ತುಮಕೂರು: ಗಂಡನ ಕಿರುಕುಳಕ್ಕೆ (Harassment) ಬೇಸತ್ತ ಗೃಹಿಣಿ ನೇಣಿಗೆ ಶರಣಾದ ಘಟನೆ ತುಮಕೂರು (Tumakuru) ನಗರದಲ್ಲಿ ನಡೆದಿದೆ.
23 ವರ್ಷದ ಸುಷ್ಮಿತಾ ಮೃತ ದುರ್ದೈವಿ. ರಾಮನಗರ ಜಿಲ್ಲೆಯ ಮಾಗಡಿಯ ಸುಷ್ಮಿತಾ ಕೊರಟಗೆರೆ (Koratagere) ಮೂಲದ ಮೋಹನ್ನನ್ನು ಕಳೆದ ಒಂದೂವರೆ ವರ್ಷದ ಹಿಂದೆ ಮದುವೆಯಾಗಿದ್ದರು. ತುಮಕೂರಿನ ಮಹೇಂದ್ರ ಶೋ ರೂಂನಲ್ಲಿ ಕೆಲಸ ಮಾಡುತ್ತಿರುವ ಮೋಹನ್ ಹಣ ಮತ್ತು ಸೈಟ್ಗಾಗಿ ಪತ್ನಿಯನ್ನು ಪೀಡಿಸುತಿದ್ದ ಎನ್ನಲಾಗಿದೆ. ಗಂಡ ಮೋಹನ್, ಅತ್ತೆ ಮತ್ತು ಮಾವನ ಜೊತೆ ಸೇರಿ ಕೊಲೆ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಇದನ್ನೂ ಓದಿ: ಪರಪ್ಪನ ಅಗ್ರಹಾರ ಜೈಲಲ್ಲಿ ಗಂಟೆಗಟ್ಟಲೆ ಕಾದು ದರ್ಶನ್ ಭೇಟಿಯಾದ ವಿಜಯಲಕ್ಷ್ಮಿ
– ನಾಲ್ವರು ಆರೋಪಿಗಳು ಅಂದರ್ – ಕೊಲೆ ಬಳಿಕ ಧರ್ಮಸ್ಥಳ ಯಾತ್ರೆಗೆ ತೆರಳಿದ್ದ ಆರೋಪಿಗಳು
ತುಮಕೂರು: ಜಿಲ್ಲೆಯ ಕೊರಟಗೆರೆಯಲ್ಲಿ (Koratagere) ಮಹಿಳೆಯನ್ನು ಕೊಲೆ ಮಾಡಿ ಮೃತ ದೇಹ ತುಂಡರಿಸಿದ್ದ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಮೃತ ಲಕ್ಷ್ಮೀದೇವಮ್ಮಳ ಅಳಿಯನೇ (Son In Law) ಈ ಕೃತ್ಯ ನಡೆಸಿರೋದು ಬೆಳಕಿಗೆ ಬಂದಿದೆ.
