Tag: koti

  • ಏ.13ಕ್ಕೆ ಡಾಲಿ-ಪರಮ್ ಕಾಂಬಿನೇಷನ್ ನ ‘ಕೋಟಿ’ ಚಿತ್ರದ ಟೀಸರ್ ರಿಲೀಸ್

    ಏ.13ಕ್ಕೆ ಡಾಲಿ-ಪರಮ್ ಕಾಂಬಿನೇಷನ್ ನ ‘ಕೋಟಿ’ ಚಿತ್ರದ ಟೀಸರ್ ರಿಲೀಸ್

    ಡಾಲಿ ಧನಂಜಯ್ (Dolly Dhananjay) ನಟನೆಯ ‘ಕೋಟಿ’ (Kotee) ಸಿನಿಮಾದ ಟೀಸರ್ ಇದೇ ಏಪ್ರಿಲ್ 13ರಂದು ರಿಲೀಸ್ ಆಗುತ್ತಿದೆ. ಎರಡು ದಿನಗಳ ಹಿಂದೆಯಷ್ಟೇ ಟೈಟಲ್ ಅನೌನ್ಸ್ ಮಾಡಿದ್ದ ಚಿತ್ರತಂಡ ಈಗ ಟೀಸರ್ ರಿಲೀಸ್ಗೆ ಸರ್ವ ಸಿದ್ಧತೆ ಮಾಡಿಕೊಂಡಿದೆ. ಕನ್ನಡ ಕಿರುತೆರೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಪರಮ್ ಈ ಸಿನಿಮಾದ ನಿರ್ದೇಶಕರು.

    ಕಿರುತೆರೆಯಲ್ಲಿ ಹತ್ತು ಹಲವು ಪ್ರಯೋಗಗಳ ಮೂಲಕ ಗಮನ ಸೆಳೆದಿದ್ದವರು ಪರಮ್.‌ ಕಲರ್ಸ್‌ ಕನ್ನಡ ವಾಹಿನಿಯನ್ನು ಅವರು ಮುನ್ನಡೆಸುತ್ತಿದ್ದಾಗ ಅತಿ ಹೆಚ್ಚು ಕನ್ನಡ ಮೂಲದ ಕತೆಗಳನ್ನು ಅವರು ಕೊಟ್ಟಿದ್ದು ನಿಮಗೆಲ್ಲಾ ಗೊತ್ತೇ ಇದೆ. ಈಗ ಅಪ್ಪಟ ಕನ್ನಡದ ಕತೆಯೊಂದಿಗೆ ಅವರು ಮೊದಲ ಬಾರಿ ಸಿನಿಮಾ ಒಂದನ್ನು ನಿರ್ದೇಶಿದ್ದಾರೆ.

    ಯುಗಾದಿ ಹಬ್ಬದ ದಿನದಂದು ಕೋಟಿ ಚಿತ್ರದ ಟೈಟಲ್‌ ಬಿಡುಗಡೆಯಾಗಿದೆ. ಐದುನೂರು ರೂಪಾಯಿ ನೋಟುಗಳನ್ನು ಮಡಿಚಿ ಮಾಡಿರುವಂತೆ ಕಾಣಿಸುವ ಕೋಟಿ ಟೈಟಲ್‌ನಲ್ಲಿ ಕೇವಲ ಧನಂಜಯ್‌ ಅವರ ಕಣ್ಣುಗಳನ್ನು ಮಾತ್ರ ಬಳಸಿಕೊಂಡಿರುವುದು ವಿಶೇಷ. ತೀಕ್ಷ್ಣ ಕಣ್ಣುಗಳಿಂದ ಈ ಪೋಸ್ಟರ್‌ ಗಮನ ಸೆಳೆಯುತ್ತಿರುವುದಂತೂ ಹೌದು.‌

    ಕೋಟಿ ಕನಸು ಕಾಣುವ ಒಬ್ಬ ಕಾಮನ್‌ ಮ್ಯಾನ್‌ ಕತೆ ಇದು ಎನ್ನುವುದನ್ನು ಶೀರ್ಷಿಕೆ ಹೇಳುವಂತಿದೆ. ದುಡ್ಡಿಗಾಗಿ ಒದ್ದಾಡುವ ಒಬ್ಬ ಸಾಮಾನ್ಯ ಮನುಷ್ಯನ ಭಾವನೆಗಳನ್ನು ಈ ಸಿನಿಮಾ ಹೇಳಬಹುದು ಎಂಬ ಸೂಚನೆಯನ್ನು ಧನಂಜಯ ಆಗಲೇ ಕೊಟ್ಟಿದ್ದಾರೆ. ಹೊಯ್ಸಳ ನಂತರ ಬರುತ್ತಿರುವ ಅವರ ಮೊದಲ ಕನ್ನಡ ಚಿತ್ರ ಇದು. ಅಲ್ಲಿಗೆ ಡಾಲಿ ಧನಂಜಯ ಅವರ ಚಿತ್ರ ವರ್ಷದ ಅಂತರದ ನಂತರ ಬಿಡುಗಡೆ ಆಗುತ್ತಿದೆ. ನಟ ರಾಕ್ಷಸ ಎಂದು ಬಿರುದು ಪಡೆದಿರುವ ಡಾಲಿ ಅವರ ವೃತ್ತಿ ಜೀವನದಲ್ಲಿ ಇದೊಂದು ಮೈಲುಗಲ್ಲು ಆಗಬಹುದಾದ ಸಿನಿಮಾ ಎಂಬ ಅಭಿಪ್ರಾಯ ಈಗಾಗಲೇ ಬಂದಿರುವುದು ಸಿನಿಮಾದ ಕುರಿತು ನಿರೀಕ್ಷೆಯನ್ನು ಹೆಚ್ಚು ಮಾಡಿದೆ.

    ಈ ಸಿನಿಮಾಗೆ ಕತೆ, ಚಿತ್ರಕತೆ ಮತ್ತು ಸಂಭಾಷಣೆಯನ್ನು ಬರೆದು ಸ್ವತಃ ಪರಮ್‌ (Parameshwar Gundkal) ನಿರ್ದೇಶನದ ಜವಾಬ್ದಾರಿಯನ್ನೂ ಹೊತ್ತಿದ್ದಾರೆ. ಇದರೊಂದಿಗೆ ಸಿನಮಾ ಮಾಡಬೇಕು ಎಂಬ ಅವರ ಬಹುದಿನಗಳ ಕನಸು ನೆರವೇರಿದಂತಾಗಿದೆ. ಕಳೆದ ವರ್ಷ ಟೆಲಿವಿಷನ್‌ ಚಾನೆಲ್ಲಿನಿಂದ ಹೊರಗೆ ಬಂದಾಗ ತಾನು ಹಿರಿತೆರೆಯಲ್ಲಿ ಕತೆಗಳನ್ನು ಹೇಳಬೇಕು ಎಂದು  ಅವರು ಆಸೆ ಪಟ್ಟಿದ್ದನ್ನು ಇಲ್ಲಿ ನೆನಪು ಮಾಡಿಕೊಳ್ಳಬಹುದು.

     

    ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿರುವುದು ಜಿಯೋ ಸ್ಟುಡಿಯೋಸ್‌ ನ ಜ್ಯೋತಿ ದೇಶಪಾಂಡೆ. ಈ ವರ್ಷ ಒಂದಾದ ಮೇಲೆ ಒಂದು ಹಿಟ್‌ ಹಿಂದಿ ಸಿನಿಮಾಗಳನ್ನು ಕೊಟ್ಟಿರುವ ಜ್ಯೋತಿ ಮತ್ತು ಜಿಯೋ ಸ್ಟುಡಿಯೋಸ್ ಈ ಮೂಲಕ ಕನ್ನಡಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ವಾಸುಕಿ ವೈಭವ್‌ ಹಾಡುಗಳನ್ನು ಸಂಯೋಜನೆ ಮಾಡಿದ್ದರೆ ನೊಬಿನ್‌ ಪೌಲ್‌ ಹಿನ್ನೆಲೆ ಸಂಗೀತ ಕೊಟ್ಟಿದ್ದಾರೆ. ಈ ಸಿನಿಮಾಗೆ ಅರುಣ್‌ ಬ್ರಹ್ಮನ್‌ ಛಾಯಾಗ್ರಹಣವಿದೆ.

  • ಕನ್ನಡದ ‘ಸ್ನೇಹದ ಕಡಲಲ್ಲಿ’ ಸಂಗೀತ ನಿರ್ದೇಶಕ ರಾಜ್ ನಿಧನ

    ಕನ್ನಡದ ‘ಸ್ನೇಹದ ಕಡಲಲ್ಲಿ’ ಸಂಗೀತ ನಿರ್ದೇಶಕ ರಾಜ್ ನಿಧನ

    ಚಿತ್ರರಂಗ ಕಂಡ ಜನಪ್ರಿಯ ಸಂಗೀತ ನಿರ್ದೇಶಕರಾದ ಕೋಟಿ-ರಾಜ್ ಜೋಡಿಯಲ್ಲಿ ಒಬ್ಬರಾದ ರಾಜ್ ಅವರು ಮೇ 21ರಂದು ನಿಧನರಾಗಿದ್ದಾರೆ. ಹೃದಯಾಘಾತದಿಂದ (Heart Attack) ರಾಜ್ (Raj)ಅವರು ನಿಧನರಾಗಿದ್ದಾರೆ. ಇದನ್ನೂ ಓದಿ:ಅಂಬಿ ಪುತ್ರನ ಕಲ್ಯಾಣಕ್ಕೆ ಡೇಟ್ ಫಿಕ್ಸ್

    ಸಂಗೀತ ನಿರ್ದೇಶಕ ರಾಜ್ (Music Director Raj) ಅವರಿಗೆ 68 ವರ್ಷ ವಯಸ್ಸಾಗಿತ್ತು. ರಾಜ್ ಅವರು ಸಲೂರಿ ಕೋಟೆಶ್ವರ ರಾವ್ ಜೊತೆ ಸೇರಿ 150ಕ್ಕೂ ಹೆಚ್ಚು ಸಿನಿಮಾಗಳಿಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ಅದರಲ್ಲಿ ಕೆಲವು ಕನ್ನಡ ಸಿನಿಮಾಗಳು ಸಹ ಇವೆ. ರಾಜ್ ಹಾಗೂ ಕೋಟಿ 1982ರಿಂದ 1994ರವರೆಗೆ ಒಟ್ಟಿಗೆ ಕೆಲಸ ಮಾಡುತ್ತಾ ಸುಮಾರು 180 ಸಿನಿಮಾಗಳಿಗೆ ಸಂಗೀತ ನಿರ್ದೇಶನ ಮಾಡಿದ್ದರು. ಈ ಜೋಡಿ ಸುಮಾರು 3000 ಸಾವಿರ ಹಾಡುಗಳಿಗೆ ಸಂಗೀತ ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದಾರೆ. 1994ರ ಬಳಿಕ ಇಬ್ಬರೂ ಸಂಗೀತ ನಿರ್ದೇಶಕರು ಬೇರಾಗಿ ಏಕಾಂಗಿಯಾಗಿ ಸಿನಿಮಾಗಳಿಗೆ ಸಂಗೀತ ನಿರ್ದೇಶನ ಮಾಡಲು ಆರಂಭಿಸಿದರು.

    ರಾಜ್- ಕೋಟಿ ಕನ್ನಡದ ಸಿನಿಮಾಗಳಿಗೂ ಸಂಗೀತ ನಿರ್ದೇಶನ ಮಾಡಿದ್ದಾರೆ. ಕನ್ನಡದ ಸ್ನೇಹದ ಕಡಲಲ್ಲಿ (Snehada Kadalali), ಎದುರು ಮನೇಲಿ ಗಂಡ, ಪಕ್ಕದ ಮನೇಲಿ ಹೆಂಡ್ತಿ, ನಗರದಲ್ಲಿ ನಾಯಕರು, ರಾಯರು ಬಂದರು ಮಾವನ ಮನೆಗೆ ಹಾಗೂ ಕಿಲಾಡಿಗಳು ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ಸಂಗೀತ ನಿರ್ದೇಶಕ ರಾಜ್ ಅವರ ನಿಧನಕ್ಕೆ ಮೆಗಾ ಸ್ಟಾರ್ ಚಿರಂಜೀವಿ (Megastar Chiranjeevi) ಅವರು ಸಂತಾಪ ಸೂಚಿಸಿದ್ದಾರೆ. ಚಿತ್ರರಂಗದ ಹಲವು ಕಲಾವಿದರು ಕಂಬನಿ ಮಿಡಿದಿದ್ದಾರೆ.