ಉಡುಪಿ: ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಗುರುವಾರ ಕೊಲ್ಲೂರು ಮೂಕಾಂಬಿಕೆ ದರ್ಶನ ಮಾಡಿದ್ದಾರೆ.
ವಿಜಯದಶಮಿ ಹಿನ್ನೆಲೆಯಲ್ಲಿ ಉಡುಪಿಯ ಕೊಲ್ಲೂರು ದೇಗುಲಕ್ಕೆ ಭೇಟಿ ನೀಡಿದ್ದು, ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದೇ ವೇಳೆ, ದೇವಾಲಯದ ಆಡಳಿತ ಮಂಡಳಿಯಿಂದ ಅಣ್ಣಾಮಲೈ ಅವರಿಗೆ ವಿಶೇಷ ಗೌರವ ಸಲ್ಲಿಸಲಾಗಿದೆ.
ದೇವಾಲಯಕ್ಕೆ ಬಂದಿದ್ದ ಭಕ್ತರು ಅಣ್ಣಾಮಲೈ ನೋಡಲು ಮುಗಿಬಿದ್ದರು. ಅನೇಕರು ಅಣ್ಣಾಮಲೈ ಜೊತೆ ಸೆಲ್ಫಿ ತೆಗೆಸಿಕೊಂಡರು.
ಉಡುಪಿ: ಕಾಂತಾರ ಚಾಪ್ಟರ್ 1 (Kantara Chapter 1) ಟ್ರೈಲರ್ ಬಿಡುಗಡೆ ಬೆನ್ನಲ್ಲೇ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) ಅವರು ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಮಾಡಿದ್ದಾರೆ.
ಬಹುನಿರೀಕ್ಷಿತ ಕಾಂತಾರ ಚಾಪ್ಟರ್ 1 ಸಿನಿಮಾದ ಟ್ರೈಲರ್ ಅನ್ನು ನವರಾತ್ರಿ ದಿನ ಬಿಡುಗಡೆ ಮಾಡಲಾಯಿತು. ಟ್ರೈಲರ್‌ಗೆ ಪ್ರೇಕ್ಷಕರಿಂದ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ರಿಲೀಸ್ ಆದ ದಿನವೇ 55 ಮಿಲಿಯನ್‌ಗೆ ಹೆಚ್ಚು ವೀಕ್ಷಣೆಯನ್ನು ಟ್ರೈಲರ್ ಪಡೆದುಕೊಂಡಿದೆ.
ಟ್ರೈಲರ್ ರಿಲೀಸ್ ಬಳಿಕ ಸಂಜೆ ಕಾಂತಾರ ಚಿತ್ರತಂಡ ಪತ್ರಿಕಾಗೋಷ್ಠಿ ನಡೆಸಿ ಸಿನಿಮಾದ ಬಗ್ಗೆ ಕುತೂಹಲಕಾರಿ ಮಾಹಿತಿಗಳನ್ನು ಹಂಚಿಕೊಂಡಿತು. ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಅವರು ಸಿನಿಮಾ ನಿರ್ಮಾಣದಲ್ಲಿನ ಶ್ರಮ ಹಾಗೂ ತಂಡದ ಜವಾಬ್ದಾರಿಯುತ ಕೆಲಸದ ಬಗ್ಗೆ ಮಾತನಾಡಿದರು. ನಟಿ ರುಕ್ಮಿಣಿ ವಸಂತ್, ನಿರ್ಮಾಪಕ ವಿಜಯ್ ಕಿರಗಂದೂರು, ರಿಷಬ್ ಪತ್ನಿ ಪ್ರಗತಿ ಶೆಟ್ಟಿ ಕೂಡ ಸುದ್ದಿಗೋಷ್ಠಿಯಲ್ಲಿ ಸಿನಿಮಾ ಕುರಿತು ಮಾತನಾಡಿದರು. ಇದನ್ನೂ ಓದಿ: ಕಾಂತಾರ ಚಾಪ್ಟರ್-1 ಟ್ರೈಲರ್ ರಿಲೀಸ್ – ದೃಶ್ಯ ವೈಭವಕ್ಕೆ ಮನಸೋತ ಫ್ಯಾನ್ಸ್
ಕಾಂತಾರ ಚಾಪ್ಟರ್ 1 ಇದೇ ಅಕ್ಟೋಬರ್ 2 ರಂದು ರಾಜ್ಯಾದ್ಯಂತ ತೆರೆಗೆ ಅಪ್ಪಳಿಸಲಿದೆ. ದೇಶ-ವಿದೇಶಗಳಲ್ಲೂ ಸಿನಿಮಾ ಬಿಡುಗಡೆಗೆ ಚಿತ್ರತಂಡ ಸಿದ್ಧತೆ ನಡೆಸಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಭಾಷೆಗಳಲ್ಲೂ ಸಿನಿಮಾ ರಿಲೀಸ್ ಆಗಲಿದೆ.
