ಬೆಂಗಳೂರು: ಅಸಭ್ಯವಾಗಿ ಕಾಣುವಂತೆ ಯುವತಿಯರ ಫೋಟೋ, ವಿಡಿಯೋಗಳನ್ನು ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡ್ತಿದ್ದ ಯುವಕನನ್ನು ಬನಶಂಕರಿ ಪೊಲೀಸರು (Banashankari Police) ಬಂಧಿಸಿದ್ದಾರೆ.
ಬಂಧಿತನನ್ನು ಕೆಆರ್ ಪುರಂ (K R Puram) ನಿವಾಸಿ ಗುರುದೀಪ್ ಸಿಂಗ್ (26) ಎಂದು ಗುರುತಿಸಲಾಗಿದೆ. ಆರೋಪಿ, ಹೋಟೆಲ್ ಮ್ಯಾನೇಜ್ಮೆಂಟ್‌ನಲ್ಲಿ ಪದವಿ ಪಡೆದು ಕೆಲಸಕ್ಕಾಗಿ ಹುಡುಕಾಡ್ತಿದ್ದ ಎಂದು ತಿಳಿದು ಬಂದಿದೆ. ಇತ್ತೀಚೆಗೆ ಯುವತಿಯರ ಅಸಭ್ಯ ಫೋಟೋ, ವಿಡಿಯೋಗಳನ್ನ ರೆಕಾರ್ಡ್ ಮಾಡಿ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡ್ತಿದ್ದ. ಇದನ್ನೂ ಓದಿ: ಗಾಂಜಾ ಮತ್ತಿನಲ್ಲಿ ಬಾಲಕಿಯ ರೇಪ್ ಮಾಡಿ ಹತ್ಯೆ – ಕಾಮುಕ ಅರೆಸ್ಟ್
ಈ ಬಗ್ಗೆ ಯುವತಿಯೊಬ್ಬಳು ಪೊಲೀಸರನ್ನು ಟ್ಯಾಗ್ ಮಾಡಿ ದೂರು ನೀಡಿದ್ದಳು. ಈ ದೂರಿನ ಆಧಾರದ ಮೇಲೆ ಬನಶಂಕರಿ ಪೊಲೀಸರು ಸುಮೊಟೊ ಕೇಸ್ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
– ಪಬ್ಲಿಕ್ ಟಿವಿ ಇಂಪ್ಯಾಕ್ಟ್; ಬೆಸ್ಕಾಂ ಅಧಿಕಾರಿಗಳಿಂದ ವಿದ್ಯುತ್ ಸಂಪರ್ಕ ಕಡಿತ
ಬೆಂಗಳೂರು: ಕೆಆರ್ ಪುರಂ (KR Puram) ಸಬ್ ಡಿವಿಷನ್‌ನ ಮುನೇಶ್ವರ ಬಡವಾಣೆಯಲ್ಲಿ ಕಳೆದ ಮೂರು ವರ್ಷಗಳಿಂದ ಅಕ್ರಮ ವಿದ್ಯುತ್ (Electricity) ಸಂಪರ್ಕ ಪಡೆಯಲಾಗಿದೆ. ಒಂದೇ ಮೀಟರ್‌ನಿಂದ 16 ಮನೆಗಳಿಗೆ ಅಕ್ರಮ ವಿದ್ಯುತ್ ಸಂಪರ್ಕ ಪಡೆದು ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ ಉಂಟು ಮಾಡುತ್ತಿದ್ದಾರೆ. ಈ ವಿಷಯ ಬೆಸ್ಕಾಂ (BESCOM) ಅಧಿಕಾರಿಗಳಿಗೆ ಗೊತ್ತಿದ್ದರೂ ಜಾಸ್ತಿ ತಲೆ ಕೆಡಿಸಿಕೊಂಡಿಲ್ಲ.
ಒಂದೇ ಮೀಟರ್ ಅಳವಡಿಸಿ, ಅದಕ್ಕೆ ಹೆಚ್ಚುವರಿ ಕೇಬಲ್‌ನಿಂದ ಉಳಿದ ಶೀಟ್ ಮನೆಗಳಿಗೆ ವಿದ್ಯುತ್ ಸಂಪರ್ಕ ನೀಡಲಾಗಿದೆ. ಥೆರೆಸಾ ಅನ್ನೋ ಮನೆ ಮಾಲಕಿಗೆ ಈ ಹಿಂದೆ ಬೆಸ್ಕಾಂ ಅಧಿಕಾರಿಗಳು ವಾರ್ನ್ ಮಾಡಿ, ಎರಡು ಬಾರಿ ವಿದ್ಯುತ್ ಸಂಪರ್ಕ ಕಡಿತ ಮಾಡಿದ್ರೂ ಮತ್ತೆ ಸಂಪರ್ಕ ಪಡೆದಿದ್ದಾರೆ. ಟಿವಿ, ಫ್ಯಾನ್, ಫ್ರಿಡ್ಜ್, ಲೈಟ್ ಉರಿಯುತ್ತಿದ್ದು, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟವಾಗುತ್ತಿದೆ. ಕೆ.ಪುರಂನಲ್ಲಿ ಹೈಟೆನ್ಶನ್ ವೈಯರ್ ತಗುಲಿ ನೇಪಾಳ ಮೂಲದ ಬಾಲಕ ಮೃತಪಟ್ಟಿದ್ದ. ಅದೇ ಮನೆ ಮಾಲೀಕನ ಸಹೋದರಿಯಿಂದಲೇ ವಿದ್ಯುತ್ ಕಳ್ಳತನ ಆಗಿದೆ. ಇದನ್ನೂ ಓದಿ: Kalaburagi | ಆಧಾರ್ ಕಾರ್ಡ್ ಕೇಳಿದ್ದಕ್ಕೆ ಮಹಿಳೆಯ ಸಂಬಂಧಿಕರಿಂದ ಕಂಡಕ್ಟರ್ ಮೇಲೆ ಹಲ್ಲೆ
ಇನ್ನು ಈ ವಿಚಾರವಾಗಿ ನಿಮ್ಮ ಪಬ್ಲಿಕ್ ಟಿವಿ ವಿಸ್ತೃತ ವರದಿ ಬಿತ್ತರಿಸಿತ್ತು. ಈ ಬೆನ್ನಲ್ಲೇ ಬೆಸ್ಕಾಂ ಅಧಿಕಾರಿಗಳು ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ. ಅಲ್ಲದೇ ಅಕ್ರಮ ವಿದ್ಯುತ್ ಸಂಪರ್ಕ ಪಡೆದ ಮನೆ ಮಾಲೀಕರ ಮೇಲೆ ಎಫ್‌ಐಆರ್ ದಾಖಲು ಮಾಡಲು ಮುಂದಾಗಿದ್ದಾರೆ. ಬೆಸ್ಕಾಂ ವಿಜಿಲೆನ್ಸ್ ವಿಭಾಗ ಹಾಗೂ ಕೆಆರ್ ಪುರಂ ಸಬ್ ಡಿವಿಷನ್ ಅಧಿಕಾರಿಗಳು ಎಫ್‌ಐಆರ್ ಮಾಡಲು ನಿರ್ಧರಿಸಿದ್ದಾರೆ. ಇದನ್ನೂ ಓದಿ: ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಸಾವು – ಒಂದು ತಿಂಗಳ ಅಂತರದಲ್ಲಿ 17 ಮಂದಿ ಬಲಿ
ಬೆಂಗಳೂರು: ಆಟೋ ರಿಕ್ಷಾಗೆ (Auto Rickshaw) ಕಾರು ಡಿಕ್ಕಿ ಹೊಡೆದ ಪರಿಣಾಮ ಹಲವರು ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ.
ಹೊಸಕೋಟೆಯಿಂದ (Hoskote) ಕೆಆರ್ ಪುರಂ ಮಾರ್ಗವಾಗಿ ಬರುತ್ತಿದ್ದ ಇಂಡಿಕಾ ಕಾರು ನಿಯಂತ್ರಣ ಸಿಗದೇ ಮುಂದೆ ಹೋಗುತ್ತಿದ್ದ ಆಟೋಗೆ ಡಿಕ್ಕಿ ಹೊಡೆದಿದೆ. ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮೇಡಹಳ್ಳಿ ಮೇಲ್ಸೇತುವೆ ಶನಿವಾರ ತಡರಾತ್ರಿ ಘಟನೆ ನಡೆದಿದೆ. ಅಪಘಾತದ ರಭಸಕ್ಕೆ ಆಟೋ ಪಲ್ಟಿ ಹೊಡೆದಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಇದನ್ನೂ ಓದಿ: Israel vs Iran War: ಹೊತ್ತಿ ಉರಿದ ಟೆಹ್ರಾನ್- ತೈಲ ಡಿಪೋ ಮೇಲೆ ಇಸ್ರೇಲ್ ದಾಳಿ
ಆಟೋದಲ್ಲಿ ಮಗು ಕೂಡಾ ಇದ್ದು, ತರಚಿದ ಗಾಯಗಳಿಂದ ಬಚಾವ್ ಆಗಿದೆ. ಕಾರಿನಲ್ಲಿದ್ದ ಮೂವರಿಗೂ ಸಣ್ಣ ಪುಟ್ಟ ಗಾಯಗಳಾಗಿದ್ದು, ಕೆಆರ್ ಪುರಂ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಅಹಮದಾಬಾದ್ ವಿಮಾನ ದುರಂತ – ಅವಶೇಷಗಳಡಿ ಸೂಟ್‌ಕೇಸ್‌ನಲ್ಲಿದ್ದ ಹಣ ಪತ್ತೆ
ಬೆಂಗಳೂರಿನ ರಾಮಮೂರ್ತಿನಗರ, ಕೆ.ಆರ್.ಪುರಂ ಫ್ಲೈ ಓವರ್ ಮಾರ್ಗವಾಗಿ ಸಿನಿಮೀಯ ರೀತಿಯಲ್ಲಿ ಸಾಲು ಸಾಲಾಗಿ ಬೈಕ್‌ಗಳಲ್ಲಿ ಲಾಂಗ್ ಹಿಡಿದು, ವಾಹನ ಸವಾರರಿಗೆ ಭಯ ಬೀಳಿಸುತ್ತಿದ್ದಾರೆ. ಪೊಲೀಸರ ಭಯವೇ ಇಲ್ಲದೇ ಹತ್ತಾರು ಮಂದಿ ಪುಂಡರು ಲಾಂಗ್ ಹಿಡಿದುಕೊಂಡು ರಾಜಾರೋಷವಾಗಿ ಬೈಕ್ ಚಲಾಯಿಸುತ್ತಿದ್ದಾರೆ.
ಬೆಂಗಳೂರು: ರಸ್ತೆಯಲ್ಲಿ ಆಟವಾಡುತ್ತಿದ್ದ ಬಾಲಕನ ಮೇಲೆ ಗುಂಪು ಗುಂಪಾಗಿ ಬೀದಿ ನಾಯಿಗಳು (Stray Dogs Attack) ದಾಳಿ ಮಾಡಿದ ಘಟನೆ ಬೆಂಗಳೂರಿನ (Bengaluru) ಕೆಆರ್ ಪುರಂನ (KR Puram) ಸೊನ್ನೆನಹಳ್ಳಿಯಲ್ಲಿ ನಡೆದಿದೆ.
ನಾಯಿಗಳು ತನ್ನ ಮೇಲೆ ಎರಗುತ್ತಿದ್ದಂತೆ ಕೂಡಲೇ ಬಾಲಕ ಕಿರುಚಿಕೊಂಡಿದ್ದು, ಕಿರುಚಾಟ ಕೇಳಿ ಸ್ಥಳೀಯರು ಆಗಮಿಸಿದ್ದಾರೆ. ಸ್ಥಳೀಯರು ಬಂದು ನಾಯಿಗಳನ್ನು ಓಡಿಸಿದ ಹಿನ್ನೆಲೆ ಭಾರೀ ಅನಾಹುತ ತಪ್ಪಿದೆ. ಬಾಲಕನ ಮೇಲೆ ಶ್ವಾನಗಳು ದಾಳಿ ನಡೆಸಿದ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನೂ ಓದಿ: 12 ವರ್ಷಗಳ ಬಳಿಕ ಉತ್ತರ ಪ್ರದೇಶದಲ್ಲಿ ಮಹಾ ಕುಂಭಮೇಳ – ಸಿದ್ಧತೆ ಹೇಗಿದೆ? ವಿಶೇಷತೆಗಳೇನು?
ಬೆಂಗಳೂರು: ಗುರುವಾರ ಕೆ.ಆರ್.ಪುರಂದಿಂದ ಗರುಡಾಚಾರ್ ಪಾಳ್ಯ ನಡುವೆ ಮೆಟ್ರೋ (Metro) ಸಂಚಾರ ಇರುವುದಿಲ್ಲ.
ಬೈಯಪ್ಪನಹಳ್ಳಿಯಿಂದ ಕೆ.ಆರ್.ಪುರದಿಂದ ಗರುಡಾಚಾರ್ ಪಾಳ್ಯ ನಡುವಿನ ಹೊಸದಾಗಿ ನಿರ್ಮಿಸಲಾದ ಮಾರ್ಗದ ಸುರಕ್ಷತಾ ಪರಿಶೀಲನೆ ನಡೆಯಲಿರುವ ಹಿನ್ನೆಲೆಯಲ್ಲಿ ಪೂರ್ಣ ದಿನ ಈ ಮಾರ್ಗದಲ್ಲಿ ಮೆಟ್ರೋ ಸಂಚಾರ ಇರುವುದಿಲ್ಲ ಎಂದು ಬಿಎಂಆರ್‌ಸಿಎಲ್ (BMRCL) ತಿಳಿಸಿದೆ. ಇದನ್ನೂ ಓದಿ:The Vaccine War ಸಿನಿಮಾ ನೋಡಿ ಹೊಗಳಿದ ಸುಧಾ ಮೂರ್ತಿ
ಬೈಯಪ್ಪನಹಳ್ಳಿಯಿಂದ ಇಂದಿರಾನಗರ ಮೆಟ್ರೋ ನಿಲ್ದಾಣದವರೆಗೆ ಮಧ್ಯಾಹ್ನ 1:30 ಗಂಟೆಯಿಂದ ಸಂಜೆ 4:30ರವರೆಗೆ ರೈಲು ಸೇವೆ ಇರುವುದಿಲ್ಲ. ಹಸಿರು ಮಾರ್ಗದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.
ರಾಯಚೂರು/ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಡಿ ಲೋಕಾಯುಕ್ತ ಪೊಲೀಸರಿಂದ (Lokayukta Police) ಬಂಧನಕ್ಕೊಳಗಾಗಿರುವ ತಹಶೀಲ್ದಾರ್ ಅಜಿತ್ ರೈ (Ajit Rai) ಅವರನ್ನ ಬೆಂಗಳೂರು ಕೆ.ಆರ್ ಪುರಂನಿಂದ ರಾಯಚೂರು ಸಿರಿವಾರ ತಾಲೂಕಿಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರಿನ ಕೆ.ಆರ್ ಪುರಂನಲ್ಲಿ (KR Puram) ಗ್ರೇಡ್-1 ತಹಶೀಲ್ದಾರ್ ಆಗಿದ್ದ ಅಜಿತ್ ರೈ ಅವರಿಗೆ ಗ್ರೇಡ್-2 ಹಿಂಬಡ್ತಿ ನೀಡಿ ಸಿರಿವಾರಕ್ಕೆ (Raichur Siriwara) ವರ್ಗಾವಣೆ ಮಾಡಿ ರಾಜ್ಯಪಾಲರ ಸೂಚನೆ ಮೇರೆಗೆ ಕಂದಾಯ ಇಲಾಖೆಯ ಸರ್ಕಾರದ ಉಪಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಕೆ.ಆರ್ ಪುರಂ ತಹಶೀಲ್ದಾರ್ ಅಜಿತ್ ರೈ ಅಮಾನತು
ಜೂನ್ 28ರಿಂದ ಅಮಾನತ್ತಿನಲ್ಲಿರುವ ಅಜಿತ್ ರೈ ಆದಾಕ್ಕಿಂತ ಅಧಿಕ ಆಸ್ತಿ ಹೊಂದಿರುವ ಆರೋಪದ ಅಡಿ ಲೋಕಾಯುಕ್ತ ಪೊಲೀಸರ ದಾಳಿಗೆ ಒಳಗಾಗಿದ್ದಾರೆ. ಆದ್ರೆ ವಿಚಾರಣೆಯಲ್ಲಿರುವ ಅಧಿಕಾರಿಯನ್ನ ವರ್ಗಾವಣೆ ಮಾಡಿದ್ದಕ್ಕೆ ಸರ್ಕಾರದ ವಿರುದ್ಧ ಜನ ಆಕ್ರೋಶ ಹೊರಹಾಕಿದ್ದಾರೆ. ಹಿಂದುಳಿದ ನೂತನ ತಾಲೂಕು ಸಿರವಾರ ಅಭಿವೃದ್ಧಿಗೆ ದಕ್ಷ ಅಧಿಕಾರಿಯನ್ನ ನೇಮಿಸುವಂತೆ ಜನ ಆಗ್ರಹಿಸಿದ್ದಾರೆ.
ಅನುಕಂಪದ ಆಧಾರದಲ್ಲಿ ಕಂದಾಯ ಇಲಾಖೆಯಲ್ಲಿ ಕೆಲಸ ಪಡೆದುಕೊಂಡಿದ್ದ ಅಜಿತ್ ರೈ ನಂತರ ಹಲವು ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ಬಡ್ತಿ ಪಡೆದಿದ್ದರು. ಪ್ರಸ್ತುತ ಕೆ.ಆರ್. ಪುರಂನಲ್ಲಿ ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಆದಾಯಕ್ಕಿಂತ 69% ಹೆಚ್ಚುವರಿ ಆಸ್ತಿ ಹೊಂದಿರುವ ಆರೋಪದಲ್ಲಿ ಅಜಿತ್ ರೈ ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಇದನ್ನೂ ಓದಿ: ಮಲ್ಲಿಗೆ ಮುಡಿಯುವ ಮಹಿಳೆಯರಿಗೆ ಶಾಕ್ – ಹೂವುಗಳ ಬೆಲೆ ಈಗ ಇನ್ನಷ್ಟು ದುಬಾರಿ!
ಭ್ರಷ್ಟಾಚಾರ ಆರೋಪದಡಿ ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್ ಅಜಿತ್ ರೈ ಮನೆ ಮೇಲೆ ಬುಧವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು. ಸಹಕಾರನಗರದ ನಿವಾಸ ಸೇರಿ 12 ಕಡೆ ದಾಳಿ ಮಾಡಿ ಪರಿಶೀಲನೆ ಮಾಡಿದ್ದರು. ಪರಿಶೀಲನೆ ವೇಳೆ 40 ಲಕ್ಷ ರೂ. ನಗದು, ಕೋಟ್ಯಂತರ ಮೌಲ್ಯದ ಭೂ ದಾಖಲಾತಿ ಪತ್ರಗಳು, ದುಬಾರಿ ಬೆಲೆಯ ಕಾರು ಖರೀದಿಸಿದ ರಶೀದಿಗಳು, ದೇಶ-ವಿದೇಶ ಬ್ರ‍್ಯಾಂಡ್‌ನ ಮದ್ಯ ಪತ್ತೆಯಾಗಿತ್ತು. ಸತತ 30 ಗಂಟೆಗಳ ಪರಿಶೀಲನೆ ವೇಳೆ ಅಕ್ರಮ ಆಸ್ತಿ ಗಳಿಕೆ ಮಾಡಿರುವುದು ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ಅಜಿತ್ ರೈನನ್ನ ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು.
ಆರೋಪಿಯನ್ನು 7 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿ ಲೋಕಾಯುಕ್ತ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿತ್ತು. ಲೋಕಾಯುಕ್ತ ಪೊಲೀಸರು 10 ದಿನಗಳ ಕಸ್ಟಡಿಗೆ ಕೇಳಿದ್ದರು. ಆದರೆ ನ್ಯಾಯಾಲಯ 7 ದಿನ ಪೊಲೀಸ್ ಕಸ್ಟಡಿಗೆ ಅವಕಾಶ ನೀಡಿದೆ. ಅಜಿತ್ ರೈ ಪುತ್ತೂರಿನಲ್ಲೂ ಆಸ್ತಿ ಮಾಡಿದ್ದು, ಸ್ವತಃ ಊರಿಗೆ ಕರೆದುಕೊಂಡು ಹೋಗಿ ತನಿಖೆ ನಡೆಸಲು ಪೊಲೀಸರಿಗೆ ನ್ಯಾಯಾಲಯ ಅವಕಾಶ ನೀಡಿತ್ತು.
ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಡಿ ಲೋಕಾಯುಕ್ತ ಪೊಲೀಸರ (Lokayukta Police) ವಶದಲ್ಲಿರುವ ಕೆ.ಆರ್. ಪುರಂ ತಹಶೀಲ್ದಾರ್ ಅಜಿತ್ ರೈ (Ajit Rai) ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಅನುಕಂಪದ ಆಧಾರದಲ್ಲಿ ಕಂದಾಯ ಇಲಾಖೆಯಲ್ಲಿ ಕೆಲಸ ಪಡೆದುಕೊಂಡಿದ್ದ ಅಜಿತ್ ರೈ ನಂತರ ಹಲವು ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ಬಡ್ತಿ ಪಡೆದಿದ್ದರು. ಪ್ರಸ್ತುತ ಕೆ.ಆರ್. ಪುರಂನಲ್ಲಿ ತಹಶೀಲ್ದಾರ್ (KR Puram Tahsildar) ಆಗಿ ಕಾರ್ಯನಿರ್ವಹಿಸುತ್ತಿದ್ದರು. ಆದಾಯಕ್ಕಿಂತ 69% ಹೆಚ್ಚುವರಿ ಆಸ್ತಿ ಹೊಂದಿರುವ ಆರೋಪದಲ್ಲಿ ಅಜಿತ್ ರೈ ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಪರಿಶೀಲನೆ ವೇಳೆ 40 ಲಕ್ಷ ರೂ. ನಗದು, ಕೋಟ್ಯಂತರ ಮೌಲ್ಯದ ಭೂ ದಾಖಲಾತಿ ಪತ್ರಗಳು, ದುಬಾರಿ ಬೆಲೆಯ ಕಾರು ಖರೀದಿಸಿದ ರಶೀದಿಗಳು, ದೇಶ-ವಿದೇಶಿ ಬ್ರ್ಯಾಂಡ್‌ನ ಮದ್ಯ ಪತ್ತೆಯಾಗಿತ್ತು. ಸತತ 30 ಗಂಟೆಗಳ ಪರಿಶೀಲನೆ ವೇಳೆ ಅಕ್ರಮ ಆಸ್ತಿ ಗಳಿಕೆ ಮಾಡಿರುವುದು ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ಅಜಿತ್ ರೈನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ಇದನ್ನೂ ಓದಿ: ಹಿಂದೂಗಳ ಪವಿತ್ರ ‘ಅಮರನಾಥ ಯಾತ್ರೆ’ ಆರಂಭ
ಆರೋಪಿಯನ್ನು 7 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿ ಲೋಕಾಯುಕ್ತ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿತ್ತು. ಲೋಕಾಯುಕ್ತ ಪೊಲೀಸರು 10 ದಿನಗಳ ಕಸ್ಟಡಿಗೆ ಕೇಳಿದ್ದರು. ಆದರೆ ನ್ಯಾಯಾಲಯ 7 ದಿನ ಪೊಲೀಸ್ ಕಸ್ಟಡಿಗೆ ಅವಕಾಶ ನೀಡಿದೆ. ಅಜಿತ್ ರೈ ಪುತ್ತೂರಿನಲ್ಲೂ ಆಸ್ತಿ ಮಾಡಿದ್ದು, ಸ್ವತಃ ಊರಿಗೆ ಕರೆದುಕೊಂಡು ಹೋಗಿ ತನಿಖೆ ನಡೆಸಲು ಪೊಲೀಸರಿಗೆ ನ್ಯಾಯಾಲಯ ಅವಕಾಶ ನೀಡಿತ್ತು.
ಬೆಂಗಳೂರು: ಆದಾಯಕ್ಕಿಂತ ಹೆಚ್ಚಿನ ಆಸ್ತಿ (Disproportionate Assets) ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಕೆಆರ್‌ಪುರಂ ತಹಶೀಲ್ದಾರ್ (KR Puram Tahsildar) ಅಜಿತ್ ರೈ (Ajit Rai) ಮನೆಯಲ್ಲಿರುವ ವಾಚ್‌ಗಳನ್ನು (Watch) ನೋಡಿ ಲೋಕಾಯುಕ್ತ ಅಧಿಕಾರಿಗಳೇ (Lokayukta Officials) ದಂಗಾಗಿದ್ದಾರೆ.
ಅಜಿತ್ ರೈ ಬಳಿ ಮೂರು Rado ವಾಚ್ ಪತ್ತೆಯಾಗಿದೆ. ಈ ಮೂರು ವಾಚ್ ಗಳ ಬೆಲೆ 5 ಲಕ್ಷ ರೂ.ಗೂ ಅಧಿಕ ಇರಬಹುದು ಎಂದು ಅಂದಾಜಿಸಲಾಗಿದೆ. ದಾಳಿ ವೇಳೆ ಸಿಕ್ಕ ಅಷ್ಟೂ ವಾಚ್ ಗಳ ಬೆಲೆ ಬರೋಬ್ಬರಿ ಹತ್ತು ಲಕ್ಷ ರೂ.ಗೂ ಅಧಿಕ ಎಂದು ಅಂದಾಜಿಸಲಾಗಿದೆ.
ತಪಾಸಣೆಯ ಬೇಳೆ ಅಜಿತ್ ರೈ ಬ್ರಾಂಡ್ ಲೋಗೋ ಸೀಕ್ರೇಟ್ ರಿವೀಲ್ ಆಗಿದೆ. ASR ಹೆಸರಿನಲ್ಲಿ ಅಜಿತ್ ರೈ ಅಫಿಶಿಯಲ್ ಲೋಗೋ ತಯಾರಿಸಿದ್ದರು. ಎಎಸ್‌ಆರ್ ಎಂದರೆ ಅಜಿತ್ ಸೌಮ್ಯಾ ರೈ. ತನ್ನ ಹೆಸರಿನ ಜೊತೆ ಪತ್ನಿ ಸೌಮ್ಯ ಹೆಸರನ್ನು ಸೇರಿಸಿ ಅಜಿತ್ ರೈ ಲೋಗೋ ವಿನ್ಯಾಸ ಮಾಡಿದ್ದರು.
