ಚೆನ್ನೈ: ಅನಾರೋಗ್ಯ ಕಾರಣ ಆಸ್ಪತ್ರೆಗೆ ದಾಖಲಾಗಿದ್ದ ಕಾಲಿವುಡ್ ಸೂಪರ್ ಸ್ಟಾರ್ ನಟ ರಜನಿಕಾಂತ್ ಭಾನುವಾರ ಡಿಸ್ಚಾರ್ಜ್ ಆಗಿದ್ದಾರೆ.
ತೀವ್ರ ಅನಾರೋಗ್ಯದ ಹಿನ್ನೆಲೆ ಗುರುವಾರ ರಜನಿಕಾಂತ್ ಅವರನ್ನು ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಅವರು ಇದೀಗ ಡಿಸ್ಚಾರ್ಜ್ ಆಗಿದ್ದು, ಫೋಟೋವೊಂದನ್ನು ತಮ್ಮ ಟ್ವಿಟ್ಟರ್‍ನಲ್ಲಿ ಹಂಚಿಕೊಂಡಿದ್ದಾರೆ. ಫೋಟೋದಲ್ಲಿ ರಜನಿಕಾಂತ್, ತಮ್ಮ ಮನೆಯಲ್ಲಿರುವ ದೇವರ ಕೋಣೆ ಮುಂದೆ ನಿಂತು ಪ್ರಾರ್ಥಿಸುತ್ತಿರುವುದನ್ನು ಕಾಣಬಹುದಾಗಿದೆ. ಜೊತೆಗೆ ಕ್ಯಾಪ್ಷನ್‍ನಲ್ಲಿ ಮನೆಗೆ ಮರಳಿದೆ ಎಂದು ಬರೆದುಕೊಂಡಿದ್ದಾರೆ.
ಅಕ್ಟೋಬರ್ 28ರಂದು ಆರೋಗ್ಯ ತಪಾಸಣೆಗಾಗಿ ರಜನಿಕಾಂತ್ ಅವರಿಗೆ ಎದೆಯ ಭಾಗದಲ್ಲಿ ನೋವು ಮತ್ತು ಸುಸ್ತು ಕಾಣಿಸಿಕೊಂಡಿತ್ತು, ಹೀಗಾಗಿ ಅವರನ್ನು ಮುಂಜಾಗ್ರತಾ ಕ್ರಮವಾಗಿ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಮಿದುಳಿನ ರಕ್ತ ಸಂಚಾರ ವ್ಯವಸ್ಥೆಯನ್ನು ಸಹಜ ಸ್ಥಿತಿಗೆ ತರಲು ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಇದೀಗ ರಜನಿಕಾಂತ್ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಈ ಮುನ್ನ 2020ರ ಡಿಸೆಂಬರ್‌ನಲ್ಲಿ ರಜನಿಕಾಂತ್ ಅವರಿಗೆ ರಕ್ತದೊತ್ತಡದಲ್ಲಿ ಏರುಪೇರು ಆಗಿದ್ದರಿಂದ ಹೈದರಾಬಾದ್‍ನ ಅಪೋಲೋ ಆಸ್ಪತ್ರೆಗೆ ದಾಕಲಿಸಲಾಯಿತು. ಮತ್ತೆ ಕಳೆದ ವಾರ ರಜನಿ ಆಸ್ಪತ್ರೆಗೆ ದಾಖಲಾಗಿದ್ದರಿಂದ ಅಭಿಮಾನಿಗಳಲ್ಲಿ ಬಾರೀ ಕಳವಳವುಂಟಾಗಿತ್ತು. ಇದನ್ನೂ ಓದಿ: ಗಡಿ ಜಿಲ್ಲೆ ಯಾದಗಿರಿಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ
ಸದ್ಯ ರಜನಿಕಾಂತ್ ಅಭಿನಯದ ಬಹು ನಿರೀಕ್ಷಿತ ಅಣ್ಣಾತ್ತೆ ಸಿನಿಮಾ ಬಿಡುಗಡೆಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಈ ಸಿನಿಮಾ ನವೆಂಬರ್ 4ರಂದು ದೀಪಾವಳಿ ಹಬ್ಬದಂದು ಚಿತ್ರಮಂದಿರಗಳಲ್ಲಿ ಬಿಡುಗಡೆಗೊಳ್ಳಲಿದೆ. ಇದನ್ನೂ ಓದಿ: ಸೂಪರ್ ಸ್ಟಾರ್ ರಜನಿಕಾಂತ್ ಆಸ್ಪತ್ರೆಗೆ ದಾಖಲು
ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪವರ್ ಸ್ಟಾರ್ ಅವರು ನಡೆಸುತ್ತಿದ್ದ ಹಲವಾರು ಸಮಾಜಮುಖಿ ಕಾರ್ಯಗಳ ನಡುವೆ ಒಂದೂವರೆ ಸಾವಿರಕ್ಕೂ ಹೆಚ್ಚು ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸುವ ಜವಾಬ್ದಾರಿಯನ್ನು ಕೂಡ ಹೊತ್ತುಕೊಂಡಿದ್ದರು. ಆದರೆ ಅವರ ನಿಧನದ ಬಳಿಕ ಈ ಮಕ್ಕಳ ಜವಾಬ್ದಾರಿಯನ್ನು ಯಾರು ನಿರ್ವಹಿಸುತ್ತಾರೆ ಎಂಬ ಪ್ರಶ್ನೆ ಎಲ್ಲರಲ್ಲಿಯೂ ಮೂಡಿತ್ತು. ಇದೀಗ ಪುನೀತ್ ಅವರ ಆತ್ಮೀಯ ಗೆಳೆಯ ಕಾಲಿವುಡ್ ನಟ ವಿಶಾಲ್ ಅಷ್ಟು ಮಕ್ಕಳ ಜವಾಬ್ದಾರಿಯನ್ನು ತಾವು ಹೊತ್ತುಕೊಳ್ಳುವ ಮೂಲಕ ಹೃದಯ ವೈಶಾಲ್ಯತೆ ಮೆರೆದಿದ್ದಾರೆ.
ಹೌದು, ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಪುನೀತ್ ಒಳ್ಳೆಯ ನಟ ಮಾತ್ರ ಅಲ್ಲ, ಒಳ್ಳೆಯ ಸ್ನೇಹಿತ, ಒಳ್ಳೆಯ ವ್ಯಕ್ತಿ. ಇಂದು ನಮ್ಮ ನಡುವೆ ಅವರಿಲ್ಲ ಅನ್ನೋದನ್ನು ಇನ್ನೂ ಊಹಿಸಿಕೊಳ್ಳಲು ಆಗುತ್ತಿಲ್ಲ. ಅವರ ಅಗಲಿಕೆಯನ್ನು ಜೀರ್ಣಿಸಿಕೊಳ್ಳಲು ಆಗಿಲ್ಲ. ಅವರ ಸಾವು ಚಿತ್ರರಂಗಕ್ಕಷ್ಟೇ ಅಲ್ಲ ಸಮಾಜಕ್ಕೆ, ಕುಟುಂಬಕ್ಕೆ ಹಾಗೂ ಅವರ ಜೊತೆ ಇದ್ದವರಿಗೆ ದೊಡ್ಡ ನಷ್ಟ. ಇದನ್ನೂ ಓದಿ: ಉಪ್ಪಿನಲ್ಲಿ ಚಿತ್ರ ಬಿಡಿಸಿ ಅಪ್ಪುಗೆ ವಿಶೇಷ ವಿದಾಯ ಹೇಳಿದ ತೆಲುಗು ಅಭಿಮಾನಿ
ಪುನೀತ್ 1,800 ಮಕ್ಕಳಿಗೆ ಉಚಿತ ಶಿಕ್ಷಣ, ಅನಾಥಶ್ರಮ, ವೃದ್ಧಾಶ್ರಮ ನಡೆಸುವುದರ ಜೊತೆಗೆ ತಮ್ಮ ಸಾವಿನ ಬಳಿಕವೂ ಕಣ್ಣುಗಳನ್ನು ದಾನ ಮಾಡಿದ್ದಾರೆ. ಇದನ್ನೆಲ್ಲ ನೆನೆಸಿಕೊಳ್ಳುವಾಗ, ಪುನೀತ್ ಇಲ್ಲ ಅನ್ನೋದನ್ನು ನಂಬಲು ಆಗುತ್ತಿಲ್ಲ. ಪುನೀತ್ ಅಂತಹ ಬಹುಮುಖ ನಟನನ್ನು ನಾವು ಕಳೆದುಕೊಂಡಿದ್ದೇವೆ. ಪುನೀತ್‍ನನ್ನು ನೋಡಿದಾಗ, ಪುನೀತ್‍ನನ್ನು ನೆನಪಿಸಿಕೊಂಡಾಗ ನನ್ನ ಮನಸ್ಸಿಗೆ ಒಂದು ವಿಷಯ ಬಂತು. ನಿನ್ನ ಗೆಳೆಯನಾಗಿ ಮಾತು ಕೊಡುತ್ತಿದ್ದೇನೆ. ಆ 1,800 ಮಕ್ಕಳಿಗೆ ನಾನು ವಿದ್ಯಾಭ್ಯಾಸ ಕೊಡಿಸುತ್ತೇನೆ. ಮುಂದಿನ ವರ್ಷದಿಂದ ನಿಮ್ಮ ಫೌಂಡೇಷನ್, ನಿಮ್ಮ ಸಮಾಜಸೇವೆಯನ್ನು ನಾನು ಮುಂದುವರೆಸುತ್ತೇನೆ ಅಂತ ಭರವಸೆ ನೀಡಿದ್ದಾರೆ.
ಅಪ್ಪು 1,800 ಮಕ್ಕಳನ್ನು ಓದಿಸುತ್ತಿದ್ದರು. ಅಪ್ಪು ಅಗಲಿಕೆ ಬಳಿಕ ಆ ಮಕ್ಕಳ ಗತಿ ಏನು ಎಂಬ ಕೊರಗೂ ಎಲ್ಲರನ್ನೂ ಕಾಡಿತ್ತು. ಆದರೆ ಯಾರೊಬ್ಬರೂ ಮುಂದೆ ಬಂದಿರಲಿಲ್ಲ. ಇದೀಗ ತಮಿಳು ನಟ ವಿಶಾಲ್, ಪುನೀತ್ ನಿರ್ವಹಿಸುತ್ತಿದ್ದ ಜವಾಬ್ದಾರಿ ಹೊರುವುದಾಗಿ ಹೇಳಿದ್ದಾರೆ. ಇದನ್ನೂ ಓದಿ: ಪುನೀತ್ ರಾಜ್‍ಕುಮಾರ್ ಸ್ಮರಣಾರ್ಥ – ಅಭಿಮಾನಿಗಳಿಗಾಗಿ ಥಿಯೇಟರ್‌ಗೆ ಬಂದ `ರಾಜಕುಮಾರ’
ಡಾ. ರಾಜ್‍ಕುಮಾರ್ ಕುಟುಂಬದೊಂದಿಗೆ ಅಂದಿನಿಂದಲೂ ಉತ್ತಮ ಬಾಂಧವ್ಯ ಹೊಂದಿರುವ ಟಾಲಿವುಡ್ ನಟ ಮೆಗಾಸ್ಟಾರ್ ಚಿರಂಜೀವಿ ಅವರು ತಮ್ಮ ಟ್ವಿಟ್ಟರ್‌ನಲ್ಲಿ, ಪುನೀತ್ ಇಷ್ಟು ಬೇಗ ಹೋಗಿದ್ದು, ಆಘಾತಕಾರಿ, ಅರಗಿಸಿಕೊಳ್ಳಲು ಆಗದಂತಹ ಮತ್ತು ಹೃದಯ ವಿದ್ರಾವಕ ಸುದ್ದಿಯಾಗಿದೆ. ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ. ನಿಮ್ಮ ಕುಟುಂಬಕ್ಕೆ ನನ್ನ ಸಂತಾಪ. ಒಟ್ಟಾರೆಯಾಗಿ ಕನ್ನಡ/ಭಾರತೀಯ ಚಲನಚಿತ್ರ ಬಂಧುಗಳಿಗೆ ಇದು ಒಂದು ದೊಡ್ಡ ನಷ್ಟ. ಈ ದುಃಖವನ್ನು ಭರಿಸುವ ಶಕ್ತಿ ಎಲ್ಲರಿಗೂ ನೀಡಲಿ ಎಂದು ಟ್ವೀಟ್ ಮಾಡಿದ್ದಾರೆ.
Shocking ,devastating & heartbreaking! #PuneethRajkumar gone too soon. ????
Rest in Peace! My deepest sympathies and tearful condolences to the family. A huge loss to the Kannada / Indian film fraternity as a whole.Strength to all to cope with this tragic loss!