ವೃತ್ತಿಯಲ್ಲಿ ದಂತ ವೈದ್ಯನಾಗಿರುವ (Dentist) ಡಾ. ರಾಮಚಂದ್ರ ತನ್ನ ಸ್ನೇಹಿತ ಸತೀಶ್ ಹಾಗೂ ಕಿರಣನ ಜೊತೆ ಸೇರಿ ಹತ್ಯೆ ಮಾಡಿದ್ದಾನೆ. ಮೃತ ಲಕ್ಷ್ಮೀದೇವಮ್ಮ ತನ್ನ ಮಗಳನ್ನೇ ವೇಶ್ಯಾವಾಟಿಕೆಯಲ್ಲಿ ತೊಡಗಿಸಿಕೊಳ್ಳುವಂತೆ ಪ್ರಚೋದಿಸುತಿದ್ದಳು ಎಂಬ ಆರೋಪ ಇದೆ. ಇದನ್ನು ಸಹಿಸದ ಅಳಿಯ ಡಾ.ರಾಮಚಂದ್ರ ಅತ್ತೆಯನ್ನೇ ಕೊಲೆ ಮಾಡಿದ್ದಾನೆ. ಕೋಳಾಲದಲ್ಲಿ ಇರುವ ಸ್ನೇಹಿತ ಸತೀಶ್ ಎಂಬಾತನ ಫಾರ್ಮ್ ಹೌಸ್ನಲ್ಲಿ ಕೊಲೆ ಮಾಡಿ ದೇಹದ ಭಾಗಗಳನ್ನು ಪೀಸ್ ಪೀಸ್ ಮಾಡಿ ಎಸೆಯಲಾಗಿತ್ತು. ಬಳಿಕ ಆರೋಪಿಗಳು ಧರ್ಮಸ್ಥಳ ಯಾತ್ರೆಗೆ ಹೋಗಿದ್ದರು. ಇದನ್ನೂ ಓದಿ: ರಾಜ್ಯದಲ್ಲಿ ಇಂದಿನಿಂದ 5 ದಿನ ಭಾರೀ ಮಳೆ ಮುನ್ಸೂಚನೆ
ಅತ್ತೆಯ ಕೊಲೆ ಆದರೂ ಅಳಿಯ ಸ್ಥಳದಲ್ಲಿ ಇಲ್ಲದಿರುವುದಕ್ಕೆ ಅನುಮಾನಗೊಂಡ ಪೊಲೀಸರು ವಿಚಾರಣೆ ಮಾಡಿದ್ದಾರೆ. ಆಗ ಕೃತ್ಯ ಬೆಳಕಿಗೆ ಬಂದಿದೆ. ಸದ್ಯ ಕೊರಟಗೆರೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಪಂಚಾಯತ್ ರಾಜ್ ಇಲಾಖೆಯ ಹಿರಿಯ ಸಹಾಯಕಿಗೆ 45,000 ರೂ. ಸೈಬರ್ ವಂಚನೆ
ತುಮಕೂರು: ಚಾಲಕನ ನಿಯಂತ್ರಣ ತಪ್ಪಿ ಬ್ಯಾಂಗಲ್ ಸ್ಟೋರ್ (Bangle Store) ಹಾಗೂ ಬೇಕರಿಗೆ ಲಾರಿ ನುಗ್ಗಿದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಐವರು ಗಾಯಗೊಂಡಿರುವ ಘಟನೆ ತುಮಕೂರು (Tumakuru) ಜಿಲ್ಲೆ ಕೊರಟಗೆರೆ (Koratagere) ತಾಲೂಕಿನ ಕೋಳಾಲ ಸರ್ಕಲ್ನಲ್ಲಿ ನಡೆದಿದೆ.
ಕಾಟೇನಹಳ್ಳಿ ಗ್ರಾಮದ ರಂಗಧಾಮಯ್ಯ (65), ಪುರದಹಳ್ಳಿ ಗ್ರಾಮದ ಭೈಲಪ್ಪ (65), ಕೋಳಾಲದ ಮಂಜುನಾಥ್ (44) ಮೃತರು. ತುಮಕೂರು ಕಡೆಯಿಂದ ಗೊಬ್ಬರ ತುಂಬಿದ ಲಾರಿ ಹಾರೋಡಿ ಕಡೆಗೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಲಾರಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಐವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ಬಳಿಕ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಲಾರಿ ಇನ್ಶೂರೆನ್ಸ್ ಹಾಗೂ ಫಿಟ್ನೆಸ್ ಲ್ಯಾಪ್ಸ್ ಹಿನ್ನೆಲೆ ಕೋಳಾಲ ಪೊಲೀಸರು ಲಾರಿಯನ್ನ ವಶಕ್ಕೆ ಪಡೆದಿದ್ದಾರೆ. ಘಟನೆ ಸಂಬಂಧ ಕೋಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತುಮಕೂರು: 2008ರಲ್ಲಿ ನಾನು ಕ್ಷೇತ್ರಕ್ಕೆ ಬಂದಾಗ ನೀಡಿದ್ದ ನೀರಾವರಿ ಭರವಸೆ ಈಡೇರಿಸಿದ್ದೇನೆ. ಬೂಟಾಟಿಕೆಯ ರಾಜಕಾರಣ ಮಾಡಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ (G Parameshwar) ಹೇಳಿದರು.
ಕೊರಟಗೆರೆ (Koratagere) ತಾಲೂಕಿನ ಗೊರವನಹಳ್ಳಿ ಬಳಿ ಸಣ್ಣ ನೀರಾವರಿ ಇಲಾಖೆಯಿಂದ ನಡೆದ ಎತ್ತಿನಹೊಳೆ (Ettinahole) ಯೋಜನೆಯಡಿ ತಾಲೂಕಿನ 62 ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿ ಶಂಕುಸ್ಥಾಪನೆ ಹಾಗೂ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಇದನ್ನೂ ಓದಿ: Uttar Pradesh | ಅಳಿಯನ ತಂದೆಯೊಂದಿಗೆ 4 ಮಕ್ಕಳ ತಾಯಿ ಪರಾರಿ
ತುಮಕೂರು: ಕೆಎಸ್ಆರ್ಟಿಸಿ (KSRTC) ಬಸ್-ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಯುಗಾದಿ (Ugadi) ಹಬ್ಬಕ್ಕೆಂದು ಊರಿಗೆ ತೆರಳುತ್ತಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಚಿಕ್ಕಪಾಲನಹಳ್ಳಿ ಗೇಟ್ ಬಳಿ ನಡೆದಿದೆ.
ತುಮಕೂರು: ಗೃಹ ಸಚಿವ ಜಿ.ಪರಮೇಶ್ವರ್ (G Parameshwar) ಕೊರಟಗೆರೆ (Koratgere) ಕ್ಷೇತ್ರಕ್ಕಿಂತ ತುಮಕೂರು ನಗರ ಕ್ಷೇತ್ರದ ಮೇಲೆ ಹೆಚ್ಚಿನ ಕಾಳಜಿ ತೋರಿಸುತ್ತಿದ್ದಾರೆ. ಬರಪೂರ ಅನುದಾನಗಳನ್ನು ತಂದು ಅಭಿವೃದ್ಧಿ ಮಾಡುವಲ್ಲಿ ಗಮನ ಕೇಂದ್ರೀಕೃತಗೊಳಿಸಿದ್ದಾರೆ. ಜಿ.ಪರಮೇಶ್ವರ್ ಅವರ ಈ ಅಭಿವೃದ್ಧಿ ಹಿಂದೆ ಹೊಸ ರಾಜಕೀಯ ಲೆಕ್ಕಾಚಾರ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ.
ತುಮಕೂರು (Tumakuru) ನಗರ ಕ್ಷೇತ್ರದ ಶಾಸಕ ಜ್ಯೋತಿಗಣೇಶ್ ಗೈರಿನಲ್ಲಿ ಸಚಿವ ಜಿ.ಪರಮೇಶ್ವರ್ ಅಭಿವೃದ್ಧಿ ಕಾರ್ಯದ ಬಗ್ಗೆ ಹೇಳುತ್ತಿದ್ದಾರೆ. ತಮ್ಮ ಸ್ವಕ್ಷೇತ್ರ ಕೊರಟಗೆರೆಗಿಂತ ತುಮಕೂರು ನಗರ ಕ್ಷೇತ್ರದ ಬಗ್ಗೆ ಸಚಿವರು ಹೆಚ್ಚು ಮುತುವರ್ಜಿ ವಹಿಸುತಿದ್ದಂತೆ ಕಾಣುತ್ತಿದೆ. ಈ ಕಾಳಜಿ ಹಿಂದೆ ಹೊಸ ರಾಜಕೀಯ ಲೆಕ್ಕಾಚಾರ ಇದೆ ಎಂಬ ವಿಶ್ಲೇಷಣೆ ಶುರುವಾಗಿದೆ. ಇದನ್ನೂ ಓದಿ: ಬೆಳಗಾವಿ ನಗರ ಪಾಲಿಕೆಯ ಇಬ್ಬರು ಬಿಜೆಪಿ ಸದಸ್ಯರ ಸದಸ್ಯತ್ವ ರದ್ದು
ಜಿ.ಪರಮೇಶ್ವರ್ರ ಹೊಸ ರಾಜಕೀಯ ಲೆಕ್ಕಾಚಾರ ಏನು ಅಂತ ನೋಡುವುದಾದರೆ, 2028ರ ವಿಧಾನಸಭಾ ಚುನಾವಣಾ ವೇಳೆಗೆ ಕ್ಷೇತ್ರಗಳ ಮೀಸಲು ಬದಲಾವಣೆ ಆಗುವ ಸಾಧ್ಯತೆ ಹೆಚ್ಚಿದೆ. ಕೊರಟಗೆರೆ ಮೀಸಲು ಕ್ಷೇತ್ರದಿಂದ ಸಾಮಾನ್ಯ ಕ್ಷೇತ್ರ ಆಗುವ ಸಾಧ್ಯತೆ ಇದೆ. ತುಮಕೂರು ನಗರ ಕ್ಷೇತ್ರ ಸಾಮಾನ್ಯ ಕ್ಷೇತ್ರವಾಗಿ ಉಳಿದರೂ ಇಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಿ ತಾವು ನಗರದಿಂದಲೇ ಸ್ಪರ್ಧಿಸಬೇಕು ಅನ್ನೋದು ರಾಜಕೀಯ ಲೆಕ್ಕಾಚಾರ ಇದೆ ಎನ್ನಲಾಗ್ತಿದೆ. ತುಮಕೂರು ನಗರ ಕ್ಷೇತ್ರದಲ್ಲಿ 50 ಸಾವಿರ ಮುಸ್ಲಿಂ ಮತ, 20 ಸಾವಿರ ಇತರ ಅಲ್ಪಸಂಖ್ಯಾತ ಮತ ಕಾಂಗ್ರೆಸ್ ಫಿಕ್ಸ್ ಆಗಿದೆ. ಜಿ.ಪರಮೇಶ್ವರ್ ಕಾಂಗ್ರೆಸ್ನಿಂದ ಸ್ಪರ್ಧಿಸಿದರೆ ದಲಿತ ಹಾಗೂ ಹಿಂದುಳಿದ ಮತಗಳು ಕ್ರೋಢೀಕರಣ ಆಗಲಿದೆ ಎಂಬ ಹೊಸ ಗಣಿತ ಗುರುವಾಗಿದೆ. ಇದೇ ದೂರದೃಷ್ಟಿಯಿಂದ ಜಿ.ಪರಮೇಶ್ವರ್ ತುಮಕೂರು ನಗರ ಕ್ಷೇತ್ರ ಅಭಿವೃದ್ಧಿಗೆ ಗಮನ ಕೊಟ್ಟಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಮಾಧ್ಯಮಗಳಲ್ಲಿಬರುವ ವಿಚಾರ ಸತ್ಯವೋ? ಸುಳ್ಳೋ ಅಂತ ತೀರ್ಮಾನಿಸಬೇಕಾಗಿರೋದು ಸಮಾಜ : ಹೆಚ್. ಆರ್.ರಂಗನಾಥ್
ಒಂದು ಕಡೆ ಇದೇ ಅವಧಿಯಲ್ಲಿ ಸಿಎಂ ಆಗಲೇಬೇಕು ಎಂದು ಪರಂ ಬಣ ಹೈಕಮಾಂಡ್ ಮಟ್ಟದಲ್ಲಿ ಎಡತಾಕುತ್ತಿದೆ. ಈ ಬಾರಿ ಚಾನ್ಸ್ ತಪ್ಪಿದ್ರೂ ಮುಂದಿನ ಬಾರಿ ಗೆದ್ದು ಸಿಎಂ ಕುರ್ಚಿ ಹಿಡಿಯೋಣ ಎಂಬ ಹಂಬಲದಿಂದ ತುಮಕೂರು ನಗರ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಚಾಕೊಲೇಟ್ ಆಸೆ ತೋರಿಸಿ 11ರ ಬಾಲಕಿ ಮೇಲೆ ಅತ್ಯಾಚಾರ
ತುಮಕೂರು: ಕೊರಟಗೆರೆ (Koratagere) ಪಟ್ಟಣ ಸೇರಿದಂತೆ ತುಮಕೂರು (Tumakuru) ತಾಲೂಕಿನ ಕೆಲವೆಡೆಗಳಲ್ಲಿ ಗಾಂಜಾ (Marijuana) ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಕೊರಟಗೆರೆ ಪೊಲೀಸರು ಬಂಧಿಸಿದ್ದಾರೆ.
