Tag: KP Agrahara

  • ಆನ್‌ಲೈನ್‌ನಲ್ಲಿ ತರಿಸಿದ್ದ ಕೇಕ್ ತಿಂದು 6ರ ಮಗು ಸಾವು?

    ಆನ್‌ಲೈನ್‌ನಲ್ಲಿ ತರಿಸಿದ್ದ ಕೇಕ್ ತಿಂದು 6ರ ಮಗು ಸಾವು?

    – ತಂದೆ, ತಾಯಿ ಕೂಡ ಅಸ್ವಸ್ಥ

    ಬೆಂಗಳೂರು: ನಗರದ ಕೆಪಿ ಅಗ್ರಹಾರದಲ್ಲಿ (KP Agrahara) ತಂದೆ, ತಾಯಿ ಅಸ್ವಸ್ಥರಾಗಿದ್ದು, ಆರು ವರ್ಷದ ಮಗು ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಮಂಗಳವಾರ ಸಂಜೆ ಆನ್‌ಲೈನ್‌ನಲ್ಲಿ ತರಿಸಿದ್ದ ಕೇಕ್ ತಿಂದು ಈ ಸ್ಥಿತಿಗೆ ಕಾರಣವಾಯ್ತಾ ಎಂಬ ಶಂಕೆ ವ್ಯಕ್ತವಾಗಿದೆ.

    ವಿನಯ್ (6) ಮೃತ ಮಗು. ಕೇಕ್ ತಿಂದು ಮಂಗಳವಾರ ತೀವ್ರವಾಗಿ ಅಸ್ವಸ್ಥಗೊಂಡು, ಇಂದು ಬೆಳಗ್ಗೆ ಸಾವನ್ನಪ್ಪಿದೆ.ಇದನ್ನೂ ಓದಿ: Uttar Pradesh | ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಬೆಂಕಿ – ಐವರು ಸಜೀವ ದಹನ

    ಕುಟುಂಬದಲ್ಲಿ ನಾಲ್ವರು ಇದ್ದು, ಹೆಣ್ಣು ಮಗು ಸಂಬಂಧಿಕರ ಮನೆಗೆ ಹೋಗಿತ್ತು. ಮನೆಯಲ್ಲಿ ಮೂವರೇ ಇದ್ದ ಕಾರಣ ಮಂಗಳವಾರ ಸಂಜೆ ಆನ್‌ಲೈನ್‌ನಲ್ಲಿ ಕೇಕ್ ತರಿಸಿದ್ದರು. ಕೇಕ್ ತಿಂದ ಬಳಿಕ ಮಗು ತೀವ್ರವಾಗಿ ಅಸ್ವಸ್ಥಗೊಂಡು, ಬೆಳಿಗ್ಗೆ ಅಷ್ಟರಲ್ಲಿ ಸಾವನ್ನಪ್ಪಿತ್ತು. ಅದಾದ ಬಳಿಕ ತಂದೆ, ತಾಯಿ ಕೂಡ ಅಸ್ವಸ್ಥಗೊಂಡಿದ್ದರು. ಸದ್ಯ ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಸದ್ಯ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಬಳಿಕ ಎಫ್‌ಎಸ್‌ಎಲ್‌ಗೆ ರವಾನಿಸಲಿದ್ದಾರೆ. ಕಿಮ್ಸ್ ವೈದ್ಯರು ದೇಹದ ಇತರೆ ಭಾಗಗಳನ್ನು ಪರೀಕ್ಷೆಗೆ ಒಳಪಡಿಸಿ ಸಾವಿಗೆ ನಿಖರವಾದ ಕಾರಣವನ್ನು ಪತ್ತೆ ಹಚ್ಚಲಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದ್ದಾರೆ.ಇದನ್ನೂ ಓದಿ: `ಥಗ್‌ಲೈಫ್’ ರಿಲೀಸ್‌ಗೆ ಸುಪ್ರೀಂ ಗ್ರೀನ್ ಸಿಗ್ನಲ್ – ಕನ್ನಡ ಪರ ಸಂಘಟನೆಯ ಪ್ರಮುಖರಿಗೆ ಪೊಲೀಸರಿಂದ ನೋಟಿಸ್

  • ಪತ್ನಿ ಮನೆಬಿಟ್ಟು ಹೋಗಿದ್ದಕ್ಕೆ ಬೇಸತ್ತು ಪತಿ ಆತ್ಮಹತ್ಯೆ

    ಪತ್ನಿ ಮನೆಬಿಟ್ಟು ಹೋಗಿದ್ದಕ್ಕೆ ಬೇಸತ್ತು ಪತಿ ಆತ್ಮಹತ್ಯೆ

    ಬೆಂಗಳೂರು: ಪತ್ನಿ ಮನೆಬಿಟ್ಟು ಹೋಗಿದ್ದಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕೆ.ಪಿ.ಅಗ್ರಹಾರದಲ್ಲಿ (KP Agrahara) ನಡೆದಿದೆ.

    ಗೋವರ್ಧನ್ ಆತ್ಮಹತ್ಯೆಗೊಳಗಾದ ಪತಿ. ಗೋವರ್ಧನ್ ಹಾಗೂ ಪ್ರಿಯಾ ಏಳು ವರ್ಷಗಳ ಹಿಂದೆ ವಿವಾಹವಾಗಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಪತ್ನಿ ಆಗಾಗ ಮನೆ ಬಿಟ್ಟು ಹೋಗುತ್ತಿದ್ದಳು. ಆದರೆ ಕಳೆದ ಒಂದು ತಿಂಗಳ ಹಿಂದೆ ಮನೆಬಿಟ್ಟು ಹೋಗಿದ್ದ ಪತ್ನಿ ವಾಪಸ್ಸಾಗಿರಲಿಲ್ಲ. ಹೀಗಾಗಿ ಗೋವರ್ಧನ್ ಖಿನ್ನತೆಗೊಳಗಾಗಿದ್ದರು. ಭಾನುವಾರ ರಾತ್ರಿ ಮನೆಗೆ ಬಂದು ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಇದನ್ನೂ ಓದಿ: ಸುಹಾಸ್ ಶೆಟ್ಟಿ ಹತ್ಯೆಯಂತೆಯೇ ಅಶ್ರಫ್, ರಹಿಮಾನ್ ಹತ್ಯೆಯನ್ನೂ ಎನ್‌ಐಎಗೆ ವಹಿಸಿ: ಮಂಜುನಾಥ ಭಂಡಾರಿ

    ಸೋಮವಾರ ಸಂಜೆಯಾದರೂ ಮನೆಯಿಂದ ಹೊರಬರದ ಕಾರಣ ಅನುಮಾನ ಉಂಟಾಗಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಕೆ.ಪಿ ಅಗ್ರಹಾರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

    ಹೆಂಡತಿ ಮನೆಬಿಟ್ಟು ಹೋಗಿದ್ದಕ್ಕೆ ಬೇಸತ್ತು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಗೋವರ್ಧನ್ ಸಾವಿಗೆ ಪತ್ನಿ ಪ್ರಿಯಾ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.ಇದನ್ನೂ ಓದಿ: 6 ಜನರಿದ್ದ ವಿಮಾನ ಸಾಗರದಲ್ಲಿ ಪತನ

  • ಬೆಂಗಳೂರು ಮಳೆಗೆ ಎರಡನೇ ಬಲಿ – ರಾಜಕಾಲುವೆಯಲ್ಲಿ ಕೊಚ್ಚಿ ಹೋದ ಯುವಕ

    ಬೆಂಗಳೂರು ಮಳೆಗೆ ಎರಡನೇ ಬಲಿ – ರಾಜಕಾಲುವೆಯಲ್ಲಿ ಕೊಚ್ಚಿ ಹೋದ ಯುವಕ

    ಬೆಂಗಳೂರು: ಭಾನುವಾರ ನಗರದಲ್ಲಿ (Bengaluru) ಸುರಿದ ಮಹಾಮಳೆಗೆ (Rain) ಯುವಕನೋರ್ವ ರಾಜಕಾಲುವೆಯಲ್ಲಿ (Raja Kaluve) ಕೊಚ್ಚಿ ಹೋದ ಘಟನೆ ಕೆಪಿ ಅಗ್ರಹಾರದ (KP Agrahara) ಬಳಿ ನಡೆದಿದೆ.

    ಕೊಚ್ಚಿ ಹೋಗಿದ್ದ ಯುವಕನನ್ನು ಲೋಕೇಶ್ (27) ಎಂದು ಗುರುತಿಸಲಾಗಿದೆ. ಯುವಕನ ಮೃತದೇಹ ಬ್ಯಾಟರಾಯನಪುರದ (Byatarayanapura) ರಾಜಕಾಲುವೆ ಬಳಿ ಪತ್ತೆಯಾಗಿದೆ. ಸ್ಥಳದಲ್ಲಿ ಪೊಲೀಸರು ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಲಾಗಿದೆ. ಇದನ್ನೂ ಓದಿ: ಅಂಡರ್ ಪಾಸ್‌ನಲ್ಲಿ ಟೆಕ್ಕಿ ಸಾವು – ದುರ್ಘಟನೆ ಬಳಿಕ ಎಚ್ಚೆತ್ತ BBMP

    ಈ ಸಂಬಂಧ ಕೆಪಿ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅವೈಜ್ಞಾನಿಕ ರಾಜಕಾಲುವೆ ಕಾಮಗಾರಿಯಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