ತನ್ನ ಬೈಕ್, ಕಾರ್ ಹಾಗೂ ಇತರೇ ವಸ್ತುಗಳಿಗೆ ವಿಶೇಷವಾಗಿ ಅಜಿತ್ ರೈ ಲೋಗೋ ಡಿಸೈನ್ ಮಾಡಿ ಅಂಟಿಸುತ್ತಿದ್ದರು. ಆಡಿ, ಬೆನ್ಜ್ ಕಾರುಗಳ ಲೋಗೋ ಮಾದರಿಯಲ್ಲಿ ವಿನ್ಯಾಸ ಮಾಡಿದ್ದನ್ನು ನೋಡಿ ಲೋಕಾ ಅಧಿಕಾರಿಗಳು ಶಾಕ್ ಆಗಿದ್ದಾರೆ. ಇದನ್ನೂ ಓದಿ: ಅಲ್ಲಾನ ಕೃಪೆಯಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಿದೆ: ಪರಮೇಶ್ವರ್
ಏನು ಪತ್ತೆಯಾಗಿದೆ?
* ಸಹಕಾರನಗರದಲ್ಲಿ 50 ಲಕ್ಷದ ಲೀಸ್‍ನ ಮನೆಯಲ್ಲಿ ವಾಸ
* ಗೆಳೆಯ ಗೌರವ್ ಹೆಸರಲ್ಲಿ ದೇವನಹಳ್ಳಿ ಬಳಿ 96 ಎಕರೆಯ ರೇಸ್ ಕ್ಲಬ್
* ಸೋದರ ಅಶೀತ್ ರೈ ಹೆಸರಲ್ಲಿ ಬೇನಾಮಿ ಆಸ್ತಿ
* ದೇವನಹಳ್ಳಿಯ ಮತ್ತೊಂದು ಕಡೆ 44 ಎಕರೆಯ ಫಾರ್ಮ್ ಹೌಸ್
* ದೊಡ್ಡ ದೊಡ್ಡ ಕಂಪನಿಗಳಿಗೆ ಜಮೀನು ಕೊಡಿಸಿ ದುಡ್ಡು ಮಾಡ್ತಿದ್ದ ಅಜಿತ್ ರೈ
* ಬೆಂಗಳೂರು ಗ್ರಾಮಾಂತರ, ದೊಡ್ಡಬಳ್ಳಾಪುರದಲ್ಲಿ ನೂರಾರು ಎಕರೆ ಜಮೀನು ಇರಬಹುದು ಎಂಬ ಶಂಕೆ
* ನೂರಾರು ಎಕರೆ ಜಮೀನು ಮೌಲ್ಯ 1000ಕೋಟಿಗೂ ಹೆಚ್ಚು ಎಂಬ ಅಂದಾಜು
* 1368 ಸೀರಿಸ್‍ನ ಐಷಾರಾಮಿ ಕಾರುಗಳು, ಬೈಕ್‍ಗಳು
* 4 ಫಾರ್ಚೂನರ್, 4 ಥಾರ್, 3 ಐಷಾರಾಮಿ ಬೈಕ್
* ಅಜಿತ್ ರೈ ಬಳಿಯ ವಾಹನಗಳ ಮೌಲ್ಯ ಐದು ಕೋಟಿ
ಬೆಂಗಳೂರು: ಮಾರ್ಚ್ 25ರಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಬೆಂಗಳೂರು ಪ್ರವಾಸದಲ್ಲಿದ್ದು, ವೈಟ್ ಫೀಲ್ಡ್ – ಕೆ.ಆರ್.ಪುರಂ ನಡುವಿನ ವೈಟ್‌ಫೀಲ್ಡ್ ಕಾಡುಗೋಡಿ ಮೆಟ್ರೋ ನಿಲ್ದಾಣಕ್ಕೆ (Whitefield Metro Station) ಚಾಲನೆ ನೀಡಲಿದ್ದಾರೆ. ಆದ್ದರಿಂದ ವೈಟ್‌ಫೀಲ್ಡ್ ಸುತ್ತಮುತ್ತಲಿನ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರವನ್ನ ಸಂಪೂರ್ಣ ನಿರ್ಬಂಧಿಸಲಾಗಿದೆ.
ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2.30ರ ವರೆಗೆ ಸಾರ್ವಜನಿಕ ವಾಹನಗಳ ಸಂಚಾರ ನಿರ್ಬಂಧಿಸಿದ್ದು, ವೈಟ್ ಫೀಲ್ಡ್ ಸುತ್ತಮುತ್ತ ಸಂಚರಿಸುವವರಿಗೆ ಪರ್ಯಾಯ ಮಾರ್ಗ ಕಲ್ಪಿಸಲಾಗಿದೆ.
ಎಲ್ಲೆಲ್ಲಿ ನಿರ್ಬಂಧ?
ವರ್ತೂರು ಕೋಡಿಯಿಂದ ಹೋಫ್ ಫಾರಂ ಜಂಕ್ಷನ್ ಮೂಲಕ ಕನ್ನಮಂಗಲ ಗೇಟ್ ವರೆಗೆ, ಚನ್ನಸಂದ್ರದಿಂದ ಹೋಫ್ ಫಾರಂ ಮೂಲಕ ಹೂಡಿ ಸರ್ಕಲ್ ವರೆಗೆ ಹಾಗೂ ಕುಂದಲಹಳ್ಳಿ ರಸ್ತೆಯಿಂದ ವೈದೇಹಿ ಅಸ್ಪತ್ರೆ ಮೂಲಕ ಹೋಫ್ ಫಾರಂ ಜಂಕ್ಷನ್ ವರೆಗೆ ಸಂಚಾರ ನಿರ್ಬಂಧಿಸಲಾಗಿದೆ. ಇದನ್ನೂ ಓದಿ: ಒಳಮೀಸಲಾತಿ ಹಂಚಿಕೆ; ಪ್ರತ್ಯೇಕ ಮೀಸಲಾತಿ ರದ್ದು – EWS ಕೋಟಾ ವ್ಯಾಪ್ತಿಗೆ ಮುಸ್ಲಿಮರು
ಎಲ್ಲೆಲ್ಲಿ ಪರ್ಯಾಯ ಮಾರ್ಗ?
ಏರ್‌ಪೋರ್ಟ್ ರಸ್ತೆಗೆ ಹೋಗುವವರು ವರ್ತೂರು ಕೋಡಿಯಿಂದ ಕುಂದಲಹಳ್ಳಿ ಬ್ರಿಡ್ಜ್ ಮೂಲಕ ಹಳೇ ಏರ್‌ಪೋರ್ಟ್ ರಸ್ತೆ ತಲುಪಬಹುದಾಗಿದೆ. ವರ್ತೂರು ಕೋಟಿ ತಲುಪುವವರು ಚನ್ನಸಂದ್ರ ವೃತ್ತದಿಂದ ನಾಗೊಂಡನಹಳ್ಳಿ, ಇಮ್ಮಡಿಹಳ್ಳಿ ಹಗದೂರು ಮೂಲಕ ತಲುಪಬಹುದು. ಚನ್ನಸಂದ್ರ ತಲುಪುವವರು ಕಾಟಂನಲ್ಲೂರು ಕ್ರಾಸ್ ನಿಂದ ಶೀಗೆಹಳ್ಳಿ ಗೇಟ್, ಕಾಡುಗೋಡಿ ನಾಲಾರಸ್ತೆ ಮೂಲಕ ತಲುಪಬಹುದು.
ಅಲ್ಲದೇ ಕುಂದಲಹಳ್ಳಿಗೆ ಹೋಗಬೇಕಾದವರು ಹೂಡಿ ಸರ್ಕಲ್ ನಿಂದ ಗ್ರಾಫೈಟ್ ರಸ್ತೆ ಮೂಲಕ ತಲುಪಬಹುದು. ಕಾಟಂನಲ್ಲೂರು ಕ್ರಾಸ್‌ಗೆ ಹೋಗುವವರು ಹೂಡಿ ಸರ್ಕಲ್ ನಿಂದ ಅಯ್ಯಪ್ಪನಗರ, ಭಟ್ಟರಹಳ್ಳಿ-ಮೇಡಹಳ್ಳಿ ಮೂಲಕ ಕಾಟಂನಲ್ಲೂರು ಕ್ರಾಸ್ ತಲುಪಬಹುದಾಗಿದೆ. ಇದನ್ನೂ ಓದಿ: ರಾಹುಲ್ ಗಾಂಧಿ ಅನರ್ಹತೆ ವಿಚಾರ ತಿಳಿದು ಹೈಕೋರ್ಟ್‍ಗೆ ಓಲೆಕಾರ್ ಅರ್ಜಿ
ಪ್ರಧಾನಿ ನರೇಂದ್ರ ಮೋದಿ ಆಗಮನದ ಸಮಯದಲ್ಲಿ ಸಂಚಾರ ದಟ್ಟಣೆಯಾಗದಂತೆ ನೋಡಿಕೊಳ್ಳಲು ಪೊಲೀಸರು ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ.