Tag: kolkatta

  • ಕೋಲ್ಕತ್ತಾದಲ್ಲಿ 40 ವರ್ಷಗಳಲ್ಲೇ ದಾಖಲೆಯ ಮಳೆ – ರಾಜ್ಯದಲ್ಲಿಯೂ ನಿಲ್ಲದ ವರುಣಾರ್ಭಟ

    ಕೋಲ್ಕತ್ತಾದಲ್ಲಿ 40 ವರ್ಷಗಳಲ್ಲೇ ದಾಖಲೆಯ ಮಳೆ – ರಾಜ್ಯದಲ್ಲಿಯೂ ನಿಲ್ಲದ ವರುಣಾರ್ಭಟ

    ನವದೆಹಲಿ: ಕೋಲ್ಕತ್ತಾದಲ್ಲಿ (Kolkatta) ವರುಣನ ಅಬ್ಬರ ಜೋರಾಗಿದ್ದು, 40 ವರ್ಷಗಳಲ್ಲೇ ಅತ್ಯಂತ ದಾಖಲೆ ಮಟ್ಟದ ಮಳೆಯಾಗಿದೆ.

    ಮನೆ, ರಸ್ತೆಗಳು ಜಲಾವೃತಗೊಂಡು ಜನರ ಜೀವನ ಅಸ್ತವ್ಯಸ್ತವಾಗಿದೆ. ಮಳೆಯಿಂದಾಗಿ ಹಲವು ಅವಾಂತರ ಸೃಷ್ಟಿಯಾಗಿದೆ. ಕೋಲ್ಕತ್ತಾದ ದಕ್ಷಿಣ ಮತ್ತು ಪೂರ್ವ ಭಾಗಗಳು ಹೆಚ್ಚು ಹಾನಿಯಾಗಿದ್ದು, ಪಶ್ಚಿಮ ಬಂಗಾಳದಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಕೋಲ್ಕತ್ತಾದ ಹಲವು ಪ್ರದೇಶಗಳು ಸಂಪೂರ್ಣ ಜಲಾವೃತವಾಗಿವೆ. ಸೊಂಟದ ಆಳದವರೆಗೂ ಹಲವು ಪ್ರದೇಶಗಳು ಮುಳಗಿವೆ. ರಸ್ತೆಗಳು ಕಾಣದಂತೆ ಮಾಯವಾಗಿವೆ ವಾಹನಗಳ ಸವಾರರು ಹೈರಾಣಾಗ್ತಿದ್ದಾರೆ. ಮಳೆಯಿಂದಾಗಿ ವಿಮಾನಗಳ ಪ್ರಯಾಣದ ಮೇಲೂ ಎಫೆಕ್ಟ್ ಉಂಟಾಗಿದೆ.ಇದನ್ನೂ ಓದಿ: ಬಿಗ್ ಬಾಸ್ ಸೀಸನ್ 12 ಭಾರೀ ಸ್ಪೆಷಲ್: ಬಿಗ್ ಅಪ್ ಡೇಟ್

    ಇನ್ನೂ ರಾಜ್ಯದಲ್ಲಿ ಉತ್ತರ ಕರ್ನಾಟಕಕ್ಕೆ ಮಳೆ ಮತ್ತು ಮಹಾರಾಷ್ಟ್ರ ಪ್ರವಾಹ ಸಂಕಷ್ಟ ತಂದೊಡ್ಡಿದೆ. ವಿಜಯಪುರ ಜಿಲ್ಲೆಯ ಭೀಮಾನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದೆ. ಮಹಾರಾಷ್ಟ್ರದ ಉಜನಿ, ವೀರ್ ಜಲಾಶಯಗಳಿಂದ 2 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದ ಭೀಮಾನದಿ ತಟದಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಚಡಚಣ, ಇಂಡಿ, ಆಲಮೇಲ ತಾಲೂಕಿನ ಭಾಗಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಸದ್ಯ ಭೀಮಾನದಿಗೆ ಅಡ್ಡಲಾಗಿ ನಿರ್ಮಾಣ ಮಾಡಿರೋ ಬ್ರಿಡ್ಜ್ ಕಂ ಬ್ಯಾರೇಜ್‌ಗಳು ಜಲಾವೃತವಾಗಿವೆ.

    ಕಲಬುರಗಿಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಗಾಣಗಾಪುರ ಸೇತುವೆ ಮುಳಗಡೆಯಾಗಿ ಜೇವರ್ಗಿ-ಅಫಜಲಪುರ ರಸ್ತೆ ಸಂರ್ಪಕ ಬಂದ್ ಆಗಿದೆ. ಕ್ಷಣದಿಂದ ಕ್ಷಣಕ್ಕೆ ಹೆಚ್ಚುತ್ತಿರೋ ಭೀಮಾನದಿ ಒಳಹರಿವು ಹಿನ್ನೆಲೆ ನದಿ ತೀರಕ್ಕೆ ಯಾರು ತೆರಳದಂತೆ ಎಚ್ಚರಿಸಲಾಗಿದೆ. ಇನ್ನು, ಥೈಲ್ಯಾಂಡ್‌ನ ಬ್ಯಾಂಕಾಕ್‌ನಲ್ಲಿ ಭೀಕರ ಭೂಕುಸಿತವಾಗಿದೆ. ಪೈಪ್‌ಲೈನ್ ಕಾಮಗಾರಿ ವೇಳೆ ನಡುರಸ್ತೇಲಿ ಭೂಮಿ ಕುಸಿದಿದೆ. 30 ಮೀಟರ್ ಅಗಲ, 50 ಮೀಟರ್ ಆಳದ ಗುಂಡಿ ಸೃಷ್ಟಿಯಾಗಿದೆ. ಆಳದ ಗುಂಡಿಯೊಳಗೆ ಹಲವು ವಾಹನಗಳು ಬಿದ್ದಿವೆ. ಭೂಕುಸಿತದ ಬೆಚ್ಚಿ ಬೀಳಿಸುವ ಭಯಾನಕ ದೃಶ್ಯ ಸೆರೆಯಾಗಿದೆ.ಇದನ್ನೂ ಓದಿ: ಎಸ್.ಎಲ್.ಭೈರಪ್ಪಗೆ ಸಿನಿಮಾ ನಂಟು – ಕಾದಂಬರಿ ಆಧರಿತ ಸಿನಿಮಾಗಳಲ್ಲಿ ವಿಷ್ಣು ಸೇರಿ ಖ್ಯಾತ ನಟರ ಅಭಿನಯ

  • ಆರ್‌ಸಿಬಿ Vs ಕೋಲ್ಕತ್ತಾ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ

    ಆರ್‌ಸಿಬಿ Vs ಕೋಲ್ಕತ್ತಾ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ

    ಕೋಲ್ಕತ್ತಾ: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ಮತ್ತು ಕೋಲ್ಕತ್ತಾ ನೈಟ್‌ರೈಡರ್ಸ್‌ (KKR) ನಡುವೆ ಇಂದು ನಡೆಯಲಿರುವ ಮೊದಲ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆಯಿದೆ.

    ಬೆಳಗ್ಗೆಯಿಂದಲೇ ಕೋಲ್ಕತ್ತಾದಲ್ಲಿ ಜಿಟಿಜಿಟಿ ಮಳೆಯಾಗುತ್ತಿದೆ. ಇದೇ ರೀತಿಯ ಮಳೆ ರಾತ್ರಿಯು (Rain) ಸುರಿಯುವ ಸಾಧ್ಯತೆಯಿದೆ. ರಾತ್ರಿ ಮಳೆ ಸುರಿಯುವ ಸಾಧ್ಯತೆ 20% ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇದನ್ನೂ ಓದಿ: ಅಭಿಮಾನಿಗಳೇ ನಮ್ಮನೆ ದೇವ್ರು – ಎರಡು ಕೈ ಜೋಡಿಸಿ ಪಾಟಿದಾರ್‌ ಕೃತಜ್ಞತೆ

    ಐಪಿಎಲ್‌ ಪಂದ್ಯ 7:30ಕ್ಕೆ ಆರಂಭವಾಗುತ್ತದೆ. ಪಂದ್ಯಕ್ಕೂ ಮೊದಲು ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಶ್ರೇಯಾ ಘೋಷಾಲ್‌, ದಿಶಾ ಪಟಾನಿ, ಶಾರೂಖ್‌ ಖಾನ್‌ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಸಂಜೆ 6 ಗಂಟೆಯಿಂದ ಸಂಜೆ 7 ಗಂಟೆವರೆಗೆ ಕಾರ್ಯಕ್ರಮ ನಡೆಯಲಿದೆ. ಕೊನೆಗೆ ಸಿಡಿಮದ್ದು ಪ್ರದರ್ಶನ ನಡೆಯಲಿದೆ. ಇದನ್ನೂ ಓದಿ: ಐಪಿಎಲ್‌ 10 ಸೆಕೆಂಡ್‌ ಜಾಹೀರಾತಿಗೆ ಲಕ್ಷ ಲಕ್ಷ – 4,500 ಕೋಟಿ ಆದಾಯ ನಿರೀಕ್ಷೆಯಲ್ಲಿ ಜಿಯೋಸ್ಟಾರ್‌

    17 ವರ್ಷಗಳ ಹಿಂದೆ ಐಪಿಎಲ್‌ (IPL) ಆರಂಭಗೊಂಡಾಗ ಆರ್‌ಸಿಬಿ ಮತ್ತು ಕೋಲ್ಕತ್ತಾ ಮುಖಾಮುಖಿಯಾಗಿದ್ದವು. ಈಗ ಮತ್ತೆ ಈ ಎರಡೂ ತಂಡಗಳು ಮುಖಾಮುಖಿಯಾಗುತ್ತಿವೆ. ಎರಡೂ ತಂಡಗಳು ಹೊಸ ನಾಯಕತ್ವ ಮತ್ತು ಹೊಸ ರೂಪದಲ್ಲಿ ಮಿಂಚುತ್ತಿವೆ.


    ಕಳೆದ ಬಾರಿ ಕೆಕೆಆರ್‌ ಚಾಂಪಿಯನ್‌ ಆಗಿದ್ದರೆ ನಾಯಕನಾಗಿದ್ದ ಶ್ರೇಯಸ್‌ ಅಯ್ಯರ್‌ ಈ ಬಾರಿ ಈ ಪಂಜಾಬ್‌ ತಂಡವನ್ನು ಮುನ್ನಡೆಸುತ್ತಿದ್ದಾರೆ. ಡುಪ್ಲೆಸಿಸ್‌ ಅವರನ್ನು ಆರ್‌ಸಿಬಿ ಕೈಬಿಟ್ಟಿದ್ದು ರಜತ್‌ ಪಾಟಿದಾರ್‌ ಅವರನ್ನು ನಾಯಕರಾಗಿದ್ದಾರೆ. ಎರಡು ತಂಡಗಳು ಬಲವಾಗಿದ್ದು ಪಂದ್ಯ ವೀಕ್ಷಿಸಲು ಅಭಿಮಾನಿಗಳು ತಯಾರಾಗಿದ್ದಾರೆ. ಆದರೆ ಈ ರೋಚಕ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆ ಹೆಚ್ಚಿದೆ.

  • ಬಂಗಾಳದ ಬಾರ್‌ಗಳಲ್ಲಿ ಮಹಿಳೆಯರಿಗೆ ಕೆಲಸಕ್ಕೆ ಅವಕಾಶ – ಹೊಸ ಮಸೂದೆ ಅಂಗೀಕಾರ

    ಬಂಗಾಳದ ಬಾರ್‌ಗಳಲ್ಲಿ ಮಹಿಳೆಯರಿಗೆ ಕೆಲಸಕ್ಕೆ ಅವಕಾಶ – ಹೊಸ ಮಸೂದೆ ಅಂಗೀಕಾರ

    ಕೋಲ್ಕತ್ತಾ: ಮಹಿಳೆಯರಿಗೆ ಬಾರ್‌ಗಳಲ್ಲಿ ಕೆಲಸ ಮಾಡಲು ಹಾಗೂ ಮದ್ಯ ಸೇವಿಸಲು ಅವಕಾಶ ಕಲ್ಪಿಸುವ ಪ್ರಮುಖ ಮಸೂದೆಯೊಂದನ್ನು ಪಶ್ಚಿಮಬಂಗಾಳ (West Bengal) ವಿಧಾನಸಭೆ ಅಂಗೀಕರಿಸಿದೆ. ಈ ಹೊಸ ಕಾನೂನು ರಾಜ್ಯದಲ್ಲಿ ಲಿಂಗ ಸಮಾನತೆ ಮತ್ತು ಉದ್ಯೋಗ ಅವಕಾಶಗಳನ್ನು ವಿಸ್ತರಿಸುವ ದಿಕ್ಕಿನಲ್ಲಿ ಒಂದು ಮಹತ್ವದ ಹೆಜ್ಜೆ ಎಂದು ಪರಿಗಣಿಸಲಾಗಿದೆ.

    ರಾಜ್ಯ ಸಚಿವೆ ಚಂದ್ರಿಮಾ ಭಟ್ಟಾಚಾರ್ಯ ಅವರು ಪಶ್ಚಿಮ ಬಂಗಾಳ ಹಣಕಾಸು ಮಸೂದೆ- 2025 ಅನ್ನು ವಿಧಾನಸಭೆಯಲ್ಲಿ ಮಂಡಿಸಿದರು. ಈ ಮಸೂದೆಯು 1909ರ ಬಂಗಾಳ ಅಬಕಾರಿ ಕಾಯ್ದೆಗೆ ತಿದ್ದುಪಡಿಗಳನ್ನು ಪ್ರಸ್ತಾಪಿಸುತ್ತದೆ. ಇದರಲ್ಲಿ ಆನ್-ಕೆಟಗರಿ ಮದ್ಯದ ಅಂಗಡಿಗಳಲ್ಲಿ ಮಹಿಳೆಯರನ್ನು ನೇಮಿಸಿಕೊಳ್ಳುವುದರ ಮೇಲಿನ ನಿಷೇಧವನ್ನು ತೆಗೆದುಹಾಕುವುದು ಹಾಗೂ ಅಂಗಡಿಗಳ ಆವರಣದಲ್ಲಿ ಮದ್ಯ ಸೇವನೆಯನ್ನು ಅನುಮತಿಸಲಾಗಿದೆ.ಇದನ್ನೂ ಓದಿ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ವೈಟಿಪಿಎಸ್‌ನ 1,500 ಗುತ್ತಿಗೆ ನೌಕರರಿಂದ ಉಗ್ರ ಹೋರಾಟ

    ಈ ಮಸೂದೆಯ ಪ್ರಕಾರ, ಮಹಿಳೆಯರು ಈಗ ಬಾರ್‌ಗಳಲ್ಲಿ ಉದ್ಯೋಗ ಮಾಡಲು ಅರ್ಹರಾಗಿದ್ದಾರೆ. ಇದು ಈ ಹಿಂದೆ ಪುರುಷರಿಗೆ ಮಾತ್ರ ಸೀಮಿತವಾಗಿದ್ದ ಕ್ಷೇತ್ರವಾಗಿತ್ತು. ಈ ಬದಲಾವಣೆಯು ಮಹಿಳೆಯರಿಗೆ ಹೊಸ ಆರ್ಥಿಕ ಅವಕಾಶಗಳನ್ನು ತೆರೆಯುವ ಜೊತೆಗೆ ಸಾಂಪ್ರದಾಯಿಕ ಲಿಂಗ ಆಧಾರಿತ ಉದ್ಯೋಗ ಮಿತಿಗಳನ್ನು ತೆಗೆದುಹಾಕುವ ಗುರಿಯನ್ನು ಹೊಂದಿದೆ.

    ವಿಧಾನಸಭೆಯಲ್ಲಿ ನಡೆದ ಚರ್ಚೆಯ ಸಂದರ್ಭದಲ್ಲಿ, ಈ ಮಸೂದೆಯನ್ನು ಬೆಂಬಲಿಸಿದ ಶಾಸಕರು, ಮಹಿಳೆಯರಿಗೆ ಸಮಾನ ಉದ್ಯೋಗ ಅವಕಾಶಗಳನ್ನು ಒದಗಿಸುವುದು ಸಮಾಜದ ಪ್ರಗತಿಗೆ ಅವಶ್ಯಕ ಎಂದು ವಾದಿಸಿದರು. ಆದರೆ, ಕೆಲವು ಶಾಸಕರು ಸುರಕ್ಷತೆ ಮತ್ತು ಕೆಲಸದ ವಾತಾವರಣದ ಕುರಿತು ಕಳವಳ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ. ಈ ಮಸೂದೆ ಈಗ ರಾಜ್ಯಪಾಲರ ಅಂಗೀಕಾರಕ್ಕಾಗಿ ಕಾಯುತ್ತಿದ್ದು, ರಾಜ್ಯಪಾಲರ ಅಂಗೀಕಾರದ ಬಳಿಕ ಇದು ಕಾನೂನಾಗಿ ಜಾರಿಗೆ ಬರಲಿದೆ.ಇದನ್ನೂ ಓದಿ: ಜೋರಾಯ್ತು ಛತ್ರಿ ಪಾಲಿಟಿಕ್ಸ್ – ನನಗೆ ಅಧಿಕಾರದ ಮದ, ಕಮ್ಮಿ ಮಾಡಲಿ : ಡಿಕೆಶಿ ತಿರುಗೇಟು

  • ಕೋಲ್ಕತ್ತಾ ಟ್ರೈನಿ ವೈದ್ಯೆ ಅತ್ಯಾಚಾರ & ಕೊಲೆ ಕೇಸ್‌ – ಅಪರಾಧಿ ಸಂಜಯ್‌ ರಾಯ್‌ಗೆ ಜೀವಾವಧಿ ಶಿಕ್ಷೆ

    ಕೋಲ್ಕತ್ತಾ ಟ್ರೈನಿ ವೈದ್ಯೆ ಅತ್ಯಾಚಾರ & ಕೊಲೆ ಕೇಸ್‌ – ಅಪರಾಧಿ ಸಂಜಯ್‌ ರಾಯ್‌ಗೆ ಜೀವಾವಧಿ ಶಿಕ್ಷೆ

    ಕೋಲ್ಕತ್ತಾ: ಆರ್‌.ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ (RG Kar Medical College Hospital) ಟ್ರೈನಿ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಸಂಜಯ್‌ ರಾಯ್‌ಗೆ (34) ಜೀವಾವಧಿ ಶಿಕ್ಷೆ ಹಾಗೂ 50,000 ರೂ. ದಂಡ ವಿಧಿಸಿ ಕೋಲ್ಕತ್ತಾ ಕೋರ್ಟ್‌ (Kolkata court) ತೀರ್ಪು ಪ್ರಕಟಿಸಿದೆ.

    ಶನಿವಾರವಷ್ಟೇ (ಜ.18) ಕೋಲ್ಕತ್ತಾ (Kolkatta) ಸೆಷನ್ಸ್ ಕೋರ್ಟ್‌ನ ನ್ಯಾಯಾಧೀಶ ಅನಿರ್ಬನ್ ದಾಸ್ (Anirban Das) ಅವರಿದ್ದ ಏಕಸದಸ್ಯ ಪೀಠ ಸಂಜಯ್‌ ರಾಯ್‌ನನ್ನು (Sanjay Roy) ದೋಷಿ ಎಂದು ತೀರ್ಪು ಪ್ರಕಟಿಸಿ ಶಿಕ್ಷೆ ಪ್ರಮಾಣವನ್ನು ಕಾಯ್ದಿರಿಸಿತ್ತು, ಇಂದು (ಜ.20) ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿತು. ವಿಚಾರಣೆ ನಡೆಸಿದ 57 ದಿನಗಳಲ್ಲಿ ಕೋರ್ಟ್‌ ತೀರ್ಪು ಪ್ರಕಟಿಸಿರುವುದು ವಿಶೇಷ.

    ಅತ್ಯಾಚಾರ ಮತ್ತು ಕೊಲೆಗೆ ಸಂಬಂಧಿಸಿದ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್‌ಗಳ ಅಡಿಯಲ್ಲಿ ಕೋರ್ಟ್‌ ಶಿಕ್ಷೆ ವಿಧಿಸಿದೆ. ಇದೇ ವೇಳೆ ಸಂತ್ರಸ್ತೆ ಕುಟುಂಬಕ್ಕೆ 17 ಲಕ್ಷ ರೂ. ಪರಿಹಾರ ನೀಡುವಂತೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ನಿರ್ದೇಶನ ನೀಡಿತು. ಆದ್ರೆ ಸಂತ್ರಸ್ತೆ ಪೋಷಕರು ತಮಗೆ ಪರಿಹಾರ ಬೇಡವೆಂದರು. ಈ ವೇಳೆ ಕೋರ್ಟ್‌, ಕಾನೂನು ಪ್ರಕಾರವೇ ಪರಿಹಾರ ನೀಡಲು ಆದೇಶ ನೀಡಲಾಗಿದೆ. ಹಣವನ್ನು ಹೇಗೆ ಬೇಕಾದ್ರೂ ಬಳಸಿಕೊಳ್ಳಲು ಸಂತ್ರಸ್ತೆ ಪೋಷಕರು ಅರ್ಹರಿರುತ್ತಾರೆ ಎಂದು ಹೇಳಿತು.

    ಇನ್ನೂ ನ್ಯಾಯಾಧೀಶರು ಶನಿವಾರ ತೀರ್ಪು ಪ್ರಕಟಿಸುತ್ತಿದ್ದಂತೆ ದೋಷಿಯಾಗಿರುವ ಸಂಜಯ್‌ ರಾವ್‌ ನಾನು ಅಮಾಯಕ. ಯಾವುದೇ ಕೃತ್ಯ ಎಸಗಿಲ್ಲ ಎಂದು ಹೇಳಿ ತನ್ನ ಮೇಲಿದ್ದ ಆರೋಪಗಳನ್ನು ನಿರಾಕರಿಸಿದ್ದ.

    ಏನಿದು ಪ್ರಕರಣ?
    2024ರ ಆಗಸ್ಟ್‌ 9ರಂದು ಬೆಳಗ್ಗೆ ಸ್ನಾತಕೋತ್ತರ ತರಬೇತಿ ನಿರತ ವೈದ್ಯೆಯ ಶವ ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಅತ್ಯಾಚಾರ ಮತ್ತು ಕೊಲೆಯಾದ ರೀತಿಯಲ್ಲಿ ಪತ್ತೆಯಾಗಿತ್ತು. ಬಳಿಕ ಕೃತ್ಯ ನಡೆಸಿದ್ದ ಆರೋಪಿ ಸಂಜಯ್‌ನನ್ನು ಪೊಲೀಸರು ಬಂಧಿಸಿದ್ದರು. ಅಶ್ಲೀಲ ವೀಡಿಯೋಗಳಿಗೆ ವ್ಯಸನಿಯಾಗಿದ್ದ ಸಂಜಯ್ ಕೊಲೆಯ ನಂತರ ಸಾಕ್ಷ್ಯ ನಾಶಪಡಿಸಲು ರಕ್ತಸಿಕ್ತ ಬಟ್ಟೆಯನ್ನು ತೊಳೆದಿದ್ದ ಎನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದರು. ಈ ಹಿಂದೆ ಪೊಲೀಸರಿಗೆ ಸೇವಕನಾಗಿದ್ದ ಈತ 4  ಮದುವೆಯಾಗಿದ್ದು, ಪತ್ನಿಯರಿಗೆ ಆಗಾಗ ಕಿರುಕುಳ ನೀಡುತ್ತಿದ್ದ ಎಂದು ತನಿಖೆ ವೇಳೆ ತಿಳಿದುಬಂದಿತ್ತು.

    ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬಳಿಕ ದೇಶವ್ಯಾಪಿ ಪ್ರತಿಭಟನೆ ನಡೆದಿತ್ತು. ಕೊನೆಗೆ ಈ ಪ್ರಕರಣದ ತನಿಖೆಯನ್ನು ಕೋಲ್ಕತ್ತಾ ಹೈಕೋರ್ಟ್‌ ಸಿಬಿಐಗೆ ಒಪ್ಪಿಸಿತ್ತು. ಪ್ರಕರಣದ ತನಿಖೆ ನಡೆಸಿದ್ದ ಸಿಬಿಐ ಅತ್ಯಾಚಾರ ನಡೆದಿದ್ದು ದೃಢ ಎಂದು ಚಾರ್ಜ್‌ಶೀಟ್‌ ಸಲ್ಲಿಸಿತ್ತು. ಆರಂಭದಲ್ಲಿ ಈ ಪ್ರಕರಣದ ವಿಚಾರಣೆ ನಡೆಸಿದ್ದ ಕೋಲ್ಕತ್ತಾ ಪೊಲೀಸರು ಆಗಸ್ಟ್‌ 10ರಂದು ರಾಯ್‌ನನ್ನು ಬಂಧಿಸಿದ್ದರು. ಆಸ್ಪತ್ರೆಯ ಸೆಮಿನಾರ್‌ ಹಾಲ್‌ನಲ್ಲಿ ವೈದ್ಯ ವಿದ್ಯಾರ್ಥಿನಿಯ ಮೃತದೇಹ ದೊರೆತ ಮರುದಿನ ಬಂಧನ ನಡೆದಿತ್ತು. ನವೆಂಬರ್‌ 12 ರಿಂದ ವಿಚಾರಣೆ ಆರಂಭವಾಗಿತ್ತು. ಒಟ್ಟು 50 ಸಾಕ್ಷಿಗಳ ಹೇಳಿಕೆಗಳನ್ನು ಪಡೆಯಲಾಗಿತ್ತು. ಆರೋಪಿಯ ವಿಚಾರಣೆ ಜನವರಿ 9ರಂದು ಕೊನೆಗೊಂಡಿತ್ತು.

  • ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೋಲ್ಕತ್ತಾ ಟ್ರೈನಿ ವೈದ್ಯೆ ರೇಪ್‌ ಕೇಸ್‌ – ಸಂಜಯ್‌ ರಾಯ್‌ ದೋಷಿ

    ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೋಲ್ಕತ್ತಾ ಟ್ರೈನಿ ವೈದ್ಯೆ ರೇಪ್‌ ಕೇಸ್‌ – ಸಂಜಯ್‌ ರಾಯ್‌ ದೋಷಿ

    ಕೋಲ್ಕತ್ತಾ: ಇಡಿ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೋಲ್ಕತ್ತಾ ಆರ್ ಜಿ ಕರ್ ಮೆಡಿಕಲ್‌ ಕಾಲೇಜು (R. G. Kar Medical College and Hospital) ಟ್ರೈನಿ ವೈದ್ಯೆಯ ಅತ್ಯಾಚಾರ (Rape) ಮತ್ತು ಕೊಲೆ (Murder) ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಸಂಜಯ್‌ ರಾಯ್‌ನನ್ನು (Sanjay Roy) ದೋಷಿ ಎಂದು ಹೇಳಿ ಕೋರ್ಟ್‌ ತೀರ್ಪು ಪ್ರಕಟಿಸಿದೆ.

    ಕೋಲ್ಕತ್ತಾ (Kolkatta) ಸೆಷನ್ಸ್ ಕೋರ್ಟ್ ನ್ಯಾಯಾಧೀಶ ಅನಿರ್ಬನ್ ದಾಸ್ ಇಂದು ತೀರ್ಪು ಪ್ರಕಟಿಸಿದರು. ಅತ್ಯಾಚಾರ, ಕೊಲೆ ಸೆಕ್ಷನ್ ಗಳಲ್ಲಿ ಅಪರಾಧಿ ಎಂದು ಕೋರ್ಟ್ ತೀರ್ಪು ನೀಡಿದ್ದು ಸೋಮವಾರ (ಜ.20) ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಿದೆ. ವಿಚಾರಣೆ ನಡೆಸಿದ 57 ದಿನಗಳಲ್ಲಿ ಕೋರ್ಟ್‌ ತೀರ್ಪು ಪ್ರಕಟಿಸಿರುವುದು ವಿಶೇಷ. ಇದನ್ನೂ ಓದಿ ಟ್ರೈನಿ ವೈದ್ಯೆ ಮೇಲೆ ಅತ್ಯಾಚಾರ ಎಸಗಿರೋದು ದೃಢ – ಸಿಬಿಐ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ

    ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೆ ದೋಷಿಯಾಗಿರುವ ಸಂಜಯ್‌ ರಾವ್‌ ನಾನು ಅಮಾಯಕ. ಯಾವುದೇ ಕೃತ್ಯ ಎಸಗಿಲ್ಲ ಎಂದು ಹೇಳಿ ತನ್ನ ಮೇಲಿದ್ದ ಆರೋಪಗಳನ್ನು ನಿರಾಕರಿಸಿದ್ದಾನೆ. ತೀರ್ಪು ಪ್ರಕಟದ ಹಿನ್ನೆಲೆಯಲ್ಲಿ ಇಂದು ನ್ಯಾಯಾಲಯದ ಕೋಣೆಗೆ ಭಾರೀ ಭದ್ರತೆಯನ್ನು ಒದಗಿಸಲಾಗಿತ್ತು. ಸುಮಾರು 300ಕ್ಕೂ ಹೆಚ್ಚು ಪೊಲೀಸರನ್ನು ಕೋರ್ಟ್‌ ಆವರಣದ ಸುತ್ತ ನಿಯೋಜಿಸಲಾಗಿತ್ತು.

    ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬಳಿಕ ದೇಶವ್ಯಾಪಿ ಪ್ರತಿಭಟನೆ ನಡೆದಿತ್ತು. ಕೊನೆಗೆ ಈ ಪ್ರಕರಣದ ತನಿಖೆಯನ್ನು ಕೋಲ್ಕತ್ತಾ ಹೈಕೋರ್ಟ್‌ ಸಿಬಿಐಗೆ ಒಪ್ಪಿಸಿತ್ತು. ಪ್ರಕರಣದ ತನಿಖೆ ನಡೆಸಿದ್ದ ಸಿಬಿಐ ಅತ್ಯಾಚಾರ ನಡೆದಿದ್ದು ದೃಢ ಎಂದು ಚಾರ್ಜ್‌ಶೀಟ್‌ ಸಲ್ಲಿಸಿತ್ತು.

