Tag: Kollegal

  • ಬಿರಿಯಾನಿ ತಿಂದು 25 ಮಂದಿ ಕೂಲಿ ಕಾರ್ಮಿಕರು ಅಸ್ವಸ್ಥ

    ಬಿರಿಯಾನಿ ತಿಂದು 25 ಮಂದಿ ಕೂಲಿ ಕಾರ್ಮಿಕರು ಅಸ್ವಸ್ಥ

    ಚಾಮರಾಜನಗರ: ತಂಗಳು ಬಿರಿಯಾನಿ ತಿಂದು ಸುಮಾರು 25 ಮಂದಿ ಕೂಲಿ ಕಾರ್ಮಿಕರು ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಅರೇಪಾಳ್ಯದಲ್ಲಿ ನಡೆದಿದೆ.

    ಇಲ್ಲಿನ ಸಂತೋಷ್ ಎಂಬ ವ್ಯಕ್ತಿಯೊಬ್ಬ ಜುಲೈ 18ರಂದು ಹುಟ್ಟುಹಬ್ಬ ಆಚರಿಸಿಕೊಂಡಿದ್ದ. ಹುಟ್ಟುಹಬ್ಬದ ಪ್ರಯುಕ್ತ ಚಿಕನ್ ಬಿರಿಯಾನಿ ಮಾಡಿಸಿದ್ದ. ಮಾರನೇ ದಿನ ಬೆಳಗ್ಗೆ ಕಬ್ಬು ಬೆಳೆ ಕಟಾಬಿಗೆ ಬಂದಿದ್ದ ಕೂಲಿ ಕಾರ್ಮಿಕರಿಗೆ ಅದೇ ಚಿಕನ್ ಬಿರಿಯಾನಿ ವಿತರಿಸಿದ್ದಾನೆ. ಇದನ್ನೂ ಓದಿ: ಚಾಕ್ಲೆಟ್ ಕವರ್ ನುಂಗಿ 6 ವರ್ಷದ ಬಾಲಕಿ ಸಾವು

    ಕಾರ್ಮಿಕರು ಕೆಲಸ ಮುಗಿದ ಬಳಿಕ ತಮ್ಮ ಮನೆಗಳಿಗೂ ಬಿರಿಯಾನಿ ತೆಗೆದುಕೊಂಡು ಹೋಗಿದ್ದಾರೆ. ಇದೀಗ ಇದ್ದಕ್ಕಿದ್ದಂತೆ ವಾಂತಿ, ಭೇದಿ ಕಾಣಿಸಿಕೊಂಡು ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡ ಕಾರ್ಮಿಕರನ್ನು ಕೊಳ್ಳೇಗಾಲ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಜ್ಯೂನಿಯರ್ ‘ರೆಬಲ್ ಸ್ಟಾರ್’ ಅಭಿಷೇಕ್ ಚಿತ್ರಕ್ಕೆ ರಾಕ್ ಲೈನ್ ವೆಂಕಟೇಶ್ ನಿರ್ಮಾಪಕ

    ಶಾಸಕ ಎನ್.ಮಹೇಶ್ ಕೊಳ್ಳೇಗಾಲ ತಾಲ್ಲೂಕು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದು, ಗುಣಮಟ್ಟದ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬೆಡ್‌ಶೀಟ್‌ನಲ್ಲಿ ಆನೆ ದಂತ ಸಾಗಾಟ, ಮೂವರು ಅರೆಸ್ಟ್‌, ಓರ್ವ ಪರಾರಿ

    ಬೆಡ್‌ಶೀಟ್‌ನಲ್ಲಿ ಆನೆ ದಂತ ಸಾಗಾಟ, ಮೂವರು ಅರೆಸ್ಟ್‌, ಓರ್ವ ಪರಾರಿ

    ಚಾಮರಾಜನಗರ: ಕಾರಿನಲ್ಲಿ ಆನೆ ದಂತ ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಸಂಚಾರಿ ಅರಣ್ಯ ದಳದ ಪೊಲೀಸರು ಬಂಧಿಸಿದ್ದಾರೆ.

    ಚಿಕ್ಕಮಗಳೂರು ಮೂಲದ ಪ್ರೀತಮ್(31), ಜಗದೀಶ್(21), ಪುನೀತ್(28) ಬಂಧನಕ್ಕೆ ಒಳಗಾದರೆ ಹೇಮಂತ್ ಪರಾರಿಯಾಗಿದ್ದಾನೆ. ಇದನ್ನೂ ಓದಿ: ಮೇಕೆದಾಟು ಯೋಜನೆ ವಿರೋಧಿಸಿ ಪ್ರಧಾನಿಗೆ ಸ್ಟಾಲಿನ್ ಪತ್ರ

    ಬೆಡ್ ಶಿಟ್‌ನಲ್ಲಿ ಆನೆ ದಂತ ಸುತ್ತಿಕೊಂಡು ಕಾರಿನಲ್ಲಿ ಸಾಗಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಹ್ಯಾಂಡ್ ಪೋಸ್ಟ್ ಬಳಿ ಕಾರನ್ನು ಅಡ್ಡ ಹಾಕಿ ಆರೋಪಿಗಳನ್ನು ಬಂಧಿಸಿದ್ದಾರೆ.

    ಬಂಧಿತರಿಂದ ಆನೆ ದಂತ, ಕಾರು, ಮೊಬೈಲ್ ವಶಪಡಿಸಿಕೊಳ್ಳಲಾಗಿದೆ. ಕೊಳ್ಳೇಗಾಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

  • ತೇಗದ ಮರ ಕಡಿದ ಮಾಲೀಕನ ವಿರುದ್ಧ ಕೇಸ್‌ ದಾಖಲು

    ತೇಗದ ಮರ ಕಡಿದ ಮಾಲೀಕನ ವಿರುದ್ಧ ಕೇಸ್‌ ದಾಖಲು

    ಚಾಮರಾಜನಗರ: ಜಮೀನೊಂದರಲ್ಲಿ ಬೆಳೆದಿದ್ದ ತೇಗದ ಮರಗಳನ್ನು ಅರಣ್ಯ ಇಲಾಖೆಯ ಅನುಮತಿ ಪಡೆಯದೆ ಕಟಾವು ಮಾಡಿ, ಮಾರಾಟ ಮಾಡಲು ಮುಂದಾಗಿದ್ದ ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಗ್ರಾಮದ ಮಾಲೀಕನ ವಿರುದ್ಧ ದೂರು ದಾಖಲಾಗಿದೆ.

    ಸತ್ತೇಗಾಲದ ಅಗ್ರಹಾರದ ಸಮೀಪವಿರುವ ಜಮೀನೊಂದರಲ್ಲಿ ಬೆಳೆದಿದ್ದ ತೇಗದ ಮರಗಳನ್ನು ಜಮೀನು ‌ಮಾಲೀಕ ಸಚಿನ್ ಅರಣ್ಯ ಇಲಾಖೆ ಅನುಮತಿ ಪಡೆಯದೆ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಕಟಾವು ಮಾಡಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದರು. ಇದನ್ನೂ ಓದಿ: ಜಮ್ಮು ಕಾಶ್ಮೀರ ಅಭಿವೃದ್ಧಿ ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಅಮಿತ್ ಶಾ

    ಈ ಬಗ್ಗೆ ಪ್ರತಿಕ್ರಿಯಿಸಿದ ಮಲೆ ಮಹದೇಶ್ವರ ವನ್ಯ ಜೀವಿಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ಏಡುಕೊಂಡಲು‌, ಸಚಿನ್ ಎಂಬುವರ ಜಮೀನಿನಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಡಿಯಲಾಗಿದೆ ಎಂಬ ಮಾಹಿತಿ ತಿಳಿದು ಬಂದಿತ್ತು. ಈ‌ ಸಂಬಂಧ ಅರಣ್ಯಾಧಿಕಾರಿ ಸಿದ್ದಪ್ಪ ಹಾಗೂ ಗಾರ್ಡ್ ಪ್ರಮೋದ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಸಿದಾಗ ತೇಗದ ಮರ ಕಟಾವು ಮಾಡಿರುವುದು ತಿಳಿದು ಬಂದಿದೆ. ಸದ್ಯ ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

  • ಆ.5ಕ್ಕೆ ಬಿಜೆಪಿ ಸೇರ್ಪಡೆ: ಎನ್ ಮಹೇಶ್

    ಆ.5ಕ್ಕೆ ಬಿಜೆಪಿ ಸೇರ್ಪಡೆ: ಎನ್ ಮಹೇಶ್

    ಚಾಮರಾಜನಗರ: ಬಿಎಸ್‍ಪಿ ಪಕ್ಷದಿಂದ ಉಚ್ಚಾಟನೆ ನಂತರ ಸ್ವತಂತ್ರವಾಗಿ ಉಳಿದಿದ್ದ ಕೊಳ್ಳೇಗಾಲ ಶಾಸಕ ಎನ್ ಮಹೇಶ್ ಇದೀಗ ರಾಜಕೀಯ ನೆಲೆಗಾಗಿ ಕಮಲ ಪಕ್ಷ ಸೇರಲು ರೆಡಿಯಾಗಿದ್ದಾರೆ.

    ಬಿಜೆಪಿ ಸೇರ್ಪಡೆಗೆ ದಿನಾಂಕ ಕೂಡ ನಿಗದಿಯಾಗಿದ್ದು, ಆಗಸ್ಟ್ 5 ರಂದು ಬಿಜೆಪಿ ಸೇರ್ಪಡೆಯಾಗ್ತೇನೆ ಎಂದು  ಸ್ವತಃ ಶಾಸಕ ಎನ್ ಮಹೇಶ್ ತಿಳಿಸಿದ್ದಾರೆ.

    ಕಳೆದ ಹಲವು ದಿನಗಳಿಂದಲೂ ಕೂಡ ಶಾಸಕ ಎನ್ ಮಹೇಶ್ ಮುಂದಿನ ರಾಜಕೀಯ ನಡೆಯೇನು? ಅನ್ನೋ ಮಾತು ಪದೇ ಪದೇ ಕೇಳಿಬರುತ್ತಿತ್ತು.ಇದೀಗ ಮುಂದಿನ ರಾಜಕೀಯ ಏಳಿಗೆಗಾಗಿ ಕಮಲ ಮುಡಿಯಲು ಈಗಾಗಲೇ ಮೂಹೂರ್ತ ಕೂಡ ಫಿಕ್ಸ್ ಆಗಿದೆ. ಇದನ್ನೂ ಓದಿ : ಬೊಮ್ಮಾಯಿ ಸಂಪುಟದಲ್ಲಿ ವಿಜಯೇಂದ್ರಗೆ ಮಂತ್ರಿ ಪಟ್ಟ ನೀಡಿ – ಬಿಎಸ್‍ವೈ ಒತ್ತಡ 

    ಬಿಜೆಪಿ ರಾಜ್ಯಾದ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಆಗುವುದಾಗಿ ಸ್ವತಃ ಕೊಳ್ಳೇಗಾಲ ಶಾಸಕ ಎನ್ ಮಹೇಶ್ ತಿಳಿಸಿದ್ದಾರೆ.

  • ಮಗುವನ್ನು ಕೊಂದು ತಾಯಿ ಆತ್ಮಹತ್ಯೆಗೆ ಶರಣು

    ಮಗುವನ್ನು ಕೊಂದು ತಾಯಿ ಆತ್ಮಹತ್ಯೆಗೆ ಶರಣು

    ಚಾಮರಾಜನಗರ: ಮಗುವನ್ನು ಕೊಂದು ತಾಯಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಪಾಳ್ಯ ಗ್ರಾಮದಲ್ಲಿ ನಡೆದಿದೆ.

    ಪಾಳ್ಯ ಗ್ರಾಮದ ಸಂಗೀತಾ(23) ಮೃತ ದುರ್ದೈವಿ. ಸಂಗೀತಾ ತನ್ನ ಮೂರು ವರ್ಷದ ಮಗ ಕರಣ್‍ನನ್ನು ಸಾಯಿಸಿ ನೀರಿಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಸಂಗೀತಾ ಬೆಂಗಳೂರು ನಿವಾಸಿಯಾಗಿದ್ದು, ಕಳೆದ 6 ವರ್ಷದ ಹಿಂದೆ ಮಂಜು ಎಂಬಾತನೊಂದಿಗೆ ಪ್ರೇಮ ವಿವಾಹವಾಗಿದ್ದಳು ಎಂದು ಕುಟುಂಬದ ಮೂಲಗಳು ತಿಳಿಸಿವೆ.

    ಗ್ರಾಮದ ಮಹದೇಶ್ವರ ದೇಗುಲಕ್ಕೆ ತೆರಳುತ್ತೇನೆಂದು ಹೇಳಿ ಬೆಳಗ್ಗೆ ಮನೆಯಿಂದ ಬಂದಿದ್ದಳು ಎನ್ನಲಾಗಿದ್ದು, ಸಾವಿಗೆ ಕಾರಣ ನಿಗೂಢವಾಗಿದೆ. ಸದ್ಯ ಕೊಳ್ಳೇಗಾಲ ಗ್ರಾಮಾಂತರ ಠಾಣೆಯ ಸಿಪಿಐ ಶ್ರೀಕಾಂತ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮೃತ ಸಂಗೀತಾ ಹಾಗೂ ಮಗುವಿ ದೇಹವನ್ನು ಮರಣೋತ್ತರ ಪರೀಕ್ಷೆಗೆ ಸಾಗಿಸಿದ್ದಾರೆ.

    ಈ ಸಂಬಂಧ ಕೊಳ್ಳೇಗಾಲ ಗ್ರಾಮಾಂತರ ಠಾಣೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

  • ಮಹಿಳೆಗೆ ಚಾಕು ತೋರಿಸಿ 40 ಗ್ರಾಂ ಚಿನ್ನದ ಮಾಂಗಲ್ಯ ಸರ ಎಗರಿಸಿದ ಕಳ್ಳರು

    ಮಹಿಳೆಗೆ ಚಾಕು ತೋರಿಸಿ 40 ಗ್ರಾಂ ಚಿನ್ನದ ಮಾಂಗಲ್ಯ ಸರ ಎಗರಿಸಿದ ಕಳ್ಳರು

    ಚಾಮರಾಜನಗರ: ವಾಕಿಂಗ್ ಮಾಡುತ್ತಿದ್ದ ಮಹಿಳೆಯೊಬ್ಬರಿಗೆ ಮುಸುಕುದಾರಿ ದರೋಡೆಕೋರರಿಬ್ಬರು ಚಾಕು ತೋರಿಸಿ, ಚಿನ್ನದ ಮಾಂಗಲ್ಯ ಸರವನ್ನು ದೋಚಿದ ಘಟನೆ ಕೊಳ್ಳೇಗಾಲ ತಾಲೂಕಿನ ಹೊಸಮಾಲಂಗಿಯಲ್ಲಿ ನಡೆದಿದೆ.

    ಕೊಳ್ಳೇಗಾಲ ತಾಲೂಕಿನ ಸಿಲ್ಕಲ್ ಪುರ ಗ್ರಾಮದ ಕುಮಾರಸ್ವಾಮಿ ಅವರ ಪತ್ನಿ ಕನಕ ಮಾಂಗಲ್ಯ ಸರ ಕಳೆದುಕೊಂಡ ಮಹಿಳೆ. 28 ಗ್ರಾಂ ಸರ, 8 ಗ್ರಾಂ ತಾಳಿ ಹಾಗೂ 4ಗ್ರಾಂ ಗುಂಡು ಮಾಂಗಲ್ಯ ಸರದಲ್ಲಿ ಇತ್ತು ಎಂದು ಕನಕ ಪೊಲೀಸರಿಗೆ ತಿಳಿಸಿದ್ದಾರೆ.

    ಹೊಸಮಾಲಂಗಿ ಗ್ರಾಮದ ಹೊರ ವಲಯದ ಚಾನಲ್ ರಸ್ತೆಯಲ್ಲಿ ಕನಕ ಅವರು ಶನಿವಾರ ಬೆಳಗ್ಗೆ 6:30 ಗಂಟೆ ಸಮಯದಲ್ಲಿ ವಾಕಿಂಗ್ ಮಾಡುತ್ತಿದ್ದರು. ಈ ವೇಳೆ ಟಗರಪುರ ಗ್ರಾಮದ ಕಡೆಯಿಂದ ಕಾರಿನಲ್ಲಿ ಬಂದ ಅಪರಿಚಿತರಿಬ್ಬರು ಚಾಕು ತೋರಿಸಿ, ಚಿನ್ನದ ಮಾಂಗಲ್ಯ ಸರ ಕೊಡುವಂತೆ ಬೆದರಿಸಿದ್ದಾರೆ. ಒಂದು ವೇಳೆ ಕೊಡದಿದ್ದರೆ ಕೊಲೆ ಮಾಡಿ, ಕಿತ್ತುಕೊಂಡು ಹೋಗುತ್ತೇವೆ ಎಂದು ಬೆದರಿಸಿದ್ದಾರೆ. ಇದರಿಂದ ಗಾಬರಿಗೊಂಡ ಕನಕ ಅವರು ಮಾಂಗಲ್ಯ ಸರ ನೀಡಿದ್ದಾರೆ.

    ಮಾಂಗಲ್ಯ ಸರ ಕೈಗೆ ಸಿಗುತ್ತಿದಂತೆ ಕಳ್ಳರು ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಸಂಬಂಧ ಕನಕ ಅವರು, ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆರೋಪಿಗಳು ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬಂದಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

  • ಕೊಳ್ಳೆಗಾಲದಲ್ಲಿ ನೇಣು ಬಿಗಿದುಕೊಂಡ ನೇಪಾಳದ ಯುವಕ

    ಕೊಳ್ಳೆಗಾಲದಲ್ಲಿ ನೇಣು ಬಿಗಿದುಕೊಂಡ ನೇಪಾಳದ ಯುವಕ

    ಚಾಮರಾಜನಗರ: ನೇಪಾಳದ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರದ ಕೊಳ್ಳೇಗಾಲ ಪಟ್ಟಣದಲ್ಲಿ ನಡೆದಿದೆ.

    ಕೊಳ್ಳೇಗಾಲದ ಓಂ ಶಕ್ತಿ ದೇವಸ್ಥಾನದ ರಸ್ತೆಯ ಚಿಲ್ಲರೆ ಅಂಗಡಿಯೊಂದರ ಬಳಿ ಘಟನೆ ನಡೆದಿದ್ದು, ಅತಿನ್ ಖಡ್ಕ (28) ಎಂಬಾತ ನೇಣಿಗೆ ಶರಣಾಗಿರುವ ನೇಪಾಳಿ ಯುವಕ. ಮೃತ ಯುವಕನ ಬಟ್ಟೆಯಲ್ಲಿ ದೊರೆತ ಪಾಸ್ ಪೋರ್ಟ್‍ನಿಂದ ಹೆಸರು ವಿಳಾಸ ತಿಳಿದು ಬಂದಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

    ಚಿಲ್ಲರೆ ಅಂಗಡಿಯೊಂದರ ಮುಂಭಾಗದ ಸಜ್ಜೆಗೆ ಅಳವಡಿಸಲಾಗಿದ್ದ ಕಬ್ಬಿಣದ ಕೊಕ್ಕೆಗೆ ಪ್ಲಾಸ್ಟಿಕ್ ವೈರ್‍ನಿಂದ ನೇಣು ಬಿಗಿದುಕೊಂಡಿದ್ದಾನೆ. ಮಧ್ಯರಾತ್ರಿ 2 ಗಂಟೆ ಸಮಯದಲ್ಲಿ ಅಕಸ್ಮಿಕವಾಗಿ ಹೊರ ಬಂದ ಸ್ಥಳೀಯ ನಿವಾಸಿಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ಕಂಡು ಗಾಬರಿಯಾಗಿ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ.

    ಸ್ಥಳಕ್ಕಾಗಮಿಸಿದ ಕೊಳ್ಳೇಗಾಲ ಪಟ್ಟಣ ಠಾಣೆ ಪೊಲೀಸರು ಪರಿಶೀಲಿಸಿ, ಮೃತನ ವಾರಸುದಾರರ ಪತ್ತೆಗಾಗಿ ಒಡೆಯರಪಾಳ್ಯ ಟಿಬೆಟ್ ಕ್ಯಾಂಪ್‍ಗೆ ಮಾಹಿತಿ ನೀಡಿದ್ದರೆ. ಶವವನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಇರಿಸಲಾಗಿದೆ.

  • ಅಮ್ಮ ಭಗವಾನ್ ಪಾದರಕ್ಷೆಯನ್ನು ಮೈಮೇಲೆ ಸವರಿಕೊಂಡ ಸಚಿವ ಮಹೇಶ್: ವಿಡಿಯೋ ವೈರಲ್

    ಅಮ್ಮ ಭಗವಾನ್ ಪಾದರಕ್ಷೆಯನ್ನು ಮೈಮೇಲೆ ಸವರಿಕೊಂಡ ಸಚಿವ ಮಹೇಶ್: ವಿಡಿಯೋ ವೈರಲ್

    ಚಾಮರಾಜನಗರ: ಪ್ರಾಥಮಿಕ ಶಿಕ್ಷಣ ಸಚಿವ ಎನ್.ಮಹೇಶ್ ಅಮ್ಮ ಭಗವಾನ್ ಪಾದರಕ್ಷೆಯನ್ನು ಮೈಮೇಲೆ ಸವರಿಕೊಂಡ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಕೊಳ್ಳೇಗಾಲ ಮತಕ್ಷೇತ್ರದಿಂದ ಬಿಎಸ್‍ಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಎನ್.ಮಹೇಶ್ ಅವರು ಗೆಲುವು ಸಾಧಿಸಿ ಸಚಿವರಾಗಿದ್ದಾರೆ. ಎನ್.ಮಹೇಶ್ ಅವರು ಕೆಲವು ದಿನಗಳ ಹಿಂದಷ್ಟೇ ಸುತ್ತೂರು ಶ್ರೀಗಳ ಕಾಲಿಗೆ ಬಿದ್ದು ನಮಸ್ಕರಿಸಿ ಭಾರೀ ಚರ್ಚೆಗೆ ಕಾರಣವಾಗಿದ್ದರು. ಇದರ ಬೆನ್ನಲ್ಲೆ ಈಗ ಅಮ್ಮ ಭಗವಾನ್ ಎಂಬ ಸ್ವಾಮೀಜಿಯ ಪಾದರಕ್ಷೆಯನ್ನು ಮೈಮೇಲೆ ಸವರಿಕೊಂಡ ವಿಡಿಯೋ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಎಡೆಮಾಡಿಕೊಟ್ಟಿದೆ.

    ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪೋಸ್ಟ್ ಆಗುತ್ತಿದ್ದಂತೆ, ಭಾರೀ ಪ್ರಮಾಣದ ಟೀಕೆಗಳು ಕೇಳಿಬರುತ್ತಿದ್ದು, ಈ ಕುರಿತು ಅಂಬೇಡ್ಕರ್‍ವಾದಿಗಳು ಅಸಮಾಧಾನ ವ್ಯಕ್ತಡಿಸಿದ್ದಾರೆ. ಅಂಬೇಡ್ಕರ್ ವಿಚಾರಧಾರೆಯನ್ನು ಊರೆಲ್ಲ ಹರಡಿ, ಈಗ ಅವರ ಸ್ವಾಭಿಮಾನವನ್ನು ಹರಾಜು ಹಾಕುವ ಕೃತ್ಯವನ್ನು ಎನ್.ಮಹೇಶ್ ಮಾಡುತ್ತಿದ್ದಾರೆ. ಅಂಬೇಡ್ಕರ್ ಸ್ವಾಭಿಮಾನದ ಚಿಂತನೆಯನ್ನು ಸ್ವಾಮೀಜಿ ಚಪ್ಪಲಿ ತಳಕ್ಕಿಟ್ಟಿದ್ದು, ಬಿಎಸ್‍ಪಿ ಹಾಗೂ ಅಂಬೇಡ್ಕರಿಸಮ್ ಸಿದ್ಧಾಂತಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ ಎಂದು ಬೆಂಬಲಿಗರು ಕಮೆಂಟ್ ಮಾಡುತ್ತಿದ್ದಾರೆ.

    https://youtu.be/jg2vq0ZAyTc

    ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಚಿವ ಎನ್ ಮಹೇಶ್, ಚುನಾವಣೆ ಪ್ರಚಾರಕ್ಕಾಗಿ ಕೊಳ್ಳೇಗಾಲಕ್ಕೆ ಹೋಗಿದ್ದೆ. ಈ ವೇಳೆ ಸ್ಥಳೀಯರು ನೀವು ಪೂಜೆ ಮಾಡಿ ಒಳ್ಳೆದಾಗುತ್ತದೆ ಎಂದು ಹೇಳಿದರು. ಅವರ ಮನಸ್ಸಿಗೆ ಧಕ್ಕೆ ತರಬಾರದು ಎನ್ನುವುದಕ್ಕೆ ನಾನು ಪಾದ ಪೂಜೆ ಮಾಡಿದ್ದು ಸತ್ಯ. ಆದರೆ ನಾವು ಯಾವುದೇ ಧರ್ಮಕ್ಕೆ ಸೇರಿಲ್ಲ. ಒಬ್ಬ ಜನಪ್ರತಿನಿಧಿಯಾಗಿ ಉಳಿದ ಧರ್ಮಗಳನ್ನು ಗೌರವಿಸಬೇಕಾಗುತ್ತದೆ. ನಾನು ಚರ್ಮಕ್ಕೆ ಪಾದರಕ್ಷೆ ಮುಟ್ಟಿಸಿಕೊಂಡಿಲ್ಲ, ಬಟ್ಟೆಗೆ ಮುಟ್ಟಿಸಿಕೊಂಡಿರುವೆ. ನಾನು ಅಂಬೇಡ್ಕರ್ ಸಿದ್ಧಾಂತಗಳಿಗೆ ಧಕ್ಕೆ ತಂದಿದ್ದೇನೆ ಎಂದು ಕೆಲವರು ದೂರಿದ್ದಾರೆ. ಆದರೆ ನಾನು ಅದನ್ನು ಒಪ್ಪುವುದಿಲ್ಲ. ನಾನು ಕಟ್ಟಾ ಅಂಬೇಡ್ಕರ್‍ವಾದಿ ಎಂದಿದ್ದಾರೆ.

  • ಉರುಳಿಗೆ ಸಿಲುಕಿ ನರಳುತ್ತಿದ್ದ ಜಿಂಕೆಯನ್ನು ರಕ್ಷಿಸಿದ ಯುವಕರು

    ಉರುಳಿಗೆ ಸಿಲುಕಿ ನರಳುತ್ತಿದ್ದ ಜಿಂಕೆಯನ್ನು ರಕ್ಷಿಸಿದ ಯುವಕರು

    ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಕಾವೇರಿ ಜೀವಿಧಾಮದಲ್ಲಿ ಉರುಳಿಗೆ ಸಿಲುಕಿ ನರಳುತ್ತಿದ್ದ ಜಿಂಕೆ ಮತ್ತು ಜಿಂಕೆ ಮರಿಯನ್ನು ಯುವಕರು ರಕ್ಷಿಸಿದ್ದಾರೆ.

    ಕೊಳ್ಳೆಗಾಲ ತಾಲೂಕಿನ ಚಿಕ್ಕಲ್ಲೂರುನಿಂದ ಮುತ್ತತ್ತಿಗೆ ಹೋಗುವ ದಾರಿಯಲ್ಲಿ ಜಿಂಕೆಯ ಚೀರಾಟ ಕೇಳುತಿತ್ತು. ಕೂಡಲೇ ಈ ಸ್ಥಳದ ಮೂಲಕ ತೆರಳುತ್ತಿದ್ದ ಯುವಕರು ಜಿಂಕೆ ಮತ್ತು ಜಿಂಕೆ ಮರಿಯನ್ನು ರಕ್ಷಣೆ ಮಾಡಿದ್ದಾರೆ.

    ಸಾಮಾನ್ಯವಾಗಿ ಉರುಳನ್ನು ಬೇಟೆಗಾರರು ಮೊಲ ಹಾಗೂ ಹಂದಿಯನ್ನು ಹಿಡಿಯಲು ಕಾಡಿನಲ್ಲಿ ಉರುಳನ್ನು ಹಾಕಿರುತ್ತಾರೆ.

    ಬಹಳಷ್ಟು ಸಲ ದೊಡ್ಡ ಪ್ರಾಣಿಗಳಾದ ಹುಲಿ ಚಿರತೆಗಳಂತ ಪ್ರಾಣಿಗಳೇ ಈ ಉರುಳಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆಗಳು ಬಹಳಷ್ಟು ಸಂದರ್ಭದಲ್ಲಿ ಆಗಿವೆ. ಈ ಬಗ್ಗೆ ಅರಣ್ಯ ಇಲಾಖೆ ಸಾಕಷ್ಟು ಕ್ರಮ ವಹಿಸಿದ್ದರೂ ಬೇಟೆಗಾರರು ಮಾಂಸಕ್ಕಾಗಿ ತಮ್ಮ ಚಾಳಿಯನ್ನು ಬಿಡುತ್ತಿಲ್ಲ.

