Tag: KRS Water Level

  • ತಮಿಳುನಾಡಿಗೆ ನೀರು – KRS ಡ್ಯಾಂನಲ್ಲಿ 5 ದಿನಕ್ಕೆ 2 TMC ನೀರು ಖಾಲಿ

    ತಮಿಳುನಾಡಿಗೆ ನೀರು – KRS ಡ್ಯಾಂನಲ್ಲಿ 5 ದಿನಕ್ಕೆ 2 TMC ನೀರು ಖಾಲಿ

    ಮಂಡ್ಯ: ಭಾರೀ ವಿರೋಧದ ನಡುವೆಯೂ ತಮಿಳುನಾಡಿಗೆ (TamilNadu) ನಿರಂತರವಾಗಿ ನೀರು ಹರಿಸುತ್ತಿರುವ ಕಾರಣ ಕೆಆರ್‌ಎಸ್‌ನಲ್ಲಿ (KRS) ದಿನದಿಂದ ದಿನಕ್ಕೆ ನೀರಿನ ಮಟ್ಟ ಕುಸಿಯುತ್ತಿದೆ. ಕಳೆದ 5 ದಿನಗಳಲ್ಲಿ 2 TMC ನೀರು ಖಾಲಿಯಾಗಿದ್ದು, ಜಲಾಶಯದಲ್ಲಿ ಸದ್ಯ 22 ಟಿಎಂಸಿಯಷ್ಟು ಮಾತ್ರ ನೀರು ಉಳಿದಿದೆ.

    ಬುಧವಾರ ಸುಪ್ರೀಂ ಕೋರ್ಟ್ (Supreme Court) ಕಾವೇರಿ ನೀರಿನ ಸಂಬಂಧ ವಿಚಾರಣೆ ನಡೆಯಲಿದೆ. ಅಲ್ಲಿಯವರೆಗೂ ತಮಿಳುನಾಡಿಗೆ ನೀರು ಬಿಡುವುದನ್ನು ಮುಂದುವರಿಸಿದರೆ, ಡ್ಯಾಂನಲ್ಲಿ ಒಟ್ಟು 3 ಟಿಎಂಸಿ ನೀರು ಖಾಲಿಯಾಗಲಿದೆ. ಒಂದು ವೇಳೆ ಇನ್ನೂ 10 ದಿನ ನೀರು ಬಿಟ್ಟರೆ 6 ಟಿಎಂಸಿಯಷ್ಟು ನೀರು ಖಾಲಿಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಭಾರತ ಹಿಂದೂ ರಾಷ್ಟ್ರವಲ್ಲ, ಆಗಿರಲೂ ಇಲ್ಲ: RSS ವಿರುದ್ಧ ಎಸ್‌ಪಿ ನಾಯಕ ಕಿಡಿ

    ಇದರಿಂದ 22.70 ಟಿಎಂಸಿ ನಷ್ಟಿರುವ ನೀರಿನ ಪ್ರಮಾಣ 17 ಟಿಎಂಸಿಗೆ ಕುಸಿಯಲಿದೆ. ಇದರಲ್ಲಿ 5 ಟಿಎಂಸಿ ಡೆಡ್ ಸ್ಟೋರೇಜ್ ತೆಗೆದುಹಾಕಿದ್ರೆ 12 ಟಿಎಂಸಿಯಷ್ಟು ನೀರು ಮಾತ್ರ ಉಳಿಯಲಿದೆ. ಇದರಿಂದ ರೈತರ ಕೃಷಿ ಚಟುವಟಿಕೆಗಳಿಗೆ ನೀರು ಸಿಗುವುದು ಅಸಾಧ್ಯ ಎಂದು ಹೇಳಲಾಗುತ್ತಿದೆ. ಈಗಾಗಲೇ ಬೆಳೆದಿರುವ ಕಬ್ಬು ಬೆಳೆ ಬಣಗುತ್ತಿವೆ. ಇದೇ ಸ್ಥಿತಿ ಮುಂದುವರಿದರೆ ಉಳಿದ ಬೆಳೆಗಳಿಗೂ ಸಮಸ್ಯೆಯಾಗಲಿದೆ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ. ಇದನ್ನೂ ಓದಿ: ಗರ್ಭಿಣಿಗೆ ಥಳಿಸಿ ಬೆತ್ತಲೆ ಮೆರವಣಿಗೆ ಮಾಡಿದ ಪತಿ – ರಾಜಸ್ಥಾನದಲ್ಲಿ ಮಹಿಳೆಯರ ಸುರಕ್ಷತೆ ನಿರ್ಲಕ್ಷ್ಯ ಎಂದು ನಡ್ಡಾ ಟೀಕೆ

