Tag: Krishan Ajay rao

  • ಸ್ಪೆಷಲ್ ಕೇಕ್ ಚಪ್ಪರಿಸಿ ತಿಂದು ಅಜಯ್ ಪತ್ನಿಗೆ ರಚಿತಾ ಧನ್ಯವಾದ

    ಸ್ಪೆಷಲ್ ಕೇಕ್ ಚಪ್ಪರಿಸಿ ತಿಂದು ಅಜಯ್ ಪತ್ನಿಗೆ ರಚಿತಾ ಧನ್ಯವಾದ

    ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ರಚಿತಾ ರಾಮ್‍ಗಾಗಿ ನಟರೊಬ್ಬರು ತಮ್ಮ ಪತ್ನಿಯ ಕೈಯಾರೆ ಕೇಕ್ ಮಾಡಿ ಕೊಟ್ಟಿದ್ದಾರೆ. ಈ ಕೇಕ್ ಅನ್ನು ರಚಿತಾ ನಾಲಿಗೆ ಚಪ್ಪರಿಸಿ ತಿಂದ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಅಗುತ್ತಿದೆ.

     

    View this post on Instagram

     

    A post shared by Rachita Ram (@rachita_instaofficial)

    ಹೌದು. ಈ ಕೇಕ್ ಅನ್ನು ಅಜಯ್ ರಾವ್ ಪತ್ನಿ ಸ್ವಪ್ನಾ ರಾವ್ ತಯಾರಿಸಿದ್ದಾರೆ. ರಚಿತಾ ಅವರು ವೀಡಿಯೋವನ್ನು ಇನ್ ಸ್ಟಾ ದಲ್ಲಿ ಹಂಚಿಕೊಂಡು, ಬಾಯಲ್ಲಿ ನೀರೂರಿಸುವ ಕೇಕ್ ಕಳುಹಿಸಿದ್ದೀರಾ, ಇದು ತುಂಬಾ ತುಂಬಾ ಚೆನ್ನಾಗಿದೆ ಎಂದು ಹೇಳುತ್ತಾ ನಾಲಿಗೆ ಚಪ್ಪರಿಸಿಕೊಂಡು ತಿನ್ನುತ್ತಿರುವುದನ್ನು ಕಾಣಬಹುದಾಗಿದೆ. ಇದನ್ನೂ ಓದಿ: ಈ ವರ್ಷದಲ್ಲಿ ದೇಶದಲ್ಲೇ ಮೊದಲು- ಹಕ್ಕಿ ಜ್ವರಕ್ಕೆ 12ರ ಬಾಲಕ ಬಲಿ

     

    View this post on Instagram

     

    A post shared by Rachita Ram (@rachita_instaofficial)

    ‘ಲವ್ ಯೂ ರಚ್ಚು’ ಸಿನಿಮಾದಲ್ಲಿ ರಚಿತಾ ರಾಮ್ ಹಾಗೂ ಅಜಯ್ ರಾವ್ ನಟಿಸುತ್ತಿದ್ದಾರೆ. ಮೊಗ್ಗಿನ ಮನಸ್ಸು ಖ್ಯಾತಿಯ ಶಶಾಂಕ್ ಕಥೆ ಬರೆದಿರುವ ಈ ಸಿನಿಮಾವನ್ನು ಶಂಕರ್ ಎಸ್ ರಾಜ್ ಡೈರೆಕ್ಷನ್ ಮಾಡುತ್ತಿದ್ದಾರೆ. ಇದೇ ಸಿನಿಮಾದ ಶೂಟಿಂಗ್ ನಡೆಯುತ್ತಿದ್ದು, ಹಾಡೊಂದರ ಚಿತ್ರೀಕರಣದಲ್ಲಿ ಅಜಯ್ ರಾವ್, ರಚಿತಾ ಪಾಲ್ಗೊಂಡಿದ್ದರು. ಈ ವೇಳೆ ಅಜಯ್ ಅವರ ಪತ್ನಿ ಸ್ವಪ್ನಾ ಅವರು ಕಳುಹಿಸಿಕೊಟ್ಟಿರುವ ಸ್ಪೆಷಲ್ ಕೇಕ್ ಅನ್ನು ರಚಿತಾ ಟೇಸ್ಟ್ ಮಾಡಿದ್ದಾರೆ.

  • ತಾಯಿಗೆ ತಕ್ಕ ಮಗನ ವಿಶೇಷತೆ ಮೊಗೆದಷ್ಟೂ ಮುಗಿಯೋದಿಲ್ಲ!

    ತಾಯಿಗೆ ತಕ್ಕ ಮಗನ ವಿಶೇಷತೆ ಮೊಗೆದಷ್ಟೂ ಮುಗಿಯೋದಿಲ್ಲ!

    ಬೆಂಗಳೂರು: ಶಶಾಂಕ್ ಸಿನಿಮಾಸ್ ಅಡಿಯಲ್ಲಿ ಶಶಾಂಕ್ ಅವರೇ ನಿರ್ಮಾಣ ಮಾಡಿ ನಿರ್ದೇಶನವನ್ನೂ ಮಾಡಿರೋ ಚಿತ್ರ ತಾಯಿಗೆ ತಕ್ಕ ಮಗ. ಈಗಾಗಲೇ ಮಾಧುರ್ಯದ ಹಾಡುಗಳು ಮತ್ತು ಎನರ್ಜೆಟಿಕ್ ಟ್ರೇಲರ್ ಮೂಲಕ ಪ್ರೇಕ್ಷಕರನ್ನು ಸೆಳೆದುಕೊಂಡಿರುವ ಈ ಚಿತ್ರ ಈ ವಾರ ತೆರೆ ಕಾಣುತ್ತಿದೆ.

    ‘ತಾಯಿಗೆ ತಕ್ಕ ಮಗ’ ಶಶಾಂಕ್ ಅವರ ಸ್ವಂತ ಬ್ಯಾನರಿನಡಿಯಲ್ಲಿ ನಿರ್ಮಾಣವಾಗುತ್ತಿರೋ ಮೊದಲ ಚಿತ್ರ. ಆದ್ದರಿಂದಲೇ ಆರಂಭವೇ ಅದ್ಧೂರಿಯಾಗಿರಬೇಕೆಂಬ ಮಹದಾಸೆಯಿಂದ ಪ್ರತಿಯೊಂದರಲ್ಲಿಯೂ ನಿಗಾ ವಹಿಸಿಯೇ ಈ ಚಿತ್ರವನ್ನು ರೂಪಿಸಿದ್ದಾರೆ. ಶಶಾಂಕ್ ಈ ಕಥೆಯನ್ನೂ ಕೂಡಾ ಅದಕ್ಕೆ ತಕ್ಕುದಾಗಿಯೇ ಹೊಸೆದಿದ್ದಾರಂತೆ. ಆದ್ದರಿಂದಲೇ ಬಿಡುಗಡೆಯ ಹೊಸ್ತಿಲಲ್ಲಿಯೇ ಗೆಲುವಿನ ಸೂಚನೆ ಮಿರುಗಲಾರಂಭಿಸಿದೆ.

    ಇದು ಶಶಾಂಕ್ ಮತ್ತು ಅಜೇಯ್ ರಾವ್ ಒಟ್ಟಾಗಿ ರೂಪಿಸಿದ ಮೂರನೇ ಚಿತ್ರ. ಅಜೇಯ್ ರಾವ್ ಅವರ ವೃತ್ತಿ ಜೀವನದಲ್ಲಿದು ಇಪ್ಪತೈದನೇ ಚಿತ್ರ. ಬಹಳಷ್ಟು ಕಷ್ಟಪಟ್ಟು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ಅಜೇಯ್ ರಾವ್ ಈ ಹಾದಿಯಲ್ಲಿ ಹದಿನೈದು ವರ್ಷ ಸಾಗಿ ಬಂದಿದ್ದಾರೆ. ಅದನ್ನು ತಾಯಿಗೆ ತಕ್ಕ ಮಗ ಚಿತ್ರ ಸಾರ್ಥಕಗೊಳಿಸಲಿದೆ ಎಂಬ ಭರವಸೆಯನ್ನೂ ಹೊಂದಿದ್ದಾರೆ.

    ಕಳೆದ ಹದಿನೈದು ವರ್ಷದ ಅಜೇಯ್ ರಾವ್ ಬಣ್ಣದ ಬದುಕನ್ನೊಮ್ಮೆ ಅವಲೋಕಿಸಿದರೆ ಅವರು ಈವರೆಗೂ ಲವರ್ ಬಾಯ್ ಪಾತ್ರಗಳಲ್ಲಿಯೇ ಮಿಂಚುತ್ತಾ ಬಂದಿದ್ದಾರೆ. ಆದರೆ ಅವರ ಪ್ರಧಾನ ಆಸಕ್ತಿ ಆಕ್ಷನ್‍ನತ್ತಲೇ ಇತ್ತೆಂಬುದು ಅಚ್ಚರಿಯಾದರೂ ಸತ್ಯ. ಅಷ್ಟಕ್ಕೂ ಅಜೇಯ್ ರಾವ್ ಶಾಲಾ ದಿನಗಳಿಂದಲೇ ಕರಾಟೆ ಚಾಂಪಿಯನ್. ಈ ಚಿತ್ರದಲ್ಲಿ ಕರಾಟೆ ಪಟ್ಟುಗಳನ್ನೂ ಕೂಡಾ ಅಜೇಯ್ ಪ್ರದರ್ಶಿಸಿದ್ದಾರಂತೆ!

    ಜೂಡಾ ಸ್ಯಾಂಡಿ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಶೇಖರ್ ಚಂದ್ರ ಅವರ ಛಾಯಾಗ್ರಹಣವಿದೆ. ಗಿರಿ ಮಹೇಶ್ ಸಂಕಲನ ಹಾಗೂ ಕೆ.ರವಿವರ್ಮ ಹಾಗೂ ಥ್ರಿಲ್ಲರ್ ಮಂಜು ಅವರ ಸಾಹಸ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಕೃಷ್ಣ ಅಜೇಯ್ ರಾವ್, ಸುಮಲತಾ ಅಂಬರೀಶ್, ಆಶಿಕಾ ರಂಗನಾಥ್, ಅಚ್ಯುತಕುಮಾರ್, ಸಾಧುಕೋಕಿಲ, ಭಜರಂಗಿ ಲೋಕಿ, ಕೃಷ್ಣ ಹೆಬ್ಬಾಳೆ ಮುಂತಾದವರಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews