Tag: koragajja

  • ಶುಭಾ ಪೂಂಜಾ ಶೂಟಿಂಗ್ ವೇಳೆ ಗೂಂಡಾಗಳ ಎಂಟ್ರಿ: ಚಿತ್ರೀಕರಣ ಕ್ಯಾನ್ಸಲ್

    ಶುಭಾ ಪೂಂಜಾ ಶೂಟಿಂಗ್ ವೇಳೆ ಗೂಂಡಾಗಳ ಎಂಟ್ರಿ: ಚಿತ್ರೀಕರಣ ಕ್ಯಾನ್ಸಲ್

    ಸುಧೀರ್ ಅತ್ತಾರ್ (Sudhir Attar) ನಿರ್ದೇಶನದ ‘ಕೊರಗಜ್ಜ’ (Koragajja) ಸಿನಿಮಾದ ಶೂಟಿಂಗ್ ವೇಳೆ ಲಾಂಗ್ ಹಿಡಿದುಕೊಂಡು ಗೂಂಡಾಗಳು ಎಂಟ್ರಿ ಕೊಟ್ಟಿದ್ದಾರೆ. ಶುಭಾ ಪೂಂಜಾ ಮತ್ತು ಬಾಲಿವುಡ್ ನ ಖ್ಯಾತ ಡಾನ್ಸ್ ಕೊರಿಯೋಗ್ರಾಫರ್ ಗಣೇಶ್ ಆಚಾರ್ಯ ಸೇರಿದಂತೆ ಹಲವರು ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಈ ವೇಳೆ ತಲ್ವಾರ್ ಹಿಡಿದುಕೊಂಡು ನುಗ್ಗಿದ ತಂಡವು ಚಿತ್ರೀಕರಣಕ್ಕೆ ಅಡ್ಡಿ ಪಡಿಸಿದೆ.

    ಕುದುರೆಮುಖ ಸಮೀಪದ ಕಳಸದಲ್ಲಿ ಹಾಡಿನ ಚಿತ್ರೀಕರಣ ನಡೆಯುತ್ತಿತ್ತು. ಈ ಹಾಡಿನಲ್ಲಿ ಶುಭಾ ಪೂಂಜಾ ಕಾಣಿಸಿಕೊಳ್ಳುತ್ತಿದ್ದರೆ, ಗಣೇಶ್ ಆಚಾರ್ಯ (Ganesh Acharya) ಹಾಡಿಗೆ ಕೊರಿಯೋಗ್ರಫಿ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ತಲ್ವಾರ್ ಹಿಡಿದುಕೊಂಡು ಗುಂಪು ನುಗ್ಗಿದೆ. ಈ ಸಿನಿಮಾ ಮಾಡದಂತೆ ತಡೆಯುವ ಪ್ರಯತ್ನ ಮಾಡಿದೆ. ಹೀಗೆ ಅನೇಕ ಬಾರಿಯೂ ಅಲ್ಲಲ್ಲಿ ಇಂತಹ ತೊಂದರೆಗಳನ್ನು ಸಿನಿಮಾ ತಂಡ ಎದುರಿಸುತ್ತಿದೆ.

    ಚಿತ್ರದ ನಿರ್ಮಾಪಕ ತ್ರಿವಿಕ್ರಮ್ ಬೆಳ್ತಂಗಡಿ (Trivikram Belthangadi) ಪಬ್ಲಿಕ್ ಟಿವಿ ಡಿಜಿಟೆಲ್ ಜೊತೆ ಮಾತನಾಡಿ, ‘ಕೊರಗಜ್ಜ ಸಿನಿಮಾ ಮಾಡಬಾರದು ಎನ್ನುವುದೇ ಇಂತಹ ಘಟನೆಗಳಿಗೆ ಕಾರಣವಾಗಿದೆ. ದೈವ ನರ್ತಕರು ಎಂದು ಹೇಳಿಕೊಂಡು ಬಂದು ಇಂತಹ ಗಲಾಟೆಯನ್ನು ಮಾಡುತ್ತಿದ್ದಾರೆ. ಮೊನ್ನೆಯೂ ಅದೇ ಆಗಿದೆ. ಸಿನಿಮಾ ಟೀಮ್ ಗೆ ಯಾವುದೇ ತೊಂದರೆ ಆಗಿಲ್ಲ. ಆದರೆ, ಸೆಟ್ ಹಾಳಾಗಿದೆ. ಕೊರಗಜ್ಜನ ಹೆಸರಿನಲ್ಲಿ ಸಿನಿಮಾ ಮಾಡಬಾರದು ಎಂದರೆ ಹೇಗೆ?’ ಅಂತಾರೆ.

     

    ಕೇವಲ ಕಳಸದಲ್ಲಿ ಮಾತ್ರವಲ್ಲ, ಅನೇಕ ಕಡೆಗಳಲ್ಲೂ ಇಂತಹ ತೊಂದರೆಗಳನ್ನು ಎದುರಿಸಿದೆ ಅಂತೆ ಚಿತ್ರತಂಡ. ಎಲ್ಲವನ್ನೂ ನಿಭಾಯಿಸಿಕೊಂಡು ಚಿತ್ರೀಕರಣಕ್ಕೆ ಮುಂದುವರೆಸಿದೆ. ಹಲವು ವರ್ಷಗಳ ನಂತರ ಮತ್ತೆ ಸುಧೀರ್ ಕನ್ನಡದಲ್ಲಿ ಸಿನಿಮಾ ಮಾಡುತ್ತಿದ್ದಾರೆ. ಕಬೀರ್ ಬೇಡಿ, ಶ್ರುತಿ, ಭವ್ಯ ಸೇರಿದಂತೆ ನುರಿತ ತಾರಾ ಬಳಗವೇ ಈ ಸಿನಿಮಾದಲ್ಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತುಳುನಾಡಿನ ಕಾರಣಿಕ ದೈವ ಕೊರಗಜ್ಜ ಗುಡಿಗೇ ಬೆಂಕಿಯಿಟ್ಟ!

    ತುಳುನಾಡಿನ ಕಾರಣಿಕ ದೈವ ಕೊರಗಜ್ಜ ಗುಡಿಗೇ ಬೆಂಕಿಯಿಟ್ಟ!

    ಮಂಗಳೂರು: ಕರಾವಳಿಯಲ್ಲಿ ದೈವ ಮತ್ತು ದೇವರನ್ನು ಸಮಾನವಾಗಿ ಪೂಜಿಸಲಾಗುತ್ತಿದೆ. ಅದರಲ್ಲೂ ತುಳುನಾಡಿನಲ್ಲಿ ಕೊರಗಜ್ಜ (Koragajja) ದೈವ ಬೇಡಿದವರ ಇಷ್ಟಾರ್ಥ ನೆರವೇರಿಸುವುದರ ಜೊತೆಗೆ ತಪ್ಪು ಮಾಡಿದವರಿಗೆ ಶಿಕ್ಷೆ ನೀಡುವ ಮೂಲಕ ಜನರಲ್ಲಿ ನಂಬಿಕೆ ಉಳಿದುಕೊಂಡಿದೆ. ಇಂತಹ ಪವಾಡವಿರುವ ಕೊಡಗಜ್ಜನ ಗುಡಿಗೇ ವ್ಯಕ್ತಿಯೊಬ್ಬ ಬೆಂಕಿ ಇಟ್ಟ ಪ್ರಸಂಗ ನಡೆದಿದೆ.

    ಹೌದು. ಈ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ (Belthangady) ತಾಲೂಕು ವೇಣೂರು ಗ್ರಾಮದ ಬಾಡಾರು ಎಂಬಲ್ಲಿ ನಡೆದಿದೆ. ಬಾಡಾರಿನ ಕೊರಗಕಲ್ಲು ಎಂಬಲ್ಲಿ ಭೂ ವಿಚಾರಕ್ಕೆ ನಡೆದ ಗಲಾಟೆ ಪವಾಡಪುರುಷನ ಸನ್ನಿಧಿಗೇ ಬೆಂಕಿ ಇಡುವ ಮೂಲಕ ಅಂತ್ಯವಾಗಿದೆ.

    ಸಾರ್ವಜನಿಕರು ಸಮಿತಿ ರಚಿಸಿ ವರ್ಷಂಪ್ರತಿ ಕೊರಗಜ್ಜನ ಆರಾಧನೆ ಮಾಡುತ್ತಿದ್ದರು. ಆದರೆ ಕೊರಗಜ್ಜನ ಗುಡಿ ಇರುವ ಜಾಗದ ಬಗ್ಗೆ ಸ್ಥಳೀಯ ವ್ಯಕ್ತಿ ಆಕ್ಷೇಪ ವ್ಯಕ್ತಪಡಿಸಿದ್ದರು. ಗುಡಿ ಇರುವ ಜಾಗ ಖಾಸಗಿ ಕುಟುಂಬಸ್ಥರದ್ದು, ಸಾರ್ವಜನಿಕ ಹಸ್ತಕ್ಷೇಪ ಮಾಡಬಾರದೆಂದು ತಗಾದೆ ಎತ್ತಿದ್ದರು. ಕಳೆದ ಕೆಲ ವರ್ಷಗಳಿಂದ ಈ ಸಂಬಂಧ ಸಮಿತಿ ಮತ್ತು ಖಾಸಗಿ ವ್ಯಕ್ತಿ ನಡುವೆ ತಗಾದೆ ಏರ್ಪಟ್ಟಿತ್ತು. ಈಗ ಸ್ಥಳೀಯ ವ್ಯಕ್ತಿ ಕೊರಗಜ್ಜನ ಗುಡಿಗೇ ಬೆಂಕಿ ಇಟ್ಟಿದ್ದಾನೆ. ಇದನ್ನೂ ಓದಿ: ಬಿಜೆಪಿಯವರೇನು ಸಾಚಾಗಳಲ್ಲ; ಸಿಬಿಐ ಅನ್ನೋದು ಬುರುಡೆ – ಮುತಾಲಿಕ್ ಕಿಡಿ

    ಘಟನೆ ಖಂಡಿಸಿ ಸ್ವಾಮಿ ಕೊರಗಜ್ಜ ಸಮಿತಿ ವೇಣೂರು ಪೊಲೀಸ್ ಠಾಣೆಗೆ ದೂರು ನೀಡಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಂಗಳೂರಿನ ಕುತ್ತಾರು ಕೊರಗಜ್ಜ ಕ್ಷೇತ್ರಕ್ಕೆ ರಚಿತಾ ರಾಮ್ ಭೇಟಿ

    ಮಂಗಳೂರಿನ ಕುತ್ತಾರು ಕೊರಗಜ್ಜ ಕ್ಷೇತ್ರಕ್ಕೆ ರಚಿತಾ ರಾಮ್ ಭೇಟಿ

    ಸ್ಯಾಂಡಲ್‌ವುಡ್ (Sandalwood) ನಟಿ ರಚಿತಾ ರಾಮ್ (Rachitha Ram) ಅವರು ಮಂಗಳೂರಿನ ಕುತ್ತಾರು ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ದೈವ ಕೊರಗಜ್ಜಗೆ ಪೂಜೆ ಸಲ್ಲಿಸಿ ರಚಿತಾ ರಾಮ್ ಪ್ರಾರ್ಥನೆ ಮಾಡಿದ್ದಾರೆ.

    ‘ಬುಲ್ ಬುಲ್’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ನಟಿ ರಚಿತಾ ರಾಮ್, ಕನ್ನಡದ ಟಾಪ್ ನಟರ ಜೊತೆ ನಟಿಸಿದ್ದಾರೆ. ತೆಲುಗಿನ ಸಿನಿಮಾದಲ್ಲೂ ನಟಿಸಿ ಬಂದಿದ್ದಾರೆ. ‘ಮ್ಯಾಟ್ನಿ’, ‘ಬ್ಯಾಡ್ ಮ್ಯಾನರ್ಸ್’ (Bad Manners) ಸಿನಿಮಾ ರಿಲೀಸ್‌ಗೆ ರೆಡಿಯಾಗಿರುವ ಬೆನ್ನಲ್ಲೇ ನಟಿ ರಚಿತಾ ಕೊರಗಜ್ಜ ಕ್ಷೇತ್ರಕ್ಕೆ (Koragajja) ಭೇಟಿ ನೀಡಿದ್ದಾರೆ. ಇದನ್ನೂ ಓದಿ: ಬಡವರ ಹಸಿವು ನೀಗಿಸಲು ಅಕ್ಕಿ ಕೊಟ್ಟರೆ ತಪ್ಪಲ್ಲ – ನಟ ಡಾಲಿ

    ಮಂಗಳೂರು ಹೊರವಲಯದ ಕುತ್ತಾರಿನಲ್ಲಿರುವ ಕೊರಗಜ್ಜ ಕ್ಷೇತ್ರ ಕ್ಷೇತ್ರದಲ್ಲಿ ಮುಂಬರುವ ಚಿತ್ರಗಳಾದ ಮ್ಯಾಟ್ನಿ,ಬ್ಯಾಡ್ ಮ್ಯಾನರ್ಸ್ ಯಶಸ್ಸಿಗೆ ಪ್ರಾರ್ಥಸಿ, ರಚಿತಾ ರಾಮ್ ಪೂಜೆ ಸಲ್ಲಿಸಿದ್ದಾರೆ. ಬಳಿಕ ರಚಿತಾ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ಸ್ನೇಹಿತರೆಲ್ಲರೂ ಕೊರಗಜ್ಜ ದೈವದ ಕಾರಣೀಕದ ಬಗ್ಗೆ ಹೇಳಿದ್ದರು. ಹಾಗಾಗಿ ನನಗೂ ಕೊರಗಜ್ಜ ದೈವದಲ್ಲಿ ಭಕ್ತಿಯಿಂದ ಪ್ರಾರ್ಥಿಸಬೇಕು ಅನ್ನಿಸಿತು. ಈ ಕ್ಷೇತ್ರ ಪ್ರಾಕೃತಿಕ ಸೌಂದರ್ಯವನ್ನು ಒಳಗೊಂಡು ತುಂಬಾ ಚೆನ್ನಾಗಿದೆ. ನನ್ನ ಮುಂಬರುವ ಚಿತ್ರಗಳ ಬಗ್ಗೆ ಪ್ರಾರ್ಥಿಸಿದ್ದೇನೆ.

  • ‘ಕೊರಗಜ್ಜ’ ಸಿನಿಮಾಗೆ ಬಾಲಿವುಡ್ ನಟ ಕಬೀರ್ ಬೇಡಿ ಕನ್ನಡದಲ್ಲಿ ಡಬ್ಬಿಂಗ್

    ‘ಕೊರಗಜ್ಜ’ ಸಿನಿಮಾಗೆ ಬಾಲಿವುಡ್ ನಟ ಕಬೀರ್ ಬೇಡಿ ಕನ್ನಡದಲ್ಲಿ ಡಬ್ಬಿಂಗ್

    ‘ಕಾಂತಾರ’ (Kantara) ಸಿನಿಮಾದ ಸಕ್ಸಸ್ ನಂತರ ಮತ್ತೆ ದೈವದ ಕಥೆಯೊಂದು ತೆರೆಗೆ ಬರಲು ಸಿದ್ಧವಾಗಿದೆ. ಕನ್ನಡದ ಸಿನಿಮಾಗಳು ವಿಶ್ವದೆಲ್ಲೆಡೆ ಸದ್ದು ಮಾಡ್ತಿರೋದನ್ನ ನೋಡಿ, ಪರಭಾಷಿಕರು ಕನ್ನಡದ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಬಾಲಿವುಡ್ ನಟ ಕಬೀರ್ ಬೇಡಿ ಒಂದು ಹೆಜ್ಜೆ ಹೋಗಿ, ಕನ್ನಡದ ‘ಕೊರಗಜ್ಜ’ (Koragajja) ಚಿತ್ರದಲ್ಲಿ ತಮ್ಮ ಪಾತ್ರಕ್ಕೆ ತಾವೇ ಡಬ್ ಮಾಡಿದ್ದಾರೆ.

    ಸುಧೀರ್ ಅತ್ತಾವರ್ (Sudhir Attavar) ನಿರ್ದೇಶನದ ‘ಕೊರಗಜ್ಜ’ ಸಿನಿಮಾದಲ್ಲಿ ಬರುವ ಉದ್ಯಾವರ ಅರಸರ ಪಾತ್ರವನ್ನು ಕಬೀರ್ ಬೇಡಿ (Kabir Bedi) ನಟಿಸಿದ್ದಾರೆ. ಈ ಮೂಲಕ ಇದೇ ಮೊದಲ ಬಾರಿಗೆ ಅವರು ಕನ್ನಡ ಚಿತ್ರದಲ್ಲಿ ಅಭಿನಯಿಸಿದ್ದಾರೆ. ನಿರ್ದೇಶಕರ ಕೆಲಸವನ್ನು ಅವರು ನಟ ಕಬೀರ್ ಮೆಚ್ಚಿಕೊಂಡಿದ್ದಾರೆ. ಅಲ್ಲದೇ ತಮ್ಮ ಪಾತ್ರಕ್ಕೆ ತಾವೇ ಧ್ವನಿ ನೀಡಿದ್ದಾರೆ. ಇದನ್ನೂ ಓದಿ:‘RRR’ ರೈಟರ್ ವಿಜೇಂದ್ರ ಪ್ರಸಾದ್‌ ಜೊತೆ ಕೇದರನಾಥ್‌ಗೆ ಕಂಗನಾ ಭೇಟಿ

    ಕಬೀರ್ ಬೇಡಿ ಅವರು ತಮ್ಮ ಪಾತ್ರಕ್ಕೆ ತಾವೇ ಡಬ್ಬಿಂಗ್ ಮಾಡುತ್ತೇನೆ ಎಂದು ಶೂಟಿಂಗ್ ಸಂದರ್ಭದಲ್ಲಿ ನಿರ್ದೇಶಕರಿಗೆ ಹೇಳಿದ್ದರು. ಆದರೆ ಅವರ ಮಾತನ್ನು ಒಪ್ಪುವುದು ನಿರ್ದೇಶಕ ಸುಧೀರ್ ಅತ್ತಾವರ್ ಅವರಿಗೆ ಅಷ್ಟು ಸುಲಭದಲ್ಲಿ ಸಾಧ್ಯವಿರಲಿಲ್ಲ. ಯಾಕೆಂದರೆ, ಬಾಲಿವುಡ್, ಹಾಲಿವುಡ್, ಯುರೋಪಿಯನ್ ಸಿನಿಮಾಗಳಲ್ಲಿ ತೊಡಗಿಸಿಕೊಂಡಿದ್ದ ನಟ ಏಕಾಏಕಿ ದಕ್ಷಿಣ ಭಾರತದ ಅದರಲ್ಲೂ ಕನ್ನಡ, ತುಳು, ಸೊಗಡನ್ನು ಅರಿತು ಕೊರಗಜ್ಜ ಸಿನಿಮಾಗೆ ಡಬ್ಬಿಂಗ್ ಸಿನಿಮಾಗೆ ಸಾಥ್ ನೀಡಿದ್ದಾರೆ. ಮುಂಬೈ ಸ್ಟುಡಿಯೋದಲ್ಲಿ 2-3 ಬಾರಿ ಸಂಭಾಷನೆಯನ್ನು ಒಪ್ಪಿಸುತ್ತಾ ಡಬ್ಬಿಂಗ್ ನಡೆಸುತ್ತಿದ್ದಾರೆ.

    ಸುಧೀರ್ ನಿರ್ದೇಶನದ ಸಿನಿಮಾ ನಟಿ ಭವ್ಯ ಅವರು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ನಾಲ್ಕೈದು ಕ್ಯಾಮೆರಾಗಳನ್ನ ಇಟ್ಟುಕೊಂಡು ಸಿನಿಮಾವನ್ನು ಶೂಟ್ ಮಾಡಿದ್ದಾರೆ. ಭಿನ್ನ ಕಥೆಯನ್ನ ತೆರೆಗೆ ತರಲು ಚಿತ್ರತಂಡ ಸಜ್ಜಾಗಿದ್ದಾರೆ. ಸದ್ಯದಲ್ಲೇ ಈ ಕುರಿತ ಅಪ್‌ಡೇಟ್ ಸಿಗಲಿದೆ.

  • ದೈವಕ್ಕೆ ಕೋಲ ನೀಡಿದ ಚಾರ್ಲಿ ಬೆಡಗಿ ಸಂಗೀತಾ ಶೃಂಗೇರಿ

    ದೈವಕ್ಕೆ ಕೋಲ ನೀಡಿದ ಚಾರ್ಲಿ ಬೆಡಗಿ ಸಂಗೀತಾ ಶೃಂಗೇರಿ

    ಕ್ಷಿತ್ ಶೆಟ್ಟಿ ನಟನೆಯ ಚಾರ್ಲಿ 777 ( Charlie 777)  ಮತ್ತು ಪುನೀತ್ ರಾಜ್ ಕುಮಾರ್ ನಟಿಸಿದ್ದ ಲಕ್ಕಿ ಮ್ಯಾನ್ ಸಿನಿಮಾಗಳ ಖ್ಯಾತಿಯ ನಟಿ ಸಂಗೀತಾ ಶೃಂಗೇರಿ (Sangeetha Sringeri) ನಿನ್ನೆಯಷ್ಟೇ ದೈವಕ್ಕೆ (Koragajja) ಕೋಲ (Kola) ನೀಡಿ ಪೂಜೆ ಸಲ್ಲಿಸಿದ್ದಾರೆ. ಮೊನ್ನೆಯಷ್ಟೇ ನಟಿ ಶ್ರುತಿ ಇದೇ ಕೊರಗಜ್ಜನಿಗೆ ಕೋಲ ನೀಡಿದ್ದರು. ನಟಿ ಪ್ರೇಮಾ ಕೂಡ ದರ್ಶನ ಪಡೆದುಕೊಂಡಿದ್ದರು. ಈಗ ನಿರೂಪಕಿ ಅನುಶ್ರೀ (Anushree) ಜೊತೆ ಕೊರಗಜ್ಜನಿಗೆ ಕೋಲ ಸೇವೆ ಮಾಡಿದ್ದಾರೆ ಸಂಗೀತಾ.

    ಈ ಕುರಿತಂತೆ ತಮ್ಮ ಅನುಭವಗಳನ್ನು ಬರೆದುಕೊಂಡಿರುವ ಸಂಗೀತಾ ‘ನನಗೆ ಕಳೆದೆರಡು ದಿನಗಳಿಂದ ದಿವ್ಯ ಅನುಭವದಲ್ಲಿ ಇದ್ದೇನೆ. ಆ ಭಾವನೆಗಳನ್ನು ಪದಗಳಲ್ಲಿ ಹೇಳುವುದಕ್ಕೆ ಸಾಧ್ಯವಿಲ್ಲ. ತುಳುನಾಡು ದೈವ ಕೋಲಕ್ಕೆ ನಾನು ಸಾಕ್ಷಿಯಾಗಿದ್ದೇನೆ ಎನ್ನುವುದು ನನ್ನ ಪುಣ್ಯ. ಇಂಥದ್ದೊಂದು ಸಾನಿಧ್ಯ ಸಿಕ್ಕಿರುವುದಕ್ಕೆ ಕಾರಣ ನಿರ್ದೇಶಕರಾದ ಕಿರಣ್ ರಾಜ್ ಮತ್ತು ಭರತ್ ರಾಜ್ ಕೆ ಯಾದವ್. ಇವರ ಕುಟುಂಬಕ್ಕೆ ಕೃತಜ್ಞೆತೆಗಳು’ ಎಂದು ಬರೆದುಕೊಂಡಿದ್ದಾರೆ.

    ಕನ್ನಡ ಕಿರುತೆರೆ ಜಗತ್ತಿನಿಂದ ಬಣ್ಣದ ಪ್ರಪಂಚಕ್ಕೆ ಪರಿಚಯವಾದ ಸಂಗೀತಾ ಶೃಂಗೇರಿ, ಆನಂತರ ಎರಡು ಸೂಪರ್ ಹಿಟ್ ಸಿನಿಮಾಗಳಲ್ಲಿ ನಾಯಕಿಯಾಗಿ ನಟಿಸಿದರು. ರಕ್ಷಿತ್ ಜೊತೆಗಿನ 777 ಚಾರ್ಲಿ ಹಾಗೂ ಡಾರ್ಲಿಂಗ್ ಕೃಷ್ಣ ಮತ್ತು ಪುನೀತ್ ನಟನೆಯ ಲಕ್ಕಿಮ್ಯಾನ್ ಸಿನಿಮಾ ಇವರಿಗೆ ದೊಡ್ಡ ಹೆಸರನ್ನು ತಂದುಕೊಟ್ಟಿತು. ಈಗ ನಾನಾ ಸಿನಿಮಾಗಳಲ್ಲಿ ಸಂಗೀತಾ ನಟಿಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮದುವೆ ಸಮಯ ಬಂದಾಗ ಎಲ್ಲರಿಗೂ ತಿಳಿಸ್ತೀನಿ, ಎರಡನೇ ಮದುವೆ ಸುಳ್ಳು : ನಟಿ ಪ್ರೇಮಾ

