Tag: KPTCL

  • KPTCL ನೌಕರರಿಗೆ ಶೇ. 20ರಷ್ಟು ವೇತನ ಪರಿಷ್ಕರಣೆ

    KPTCL ನೌಕರರಿಗೆ ಶೇ. 20ರಷ್ಟು ವೇತನ ಪರಿಷ್ಕರಣೆ

    ಬೆಂಗಳೂರು: ಕೆಪಿಟಿಸಿಎಲ್ (KPTCL) ನೌಕರರು ವೇತನ ಪರಿಷ್ಕರಣೆಗೆ ಬೇಡಿಕೆ ಇಟ್ಟಿದ್ದರು. ನಮ್ಮ ಮಂತ್ರಿಗಳು ಸುದೀರ್ಘವಾಗಿ ಚರ್ಚಿಸಿ ಶೇ. 20ರಷ್ಟು ವೇತನ (Salary) ಪರಿಷ್ಕರಣೆಗೆ ಒಪ್ಪಿದ್ದು, ಇಂದು ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ (Basavaraj Bommai) ತಿಳಿಸಿದರು.

    ಇದೇ ವೇಳೆ ಸಾರಿಗೆ ನೌಕರರಿಗೆ ಶೇ. 15ರಷ್ಟು ವೇತನ ಪರಿಷ್ಕರಣೆ ಬಗ್ಗೆಯೂ ಮಾತನಾಡಿದರು. ಸಾರಿಗೆ ಇಲಾಖೆ ನೌಕರರಿಗೆ ಶೇ. 15ರಷ್ಟು ವೇತನ ಪರಿಷ್ಕರಣೆ ಮಾಡಲು ತೀರ್ಮಾನ ಮಾಡಲಾಗಿದೆ. ಈ ಎರಡೂ ಆಜ್ಞೆ ಇಂದು ಹೊರಡಿಸಲಾಗುವುದು ಎಂದರು. ಇದನ್ನೂ ಓದಿ: ಬಿಜೆಪಿ ನಾಯಕರ ವಿರುದ್ಧ ಸೋಮಣ್ಣ ಚಾರ್ಜ್‌ಶೀಟ್‌- ಇತ್ಯರ್ಥ ಮಾಡ್ತೀವಿ ಎಂದ ಶಾ

    ಕಾಡ್ಗಿಚ್ಚು ನಿಯಂತ್ರಣಕ್ಕೆ ಕ್ರಮ: ಬೇಸಿಗೆ ಕಾಲದಲ್ಲಿ ಅಲ್ಲಲ್ಲಿ ಕಾಡ್ಗಿಚ್ಚು ಆಗುತ್ತಿದೆ. ಸಾಧ್ಯತೆ ಇರುವೆಡೆಯಲ್ಲಿ ಪೂರ್ವಭಾವಿ ತಾಂತ್ರಿಕ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಲಾಗಿದೆ. ಪ್ರಸ್ತುತ ಕಾಡ್ಗಿಚ್ಚನ್ನು ನಂದಿಸುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಸಚಿವ ಹಾಲಪ್ಪ ಆಚಾರ್ ಸೀರೆ ಹಂಚಿಕೆ – ಪ್ರತಿಭಟನೆಗೆ ಮುಂದಾದ ಕಾಂಗ್ರೆಸ್

  • ಮುಷ್ಕರಕ್ಕೂ ಮೊದಲೇ ಜಯ – KPTCL, ESCOM ನೌಕರರ ವೇತನ ಹೆಚ್ಚಳ

    ಮುಷ್ಕರಕ್ಕೂ ಮೊದಲೇ ಜಯ – KPTCL, ESCOM ನೌಕರರ ವೇತನ ಹೆಚ್ಚಳ

    ಬೆಂಗಳೂರು: ಮುಷ್ಕರಕ್ಕೆ ಕರೆ ನೀಡಿದ ಬೆನ್ನಲ್ಲೇ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಮಮಿತ (KPTCL) ಮತ್ತು ಎಲ್ಲಾ ಎಸ್ಕಾಂಗಳ ನೌಕರರ ವೇತನ ಹೆಚ್ಚಳ ಮಾಡಿ ಇಂಧನ ಸಚಿವ ಸುನೀಲ್ ಕುಮಾರ್ (Sunil Kumar) ಆದೇಶ ಪ್ರಕಟಿಸಿದ್ದಾರೆ.

    ವೇತನ  (Salary)  ಪರಿಷ್ಕರಣೆಗೆ ಪಟ್ಟು ಹಿಡಿದು, ಗುರುವಾರದಿಂದ ಎಸ್ಕಾಂ ಸಿಬ್ಬಂದಿ ಅನಿರ್ದಿಷ್ಟ ಅವಧಿಗೆ ಹೋರಾಟಕ್ಕೆ ಸಿದ್ಧರಾಗಿದ್ದ ಬೆನ್ನಲ್ಲೇ ಕೆಪಿಟಿಸಿಎಲ್ ಎಂಡಿಗೆ ಸಚಿವರು ಈ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಬ್ಬಂದಿಗೆ 2022ರಿಂದ ಪೂರ್ವಾನ್ವಯವಾಗುವಂತೆ ಶೇ.20ರಷ್ಟು ವೇತನ ಹೆಚ್ಚಳ ಮಾಡಲು ಆದೇಶಿಸಿದ್ದಾರೆ. ಇದೀಗ ಸಚಿವರ ಭರವಸೆಯಿಂದ ಎಸ್ಕಾಂ ಸಿಬ್ಬಂದಿ ಹೋರಾಟಕ್ಕೂ ಮುನ್ನವೇ ಜಯ ಸಿಕ್ಕಿದೆ.

    ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ನೌಕರರು ಗುರುವಾರ ಇಡೀ ರಾಜ್ಯದ ಎಲ್ಲಾ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಕೆಲಸ ಸ್ಥಗಿತ ಮಾಡಿ ಮುಷ್ಕರ ನಡೆಸಲು ನಿರ್ಧರಿಸಿದ್ದರು. ಲೈನ್‍ಮ್ಯಾನ್‍ಗಳಿಂದ ಹಿಡಿದು ಎಂಜಿನಿಯರ್‍ಗಳವರೆಗೆ ಸುಮಾರು 60 ಸಾವಿರ ನೌಕರರು ಮುಷ್ಕರದಲ್ಲಿ ಭಾಗಿಯಾಗಲಿದ್ದರು. ಶೇ. 40% ವೇತನ ಹೆಚ್ಚಳ ಆಗಬೇಕು. 2022ರ ಏಪ್ರಿಲ್ 1 ರಿಂದ ಬಾಕಿ ವೇತನ ಬಿಡುಗಡೆ ಮಾಡಬೇಕು. ತಕ್ಷಣವೇ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು. ವಿದ್ಯುತ್ ಕಂಪನಿಗಳ ಖಾಸಗೀಕರಣ ಉದ್ದೇಶದ ಪ್ರಸ್ತಾವಿತ ಮಸೂದೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದರು. ಇದನ್ನೂ ಓದಿ: 10 ಕ್ಷೇತ್ರಗಳಿಂದ ನನಗೆ ಆಹ್ವಾನ, ರಾಜ್ಯ ರಾಜಕಾರಣದಲ್ಲಿ ಆಸಕ್ತಿ ಇಲ್ಲ: ಡಿ.ಕೆ.ಸುರೇಶ್

    ಒಂದು ದಿನ ಕೆಪಿಟಿಸಿಎಲ್ ನೌಕರರು ಕೆಲಸ ನಿಲ್ಲಿಸಿದರೆ 1 ಸಾವಿರ ಕೋಟಿ ರೂ. ನಷ್ಟ ಸಂಭವಿಸುವ ಸಾಧ್ಯತೆಯಿದೆ. ಒಂದು ದಿನ ವಿದ್ಯುತ್ ಉತ್ಪಾದನೆ ನಿಂತರೆ ಒಂದು ವಾರ ರಾಜ್ಯಕ್ಕೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತದೆ. ಈ ಅವ್ಯವಸ್ಥೆ ಸರಿಪಡಿಸಲು 10 ರಿಂದ 15 ದಿನಗಳು ಬೇಕಾಗುತ್ತದೆ. ಇದನ್ನೂ ಓದಿ: ಆಣೆ-ಪ್ರಮಾಣದ ಪಾಲಿಟಿಕ್ಸ್ ; ಕರ್ಪೂರ ಹಚ್ಚಿ ಪ್ರಮಾಣ ಮಾಡಿದ ಮಾಗಡಿ ಶಾಸಕರ ಪತ್ನಿ

  • ಗುರುವಾರ ರಾಜ್ಯಾದ್ಯಂತ 60 ಸಾವಿರ KPTCL ನೌಕರರಿಂದ ಮುಷ್ಕರ

    ಗುರುವಾರ ರಾಜ್ಯಾದ್ಯಂತ 60 ಸಾವಿರ KPTCL ನೌಕರರಿಂದ ಮುಷ್ಕರ

    ಬೆಂಗಳೂರು: ಗುರುವಾರ ಇಡೀ ರಾಜ್ಯದ ಎಲ್ಲಾ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಕೆಲಸ ಸ್ಥಗಿತ ಮಾಡಿ ಮುಷ್ಕರ (Strike) ನಡೆಸಲು ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತ (KPTCL) ನೌಕರರು ನಿರ್ಧರಿಸಿದ್ದಾರೆ.

    ವೇತನ (Salary) ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದ್ದಾರೆ.  ನೌಕರರು ಕೆಲಸ ನಿಲ್ಲಿಸಿದರೆ ರಾಜ್ಯದ ಎಲ್ಲಾ ಕಾರ್ಖಾನೆಗಳು ಬಂದ್ ಆಗುವ ಸಾಧ್ಯತೆ ಇದೆ.

    ಲೈನ್‌ಮ್ಯಾನ್‌ಗಳಿಂದ ಹಿಡಿದು ಎಂಜಿನಿಯರ್‌ಗಳವರೆಗೆ ಸುಮಾರು 60 ಸಾವಿರ ನೌಕರರು ಮುಷ್ಕರದಲ್ಲಿ ಭಾಗಿಯಾಗಲಿದ್ದಾರೆ. ತಾಂತ್ರಿಕ ದೋಷಗಳು, ಗ್ರಾಹಕರ ಕುಂದುಕೊರತೆಗಳನ್ನು ಪರಿಹರಿಸುವುದು ಸೇರಿದಂತೆ ಯಾವುದೇ ಆಡಳಿತಾತ್ಮಕ ಕಾರ್ಯಗಳನ್ನು ನೌಕರರು ನಿರ್ವಹಿಸಲಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ವಿದ್ಯುತ್‌ ಪೂರೈಕೆಯಲ್ಲಿಅಡಚಣೆ ಎದುರಾಗುವ ಸಾಧ್ಯತೆಗಳು ಹೆಚ್ಚಿವೆ.

    ಬೇಡಿಕೆಗಳೇನು?
    ಶೇ. 40% ವೇತನ ಹೆಚ್ಚಳ ಆಗಬೇಕು.  2022ರ ಏಪ್ರಿಲ್‌ 1 ರಿಂದ ಬಾಕಿ ವೇತನ ಬಿಡುಗಡೆ ಮಾಡಬೇಕು. ತಕ್ಷಣವೇ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು. ವಿದ್ಯುತ್‌ ಕಂಪನಿಗಳ ಖಾಸಗೀಕರಣ ಉದ್ದೇಶದ ಪ್ರಸ್ತಾವಿತ ಮಸೂದೆಯನ್ನು ಹಿಂಪಡೆಯಬೇಕು. ಇದನ್ನೂ ಓದಿ: ವಜ್ರದ ವ್ಯಾಪಾರಿ ಪುತ್ರಿಯೊಂದಿಗೆ ಮೋದಿ ತವರಿನಲ್ಲಿ ಅದಾನಿ ಪುತ್ರನ ನಿಶ್ಚಿತಾರ್ಥ

    ಒಂದು ದಿನ ಕೆಪಿಟಿಸಿಎಲ್ ನೌಕರರು ಕೆಲಸ ನಿಲ್ಲಿಸಿದರೆ 1 ಸಾವಿರ ಕೋಟಿ ರೂ. ನಷ್ಟ ಸಂಭವಿಸುವ ಸಾಧ್ಯತೆಯಿದೆ. ಒಂದು ದಿನ ವಿದ್ಯುತ್ ಉತ್ಪಾದನೆ ನಿಂತರೆ ಒಂದು ವಾರ ರಾಜ್ಯಕ್ಕೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತದೆ. ಈ ಅವ್ಯವಸ್ಥೆ ಸರಿಪಡಿಸಲು 10 ರಿಂದ 15 ದಿನಗಳು ಬೇಕಾಗುತ್ತದೆ.

  • ಹೇಗೆ ಬಲಿ ಹಾಕಬೇಕೆಂದು ಗೊತ್ತಿದೆ – ಟ್ರಾನ್ಸ್‌ಫಾರ್ಮರ್ ಬದಲಿಸದ ಅಧಿಕಾರಿಗೆ ಹೆಚ್.ಡಿ.ರೇವಣ್ಣ ಕ್ಲಾಸ್

    ಹೇಗೆ ಬಲಿ ಹಾಕಬೇಕೆಂದು ಗೊತ್ತಿದೆ – ಟ್ರಾನ್ಸ್‌ಫಾರ್ಮರ್ ಬದಲಿಸದ ಅಧಿಕಾರಿಗೆ ಹೆಚ್.ಡಿ.ರೇವಣ್ಣ ಕ್ಲಾಸ್

    ಹಾಸನ: ಇನ್ನೂ ಎರಡು ತಿಂಗಳಲ್ಲಿ ನಿಮ್ಮ ಅಧಿಕಾರಿ ಸಿಗದೇ ಎಲ್ಲಿಗೂ ಹೋಗಲ್ಲ. ಹೇಗೆ ಬಲಿ ಹಾಕಬೇಕೆಂದು ಗೊತ್ತಿದೆ ಎಂದು ಕೆಟ್ಟಿದ್ದ ಟ್ರಾನ್ಸ್‌ಫಾರ್ಮರ್ (Transformer) ಬದಲಿಸಲು ಕ್ರಮಕೈಗೊಳ್ಳದ ಕೆಪಿಟಿಸಿಎಲ್ (KPTCL) ಸಹಾಯಕ ಅಧಿಕಾರಿಯ ವಿರುದ್ಧ ಮಾಜಿ ಸಚಿವ ಹೆಚ್.ಡಿ.ರೇವಣ್ಣ (H.D.Revanna) ಹರಿಹಾಯ್ದಿದ್ದಾರೆ.

    ಹಾಸನದ (Hassan) ಮೆಳಗೋಡು (Melagodu) ಗ್ರಾಮದ ಅಹವಾಲು ಸ್ವೀಕಾರ ಸಭೆಯಲ್ಲಿ ಮಾತನಾಡಿದ ಅವರು, ಕೆಟ್ಟಿದ್ದ  ಟ್ರಾನ್ಸ್‌ಫಾರ್ಮರ್ ಬದಲಾಯಿಸಿಲ್ಲ ಎಂದು ಅಧಿಕಾರಿ ಅರ್ಜುನ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ನಾನು ಹತ್ತು ರೂ. ಮುಟ್ಟದೆ ಕೆಲಸ ಕೊಟ್ಟೆ. ಈಗ ಜನರ ಸೇವೆ ಮಾಡಿ ಎಂದರೆ ನಾಟಕ ಮಾಡುತ್ತಿದ್ದೀರಿ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್, ಪೊಲೀಸರ ನಡುವೆ ಗುಂಡಿನ ಚಕಮಕಿ- ಆರೋಪಿ ಅಂದರ್

    ಗ್ರಾಮದ ಜನರು ಕುಡಿಯುವ ನೀರು (Drinking water), ಚರಂಡಿ ವ್ಯವಸ್ಥೆ ಹಾಗೂ ವಿದ್ಯುತ್ ಬಿಟ್ಟು ಮತ್ತೇನು ಕೇಳುತ್ತಾರೆ? ಇನ್ನೂ ಎರಡು ತಿಂಗಳಲ್ಲಿ ನಮ್ಮ ಸರ್ಕಾರ ಬರಲಿದೆ. ನಿಮ್ಮ ಅಧಿಕಾರಿ ಎಲ್ಲೂ ಹೋಗಲ್ಲ. ಬಲಿ ಹಾಕ್ತೀನಿ ಎಂದು ಅರ್ಜುನ್ ಅವರ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ಉಮೇಶ್ ಪಾಲ್ ಹತ್ಯೆ ಕೇಸ್ – ಮತ್ತೊಂದು ಎನ್‌ಕೌಂಟರ್‌ಗೆ ಗುಂಡು ಹಾರಿಸಿದ್ದ ವ್ಯಕ್ತಿಯೂ ಸಾವು

  • KPTCL ನೇಮಕಾತಿ ಪರೀಕ್ಷೆ ಅಕ್ರಮ – ಮೂವರು ಯುವತಿಯರು ಸೇರಿ ನಾಲ್ವರು ಅರೆಸ್ಟ್

    KPTCL ನೇಮಕಾತಿ ಪರೀಕ್ಷೆ ಅಕ್ರಮ – ಮೂವರು ಯುವತಿಯರು ಸೇರಿ ನಾಲ್ವರು ಅರೆಸ್ಟ್

    ಬೆಳಗಾವಿ: ಇಲ್ಲಿನ ಗೋಕಾಕ್ ನಗರದಲ್ಲಿ ನಡೆದಿದ್ದ ಕೆಪಿಟಿಸಿಎಲ್ (KPTCL) ನೇಮಕಾತಿ ಪರೀಕ್ಷೆಯ ಅಕ್ರಮದಲ್ಲಿ ಭಾಗಿಯಾಗಿದ್ದವರಲ್ಲಿ ಇನ್ನೂ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಒಟ್ಟು ಬಂಧಿತ ಆರೋಪಿಗಳ ಸಂಖ್ಯೆ 45ಕ್ಕೆ ತಲುಪಿದೆ.

    ಗೋಕಾಕ್ ತಾಲೂಕು ಮರಡಿಮಠ ಗ್ರಾಮದ ವೈಷ್ಣವಿ ಸನದಿ (21), ಉಪ್ಪಾರಟ್ಟಿಯ ಸುಧಾರಾಣಿ ಅರಬಾಂವಿ (24), ತುಕ್ಕಾನಟ್ಟಿಯ ಐಶ್ವರ್ಯ ಬಾಗೆವಾಡಿ ಹಾಗೂ ಬಗರನಾಳದ ಗ್ರಾಮದ ಬಸವರಾಜ ಹಾವಡಿ (27) ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.  ಇದನ್ನೂ ಓದಿ: ಸಾಲದ ಹಣಕ್ಕಾಗಿ ಚಿತ್ರಹಿಂಸೆ, ಕಿಡ್ನಾಪ್, ಕೊಲೆ – 9 ತಿಂಗಳ ಬಳಿಕ ಚಾರ್ಮಾಡಿಯಲ್ಲಿ ಯುವಕನ ಶವಕ್ಕಾಗಿ ಶೋಧ

    ಬಂಧಿತರು ಕಳೆದ ಆಗಸ್ಟ್ 7 ರಂದು ನಡೆದ ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆಗೆ ನಡೆದ ನೇಮಕಾತಿ ಪರೀಕ್ಷೆಯಲ್ಲಿ ಎಲೆಕ್ಟ್ರಾನಿಕ್ ಡಿವೈಸ್ (Electronic Device) ಮತ್ತು ಮೈಕ್ರೋಚಿಪ್ ತೆಗೆದುಕೊಂಡು ಹೋಗಿ ಪರೀಕ್ಷೆ ಬರೆದಿದ್ದರು. ಇದೀಗ ನಾಲ್ವರನ್ನು ಬಂಧಿಸಿರುವ ಪೊಲೀಸರು (Police), ಎಲೆಕ್ಟ್ರಾನಿಕ್‌ ಡಿವೈಸ್‌, ಮೈಕ್ರೋಚಿಪ್, ಮೊಬೈಲ್ ಸೇರಿದಂತೆ ಹಲವು ವಸ್ತುಗಳನ್ನ ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಗುರುವಾರ ದಶಪಥ ಹೆದ್ದಾರಿ ಪರಿಶೀಲನೆ ನಡೆಸಲಿದ್ದಾರೆ ಗಡ್ಕರಿ – ಬಿಜೆಪಿ ನಾಯಕರ ನಡುವೆ ನಾಮಕರಣ ಜಟಾಪಟಿ

    Live Tv
    [brid partner=56869869 player=32851 video=960834 autoplay=true]

  • ಹೊಸವರ್ಷದ ಮೊದಲ ವಾರದಲ್ಲೇ KPTCL ಎಇ, ಜೆಇ ನೇಮಕ ಪರೀಕ್ಷೆ ಫಲಿತಾಂಶ: ಸುನೀಲ್ ಕುಮಾರ್

    ಹೊಸವರ್ಷದ ಮೊದಲ ವಾರದಲ್ಲೇ KPTCL ಎಇ, ಜೆಇ ನೇಮಕ ಪರೀಕ್ಷೆ ಫಲಿತಾಂಶ: ಸುನೀಲ್ ಕುಮಾರ್

    ಬೆಳಗಾವಿ: ಕೆಪಿಟಿಸಿಎಲ್ (KPTCL) ಸಹಾಯಕ ಎಂಜನಿಯರ್ (AE), ಕಿರಿಯ ಎಂಜನಿಯರ್ ಹಾಗೂ ಕಿರಿಯ ಸಹಾಯಕ ಎಂಜಿನಿಯರ್ (JE) ಹುದ್ದೆಗಳ ನೇಮಕ ಪರೀಕ್ಷೆಯ ಫಲಿತಾಂಶವನ್ನು ಜನವರಿ ಮೊದಲ ವಾರದಲ್ಲೇ ಪ್ರಕಟಿಸಲಾಗುವುದು. ಜೊತೆಗೆ ಕೀ ಉತ್ತರಗಳನ್ನು ವಾರದೊಳಗೆ ಪ್ರಕಟಿಸಲಾಗುವುದು ಎಂದು ಸಚಿವ ವಿ. ಸುನೀಲ್‌ಕುಮಾರ್ (V Sunil Kumar) ಅವರು ತಿಳಿಸಿದರು.

    ವಿಧಾನಸಭೆಯಲ್ಲಿಂದು ಶೂನ್ಯವೇಳೆಯಲ್ಲಿ ಶಾಸಕ ಸುರೇಶಕುಮಾರ್ (SureshKumar) ಅವರ ಪ್ರಶ್ನೆಗೆ ಉತ್ತರಿಸಿದರು. ಇದನ್ನೂ ಓದಿ: ಜಿಲ್ಲಾ ಕೇಂದ್ರಗಳಲ್ಲಿ ಉದ್ಯಮಿಯಾಗು-ಉದ್ಯೋಗ ನೀಡು ಕಾರ್ಯಾಗಾರ: ಸಚಿವ ನಿರಾಣಿ

    ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಪರೀಕ್ಷೆಗಳನ್ನು 5 ತಿಂಗಳ ಹಿಂದೆ ನಡೆಸಲಾಗಿದೆ. ಆದರೆ ಫಲಿತಾಂಶ ಪ್ರಕಟಿಸಿಲ್ಲ. ಪರೀಕ್ಷೆ ಬರೆದ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿರುವುದು ಗಮನಕ್ಕೆ ಬಂದಿದ್ದು, ಈ ಕುರಿತು ಕೆಇಎ ಜೊತೆಗೆ ಫಾಲೋಅಫ್ ಮಾಡುತ್ತಿದ್ದೇವೆ. ಈ ವಾರದಲ್ಲಿ ಅಥವಾ ಅಧಿವೇಶನ ಮುಗಿಯುವುದರೊಳಗೆ ಕೀ ಉತ್ತರಗಳನ್ನು ಪ್ರಕಟಿಸಿ, ಜನವರಿ ಮೊದಲ ವಾರದೊಳಗೆ ಫಲಿತಾಂಶ ಪ್ರಕಟಿಸಲು ಕ್ರಮಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

    ಶಾಸಕ ಸುರೇಶಕುಮಾರ್ ಅವರು, ಪರೀಕ್ಷೆ ಬರೆದು ಐದು ತಿಂಗಳಾದರೂ ಫಲಿತಾಂಶ ಪ್ರಕಟವಾಗಿಲ್ಲ. ಪರೀಕ್ಷೆ ಬರೆದ ಅಭ್ಯರ್ಥಿಗಳು ಫಲಿತಾಂಶ ಯಾವಾಗ ಬಿಡುಗಡೆ ಮಾಡಲಾಗುತ್ತದೆ ಎಂಬುದರ ಕುರಿತು ಚಾತಕ ಪಕ್ಷಿಯಂತೆ ಕಾಯುತ್ತಿದ್ದು, ಕೂಡಲೇ ಕ್ರಮವಹಿಸುವಂತೆ ಸಚಿವರಲ್ಲಿ ಕೋರಿದ್ದರು. ಇದನ್ನೂ ಓದಿ: ಆ ಒಂದು ಮಾತಿನಿಂದ ಮುರಿದು ಬಿತ್ತು ರೂಪೇಶ್ ಶೆಟ್ಟಿ- ರಾಜಣ್ಣ ಫ್ರೆಂಡ್‌ಶಿಪ್

    Live Tv
    [brid partner=56869869 player=32851 video=960834 autoplay=true]

  • KPTCL ಅಸಿಸ್ಟೆಂಟ್ ಪರೀಕ್ಷಾ ಅಕ್ರಮ – ಮತ್ತೆ ಆರು ಮಂದಿ ಅರೆಸ್ಟ್‌

    KPTCL ಅಸಿಸ್ಟೆಂಟ್ ಪರೀಕ್ಷಾ ಅಕ್ರಮ – ಮತ್ತೆ ಆರು ಮಂದಿ ಅರೆಸ್ಟ್‌

    ಬೆಳಗಾವಿ: ಗೋಕಾಕ್‌ ನಗರದಲ್ಲಿ ನಡೆದಿದ್ದ ಕೆಪಿಟಿಸಿಎಲ್(KPTCL) ಅಕ್ರಮ ನೇಮಕಾತಿ ಪ್ರಕರಣ ಸಂಬಂಧ ಮತ್ತೆ ಆರು ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು ಬಂಧಿತರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.

    ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಬಗರನಾಳ ಗ್ರಾಮದ ಈರಣ್ಣ ಬಂಕಾಪೂರ(26), ಶಿವಾನಂದ ಕುಮೋಜಿ(22) ರಾಮದುರ್ಗ ತಾಲೂಕಿನ ಬಟಕುರ್ಕಿ ಗ್ರಾಮದ ಆದಿಲ್ ಶಾ ತಾಸೇವಾಲೆ(23), ಮೂಡಲಗಿ ತಾಲೂಕಿನ ಖಾನಟ್ಟಿ ಗ್ರಾಮದ ಮಹಾಂತೇಶ ಹೊಸಾಪೂರ(22), ಮೂಡಲಗಿ ತಾಲೂಕಿನ ನಾಗನೂರ ಗ್ರಾಮದ ಮಹಾಲಿಂಗ ಕುರಿ(30) ಹಾಗೂ ಸವದತ್ತಿ ತಾಲೂಕಿನ ಸುಂದರ ಬಾಳಿಕಾಯಿ(23)ಬಂಧಿತರು. ಇದನ್ನೂ ಓದಿ: ದುಬೈನಲ್ಲಿ ಮತ್ತೊಂದು ದುಬಾರಿ ವಿಲ್ಲಾ ಖರೀದಿಸಿದ ಅಂಬಾನಿ

    ಬಂಧಿತ ಎಲ್ಲ ಆರೋಪಿಗಳು ಆಗಸ್ಟ್‌ 7 ರಂದು ಗೋಕಾಕ್‌ ನಗರದಲ್ಲಿ ನಡೆದಿದ್ದ ಜ್ಯೂನಿಯರ್ ಕೆಪಿಟಿಸಿಎಲ್ ಅಸಿಸ್ಟಂಟ್ ಪರೀಕ್ಷೆಯಲ್ಲಿ ಇಲೆಕ್ಟ್ರಾನಿಕ್ ಮೈಕ್ರೋಚಿಪ್ ಡಿವೈಸ್ ಗಳನ್ನು ತೆಗೆದುಕೊಂಡು ಹೋಗಿ ಪರೀಕ್ಷೆ ಬರೆದ್ದರು. ಇವರೆಲ್ಲರಿಂದ ಇಲೆಕ್ಟ್ರಾನಿಕ್ ಡಿವೈಸ್‌ಗಳನ್ನು , ಮೈಕ್ರೋಚಿಪ್‌ಗಳನ್ನು ಮತ್ತು ಮೊಬೈಲ್‌ಗಳು ಸೇರಿದಂತೆ ಇತರ ದಾಖಲೆ ಮತ್ತು ವಸ್ತುಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಅ. 20ರಂದೇ ಕೋರ್ಟ್‌ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಭಾರೀ ಸಾಲದ ಸುಳಿಯಲ್ಲಿ KPTCL, ವಿದ್ಯುತ್‌ ಕಂಪನಿಗಳು: ಯಾವ ಕಂಪನಿಯದ್ದು ಎಷ್ಟು ಸಾಲ?

    ಭಾರೀ ಸಾಲದ ಸುಳಿಯಲ್ಲಿ KPTCL, ವಿದ್ಯುತ್‌ ಕಂಪನಿಗಳು: ಯಾವ ಕಂಪನಿಯದ್ದು ಎಷ್ಟು ಸಾಲ?

    ಬೆಂಗಳೂರು: ಕೆಪಿಟಿಸಿಎಲ್(KPTCL) ಸೇರಿದಂತೆ ವಿವಿಧ ವಿದ್ಯುತ್ ಕಂಪನಿಗಳು ಭಾರೀ ಸಾಲವನ್ನು ಹೊತ್ತುಕೊಂಡಿರುವ ಅಂಶ ಬೆಳಕಿಗೆ ಬಂದಿದೆ.

    ವಿಧಾನ ಪರಿಷತ್ ಕಲಾಪ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಭಾರತಿ ಶೆಟ್ಟಿ ಪ್ರಶ್ನೆಗೆ ಉತ್ತರಿಸಿದ ಸಚಿವ ಸುನೀಲ್ ‌ಕುಮಾರ್(Sunil Kumar)  ಸಾಲದ ಮಾಹಿತಿ ಕೊಟ್ಟರು. ಇದನ್ನೂ ಓದಿ: ಅಕ್ಟೋಬರ್ ಅಂತ್ಯಕ್ಕೆ ರಾಜ್ಯದಲ್ಲಿ ನಮ್ಮ ಕ್ಲಿನಿಕ್ ಸಂಪೂರ್ಣ ಪ್ರಾರಂಭ: ಸುಧಾಕರ್

    ಕೆಪಿಟಿಸಿಎಲ್ ಸೇರಿ ವಿದ್ಯುತ್ ಕಂಪನಿಗಳು ಒಟ್ಟು 38,975 ಕೋಟಿ ರೂ. ಸಾಲ ಮಾಡಿವೆ. ಇದರಲ್ಲಿ ಕೆಪಿಟಿಸಿಎಲ್ 9,590 ಕೋಟಿ ರೂ., ಬೆಸ್ಕಾಂ(BESCOM) 13,616 ಕೋಟಿ ರೂ., ಸೆಸ್ಕಾಂ(CESCOM) 3,536 ಕೋಟಿ ರೂ., ಮೆಸ್ಕಾಂ(MESCOM)1,282 ಕೋಟಿ ರೂ., ಹೆಸ್ಕಾಂ(HESCOM) 7,480 ಕೋಟಿ ರೂ., ಜೆಸ್ಕಾಂ(GESCOM) 3,472 ಕೋಟಿ ರೂ. ಸಾಲವನ್ನು ಆಗಸ್ಟ್ ಅಂತ್ಯದ ವೇಳೆಗೆ ಮಾಡಿವೆ ಎಂದು ಸಚಿವರು ಮಾಹಿತಿ ನೀಡಿದರು. ಇದನ್ನೂ ಓದಿ: ಡಿಸೆಂಬರ್ ವೇಳೆಗೆ ಶಾಲೆಗಳಲ್ಲಿ ಭಗವದ್ಗೀತೆ ಬೋಧನೆ: ಬಿ.ಸಿ.ನಾಗೇಶ್

    ನಮ್ಮ ಸರ್ಕಾರದ ಬಂದ ಮೇಲೆ ರೈತರಿಗೆ 7 ಗಂಟೆ ಉಚಿತವಾಗಿ ವಿದ್ಯುತ್ ನೀಡಲಾಗುತ್ತಿದೆ. ಸುಮಾರು 13 ಸಾವಿರ ಕೋಟಿ ರೂ. ಹಣವನ್ನು ರೈತರಿಗೆ ಸಬ್ಸಿಡಿ ನೀಡಲಾಗ್ತಿದೆ. 600-700 ಕೋಟಿ ರೂ. ಭಾಗ್ಯ ಜೋತಿಗೆ ಸಬ್ಸಿಡಿ ನೀಡಲಾಗುತ್ತಿದೆ. ಹೊಸದಾಗಿ ನಮ್ಮ ಸರ್ಕಾರ 6 ಲಕ್ಷ 30 ಸಾವಿರ ರೈತರನ್ನು ಉಚಿತ ವಿದ್ಯುತ್ ಗೆ ಸೇರ್ಪಡೆ ಮಾಡಿದ್ದೇವೆ. ಹೀಗಾಗಿ ಸಾಲದ ಪ್ರಮಾಣ ಹೆಚ್ಚಾಗಿದೆ ಎಂದು ಸಚಿವರು ತಿಳಿಸಿದರು.

    Live Tv
    [brid partner=56869869 player=32851 video=960834 autoplay=true]

  • KPTCL ಪರೀಕ್ಷಾ ಅಕ್ರಮ: ಮತ್ತೆ ಮೂವರು ಆರೋಪಿಗಳ ಬಂಧನ – ಬಂಧಿತರ ಸಂಖ್ಯೆ 20ಕ್ಕೆ ಏರಿಕೆ

    KPTCL ಪರೀಕ್ಷಾ ಅಕ್ರಮ: ಮತ್ತೆ ಮೂವರು ಆರೋಪಿಗಳ ಬಂಧನ – ಬಂಧಿತರ ಸಂಖ್ಯೆ 20ಕ್ಕೆ ಏರಿಕೆ

    ಬೆಳಗಾವಿ: ಗೋಕಾಕ್ ನಗರದಲ್ಲಿ ನಡೆದಿದ್ದ ಕೆಪಿಟಿಸಿಎಲ್ ನೇಮಕಾತಿ ಪರೀಕ್ಷಾ ಅಕ್ರಮ (KPTCL Recruitment Scam) ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಬೆಳಗಾವಿ (Belagavi) ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದು ಬಂಧಿತರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.

    ಕಳೆದ ತಿಂಗಳು ಆ.07ರಂದು ಗೋಕಾಕ್ ನಗರದಲ್ಲಿ ನಡೆದಿದ್ದ ಕೆಪಿಟಿಸಿಎಲ್ ನೇಮಕಾತಿ ಪರೀಕ್ಷೆಯಲ್ಲಿ ಸ್ಮಾರ್ಟ್ ವಾಚ್ (Smart Watch) ಬಳಸಿ ಪರೀಕ್ಷೆ ಎದುರಿಸಿ, ಅಕ್ರಮದಲ್ಲಿ ಸಹಾಯ ಸೇರಿದಂತೆ ಇಲೆಕ್ಟ್ರಾನಿಕ್ ಡಿವೈಸ್‍ಗಳನ್ನು (Electronic Devices) ಮಾರಾಟ ಮಾಡಿದ ಪ್ರಕರಣ ಸಂಬಂಧ ಈಗಾಗಲೇ 17 ಆರೋಪಿಗಳನ್ನು ಬಂಧಿಸಿದ್ದರು. ಬಳಿಕ ತನಿಖೆ ತೀವ್ರಗೊಳಿಸಿದ ಪೊಲೀಸರು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದು ಬಂಧಿತರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ. ಇದನ್ನೂ ಓದಿ: KPTCL ಪರೀಕ್ಷೆಯಲ್ಲಿ ಅಕ್ರಮ- N95 ಮಾಸ್ಕ್ ಒಳಗಡೆ ಎಲೆಕ್ಟ್ರಾನಿಕ್‌ ಡಿವೈಸ್ ಸೇಲ್ ಮಾಡಿದ್ದ ಆರೋಪಿ ಅರೆಸ್ಟ್

    ಬಗೆದಷ್ಟು ಅಕ್ರಮದ ವಾಸನೆ:
    ಇಂದು ಗೋಕಾಕ್ ತಾಲೂಕಿನ ಅರಭಾವಿ ಪಟ್ಟಣದ ಅಕ್ಷಯ್ ದುಂದಪ್ಪ ಭಂಡಾರಿ (33), ಬೀರಣಗಡ್ಡಿ ಗ್ರಾಮದ ಬಸವರಾಜ ರುದ್ರಪ್ಪ ದುಂದನಟಿ (34), ರಾಜಾಪೂರ ಗ್ರಾಮದ ಶ್ರೀಧರ ಲಕ್ಕಪ್ಪ ಕಟ್ಟಿಕಾರ್ (22) ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರ ಪೈಕಿ ಅಕ್ಷಯ್ ಮತ್ತು ಶ್ರೀಧರ್ ಇಬ್ಬರು ಆರೋಪಿಗಳು ಪರೀಕ್ಷಾರ್ಥಿಗಳಿಗೆ ಇಲೆಕ್ಟ್ರಾನಿಕ್ ಡಿವೈಸ್ ಕೊಟ್ಟ ಆರೋಪವಿದೆ. ಬೆಂಗಳೂರಿನಿಂದ ಇಲೆಕ್ಟ್ರಾನಿಕ್ ಡಿವೈಸ್‍ನ್ನು ಪ್ರಕರಣದ ಪ್ರಮುಖ ಆರೋಪಿ ಸಂಜು ಭಂಡಾರಿ ತಂದು ಕೊಟ್ಟಿದ್ದಾರೆ. ಬಂಧಿತರಿಂದ ಮೊಬೈಲ್ ಮತ್ತು 50 ಖಾಲಿ ಇಲೆಕ್ಟ್ರಾನಿಕ್ ಡಿವೈಸ್, 18 ಇಲೆಕ್ಟ್ರಾನಿಕ್ ಡಿವೈಸ್ ಜಪ್ತಿ ಮಾಡಿಕೊಳ್ಳಲಾಗಿದೆ. ಮತ್ತೊಬ್ಬ ಆರೋಪಿ ಬಸವರಾಜ ಪರೀಕ್ಷಾ ಅಭ್ಯರ್ಥಿಗಳಿಗೆ ಪ್ರಶ್ನೆ ಪತ್ರಿಕೆಗಳಿಗೆ ಉತ್ತರ ಹೇಳಿದ ಆರೋಪವಿದ್ದು ಈತನಿಂದ ಒಂದು ಮೊಬೈಲ್, ಒಂದು ಮೋಟಾರ್ ಸೈಕಲ್ ಜಪ್ತಿ ಮಾಡಿಕೊಳ್ಳಲಾಗಿದೆ. ಬಂಧಿತ ಮೂರು ಜನ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಇದನ್ನೂ ಓದಿ: ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಬೊಮ್ಮಾಯಿಗೆ ಕಪ್ಪುಪಟ್ಟಿ ಪ್ರದರ್ಶನ

    Live Tv
    [brid partner=56869869 player=32851 video=960834 autoplay=true]

  • KPTCL ಪರೀಕ್ಷೆಯಲ್ಲಿ ಅಕ್ರಮ- N95 ಮಾಸ್ಕ್ ಒಳಗಡೆ ಎಲೆಕ್ಟ್ರಾನಿಕ್‌ ಡಿವೈಸ್ ಸೇಲ್ ಮಾಡಿದ್ದ ಆರೋಪಿ ಅರೆಸ್ಟ್

    KPTCL ಪರೀಕ್ಷೆಯಲ್ಲಿ ಅಕ್ರಮ- N95 ಮಾಸ್ಕ್ ಒಳಗಡೆ ಎಲೆಕ್ಟ್ರಾನಿಕ್‌ ಡಿವೈಸ್ ಸೇಲ್ ಮಾಡಿದ್ದ ಆರೋಪಿ ಅರೆಸ್ಟ್

    ಬೆಳಗಾವಿ: ಗೋಕಾಕ್‌ನಲ್ಲಿ ಕೆಪಿಟಿಸಿಎಲ್ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸೆಗಲು KPTCL ಪರೀಕ್ಷೆಯಲ್ಲಿ ಅಕ್ರಮ – N95  ಡಿವೈಸ್ ಸೇರಿ ಇತರ ವಸ್ತುಗಳನ್ನು ಸರಬರಾಜು ಮಾಡುತ್ತಿದ್ದ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಬೆಂಗಳೂರಿನ ದೇವಸಂದ್ರ ಮೂಲದ ಮೊಹಮ್ಮದ್ ಅಜೀಮುದ್ದಿನ್ (37) ಬಂಧಿತ ಆರೋಪಿ. ಕೋರ್ಟ್ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಬಂಧಿತರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ಇದನ್ನೂ ಓದಿ: ಕೋಟ್ಯಧಿಪತಿಯಾಗಿದ್ರೂ ಬಿಪಿಎಲ್ ಕಾರ್ಡ್‌ – ಜೆಡಿಎಸ್‌ ನಾಯಕನ ನಗರ ಸಭೆ ಸದಸ್ಯತ್ವ ರದ್ದು

    ಪರೀಕ್ಷಾ ಅಕ್ರಮ ನಡೆಸಲು ಬೇಕಾಗುವ ವಿವಿಧ ಬಗೆಯ ಎಲೆಕ್ಟ್ರಾನಿಕ್‌ ಡಿವೈಸ್ ಗಳನ್ನು (Electronic Devices) ದೆಹಲಿ ಮತ್ತು ಹೈದರಾಬಾದಿನಿಂದ ತಂದು ಸಂಜು ಭಂಡಾರಿ ಹಾಗೂ ಬೆಳಗಾವಿ ಜಿಲ್ಲೆಯ ಬೇರೆ ಜನರಿಗೆ ಮಾರಾಟ ಮಾಡುತ್ತಿದ್ದ ವಿಚಾರ ತನಿಖೆ ವೇಳೆ ಬಯಲಾಗಿದೆ. ಇದನ್ನೂ ಓದಿ: ಉಗ್ರರ ತವರು ನೆಲ ಪಾಕಿಸ್ತಾನಕ್ಕೆ ಅಮೆರಿಕದಿಂದ 3,500 ಕೋಟಿ ಸೇನಾ ನೆರವು

    ಬಂಧಿತನಿಂದ ಎರಡು ಮೊಬೈಲ್ ಮತ್ತು ವಿವಿಧ ಬಗೆಯ 179 ಎಲೆಕ್ಟ್ರಾನಿಕ್‌ ಡಿವೈಸ್ ಗಳು, ಎಲೆಕ್ಟ್ರಾನಿಕ್‌ ಡಿವೈಸ್ ಅಳವಡಿಸಿದ 7 ಎನ್ 95 ಮಾಸ್ಕ್, 41 ಬನಿಯನ್, ವಿವಿಧ ಬಗೆಯ 445 ಎಲೆಕ್ಟ್ರಾನಿಕ್‌ ಇಯರ್ ಪಿನ್, ವಿವಿಧ ಬಗೆಯ 554 ಚಾರ್ಜಿಂಗ್ ಕೇಬಲ್ ಹಾಗೂ 6 ವಾಕಿಟಾಕಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಳೆದ ಆ.7 ರಂದು ಗೋಕಾಕ್ ನಗರದಲ್ಲಿ ಹೆಸ್ಕಾಂ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮ ನಡೆದಿತ್ತು.

    Live Tv
    [brid partner=56869869 player=32851 video=960834 autoplay=true]