– ಬಿಜೆಪಿ ನೆಲೆಯೂರಲು ದೇವರು ಕಳಿಸಿದ ಅದ್ಭುತ ಸೃಷ್ಟಿ ಯಡಿಯೂರಪ್ಪ
– ಅಪ್ಪ-ಮಗನನ್ನು ಕೊಂಡಾಡಿದ ಶಾಸಕ
ಬೆಂಗಳೂರು: ಕೆಆರ್‌ಪಿಪಿ ಪಕ್ಷದ ಸ್ಥಾಪಕ ಶಾಸಕ ಜನಾರ್ದನ ರೆಡ್ಡಿ (Janardhana Reddy) ಅವರಿಂದು ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ಮಾಜಿ ಸಚಿವರಾದ ಶ್ರೀರಾಮುಲು, ಆನಂದ್ ಸಿಂಗ್, ಸಿಟಿ ರವಿ, ಅಶ್ವಥ್‌ನಾರಾಯಣ ಅವರ ಉಪಸ್ಥಿತಿಯಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ (Bengaluru BJP Office) ನಡೆದ ಕಾರ್ಯಕ್ರಮದಲ್ಲಿ ಪಕ್ಷ ಸೇರ್ಪಡೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಕೆಆರ್‌ಪಿಪಿ ಪಕ್ಷವನ್ನು ಬಿಜೆಪಿ ಜೊತೆಗೆ ವಿಲೀನ ಮಾಡಿದ್ದೇನೆ. ನನ್ನ ಪತ್ನಿ ಹಾಗೂ ನನ್ನ ಕಷ್ಟದ ಕಾಲದಲ್ಲಿ ಜೊತೆಗೆ ನಿಂತ ಎಲ್ರೂ ಬಿಜೆಪಿ ಸೇರಿದ್ದೇವೆ. ನನ್ನ ಗೆಳೆಯ ಶ್ರೀರಾಮುಲು ಅವರಿಗೆ ವಿಶೇಷ ಧನ್ಯವಾದ ತಿಳಿಸುತ್ತೇನೆ ಎಂದು ಭಾವುಕರಾಗಿದ್ದಾರೆ.
ಮೋದಿಯವರ ಕೈ ಬಲಪಡಿಸುವ ದೃಷ್ಟಿಯಿಂದ ಅಮಿತ್ ಶಾ ಅವರು ದೆಹಲಿಗೆ ಆಹ್ವಾನಿಸಿದ್ದರು. ಬಾಹ್ಯ ಬೆಂಬಲ ಬೇಡ, ಪಕ್ಷಕ್ಕೆ ಸೇರುವಂತೆ ಪ್ರೀತಿಯಿಂದ ಆಹ್ವಾನ ನೀಡಿದರು. ಅದನ್ನು ಒಪ್ಪಿ ಬಿಜೆಪಿಗೆ ಮತ್ತೆ ಸೇರಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ಪರೀಕ್ಷಾ ದಿನವೇ SSLC ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ
ಯಾವುದೇ ಷರತ್ತು ಹಾಕಿಲ್ಲ:
ಯಡಿಯೂರಪ್ಪ (BS Yediyurappa) ಅವರ ಬಗ್ಗೆ ಎರಡು ಮಾತಲ್ಲಿ ಹೇಳಲಾಗಲ್ಲ. ರಾಜ್ಯದಲ್ಲಿ ಬಿಜೆಪಿ ನೆಲೆಯೂರಲು ದೇವರು ಕಳಿಸಿದ ಅದ್ಭುತ ಸೃಷ್ಟಿ ಯಡಿಯೂರಪ್ಪ. ಅವರ ಜೊತೆ ಚಿಕ್ಕ ವಯಸ್ಸಲ್ಲೇ ಸೇರಿಕೊಂಡು ಪಕ್ಷ ಕಟ್ಟಿದ್ದು ನನ್ನ ಪೂರ್ವ ಜನ್ಮದ ಪುಣ್ಯ. ತಂದೆ-ಮಗನ ಜೊತೆಗೂಡಿ ಈಗ ಮತ್ತೆ ಪಕ್ಷದ ಕೆಲಸ ಮಾಡ್ತೀನಿ. ಇದು ಬಹಳ ಸಂತೋಷ ತಂದಿದೆ. ಯಾವುದೇ ಷರತ್ತು ಹಾಕಿಲ್ಲ, ಫಲಾಫೇಕ್ಷೆ ಬಯಸದೇ ಸೇರಿದ್ದೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಆಟೋ ಪಾರ್ಕಿಂಗ್ ವಿಚಾರಕ್ಕೆ ಶುರುವಾದ ಗಲಾಟೆ; ಪರಿಸ್ಥಿತಿ ಉದ್ವಿಗ್ನ – ಮೂವರು ಅರೆಸ್ಟ್
ತಾಯಿ ಮಡಿಲಿಗೆ ಸೇರಿದ್ದೇನೆ:
ಬಿಜೆಪಿ ನನಗೆ ಎಲ್ಲವೂ ಕೊಟ್ಟಿದೆ. ಅನೇಕ ಏಳು-ಬೀಳು ಕಂಡಿದ್ದೇನೆ, ಯಾವುದೇ ಜವಾಬ್ದಾರಿ ಕೊಟ್ಟರೂ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷದ ಕೆಲಸ ಮಾಡ್ತೇನೆ. ನಾನು ನನ್ನ ಮನೆಗೆ ವಾಪಸ್ ಬಂದಿದ್ದೇನೆ. ರಕ್ತದ ಕಣಕಣದಲ್ಲೂ ಬಿಜೆಪಿ ಇದೆ. ಯಾವುದೋ ಅನಿವಾರ್ಯ ಕಾರಣದಿಂದ ಪಕ್ಷ ಬಿಡಬೇಕಾಗಿತ್ತು. ಈಗ ನಾನು ಸ್ವಂತ ಮನೆಗೆ ಮರಳಿದ್ದೇನೆ, ತಾಯಿ ಮಡಿಲಿಗೆ ಸೇರಿದ್ದೇನೆ. ನಾನು-ರಾಮುಲು ಒಂದು ಕುಟುಂಬ, ಒಟ್ಟಿಗೇ ಇರ್ತೀವಿ. ಇದು ನನ್ನ ಪಕ್ಷ ಎಂದು ಬೀಗಿದ್ದಾರೆ. ಇದನ್ನೂ ಓದಿ: ನಡು ರಸ್ತೆಯಲ್ಲೇ ಹೊತ್ತಿ ಉರಿದ ಸ್ಪಿರಿಟ್ ಟ್ಯಾಂಕರ್ – ತಪ್ಪಿದ ಭಾರೀ ದುರಂತ
ಬೆಂಗಳೂರು: ಕೆಆರ್‌ಪಿಪಿ ಪಕ್ಷದ ಸ್ಥಾಪಕ ಶಾಸಕ ಜನಾರ್ದನ ರೆಡ್ಡಿ (Janardhan Reddy) ಅವರಿಂದು ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ.
ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ (Bengaluru BJP Office) ನಡೆದ ಕೆಆರ್‌ಪಿಪಿ (KRPP) ಪಕ್ಷ ವಿಲೀನ ಕಾರ್ಯಕ್ರಮದಲ್ಲಿ ಜನಾರ್ದನ ರೆಡ್ಡಿ, ಪತ್ನಿ ಅರುಣಾ ಲಕ್ಷ್ಮಿ ಸೇರಿ ಕೆಆರ್‌ಪಿಪಿ ಪಕ್ಷದ ಎಲ್ಲ ಪದಾಧಿಕಾರಿಗಳು ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (BS Yediyurappa), ಮಾಜಿ ಸಚಿವರಾದ ಶ್ರೀರಾಮುಲು, ಆನಂದ್ ಸಿಂಗ್, ಸಿಟಿ ರವಿ, ಅಶ್ವಥ್‌ನಾರಾಯಣ ಅವರ ಉಪಸ್ಥಿತಿಯಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (BY Vijayendra) ಪಕ್ಷದ ಶಾಲು ಹೊದಿಸಿ, ಭಾವುಟ ನೀಡಿ ಸ್ವಾಗತಿಸಿದರು. ಅಲ್ಲದೇ ಪಕ್ಷ ನಿಮ್ಮನ್ನು ಗೌರವಯುತವಾಗಿ ನಡೆಸಿಕೊಳ್ಳಲಿದೆ ಎಂದು ಭರವಸೆಯನ್ನೂ ನೀಡಿದರು. ಈ ವೇಳೆ ಜನಾರ್ದನ ರೆಡ್ಡಿ, ಯಡಿಯೂರಪ್ಪ ಅವರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದರು.