ಉಡುಪಿ: ಕೊಲ್ಲೂರು ಮೂಕಾಂಬಿಕೆ (Kollur Mookambika) ತಾಯಿಗೆ ಖ್ಯಾತ ಸಂಗೀತ ನಿರ್ದೇಶಕ, ಸ್ವರ ಮಾಂತ್ರಿಕ ಇಳಯರಾಜ ಅವರು 4 ಕೋಟಿ ರೂ. ಮೌಲ್ಯದ ವಜ್ರದ ಕಿರೀಟವನ್ನು (Diamond crown) ಅರ್ಪಿಸಿದ್ದಾರೆ.
ಕೊಲ್ಲೂರು ಮೂಕಾಂಬಿಕೆಯ ಭಕ್ತರಾಗಿರುವ ಇಳಯರಾಜ (Ilaiyaraaja) ಅವರು, ಈ ಹಿಂದೆಯೂ ಮೂಕಾಂಬಿಕೆ ದೇವಿಗೆ ಬಗೆಬಗೆಯ ಆಭರಣ ನೀಡಿ ಭಕ್ತಿ ತೋರಿದ್ದರು. ಈ ಬಾರಿ ದೇವಿಗೆ ವಜ್ರದ ಕಿರೀಟ ಸಹಿತ ಆಭರಣಗಳನ್ನು ಅರ್ಪಿಸಿದ್ದಾರೆ. ಜೊತೆಗೆ ವೀರಭದ್ರ ದೇವರಿಗೆ ರಜತ ಕಿರೀಟ ಮತ್ತು ಖಡ್ಗ ಸಮರ್ಪಿಸಿದ್ದಾರೆ. ಇದನ್ನೂ ಓದಿ: ವಿಷ್ಣು ಸಮಾಧಿ, ಕರ್ನಾಟಕ ರತ್ನ ಬಗ್ಗೆ ರಮೇಶ್ ಅರವಿಂದ್ ರಿಯಾಕ್ಷನ್
ಆಭರಣ ಅರ್ಪಿಸುವ ಮುನ್ನ ದೇಗುಲದಲ್ಲಿ ಮೆರವಣಿಗೆ ಮಾಡಲಾಯಿತು. ಈ ವೇಳೆ ದೇಗುಲದ ಆಡಳಿತ ಮಂಡಳಿ ಹಾಗೂ ಅರ್ಚಕರು ಭಾಗಿಯಾಗಿದ್ದರು. ಕೋಟ್ಯಂತರ ಮೌಲ್ಯದ ಆಭರಣಗಳನ್ನು ಅರ್ಪಿಸಿ ಇಳೆಯರಾಜ ಅವರು ಭಾವುಕರಾಗಿದ್ದು, ಮೂಕಾಂಬಿಕೆಯಿಂದ ತನ್ನ ಜೀವನದಲ್ಲಿ ಪವಾಡ ನಡೆದಿದೆ ಎಂದಿದ್ದಾರೆ. ಬಳಿಕ ದೇಗುಲದ ವತಿಯಿಂದ ಮಹಾದಾನಿ ಇಳಯರಾಜ ಅವರಿಗೆ ಗೌರವಾರ್ಪಣೆ ಮಾಡಲಾಯಿತು.
– ಕೇಂದ್ರ ಹಣಕಾಸು ಸಚಿವೆ ಭೇಟಿಯಾದ ಶಿವಮೊಗ್ಗ ಸಂಸದ – ನಬಾರ್ಡ್ ಸಹಾಯಧನ ಬಾಕಿ ಉಳಿದ ಹಣ ಶೀಘ್ರ ಬಿಡುಗಡೆಗೆ ಮನವಿ
ನವದೆಹಲಿ: ಪ್ರಸಾದ್ ಯೋಜನೆಯಡಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನವನ್ನು (Kollur Mookambika Temple) ಸೇರಿಸುವಂತೆ ಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್ ಅವರಿಗೆ ಸಂಸದ ಬಿ.ವೈ.ರಾಘವೇಂದ್ರ (B.Y.Raghavendra) ಮನವಿ ಮಾಡಿದ್ದಾರೆ.
ಕೊಲ್ಲೂರು ಮೂಕಾಂಬಿಕಾ ದೇವಾಲಯವು ಧಾರ್ಮಿಕ ಮತ್ತು ಪ್ರಕೃತಿ ಸೌಂದರ್ಯದಿಂದ ಕೂಡಿದ್ದು, ಪ್ರವಾಸೋದ್ಯಮಕ್ಕೆ ಉತ್ತಮ ಸ್ಥಳವಾಗಿದೆ. ಪ್ರವಾಸಿಗರ ಆಕರ್ಷಣೆಯಿಂದ ಹೆಚ್ಚಿನ ಹೂಡಿಕೆ ಸಾಧ್ಯವಾಗಲಿದೆ. ಶಿವಮೊಗ್ಗ, ಮಂಗಳೂರು ಹಾಗೂ ಉಡುಪಿ CGHS ಕ್ಷೇಮ ಕೇಂದ್ರಗಳಿಗೆ ಹುದ್ದೆಗಳ ಮಂಜೂರಾತಿ ಹಾಗೂ ಅನುದಾನ ಬಿಡುಗಡೆಗೆ ಆದಷ್ಟು ಬೇಗ ಅನುಮೋದನೆ ನೀಡಬೇಕೆಂದು ಕೇಳಿಕೊಂಡಿದ್ದಾರೆ.
ಉಡುಪಿ: ದಕ್ಷಿಣ ಭಾರತಾದ್ಯಂತ ಭಕ್ತರನ್ನು ಹೊಂದಿರುವ ಕೊಲ್ಲೂರಿನ ಶ್ರೀ ಮೂಕಾಂಬಿಕಾ ಕ್ಷೇತ್ರದಲ್ಲಿ ಚಂಡಿಕಾ ಹೋಮದಂದಲೇ ವಾರ್ಷಿಕ 1.77 ಕೋಟಿ ರೂಪಾಯಿ ಆದಾಯ ಬಂದಿದೆ.
ದೇಗುಲದ ಆದಾಯವು ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿದ್ದು, 2024-25ನೇ ಸಾಲಿನಲ್ಲಿ 71 ಕೋಟಿ ರೂ. ದಾಟಿದೆ. ಇದು ಕಳೆದ ವರ್ಷಕ್ಕಿಂತ 3 ಕೋಟಿ ರೂ. ಹೆಚ್ಚು. ಹುಂಡಿಯಲ್ಲಿ ಕಾಣಿಕೆ ರೂಪದಲ್ಲಿ ಸಂಗ್ರಹವಾದ ನಗದು ಹಾಗೂ ಚಿನ್ನಾಭರಣ, ಚಂಡಿಕಾ ಹೋಮ ಸೇರಿ ವಿವಿಧ ಪೂಜೆಗಳಿಂದ ಬರುವ ಆದಾಯ, ನಿತ್ಯ ಪೂಜೆ, ಆನ್‌ಲೈನ್ ಪೂಜೆಗಳ ಆದಾಯವನ್ನು ಇದು ಒಳಗೊಂಡಿದೆ.
ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರವನ್ನು ಹೊರತುಪಡಿಸಿದರೆ ಕೊಲ್ಲೂರು ರಾಜ್ಯದಲ್ಲೇ ಅತಿ ಹೆಚ್ಚು ಆದಾಯವಿರುವ ಕ್ಷೇತ್ರ.
‘ಬಿಗ್ ಬಾಸ್ ಕನ್ನಡ 11’ರ (Bigg Boss Kannada 11) ಸ್ಪರ್ಧಿಗಳಾದ ಐಶ್ವರ್ಯಾ, ಶಿಶಿರ್ ಶಾಸ್ತ್ರಿ, ಮೋಕ್ಷಿತಾ ಪೈ (Mokshitha Pai) ಅವರು ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ (Kollur Mookambika Temple) ಭೇಟಿ ನೀಡಿದ್ದಾರೆ. ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ:ಪ್ಯಾರಿಸ್ ಬೀದಿಯಲ್ಲಿ ಪ್ರಣಿತಾ ಸುಭಾಷ್ ಹಾಟ್ ಪೋಸ್
ಜನವರಿ ಅಂತ್ಯದಲ್ಲಿ ‘ಬಿಗ್ ಬಾಸ್’ ಶೋಗೆ ಬ್ರೇಕ್ ಬಿದ್ದಿತ್ತು. ಹಲವು ಕಾರ್ಯಕ್ರಮಗಳಲ್ಲಿ ಬ್ಯುಸಿಯಿದ್ದ ಸ್ಪರ್ಧಿಗಳು ಇದೀಗ ಕೊಲ್ಲೂರು ಮೂಕಾಂಬಿಕೆ ದೇಗುಲಕ್ಕೆ ಭೇಟಿ ಕೊಟ್ಟಿದ್ದಾರೆ. ಈ ವೇಳೆ, ಮೋಕ್ಷಿತಾ, ಶಿಶಿರ್ (Shishir), ಐಶ್ವರ್ಯಾ (Aishwarya) ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ.
ಇತ್ತೀಚೆಗೆ ಕೊಡಗಿನಲ್ಲಿ ‘ಬಿಗ್ ಬಾಸ್’ ಸ್ಪರ್ಧಿ ರಂಜಿತ್ ಅವರ ಎಂಗೇಜ್‌ಮೆಂಟ್ ಅದ್ಧೂರಿಯಾಗಿ ನಡೆಯಿತು. ಈ ಕಾರ್ಯಕ್ರಮಕ್ಕೆ ಐಶ್ವರ್ಯಾ, ಮೋಕ್ಷಿತಾ, ಶಿಶಿರ್, ಭವ್ಯಾ ಗೌಡ, ಅನುಷಾ ರೈ ಭಾಗಿಯಾಗಿ ಶುಭಕೋರಿದ್ದರು.
ಉಡುಪಿ: ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಉಡುಪಿ ಜಿಲ್ಲೆಯ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದಿದ್ದಾರೆ.
ಒಂದು ದಿನ ಉಡುಪಿ ಪ್ರವಾಸವನ್ನು ಕೈಗೊಂಡಿದ್ದ ಅವರು, ಹೆಲಿಕಾಫ್ಟರ್ ವಿಮಾನವನ್ನು ಬಿಟ್ಟು ಸರಳವಾಗಿ ರೈಲಿನ ಮೂಲಕ ಬೈಂದೂರು ರೈಲ್ವೆ ನಿಲ್ದಾಣಕ್ಕೆ ಬಂದಿಳಿದರು. ಸಾವಂತ್ ಅವರನ್ನು ಶಾಸಕ ಗುರುರಾಜ್ ಗಂಟಿಹೊಳೆ ಬರಮಾಡಿಕೊಂಡರು.
ಸ್ವಲ್ಪ ಕಾಲ ವಿಶ್ರಾಂತಿ ಪಡೆದು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತೆರಳಿ ಮೂಕಾಂಬಿಕೆಯ ದರ್ಶನಗೈದರು. ಬಳಿಕ ಚಂಡಿಕಾ ಹೋಮದಲ್ಲಿ ಭಾಗಿಯಾದರು. ವಿಶೇಷ ಪೂಜೆ ನೆರವೇರಿಸಿ ಇತರೆ ಎರಡು ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಗೋವಾಕ್ಕೆ ವಾಪಸ್ ಆಗಿದ್ದಾರೆ.
ಮಾಲಿವುಡ್ ನಟ ಮೋಹನ್‌ಲಾಲ್ (Mohanlal) ಕೊಲ್ಲೂರು ಮೂಕಾಂಬಿಕೆ ದೇವಿಯ (Kollur Mookambika Temple) ದರ್ಶನ ಪಡೆದಿದ್ದಾರೆ. ಶೂಟಿಂಗ್‌ಗೆ ಬ್ರೇಕ್ ಹಾಕಿ ಕೊಲ್ಲೂರು ಮೂಕಾಂಬಿಕಾ ದರ್ಶನ ಪಡೆದು ಮೋಹನ್‌ಲಾಲ್ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಆಗಾಗ ಸೆಲೆಬ್ರಿಟಿಗಳು ಭೇಟಿ ನೀಡುತ್ತಲೇ ಇರುತ್ತಾರೆ. ಯುಗಾದಿ ಹಬ್ಬದ ಸಂದರ್ಭದಲ್ಲಿ ನಟಿ ಹರ್ಷಿಕಾ ಪೂಣಚ್ಚ ವಿಶೇಷ ಪೂಜೆ ಸಲ್ಲಿಸಿದ್ದರು.
ಇದೀಗ ಮಲಯಾಳಂ (Mollywood) ಚಿತ್ರರಂಗದ ಸ್ಟಾರ್ ನಟ ಮೋಹನ್‌ಲಾಲ್ ಭೇಟಿ ನೀಡಿ, ಮುಂಜಾನೆ ಮಹಾಮಂಗಳಾರತಿಯಲ್ಲಿ ಪಾಲ್ಗೊಂಡಿದ್ದಾರೆ. ಈ ವೇಳೆ, ಅಭಿಮಾನಿಗಳು ಮೋಹನ್‌ಲಾಲ್ ಜೊತೆಗೆ ಸೆಲ್ಫಿ ತೆಗೆಯಿಸಿಕೊಳ್ಳಲು ಮುಗಿಬಿದ್ದಿದ್ದಾರೆ.
ಬರೋಜ್, ಕಣ್ಣಪ್ಪ ಸೇರಿದಂತೆ ಕನ್ನಡದ ಕೆಲವು ಪ್ರಾಜೆಕ್ಟ್‌ಗಳಲ್ಲಿ ಮೋಹನ್‌ಲಾಲ್ ಕಾಣಿಸಿಕೊಳ್ಳಲಿದ್ದಾರೆ. ಈ ಹಿಂದೆ ಪುನೀತ್ ರಾಜ್‌ಕುಮಾರ್ (Puneeth Rajkumar) ನಟನೆಯ ‘ಮೈತ್ರಿ’ (Mytri Film) ಸಿನಿಮಾದಲ್ಲಿ ಮೋಹನ್‌ಲಾಲ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು.
ಕಾರ್ಯನಿರ್ವಾಹಣಾಧಿಕಾರಿ ಪ್ರಶಾಂತ್ ಶೆಟ್ಟಿ, ಸಾರ್ವಜನಿಕ ಸಂಪರ್ಕಾಧಿಕಾರಿ ಜಯಕುಮಾರ್, ಅರ್ಚಕ ಸುರೇಶ್ ಭಟ್ ಈ ಸಂದರ್ಭದಲ್ಲಿ ಜೊತೆಗಿದ್ದರು. ಇಲ್ಲಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಸೌತಡ್ಕ ದೇಗುಗಳಿಗೂ ತೆರಳಿ ಪೂಜೆ ಸಲ್ಲಿಸಿದ್ದಾರೆ. ಇಷ್ಟು ಮಾತ್ರವಲ್ಲದೇ ಮಂಗಳೂರಿನ ಫೇಮಸ್ ಪಬ್ಬಾಸ್‌ಗೆ ಹೋಗಿ ಗಡ್‌ಬಡ್ ಕೂಡ ಸವಿದಿದ್ದಾರೆ. ರಾಹುಲ್ ಅವರು ತಾವು ಭೇಟಿ ನೀಡಿದ ಸ್ಥಳಗಳ ಫೋಟೋಗಳನ್ನು ಸಾಮಾಜಿಕ ಜಾಲತಣಗಳಲ್ಲಿ ಹಂಚಿಕೊಂಡಿದ್ದಾರೆ.
ವಿಶ್ವಕಪ್ ಟೂರ್ನಿ ನಂತರ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಭಾರತ ತಂಡದ ನಾಯಕರಾಗಿ ಸರಣಿ ಗೆದ್ದುಕೊಟ್ಟಿದ್ದರು. ಅದಾದ ಬಳಿಕ ಈಗ ಆಫ್ಘಾನಿಸ್ತಾನ ವಿರುದ್ಧ ನಡೆಯುತ್ತಿರುವ ಟಿ20 ಸರಣಿಯಲ್ಲಿ ಅಲಭ್ಯರಾಗಿದ್ದಾರೆ. ಸದ್ಯ ಕೆ.ಎಲ್.ರಾಹುಲ್ ವಿಶ್ರಾಂತಿಯಲ್ಲಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ-ಪುಣೆ-ಹುಬ್ಬಳ್ಳಿ: ವಾರದಲ್ಲಿ 4 ಬಾರಿ ವಿಮಾನ ಸಂಚಾರ ಆರಂಭ – ಜೋಶಿ ಮಾಹಿತಿ