Tag: Krishnam Raju

  • ಪ್ರಭಾಸ್ ದೊಡ್ಡಪ್ಪ, ತೆಲುಗಿನ ಹಿರಿಯ ನಟ ಕೃಷ್ಣಂರಾಜು ನಿಧನ

    ಪ್ರಭಾಸ್ ದೊಡ್ಡಪ್ಪ, ತೆಲುಗಿನ ಹಿರಿಯ ನಟ ಕೃಷ್ಣಂರಾಜು ನಿಧನ

    ತೆಲುಗು ಚಿತ್ರರಂಗದಲ್ಲಿ ನಟ, ನಿರ್ಮಾಪಕನಾಗಿ ಛಾಪೂ ಮೂಡಿಸಿರುವ ರೆಬೆಲ್ ಸ್ಟಾರ್ ಕೃಷ್ಣಂರಾಜು(Krishnam Raju) ಇನ್ನಿಲ್ಲ. ಹೈದರಾಬಾದ್‌ನ ಭಾನುವಾರ ಬೆಳಗ್ಗೆ 3.25ಕ್ಕೆ ಕೊನೆಯುಸಿರೆಳೆದಿದ್ದಾರೆ. ʻಬಾಹುಬಲಿʼ ಸ್ಟಾರ್ ಪ್ರಭಾಸ್ (Bahubali Star Prabhas) ಅವರ ದೊಡ್ಡಪ್ಪ ಕೃಷ್ಣಂರಾಜು ಅವರು 83ನೇ ವರ್ಷಕ್ಕೆ ಇಹಲೋಕ ತ್ಯಜಿಸಿದ್ದಾರೆ.

    ಟಾಲಿವುಡ್ ಚಿತ್ರರಂಗದಲ್ಲಿ 180ಕ್ಕೂ ಹೆಚ್ಚು ಚಿತ್ರಗಳಲ್ಲಿ ಕೃಷ್ಣಂರಾಜು( Krishnam Raju) ನಟಿಸಿದ್ದಾರೆ. ನಿರ್ಮಾಪಕನಾಗಿ ಕೂಡ ಚಿತ್ರರಂಗದಲ್ಲಿ ಗೆದ್ದಿದ್ದಾರೆ. ಇನ್ನೂ ನಟ ಕೃಷ್ಣಂರಾಜು ಅನಾರೋಗ್ಯದಿಂದ ಬಳಲುತ್ತಿದ್ದರು ಅವರು ಕೆಲ ಸಮಯದಿಂದ ಆಸ್ಪತ್ರೆಗೆ ದಾಖಲಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಕೃಷ್ಣಂರಾಜು ನಿಧನರಾಗಿದ್ದಾರೆ. ಇದನ್ನೂ ಓದಿ:ಎಷ್ಟೇ ಚೆನ್ನಾಗಿದ್ರೂ ಯಾವ ಹುಡುಗರು ನನ್ನ ಮಾತಾಡಿಸುವುದೇ ಇಲ್ಲ: ಜಯಶ್ರೀ ಬೇಸರ

    ಇನ್ನೂ ಪ್ರಭಾಸ್ ದೊಡ್ಡಪ್ಪ ಕೃಷ್ಣಂರಾಜು ಅವರು ಕಡೆಯದಾಗಿ `ರಾಧೆ ಶ್ಯಾಮ್’ (Radhe Shyam) ಚಿತ್ರದಲ್ಲಿ ನಟಿಸಿದ್ದರು. ರಾಜಕೀಯ ರಂಗದಲ್ಲೂ ಸಕ್ರೀಯರಾಗಿದ್ದ ಕೃಷ್ಣಂರಾಜು ಅವರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಕೇಂದ್ರ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಇನ್ನು ಹಿರಿಯ ನಟ ಕೃಷ್ಣಂರಾಜು ಅವರ ನಿಧನಕ್ಕೆ ಹಿತೈಷಿಗಳು, ಗಣ್ಯರು, ಇಡೀ ತೆಲುಗು ಚಿತ್ರರಂಗ ಸಂತಾಪ ಸೂಚಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬಿಜೆಪಿ ಸೇರ್ಪಡೆಯ ಬಗ್ಗೆ ಖಡಕ್ ಉತ್ತರ ಕೊಟ್ಟ ಅಂಬಿ

    ಬಿಜೆಪಿ ಸೇರ್ಪಡೆಯ ಬಗ್ಗೆ ಖಡಕ್ ಉತ್ತರ ಕೊಟ್ಟ ಅಂಬಿ

    ಬೆಂಗಳೂರು: ಕೈ ನಾಯಕರ ಜೊತೆ ಮುನಿಸಿಕೊಂಡಿರುವ ಅಂಬರೀಶ್ ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎಂದು ಕೆಲ ದಿನಗಳಿಂದ ಪ್ರಕಟಗೊಳ್ಳುತ್ತಿದ್ದ ಸುದ್ದಿಗೆ ಈಗ ಅವರೇ ಫುಲ್ ಸ್ಟಾಪ್ ಹಾಕಿದ್ದಾರೆ.

    ಟಿಕೆಟ್ ವಿಚಾರದಲ್ಲಿ ಕಾಂಗ್ರೆಸ್ ನಾಯಕರೊಂದಿಗೆ ಮುನಿಸಿಕೊಂಡಿರುವ ಅಂಬರೀಶ್ ಅವರನ್ನು ಪಕ್ಷಕ್ಕೆ ಕರೆತರಲು ಬಿಜೆಪಿ ನಾಯಕರು ಮುಂದಾಗಿದ್ದರು. ಪಕ್ಷದ ನಾಯಕರ ಸೂಚನೆ ಮೇರೆಗೆ ಕೇಂದ್ರದ ಮಾಜಿ ಸಚಿವ ಹಾಗೂ ನಟ ಕೃಷ್ಣಂ ರಾಜು ಹೈದರಾಬಾದ್ ನಲ್ಲಿ ಅಂಬರೀಶ್ ಅವರನ್ನು ಭೇಟಿಯಾಗಿ ಬಿಜೆಪಿಗೆ ಸೇರ್ಪಡೆಯಾಗುವಂತೆ ಆಹ್ವಾನಿಸಿದ್ದರು.

    ಆದರೆ ಈ ಆಹ್ವಾನವನ್ನು ಅಂಬರೀಶ್ ತಿರಸ್ಕರಿಸಿದ್ದಾರೆ. ಅಷ್ಟೇ ಅಲ್ಲದೇ ಬಿಜೆಪಿ ಸೇರಲು ಕೂಡ ನಿರಾಕರಿಸಿದ್ದು, ಯಾವುದೇ ಕಾರಣಕ್ಕೂ ನಾನು ಪಕ್ಷ ಬಿಡಲ್ಲ. ಕಾಂಗ್ರೆಸ್ ಪಕ್ಷ ನನಗೆ ಎಲ್ಲವನ್ನು ಕೊಟ್ಟಿದೆ. ಆದ್ದರಿಂದ ಪಕ್ಷ ಬಿಡುವ ಬಗ್ಗೆ ಯೋಚಿಸಿಲ್ಲ. ನನ್ನ ಆರೋಗ್ಯದ ದೃಷ್ಟಿಯಿಂದ ಈ ಬಾರಿ ಮಂಡ್ಯದಿಂದ ಚುನಾವಣೆಗೆ ಸ್ಪರ್ಧೆ ಮಾಡಬೇಕೇ? ಬೇಡವೇ ಅನ್ನೋದು ಇನ್ನು ತೀರ್ಮಾನ ಮಾಡಿಲ್ಲ. ಪಕ್ಷದ ಯಾವ ನಾಯಕರ ಜೊತೆಗೂ ನನಗೆ ಭಿನ್ನಾಭಿಪ್ರಾಯ ಇಲ್ಲ ಎಂದು ಅಂಬರೀಶ್ ಖಡಕ್ ಉತ್ತರ ನೀಡಿದ್ದಾರೆ ಮೂಲಗಳು ತಿಳಿಸಿವೆ. ಇದನ್ನು ಓದಿ: ಕಾಂಗ್ರೆಸ್ ಹೈಕಮಾಂಡ್‍ಗೆ ಹೊಸ ಬೇಡಿಕೆಯಿಟ್ಟ ಮಂಡ್ಯದ ಗಂಡು ಅಂಬರೀಶ್

    ಮಂಡ್ಯ ಜಿಲ್ಲೆಯ 4 ಕ್ಷೇತ್ರದಲ್ಲಿ ತಾವು ಹೇಳಿದವರಿಗೆ ಟಿಕೆಟ್ ನೀಡಬೇಕೆಂದು ಹಿರಿಯ ನಟ ಮತ್ತು ಮಾಜಿ ಸಚಿವ ಅಂಬರೀಶ್ ಪಟ್ಟು ಹಿಡಿದಿದ್ದಾರೆ. ಆದರೆ ಅಂಬರೀಶ್ ಅವರ ಈ ಬೇಡಿಕೆಯನ್ನು ರಾಜ್ಯದ ಕೈ ನಾಯಕರು ಒಪ್ಪಿಗೆ ಸೂಚಿಸಿಲ್ಲ ಎನ್ನಲಾಗಿದೆ. ಹೀಗಾಗಿ ಕಾಂಗ್ರೆಸ್ ನಾಯಕರ ಜೊತೆ ಅಂಬಿ ಮುನಿಸಿಕೊಂಡಿದ್ದಾರೆ ಎನ್ನುವ ಸುದ್ದಿ ಈಗ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಯಾಗುತ್ತಿದೆ.