ಬೆಂಗಳೂರು/ಬಳ್ಳಾರಿ: ಸೋಮವಾರ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ(KRPP) ಶಾಸಕ, ಮಾಜಿ ಮಂತ್ರಿ ಗಾಲಿ ಜನಾರ್ದನ ರೆಡ್ಡಿ (G. Janardhana Reddy) ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.
ಪಕ್ಷ ಸೇರ್ಪಡೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದ ಬೆನ್ನಲ್ಲೇ ಜನಾರ್ದನ ರೆಡ್ಡಿ ಯಾವುದೇ ಷರತ್ತುಗಳು ಇಲ್ಲದೇ ಬಿಜೆಪಿ (BJP) ಸೇರ್ಪಡೆಯಾಗಲಿದ್ದಾರೆ.
ಬೆಂಗಳೂರಿನ ತಮ್ಮ ನಿವಾಸದಲ್ಲಿ ಇಂದು ಸಂಜೆ 4 ಗಂಟೆಗೆ ಜನಾರ್ನದ ರೆಡ್ಡಿ ಕೆಆರ್‌ಪಿಪಿ ಪಕ್ಷದ ಪದಾಧಿಕಾರಿಗಳ ಸಭೆಯನ್ನು ಕರೆದಿದ್ದಾರೆ. ಈ ಸಭೆಯಲ್ಲಿ ಅಂತಿಮ ನಿರ್ಧಾರ ಪ್ರಕಟವಾಗುವ ಸಾಧ್ಯತೆಯಿದೆ. ಕೆಆರ್‌ಪಿಪಿ ವಿಲೀನಕ್ಕೆ ಬಿಜೆಪಿ ಆಫರ್ ನೀಡಿದ್ದು ಈ ವಿಚಾರದ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚೆ ನಡೆಯಲಿದೆ. ಇದನ್ನೂ ಓದಿ: ಇಡಿ ಕಸ್ಟಡಿಯಲ್ಲಿದ್ದುಕೊಂಡೇ ಮೊದಲ ಸರ್ಕಾರಿ ಆದೇಶ ಹೊರಡಿಸಿದ ಕೇಜ್ರಿವಾಲ್ – ಆದೇಶದಲ್ಲಿ ಏನಿದೆ?
ರಾಜ್ಯಸಭೆ ಚುನಾವಣೆಯ (Rajya Sabha Election) ಒಂದು ದಿನದ ಮೊದಲು ಸಿಎಂ ಸಿದ್ದರಾಮಯ್ಯ (CM Siddaramaiah) ಮತ್ತು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಜನಾರ್ದನ ರೆಡ್ಡಿ ಅವರನ್ನು ಭೇಟಿಯಾಗಿ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿದ್ದ ಜನಾರ್ದನ ರೆಡ್ಡಿ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿದ್ದರು.
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ಜನಾರ್ದನ ರೆಡ್ಡಿ ಮುಂದಾಗಿದ್ದರು. ಆದರೆ ಬಿಜೆಪಿ ಸೇರ್ಪಡೆಗೆ ಹೈಕಮಾಂಡ್ ಒಪ್ಪಿಗೆ ಸೂಚಿಸಿರಲಿಲ್ಲ. ನಂತರ ಬಿಜೆಪಿಗೆ ರಾಜೀನಾಮೆ ನೀಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಿಸಿ ಗಂಗಾವತಿಯಿಂದ ಸ್ಪರ್ಧಿಸಿ ಗೆದ್ದಿದ್ದರು. ವಿಧಾನ ಸಭಾ ಚುನಾವಣೆಯಲ್ಲಿ ಕೆಆರ್‌ಪಿಪಿ ಒಂದೇ ಸ್ಥಾನ ಗೆದ್ದಿದ್ದರೂ ಕಲ್ಯಾಣ ಕರ್ನಾಟಕದ ಹಲವು ಕ್ಷೇತ್ರಗಳಲ್ಲಿ ಬಿಜೆಪಿಗೆ ಏಟು ನೀಡಿತ್ತು. ಇದನ್ನೂ ಓದಿ: ಉಗ್ರನಾಗಲು ಐಸಿಸ್ ಸೇರಲು ಮುಂದಾಗಿದ್ದ ಐಐಟಿ ವಿದ್ಯಾರ್ಥಿ ವಶಕ್ಕೆ
ಕೆಲ ದಿನಗಳ ಹಿಂದೆ ಗೃಹ ಸಚಿವ ಅಮಿತ್ ಶಾ ಅವರನ್ನು ಜನಾರ್ದನ ರೆಡ್ಡಿ ಭೇಟಿ ಮಾಡಿ ಚರ್ಚಿಸಿದ್ದರು.
ಕೊಪ್ಪಳ: ಗಂಗಾವತಿ (Gangavati) ವಿಧಾನಸಭಾ ಕ್ಷೇತ್ರದ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ (Iqbal Ansari) ಸ್ಥಳೀಯ ‘ಕೈ’ ನಾಯಕರಿಂದಲೇ 2023ರ ವಿಧಾನಸಭೆ ಚುನಾವಣೆಯಲ್ಲಿ ಸೋಲಾಯಿತು ಎನ್ನುವ ಆಡಿಯೋ ವೈರಲ್ ಆಗಿದ್ದೇ ತಡ ಕಾಂಗ್ರೆಸ್ (Congress) ಹೈಕಮಾಂಡ್ ಎಚ್ಚೆತ್ತುಕೊಂಡಿದೆ. ಗಂಗಾವತಿಯ ಸದ್ಯದ ಶಾಸಕ ಕೆಆರ್‌ಪಿಪಿ (KRPP) ಸಂಸ್ಥಾಪಕ ಜನಾರ್ದನ ರೆಡ್ಡಿ ಗಾಲಿಯವರಿಗೆ (G. Janardhana Reddy) ಇದೀಗ ಕಾಂಗ್ರೆಸ್ ಗಾಳ ಹಾಕಿದೆ.