ಪುನೀತ್‍ಗೆ ಬಹಳ ಅಚ್ಚುಮೆಚ್ಚಿನ ಗೆಳೆಯರಾಗಿದ್ದ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅವರು ತಮ್ಮ ಟ್ವಿಟ್ಟರ್‌ನಲ್ಲಿ ಫೋಟೋ ಹಂಚಿಕೊಳ್ಳುವುದರ ಜೊತೆಗೆ, ಸಂಪೂರ್ಣವಾಗಿ ಶಾಕ್ ಆಗಿದೆ. ಪದಗಳಲ್ಲಿ ನಷ್ಟವನ್ನು ಹೇಳಲಾಗುವುದಿಲ್ಲ. ನನ್ನ ಬಹುಕಾಲದ ಗೆಳೆಯ ಪುನೀತ್ ಇನ್ನಿಲ್ಲ. ನಾವು ಪರಸ್ಪರ ಗೌರವ ಮತ್ತು ಪ್ರೀತಿ ಹೊಂದಿದ್ದೇವೆ. ಈಗಲೂ ನಂಬಲು ಆಗುತ್ತಿಲ್ಲ. ಅವರ ವಿನಮ್ರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಟ್ವೀಟ್ ಮಾಡಿದ್ದಾರೆ. ಹಲವಾರು ಸಮಾರಂಭಗಳಲ್ಲಿ ಪುನೀತ್ ಅವರ ಡ್ಯಾನ್ಸ್ ಎಂದರೆ ನನಗೆ ಬಹಳ ಇಷ್ಟ ಎಂದು ಅಲ್ಲು ಅರ್ಜುನ್ ಹೇಳಿದ್ದರು. ಇದನ್ನೂ ಓದಿ: ಚೆನ್ನೈನಲ್ಲಿ ಹುಟ್ಟಿ ಕನ್ನಡನಾಡಲ್ಲಿ ಬೆಳೆದ ಪವರ್ ಸ್ಟಾರ್ ಲೈಫ್ ಜರ್ನಿ ಇಲ್ಲಿದೆ
Absolutely Shocked . In loss of words . My old friend Puneeth garu no more . We had such mutual respect & liking for each other . Still Can’t believe it . May his humble soul rest in peace ???? pic.twitter.com/GTijO7Fz5T
ಟಾಲಿವುಡ್ ನಟ ಜ್ಯೂನಿಯರ್ ಎನ್‍ಟಿಆರ್ ಪುನೀತ್ ಫೋಟೋವನ್ನು ತಮ್ಮ ಟ್ವಿಟ್ಟರ್‌ನಲ್ಲಿ ಶೇರ್ ಮಾಡಿಕೊಳ್ಳುವುದರ ಜೊತೆಗೆ, ಎದೆ ಗುಂದಿದೆ. ನೀವು ಇಷ್ಟು ಬೇಗ ಹೋಗಿದ್ದೀರಾ ಎಂದು ನಂಬಲು ಆಗುತ್ತಿಲ್ಲ ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ. ಪುನೀತ್ ಹಾಗೂ ಎನ್‍ಟಿಆರ್ ಅತ್ಯುತ್ತಮ ಗೆಳೆಯರಾಗಿದ್ದು, ಪುನೀತ್ ಅಭಿನಯದ ಚಕ್ರವ್ಯೂಹ ಸಿನಿಮಾದಲ್ಲಿ ಅಪ್ಪುವಿಗಾಗಿ ಗೆಳೆಯ, ಗೆಳೆಯ ಹಾಡನ್ನು ಹಾಡಿದ್ದರು.
ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ಅವರು, ಪುನೀತ್ ರಾಜ್‍ಕುಮಾರ್ ಅವರ ನಿಧನದ ಸುದ್ದಿಯಿಂದ ಆಘಾತ ಮತ್ತು ತೀವ್ರ ದುಃಖವಾಗಿದೆ. ನಾನು ಭೇಟಿಯಾದ ಮತ್ತು ಸಂವಹನ ನಡೆಸಿದ ಅತ್ಯಂತ ವಿಶಾಲ ಹೃದಯದ ವ್ಯಕ್ತಿಗಳಲ್ಲಿ ಪುನೀತ್ ಒಬ್ಬರು. ಅವರ ಕುಟುಂಬ ಮತ್ತು ಪ್ರೀತಿ ಪಾತ್ರರಿಗೆ ನನ್ನ ಹೃತ್ಪೂರ್ವಕ ಸಂತಾಪ ಎಂದು ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ. ಇದನ್ನೂ ಓದಿ: ಪತಿ ನಿಧನದ ಸುದ್ದಿ ಕೇಳ್ತಿದ್ದಂತೆ ಕಣ್ಣೀರಿಡುತ್ತಲೇ ಮೌನಕ್ಕೆ ಶರಣಾದ ಪತ್ನಿ ಅಶ್ವಿನಿ
Shocked and deeply saddened by the tragic news of Puneeth Rajkumar’s demise. One of the most humble people I’ve met and interacted with. Heartfelt condolences to his family and loved ones ????
ಮತ್ತೊಂದೆಡೆ ಕಾಲಿವುಡ್ ನಟ ಕಮಲ್ ಹಾಸನ್ ಅವರು ನನ್ನ ಪ್ರೀತಿಯ ಕಿರಿಯ ಸಹೋದರ ಪುನೀತ್ ರಾಜ್‍ಕುಮಾರ್ ಅವರ ನಿಧನ ಅತ್ಯಂತ ಅನಿರೀಕ್ಷಿತವಾಗಿತ್ತು. ನಾವು ಪರಸ್ಪರ ಪ್ರೀತಿ ಹೊಂದಿದ್ದೇವೆ. ಅವರ ಕುಟುಂಬಕ್ಕೆ ಮತ್ತು ಕರ್ನಾಟಕದಲ್ಲಿರುವ ಅವರ ಅಭಿಮಾನಿಗಳಿಗೆ ನನ್ನ ಆಳವಾದ ಸಂತಾಪಗಳು ಎಂದು ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ.
The demise of my dear younger brother Puneeth Rajkumar was most unexpected.We were mutually very fond of each other. My deepest sympathy to his family and his fans in Karnataka.(1/2)#PuneethRajkumar
ಕಾಲಿವುಡ್ ನಟ ಸೂರ್ಯ ಅವರು, ಈ ನಷ್ಟವನ್ನು ಭರಿಸಲು ಸಾಧ್ಯವಿಲ್ಲ. ಆತ್ಮೀಯ ಪುನೀತ್ ರಾಜ್‍ಕುಮಾರ್ ಅವರು, ನನ್ನ ಸಹೋದರ ಮತ್ತು ಸಹ ಪ್ರಯಾಣಿಕ. ನಿಮ್ಮ ಪ್ರೀತಿಯ ಸ್ನೇಹ ಮತ್ತು ಸಹೋದರತ್ವವನ್ನು ನಾನು ಯಾವಾಗಲೂ ಗೌರವಿಸುತ್ತೇನೆ. ನಿಮ್ಮ ಕುಟುಂಬ ಮತ್ತು ಸ್ನೇಹಿತರಿಗೆ ನನ್ನ ಸಂತಾಪಗಳು. ನಾನು ಈಗಲೂ ಶಾಕ್‍ನಲ್ಲಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ರಾಜಕುಮಾರನಂತೆ ಬಾಳಬೇಕಿದ್ದ ನನ್ನ ತಮ್ಮ ಇನ್ನಿಲ್ಲ ಅಂತಂದ್ರೆ ನಂಬಲು ಅಸಾಧ್ಯ: ಸುಧಾರಾಣಿ
Unable to come to terms with this loss! Farewell dear Puneet Rajkumar, my brother & fellow traveller… I will always cherish your fond friendship and brotherhood. My deepest condolence to family & friends. I’m just devastated & still in shock. pic.twitter.com/G9zfmY9VlU
ಸೂಪರ್ ಸ್ಟಾರ್ ರಜನಿಕಾಂತ್ ಅಳಿಯ ನಟ ಧನುಷ್ ಅವರು, ನನ್ನ ಸ್ನೇಹಿತ ಪುನೀತ್ ನನ್ನ ಹೃದಯ ಹೊಡೆದು ಹೋಯಿತು. ನನ್ನ ಸ್ನೇಹಿತ ಶಾಂತಿಯಿಂದ ವಿಶ್ರಾಂತಿ ಪಡೆಯಿರಿ. ನೀವು ಉತ್ತಮ ಸ್ಥಳದಲ್ಲಿರುವಿರಿ ಎಂದು ಭಾವಿಸುತ್ತೇನೆ. ಅವರ ಕುಟುಂಬ, ಸ್ನೇಹಿತರು ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಸಹೋದರ ಪುನೀತ್ ಈ ವಿಚಾರವನ್ನು ನನಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
Puneet my friend ???????? This is so heartbreaking. Rest in peace my friend. Hope you are in a better place. My heartfelt condolences to his family , friends and fans.
