Tag: KPSC Exams

  • ಕೊನೆ ಕ್ಷಣದಲ್ಲಿ ಕೆಪಿಎಸ್‌ಸಿ ಪರೀಕ್ಷೆ ಮುಂದೂಡಿಕೆ

    ಕೊನೆ ಕ್ಷಣದಲ್ಲಿ ಕೆಪಿಎಸ್‌ಸಿ ಪರೀಕ್ಷೆ ಮುಂದೂಡಿಕೆ

    -ವಯೋಮಿತಿ ಸಡಿಲಿಕೆ ಹೊಸ ಅಧಿಸೂಚನೆ ಹೊರಡಿಸಲಿರುವ ಕೆಪಿಎಸ್‌ಸಿ

    ಬೆಂಗಳೂರು: ಸೆ.14 ಮತ್ತು 15ರಂದು ಗ್ರೂಪ್ ಬಿ ಹುದ್ದೆಗಳಿಗಾಗಿ ನಡೆಯಬೇಕಿದ್ದ ಪರೀಕ್ಷೆಗಳನ್ನು ಕೊನೆಯ ಕ್ಷಣದಲ್ಲಿ ಮುಂದೂಡಿಕೆ ಮಾಡಿ ಕೆಪಿಎಸ್‌ಸಿ (Karnataka Public Service Commission) ಆದೇಶ ಹೊರಡಿಸಿದೆ.

    3 ವರ್ಷ ವಯೋಮಿತಿ ಸಡಿಲಿಕೆಗೆ ಸರ್ಕಾರದಿಂದ ಆದೇಶ ಬಂದ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಲಾಗಿದೆ. ವಯೋಮಿತಿ ಸಡಿಲಿಕೆ ಮಾಡಿದ ಬಳಿಕ ಕೆಪಿಎಸ್‌ಸಿ (KPSC) ಹೊಸ ಅಧಿಸೂಚನೆಯನ್ನು ಹೊರಡಿಸಲಿದೆ.ಇದನ್ನೂ ಓದಿ: ಟ್ರಕ್, ಸಾರಿಗೆ ಬಸ್ ಡಿಕ್ಕಿ – 8 ಜನರು ರ್ದುಮರಣ, 30ಕ್ಕೂ ಹೆಚ್ಚು ಜನರಿಗೆ ಗಾಯ

    ಹೊಸದಾಗಿ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಬೇಕಾಗಿರುವ ಕಾರಣದಿಂದ ನಾಳೆ, ನಾಡಿದ್ದು ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ.

    ಪ್ರಕಟಣೆಯಲ್ಲಿ ಏನಿದೆ?
    ಸೆ.14 ಮತ್ತು 15ರಂದು ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಿ ಅಭ್ಯರ್ಥಿಗಳನ್ನು ಪರೀಕ್ಷಾ ಉಪಕೇಂದ್ರಗಳಿಗೆ ಹಂಚಿಕೆ ಮಾಡಲಾಗಿತ್ತು. ಸೆ.10ರ ಕರ್ನಾಟಕ ಸರ್ಕಾರದ ನಡವಳಿಗಳಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಈಗಾಗಲೇ ಹೊರಡಿಸಲಾಗಿರುವ ಅಧಿಸೂಚನೆಗಳಿಗೆ ಹಾಗೂ ಮುಂದಿನ ಒಂದು ವರ್ಷದಲ್ಲಿ ಹೊರಡಿಸಲಿರುವ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ ಗರಿಷ್ಟ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆಯನ್ನು ನೀಡಿ ಆದೇಶಿಸಿದೆ ಎಂದು ತಿಳಿಸಲಾಗಿರುತ್ತದೆ.

    ಮೇಲ್ಕಂಡ ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಸೆ.13 2024ರನ್ವಯ ಅಧಿಸೂಚಿಸಿರುವ ಎಲ್ಲಾ ಹುದ್ದೆಗಳಿಗೂ ವಯೋಮಿತಿ ಸಡಿಲಿಕೆ ಅನ್ವಯಿಸಿ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಬೇಕಾಗಿರುತ್ತದೆ. ಆದ್ದರಿಂದ ಸೆ.14 ಕನ್ನಡ ಭಾಷಾ ಪರೀಕ್ಷೆ ಮತ್ತು 15ರಂದು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಸದರಿ ಅಧಿಸೂಚನೆಯಲ್ಲಿನ ಹುದ್ದೆಗಳಿಗೆ ಇತರೆ ದಿನಾಂಕಗಳಲ್ಲಿ ನಿಗದಿಪಡಿಸಲಾಗಿದ್ದ ನಿರ್ದಿಷ್ಟ ಪತ್ರಿಕೆಗಳ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸಹ ಮುಂದೂಡಲಾಗಿದೆ.

    ಸರ್ಕಾರದ ಆದೇಶದಂತೆ ವಯೋಮಿತಿ ಸಡಿಲಿಕೆ ನೀಡಿ, ಅಭ್ಯರ್ಥಿಗಳಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ಕಾಲಾವಾಕಾಶ ಮುಕ್ತಾಯವಾದ ನಂತರ ಪರಿಷ್ಕೃತ ಪರೀಕ್ಷಾ ದಿನಾಂಕಗಳನ್ನು ತಿಳಿಸಲಾಗುವುದು ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಇದನ್ನೂ ಓದಿ: ಸರಸ ಸಲ್ಲಾಪದ ವೇಳೆ ರೆಡ್‌ಹ್ಯಾಂಡಾಗಿ ಲಾಕ್; ಪ್ರಿಯಕರನ ಜೊತೆ ಸೇರಿ ತಾಯಿಯನ್ನೇ ಕೊಂದ ಮಗಳು

  • ಕೊರೊನಾ ಕೋಲಾಹಲ- ಕೆಪಿಎಸ್‍ಸಿ ಪರೀಕ್ಷೆಗಳು ಮುಂದೂಡಿಕೆ

    ಕೊರೊನಾ ಕೋಲಾಹಲ- ಕೆಪಿಎಸ್‍ಸಿ ಪರೀಕ್ಷೆಗಳು ಮುಂದೂಡಿಕೆ

    ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಿಂದ ನಡೆಯಬೇಕಿದ್ದ ವಿವಿಧ ವಿಭಾಗಗಳ ಪರೀಕ್ಷೆಗಳನ್ನು ಮುಂದೂಡಿ ಆದೇಶ ಹೊರಡಿಸಲಾಗಿದೆ.

    ಕೊರೊನಾ ಅವಾಂತರದಿಂದಾಗಿ ಲಾಕ್‍ಡೌನ್ ಜಾರಿಯಲ್ಲಿರುವುದರಿಂದ ಮೇ, ಜೂನ್ ತಿಂಗಳಲ್ಲಿ ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ. ನಾಲ್ಕು ವಿಭಾಗಗಳ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಲಾಕ್‍ಡೌನ್ ಮುಗಿದ ಬಳಿಕ ಪರೀಕ್ಷಾ ದಿನಾಂಕ ನಿಗದಿ ಮಾಡುವುದಾಗಿ ಕರ್ನಾಟಕ ಲೋಕಸೇವಾ ಆಯೋಗದಿಂದ ಹೊರಡಿಸಲಾದ ಪ್ರಕಟಣೆಯಲ್ಲಿ ತಿಳಿಸಿದಲಾಗಿದೆ. ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿ ಪರಿಸ್ಥಿತಿ ಬಿಗಡಾಯಿಸುತ್ತಿದೆ. ಹೀಗಾಗಿ ಅನಗತ್ಯವಾಗಿ ಸಂಚರಿಸುವುದನ್ನು ನಿಷೇಧಿಸಲಾಗಿದೆ.

    ಇವತ್ತು ಒಂದೇ ದಿನ 29 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 474ಕ್ಕೇರಿದೆ. ಸಿಲಿಕಾನ್ ಸಿಟಿಗೆ ಇವತ್ತು ಬ್ಲ್ಯಾಕ್ ಫ್ರೈಡೇ ಆಗಿದ್ದು, 19 ಮಂದಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ. ಇಂದು ಬೆಳಗ್ಗೆ 11 ಮತ್ತು ಸಂಜೆ ಬುಲೆಟಿನ್ ನಲ್ಲಿ ಒಟ್ಟು 19 ಮಂದಿ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ.

    ರಾಜ್ಯದಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಸಿಗುವಂತೆ ಕಾಣುತ್ತಿಲ್ಲ. ಇಂದು ಬೆಂಗಳೂರಿನ 19 ಜನರು ಸೇರಿದಂತೆ ರಾಜ್ಯದ 29 ಜನರಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 474ಕ್ಕೆ ಏರಿಕೆ ಕಂಡಿದೆ.