ಯಾಯಾಲಯ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದ ನಂತರ ಮತ್ತೊಂದು ತನಿಖೆಗೆ ಆದೇಶಿಸಲು ಅಧಿಕಾರ ಹೊಂದಿದೆ ಎಂದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠ ಅಭಿಪ್ರಾಯಪಟ್ಟಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸಲ್ಲಿಸಿದ 6ನೇ ವರದಿಯನ್ನು ಸಹ ಸುಪ್ರೀಂ ಕೋರ್ಟ್ ಪರಿಶೀಲಿಸಿತು. ಅಲ್ಲದೇ ಆಸ್ಪತ್ರೆಗಳಲ್ಲಿ ವೈದ್ಯರ ಸುರಕ್ಷತೆಗೆ ರಾಷ್ಟ್ರೀಯ ಕಾರ್ಯಪಡೆ (NTF) ಸಿದ್ಧ ಪಡಿಸಿದ ವರದಿಯನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿತು. ಎನ್‌ಟಿಎಫ್‌ನ ವರದಿಯನ್ನು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳೊಂದಿಗೆ ಹಂಚಿಕೊಳ್ಳುವಂತೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ. ಅಲ್ಲದೇ ನಾಲ್ಕು ವಾರಗಳ ನಂತರ ನವೀಕರಿಸಿದ ವರದಿಯನ್ನು ಸಲ್ಲಿಸುವಂತೆ ಕೋರ್ಟ್ ಸೂಚಿಸಿತು.
ಪಶ್ಚಿಮ ಬಂಗಾಳದ ವಿಚಾರಣಾ ನ್ಯಾಯಾಲಯವು ನವೆಂಬರ್ 11 ರಂದು ಈ ಪ್ರಕರಣದ ವಿಚಾರಣೆ ನಡೆಸಲಿದೆ.
ಕೋಲ್ಕತ್ತಾ: ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ವ್ಯಕ್ತಿಯನ್ನು ಗ್ರಾಮಸ್ಥರು ಮರಕ್ಕೆ ಕಟ್ಟಿ ಥಳಿಸಿ ಹತ್ಯೆಗೈದ ಘಟನೆ ಪಶ್ಚಿಮ ಬಂಗಾಳದ (West Bengal) ಫಲಕಟಾ ಗ್ರಾಮದಲ್ಲಿ ನಡೆದಿದೆ.
ಮೋನಾ ರಾಯ್ (40) ಎಂಬಾತನನ್ನು ಗ್ರಾಮಸ್ಥರು ಮರಕ್ಕೆ ಕಟ್ಟಿ ಥಳಿಸಿದ್ದಾರೆ. ಪೊಲೀಸರು ಆತನನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಆತ ಮೃತಪಟ್ಟಿದ್ದಾನೆ.
6 ವರ್ಷದ ಅಪ್ರಾಪ್ತೆ ಕಾಣೆಯಾದ ಬಗ್ಗೆ ಆಕೆಯ ಪೋಷಕರು ಸಮೀಪದ ಪೊಲೀಸ್ (Police) ಠಾಣೆಗೆ ದೂರು ನೀಡಿದ್ದರು. ಪೊಲೀಸರ ಹುಡುಕಾಟದ ವೇಳೆ ಆಕೆಯ ಬಟ್ಟೆ ಪತ್ತೆಯಾಗಿತ್ತು. ಬಳಿಕ ಬಾಲಕಿಯ ಶವ ಕೊಳ ಒಂದರಲ್ಲಿ ಪತ್ತೆಯಾಗಿತ್ತು. ಬಳಿಕ ಆಕೆಯ ಮರಣೋತ್ತರ ಪರೀಕ್ಷೆ ನಡೆಸಲಾಗಿತ್ತು.
ಈ ಬಗ್ಗೆ ಪ್ರತಿಕ್ರಿಯಿಸಿರು ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ (Suvendu Adhikari), ಸಂತ್ರಸ್ತೆಯ ಪೋಷಕರನ್ನು ಭೇಟಿ ಮಾಡಿದ್ದೇನೆ. ಅಲ್ಲದೇ ಮರಣೋತ್ತರ ಪರೀಕ್ಷೆಯ ಬಗ್ಗೆ ಕೆಲವು ಅನುಮಾನಗಳಿವೆ. ನ್ಯಾಯಾಲಯದಲ್ಲಿ ಸಂತ್ರಸ್ತೆಯ ಕುಟುಂಬಕ್ಕೆ ಅದು ತೊಡಕಾಗಬಹುದು. ಅವರ ಕಾನೂನು ಸಹಾಯಕ್ಕೆ ನಾವು ಇರಲಿದ್ದೇವೆ ಎಂದು ತಿಳಿಸಿದ್ದಾರೆ.
ಟ್ಯೂಷನ್‌ಗೆ ಹೋಗುತ್ತಿದ್ದ ಯುವತಿಯನ್ನು ಅಪಹರಿಸಿ ಅತ್ಯಾಚಾರ
ಕೋಲ್ಕತ್ತಾದ ಪಕ್ಕದಲ್ಲಿರುವ ಗೈಘಾಟದಲ್ಲಿ ಶುಕ್ರವಾರ ಸಂಜೆ ಟ್ಯೂಷನ್‌ಗೆ ಹೋಗುತ್ತಿದ್ದ ಯುವತಿಯೊಬ್ಬಳನ್ನು ಅಪಹರಿಸಿ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. ಘಟನೆ ಬಳಿಕ ಆಕೆ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎನ್ನಲಾಗಿದೆ. ಶಂಕಿತ ವ್ಯಕ್ತಿ ಸ್ಥಳೀಯ ತೃಣಮೂಲ ನಾಯಕನ ಸೋದರಳಿಯ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಆರೋಪಿ ಒಂದು ವರ್ಷದಿಂದ ಆಕೆಗೆ ಕಿರುಕುಳ ನೀಡುತ್ತಿದ್ದ ಎಂದು ಆಕೆಯ ಪೋಷಕರು ಹೇಳಿಕೊಂಡಿದ್ದಾರೆ. ಯುವತಿಯ ಪೋಷಕರು ನೀಡಿದ ದೂರಿನ ಅನ್ವಯ ಆತನನ್ನು ಬಂಧಿಸಲಾಗಿದೆ.
ಈ ಹಿಂದೆ ಗ್ರಾಮದಲ್ಲಿ ವಿಷಯ ಪ್ರಸ್ತಾಪಿಸಿದಾಗ ಆತ ತನ್ನ ತಪ್ಪನ್ನು ಒಪ್ಪಿಕೊಂಡು ಕ್ಷಮೆ ಕೇಳಿದ್ದ. ಆದರೆ ಅದನ್ನು ಲೆಕ್ಕಿಸದೆ ಈಗ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಬಳಿಕ ಆಕೆ ಮನೆಯಲ್ಲಿ ನೇಣು ಬಿಗಿದುಕೊಳ್ಳಲು ಯತ್ನಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
– ಒಳನುಸುಳುವಿಕೆ ತಡೆಯಿಂದ ಮಾತ್ರ ಬಂಗಾಳದಲ್ಲಿ ಶಾಂತಿ ನೆಲೆಸಲು ಸಾಧ್ಯ
ಕೋಲ್ಕತ್ತಾ: ರವೀಂದ್ರ ಸಂಗೀತ ಕೇಳುವ ಬದಲಿಗೆ ಬಂಗಾಳದಲ್ಲಿಂದು (West Bengal) ಬಾಂಬ್‌ಗಳ ಸದ್ದು ಕೇಳುತ್ತಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ (Mamata Banerjee) ವಿರುದ್ಧ ಕಿಡಿಕಾರಿದ್ದಾರೆ.
ಪಶ್ಚಿಮ ಬಂಗಾಳದ ಗಡಿಯಲ್ಲಿ ನಿರ್ಮಿಸಿರುವ ಪ್ರಯಾಣಿಕರ ನೂತನ ಟರ್ಮಿನಲ್ ಅನ್ನು ಉದ್ಘಾಟಿಸಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಸ್ಥಾನ ಗೆದ್ದ ಬಳಿಕ ಮಮತಾ ದೀದಿ ಸಂತೋಷ ಪಡುತ್ತಿದ್ದರು. ಆದರೆ ನಾವು ಎರಡು ಸ್ಥಾನ ಪಡೆದಿದ್ದರೂ 370ನೇ ವಿಧಿಯನ್ನು ತೆಗೆದುಹಾಕುವ ಗುರಿ ಹೊಂದಿದ್ದೆವು ಎಂಬುದನ್ನು ಮರೆಯಬೇಡಿ. 2026ರಲ್ಲಿ ಬಂಗಾಳದಲ್ಲಿ ಬಿಜೆಪಿ (BJP) ಮೂರನೇ ಎರಡರಷ್ಟು ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಹರಿಹಾಯ್ದರು. ಇದನ್ನೂ ಓದಿ: ತಾಕತ್ತಿದ್ರೆ ನನ್ನ ಅಕ್ರಮದ ದಾಖಲೆ ಬಿಡುಗಡೆಗೊಳಿಸಿ – ಬೈರತಿ ಸುರೇಶ್‌ಗೆ ಶೋಭಾ ಕರಂದ್ಲಾಜೆ ಸವಾಲ್
ಅಕ್ರಮ ವಲಸೆ ಮಿತಿ ಮೀರಿದೆ:
ಪಶ್ಚಿಮ ಬಂಗಾಳದಲ್ಲಿ ಶಾಂತಿ ನೆಲಸಲು ಗಡಿಗಳಲ್ಲಿ ಒಳನುಸುಳುವಿಕೆ ಮೇಲೆ ನಿಯಂತ್ರಣ ಸಾಧಿಸುವುದು ಅತ್ಯಗತ್ಯವಾಗಿದೆ. 2026ರಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಅಕ್ರಮ ವಲಸೆಯನ್ನು ತಡೆಯಲಾಗುವುದು. ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ದೇಶದಲ್ಲಿ ಶಾಂತಿ ನೆಲೆಸಲು ಭೂಬಂದರುಗಳು ಪ್ರಮುಖ ಪಾತ್ರವಹಿಸುತ್ತದೆ. ಬಾಂಗ್ಲಾದೇಶ ಮತ್ತು ಭಾರತದ ಸಂಬಂಧ ಉತ್ತಮವಾಗಿರಲು ಗಡಿಗಳಲ್ಲಿ ನುಸುಳುವಿಕೆಯ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ದೀಪಾವಳಿ ಹಬ್ಬಕ್ಕೆಂದು ಊರಿಗೆ ತೆರಳುವಾಗ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ – 10 ಮಂದಿಗೆ ಗಾಯ
ಆರ್.ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ನಡೆದ ಅತ್ಯಾಚಾರ ಪ್ರಕರಣದ ಕುರಿತು ಮಾತನಾಡಿ, ಸಂದೇಶ್‌ಖಲಿ ಮತ್ತು ಆರ್‌ಜಿ.ಕರ್ ಅತ್ಯಾಚಾರ ಪ್ರಕರಣಗಳನ್ನು ನೋಡಿದ ಮೇಲೆ ಬಂಗಾಳದಲ್ಲಿ ನಮ್ಮ ತಾಯಂದಿರು ಮತ್ತು ಸಹೋದರಿಯರು ಸುರಕ್ಷಿತವಾಗಿರಲು ಸಾಧ್ಯವಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಶ್ರೀ ಶ್ರೀ ರವಿಶಂಕರ್ ಗುರೂಜಿಗೆ ಫಿಜಿ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