Tag: Krishnaiah Shetty

  • ಬ್ಯಾಂಕ್ ಹಗರಣ – ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ ಬಿಗ್ ರಿಲೀಫ್!

    ಬ್ಯಾಂಕ್ ಹಗರಣ – ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ ಬಿಗ್ ರಿಲೀಫ್!

    – 3 ವರ್ಷ ಜೈಲು ಶಿಕ್ಷೆ ಅಮಾನತುಗೊಳಿಸಿದ ಹೈಕೋರ್ಟ್
    – ದಂಡದ ಮೊತ್ತ ಠೇವಣಿ ಇಡಲು ಆದೇಶ

    ಬೆಂಗಳೂರು: ಬ್ಯಾಂಕ್ ಹಗರಣ (Bank Scam) ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ (Krishnaiah Shetty) ಹೈಕೋರ್ಟ್ (High Court) ಬಿಗ್ ರಿಲೀಫ್ ನೀಡಿದೆ. ಕೃಷ್ಣಯ್ಯ ಶೆಟ್ಟಿಗೆ ವಿಧಿಸಿದ್ದ 3 ವರ್ಷ ಜೈಲು ಶಿಕ್ಷೆಯನ್ನು ಹೈಕೋರ್ಟ್ ಅಮಾನತುಗೊಳಿಸಿದೆ.

    ಬ್ಯಾಂಕ್ ಹಗರಣದಲ್ಲಿ ಕೃಷ್ಣಯ್ಯ ಶೆಟ್ಟಿಗೆ ಕೆಳಹಂತದ ನ್ಯಾಯಾಲಯ 3 ವರ್ಷ ಜೈಲು ಶಿಕ್ಷೆ ನೀಡಿತ್ತು. ಕೆಳಹಂತದ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಿ ಹೈಕೋರ್ಟ್ ಪ್ರತಿವಾದಿಗಳಿಗೆ ನೋಟಿಸ್ ನೀಡಿದೆ. ಕೃಷ್ಣಯ್ಯ ಶೆಟ್ಟಿಗೆ ಶಿಕ್ಷೆ ಅಮಾನತುಗೊಳಿಸಿ ದಂಡದ ಮೊತ್ತ ಠೇವಣಿ ಇಡಲು ಹೈಕೋರ್ಟ್ ಆದೇಶ ಹೊರಡಿಸಿದೆ. ಇದನ್ನೂ ಓದಿ:‌ ತುಂಬಾ ಅನ್ಯಾಯ: ಭಾರತದಲ್ಲಿ ಟೆಸ್ಲಾ ಘಟಕ ಸ್ಥಾಪನೆಗೆ ಟ್ರಂಪ್‌ ಅಪಸ್ವರ

    2012ರಲ್ಲಿ ಬಾಲಾಜಿಕೃಪಾ ಎಂಟರ್‌ಪ್ರೈಸಸ್’ನ ಮಾಲೀಕ ಕೃಷ್ಣಯ್ಯ ಶೆಟ್ಟಿ 1993ರಲ್ಲಿ ಸಾರ್ವಜನಿಕ ಉದ್ದಿಮೆಗಳ ನೌಕರರಿಗೆ ಗೃಹ ನಿರ್ಮಾಣಕ್ಕೆ ಸಾಲ ಕೊಡಿಸುವುದಾಗಿ ಆಮಿಷವೊಡ್ಡಿ, ಹಲವು ನೌಕರರ ಹೆಸರಿನಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ 7.17 ಕೋಟಿ ರೂ. ಬ್ಯಾಂಕ್ ಸಾಲ ಪಡೆದಿದ್ದರು. ಈವರೆಗೆ 3.53 ಕೋಟಿ ರೂ. ಸಾಲ ತೀರಿಸಿಲ್ಲ ಎಂದು ಆರೋಪಿಸಲಾಗಿತ್ತು. ಪ್ರಕರಣವನ್ನು ಸಿಬಿಐ ತನಿಖೆ ನಡೆಸಿ, ಚಾರ್ಜ್‌ಶೀಟ್ ಸಲ್ಲಿಸಿತ್ತು. ಇದನ್ನೂ ಓದಿ: ಉದಯಗಿರಿ ದಾಂಧಲೆ ಕೇಸ್- ಪ್ರಚೋದನಕಾರಿ ಭಾಷಣ ಮಾಡಿದ್ದ ಮೌಲ್ವಿಗೆ ನ್ಯಾಯಾಂಗ ಬಂಧನ

    ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ 120ಬಿ, 409, 419, 420, 467, 471 ಹಾಗೂ ಸಿಆರ್‌ಪಿಸಿ ಸೆಕ್ಷನ್ 13(1)ಡಿ, 13(2) ಅಡಿ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: ಪುತಿನ, ಕೆಎಸ್‌ನ ಟ್ರಸ್ಟ್‌ಗಳ ಚಟುವಟಿಕೆಗಳಿಗೆ ಸರ್ಕಾರದ ನೆರವು: ಸಚಿವ ಚಲುವರಾಯಸ್ವಾಮಿ

  • ಬ್ಯಾಂಕ್‌ ವಂಚನೆ ಕೇಸ್‌ – ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ 3 ವರ್ಷ ಜೈಲು

    ಬ್ಯಾಂಕ್‌ ವಂಚನೆ ಕೇಸ್‌ – ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ 3 ವರ್ಷ ಜೈಲು

    ಬೆಂಗಳೂರು: ಬ್ಯಾಂಕ್‌ ವಂಚನೆ ಪ್ರಕರಣದಲ್ಲಿ (Bank fraud Case)ದೋಷಿಯಾಗಿರುವ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ (Krishnaiah Shetty) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 3 ವರ್ಷ ಜೈಲು ಶಿಕ್ಷೆ ವಿಧಿಸಿದೆ.

    ಇಂದು ಬೆಳಗ್ಗೆ ಕೃಷ್ಣಯ್ಯ ಶೆಟ್ಟಿ, ಎಂಟಿವಿ ರೆಡ್ಡಿ, ಮುನಿರಾಜು, ಶ್ರೀನಿವಾಸ್‌ ಅವರು ದೋಷಿಗಳು ಎಂದು ಕೋರ್ಟ್‌ ಹೇಳಿತ್ತು. ಇಂದು ಸಂಜೆ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದೆ.

    3 ವರ್ಷ ಶಿಕ್ಷೆ ವಿಧಿಸಿದ ಬೆನ್ನಲ್ಲೇ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಕೃಷ್ಣಯ್ಯ ಶೆಟ್ಟಿ ಪರ ವಕೀಲರು ಮೇಲ್ಮನವಿ ಸಲ್ಲಿಸುವುದಾಗಿ ಮನವಿ ಮಾಡಿದ ಬೆನ್ನಲ್ಲೇ ಕೋರ್ಟ್‌ 30 ದಿನಗಳ ಜಾಮೀನು ಮಂಜೂರು ಮಾಡಿದೆ. ಇದನ್ನೂ ಓದಿ: ತರಬೇತಿ‌ ವೇಳೆ IAFನ ಮಿರಾಜ್-2000 ಯುದ್ಧ ವಿಮಾನ ಪತನ – ಇಬ್ಬರು ಪೈಲಟ್‌ ಸೇಫ್‌

    court order law

    2012 ರಲ್ಲಿ ಬಾಲಾಜಿಕೃಪಾ ಎಂಟರ್‌ಪ್ರೈಸಸ್‌’ನ ಮಾಲೀಕ ಕೃಷ್ಣಯ್ಯ ಶೆಟ್ಟಿ 1993ರಲ್ಲಿ ಸಾರ್ವಜನಿಕ ಉದ್ದಿಮೆಗಳ ನೌಕರರಿಗೆ ಗೃಹ ನಿರ್ಮಾಣಕ್ಕೆ ಸಾಲ ಕೊಡಿಸುವುದಾಗಿ ಆಮಿಷವೊಡ್ಡಿ, ಹಲವು ನೌಕರರ ಹೆಸರಿನಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ 7.17 ಕೋಟಿ ರೂ. ಬ್ಯಾಂಕ್ ಸಾಲ ಪಡೆದಿದ್ದರು. ಈವರೆಗೆ 3.53 ಕೋಟಿ ರೂ. ಸಾಲ ತೀರಿಸಿಲ್ಲ ಎಂದು ಆರೋಪಿಸಲಾಗಿತ್ತು. ಪ್ರಕರಣವನ್ನು ಸಿಬಿಐ ತನಿಖೆ ನಡೆಸಿ, ಚಾರ್ಜ್‌ಶೀಟ್‌ ಸಲ್ಲಿಸಿತ್ತು.

    ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ 120ಬಿ, 409, 419, 420, 467, 471 ಹಾಗೂ ಸಿಆರ್‌ಪಿಸಿ ಸೆಕ್ಷನ್ 13(1)ಡಿ, 13(2) ಅಡಿ ಪ್ರಕರಣ ದಾಖಲಾಗಿತ್ತು.

     

  • ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಮೇಲೆ FIR ದಾಖಲು

    ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಮೇಲೆ FIR ದಾಖಲು

    ಬೆಂಗಳೂರು: ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ (Krishnaiah Shetty) ವಿರುದ್ಧ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ (Malleswaram Police Station) ಎಫ್‍ಐಆರ್ ದಾಖಲಾಗಿದೆ.

    ಗಾಂಧಿನಗರ ಕ್ಷೇತ್ರದ ಹೆಸರು ಮತ್ತು ಕೃಷ್ಣಯ್ಯ ಶೆಟ್ಟಿ ಹೆಸರಲ್ಲಿ ಫುಡ್ ಕಿಟ್ (Food Kit) ತಯಾರಿ ಮಾಡಲಾಗುತ್ತಿತ್ತು. ಈ ವೇಳೆ ಖಚಿತ ಮಾಹಿತಿ ಆಧರಿಸಿ ಚುನಾವಣಾ ಅಧಿಕಾರಿಗಳು ಹಾಗೂ ಪೊಲೀಸರು ದಾಳಿ ಮಾಡಿದ್ದಾರೆ. ಅಷ್ಟೇ ಅಲ್ಲದೇ ಅಕ್ಕಿ, ಬೆಳೆ, ಬೆಲ್ಲ, ಡ್ರೈಫ್ರೂಟ್ಸ್, ಅಡುಗೆ ಎಣ್ಣೆ ಸೇರಿದಂತೆ ಗೃಹ ಬಳಕೆ ದಿನಸಿ ವಶಕ್ಕೆ ಪಡೆದಿದ್ದಾರೆ. ದಾಳಿ ವೇಳೆ ಸುಮಾರು ಏಳೆಂಟು ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಪತ್ತೆಯಾಗಿತ್ತು. ಇದನ್ನೂ ಓದಿ: ಸೆಖೆ ಅಂತಾ ಮನೆ ಮಹಡಿ ಮೇಲೆ ಹೋಗಿ ಮಲಗುವ ಮುನ್ನ ಎಚ್ಚರ!

    ಕೃಷ್ಣಯ್ಯ ಶೆಟ್ಟಿ ಅವರು ಗಾಂಧಿನಗರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಚುನಾವಣಾ ಅಧಿಕಾರಿ ಲಕ್ಷ್ಮಣ್ ನೀಡಿದ ದೂರಿನನ್ವಯ FIR ದಾಖಲಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡು ಕೃಷ್ಣಯ್ಯ ಶೆಟ್ಟಿಗೆ ನೊಟೀಸ್ ನೀಡಲು ಪೊಲೀಸರು ಮುಂದಾಗಿದ್ದಾರೆ. ಇದನ್ನೂ ಓದಿ: ಬಿಸಿಲ ಬೇಗೆಗೆ ಕಂಗೆಟ್ಟ ಕರುನಾಡಿಗರು- ರಾಜ್ಯಕ್ಕೆ ಮತ್ತೆ ಹೀಟ್ ವೇವ್ ಆತಂಕ