Tag: Komal

  • ತಮಿಳಿನತ್ತ ಕೋಮಲ್- ರಗಡ್ ಲುಕ್‌ನಲ್ಲಿ ಕನ್ನಡದ ನಟ

    ತಮಿಳಿನತ್ತ ಕೋಮಲ್- ರಗಡ್ ಲುಕ್‌ನಲ್ಲಿ ಕನ್ನಡದ ನಟ

    ನ್ನಡದ ನಟ ಕೋಮಲ್ (Komal) ಕಾಲಿವುಡ್‌ನತ್ತ (Kollywood) ಮುಖ ಮಾಡಿದ್ದಾರೆ. ಸ್ಯಾಂಡಲ್‌ವುಡ್‌ನಲ್ಲಿ ವಿವಿಧ ಪಾತ್ರಗಳಲ್ಲಿ ರಂಜಿಸಿದ್ದ ಕೋಮಲ್ ಈಗ ತಮಿಳಿನಲ್ಲಿ ರಗಡ್ ಅವತಾರ ತಾಳಿದ್ದಾರೆ. ಈ ಮೂಲಕ ತಮಿಳಿನಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಇದನ್ನೂ ಓದಿ: ಕಾರ್ತಿಕ್ ಆರ್ಯನ್ ಜೊತೆ ಶ್ರೀಲೀಲಾ ಸೆಲ್ಫಿ- ಡೇಟಿಂಗ್ ಬಗ್ಗೆ ಹಿಂಟ್ ಕೊಟ್ರಾ ಈ ಜೋಡಿ?

    ಮೊದಲ ಬಾರಿಗೆ ತಮಿಳಿ ‘ರಾಜ್‌ಪುತ್ರನ್’ ಚಿತ್ರಕ್ಕೆ ಕೋಮಲ್ ಬಣ್ಣ ಹಚ್ಚಿದ್ದಾರೆ. ಬಾಯಲ್ಲಿ ಸಿಗಾರ್, ಶರ್ಟ್ ಮತ್ತು ಕಪ್ಪು ಲುಂಗಿ ಧರಿಸಿ ರಗಡ್ ಅವತಾರದಲ್ಲಿ ಮಿಂಚಿದ್ದಾರೆ. ನಟ ಕೋಮಲ್‌ರನ್ನು ಡಿಫರೆಂಟ್ ಗೆಟಪ್‌ನಲ್ಲಿ ತೋರಿಸಿದ್ದಾರೆ. ಚಿತ್ರದ ಟೀಸರ್ ರಿವೀಲ್ ಆಗಿದ್ದು. ಇದೇ ಮೇ 30ಕ್ಕೆ ಸಿನಿಮಾ ಬಿಡುಗಡೆಯಾಗಲಿದೆ. ಇದನ್ನೂ ಓದಿ:ತಡವಾಗಿ ಆಮೀರ್ ಖಾನ್ ಪ್ರಶಂಸೆ- ಈಗ ಎಚ್ಚರವಾದ್ರಾ ಎಂದು ಪ್ರಶ್ನಿಸಿದ ನೆಟ್ಟಿಗರು

    ಮಹಾ ಕಂಧನ್ ನಿರ್ದೇಶನದ ಮತ್ತು ಶಿವಾಜಿ ಪ್ರಭು ನಟನೆಯ ಈ ಸಿನಿಮಾದಲ್ಲಿ ಕೋಮಲ್‌ಗೆ ಇಂಟ್ರೆಸ್ಟಿಂಗ್ ಪಾತ್ರವೇ ಸಿಕ್ಕಿದೆ. ನಟನ ಮಹತ್ವ ನೀಡಲಾಗಿದೆ. ಸಿಗಾರ್ ಹಿಡಿದು ರಗಡ್ ಅವತಾರ ತಾಳಿರೋ ನಟನನ್ನು ನೋಡಿ ‘ಜೈಲರ್’ನಲ್ಲಿ ಶಿವಣ್ಣ ಲುಕ್‌ಗೆ ಫ್ಯಾನ್ಸ್ ಹೋಲಿಕೆ ಮಾಡಿದ್ದಾರೆ. ಕಾಲಿವುಡ್‌ನಲ್ಲಿ ಕೋಮಲ್ ಕ್ಲಿಕ್ ಆಗೋದು ಪಕ್ಕಾ ಅಂತ ಫ್ಯಾನ್ಸ್ ಭವಿಷ್ಯ ನುಡಿದಿದ್ದಾರೆ. ಆ ಮಟ್ಟಿಗೆ ಕೋಮಲ್ ನಟಿಸಿರುವ ಪಾತ್ರದ ಮೇಲೆ ಅಭಿಮಾನಿಗಳಿಗೆ ಭರವಸೆ ಮೂಡಿದೆ.

    ಕನ್ನಡದ ‘ಕೋಣ’ ಚಿತ್ರದಲ್ಲಿ ಕೋಮಲ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರವನ್ನು ‘ಬಿಗ್ ಬಾಸ್’ ಖ್ಯಾತಿಯ ತನಿಷಾ ಕುಪ್ಪಂಡ ನಿರ್ಮಾಣ ಮಾಡಿದ್ದಾರೆ. ಇದರಲ್ಲೂ ಚಿತ್ರಕಥೆ ಮತ್ತು ಪಾತ್ರ ವಿಭಿನ್ನವಾಗಿದೆ.

  • ಶೂಟಿಂಗ್ ಮುಗಿಸಿದ ‘ಯಲಾಕುನ್ನಿ’: ಕೋಮಲ್ ನಾಯಕ

    ಶೂಟಿಂಗ್ ಮುಗಿಸಿದ ‘ಯಲಾಕುನ್ನಿ’: ಕೋಮಲ್ ನಾಯಕ

    ‘ಯಲಾಕುನ್ನಿ’  (Yelakunni) ಈ ಡೈಲಾಗ್ ಅನ್ನು ಕನ್ನಡ ಚಿತ್ರಪ್ರೇಮಿಗಳು ಅದು ಹೇಗೆ ಮರೆಯಲು ಸಾಧ್ಯಹೇಳಿ. ಖಳನಟರ ಖಳನಟ ದಿವಂಗತ ವಜ್ರಮುನಿ ಅವರ ಫೇಮಸ್ ಡೈಲಾಗ್ ಇದು. ಈ ಡೈಲಾಗ್ ಅನ್ನೇ ಸಿನಿಮಾ ಶೀರ್ಷಿಕೆಯಾಗಿಟ್ಟುಕೊಂಡು ಸ್ಯಾಂಡಲ್ ವುಡ್ ನಲ್ಲಿ ಮುಹೂರ್ತ ಮಾಡಿ ಸದ್ದು ಮಾಡಿತ್ತು ‘ಯಲಾಕುನ್ನಿ’ ಚಿತ್ರತಂಡ. ಸೌಂದರ್ಯ ಸಿನಿ ಕಂಬೈನ್ಸ್ ಹಾಗೂ ನರಸಿಂಹ ಸಿನಿಮಾಸ್ ಲಾಂಛನದಲ್ಲಿ ಅನುಸೂಯ ಕೋಮಲ್ ಕುಮಾರ್, ಸಹನ ಮೂರ್ತಿ ರವರು ನಿರ್ಮಿಸಿರುವ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಜನರ ಮನ ಗೆದ್ದಿರುವ ಕೋಮಲ್ ಕುಮಾರ್ (Komal) ನಾಯಕರಾಗಿ ನಟಿಸಿರುವ ಈ ಚಿತ್ರವನ್ನು ಹೊಸ ಪ್ರತಿಭೆ N R ಪ್ರದೀಪ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಸದ್ಯ ಚಿತ್ರೀಕರಣ ಸದ್ದಿಲ್ಲದೆ ಪೂರ್ಣಗೊಳಿಸಿರುವ “ಯಲಾಕುನ್ನಿ” ಚಿತ್ರಕ್ಕೆ ಚಿತ್ರೀಕರಣ (Shooting) ನಂತರದ ಚಟುವಟಿಕೆಗಳು(ಪೋಸ್ಟ್ ಪ್ರೊಡಕ್ಷನ್) ಬಿರುಸಿನಿಂದ ಸಾಗಿದೆ‌. ಸದ್ಯದಲ್ಲೇ ಪ್ರೇಕ್ಷಕರಿಗೆ ಮನೋರಂಜನೆಯ ರಸದೌತಣ ನೀಡಲು ಚಿತ್ರಮಂದಿರಗಳಿಗೆ “ಯಲಾಕುನ್ನಿ” ಚಿತ್ರ ಬರಲಿದೆ‌. ಬೆಂಗಳೂರು, ಮೈಸೂರು ಹಾಗೂ ಶ್ರೀರಂಗಪಟ್ಟಣದಲ್ಲಿ ಚಿತ್ರೀಕರಣ ನಡೆದಿದೆ. ಶ್ರೀರಂಗಪಟ್ಟಣದಲ್ಲಿ ಚಿತ್ರಕ್ಕಾಗಿ ವಿಶೇಷ ಸೆಟ್ ಸಹ ಹಾಕಲಾಗಿತ್ತು.