ಪುನೀತ್ ಜೊತೆ ಯುವರತ್ನ ಸಿನಿಮಾದಲ್ಲಿ ಜೋಡಿಯಾಗಿ ನಟಿಸಿದ್ದ ನಟಿ ಸಯೀಶಾ ಅವರು, ಪುನೀತ್ ಅವರು ನನ್ನ ಸ್ನೇಹಿತ, ನನ್ನ ಕುಟುಂಬ, ರತ್ನ. ನನಗೆ ಆಗುತ್ತಿರುವ ದುಃಖವನ್ನು ವಿವರಿಸಲು ನನ್ನಲ್ಲಿ ಪದಗಳಲ್ಲ. ಇದು ತುಂಬಲಾರದ ನಷ್ಟ. ಅವರ ಪತ್ನಿ ಅಶ್ವಿನಿ ಅಕ್ಕ ಮತ್ತು ಅವರ ಪುತ್ರಿಯರಿಗೆ ನನ್ನ ಆಳವಾದ ಸಂತಾಪಗಳು. ಅವರ ಕುಟುಂಬ, ಅವರ ಲಕ್ಷಾಂತರ ಅಭಿಮಾನಿಗಳು ಮತ್ತು ಸ್ನೇಹಿತರೊಂದಿಗೆ ನನ್ನ ಹೃದಯವು ಒಂದಾಗಿದೆ. ಪುನೀತ್ ಅವರೇ ನಿಮ್ಮೊಂದಿಗೆ ಸ್ಕ್ರೀನ್ ಶೇರ್ ಮಾಡಿದ ಗೌರವ ನನಗಿದೆ ಎಂದು ಇನ್‍ಸ್ಟಾಗ್ರಾಮ್‍ನಲ್ಲಿ ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ. ಯುವರತ್ನ ಪುನೀತ್ ಅಭಿನಯಿಸಿದ ಕೊನೆಯ ಚಿತ್ರವಾಗಿದೆ.
ಪವರ್ ಸಿನಿಮಾದಲ್ಲಿ ಪುನೀತ್ ಜೊತೆ ಅಭಿನಯಿಸಿದ್ದ ನಟಿ ತ್ರಿಷಾ ಅವರು ಇನ್‍ಸ್ಟಾಗ್ರಾಮ್ ಸ್ಟೋರಿಯಲ್ಲಿ ಇದನ್ನು ಹೇಳಲು ನಿರಾಕರಿಸುತ್ತೇನೆ ಎಂದು ಬರೆದುಕೊಳ್ಳುವುದರ ಜೊತೆಗೆ ಹೊಡೆದು ಹೋಗಿರುವ ಹಾರ್ಟ್ ಎಮೋಜಿಯನ್ನು ಹಾಕಿದ್ದಾರೆ. ಪವರ್ ಸಿನಿಮಾದ ನಂತರ ತ್ರಿಷಾ ಪುನೀತ್ ಜೊತೆಗೆ ಮತ್ತೊಂದು ಸಿನಿಮಾದಲ್ಲಿ ಅಭಿನಯಿಸಲು ಸಹಿಹಾಕಿದ್ದರು.
ಪುನೀತ್ ಜೊತೆ ಮಿಲನ ಹಾಗೂ ಪೃಥ್ವಿ ಎರಡು ಸಿನಿಮಾಗಳಲ್ಲಿ ಬಣ್ಣ ಹಚ್ಚಿದ ನಟಿ ಪಾರ್ವತಿ ಮೆನನ್ ಅವರು, ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಪುನೀತ್ ಫೋಟೋ ಶೇರ್ ಮಾಡಿಕೊಳ್ಳುವುದರ ಜೊತೆಗೆ ಇದನ್ನು ಪದಗಳಲ್ಲಿ ವ್ಯಕ್ತಪಡಿಸಲು ಸಾಧ್ಯವಾಗದಷ್ಟು ನೋವುಂಟು ಮಾಡಿದೆ ಎಂದು ಸಂತಾಪ ಸೂಚಿಸಿದ್ದಾರೆ.
ಬಿಂದಾಸ್ ಸಿನಿಮಾದಲ್ಲಿ ಪುನೀತ್ ಜೊತೆಗೆ ಸ್ಕ್ರೀನ್ ಶೇರ್ ಮಾಡಿದ ನಟಿ ಹನ್ಸಿಕಾ ಮೊಟ್ವಾನಿ ಅವರು ಕೂಡ ಇನ್‍ಸ್ಟಾಗ್ರಾಮ್ ಸ್ಟೋರಿಯಲ್ಲಿ ಇದು ಹೃದಯ ವಿದ್ರಾವಕ. ಇದು ನಿಜವಾಗದಿರಲಿ ಎಂದು ನಾನು ಭಾವಿಸುತ್ತೇನೆ. ಪುನೀತ್ ರಾಜ್ ಕುಮಾರ್ ಅವರು ಇನ್ನೂ ಯುವಕರಾಗಿದ್ದಾರೆ ಎಂದು ಪುನೀತ್ ಫೋಟೋ ಶೇರ್ ಮಾಡಿಕೊಳ್ಳುವುದರ ಜೊತೆಗೆ ಬರೆದುಕೊಂಡಿದ್ದಾರೆ.
ಚೆನ್ನೈ: ಟಾಲಿವುಡ್ ನಟ ನಾಗಚೈತನ್ಯ ಹಾಗೂ ಸಮಂತಾ ವಿಚ್ಛೇದನ ಬಳಿಕ ಕಾಲಿವುಡ್ ನಟ ಸಿದ್ಧಾರ್ಥ್ ಮಾಡಿದ್ದ ಟ್ವೀಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿತ್ತು. ಸದ್ಯ ಈ ಟ್ವೀಟ್ ಮಾಡಿದ್ದು ಯಾರಿಗೆ ಎಂಬುವುದರ ಬಗ್ಗೆ ಸಿದ್ದಾರ್ಥ್ ಸ್ಪಷ್ಟನೆ ನೀಡಿದ್ದಾರೆ.
ಸಿದ್ದಾರ್ಥ್ ಹಾಗೂ ಸಮಂತಾ ಒಂದು ಕಾಲದಲ್ಲಿ ರಿಲೇಶನ್ ಶಿಪ್‍ನಲ್ಲಿದ್ದರು. ಆದರೆ ಕಾರಣಾಂತರಗಳಿಂದ ಇಬ್ಬರು ದೂರ ಆದರು. ಬಳಿಕ ಸಮಂತಾ, ನಾಗಚೈತನ್ಯರನ್ನು ಪ್ರೀತಿಸಿ ವಿವಾಹವಾದರು. ಆದ್ಯಾಗೂ ಕೆಲವು ಮನಸ್ತಾಪಗಳಿಂದ 4 ವರ್ಷಗಳ ನಂತರ ಇಬ್ಬರು ಇತ್ತೀಚೆಗಷ್ಟೇ ವಿಚ್ಛೇದನ ಪಡೆದುಕೊಂಡರು. ಈ ವೇಳೆ ಸಿದ್ದಾರ್ಥ್ ಮೋಸ ಮಾಡುವವರು ಎಂದಿಗೂ ಏಳಿಗೆಯಾಗುವುದಿಲ್ಲ, ಎನ್ನುವ ಪಾಠವನ್ನು ಬಾಲ್ಯದಲ್ಲಿ ನನ್ನ ಶಿಕ್ಷಕರಿಂದ ಕಲಿತೆ ಎಂದು ನಟ ಸಿದ್ದಾರ್ಥ್ ಟ್ವೀಟ್ ಮಾಡಿದ್ದರು.
ಈ ಹಿನ್ನೆಲೆ ಸಿದ್ದಾರ್ಥ್ ಟ್ವೀಟ್‍ಗೆ ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿ ಕೆಂಡಕಾರಿದ್ದಾರೆ. ಹೀಗೆ ಹೀನಾಯಾವಾಗಿ ಮಾತನಾಡಲು ಮನಸ್ಸಾದರೂ ಹೇಗೆ ಬರುತ್ತದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಮೋಸ ಮಾಡುವವರು ಎಂದಿಗೂ ಉದ್ಧಾರ ಆಗಲ್ಲ: ಸಿದ್ದಾರ್ಥ್
One of the first lessons I learnt from a teacher in school…
ಹೀಗಾಗಿ ಈ ಕುರಿತಂತೆ ಸಿದ್ದಾರ್ಥ್ ತಮ್ಮ ಹಿಂದಿನ ಟ್ವೀಟ್ ಕುರಿತಂತೆ ಸ್ಪಷ್ಟನೆ ನೀಡಿದ್ದಾರೆ. ನಿತ್ಯ ನನ್ನ ಮನಸ್ಸಿಗೆ ಏನು ಬರುತ್ತದೆ ಅದನ್ನು ಟ್ವೀಟ್ ಮಾಡುತ್ತೇನೆ. ಬೀದಿ ನಾಯಿಗಳ ಬಗ್ಗೆ ಟ್ವೀಟ್ ಮಾಡಿದಾಗ ಅದು ನನಗೆ ಅಂದು ಕೊಂಡರೆ ನಾನು ಜವಾಬ್ದಾರನಲ್ಲ ಎಂದಿದ್ದಾರೆ. ಹೀಗೆ ಟ್ರೋಲ್ ಮಾಡುವವರಿಗೆ ಕಾರವಾಗಿ ಉತ್ತರಿಸಿದ್ದಾರೆ. ಇದನ್ನೂ ಓದಿ: ನಾನು ನನ್ನನ್ನು ಬದಲಾಯಿಸಿಕೊಳ್ಳಬೇಕು: ಸಮಂತಾ
ಚೆನ್ನೈ: ಸ್ವೀಟಿ ಅನುಷ್ಕಾ ಶೆಟ್ಟಿ ಮತ್ತೆ ನಾಗವಲ್ಲಿಯಾಗುತ್ತಾರೆ ಎಂಬ ಸುದ್ದಿ ಕಾಲಿವುಡ್ ಅಂಗಳದಲ್ಲಿ ಕೇಳಿಬರುತ್ತಿದೆ.
ಬಾಹುಬಲಿ ನಂತರ ಅನುಷ್ಕಾ ಸಿನಿಮಾಗಳು ಯಶಸ್ಸನ್ನು ಕಾಣದ ಕಾರಣ ಅವರು ಸಿನಿಮಾ ಆಯ್ಕೆಯಲ್ಲಿ ಸಖತ್ ಚ್ಯೂಸಿಯಾಗಿದ್ದಾರೆ. ಸ್ವೀಟಿ ಮುಂದೆ ಯಾವ ರೀತಿಯ ಸಿನಿಮಾದಲ್ಲಿ ಬಣ್ಣ ಹಂಚುತ್ತಾರೆ ಎಂದು ಅವರ ಅಭಿಮಾನಿಗಳಲ್ಲಿ ಕುತೂಹಲ ಇದ್ದೇ ಇದೆ. ಅದಕ್ಕೆ ತೆರೆ ಎಳೆಯುವಂತೆ ರಾಘವ ಲಾರೆನ್ಸ್ ಆಕ್ಷನ್ ಕಟ್ ಹೇಳುತ್ತಿರುವ ಸಿನಿಮಾದಲ್ಲಿ ಅನುಷ್ಕಾ ನಟಿಸುತ್ತಿದ್ದಾರೆ ಎಂಬ ಸುದ್ದಿ ಈಗ ಹರಿದಾಡುತ್ತಿದೆ.
ಈ ಹಿಂದೆ 2006ರಲ್ಲಿ ತಮಿಳಿನಲ್ಲಿ ತೆರೆಕಂಡ ‘ಚಂದ್ರಮುಖಿ’ ಸಿನಿಮಾ ತೆಲುಗಿಗೂ ಡಬ್ ಆಗಿದ್ದು, ಆ ಸಿನಿಮಾದಲ್ಲಿ ಅನುಷ್ಕಾ ನಾಗವಲ್ಲಿಯಾಗಿ ಸಖತ್ ಮಿಂಚಿದ್ದರು. ಈಗ ಮತ್ತೆ ರಾಘವ ಲಾರೆನ್ಸ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಸಿನಿಮಾದಲ್ಲಿ ನಾಗವಲ್ಲಿ ಪಾತ್ರವಿದ್ದು, ಅದಕ್ಕೆ ಅನುಷ್ಕಾ ಅವರೇ ಸೂಕ್ತ ಎಂದು ಅಭಿಪ್ರಾಯಪಟ್ಟಿದ್ದಾರೆ ಎನ್ನಲಾಗಿದೆ.
ಈ ಕುರಿತು ಲಾರೆನ್ಸ್ ಅವರು ಅನುಷ್ಕಾ ಜೊತೆ ಮಾತುಕತೆಯನ್ನು ಮಾಡಿದ್ದು, ಇನ್ನೂ ಅಧಿಕೃತವಾಗಿ ಏನನ್ನೂ ಹೇಳಿಲ್ಲ. ಅವರನ್ನು ಐತಿಹಾಸಿಕ ಮತ್ತು ಪೌರಾಣಿಕ ಸಿನಿಮಾಗಳಲ್ಲಿ ನೋಡಲು ಅಭಿಮಾನಿಗಳು ಕಾಯುತ್ತಿದ್ದಾರೆ.
2018ರಲ್ಲಿ ಅನುಷ್ಕಾರ ‘ಭಾಗವತಿ’ ಸಿನಿಮಾ ತೆರೆಕಂಡಿತ್ತು. ನಂತರ ‘ನಿಶ್ಯಬ್ದಂ’ ಸಿನಿಮಾ ಒಟಿಟಿಗೆ ಸೀಮಿತವಾಗಿದ್ದು, ಮೂಕಿ ಪಾತ್ರದಲ್ಲಿ ಸ್ವೀಟಿ ನಟನೆ ತುಂಬಾ ಚೆನ್ನಾಗಿ ಮೂಡಿಬಂದಿದೆ. ಆದರೆ ಆ ಸಿನಿಮಾ ಕೂಡ ಅಷ್ಟು ಸದ್ದು ಮಾಡಲಿಲ್ಲ. ಅದಕ್ಕೆ ಅನುಷ್ಕಾ ತಮ್ಮ ಮುಂದಿನ ಪ್ರಾಜ್ಜೆಕ್ಟಲ್ಲಿ ಸಖತ್ ಕೇರ್ ಫುಲ್ ಆಗಿದ್ದಾರೆ.
ಚೆನ್ನೈ: ಬಹುಭಾಷಾ ನಟಿ ಶೃತಿ ಹಾಸನ್ ಆಹಾರ ಮತ್ತು ಸೆಕ್ಸ್ ಪ್ರಶ್ನೆಗೆ ಸಖತ್ ಬೋಲ್ಡ್ ಆಗಿ ಉತ್ತರಿಸಿದ್ದು, ಈ ಮೂಲಕ ಸುದ್ದಿಯಾಗಿದ್ದಾರೆ.
ಶೃತಿ ಹಾಸನ್ ರಿಲೇಷನ್‍ಶಿಪ್ ಮತ್ತು ನೇರ ಹೇಳಿಕೆಗಳಿಗೆ ಯಾವಾಗಲೂ ಸುದ್ದಿಯಾಗುತ್ತಾ ಇರುತ್ತಾರೆ. ಈಗ ಮತ್ತೊಮ್ಮೆ ಖಾಸಗಿ ಶೋವೊಂದರಲ್ಲಿ ನೀವು ಆಹಾರ ಮತ್ತು ಸೆಕ್ಸ್‍ನಲ್ಲಿ ಯಾವುದನ್ನು ಆಯ್ಕೆ ಮಾಡಿಕೊಳ್ಳುತ್ತೀರಾ ಎಂದು ಕೇಳಲಾಗಿದೆ. ಈ ವೇಳೆ ಶೃತಿ, ಆಹಾರ, ಸೆಕ್ಸ್ ಗೂ ಸಂಬಂಧವಿಲ್ಲ. ನಾವು ಸೆಕ್ಸ್ ಇಲ್ಲದೆ ಇರಬಹುದು. ಆದರೆ ಆಹಾರವಿಲ್ಲದೇ ಇರಲು ಸಾಧ್ಯವಿಲ್ಲ ಎಂದು ಬೋಲ್ಡ್ ಆಗಿ ಉತ್ತರಿಸಿದ್ದಾರೆ. ಇದನ್ನೂ ಓದಿ: ಕೆಲಸಕ್ಕೆ ಹಾಜರಾಗಿ – ಪೊಲೀಸರಿಗೆ ತಾಲಿಬಾನ್ ಕಮಾಂಡರ್ಗಳಿಂದ ಕರೆ
ತಮ್ಮ ಬೋಲ್ಡ್ ಉತ್ತರದ ಮೂಲಕ ಮತ್ತೆ ವೀಕ್ಷಕರ ಗಮನ ಸೆಳೆದಿರುವ ಈ ನಟಿ ಕಾಲಿವುಡ್, ಬಾಲಿವುಡ್ ಮತ್ತು ಹಾಲಿವುಡ್ ನಲ್ಲಿ ನಟಿಸಿ ದೊಡ್ಡ ಅಭಿಮಾನಿ ಬಳಗವನ್ನೇ ಹೊಂದಿದ್ದಾರೆ. ಪ್ರಸ್ತುತ ‘ಲಾಭಂ’ ಮತ್ತು ‘ಸಲಾರ್’ ಸಿನಿಮಾದಲ್ಲಿ ಬ್ಯುಸಿಯಾಗಿರುವ ಇವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿರುತ್ತಾರೆ. ಸಿನಿಮಾ ಬಗ್ಗೆ ಮಾತ್ರವಲ್ಲ, ಸಮಾಜದಲ್ಲಿ ನಡೆಯುತ್ತಿರುವ ಬದಲಾವಣೆಗಳ ಬಗ್ಗೆಯು ಅಪ್ಡೇಟ್ ಕೊಡುತ್ತಿರುತ್ತಾರೆ. ಇದನ್ನೂ ಓದಿ: ಪರೀಕ್ಷಾ ಕೇಂದ್ರದಲ್ಲೇ ವಿದ್ಯಾರ್ಥಿನಿಗೆ ಕೀ ಆನ್ಸರ್- 8 ಜನರು ಅರೆಸ್ಟ್
ಶೃತಿ ಅವರ ‘ಸಲಾರ್’ ಚಿತ್ರದ ಮತ್ತೊಂದು ವಿಶೇಷವೆಂದರೆ ಇದು ಕನ್ನಡ ಮತ್ತು ತೆಲುಗು ಭಾಷೆಗಳಲ್ಲಿ ಸಿದ್ಧವಾಗುತ್ತಿದ್ದು, ಈ ಚಿತ್ರವನ್ನು ಪ್ರಶಾಂತ್ ನೀಲ್ ನಿರ್ದೇಶನ ಮಾಡುತ್ತಿದ್ದಾರೆ. ಶೃತಿ ‘ಅನಗನಗಾ ಓ ಧೀರುಡು’, ‘ಓ ಮೈ ಫ್ರೆಂಡ್, ‘ಗಬ್ಬರ್ ಸಿಂಗ್’, ‘ಪುಲಿ’, ‘ಪ್ರೇಮಂ’, ‘ಯಾರಾ’, ‘ಕ್ರ್ಯಾಕ್’, ‘ದಿ ಪವರ್’ ಮುಂತಾದ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಇದನ್ನೂ ಓದಿ: ಆಸ್ಕರ್ ಆತ್ಮ ಸ್ವರ್ಗ ಸಾಮ್ರಾಜ್ಯ ತಲುಪಿದೆ – ಉಡುಪಿ ಬಿಷಪ್ ಪ್ರಾರ್ಥನೆ
ಚೆನ್ನೈ: ಕಾಲಿವುಡ್‍ನಲ್ಲಿ ಸೂಪರ್ ಡೂಪರ್ ಹಿಟ್ ಪಡೆದಿದ್ದ ಕಾಂಚನಾ-3 ಸಿನಿಮಾದ ರಷ್ಯನ್ ನಟಿ ಕಮ್ ಮಾಡೆಲ್ ಅಲೆಕ್ಸಾಂಡ್ರಾ ಸಾವನ್ನಪ್ಪಿದ್ದಾರೆ.
ಉತ್ತರ ಗೋವಾದ ಪಟ್ಟಣವೊಂದರಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಅಲೆಕ್ಸಾಂಡ್ರಾ ಮೃತದೇಹ ಮನೆಯಲ್ಲಿ ಪತ್ತೆಯಾಗಿದ್ದು, ಆಕೆಯ ನೆರೆಹೊರೆ ಮನೆಯವರು ಕೆಲವು ದಿನಗಳ ಹಿಂದೆ ಅಲೆಕ್ಸಾಂಡ್ರಾ ಬಾಯ್ ಫ್ರೆಂಡ್ ಅವರ ಮನೆಯಿಂದ ಹೊರಬಂದಿದ್ದನ್ನು ನೋಡಿದೇವು. ಅಂದಿನಿಂದ ಅಲೆಕ್ಸಾಂಡ್ರಾ ಬಹಳ ಖಿನ್ನತೆಯಲ್ಲಿದ್ದರು ಮತ್ತು ಮನೆಯಿಂದ ಹೊರಗೆ ಬರುತ್ತಿರಲಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ:ಗಡ್ದಧಾರಿಯಾಗಿ ರಷ್ಯಾದ ಬೀದಿಯಲ್ಲಿ ಸಲ್ಮಾನ್ ಅಲೆದಾಟ – ಫೋಟೋ ವೈರಲ್
ಸದ್ಯ ಇದನ್ನೆಲ್ಲಾ ಗಮನಿಸುತ್ತಿರುವ ಪೊಲೀಸರಿಗೆ ಅಲೆಕ್ಸಾಂಡ್ರಾ ಆತ್ಮಹತ್ಯೆ ಮಾಡುಕೊಂಡಿರಬಹುದು ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಅಲೆಕ್ಸಾಂಡ್ರಾ ಮೂಲತಃ ರಷ್ಯಾದವರಾಗಿದ್ದು, ಅವರ ಕುಟುಂಬಸ್ಥರು ರಷ್ಯಾದಲ್ಲಿರುವುದರಿಂದ ಮಾಹಿತಿ ನೀಡಲಾಗಿದೆ. ಅಲ್ಲದೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದೀಗ ತನಿಖೆ ನಡೆಸಲು ಆರಂಭಿಸಿದ್ದಾರೆ.
ಬೆಂಗಳೂರು: ವರನಟ ಡಾ. ರಾಜ್ ಕುಮಾರ್‍ರವರ ಮೊಮ್ಮಗಳು ಧನ್ಯಾ ರಾಮ್ ಕುಮಾರ್ ಕಾಲಿವುಡ್‍ಗೆ ಎಂಟ್ರಿ ಕೊಡುತ್ತಿದ್ದಾರೆ ಎಂಬ ಸುದ್ದಿಯೊಂದು ಇದೀಗ ಗಾಂಧೀನಗರದಲ್ಲಿ ಹರಿದಾಡುತ್ತಿದೆ.
ನಿನ್ನ ಸನಿಹಕೆ ಚಿತ್ರದ ಮೂಲಕ ಸ್ಯಾಂಡಲ್‍ವುಡ್‍ಗೆ ಪಾದರ್ಪಣೆ ಮಾಡಿರುವ ಧನ್ಯಾ ರಾಮ್ ಕುಮಾರ್ ಈ ಚಿತ್ರದಲ್ಲಿ ನಟ ಸೂರಜ್ ಗೌಡಗೆ ನಾಯಕಿಯಾಗಿ ಅಭಿನಯಿಸಿದ್ದಾರೆ. ಈ ಸಿನಿಮಾ ಆಗಸ್ಟ್ 20ರ ವರಮಹಾಲಕ್ಷ್ಮಿ ಹಬ್ಬದಂದು ಸಿನಿಮಾ ಬೆಳ್ಳಿ ಪರದೆ ಮೇಲೆ ಬರಲಿದೆ ಎಂದು ಚಿತ್ರತಂಡ ಹೇಳುತ್ತಿದೆ.
ಈ ಮಧ್ಯೆ ಧನ್ಯಾ ರಾಮ್ ಕುಮಾರ್‍ಗೆ ತಮಿಳು ಚಿತ್ರರಂಗದಿಂದ ಆಫರ್‌ವೊಂದು ಬಂದಿದೆ ಎಂಬ ಸುದ್ದಿ ಕೇಳಿಬರುತ್ತಿದೆ. ಈ ವಿಚಾರವಾಗಿ ಕೆಲವು ತಮಿಳು ವೆಬ್‍ಸೈಟ್‍ಗಳಲ್ಲಿ ಸದ್ಯದಲ್ಲಿಯೇ ಧನ್ಯಾ ರಾಮ್ ಕುಮಾರ್ ತಮಿಳು ಸಿನಿಮಾವೊಂದಕ್ಕೆ ಬಣ್ಣ ಹಚ್ಚಲಿದ್ದಾರೆ ಎಂದು ವರದಿ ಮಾಡಿದೆ. ಆದರೆ ಧನ್ಯಾ ರಾಮ್ ಕುಮಾರ್ ಅಭಿನಯಿಸುತ್ತಿರುವ ಚಿತ್ರ ಯಾವುದು, ನಿರ್ದೇಶಕ, ನಟ ಯಾರು ಎಂಬ ಬಗ್ಗೆ ಅಧಿಕೃತವಾಗಿ ಯಾವುದೇ ಮಾಹಿತಿ ದೊರೆತಿಲ್ಲ.
ಚೆನ್ನೈ: ನಟ ರಜನಿಕಾಂತ್ ಚುನಾವಣೆಯಲ್ಲಿ ಸ್ಪರ್ಧಿಸಿ ರಾಜಕೀಯ ಬರುವ ಆಸೆಯನ್ನು ಕೈ ಬಿಟ್ಟಿದ್ದಾರೆ.
ರಾಜಕೀಯಕ್ಕೆ ಬರುವ ಆಸೆ ಇಲ್ಲ. ಭವಿಷ್ಯದಲ್ಲಿ ರಾಜಕೀಯ ಪ್ರವೇಶಿಸುವ ಯೋಜನೆ ನನ್ನಲ್ಲಿಲ್ಲ ಎಂದು ಹೇಳಿದ ಅವರು, ರಜನಿ ಮಕ್ಕಳ್ ಮಂದ್ರಂ(ಆರ್‌ಎಂಎಂ) ಸಂಘಟನೆಯನ್ನು ವಿಸರ್ಜಿಸುವುದಾಗಿ ಹೇಳಿದ್ದಾರೆ. ಈ ಸಂಘಟನೆಯನ್ನು ದತ್ತಿ ನಿಧಿ ಸಂಸ್ಥೆಯನ್ನಾಗಿ ಬಳಸಿಕೊಳ್ಳುವುದಾಗಿ ತಿಳಿಸಿದ್ದಾರೆ.
"I don't have plans to enter politics in future," says actor Rajinikanth, dissolves Rajini Makkal Mandram pic.twitter.com/updoKb5HnY
ರಜನಿಕಾಂತ್ ಈ ಹಿಂದೆ ರಾಜಕೀಯಕ್ಕೆ ಬರುವ ಹಿನ್ನೆಲೆಯಲ್ಲಿ ಆರ್‌ಎಂಎಂ ಸ್ಥಾಪಿಸಿದ್ದರು. ಆದರೆ ಈಗ ಅನಾರೋಗ್ಯದ ಹಿನ್ನೆಲೆಯಲ್ಲಿ ರಾಜಕೀಯಕ್ಕೆ ಬರುವ ಯೋಚನೆಯಿಂದ ಹಿಂದೆ ಸರಿದಿದ್ದಾರೆ. ಇದನ್ನೂ ಓದಿ : ಬೆಂಗಳೂರಿಗೆ ಬಂದು ಅಣ್ಣನ ಆಶೀರ್ವಾದ ಪಡೆದ ರಜನಿಕಾಂತ್
2017ರಲ್ಲಿ ಸ್ವಂತ ಪಕ್ಷ ಕಟ್ಟಿ ರಾಜಕೀಯದಲ್ಲಿ ಬದಲಾವಣೆ ತರುವುದಾಗಿ ರಜನಿಕಾಂತ್ ತಿಳಿಸಿದ್ದರು. ಆದರೆ ನಂತರ ಈ ಬಗ್ಗೆ ಹೆಚ್ಚಿನ ವಿವರ ಸಿಕ್ಕಿರಲಿಲ್ಲ.
ಲೋಕಸಭಾ ಚುನಾವಣೆ ವೇಳೆ ಸಹ ರಾಜಕೀಯದ ಕುರಿತು ತಮ್ಮ ನಿರ್ಧಾರ ಘೋಷಿಸಲಿದ್ದಾರೆ ಎಂದು ಸುದ್ದಿಯಾಗಿತ್ತು. ಆದರೆ ರಜನಿಕಾಂತ್ ಇನ್ನೂ ಸಮಯ ಬೇಕು ಎಂದಿದ್ದರು. ಇದೆಲ್ಲದರ ಮಧ್ಯೆ ಬಿಜೆಪಿ ಸೇರಲಿದ್ದಾರೆ ಎಂಬ ಅಂಶ ಸಹ ಚರ್ಚೆಗೆ ಬಂದಿತ್ತು. ಕಳೆದ ತಮಿಳುನಾಡುವ ಚುನಾವಣೆಯಲ್ಲಿ ರಜನಿಕಾಂತ್ ಪಕ್ಷದ ಮೂಲಕ ಸ್ಪರ್ಧಿಸಲಿದ್ದಾರೆ ಎಂದು ವರದಿಯೂ ಪ್ರಕಟವಾಗಿತ್ತು. ಈ ನಡುವೆ ಆರ್‌ಎಂಎಂ ಪಕ್ಷದ ಸದಸ್ಯರು ಬೇರೆ ರಾಜಕೀಯ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಅಭಿಮಾನಿಗಳು ಸೇರ್ಪಡೆಯಾಗಿದ್ದಕ್ಕೆ ಬೇರೆ ಪಕ್ಷಕ್ಕೆ ಸೇರಿದ್ದರೂ ಅವರು ನಮ್ಮವರೇ ಎಂದು ರಜನಿಕಾಂತ್ ಹೇಳಿದ್ದರು.
ಚೆನ್ನೈ: ತಮಿಳಿನ ಖ್ಯಾತ ನಟ ರಜನಿಕಾಂತ್ ಅವರು ಆರೋಗ್ಯ ತಪಾಸಣೆಗಾಗಿ ತಮ್ಮ ಕುಟುಂಬ ಸಮೇತರಾಗಿ ಖಾಸಗಿ ವಿಮಾನದ ಮೂಲಕ ಅಮೆರಿಕಾಗೆ ಪ್ರಯಾಣ ಬೆಳೆಸಿದ್ದಾರೆ.
ರಜನಿಕಾಂತ್ ಅವರು ಕಳೆದ ವರ್ಷ ಡಿಸೆಂಬರ್ ನಲ್ಲಿ ಅನಾರೋಗ್ಯದಿಂದಾಗಿ ಹೈದರಾಬಾದ್‍ನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಬಳಿಕ ಅಣ್ಣಾತ್ತೆ ಚಿತ್ರದ ಶೂಟಿಂಗ್‍ನಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಕೊರೊನಾದಿಂದಾಗಿ ಚಿತ್ರೀಕರಣ ನಿಂತಿರುವುದರಿಂದ ಚೆನ್ನೈನ ತಮ್ಮ ನಿವಾಸದಲ್ಲೇ ಇದ್ದ ರಜನಿ ಏಕಾಏಕಿ ಅಮೆರಿಕಾಗೆ ತೆರಳಿರುವುದರಿಂದಾಗಿ ತಲೈವಾಗೆ ಮತ್ತೆ ಅನಾರೋಗ್ಯ ಕಾಡುತ್ತಿದೆಯೇ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ. ಇದನ್ನೂ ಓದಿ:ರಾಜಕೀಯ ಪಕ್ಷ ಸ್ಥಾಪನೆಯ ನಿರ್ಧಾರದಿಂದ ಹಿಂದೆ ಸರಿದ ರಜನಿಕಾಂತ್
ರಜನಿಕಾಂತ್ ಅಮೆರಿಕಾಗೆ ತೆರಳಿರುವ ಬಗ್ಗೆ ಸುದ್ದಿ ಹೊರಬೀಳುತ್ತಿದ್ದಂತೆ ಅಭಿಮಾನಿಗಳಲ್ಲಿ ಕಳವಳ ಉಂಟುಮಾಡಿದೆ. ಈ ನಡುವೆ ರಜನಿಕಾಂತ್ ಅವರು ಆರೋಗ್ಯವಾಗಿದ್ದು ಕೆಲವು ವದಂತಿಗಳು ಹರಿದಾಡುತ್ತಿದೆ. ಸಾಮಾನ್ಯ ಆರೋಗ್ಯ ತಪಾಸಣೆಗಾಗಿ ಅಮೆರಿಕ ತೆರಳಿರುವ ಬಗ್ಗೆ ವರದಿಯಾಗಿದೆ. ಕೊರೊನಾದಿಂದಾಗಿ ಭಾರತದಿಂದ ವಿದೇಶ ಪ್ರಯಾಣಕ್ಕೆ ನಿರ್ಬಂಧವಿರುವುದರಿಂದಾಗಿ ಕೆಲವು ದಿನಗಳ ಹಿಂದೆ ರಜನಿಕಾಂತ್ ಅಮೆರಿಕ ತೆರಳಲು ಅನುಮತಿ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರು. ಬಳಿಕ ಕೇಂದ್ರ ಸರ್ಕಾರ ಇವರಿಗೆ ಅಮೆರಿಕ ತೆರಳಲು ಅನುಮತಿ ನೀಡಿದೆ.
ಕೇಂದ್ರ ಸರ್ಕಾರ ಅನುಮತಿ ನೀಡಿದ ನಂತರ ವಿಶೇಷ ವಿಮಾನದಲ್ಲಿ ರಜನಿ ಕುಟುಂಬ ಸಮೇತರಾಗಿ ಅಮೆರಿಕಗೆ ತೆರಳಿದ್ದಾರೆ. ಆರೋಗ್ಯ ತಪಾಸಣೆಯ ನಂತರ ಕೆಲವು ದಿನಗಳವರೆಗೆ ಅಮೆರಿಕಾದ ವಿಶ್ರಾಂತಿ ಪಡೆದು ನಂತರ ಭಾರತಕ್ಕೆ ಹಿಂತಿರುಗುವ ಬಗ್ಗೆ ಮೂಲಗಳಿಂದ ತೆಳಿದು ಬಂದಿದೆ. ರಜನಿ ನಟನೆಯ ಅಣ್ಣಾತ್ತೆ ಸಿನಿಮಾ ಈಗಾಗಲೇ ಚಿತ್ರೀಕರಣ ಕೊನೆ ಹಂತ ತಲುಪಿದ್ದು ಡೈರೆಕ್ಟರ್ ಶಿವ ಅವರು ಈ ವರ್ಷ ದೀಪಾವಳಿ ವೇಳೆ ಬಿಡುಗಡೆಗೆ ತಯಾರಿ ನಡೆಸುತ್ತಿದ್ದಾರೆ.