    ಆರಂಭದಲ್ಲಿ ಈ ಪ್ರಕರಣದ ವಿಚಾರಣೆ ನಡೆಸಿದ್ದ ಕೋಲ್ಕತ್ತ ಪೊಲೀಸರು ಆಗಸ್ಟ್‌ 10ರಂದು ರಾಯ್‌ನನ್ನು ಬಂಧಿಸಿದ್ದರು. ಆಸ್ಪತ್ರೆಯ ಸೆಮಿನಾರ್‌ ಹಾಲ್‌ನಲ್ಲಿ ವೈದ್ಯ ವಿದ್ಯಾರ್ಥಿನಿಯ ಮೃತದೇಹ ದೊರೆತ ಮರುದಿನ ಬಂಧನ ನಡೆದಿತ್ತು. ನವೆಂಬರ್‌ 12 ರಿಂದ ವಿಚಾರಣೆ ಆರಂಭವಾಗಿತ್ತು.  ಒಟ್ಟು 50 ಸಾಕ್ಷಿಗಳ ಹೇಳಿಕೆಗಳನ್ನು ಪಡೆಯಲಾಗಿತ್ತು. ಆರೋಪಿಯ ವಿಚಾರಣೆ ಜನವರಿ 9ರಂದು ಕೊನೆಗೊಂಡಿತ್ತು.

    ಏನಿದು ಪ್ರಕರಣ?
    ಕಳೆದ ಆಗಸ್ಟ್‌ 9ರಂದು ಬೆಳಗ್ಗೆ ಸ್ನಾತಕೋತ್ತರ ತರಬೇತಿ ನಿರತ ವೈದ್ಯೆಯ ಶವ ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಅತ್ಯಾಚಾರ ಮತ್ತು ಕೊಲೆಯಾದ ರೀತಿಯಲ್ಲಿ ಪತ್ತೆಯಾಗಿತ್ತು. ಬಳಿಕ ಕೃತ್ಯ ನಡೆಸಿದ್ದ ಆರೋಪಿ ಸಂಜಯ್‌ನನ್ನು ಪೊಲೀಸರು ಬಂಧಿಸಿದ್ದರು. ಅಶ್ಲೀಲ ವೀಡಿಯೋಗಳಿಗೆ ವ್ಯಸನಿಯಾಗಿದ್ದ ಸಂಜಯ್ ಕೊಲೆಯ ನಂತರ ಸಾಕ್ಷ್ಯ ನಾಶಪಡಿಸಲು ರಕ್ತಸಿಕ್ತ ಬಟ್ಟೆಯನ್ನು ತೊಳೆದಿದ್ದ ಎನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದರು. ಈ ಹಿಂದೆ ಪೊಲೀಸರಿಗೆ ಸೇವಕನಾಗಿದ್ದ ಈತ 4  ಮದುವೆಯಾಗಿದ್ದು, ಪತ್ನಿಯರಿಗೆ ಆಗಾಗ ಕಿರುಕುಳ ನೀಡುತ್ತಿದ್ದ ಎಂದು ತನಿಖೆಯಿಂದ ತಿಳಿದುಬಂದಿತ್ತು.

  • ನಾಗ್ಪುರ-ಕೋಲ್ಕತ್ತಾ ಇಂಡಿಗೋ ವಿಮಾನಕ್ಕೆ ಬಾಂಬ್‌ ಬೆದರಿಕೆ ಕರೆ – ಓರ್ವನ ಬಂಧನ

    ನಾಗ್ಪುರ-ಕೋಲ್ಕತ್ತಾ ಇಂಡಿಗೋ ವಿಮಾನಕ್ಕೆ ಬಾಂಬ್‌ ಬೆದರಿಕೆ ಕರೆ – ಓರ್ವನ ಬಂಧನ

    ನವದೆಹಲಿ: ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ನಾಗ್ಪುರದಿಂದ ಕೋಲ್ಕತ್ತಾಗೆ ಹೊರಟಿದ್ದ ವಿಮಾನವನ್ನು ರಾಯ್‌ಪುರ (Raipur) ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು. ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಿದ ಸಿಐಎಸ್‌ಎಫ್ ಮತ್ತು ಪೊಲೀಸರು ವಿಮಾನವನ್ನು ತಪಾಸಣೆ ಮಾಡಿದರು, ತಪಾಸಣೆಯಲ್ಲಿ ಯಾವುದೇ ಸ್ಫೋಟಕ ಪತ್ತೆಯಾಗದ ಕಾರಣ ಹುಸಿ ಬಾಂಬ್ ಬೆದರಿಕೆ ಎಂದು ನಿರ್ಧರಿಸಲಾಗಿದೆ.

    ಈ ಬಗ್ಗೆ ಮಾತನಾಡಿದ ರಾಯ್‌ಪುರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಸಿಂಗ್, ವಿಮಾನಯಾನ ಸಂಸ್ಥೆಗಳಿಗೆ ಬೆದರಿಕೆ ಬಂದ ಹಿನ್ನೆಲೆ ನಾಗ್‌ಪುರದಿಂದ (Nagpur) ಕೋಲ್ಕತ್ತಾ (Kolkatta) ಕಡೆಗೆ ವಿಮಾನವನ್ನು ತಿರುಗಿಸಲಾಯಿತು. ಇಂಡಿಗೋ ವಿಮಾನದಲ್ಲಿದ್ದ 187 ಪ್ರಯಾಣಿಕರು ಮತ್ತು ಆರು ಸಿಬ್ಬಂದಿಯನ್ನು ಸ್ಥಳಾಂತರಿಸಲಾಯಿತು ಎಂದು ಹೇಳಿದರು. ಇದನ್ನೂ ಓದಿ: ಕಬ್ಬು ಬೆಲೆ ನಿಗದಿಗಾಗಿ ಹೋರಾಟ- ಸಿಎಂಗೆ ಘೇರಾವ್ ಹಾಕಲು ನಿರ್ಧರಿಸಿದ ಮುಧೋಳ ರೈತರು

    ಬೆದರಿಕೆಗೆ ಸಂಬಂಧಿಸಿದಂತೆ ಒಬ್ಬ ಪ್ರಯಾಣಿಕನನ್ನು ಬಂಧಿಸಲಾಗಿದ್ದು, ಆತನನ್ನು ನಿಮೇಶ್ ಮಂಡಲ್ ಎಂದು ಗುರುತಿಸಲಾಗಿದೆ. ಆತನನ್ನು ಮನ ಪೊಲೀಸ್ ಠಾಣೆಯಲ್ಲಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ವಿಮಾನಯಾನ ಸಂಸ್ಥೆಗಳಿಂದ ದೂರು ಸ್ವೀಕರಿಸಿದ್ದರಿಂದ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ನ.20ಕ್ಕೆ ರಾಜ್ಯಾದ್ಯಂತ ಬಾರ್ ಬಂದ್

  • ನ್ಯಾಯ ಸಿಕ್ಕರೆ ಚಹಾ ಸ್ವೀಕಾರ: ಟ್ರೈನಿ ವೈದ್ಯೆ ಸಾವಿಗೆ ನ್ಯಾಯಕ್ಕಾಗಿ ಒತ್ತಾಯ

    ನ್ಯಾಯ ಸಿಕ್ಕರೆ ಚಹಾ ಸ್ವೀಕಾರ: ಟ್ರೈನಿ ವೈದ್ಯೆ ಸಾವಿಗೆ ನ್ಯಾಯಕ್ಕಾಗಿ ಒತ್ತಾಯ

    ಕೋಲ್ಕತ್ತಾ: ಮೊದಲು ನ್ಯಾಯ ದೊರಕಿಸಿಕೊಡಿ, ಬಳಿಕ ಇದೆಲ್ಲವನ್ನು ಕೊಡಿ ಎಂದು ಆರ್‌ಜಿ ಕರ್ ಕಾಲೇಜಿನ (RG Kar College) ವೈದ್ಯರು ಪ್ರತಿಭಟನೆಯಲ್ಲಿ ಮಮತಾ ಬ್ಯಾನರ್ಜಿ (Mamata Banerjee) ವಿರುದ್ಧ ಚಹಾ ಆಹ್ವಾನ ನಿರಾಕರಿಸಿ ಹೇಳಿದರು.

    ಶನಿವಾರ ಕಾಳಿಘಾಟ್‌ನಲ್ಲಿ ನಡೆದ ಸಭೆಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೊಂದಿಗೆ ಆರ್‌ಜಿ ಕರ್ ಕಾಲೇಜಿನ ಟ್ರೈನಿ ವೈದ್ಯೆ ಸಾವಿಗೆ ನ್ಯಾಯಕ್ಕಾಗಿ ಆಗ್ರಹಿಸಿ ಪ್ರತಿಭಟನೆಯಲ್ಲಿದ್ದ ವೈದ್ಯರು ಪಾಲ್ಗೊಂಡಿದ್ದರು. ಇದನ್ನೂ ಓದಿ: ನಾಗಮಂಗಲದಲ್ಲಿ ಹಿಂದೂಗಳಿಗೆ ಒಂದು ರೀತಿ, ಮುಸಲ್ಮಾನರಿಗೆ ಇನ್ನೊಂದು ನೀತಿ: ಎನ್ ರವಿಕುಮಾರ್

    ಸಿಎಂ ಮಮತಾ ಬ್ಯಾನರ್ಜಿ ಚಹಾ ಕುಡಿಯಲು ಪ್ರತಿಭಟನಾನಿರತ ವೈದ್ಯರನ್ನು ಆಹ್ವಾನಿಸಿದ್ದರು. ಮೊದಲು ನ್ಯಾಯ ದೊರಕಿಸಿಕೊಡಿ, ಬಳಿಕ ಇದನ್ನೆಲ್ಲಾ ಕೊಡಿ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಬರ್ಬರವಾಗಿ ಅತ್ಯಾಚಾರ, ಹತ್ಯೆಗೀಡಾದ 31 ವರ್ಷದ ಸ್ನಾತಕೋತ್ತರ ಟ್ರೈನಿ ವೈದ್ಯೆ ಸಾವಿಗೆ ನ್ಯಾಯ ಬೇಕು. ನ್ಯಾಯ ಸಿಕ್ಕರೆ ಮಾತ್ರ ಚಹಾವನ್ನು ಸ್ವೀಕರಿಸಲಾಗುತ್ತದೆ ಎಂದು ಪ್ರತಿಭಟನಾಕಾರರು ಹೇಳಿದರು.

    ಕೋಲ್ಕತ್ತಾದಲ್ಲಿ ಮಳೆಯ ನಡುವೆಯೂ ತಮ್ಮ ಮನೆಯ ಹೊರಗೆ ಪ್ರತಿಭಟನೆ ನಡೆಸುತ್ತಿರುವ ವೈದ್ಯರೊಂದಿಗೆ ಮಮತಾ ಬ್ಯಾನರ್ಜಿ ಮಾತನಾಡಿದರು.ಇದನ್ನೂ ಓದಿ: ಮಾನವ ಸರಪಳಿ: ಗಡಿ ಜಿಲ್ಲೆಯಲ್ಲಿ 1 ಕಿಮೀ ಧ್ವಜ, ವಿವಿಧತೆಯಲ್ಲಿ ಏಕತೆಯ ಪ್ರತಿಬಿಂಬ ಅನಾವರಣ

    ಎಫ್‌ಐಆರ್ ದಾಖಲಿಸುವಲ್ಲಿ ವಿಳಂಬ ಮತ್ತು ಸಾಕ್ಷ್ಯವನ್ನು ತಿರುಚಿದ್ದಕ್ಕಾಗಿ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅವರನ್ನು ಕೇಂದ್ರೀಯ ತನಿಖಾ ದಳ ಬಂಧಿಸಿದೆ.

  • ಪ್ರತಿಭಟನೆ ನಿಲ್ಲಿಸಿ, ದುರ್ಗಾಪೂಜೆಗೆ ಗಮನ ಹರಿಸಿ – ದೀದಿ ಹೇಳಿಕೆಗೆ ಮೃತ ಟ್ರೈನಿ ವೈದ್ಯೆಯ ತಾಯಿ ಆಕ್ರೋಶ

    ಪ್ರತಿಭಟನೆ ನಿಲ್ಲಿಸಿ, ದುರ್ಗಾಪೂಜೆಗೆ ಗಮನ ಹರಿಸಿ – ದೀದಿ ಹೇಳಿಕೆಗೆ ಮೃತ ಟ್ರೈನಿ ವೈದ್ಯೆಯ ತಾಯಿ ಆಕ್ರೋಶ

    ಕೋಲ್ಕತ್ತಾ: ರಾಜ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳನ್ನು ನಿಲ್ಲಿಸಿ, ದುರ್ಗಾ ಪೂಜೆಯ ಕಡೆಗೆ ಗಮನ ಹರಿಸಿ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಅವರು ಕರೆ ನೀಡಿದ್ದಾರೆ.

    ಸಿಎಂ ಹೇಳಿಕೆಗೆ ಕೋಲ್ಕತ್ತಾ ಪ್ರಕರಣದ ಮೃತ ಟ್ರೈನಿ ವೈದ್ಯೆಯ ತಾಯಿ ಮಮತಾ ಬ್ಯಾನರ್ಜಿಯವರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

    ನಾವು ನಮ್ಮ ಮಗಳ ಜೊತೆ ದುರ್ಗಾಪೂಜೆಯನ್ನು ಆಚರಿಸುತ್ತಿದ್ದೆವು. ಮುಂದೆ ಇನ್ಯಾವುದೇ ಹಬ್ಬ ಅಥವಾ ದುರ್ಗಾಪೂಜೆಯನ್ನು ಆಚರಣೆ ಮಾಡುವುದಿಲ್ಲ. ಅವರು ನಮ್ಮ ಮಗಳನ್ನು ಹಿಂದಿರುಗಿಸಲಿ. ಒಂದು ವೇಳೆ ಇದೇ ರೀತಿಯ ಘಟನೆ ಅವರ ಮನೆಯಲ್ಲಿಯೇ ಆಗಿದ್ದರೆ ಇದೇ ರೀತಿಯಾಗಿ ಹೇಳುತ್ತಿದ್ದೀರಾ? ಎಂದು ಪ್ರಶ್ನಿಸಿದ್ದಾರೆ.

    ಇತ್ತೀಗಷ್ಟೇ ಬ್ಯಾನರ್ಜಿ ಅವರು ಕುಟುಂಬಕ್ಕೆ ಹಣವನ್ನು ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಕಳೆದ ಒಂದು ದಿನದ ಹಿಂದೆಯಷ್ಟೇ ಸಂತ್ರಸ್ತೆ ತಾಯಿ ಕೂಡ ಹಣದ ಆಫರ್ ಬಂದಿದೆ ಎಂದು ಒಪ್ಪಿಕೊಂಡಿದ್ದರು. ಆದ್ರೆ ಮಮತಾ ಬ್ಯಾನರ್ಜಿ ತಮ್ಮ ಮೇಲಿನ ಆರೋಪಗಳನ್ನು ತಳ್ಳಿಹಾಕಿದ್ದರು.

    ಹಣ ನೀಡಿರುವ ಆರೋಪ ಕುರಿತು ಸಿಎಂ ಹೇಳಿದ್ದೇನು?

    ಆರ್‌ಜಿಕರ್‌ ಕಾಲೇಜಿನಲ್ಲಿ ನಡೆದ ಟ್ರೈನಿ  ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನಜಿ ಸೇರಿ ಪೊಲೀಸರು ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸಿದರು. ಶವವನ್ನು ನೋಡಲು ನಮಗೆ ಅವಕಾಶ ನೀಡಲಿಲ್ಲ. ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯುವಾಗ ಪೊಲೀಸ್ ಠಾಣೆಯಲ್ಲಿ ಕಾಯಬೇಕಾಯಿತು. ನಂತರ, ಶವವನ್ನು ನಮಗೆ ಹಸ್ತಾಂತರಿಸಿದಾಗ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ನಮಗೆ ಹಣವನ್ನು ನೀಡಿದರು. ಅದನ್ನು ನಾವು ತಕ್ಷಣ ನಿರಾಕರಿಸಿದ್ದೇವೆ ಎಂದು ಮೃತ ವೈದ್ಯೆಯ ತಂದೆ ಆರೋಪಿಸಿದ್ದರು.

    ಇದಕ್ಕೆ ತಿರುಗೇಟು ನೀಡಿರುವ ಸಿಎಂ ಮಮತಾ ಬ್ಯಾನರ್ಜಿ, ಮೃತ ವೈದ್ಯೆಯ ಕುಟುಂಬಕ್ಕೆ ನಾನು ಯಾವತ್ತೂ ಹಣ ನೀಡಿಲ್ಲ. ಇದು ಅಪಪ್ರಚಾರವಲ್ಲದೆ ಬೇರೇನೂ ಅಲ್ಲ. ಹಣವು ಎಂದಿಗೂ ಜೀವನವನ್ನು ಸರಿದೂಗಿಸಲು ಸಾಧ್ಯವಿಲ್ಲ ಎಂದು ನಾನು ಪೋಷಕರಿಗೆ ಈ ಹಿಂದೆ ಹೇಳಿದ್ದೆ. ತಮ್ಮ ಮಗಳ ನೆನಪಿಗಾಗಿ ಏನಾದರೂ ಅರ್ಥಪೂರ್ಣವಾದದ್ದನ್ನು ಮಾಡಲು ಅವರು ಬಯಸಿದರೆ ಸರ್ಕಾರವು ಅವರ ಪರವಾಗಿ ನಿಂತಿದೆ ಎಂದು ತಿಳಿಸಲಾಗಿತ್ತು ಎಂದು ಹೇಳಿದ್ದಾರೆ.

  • ಕೋಲ್ಕತ್ತಾದಲ್ಲಿ ರೊಚ್ಚಿಗೆದ್ದ ಪ್ರತಿಭಟನಾಕಾರರು: ಪ್ರತಿಭಟನೆ ಹತ್ತಿಕ್ಕಲು ಪೊಲೀಸರ ಅಶ್ರುವಾಯು, ಲಾಠಿಚಾರ್ಜ್ ಅಸ್ತ್ರ ಪ್ರಯೋಗ

    ಕೋಲ್ಕತ್ತಾದಲ್ಲಿ ರೊಚ್ಚಿಗೆದ್ದ ಪ್ರತಿಭಟನಾಕಾರರು: ಪ್ರತಿಭಟನೆ ಹತ್ತಿಕ್ಕಲು ಪೊಲೀಸರ ಅಶ್ರುವಾಯು, ಲಾಠಿಚಾರ್ಜ್ ಅಸ್ತ್ರ ಪ್ರಯೋಗ

    ಕೋಲ್ಕತ್ತಾ: ಆರ್‌ಜಿ ಕರ್ ಮೆಡಿಕಲ್ ಕಾಲೇಜಿನ (RG Kar Medical College) ಟ್ರೈನಿ ವೈದ್ಯೆ ಅತ್ಯಾಚಾರ ಮತ್ತು ಕೊಲೆ ಪ್ರಕರಣ ವಿರುದ್ಧ ಪ್ರತಿಭಟನಾಕಾರರಿಂದ ಆಕ್ರೋಶದ ಕಟ್ಟೆಯೊಡೆದಿದೆ. ಮಮತಾ ಬ್ಯಾನರ್ಜಿ (Mamata Banerjee) ವಿರುದ್ಧ ಆಕ್ರೋಶ ಹೆಚ್ಚಾಗಿದ್ದು, ನಬನ್ನ ರ‍್ಯಾಲಿಯಲ್ಲಿ (Nabanna Rally) ಪ್ರತಿಭಟನಾಕಾರರು ಘರ್ಷಣೆ ನಡೆಸುತ್ತಿದ್ದಾರೆ. ಅವರನ್ನು ನಿಯಂತ್ರಿಸಲು ಪೊಲೀಸರು ಅಶ್ರುವಾಯು ಸಿಡಿಸಿ, ಲಾಠಿಚಾರ್ಜ್ ನಡೆಸಿದ್ದಾರೆ.

    ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಆವರಣದಲ್ಲಿ ಮಹಿಳಾ ಟ್ರೈನಿ ವೈದ್ಯೆಯ ಮೇಲೆ ಅಮಾನುಷ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆಯು ಇಡೀ ರಾಷ್ಟ್ರವನ್ನು ಬೆಚ್ಚಿಬೀಳಿಸಿದೆ. ಅಂದಿನಿಂದ ಸಂತ್ರಸ್ತರಿಗೆ ನ್ಯಾಯಕ್ಕಾಗಿ ಒತ್ತಾಯಿಸಿ ಹಲವಾರು ಪ್ರತಿಭಟನೆಗಳನ್ನು ನಡೆಸಲಾಗುತ್ತಿದೆ.ಇದನ್ನೂ ಓದಿ: ‘ಈಗ 2’ ಬರುವ ಬಗ್ಗೆ ನಾನಿ ಕೊಟ್ರು ಇಂಟರೆಸ್ಟಿಂಗ್ ಅಪ್‌ಡೇಟ್

    ಈ ಹಿನ್ನೆಲೆಯಲ್ಲಿ ನಬನ್ನ ರ‍್ಯಾಲಿ ನಡೆಯುತ್ತಿದೆ. ಕೋಲ್ಕತ್ತಾದಿಂದ ಹೌರಾಕ್ಕೆ ಎರಡು ಮಾರ್ಗಗಳ ಮೂಲಕ ರ‍್ಯಾಲಿ ನಡೆಯುತ್ತಿದೆ. ಮೊದಲ ಮೆರವಣಿಗೆ ಸಂತ್ರಗಚಿಯಿಂದ ನಬನ್ನಗೆ ಮತ್ತು ಎರಡನೇ ರ‍್ಯಾಲಿ ಕಾಲೇಜು ಆವರಣದಿಂದ ಮುಂದುವರೆದಿದೆ.

    ಸಂತ್ರಗಚಿ ಪ್ರದೇಶದಲ್ಲಿ ಪ್ರಾರಂಭವಾದ ರ‍್ಯಾಲಿ ಕೋಲ್ಕತ್ತಾದ ರಾಜ್ಯ ಸಚಿವಾಲಯದ ಕಡೆಗೆ ಹೊರಟಿತು. ಹಲವಾರು ವಿದ್ಯಾರ್ಥಿಗಳು ಮತ್ತು ನಾಗರಿಕರು ತಮ್ಮ ಕೈಯಲ್ಲಿ ತ್ರಿವರ್ಣ ಧ್ವಜವನ್ನು ಪ್ರದರ್ಶಿಸುವ ಮೂಲಕ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದರು.

    ಹೌರಾ ಸೇತುವೆಯ ಬಳಿ ಜಮಾಯಿಸಿದ ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳನ್ನು ಹತ್ತಿ, ಪೊಲೀಸ್ ಸಿಬ್ಬಂದಿಯೊಂದಿಗೆ ತ್ರೀವ ಘರ್ಷಣೆಗೆ ಇಳಿದಿದ್ದಾರೆ. ಪ್ರತಿಭಟನೆಯ ಕಾವನ್ನು ಕಡಿಮೆಗೊಳಿಸಲು ಭದ್ರತಾ ಸಿಬ್ಬಂದಿ ಜಲಫಿರಂಗಿ ಹಾಗೂ ಲಾಠಿಚಾರ್ಜ್ ಮಾಡಿದ್ದಾರೆ.