    ಕೋಮಲ್ ಕುಮಾರ್ ಅವರು ಮೊದಲ ಬಾರಿಗೆ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿರುವುದು ಈ ಚಿತ್ರದ ವಿಶೇಷ‌.  ಕೋಮಲ್ ಅವರ ಜೊತೆಗೆ  ದೊಡ್ಡ ದೊಡ್ಡ ಕಲಾವಿದರ ದಂಡೆ ಈ ಚಿತ್ರದಲ್ಲಿದೆ. ದತ್ತಣ್ಣ , ಸಾಧು ಕೋಕಿಲ , ಮಿತ್ರ, ಸುಚೇಂದ್ರ ಪ್ರಸಾದ್ , ಶಿವರಾಜ್ ಕೆ ಆರ್ ಪೇಟೆ , ತಬಲಾ ನಾಣಿ, ರಾಜು ತಾಳಿ ಕೋಟೆ, ಸುಮನ್ ನಗರ ಕರ್,  ಮಾನಸಿ ಸುಧೀರ್(ಕಾಂತಾರ) , ಜಗ್ಗೇಶ್ ಅವರ ದ್ವಿತಿಯ ಪುತ್ರ ಯತಿರಾಜ್ ಜಗ್ಗೇಶ್, ಜಯಸಿಂಹ ಮುಸುರಿ , ರಘು ರಾಮನಕೊಪ್ಪ ,ಮಹಾಂತೇಶ್, ಬೌಬೌ ಜಯರಾಮ್ , ನಿರ್ದೇಶಕ ಸಹನ ಮೂರ್ತಿ , ಭಜರಂಗಿ ಪ್ರಸನ್ನ , ತಿಥಿ ತಮ್ಮಣ್ಣ, ಪ್ರದೀಪ್ ಪೂಜಾರಿ, ತೇಜಸ್, ಉಮೇಶ್ ಸಕ್ಕರೆ ನಾಡು ಮಂತಾದರವರ ತಾರಾಬಳಗವಿರುವ ಈ ಚಿತ್ರದ ನಾಯಕಿಯರಾಗಿ ನಿಸರ್ಗ ಅಪ್ಪಣ್ಣ ಮತ್ತು ಗಿಚ್ಚಿಗಿಲಿಯ ಅಮೃತಾ ಬಣ್ಣ ಹಚ್ಚಿದ್ದಾರೆ.

    ವಿಶೇಷ ವಾಗಿ ವಜ್ರಮುನಿ ಯವರ ಮೊಮ್ಮೊಗ ಆಕರ್ಶ್ ಈ ಚಿತ್ರದ ಮೂಲಕ ಮೊದಲ ಬಾರಿಗೆ ಬಣ್ಣದ ಲೋಕ ಪ್ರವೇಶಿಸುತ್ತಿದ್ದಾರೆ. ಮಯೂರ್ ಪಟೇಲ್ ಅವರು ಖಳ ನಾಯಕನಾಗಿ ನಟಿಸಿದ್ದಾರೆ.

    ಸಂಪೂರ್ಣ ಹಳ್ಳಿ ಸೊಗಡಿನಲ್ಲಿ  ಮೂಡಿಬಂದಿರುವ ‘ಯಲಾಕುನ್ನಿ’ ಸಿನಿಮಾಕ್ಕೆ ರಥಾವರ ಖ್ಯಾತಿಯ ಧರ್ಮ ವಿಶ್ ಸಂಗೀತ ನಿರ್ದೇಶನ, ದೀಪು ಎಸ್ ಕುಮಾರ್ ಸಂಕಲನ ಹಾಗೂ ಹಾಲೇಶ್ ಭದ್ರಾವತಿ ಅವರ ಛಾಯಾಗ್ರಹಣವಿದೆ. ಮುರಳಿ ಮಾಸ್ಟರ್ ನೃತ್ಯ ಸಂಯೋಜನೆ ಮಾಡಿರುವ ಈ ಚಿತ್ರಕ್ಕೆ ನರಸಿಂಹ ಮಾಸ್ಟರ್ ಸಾಹಸ ಸಂಯೋಜನೆ ಮಾಡಿದ್ದಾರೆ. “ಯಲಾಕುನ್ನಿ” ಚಿತ್ರಕ್ಕೆ ‘ಮೇರಾ ನಾಮ್ ವಜ್ರಮುನಿ’ ಎಂಬ ಅಡಿಬರಹವಿದೆ.

  • ನಟ ಕೋಮಲ್ ನಟನೆಯ 25ನೇ ಚಿತ್ರಕ್ಕೆ ಮುಹೂರ್ತ

    ನಟ ಕೋಮಲ್ ನಟನೆಯ 25ನೇ ಚಿತ್ರಕ್ಕೆ ಮುಹೂರ್ತ

    ಕಂಸಾಳೆ ಫಿಲಂಸ್ ಲಾಂಛನದಲ್ಲಿ ಮಧು ಮರಿಸ್ವಾಮಿ ನಿರ್ಮಿಸುತ್ತಿರುವ, ಅನೂಪ್ ಅಂಟೋನಿ (Anoop Antony) ನಿರ್ದೇಶನದ ಹಾಗೂ ಕೋಮಲ್ ಕುಮಾರ್ (Komal) ನಾಯಕರಾಗಿ ನಟಿಸುತ್ತಿರುವ 25ನೇ ಚಿತ್ರಕ್ಕೆ ‘ಕುಟೀರ’ (Kutira) ಎಂದು ಹೆಸರಿಡಲಾಗಿದೆ. ಇತ್ತೀಚಿಗೆ ಈ ಚಿತ್ರದ ಮುಹೂರ್ತ (Muhurta) ಸಮಾರಂಭ ಹಾಗೂ ಶೀರ್ಷಿಕೆ ಅನಾವರಣ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ನೆರವೇರಿತು. ಚಿತ್ರರಂಗದ ಸಾಕಷ್ಟು ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಸಮಾರಂಭದಲ್ಲಿ ಭಾಗಿಯಾಗಿದ್ದರು. ನಂತರ “ಕುಟೀರ”ದ ಬಗ್ಗೆ ಚಿತ್ರತಂಡದ ಸದಸ್ಯರು ಮಾಧ್ಯಮದವರಿಗೆ ಮಾಹಿತಿ ನೀಡಿದರು.

    ನಾನು ಈವರೆಗೂ ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದೇನೆ. ಆದರೆ ನಾಯಕನಾಗಿ ನಟಿಸುತ್ತಿರುವ 25 ನೇ ಚಿತ್ರವಿದು ಎಂದು ಮಾತನಾಡಿದ ನಾಯಕ ಕೋಮಲ್ ಕುಮಾರ್, ಇದು ನಾನು ಬಹಳ ಇಷ್ಟಪಡುವ ಹಾರಾರ್ ಕಾಮಿಡಿ ಫ್ಯಾಂಟಸಿ ಜಾನರ್ ನ ಚಿತ್ರ. ಈ ಹಿಂದೆ ನಾನು ಕೆಲವು ಹಾರಾರ್ ಕಾಮಿಡಿ ಚಿತ್ರಗಳಲ್ಲಿ ನಟಿಸಿದ್ದೇನೆ. ಆದರೆ ಈ ಚಿತ್ರದ ಕಥೆ ಸ್ವಲ್ಪ ವಿಭಿನ್ನ. ಚಿತ್ರದ ಹೆಸರೆ ಹೇಳುವಂತೆ ಕುಟೀರ ಎಂದರೆ ಮನೆ. ಈ ಚಿತ್ರದಲ್ಲೂ ಒಂದು ದೊಡ್ಡ ಮನೆ ಇರುತ್ತದೆ. ಅಲ್ಲಿಗೆ ಬಂದು ಸಿಕ್ಕಿ ಹಾಕಿಕೊಳ್ಳುವ ನನಗೆ ದೆವ್ವಗಳು ಏನು ಮಾಡುತ್ತದೆ? ಎಂಬುದನ್ನು ನಿರ್ದೇಶಕರು ಕಾಮಿಡಿ ಮೂಲಕ ತೋರಿಸಲಿದ್ದಾರೆ. ಈ ಚಿತ್ರದಲ್ಲಿ ಸಿಜಿ ವರ್ಕ್ ಗೆ ಹೆಚ್ಚು ಪ್ರಾಮುಖ್ಯತೆ ನೀಡಲಾಗಿದೆ. ಮಧು ಮರಿಸ್ವಾಮಿ ಮೊದಲ ಬಾರಿಗೆ ನಿರ್ಮಾಣ ಮಾಡುತ್ತಿದ್ದಾರೆ. ಅನೂಪ್ ಆಂಟೋನಿ ನಿರ್ದೇಶಿಸುತ್ತಿದ್ದಾರೆ. ಪ್ರಿಯಾಂಕ ತಿಮ್ಮೇಶ್ ನಾಯಕಿಯಾಗಿ ನಟಿಸುತ್ತಿದ್ದಾರೆ. ನುರಿತ ತಂತ್ರಜ್ಞರು ಹಾಗೂ ಅನುಭವಿ ಕಲಾವಿದರ ತಾರಾಬಳಗ “ಕುಟೀರ” ಚಿತ್ರದಲ್ಲಿದೆ. ನನ್ನ ಮೂವತ್ತು ವರ್ಷಗಳ ಸಿನಿಜರ್ನಿಯಲ್ಲಿ ನೀವು ನೀಡುತ್ತಾ ಬಂದಿರುವ ಪ್ರೋತ್ಸಾಹ ಹಾಗೆ ಮುಂದುವರೆಯಲಿ ಎಂದರು.

    ಅವಕಾಶ ನೀಡಿದ ನಿರ್ಮಾಪಕರಿಗೆ ಹಾಗೂ ಯೋಗೇಶ್ ಅವರಿಗೆ ಧನ್ಯವಾದ. ಈ ಕಥೆ ಬರೆದಾಗಲೇ ಕೋಮಲ್ ಅವರೆ ನಾಯಕ ಅಂದುಕೊಂಡಿದ್ದೆ. ನಿರ್ಮಾಪಕರ ಬಳಿಯೂ ಹೇಳಿದ್ದೆ‌. ಕೋಮಲ್ ಅವರು ಕಥೆ ಕೇಳಿ ಇಷ್ಟಪಟ್ಟರು. ಮಾರ್ಚ್ ಎರಡನೇ ವಾರದಲ್ಲಿ ಚಿತ್ರೀಕರಣ ಆರಂಭವಾಗಲಿದೆ. ಹೆಚ್ಚಿನ ಚಿತ್ರೀಕರಣ ಬೆಂಗಳೂರಿನಲ್ಲೇ ನಡೆಯಲಿದೆ. “ಗಣಪ” ಚಿತ್ರದ ಖ್ಯಾತಿಯ ಪ್ರಿಯಾಂಕ ತಿಮ್ಮೇಶ್ ಈ ಚಿತ್ರದ ನಾಯಕಿ. ಯಶ್ ಶೆಟ್ಟಿ, ಕಾಕ್ರೋಜ್ ಸುಧೀ ಮುಂತಾದವರು ತಾರಾಬಳಗದಲ್ಲಿದ್ದಾರೆ. ಬಿ.ಜಿ.ಭರತ್ ಸಂಗೀತ ನಿರ್ದೇಶನ, ಅರುಣ್ ಸುರೇಶ್ ಛಾಯಾಗ್ರಹಣ ಹಾಗೂ ಎನ್ ಎಂ ವಿಶ್ವ ಅವರ ಸಂಕಲನವಿರುವ ಈ ಚಿತ್ರಕ್ಕೆ ಶಂಕರ್ ರಾಮನ್ ಸಂಭಾಷಣೆ ಬರೆಯುತ್ತಿದ್ದಾರೆ ಎಂದು ನಿರ್ದೇಶಕ ಅನೂಪ್ ಆಂಟೋನಿ ತಿಳಿಸಿದರು.

    ಈ ಚಿತ್ರ ಆರಂಭವಾಗಲೂ ಪ್ರಮುಖ ಕಾರಣರಾದ ಸಾಜಿದ್ ಖುರೇಶಿ ಅವರಿಗೆ ಹಾಗೂ ನನ್ನ ಮಾವ ಯೋಗೇಶ್ ಅವರಿಗೆ ವಿಶೇಷ ಧನ್ಯವಾದ. ಕೋಮಲ್ ಸರ್ ನಾಯಕರಾಗಿ ನಟಿಸುತ್ತಿರುವುದು ಖುಷಿಯಾಗಿದೆ. ನಮ್ಮ ಮೊದಲ ಚಿತ್ರಕ್ಕೆ ನಿಮ್ಮೆಲ್ಲರ ಬೆಂಬಲವಿರಲಿ ಎಂದರು ನಿರ್ಮಾಪಕ ಮಧು ಮರಿಸ್ವಾಮಿ. ನನ್ನದು ಈ ಚಿತ್ರದಲ್ಲಿ ಆಂಗ್ಲೋ ಇಂಡಿಯನ್ ಪಾತ್ರ ಎಂದು ನಾಯಕಿ ಪ್ರಿಯಾಂಕ ತಿಮ್ಮೇಶ್ ತಿಳಿಸಿದರು. ಯೋಗೇಶ್,  ಸಂಗೀತ ನಿರ್ದೇಶಕ ಭರತ್ ಬಿ.ಜೆ, ಛಾಯಾಗ್ರಾಹಕ ಅರುಣ್ ಸುರೇಶ್,  ಸಂಭಾಷಣೆಕಾರ ಶಂಕರ್ ರಾಮನ್  ಹಾಗೂ ಕಲಾವಿದರಾದ ಯಶ್ ಶೆಟ್ಟಿ, ಕಾಕ್ರೋಜ್ ಸುಧೀ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

  • ಕೋಮಲ್ ನಟನೆಯ ಮೊದಲ ಪ್ಯಾನ್ ಇಂಡಿಯಾ ಸಿನಿಮಾ ಶೀರ್ಷಿಕೆ ಲಾಂಚ್

    ಕೋಮಲ್ ನಟನೆಯ ಮೊದಲ ಪ್ಯಾನ್ ಇಂಡಿಯಾ ಸಿನಿಮಾ ಶೀರ್ಷಿಕೆ ಲಾಂಚ್

    ಮ್ಮ ಸಹಜ ಅಭಿನಯದಿಂದ ಅಭಿಮಾನಿಗಳ ಮನ ಗೆದ್ದಿರುವ ಕೋಮಲ್ ಕುಮಾರ್ (Komal) ಅಭಿನಯದ  ‘ಕೋಣ’ (Kona) ಚಿತ್ರದ ಶೀರ್ಷಿಕೆ ಹಾಗೂ ಪೋಸ್ಟರ್ (Poster) ಇತ್ತಿಚೆಗೆ ಅನಾವರಣವಾಯಿತು. ಈ ಚಿತ್ರ ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ನಿರ್ಮಾಣವಾಗಲಿದೆ. ಡಾರ್ಕ್ ಕಾಮಿಡಿ ಜಾನರ್ ಇರುವ  ಈ ಚಿತ್ರವನ್ನು ಈ ಹಿಂದೆ ಜಗ್ಗೇಶ್ ಅವರು ಅಭಿನಯಿಸಿದ್ದ 8 ಎಂಎಂ  ಚಿತ್ರವನ್ನು ನಿರ್ದೇಶಿಸಿದ್ದ  ಎಸ್ ಹರಿಕೃಷ್ಣ (S. Harikrishna) ನಿರ್ದೇಶಿಸುತ್ತಿದ್ದಾರೆ.

    ಇದೊಂದು ನೈಜ ಘಟನೆ ಆಧಾರಿತ  ಚಿತ್ರವಾಗಿದೆ. ಕೋಮಲ್ ಕುಮಾರ್ ಅವರು ಈವರೆಗೂ ಅಭಿನಯಿಸಿರದ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕನ್ನಡದಲ್ಲಿ ಆನೆ, ನಾಯಿ, ಕೋತಿ ಮೊದಲಾದ ಪ್ರಾಣಿಗಳನ್ನು ಬಳಸಿಕೊಂಡು ಸಾಕಷ್ಟು ಬಂದಿದ್ದು ಈ ಚಿತ್ರದಲ್ಲಿ ‘ಕೋಣ’(ಪ್ರಾಣಿ) ಮುಖ್ಯ ಪಾತ್ರವಾಗಿರುವುದು ವಿಶೇಷವಾಗಿರಲಿದೆ. ಜನವರಿಯಲ್ಲಿ ಚಿತ್ರೀಕರಣ ಆರಂಭವಾಗಲಿದೆ ಎಂದು ನಿರ್ದೇಶಕ ಹರಿಕೃಷ್ಣ ಎಸ್ ತಿಳಿಸಿದ್ದಾರೆ.

    ತೇಜ್ವಿನ್ ಪ್ರೊಡಕ್ಷನ್ ಲಾಂಛನದಲ್ಲಿ ವಿನೋದ್ ಕುಮಾರ್ ಹಾಗೂ ಸೆಲ್ವನ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಶಶಾಂಕ್ ಶೇಷಗಿರಿ ಸಂಗೀತ ನಿರ್ದೇಶನ, ವಿನೋದ್ ಕುಮಾರ್ ಬಿ ಛಾಯಾಗ್ರಹಣ ಹಾಗೂ ಉಮೇಶ್ ಆರ್ ಬಿ ಅವರ ಸಂಕಲನವಿರುವ ಈ ಚಿತ್ರಕ್ಕಿದೆ. ಸಂಜಯ್ ಹಾಗೂ ಉತ್ತಮ್ ಸ್ವರೂಪ್ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

  • ‘ಕಾಲಾಯ ನಮಃ’ ಚಿತ್ರಕ್ಕೆ ಒಂದಾದ ಜಗ್ಗೇಶ್-ಕೋಮಲ್

    ‘ಕಾಲಾಯ ನಮಃ’ ಚಿತ್ರಕ್ಕೆ ಒಂದಾದ ಜಗ್ಗೇಶ್-ಕೋಮಲ್

    ನಸೂಯ ಕೋಮಲ್ ಕುಮಾರ್ ನಿರ್ಮಾಣದ ಮತಿವಣನ್ ನಿರ್ದೇಶನದ ‘ಕಾಲಾಯ ನಮಃ’ (Kalaya Namah) ಚಿತ್ರದಲ್ಲಿ ಬಹಳ ದಿನಗಳ ನಂತರ ಸಹೋದರರಾದ ಜಗ್ಗೇಶ್ (Jaggesh) ಹಾಗೂ ಕೋಮಲ್ (Komal) ಅಭಿನಯಿಸುತ್ತಿದ್ದಾರೆ. ಇವರಿಬ್ಬರು ಭಾಗವಹಿಸಿರುವ ಹಾಡೊಂದರ ಚಿತ್ರೀಕರಣ ಜಾಲಿವುಡ್ ಸ್ಟುಡಿಯೋದಲ್ಲಿ ನಡೆಯುತ್ತಿದೆ. ಈ ಕುರಿತು ಮಾಧ್ಯಮಗೋಷ್ಠಿಯಲ್ಲಿ ಚಿತ್ರರಂಗದ ಸದಸ್ಯರು ಮಾಹಿತಿ ನೀಡಿದ್ದಾರೆ.

    ನಾನು ಈ ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸುತ್ತಿದ್ದೇನೆ. ಕೋಮಲ್, ಉತ್ತಮ ಕಥೆ ಆಯ್ಕೆ ಮಾಡಿಕೊಂಡಿದ್ದಾರೆ. ನಾನು ಆವತ್ತಿನಿಂದ ಹೇಳುತ್ತಿದ್ದೇನೆ. ಕೋಮಲ್ ಅದ್ಭುತ ಕಲಾವಿದ ಎಂದು. ಇದರಲ್ಲಿ ನಾನು, ಕೋಮಲ್ ಹಾಗೂ ನನ್ನ ಮಗ ಯತಿರಾಜ್ ಮೂರು ಜನ ನಟಿಸಿದ್ದೇವೆ. ಇತ್ತೀಚೆಗೆ ಬರುತ್ತಿರುವ ಅನೇಕ ಚಿತ್ರಗಳು ಯಶಸ್ವಿಯಾಗುತ್ತಿದೆ. ಕಾಲಾಯ ನಮಃ ಸಹ ಪ್ರಚಂಡ ಯಶಸ್ಸು ಕಾಣಲಿ ಎಂದು ಜಗ್ಗೇಶ್ ಹಾರೈಸಿದರು. ಇದನ್ನೂ ಓದಿ:ಸಿನಿಮಾ ಬಿಟ್ಟು ರಾಜಕೀಯದತ್ತ ರಮ್ಯಾ ಕೃಷ್ಣನ್? ಸ್ಪಷ್ಟನೆ ನೀಡಿದ ನಟಿ

    ಇದು ನಮ್ಮ ಸಂಸ್ಥೆಯ ಚಿತ್ರ. ನನ್ನ ಹೆಂಡತಿ ಅನಸೂಯ ಅವರು ನಿರ್ಮಾಪಕರು ಎಂದು ಮಾತು ಆರಂಭಿಸಿದ ಕೋಮಲ್ ಕುಮಾರ್, ಕಾಲಾಯ ನಮಃ ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಈಗ ಹಾಡಿನ ಚಿತ್ರೀಕರಣ ನಡೆಯುತ್ತಿದೆ. ಈ ಹಾಡಿನ ಚಿತ್ರೀಕರಣದಲ್ಲಿ ನಮ್ಮ ಅಣ್ಣ ಜಗ್ಗೇಶ್, ನಾನು ಹಾಗೂ ಮುಂಬೈ ನಟಿಯೊಬ್ಬರು ಪಾಲ್ಗೊಂಡಿದ್ದೇವೆ. ಯೋಗರಾಜ್ ಭಟ್ ಈ ಹಾಡನ್ನು ಬರೆದಿದ್ದಾರೆ. ಎಮಿಲ್ ಸಂಗೀತ ನೀಡಿದ್ದಾರೆ. ಭೂಷಣ್ ಮಾಸ್ಟರ್ ನೃತ್ಯ ಸಂಯೋಜನೆ ಮಾಡುತ್ತಿದ್ದಾರೆ. ನಾಯಕಿಯಾಗಿ ಆಸಿಯಾ ಫಿರ್ದೋಸ್ ನಟಿಸಿದ್ದಾರೆ. ಜಗ್ಗೇಶ್, ಪ್ರಕಾಶ್ ರೈ, ಸುಚೇಂದ್ರ ಪ್ರಸಾದ್, ಶೈನ್ ಶೆಟ್ಟಿ, ಯತಿರಾಜ್ ಮುಂತಾದವರು ತಾರಾಬಳಗದಲ್ಲಿದ್ದಾರೆ.  ಅಂದುಕೊಂಡ ಹಾಗೆ ಆದರೆ, ಅಕ್ಟೋಬರ್ ಅಥವಾ ನವೆಂಬರ್ ನಲ್ಲಿ ಚಿತ್ರವನ್ನು ನಿಮ್ಮ ಮುಂದೆ ತರುತ್ತೇವೆ ಎಂದರು.

    ಇದೊಂದು ಸಮಯದ ಸುತ್ತ ನಡೆಯುವ ಕಥೆ. ಜಗ್ಗೇಶ್, ಕೋಮಲ್ ಅವರು ಸೇರಿದಂತೆ ಎಲ್ಲಾ ಕಲಾವಿದರು ಚೆನ್ನಾಗಿ ನಟಿಸಿದ್ದಾರೆ. ನಮ್ಮ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದರು ನಿರ್ದೇಶಕ ಮತಿವಣನ್ (Mathivanan). ಛಾಯಾಗ್ರಹಣದ ಬಗ್ಗೆ ಛಾಯಾಗ್ರಾಹಕ ರಾಕೇಶ್ ಸಿ ತಿಲಕ್ ಮಾತನಾಡಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಿಖಿಲ್ ಕುಮಾರ್ ಹೊಸ ಚಿತ್ರಕ್ಕೆ ಮುಹೂರ್ತ : ಕ್ಲ್ಯಾಪ್ ಮಾಡಿ ವಿಶ್ ಮಾಡಿದ ಹೆಚ್.ಡಿ.ಕೆ

    ನಿಖಿಲ್ ಕುಮಾರ್ ಹೊಸ ಚಿತ್ರಕ್ಕೆ ಮುಹೂರ್ತ : ಕ್ಲ್ಯಾಪ್ ಮಾಡಿ ವಿಶ್ ಮಾಡಿದ ಹೆಚ್.ಡಿ.ಕೆ

    ನಿಖಿಲ್ ಕುಮಾರ್ (Nikhil Kumar) ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನೆರವೇರಿತು. ಮಾಜಿ ಪ್ರಧಾನ ಮಂತ್ರಿಗಳಾದ ಹೆಚ್.ಡಿ.ದೇವೇಗೌಡ ಅವರು ಕಾರ್ಯಕ್ರಮಕ್ಕೆ ಆಗಮಿಸಿ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ. ಕುಮಾರಸ್ವಾಮಿ (Kumaraswamy) ನೂತನ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು.

     

    ದಕ್ಷಿಣ ಭಾರತದ ಹೆಸರಾಂತ ಚಿತ್ರ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್ ಸಂಸ್ಥೆ (Lyca Production) ಈಗ ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದೆ. ಈ ಚಿತ್ರದ ನಾಯಕನಾಗಿ ನಾನು ನಟಿಸುತ್ತಿದ್ದೇನೆ. ಲಕ್ಷ್ಮಣ್ ಅವರು ಈ ಚಿತ್ರದ ನಿರ್ದೇಶಕರು.

    ಈ ಹಿಂದೆ ‘ಸೀತಾರಾಮ ಕಲ್ಯಾಣ’ ಚಿತ್ರದ ಆಡಿಯೋ ಬಿಡುಗಡೆ ಸಮಾರಂಭಕ್ಕೆ ಲೈಕಾ ಸಂಸ್ಥೆಯ ಸುಭಾಸ್ಕರನ್ (Subhaskaran) ಅವರು ಆಗಮಿಸಿದ್ದರು.  ‘ನಮ್ಮ ಸಂಸ್ಥೆಯ ನಿರ್ಮಾಣದ ಚಿತ್ರದಲ್ಲಿ ನೀವು ನಾಯಕರಾಗಿ ನಟಿಸಬೇಕು’ ಎಂದು ಸುಭಾಸ್ಕರನ್ ಹೇಳಿದ್ದರು. ಈಗ ಚಿತ್ರ ಆರಂಭವಾಗುತ್ತಿದೆ. ಈ ಚಿತ್ರಕ್ಕಾಗಿ ನಿರ್ದೇಶಕರು ಒಂದು ವರ್ಷದಿಂದ ಬೆಂಗಳೂರಿನಲ್ಲೇ ಇದ್ದು ಕೆಲಸ  ಮಾಡುತ್ತಿದ್ದಾರೆ. ಸದ್ಯದಲ್ಲೇ ಚಿತ್ರದ ಕುರಿತು ಹೆಚ್ಚಿನ ಮಾಹಿತಿ ನೀಡುವುದಾಗಿ ನಿಖಿಲ್ ಕುಮಾರ್ ತಿಳಿಸಿದರು.

    ತಮ್ಮ‌ ತಂಡವನ್ನು ಪರಿಚಯಿಸುತ್ತಾ ಮಾತು ಪ್ರಾರಂಭಿಸಿದ ನಿರ್ದೇಶಕ ಲಕ್ಷ್ಮಣ್, ಕನ್ನಡದಲ್ಲಿ ಇದು ನನ್ನ ಮೊದಲ ಚಿತ್ರ. ನಾನು ಬರೆದ ಕಥೆಯನ್ನು ಒಪ್ಪಿ ಚಿತ್ರ ನಿರ್ಮಾಣಕ್ಕೆ ಮುಂದಾಗಿರುವ ನಿರ್ಮಾಪಕರಿಗೆ ಹಾಗೂ ನಾಯಕ ನಿಖಿಲ್ ಕುಮಾರ್ ಅವರಿಗೆ ಧನ್ಯವಾದ. ಒಳ್ಳೆಯ ತಂಡದೊಂದಿಗೆ ಒಳ್ಳೆಯ ಚಿತ್ರ ನೀಡುವ ನಂಬಿಕೆ ಇದೆ. ಮುಂದಿನ ದಿನಗಳಲ್ಲಿ ಚಿತ್ರದ ಕುರಿತು ಹೆಚ್ಚಿನ ವಿವರಣೆ ನೀಡುತ್ತೇನೆ. ನಿಮ್ಮೆಲ್ಲರ ಹಾರೈಕೆ ಇರಲಿ ಎಂದರು. ಇದನ್ನೂ ಓದಿ:ಇಂದು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಹರ್ಷಿಕಾ ಪೂಣಚ್ಚ- ಭುವನ್

    ಈ ಚಿತ್ರದಲ್ಲಿ ನಟಿಸುವಂತೆ ನಿಖಿಲ್ ಅವರು ಹೇಳಿದರು. ನಾನು ಕಥೆ ಕೇಳಿ ಒಪ್ಪಿಕೊಂಡೆ. ಕಥೆ ಚೆನ್ನಾಗಿದೆ ಎಂದು ನಟ ಕೋಮಲ್ (Komal) ತಿಳಿಸಿದರು. ಲೈಕಾ ಪ್ರೊಡಕ್ಷನ್ಸ್ ಸಂಸ್ಥೆಯ ಮೂಲಕ ನಿರ್ಮಾಣವಾಗುತ್ತಿರುವ ಮೊದಲ ಕನ್ನಡ ಚಿತ್ರವಿದು. ಚಿತ್ರ ಯಶಸ್ವಿಯಾಗಲಿ ಎಂದು ಲೈಕಾ ಪ್ರೊಡಕ್ಷನ್ಸ್ ಮುಖ್ಯಸ್ಥರಾದ ಸುಭಾಸ್ಕರನ್  ಹಾರೈಸಿದರು.

    ನಾಯಕಿ ಯುಕ್ತಿ ತರೇಜ ಸಹ ನೂತನ ಚಿತ್ರದ ಕುರಿತು ಮಾತನಾಡಿದರು. ಹಲವಾರು ತಂತ್ರಜ್ಞರು ಹಾಗೂ ಗಣ್ಯರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ನಮೋ ಭೂತಾತ್ಮ 2’ ಚಿತ್ರದಲ್ಲೂ ಉರ್ದು ಮಿಶ್ರಿತ ಸಾಂಗ್

    ‘ನಮೋ ಭೂತಾತ್ಮ 2’ ಚಿತ್ರದಲ್ಲೂ ಉರ್ದು ಮಿಶ್ರಿತ ಸಾಂಗ್

    ಕೋಮಲ್ (Komal) ನಟನೆಯ ‘ಗೋವಿಂದಾಯ ನಮಃ’ ಸಿನಿಮಾ ಪ್ಯಾರ್ಗೆ ಆಗ್ಬುಟೈತಿ ಹಾಡಿನ (Song) ಮೂಲಕ ಸಖತ್ ಫೇಮಸ್ ಆಗಿತ್ತು. ಈ ಒಂದು ಹಾಡು ಇಡೀ ಸಿನಿಮಾವನ್ನು ಗೆಲುವಿನ ಅಂಚಿಗೆ ತೆಗೆದುಕೊಂಡು ಹೋಗಿತ್ತು. ಇದೀಗ ಕೋಮಲ್ ಮತ್ತೆ ಅಂಥದ್ದೊಂದು ಪ್ರಯೋಗ ಮಾಡಿದ್ದಾರೆ. ಅವರ ‘ನಮೋ ಭೂತಾತ್ಮ 2’ (Namo Bhutatma 2) ಸಿನಿಮಾದಲ್ಲೂ ಉರ್ದು ಮಿಶ್ರಿತ ಹಾಡೊಂದನ್ನು ಸೇರಿಸಿದ್ದಾರೆ. ಈ ಹಾಡು ಈಗಾಗಲೇ ರಿಲೀಸ್ ಆಗಿದ್ದು ಕೇಳುಗರ ಗಮನ ಸೆಳೆದಿದೆ.

      

    ಅಯ್ಯೋ ಅಯ್ಯೋ ಹೆಸರಿನಲ್ಲಿ ಈ ಹಾಡು ಮೂಡಿ ಬಂದಿದ್ದು, ಕವಿರಾಜ್ ಸಾಹಿತ್ಯ ಬರೆದಿದ್ದಾರೆ. ವಿಜಯ್ ಪ್ರಕಾಶ್ (Vijay Prakash) ಕಂಠಸಿರಿಯಲ್ಲಿ ಮೂಡಿ ಬಂದ ಗೀತೆಗೆ ಅರುಣ್ ಆಂಡ್ಯೂ ಮ್ಯೂಸಿಕ್ ಮಾಡಿದ್ದಾರೆ. ಸ್ವತಃ ಮುರಳಿ (Murali) ಮಾಸ್ಟರ್ ನೃತ್ಯ ಸಂಯೋಜನೆಯ ಜೊತೆಗೆ ಅವರು ಈ ಹಾಡಿನಲ್ಲಿ ಕಾಣಿಸಿಕೊಂಡಿದ್ದು ವಿಶೇಷ. ಇದನ್ನೂ ಓದಿ:ಗಂಡು ಮಗುವಿಗೆ ಜನ್ಮ ನೀಡಿದ ರಾಧಿಕಾ ರಾವ್

    ಮೊನ್ನೆಯಷ್ಟೇ ಈ ಸಿನಿಮಾದ ಟೀಸರ್ ರಿಲೀಸ್ ಆಗಿದ್ದು, ಸಿನಿಮಾ ಕುರಿತು ಅಂದು ಮಾತನಾಡಿದ್ದ ಕೋಮಲ್, ‘ನಾನು ನಿರ್ಮಿಸಿ, ನಟಿಸಿದ್ದ, ಮುರಳಿ ಮಾಸ್ಟರ್ ನಿರ್ದೇಶಿಸಿದ್ದ ನಮೋ ಭೂತಾತ್ಮ ಚಿತ್ರದ ಮೊದಲ ಭಾಗ ಬಿಡುಗಡೆಯಾಗಿ ಹತ್ತು ವರ್ಷಗಳಾಗಿದೆ. ಆ ಚಿತ್ರ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ನಂತರ ಮುರಳಿ ಮಾಸ್ಟರ್ ಹಾಗೂ ನಾನು ಇನ್ನೆರಡು ಚಿತ್ರಗಳ ಬಗ್ಗೆ ಚರ್ಚೆ ಮಾಡಿದ್ದೆವು. ಆದರೆ ಎಷ್ಟೋ ವರ್ಷಗಳ ಬಳಿಕ ಈ ನಮೋ  ಭೂತಾತ್ಮ 2 ಚಿತ್ರ ನಮ್ಮಿಬ್ಬರ ಕಾಂಬಿನೇಶನ್ ನಲ್ಲಿ ಬರುತ್ತಿದೆ‌. ಮೊದಲಭಾಗಕ್ಕೆ ಭಯ ಹುಟ್ಟಿಸುವ ಸನ್ನಿವೇಶಗಳು ಹೆಚ್ಚಾಗಿದ್ದವು. ಆದರೆ ಈ ಚಿತ್ರದಲ್ಲಿ ಕಾಮಿಡಿ ಕೂಡ ಅರ್ಧ ಭಾಗದಷ್ಟಿರುತ್ತದೆ. ಟೀಸರ್ ಬಿಡುಗಡೆ ಮಾಡಿಕೊಟ್ಟ ಧ್ರುವ ಸರ್ಜಾ ಅವರಿಗೆ ಧನ್ಯವಾದ’ ಎಂದಿದ್ದರು.

     

    2014ರಲ್ಲಿ ನನಗೆ ಕೋಮಲ್ ಅವರು ನಮೋ ಭೂತಾತ್ಮ ಚಿತ್ರ ನಿರ್ದೇಶಿಸಲು ಅವಕಾಶ ನೀಡಿದ್ದರು. ಆನಂತರ ಈಗ ನಮೋ ಭೂತಾತ್ಮ 2 ಚಿತ್ರದಲ್ಲಿ ಅವರ ಜೊತೆ ಮಾಡಿದ್ದೇನೆ. ನನ್ನ ಅಕ್ಕನ ಮಗ ಸಂತೋಷ್ ಶೇಖರ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಕೊರೋನ ಸಮಯದಲ್ಲೇ ಈ ಚಿತ್ರದ ಕಥೆ ಸಿದ್ದ ಮಾಡಿಕೊಂಡಿದ್ದೆ. ಆನಂತರ ಕೋಮಲ್ ಅವರಿಗೆ ನಾನು ಹಾಗೂ ಸಂತೋಷ್ ಹೋಗಿ ಈ ಚಿತ್ರದ ಕಥೆ ಹೇಳಿದ್ದೆವು. ಕೋಮಲ್ ಅವರು ನಟಿಸಲು ಒಪ್ಪಿದರು. ಚಿತ್ರಕ್ಕೆ ನಮೋ ಭೂತಾತ್ಮ 2 ಎಂದು ಹೆಸರಿಟ್ಟೆವು. ನನ್ನ ತಂಡದ ಸದಸ್ಯರ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ. ಇಂದು ಟೀಸರ್ ಬಿಡುಗಡೆಯಾಗಿದೆ. ಸದ್ಯದಲ್ಲೇ ಚಿತ್ರ ತೆರೆಗೆ. ಟೀಸರ್ ಬಿಡುಗಡೆ ಮಾಡಿಕೊಟ್ಟ ಧ್ರುವ ಸರ್ಜಾ ಅವರಿಗೆ ವಿಶೇಷ ಧನ್ಯವಾದ ಎಂದರು ನಿರ್ದೇಶಕ ಮುರಳಿ. ನಾಯಕಿ ಲೇಖಾ ಚಂದ್ರ, ಚಿತ್ರದಲ್ಲಿ ನಟಿಸಿರುವ ಜಿ.ಜಿ, ಮೋನಿಕಾ, ವರುಣ್ ರಾಜ್ ಹಾಗೂ ಚಿತ್ರದ ನಿರ್ಮಾಪಕ ಸಂತೋಷ್ ಶೇಖರ್ ಚಿತ್ರದ ಕುರಿತು ಮಾತನಾಡಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೋಮಲ್ ಹುಟ್ಟುಹಬ್ಬಕ್ಕೆ ‘ರೋಲೆಕ್ಸ್’ ಪೋಸ್ಟರ್

    ಕೋಮಲ್ ಹುಟ್ಟುಹಬ್ಬಕ್ಕೆ ‘ರೋಲೆಕ್ಸ್’ ಪೋಸ್ಟರ್

    ಸೆನ್ಸೇಷನಲ್ ಸ್ಟಾರ್ ಕೋಮಲ್ ಕುಮಾರ್ (Komal) ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಕೋಮಲ್ ಜನುಮದಿನ ಉಡುಗೊರೆಯಾಗಿ ‘ರೋಲೆಕ್ಸ್’ (Rolex) ಸಿನಿಮಾದ ಸ್ಪೆಷಲ್ ಪೋಸ್ಟರ್ (Poster)  ರಿಲೀಸ್ ಮಾಡಲಾಗಿದೆ. ಸೂಟು ಬೂಟೂ ತೊಟ್ಟು ಸ್ಟೈಲೀಶ್ ಲುಕ್ ನಲ್ಲಿ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ ಕೋಮಲ್.

    ಟೈಟಲ್ ಮೂಲಕ ಸೆನ್ಸೇಷನ್ ಕ್ರಿಯೇಟ್ ಮಾಡುತ್ತಿರುವ ‘ರೋಲೆಕ್ಸ್’ಗೆ ಶ್ರೀನಿವಾಸ್ ಮಂಡ್ಯ ಆಕ್ಷನ್ ಕಟ್ ಹೇಳಿದ್ದಾರೆ. ಈ ಹಿಂದೆ ‘ಬಿಲ್ ಗೇಟ್ಸ್’ ಸಿನಿಮಾ ನಿರ್ದೇಶನ ಮಾಡಿದ್ದ ಶ್ರೀನಿವಾಸ್ ಮಂಡ್ಯ (Srinivas Mandya) ಈ ಬಾರಿ  ಇಂಟ್ರಸ್ಟಿಂಗ್ ಕಥೆ ಹೊತ್ತು ಬಂದಿದ್ದಾರೆ. ಕೋಮಲ್ ಗೆ ಜೋಡಿಯಾಗಿ ಪಂಚತಂತ್ರ ಬ್ಯೂಟಿ ಸೋನಲ್ ಮೊಂಟೆರೋ ನಟಿಸುತ್ತಿದ್ದಾರೆ. ಇದನ್ನೂ ಓದಿ:ಶೂಟಿಂಗ್ ವೇಳೆ ಶಾರುಖ್ ಖಾನ್‌ಗೆ ಪೆಟ್ಟು- ಆಸ್ಪತ್ರೆಗೆ ದಾಖಲು

    ಉಳಿದಂತೆ ರಂಗಾಯಣ ರಘು, ಶೋಭರಾಜ್, ಅರವಿಂದ್, ಅಪೂರ್ವ ಸೇರಿದಂತೆ ಹಲವು ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ. ಫೀನಿಕ್ಸ್ ಎಂಟರ್ಟೈನ್ಮೆಂಟ್ಸ್ ಬ್ಯಾನರ್ ನಡಿ ಅನಿಲ್ ಕುಮಾರ್. ಎಸ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ರಾಕೇಶ್ ಸಿ ತಿಲಕ್ ಕ್ಯಾಮೆರಾ ವರ್ಕ್, ಜೆಸ್ಸಿ ಗಿಫ್ಟ್ ಸಂಗೀತ ನಿರ್ದೇಶನ, ಅರವಿಂದ್ ರಾಜ್ ಸಂಕಲನ ಚಿತ್ರಕ್ಕಿದೆ.

     

    ಈಗಾಗಲೇ ಶೇಕಡಾ 50ರಷ್ಟು ರೋಲೆಕ್ಸ್ ಸಿನಿಮಾದ ಶೂಟಿಂಗ್ ಕಂಪ್ಲೀಟ್ ಆಗಿದ್ದು, ಉಳಿದ ಭಾಗದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಆದಷ್ಟು ಬೇಗ ಶೂಟಿಂಗ್ ಮುಗಿಸಿ ಸೆಪ್ಟಂಬರ್ ವೇಳೆಗೆ ಸಿನಿಮಾವನ್ನು ತೆರೆಗೆ ತರಲು ಚಿತ್ರತಂಡ ಪ್ಲ್ಯಾನ್ ಹಾಕಿಕೊಂಡಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೋಮಲ್ ಹುಟ್ಟುಹಬ್ಬಕ್ಕೆ ‘ಯಲಾ ಕುನ್ನಿ’ ಫಸ್ಟ್ ಲುಕ್

    ಕೋಮಲ್ ಹುಟ್ಟುಹಬ್ಬಕ್ಕೆ ‘ಯಲಾ ಕುನ್ನಿ’ ಫಸ್ಟ್ ಲುಕ್

    ಟ ಕೋಮಲ್ (Komal) ಇಂದು ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಅವರ ಹುಟ್ಟುಹಬ್ಬದ (Birthday) ಸಂದರ್ಭದಲ್ಲಿ ‘ಯಲಾ ಕುನ್ನಿ’ ಚಿತ್ರತಂಡವು ಹೊಸದೊಂದು ಪೋಸ್ಟರ್ (Poster) ರಿಲೀಸ್ ಮಾಡಿದೆ. ಥೇಟ್ ವಜ್ರಮುನಿಯಂತೆ ಕಾಣುವ ಈ ಪೋಸ್ಟರ್ ಸದ್ಯ ಕೋಮಲ್ ಅಭಿಮಾನಿಗಳನ್ನು ಖುಷಿ ಪಡಿಸಿದೆ.

    ಮೊಟ್ಟಮೊದಲ ಬಾರಿಗೆ ಕೋಮಲ್ ದ್ವಿಪಾತ್ರದಲ್ಲಿ  ನಟಿಸುತ್ತಿರುವ ‘ಯಲಾ ಕುನ್ನಿ’ (Yalakunni) ಚಿತ್ರದ ಮುಹೂರ್ತ ಸಮಾರಂಭ ಈಗಾಗಲೇ ನಡೆದಿದೆ. ಚಿತ್ರಕ್ಕೆ  ಕನ್ನಡ ಚಿತ್ರರಂಗದ ದಂತಕಥೆ ವಜ್ರಮುನಿ ಅವರ ಕುಟುಂಬದ ಎಲ್ಲ ಸದಸ್ಯರು ಆಗಮಿಸಿ ಚಿತ್ರಕ್ಕೆ ಶುಭ ಕೋರಿದ್ದರು. ವಜ್ರಮುನಿಯವರ ಪತ್ನಿ  ಲಕ್ಷ್ಮೀ ವಜ್ರಮುನಿ (Lakshmi Vajramuni) ಕ್ಯಾಮೆರಾ ಚಾಲನೆ ಮಾಡಿದರೆ, ಮೊದಲ ಸನ್ನಿವೇಶಕ್ಕೆ  ವಜ್ರಮುನಿ ಅವರ ಹಿರಿಯ ಪುತ್ರ ವಿಶ್ವನಾಥ್ ಆರಂಭಫಲಕ ತೋರಿದ್ದರು. ವಜ್ರಮುನಿ ಅವರ ಕಿರಿಯ ಪುತ್ರ ಜಗದೀಶ್ ವಜ್ರಮುನಿ ಮತ್ತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

    ‘ಯಲಾಕುನ್ನಿ’ ಖ್ಯಾತ ನಟ ವಜ್ರಮುನಿ ಅವರ ಚಿತ್ರಗಳಲ್ಲಿ ಹೆಚ್ಚಾಗಿ ಬಳಸುತ್ತಿದ್ದ ಪದ. ಈಗ ಆ ಪದವೇ ಚಿತ್ರದ ಶೀರ್ಷಿಕೆಯಾಗಿದೆ. ‘ಮೇರಾ ನಾಮ್ ವಜ್ರಮುನಿ’ ಎಂಬ ಅಡಿಬರಹ ಕೂಡ ಇದೆ. ಈ ಕುರಿತು ಕೋಮಲ್ ಮಾತನಾಡುತ್ತಾ, ‘ನಾನು ಮೊದಲ ಬಾರಿಗೆ ದ್ವಿಪಾತ್ರದಲ್ಲಿ ಅಭಿನಯಿಸುತ್ತಿದ್ದೇನೆ. ನಿರ್ದೇಶಕ ಪ್ರದೀಪ್ ಬಹಳ ಚೆನ್ನಾಗಿ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಚಿತ್ರದ ಮುಕ್ಕಾಲು ಭಾಗ 1981 ರ ಕಾಲಘಟ್ಟದಲ್ಲಿ ನಡೆಯುವ ಕಥೆ. ಶ್ರೀರಂಗಪಟ್ಟಣ, ಮೈಸೂರು ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ. ಗಂಜಾಂ ಬಳಿ ಪುರಾತನ ದೇವಾಲಯವಿದ್ದು, ಆ ದೇವಾಲಯದಲ್ಲೇ ಹೆಚ್ಚಿನ ಚಿತ್ರೀಕರಣವಾಗಲಿದೆ. ಚಿತ್ರಕ್ಕಾಗಿ ವಿಶೇಷ ಸೆಟ್ ಸಹ ಹಾಕಲಾಗುವುದು ನಮ್ಮ ಈ ಪ್ರಯತ್ನಕ್ಕೆ ನಿಮ್ಮ ಬೆಂಬಲವಿರಲಿ’ ಎಂದಿದ್ದರು. ಇದನ್ನೂ ಓದಿ:ರಣಬೀರ್- ರಶ್ಮಿಕಾ ನಟನೆಯ ‘ಅನಿಮಲ್’ ಸಿನಿಮಾದ ನ್ಯೂ ರಿಲೀಸ್ ಡೇಟ್ ಅನೌನ್ಸ್

    ‘ನಾನು ಕನ್ನಡದ ಹಿರಿಯ ನಿರ್ದೇಶಕರ ಬಳಿ ಕೆಲಸ ಮಾಡಿದ್ದೀನಿ . ಇದು ನನ್ನ ನಿರ್ದೇಶನದ ಮೊದಲ ಚಿತ್ರ. ಈ ಹಿಂದೆ ಸಡಗರ ಚಿತ್ರ ನಿರ್ಮಿಸಿದ್ದ ಮಹೇಶ್ ಗೌಡ್ರು ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.  ಮತ್ತೊಂದು ವಿಶೇಷವೆಂದರೆ  ವಜ್ರಮುನಿ ಅವರ ಮೊಮ್ಮಗ ಆಕರ್ಷ ಈ ಚಿತ್ರದ ಮೂಲಕ  ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಹೊಸ ಪ್ರತಿಭೆ ನಿಸರ್ಗ ಈ ಚಿತ್ರದ ನಾಯಕಿ.‌ ಯತಿರಾಜ್ ಜಗ್ಗೇಶ್, ಫ್ರೆಂಚ್ ಬಿರಿಯಾನಿ ಮಹಾಂತೇಶ್, ಜಯಸಿಂಹ ಮುಸುರಿ, ಅರವಿಂದ್ ರಾವ್, ಮಂಜು ಪಾವಗಡ, ರಾಜು ತಾಳಿಕೋಟೆ, ಶಿವರಾಜ್, ಬಿರಾದರ್, ವೆಂಕಟೇಶ್ ಪ್ರಸಾದ್, ಉಮೇಶ್ ಸಕ್ಕರೆನಾಡು, ಅನಿಲ್ ಯಾದವ್ ಇನ್ನು ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಧರ್ಮವಿಶ್ ಸಂಗೀತ ‌ನಿರ್ದೇಶನ ಹಾಗೂ ಉದಯ್ ಲೀಲಾ ಅವರ ಛಾಯಾಗ್ರಹಣ, ದೀಪು ಎಸ್. ಕುಮಾರ್ ಸಂಕಲನ , ವಿನೋದ್ ರವರ ಸಾಹಸ  ಈ ಚಿತ್ರಕ್ಕಿದೆ. ಈ ಚಿತ್ರದಲ್ಲಿ ಕೋಮಲ್ ಕುಮಾರ್  ವಜ್ರಮುನಿಯಾದರೆ, ಅವರ ಬಲಗೈ ಬಂಟನಾಗಿ ಜಯಸಿಂಹ ಮುಸುರಿ ಕನೆಕ್ಷನ್ ಕಾಳಪ್ಪನಾಗಿ  ಕಾಣಿಸಿ ಕೊಳ್ಳಲಿದ್ದಾರೆ. ಚಿತ್ರದ ಹಿನ್ನಲೆ  ಗೋವಿನ ಹಾಡಿನಲ್ಲಿ ಬರುವ ವ್ಯಾಘ್ರ ಹುಲಿ ಅರ್ಭುತ ಮತ್ತು ಸತ್ಯವೇ ಭಗವಂತನೆಂದ ಪುಣ್ಯಕೋಟಿಯ ಕಥೆಯಿಂದ ಪ್ರೇರಿತವಾಗಿದೆ.  ಏಪ್ರಿಲ್ ನಲ್ಲಿ ಚಿತ್ರೀಕರಣ ಆರಂಭವಾಗಲಿದೆ’ ಎಂದು ನಿರ್ದೇಶಕ ಪ್ರದೀಪ್ ತಿಳಿಸಿದ್ದರು.

     

    ನಾಯಕಿ ನಿಸರ್ಗ ಹಾಗೂ ಚಿತ್ರದಲ್ಲಿ ನಟಿಸುತ್ತಿರುವ ಯತಿರಾಜ್, ಮಾಹಂತೇಶ್, ಆಕರ್ಷ,‌ ಅರವಿಂದ್ ರಾವ್, ಮಂಜು ಪಾವಗಡ ತಮ್ಮ ಪಾತ್ರದ ಬಗ್ಗೆ ಮಾತನಾಡಿದ್ದರು. ‘ನನ್ನ ಮೊಮ್ಮಗ ಆಕರ್ಷ ಈ ಚಿತ್ರದಲ್ಲಿ ಕೋಮಲ್ ಅವರ ಮಗನ   ಪಾತ್ರದಲ್ಲಿ ಅಭಿನಯಿಸುತ್ತಿದ್ದಾನೆ. ಅವನಿಗೆ ಹಾಗೂ ಇಡೀ ತಂಡಕ್ಕೆ ಒಳ್ಳೆಯದಾಗಲಿ’ ಎಂದಿದ್ದರು ಲಕ್ಷ್ಮೀ ವಜ್ರಮುನಿ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೋಮಲ್ ನಟನೆಯ ‘ನಮೋ ಭೂತಾತ್ಮ 2’ ಚಿತ್ರದ ಟೀಸರ್ ರಿಲೀಸ್

    ಕೋಮಲ್ ನಟನೆಯ ‘ನಮೋ ಭೂತಾತ್ಮ 2’ ಚಿತ್ರದ ಟೀಸರ್ ರಿಲೀಸ್

    ಹಜ ಅಭಿನಯದ ಮೂಲಕ ಜನರ ಮನ ಗೆದ್ದಿರುವ ನಟ ಕೋಮಲ್ (Komal) ಕುಮಾರ್ ನಾಯಕರಾಗಿ ನಟಿಸಿರುವ ‘ನಮೋ ಭೂತಾತ್ಮ 2’ (Namo Bhutatma 2)  ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ನೃತ್ಯ ನಿರ್ದೇಶಕ ಮುರಳಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ನಟ ಧ್ರುವ ಸರ್ಜಾ ಟೀಸರ್ (Teaser) ಬಿಡುಗಡೆ ಮಾಡಿದರು.

    ಟೀಸರ್ ಬಿಡುಗಡೆ ಮಾಡಿ ಮಾತನಾಡಿದ ಧ್ರುವ ಸರ್ಜಾ (Dhruva Sarja), ನಾನು ಮೊದಲಿನಿಂದಲೂ ಕೋಮಲ್ ಅವರ ಅಭಿಮಾನಿ. ಅವರ ಅಭಿನಯದ ಎಲ್ಲಾ ಚಿತ್ರಗಳನ್ನು ನೋಡಿದ್ದೇನೆ. ಈ ಚಿತ್ರದ ಬಿಡುಗಡೆಗೂ ಕಾಯುತ್ತಿದ್ದೇನೆ. ಮುರಳಿ (Muruli) ಮಾಸ್ಟರ್ ಸಹ ನನ್ನ ಚಿತ್ರಗಳ ಹಾಡುಗಳಿಗೆ ನೃತ್ಯ ನಿರ್ದೇಶನ ಮಾಡಿದ್ದಾರೆ. ನಮೋ ಭೂತಾತ್ಮ 2 ಸೂಪರ್ ಹಿಟ್ ಆಗಲಿ ಎಂದು ಹಾರೈಸಿದರು. ಇದನ್ನೂ ಓದಿ:ಕರಾವಳಿ ಬೆಡಗಿ ಕೃತಿ ಶೆಟ್ಟಿಗೆ ಸ್ಟಾರ್ ನಟನ ಪುತ್ರನಿಂದ ಟಾರ್ಚರ್

    ನಾನು ನಿರ್ಮಿಸಿ, ನಟಿಸಿದ್ದ, ಮುರಳಿ ಮಾಸ್ಟರ್ ನಿರ್ದೇಶಿಸಿದ್ದ ನಮೋ ಭೂತಾತ್ಮ ಚಿತ್ರದ ಮೊದಲ ಭಾಗ ಬಿಡುಗಡೆಯಾಗಿ ಹತ್ತು ವರ್ಷಗಳಾಗಿದೆ. ಆ ಚಿತ್ರ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ನಂತರ ಮುರಳಿ ಮಾಸ್ಟರ್ ಹಾಗೂ ನಾನು ಇನ್ನೆರಡು ಚಿತ್ರಗಳ ಬಗ್ಗೆ ಚರ್ಚೆ ಮಾಡಿದ್ದೆವು. ಆದರೆ ಎಷ್ಟೋ ವರ್ಷಗಳ ಬಳಿಕ ಈ ನಮೋ  ಭೂತಾತ್ಮ 2 ಚಿತ್ರ ನಮ್ಮಿಬ್ಬರ ಕಾಂಬಿನೇಶನ್ ನಲ್ಲಿ ಬರುತ್ತಿದೆ‌. ಮೊದಲಭಾಗಕ್ಕೆ ಭಯ ಹುಟ್ಟಿಸುವ ಸನ್ನಿವೇಶಗಳು ಹೆಚ್ಚಾಗಿದ್ದವು. ಆದರೆ ಈ ಚಿತ್ರದಲ್ಲಿ ಕಾಮಿಡಿ ಕೂಡ ಅರ್ಧ ಭಾಗದಷ್ಟಿರುತ್ತದೆ. ಟೀಸರ್ ಬಿಡುಗಡೆ ಮಾಡಿಕೊಟ್ಟ ಧ್ರುವ ಸರ್ಜಾ ಅವರಿಗೆ ಧನ್ಯವಾದ ಎಂದು ನಾಯಕ ಕೋಮಲ್ ಕುಮಾರ್ ತಿಳಿಸಿದರು.

    2014ರಲ್ಲಿ ನನಗೆ ಕೋಮಲ್ ಅವರು ನಮೋ ಭೂತಾತ್ಮ ಚಿತ್ರ ನಿರ್ದೇಶಿಸಲು ಅವಕಾಶ ನೀಡಿದ್ದರು. ಆನಂತರ ಈಗ ನಮೋ ಭೂತಾತ್ಮ 2 ಚಿತ್ರದಲ್ಲಿ ಅವರ ಜೊತೆ ಮಾಡಿದ್ದೇನೆ. ನನ್ನ ಅಕ್ಕನ ಮಗ ಸಂತೋಷ್ ಶೇಖರ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಕೊರೋನ ಸಮಯದಲ್ಲೇ ಈ ಚಿತ್ರದ ಕಥೆ ಸಿದ್ದ ಮಾಡಿಕೊಂಡಿದ್ದೆ. ಆನಂತರ ಕೋಮಲ್ ಅವರಿಗೆ ನಾನು ಹಾಗೂ ಸಂತೋಷ್ ಹೋಗಿ ಈ ಚಿತ್ರದ ಕಥೆ ಹೇಳಿದ್ದೆವು. ಕೋಮಲ್ ಅವರು ನಟಿಸಲು ಒಪ್ಪಿದರು. ಚಿತ್ರಕ್ಕೆ ನಮೋ ಭೂತಾತ್ಮ 2 ಎಂದು ಹೆಸರಿಟ್ಟೆವು. ನನ್ನ ತಂಡದ ಸದಸ್ಯರ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ. ಇಂದು ಟೀಸರ್ ಬಿಡುಗಡೆಯಾಗಿದೆ. ಸದ್ಯದಲ್ಲೇ ಚಿತ್ರ ತೆರೆಗೆ. ಟೀಸರ್ ಬಿಡುಗಡೆ ಮಾಡಿಕೊಟ್ಟ ಧ್ರುವ ಸರ್ಜಾ ಅವರಿಗೆ ವಿಶೇಷ ಧನ್ಯವಾದ ಎಂದರು ನಿರ್ದೇಶಕ ಮುರಳಿ. ನಾಯಕಿ ಲೇಖಾ ಚಂದ್ರ, ಚಿತ್ರದಲ್ಲಿ ನಟಿಸಿರುವ ಜಿ.ಜಿ, ಮೋನಿಕಾ, ವರುಣ್ ರಾಜ್ ಹಾಗೂ ಚಿತ್ರದ ನಿರ್ಮಾಪಕ ಸಂತೋಷ್ ಶೇಖರ್ ಚಿತ್ರದ ಕುರಿತು ಮಾತನಾಡಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]