    ನಗರದ ಕೆಆರ್ ಸರ್ಕಲ್‍ನ ಅಂಡರ್ ಪಾಸ್‍ನಲ್ಲಿ ನಿಂತಿದ್ದ ಮಳೆ ನೀರಿನಲ್ಲಿ ಕಾರು ಮುಳುಗಿ ಟೆಕ್ಕಿ ಭಾನುರೇಖಾ ಎಂಬುವವರು ಸಾವನ್ನಪ್ಪಿದ್ದರು. ಈಗ ಯುವಕನ ಸಾವು ಮಳೆಯಿಂದ ಆದ ಎರಡನೇ ದುರ್ಘಟನೆ ಆಗಿದೆ. ಇದನ್ನೂ ಓದಿ: ಮಳೆ ಆರ್ಭಟಕ್ಕೆ ಮನೆಗೆ ನೀರು ನುಗ್ಗಿ ಜಗ್ಗೇಶ್ ಕಾರು ಮುಳುಗಡೆ

  • ಹುಟ್ಟಿದ ಮರುಕ್ಷಣವೇ ಅನಾಥವಾಯ್ತು ಹೆಣ್ಣು ಮಗು – ಸಿಲಿಕಾನ್ ಸಿಟಿಯಲ್ಲೊಂದು ಮನಮಿಡಿಯುವ ಕಥೆ

    ಹುಟ್ಟಿದ ಮರುಕ್ಷಣವೇ ಅನಾಥವಾಯ್ತು ಹೆಣ್ಣು ಮಗು – ಸಿಲಿಕಾನ್ ಸಿಟಿಯಲ್ಲೊಂದು ಮನಮಿಡಿಯುವ ಕಥೆ

    ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದ ಮರಳು ರಾಶಿಯ ಮೇಲೆ ಹೆಣ್ಣು ಶಿಶುವೊಂದನ್ನು ಪಾಪಿ ತಾಯಿ ಅನಾಥವಾಗಿ ಬಿಟ್ಟು ಹೋಗಿರುವ ಅಮಾನವೀಯ ಘಟನೆ ಬೆಂಗಳೂರಿನ ಕೆಪಿ ಅಗ್ರಹಾರದ 25ನೇ ಕ್ರಾಸ್‍ನಲ್ಲಿ ನಡೆದಿದೆ.

    ಇಂದು ಬೆಳ್ಳಂಬೆಳಗ್ಗೆ ಮಗು ಆಳುವ ಧ್ವನಿ ಕೇಳಿದ ಸ್ಥಳೀಯರು, ನಿರ್ಮಾಣ ಹಂತದ ಕಟ್ಟದ ಬಳಿ ಬಂದಿದ್ದಾರೆ. ಈ ವೇಳೆ ಮರಳಿನ ರಾಶಿ ಮೇಲೆ ಮಗು ಇರುವುದನ್ನು ನೋಡಿ ಶಾಕ್ ಆಗಿದ್ದಾರೆ. ಕೆಲವೇ ಗಂಟೆಗಳ ಹಿಂದೆಯಷ್ಟೇ ಜನಿಸಿದ್ದ ಮಗುವನ್ನು ಬಿಟ್ಟು ಹೋದ ಆ ಪಾಪಿ ತಾಯಿಯನ್ನು ನೆನೆದು ಶಾಪ ಹಾಕಿದ್ದಾರೆ.

    ಬಳಿಕ ಮಗು ಪತ್ತೆಯಾದ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿಯನ್ನು ಸ್ಥಳಿಯರು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ತಡರಾತ್ರಿ 12 ಗಂಟೆಯ ವೇಳೆಗೆ ಬೈಕ್ ಒಂದರಲ್ಲಿ ಬಂದ ಇಬ್ಬರು ಮಹಿಳೆಯರು ಹಾಗೂ ಒಬ್ಬ ಪುರುಷ ಮಗುವನ್ನು ಎತ್ತಿಕೊಂಡು ಬಂದು ಕಟ್ಟಡದ ಬಳಿ  ಮರಳಿನ ರಾಶಿ ಮೇಲೆ ಮಲಗಿಸಿ ಎಸ್ಕೇಪ್ ಆಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಹಶಃ ಹೆಣ್ಣು ಮಗು ಎನ್ನುವ ಕಾರಣಕ್ಕೆ ಈ ರೀತಿ ಬಿಟ್ಟು ಹೋಗಿರಬಹುದು ಎಂದು ಸ್ಥಳೀಯರು ಶಂಕಿಸಿದ್ದಾರೆ.

    ಈ ವಿಷಯ ತಿಳಿದು ಸ್ಥಳಕ್ಕೆ ಬಂದ ಕೆಪಿ ಅಗ್ರಹಾರ ಪೊಲೀಸರು ಮಗುವನ್ನು ರಕ್ಷಣೆ ಮಾಡಿದ್ದಾರೆ. ಅಲ್ಲದೆ ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಆ ಪಾಪಿ ಪೋಷಕರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

    ಈ ನಡುವೆ ಇನ್ನೊಂದು ಸಂತಸದ ವಿಚಾರ ಅಂದರೆ, ಹೆಣ್ಣು ಮಗು ಎನ್ನುವ ಕಾರಣಕ್ಕೆ ಬಿಟ್ಟು ಹೋಗಿರುವ ಈ ಮಗುವನ್ನು ಸಾಕಲು ನಾ ಮುಂದು ತಾ ಮುಂದು ಅಂತ ಜನರು ಮುಗಿಬೀಳುತ್ತಿದ್ದಾರೆ.

  • ಖತರ್ನಾಕ್ ಕಳ್ಳರ ಬಂಧನ – ಕಳ್ಳರ ಐಡಿಯಾ ಕೇಳಿದ್ರೆ ನೀವೇ ದಂಗಾಗ್ತೀರಿ!

    ಖತರ್ನಾಕ್ ಕಳ್ಳರ ಬಂಧನ – ಕಳ್ಳರ ಐಡಿಯಾ ಕೇಳಿದ್ರೆ ನೀವೇ ದಂಗಾಗ್ತೀರಿ!

    – 1 ಕೋಟಿ ರೂ. ಮೌಲ್ಯದ 4 ಕೆಜಿ ಚಿನ್ನಾಭರಣ ವಶ

    ಬೆಂಗಳೂರು: ಮನೆ ಮುಂದೆ ರಂಗೋಲಿ ನೋಡಿಕೊಂಡು ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಕಳ್ಳರನ್ನು ಹೆಡೆಮುರಿಕಟ್ಟುವಲ್ಲಿ ಕೆ.ಪಿ. ಅಗ್ರಹಾರ ಪೊಲೀಸರು ಯಶಸ್ವಿಯಾಗಿದ್ದಾರೆ.

    ರಾಜಾ ಅಲಿಯಾಸ್ ಜಪಾನ್ ರಾಜಾ, ಕಿರಣ್ ಕುಮಾರ್ ಹಾಗೂ ನಾಗರಾಜ್ ಅಲಿಯಾಸ್ ಮತ್ತಿನಾಗ ಬಂಧಿತ ಆರೋಪಿಗಳು. ಬಂಧಿತರಿಂದ ಬರೋಬ್ಬರಿ 1 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಕೆ.ಪಿ.ಅಗ್ರಹಾರ ಸೇರಿದಂತೆ ವಿಜಯನಗರ, ಎಚ್‍ಎಸ್‍ಆರ್ ಲೇಔಟ್ ಹಾಗೂ ಹಲವು ಠಾಣೆಯಯಲ್ಲಿ ಪ್ರಕರಣ ದಾಖಲಾಗಿತ್ತು.

    ಕಳ್ಳತನ ಹೇಗೆ ಮಾಡ್ತಿದ್ರು?
    ಬಂಧಿತ ಆರೋಪಿಗಳು ಮೊದಲು ಬೈಕಿನಲ್ಲೇ ಮನೆಯನ್ನು ಗಮನಿಸುತ್ತಿದ್ದರು. ಮುಖ್ಯವಾಗಿ ಹಾಲಿನ್ ಪ್ಯಾಕ್, ರಂಗೋಲಿ, ಪೇಪರ್‍ಗಳನ್ನು ನೋಡಿ ಕಳ್ಳತನಕ್ಕೆ ಹೊಂಚು ಹಾಕುತ್ತಿದ್ದರು. ಯಾವ ಮನೆಯಲ್ಲಿ ರಂಗೋಲಿ ಇರುತ್ತಿರಲಿಲ್ಲವೋ ಅಥವಾ ಯಾವ ಮನೆಯಲ್ಲಿ ಹಾಲಿನ ಪ್ಯಾಕ್ ಹಾಗೂ ಪೇಪರ್‍ಗಳನ್ನು ತೆಗೆದುಕೊಳ್ಳದೇ ಇರುತ್ತಿದ್ದರೋ ಅಂತಹ ಮನೆಗಳೇ ಇವರಿಗೆ ಟಾರ್ಗೇಟ್ ಆಗಿರುತ್ತಿತ್ತು. ಮನೆಯನ್ನು ಗುರುತಿಸಿದ ಬಳಿಕ ಕ್ಷಣಮಾತ್ರದಲ್ಲಿ ಮನೆಯನ್ನು ದೋಚುತ್ತಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv