Tag: KS Eesarappa

  • ಲಾಟರಿ ಹೊಡೆದು ಸಿಎಂ ಆಗಿದ್ದೀರಿ, ಜನರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ: ಕೆ.ಎಸ್.ಈಶ್ವರಪ್ಪ

    ಲಾಟರಿ ಹೊಡೆದು ಸಿಎಂ ಆಗಿದ್ದೀರಿ, ಜನರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ: ಕೆ.ಎಸ್.ಈಶ್ವರಪ್ಪ

    ಶಿವಮೊಗ್ಗ: ಪ್ರಣಾಳಿಕೆಯಲ್ಲಿ 53 ಸಾವಿರ ಕೋಟಿ ರೂ. ಸಾಲ ಮನ್ನಾ ಮಾಡುತ್ತೇನೆ ಎಂದಿದ್ದ ಕುಮಾರಸ್ವಾಮಿ ಇಂದು ಮಾತು ಬದಲಿಸಿದ್ದಾರೆ ಎಂದು ಬಿಜೆಪಿ ಶಾಸಕ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

    ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಣಾಳಿಕೆಯಲ್ಲಿ 53 ಸಾವಿರ ಕೋಟಿ ರೂ. ಸಾಲ ಮನ್ನಾ ಮಾಡುತ್ತೇವೆ ಎಂದಿದ್ದ ಎಚ್‍ಡಿಕೆ ಈಗ ಪೂರ್ಣ ಪ್ರಮಾಣದ ಬಹುಮತ ಬಂದಲ್ಲಿ ಮಾತ್ರ ಮನ್ನಾ ಮಾಡುತ್ತೇನೆ ಎನ್ನುತ್ತಿದ್ದಾರೆ. ಇದು ರಾಜ್ಯದ ರೈತರಿಗೆ ಅಘಾತಕಾರಿ ಸುದ್ದಿ ಎಂದಿದ್ದಾರೆ.

    ರೈತರಿಗೆ ದ್ರೋಹ ಮಾಡಿದರೆ ರಾಜ್ಯಕ್ಕೇ ದ್ರೋಹ ಮಾಡಿದಂತೆ ಎಂದಿದ್ದ ಕುಮಾರಸ್ವಾಮಿ ಈ ಹೇಳಿಕೆಯನ್ನು ವಾಪಸ್ ಪಡೆಯಬೇಕು. ರೈತರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ. ತಕ್ಷಣ ಈ ಸಾಲ ಮನ್ನಾ ಮಾಡುವ ಹೇಳಿಕೆ ನೀಡಬೇಕು. ಇಲ್ಲವಾದಲ್ಲಿ ರೈತರ ಹೆಸರನ್ನು ಪ್ರಚಾರಕ್ಕೆ ಬಳಸಿಕೊಂಡಿದ್ದಾರೆ ಎಂದೇ ಭಾವಿಸಬೇಕಾಗುತ್ತದೆ ಎಂದು ಆರೋಪಿಸಿದರು.

    ಇಡೀ ಚುನಾವಣಾ ಪ್ರಚಾರ, ಪ್ರಣಾಳಿಕೆ ಬೋಗಸ್ ಎಂದು ಒಪ್ಪಿಕೊಳ್ಳಿ. ಲಾಟರಿ ಹೊಡೆದು ಸಿಎಂ ಆಗಿದ್ದೀರಿ. ಜನರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ. ಈ ಮೈತ್ರಿ ಅಪವಿತ್ರ. ಇಂತಹ ಸರ್ಕಾರ ಆರು ತಿಂಗಳಲ್ಲಿ ಬೀಳಲಿದೆ. ಯಾವುದೇ ಕ್ಷಣದಲ್ಲಿ ರಾಜ್ಯದಲ್ಲಿ ಮತ್ತೆ ಚುನಾವಣಾ ಬರಲಿದೆ ಎಂದು ಅವರು ಭವಿಷ್ಯ ನುಡಿದರು.

    ಹೆಚ್‍ಡಿಕೆ ಕಳೆದ ಬಾರಿ ಬಿಜೆಪಿ ಬೆಂಬಲ ಪಡೆದೇ ಸಿಎಂ ಆಗಿದ್ದಾರೆ. ಆಗ ಬಿಜೆಪಿ ಕೋಮುವಾದಿ ಎಂದು ಇವರಿಗೆ ತಿಳಿದಿರಲಿಲ್ವೇ ಎಂದು ಪ್ರಶ್ನಿಸಿದ್ದಾರೆ. ಸಾಲ ಮನ್ನಾ ಭರವಸೆ ನೀಡಿ ಈಗ ಸಾಲ ಮನ್ನಾ ಮಾಡೊಲ್ಲ ಎಂದು ಹೆಚ್‍ಡಿಕೆ ಹೇಳುತ್ತಿದ್ದಾರೆ. ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಬರುವ ರಾಷ್ಟ್ರೀಯ ನಾಯಕರು ಸ್ಪಷ್ಟಪಡಿಸಬೇಕು ಎಂದು ಅವರು ಆಗ್ರಹಿಸಿದರು.

  • ಇಂದು ಸಂಜೆಯೊಳಗೆ ಸಿಎಂ ಸಿದ್ದರಾಮಯ್ಯ ಕೊಲೆ ಆಗಬಹುದು: ಕೆ.ಎಸ್.ಈಶ್ವರಪ್ಪ

    ಇಂದು ಸಂಜೆಯೊಳಗೆ ಸಿಎಂ ಸಿದ್ದರಾಮಯ್ಯ ಕೊಲೆ ಆಗಬಹುದು: ಕೆ.ಎಸ್.ಈಶ್ವರಪ್ಪ

    ವಿಜಯಪುರ: ಇಂದು ಸಂಜೆಯೊಳಗೆ ಸಿಎಂ ಸಿದ್ದರಾಮಯ್ಯ ಅವರನ್ನು ಕೊಲೆ ಮಾಡುತ್ತಾರೆ ಎನ್ನುವ ಭಯ ನನಗೆ ಕಾಡುತ್ತಿದೆ ಎಂದು ಪರಿಷತ್ ವಿಪಕ್ಷ ನಾಯಕ ಕೆಎಸ್ ಈಶ್ವರಪ್ಪ ಆತಂಕ ವ್ಯಕ್ತಪಡಿಸಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಲೋಕಾಯುಕ್ತರ ಮೇಲೆ ಚಾಕು ಇರಿತ ಆಗಿದೆ. ಹೀಗಾಗಿ ಇಂದು ಸಂಜೆಯೊಳಗೆ ಸಿದ್ದರಾಮಯ್ಯ ಅವರಿಗೆ ಚಾಕು ಹಾಕಬಹುದು. ಇಲ್ಲವೇ ಕೊಲೆ ಮಾಡಬಹುದು ಎನ್ನುವ ಭಯ ನನ್ನನ್ನು ಕಾಡುತ್ತಿದೆ ಎಂದು ಹೇಳಿದ್ದಾರೆ.

    ಕೊಲೆಗಡುಕರಿಗೆ ಕರ್ನಾಟಕ ಒಂದು ಸ್ವರ್ಗ ಆಗಿದೆ. ಯಾರು ಏನು ಮಾಡಲಿಕ್ಕೆ ಆಗುವುದಿಲ್ಲ. ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಆಗುತ್ತಿಲ್ಲ. ಸಿಎಂ ಹಾಗೂ ಗೃಹ ಮಂತ್ರಿಗಳ ಜೀವ ಉಳಿಸುವುದು ಕಷ್ಟ ಎಂದು ಹೇಳುವ ಮೂಲಕ ವಾಗ್ದಾಳಿ ನಡೆಸಿದರು.

    ಗೃಹ ಮಂತ್ರಿ ಮತ್ತು ಮುಖ್ಯಮಂತ್ರಿ ನಮ್ಮ ಜೀವ ಉಳಿಸಿ ಇಂತಹ ಕೊಲೆಕಡುಕರರನ್ನು ನಿಯಂತ್ರಿಸಲು ನಮ್ಮ ಕೈಯಲ್ಲಿ ಆಗುವುದಿಲ್ಲ ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಬೇಕೆಂದು ಅವರು ಸಲಹೆ ನೀಡಿದರು.