ಕೊಪ್ಪಳದ (Koppal) ಗಂಗಾವತಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮತಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೆಟ್ ಗಿಟ್ಟಿಸುವಲ್ಲಿ ಯಶಸ್ವಿಯಾಗಿದ್ದ ಇಕ್ಬಾಲ್ ಅನ್ಸಾರಿ ಚುನಾವಣೆಯಲ್ಲಿ ಗೆಲ್ಲುವ ಸಾಧ್ಯತೆಗಳಿದ್ದರೂ ಜಿಲ್ಲೆಯ ‘ಕೈ’ ನಾಯಕರೇ ಅವರ ಸೋಲಿಗೆ ಕಾರಣರಾದರು ಎನ್ನುವ ಅಸಮಾಧಾನವನ್ನು ಅನ್ಸಾರಿ ಇತ್ತೀಚಿಗೆ ಹೊರಹಾಕಿದ್ದರು. ಕೆಆರ್‌ಪಿಪಿ ಪಕ್ಷದ ಅಭ್ಯರ್ಥಿ ಜನಾರ್ದನರೆಡ್ಡಿಯವರ ಜೊತೆ ‘ಹೊಂದಾಣಿಕೆ’ ಮಾಡಿಕೊಂಡು ಚುನಾವಣೆಯಲ್ಲಿ ಹಣಿಯುವ ಹವಣಿಕೆ ಮಾಡಿ ಅದರಲ್ಲಿ ಗೆದ್ದಿರುವ ಸ್ಥಳೀಯ ‘ಕೈ’ ನಾಯಕರಿಗೆ ಅಲ್ಪಸಂಖ್ಯಾತ ಬಂಧುಗಳು ತಕ್ಕ ಪಾಠ ಕಲಿಸುವ ಕಾಲ ಸನ್ನಿಹಿತವಾಗಿದೆ. ಪ್ರತಿಯೊಬ್ಬ ಮುಸ್ಲಿಂ ಮತದಾರರ ಮನೆಮನೆಗೆ ತೆರಳಿ ತಮಗಾದ ಅನ್ಯಾಯವನ್ನು ಹೇಳುವುದಾಗಿ ಅನ್ಸಾರಿ ಹಾಕಿರುವ ಆಕ್ರೋಶದ ಬಾಂಬ್‌ಗೆ ಕೈ ನಾಯಕರು ನಡುಗಿದ್ದಾರೆ. ಇದನ್ನೂ ಓದಿ: ನಂಬರ್ ಗೇಮ್‌ನಲ್ಲಿ ಮೂರು ಪಕ್ಷಗಳು – ಬಿಜೆಪಿ ಅತೃಪ್ತರು, ರೆಡ್ಡಿ ನಡೆ ಕುತೂಹಲ
ಕೆಆರ್‌ಪಿಪಿ ವಿಲೀನದ ಪ್ರತಿತಂತ್ರ:
ಅನ್ಸಾರಿ ಆಡಿಯೋ ಬಾಂಬ್‌ನಿಂದ ಎಚ್ಚೆತ್ತುಕೊಂಡ ಕಾಂಗ್ರೆಸ್ ಹೈಕಮಾಂಡ್, ಅದಕ್ಕೆ ತಕ್ಕ ಪ್ರತಿತಂತ್ರ ಹೆಣೆದಿದೆ. ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ವಿಶ್ವಾಸ ಕುದುರಿಸುವಲ್ಲಿ ಯಶಸ್ವಿಯಾಗಿರುವ ಕೈ ಪಡೆಗೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ (Lok Sabha Election) ಕಾಂಗ್ರೆಸ್ ಬೆಂಬಲಿಸುವ ಭರವಸೆಯನ್ನು ಗಾಲಿ ನೀಡಿದ್ದಾರೆ. ಇಂದು ಬೆಂಗಳೂರಿನಲ್ಲಿ (Bengaluru) ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಸಮ್ಮುಖದಲ್ಲಿ ಮೊದಲ ಹಂತದ ಮಾತುಕತೆ ನಡೆದಿದ್ದು, ಬರುವ ದಿನಗಳಲ್ಲಿ ಕೆಆರ್‌ಪಿಪಿ ಕಾಂಗ್ರೆಸ್‌ನೊಂದಿಗೆ ವಿಲೀನವಾಗುವ ಸಾಧ್ಯತೆಗಳಿವೆ ಎಂಬ ಸಂದೇಶ ಅನ್ಸಾರಿ ಪಡೆಗೆ ತಲುಪಿದೆ. ಇದನ್ನೂ ಓದಿ: ಗ್ಯಾರಂಟಿಯಿಂದ ಅಭಿವೃದ್ಧಿ ಕೆಲಸಗಳಿಗೆ ಸರ್ಕಾರದಲ್ಲಿ ದುಡ್ಡಿಲ್ಲ: ಸ್ವಪಕ್ಷದ ವಿರುದ್ಧ ಶಾಸಕ ಅಲ್ಲಮಪ್ರಭು ಪಾಟೀಲ್ ಅಸಮಾಧಾನ
ಬೆಂಗಳೂರು: ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಮಂಗಳವಾರ ನಡೆಯಲಿರುವ ಚುನಾವಣೆ (Rajya Sabha Election) ರಂಗೇರುತ್ತಿದ್ದು, ಕೆಆರ್‌ಪಿಪಿ (KRPP) ಶಾಸಕ ಜನಾರ್ದನ ರೆಡ್ಡಿಯವರು ದಿಢೀರ್ ಆಗಿ ಸಿಎಂ ಸಿದ್ದರಾಮಯ್ಯ (Siddaramaiah) ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ್ದಾರೆ. ಚುನಾವಣೆ ಹೊತ್ತಿನಲ್ಲಿ ಜನಾರ್ದನ ರೆಡ್ಡಿಯವರ (G.Janardhana Reddy) ನಡೆ ಕುತೂಹಲ ಮೂಡಿಸಿದೆ.
ಇಂದು (ಸೋಮವಾರ) ಬೆಳಗ್ಗೆ ಕಾವೇರಿ ನಿವಾಸಕ್ಕೆ ಜನಾರ್ದನ ರೆಡ್ಡಿಯರು ತೆರಳಿದ್ದು, ಸಿಎಂ ಸಿದ್ದರಾಮಯ್ಯ ಅವರ ಜೊತೆ ಮಾತುಕತೆ ನಡೆಸಿದ್ದಾರೆ. ರಾಜ್ಯಸಭಾ ಚುನಾವಣೆಯಲ್ಲಿ ಅವರು ಕಾಂಗ್ರೆಸ್‍ಗೆ ಬೆಂಬಲ ಕೊಡುವ ಸಾಧ್ಯತೆ ಇದೆ. ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಭೇಟಿ ವೇಳೆ ಡಿಸಿಎಂ ಡಿಕೆಶಿ, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಉಪಸ್ಥಿತರಿದ್ದರು. ಇದನ್ನೂ ಓದಿ: ಪಬ್ಲಿಕ್ ಟಿವಿ ಇಂಪ್ಯಾಕ್ಟ್- ಬಟ್ಟೆ ಕ್ಲೀನ್ ಇಲ್ಲವೆಂದು ಮೆಟ್ರೋದೊಳಗೆ ಬಿಡದ ಸಿಬ್ಬಂದಿ ವಜಾ: MD
ಈ ಬಗ್ಗೆ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ್ದೇನೆ. ಆನೆಗುಂದಿ ಉತ್ಸವಕ್ಕೆ ಆಹ್ವಾನ ನೀಡಲು ಹೋಗಿದ್ದೆ. ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವಂತೆ ಎಲ್ಲರೂ ಮನವಿ ಮಾಡಿದ್ದಾರೆ. ರಾಜ್ಯಸಭಾ ಚುನಾವಣೆಯಲ್ಲಿ ಯಾರಿಗೆ ಮತ ಹಾಕಬೇಕು ಎಂಬ ಬಗ್ಗೆ ಇನ್ನು ತೀರ್ಮಾನ ಮಾಡಿಲ್ಲ ಎಂದು ಹೇಳಿ ಕುತೂಹಲ ಹುಟ್ಟುಹಾಕಿದ್ದಾರೆ. ಇದನ್ನೂ ಓದಿ: ಹಿಂದೂಗಳಿಗೆ ಮತ್ತೆ ಜಯ- ಜ್ಞಾನವಾಪಿಯಲ್ಲಿ ಪೂಜೆಗೆ ತಡೆ ನೀಡಲು ಹೈಕೋರ್ಟ್ ನಕಾರ
ಕೊಪ್ಪಳ: ಲೋಕಸಭಾ ಚುನಾವಣೆಗೆ (Loksabha Election) ನಾನಾಗಲಿ, ನನ್ನ ಕುಟುಂಬದವರಾಗಲಿ ಸ್ಪರ್ಧೆ ಮಾಡುವುದಿಲ್ಲ. ಹೊಸ ಅಭ್ಯರ್ಥಿಗಳು ಈಗಾಗಲೇ ರೆಡಿ ಆಗಿದ್ದಾರೆ. ಅವರ ಹೆಸರುಗಳನ್ನು ಕೊಪ್ಪಳದ ಸಮಾವೇಶದಲ್ಲಿ ಘೋಷಣೆ ಮಾಡುತ್ತೇನೆ ಎಂದು ಶಾಸಕ ಜನಾರ್ದನ ರೆಡ್ಡಿ (Janardhan Reddy) ಹೇಳಿದ್ದಾರೆ.