ತುಮಕೂರು ಕ್ಯಾತಸಂದ್ರ ನಿವಾಸಿ ಚೇತನ್, ಗೋಕುಲ ಬಡಾವಣೆಯ ನಾಗರಾಜು, ಊರುಕೆರೆಯ ಪ್ರೀತಂ, ಊರುಕೆರೆ ಚೆಕ್ಪೋಸ್ಟ್ ಬಳಿಯ ಸಿಂಗಾವೇಲು ಬಂಧಿತ ಆರೋಪಿಗಳು. ಬಂಧಿತರು ಬೇರೆಡೆಯಿಂದ ಗಾಂಜಾವನ್ನು ಪ್ಯಾಕೆಟ್ಗಳಲ್ಲಿ ತಂದು ಪಟ್ಟಣ ಸೇರಿದಂತೆ ಕೆಲವು ಕಡೆಗಳಲ್ಲಿ ಮಾರಾಟ ಮಾಡುತ್ತಿದ್ದರು. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ‘ಮಹಾಯುತಿ’ ವಿಜಯ – ಎನ್ಡಿಎ ಮೈತ್ರಿಕೂಟ ಪ್ರಮಾಣ ವಚನ ನಾಳೆ?
ತುಮಕೂರು: ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ 2014-25ನೇ ಸಾಲಿನಲ್ಲಿ 214 ಕೋಟಿ ರೂ. ವೆಚ್ಚದ 3,811 ಕಾಮಗಾರಿಗಳಿಗೆ ಸರ್ಕಾರದಿಂದ ಅನುಮೋದನೆ ದೊರೆತಿದೆ ಎಂದು ಗೃಹಸಚಿವ ಜಿ.ಪರಮೇಶ್ವರ್ (G Parameshwar) ತಿಳಿಸಿದರು.
ಕೊರಟಗೆರೆ (Koratagere) ಪಟ್ಟಣದಲ್ಲಿ ಅಧಿಕಾರಿಗಳ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹುತೇಕ ಈ ಕಾಮಗಾರಿಗಳಲ್ಲಿ ಶಿಕ್ಷಣ ಹಾಗೂ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಸಿಎಸ್ಆರ್ 27 ಕೋಟಿ ರೂ. ಅನುದಾನದಲ್ಲಿ ಕೊಠಡಿಗಳ ದುರಸ್ತಿ, ನೂತನ ಕಟ್ಟಡ ನಿರ್ಮಾಣದ ಜೊತೆಗೆ ಆಟದ ಮೈದಾನ, ಶೌಚಾಲಯ ನಿರ್ಮಾಣ ಆರೋಗ್ಯ ಕ್ಷೇತ್ರಗಳಿಗೆ ಬಳಸಲಾಗಿದೆ ಎಂದರು. ಇದನ್ನೂ ಓದಿ: Chikkaballapur| ಸಚಿವ ಡಾ.ಎಂಸಿ ಸುಧಾಕರ್ ನಿವಾಸದ ಬಳಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು
ತಾಲೂಕಿನ ಹುಲಿಕುಂಟೆ ಬಳಿ ತೋಟಗಾರಿಕೆ ಇಲಾಖೆಯ ಜೇನುಕೃಷಿ ಕಟ್ಟಡ ಪಾಳು ಬಿದ್ದಿದ್ದು, ಅದನ್ನು ಶೀಘ್ರವೇ ಅಭಿವೃದ್ಧಿಪಡಿಸಿ ಕಟ್ಟಡ ಸದುಪಯೋಗ ಪಡಿಸಿಕೊಳ್ಳುವಂತೆ ಇಲಾಖೆ ಅಧಿಕಾರಿಗೆ ಸೂಚಿಸಿದರು. ಹೊಳವನಹಳ್ಳಿ ಜನತಾ ಕಾಲೊನಿ ಬಳಿ ಪಾಳು ಬಿಟ್ಟಿರುವ ವಿದ್ಯಾರ್ಥಿ ನಿಲಯ ಕಟ್ಟಡವನ್ನು ಸಮಾಜ ಕಲ್ಯಾಣ ಇಲಾಖೆ ವಶಕ್ಕೆ ಪಡೆದು ವಿದ್ಯಾರ್ಥಿ ನಿಲಯಕ್ಕೆ ಬಳಸಿಕೊಳ್ಳಲು ತಿಳಿಸಿದರು. ಇದನ್ನೂ ಓದಿ: ನೀಟ್ ಆಕಾಂಕ್ಷಿಗಳ ಮೇಲೆ ವಿಜ್ಞಾನ ಶಿಕ್ಷಕರಿಂದ ತಿಂಗಳಾನುಗಟ್ಟಲೆ ರೇಪ್, ಬ್ಲ್ಯಾಕ್ಮೇಲ್ – ಕಾಮುಕರು ಅರೆಸ್ಟ್
ತುಮಕೂರು: ಖಾಸಗಿ ಬಸ್ (Private Bus) ಹಾಗೂ ಕಾರು (Car) ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡ ಘಟನೆ ತುಮಕೂರು (Tumakuru) ಜಿಲ್ಲೆ ಕೊರಟಗೆರೆ (Koratagere) ತಾಲೂಕಿನ ಇರಕಸಂದ್ರ ಕಾಲೋನಿ ಬಳಿಯಿರುವ ವಡ್ಡರಹಳ್ಳಿಯಲ್ಲಿ (Vaddarahalli) ನಡೆದಿದೆ.
ಖಾಸಗಿ ಬಸ್ ಇರಕಸಂದ್ರ ಕಾಲೋನಿಯಿಂದ ಕೋಳಾಲ ಕಡೆಗೆ ತೆರಳುತ್ತಿದ್ದ ಸಂದರ್ಭ ಬೆಂಗಳೂರು ಕಡೆಯಿಂದ ಅಕ್ಕಿರಾಂಪುರಕ್ಕೆ ತೆರಳುತ್ತಿದ್ದ ಕಾರು ಬಸ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಇದನ್ನೂ ಓದಿ: ದರ್ಶನ್ ಜಾಮೀನು ಅರ್ಜಿ: ಇವತ್ತಾದರೂ ಸಿಗತ್ತಾ ಬೇಲ್?
ಗಾಯಾಳುಗಳನ್ನು ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಕೋಳಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಬೆಂಗಳೂರು-ಹೊಸೂರು ಹೈವೇಯಲ್ಲಿ ಹೊತ್ತಿ ಉರಿದ ಕ್ರೇಟಾ ಕಾರು
ತುಮಕೂರು: ವಿವಾಹಿತ ಪುರುಷನೊಂದಿಗೆ (Married Man) ಕಾಲೇಜು ವಿದ್ಯಾರ್ಥಿನಿ (College Student) ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು (Tumakuru) ಜಿಲ್ಲೆ ಕೊರಟಗೆರೆ (Koratagere) ತಾಲೂಕಿನಲ್ಲಿ ನಡೆದಿದೆ.
ಕೊಳಾಲ ಹೋಬಳಿ ಲಕ್ಕಯ್ಯನಪಾಳ್ಯದ ಅನನ್ಯ ಹಾಗೂ ಬೈರಗೊಂಡ್ಲು ಗ್ರಾಮದ ರಂಗಶಾಮಣ್ಣ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಕಳೆದ 4 ದಿನಗಳ ಹಿಂದೆ ಇಬ್ಬರು ಪ್ರೇಮಿಗಳು ಮನೆಯಿಂದ ನಾಪತ್ತೆಯಾಗಿದ್ದರು. ತಮ್ಮ ಪ್ರೀತಿಗೆ ಕುಟುಂಬದವರ ವಿರೋಧ ವ್ಯಕ್ತಪಡಿಸಿದ್ದರಿಂದ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಇದನ್ನೂ ಓದಿ: ಸೂರಜ್ ಪ್ರಕರಣ ರಾಜಕೀಯ ಪ್ರೇರಿತ ಎಂಬುದು ಗೊತ್ತಿಲ್ಲ, ಸಿಐಡಿ ತನಿಖೆ ಮಾಡುತ್ತೆ: ಪರಮೇಶ್ವರ್