    ಮದುವೆ ಸಮಯ ಬಂದಾಗ ಎಲ್ಲರಿಗೂ ತಿಳಿಸ್ತೀನಿ, ಎರಡನೇ ಮದುವೆ ಸುಳ್ಳು : ನಟಿ ಪ್ರೇಮಾ

    ವಾರದ ಹಿಂದೆಯಷ್ಟೇ ಉಡುಪಿಯ ಕಾಪುನಲ್ಲಿರುವ ಕೊರಗಜ್ಜ (Koragajja) ದೇವಸ್ಥಾನಕ್ಕೆ ನಟಿ ಪ್ರೇಮಾ (Prema) ಭೇಟಿ ನೀಡಿ, ದೈವದ ದರ್ಶನ ಪಡೆದಿದ್ದರು. ಕೊರಗಜ್ಜನ ದೇವಸ್ಥಾನಕ್ಕೆ ಭೇಟಿ ಹಿನ್ನೆಲೆಯಲ್ಲಿ ನಟಿ ಪ್ರೇಮಾ ಅಲ್ಲಿಗೆ ಹೋಗಿದ್ದು ತಮ್ಮ ಎರಡನೇ ಮದುವೆ (second marriage) ವಿಚಾರವಾಗಿ ಎನ್ನುವ ಸುದ್ದಿ ಹರಡಿತ್ತು. ಪ್ರೇಮಾ ಸದ್ಯ ಎರಡನೇ ಮದುವೆ ತಯಾರಿಯಲ್ಲಿದ್ದಾರೆ ಎಂದೂ ಹೇಳಲಾಗಿತ್ತು. ಈ ಎಲ್ಲ ವಿಷಯಗಳ ಕುರಿತು ಸ್ವತಃ ಪ್ರೇಮಾ ಅವರೇ ಸ್ಪಷ್ಟನೆ (clarification) ನೀಡಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಪ್ರೇಮಾ, ‘ಮದುವೆ ಬಗ್ಗೆ ಹಬ್ಬಿರುವ ಸುದ್ದಿ ಕೇವಲ ಗಾಸಿಪ್. ಎರಡನೇ ಮದುವೆ ವಿಚಾರ ಎಲ್ಲವೂ ಸುಳ್ಳು. ನಾನು ಹೊಸ ಹೊಸ ಕೆಲಸಗಳ ಬಗ್ಗೆ ಯೋಚನೆ ಮಾಡ್ತಿದ್ದಿನಿ. ಮದುವೆ ಸಮಯ ಬಂದಾಗ ಎಲ್ಲರಿಗೂ ತಿಳಿಸ್ತಿನಿ. ಕೊರಗಜ್ಜನ ದೇವಸ್ಥಾನಕ್ಕೆ ಭೇಟಿ ಕೊಟ್ಟಿದು ಮದುವೆ ವಿಚಾರವಾಗಿ ಅಲ್ಲ. ಸ್ನೇಹಿತೆಯ ಮದುವೆಗೆ ಹೋಗಿ ಅಲ್ಲಿಂದ ದೇವರ ದರ್ಶನ ಮಾಡಿ ಬಂದೆ. ಮದುವೆ ವಿಚಾರ ಸುಳ್ಳು’ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ವಿನಯ್ ರಾಜ್‌ಕುಮಾರ್‌ಗೆ ನಾಯಕಿಯಾದ `ವಿಕ್ರಮ್’ ನಟಿ ಸ್ವಾತಿಷ್ಟ ಕೃಷ್ಣನ್

    ಪ್ರೇಮಾ ಅವರ ಮದುವೆ ವಿಚಾರವಾಗಿ ಈ ರೀತಿ ಸುಳ್ಳು ಸುದ್ದಿ ಹರಡುತ್ತಿರುವುದು ಇದೇ ಮೊದಲೇನೂ ಅಲ್ಲ. ಈ ಹಿಂದೆಯೂ ಇಂಥದ್ದೊಂದು ಸುದ್ದಿ ಆಗಿತ್ತು. ರೇಡಿಯೋ ಜಾಕಿ ಜೊತೆ ಅವರು ಮದುವೆ ಆಗಲಿದ್ದಾರೆ ಎಂದು ಸುಳ್ಳು ಸುದ್ದಿಯನ್ನು ಹಬ್ಬಿಸಲಾಗಿತ್ತು. ಅದೆಲ್ಲವೂ ಸುಳ್ಳು ಎಂದು ರೇಡಿಯೋ ಜಾಕಿ ಅವರೇ ಉತ್ತರ ಕೊಟ್ಟಿದ್ದರು. ಇದೀಗ ಮತ್ತೆ ಎರಡನೇ ಮದುವೆ ವಿಚಾರ ಮುನ್ನೆಲೆಗೆ ಬಂದಿದೆ. ಈ ಕುರಿತು ಪ್ರೇಮಾ ಸ್ಪಷ್ಟನೆಯನ್ನೂ ಕೊಟ್ಟೂ ಆಗಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • 2ನೇ ಮದುವೆಗಾಗಿ ಕೊರಗಜ್ಜನಲ್ಲಿ ಪ್ರಾರ್ಥಿಸಿದ ನಟಿ ಪ್ರೇಮಾ

    2ನೇ ಮದುವೆಗಾಗಿ ಕೊರಗಜ್ಜನಲ್ಲಿ ಪ್ರಾರ್ಥಿಸಿದ ನಟಿ ಪ್ರೇಮಾ

    ಕೊಡಗಿನ ಬೆಡಗಿ ಪ್ರೇಮಾ (Prema) ಕೊರಗಜ್ಜನ (Koragajja) ಸನ್ನಿಧಿಯಲ್ಲಿ ಕಾಣಿಸಿಕೊಂಡಿದ್ದಾರೆ. ಕೊರಗಜ್ಜ ದೈವದ ಬಳಿ ಶೀಘ್ರ ಕಂಕಣ ಭಾಗ್ಯ ಕರುಣಿಸುವಂತೆ ಬೇಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಕಾಪು ಕೊರಗಜ್ಜ ಸನ್ನಿಧಿಗೆ ಬಂದಿದ್ದ ಪ್ರೇಮಾ, ಭಕ್ತಿಯಿಂದ ಎರಡನೇ ಮದುವೆಗೆ (Marriage) ಕರುಣಿಸು ಎಂದು ಪಾರ್ಥಿಸಿದ್ದಾರಂತೆ. ಖಾಸಗಿ ಕಾರ್ಯಕ್ರಮಕ್ಕೆಂದು ಬಂದಿದ್ದ ಅವರು, ಇದೇ ಸಂದರ್ಭದಲ್ಲಿ ಕೊರಗಜ್ಜ ಸನ್ನಿಧಿಗೂ ಭೇಟಿ ನೀಡಿದ್ದಾರೆ.

    ಈಗಾಗಲೇ ಅವರು ವರ ನೋಡಿದ್ದು ಅದೇ ವರನನ್ನು ಮದುವೆ ಮಾಡಿಸುವಂತೆ ಕೊರಗಜ್ಜನಲ್ಲಿ ಪ್ರೇಮಾ ಪ್ರಾರ್ಥನೆ ಸಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಉಡುಪಿ ಜಿಲ್ಲೆಯ ಕಾಪುವಿನ ಕೊರಗಜ್ಜ ದೈವ ಸನ್ನಿಧಾನಕ್ಕೆ ಭೇಟಿ ಕೊಟ್ಟ ನಂತರ ಅವರು ಕಾಪುವಿನ ಅಯ್ಯಪ್ಪ ದೇವಸ್ಥಾನಕ್ಕೂ ಭೇಟಿ ನೀಡಿದ್ದಾರೆ. ಪ್ರೇಮಾಗೆ ಸಹೋದರ ಅಯ್ಯಪ್ಪ ಹಾಗೂ ಅಯ್ಯಪ್ಪ ಪತ್ನಿ ಅನು ಕೂಡ ಜೊತೆಯಾಗಿದ್ದರು.

    ಪ್ರೇಮಾ 2016ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಹೊಂದಾಣಿಕೆಯ ಕಾರಣದಿಂದಾಗಿ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಚೇದನ ಪಡೆದಿದ್ದರು. ಆನಂತರ ಅವರು ರೆಡಿಯೋ ಜಾಕಿಯೊಬ್ಬರನ್ನು ಮದುವೆಯಾಗಿದ್ದಾರೆ ಎಂದು ಗಾಸಿಪ್ ಎದ್ದಿತ್ತು. ಅದಕ್ಕೆ ತೆರೆ ಕೂಡ ಎಳೆದಿದ್ದರು. ಇದೀಗ ಪ್ರೇಮಾ ಎರಡನೇ ಮದುವೆಗೆ ಸಜ್ಜಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಹಾಗಾಗಿ ದೈವದಲ್ಲಿ ಅವರು ಪ್ರಾರ್ಥಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕನ್ನಡದಲ್ಲಿ ಮತ್ತೊಂದು ದೈವದ ಸಿನಿಮಾ : ‘ಕರಿ ಹೈದ ಕರಿ ಅಜ್ಜ’ ಶೂಟಿಂಗ್ ಮುಕ್ತಾಯ

    ಕನ್ನಡದಲ್ಲಿ ಮತ್ತೊಂದು ದೈವದ ಸಿನಿಮಾ : ‘ಕರಿ ಹೈದ ಕರಿ ಅಜ್ಜ’ ಶೂಟಿಂಗ್ ಮುಕ್ತಾಯ

    ನಿರ್ಮಾಪಕ ತ್ರಿವಿಕ್ರಮ ಸಪಲ್ಯ ನಿರ್ಮಾಣದ ‘ಕರಿ ಹೈದ ಕರಿ ಅಜ್ಜ’ ಚಿತ್ರದ ಶೂಟಿಂಗ್ ಮುಕ್ತಾಯವಾಗಿದೆ. ಪವಾಡ ಪುರುಷ ಕೊರಗಜ್ಜ ಜೀವನಾಧಾರಿತ ಸಿನಿಮಾ ಇದಾಗಿದ್ದು, ಚಿತ್ರಕ್ಕೆ ಸುಧೀರ್ ಅತ್ತಾವರ್ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದಲ್ಲಿ ಬರುವ ಮುಖ್ಯ ಪಾತ್ರವೊಂದರಲ್ಲಿ ಹಾಲಿವುಡ್, ಬಾಲಿವುಡ್ ಹಾಗೂ ಫ್ರೆಂಚ್ ಸಿನಿಮಾಗಳ ನೃತ್ಯ ನಿರ್ದೇಶಕ, ಡ್ಯಾನ್ಸರ್, ನಟ ಸಂದೀಪ್ ಸೋಪರ್ಕರ್ ನಟಿಸಿದ್ದಾರೆ. ಈ ಚಿತ್ರದಲ್ಲಿ ಇವರು ಕೊರಗಜ್ಜನ ಜೊತೆ ಬರುವ ಗುಳಿಗನ್ ಪಾತ್ರ ನಿರ್ವಹಿಸಿದ್ದಾರೆ. ಅಂತರರಾಷ್ಟ್ರೀಯ ಈ ಕಲಾವಿದ ಇದೇ ಮೊದಲಬಾರಿಗೆ ಕನ್ನಡ ಸಿನಿಮಾವೊಂದರಲ್ಲಿ ನಟಿಸಿರುವುದು ವಿಶೇಷ.

    ಈ ಸಿನಿಮಾ ಬಗ್ಗೆ ಮಾಹಿತಿ ನೀಡಲು ಇತ್ತೀಚೆಗೆ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಚಿತ್ರದ ನಿರ್ದೇಶಕ ಸುಧೀರ್ ಅತ್ತಾವರ್ ‘ನಿನ್ನೆಯಷ್ಟೇ ಕೊರಗಜ್ಜ ಕೋಲು ಕೊಡುವ ಮೂಲಕ ‘ಕರಿ ಹೈದ ಕರಿ ಅಜ್ಜ’ ಚಿತ್ರದ ಶೂಟಿಂಗ್ ಮುಗಿಸಲಾಯಿತು. ಚಿತ್ರೀಕರಣ ಸಂದರ್ಭದಲ್ಲಿ ಸಾಕಷ್ಟು ಪವಾಡಗಳು ನಡೆದಿದ್ದು, ಎಲ್ಲರ ಅನುಭಕ್ಕೆ ಬಂದಿದೆ. ಇದು ಕೊರಗಜ್ಜ ಎಂದು ಕರೆಯುವ 22, 23 ವರ್ಷ ಬದುಕಿದ್ದ ಹುಡುಗನ ಕಥೆ. ಇದರಲ್ಲಿ ಹಾಲಿವುಡ್ ಕೋರಿಯೋಗ್ರಾಫರ್ ಹಾಗೂ ನಟ ಸಂದೀಪ್ ಸೋಪರ್ಕರ್ ಗುಳಿಗನ್ ಪಾತ್ರ ಮಾಡಿದ್ದಾರೆ. ಇದು ಕೊರಗಜ್ಜನ ಜೊತೆಗೆ ಸಾಗುತ್ತದೆ. ಗುಳಿಗನ್ ಪಾತ್ರವನ್ನು ಡ್ಯಾನ್ಸ್ ಬೇಸ್ ನಲ್ಲಿ ತೋರಿಸಲಾಗಿದ್ದು ಆ ಪಾತ್ರಕ್ಕೆ ಸಂದೀಪ್ ಅವರು ಸೂಕ್ತರಾಗಿದ್ದಾರೆ. ಈ ಮೊದಲು ಕೊರಗಜ್ಜನ ಬಗ್ಗೆ 7-8 ಜನ ಸಿನಿಮಾ ಮಾಡಲು ಪ್ರಯತ್ನ ಮಾಡಿದ್ರು ಆಗಿರಲಿಲ್ಲ. ನಮಗೆ ದೇವರ ಅಪ್ಪಣೆ ಸಿಕ್ಕಮೇಲೆ ಈ ಸಿನಿಮಾ ಮಾಡಲು ಮುಂದಾದೆವು. 12ನೇ ಶತಮಾನದ ಕಥೆ ಇದಾಗಿದ್ದು, ಚಿತ್ರದಲ್ಲಿ ಬುರ್ದಗೋಳಿ ಉತ್ಪತ್ತಿ ಕಲ್ಲು ಮುಖ್ಯವಾಗುತ್ತದೆ. ನಾವು ಈ ದೃಶ್ಯವನ್ನು ಸೋಮೇಶ್ವರದಲ್ಲಿ ಶೂಟ್ ಮಾಡುವ ಮೂಲಕ ಚಾಲನೆ ನೀಡಿದೆವು. ನಮಗೆಲ್ಲ ಶೂಟಿಂಗ್ ಸಂದರ್ಭದಲ್ಲಿ ಒಂದಿಷ್ಟು ಅನುಭವ ಆಗಿವೆ. ಈ ಸಿನಿಮಾವನ್ನು ನಾನು ಮಾಡಲಿಲ್ಲ. ಆ ದೈವ  ನನ್ನ ಕೈಲಿ ಮಾಡಿಸಿದ್ದಾರೆ. ನಮ್ಮ ಚಿತ್ರದಲ್ಲಿ ಭೈರಕ್ಕಿ ಪಾತ್ರ ಮುಖ್ಯವಾಗಿದ್ದು, ಭೈರಕ್ಕಿ ಕೊರಗಜ್ಜನ ಸಾಕು ತಾಯಿ. ಈ ಪಾತ್ರವನ್ನು ನಟಿ ಶ್ರುತಿ ನಿರ್ವಹಿಸಿದ್ದಾರೆ. ಇಂದು ಮಂಗಳೂರು ಕಡೆ ಮನೆ ಮನೆಯಲ್ಲಿ ಕೊರಗಜ್ಜನ ಆರಾಧಿಸುತ್ತಾರೆ. ಜನ ವಿಸ್ಕಿ, ಬ್ರಾಂದಿ, ಕೊರಗಜ್ಜಗೆ ನೀಡುತ್ತಿದ್ದು, ಅಂದಿನ ಕಾಲದಲ್ಲಿ ಇವುಗಳು ಇರಲಿಲ್ಲ. ಕಳ್ಳಬಟ್ಟಿ ಇತ್ತು. ದೇವರಿಗೆ ನಾವು ಎನೂ ಬೇಕಾದರೂ ಕೊಡಬಹುದು. ಇಂದಿನ ಜನ ವಿಸ್ಕಿ, ಬ್ರಾಂದಿ ಕೊಡುತ್ತಿರುವುದು ಕೊರಗ ಜನಾಂಗಕ್ಕೆ ಬೇಸರ ತಂದಿದೆ. ಈ ಚಿತ್ರದಲ್ಲಿ ಕೊರಗಜ್ಜನ ನೈಜ ಕಥೆ ಹೇಳಲಾಗಿದ್ದು, ಕಥೆಯನ್ನು ಕೊರಗ ಜನಾಂಗದಿಂದ ಕಲೆಕ್ಟ್ ಮಾಡಿ ಸಿನಿಮಾ ಮಾಡಲಾಗಿದೆ’ ಎಂದು ಹೇಳಿದರು. ಇದನ್ನೂ ಓದಿ: ಸಂಕ್ರಾಂತಿ ಸಂಭ್ರಮಕ್ಕಾಗಿ ಮತ್ತೆ ಜೊತೆಯಾದ ಬಿಗ್ ಬಾಸ್ ಸ್ಪರ್ಧಿಗಳು