ಕೊಪ್ಪಳದ ಗಂಗಾವತಿ ತಾಲೂಕಿನ ಪಂಪಾಸರೋವರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯ ಹಿನ್ನೆಲೆ ಜನವರಿ 11 ರಂದು ಕೊಪ್ಪಳದಲ್ಲಿ 6 ಜಿಲ್ಲೆಗಳ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 4 ರಿಂದ 6 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಹಾಕುತ್ತೇನೆ. ಅವರನ್ನು ಗೆಲ್ಲಿಸಲು ಹಗಲು ರಾತ್ರಿ ಕೆಲಸ ಮಾಡುತ್ತೇನೆ ಎಂದಿದ್ದಾರೆ.
ಬೇರೆ ಪಕ್ಷಗಳ ಜೊತೆಗೆ ಹೊಂದಾಣಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಕಳೆದ ವಿಧಾನಸಭೆ ಚುನಾವಣೆಯಲ್ಲಿ (Vidhanasabha Election) ಯಾರ ಜೊತೆಗೂ ಹೊಂದಾಣಿಕೆ ಮಾಡಿಕೊಂಡಿಲ್ಲ. ಹೀಗಾಗಿ ಕೆಆರ್ ಪಿಪಿ (KRPP) ತನ್ನ ಇತಿಮಿತಿಗಳಲ್ಲಿ ಲೋಕಸಭೆಗೆ ಸ್ಪರ್ಧೆ ಮಾಡುತ್ತದೆ. ಬೇರೆ ಪಕ್ಷಗಳ ಜೊತೆಗೆ ಹೋಗುವ ಪ್ರಶ್ನೆ ಉದ್ಭವಿಸುವುದಿಲ್ಲ. ಯಾರು ಏನೇ ಮಾಡಿದರೂ ನನ್ನ ನಿರ್ಧಾರ ದೃಢವಾಗಿದೆ. ಕೆಆರ್ ಪಿಪಿ ಸ್ವತಃ ಬಲದ ಮೇಲೆ ಪಕ್ಷ ಕಟ್ಟುವ ಕೆಲಸ ಮಾಡುತ್ತೇನೆ ಎಂದು ರೆಡ್ಡಿ ತಿಳಿಸಿದ್ದಾರೆ. ಇದನ್ನೂ ಓದಿ: ಲೋಕಸಭೆ ಚುನಾವಣೆ ಕಳೆಯುವ ವರೆಗೆ ಕಾಂಗ್ರೆಸ್ ನಾಯಕರಿಗಿಲ್ಲಾ ನಿಗಮ ಮಂಡಳಿ ಭಾಗ್ಯ!?
ಯಾವೊಂದು ಪಕ್ಷದ ಜೊತೆಗೆ ಸೇರುವ ಪ್ರಶ್ನೆ ಬರುವುದಿಲ್ಲ. ಸ್ವತಃ ಬಲದ ಮೇಲೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತೇನೆ. ಲೋಕಸಭಾ ಚುನಾವಣೆಗೆ ನಾನಾಗಲಿ ನನ್ನ ಕುಟುಂಬದವರಾಗಲಿ ಸ್ಪರ್ಧೆ ಮಾಡುವುದಿಲ್ಲ. ಹೊಸ ಅಭ್ಯರ್ಥಿಗಳು ಈಗಾಗಲೇ ರೆಡಿ ಆಗಿದ್ದಾರೆ. ಅವರ ಹೆಸರುಗಳನ್ನು ಕೊಪ್ಪಳದ ಸಮಾವೇಶದಲ್ಲಿ ಘೋಷಣೆ ಮಾಡುತ್ತೇನೆ. ಅಂದು ಕನಿಷ್ಟ ಎರಡು ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಕೆಲಸ ಮಾಡುತ್ತೇನೆ ಎಂದಿದ್ದಾರೆ.
ಕಳೆದ ವರ್ಷ ಹನುಮಮಾಲಾ ಜಯಂತಿಗೆ ಪಾದಾರ್ಪಣೆ ಮಾಡಿದ್ದೆ. ಹನುಮಮಾಲಾ ಧರಿಸುವ ಮೂಲಕ ಚುನಾವಣೆಗೆ ಸ್ಪರ್ಧೆ ಮಾಡುವುದನ್ನು ತಿಳಿಸಿದ್ದೆ. ಈಗ ಒಂದು ವರ್ಷ ಕಳೆದಿದೆ. ಭಗವಂತನ ಕೃಪೆ ಇದೆ. ಹನುಮಂತನ ಪಾದ ಮುಟ್ಟಿ ಗಂಗಾವತಿ ಶಾಸಕನಾಗಲು ಬೇಡಿಕೊಂಡಿದ್ದೆ. ನನ್ನ ಮೊದಲನೇ ಬೇಡಿಕೆ ಶಾಸಕನಾಗುವುದು ಈಡೇರಿದೆ. ಕಿಷ್ಕಿಂದ ಕ್ಷೇತ್ರವನ್ನು ಅಭಿವೃದ್ಧಿ ಮಾಡಲು ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ಜನಾರ್ದನ ರೆಡ್ಡಿ ತಿಳಿಸಿದ್ದಾರೆ.
ಕೊಪ್ಪಳ: ರಾಜ್ಯದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ನೆಲ ಕಚ್ಚಲು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಕಾರಣ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ (Janardhan Reddy) ಹೇಳಿದರು.
ಕೊಪ್ಪಳದ (Koppala) ಗಂಗಾವತಿ ನಗರದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಕಚೇರಿಯಲ್ಲಿ ಇಂದು ಬಳ್ಳಾರಿ ವಿಧಾನಸಭಾ ಕ್ಷೇತ್ರದ ಬೂತ್ ಮಟ್ಟದ ಪದಾಧಿಕಾರಿಗಳು ಹಾಗೂ ಪ್ರಮುಖ ಮುಖಂಡರ ಆತ್ಮಾವಲೋಕನ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಪಕ್ಷ ಸ್ಥಾಪನೆಗೂ ಮುಂಚೆ ನನ್ನನ್ನು ಪಕ್ಷಕ್ಕೆ ಬರಮಾಡಿಕೊಳ್ಳಿ ಎಂದು ಬಿಜೆಪಿ ಪಕ್ಷದ ಮುಖಂಡರ ಮನೆ ಬಾಗಿಲಿಗೆ ಹೋಗಿಲ್ಲ. ಅಮಿತ್ ಶಾ, ನರೇಂದ್ರ ಮೋದಿಯವರ ಬಳಿಯೂ ಹೋಗಿಲ್ಲ. ಎಷ್ಟೋ ಬಾರಿ ಅಮಿತ್ ಶಾ ಅವರು ನನ್ನನ್ನು ಸಂಪರ್ಕಿಸಲು ಪ್ರಯತ್ನಿಸಿದರು. ನಾನು ಅವರಿಗೆ ಸಿಕ್ಕಿಲ್ಲ. ಬಿಜೆಪಿ ಪಕ್ಷವನ್ನು ನಾನೇ ದೂರ ಇಟ್ಟೆ ಎಂದು ಮಾರ್ಮಿಕವಾಗಿ ನುಡಿದರು. ಇದನ್ನೂ ಓದಿ: ಯಾರೂ ವಿದ್ಯುತ್ ಬಿಲ್ ಕಟ್ಬೇಡಿ, ಬಿಲ್ ಬಂದ್ರೆ ಸಿಎಂಗೆ ಕಳ್ಸಿ – ಸಿ.ಟಿ ರವಿ
ಬಳ್ಳಾರಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿ ಲಕ್ಷ್ಮೀ ಅರುಣಾ ಅವರು ಎರಡನೇ ಸ್ಥಾನದಲ್ಲಿ ಬಂದಿದ್ದಾರೆ. ಕೇವಲ ನೂರು ದಿನಗಳಲ್ಲಿ ಪಕ್ಷದ ಅಭ್ಯರ್ಥಿ ಲಕ್ಷ್ಮೀ ಅರುಣಾ ಅವರು ಕ್ಷೇತ್ರದ ಹೆಚ್ಚಿನ ಜನರ ಮನಸ್ಸು ಮುಟ್ಟುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು.
