Tag: kota srinivas poojary

  • ಹಿಜಬ್ ತೀರ್ಪು: ವಿಧಾನ ಪರಿಷತ್‍ನಲ್ಲಿ ಬಿಜೆಪಿ-ಕಾಂಗ್ರೆಸ್ ಜಟಾಪಟಿ

    ಹಿಜಬ್ ತೀರ್ಪು: ವಿಧಾನ ಪರಿಷತ್‍ನಲ್ಲಿ ಬಿಜೆಪಿ-ಕಾಂಗ್ರೆಸ್ ಜಟಾಪಟಿ

    ಬೆಂಗಳೂರು: ಹಿಜಬ್ ವಿವಾದದ ಕುರಿತು ಹೈಕೋರ್ಟ್ ನೀಡಿದ ತೀರ್ಪಿನ ವಿಷಯ ವಿಧಾನ ಪರಿಷತ್‍ನಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ಗದ್ದಲ ಗಲಾಟೆಗೆ ಕಾರಣವಾಯಿತು. ಬಜೆಟ್ ಚರ್ಚೆ ವೇಳೆ ಕಾಂಗ್ರೆಸ್‍ನ ಸದಸ್ಯ ಸಲೀಂ ಅಹಮದ್, ತೀರ್ಪು ಯಾಕೆ ಈ ರೀತಿ ಬಂದಿತು ಎನ್ನುವ ಕುರಿತು ಚರ್ಚೆ ನಡೆಯಬೇಕು ಎಂದರು. ಈ ವಿಚಾರಕ್ಕೆ ಸದನದಲ್ಲಿ ಗಲಾಟೆ ಪ್ರಾರಂಭ ಆಯಿತು.

    ಸಲೀಂ ಅಹಮದ್ ಮಾತನಾಡಿ, ಇಷ್ಟು ವರ್ಷ ಇಲ್ಲದ ಸಮಸ್ಯೆ ಈಗ ಏಕೆ ಬಂತು. ಹಿಜಬ್ ವಿಚಾರದಲ್ಲಿ ಕೋರ್ಟ್ ತೀರ್ಪು ಯಾಕೆ ಹೀಗೆ ಬಂತು. ಸರ್ಕಾರದ ಆದೇಶವನ್ನೇ ಕೋರ್ಟ್ ಎತ್ತಿ ಹಿಡಿಯಿತು. ಹಿಜಬ್, ಬುರ್ಕಾ ನೂರಾರು ವರ್ಷದಿಂದ ಇದೆ. ಇದು ನಮ್ಮ ಧರ್ಮದ ಪದ್ಧತಿ. ಆದ್ರೆ ವಿವಾದ ಈಗ ಯಾಕಾಯಿತು ಎಂದು ಪ್ರಸ್ತಾಪಿಸಿದರು.

    ಈ ವೇಳೆ ಮಧ್ಯ ಪ್ರವೇಶ ಮಾಡಿದ ಸಭಾ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಹೈಕೋರ್ಟ್ ತೀರ್ಪನ್ನು ಒಪ್ಪುತ್ತೀರಾ ಅಥವಾ ವಿರೋಧಿಸುತ್ತೀರಾ? ಎಂದು ಪ್ರಶ್ನಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ವಿಪಕ್ಷ ನಾಯಕ ಹರಿ ಪ್ರಸಾದ್, ನಮ್ಮ ನಿಲುವನ್ನು ಸುಪ್ರೀಂ ಕೋರ್ಟ್‍ಗೆ ಹೇಳುತ್ತೇವೆ. ನಾವು ಇಲ್ಲಿ ಅದನ್ನು ಹೇಳಬೇಕಿಲ್ಲ, ನಮ್ಮ ಸದಸ್ಯರು ಮಾತನಾಡುವುದನ್ನು ಕೇಳಿಸಿಕೊಳ್ಳಲು ಹೇಳಿ ಎಂದು ಆಗ್ರಹಿಸಿದರು.

    ಮತ್ತೆ ಮಾತು ಮುಂದುವರೆಸಿದ ಹರಿಪ್ರಸಾದ್, ಭಾಷಣದ ನಡುವೆ ನಮ್ಮ ಸದಸ್ಯರು ಸಮ್ಮತಿಸಲಿಲ್ಲ ಎಂದರೆ ಪ್ರತಿಪಕ್ಷ ನಾಯಕರಾಗಲಿ, ಸಭಾನಾಯಕರಿಗಾಗಲಿ ಮಧ್ಯದಲ್ಲಿ ಮಾತನಾಡಲು ಅವಕಾಶವಿಲ್ಲ. ಅವರಿಗೇನು ಕೊಂಬಿಲ್ಲ. ರೂಲ್ ಬುಕ್‍ನಲ್ಲಿಯೂ ಅವಕಾಶವಿಲ್ಲ ಎಂದರು.

    ಇದಕ್ಕೆ ಪ್ರತಿಕ್ರಿಯೆ ನೀಡಿದ ಸಭಾ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಇದು ಕೊಂಬಿನ ವಿಷಯ ಅಲ್ಲ. ಯಾರಿಗೇನು ಕೊಂಬು ಇಲ್ಲ. ಸರ್ಕಾರದ ವಿರುದ್ಧ ಆರೋಪ ಬಂದಾಗ ನಾವು ಕೆಲವೊಂದು ಸ್ಪಷ್ಟೀಕರಣ ನೀಡಬೇಕು ಆಗ ಮಾತನಾಡಬೇಕಾಗಲಿದೆ. ಅದಕ್ಕೆ ಎದ್ದು ನಿಂತಾಗ ಸಭಾಪತಿಗಳ ಸಮ್ಮತಿ ಮೇರೆಗೆ ಪ್ರತಿಪಕ್ಷ ನಾಯಕ, ಸಭಾ ನಾಯಕರಿಗೆ ಮಾತನಾಡಲು ಅವಕಾಶ ಕೊಡುವ ಸಂಪ್ರದಾಯ ಇದೆ ಎಂದು ಪ್ರತಿಪಾದಿಸಿದರು.

    ಭಾಷಣ ಮುಂದುವರೆಸಿದ ಸಲೀಂ ಅಹಮದ್, ಕೋರ್ಟ್ ತೀರ್ಪನ್ನು ಪ್ರತಿಯೊಬ್ಬರೂ ಒಪ್ಪಬೇಕು. ನಾವು ಒಪ್ಪುತ್ತೇವೆ. ಆದರೆ ಈ ಘಟನೆ ಯಾಕಾಯಿತು? ಕೇಸರಿ ಶಾಲು ಪದ್ಧತಿ ಮೊದಲು ಇತ್ತಾ? ಅಣ್ಣ, ತಮ್ಮಂದಿರ ರೀತಿ ಇದ್ದ ವಿದ್ಯಾರ್ಥಿಗಳು ಈಗ ಮುಖ ಕೊಟ್ಟು ಮಾತನಾಡದ ಸ್ಥಿತಿ ಇದೆ. ಇದಕ್ಕೆ ಸರ್ಕಾರವೇ ಕಾರಣ ಎಂದು ಆರೋಪಿಸಿದರು.