    ರ‍್ಯಾಲಿಯಲ್ಲಿ ಸಂತ್ರಗಚಿ ಬಳಿ ಇರಿಸಲಾಗಿದ್ದ ಬ್ಯಾರಿಕೇಡ್‌ಗಳನ್ನು ಪ್ರತಿಭಟನಾಕಾರರು ಮುರಿದು ಎಳೆದುಕೊಂಡು ಹೋಗುತ್ತಿದ್ದಾರೆ. ಜೊತೆಗೆ ಪಶ್ಚಿಮ ಬಂಗಾಳ ರಾಜ್ಯ ಸಚಿವಾಲಯದ ಸುತ್ತಲೂ ಪೊಲೀಸ್ ಭದ್ರತೆಯನ್ನು ಮಾಡಲಾಗಿದೆ.ಇದನ್ನೂ ಓದಿ: ಕೇರಳ ಚಿತ್ರರಂಗದಲ್ಲಿ ಲೈಂಗಿಕ ಕಿರುಕುಳ ವಿವಾದ; ‘ಅಮ್ಮ’ ಅಧ್ಯಕ್ಷ ಸ್ಥಾನಕ್ಕೆ ಮೋಹನ್‌ ಲಾಲ್‌ ರಾಜೀನಾಮೆ

    “ಶಾಂತಿಯುತ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳನ್ನು ತಡೆಯಲು ನಿಮ್ಮ ಅಧಿಕಾರವನ್ನು ಬಳಸಬೇಡಿ ಎಂದು ರಾಜ್ಯಪಾಲ ಸಿವಿ ಆನಂದ ಬೋಸ್ (C. V. Ananda Bose) ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಶಾಂತಿಯುತ ಪ್ರತಿಭಟನಾಕಾರರ ಮೇಲೆ ಪಶ್ಚಿಮ ಬಂಗಾಳದ ಅಧಿಕಾರವನ್ನು ಹೇರಬೇಡಿ ಎಂದು ವೀಡಿಯೋ ಸಂದೇಶ ಕಳುಹಿಸುವ ಮೂಲಕ ತಿಳಿಸಿದ್ದಾರೆ.

  • ಪ್ರತಿಭಟನೆ ನಿಲ್ಲಿಸಲು ಮಮತಾ ಬ್ಯಾನರ್ಜಿ ಪ್ರಯತ್ನ – ಸಂತ್ರಸ್ತೆ ತಂದೆ ಆರೋಪ

    ಪ್ರತಿಭಟನೆ ನಿಲ್ಲಿಸಲು ಮಮತಾ ಬ್ಯಾನರ್ಜಿ ಪ್ರಯತ್ನ – ಸಂತ್ರಸ್ತೆ ತಂದೆ ಆರೋಪ

    ಕೋಲ್ಕತ್ತಾ: ಕೋಲ್ಕತ್ತಾದ (Kolkatta) ಆರ್‌ಜಿ ಕರ್ ಮೆಡಿಕಲ್ ಕಾಲೇಜಿನಲ್ಲಿ (RG Kar Medical College) ನಡೆದ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಸಂತ್ರಸ್ತೆ ತಂದೆ ಮಾತನಾಡಿ, ಈ ಪ್ರಕರಣದಲ್ಲಿ ಮಮತಾ ಬ್ಯಾನರ್ಜಿ (Mamata Banerjee) ಹಾಗೂ ಕೋಲ್ಕತ್ತಾ ಪೊಲೀಸರ ಪಾತ್ರದ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ತಮ್ಮ ಮಗಳಿಗೆ ನ್ಯಾಯಕ್ಕಾಗಿ ಆಗ್ರಹಿಸಿ ದೇಶವ್ಯಾಪಿಯಾಗಿ ಪ್ರತಿಭಟನೆಗಳು ನಡೆಯುತ್ತಿವೆ. ಆದ್ರೆ ಸಿಎಂ ಮಮತಾ ಬ್ಯಾನರ್ಜಿ ಅವರು ಪ್ರತಿಭಟನೆ ನಿಲ್ಲಿಸುವ ಪ್ರಯತ್ನ ಮಾಡುತ್ತಿದ್ದಾರೆ. ಜೊತೆಗೆ ಸಾಧ್ಯವಾದಷ್ಟು ಈ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಂತ್ರಸ್ತೆಯ ಪೋಷಕರು ಆರೋಪಿಸಿದ್ದಾರೆ.ಇದನ್ನೂ ಓದಿ : ಯುಎಸ್ ಕಾರು ಅಪಘಾತ; ಭಾರತೀಯ ಮೂಲದ ಒಂದೇ ಕುಟುಂಬದ ಮೂವರು ಸಾವು

    ಸಿಎಂ ಮಾಡುತ್ತಿರುವುದರ ಕುರಿತು ತೃಪ್ತಿಯಿಲ್ಲ ಹಾಗೂ ನಮಗೆ ಇದು ಅಸಂತೋಷವನ್ನುಂಟು ಮಾಡಿದೆ. ಆದ ಕಾರಣ ನಾವು ಯಾವುದೇ ಪರಿಹಾರ ಸ್ವೀಕರಿಸುವುದನ್ನು ನಿರಾಕರಿಸಿದ್ದೇವೆ ಎಂದು ಸಂತ್ರಸ್ತೆಯ ತಂದೆ ಮಾಧ್ಯಮದ ಬಳಿ ಹೇಳಿಕೊಂಡಿದ್ದಾರೆ.

    ಪ್ರಕರಣದ ತನಿಖೆ ನಡೆಯುತ್ತಿದೆ. ಆದಷ್ಟು ಬೇಗ ಪ್ರಕರಣದ ಹಿಂದಿರುವ ಆರೋಪಿಗಳನ್ನು ಬಂಧಿಸುತ್ತಾರೆ ಎಂದು ನಾವು ನಂಬಿದ್ದೆವು. ಆದ್ರೆ ಈವರೆಗೆ ಏನೂ ನಡೆದಿಲ್ಲ. ಈ ಅಪರಾಧದಲ್ಲಿ ಆಸ್ಪತ್ರೆಯ ಎದೆ ಔಷಧ ವಿಭಾಗವು ಇದರಲ್ಲಿ ಭಾಗಿಯಾಗಿರುವ ಅನುಮಾನವಿದೆ. ಈ ಪ್ರಕರಣದಲ್ಲಿ ಇಲಾಖೆಯಾಗಲಿ, ಕಾಲೇಜಾಗಲಿ ನಮಗೆ ಸಹಕರಿಸಿಲ್ಲ. ಒಬ್ಬ ಆರೋಪಿಯನ್ನು ಈಗಾಗಲೇ ಬಂಧಿಸಲಾಗಿದೆ. ಆದರೆ ಇದರಲ್ಲಿ ಇನ್ನೂ ಕೆಲವರ ಪಾತ್ರವಿದೆ. ಈ ಪ್ರಕರಣಕ್ಕೆ ಸಂಪೂರ್ಣ ತನಿಖೆಯ ಜವಾಬ್ದಾರಿಯನ್ನು ಇಲಾಖೆಯೆ ನಿರ್ವಹಿಸಬೇಕು ಎಂದು ಸಂತ್ರಸ್ತೆಯ ಪೋಷಕರು ಆಗ್ರಹಿಸಿದ್ದಾರೆ. ಇದನ್ನೂ ಓದಿ : ಸಾರಿಗೆ ಬಸ್‍ನಲ್ಲಿ ಅಪ್ರಾಪ್ತೆ ಮೇಲೆ ಗ್ಯಾಂಗ್‍ರೇಪ್ – ಐವರು ಕಾಮುಕರು ಅರೆಸ್ಟ್

    ಸದ್ಯ ಟ್ರೈನಿಯ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಸಿಬಿಐನ (CBI) ತನಿಖಾಧಿಕಾರಿಗಳು ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಸಿಬ್ಬಂದಿಗಳನ್ನ ವಿಚಾರಣೆ ನಡೆಸುತ್ತಿದ್ದಾರೆ.