    ನಂತರ ಮಾತನಾಡಿದ ಹಾಲಿವುಡ್ ನಟ ಸಂದೀಪ್ ಸೋಪರ್ಕರ್ ಮಾತನಾಡಿ ‘ಈ ಚಿತ್ರ ನಂಗೆ ಒಳ್ಳೆ ಅನುಭವ ನೀಡಿದೆ. ಈ ತಂಡ ಹಾಗೂ ಸಿನಿಮಾದಲ್ಲಿ ಕೆಲಸ ಮಾಡಿದ್ದು ತುಂಬಾ ಖುಷಿ ಕೊಟ್ಟಿದೆ. ಒಳ್ಳೆಯ ತಂಡ ಇದಾಗಿದ್ದು ಅದ್ಭುತ ಕೆಲಸ ಮಾಡಿದೆ. ನಾನು ಮಾಡಿರುವ ಪಾತ್ರ ಅದ್ಭುತವಾಗಿದ್ದು ಹೊಸ ರೀತಿಯಲ್ಲಿ ಅನುಭವ ನೀಡಿತು. ಈ ಪಾತ್ರವನ್ನು ನಾನು ನನ್ನ ಸಿಸ್ಟರ್ಸ್ ಜೊತೆಗೆ ರೀಸರ್ಚ್ ಮಾಡಿ ಮಾಡಿದ್ದೇನೆ. ಒಳ್ಳೆ ರೀತಿ ಶೂಟಿಂಗ್ ಆಯ್ತು. ಈ ಪಾತ್ರ ಮಾಡಿದ್ದು ಖುಷಿ ಇದ್ದು, ಇದರಲ್ಲಿ ನಾನು ಡ್ಯಾನ್ಸ್ ಜೊತೆ ನಟನೆ ಕೂಡ ಮಾಡಿದ್ದೇನೆ. ಶೂಟಿಂಗ್ ಮಾಡುವ ಸಂದರ್ಭದಲ್ಲಿ ಸಾಕಷ್ಟು ಜನ ಗಲಾಟೆ ಮಾಡಿ 2 ದಿನ ಶೂಟಿಂಗ್ ನಿಂತಿತು. ನಂತರ ನಿರ್ದೇಶಕ, ನಿರ್ಮಾಪಕರು ಕಷ್ಟಪಟ್ಟು ಶೂಟಿಂಗ್ ಮಾಡಿಸಿದರು. ಮೊದಲಬಾರಿಗೆ ಜಾನಪದ ಶೈಲಿಯಲ್ಲಿ ಡ್ಯಾನ್ಸ್ ಮಾಡಿದ್ದು ಶಿವನ ನೃತ್ಯ ಮಾಡಿರುವ ಒಳ್ಳೆ ಅನುಭವ ಮರೆಯಲಾಗದು’ ಎಂದರು. ಕೊರಗಜ್ಜನ ಸಾಕು ತಾಯಿ ಪಾತ್ರ ನಿರ್ವಹಿಸಿರುವ ನಟಿ ಶ್ರುತಿ ಮಾತನಾಡಿ, ‘ಈ ಸಿನಿಮಾ ನನ್ನ ಮನಸ್ಸಿನಲ್ಲಿ ವಿಷೇಶವಾದ ಸ್ಥಾನ ಪಡೆಯುತ್ತದೆ. ನಾನಿಲ್ಲಿ ಭೈರಕ್ಕಿ ಪಾತ್ರ ಮಾಡಿದ್ದೇನೆ. ದೈವದ ಕಥೆ ಅದ್ಭುತವಾಗಿ ಇದ್ದು ಈ ಕಥೆಯನ್ನು ಹೆಕ್ಕಿ ತೆಗೆದ ನಿರ್ದೇಶಕರ ಧೈರ್ಯ ಮೆಚ್ಚಬೇಕು. ಚಿತ್ರಕ್ಕಾಗಿ ನಿರ್ಮಾಪಕರು ಕೋಟಿ ಕೋಟಿ ಹಣ ಖರ್ಚು ಮಾಡಿದ್ದಾರೆ. ಯಾರಿಗೂ ಸಿಗದೆ ಇರುವ ಅವಕಾಶ ಈ ತಂಡಕ್ಕೆ ಸಿಕ್ಕಿದೆ. ಇದರಲ್ಲಿ ಬರುವ ಪ್ರತಿಯೊಬ್ಬರ ಪಾತ್ರ ಪೇಂಟಿಂಗ್ ತರಾ ಇದ್ದು ನಿರ್ದೇಶಕರು ಅಷ್ಟು ತಯಾರಿ ಮಾಡಿಕೊಂಡು ಸಿನಿಮಾ ಮಾಡಿದ್ದಾರೆ. ಭೈರಕ್ಕಿ ಕೊರಗಜ್ಜ ಸಾಕು ತಾಯಿ 2 ಸೇಡ್ ಪಾತ್ರಕ್ಕಿದೆ. ಇದರಲ್ಲಿ ಕೊರಗಜ್ಜಗೆ ತನಿಯಾ/ ಕಾಂತಾರೆ ಹೆಸರು. ನಾನು ಕಳ್ಳಬಟ್ಟಿ ಮಾರುತ್ತಿರುತ್ತೇನೆ. ಇದರಲ್ಲಿ ತಾಯಿ ಮಗನ ಬಾಂಧವ್ಯವನ್ನು ಅದ್ಭುತವಾಗಿ ತೋರಿಸಲಾಗಿದೆ. ನಮ್ಮ ಜೊತೆ ಸಾಕಷ್ಟು ರಂಗಭೂಮಿ ಕಲಾವಿದರು ಇದರಲ್ಲಿ ನಟನೆ ಮಾಡಿದ್ದಾರೆ. ನಾನು ಈ ಸಿನಿಮಾ ಮಾಡಿದ್ದು ಧನ್ಯತಾ ಭಾವ ಇದೆ’ ಎಂದರು.

    ಇದೇ ಸಂದರ್ಭದಲ್ಲಿ ಮಾತನಾಡಿದ ಮತ್ತೋರ್ವ ನಟಿ ಭವ್ಯ ‘ಈ ಚಿತ್ರದಲ್ಲಿ ನಾನು ವಿಷೇಶವಾದ ಪಾತ್ರ ಮಾಡಿದ್ದು, ಶೂಟಿಂಗ್ ಮಾಡುವಾಗ ಮಿರಾಕಲ್ ಆಗತಾ ಇತ್ತು. ಒಂದು ದೃಶ್ಯದಲ್ಲಿ ಗ್ಲಿಸರಿನ್ ಇಲ್ಲದೆ ಅತ್ತಿದ್ದೇನೆ ಕೂಡ’ ಎಂದು ತಮ್ಮ ಶೂಟಿಂಗ್ ಅನುಭವ ಹಂಚಿಕೊಂಡರು. ಚಿತ್ರದ ನಿರ್ಮಾಪಕ ತ್ರಿವಿಕ್ರಮ ಸಪಲ್ಯ ‘ತುಳು ನಾಡ ಜನರ ಸಂಸ್ಕೃತಿ ತೋರಿಸುವ ಆಸೆ ಇತ್ತು. ಅದು ಈ ಚಿತ್ರದ ಮೂಲಕ ಇಡೇರಿದೆ. ಸೋಮೇಶ್ವರ, ಉಲ್ಲಾಳ, ಮಡನ್ ತ್ಯಾರ್ ಮುಂತಾದ ಸ್ಥಳದಲ್ಲಿ ಶೂಟಿಂಗ್ ಮಾಡಲಾಗಿದ್ದು ಚಿತ್ರೀಕರಣ ಮುಕ್ತಾಯವಾಗಿದೆ. ಚಿತ್ರವನ್ನು ಮೇ ನಲ್ಲಿ ರಿಲೀಸ್ ಮಾಡುವ ಪ್ಲ್ಯಾನ್ ಇದೆ’ ಎನ್ನುವರು. ಚಿತ್ರದಲ್ಲಿ ಪ್ರಮುಖ ಪ್ರಾತ್ರವೊಂದರಲ್ಲಿ ಬಾಲಿವುಡ್ ನಟ ಕಬೀರ್ ಬೇಡಿ ನಟಿಸಿದ್ದಾರೆ. ನಾಯಕನಾಗಿ ಭರತ್ ಸೂರ್ಯ ನಟನೆ ಮಾಡಿದ್ದು, ಇವರು ಸಿನಿಮಾ ಶೂಟಿಂಗ್ ಮುಗಿಯುವ ವರೆಗೆ ಕಾಲಿಗೆ ಚಪ್ಪಲಿ ಹಾಕಿಲ್ಲವಂತೆ. ಇನ್ನು ನಾಯಕಿಯಾಗಿ ವೃತಿಕಾ ಅಭಿನಯಿಸಿದ್ದಾರೆ. ಚಿತ್ರವನ್ನು ಏಕಕಾಲದಲ್ಲಿ ಕನ್ನಡ, ತುಳು ಹಾಗೂ ಮಲಯಾಳಂ ಭಾಷೆಯಲ್ಲಿ ತಯಾರಿಸಲಾಗುತ್ತಿದೆ. ಧ್ರತಿ ಕ್ರಿಯೇಷನ್ಸ್ ಹಾಗೂ ಸಕ್ಸಸ್ ಫಿಲಂಸ್ ಬ್ಯಾನರ್ ನಲ್ಲಿ ಈ ನಿರ್ಮಾಣ ಮಾಡಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಬಿಗ್ ಬಾಸ್ ಗೆಲುವಿಗೆ ಕೊರಗಜ್ಜನ ಆಶೀರ್ವಾದವೇ ಕಾರಣ: ರೂಪೇಶ್ ಶೆಟ್ಟಿ

    ಬಿಗ್ ಬಾಸ್ ಗೆಲುವಿಗೆ ಕೊರಗಜ್ಜನ ಆಶೀರ್ವಾದವೇ ಕಾರಣ: ರೂಪೇಶ್ ಶೆಟ್ಟಿ

    ಬಿಗ್ ಬಾಸ್ ಸೀಸನ್ 9ರ ವಿನ್ನರ್ (Bigg Boss Kannada 9) ಆಗಿ ರೂಪೇಶ್ ಶೆಟ್ಟಿ ಹೊರಹೊಮ್ಮಿದ್ದಾರೆ. ರೂಪೇಶ್ ಆಟಕ್ಕೆ ಇಡೀ ಕರ್ನಾಟಕ ಜನತೆಯ ಮೆಚ್ಚುಗೆ ಸೂಚಿಸಿದ್ದಾರೆ. ತಾಯ್ನಾಡು ಮಂಗಳೂರಿಗೆ ಕಾಲಿಟ್ಟಿರುವ ರೂಪೇಶ್, ತಮ್ಮ ಗೆಲುವನ್ನು ಕೊರಗಜ್ಜನ ದೇವರಿಗೆ ಸಮರ್ಪಿಸಿದ್ದಾರೆ. ಕೊರಗಜ್ಜನ (Koragajja) ಸನ್ನಿಧಾನಕ್ಕೆ ರೂಪೇಶ್‌ ಭೇಟಿ ನೀಡಿದ್ದಾರೆ.

    ಒಟಿಟಿಯಿಂದ ಟಿವಿ ಬಿಗ್ ಬಾಸ್ ಶೋನ ವಿನ್ನರ್ ಆಗಿ ರೂಪೇಶ್ ಶೆಟ್ಟಿ (Roopesh Shetty) ಜಯಭೇರಿ ಬಾರಿಸಿದ್ದಾರೆ. ಮಂಗಳೂರಿಗೆ (Mangalore) ಅದ್ದೂರಿಯಾಗಿ ಎಂಟ್ರಿ ಕೂಡ ಪಡೆದಿದ್ದಾರೆ. ಈ ವೇಳೆ ಬಿಗ್ ಬಾಸ್ ಗೆಲುವಿನ ಬಗ್ಗೆ ಮಾತನಾಡಿದ್ದಾರೆ. ನಾನು ಕೊರಗಜ್ಜ ದೇವರನ್ನು ತುಂಬ ಆರಾಧನೆ ಮಾಡುತ್ತೇನೆ. ಬಿಗ್ ಬಾಸ್ ಮನೆಯಲ್ಲಿ ಟಾಸ್ಕ್ ಆಡುವಾಗ ಕೊರಗಜ್ಜನ ಹೆಸರು ಹೇಳುತ್ತಿದ್ದೆ. ನಾನು ಗೆಲ್ಲುವುದು ಬೇಡ, ಕನಿಷ್ಠ ಪಕ್ಷ ಟಾಪ್ 5ರಲ್ಲಿ ಬಂದರೂ ಕೂಡ ಮೊದಲು ಹೋಗುವುದು ಕೊರಗಜ್ಜ ಕ್ಷೇತ್ರಕ್ಕೆ ಅಂದುಕೊಂಡಿದ್ದೆ. ಆದರೆ ಬಿಗ್ ಬಾಸ್‌ನಲ್ಲಿ ನನ್ನನ್ನು ಅವರೇ ಗೆಲ್ಲಿಸಿದ್ದಾರೆ ಎಂದು ರೂಪೇಶ್ ಶೆಟ್ಟಿ ಹೇಳಿದ್ದಾರೆ. ಇದನ್ನೂ ಓದಿ: ವಿಜಯ್ ವರ್ಮಾ ಜೊತೆಗಿನ ಡೇಟಿಂಗ್ ಸುದ್ದಿ ಬೆನ್ನಲ್ಲೇ ಗುಡ್ ನ್ಯೂಸ್ ಕೊಟ್ರು ತಮನ್ನಾ

    ಕರಾವಳಿ ಮಂಗಳೂರಿಗೆ ಬಂದ ರೂಪೇಶ್ ಶೆಟ್ಟಿಗೆ ಹುಲಿ ವೇಷದ ಕಲಾವಿದರು ಸ್ವಾಗತ ಕೋರಿದ್ದಾರೆ. ಅದು ಅವರಿಗೆ ಹೆಚ್ಚು ಸಂತಸ ತಂದಿದೆ. ಆ ಬಗ್ಗೆಯೂ ಅವರು ಮಾತನಾಡಿದ್ದಾರೆ. ಚಿಕ್ಕ ವಯಸ್ಸಿನಿಂದಲೂ ನನಗೆ ಹುಲಿ ವೇಷ ಎಂದರೆ ಇಷ್ಟ. ತುಳುನಾಡಿನ ಈ ಸಂಸ್ಕೃತಿಕ ಕಲೆಯನ್ನು ಬಿಗ್ ಬಾಸ್ ಮನೆಯಲ್ಲಿ ಪ್ರದರ್ಶನ ಮಾಡಲು ಅವಕಾಶ ಸಿಕ್ಕಿತು. ಇಲ್ಲಿಯೂ ಹುಲಿವೇಷವನ್ನು ನನ್ನ ಸ್ನೇಹಿತರು ಪ್ಲ್ಯಾನ್ ಮಾಡಿದ್ದಾರೆ. ನಾನು ಇದನ್ನು ನಿರೀಕ್ಷಿಸಿರಲಿಲ್ಲ ಎಂದಿದ್ದಾರೆ. ತಾವು ಗೆದ್ದಿರುವ ಹಣದಲ್ಲಿ ಕೊರಗಜ್ಜ ದೈವಕೋಲ ಮಾಡಿಸುವುದಾಗಿ ಹೇಳಿಕೊಂಡಿದ್ದಾರೆ. ಸದ್ಯದಲ್ಲೇ ದೈವಾರಾಧನೆ ಕಾರ್ಯರೂಪಕ್ಕೆ ಬರಲಿದೆ.