    ಇದಕ್ಕೆ ಸಭಾ ನಾಯಕ ಕೋಟ ಶ್ರೀನಿವಾಸ ಪೂಜಾರಿ, ನೆಮ್ಮದಿಯಿಂದ ಇದ್ದ ಮಕ್ಕಳು ಇವರ ಚಿತಾವಣೆಯಿಂದ ಹಿಜಬ್ ಧರಿಸಿ ಹೋದರು ಎಂದು ಕಾಂಗ್ರೆಸ್ ವಿರುದ್ಧ ನೇರ ಆರೋಪ ಮಾಡಿದರು. ಈ ವೇಳೆ ಸದನದಲ್ಲಿ ಕೆಲಕಾಲ ಗದ್ದಲದ ವಾತಾವರಣ ಸೃಷ್ಟಿಯಾಯಿತು. ಕಾಂಗ್ರೆಸ್, ಬಿಜೆಪಿ ಸದಸ್ಯರ ನಡುವೆ ವಾಗ್ವಾದ ನಡೆಯಿತು. ಇದನ್ನೂ ಓದಿ: ಎಸ್‍ಎಫ್‍ಐ ಉಗ್ರರ ಸಂಘಟನೆಯಾಗಿದ್ದು ಬ್ಯಾನ್ ಮಾಡಿ: ಕಾಂಗ್ರೆಸ್ ಸಂಸದ ಆಕ್ರೋಶ

    ಮತ್ತೆ ಮಾತನಾಡಿದ ಸಲೀಂ ಅಹಮದ್, ಇಂದು ಕೋಮು ಸಾಮರಸ್ಯಕ್ಕೆ ಧಕ್ಕೆ ಬಂದಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಮಕ್ಕಳಲ್ಲಿ ಬೇಧ ಭಾವ ತಂದಿದ್ದಾರೆ ಇದಕ್ಕೆ ಯಾರು ಕಾರಣ? ವಿದ್ಯಾರ್ಥಿಗಳಲ್ಲಿ ಕಂದಕ ತರುವ ಹಿಂದೂ, ಮುಸ್ಲಿಂ ಯಾವುದೇ ಸಂಘಟನೆ ಇರಲಿ ಬ್ಯಾನ್ ಮಾಡಲಿ ಎಂದಿದ್ದೇವೆ. ಈ ಸರ್ಕಾರಕ್ಕೆ ಧಮ್ ಇದೆಯಾ? ಅಂತ ಪ್ರಶ್ನೆ ಮಾಡಿದ್ರು. ಶಿವಮೊಗ್ಗ ಹರ್ಷ ಕೊಲೆಗೆ 25 ಲಕ್ಷ ರೂ. ಕೊಟ್ಟರು. ಗದಗದಲ್ಲಿ ಮುಸ್ಲಿಂ ವ್ಯಕ್ತಿ ಕೊಲೆಗೆ ಪರಿಹಾರ ಕೊಟ್ಟಿಲ್ಲ. ಯಾಕೆ ಈ ತಾರತಮ್ಯ ಎಂದು ಪ್ರಶ್ನಿಸಿದರು. ಮತ್ತೆ ಸದನದಲ್ಲಿ ಗದ್ದಲ ಗಲಾಟೆ ಆಗಿ ಸಭಾಪತಿಗಳು ಮಧ್ಯೆ ಪ್ರವೇಶ ಮಾಡಿ ಪರಿಸ್ಥಿತಿ ತಿಳಿಗೊಳಿಸಿದರು. ಇದನ್ನೂ ಓದಿ: ಕಾಶ್ಮೀರ್ ಫೈಲ್ಸ್ ಡೌನ್ಲೋಡಿಂಗ್ ಲಿಂಕ್ ಕ್ಲಿಕ್ ಮಾಡಿದ್ರೆ ಬ್ಯಾಂಕ್ ಖಾತೆಗೆ ಕನ್ನ

  • ಕಾಂಗ್ರೆಸ್ ರಾಜಕೀಯ ಕಾರಣಕ್ಕೆ ಮೇಕೆದಾಟು ಪಾದಯಾತ್ರೆ ಮಾಡುತ್ತಿದೆ : ಕೋಟಾ ಶ್ರೀನಿವಾಸ್ ಪೂಜಾರಿ

    ಕಾಂಗ್ರೆಸ್ ರಾಜಕೀಯ ಕಾರಣಕ್ಕೆ ಮೇಕೆದಾಟು ಪಾದಯಾತ್ರೆ ಮಾಡುತ್ತಿದೆ : ಕೋಟಾ ಶ್ರೀನಿವಾಸ್ ಪೂಜಾರಿ

    ಮಡಿಕೇರಿ: ಕಾಂಗ್ರೆಸ್ ರಾಜಕೀಯ ಕಾರಣಕ್ಕೆ ಮೇಕೆದಾಟು ಪಾದಯಾತ್ರೆ ಮಾಡುತ್ತಿದೆ ಎಂದು  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ (Kota Srinivas Poojary) ವಾಗ್ದಾಳಿ ನಡೆಸಿದ್ದಾರೆ.

    ಮಡಿಕೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆ ವಿಳಂಬದಲ್ಲಿ ಯಾವುದೇ ರಾಜಕಾರಣ ಇಲ್ಲ ಕಾಂಗ್ರೆಸ್ ನವರು ರಾಜಕೀಯ ಕಾರಣಕ್ಕೆ ಮೇಕೆದಾಟು ಪಾದಯಾತ್ರೆ ಮಾಡುತ್ತಿದ್ದಾರೆ.  ಮೇಕೆದಾಟು ಸೇರಿದಂತೆ ಯಾವುದೇ ನೀರಿನ ಯೋಜನೆ ವಿಷಯದಲ್ಲಿ ಸರ್ಕಾರ ರಾಜಿಮಾಡಿಕೊಂಡಿಲ್ಲ. ಕೋವಿಡ್ ಸಂದರ್ಭದಲ್ಲಿ ಪಾದಯಾತ್ರೆ ನಡೆಸಿ ಅವರಿಂದ ಆದ ಅನಾಹುತ ಅವರಿಗೆ ಅರಿವಾಗಿದೆ. ಈಗ ಮತ್ತೆ ಪಾದಯಾತ್ರೆ ಆರಂಭಿಸಿರುವುದು ಒಂದು ರಾಜಕೀಯ ಪ್ರೇರಿತವಾಗಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಕಂಠೀರವ ಸ್ಟುಡಿಯೋ ಆವರಣದಲ್ಲಿ 14 ಅಡಿ ಎತ್ತರದ ಅಂಬರೀಶ್ ಪ್ರತಿಮೆ

    ಒಳ್ಳೆ ಕೆಲಸವನ್ನು ನಮ್ಮ ಸರ್ಕಾರ ಮಾಡಿರುವುದನ್ನು ಕಾಂಗ್ರೆಸ್ ಅಥವಾ ವಿರೋಧ ಪಕ್ಷಗಳು ಹೋಗಳುತ್ತವೆಯೇ? ವಿರೋಧ ಮಾಡುವುದೇ ಅವರ ಕೆಲಸ ಅಲ್ಲವೇ. ಆದರೆ ನಮಗೆ ನಮ್ಮ ಸರ್ಕಾರದ ಕೋವಿಡ್ ಹಾಗೂ ಪ್ರವಾಹ ಸಂದರ್ಭದಲ್ಲಿ ಹಾಗೂ ರಾಜ್ಯದ ಏಳಿಗೆಗಾಗಿ ಮಾಡುತ್ತಿರುವ ಕೆಲಸದಲ್ಲಿ ತೃಪ್ತಿ ಇದೆ. ಸದನದಲ್ಲಿಯೂ ಕಾಂಗ್ರೆಸ್ ಅವರಿಗೆ ಸಮರ್ಥವಾಗಿಯೇ ಉತ್ತರ ನೀಡುತ್ತದೆ‌ ಎಂದಿದ್ದಾರೆ.

  • ಕರಾವಳಿಗರಿಗೆ ಪಡಿತರ ಕಾರ್ಡ್ ಮೂಲಕ ಕುಚ್ಚಿಲಕ್ಕಿ ವಿತರಣೆ: ಸಚಿವ ಕೋಟ

    ಕರಾವಳಿಗರಿಗೆ ಪಡಿತರ ಕಾರ್ಡ್ ಮೂಲಕ ಕುಚ್ಚಿಲಕ್ಕಿ ವಿತರಣೆ: ಸಚಿವ ಕೋಟ

    ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಡಿತರ ಕಾರ್ಡ್ ಮೂಲಕ ಕುಚ್ಚಿಲಕ್ಕಿ ವಿತರಣೆ ಮಾಡುವುದಾಗಿ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಘೋಷಣೆ ಮಾಡಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ತಿಂಗಳು ಪಡಿತರ ಕಾರ್ಡ್ ಮೂಲಕ ಬಡವರಿಗೆ ಕುಚ್ಚಿಲಕ್ಕಿ ವಿತರಣೆ ಮಾಡಲು ಕೇಂದ್ರ ಅನುಮತಿ ನೀಡಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ತಿಂಗಳಿಗೆ 1 ಲಕ್ಷ ಕ್ವಿಂಟಾಲ್ ಅಕ್ಕಿ ಬಿಡುಗಡೆಯಾಗುತ್ತದೆ. ಇದಕ್ಕೆ ಸಹಕರಿಸಿದ ಸಂಸದರು ಹಾಗೂ ಎರಡು ಜಿಲ್ಲೆಯ ಶಾಸಕರು ಅಭಿನಂದನಾರ್ಹರು. ಈ ಬಗ್ಗೆ ಸಾಕಷ್ಟು ಬಾರಿ ಮನವಿ ಹೋರಾಟವನ್ನು ಮಾತುಕತೆಯನ್ನು ಮಾಡಿದ ನಂತರ ಕೇಂದ್ರ ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದೆ ಎಂದರು.

    ನಾನು ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದಾಗ ಈ ಪ್ರಯತ್ನ ಮಾಡಿದ್ದೆ. ಕುಚ್ಚಿಲಕ್ಕಿ ವಿತರಿಸಲು ಶಿಫಾರಸು ಮಾಡಿದ ಮುಖ್ಯಮಂತ್ರಿ, ಆಹಾರ ಸಚಿವ ಉಮೇಶ್ ಕತ್ತಿ, ಆಹಾರ ನಿಗಮದ ಉಪಾಧ್ಯಕ್ಷ ಕಿರಣ್ ಕೊಡ್ಗಿಗೆ ಧನ್ಯವಾದ ಸಲ್ಲಿಕೆ ಮಾಡುತ್ತೇನೆ. ಎಂ4, ಜಯಾ ತಳಿಯ ಅಕ್ಕಿಯನ್ನು ಖರೀದಿ ಮಾಡಿ ವಿನಿಯೋಗಿಸುತ್ತೇವೆ ಎಂದರು. ಇದನ್ನೂ ಓದಿ: ಕಟೀಲ್, ಸಿದ್ದರಾಮಯ್ಯಗೆ ಕಂಟಕವಾಗ್ತಾರೆ: ಕೋಟ ಶ್ರೀನಿವಾಸ ಪೂಜಾರಿ

    ಈಗಾಗಲೇ ಕೆಲವೆಡೆಯಿಂದ ಭತ್ತ ಖರೀದಿಯಾಗಿದೆ. ಖರೀದಿ ಮಾಡಿದ ಭತ್ತವನ್ನು ಮೊದಲು ವಿತರಣೆ ಮಾಡುತ್ತೇವೆ. ಹೊಸ ಖರೀದಿಯ ಸಂದರ್ಭ ಕುಚ್ಚಿಲಕ್ಕಿಯನ್ನು ಖರೀದಿ ಮಾಡುತ್ತೇವೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಕಾಂಗ್ರೆಸ್‍ನವ್ರು ರೈಲು, ಬಸ್ ಯಾವುದಲ್ಲಾದ್ರೂ ಹೋಗ್ಲಿ, ಆದ್ರೆ ಸಂದರ್ಭ ನೋಡಿ ಪ್ರತಿಭಟನೆ ಮಾಡ್ಲಿ: ಸುಧಾಕರ್

  • ದೇಗುಲಗಳನ್ನು ಭಕ್ತರ ಕೈಗೆ ನೀಡಬೇಕೆಂಬ ಚಿಂತನೆ ಇದೆ: ಕೋಟ

    ದೇಗುಲಗಳನ್ನು ಭಕ್ತರ ಕೈಗೆ ನೀಡಬೇಕೆಂಬ ಚಿಂತನೆ ಇದೆ: ಕೋಟ

    ಬೆಂಗಳೂರು: ಹಿಂದೂ ದೇವಾಲಯಗಳನ್ನ ಸರ್ಕಾರದ ಹಿಡಿತದಿಂದ ತಪ್ಪಿಸಿ ಭಕ್ತರ ಕೈಗೆ ನೀಡಬೇಕು ಎಂಬ ಚಿಂತನೆ ಇದೆ ಅಂತ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

    ಸರ್ಕಾರದ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳ ಹಸ್ತಾಂತರ ವಿಚಾರ ಸಂಬಂಧ ಮಾಧ್ಯಮಗಳ ಜೊತೆ ಮಾತನಾಡಿದರು. ಬಿಜೆಪಿ, ಆರ್ ಎಸ್.ಎಸ್ ಕಾರ್ಯಕರ್ತರಿಗೆ ನೂರಾರು ಕೋಟಿ ಬೆಲೆ ಬಾಳುವ ದೇವಸ್ಥಾನಗಳನ್ನ ಹಸ್ತಾಂತರಿಸುವ ಅಜೆಂಡಾ ಎಂಬ ಡಿಕೆಶಿ ಆರೋಪಕ್ಕೆ ತಿರುಗೇಟು ನೀಡಿದರು.

    ಹಿಂದೂ ದೇವಾಲಯಗಳನ್ನ ಸರ್ಕಾರದ ಹಿಡಿತದಿಂದ ತಪ್ಪಿಸಿ ಭಕ್ತರ ಕೈಗೆ ನೀಡಬೇಕು ಎಂಬ ಚಿಂತನೆ ಇದೆ. ಭಕ್ತರು ಅಂದ್ರೆ ಬಿಜೆಪಿ, ಆರ್.ಎಸ್.ಎಸ್ ಕಾರ್ಯಕರ್ತರು ಆಗಿರಬಹುದು. ಡಿಕೆಶಿ ಶಿವಕುಮಾರ್ ಕೂಡ ಆಗಿರಬಹುದು. ಭಕ್ತರು ಅಂದ್ರೆ ಎಲ್ಲರು ಬರುತ್ತಾರೆ. ನಾವು ಭಕ್ತರಿಗೆ ಕೊಡಬೇಕು ಅಂತ ಆಲೋಚಿಸಿದ್ದೇವೆ. ಇನ್ನೂ ಮಾರ್ಗಸೂಚಿ ಸಿದ್ಧಪಡಿಸಿಲ್ಲ ಎಂದರು. ಇದನ್ನೂ ಓದಿ: ಸರ್ಕಾರಿ ನಿಯಂತ್ರಣದ ದೇಗುಲಗಳಿಗೆ ಶೀಘ್ರ ಸ್ವಾತಂತ್ರ್ಯ- ಆದಾಯ ದೇವಾಲಯಗಳ ಅಭಿವೃದ್ಧಿಗೆ ಮೀಸಲು

    ಇದೇ ವೇಳೆ ಉಡುಪಿ ಜಿಲ್ಲೆಯ ಕೋಟಾದಲ್ಲಿ ಗಿರಿಜನರ ಮೇಲೆ ಪೋಲಿಸರು ವಿನಾಕಾರಣ ಹಲ್ಲೆ ಮಾಡಲಾಗಿತ್ತು. ಒಬ್ಬ ಪಿಎಸ್‍ಐ, ಸಸ್ಪೆಂಡ್ ಆರು ಜನರ ವರ್ಗಾವಣೆ ಕೂಡ ಮಾಡಲಾಗಿದೆ. ನಾನು ಸ್ಥಳಕ್ಕೆ ಭೇಟಿ ನೀಡಿದ್ದೆ. ಎಸ್‍ಪಿ ಮತ್ತು ಜಿಲ್ಲಾಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದೆ. ಈ ಮಧ್ಯೆ ಪ್ರಕರಣ ಹೊಸ ತಿರುವು ಪಡೆದುಕೊಂಡಿತ್ತು. ಒಬ್ಬ ಕಾನ್ಸ್‍ಟೇಬಲ್ ನನ್ನ ಮೇಲೆ ಹಲ್ಲೆಯಾಗಿದೆ ಎಂದು ಆಸ್ಪತ್ರೆಗೆ ದಾಖಲಾಗಿದ್ದರು. ಇದರಿಂದ ಆದಿವಾಸಿ ಕೇರಿಯಲ್ಲಿ ಆತಂಕ ಸೃಷ್ಟಿಯಾಗಿತ್ತು. ಪ್ರಕರಣದ ಸಂಬಂಧ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ಮಾಡಿದ್ದೆ. ಅಲ್ಲಿರುವ ಪರಿಸ್ಥಿತಿಯನ್ನು ಗೃಹಸಚಿವರಿಗೆ ವಿವರಿಸಿದ್ದೆ ಎಂದರು.

    ಯಾವುದೇ ಕಾರಣಕ್ಕೂ ಅಲ್ಲಿರುವವರಿಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತೇವೆ. ಎಸ್‍ಪಿ ಅವರಿಗೆ ಕರೆ ಮಾಡಿ ಪ್ರಕರಣದ ವಿಚಾರ ಕಾನೂನುಪ್ರಕಾರ ದೂರು ದಾಖಲಿಸಲು ಸೂಚಿಸಿದ್ದಾರೆ. ದಲಿತರಿಗೆ ಯಾವುದೇ ತೊಂದರೆಯಾಗದಂತೆ ಗೃಹಸಚಿವರು ಸೂಚಿಸಿದ್ದಾರೆ. ಕೊರಗರ, ಗಿರಿಜನರ, ದಲಿತ ಬಂಧುಗಳಿಗೆ ಭಯಪಡುವ ಅವಶ್ಯಕತೆ ಇಲ್ಲ. ನಾನು, ಗೃಹ ಸಚಿವರು ಹಾಗೂ ಸರ್ಕಾರ ನಿಮ್ಮ ಜೊತೆ ಇದೆ. ಏನಾದರೂ ಇದ್ರೆ ಸಿಎಂಗೂ ಮಾಹಿತಿ ನೀಡಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

  • ಸಿಎಂ ಬದಲಾವಣೆ ಬಗ್ಗೆ ಯಾರೂ ಮಾತನಾಡಿಲ್ಲ: ಶ್ರೀನಿವಾಸ ಪೂಜಾರಿ

    ಸಿಎಂ ಬದಲಾವಣೆ ಬಗ್ಗೆ ಯಾರೂ ಮಾತನಾಡಿಲ್ಲ: ಶ್ರೀನಿವಾಸ ಪೂಜಾರಿ

    ಹಾವೇರಿ: ಸಿಎಂ ಬದಲಾವಣೆ ಎಂಬ ಶಬ್ದಕ್ಕೆ ಅರ್ಥವೇ ಇಲ್ಲ. ಯಾರೂ ಸಿಎಂ ಬದಲಾವಣೆ ಬಗ್ಗೆ ಮಾತನಾಡಿಲ್ಲ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

    ನಗರದ ಜಿಲ್ಲಾ ಪಂಚಾಯ್ತಿ ಸಭಾಭವನದಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಿದ ನಂತರ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆದ ನಂತರದಲ್ಲಿ ನಮ್ಮ ಸರ್ಕಾರದ ಮತ್ತು ನಮ್ಮೆಲ್ಲರ ಗೌರವವು ಹೆಚ್ಚಿದೆ. ಅವರು ಅತ್ಯಂತ ಪಾರದರ್ಶಕತೆಯಿಂದ ಪ್ರತಿಯೊಬ್ಬ ಮಂತ್ರಿಗೂ ಮಾರ್ಗಸೂಚಿ ಹಾಕಿಕೊಟ್ಟು ಚೆನ್ನಾಗಿ ಕೆಲಸ ಮಾಡಿ ಅಂತಾ ಹೇಳಿದ್ದಾರೆ. ಏನಾದರೂ ಲೋಪದೋಷಗಳಿದ್ದರೇ ಸರಿಪಡಿಸಿಕೊಳ್ಳಿ ಎನ್ನುತ್ತಾರೆ ಎಂದರು. ಇದನ್ನೂ ಓದಿ:  365 ದಿನ ಕೆಲಸ ಮಾಡುವ ಶಕ್ತಿ ಇದೆ, ಪ್ರತಿ ದಿನ 15 ಗಂಟೆ ಕೆಲಸ ಮಾಡಿ ಬಿಜೆಪಿಯನ್ನು ಅಧಿಕಾರಕ್ಕೆ ಏರಿಸುತ್ತೇನೆ: ಬೊಮ್ಮಾಯಿ

    ಬೊಮ್ಮಾಯಿ ಅವರು ಪಾರದರ್ಶಕ, ಪ್ರಾಮಾಣಿಕ ಮತ್ತು ಜನಪರ ಕೆಲಸಗಳನ್ನು ಮಾಡಲು ಚಿಂತನೆ ಮಾಡುತ್ತಿದ್ದಾರೆ. ಅವರು ಮುಖ್ಯಮಂತ್ರಿಗಳು ಮುಂದುವರಿಯುತ್ತಾರೆ. ಅವರ ನೇತೃತ್ವದಲ್ಲೇ ಚುನಾವಣೆ ಎದುರಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಕರ್ನಾಟಕ ಬಂದ್ ಮಾಡುವ ಅನಿವಾರ್ಯತೆ ಇಲ್ಲ: ಸುನಿಲ್ ಕುಮಾರ್

  • ದಕ್ಷಿಣ ಕನ್ನಡದಲ್ಲಿ ಕೋಟ, ಮಂಜುನಾಥ ಭಂಡಾರಿಗೆ ಜಯ

    ದಕ್ಷಿಣ ಕನ್ನಡದಲ್ಲಿ ಕೋಟ, ಮಂಜುನಾಥ ಭಂಡಾರಿಗೆ ಜಯ

    ಮಂಗಳೂರು: ದಕ್ಷಿಣ ಕನ್ನಡ ದ್ವಿಸದಸ್ಯ ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್ ತಲಾ ಒಬ್ಬ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.

    bjp - congress

    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿ ವಿಧಾನ ಪರಿಷತ್‍ನ ಏಕೈಕ ಸಚಿವರಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರು 3,693 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಪ್ರಥಮ ಪ್ರಾಶಸ್ತ್ಯದ ಮತಗಳಿಂದಲೇ ಅವರು ಆಯ್ಕೆಯಾಗಿದ್ದಾರೆ. ಇನ್ನು ಕಾಂಗ್ರೆಸ್‍ನ ಅಭ್ಯರ್ಥಿ ಮಂಜುನಾಥ ಭಂಡಾರಿ 2,077 ಮತಗಳನ್ನು ಪಡೆದಿದ್ದಾರೆ. ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ಬಿಜೆಪಿಗೆ ಗೆಲುವು – ಕೋರ್ಟ್‌ ಮೊರೆ ಹೋಗಲು ಮುಂದಾದ ಕಾಂಗ್ರೆಸ್‌

    ಎಸ್‍ಡಿಪಿಐ ಅಭ್ಯರ್ಥಿನ ಅಭ್ಯರ್ಥಿ ಶಾಫಿ 203 ಮತಗಳನ್ನಷ್ಟೇ ಪಡೆದಿದ್ದಾರೆ. 39 ಮತಗಳು ತಿರಸ್ಕೃತಗೊಂಡಿವೆ. ಇದನ್ನೂ ಓದಿ: ಅಂದು ಆಡಿ ಕಾರಲ್ಲಿ ಬಂದ ಕೆಜಿಎಫ್ ಬಾಬು, ಇಂದು ಸೋತು ಆಟೋ ಹತ್ತಿ ಹೋದ್ರು..!

  • ಸಾಹಸಿ ಯುವತಿಯರಿಗೆ ಉಳ್ಳಾಲ ಕಡಲ ತೀರದಲ್ಲಿ ಅದ್ದೂರಿ ಸ್ವಾಗತ

    ಸಾಹಸಿ ಯುವತಿಯರಿಗೆ ಉಳ್ಳಾಲ ಕಡಲ ತೀರದಲ್ಲಿ ಅದ್ದೂರಿ ಸ್ವಾಗತ

    -ಸಚಿವರು, ಶಾಸಕರರಿಂದ ಅಭಿನಂದನೆ

    ಮಂಗಳೂರು: ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಅಂಗವಾಗಿ ಕೈಗೊಳ್ಳಲಾಗಿದ್ದ ಐತಿಹಾಸಿಕ ಯಾನ ಶಿಖರದಿಂದ ಸಾಗರ ಅಭಿಯಾನದಲ್ಲಿ ಭಾಗವಹಿಸಿದ್ದ ರಾಜ್ಯದ ಐವರು ಯುವತಿಯರಿಗೆ ಉಳ್ಳಾಲದ ಕಡಲ ತೀರದಲ್ಲಿ ಅದ್ದೂರಿ ಸ್ವಾಗತ ಕೋರಲಾಯಿತು.

    ಈ ಯುವತಿಯರು ಕಾಶ್ಮೀರದಲ್ಲಿನ ಕೊಲ್ಹೋಯಿ ಶಿಖರವನ್ನು ಏರಿ ಬಳಿಕ ಜಗತ್ತಿನ ಅತಿ ಎತ್ತರದ ರಸ್ತೆಯಾದ ಲಡಾಖ್ ನ ಕರ್ ದೂಂಗ್ಲ ಪಾಸ್ ಮೂಲಕ 3,350 ಕಿ.ಮೀ, ಸೈಕಲ್ ಯಾನ ಮಾಡುತ್ತಾ ಕಾರವಾರ ತಲುಪಿ, ಅಲ್ಲಿಂದ ರಾಜ್ಯದ ಕರಾವಳಿ ಸಮುದ್ರದಲ್ಲಿ 300 ಕಿ.ಮೀ, ಕಯಾಕಿಂಗ್ ಯಾನ ಮಾಡಿ ಮಂಗಳೂರಿನ ಉಳ್ಳಾಲದ ಕಡಲ ತೀರವನ್ನು ತಲುಪಿದರು.

    ಭಾರತೀಯ ಪರ್ವತಾರೋಹಣ ಸಂಸ್ಥೆಯ ದಕ್ಷಿಣ ವಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ಸಹಯೋಗದೊಂದಿಗೆ ಕೈಗೊಳ್ಳಲಾಗಿದ್ದ ಈ ಸಾಹಸ ಯಾತ್ರೆಗೆ 2021ರ ಆಗಸ್ಟ್ 16 ರಂದು ಕ್ರೀಡಾ ಸಚಿವರು ಚಾಲನೆ ನೀಡಿದ್ದರು. ಸುಮಾರು 70 ದಿನಗಳ ಸಾಹಸ ಯಾತ್ರೆ ಸ್ತ್ರೀ ಶಕ್ತಿ ಸಾಹಸ, ಧೈರ್ಯ, ಸಮಾನತೆ, ಶ್ರೀ ಸಬಲೀಕರಣ ತತ್ತ್ವವನ್ನು ಬಿಂಬಿಸುವ ವಿಭಿನ್ನವಾದ ಕಾರ್ಯಕ್ರಮವಾಗಿತ್ತು. ಕಾರವಾರದಿಂದ ಕಯಾಕಿಂಗ್ ಮೂಲಕ ಹೊರಟ ಈ 5 ಜನ ಯುವತಿಯರ ತಂಡವು ನವೆಂಬರ್ 01ರ ಸೋಮವಾರ ಸಂಜೆ ಉಲ್ಲಾಳ ಕಡಲ ತೀರಕ್ಕೆ ಬಂದು ತಮ್ಮ ಸಾಹಸ ಯಾತ್ರೆಯನ್ನು ಪೂರ್ಣಗೊಳಿಸಿದರು. ಇದನ್ನೂ ಓದಿ: ನೀಟ್ ಫಲಿತಾಂಶ ಪ್ರಕಟ- ಇ-ಮೇಲ್‍ಗೇ ರಿಸಲ್ಟ್

    ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ, ಶಾಸಕರಾದ ಯು.ಟಿ. ಖಾದರ್, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಉಪ ನಿರ್ದೇಶಕ ಪ್ರದೀಪ್ ಡಿಸೋಜಾ, ಜನರಲ್ ತಿಮ್ಮಯ್ಯ ಸಾಹಸ ಅಕಾಡೆಮಿಯ ಸಲಹೆಗಾರ ಕೀರ್ತಿ ಪಯಾಸ್, ಉಳ್ಳಾಲ ನಗಸಭೆ ಅಧ್ಯಕ್ಷ ಚಿತ್ರಕಲಾ, ಉಪಾಧ್ಯಕ್ಷ ಅಯೂಬ್ ಉಳ್ಳಾಲ್, ಸದಸ್ಯರಾದ ಭಾರತಿ, ಸುರೇಶ್ ಭಟ್ ನಗರ, ನಗರಸಭೆ ಪೌರಾಯುಕ್ತ ರಾಯಪ್ಪ, ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು, ಜನ ಪ್ರತಿನಿಧಿಗಳು, ಗಣ್ಯರು ಹಾಗೂ ಸಾರ್ವಜನಿಕರು ಈ ಸಾಹಸಿ ತರುಣಿಯರನ್ನು ಅಭಿನಂದನಾ ಪೂರ್ವಕವಾಗಿ ಸ್ವಾಗತಿಸಿದರು.

    ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ ಅವರು ಉಳ್ಳಲಾ ಕಡಲ ತೀರದಲ್ಲಿ ಯುವತಿಯನ್ನು ಸ್ವಾಗತಿಸಿದ ನಂತರ ಮಾತನಾಡಿ, ಕಾಶ್ಮೀರದಿಂದ ಮೂರು ಸಾವಿರ ಕಿ.ಮೀ. ಕ್ರಮಿಸಿ, ಕಾರವಾರದಿಂದ ಮುನ್ನೂರು ಕಿ.ಮೀ. ಸಮುದ್ರದಲ್ಲಿ ಪ್ರಯಾಣಿಸುವ ಮೂಲಕ ಬಹು ದೊಡ್ಡ ಸಾಧನೆ ಮಾಡಿರುವ ಐವರು ಹೆಣ್ಣು ಮಕ್ಕಳಿಗೆ ರಾಜ್ಯ ಸರ್ಕಾರದಿಂದ ಅಭಿನಂದನೆಗಳನ್ನು ಸಲ್ಲಿಸಲಾಗುತ್ತಿದೆ. ಇವರ ಸಾಹಸವನ್ನು ಗೌರವಿಸಲು ಈ ತಿಂಗಳ ಅಂತ್ಯದಲ್ಲಿ ವಿಧಾನಸೌಧದಲ್ಲಿ ಸನ್ಮಾನಿಸಲಾಗುವುದು, ಮುಖ್ಯಮಂತ್ರಿಗಳು ಈ ಯುವತಿಯರನ್ನು ಸನ್ಮಾನಿಸುವರು, ಮುಖ್ಯವಾಗಿ ಸಮಾಜ ಕಲ್ಯಾಣ ಇಲಾಖೆಯಿಂದ ಈ ಸಾಧಕರಿಗೆ ಅಗತ್ಯವಿರುವ ಸೌಕರ್ಯಗಳನ್ನು ಕಲ್ಪಿಸಿಕೊಡಲಾಗುವುದು ಎಂದರು. ಇದನ್ನೂ ಓದಿ:  ಪಾಕ್ ಪರ ಘೋಷಣೆ- ದೇಶದ್ರೋಹ ಪ್ರಕರಣ ದಾಖಲಿಸಿ ಯುವಕನ ಬಂಧನ

    ಶಾಸಕರಾದ ಯು.ಟಿ. ಖಾದರ್ ಮಾತನಾಡಿ, ಜನರಲ್ ತಿಮ್ಮಯ್ಯ ಸಾಹಸ ಅಕಾಡೆಮಿ ಹಾಗೂ ಭಾರತೀಯ ಪವರ್ತಾರೋಹಣ ಸಂಘದ ಸಹಯೋಗದಲ್ಲಿ ಕಾಶ್ಮೀರದಿಂದ ಪರ್ವತಾರೋಹಣ, ಸೈಕಲ್ ಹಾಗೂ ಕಾರವಾರದಿಂದ ಕಯಾಕಿಂಗ್ ಮೂಲಕ ಉಳ್ಳಾಲಕ್ಕೆ ಆಗಮಿಸಿ ಐವರು ಯುವತಿಯನ್ನು ಸಮಸ್ತ ಮಂಗಳೂರಿನ ಜನತೆ ಪರವಾಗಿ ಆತ್ಮೀಯವಾಗಿ ಸ್ವಾಗತಿಸಲಾಗಿದೆ. ಇವರ ಈ ಸಾಧನೆ ಯುವ ಜನತೆ, ವಿದ್ಯಾರ್ಥಿಗಳು, ಮಹಿಳೆಯರಿಗೆ ಪ್ರೇರಣಾ ಶಕ್ತಿಯಾಗಿದೆ, ಮುಂದಿನ ದಿನಗಳಲ್ಲಿ ಅವರ ಈ ಸಾಧನೆಯು ದೇಶಕ್ಕೆ ಪದಕಗಳನ್ನು ತಂದುಕೊಡುವಂತಾಗಲಿ, ಬೆಂಗಳೂರು ಹಾಗೂ ಕಲಬುರಗಿಯಲ್ಲಿರುವಂತೆ ಜನರಲ್ ತಿಮ್ಮಯ್ಯ ಸಾಹಸ ಅಕಾಡೆಮಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾರಂಭಿಸಲು ಅಗತ್ಯ ಸಹಕಾರ ನೀಡಲಾಗುವುದು ಎಂದು ಹೇಳಿದರು.

  • ಉಪಚುನಾವಣೆಯಲ್ಲಿ 2ಸ್ಥಾನ ಬಿಜೆಪಿ ಗೆಲ್ಲುತ್ತದೆ: ಕೋಟ ಶ್ರೀನಿವಾಸ್ ಪೂಜಾರಿ

    ಉಪಚುನಾವಣೆಯಲ್ಲಿ 2ಸ್ಥಾನ ಬಿಜೆಪಿ ಗೆಲ್ಲುತ್ತದೆ: ಕೋಟ ಶ್ರೀನಿವಾಸ್ ಪೂಜಾರಿ

    – ಕಾಂಗ್ರೆಸ್ ದೇಶದಲ್ಲೇ ಅಸ್ಥಿತ್ವ ಕಳೆದುಕೊಳ್ಳುವ ಸ್ಥಿತಿ ತಲುಪಿದೆ

    ಉಡುಪಿ: ಉಪಚುನಾವಣೆಯಲ್ಲಿ ಕಾಂಗ್ರೆಸ್ ದೇಶದಲ್ಲೇ ಅಸ್ಥಿತ್ವ ಕಳೆದುಕೊಳ್ಳುವ ಸ್ಥಿತಿ ತಲುಪಿದೆ. 2 ಸ್ಥಾನವನ್ನು ಬಿಜೆಪಿ ಗೆಲ್ಲುತ್ತದೆ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ವಿಶ್ವಾಸ ವ್ಯಕ್ತಪಡಿಸಿದರು.

    ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಆಡಳಿತಾತ್ಮಕ ವಿಚಾರದಲ್ಲಿ ಲೋಪದೋಷ ಇದ್ದರೆ ಆರೋಪ ಮಾಡಿ. ಅನಗತ್ಯ ಗೊಂದಲ ಸೃಷ್ಟಿಸಬೇಡಿ. ಈ ಎರಡು ಸ್ಥಾನಗಳಲ್ಲಿ ಬಿಜೆಪಿ ಗೆಲ್ಲುವುದು ಖಚಿತವೆಂದು ಹೇಳಿದ್ದಾರೆ. ಇದನ್ನೂ ಓದಿ:   50 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ ಶಿಲ್ಪಾ ಶೆಟ್ಟಿ

    ಉಡುಪಿ ಜಿಲ್ಲೆ ಕಾಪು ಪೊಲೀಸರು ವಿಜಯ ದಶಮಿ ಹಬ್ಬದ ದಿನ ಕೇಸರಿ ಬಟ್ಟೆ ಧರಿಸಿದ್ದಕ್ಕೆ ಸಿದ್ದರಾಮಯ್ಯ ಆಕ್ಷೇಪ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಶ್ರೀನಿವಾಸ ಪೂಜಾರಿ, ಸಿದ್ದರಾಮಯ್ಯ ಹಿಂದುತ್ವ ವಿರೋಧಿ ಹೇಳಿಕೆ ನೀಡುವುದು ಹೊಸತಲ್ಲ. ಎಲ್ಲರೂ ಸಮಾನರು ಅನ್ನುವುದು ಬಿಟ್ಟು ಕೆಲವರು ಮಾತ್ರ ಸಮಾನರು ಅಂತಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ:  6 ಬಾರಿ ಚಾಕುವಿನಿಂದ ಇರಿದು ಕೊಲೆ ಮಾಡಿದ ಪ್ರಿಯಕರ

    ಸಿದ್ದರಾಮಯ್ಯ ಮತ್ತು ಅವರ ಪಕ್ಷ ಯಾವ ಸ್ಥಾನದಲ್ಲಿದೆ ಅರ್ಥಮಾಡಿಕೊಳ್ಳಲಿ. ಖಾಸಗಿಯಾಗಿ ಯಾವ ಉಡುಪು ಧರಿಸಬೇಕು ಅನ್ನುವ ಹಕ್ಕು ಪೊಲೀಸರಿಗೆ ಇದೆ. ಗೊಂದಲ ಮಾಡುವುದು ಉನ್ನತ ಸ್ಥಾನದಲ್ಲಿರುವ ಸಿದ್ದರಾಮಯ್ಯಗೆ ಶೋಭೆ ತರುವುದಿಲ್ಲ ಎಂದು ಹೇಳಿದ್ದಾರೆ.

  • ಐಟಿ ದಾಳಿಗೂ, ರಾಜಕೀಯಕ್ಕೂ ಸಂಬಂಧ ಇಲ್ಲ: ಕೋಟಾ ಶ್ರೀನಿವಾಸ ಪೂಜಾರಿ

    ಐಟಿ ದಾಳಿಗೂ, ರಾಜಕೀಯಕ್ಕೂ ಸಂಬಂಧ ಇಲ್ಲ: ಕೋಟಾ ಶ್ರೀನಿವಾಸ ಪೂಜಾರಿ

    ಹಾವೇರಿ: ಐಟಿ ದಾಳಿಗೂ ರಾಜಕೀಯಕ್ಕೂ ಯಾವುದೇ ಸಂಬಂಧ ಇಲ್ಲ. ಐಟಿ ದಾಳಿ ಆದಾಯಕ್ಕೆ ಮೀರಿ ಸಂಪಾದನೆ ಮಾಡಿದವರ ಬಗ್ಗೆ ವೀಕ್ಷಣೆ ಮಾಡುತ್ತದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿಹೇಳಿದ್ದಾರೆ.

    ಹಾವೇರಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪನವರು ನಮ್ಮ ಸರ್ವೋಚ್ಚ ನಾಯಕ. ಐಟಿ ದಾಳಿಗೂ ರಾಜಕೀಯಕ್ಕೂ ಯಾವುದೇ ಸಂಬಂಧ ಇಲ್ಲ. ಐಟಿ ದಾಳಿ ಆದಾಯಕ್ಕೆ ಮೀರಿ ಸಂಪಾದನೆ ಮಾಡಿದವರ ಬಗ್ಗೆ ವೀಕ್ಷಣೆ ಮಾಡುತ್ತದೆ. ಹೀಗಾಗಿ ರಾಜಕೀಯಕ್ಕೂ, ಐಟಿ ದಾಳಿಗೂ ಸಂಬಂಧ ಇಲ್ಲ ಎಂದಿದ್ದಾರೆ. ಇದನ್ನೂ ಓದಿ: ಬಾಯಿಗೆ ಬಂದಂತೆ ಮಾತನಾಡಲು ಜನರು ನಮ್ಮನ್ನು ಆಯ್ಕೆ ಮಾಡಿಲ್ಲ: ಹಾಲಪ್ಪ

    ಇದೇ ವೇಳೆ ಹಾನಗಲ್ ಮತ್ತು ಸಿಂದಗಿ ಉಪಚುನಾವಣೆ ನಡೆಯುತ್ತಿದೆ. ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತೇವೆ. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಮತದಾರರಿಗೆ ತಲುಪಿಸುತ್ತೇವೆ. ಎರಡು ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಪಡೆಯುತ್ತಾರೆ ಹೇಳಿದ್ದಾರೆ. ಇದನ್ನೂ ಓದಿ: ಬಟ್ಟೆ ಒಗೆಯುವುದನ್ನು ಹೇಳಿಕೊಡುತ್ತೆ ಚಿಂಪಾಂಜಿ- ವೀಡಿಯೋ ವೈರಲ್

    ಯಾರನ್ನು ನಿರಾಕರಿಸಿಲ್ಲ ಅವರವರ ಹಕ್ಕುಗಳನ್ನು ಕೇಳುವುದು ಸಹಜ. ಪಕ್ಷ ಎಲ್ಲವನ್ನೂ ತೀರ್ಮಾನ ಮಾಡಿ ಟಿಕೆಟ್ ಘೋಷಣೆ ಮಾಡಿದೆ. ಈಗ ಶಿವರಾಜ್ ಸಜ್ಜನರ್ ಒಮ್ಮತ್ತದ ಅಭ್ಯರ್ಥಿಯಾಗಿದ್ದಾರೆ. ಶಿವರಾಜ್ ಸಜ್ಜನರ್ ಗೆಲುವು ನಿಶ್ಚಿತವಾಗಿದೆ ಎಂದು ನುಡಿದಿದ್ದಾರೆ.

  • ಮಕ್ಕಳನ್ನು ಸಂಘಕ್ಕೆ ಕಳುಹಿಸಿ ಐಎಎಸ್ ಅಧಿಕಾರಿಗಳಾಗುತ್ತಾರೆ- ಹೆಚ್‍ಡಿಕೆಗೆ ಕೋಟಾ ತಿರುಗೇಟು

    ಮಕ್ಕಳನ್ನು ಸಂಘಕ್ಕೆ ಕಳುಹಿಸಿ ಐಎಎಸ್ ಅಧಿಕಾರಿಗಳಾಗುತ್ತಾರೆ- ಹೆಚ್‍ಡಿಕೆಗೆ ಕೋಟಾ ತಿರುಗೇಟು

    ಮಡಿಕೇರಿ: ಮಕ್ಕಳನ್ನು ಸಂಘಕ್ಕೆ ಕಳುಹಿಸಿ ಐಎಎಸ್, ಐಪಿಎಸ್ ಅಧಿಕಾರಿಗಳಾಗುತ್ತಾರೆ ಎಂದು ಸಚಿವ ಕೊಟಾ ಶ್ರೀನಿವಾಸ ಪೂಜಾರಿ ಅವರು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರಿಗೆ ತಿರುಗೇಟು ನೀಡಿದರು.

    ಮಡಿಕೇರಿಯಲ್ಲಿ ದಸರಾ ಹಾಗೂ ತಲಕಾವೇರಿ ತೀರ್ಥೋದ್ಭವ ಸಂಬಂಧ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್‍ಎಸ್‍ಎಸ್ ತರಬೇತಿ ಪಡೆದ 4000ಕ್ಕೂ ಹೆಚ್ಚು ಐಎಎಸ್ ಅಧಿಕಾರಿಗಳಿದ್ದಾರೆ ಎಂಬ ಎಚ್‍ಡಿಕೆ ಹೇಳಿಕೆಗೆ ತಿರುಗೇಟು ನೀಡಿದರು. ಹಿಂದಿನಿಂದಲೂ ನಾವು ಅದನ್ನೇ ಹೇಳುತ್ತಿದ್ದೇವೆ. ಅವರು ಈಗ ಹೇಳುತ್ತಿದ್ದಾರೆ. ತಮ್ಮ ಮಕ್ಕಳನ್ನು ಸಂಘಕ್ಕೆ ಕಳುಹಿಸಿ ಐಪಿಎಸ್, ಐಎಎಸ್ ಅಧಿಕಾರಿಗಳಾಗುತ್ತಾರೆ ಎಂದರು. ಇದನ್ನೂ ಓದಿ: ರಾಷ್ಟ್ರಪತಿಗಳಿಗೆ ಶ್ರೀ ರಾಮಾಯಣ ದರ್ಶನಂ, ಪರ್ವ ಕಾದಂಬರಿ ನೀಡಿದ ಸುನಿಲ್ ಕುಮಾರ್

    ಸಂಘದ ಶಿಕ್ಷಣ ಪಡೆದವರು ಬುದ್ಧಿವಂತರಿರುತ್ತಾರೆ. ಸೂಕ್ಷ್ಮ ಮತಿಗಳಾಗಿರುತ್ತಾರೆ ಹೀಗಾಗಿ ಎಲ್ಲರೂ ಅರ್ಥ ಮಾಡಿಕೊಳ್ಳಬೇಕು ಎಂದು ತಿರುಗೇಟು ನೀಡಿದರು.

    ಸಂಘ ಲಂಚಪಡೆಯೋದನ್ನು, ಜನರಿಗೆ ತೊಂದರೆ ಕೊಡೋದನ್ನು ಹೇಳಿಕೊಡುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಸಿದ್ದರಾಮಯ್ಯ, ಹೆಚ್‍ಡಿಕೆ ಏನು ಹೇಳುತ್ತಾರೆ ಎಂಬುದರ ಮೇಲೆ ಸಂಘ ಕಟ್ಟಿಲ್ಲ. ಸಂಘ ರಾಷ್ಟ್ರ ಭಕ್ತಿಯನ್ನು ಹೇಳಿಕೊಡುತ್ತದೆ ಅದರ ಆಧಾರದಲ್ಲಿ ಸಂಘದ ಶಿಕ್ಷಣವಿದೆ ಎಂದು ಕುಟುಕಿದರು.