     

    https://youtu.be/vlD6prhb0xQ

     

  • ಭಗೀರಥನಾದ್ರು, ಈಗ ಮೇವು ಪೂರೈಕೆಗೆ ಯಶೋಮಾರ್ಗ ಪ್ಲಾನ್

    ಭಗೀರಥನಾದ್ರು, ಈಗ ಮೇವು ಪೂರೈಕೆಗೆ ಯಶೋಮಾರ್ಗ ಪ್ಲಾನ್

    ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಈಗಾಗಲೇ ಯಶೋಮಾರ್ಗದ ಮೂಲಕ ಹಲವು ಸಮಾಜಮುಖಿ ಕೆಲಸಗಳನ್ನ ಮಾಡ್ತಿದ್ದಾರೆ. ಸದ್ಯ ಯಶ್ ಮತ್ತೊಂದು ರೈತಪರ ಕಾಳಜಿಯ ಕೆಲಸಕ್ಕೆ ಕೈ ಹಾಕಿದ್ದಾರೆ.

    ಮೇವಿನ ಕೊರತೆಯಿಂದ ಬಳಲ್ತಿರೋ ಜಾನುವಾರುಗಳಿಗೆ ಮೇವು ಒದಗಿಸುವ ಕಾರ್ಯಕ್ಕೆ ಯಶ್ ಕೈ ಜೋಡಿಸಿದ್ದಾರೆ. ಕೊಳ್ಳೆಗಾಲ ಸಮೀಪದ ಮಲೆಮಹದೇಶ್ವರ ಬೆಟ್ಟ ಹಾಗೂ ಅಲ್ಲಿನ ಹಲವು ಪ್ರದೇಶಗಳಿಗೆ ತೆರೆಳಿ ಅಲ್ಲಿ ಜಾನುವಾರುಗಳಿಗೆ ಆಗ್ತಿದ್ದ ಮೇವಿನ ಸಮಸ್ಯೆ ಬಗ್ಗೆ ಆದ ಮಾಧ್ಯಮದ ವರದಿ ಹಾಗು ವಿಡಿಯೋ ನೊಡಿದ್ದಾರೆ. ಸದ್ಯ ಮೇವಿನ ಸಮಸ್ಯೆ ನಿವಾರಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಅಲ್ಲಿನ ಗೋವುಗಳಿಗೆ ಒದಗಿಸುತ್ತಿರುವ ಮೇವು ಸಾಲದಾಗಿದ್ದು ಯಶ್ ಈ ಕುರಿತು ಸಂಸದ ದೃವನಾರಾಯಣ್ ಹಾಗೂ ಎ ಮಂಜು ಜೊತೆ ಮಾತನಾಡಿದ್ದಾರೆ.

    ಇದನ್ನೂ ಓದಿ: ಕೊಪ್ಪಳದಲ್ಲಿ ಯಶೋಮಾರ್ಗದ ಫಲ- ಬತ್ತಿ ಹೋಗಿದ್ದ ಕೆರೆಯಲ್ಲಿ ಉಕ್ಕುತ್ತಿದೆ ಜೀವ

    ಸದ್ಯ ಯಶೋಮಾರ್ಗ ಫೌಂಡೇಷನ್ ಮೂಲಕ ಹಲವು ರೈತಪರ ಕಾರ್ಯಕ್ಕೆ ಮುಂದಾಗಿರೋ ಯಶ್ ಈಗ ಮತ್ತೊಂದು ಹೆಜ್ಜೆ ಮುಂದೆ ಇಟ್ಟಿದ್ದು, ಅಲ್ಲಿನ ಜಾನುವಾರುಗಳಿಗೆ ಮೇವಿನ ತೊಂದರೆ ನಿವಾರಣೆಯಾಗುತ್ತೆ ಅನ್ನೋ ನಿರೀಕ್ಷೆಯಲ್ಲಿದ್ದೇನೆ ಅಂತ ಫೇಸ್‍ಬುಕ್‍ನಲ್ಲಿ ಬರೆದುಕೊಂಡಿದ್ದಾರೆ.