    ಬಿಗ್ ಬಾಸ್‌ನ ಗೆಲುವಿನ ಸಕ್ಸಸ್ ನಂತರ ರೂಪೇಶ್ ಶೆಟ್ಟಿಗೆ ಸಾಲು ಸಾಲು ಸಿನಿಮಾ ಅವಕಾಶಗಳು ಅರಸಿ ಬರುತ್ತಿದೆ. ತುಳು, ಕನ್ನಡ, ತೆಲುಗು ಸಿನಿಮಾಗಳಲ್ಲೂ ರೂಪೇಶ್ ಕಾಣಿಸಿಕೊಳ್ಳಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕೊರಗಜ್ಜನ ಸಿನಿಮಾದಲ್ಲಿ ಕಾಣಿಸಿಕೊಂಡ ಬಾಲಿವುಡ್ ನಟ ಕಬೀರ್ ಬೇಡಿ

    ಕೊರಗಜ್ಜನ ಸಿನಿಮಾದಲ್ಲಿ ಕಾಣಿಸಿಕೊಂಡ ಬಾಲಿವುಡ್ ನಟ ಕಬೀರ್ ಬೇಡಿ

    ದ್ರತಿ ಕ್ರಿಯೇಷನ್ಸ್ ಮತ್ತು ಸಕ್ಸಸ್ ಫಿಲ್ಮ್ಸ್ ಬ್ಯಾನರ್ ಅಡಿ ತ್ರಿವಿಕ್ರಮ್ ಸಪಲ್ಯ  ನಿರ್ಮಿಸುತ್ತಿರುವ,  ಸುಧೀರ್ ಅತ್ತಾವರ್ ನಿರ್ದೇಶನದ  “ಕರಿ ಹೈದ….ಕರಿ ಅಜ್ಜ …”.ಸಿನೆಮಾದಲ್ಲಿ ಅಂತರರಾಷ್ಟ್ರೀಯ ಖ್ಯಾತಿಯ ಹಾಲಿವುಡ್ ಹಾಗೂ ಬಾಲಿವುಡ್ ನಟ ಕಬೀರ್ ಬೇಡಿ ನಟಿಸಿದ್ದಾರೆ. ಯುರೋಪಿನಾದ್ಯಂತ ಪ್ರಸಿದ್ದಿ ಪಡೆದ ” ಸಂದೀಕನ್” ಟಿವಿ ಸೀರಿಸ್ ನಲ್ಲಿ ನಟಿಸಿರುವ ಕಬೀರ್ ಬೇಡಿ, ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದಾರೆ.  “ಕರಿ ಹೈದ ಕರಿ ಅಜ್ಜ” ಚಿತ್ರದ ತಮ್ಮ ಪಾತ್ರದ ಬಗ್ಗೆ “ಕಬೀರ್ ಬೇಡಿ” ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದಾರೆ.

    ಸುಧೀರ್ ಅತ್ತಾವರ್ ನಿರ್ದೇಶಿಸಿರುವ ಈ ಚಿತ್ರದಲ್ಲಿ ನಟಿಸಿದ್ದು ಖುಷಿಯಾಗಿದೆ. “ಕೊರಗಜ್ಜ” ದೈವದ ಕುರಿತಾದ ಈ ಚಿತ್ರದಲ್ಲಿ ರಾಜನ ಪಾತ್ರ ನನ್ನದು. ಶೃತಿ, ಭವ್ಯ, ಭರತ್ ಸೂರ್ಯ ಮುಂತಾದ ಕಲಾವಿದರ ಜೊತೆ ಅಭಿನಯಿಸಿದ್ದ ಅನುಭವವನ್ನು ಹಂಚಿಕೊಂಡ ಕಬೀರ್ ಬೇಡಿ, ಬೆಂಗಳೂರಿನ ನೃತ್ಯ ಗ್ರಾಮಕ್ಕೆ ಬರುತ್ತಿದ್ದುದ್ದನ್ನು ಹಾಗೂ ಗಿರೀಶ್ ಕಾರ್ನಾಡ್ ಅವರ ಜೊತೆಗಿನ ಒಡನಾಟವನ್ನು ನೆನಪಿಸಿಕೊಂಡರು.‌ ಇದನ್ನೂ ಓದಿ:  ಹಿರಿಯ ನಿರ್ದೇಶಕ ಭಗವಾನ್ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆಗೆ ದಾಖಲು

    ಈಗಾಗಲೇ ಚಿತ್ರದ ಬಹುತೇಕ ಚಿತ್ರೀಕರಣ ಪೂರ್ಣವಾಗಿದೆ. ಬೆಳ್ತಂಗಡಿ ಆಸುಪಾಸಿನಲ್ಲೇ ಹೆಚ್ಚು ಚಿತ್ರೀಕರಣವಾಗಿದೆ. ನಿರ್ಮಾಪಕ ತ್ರಿವಿಕ್ರಮ ಸಪಲ್ಯ ಅವರ ಕುಟುಂಬದವರಿಗೆ “ಕೊರಗಜ್ಜ”ನ ಕುರಿತಾದ ಚಿತ್ರ ಮಾಡುವ ಹಂಬಲವಿತ್ತು. ಈ ಕಥೆ ಮೆಚ್ಚಿ ಅವರು ನಿರ್ಮಾಕ್ಕೆ ಮುಂದಾದರು. .  ಕೊರಗಜ್ಜನ ಜೀವನದ ಬಗ್ಗೆ ಸಾಕಷ್ಟು ಮಾಹಿತಿಗಳನ್ನು ಕಲೆ ಹಾಕಿ, ಕೊರಗಜ್ಜನ ಜನಾಂಗದ ಮಹನೀಯರೊಂದಿಗೆ ಚರ್ಚೆ ಮಾಡಿ   12ನೇ ಶತಮಾನದಲ್ಲಿದ್ದ ಕೊರಗಜ್ಜನ ಬಗ್ಗೆ ಯಾರಿಗೂ ಗೊತ್ತಿರದ ನಿಜ ಬದುಕಿನ ವಿಷಯವನ್ನು ತಿಳಿಸುವ ಪ್ರಯತ್ನ ಈ ಚಿತ್ರದ ಮೂಲಕ ಮಾಡುತ್ತಿದ್ದೇವೆ. ಭರತ್ ಸೂರ್ಯ “ಕೊರಗಜ್ಜ” ನ ಪಾತ್ರದಲ್ಲಿ ಕಾಣಿಸಿಕೊಳುತ್ತಿದ್ದಾರೆ. ಕಬೀರ್ ಬೇಡಿ, ಶೃತಿ, ಭವ್ಯ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ವಿದ್ಯಾಧರ್ ಶೆಟ್ಟಿ ಸಂಕಲನದ ಜೊತೆಗೆ  ಇತಿಹಾಸದ ದಾಖಲೆ ಮತ್ತು ಪುರಾವೆಗಳನ್ನು ಕಲೆ ಹಾಕಿದ್ದಾರೆ.  ಪವನ್ ವಿ ಕುಮಾರ್ ಮತ್ತು ಗಣೇಶ್ ಕೆಳಮನೆ ಛಾಯಾಗ್ರಹಣ, ಸುಧೀರ್- ಕೃಷ್ಣ ರವಿ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ ಎಂದು ಮಾಹಿತಿ ನೀಡಿದ ನಿರ್ದೇಶಕ ಸುಧೀರ್ ಅತ್ತಾವರ್, ಕಲಾ‌ ನಿರ್ದೇಶನವನ್ನು ತಾವೇ ಮಾಡಿರುವುದಾಗಿ ಹೇಳಿದರು.

    ನಮ್ಮ ಕುಟುಂಬದವರಿಗೆ “ಕೊರಗಜ್ಜ” ನ ಮೇಲೆ ವಿಶೇಷ ಭಕ್ತಿ. ಹಾಗಾಗಿ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದೇವೆ. ಚಿತ್ರತಂಡದ ಪ್ರೋತ್ಸಾಹದಿಂದ ಚಿತ್ರ ಉತ್ತಮವಾಗಿ ಮೂಡಿ ಬರುತ್ತಿದೆ. ಅಂದುಕೊಂಡಂತೆ ಆದರೆ, ಏಪ್ರಿಲ್ ಅಥವಾ ಮೇ ನಲ್ಲಿ ಚಿತ್ರ ತೆರೆಗೆ ಬರಲಿದೆ ಎಂದರು ನಿರ್ಮಾಪಕ ತ್ರಿವಿಕ್ರಮ ಸಪಲ್ಯ. ಕಬೀರ್ ಬೇಡಿ ಅವರಂತಹ ಮಹಾನ್ ನಟನ ಜೊತೆ ಅಭಿನಯಿಸಿದ್ದು ತುಂಬಾ ಸಂತೋಷವಾಗಿದೆ. ನಾನು ಈ ಚಿತ್ರದಲ್ಲಿ ರಾಣಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಸುಧೀರ್ ಅತ್ತಾವರ್ ಒಳ್ಳೆಯ ಚಿತ್ರ ನಿರ್ದೇಶಿಸುತ್ತಿದ್ದಾರೆ. ನಿಮ್ಮೆಲ್ಲರ ಬೆಂಬಲವಿರಲಿ ಎಂದರು ಹಿರಿಯ ನಟಿ ಭವ್ಯ.

    Live Tv
    [brid partner=56869869 player=32851 video=960834 autoplay=true]