Tag: Kotiganahalli Ramaiah

  • ಮೈಕ್‌ ಸೌಂಡ್‌ ಕಡಿಮೆ ಮಾಡಿ ಅಂದಿದ್ದಕ್ಕೆ ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯ ಮೇಲೆ ಹಲ್ಲೆ

    ಮೈಕ್‌ ಸೌಂಡ್‌ ಕಡಿಮೆ ಮಾಡಿ ಅಂದಿದ್ದಕ್ಕೆ ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯ ಮೇಲೆ ಹಲ್ಲೆ

    ಕೋಲಾರ: ದೇವಾಲಯದ ಬಳಿ ಮೈಕ್ ಸೆಟ್ ಜೋರು ಶಬ್ದವನ್ನು ಪ್ರಶ್ನೆ ಮಾಡಿದ ಹಿರಿಯ ಸಾಹಿತಿ, ಬರಹಗಾರ, ಪತ್ರಕರ್ತ ಕೋಟಿಗಾನಹಳ್ಳಿ ರಾಮಯ್ಯ (Kotiganahalli Ramaiah) ಮೇಲೆ ಹಲ್ಲೆ ಮಾಡಲಾಗಿದೆ.

    ಕೋಲಾರ ತಾಲೂಕು ಪಾಪರಾಜನಹಳ್ಳಿ ಗ್ರಾಮದಲ್ಲಿ ಇಂದು ಮುಂಜಾನೆ ಈ ಘಟನೆ ನಡೆದಿದೆ. ಮುನೇಶ್ವರ ಸ್ವಾಮಿ ದೇವಾಲಯದ ಬಳಿ ಮೈಕ್ ಶಬ್ದ ಜೋರಾಗಿ ಹಾಕಲಾಗಿತ್ತು. ಇದನ್ನು ಕಡಿಮೆ ಮಾಡುವಂತೆ ಕೇಳಿದ್ದಕ್ಕೆ ಹಲ್ಲೆ ಮಾಡಲಾಗಿದೆ. ಗ್ರಾಮ ಪಂಚಾಯತ್ ಸದಸ್ಯ ಮಂಜುನಾಥ್ ಸೇರಿದಂತೆ ಹಲವರು ಕೋಟಿಗಾನಹಳ್ಳಿ ರಾಮಯ್ಯ ಹಾಗೂ ಅವರ ಜೊತೆಗಿದ್ದ ಮಗನ ಮೇಲೂ ಹಲ್ಲೆ ಮಾಡಿದ್ದಾರೆ. ಇದನ್ನೂ ಓದಿ: ಹೆಚ್‌ಡಿಕೆ ನಿರ್ಮಲಾನಂದನಾಥ ಶ್ರೀಗಳ ಫೋನ್ ಟ್ಯಾಪ್ ಮಾಡಿಸಿದ್ರು: ಸಚಿವ ಚಲುವರಾಯಸ್ವಾಮಿ

    ಹಲ್ಲೆಗೊಳಗಾದ ಕೋಟಿಗಾನಹಳ್ಳಿ ರಾಮಯ್ಯ ಅವರನ್ನು ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಿಂದ ಕಣ್ಣಿಗೆ ಗಾಯವಾಗಿದ್ದು, ವೈದ್ಯರು ಆಸ್ಪತ್ರೆಗೆ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ. ಆಸ್ಪತ್ರೆಗೆ ಎಸ್ಪಿ ನಾರಾಯಣ ಅವರು ಭೇಟಿ ನೀಡಿ ಆರೋಗ್ಯ ವಿಚಾರಣೆ ಮಾಡಿದರಲ್ಲದೆ, ಆರೋಪಿಗಳ ವಿರುದ್ಧ ಕೂಡಲೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

    ಈ ಸಂಬಂಧ ಕೋಲಾರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.

  • ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್-ಸುಟ್ಟು ಬೂದಿಯಾದ ಪುಸ್ತಕ ಭಂಡಾರ

    ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್-ಸುಟ್ಟು ಬೂದಿಯಾದ ಪುಸ್ತಕ ಭಂಡಾರ

    ಕೋಲಾರ: ಶಾರ್ಟ್ ಸರ್ಕ್ಯೂಟ್ ಸಂಭವಿಸಿದ ಪರಿಣಾಮ ಸಾಹಿತಿ, ಪತ್ರಕರ್ತ ಕೋಟಿಗಾನಹಳ್ಳಿ ರಾಮಯ್ಯ ಅವರ ಮನೆ ಬೆಂಕಿಗಾಹುತಿಯಾಗಿದ್ದು, ಮನೆಯಲ್ಲಿ ಸಂಗ್ರಹಿಸಿದ್ದ ಪುಸ್ತಕ ಭಂಡಾರ ಸುಟ್ಟು ಬೂದಿಯಾಗಿದೆ.

    ಕೋಲಾರ ತಾಲೂಕು ಪಾಪರಾಜನಹಳ್ಳಿಯ ಆದಿಮ ಸಾಂಸ್ಕೃತಿಕ ಕೇಂದ್ರದಲ್ಲಿ ರಾಮಯ್ಯ ಅವರ ಮನೆ ಇದ್ದು, ಮಂಗಳವಾರ ರಾತ್ರಿ ವೇಳೆ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ. ಈ ವೇಳೆ ಮನೆಯಲ್ಲಿ ಯಾರು ಇಲ್ಲದ ಕಾರಣ ಬೆಂಕಿಯ ಜ್ವಾಲೆಗೆ ಮನೆಯಲ್ಲಿ ಸಂಗ್ರಹಮಾಡಿದ್ದ ಪುಸ್ತಕಗಳು ಸುಟ್ಟು ಬೂದಿಯಾಗಿದೆ. ಅಲ್ಲದೇ ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಪುಸ್ತಕಗಳು, ಟಿವಿ, ಕಂಪ್ಯೂಟರ್, ಬಟ್ಟೆಗಳು ಮತ್ತು ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿಯಾಗಿದೆ. ಸ್ಥಳೀಯರ ನೆರವಿನಿಂದ ಮನೆಯ ಬೆಂಕಿ ನಂದಿಸುವ ಕಾರ್ಯ ಮಾಡಲಾಗಿದೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

    ಕೋಲಾರದ ಆದಿಮ ಸಂಸ್ಕೃತಿಕ ಕೇಂದ್ರ ಸ್ಥಾಪನೆಯ ಹಿಂದೆ ರಾಮಯ್ಯ ಅವರು ಹೆಚ್ಚು ಶ್ರಮವಹಿಸಿದ್ದು, ಆದಿಮ ಕೇಂದ್ರದಲ್ಲೇ ಮನೆ ನಿರ್ಮಾಣ ಮಾಡಿ ವಾಸಿಸುತ್ತಿದ್ದರು. ಆದಿಮ ಕೇಂದ್ರವೂ ನೆಲ ಸಂಸ್ಕೃತಿ ಉಳಿಸಿ ಯುವ ಸಮುದಾಯಕ್ಕೆ ಪರಿಚಯಿಸುವ ಕಾರ್ಯ ಮಾಡುತ್ತಿದೆ. ಅಲ್ಲದೇ ಯುವ ಸಮುದಾಯದಲ್ಲಿರುವ ಸುಪ್ತ ಪತ್ರಿಭೆಯನ್ನು ಗುರುತಿಸಿ ನೀರೆರೆಯುವ ಕಾರ್ಯ ಮಾಡುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv