Tag: kota srinivasa poojary

  • ಸಂಪ್ರದಾಯದ ಹೆಸರಿನಲ್ಲಿ ಅನ್ಯಾಯ ಮಾಡ್ತಾರೆ ಅಂದರೆ ಅವರ ಸಂಸ್ಕೃತಿ ಬಿಂಬಿಸುತ್ತೆ: ಶ್ರೀನಿವಾಸ ಪೂಜಾರಿ

    ಸಂಪ್ರದಾಯದ ಹೆಸರಿನಲ್ಲಿ ಅನ್ಯಾಯ ಮಾಡ್ತಾರೆ ಅಂದರೆ ಅವರ ಸಂಸ್ಕೃತಿ ಬಿಂಬಿಸುತ್ತೆ: ಶ್ರೀನಿವಾಸ ಪೂಜಾರಿ

    ಹಾವೇರಿ: ಯಾರಾದರೂ ಸಂಪ್ರದಾಯದ ಹೆಸರಿನಲ್ಲಿ ಅನ್ಯಾಯ ಮಾಡುತ್ತಿದ್ದಾರೆ ಅಂದರೆ ಅದು ಅವರ ಸಂಸ್ಕೃತಿ ಬಿಂಬಿಸುತ್ತದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

    ಹಾವೇರಿ ಜಿಲ್ಲೆಯ ಹಿರೇಕೆರೂರಿನಲ್ಲಿ ಮಾತನಾಡಿ, ಕರಾವಳಿ ಭಾಗದಲ್ಲಿ ಕೆಲ ಸಂಘಟನೆಗಳಿಂದ ತಾಲಿಬಾನ್ ಮಾದರಿ ಸಂಸ್ಕೃತಿ ಹೇರಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಅವರೇನು ಹೇಳ್ತಾರೆ, ಇವರೇನು ಹೇಳ್ತಾರೆ ಅನ್ನೋದು ಯಾವುದೂ ಅಲ್ಲ. ಸಂವಿಧಾನ ಬದ್ಧವಾಗಿ ರಾಜ್ಯದ ಉಚ್ಚ ನ್ಯಾಯಾಲಯ ಸಮವಸ್ತ್ರ ಪಾಲಿಸಿ ಎಂದು ಹೇಳಿದೆ. ಅದನ್ನು ಪಾಲಿಸಬೇಕು ಅನ್ನೋದು ಸರ್ಕಾರದ ನಿಲುವಾಗಿದೆ. ಹೈಕೋರ್ಟ್ ತೀರ್ಪುನ್ನು ಮೀರಿ ಯಾರಾದರೂ ಹೇಳುತ್ತಾರೆ ಅಂದರೆ ಅವರಿಗೆ ಸಂವಿಧಾನದ ಮೇಲೆ ಇರುವ ಗೌರವವನ್ನು ಪ್ರಶ್ನಿಸುವ ಅನಿವಾರ್ಯತೆ ಇದೆ ಎಂದು ಸ್ಪಷ್ಟಪಡಿಸಿದರು.

    ಹೈಕೋರ್ಟ್ ಏನು ಹೇಳಿದೆ, ಅದಕ್ಕೆ ನಮ್ಮ ಬದ್ಧತೆ ಇದೆ. ಯಾರಾದರೂ ಸಂಪ್ರದಾಯದ ಹೆಸರಿನಲ್ಲಿ ಅನ್ಯಾಯ ಮಾಡುತ್ತಾರೆ ಅಂದರೆ ಅದು ಅವರ ಸಂಸ್ಕೃತಿ ಬಿಂಬಿಸುತ್ತದೆ. ಸಂವಿಧಾನದ ಆಶಯದಂತೆ ಕೋರ್ಟ್ ತೀರ್ಪಿನಂತೆ ಸಮವಸ್ತ್ರ ಕಡ್ಡಾಯ ಎಂದು ಈಗಾಗಲೇ ಸರ್ಕಾರ ಆದೇಶ ಕೊಟ್ಟಿದೆ. ಸರ್ಕಾರ ಕಠಿಣ ಕ್ರಮವನ್ನು ತೆಗೆದುಕೊಂಡಿದೆ ಎಂದರು. ಇದನ್ನೂ ಓದಿ: ಮಸೀದಿಗಳಲ್ಲಿ ಧ್ವನಿವರ್ಧಕ ಅಳವಡಿಸುವುದು ಮೂಲಭೂತ ಹಕ್ಕಲ್ಲ: ಅರ್ಜಿ ವಜಾ

    ಕೆಲವರು ಮತೀಯವಾದ ಇಟ್ಟುಕೊಂಡು ರಾಷ್ಟ್ರೀಯವಾದಕ್ಕೆ ಸವಾಲು ಹಾಕುವಂತಹ ವಿಚಾರ ತಾವೆಲ್ಲಾ ಕೇಳಿದ್ದೀರಿ. ಇದನ್ನು ಸ್ಪಷ್ಟವಾಗಿ ನಿಯಂತ್ರಣಕ್ಕೆ ತರುತ್ತೇವೆ. ಯಾರೂ ಕೂಡಾ ಕಾನೂನಿಗಿಂತ ಮೇಲಲ್ಲ. ನಮ್ಮ ವ್ಯವಸ್ಥೆಗಳು, ಆಚರಣೆಗಳು, ಆಲೋಚನೆಗಳು, ನಂಬಿಕೆಗಳು ನಮ್ಮ ಚೌಕಟ್ಟಿನಲ್ಲಿ ಸಾಂಪ್ರದಾಯಿಕವಾಗಿ, ಖಾಸಗಿಯಾಗಿ ಮಾಡಿಕೊಳ್ಳಬೇಕು ಎಂದು ಹೇಳಿದರು.

    ಸರ್ಕಾರಿ ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯ. ಇದನ್ನು ಉಲ್ಲಂಘಿಸಿದರೇ ಕಠಿಣ ಕ್ರಮ ಕೈಗೊಳ್ಳುತ್ತೇವೆ, ಕಾನೂನಿಗೆ ಪೂರಕವಾದ ವಾತಾವಣವನ್ನು ಒದಗಿಸುತ್ತೇವೆ. ಕಾನೂನಿಗೆ ಸೆಡ್ಡು ಹೊಡೆಯುವವರನ್ನು ನಿಯಂತ್ರಣ ಮಾಡುವ ಅಧಿಕಾರ ಇದೆ. ಅದನ್ನೂ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಉದ್ಧವ್ ಠಾಕ್ರೆ ಸಿಎಂ ಆಗಿದ್ದಕ್ಕೆ ರಾಜ್ ಠಾಕ್ರೆಗೆ ಧ್ವನಿವರ್ಧಕಗಳ ಸಮಸ್ಯೆ: ಸಂಜಯ್ ರಾವತ್

  • ಒಂದೇ ರೆಸಾರ್ಟ್‌ನಲ್ಲಿ 30ಕ್ಕೂ ಹೆಚ್ಚು ಕೋವಿಡ್ ಪ್ರಕರಣ ದೃಢ – ರೆಸಾರ್ಟ್ ಮುಚ್ಚದೆ ಎಂದಿನಂತೆ ಕಾರ್ಯ

    ಒಂದೇ ರೆಸಾರ್ಟ್‌ನಲ್ಲಿ 30ಕ್ಕೂ ಹೆಚ್ಚು ಕೋವಿಡ್ ಪ್ರಕರಣ ದೃಢ – ರೆಸಾರ್ಟ್ ಮುಚ್ಚದೆ ಎಂದಿನಂತೆ ಕಾರ್ಯ

    ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಹೊಸ ವರ್ಷಾಚರಣೆ ಬಳಿಕ ರೆಸಾರ್ಟ್ ಸಿಬ್ಬಂದಿಗೆ ಕೋವಿಡ್ ವಕ್ಕರಿಸುತ್ತಿದೆ. ರೆಸಾರ್ಟ್ ಸಿಬ್ಬಂದಿಗೆ ಕೋವಿಡ್ ಬಂದರೂ ರೆಸಾರ್ಟ್‍ಗಳನ್ನು ಮಾತ್ರ ಸೀಲ್‍ಡೌನ್ ಮಾಡುತ್ತಿಲ್ಲ. ಈ ಕುರಿತು ಕೊಡಗು ಕೋವಿಡ್ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಶುಕ್ರವಾರವಷ್ಟೇ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದ್ದರು. ಅವರ ಮಾತಿಗೂ ರೆಸಾರ್ಟ್‍ನಲ್ಲಿ ಬೆಲೆಯಿಲ್ಲದಂತಾಗಿದೆ.

    ಮಡಿಕೇರಿ ತಾಲೂಕಿನ ಮೇಕೇರಿ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಕೂರ್ಗ್ ವೈಲ್ಡರ್ಸ್ ರೆಸಾರ್ಟ್ ನ 31 ಸಿಬ್ಬಂದಿಗೆ ಕೋವಿಡ್ ದೃಢಪಟ್ಟಿದ್ದರೂ, ರೆಸಾರ್ಟ್ ಸೀಲ್‌ಡೌನ್‌ ಮಾಡಿಲ್ಲ. ಬದಲಾಗಿ ಸೋಂಕು ದೃಢಪಟ್ಟಿರುವ ಸಿಬ್ಬಂದಿಯನ್ನು ಪ್ರತ್ಯೇಕವಾಗಿರಿಸಿ ರೆಸಾರ್ಟ್ ಎಂದಿನಂತೆ ಕಾರ್ಯನಿರ್ವಹಿಸುತ್ತಿದೆ. ಸ್ಥಳಕ್ಕೆ ಭೇಟಿ ನೀಡಿದ ಕೊಡಗು ಡಿಹೆಚ್‍ಓ ವೆಂಕಟೇಶ್ ರೆಸಾರ್ಟ್ ಸೀಲ್‌ಡೌನ್‌ ಮಾಡುವಂತೆ ವ್ಯವಸ್ಥಾಪಕರಿಗೆ ತಿಳಿಸಿದ್ದರು. ಇದನ್ನೂ ಓದಿ: ಪೊಲೀಸರನ್ನು ನೋಡಿ ಮಾಸ್ಕ್ ಹಾಕಬೇಡಿ – ಬೈಕ್ ಸವಾರನಿಗೆ ಮನವಿ ಮಾಡಿದ ಪೇದೆ 

    ಸ್ಥಳಕ್ಕೆ ಬಂದ ಮಡಿಕೇರಿ ತಹಶೀಲ್ದಾರ್ ಮಹೇಶ್, ಸೋಂಕಿತ ರೆಸಾರ್ಟ್ ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲಾಗಿರುವ ಸ್ಥಳಕ್ಕಷ್ಟೇ ಹೋಗಿ ಪರಿಶೀಲನೆ ನಡೆಸಿದರು. ಆದರೆ ರೆಸಾರ್ಟ್ ಏಳು ದಿನಗಳವರೆಗೆ ಸೀಲ್ ಡೌನ್ ಮಾಡುವ ಬಗ್ಗೆ ಯಾವುದೇ ಮಾತಾಡಲಿಲ್ಲ.

    ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ತಹಶೀಲ್ದಾರ್ ಮಹೇಶ್, ಕೋವಿಡ್ ಸೋಂಕಿತ ಸಿಬ್ಬಂದಿಯನ್ನು ಪ್ರತ್ಯೇಕವಾಗಿರಿಸಲಾಗಿದೆ. ರೆಸಾರ್ಟ್‍ಗೆ ಇದರಿಂದ ಯಾವುದೇ ಸಮಸ್ಯೆ ಇಲ್ಲ ಎಂದು ಬೇಜವಾಬ್ದಾರಿಯ ಉತ್ತರ ನೀಡಿದ್ದಾರೆ. ಸೋಂಕಿತರನ್ನು ಏಳು ದಿನಗಳ ಕಾಲ ಪ್ರತ್ಯೇಕವಾಗಿ ಇರಿಸಲಾಗುವುದು. ಅವರಿಗೆ ಏಳು ದಿನಗಳ ಬಳಿಕ ಮತ್ತೊಮ್ಮೆ ಕೋವಿಡ್ ಪರೀಕ್ಷೆ ಮಾಡಲಾಗುವುದು. ಆಗಲೂ ಪಾಸಿಟಿವ್ ಬಂದರೆ ನಿಯಮದಂತೆ ಕ್ರಮಕೈಗೊಳ್ಳಲಾಗುವುದು ಎಂದಿದ್ದಾರೆ.

    ತಹಶೀಲ್ದಾರ್ ಅವರ ಈ ನಡೆ ಹಲವು ಅನುಮಾನಗಳಿಗೆ ಎಡೆಮಾಡಿದೆ. ಶುಕ್ರವಾರವಷ್ಟೇ ಕೊಡಗು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಭೆ ನಡೆಸಿದ್ದ ಕೊಡಗು ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು, ಯಾವುದೇ ರೆಸಾರ್ಟ್ ನಲ್ಲಿ ಕೋವಿಡ್ ಪ್ರಕರಣಗಳು ಪತ್ತೆಯಾದಲ್ಲಿ ಅಂತಹ ರೆಸಾರ್ಟ್ ಅನ್ನು ಸೀಲ್ ಡೌನ್ ಮಾಡುವಂತೆ ಸೂಚಿದ್ದರು. ಆದರೆ ಮಡಿಕೇರಿ ಅಧಿಕಾರಿಗಳ ನಡೆ ಸಚಿವರ ನಿರ್ದೇಶನಕ್ಕೂ ಕವಡೆ ಮಾತಿನ ಕಿಮ್ಮತ್ತಿಲ್ವಾ ಎನ್ನೋ ಪ್ರಶ್ನೆ ಮೂಡುವಂತೆ ಮಾಡಿದೆ. ಇದನ್ನೂ ಓದಿ:  50 ಕೋಟಿ ರೂ. ಜಾಗತಿಕ ಕ್ರೆಡಿಟ್ ಕಾರ್ಡ್ ಹಗರಣ ಭೇದಿಸಿದ ಪೊಲೀಸರು – 7 ಜನ ಅರೆಸ್ಟ್ 

  • ಶ್ರೀನಿವಾಸ ಪೂಜಾರಿ ಒಂದು ರೂಪಾಯಿ ಖರ್ಚು ಮಾಡದೇ ಗೆದ್ದಿದ್ದಾರೆ: ಬಿ.ಎಲ್.ಸಂತೋಷ್

    ಶ್ರೀನಿವಾಸ ಪೂಜಾರಿ ಒಂದು ರೂಪಾಯಿ ಖರ್ಚು ಮಾಡದೇ ಗೆದ್ದಿದ್ದಾರೆ: ಬಿ.ಎಲ್.ಸಂತೋಷ್

    ಉಡುಪಿ: ಕೋಟ ಶ್ರೀನಿವಾಸ ಪೂಜಾರಿ ಒಂದು ರುಪಾಯಿ ಖರ್ಚು ಮಾಡದೇ ಗೆದ್ದಿದ್ದಾರೆ ಎಂದು ಬಿಜೆಪಿ ಸಂಘಟನಾ ರಾಷ್ಟ್ರೀಯ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಹೇಳಿದ್ದಾರೆ.

    ವಿಧಾನ ಪರಿಷತ್ ಚುನಾವಣೆ ನಡೆದು ಫಲಿತಾಂಶ ಬಂದಿದೆ. ಬುದ್ಧಿವಂತರ ಚುನಾವಣೆ ಮಾದರಿ ಎಂದೆಲ್ಲಾ ಇವರಿಗೆ ಬಿಂಬಿತವಾದ ಪರಿಷತ್ ಚುನಾವಣೆಗೆ ಕೋಟಿ ಕೋಟಿ ರೂಪಾಯಿ ಹಣದ ಹೊಳೆ ಹರಿದ ಬಗ್ಗೆ ಜಿಲ್ಲಾ ಮಟ್ಟದ ಶಕ್ತಿಕೇಂದ್ರ ಪ್ರಮುಖರ ಸಭೆಯಲ್ಲಿ ಪಾಲ್ಗೊಂಡ ಸಂತೋಷ್ ಅವರು ಖೇದ ವ್ಯಕ್ತಪಡಿಸಿದ್ದಾರೆ. ಈ ವೇಳೆ ಅವರು, ಮತಗಳು, ಮತ ಹಾಕಿದ ಪ್ರತಿನಿಧಿಗಳು ಖರೀದಿಯಾಗಿದ್ದಾರೆ ಎಂದು ವಿರೋಧ ವ್ಯಕ್ತಪಡಿಸಿದರು. ಇದನ್ನೂ ಓದಿ: ಪಠ್ಯಪುಸ್ತಕ ವಿತರಿಸದಿರುವುದು ಶಿಕ್ಷಣ ಸಚಿವರ ಅಸಮರ್ಥತೆಯ ಸಂಕೇತ: ಎಎಪಿ

    ದ.ಕ-ಉಡುಪಿ ಶೇ.99 ನಾವು ಮಾರಾಟಕ್ಕಿಲ್ಲ ಅಂತ ತೋರಿಸಿಕೊಟ್ಟಿದೆ. ವಿಧಾನಪರಿಷತ್ ಚುನಾವಣೆಯಲ್ಲಿ ಇದು ಸಾಬೀತಾಗಬೇಕು. ನಾವು ಮಾರಾಟಕ್ಕಿಲ್ಲ, ದಾಕ್ಷಿಣ್ಯಕ್ಕೆ ಒಳಗಾಗುವುದಿಲ್ಲ ಎಂದು ಪ್ರತಿಜ್ಞೆ ಮಾಡಬೇಕು. ಸಾರ್ವಜನಿಕ ವ್ಯವಸ್ಥೆಯಲ್ಲಿ ಇರುವವರಿಗೆ ಈ ಬದ್ಧತೆ ಬೇಕು ಎಂದು ಕರೆ ನೀಡಿದರು.

    ಕೆಲ ಜಿಲ್ಲೆಗಳಲ್ಲಿ ಕೋಟ್ಯಂತರ ರೂಪಾಯಿ ಪರಿಷತ್ತಿನ ಚುನಾವಣೆಗೆ ಖರ್ಚಾಗಿದೆ. ಆಮಿಷಗಳಿಗೆ ಮಣಿದು ಜನಪ್ರತಿನಿಧಿಗಳು ಮತ ಚಲಾವಣೆ ಮಾಡಿರುವುದು ಜಗಜ್ಜಾಹೀರಾಗಿದೆ. ದ.ಕ ಉಡುಪಿ ಬಿಜೆಪಿ ಅಭ್ಯರ್ಥಿ ಒಂದು ರೂಪಾಯಿ ಖರ್ಚು ಮಾಡದೆ ಗೆದ್ದಿದ್ದಾರೆ ಎಂದು ಕೋಟ ಶ್ರೀನಿವಾಸ ಪೂಜಾರಿ ಹೆಸರು ಉಲ್ಲೇಖ ಮಾಡದೇ ವಿಷಯ ಪ್ರಸ್ತಾಪ ಮಾಡಿದರು. ಇದನ್ನೂ ಓದಿ: ಪುತ್ತೂರು, ಸುಳ್ಯ, ಬೆಳ್ತಂಗಡಿ, ಕಡಬ ತಾಲೂಕಿನಲ್ಲಿ ನಿಷೇಧಾಜ್ಞೆ ಜಾರಿ

    ವಿಧಾನ ಪರಿಷತ್ ರದ್ದು ಗೊಳಿಸುವ ಸಮಯ ಬಂದಿದೆಯಲ್ಲವೇ? ಅಂತ ಪಕ್ಷದ ಹಿರಿಯ ಮತ್ತು ಸಂವೇದನೆ ಇರುವ ಕಾರ್ಯಕರ್ತರೊಬ್ಬರು ನನ್ನನ್ನು ಪ್ರಶ್ನಿಸಿದರು. ದ.ಕನ್ನಡದ ಉಡುಪಿ ಜಿಲ್ಲೆಯಲ್ಲಿ ಈ ಪ್ರಶ್ನೆ ಉದ್ಭವಿಸುವುದಿಲ್ಲ. ಯಾರೂ ವೋಟ್ ಮಾರಾಟ ಮಾಡಬಾರದು ಅದೊಂದು ನಡವಳಿಕೆ. ನಾನು ಮಾರಾಟಕ್ಕಿಲ್ಲ ಎನ್ನುವುದು ರಾಜಕಾರಣಿಯೊಬ್ಬನಿಗೆ ಇರಬೇಕಾದ ಅತಿ ದೊಡ್ಡ ಗುಣ ಎಂದು ಹೇಳಿದರು.

  • ಸಭೆಗೆ ಕೋಟಾ ಶ್ರೀನಿವಾಸ ಪೂಜಾರಿ ಗೈರು- ಕಾದು ಸುಸ್ತಾದ ಅಧಿಕಾರಿಗಳು

    ಸಭೆಗೆ ಕೋಟಾ ಶ್ರೀನಿವಾಸ ಪೂಜಾರಿ ಗೈರು- ಕಾದು ಸುಸ್ತಾದ ಅಧಿಕಾರಿಗಳು

    ಮಡಿಕೇರಿ: ದಸರಾ ಹಾಗೂ ತಲಕಾವೇರಿ ಜಾತ್ರಾ ಮಹೋತ್ಸವ ಸಭೆಗೆ ಹಾಜರಾಗದ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರಿಗಾಗಿ ಸಭೆಯಲ್ಲಿ ಕಾದು ಅಧಿಕಾರಿಗಳು ಸುಸ್ತಾಗಿ ಆಕ್ರೋಶ ವ್ಯಕ್ತಪಡಿಸಿದರು.

    ನಾಡಹಬ್ಬ ದಸರಾ ಕಾರ್ಯಕ್ರಮದ ಬಗ್ಗೆ ಈಗಾಗಲೇ ಮೈಸೂರಿನಲ್ಲಿ ತಯಾರಿ ನಡೆಸುಲಾಗುತ್ತಿದೆ. ಇತ್ತ ಮಡಿಕೇರಿ ದಸರಾ ಆಚರಣೆಗೆ ಮೂಡಿರುವ ಗೊಂದಲದ ಬಗ್ಗೆ ಹಾಗೂ ದಸರಾ ಅಚರಣೆ ಈ ಬಾರಿ ಸರಳ ರೀತಿ ಅಥವಾ ವಿಜೃಂಭಣೆಯಿಂದ ಮಾಡಬೇಕಾ ಎಂದು ಚರ್ಚೆ ನಡೆಸಲು ಸಭೆ ಕರೆಯಲಾಗಿತ್ತು. ಇದನ್ನೂ ಓದಿ: ಸುಳ್ವಾಡಿ ವಿಷ ಪ್ರಸಾದ ದುರಂತ ಪ್ರಕರಣ – ಜಾಮೀನು ಅರ್ಜಿ ಸಲ್ಲಿಸಿದ ಎರಡನೇ ಆರೋಪಿ ಅಂಬಿಕಾ

    ಈ ಸಂಬಂಧ ಇಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅಧ್ಯಕ್ಷತೆಯಲ್ಲಿ, ಮಡಿಕೇರಿ ನಗರದ ಜಿಲ್ಲಾ ಪಂಚಾಯತ್ ಸಂಭಾಗಣದಲ್ಲಿ ದಸರಾ ಹಬ್ಬ ಅಚರಣೆ ಬಗ್ಗೆ ಮತ್ತು ಅದರ ರೂಪುರೇಷೆಗಳ ಚರ್ಚೆ ಮಾಡಲು ಇಂದು ಮಧ್ಯಾಹ್ನ ಮೂರು ಗಂಟೆಗೆ ಸಭೆ ಆಯೋಜಿಸಲಾಗಿತ್ತು.

    ಈ ಹಿನ್ನೆಲೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಮಿತಿ ಸದಸ್ಯರೊಂದಿಗೆ ಸಭೆ ನಡೆಸಬೇಕಾದ ಸಚಿವ ಶ್ರೀನಿವಾಸ ಪೂಜಾರಿ ನಾಲ್ಕು ಗಂಟೆ ಆದ್ರೂ ಸಭೆಗೆ ಆಗಮಿಸಲ್ಲೇ ಇಲ್ಲ. ಇದರಿಂದಾಗಿ ಇಲಾಖೆಯ ಅಧಿಕಾರಿಗಳು ಹಾಗೂ ಸಮಿತಿಯ ಸದಸ್ಯರುಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕೊಲೆ ಮಾಡಿ ಪೀಸ್ ಪೀಸ್ ಮಾಡಿ ನದಿಗೆ ಎಸೆಯಬೇಕು ಅನ್ನೋ ಆಡಿಯೋ ಬಯಲು

     

  • ಬಲಿಷ್ಠ ಸಮುದಾಯವನ್ನು ಪ್ರವರ್ಗ 2ಎ ಗೆ ಸೇರಿಸದಂತೆ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಆಗ್ರಹ

    ಬಲಿಷ್ಠ ಸಮುದಾಯವನ್ನು ಪ್ರವರ್ಗ 2ಎ ಗೆ ಸೇರಿಸದಂತೆ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಆಗ್ರಹ

    – ಶೈಕ್ಷಣಿಕ ಸಾಮಾಜಿಕ ಸಮಿಕ್ಷೆ ವರದಿಯನ್ನು ಜಾರಿಗೆ ತನ್ನಿ
    – ಸಿಎಂ ಬೊಮ್ಮಾಯಿ, ಸಮಾಜ ಕಲ್ಯಾಣ ಸಚಿವರಿಗೆ ಮನವಿ

    ಬೆಂಗಳೂರು: ಕಾಂತರಾಜ್ ವರದಿಯನ್ನು ಜಾರಿಗೆ ತನ್ನಿ ಹಾಗೂ ಬಲಿಷ್ಠ ಸಮುದಾಯಗಳನ್ನು ಪ್ರವರ್ಗ 2 ಎ ಗೆ ಸೇರಿಸಬಾರದಂತೆ ಆಗ್ರಹಿಸಿ ಇಂದು ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ವತಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಮನವಿಯನ್ನು ಸಲ್ಲಿಸಲಾಯಿತು.

    ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷ ಎಂ.ಸಿ ವೇಣುಗೋಪಾಲ್ ಮಾತನಾಡಿ, ರಾಜ್ಯದಲ್ಲಿ ಈಗಾಗಲೇ ನಡೆಸಿರುವ ಕಾಂತರಾಜ್ ವರದಿಯನ್ನು ಜಾರಿಗೊಳಿಸಬೇಕು. ಆ ಮೂಲಕ ಜಾತಿಗೆ ಅನುಗುಣವಾಗಿ ಸರ್ಕಾರದಲ್ಲಿ ಅನುಕೂಲವಾಗಬೇಕು ಎನ್ನುವುದು ನಮ್ಮ ಉದ್ದೇಶವಾಗಿದೆ. ಅಲ್ಲದೆ 2ಎ ಗೆ ಪ್ರಬಲ ಜಾತಿಗಳನ್ನು ಸೇರಿಸಬಾರದು. ಹಾಗೆಯೇ, ಅತಿ ಹಿಂದುಳಿದ ವರ್ಗಗಳ ಮಠ ಮಾನ್ಯಗಳಿಗೆ ಸಂಘ ಸಂಸ್ಥೆಗಳೀಗೆ ಪ್ರಬಲ ಜಾತಿಗಳಿಗೆ ಕೊಟ್ಟಂತೆಯೇ ಅನುದಾನ ಕೋಡಬೇಕು. ಸಮುದಾಯ ಭವನ ವಿದ್ಯಾರ್ಥಿ ಭವನ ಸ್ಥಾಪನೆಗೆ ಅನುಕೂಲ ಮಾಡಿಕೊಡಬೇಕು ಎನ್ನುವ ಪ್ರಮುಖ ಅಂಶಗಳನ್ನು ಮುಖ್ಯಮಂತ್ರಿಗಳ ಮುಂದೆ ಪ್ರಸ್ತಾಪಿಸಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ವೈದ್ಯಕೀಯ ಸೀಟ್‍ನಲ್ಲಿ OBC ಶೇ.27, EWSಗೆ ಶೇ.10 ಮೀಸಲಾತಿ

    ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಗೌರವಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಮಾತನಾಡಿ, ಈ ನಾಡಿನಲ್ಲಿ ಆತಿ ಸಣ್ಣ ಹಾಗೂ ಅತಿ ಸೂಕ್ಷ್ಮ ಸಮುದಾಯಗಳಿವೆ, ಧ್ವನಿಯೇ ಇಲ್ಲದ ಈ ಅಸಂಘಟಿತ ಸಮುದಾಯಗಳು ತಮಗೆ ಆಸ್ಮಿತೆಯೇ ಇಲ್ಲದೆ ಸರ್ಕಾರದ ಯಾವುದೇ ನೆರವು, ಸಹಕಾರ, ಅನುದಾನ, ಮೀಸಲಾತಿಗಳನ್ನು ಪಡೆಯುವುದರಲ್ಲಿ ವಿಫಲವಾಗಿವೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡವನ್ನು ಹೊರತುಪಡಿಸಿ, ಧಾರ್ಮಿಕ ಅಲ್ಪ ಸಂಖ್ಯಾತರನ್ನು ಒಳಗೊಂಡಂತೆ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಐದು ಪ್ರವರ್ಗಗಳಿವೆ. ಈ ಐದೂ ಪ್ರವರ್ಗಗಳಿಗೆ ಶೇಕಡಾ 32 ಮೀಸಲಾತಿ ಇದೆ. ಪ್ರವರ್ಗ ಒಂದರಲ್ಲಿ 95 ಜಾತಿಗಳಿದ್ದು 4% ಮೀಸಲಾತಿ ಇದೆ. ಅಂತೆಯೇ ಪ್ರವರ್ಗ 2(ಎ) ನಲ್ಲಿ 102 ಜಾತಿಗಳಿದ್ದು, 15% ಮೀಸಲಾತಿ ಇದೆ. ಪ್ರವರ್ಗ 2(ಬಿ) ನಲ್ಲಿ ಮುಸ್ಲಿಂ ಸಮುದಾಯವಿದ್ದು ಶೇಕಡಾ 4% ಮೀಸಲಾತಿ ಇದೆ. ಪ್ರವರ್ಗ 3(ಎ) ನಲ್ಲಿ ಒಕ್ಕಲಿಗರು ಮತ್ತಿತರಿದ್ದು ಶೇಕಡಾ 4% ಮತ್ತು ಪ್ರವರ್ಗ 3(ಬಿ) ನಲ್ಲಿ ವೀರಶೈವ ಲಿಂಗಾಯಿತ ಮತ್ತಿತರ ಜಾತಿಗಳಿದ್ದು ಶೇಕಡಾ 5% ಮೀಸಲಾತಿ ಇದೆ. ದುರಂತವೆಂದರೆ ಈ ಪಟ್ಟಿಯಲ್ಲಿರುವ ಬಲಿಷ್ಟ ಮತ್ತು ಸಂಘಟಿತ ಜಾತಿಗಳು ಸಹಜವಾಗಿಯೇ ಪ್ರಾತಿನಿದ್ಯದ ಫಲಗಳನ್ನು ಕಾಣುತ್ತಿದ್ದು, ಪ್ರವರ್ಗ ಒಂದು ಮತ್ತು 2(ಬಿ) ನಲ್ಲಿರುವ ಅತಿ ಹಿಂದುಳಿದ ಜಾತಿಗಳು ಅವಕಾಶ ವಂಚಿತವಾಗಿವೆ. ಇದನ್ನೂ ಓದಿ: ಅಕ್ಟೋಬರ್ 1ರೊಳಗೆ ಮೀಸಲಾತಿ ಪ್ರಕಟಿಸಿ- ಸರ್ಕಾರಕ್ಕೆ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಸಂದೇಶ

    ಈ ಹಿನ್ನೆಲೆಯಲ್ಲಿ ಈ ಎಲ್ಲಾ ಪ್ರವರ್ಗಗಳನ್ನು ಪುನರ್ ವರ್ಗೀಕರಣ ಮಾಡುವ ಅವಶ್ಯಕತೆ ಇದೆ. ಇದರೊಂದಿಗೆ ಸದರಿ ಪ್ರವರ್ಗಗಳು ಹಿಂದುಳಿದ ವರ್ಗಗಳ ಯಾವುದೇ ಆಯೋಗದ ಶಿಫಾರಸಿನ ಮೇಲೆ ಆದವುಗಳಲ್ಲ. ಈ ಕಾರಣಕ್ಕೆ ಇಲ್ಲಿನ ವರ್ಗೀಕರಣ ಅತ್ಯಂತ ಅವೈಜ್ಞಾನಿಕವಾದುದು ಮತ್ತು ಕುಲಶಾಸ್ತ್ರೀಯ ಅಧ್ಯಯನದ ದೃಷ್ಟಿಯಿಂದಲೂ ಅಸಮರ್ಪಕವಾದ್ದು ಎಂದು ಹೇಳಿದರು. ಇದನ್ನೂ ಓದಿ: ಪಂಚಮಸಾಲಿ 2ಎ ಮೀಸಲಾತಿ- ದುಂಡು ಮೇಜಿನ ಸಭೆಯಲ್ಲಿ ಪಂಚ ನಿರ್ಣಯ ಪಾಸ್

    ವೇದಿಕೆಯ ಗೌರವ ಸಲಹೆಗಾರರಾದ ಡಾ.ಸಿ.ಎಸ್ ದ್ವಾರಕಾನಾಥ್ ಮಾತನಾಡಿ, ರಾಜ್ಯದಲ್ಲಿ ಅತಿ ಹಿಂದುಳಿದ ಜಾತಿಗಳಿಗೆ ಸಮರ್ಪಕವಾದಂತಹ ಧ್ವನಿ ಎತ್ತುವಂತಹ ಜನರಿಲ್ಲ. ಈ ವರ್ಗಗಳಿಗೆ ದೊರಕಬೇಕಾದಂತಹ ಮೀಸಲಾತಿಯನ್ನು ಕಿತ್ತುಕೊಂಡು ಪ್ರಬಲ ಜಾತಿಗಳಿಗೆ ಅವಕಾಶ ಮಾಡಿಕೊಡುವುದು ಸರಿಯಲ್ಲ ಎನ್ನುವುದನ್ನು ಮುಖ್ಯಮಂತ್ರಿಗಳು ಹಾಗೂ ಸಚಿವರ ಗಮನಕ್ಕೆ ತಂದಿದ್ದೇವೆ. ಮಾನ್ಯ ಮುಖ್ಯಮಂತ್ರಿಗಳು ನಮ್ಮ ಎಲ್ಲಾ ಬೇಡಿಕೆಯನ್ನು ಸಾವಧಾನವಾಗಿ ಕೇಳಿಸಿಕೊಂಡಿದ್ದು ಭರವಸೆ ನೀಡಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಎಸ್.ಟಿ. ಸಮುದಾಯದ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಬಿಜೆಪಿ ಎಸ್.ಟಿ. ಮೋರ್ಚಾ ಮನವಿ

    ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಗೌರವ ಸಲಹೆಗಾರರಾದ ಡಾ. ಸಿ.ಎಸ್.ದ್ವಾರಕಾನಾಥ್, ಗೌರವ ಅಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು, ಅಧ್ಯಕ್ಷರಾದ ಎಂ.ಸಿ.ವೇಣುಗೋಪಾಲ್, ಎಂಎಲ್‍ಸಿ ಪಿ ಆರ್ ರಮೇಶ್, ಮಾಜಿ ಶಾಸಕರಾದ ನೆ.ಲ.ನರೇಂದ್ರ ಬಾಬು, ಸೇರಿದಂತೆ ಇತರೆ ಪದಾಧಿಕಾರಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: 2ಎ ಮೀಸಲಾತಿ ಹೋರಾಟ ಮುಂದುವರಿಯುತ್ತದೆ: ಯತ್ನಾಳ್

  • ಹಂತ ಹಂತವಾಗಿ ತುಳು, ಬ್ಯಾರಿ, ಕೊಂಕಣಿ ಭವನಗಳ ನಿರ್ಮಾಣ: ಕೋಟ

    ಹಂತ ಹಂತವಾಗಿ ತುಳು, ಬ್ಯಾರಿ, ಕೊಂಕಣಿ ಭವನಗಳ ನಿರ್ಮಾಣ: ಕೋಟ

    ಮಂಗಳೂರು: ಹಂತ ಹಂತವಾಗಿ ತುಳು, ಬ್ಯಾರಿ, ಕೊಂಕಣಿ ಸಾಂಸ್ಕೃತಿಕ ಭವನಗಳನ್ನು ನಿರ್ಮಾಣ ಮಾಡಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಹಿಂದು ಧಾರ್ಮಿಕ ದತ್ತಿ ಹಾಗೂ ಧರ್ಮಾದಾಯ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

    ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ತುಳು ಬ್ಯಾರಿ, ಕೊಂಕಣಿ ಅಕಾಡೆಮಿ ಅಧ್ಯಕ್ಷರೊಂದಿಗೆ ಭವನಗಳ ನಿರ್ಮಾಣ ಕುರಿತ ಸಭೆಯಲ್ಲಿ ಮಾತನಾಡಿದರು. ಜಿಲ್ಲಾ ರಂಗಮಂದಿರದ ಜೊತೆಗೆ ತುಳು, ಬ್ಯಾರಿ ಹಾಗೂ ಕೊಂಕಣಿ ಸಾಂಸ್ಕೃತಿಕ ಭವನದ ನಿರ್ಮಾಣಕ್ಕೆ ಸರ್ಕಾರದಿಂದ ಈಗಾಗಲೇ ಅನುದಾನ ಬಿಡುಗಡೆಯಾಗಿದೆ. ಆಯಾ ಅಕಾಡೆಮಿ ಭವನಗಳ ನಿರ್ಮಾಣಕ್ಕೆ ಸಂಬಂಧಿಸಿದವರು ಒಪ್ಪಿಗೆ ನೀಡಿದ್ದಾರೆ ಎಂದರು. ಇದನ್ನೂ ಓದಿ: ತುಳು ಲಿಪಿ ಯೂನಿಕೋಡ್ ನಕಾಶೆ ಸೇರ್ಪಡೆಗೆ ಕ್ರಮ- ಅರವಿಂದ ಲಿಂಬಾವಳಿ

    ಜಿಲ್ಲಾ ರಂಗಮಂದಿರಕ್ಕೆ ಮೊದಲ ಹಂತದಲ್ಲಿ 5 ಕೋಟಿರೂ., ತುಳು ಭವನ ನಿರ್ಮಾಣಕ್ಕೆ ಎರಡನೇ ಹಂತದಲ್ಲಿ 3.5 ಕೋಟಿ ರೂ., ಕೊಂಕಣಿ ಮತ್ತು ತುಳು ಅಕಾಡೆಮಿಯ ಭವನಕ್ಕಾಗಿ ಮೊದಲ ಹಂತದಲ್ಲಿ ತಲಾ 3 ಕೋಟಿ ರೂ.ಗಳನ್ನು ಸರ್ಕಾರ ಬಿಡುಗಡೆ ಮಾಡಿದೆ ಎಂದರು.

    ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಶಾಸಕ ಡಾ.ಭರತ್ ಶೆಟ್ಟಿ, ಉಪವಿಭಾಗಾಧಿಕಾರಿ ಮದನ್ ಮೋಹನ್, ತುಳು ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್‍ಸಾರ್, ಬ್ಯಾರಿ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ, ಕೊಂಕಣಿ ಅಕಾಡೆಮಿ ಅಧ್ಯಕ್ಷ ಡಾ.ಜಗದೀಶ್ ರೈ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್, ತಹಶೀಲ್ದಾರರು ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

  • ಬಿಎಸ್‍ವೈ, ಈಶ್ವರಪ್ಪ ಒಂದೇ: ಕೋಟ ಶ್ರೀನಿವಾಸ ಪೂಜಾರಿ

    ಬಿಎಸ್‍ವೈ, ಈಶ್ವರಪ್ಪ ಒಂದೇ: ಕೋಟ ಶ್ರೀನಿವಾಸ ಪೂಜಾರಿ

    ಮಡಿಕೇರಿ: ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸಚಿವ ಈಶ್ವರಪ್ಪ ಅವರು ಬೇರೆ ಅಂತ ನೀವು ತಿಳಿದುಕೊಂಡಿರಬಹುದು. ಆದರೆ ಅವರಿಬ್ಬರು ಒಂದೇ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

    ಮಡಿಕೇರಿಯ ಬಾಗಮಂಡಲ ಸಮೀಪದ ಕೋರಂಗಾಲದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜಿಪಿ ಸರ್ಕಾರದಲ್ಲಿ ಸಾಕಷ್ಟು ಒಳಜಗಳ ಗೊಂದಲಗಳಿದ್ದು, ಅವುಗಳನ್ನು ಪಂಚ ರಾಜ್ಯಗಳ ಚುನಾವಣೆ ಬಳಿಕ ರಾಜ್ಯ ಉಸ್ತುವಾರಿ ಸರಿಪಡಿಸಲಿದ್ದಾರೆ ಎಂದಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಪ್ರತಿಕ್ರಿಯಿಸಿ ಯಾವುದೇ ಸರ್ಕಾರಗಳಿದ್ದಾಗ ಗೊಂದಲ, ಸಣ್ಣ ಪುಟ್ಟ ವ್ಯತ್ಯಾಸಗಳಿರುತ್ತವೆ ಎಂದಿದ್ದಾರೆ.

    ಆಗಾಗ ಕೆಲವೊಮ್ಮೆ ಗುಡುಗು ಸಿಡಿಲು ಬಂದು ಹೋಗುತ್ತವೆ. ಆದರೆ ಅದೆಲ್ಲವೂ ತಣ್ಣಗಾಗಿ ಸರಿಯಾಗಿ, ಸುಸೂತ್ರವಾಗಿ ನಡೆದುಕೊಂಡು ಹೋಗುತ್ತವೆ. ನಮ್ಮ ಮುಖ್ಯಮಂತ್ರಿಗಳು ಸಮರ್ಥರಿದ್ದು ಉತ್ತಮ ಮತ್ತು ಬಡವರ ಪರವಾದ ಹಾಗೂ ಅಭಿವೃದ್ಧಿಯ ಕೆಲಸಗಳನ್ನು ಮಾಡುತ್ತಿದ್ದಾರೆ ಎಂದರು.

  • ಖಾಸಗಿ ದೇವಸ್ಥಾನಗಳನ್ನು ಸ್ವಾಧೀನ ಮಾಡಿಕೊಳ್ಳೋ ಪ್ರಶ್ನೆಯೇ ಇಲ್ಲ: ಕೋಟಾ

    ಖಾಸಗಿ ದೇವಸ್ಥಾನಗಳನ್ನು ಸ್ವಾಧೀನ ಮಾಡಿಕೊಳ್ಳೋ ಪ್ರಶ್ನೆಯೇ ಇಲ್ಲ: ಕೋಟಾ

    ಬೆಂಗಳೂರು: ಖಾಸಗಿ ದೇವಸ್ಥಾನಗಳನ್ನು ಸ್ವಾಧೀನ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಮುಜರಾಯಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.

    ವಿಧಾನಸಭಾ ಕಲಾಪದ ವೇಳೆ ಸಚಿವರು, ಮಾಧ್ಯಮಗಳಲ್ಲಿ ಬಂದ ಸುದ್ದಿ ನೋಡಿದ್ದೇನೆ. ಧಾರ್ಮಿಕ ದತ್ತಿ ಇಲಾಖೆಯಿಂದ ಹೊರಗಿರುವ ಖಾಸಗಿ ಸುತ್ತೋಲೆಯಿಂದ ಖಾಸಗಿ ದೇವಸ್ಥಾನದವರು ಆತಂಕ ಪಡುವ ಅಗತ್ಯ ಇಲ್ಲ. ಇದು ನಿರಂತರ ಪ್ರಕ್ರಿಯೆಯಾಗಿದೆ ಎಂದರು.

    ದೇವಸ್ಥಾನಗಳನ್ನ ನೋಂದಣಿ ಮಾಡಿಕೊಳ್ಳಬೇಕು ಅಂತ 2015ರಲ್ಲಿ ಧಾರ್ಮಿಕ ದತ್ತಿ ಕಾಯಿದೆ ತಿದ್ದುಪಡಿ ತರಲಾಗಿದೆ. ಇದರ ಅರ್ಥ ಸರ್ಕಾರ ಖಾಸಗಿ ದೇವಸ್ಥಾನಗಳ ಮೇಲೆ ಹಕ್ಕು ಚಲಾಯಿಸುವುದು, ನಿಗಾ ಇಡೋದು, ಸ್ವಾಯತ್ತ ತೆಗೆದುಕೊಳ್ಳುವುದಲ್ಲ ಎಂದು ಸ್ಪಷ್ಟಪಡಿಸಿದರು.

    ನೋಂದಣಿ ಪ್ರಕ್ರಿಯೆಯ ನೆನಪಿನ ಸುತ್ತೋಲೆ ಕೊಟ್ಟಿದ್ದೇವೆ. ಖಾಸಗಿ ದೇವಸ್ಥಾನ ಸ್ವಾಯತ್ತ ಪಡೆಯುವ ಯಾವುದೇ ಪ್ರಸಂಗ ಇಲ್ಲ. ಖಾಸಗಿ ದೇವಸ್ಥಾನ ವಶಪಡಿಸಿಕೊಳ್ಳುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ಆತಂಕ ಬೇಡ. 2011ರಲ್ಲಿ ಕಾಯಿದೆ ತಂದಿರುವುದು 2015 ರಲ್ಲಿ ಜಾರಿ ಮಾಡಿದ್ದಾರೆ. 2016, 17, 18, 19, 20ರಲ್ಲಿ ನೆನಪಿನ ಸುತ್ತೋಲೆ ಕೊಡುತ್ತಾ ಬಂದಿದ್ದೇವೆ. ಮೊನ್ನೆ ಸಹ ಅಂತಹದೇ ಸುತ್ತೋಲೆ ಕೊಟ್ಟಿದ್ದೇವೆ ಎಂದು ತಿಳಿಸಿದರು.

    ನನ್ನ ಗಮನಕ್ಕೆ ಬಾರದೇ ಇದು ರೆಗ್ಯುಲರ್ ಪ್ರೋಸಸ್ ರೀತಿ ಸುತ್ತೋಲೆ ಹೋಗಿರುತ್ತೆ. ಆದರೆ ಖಾಸಗಿ ದೇವಸ್ಥಾನಗಳ ಸ್ವಾಧೀನ ಮಾಡಿಕೊಳ್ಳುವ ಪ್ರಶ್ನೆ ಇಲ್ಲ. ವಾಪಸ್ ತೆಗೆದುಕೊಳ್ಳಬೇಕು ಅಂತ ಯಾರಾದರೂ ಹೇಳಿದ್ರೆ ಪರಿಶೀಲನೆ ಮಾಡ್ತೀವಿ. ಖಾಸಗಿ ದೇವಸ್ಥಾನಗಳು ಖಾಸಗಿಯಾಗಿಯೇ ಮುಂದುವರಿಯುತ್ತೆ ಎಂದು ಮಾಹಿತಿ ನೀಡಿದರು.

  • ಬಹುಕಾಲದ ಸಮಸ್ಯೆಗೆ ಮುಕ್ತಿ – ಮಂಗಳೂರು ತಾಲೂಕು ಉಪನೋಂದಣಿ ಕಚೇರಿಗೆ 10 ಲಕ್ಷ ಅನುದಾನ

    ಬಹುಕಾಲದ ಸಮಸ್ಯೆಗೆ ಮುಕ್ತಿ – ಮಂಗಳೂರು ತಾಲೂಕು ಉಪನೋಂದಣಿ ಕಚೇರಿಗೆ 10 ಲಕ್ಷ ಅನುದಾನ

    ಮಂಗಳೂರು: ಮಂಗಳೂರು ತಾಲೂಕು ಉಪನೋಂದಣಿ ಕಚೇರಿಗೆ 10 ಲಕ್ಷ ರೂ. ಅನುದಾನ ಬಿಡುಗಡೆಗೊಳಿಸಲಾಗಿದೆ. ಅವ್ಯವಸ್ಥೆಗಳ ಕುರಿತು ಸಾರ್ವಜನಿಕ ವಲಯದಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಕಳೆದ ಕೆಲದಿನದ ಹಿಂದೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರ ನೇತೃತ್ವದಲ್ಲಿ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಭರತ್ ಶೆಟ್ಟಿ ಅವರು ದಿಢೀರ್ ಭೇಟಿ ನೀಡಿರುವುದು ಫಲಪ್ರದವಾಗಿದೆ.

    ಉಪನೊಂದಾವಣಿ ಕೇಂದ್ರದಲ್ಲಿ ಕಂಪ್ಯೂಟರ್, ಸರ್ವರ್ ಸೇರಿದಂತೆ ತಾಂತ್ರಿಂಕ ಸಮಸ್ಯೆಗಳು ಇರೋದ್ರಿಂದ ಸಾರ್ವಜನಿಕರು ದಿನಗಟ್ಟಲೇ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಹೀಗಾಗಿ ಸಚಿವರು ಶಾಸಕರು ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಸಮಸ್ಯೆಯ ಬಗ್ಗೆ ಬೆಳಕಿಗೆ ಬಂದಿದೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಬೆಂಗಳೂರು ನೋಂದಣಿ ಮಹಾಪರಿವೀಕ್ಷಕರು ಹಾಗೂ ಮುದ್ರಾಂಕಗಳ ಆಯುಕ್ತರ ಕಚೇರಿಯಲ್ಲಿ ನಿನ್ನೆ ಸಭೆ ನಡೆದಿದ್ದು, ಕಂದಾಯ ಇಲಾಖೆಯು ಅನುದಾನವನ್ನು ಹೆಚ್ಚುವರಿ ಕಂಪ್ಯೂಟರ್ ಹಾಗೂ ಆಪರೇಟರ್ ವ್ಯವಸ್ಥೆಗೆ 10 ಲಕ್ಷ ಅನುದಾನ ಬಿಡುಗಡೆಗೊಳಿಸಿದೆ.

    ಕಂಪ್ಯೂಟರ್ ಹಾಗೂ ಆಪರೇಟರ್ ವ್ಯವಸ್ಥೆಗಳಿಗೆ ಸ್ಥಳದ ಅಭಾವವಿದ್ದು ಉಪನೋಂದಣಿ ಕಚೇರಿಯ ಕೊಠಡಿ ಸಂಖ್ಯೆ 8 ಹಾಗೂ 9ರ ನಡುವಿನ ಗೋಡೆಯನ್ನು ಕೆಡವಿ ಸ್ಥಳಾವಕಾಶ ಒದಗಿಸಲು ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಕೋರಿದೆ. ಸಾರ್ವಜನಿಕರ ಬಹುಕಾಲದ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ರಾಜ್ಯದ ಅಧಿಕಾರಿಗಳಿಗೆ ಸೂಚನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ, ವಕೀಲರ ಸಂಘದ ಪ್ರಮುಖರಿಗೆ ಶಾಸಕ ವೇದವ್ಯಾಸ್ ಕಾಮತ್ ಧನ್ಯವಾದಗಳನ್ನು ತಿಳಿಸಿದ್ದಾರೆ.

  • ಚುನಾವಣೆ ಗೆಲುವಿಗೆ ಬಂಡೆ ಅಡ್ಡಿಬರಲೇ ಇಲ್ಲ- ಡಿಕೆಶಿ ಕುಟುಕಿದ ಕೋಟ

    ಚುನಾವಣೆ ಗೆಲುವಿಗೆ ಬಂಡೆ ಅಡ್ಡಿಬರಲೇ ಇಲ್ಲ- ಡಿಕೆಶಿ ಕುಟುಕಿದ ಕೋಟ

    ಉಡುಪಿ: ರಾಜ್ಯದ ಎರಡು ಉಪಚುನಾವಣೆಗಳಲ್ಲೂ ಬಿಜೆಪಿಗೆ ಗೆಲುವಾಗಿದೆ. ರಾಜರಾಜೇಶ್ವರಿ ಕ್ಷೇತ್ರದಲ್ಲಿ ಮುನಿರತ್ನ ದಾಖಲೆ ಮತಗಳ ಅಂತರದಿಂದ ವಿಜಯಿಯಾಗಿದ್ದಾರೆ. ಶಿರಾದಲ್ಲಿ ಸಹ ಮೊದಲ ಬಾರಿಗೆ ಕಮಲ ಅರಳಿದೆ. ಈ ಬಗ್ಗೆ ಮುಜರಾಯಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಪ್ರತಿಕ್ರಿಯೆ ನೀಡಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, ರಾಮನಗರದ ಶಕ್ತಿ ಕನಕಪುರದ ಬಂಡೆ ನಮಗೆ ತಡೆಯಾಗಿಲ್ಲ. ಬಿಜೆಪಿಯ ಗೆಲುವಿನ ಓಟಕ್ಕೆ ಬಂಡಿ ಅಡ್ಡಿಯಾಗಿಲ್ಲ. ಈ ಫಲಿತಾಂಶ ಬಿಜೆಪಿಗೆ ಜನರ ಆಶೀರ್ವಾದವನ್ನು ಗಟ್ಟಿಗೊಳಿಸಿದೆ. ಪಕ್ಷದ ರಾಜ್ಯಾಧ್ಯಕ್ಷರು ಮತ್ತು ಸಿಎಂ ಯಡಿಯೂರಪ್ಪ ಅವರ ವಿಶ್ವಾಸಕ್ಕೆ ಬಲ ಬಂದಿದೆ ಎಂದು ತಿಳಿಸಿದ್ದಾರೆ.

    ಜನ ಬಿಜೆಪಿ, ಯಡಿಯೂರಪ್ಪ, ಮೋದಿಯವರ ಕೆಲಸಕ್ಕೆ ಬೆಂಬಲವನ್ನು ಕೊಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಬಿಜೆಪಿ ಮತ್ತಷ್ಟು ಶಕ್ತಿಯುತವಾಗಿ ಕೆಲಸ ಮಾಡುತ್ತದೆ. ಆಡಳಿತದಲ್ಲಿ ಬಡವರ ಪರ ಗಟ್ಟಿ ನಿರ್ಧಾರವನ್ನು ತೆಗೆದುಕೊಳ್ಳಲು ಈ ಫಲಿತಾಂಶ ಸಹಕಾರಿಯಾಗಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.