    ನಿನ್ನೆ ಕಾವೇರಿ ವಿಚಾರದಲ್ಲಿ ಜಲಸಂಪನ್ಮೂಲ ಸಚಿವರು ನೀಡುತ್ತಿರುವ ಹೇಳಿಕೆಗಳ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಕಳವಳ ವ್ಯಕ್ತಪಡಿಸಿದ್ದಾರೆ. ಮಾತಾಡೋ ಮುಂಚೆ ಅದರ ಫಲಾಫಲಗಳ ಬಗ್ಗೆ ಯೋಚನೆ ಮಾಡ್ಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್‌ಗೆ ಸಲಹೆ ನೀಡಿದ್ದಾರೆ. ಮಂಡ್ಯದಲ್ಲಿ ಅನ್ನದಾತರ ಹೋರಾಟ ಮುಂದುವರೆದಿರುವ ಹೊತ್ತಲ್ಲೇ ಜೆಡಿಎಸ್ ಕೂಡ ಬೀದಿಗಿಳಿದು ಹೋರಾಟ ಮುಂದುವರಿಸಿದೆ. ಮತ್ತೊಂದೆಡೆ ಸಿಎಂ ಸಿದ್ದರಾಮಯ್ಯ, ತಮಿಳುನಾಡು ಕೇಳಿದಷ್ಟು ನೀರು ಬಿಡೋಕೆ ನಮ್ಮ ಬಳಿ ನೀರಿಲ್ಲ. ಪ್ರಧಾನಿ ಭೇಟಿಗೆ ಸಮಯ ಕೇಳಲಾಗಿದೆ ಅಂತ ಹೇಳಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತಮಿಳುನಾಡಿಗೆ ನಿರಂತರ ಕಾವೇರಿ ನೀರು – KRS ನೀರಿನ ಮಟ್ಟ 100 ಅಡಿಗೆ ಕುಸಿತ

    ತಮಿಳುನಾಡಿಗೆ ನಿರಂತರ ಕಾವೇರಿ ನೀರು – KRS ನೀರಿನ ಮಟ್ಟ 100 ಅಡಿಗೆ ಕುಸಿತ

    ಮಂಡ್ಯ/ಬೆಂಗಳೂರು: ರಾಜ್ಯದಲ್ಲಿ ಮಳೆಯ (Rain) ಕೊರತೆಯಾಗಿದೆ. ಆದರೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶವನ್ನ ಕರ್ನಾಟಕ ಚಾಚೂತಪ್ಪದೇ ಪಾಲನೆ ಮಾಡುತ್ತಿದೆ.

    ಕಳೆದ ಮೂರು ದಿನಗಳಿಂದ ನಿತ್ಯ ತಮಿಳುನಾಡಿಗೆ 5,000 ಕ್ಯೂಸೆಕ್ ನೀರು ಹರಿಯುತ್ತಿದೆ. ಪರಿಣಾಮ ಕೆಆರ್‌ಎಸ್ ಜಲಾಶಯದಲ್ಲಿ (KRS Dam) ನೀರಿನ ಮಟ್ಟ ಕ್ಷಣ ಕ್ಷಣಕ್ಕೂ ಕುಸಿಯುತ್ತಿದ್ದು, 100 ಅಡಿಗೆ ಬಂದು ನಿಂತಿದೆ. ಇದು ಹಳೇ ಮೈಸೂರು (Old Mysuru) ಭಾಗದ ಜನತೆಯ ಆತಂಕಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಮಂಡ್ಯಗೆ ಬರಾಕ್‌ ಒಬಾಮಾ, ದಲೈಲಾಮಾ ಭೇಟಿ – ಹೆಲಿಪ್ಯಾಡ್‌, ಮೂಲಸೌಕರ್ಯಕ್ಕೆ ಸಿಎಂಗೆ ಮನವಿ

    ಪರಿಸ್ಥಿತಿ ಹೀಗೆ ಮುಂದುವರೆದಲ್ಲಿ ಬೆಳೆಗಳಿಗೆ ಮಾತ್ರವಲ್ಲ. ಬೆಂಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳ ಮಂದಿಗೆ ಕುಡಿಯುವ ನೀರಿಗೂ ಸಮಸ್ಯೆಯಾಗುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದುಬಂದಿದೆ.  ಇದನ್ನೂ ಓದಿ: ಭಾರತೀಯರು ಎಲ್ಲಿ ಬೇಕಾದ್ರೂ ಜಯಿಸ್ತಾರೆ ಅನ್ನೋದಕ್ಕೆ ನೀವು ಮಾದರಿ – ಪ್ರಜ್ಞಾನಂದ ಕುಟುಂಬ ಭೇಟಿ ಮಾಡಿದ ಮೋದಿ

    KRS ಡ್ಯಾಂ ನ ಇಂದಿನ ನೀರಿನ ಮಟ್ಟ
    ಗರಿಷ್ಠ ಮಟ್ಟ – 124.80 ಅಡಿಗಳು
    ಇಂದಿನ ಮಟ್ಟ – 100.96 ಅಡಿಗಳು
    ಗರಿಷ್ಠ ಸಾಂದ್ರತೆ – 49.452 ಟಿಎಂಸಿ
    ಇಂದಿನ ಸಾಂದ್ರತೆ – 23.571 ಟಿಎಂಸಿ
    ಒಳ ಹರಿವು – 1,610 ಕ್ಯೂಸೆಕ್
    ಹೊರ ಹರಿವು – 7,329 ಕ್ಯೂಸೆಕ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • KRS ಡ್ಯಾಂ ಬರೋಬ್ಬರಿ 100 ಅಡಿ ಭರ್ತಿ – 48 ಗಂಟೆಯಲ್ಲಿ 5 ಟಿಎಂಸಿ ನೀರು ಒಳಹರಿವು

    KRS ಡ್ಯಾಂ ಬರೋಬ್ಬರಿ 100 ಅಡಿ ಭರ್ತಿ – 48 ಗಂಟೆಯಲ್ಲಿ 5 ಟಿಎಂಸಿ ನೀರು ಒಳಹರಿವು

    ಮಂಡ್ಯ: ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಹಳೆ ಮೈಸೂರು ಭಾಗದ ಜೀವನಾಡಿಯಾಗಿರುವ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂಗೆ (KRS Dam) ಹೆಚ್ಚಿನ ಪ್ರಮಾಣದ ನೀರು ಹರಿದುಬರುತ್ತಿದೆ. ಇದರಿಂದ ಕಳೆದ 48 ಗಂಟೆಯಲ್ಲಿ 5 ಟಿಎಂಸಿಯಷ್ಟು ನೀರು ಹರಿದುಬಂದಿದ್ದು, ಬರೋಬ್ಬರಿ 100 ಅಡಿ ನೀರು ಭರ್ತಿಯಾಗಿದೆ.

    ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಡ್ಯಾಂ ಒಳಹರಿವಿನ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಹೀಗಾಗಿ 48 ಗಂಟೆಯ ಅವಧಿಯಲ್ಲಿ ಕೆಆರ್‌ಎಸ್ ಡ್ಯಾಂಗೆ 5 TMC ನೀರು ಹರಿದುಬಂದಿದೆ. ಕೇವಲ 2 ದಿನಗಳ ಅವಧಿಯಲ್ಲಿ 8 ಅಡಿ ಡ್ಯಾಂ ನೀರು ಭರ್ತಿಯಾಗಿದೆ.

    124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಕೆಆರ್‌ಎಸ್ ಜಲಾಶಯ 100 ಅಡಿ ನೀರು ತುಂಬಿದ್ದು, ಡ್ಯಾಂ ಭರ್ತಿಯತ್ತ ಸಾಗಿದೆ. ಇದರಿಂದ ರೈತರು ಹರ್ಷಗೊಂಡಿದ್ದಾರೆ. ಕಳೆದ ಒಂದೂವರೆ ತಿಂಗಳಿನಿಂದ ಮಳೆಯಿಲ್ಲದೇ ಕಂಗಾಲಾಗಿದ್ದ ಸಕ್ಕರೆ ನಾಡಿನ ರೈತರು, ಇದೀಗ ಕೃಷಿ ಚಟುವಟಿಕೆಗಳತ್ತ ಮುಖ ಮಾಡಿದ್ದಾರೆ. ಇದನ್ನೂ ಓದಿ: ಭಾರೀ ಮಳೆಗೆ ಮನೆಗಳ ಗೋಡೆ ಕುಸಿತ – ಪ್ರತ್ಯೇಕ ಘಟನೆಯಲ್ಲಿ 2 ಕಂದಮ್ಮಗಳ ದಾರುಣ ಸಾವು

    ಸದ್ಯ ಡ್ಯಾಂಗೆ 48,025 ಕ್ಯೂಸೆಕ್ ಒಳ ಹರಿವಿದ್ದು, ಇಂದು ಇನ್ನಷ್ಟು ನೀರಿನ ಪ್ರಮಾಣ ಏರಿಕೆಯಾಗುವ ಸಾಧ್ಯತೆಯಿದೆ. 49.452 ಟಿಎಂಸಿ ಗರಿಷ್ಠ ಸಂಗ್ರಹ ಸಾಮರ್ಥ್ಯ ಹೊಂದಿರುವ ಕೆಆರ್‌ಎಸ್ ಕಳೆದ 48 ಗಂಟೆಗಳಲ್ಲಿ 5 ಟಿಎಂಸಿ ನೀರು ಹರಿದುಬಂದಿದ್ದು, ಒಟ್ಟು 22.809 ಟಿಎಂಸಿ ನೀರು ಡ್ಯಾಂನಲ್ಲಿ ಶೇಖರಣೆಯಾಗಿದೆ. ನೀರಿನ ಒಳಹರಿವು ಇದೇ ರೀತಿ ಮುಂದುವರಿದಲ್ಲಿ ಇನ್ನೂ 10 ದಿನಗಳಲ್ಲಿ ಡ್ಯಾಂ ಪೂರ್ಣ ಭರ್ತಿಯಾಗುವ ಸಾಧ್ಯತೆಯಿದೆ.

    ಹಾರಂಗಿಯಿಂದ 30,000 ಕ್ಯೂಸೆಕ್ ನೀರು ಬಿಡುಗಡೆ:
    ಕೊಡಗೂ ಜಿಲ್ಲೆಯಲ್ಲೂ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿಯಲ್ಲಿ (Cauvery River) ನೀರಿನ ಪ್ರಮಾಣ ಗಣನೀಯ ಏರಿಕೆ ಕಂಡಿದೆ. ಹಾರಂಗಿ ಜಲಾಶಯದಿಂದ 30,000 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದ ಕುಶಾಲನಗರ ಸುತ್ತಮುತ್ತಲಿನ ಬಡಾವಣೆಗಳತ್ತ ಹರಿದ ನೀರು ಹರಿದು ಬಂದಿದ್ದು, ಪ್ರವಾಹ ಪರಿಸ್ಥಿತಿ ಎದುರಾಗಿದೆ. ಇದನ್ನೂ ಓದಿ: ವ್ಯಕ್ತಿಯ ತಲೆ ಮೇಲೆ ಒದ್ದು, ಮೂತ್ರ ವಿಸರ್ಜನೆ ಮಾಡಿ ದರ್ಪ – ಉತ್ತರ ಪ್ರದೇಶದಲ್ಲಿ ಮತ್ತೊಂದು ಅಮಾನವೀಯ ಘಟನೆ

     

    ಗರಿಷ್ಠ ಮಟ್ಟ – 124.80 ಅಡಿಗಳು
    ಇಂದಿನ ಮಟ್ಟ – 100 ಅಡಿಗಳು
    ಗರಿಷ್ಠ ಸಾಂದ್ರತೆ – 49.452 ಟಿಎಂಸಿ
    ಇಂದಿನ ಸಾಂದ್ರತೆ – 22.809 ಟಿಎಂಸಿ
    ಒಳ ಹರಿವು – 48,025 ಕ್ಯೂಸೆಕ್
    ಹೊರ ಹರಿವು – 5,449 ಕ್ಯೂಸೆಕ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • KRS ಡ್ಯಾಂ 3 ಅಡಿ ಭರ್ತಿ – 29,552 ಕ್ಯೂಸೆಕ್ ನೀರು ಒಳಹರಿವು

    KRS ಡ್ಯಾಂ 3 ಅಡಿ ಭರ್ತಿ – 29,552 ಕ್ಯೂಸೆಕ್ ನೀರು ಒಳಹರಿವು

    ಮಂಡ್ಯ: ಕೆಲ ದಿನಗಳ ಹಿಂದೆ ಬಣಗುತ್ತಿದ್ದ ಕೆಆರ್‌ಎಸ್ ಡ್ಯಾಂಗೆ (KRS Dam) ಉತ್ತಮ ಮಳೆಯಿಂದಾಗಿ ಹೆಚ್ಚಿನ ಪ್ರಮಾಣದ ನೀರು ಹರಿದುಬರುತ್ತಿದೆ.

    ಕಾವೇರಿ ಜಲಾನಯನ ಪ್ರದೇಶದಲ್ಲಿ (Cauvery Basin) ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ಕಳೆದ 12 ಗಂಟೆಗಳ ಅವಧಿಯಲ್ಲಿ ಕೆಆರ್‌ಎಸ್ ಡ್ಯಾಂ 3 ಅಡಿ ಭರ್ತಿಯಾಗಿದ್ದು, ನೀರಿನ ಮಟ್ಟ 95 ಅಡಿಗೆ ಏರಿಕೆಯಾಗಿದೆ. ಅಲ್ಲದೇ ಕಳೆದ 12 ಗಂಟೆಗಳ ಅವಧಿಯಲ್ಲಿ 2 ಟಿಎಂಸಿ ನೀರು ಹರಿದು ಬಂದಿದ್ದು, 19.139 ಟಿಎಂಸಿಯಷ್ಟು ನೀರು ಶೇಖರಣೆಯಾಗಿದೆ. ಇದನ್ನೂ ಓದಿ: ಕಾವೇರಿ ನೀರಿಗೆ ತಮಿಳುನಾಡು ಬೇಡಿಕೆ – ಯಾವ ತಿಂಗಳು ಎಷ್ಟು ನೀರು ಬಿಡಬೇಕು?

    ಇನ್ನೂ ಡ್ಯಾಂನ ಒಳಹರಿವಿನ ಪ್ರಮಾಣದಲ್ಲೂ ಭಾರೀ ಏರಿಕೆ ಕಂಡಿದೆ. ಸದ್ಯ ಡ್ಯಾಂಗೆ 29,552 ಕ್ಯೂಸೆಕ್ ನೀರು ಒಳಹರಿವಿದ್ದು, ಹೊರಹರಿವು 5,297 ಕ್ಯೂಸೆಕ್ ನಷ್ಟಿದೆ. ಇದನ್ನೂ ಓದಿ: ಗುಡ್‌ನ್ಯೂಸ್‌ – 24 ಗಂಟೆಗಳಲ್ಲಿ KRSನಲ್ಲಿ 2.50 ಅಡಿ ನೀರು ಭರ್ತಿ

    ಕೆಆರ್‌ಎಸ್ ಡ್ಯಾಂ ನೀರಿನ ಮಟ್ಟ

    ಗರಿಷ್ಠ ಮಟ್ಟ – 124.80 ಅಡಿಗಳು
    ಇಂದಿನ ಮಟ್ಟ – 95.00 ಅಡಿಗಳು
    ಗರಿಷ್ಠ ಸಾಂದ್ರತೆ – 49.452 ಟಿಎಂಸಿ
    ಇಂದಿನ ಸಾಂದ್ರತೆ – 19.139 ಟಿಎಂಸಿ
    ಒಳ ಹರಿವು – 29,552 ಕ್ಯೂಸೆಕ್
    ಹೊರ ಹರಿವು – 5,297 ಕ್ಯೂಸೆಕ್

    ಆಲಮಟ್ಟಿ ಜಲಾಶಯಷ

    ಗರಿಷ್ಠ ಮಟ್ಟ- 123.081 ಟಿಎಂಸಿ
    ಇಂದಿನ ಮಟ್ಟ – 62.534 ಟಿಎಂಸಿ
    ಒಳ ಹರಿವು – 1,14,445 ಕ್ಯೂಸೆಕ್
    ಹೊರ ಹರಿವು – 6,761 ಕ್ಯೂಸೆಕ್

    ತುಂಗಭದ್ರಾ ಜಲಾಶಯ

    ಗರಿಷ್ಠ ಮಟ್ಟ – 1,633 ಅಡಿಗಳು
    ಇಂದಿನ ಮಟ್ಟ – 1,602.84 ಅಡಿಗಳು
    ಗರಿಷ್ಠ ಟಿಎಂಸಿ – 105.788 ಟಿಎಂಸಿ
    ಇಂದಿನ ಟಿಎಂಸಿ – 25.417 ಟಿಎಂಸಿ
    ಒಳ ಹರಿವು – 47,294 ಕ್ಯೂಸೆಕ್
    ಹೊರ ಹರಿವು – 213 ಕ್ಯೂಸೆಕ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗುಡ್‌ನ್ಯೂಸ್‌ – 24 ಗಂಟೆಗಳಲ್ಲಿ KRSನಲ್ಲಿ 2.50 ಅಡಿ ನೀರು ಭರ್ತಿ

    ಗುಡ್‌ನ್ಯೂಸ್‌ – 24 ಗಂಟೆಗಳಲ್ಲಿ KRSನಲ್ಲಿ 2.50 ಅಡಿ ನೀರು ಭರ್ತಿ

    ಮಂಡ್ಯ: ಮುಂಗಾರು ಮಳೆಯ (Mungaru Rain) ಕಣ್ಣಾ ಮುಚ್ಚಾಲೆಯಿಂದ ಕಾವೇರಿ ನೀರು ಅವಲಂಬಿತ ಜನರಲ್ಲಿದ್ದ ಆತಂಕ ಈಗ ಸ್ವಲ್ಪ ದೂರವಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ಕೆಆರ್‌ಎಸ್‌ (KRS) ಜಲಾಶಯದಲ್ಲಿ 2.50 ಅಡಿ ನೀರು ಭರ್ತಿಯಾಗಿದೆ.

    ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆಆರ್‌ಎಸ್‌ ಡ್ಯಾಂಗೆ ಎರಡು ದಿನಗಳ ಅವಧಿಯಲ್ಲಿ 3 ಟಿಎಂಸಿಯಷ್ಟು ನೀರು ಶೇಖರಣೆಯಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕೆಆರ್‌ಎಸ್‌ ಜಲಾಶಯಕ್ಕೆ (KRS Dam) ಒಳ ಹರಿವಿನ ಪ್ರಮಾಣವೂ ಹೆಚ್ಚಾಗಿದೆ. ಇದರಿಂದ 24 ಗಂಟೆಯಲ್ಲಿ 2.50 ಅಡಿ ನೀರು ಭರ್ತಿಯಾಗಿದೆ. ಇದನ್ನೂ ಓದಿ: ಗುಡ್‌ನ್ಯೂಸ್‌ – ಪ್ರಸಕ್ತ ವರ್ಷದಲ್ಲಿ KRSಗೆ ದಾಖಲೆ ಒಳ ಹರಿವು

    ಶನಿವಾರ ಬೆಳಗ್ಗೆ 82 ಅಡಿಯಷ್ಟಿದ್ದ ಜಲಾಶಯದ ನೀರಿನ ಮಟ್ಟ ಭಾನುವಾರ (ಜು.9) 84.50 ಅಡಿಗಳಿಗೆ ತಲುಪಿದೆ. ಕೆಆರ್‌ಎಸ್‌ ಜಲಾಶಯದ ಗರಿಷ್ಠ ಮಟ್ಟ 124.80 ಅಡಿ ಹೊಂದಿದೆ. 49.452 ಟಿಎಂಸಿ ಸಾಮರ್ಥ್ಯದ ಡ್ಯಾಂನಲ್ಲಿ ಸದ್ಯ 12.915 ಟಿಎಂಸಿ ನೀರು ಶೇಖರಣೆಯಾಗಿದೆ. ಡ್ಯಾಂನ ಒಳಹರಿವು 14,556 ಕ್ಯೂಸೆಕ್ ಇದ್ದು, 367 ಕ್ಯೂಸೆಕ್ ಹೊರಹರಿವು ಇದೆ. ಇದನ್ನೂ ಓದಿ: ಉತ್ತರಾಖಂಡದಲ್ಲಿ ಮೇಘಸ್ಫೋಟ – ಸಂಕಷ್ಟದಲ್ಲಿ ರಾಜ್ಯದ 83 ಅಮರನಾಥ ಯಾತ್ರಿಕರು

    ಕೆಆರ್‌ಎಸ್ ಇಂದಿನ ನೀರಿನ ಮಟ್ಟ
    ಗರಿಷ್ಠ ಮಟ್ಟ – 124.80 ಅಡಿಗಳು
    ಇಂದಿನ ಮಟ್ಟ – 84.50 ಅಡಿಗಳು
    ಗರಿಷ್ಠ ಸಾಮರ್ಥ್ಯ – 49.452 ಟಿಎಂಸಿ
    ಇಂದಿನ ಸಾಮರ್ಥ್ಯ – 12.915 ಟಿಎಂಸಿ
    ಒಳ ಹರಿವು – 14,556 ಕ್ಯೂಸೆಕ್
    ಹೊರ ಹರಿವು – 367 ಕ್ಯೂಸೆಕ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗುಡ್‌ನ್ಯೂಸ್‌ – ಪ್ರಸಕ್ತ ವರ್ಷದಲ್ಲಿ KRSಗೆ ದಾಖಲೆ ಒಳ ಹರಿವು

    ಗುಡ್‌ನ್ಯೂಸ್‌ – ಪ್ರಸಕ್ತ ವರ್ಷದಲ್ಲಿ KRSಗೆ ದಾಖಲೆ ಒಳ ಹರಿವು

    ಮಂಡ್ಯ: ಮುಂಗಾರು ಮಳೆಯ (Mungaru Rain) ಕಣ್ಣಾ ಮುಚ್ಚಾಲೆಯಿಂದ ಕಾವೇರಿ ನೀರು ಅವಲಂಬಿತ ಜನರಲ್ಲಿದ್ದ ಆತಂಕ ಈಗ ಸ್ವಲ್ಪ ದೂರವಾಗಿದೆ.

    ಪ್ರಸಕ್ತ ವರ್ಷದಲ್ಲಿ ಕೆಆರ್‌ಎಸ್‌ ಜಲಾಶಯಕ್ಕೆ (KRS Dam) ದಾಖಲೆಯ ಒಳಹರಿವು ಬಂದಿರುವ ಹಿನ್ನೆಲೆ ಒಂದೇ ದಿನದಲ್ಲಿ ಜಲಾಶಯದಲ್ಲಿ ಒಂದು TMC ನೀರು ಹೆಚ್ಚಳವಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಕಳೆದ ಮೂರು ದಿನ ಉತ್ತಮ ಮಳೆಯಾದ ಹಿನ್ನೆಲೆ ಕೆಆರ್‌ಎಸ್‌ ಜಲಾಶಯಕ್ಕೆ 13,449 ಕ್ಯೂಸೆಕ್ ನೀರು ಒಳಹರಿವು ಬಂದಿದೆ. ಇದನ್ನೂ ಓದಿ: ಕಾಂಗ್ರೆಸ್ Vs ಹೆಚ್‌ಡಿಕೆ ನಡುವೆ ಪೆನ್‌ಡ್ರೈವ್‌ ಕದನ – ಸೋಮವಾರ ಸ್ಫೋಟವಾಗುತ್ತಾ ರಹಸ್ಯ?

    2023ನೇ ಸಾಲಿನಲ್ಲಿ ಇದೇ ಅಧಿಕ ಪ್ರಮಾಣದ ಒಳಹರಿವು ಆಗಿದೆ. ಡ್ಯಾಂ ಬರಿದಾಗುವ ಸಮಯದಲ್ಲಿ ಈ ಪ್ರಮಾಣದ ಒಳಹರಿವು ಕಾವೇರಿ ನೀರು ಅವಲಂಬಿತ ಜನರಲ್ಲಿ ಮಂದಹಾಸ ತರಿಸಿದೆ. 124.80 ಅಡಿಗಳ ಡ್ಯಾಂ 82.00 ಅಡಿಯಲ್ಲಿ ನೀರಿದೆ. 49.452 ಟಿಎಂಸಿ ಗರಿಷ್ಠ ಸಾಂದ್ರತೆ ಡ್ಯಾಂನಲ್ಲಿ 11.695 ಟಿಎಂಸಿ ನೀರು ಶೇಖರಣೆಯಾಗಿದೆ. ಡ್ಯಾಂನ ಒಳ ಹರಿವಿನ ಪ್ರಮಾಣ 13,499 ಕ್ಯೂಸೆಕ್ ಇದ್ದು, ಡ್ಯಾಂ ಹೊರಹರಿವು 353 ಕ್ಯೂಸೆಕ್ ಇದೆ. ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಹಳ್ಳಿ ಹುಡ್ಗನಂತೆ ಭತ್ತದ ಗದ್ದೆಯಲ್ಲಿ ನಾಟಿ ಮಾಡಿದ ರಾಹುಲ್‌ ಗಾಂಧಿ!

    ಕೆಆರ್‌ಎಸ್‌ ಜಲಾಶಯದಲ್ಲಿ ನೀರಿನ ಕೊರತೆಯಿಂದಾಗಿ ಬೆಂಗಳೂರು (Bengaluru) ಹಾಗೂ ಮೈಸೂರಿಗೆ (Mysuru) ಕುಡಿಯುವ ನೀರಿನ ಸಮಸ್ಯೆಯಾಗುವ ಆತಂಕ ಶುರುವಾಗಿತ್ತು. ಇತ್ತೀಚೆಗೆ ಕೊಡಗಿನಲ್ಲಿ ಮಳೆಯಾದ ಕಾರಣ, ಪ್ರಸಕ್ತ ವರ್ಷದಲ್ಲಿ ಕೆಆರ್‌ಎಸ್‌ ಡ್ಯಾಂಗೆ ಮೊದಲ ಬಾರಿಗೆ ಸಾವಿರ ಕ್ಯೂಸೆಕ್‌ ನೀರು ಬಿಡಲಾಗಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]