– ಹೆಚ್ಚಿನ ಪರಿಹಾರದ ಬಗ್ಗೆ ಸಿಎಂ ಜೊತೆ ಮಾತನಾಡುತ್ತೇನೆ – ಇದು ಯಾರ ವೈಫಲ್ಯ ಎಂದು ಹೇಳೊಕ್ಕಾಗಲ್ಲ
ಹಾಸನ: ಮೃತರ ಕುಟುಂಬಸ್ಥರಿಗೆ ನಷ್ಟ ಭರಿಸಲು ಆಗಲ್ಲ, ಸಹಾಯದ ರೀತಿಯಲ್ಲಿ ಸ್ವಲ್ಪ ಪರಿಹಾರ ನೀಡಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ (Krishna Byre Gowda) ಹೇಳಿದ್ದಾರೆ.
ಜಿಲ್ಲೆಯ ಮೊಸಳೆಹೊಸಳ್ಳಿ ಗ್ರಾಮದಲ್ಲಿ ನಡೆದ ದುರಂತ ಸ್ಥಳಕ್ಕೆ ಭೇಟಿ ನೀಡಿ, ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೃದಯ ವಿದ್ರಾವಕ ಘಟನೆ ನಡೆದಿದೆ. ಅವಘಡದಲ್ಲಿ ಈವರೆಗೆ 9 ಜನ ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಗಳಿಗೆ ಸರ್ಕಾರದ ಪರವಾಗಿ ಸಾಂತ್ವನ ಹೇಳಿದ್ದೇನೆ. ಆ ಕುಟುಂಬದ ನೋವು ಅರ್ಥ ಮಾಡಿಕೊಳ್ಳೋದು ಕಷ್ಟ. ಮೃತರ ಕುಟುಂಬಗಳಿಗೆ ನಷ್ಟ ಭರಿಸಲು ಆಗಲ್ಲ, ಹೀಗಾಗಿ ಸ್ವಲ್ಪ ಸಹಾಯದ ರೀತಿಯಲ್ಲಿ ಪರಿಹಾರ ನೀಡಿದ್ದೇವೆ. ತಲಾ 5 ಲಕ್ಷ ರೂ. ಪರಿಹಾರ ಕೊಡುವಂತೆ ಸಿಎಂ ಸೂಚಿಸಿದ್ದಾರೆ. ಅದರಂತೆ ನಾನು 5 ಲಕ್ಷ ರೂ. ಪರಿಹಾರ ಕೊಡುತ್ತಿದ್ದೇನೆ. ಇನ್ನೂ ಹೆಚ್ಚಿನ ಪರಿಹಾರ ಕೇಳುತ್ತಿದ್ದಾರೆ. ಅದರ ಬಗ್ಗೆ ಸಿಎಂ ಜೊತೆ ಮಾತನಾಡುತ್ತೇನೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಹಾಸನ | ವಿಮಾನ ದುರಂತದಲ್ಲಾದ್ರೆ 1 ಕೋಟಿ ಕೊಡ್ತೀರಿ, ಬಡವರ ಜೀವಕ್ಕೆ ಬೆಲೆ ಇಲ್ವಾ? – ಸಚಿವರಿಗೆ ಜನರ ತರಾಟೆ
ಇನ್ನೂ ಇದು ಯಾರ ವೈಫಲ್ಯ ಎಂದು ಹೇಳೊಕ್ಕಾಗಲ್ಲ. ಹೆಚ್ಚಿನ ಭದ್ರತೆ ನೀಡಿದರೆ ಜನರ ಭಾವನೆಗಳಿಗೆ ಧಕ್ಕೆ ಎನ್ನುತ್ತೀರಾ, ಭದ್ರತೆ ಕಡಿಮೆ ಮಾಡಿದಾಗ ಏನಾದರೂ ಆದರೆ ಸರ್ಕಾರ ಮುಂಜಾಗ್ರತಾ ಕ್ರಮ ಕೈಗೊಂಡಿಲ್ಲ ಎನ್ನುತ್ತೀರಾ. ಹೀಗಾಗಿ ವೈಫಲ್ಯದ ಬಗ್ಗೆ ನಾನು ಮಾತಾಡಲ್ಲ. ಈಗಾಗಲೇ ಟ್ರಕ್ ಚಾಲಕನನ್ನು ಬಂಧಿಸಿದ್ದೇವೆ. ಆತ ಇದೇ ಊರಿನವನು, ಅವನಿಗೂ ಗಾಯ ಆಗಿದೆ. ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಭೇಟಿ ನೀಡುವ ಮುನ್ನ ಅಧಿಕಾರಿಗಳ ಜೊತೆ ಸಭೆ ಮಾಡಿದ್ದೇನೆ. ಸ್ಥಳ ಪರಿಶೀಲನೆ ಕೂಡ ಮಾಡಿದ್ದೇನೆ. ಕೆಲವು ಕುಟುಂಬಗಳ ಭೇಟಿ ಮಾಡಿ ಸಾಂತ್ವನ ಹೇಳಿದ್ದೇನೆ. ಗಾಯಾಳುಗಳ ಆರೈಕೆ ಬಗ್ಗೆಯೂ ವಿಚಾರಿಸಿದ್ದೇನೆ. ಪೊಲೀಸರಿಗೆ ದುರಂತ ಹೇಗಾಯ್ತು ಹಾಗೂ ಡ್ರೈವರ್ ಬಗ್ಗೆ ತನಿಖೆ ಮಾಡುವಂತೆ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.
– ಹೊಸದಾಗಿ ಗೋಲ್ಡ್ ಪಾಸ್ ವಿತರಣೆ – ಕೊನೆಯ ಐದು ದಿನ ಎಲ್ಲಾ ಶಿಷ್ಟಾಚಾರ ರದ್ದು
ಹಾಸನ: ಈ ಬಾರಿಯ ಹಾಸನಾಂಬೆ ಜಾತ್ರೆ (Hasanambe Jatra) ಅ.9 ರಿಂದ 23ರವರೆಗೆ ನಡೆಯಲಿದೆ. ಜಾತ್ರಾ ಮಹೋತ್ಸವದ ಹಿನ್ನೆಲೆ ಮಂಗಳವಾರ (ಆ.26) ಹಾಸನ ಜಿ.ಪಂ ಹೊಯ್ಸಳ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯಿತು. ಈ ವೇಳೆ ದರ್ಶನದ ಪಾಸ್ ಸೇರಿದಂತೆ ಹಲವು ನಿಯಮಗಳಲ್ಲಿ ಬದಲಾವಣೆ ತರಲಾಗಿದೆ.
ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ (Krishna Byregowda) ಅವರ ನೇತೃತ್ವದಲ್ಲಿ ಶ್ರೀ ಹಾಸನಾಂಬೆ ದೇವಿ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ ನಡೆದಿದ್ದು, ಶಾಸಕರುಗಳಾದ ಕೆ.ಎಂ.ಶಿವಲಿಂಗೇಗೌಡ, ಎಚ್.ಪಿ.ಸ್ವರೂಪ್ ಪ್ರಕಾಶ್, ಸಿಮೆಂಟ್ ಮಂಜು, ಡಿಸಿ ಕೆ.ಎಸ್.ಲತಾಕುಮಾರಿ, ಎಸ್ಪಿ ಮಹಮದ್ ಸುಜೇತಾ, ಮೇಯರ್ ಹೇಮಲತಾ ಹಾಗೂ ಇತರೆ ಅಧಿಕಾರಿಗಳು ಭಾಗಿಯಾಗಿದ್ದರು.ಇದನ್ನೂ ಓದಿ: ಆಪ್ ನಾಯಕ ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ
2025ರ ಹಾಸನಾಂಬೆ ಜಾತ್ರಾ ಮಹೋತ್ಸವ ಅ.9 ರಿಂದ ಅ.23ರವರೆಗೆ ನಡೆಯಲಿದ್ದು, ಅ.9ರಂದು ಹಾಸನಾಂಬ ದೇವಿ ಗರ್ಭಗುಡಿ ಬಾಗಿಲು ತೆರೆಯಲಿದೆ. ಬಳಿಕ ಅ.23ರಂದು ಗರ್ಭಗುಡಿ ಬಾಗಿಲು ಮುಚ್ಚಲಿದೆ. ಅ.10ರಿಂದ ಅ.22ರವರೆಗೆ ಮಾತ್ರ ದೇವಿ ದರ್ಶನಕ್ಕೆ ಅವಕಾಶವಿರುತ್ತದೆ. ಈ ಬಾರಿ ವಿಐಪಿ, ವಿವಿಐಪಿ ಪಾಸ್‌ಗಳು ಸಂಪೂರ್ಣ ರದ್ದುಗೊಳಿಸಿ, ಹೊಸದಾಗಿ ಗೋಲ್ಡ್ ಪಾಸ್ ವಿತರಣೆ ಮಾಡಲಾಗುವುದು. ಈ ಗೋಲ್ಡ್ ಪಾಸ್ ಪಡೆದರೆ ಮುಂಜಾನೆ 5 ರಿಂದ 11 ಗಂಟೆಯವರೆಗೆ ದರ್ಶನ ಪಡೆಯಬಹುದಾಗಿದೆ. ಒಂದು ಗೋಲ್ಡ್ ಪಾಸ್‌ಗೆ ಒಬ್ಬರಿಗೆ ಮಾತ್ರ ಅವಕಾಶವಿರುತ್ತದೆ ಎಂದು ಉಪವಿಭಾಗಾಧಿಕಾರಿ ಹಾಗೂ ದೇವಾಲಯದ ಆಡಳಿತಾಧಿಕಾರಿ ಮಾರುತಿ ಅವರು ಹೇಳಿದ್ದಾರೆ.
ಇನ್ನೂ ಕೊನೆಯ ಐದು ದಿನ ಎಲ್ಲಾ ಶಿಷ್ಟಾಚಾರ ರದ್ದುಗೊಳಿಸಲಾಗುವುದು, ಸಿಎಂ, ಡಿಸಿಎಂ, ಸಿಜೆ ಮಾತ್ರ ಶಿಷ್ಟಾಚಾರದ ವಾಹನ ಬಳಸಬಹುದು. ಉಳಿದವರು ಪ್ರವಾಸಿ ಮಂದಿರದಲ್ಲಿ ವಾಹನ ನಿಲ್ಲಿಸಿ, ಜಿಲ್ಲಾಡಳಿತ ಆಯೋಜಿಸಿರುವ ವಾಹನದಲ್ಲಿ ಬಂದು ದೇವಿ ದರ್ಶನ ಪಡೆಯಲು ಅವಕಾಶವಿರುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ಈ ವೇಳೆ ಸಚಿವ ಕೃಷ್ಣಭೈರೇಗೌಡ ಮಾತನಾಡಿ, ರಾಜ್ಯದ ಎಲ್ಲೆಲ್ಲಿಂದಲೊ ಜನರು ಹಾಸನಾಂಬೆ ದರ್ಶನಕ್ಕೆ ಬರುತ್ತಾರೆ. ಆದರೆ ವಿವಿಐಪಿ, ವಿಐಪಿ ಭಕ್ತರ ಕಾರಣದಿಂದ ಜನರಿಗೆ ದರ್ಶನಕ್ಕೆ ಸಮಸ್ಯೆ ಆಗುತ್ತದೆ. ಹಾಗಾಗಿ ಅವರನ್ನು ಗಂಟೆಗಟ್ಟಲೆ ನಿಲ್ಲಿಸಿ ಜನರಿಗೆ ತೊಂದರೆ ಕೊಡೋದು ಸರಿಯಲ್ಲ. ಹಾಗಾಗಿ ಈ ಗಣ್ಯ ಸಂಸ್ಕೃತಿ ತಡೆಯಲು ಸಹಕರಿಸಿ ಎಂದು ಮನವಿ ಮಾಡಿಕೊಳ್ಳುತ್ತೇನೆ. ನಾನು ಈ ವಿಐಪಿ ಹಾಗೂ ಶಿಷ್ಟಾಚಾರ ಭಕ್ತರಿಗೆ ಸಮಯ ನಿಗದಿ ಮಾಡಿ ಎಂದು ಹೇಳಿದ್ದೇನೆ. ಗೋಲ್ಡ್ ಕಾರ್ಡ್ಗೆ ಎರಡು ಗಂಟೆ, ಶಿಷ್ಟಾಚಾರಕ್ಕೆ ಎರಡು ಗಂಟೆ ಮಾತ್ರ ಸಮಯ ನಿಗದಿ ಮಾಡಿ ಎಂದು ಸಲಹೆ ನೀಡಿದ್ದೇನೆ. ಇದೆಲ್ಲ ಮಾಡಿದರೆ ಜನರಿಗೆ ಅನುಕೂಲ ಆಗುತ್ತದೆ ಎನ್ನುವುದಾದರೆ ಈ ಎಲ್ಲಾ ರೀತಿಯ ಬದಲಾವಣೆ ಮಾಡೋಣ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಭಾರತೀಯ ನೌಕಾಪಡೆಗೆ ಬಲ; 2 ನೀಲಗಿರಿ ವರ್ಗದ ಯುದ್ಧನೌಕೆಗಳ ನಿಯೋಜನೆ
ವಿಜಯಪುರ: ಮೋದಿಯವರು ಬರೀ ಭಾಷಣ ಮಾಡಿದರೆ ನಡೆಯಲ್ಲ, ಕದನ ವಿರಾಮದ ಬಗ್ಗೆ ಉತ್ತರ ನೀಡಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ (Krishna Byregowda) ಒತ್ತಾಯಿಸಿದ್ದಾರೆ.
ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು `ಆಪರೇಷನ್ ಸಿಂಧೂರ’ (Operation Sindoor) ಕಾರ್ಯಾಚರಣೆಗೆ ಸಂಪೂರ್ಣ ಬೆಂಬಲ ಕೊಟ್ಟಿದ್ದೇವೆ. ಪಾಕಿಸ್ತಾನಕ್ಕೆ (Pakistan) ಸರಿಯಾಗಿ ಪಾಠ ಕಲಿಸಬೇಕು ಎನ್ನುವ ಕಾರಣಕ್ಕೆ ಬೆಂಬಲ ಕೊಟ್ಟಿದ್ದೆವು. ಆದರೆ ಕದನ ವಿರಾಮ ಘೋಷಣೆ ಮಾಡುವಾಗ ಯಾವ ಉದ್ದೇಶದಿಂದ, ಯಾವ ಗುರಿ ಇಟ್ಟುಕೊಂಡು ಕದನ ಮಾಡಿದ್ದೇವೆ ಆ ಗುರಿ ಈಡೇರಿದೆಯಾ ಎನ್ನುವ ಪ್ರಶ್ನೆಗೆ ಉತ್ತರವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಇದನ್ನೂ ಓದಿ: ಕಾಂಗ್ರೆಸ್‌ನಿಂದ ಇಂದಿರಾಗಾಂಧಿ ಪೋಸ್ಟರ್ – ಬಿಜೆಪಿ ಕಿಡಿ
ಪಾಕಿಸ್ತಾನಕ್ಕೆ ಯಾವ ಪಾಠ ಕಲಿಸಲು ಹೊರಟಿದ್ದೇವೆ. ಅದನ್ನು ಕಲಿಸಿದ್ವಾ? ನಾಲ್ಕೈದು ದಿನ ಯುದ್ಧ ಮಾಡಿ ಬಿಟ್ಟರೆ, ಇದು ಸರಿಯಾ? ಪಾಕಿಸ್ತಾನಕ್ಕೆ ಬುದ್ಧಿ ಕಲಿಸಬೇಕೆಂದು ಹೊರಟು, ಈಗ ಕದನ ವಿರಾಮ ಘೋಷಿಸಿದ್ದು ಸರಿನಾ? ಅಮೆರಿಕ ಹೇಳಿದೆ ಎಂದು ಕದನ ವಿರಾಮ ಘೋಷಣೆ ಮಾಡಿದ್ರಾ? ಅಮೆರಿಕ ನಮ್ಮ ಆಂತರಿಕ ವಿಷಯಗಳ ಬಗ್ಗೆ ತೀರ್ಮಾನ ಮಾಡುವುದಾದರೆ ನಮ್ಮ ಸಾರ್ವಭೌಮತ್ವದ ಬಗ್ಗೆ ಏನು ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.
ಕಾಶ್ಮೀರ ವಿಷಯವನ್ನು ನಾವು ಬಗೆಹರಿಸುತ್ತೇವೆ ಎಂದು ಹೇಳುತ್ತಾರೆ ಅಂದರೆ ಇದಕ್ಕಿಂತ ಭಾರತಕ್ಕೆ ದೊಡ್ಡ ಹಿನ್ನಡೆ ಮತ್ತೊಂದಿಲ್ಲ. ಕಾಶ್ಮೀರ ವಿಷಯ ಸೆಟಲ್ ಆಗಿದಿಯಾ ಅಥವಾ ರೀ ಓಪನ್ ಆಗಿದೆಯಾ? ಈ ಎಲ್ಲ ಪ್ರಶ್ನೆಗಳಿಗೆ ಇವತ್ತು ಉತ್ತರ ಇಲ್ಲದಂತಾಗಿದೆ. ಬರೀ ಭಾಷಣ ಮಾಡಿದರೆ ಉತ್ತರ ಸಿಗಲ್ಲ. ಈ ಪ್ರಶ್ನೆಗಳಿಗೆ ಕೇಂದ್ರ ಸರ್ಕಾರ ಸ್ಪಷ್ಟ ಉತ್ತರ ಕೊಡಬೇಕು ಎಂದು ಆಗ್ರಹಿಸಿದರು.ಇದನ್ನೂ ಓದಿ: ಪಾಕ್ ಮತ್ತೆ ದಾಳಿ ಮಾಡಿದ್ರೆ ಭಾರತ ನುಗ್ಗಿ ಹೊಡೆಯುತ್ತೆ: ಮೋದಿ
ಬೆಂಗಳೂರು: ಇನ್ನು ಮುಂದೆ ರಾಜ್ಯದಲ್ಲಿ ಎಲ್ಲೇ ಅಕ್ರಮ ಹಾಗೂ ಅನಧಿಕೃತ ಬಡಾವಣೆಗಳನ್ನು ನಿರ್ಮಾಣ ಮಾಡಿದರೆ ಅಂತಹ ಬಡಾವಣೆಗಳನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳುತ್ತದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ (Krishna Byregowda) ಎಚ್ಚರಿಕೆ ನೀಡಿದ್ದಾರೆ.ಇದನ್ನೂ ಓದಿ: ವರದಕ್ಷಿಣೆ ಕಿರುಕುಳಕ್ಕೆ ಗರ್ಭಿಣಿ ಸಾವು – ಕೊಲೆ ಆರೋಪ, ಪತಿ ಅರೆಸ್ಟ್
ವಿಕಾಸಸೌಧದಲ್ಲಿ ಮಾತನಾಡಿದ ಅವರು, ನೋಂದಣಿಯಿಲ್ಲದೆ, ಅನುಮತಿ ಪಡೆಯದೆ ಅನಧಿಕೃತ, ಅಕ್ರಮ ಬಡಾವಣೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಇದನ್ನು ಸಹಿಸೋಕೆ ಸಾಧ್ಯವಿಲ್ಲ. ಅನಧಿಕೃತ ಬಡಾವಣೆಗಳಿಗೆ ಕಡಿವಾಣ ಹಾಕಲೇಬೇಕು. ಈ ಸಂಬಂಧ ಎಲ್ಲಾ ಡಿಸಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.
ಸುಪ್ರೀಂ ಕೋರ್ಟ್ (Supreme Court) ಕೂಡ ಅನಧಿಕೃತ ಬಡಾವಣೆ ವಿರುದ್ಧ ಕ್ರಮ ಆಗಬೇಕು ಎಂದು ಹೇಳಿದೆ. ಸಿಎಂ ಕೂಡ ಅನಧಿಕೃತ ಬಡಾವಣೆ ವಿರುದ್ಧ ಕ್ರಮ ಆಗಬೇಕು ಎಂದು ಹೇಳಿದ್ದಾರೆ. ಕೃಷಿ ಜಮೀನಿನಲ್ಲಿ ಅನಧಿಕೃತ ಬಡಾವಣೆ ನಿರ್ಮಾಣ ಮಾಡುತ್ತಿದ್ದಾರೆ. ಇದನ್ನ ಸಹಿಸೋಕೆ ಸಾಧ್ಯವಿಲ್ಲ. ಹೀಗಾಗಿ ಸರ್ಕಾರ ದಿಟ್ಟ ಕ್ರಮ ತೆಗೆದುಕೊಳ್ಳುತ್ತದೆ. ಇನ್ನು ಮುಂದೆ ಅನಧಿಕೃತ, ಅಕ್ರಮ ಬಡಾವಣೆಗಳು ನಿರ್ಮಾಣ ಮಾಡಿದರೆ ಅದನ್ನ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳುತ್ತದೆ. ಈ ಸಂಬಂಧ ಡಿಸಿಗಳಗೆ ಸೂಚನೆ ನೀಡಿದ್ದೇನೆ. ಯಾರು ಅಕ್ರಮ ಬಡಾವಣೆ ನಿರ್ಮಾಣ ಮಾಡಬಾರದು ಎಂದು ವಾರ್ನಿಂಗ್ ಕೊಟ್ಟಿದ್ದಾರೆ.ಇದನ್ನೂ ಓದಿ: ಪ್ರಶಾಂತ್ ನೀಲ್, ಜ್ಯೂ.ಎನ್‌ಟಿಆರ್ ಸಿನಿಮಾದಲ್ಲಿ ಶ್ರುತಿ ಹಾಸನ್?
ಬೆಂಗಳೂರು: ರಾಜ್ಯ ಸರ್ಕಾರದ (State Government) ಮೇಲೆ ಗುತ್ತಿಗೆದಾರರು ಮಾಡಿರುವ ಕಮಿಷನ್ ಆರೋಪಕ್ಕೆ ಸೂಕ್ತ ದಾಖಲಾತಿ ಕೊಟ್ಟರೆ ತನಿಖೆ ಮಾಡಿಸುವುದಾಗಿ ಕಂದಾಯ ಸಚಿವ ಕೃಷ್ಣಬೈರೇಗೌಡ (Krishna Byregowda) ಸ್ಪಷ್ಟನೆ ನೀಡಿದರು.ಇದನ್ನೂ ಓದಿ: ಕೊನೆಗೂ ಭಾರತಕ್ಕೆ ಬಂದ ಮುಂಬೈ ದಾಳಿ ಉಗ್ರ ರಾಣಾ
ಗುತ್ತಿಗೆದಾರರ ಸಂಘದಿಂದ ಸಚಿವ ಸತೀಶ್ ಜಾರಕಿಹೊಳಿ, ಬೋಸರಾಜು ಮೇಲೆ ಆರೋಪ ಮಾಡಿರುವ ವಿಚಾರ ಹಾಗೂ ಸಿಎಂ, ಡಿಸಿಎಂಗೆ ಪತ್ರ ಬರೆದಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಗುತ್ತಿಗೆದಾರರು ಏನಾದರೂ ಆರೋಪ ಮಾಡಿದರೆ, ಅದಕ್ಕೆ ಸೂಕ್ತ ದಾಖಲಾತಿ ಕೊಟ್ಟರೆ ತನಿಖೆ ಮಾಡಿಸುತ್ತೇವೆ. ಗುತ್ತಿಗೆದಾರರ ದೂರು ಪರಿಶೀಲನೆ ಮಾಡುತ್ತೇವೆ. ಮಧ್ಯವರ್ತಿಗಳು ಯಾರು ಎಂದು ಅವರು ಮಾಹಿತಿ ಕೊಡಲಿ. ಯಾರ ಕುಟುಂಬದ ಹಸ್ತಕ್ಷೇಪ ಎಂದು ದಾಖಲಾತಿ ಕೊಡಲಿ. ಅವರು ಕೊಟ್ಟರೆ ದೂರು ಪರಿಶೀಲನೆ ಮಾಡುತ್ತೇವೆ. ಸಚಿವರು ಯಾರು? ಕುಟುಂಬದವರು ಯಾರು? ಎಂದು ನಿರ್ದಿಷ್ಟವಾಗಿ ಹೇಳಿದರೆ ತನಿಖೆ ಮಾಡಿಸುತ್ತೇವೆ ಎಂದು ತಿಳಿಸಿದರು.
ಯಾರ ಹಸ್ತಕ್ಷೇಪ ಎಂದು ಹೇಳಿದರೆ ತನಿಖೆ ಮಾಡಿಸಬಹುದು. ಬಿಜೆಪಿ ಮೇಲೆ 40% ಕಮಿಷನ್ ಆರೋಪದ ನ್ಯಾಯಾಂಗ ತನಿಖೆ ಆಗುತ್ತಿದೆ. ಕೋವಿಡ್‌ನಲ್ಲಿ ಅಕ್ರಮ ಆಗಿರುವ ಬಗ್ಗೆ ಬಿಜೆಪಿ ನಾಯಕರೇ ಹೇಳುತ್ತಿದ್ದಾರೆ. ಇದರ ತನಿಖೆಯೂ ನಡೆಯುತ್ತಿದೆ. ಅದೇ ರೀತಿ ಗುತ್ತಿಗೆದಾರರು ಏನಾದರೂ ಈ ಬಗ್ಗೆ ದೂರು ಕೊಟ್ಟರೆ ತನಿಖೆ ಮಾಡುತ್ತೇವೆ ಎಂದು ಹೇಳಿದರು.ಇದನ್ನೂ ಓದಿ: ಮುಂಬೈ ದಾಳಿಕೋರ ರಾಣಾ ತನ್ನ ಪ್ರಜೆಯಲ್ಲ – ದಿಢೀರ್ ಪಾಕ್ ಸ್ಪಷ್ಟನೆ
ಬೆಂಗಳೂರು: ಕೇಂದ್ರ ಸರ್ಕಾರದ ಹಿಂದಿನ ಬಜೆಟ್‌ನಲ್ಲಿ ರಾಜ್ಯಕ್ಕೆ ಘೋಷಿಸಿರುವ ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯ ಮಾಡಿದ್ದೇವೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ (Krishna Byregowda) ತಿಳಿಸಿದ್ದಾರೆ.
ಶನಿವಾರ ಮಂಡನೆ ಆಗಲಿರುವ ಕೇಂದ್ರ ಬಜೆಟ್ ಹಿನ್ನೆಲೆಯಲ್ಲಿ ರಾಜ್ಯದ ಬೇಡಿಕೆ ಬಗ್ಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯ ಸರ್ಕಾರ ಈಗಾಗಲೇ ಕೇಂದ್ರಕ್ಕೆ ನಮ್ಮ ಬೇಡಿಕೆಗಳನ್ನು ಲಿಖಿತವಾಗಿ ಮತ್ತು ಮನವಿ ರೂಪದಲ್ಲಿ ಸಲ್ಲಿಸಿದ್ದೇವೆ. ಈ ಹಿಂದಿನ ವರ್ಷಗಳಲ್ಲಿ ಕೇಂದ್ರ, ರಾಜ್ಯಕ್ಕೆ ಮಲತಾಯಿ ಧೋರಣೆ ಮಾಡಿದೆ. ಆದರೂ ಜನರ ಪರವಾಗಿ ನಮ್ಮ ಹಕ್ಕು ಪ್ರತಿಪಾದನೆ ಮಾಡುವ ಕೆಲಸ ಮಾಡಿದ್ದೇವೆ. ನಮಗೆ ಹೊಸಸ ನುದಾನ ಕೊಡದೇ ಹೋದರೂ ಹಿಂದಿನ ವರ್ಷಗಳಲ್ಲಿ ಘೋಷಣೆ ಮಾಡಿರುವ ಅನುದಾನ ಕೊಟ್ಟರೆ ಸಾಕಾಗಿದೆ ಎಂದರು.ಇದನ್ನೂ ಓದಿ: ಫಿಲ್ಮಿ ಸ್ಟೈಲ್ ರೌಡಿಗಳಂತೆ ಯುವತಿಯರಿದ್ದ ಕಾರನ್ನ ಬೆನ್ನಟ್ಟಿದ್ದ ಯುವಕರು – ವಿಡಿಯೋ ವೈರಲ್
ರಾಜ್ಯಕ್ಕೆ ಹಿಂದಿನ ಹಣಕಾಸು ಆಯೋಗ 11,495 ಸಾವಿರ ಕೋಟಿ ರೂ. ವಿಶೇಷ ಅನುದಾನ ಕೊಡಲು ಶಿಫಾರಸು ಮಾಡಿತ್ತು. ಅದನ್ನ ಕೊಡಲಿಲ್ಲ. ಈ ಅನುದಾನ ಬಿಡುಗಡೆ ಮಾಡಬೇಕೆಂದು ಒತ್ತಾಯ ಮಾಡಿದ್ದೇವೆ. ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಣೆ ಮಾಡಿದ್ದ 5 ಸಾವಿರ ಕೋಟಿ ರೂ. ಹಣ ಕೊಡಬೇಕು. ಮೇಕೆದಾಟು ಯೋಜನೆ, ಕಳಸಾ-ಬಂಡೂರಿ ಯೋಜನೆಗೆ ಅನುಮತಿ ಕೊಡಬೇಕು. ಹಿಂದುಳಿದ ಕಲ್ಯಾಣ ಕರ್ನಾಟಕ ಭಾಗ, ಮಲೆನಾಡು ಕರ್ನಾಟಕ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್ ಕೊಡಬೇಕು. ಪಿಂಚಣಿ ಯೋಜನೆಗೆ ಕೇಂದ್ರ ಕೊಡುವ ಮೊತ್ತವನ್ನು ಹೆಚ್ಚಳ ಮಾಡಲು ಮನವಿ ಮಾಡ್ತಿದ್ದೇವೆ. ಪ್ರಧಾನಿಮಂತ್ರಿ ಆವಾಸ್ ಯೋಜನಡಿ ಮನೆ ಕಟ್ಟಿಕೊಡಲು ಕೇಂದ್ರ ಕೊಡುವ ಹಣವನ್ನು ಹೆಚ್ಚಳ ಮಾಡಬೇಕು. ಆಶಾ ಕಾರ್ಯಕರ್ತೆಯರು, ಅಂಗನವಾಡಿ, ಬಿಸಿಯೂಟ ಮಾರುವವರಿಗೆ ಕೇಂದ್ರದ ಗೌರವ ಧನ ಹೆಚ್ಚಳ ಮಾಡಬೇಕು ಎಂದು ಒತ್ತಾಯ ಮಾಡಿದ್ದೇವೆ ಎದು ಹೇಳಿದರು.
ಇನ್ನೂ ಇದೇ ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತು ಕುಟುಂಬದವರಿಂದ ಕೇತಗಾನಹಳ್ಳಿಯಲ್ಲಿ ಸರ್ಕಾರಿ ಜಮೀನು ಒತ್ತುವರಿ ಪ್ರಕರಣದ ತನಿಖೆಗೆ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳ ತಂಡ ರಚನೆ ಮಾಡಲಾಗಿದೆ. ಹೈಕೋರ್ಟ್ ಸರ್ಕಾರಿ ಜಮೀನು ಒತ್ತುವರಿ ಆಗಿರುವ ಬಗ್ಗೆ ತೀಕ್ಷ್ಣವಾಗಿ ಸೂಚನೆಯನ್ನು ಕೊಟ್ಟಿದೆ. ಫೆಬ್ರವರಿ 21ರ ಒಳಗೆ ತನಿಖಾ ವರದಿಯನ್ನು ಕೋರ್ಟ್‌ಗೆ ಸಲ್ಲಿಸುತ್ತೇನೆ. ತನಿಖೆಗೆ 3 ತಿಂಗಳು ಸಮಯ ಕೇಳಿದ್ದೆವು. ಆದರೆ ಕೋರ್ಟ್ ಸಮಯ ಕೊಡಲಿಲ್ಲ. ಹೀಗಾಗಿ ಕೋರ್ಟ್ ಕೊಟ್ಟಿರುವ ಅವಧಿಯಲ್ಲಿ ತನಿಖೆ ಮಾಡಿ ವರದಿ ಕೋರ್ಟ್‌ಗೆ ಸಲ್ಲಿಕೆ ಮಾಡ್ತೀವಿ ಎಂದು ತಿಳಿಸಿದರು.ಇದನ್ನೂ ಓದಿ: ಅತ್ಯಾಚಾರ ಪ್ರಕರಣ; ಕಾಂಗ್ರೆಸ್ ಸಂಸದ ರಾಕೇಶ್ ರಾಥೋಡ್ ಬಂಧನ
ಬೆಂಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳ ತಪ್ಪಿಸಲು ಇನ್ನೊಂದು ವಾರದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಜೊತೆ ಸಭೆ ಮಾಡಿ ಎಚ್ಚರಿಕೆ ಕೊಡಬೇಕು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ (Krishna Byregowda) ಡಿಸಿ-ಎಸ್ಪಿಗಳಿಗೆ ಸೂಚನೆ ನೀಡಿದ್ದಾರೆ.
ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್ಗೆ ಕಿರುಕುಳ ಕಡಿವಾಣ ಹಾಕಲು ಸಿಎಂ ಸೂಚನೆ ಕೊಟ್ಟಿದ್ದರು. ಹೀಗಾಗಿ ಈ ವಾರದಲ್ಲಿ ಡಿಸಿ, ಎಸ್ಪಿಗಳು ಫೈನಾನ್ಸ್ ಸಂಸ್ಥೆಗಳ ಜೊತೆ ಅವರ ಜೊತೆ ಸಭೆ ಮಾಡಬೇಕು ಎಂದು ತಿಳಿಸಿದ್ದರು. ಆರ್‌ಬಿಐ ನಿಯಮಗಳನ್ನು ಉಲ್ಲಂಘನೆ ಮಾಡದಂತೆ ಎಚ್ಚರ ಕೊಡಬೇಕು. ಅತಿರೇಕದ ಸಾಲ ಪಾವತಿ ಕ್ರಮ ತೆಗೆದುಕೊಂಡರೇ ಕೇಸ್ ದಾಖಲು ಮಾಡುವಂತೆ ಸೂಚನೆ ನೀಡಬೇಕು ಎಂದು ಹೇಳಿದರು.
ಫೈನಾನ್ಸ್ ಕಂಪನಿಗಳು ಯದ್ವಾತದ್ವಾ ಸಾಲ ಕೊಡುತ್ತಿದ್ದಾರೆ. 2 ಲಕ್ಷ ರೂ. ಮೇಲ್ಪಟ್ಟು ಸಾಲ ಕೊಡಬಾರದು. ಇದು ಆರ್‌ಬಿಐ ನಿಯಮ. ಬೇಜವಾಬ್ದಾರಿಯಾಗಿ ಸಾಲ ಕೊಡುವುದು ನಿಯಂತ್ರಣ ಮಾಡಬೇಕು ಎಂದು ಸೂಚನೆ ನೀಡಿದ್ದೇವೆ. ಆರ್‌ಬಿಐ ನಿಯಮ ಪಾಲನೆಗೆ ಫೈನಾನ್ಸ್ ಅವರಿಗೆ ಸೂಚನೆ ಕೊಡುವಂತೆ ತಿಳಿಸಲಾಗಿದೆ. ಆರ್‌ಬಿಐ ಅವರು ನಮಗೆ ಯಾವುದೇ ಅಧಿಕಾರ ಕೊಟ್ಟಿಲ್ಲ. ಹೀಗಾಗಿ ಇಂತಹ ಕಿರುಕುಳ ಕೊಡದಂತೆ ತಡೆಯಲು ಕ್ರಮಕ್ಕೆ ನಾವು ಮುಂದಾಗಿದ್ದೇವೆ. ಇದನ್ನು ಕಟ್ಟುನಿಟ್ಟಾಗಿ ಫೈನಾನ್ಸ್ ಅವರಿಗೆ ಸೂಚನೆ ಕೊಡಲು ತಿಳಿಸಲಾಗಿದೆ ಎಂದು ತಿಳಿಸಿದರು.ಇದನ್ನೂ ಓದಿ: MUDA Case | ಇಡಿ ಸಮನ್ಸ್‌ಗೆ ಹೈಕೋರ್ಟ್ ತಡೆ – ಸಿಎಂ ಪತ್ನಿ ಪಾರ್ವತಿಗೆ ತಾತ್ಕಾಲಿಕ ರಿಲೀಫ್
ಭ್ರಷ್ಟಾಚಾರ ಆರೋಪದಡಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ದೂರು ನೀಡಿದ್ದು, ಕಂದಾಯ ಇಲಾಖೆಯಲ್ಲಿನ ಭ್ರಷ್ಟಾಚಾರಗಳಿಗೆ ಕಡಿವಾಣ ಹಾಕುತ್ತಿಲ್ಲ. ಭ್ರಷ್ಟಾಚಾರದಲ್ಲಿ ತೊಡಗಿರುವ ಅಧಿಕಾರಿಗಳ ರಕ್ಷಣೆ ಮಾಡುತ್ತಿದ್ದಾರೆ. ಹೀಗಾಗಿ ಸಚಿವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಹಗರಣಗಳ ತನಿಖೆ ನಡೆಸಿ ಸೂಕ್ತ ಕ್ರಮಕ್ಕೆ ಸರ್ಕಾರಕ್ಕೆ ಸೂಚನೆ ನೀಡಬೇಕು ಎಂದು ಉಲ್ಲೇಖಿಸಿದ್ದಾರೆ.
ದೊಡ್ಡಬಳ್ಳಾಪುರದ ಹುಲಿಕುಂಟೆ ಗ್ರಾಮದ ಜಮೀನು ವ್ಯವಹಾರಕ್ಕೆ ಸಂಬಂಧಿಸಿದಂತೆ ಸರ್ವೇ ನಂಬರ್ 150ರಲ್ಲಿರುವ ಜಮೀನನ್ನು ಪೋಡಿ, ನಕ್ಷೆ ಆಗದೇ ಸಾಗುವಳಿದಾರರು ಕಾನೂನು ಬಾಹಿರವಾಗಿ ಮಾರಾಟ ಮಾಡಿದ್ದಾರೆ. ಪಲ್ಟಿತ್ ಡೆವಲಪರ್ಸ್ ಎಲ್‌ಎಲ್‌ಪಿ ಕಂಪನಿಗೆ ಮಾರಾಟ ಮಾಡಲಾಗಿದ್ದು, ತಹಶೀಲ್ದಾರ, ಉಪವಿಭಾಗಾಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.ಇದನ್ನೂ ಓದಿ: ದಕ್ಷಿಣದ ಕುಂಭಮೇಳ ಗವಿಸಿದ್ದೇಶ್ವರ ಜಾತ್ರಾಮಹೋತ್ಸವ – ರಥೋತ್ಸವಕ್ಕೆ ಭಕ್ತರ ದಂಡು
– 1,319 ಎಕರೆ ಮುಸ್ಲಿಂ ಸಮುದಾಯ ಸಂಘಟನೆಗಳ ಹೆಸರಲ್ಲಿದೆ ಎಂದ ಸಚಿವ
ಬೆಂಗಳೂರು: 14,201 ಎಕರೆಯಲ್ಲಿ 773 ಎಕರೆ ಮಾತ್ರ ವಕ್ಫ್‌ಗೆ ನೋಟಿಫಿಕೇಶನ್ ಆಗಿದೆ. 1,319 ಎಕರೆ ಮುಸ್ಲಿಂ ಸಮುದಾಯ ಸಂಘಟನೆಗಳ ಹೆಸರಲ್ಲಿದೆ ಎಂದು ಸಚಿವ ಕೃಷ್ಣಭೈರೇಗೌಡ ( Krishna Byre Gowda) ಹೇಳಿದ್ದಾರೆ.
ಈ ಕುರಿತು ಕೃಷ್ಣಭೈರೇಗೌಡ ಮಾತನಾಡಿ, ಡಿಸಿ ಅಧ್ಯಕ್ಷತೆಯಲ್ಲಿ ಟಾಸ್ಕ್ ಫೋರ್ಸ್ ರಚನೆ ಆಗಿದೆ. ದಾಖಲಾತಿ ಇರುವ ರೈತರು ತಂದು ಡಿಸಿಗೆ ಕೊಡಬಹುದು. ದಾಖಲಾತಿ ಇದ್ದರೆ ಅವರಿಗೆ ಜಮೀನು ಸಿಕ್ಕೇ ಸಿಗುತ್ತದೆ. ಮಂಜೂರು ಆಗಿರೋ ಜಮೀನು ಯಾರಿಂದಲೂ ವಾಪಸ್ ಪಡೆಯುವುದಿಲ್ಲ ಎಂದರು. ಇದನ್ನೂ ಓದಿ: 1974 ಮುಂಚಿನ ದಾಖಲೆ ಇದ್ದರೆ ರೈತರು ಟಾಸ್ಕ್ ಫೋರ್ಸ್‌ಗೆ ತಂದುಕೊಡಿ – ಎಂ.ಬಿ ಪಾಟೀಲ್
ವಿಜಯಪುರದಲ್ಲಿ (Vijayapura) ವಕ್ಫ್ ಸಂಸ್ಥೆಗೆ ಸೇರಿದ ಜಮೀನು ಮತ್ತೊಂದು ಕಡೆ ರೈತರ ಜಮೀನು ಇದರ ಬಗ್ಗೆ ಸ್ಪಷ್ಟನೆ ಕೊಡುತ್ತಿದ್ದೇವೆ. ಈಗಾಗಲೇ ಎಂ ಬಿ ಪಾಟೀಲ್ ಹೇಳಿದ್ದಾರೆ. ಆದರೆ ವ್ಯವಸ್ಥಿತವಾಗಿ ವಿವಾದ ಮಾಡೋ ಕೆಲಸ ಆಗುತ್ತಿದೆ. 1973-74ರಲ್ಲಿ ವಿಜಯಪುರ ಜಿಲ್ಲೆಯಲ್ಲಿ ವಕ್ಫ್ ಆಸ್ತಿ ಎಂದು ನೋಂದಣಿ ಆಗಿದೆ. 14,201 ಎಕರೆ ನೋಟಿಫಿಕೇಶನ್ ಆಗಿದೆ. ಇದರಲ್ಲಿ 773 ಎಕರೆ ಮಾತ್ರ ವಕ್ಫ್‌ಗೆ ನೋಟಿಫಿಕೇಶನ್ ಆಗಿದೆ. ಕೆಲವು ದರ್ಗಾ, ಮಸೀದಿ ಸೇರಿದ ಜಾಗ ಇದೆ. 1,319 ಎಕರೆ ವಯಕ್ತಿಕ ಅನುಭೋಗದಲ್ಲಿ ಇಲ್ಲ. ಯಾರಿಗೂ ಮಂಜೂರು ಆಗಿಲ್ಲ. ಅವು ಮುಸ್ಲಿಂ ಸಮುದಾಯದ ಸಂಘಟನೆಗಳ ಹೆಸರಿನಲ್ಲಿ ಇವೆ. 11,835 ಎಕರೆ ರೈತರಿಗೆ ಉಳುವವನೇ ಭೂಮಿಯ ಒಡೆಯ ಅಡಿ ಮಂಜೂರು ಆಗಿದೆ ಎಂದು ತಿಳಿಸಿದರು. ಇದನ್ನೂ ಓದಿ: 13 ವರ್ಷ ಪ್ರೀತಿಸಿದ ಹುಡುಗಿ ಮತ್ತೊಬ್ಬನ ಜೊತೆ ಮದುವೆ – ಡೆತ್ ನೋಟ್ ಬರೆದಿಟ್ಟು ಪ್ರಿಯಕರ ಆತ್ಮಹತ್ಯೆ
ಯಾರಿಗೆ ನೊಟೀಸ್ ಕೊಡಬೇಕು ಎಂದು ವಕ್ಫ್ ಸಚಿವರು ಹೇಳಲಿಲ್ಲ. ರೈತರಿಗೆ ಮಂಜೂರಾಗಿರೋ ಜಮೀನು ವಾಪಸ್ ಪಡೆಯೋದು ಸರ್ಕಾರದ ಮುಂದೆ ಇಲ್ಲ. 121 ನೋಟಿಸ್ ಹೋಗಿದೆ. ಇಂಡಿ ತಾಲೂಕಿನಲ್ಲಿ 41 ಜನರಿಗೆ ನೋಟಿಸ್ ಕೊಡಬೇಕಿತ್ತು. ಆದರೆ ನೋಟಿಸ್ ಕೊಡದೇ ಆಗಿದೆ. ಆದರೆ ತಹಶಿಲ್ದಾರರು ನೋಟಿಸ್ ಕೊಟ್ಟಿಲ್ಲ. ಹೀಗಾಗಿ ಎ ಸಿ ಅವರು ಅದನ್ನು ತಹಶಿಲ್ದಾರರಿಗೆ ವಾಪಸ್ ಕಳಿಸುತ್ತಾರೆ ಎಂದು ಹೇಳಿದರು. ಇದನ್ನೂ ಓದಿ: ದಾನಿಗಳು 1.12 ಲಕ್ಷ ಎಕರೆ ಭೂಮಿಯನ್ನ ವಕ್ಫ್‌ಗೆ ದಾನ ಮಾಡಿದ್ದಾರೆ: ಜಮೀರ್
ಹೊನವಾಡದಲ್ಲಿ ವಕ್ಫ್ ಆಸ್ತಿ ಎಂದು ಉದ್ದೇಶಪೂರ್ವಕ ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ ಅದು ಸುಳ್ಳು, 1977ರಲ್ಲಿ ಹೊನವಾಡ ಆಸ್ತಿ ಸರ್ಕಾರಕ್ಕೆ ಬಂದಿದೆ. ಹೊನವಾಡದಲ್ಲಿ 1,200 ಎಕರೆ ವಕ್ಫ್ ಆಸ್ತಿ ಇಲ್ಲ. 11 ಎಕರೆ ಜಾಗ ಮಾತ್ರ ವಕ್ಫ್ ಆಸ್ತಿ ಆಗಿದೆ. ಹೊನವಾಡದಲ್ಲಿ ಯಾವ ರೈತರಿಗೂ ನೋಟಿಸ್ ಕೊಡಲಿಲ್ಲ. ಉದ್ದೇಶ ಪೂರ್ವಕವಾಗಿ ರಾಷ್ಟ್ರೀಯ ಮಟ್ಟದಲ್ಲಿ ವಿಪಕ್ಷಗಳು ಸುದ್ದಿ ಮಾಡುತ್ತಿವೆ. ಇದು ಯತ್ನಾಳ್. ವಿಜಯೇಂದ್ರ ನಡುವೆ ಇರುವ ಸಂಘರ್ಷ. ಅವರ ರಾಜಕೀಯ ಬೇಳೆ ಬೇಯಿಸಿಕೊಳ್ಳೋಕೆ ಹೀಗೆ ಮಾಡುತ್ತಿದ್ದಾರೆ. ಇಬ್ಬರ ನಡುವಿನ ಜಗಳ ಮರೆ ಮಾಚುವುದಕ್ಕೆ ಇದನ್ನ ಮಾಡುತ್ತಿದ್ದಾರೆ ಎಂದು ಹರಿಹಾಯ್ದರು. ಇದನ್ನೂ ಓದಿ: ಭರ್ತಿಯಾದ ಕೆರೆಕಟ್ಟೆಗಳಿಂದ ಅವಾಂತರ – ಕೈಗೆಬಂದ ತುತ್ತು ಬಾಯಿಗೆ ಬಾರದ ಸ್ಥಿತಿಯಲ್ಲಿ ಚಿತ್ರದುರ್ಗ ರೈತರು
– ರೈತರಿಗೆ ನೆಮ್ಮದಿಯ ಬದುಕು ಕಲ್ಪಿಸುವುದೇ ಸರ್ಕಾರದ ಸಂಕಲ್ಪ
ಬೆಂಗಳೂರು: ಸೆಪ್ಟೆಂಬರ್ ತಿಂಗಳಿನಿಂದ ಪೋಡಿ ಅಭಿಯಾನಕ್ಕೆ (Podi Campaign) ಚಾಲನೆ ನೀಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ (Krishna Byregowda) ಹೇಳಿದ್ದಾರೆ.
ವಿಕಾಸಸೌಧದದಲ್ಲಿ (Vidhana Soudha) ಬೆಂಗಳೂರು ವಿಭಾಗದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಈ ವೇಳೆ, ಲಕ್ಷಾಂತರ ರೈತರಿಗೆ ಅವರ ಜಮೀನಿನ ಹಕ್ಕನ್ನು ಅವರಿಗೆ ನೀಡುವ ಮೂಲಕ ನೆಮ್ಮದಿಯ ಬದುಕು ಕಲ್ಪಿಸಲು ನಮ್ಮ ಸರ್ಕಾರ ಸಂಕಲ್ಪ ತೊಟ್ಟಿದೆ. ಸಾಗುವಳಿ ಮಾಡುವ ರೈತರಿಗೆ ಮಂಜೂರು ಮಾಡಿರುವ ಲಕ್ಷಾಂತರ ಪ್ರಕರಣಗಳಲ್ಲಿ ಹಲವು ವರ್ಷಗಳಿಂದ ಪೋಡಿ ದುರಸ್ತಿಯಾಗಿಲ್ಲ. ಈ ಹಿಂದಿನ ಸರ್ಕಾರದ ಅವಧಿಯಲ್ಲೂ ಹತ್ತಾರು ಚರ್ಚೆ, ನಾನಾ ಪ್ರಯತ್ನಗಳಾಗಿದ್ದರೂ ಈ ವಿಚಾರದಲ್ಲಿ ಸರಿಯಾದ ಪರಿಹಾರ ನೀಡಲು ಸಾಧ್ಯವಾಗಿಲ್ಲ. ರೈತರಿಗೆ ಅವರ ಜಮೀನಿನ ಹಕ್ಕನ್ನು ಸಂಪೂರ್ಣವಾಗಿ ಅವರಿಗೇ ನೀಡಲು, ಈ ವಿಚಾರದಲ್ಲಿ ಶಾಶ್ವತ ಪರಿಹಾರ ನೀಡಲು ನಮ್ಮ ಸರ್ಕಾರ ಸಂಕಲ್ಪ ತೊಟ್ಟಿದೆ ಎಂದು ಭರವಸೆ ನೀಡಿದ್ದಾರೆ.
ರೈತರಿಗೆ ಜಮೀನು ಮಂಜೂರಾಗಿದ್ದರೂ ಪೋಡಿ ದುರಸ್ಥಿಯಾಗದಿರಲು ಎರಡು ಪ್ರಮುಖ ಕಾರಣಗಳಿವೆ. ದಶಕಗಳ ಹಿಂದಿನಿಂದಲೂ ನಮ್ಮ ಅಧಿಕಾರಿಗಳು 100 ಎಕರೆ ಜಮೀನಿದ್ದರೆ ಅದಕ್ಕಿಂತ ಹೆಚ್ಚು ವಿಸ್ತೀಣ ಮಂಜೂರು ಮಾಡಿದ್ದಾರೆ. ಇದೊಂದು ಕಾರಣವಾದರೆ, ಕೆಲವು ಸಂದರ್ಭದಲ್ಲಿ ಸಾಗುವಳಿ ಮಾಡದಂತವರಿಗೂ ಮಂಜೂರು ಮಾಡಿದ್ದಾರೆ. ಇನ್ನೂ ಕೆಲವು ಪ್ರಕರಣಗಳಲ್ಲಿ ಆರ್‌ಟಿಸಿಯಲ್ಲಿ ಮಂಜೂರುದಾರರ ಹೆಸರಿದೆ. ಆದರೆ, ಅವರಿಗೆ ಮಂಜೂರು ಆಗಿರುವ ಬಗ್ಗೆ ಯಾವುದೇ ನಿಖರ ದಾಖಲೆಗಳಿಲ್ಲ. ಮತ್ತಷ್ಟು ಪ್ರಕರಣಗಳಲ್ಲಿ ಮಂಜೂರಿಗೆ ಅರ್ಜಿ ಕೊಟ್ಟಿರುವ ದಾಖಲೆ ಇದೆ. ಆದರೆ, ಮಂಜೂರು ಆಗಿರುವ ದಾಖಲೆ ಇಲ್ಲ. ಈ ಎರಡು ಪ್ರಮುಖ ಕಾರಣಗಳಿಂದ ಜಮೀನು ಮಂಜೂರಾಗಿದ್ರೂ ದುರಸ್ತಿಯಾಗಿಲ್ಲ. ಹೀಗಾಗಿ ರೈತರು ಅಂತಹ ಜಮೀನಿನಲ್ಲಿ ಕೃಷಿ ಮಾಡಬಹುದೇ ವಿನಃ ಅವರಿಗೆ ಆ ಭೂಮಿಯಿಂದ ಬೇರೆ ಯಾವುದೇ ಪ್ರಯೋಜನ ಇಲ್ಲ. ಈ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರೂ ಸೇರಿದಂತೆ ಎಲ್ಲಾ ಸಚಿವರ ಒತ್ತಡ ಇದೆ. ರೈತರಿಂದಲೂ ಸಾಕಷ್ಟು ಒತ್ತಡವಿದೆ. ಹೀಗಾಗಿ ಕಳೆದ ಆರೆಂಟು ತಿಂಗಳಿನಿಂದ ಅಧಿಕಾರಿಗಳ ಜೊತೆ ನಿರಂತರ ಚರ್ಚೆ ನಡೆಸಿ ಇದೀಗ ಈ ಸಮಸ್ಯೆಗೆ ಪರಿಹಾರ ನೀಡಲು ಮುಂದಾಗಿದ್ದೇವೆ. ಯಾರಿಗೆ ಪೋಡಿ ಮಾಡಿಕೊಡಲು ಸಾಧ್ಯವೋ ಅವರಿಗೆಲ್ಲಾ ಪೋಡಿ ಮಾಡಿಕೊಡಲೇಬೇಕು ಎಂದು ನಮ್ಮ ಸರ್ಕಾರದ ಸಂಕಲ್ಪ ಮಾಡಿದೆ. ಇದಕ್ಕೆಂದು ಪ್ರಾಯೋಗಿಕ ಆಪ್ ಸಿದ್ಧಪಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ದುರಸ್ತಿ ಕೆಲಸವನ್ನು ಕಾಗದದಲ್ಲಿ ಕಾರ್ಯಗತಗೊಳಿಸಿದರೆ ನಮಗೂ ಯಾವುದೇ ಲೆಕ್ಕ ಸಿಗುವುದಿಲ್ಲ. ತಳಮಟ್ಟದ ಅಧಿಕಾರಿಗಳ ಇಚ್ಚೆಯಂತೆಯೇ ಕೆಲಸ ನಡೆಯುತ್ತೇ ವಿನಃ ಜನರಿಗೆ ನ್ಯಾಯ ಸಿಗಲ್ಲ. ಇದೇ ಕಾರಣಕ್ಕೆ ಡಿಜಿಟಲ್ ಆಪ್ ಮೂಲಕ ದುರಸ್ತಿ ಕೆಲಸಕ್ಕೆ ಚಾಲನೆ ನೀಡಲು ಉದ್ದೇಶಿಸಲಾಗಿದೆ. 1 – 5 ಹಾಗೂ 6 – 10 ಪೋಡಿ ದುರಸ್ಥಿ ಪ್ರಕರಣ ಬಾಕಿ ಇರುವ ಎಲ್ಲಾ ತಾಲೂಕುಗಳಲ್ಲೂ ನಾವೇ ಹುಡುಕಿ ದಾಖಲೆ ಕಡತ ಸಿದ್ದಪಡಿಸಬೇಕು ಎಂದು ತೀರ್ಮಾನಿಸಿದ್ದೇವೆ. ಹಾಸನದಲ್ಲಿ ಈಗಾಗಲೇ ಪ್ರಾಯೋಗಿಕ ಯೋಜನೆ ನಡೆಯುತ್ತಿದೆ. ಇದರ ಆಧಾರದ ಮೇಲೆ ಸೆಪ್ಟೆಂಬರ್ ತಿಂಗಳಿನಿಂದ ಜನರ ಅರ್ಜಿಗೆ ಕಾಯದೆ ನಾವೇ ಸ್ವಯಂ ಪ್ರೇರಣೆಯಿಂದ ಅಭಿಯಾನದ ಮಾದರಿಯಲ್ಲಿ 1 – 5 ಹಾಗೂ 6 – 10 ಪೋಡಿ ದುರಸ್ಥಿ ಮಾಡಲಿದ್ದೇವೆ ಎಲ್ಲಾ ಮಂಜೂರಿದಾರರ ಪರವಾಗಿ ನಾವೇ ಪ್ರಕ್ರಿಯೆ ಆರಂಭಿಸಲಿದ್ದು, ಇದರಿಂದ ಲಕ್ಷಾಂತರ ಜನರಿಗೆ ಅವರ ಜಮೀನಿನ ಹಕ್ಕನ್ನು ಅವರಿಗೆ ನೀಡದಂತಾಗುತ್ತದೆ. ಪ್ರಕರಣಗಳ ಇತ್ಯರ್ಥಪಡಿಸಲು ಎಷ್ಟೇ ಕಾನೂನುಗಳನ್ನು ಅಳವಡಿಸಿದರೂ ಅವುಗಳನ್ನು ತಮ್ಮ ಅನುಕೂಲಕ್ಕೆ ತಕ್ಕಂತೆ ಅಧಿಕಾರಿಗಳು ಬಳಸಿಕೊಂಡು ಜನಸಾಮಾನ್ಯರಿಗೆ ಕಿರಿಕಿರಿ ಮಾಡುತ್ತಿದ್ದಾರೆ. ಕೆಲವೆಡೆ 50 ಎಕರೆ ಪೋಡಿ ಮಾಡಿಕೊಡಿ ಎಂದರೆ 100 ಎಕರೆ ಮಾಡಿಕೊಟ್ಟಿದ್ದಾರೆ. ಬಡ ರೈತನೊಬ್ಬ ತಾನು ಮಾಡುತ್ತಿರುವ ಸಾಗುವಳಿ ಭೂಮಿಗೆ ದಾಖಲೆಗಳನ್ನು ಮಾಡಿಕೊಳ್ಳಲು ಹೊರಟರೆ ಆತನನ್ನು ಅಲೆದಾಡಿಸುತ್ತಿದ್ದಾರೆ ಎಂದು ಕಿಡಿಕಾರಿದರು.
ಇದಕ್ಕೆಲ್ಲಾ ಇತಿಶ್ರೀ ಹಾಡುವ ಉದ್ದೇಶದಿಂದಲೇ ಪೋಡಿ ಅಭಿಯಾನ ಆರಂಭಿಸಿದ್ದೇವೆ, ಈ ಸಂದರ್ಭದಲ್ಲಿ ಇಲಾಖಾ ನೌಕರರು ಮತ್ತು ಅಧಿಕಾರಿಗಳು ಕಾನೂನಿನ ಚೌಕಟ್ಟನಡಿ ಅರ್ಜಿಗಳನ್ನು ವಿಲೇವಾರಿ ಮಾಡಬೇಕು, ಇಲ್ಲದಿದ್ದರೆ ನಾವು ನಿಮ್ಮ ಮೇಲೆ ಕಠಿಣ ಕ್ರಮ ಜರುಗಿಸಬೇಕಾದೀತು ಎಂದು ಎಚ್ಚರಿಸಿದ್ದೇನೆ. ಲ್ಯಾಂಡ್ ಬೀಟ್ ಆಪ್ ಆಧರಿಸಿ ಸೆಪ್ಟೆಂಬರ್ ತಿಂಗಳಿನಿಂದ ರಾಜ್ಯಾದ್ಯಂತ ಸರ್ಕಾರ ಭೂ ಒತ್ತುವರಿ ತೆರವು ಕಾರ್ಯಾಚರಣೆಗೆ ಚಾಲನೆ ನೀಡಲಾಗುವುದು. ಕಂದಾಯ, ಅರಣ್ಯ, ಶಿಕ್ಷಣ ಹಾಗೂ ಪಿಡಬ್ಲ್ಯೂಡಿ ಇಲಾಖೆ ಸೇರಿ ರಾಜ್ಯಾದ್ಯಂತ 1.41 ಕೋಟಿ ಎಕರೆ ಸರ್ಕಾರಿ ಜಮೀನು ಇದೆ ಎಂಬುದು ಲ್ಯಾಂಡ್ ಬೀಟ್ ಆಪ್ ಮೂಲಕ ತಿಳಿದುಬಂದಿದೆ. ಕಳೆದ ಎಂಟು ತಿಂಗಳಿನಿಂದ ಗ್ರಾಮ ಆಡಳಿತ ಅಧಿಕಾರಿಗಳ ಮೂಲಕ ಅವರ ಸರ್ಕಲ್ ನಲ್ಲಿ ಇರುವ ಸರ್ಕಾರಿ ಜಮೀನು ಎಷ್ಟಿವೆ? ಎಂದು ಲ್ಯಾಂಡ್ ಬೀಟ್ ಆಪ್ ನಲ್ಲಿ ಅಪ್‌ಲೋಡ್ ಮಾಡಲು ಹೇಳಿದ್ದೆವು. ಅದು ಅಪ್‌ಲೋಡ್ ಆದ ಮೇಲೆ ಈ ಲೆಕ್ಕ ಸಿಕ್ಕಿವೆ. ಈಗ ನಮ್ಮ ಬಳಿ ಜಿಲ್ಲಾವಾರು, ತಾಲೂಕವಾರು ಹಾಗೂ ಗ್ರಾಮವಾರು ಸರ್ವೇ ನಂಬರ್- ಲೊಕೇಷನ್ ಮತ್ತು ವಿಸ್ತೀಣದ ಮಾಹಿತಿ ಲಭ್ಯವಾಗಿದೆ. ಮೊದಲ ಹಂತದ ಕೆಲಸ ಮುಕ್ತಾಯವಾಗಿದ್ದು, ಎರಡನೇ ಹಂತದಲ್ಲಿ ಮಾರ್ಚ್ ತಿಂಗಳಿನಿಂದ 14 ಲಕ್ಷ ಸರ್ವೇ ನಂಬರ್‍ಗೆ ಗ್ರಾಮ ಆಡಳಿತ ಅಧಿಕಾರಿಗಳ ಮೂಲಕ ಖುದ್ದು ಬೀಟ್ ಮಾಡಿಸಿದ್ದೇವೆ. 13,04,885 ಜಾಗಗಳಿಗೆ ಗ್ರಾಮ ಆಡಳಿತ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಹೀಗೆ ಭೇಟಿ ನೀಡಿ ಆ ಜಾಗ ಸರ್ಕಾರದ ವಶದಲ್ಲಿದೆಯೋ ಅಥವಾ ಒತ್ತುವರಿಯಾಗಿದೆಯಾ ಎಂದು ಆಪ್ ನಲ್ಲಿ ನಮೂದಿಸಿದ್ದಾರೆ. ಈಗಾಗಲೇ 90% ರಷ್ಟು ಜಾಗ ಸ್ಪಾಟ್ ವಿಸಿಟ್ ಆಗಿದೆ, ಹಲವೆಡೆ ಒತ್ತುವರಿ ಇರುವುದು ಗೊತ್ತಾಗಿದ್ದು ಸೆಪ್ಟೆಂಬರ್ ತಿಂಗಳಿನಿಂದ ರೈತರ ಭೂಮಿ ಬಿಟ್ಟು ಉಳಿದ ಎಲ್ಲಾ ಒತ್ತುವರಿಯನ್ನೂ ತಹಶೀಲ್ದಾರ್ ಮೂಲಕ ತೆರವುಗೊಳಿಸಲಾಗುವುದು. ಮುಖ್ಯವಾಗಿ ಕೆರೆ-ಸ್ಮಶಾನ ಜಾಗವನ್ನು ಸರ್ವೇ ನಡೆಸಲಾಗುವುದು. ಈಗಾಗಲೇ 2.68 ಕೋಟಿ ರೈತರ ಆಧಾರ್ ಸೀಡಿಂಗ್ ಕೆಲಸ ಮುಕ್ತಾಯವಾಗಿದ್ದು, ಆಗಸ್ಟ್ ತಿಂಗಳಾಂತ್ಯದೊಳಗಾಗಿ ಆಧಾರ್ ಸೀಡಿಂಗ್ ಕೆಲಸವನ್ನು ಸಂಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.
ರಾಜ್ಯಾದ್ಯಂತ 4.8 ಕೋಟಿ ಜಮೀನಿನ ಮಾಲಿಕತ್ವ ಇದೆ. ಈವರೆಗೆ 2.68ಕೋಟಿ ರೈತರನ್ನು ಖುದ್ದು ಭೇಟಿ ಮಾಡಿ ಆಧಾರ್ ಜೊತೆಗೆ ಆರ್‌ಟಿಸಿ ಲಿಂಕ್ ಮಾಡಲಾಗಿದೆ. 65% ರಷ್ಟು ಕೆಲಸ ಸಂಪೂರ್ಣವಾಗಿದ್ದು, ಈ ತಿಂಗಳಾಂತ್ಯದೊಳಗೆ ಕನಿಷ್ಟ 90% ರಷ್ಟು ಕೆಲಸ ಮುಗಿಸುವ ಗುರಿ ಹೊಂದಲಾಗಿದೆ. ಆಧಾರ್ ಸೀಡಿಂಗ್ ನಿಂದಾಗಿ ಸರ್ಕಾರಕ್ಕೆ ಸಾಕಷ್ಟು ಅಂಕಿಅಂಶಗಳು ಸಿಗುತ್ತಿದೆ. 36.53 ಲಕ್ಷ ಜಮೀನುಗಳಲ್ಲಿ ವ್ಯಕ್ತಿ ತೀರಿ ಹೋಗಿದ್ರೂ ಪಹಣಿಯಲ್ಲಿ ಅವರ ಹೆಸರೇ ಉಲ್ಲೇಖವಾಗಿರುವುದು ಆಧಾರ್ ಸೀಡಿಂಗ್‍ನಿಂದ ತಿಳಿದುಬಂದಿದೆ. ಹೀಗಾಗಿ ಎರಡು ತಿಂಗಳ ನಂತರ ಅದಾಲತ್ ಮೂಲಕ ಫೌತಿಖಾತೆ ಅಭಿಯಾನ ಆರಂಭಿಸುವ ಚಿಂತನೆ ಇದೆ. ಅಲ್ಲದೆ, ಆಧಾರ್ ಸೀಡಿಂಗ್‍ನಿಂದಾಗಿ ನಕಲಿ ವ್ಯಕ್ತಿ ಸೃಷ್ಟಿಸಿ ಅಕ್ರಮವಾಗಿ ಜಮೀನು ಮಾರಾಟವನ್ನು ತಪ್ಪಿಸಬಹುದು, ಬಿಟ್ಟುಹೋದ ಸರ್ಕಾರದ ಜಮೀನುಗಳೂ ಸಹ ಇದೀಗ ಸಿಕ್ಕಿದೆ, ಒತ್ತುವರಿಯಾದದ್ದೂ ಗೊತ್ತಾಗಿದೆ. ಜಮೀನಿಗೆ ಆಧಾರ್ ಲಿಂಕ್ ಮಾಡುವಾಗ 2.20 ಲಕ್ಷ ಜಮೀನು ಸರ್ಕಾರಿ ಭೂಮಿ ಎಂದು ಗುರುತಿಸದ ಭೂಮಿ ಇವೆ ಎಂದು ತಿಳಿದುಬಂದಿದೆ. ಆಧಾರ್ ಸೀಡಿಂಗ್ ಮುಗಿಯುವುದರ ಒಳಗಾಗಿ 3 ರಿಂದ 3.50 ಲಕ್ಷ ಹೆಚ್ಚುವರಿ ಸರ್ಕಾರಿ ಭೂಮಿ ಲೆಕ್ಕಕ್ಕೆ ಬರುವ ಸಾಧ್ಯತೆ ಇದೆ. ಪ್ರಸಕ್ತ ಮುಂಗಾರಿನ ಅವಧಿಯಲ್ಲಿ ರಾಜ್ಯಾದ್ಯಂತ ವ್ಯಾಪಕ ಮಳೆಯಾಗಿದೆ. ಮಳೆಯ ಕಾರಣಕ್ಕೆ ಹಲವೆಡೆ ಒಟ್ಟಾರೆ 80,000 ಹೆಕ್ಟೇರ್ ಬೆಳೆ ನಾಶವಾಗಿದ್ದು, ಈ ವಾರದೊಳಗಾಗಿ ರೈತರಿಗೆ ಪರಿಹಾರ ನೀಡಲಾಗುವುದು. ಪ್ರಸಕ್ತ ಸಾಲಿನ ಮಳೆ ಪ್ರಮಾಣದ ವಿವರ, ಮಳೆಹಾನಿ ಹಾಗೂ ಇಲಾಖೆ ಕೈಗೊಂಡಿರುವ ಪರಿಹಾರ ಕಾರ್ಯಗಳ ಕುರಿತು ಮಾಹಿತಿ ನೀಡಿದ ಅವರು, ಉತ್ತರ ಒಳನಾಡಿನಲ್ಲಿ ವಾಡಿಕೆ ಪ್ರಕಾರ 260 ಮಿ.ಮೀ ಮಳೆಯಾಗಬೇಕು ಆದರೆ, ಪ್ರಸ್ತುತ 322 ಮಿ.ಮೀ ಮಳೆಯಾಗಿದೆ. ಅಂದರೆ ವಾಡಿಕೆಗಿಂತ 24% ರಷ್ಟು ಹೆಚ್ಚು ಮಳೆಯಾಗಿದೆ. ಮಲೆನಾಡು ಭಾಗದಲ್ಲಿ 1127 ಮಿ.ಮೀ ವಾಡಿಕೆ ಮಳೆ ಪ್ರಮಾಣವಾಗಿದ್ದು, ಪ್ರಸ್ತುತ 1361 ಮಿ.ಮೀ ಅಂದರೆ ಶೇ.21ರಷ್ಟು ಹೆಚ್ಚು ಮಳೆಯಾಗಿದೆ. ಕರಾವಳಿ ಭಾಗದಲ್ಲಿ ವಾಡಿಕೆಯ ಮಳೆ 2299 ಮಿ.ಮೀ ಆಗಿದ್ದು, ಪ್ರಸ್ತುತ 2947 ಮಿ.ಮೀ ಅಂದರೆ ಶೇ.28 ರಷ್ಟು ಮಳೆಯಾಗಿದೆ. ರಾಜ್ಯಾದ್ಯಂತ ಸರಾಸರಿ ಮಳೆಯ ಪ್ರಮಾಣ 553 ಮಿ.ಮೀ ಆಗಿದ್ದು, ಪ್ರಸ್ತುತ 699 ಮಿ.ಮೀ ಮಳೆಯಾಗಿದ್ದು, ಈ ಪ್ರಮಾಣ 26%ರಷ್ಟು ಹೆಚ್ಚು. ವಿಶೇಷವೆಂದರೆ ಈ ವರ್ಷ ಯಾವ ಜಿಲ್ಲೆಯಲ್ಲೂ ವಾಡಿಕೆಗಿಂತ ಕಡಿಮೆ ಮಳೆಯಾಗಿಲ್ಲ ಎಂದು ತಿಳಿಸಿದ್ದಾರೆ.
ಕಳೆದ ತಿಂಗಳು ಬಯಲುಸೀಮೆ ಪ್ರದೇಶಗಳಲ್ಲಿ ಮಳೆ ಕೊರತೆ ಎದುರಾಗಿತ್ತು. ಕೋಲಾರ ಚಿಕ್ಕಬಳ್ಳಾಪುರ ಯಾದಗಿರಿ ಕೊಪ್ಪಳ, ವಿಜಯಪುರ, ರಾಯಚೂರು ಪ್ರದೇಶದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿತ್ತು. ಆದರೆ, ಕಳೆದ 10 ದಿನಗಳ ಹಿಂದೆ ಆ ಭಾಗಗಳಲ್ಲೂ ಸಹ ಉತ್ತಮ ಮಳೆಯಾಗಿದೆ. ಅಲ್ಲದೆ, ಆಗಸ್ಟ್ 16 ರಿಂದ ಮುಂಗಾರು ಮತ್ತೆ ಚುರುಕಾಗಲಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮುಂಗಾರಿನ ಪ್ರಭಾವ ಉತ್ತಮವಾಗಿರುವ ಬಗ್ಗೆ ಮಾಹಿತಿ ಇದೆ. ಈ ವರ್ಷ ವಾಡಿಕೆಗಿಂತ ಭಿತ್ತನೆಯೂ ಹೆಚ್ಚಾಗಿದ್ದು, ಒಳ್ಳೆಯ ಕೃಷಿ ಚಿತ್ರಣ ಕಾಣುವ ನಿರೀಕ್ಷೆ ಇದೆ. ಇದಲ್ಲದೆ, ಮುಂಗಾರಿನ ಪ್ರಭಾವ ಇನ್ನೂ ಒಂದೂವರೆ ತಿಂಗಳು ಇರಲಿದ್ದು, ಮುಂದಿನ ದಿನಗಳಲ್ಲಿ ಬೆಂಗಳೂರಿನಿಂದ ಮಧ್ಯ ಕರ್ನಾಟಕ ಹಾಗೂ ಮಲೆನಾಡು ಭಾಗದಲ್ಲಿ ಹೆಚ್ಚಿನ ಮಳೆಯಾಗಲಿದೆ. ಕರ್ನಾಟಕ-ಮಹಾರಾಷ್ಟ್ರ ಗಡಿಭಾಗ ಹಾಗೂ ಕೃಷ್ಣ-ಕಾವೇರಿ ನದಿಪಾತ್ರದ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ. ಹೀಗಾಗಿ ಈ ಎಲ್ಲಾ ಭಾಗದಲ್ಲೂ ಅನಗತ್ಯ ನೆರೆಸ್ಥಿತಿಯನ್ನು ತಡೆಯಲು ಮುಂಜಾಗ್ರತಾ ಕ್ರಮವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದಿದ್ದಾರೆ.
ಮಳೆಯಾಗುವ ಸಂದರ್ಭದಲ್ಲಿ ನದಿ ಉಕ್ಕಿಹರಿಯುತ್ತದೆ, ಇದೇ ವೇಳೆ ಅಣೆಕಟ್ಟೆಗಳಿಂದಲೂ ನೀರು ಹರಿಸಿದರೆ ಪ್ರವಾಹ ಸ್ಥಿತಿ ಉಂಟಾಗಿ ಜನ ಪರಿತಪಿಸುವ ಸ್ಥಿತಿ ಎದುರಾಗುತ್ತದೆ. ಹೀಗಾಗಿ ಅಣೆಕಟ್ಟೆಗಳು ತುಂಬುವವರೆಗೂ ಕಾಯದೆ ಜಲಾಶಯಗಳ ಒಳಹರಿವನ್ನು ನಿಯಮಿತವಾಗಿ ಬಿಡುಗಡೆ ಮಾಡುವ ಮೂಲಕ ನೆರೆಯನ್ನು ನಿಯಂತ್ರಿಸಬಹುದು. ಈ ಮಾದರಿಯ ನೀರಿನ ನಿರ್ವಹಣೆ ಬಗ್ಗೆಯೂ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇದಲ್ಲದೆ, ಶಿಥಿಲಾವಸ್ಥೆಯಲ್ಲಿರುವ ಶಾಲೆಗಳು ಹಾಗೂ ಗುಡ್ಡದ ಅಂಚಿನಲ್ಲಿ ಕುಸಿದುಬೀಳುವ ಸಾಧ್ಯತೆಗಳಿರುವ ಮನೆಗಳನ್ನು ಗುರುತಿಸಿ ಜನವಾಸ ನಿಷೇಧಿಸಲು ಹಾಗೂ ಜನರನ್ನು ಸುರಕ್ಷಿತವಾಗಿ ಕಾಳಜಿ ಕೇಂದ್ರಕ್ಕೆ ರವಾನಿಸುವಂತೆಯೂ ಸೂಚಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.ಪ್ರಸ್ತುತ ಮಳೆಗಾಲದಲ್ಲಿ ಉಂಟಾಗಿರುವ ಜೀವಹಾನಿಯ ಬಗ್ಗೆಯೂ ಮಾಹಿತಿ ನೀಡಿದ ಸಚಿವರು, ಈ ವರ್ಷ ಪ್ರಾಣಹಾನಿಯ ಸಂಖ್ಯೆಯನ್ನೂ ನಿಯಂತ್ರಿಸಲಾಗಿದೆ. 2019ರಲ್ಲಿ ಇದೇ ದಿನಕ್ಕೆ 67 ಜನ ಮೃತಪಟ್ಟಿದ್ದರು. 2022ರ ಮಳೆಗಾಲದಲ್ಲಿ 75 ಜನ ಮೃತಪಟ್ಟಿದ್ದರು. ಆದರೆ, ಈ ವರ್ಷ 58 ಜನ ಮೃತಪಟ್ಟಿದ್ದು, ಸರ್ಕಾರದ ಮುಂಜಾಗ್ರತಾ ಕ್ರಮಗಳಿಂದಾಗಿ ಸಾವಿನ ಸಂಖ್ಯೆಯನ್ನು ಇಳಿಸಲಾಗಿದೆ. ಆದರೂ, ಯಾವುದೇ ಜೀವಕ್ಕೂ ಒಂದು ಮೌಲ್ಯವಿದೆ. ಪ್ರತಿಯೊಬ್ಬರ ಜೀವವನ್ನು ಕಾಯುವುದು ಸರ್ಕಾರದ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಜೀವಹಾನಿಯಂತಹ ಅನಾಹುತ ತಪ್ಪಿಸಲು ಮತ್ತಷ್ಟು ಪೂರ್ವ ತಯಾರಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಆಗಸ್ಟ್ 15ನೇ ತಾರೀಖಿನ ನಂತರ ಮಲೆನಾಡು ಕರಾವಳಿ, ಕಾವೇರಿ-ಕೃಷ್ಣ ಜಲಾಶಯ ಪಾತ್ರದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕೆವಹಿಸಲಾಗಿದೆ. ಅಲ್ಲದೆ, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಮಹತ್ವದ ಸಭೆ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಮಳೆಯ ಕಾರಣಕ್ಕೆ ರಾಜ್ಯಾದ್ಯಂತ 80,000 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಾಶವಾಗಿದ್ದು, ವಾರದೊಳಗಾಗಿ ಎಲ್ಲಾ ರೈತರಿಗೂ ಪರಿಹಾರ ನೀಡಲಾಗುವುದು. ರಾಜ್ಯಾದ್ಯಂತ ಕೃಷಿ ಬೆಳೆ 78679 ಹೆಕ್ಟೇರ್ ಹಾನಿಯಾಗಿದ್ದರೆ, ತೋಟಗಾರಿಕಾ ಬೆಳೆ 2294 ಹೆಕ್ಟೇರ್ ಪ್ರದೇಶ ಹಾನಿಯಾಗಿದೆ. ವಾರದೊಳಗೆ ಯಾವ ಯಾವ ಬೆಳೆಗಳು ಹಾನಿಯಾಗಿವೆ ಎಂಬ ಬಗ್ಗೆಯೂ ಖಚಿತ ಮಾಹಿತಿ ಸಿಗಲಿದೆ. ತದನಂತರ ರೈತರಿಗೆ ಪರಿಹಾರ ನೀಡುವ ಕಾರ್ಯಕ್ಕೂ ಚಾಲನೆ ನೀಡಲಾಗುವುದು. ಪ್ರಸ್ತುತ ರಾಜ್ಯ ಸರ್ಕಾರದ ಬಳೆ ಇರುವ ಸಂಪನ್ಮೂಲದಲ್ಲೇ ಪರಿಹಾರ ನೀಡಲಾಗುವುದು. ಇನ್ನೂ ಒಂದೂವರೆ ತಿಂಗಳ ಮಳೆ ಸಾಧ್ಯತೆ ಇರುವುದರಿಂದ ಮುಂದಿನ ದಿನಗಳಲ್ಲಿ ಮತ್ತಷ್ಟು ಬೆಳೆಹಾನಿಯಾಗುವ ಸಾಧ್ಯತೆ ಇದೆ. ಹೀಗಾಗಿ ಮುಂಗಾರಿನ ಸಂಪೂರ್ಣ ಅವಧಿ ಮುಗಿಯುವವರೆಗೆ ಕಾದು ತದನಂತರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು. ಈ ವರ್ಷ ಬೆಳೆಹಾನಿ ಪ್ರಮಾಣವನ್ನು ನಿಯಂತ್ರಿಸಲಾಗಿದೆ. 2020ರಲ್ಲಿ 2.21ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿಯಾಗಿತ್ತು. 2021ರಲ್ಲಿ 2.12 ಲಕ್ಷ ಹೆಕ್ಟೇರ್ ಹಾಗೂ 2022 ರಲ್ಲಿ 1.53 ಹೆಕ್ಟೇರ್ ಬೆಳೆಹಾನಿಯಾಗಿತ್ತು. ಆದರೆ, ಕಳೆದ ವರ್ಷಗಳಿಗೆ ಹೋಲಿಕೆ ಮಾಡಿದರೆ, ಈ ವರ್ಷ 80,000 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿಯಾಗಿದೆ. ಇನ್ನೂ ಒಂದೂವರೆ ತಿಂಗಳು ಮುಂಗಾರು ಅವಧಿ ಇರುವ ಕಾರಣ ಬಹಳ ಎಚ್ಚರಿಕೆಯಿಂದ ಹಾಗೂ ಜವಾಬ್ದಾರಿಯಿಂದ ಈ ವಿಚಾರವನ್ನು ನಿರ್ವಹಣೆ ಮಾಡಲಾಗುತ್ತದೆ ಎಂದಿದ್ದಾರೆ.
ಪ್ರಸಕ್ತ ಸಾಲಿನ ಮಳೆಗಾಲದಲ್ಲಿ 1126 ಮನೆಗಳು ಸಂಪೂರ್ಣ ಕುಸಿದಿದ್ದರೆ, ಅನಧೀಕೃತವಾಗಿ ನಿರ್ಮಿಸಲಾಗಿರುವ 75 ಮನೆಗಳೂ ಕುಸಿದಿವೆ. ಇದಲ್ಲದೆ, 1176 ಮನೆಗಳು ತೀವ್ರ ಹಾನಿಗೆ ಒಳಗಾಗಿದ್ದರೆ, 2338 ಮನೆಗಳು ಭಾಗಶಃ ಹಾನಿಯಾಗಿವೆ. ಒಟ್ಟಾರೆ 8,000 ಮನೆಗಳು ಹಾನಿಗೆ ಒಳಗಾಗಿವೆ. ಅನಧೀಕೃತ ಮನೆಗಳ ಬಗ್ಗೆಯೂ ನಮ್ಮ ಸರ್ಕಾರ ಸಾಕಷ್ಟು ಉದಾರವಾಗಿಯೇ ನಡೆದುಕೊಳ್ಳುತ್ತಿದ್ದು, ಮನೆಹಾನಿಯಾದ ಎಲ್ಲರಿಗೂ ಈಗಾಗಲೇ ಪರಿಹಾರ ಒದಗಿಸಲಾಗಿದೆ.
ಮನೆ ಸಂಪೂರ್ಣ ಹಾನಿಯಾದರೆ 1,20,000 ರೂಪಾಯಿಯ ಜೊತೆಗೆ ಸರ್ಕಾರದಿಂದಲೇ ಒಂದು ಮನೆಯನ್ನೂ ನೀಡಲಾಗುತ್ತಿದೆ. ಈ ಕಾರ್ಯಗಳಿಗೆ ಈವರೆಗೆ ಒಟ್ಟು 9.21ಕೋಟಿ ರೂಪಾಯಿ ಪಾವತಿ ಮಾಡಲಾಗಿದೆ. ಮನೆಗೆ ನೀರು ನುಗ್ಗಿ ಸಣ್ಣಪುಟ್ಟ ಹಾನಿಯಾಗಿದ್ದರೆ ಅದನ್ನು ಸುಧಾರಿಸಲು 2800 ಮನೆಗಳಿಗೆ 70 ಲಕ್ಷ ಹಣ ಪರಿಹಾರ ನೀಡಲಾಗಿದೆ. ದಿನಬಳಕೆ ವಸ್ತುಗಳಿಗೂ 70 ಲಕ್ಷ ಪರಿಹಾರ ಸೇರಿ ಒಟ್ಟಾರೆ 1.40 ಕೋಟಿ ರೂ ಪರಿಹಾರ ನೀಡಲಾಗಿದೆ. ಅನದೀಕೃತ ಮನೆಗಳಿಗೆ ಹಾನಿಯಾಗಿದ್ರೆ ಅವರಿಗೂ 1 ಲಕ್ಷ ರೂಪಾಯಿವರೆಗೆ ಪರಿಹಾರ ನೀಡಲಾಗಿದೆ. ಮನೆ ಭಾಗಶಃ ಹಾನಿಯಾಗಿದ್ದರೆ ಎಸ್‍ಡಿಆರ್‍ಎಫ್ ನಿಯಮದ ಅಡಿಯಲ್ಲಿ ಕೇವಲ 2,500 ರೂಪಾಯಿ ಮಾತ್ರ ಪರಿಹಾರ ನೀಡಲು ಸಾಧ್ಯ. ಆದರೆ, ರಾಜ್ಯ ಸರ್ಕಾರದ ವತಿಯಿಂದ 50,000 ವರೆಗೆ ಪರಿಹಾರ ನೀಡಲಾಗಿದೆ.
ಇನ್ನೂ ರಾಜ್ಯಾದ್ಯಂತ ಹಸು-ದನ ಸೇರಿದಂತೆ 151ದೊಡ್ಡ ಜಾನುವಾರುಗಳು ಹಾಗೂ 137 ಚಿಕ್ಕ ಜಾನುವಾರುಗಳು ಮೃತಪಟ್ಟಿವೆ. ಇದಕ್ಕೂ ಸಹ 52.98 ಲಕ್ಷ ರೂಪಾಯಿ ಪರಿಹಾರ ಪಾವತಿಸಲಾಗಿದೆ. ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ 667 ಕೋಟಿ ರೂಪಾಯಿ ಇದ್ದು, ಪರಿಹಾರ ಕಾರ್ಯಗಳಿಗೆ ಸಾಕಷ್ಟು ಹಣ ಇದೆ. ಅಗತ್ಯವಿದ್ದರೆ ಮತ್ತಷ್ಟು ಹಣ ನೀಡಲೂ ಸಹ ರಾಜ್ಯ ಸರ್ಕಾರ ಸಿದ್ದವಾಗಿದೆ ಎಂದು ಅವರು ತಿಳಿಸಿದ್ದಾರೆ.