ಬಳ್ಳಾರಿ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ನಾನು ಬೆಳೆಸಿದ ಹೇಡಿಗಳು, ನನ್ನ ಅಣ್ಣ-ತಮ್ಮಂದಿರು ಸೇರಿದಂತೆ ಎಲ್ಲರೂ ಇಂದು ಮನೆಯಲ್ಲಿ ಕೂಡುವ ಪರಿಸ್ಥಿತಿ ಬಂದಿದೆ. ನಾನೊಬ್ಬನೆ ಇಂದು ವಿಧಾನಸೌಧಕ್ಕೆ ಹೋಗುತ್ತಿದ್ದೇನೆ ಎಂದು ಸೋತಿರುವ ಪ್ರಮುಖ ನಾಯಕರಿಗೆ ಕುಟುಕಿದರು. ಇದನ್ನೂ ಓದಿ: 12ನೇ ತರಗತಿ ಪಾಸ್ ಮಾಡಿದ ಸಿಎಂ ಸಿದ್ದರಾಮಯ್ಯ ಮೊಮ್ಮಗ
ಮುಂದಿನ ದಿನಗಳಲ್ಲಿ ಬರುವ ಜಿಲ್ಲಾ ಪಂಚಾಯಿತಿ, ಲೋಕಸಭೆ ಚುನಾವಣೆ ಸೇರಿದಂತೆ ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕೆಆರ್‌ಪಿ ಪಕ್ಷ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಎಲ್ಲಾ ಕಾರ್ಯಕರ್ತರು ಕೆಲಸ ಮಾಡಬೇಕು. ಬಳ್ಳಾರಿಯಲ್ಲಿ ಆದ ಸೋಲಿನಿಂದ ಕಾರ್ಯಕರ್ತರು ಎದೆಗುಂದದೆ ಸಂಘಟನೆಗೆ ಮುನ್ನುಗ್ಗಿ. ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ಈ ಬಾರಿ ಎಲ್ಲಾ ವಾರ್ಡ್‌ಗಳಲ್ಲಿ ಕೆಆರ್‌ಪಿ ಪಕ್ಷದ ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ಆ ನಿಟ್ಟಿನಲ್ಲಿ ಕೆಲಸ ಮಾಡಿ ತೋರಿಸುತ್ತೇನೆ ಎಂದರು.
ಬಳ್ಳಾರಿ ಹಾಗೂ ಗಂಗಾವತಿ ಸೇರಿದಂತೆ ರಾಜ್ಯದ ಅಭಿವೃದ್ಧಿಗೆ ವಿಧಾನಸೌಧದಲ್ಲಿ ಧ್ವನಿ ಎತ್ತಿ ನಾನು ಕೊಟ್ಟ ಭರವಸೆಗಳನ್ನು ಈಡೇರಿಸುತ್ತೇನೆ. ಬಿಜೆಪಿ ಪಕ್ಷದ ಅಷ್ಟೂ ಶಾಸಕರಿಗೆ ನಾನೊಬ್ಬನೇ ಸಮ. ವಿಧಾನಸೌಧದಲ್ಲಿ ನೂರು ಜನ ಶಾಸಕರು ಮಾಡುವ ಕೆಲಸವನ್ನು ನಾನೊಬ್ಬನೆ ಮಾಡಿ ತೋರಿಸುತ್ತೇನೆ. ನೂರು ಜನ ಶಾಸಕರಿಗೆ ಈ ಒಬ್ಬ ಗಾಲಿ ಜನಾರ್ದನ ರೆಡ್ಡಿ ಸಮ ಎಂದು ಹೇಳಿದರು.
ಬಳ್ಳಾರಿ: ಗಣಿನಾಡು ಎಂದೇ ಪ್ರಸಿದ್ಧಿಯಾದ ಬಳ್ಳಾರಿ (Ballari) ಜಿಲ್ಲೆ ಅಪಾರ ಗಣಿ ಸಂಪತ್ತನ್ನು ಹೊಂದಿದೆ. ಹೀಗಾಗಿ ಜಿಲ್ಲೆಯ ನಗರದ ಆಡಳಿತದ ಮೇಲೆ ರಾಜಕಾರಣಿಗಳು ಕಣ್ಣಿಟ್ಟಿದ್ದಾರೆ. ಇದೇ ಕಾರಣಕ್ಕಾಗಿ ಈ ಕ್ಷೇತ್ರ ಈಗ ಜಿದ್ದಾಜಿದ್ದಿಗೆ ಕಾರಣವಾಗಿದೆ.
ಬಳ್ಳಾರಿ ಜಿಲ್ಲೆಯಲ್ಲಿ ಒಂದೇ ಒಂದು ಸಾಮಾನ್ಯ ಕ್ಷೇತ್ರವಿರುವುದರಿಂದ ಪೈಪೋಟಿ ಸಾಮಾನ್ಯವಾಗಿ ಹೆಚ್ಚಿರುತ್ತದೆ. ಇಲ್ಲಿ ಪಕ್ಷದ ಚಿನ್ಹೆಗಿಂತ ವ್ಯಕ್ತಿಯ ವರ್ಚಸ್ಸಿನ ಮೇಲೆ ಚುನಾವಣೆ ನಡೆಯುತ್ತದೆ. ಈ ಬಾರಿ ಎರಡು ರೆಡ್ಡಿ ಕುಟುಂಬಗಳ ಮಧ್ಯೆ ಯುದ್ಧವಾಗುವ ಸಾಧ್ಯತೆಗಳಿವೆ. ಗಾಲಿ ಜನಾರ್ದನ ರೆಡ್ಡಿ (Gali Janardhan Reddy) ಕುಟುಂಬಕ್ಕೆ ಠಕ್ಕರ್ ಕೊಡಬಲ್ಲ ಮತ್ತೊಂದು ರೆಡ್ಡಿ ಕುಟುಂಬ ಎಂದರೆ ಅದು ಮಾಜಿ ಶಾಸಕ ಸೂರ್ಯನಾರಾಯಣ ರೆಡ್ಡಿ ಕುಟುಂಬ.
ಸೂರ್ಯನಾರಾಯಣ ರೆಡ್ಡಿ ಅವರ ಪುತ್ರ ನಾರಾ ಭರತ್ ರೆಡ್ಡಿ (Nara Bharath Reddy) ಅವರು ಈ ಬಾರಿ ಕಾಂಗ್ರೆಸ್‌ನಿಂದ (Congress) ಸ್ಪರ್ಧೆ ಮಾಡಿದ್ದಾರೆ. ಈ ನಡುವೆ ಜನಾರ್ದನ ರೆಡ್ಡಿ ಪತ್ನಿ ಅಖಾಡದಲ್ಲಿ ಇರುವುದರಿಂದ ಕ್ಷೇತ್ರದಲ್ಲಿ ಹೈ ವೋಲ್ಟೇಜ್ ಸ್ಪರ್ಧೆ ನಡೆಯಲಿದೆ. ಹಣ ಬಲ, ತೋಳ್ಬಲ ಈ ಎರಡೂ ಕುಟುಂಬದಲ್ಲಿ ಇರುವ ಕಾರಣ ಬಳ್ಳಾರಿ ನಗರ ಕ್ಷೇತ್ರ ಒಂದು ಪ್ರತಿಷ್ಠೆಯ ಕಣವಾಗಿದೆ.
ಮತ್ತೊಂದು ಸಾರಿ ಕ್ಷೇತ್ರದಲ್ಲಿ ಗೆದ್ದು ಮಂತ್ರಿ ಪದವಿ ಪಡೆಯಲೇ ಬೇಕು ಎನ್ನುವ ತವಕದಲ್ಲಿ ಸೋಮಶೇಖರ್ ರೆಡ್ಡಿ (G.Somashekar Reddy) ಇದ್ದಾರೆ. ನಗರ ಪ್ರದೇಶಗಳಲ್ಲಿ ನಡೆಯುತ್ತಿರುವ ಆಮೆಗತಿ ಕಾಮಗಾರಿಗಳು, ಕುಡಿಯುವ ನೀರಿನ ಸಮಸ್ಯೆಯಿಂದಾಗಿ ನಗರ ಪ್ರದೇಶದ ಜನರು ರೋಸಿ ಹೋಗಿದ್ದಾರೆ. ಹೀಗಾಗಿ ಶಾಸಕ ಸೋಮಶೇಖರ್ ರೆಡ್ಡಿಯವರಿಗೆ ದೊಡ್ಡ ವಿರೋಧ ವ್ಯಕ್ತವಾಗಿದೆ. ಇನ್ನು ಜನಾರ್ದನ ರೆಡ್ಡಿ ಮತ್ತು ರಾಮುಲು ನಡುವಿನ ಬಿರುಕು ರೆಡ್ಡಿ ರಾಜಕೀಯ ಜೀವನದ ಮೇಲೆ ಪರಿಣಾಮ ಬೀರಲಿದೆ.
ಕಳೆದ ಒಂದು ತಿಂಗಳಿನಿಂದ ಸುಮಾರು 12 ಸಾವಿರ ಮನೆಗಳಿಗೆ ಪಟ್ಟಾ ವಿತರಣೆ ಮಾಡಿದ ಸೋಮಶೇಖರ್ ರೆಡ್ಡಿ ಮತ ನೀಡಿ ಒಂದು ಬಾರಿ ಅವಕಾಶ ಮಾಡಿಕೊಡಿ ಎಂದು ಮತದಾರರಲ್ಲಿ ಮನವಿ ಮಾಡುತ್ತಿದ್ದಾರೆ. ಶ್ರೀರಾಮುಲು ಹಾಗೂ ಸೋಮಶೇಖರ್ ರೆಡ್ಡಿ ಕಾಂಬಿನೇಷನ್ ಬಳ್ಳಾರಿ ನಗರ ಕ್ಷೇತ್ರದ ಮೇಲೆ ಪ್ರಭಾವ ಬೀರಲಿದ್ದು, ಬಿಜೆಪಿಗೆ ಒಂದು ಶಕ್ತಿ ಬಂದಿದೆ.
ಕೈ-ಕಮಲ ಪಕ್ಷಗಳ ನಡುವೆ ಸಾಂಪ್ರದಾಯಿಕ ಹೋರಾಟಕ್ಕೆ ಸಾಕ್ಷಿಯಾಗುತ್ತಾ ಬಂದಿದ್ದ ಬಳ್ಳಾರಿ ನಗರ ಕ್ಷೇತ್ರದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅಸ್ವಿತ್ವಕ್ಕೆ ತಂದ ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ದ ಪ್ರವೇಶ ತೀವ್ರ ಕುತೂಹಲ ಮೂಡಿಸಿದೆ.
ನಗರದಲ್ಲಿ ಕೆಆರ್‌ಪಿಪಿ (KRPP) ಪಕ್ಷದ ಅರುಣಾ ಲಕ್ಷ್ಮೀ ಸ್ಪರ್ಧೆಯಿಂದ ಕಾಂಗ್ರೆಸ್ ವೋಟ್‌ಬ್ಯಾಂಕ್ ಮೇಲೆ ಕಣ್ಣಿಟ್ಟಿದ್ದಾರೆ. ಆದರೆ ನಗರ ಪ್ರದೇಶದಲ್ಲಿ ಸಾಲು ಸಾಲು ಸಮಸ್ಯೆಗಳಿವೆ. ಹಾಳಾದ ರಸ್ತೆ ಹಾಗೂ ಕುಡಿಯುವ ನೀರಿನ ಸಮಸ್ಯೆಯಿದ್ದು, ಅಭಿವೃದ್ಧಿಯಲ್ಲಿ ತೀರಾ ಹಿಂದಿರುವ ನಗರವಾಗಿದೆ. ಕೋಟಿ ಕೋಟಿ ಹಣವಿದ್ದರೂ ಅಭಿವೃದ್ಧಿ ಕುಂಠಿತವಾಗಿದ್ದು, ಬಿಜೆಪಿಗೆ ತಲೆನೋವು ತಂದಿದೆ. ಬಿಜೆಪಿ ಕಾರ್ಯಕರ್ತರ ಕಡೆಗಣನೆ, ರೆಡ್ಡಿ ವಿರುದ್ಧದ ಕಾರ್ಯಕರ್ತರ ಅಸಮಾಧಾನ, ಬಿಜೆಪಿ ಆಡಳಿತ ವಿರೋಧಿ ಅಲೆ ಹೆಚ್ಚಾಗಿದ್ದು, ಕಾಂಗ್ರೆಸ್ ಇದರ ಲಾಭ ಪಡೆಯಲು ಮುಂದಾಗಿದೆ.
1957ರಲ್ಲಿ ನಡೆದ ಮೊದಲ ಸಾರ್ವತ್ರಿಕ ಚುನಾವಣೆಯಲ್ಲಿ ಮುಂಡ್ಲೂರು ಗಂಗಪ್ಪ ಪಕ್ಷೇತರ ಅಭ್ಯರ್ಥಿಯಾಗಿ ಕಾಂಗ್ರೆಸ್ ವಿರುದ್ಧ ಜಯಗಳಿಸಿದ್ದರು. 1962ರಲ್ಲಿ ಕಾಂಗ್ರೆಸ್‌ನಿಂದ ಟಿ.ಜಿ.ಸತ್ಯನಾರಾಯಣ ಜಯಗಳಿಸಿದರೆ, 1967ರಲ್ಲಿ ಎಸ್‌ಡಬ್ಲ್ಯುಎಂ ಪಕ್ಷದಿಂದ ಸ್ಪರ್ಧಿಸಿದ ವಿ.ನಾಗಪ್ಪ ಅವರು ಕಾಂಗ್ರೆಸ್ ವಿರುದ್ಧ ಗೆಲ್ಲುತ್ತಾರೆ. 1972ರಲ್ಲಿ ಎನ್‌ಸಿಒ ಪಕ್ಷದಿಂದ ಇವರು ಮರು ಆಯ್ಕೆಯಾಗುತ್ತಾರೆ. 1978ರಲ್ಲಿ ಕೆ.ಭಾಸ್ಕರ್ ನಾಯ್ಡು ಕಾಂಗ್ರೆಸ್ (ಐ) ಪಕ್ಷದಿಂದ ಗೆಲ್ಲುತ್ತಾರೆ. ನಂತರ ಮುಂಡ್ಲೂರು ಕುಟುಂಬದ ರಾಜಕಾರಣ ಆರಂಭವಾಗುತ್ತದೆ.
1982ರಲ್ಲಿ ಜೆಎನ್‌ಪಿ ಪಕ್ಷದಿಂದ ಸ್ಪರ್ಧಿಸಿದ್ದ ಮುಂಡ್ಲೂರು ರಾಮಪ್ಪ ಕಾಂಗ್ರೆಸ್ ವಿರುದ್ಧ ಭರ್ಜರಿ ಜಯಗಳಿಸುತ್ತಾರೆ. ನಂತರ 1985 ಹಾಗೂ 1989ರಲ್ಲಿ ನಡೆದ ಎರಡು ಚುನಾವಣೆಗಳಲ್ಲೂ ಇವರೇ ಪುನರಾಯ್ಕೆಯಾಗುತ್ತಾರೆ. 1994ರಲ್ಲಿ ಪಕ್ಷೇತರರಾಗಿ ಪ್ರಥಮ ಜಯಗಳಿಸಿದ ಮಾಜಿ ಸಚಿವ ಎಂ.ದಿವಾಕರ ಬಾಬು 1999ರ ಹೈವೋಲ್ಟೇಜ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಮತ್ತೊಮ್ಮೆ ಗೆಲುವು ದಾಖಲಿಸುತ್ತಾರೆ. 2004ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಹಾಲಿ ಸಚಿವ ಬಿ.ಶ್ರೀರಾಮುಲು ಮೊದಲ ಗೆಲುವನ್ನು ಪಡೆಯುತ್ತಾರೆ. 2008ರಲ್ಲಿ ಕ್ಷೇತ್ರ ಮರುವಿಂಗಡಣೆಯಾಗಿ ಬಳ್ಳಾರಿ ನಗರ ಕ್ಷೇತ್ರವಾದ ಬಳಿಕ 2008ರಲ್ಲಿ ಶಾಸಕ ಜಿ.ಸೋಮಶೇಖರ ರೆಡ್ಡಿ ಹಾಗೂ 2013ರಲ್ಲಿ ಅನಿಲ್ ಲಾಡ್ ಆಯ್ಕೆಯಾಗಿದ್ದಾರೆ. ಬಳಿಕ 2018ರಲ್ಲಿ ಗಾಲಿ ಸೋಮಶೇಖರ್ ರೆಡ್ಡಿ ಬಿಜೆಪಿಯಿಂದ ಆಯ್ಕೆಯಾದರು.
1999ರಲ್ಲಿ ನಡೆದ ಸೋನಿಯಾಗಾಂಧಿ ಹಾಗೂ ಸುಷ್ಮಾಸ್ವರಾಜ್ ಅವರ ನಡುವಿನ ಲೋಕಸಭಾ ಚುನಾವಣಾ ಸ್ಪರ್ಧೆಯು ಕಾಂಗ್ರೆಸ್‌ನ ಭದ್ರಕೋಟೆ ಎಂದೇ ಬಿಂಬಿತವಾಗಿದ್ದ ಬಳ್ಳಾರಿಯಲ್ಲಿ ಕಮಲ ಅರಳಿಸಲು ಕಾರಣವಾಯಿತು.
2004ರಲ್ಲಿ ಈಗಿನ ಸಾರಿಗೆ ಸಚಿವ ಬಿ.ಶ್ರೀರಾಮುಲು ಬಿಜೆಪಿಯಿಂದ ಸ್ಪರ್ಧಿಸಿ ಮೊದಲ ಬಾರಿಗೆ ಕಮಲ ಅರಳಿಸಿದರೆ, 2008ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಜನಾರ್ದನ ರೆಡ್ಡಿ ಸಹೋದರ ಜಿ.ಸೋಮಶೇಖರ ರೆಡ್ಡಿ ಗೆದ್ದಿದ್ದಾರೆ. 2013ರಲ್ಲಿ ಕಾಂಗ್ರೆಸ್‌ನ ಅನಿಲ್ ಲಾಡ್ ಜಯ ಪಡೆದರೆ, 2018ರಲ್ಲಿ ಸೋಮಶೇಖರ ರೆಡ್ಡಿ ಮತ್ತೆ ಜಯ ಗಳಿಸಿದ್ದಾರೆ. ಆದರೆ ಈಗ ಮತ್ತೊಂದು ಸಾರಿ ಕ್ಷೇತ್ರದಲ್ಲಿ ಗೆಲ್ಲಲೇ ಬೇಕು ಎನ್ನುವ ಹಠಕ್ಕೆ ರೆಡ್ಡಿ ಬಿದ್ದಿದ್ದಾರೆ. ಅವರ ಸಹೋದರ ಗಾಲಿ ಜನಾರ್ದನ ರೆಡ್ಡಿ, ಅವರ ಪತ್ನಿ ಅರುಣಾ ಲಕ್ಷ್ಮೀ ಸಹ ಕಣಕ್ಕಿಳಿದಿದ್ದು, ತಮ್ಮ ಅದೃಷ್ಟ ಪರೀಕ್ಷೆಗೆ ನಿಂತಿದ್ದಾರೆ.
ಕಾಂಗ್ರೆಸ್ ಟಿಕೆಟ್ ಹಂಚಿಕೆಯಲ್ಲಿ ಗೊಂದಲವಿದ್ದು, ಕಾಂಗ್ರೆಸ್‌ನ ಭದ್ರ ಕೋಟೆ ಎಂದು ಕರೆಸಿಕೊಳ್ಳುವ ಬಳ್ಳಾರಿ ನಗರ ಕ್ಷೇತ್ರವನ್ನು ಕಾಂಗ್ರೆಸ್ ಲೀಲಾಜಾಲವಾಗಿ ಗೆಲ್ಲಬಹುದು. ಯಾಕೆಂದರೆ ಕಳೆದ ಸಾರಿ ನಡೆದ ಬಳ್ಳಾರಿ ಮಹಾ ನಗರ ಪಾಲಿಕೆಯಲ್ಲಿ ಬಿಜೆಪಿ ಹೀನಾಯವಾಗಿ ಸೋತು ಸುಣ್ಣವಾಗಿತ್ತು. ಅಲ್ಲದೇ ಬಳ್ಳಾರಿ ನಗರದಲ್ಲಿ ಕಾಂಗ್ರೆಸ್ ಅಲೆಯಿದ್ದು, ಸೋಮಶೇಖರ್ ರೆಡ್ಡಿ ವಿರುದ್ಧ ಆಡಳಿತ ವಿರೋಧಿ ಅಲೆ ದೊಡ್ಡ ಮಟ್ಟದಲ್ಲಿದೆ. ಹೀಗಾಗಿ ಕಾಂಗ್ರೆಸ್ ಹೋರಾಟ ಮಾಡಿದ್ದೇ ಆದಲ್ಲಿ ಈ ಕ್ಷೇತ್ರದಲ್ಲಿ ಗೆಲ್ಲಬಹುದು. ಆದರೆ ಈ ಮಧ್ಯೆ ಕೆಆರ್‌ಪಿಪಿ ನಗರ ಪ್ರದೇಶದ ಮುಸ್ಲಿಂ ಹಾಗೂ ಸ್ಲಂ ಜನರ ಮೇಲೆ ಕಣ್ಣಿಟ್ಟು ಕಾಂಗ್ರೆಸ್ ಮತಗಳನ್ನು ಸೆಳೆದರೆ ಸೋಮಶೇಖರ್ ರೆಡ್ಡಿಗೆ ಸಹಾಯವಾಗಬಹುದು. ಮಹಾನಗರ ಪಾಲಿಕೆ ಕಾಂಗ್ರೆಸ್ ಹಿಡಿತದಲ್ಲಿ ಇರುವ ಕಾರಣ ಕೆಆರ್‌ಪಿಪಿ ಕಾಂಗ್ರೆಸ್‌ಗೆ ಹೆಚ್ಚಿನ ಡ್ಯಾಮೇಜ್ ಮಾಡಲು ಸಾಧ್ಯವಿಲ್ಲ. ಆದರೆ ಚುನಾವಣೆಗೆ ಇನ್ನೂ ಎರಡು ವಾರ ಇರುವ ಕಾರಣ ಕೊನೆಯ ಕ್ಷಣದಲ್ಲಿ ಮತದಾರರನ್ನು ಹೇಗೆ ಮತ್ತು ಯಾರು ಸೆಳೆಯುತ್ತಾರೆ ಎಂಬುದು ಸದ್ಯದ ಕುತೂಹಲ.
ಬಳ್ಲಾರಿ ನಗರ ಕ್ಷೇತ್ರದ ಮತದಾರರೆಷ್ಟು?
ಬಳ್ಳಾರಿ ನಗರ ಸಾಮಾನ್ಯ ಕ್ಷೇತ್ರದಲ್ಲಿ ಒಟ್ಟು 2,55,385 ಮತದಾರರಿದ್ದಾರೆ. ಅದರಲ್ಲಿ ಪುರುಷರು 1,24,199 ಪುರುಷ ಮತದಾರರಿದ್ದು, 1,31,557 ಮಹಿಳಾ ಮತದಾರರು ಇದ್ದಾರೆ.
ನವದೆಹಲಿ: ಕೆಆರ್‌ಪಿಪಿ (KRPP) ಪಕ್ಷ ಸ್ಥಾಪಿಸಿ ರಾಜ್ಯ ವಿಧಾನಸಭೆ ಚುನಾವಣೆ ಅಖಾಡಕ್ಕೆ ಇಳಿದಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ (Janardhan Reddy) ಸುಪ್ರೀಂಕೋರ್ಟ್‌ನಲ್ಲಿ (Supreme Court) ಹಿನ್ನಡೆಯಾಗಿದೆ. ಪತ್ನಿ ಅರುಣಾ ಪರ ಪ್ರಚಾರ ಮಾಡುವ ಲೆಕ್ಕಚಾರದಲ್ಲಿದ್ದ ರೆಡ್ಡಿಗೆ ಸುಪ್ರೀಂಕೋರ್ಟ್ ಬಳ್ಳಾರಿಗೆ (Ballari) ಪ್ರವೇಶವನ್ನು ನಿರಾಕರಿಸಿದೆ.
ರಾಜ್ಯ ವಿಧಾನಸಭೆ ಚುನಾವಣೆ (Karnataka Election) ಹಿನ್ನಲೆ ಬಳ್ಳಾರಿ ತೆರಳಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ಜನಾರ್ದನ ರೆಡ್ಡಿ ಮುಂದಾಗಿದ್ದರು. ಈ ಹಿನ್ನಲೆ ಬಳ್ಳಾರಿ ಪ್ರವೇಶಕ್ಕೆ ನೀಡಿರುವ ಅನುಮತಿಯನ್ನು ವಿಸ್ತರಿಸಬೇಕು ಎಂದು ಸುಪ್ರೀಂಗೆ ಮನವಿ ಮಾಡಿದ್ದರು. ಇಂದು ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಎಂ ಆರ್ ಶಾ ನೇತೃತ್ವದ ದ್ವಿಸದಸ್ಯ ಪೀಠ ಅನುಮತಿ ನಿರಾಕರಿಸಿತು. ಇದನ್ನೂ ಓದಿ: ಕೆಜಿಎಫ್ ಬಾಬು ನಿವಾಸ ಸೇರಿದಂತೆ 50 ಕಡೆ ಐಟಿ ದಾಳಿ
ವಿಚಾರಣೆ ವೇಳೆ ವಾದ ಮಂಡಿಸಿದ ಹಿರಿಯ ವಕೀಲೆ ಮೀನಾಕ್ಷಿ ಅರೋರಾ, ರೆಡ್ಡಿ ಮೊಮ್ಮಗಳ ಜನನ ಹಿನ್ನಲೆ ಬಳ್ಳಾರಿ ತೆರಳಲು ಅನುಮತಿ ನೀಡಿತ್ತು. ಜನಾರ್ದನ ರೆಡ್ಡಿಗೆ ವಿಧಿಸಿದ್ದ ಜಾಮೀನು ಷರತ್ತುಗಳನ್ನು ಸಡಿಲಗೊಳಿಸಿತ್ತು. ಅದನ್ನು ಸದ್ಯ ವಿಸ್ತರಿಸಬೇಕು ಎಂದು ಮನವಿ ಮಾಡಿದರು. ಅನುಮತಿ ನಿರಾಕರಿಸಿ ಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ರೆಡ್ಡಿ ಪರ ವಕೀಲರು ಅರ್ಜಿಯನ್ನು ವಾಪಸ್ ಪಡೆದರು.
ಸುಪ್ರೀಂಕೋರ್ಟ್ ನಿರ್ಧಾರದಿಂದ ಜನಾರ್ದನ ರೆಡ್ಡಿಗೆ ತೀವ್ರ ಹಿನ್ನಡೆಯಾಗಿದ್ದು ಬಳ್ಳಾರಿಗೆ ತೆರಳುವ ಅವಕಾಶದಿಂದ ವಂಚಿತರಾಗಿದ್ದಾರೆ. ಬಳ್ಳಾರಿ ಜಿಲ್ಲೆಯಲ್ಲಿ ಪತ್ನಿ ಅರುಣಾ ಸೇರಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡದಂತಹ ಪರಿಸ್ಥಿತಿಯಲ್ಲಿದ್ದಾರೆ. ಅಕ್ರಮ ಗಣಿಗಾರಿಕೆ ಆರೋಪ ಎದುರಿಸುತ್ತಿರುವ ಗಾಲಿ ಜನಾರ್ದನ ರೆಡ್ಡಿ ಬಳ್ಳಾರಿ ಜಿಲ್ಲೆ ಪ್ರವೇಶಿಸದಂತೆ ಷರತ್ತು ವಿಧಿಸಿ ಜಾಮೀನು ನೀಡಿತ್ತು.
ಕಲಬುರಗಿ: ಜಿಲ್ಲೆಯಲ್ಲಿ ವಿಧಾನಸಭಾ ಚುನಾವಣಾ ಅಖಾಡ ರಂಗೇರುತ್ತಿದೆ. ಪಿಎಸ್‍ಐ ನೇಮಕಾತಿ ಪರೀಕ್ಷಾ ಅಕ್ರಮ (PSI recruiment scam) ಪ್ರಕರಣದ ಕಿಂಗ್‍ಪಿನ್ ಆರ್.ಡಿ ಪಾಟೀಲ್ ಚುನಾವಣಾ ಅಖಾಡಕ್ಕೆ ಇಳಿಯಲು ಸಜ್ಜಾಗಿದ್ದಾನೆ.
ಅಫಜಲಪುರ (Afzalpur) ವಿಧಾನಸಭಾ ಮತಕ್ಷೇತ್ರದಿಂದ ಸ್ಪರ್ಧಿಸಲು ಈಗಾಗಲೇ ಎಲ್ಲಾ ತಯಾರಿ ನಡೆಸಿರುವ ಆರ್.ಡಿ ಪಾಟೀಲ್, ಪಕ್ಷೇತರನಾಗಿ ಅಖಾಡಕ್ಕೆ ಇಳಿಯಲು ಮುಂದಾಗಿದ್ದ. ಆದರೆ ಇದೀಗ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ (KRPP) ಸ್ಪರ್ಧಿಸಲು ತಯಾರಿ ನಡೆಸಿದ್ದಾನೆ. ಏ.10 ರಂದು ಅಫಜಲಪುರಕ್ಕೆ ಆಗಮಿಸುತ್ತಿರುವ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಗಾಲಿ ಜನಾರ್ದನ ರೆಡ್ಡಿಯವರ ಸಮ್ಮುಖದಲ್ಲಿ ಆರ್.ಡಿ ಪಾಟೀಲ್ ಸಹೋದರ ಮಹಾಂತೇಶ್ ಪಾಟೀಲ್ ಹಾಗೂ ಬೆಂಬಲಿಗರು ಕೆಆರ್‌ಪಿಪಿಗೆ ಸೇರ್ಪಡೆಯಾಗಲು ಸಿದ್ಧತೆ ನಡೆಸಿದ್ದಾರೆ. ಇದನ್ನೂ ಓದಿ: ಮೀಸಲಾತಿ ತೆಗೆದವರಿಗೆ ಶಾಪ ತಟ್ಟಲಿದೆ: ಹೆಚ್‌ಡಿ ರೇವಣ್ಣ