Tag: kseshwarappa

  • ರಾಜ್ಯ ಸರ್ಕಾರ ಕಾನೂನು ಉಲ್ಲಂಘನೆ ಮಾಡುವವರ ಪರವಾಗಿದೆ: ಈಶ್ವರಪ್ಪ ವಾಗ್ದಾಳಿ

    ರಾಜ್ಯ ಸರ್ಕಾರ ಕಾನೂನು ಉಲ್ಲಂಘನೆ ಮಾಡುವವರ ಪರವಾಗಿದೆ: ಈಶ್ವರಪ್ಪ ವಾಗ್ದಾಳಿ

    ಮೈಸೂರು: ಎಸ್‍ಡಿಪಿಐ ನಾಯಕ ಅಬ್ದುಲ್ ಮಸೀಜ್ ಕೋರ್ಟ್ ವಿರುದ್ಧ ಮಾತಾಡಿದರೂ ಬಂಧನವಾಗಿಲ್ಲ. ಕಾಂಗ್ರೆಸ್ (Congress) ಸರ್ಕಾರ ಕಾನೂನು ಉಲ್ಲಂಘನೆ ಮಾಡುವವರ ಪರವಾಗಿದೆ. ಈ ಮೂಲಕ ಮುಸಲ್ಮಾನರ ಪರವಾಗಿದೆ ಎಂದು ತೋರಿಸಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ (K.S Eshwarappa) ವಾಗ್ದಾಳಿ ನಡೆಸಿದ್ದಾರೆ.

    ಮೈಸೂರಿನಲ್ಲಿ (Mysuru) ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಎಸ್‍ಡಿಪಿಐನ ಅಬ್ದುಲ್ ಮಜೀದ್ ಅವರ ಜ್ಞಾನವ್ಯಾಪಿ ಮಸೀದಿಗಾಗಿ ಬಲಿದಾನಕ್ಕೆ ಸಿದ್ಧ ಎಂಬ ಹೇಳಿಕೆ ವಿಚಾರವಾಗಿ ಅವರು ಪ್ರತಿಕ್ರಿಯಿಸಿದ್ದಾರೆ. ಈ ವೇಳೆ, ರಾಜ್ಯದಲ್ಲಿ ಸರ್ಕಾರ ಬದುಕಿಲ್ಲ. ಎಸ್‍ಡಿಪಿಐ ನಾಯಕನನ್ನು ಅರೆಸ್ಟ್ ಮಾಡಬೇಕಿತ್ತು. ಬಂಧಿಸದೆ ಕಾನೂನು ಉಲ್ಲಂಘನೆ ಮಾಡುವ ವ್ಯಕ್ತಿಗಳಿಗೆ ಸರ್ಕಾರ ಬೆಂಬಲ ನೀಡುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಅಯೋಧ್ಯೆಯಲ್ಲಿ ಸುತ್ತೂರು ಶಾಖಾ ಮಠ ಆರಂಭಕ್ಕೆ ಚಿಂತನೆ: ಅಮಿತ್ ಶಾ

    ಡಿಸಿಎಂ ತಮ್ಮ ಡಿ.ಕೆ.ಸುರೇಶ್ ಸಂಸದ ಎನ್ನುವ ಅಹಂಕಾರದಿಂದ ದಕ್ಷಿಣ ಭಾರತವನ್ನು ಬೇರೆ ರಾಷ್ಟ್ರ ಕೇಳಬೇಕಾಗುತ್ತೆ ಎಂದಿದ್ದಾರೆ. ಈ ಹೇಳಿಕೆ ಕೊಟ್ಟ ಕೂಡಲೇ ಅವರನ್ನ ಬಂಧಿಸಬೇಕಿತ್ತು. ಅವರ ಹೇಳಿಕೆಯನ್ನು ಕಾಂಗ್ರೆಸ್‍ನ ನಾಯಕರೇ ತಿರಸ್ಕಾರ ಮಾಡಿದ್ದಾರೆ. ಡಿಸಿಎಂ ಎನ್ನುವ ಅಹಂಕಾರದಲ್ಲಿ ಡಿಕೆಶಿ ನನಗೆ ಸೆಟಲ್‍ಮೆಂಟ್ ಮಾಡ್ತಾರಂತೆ. ಅರ್ಧ ಸೆಟಲ್‍ಮೆಂಟ್ ಮಾಡ್ತಿವಿ, ಇನ್ನೂ ಅರ್ಧ ಇದೆ ಎಂದಿದ್ದಾರೆ. ಈತ ಒಬ್ಬ ಗೂಂಡಾ ಉಪಮುಖ್ಯಮಂತ್ರಿ. ಇಂತಹ ಗೊಡ್ಡು ಬೆದರಿಕೆಗೆ ನಾನು ಬಗ್ಗುವುದಿಲ್ಲ. ಅವರ ಅರ್ಧ ಸೆಟಲ್‍ಮೆಂಟ್ ಇಡಿ ಮಾಡಿದೆ. ತಿಹಾರ್ ಜೈಲಿನಲ್ಲಿ ಸೆಟಲ್‍ಮೆಂಟ್ ತೆಗೆದುಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

    ಇನ್ನೂ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ, ನಾನು ನೋಟಿಸ್, ಎಫ್‍ಐಆರ್‍ಗೆ ಹೆದರಲ್ಲ, ನಾನು ಕೋರ್ಟ್‍ಗೂ ಹೋಗಿ ಬಂದಿದ್ದೇನೆ. ನನಗೆ ಒಂದು ರೂ. ದಂಡವೂ ಬಿದ್ದಿಲ್ಲ. ಸಿಎಂಗೆ ಕೋರ್ಟ್ 10 ಸಾವಿರ ರೂ. ದಂಡ ವಿಧಿಸಿದೆ. ಡಿಸಿಎಂ ಜೈಲಿಗೆ ಹೋಗಿ ಬಂದಿದ್ದಾರೆ ಕುಟುಕಿದ್ದಾರೆ.

    ಪುತ್ರನಿಗೆ ಟಿಕೆಟ್ ವಿಚಾರವಾಗಿ, ಲೋಕಸಭಾ ಚುನಾವಣೆಯಲ್ಲಿ ವೈಯಕ್ತಿಕ ಪ್ರಶ್ನೆ ಬರುವುದಿಲ್ಲ. ರಾಜ್ಯದಲ್ಲಿ ಹೆಚ್ಚು ಸ್ಥಾನ ಗೆಲ್ಲುವ ಕುರಿತು ಚರ್ಚೆ ನಡೆಯಲಿದೆ. ಅಮಿತ್ ಶಾ ಅವರೇ ಇಲ್ಲಿ ಬಂದು ಸಭೆ ಮಾಡ್ತಿದ್ದಾರೆ. 28 ಕ್ಷೇತ್ರವನ್ನು ಗೆದ್ದೇ ಗೆಲ್ಲುತ್ತೇವೆ. ನನ್ನ ಮಗ ಓಡಾಟ ಮಾಡ್ತಿದ್ದಾನೆ. ಟಿಕೆಟ್ ಸಿಕ್ಕರೆ ಸಂತೋಷ, ಗೆಲ್ಲಿಸಿಕೊಂಡು ಬರ್ತೇವೆ. ಟಿಕೆಟ್ ಕೊಡುವ ವಿಶ್ವಾಸವಿದೆ ಎಂದಿದ್ದಾರೆ. ಇದನ್ನೂ ಓದಿ: ಡಿಕೆಶಿ ಮತ್ತೆ ತಿಹಾರ್ ಜೈಲು ಸೇರುತ್ತಾರೆ: ಈಶ್ವರಪ್ಪ ಭವಿಷ್ಯ

  • ಜನರ ದುಡ್ಡಲ್ಲಿ ಕಾಂಗ್ರೆಸ್ ದೆಹಲಿಯಲ್ಲಿ ಲೋಕಸಭಾ ಚುನಾವಣೆ ಪ್ರಚಾರ ಆರಂಭಿಸಿದೆ: ಈಶ್ವರಪ್ಪ ವ್ಯಂಗ್ಯ

    ಜನರ ದುಡ್ಡಲ್ಲಿ ಕಾಂಗ್ರೆಸ್ ದೆಹಲಿಯಲ್ಲಿ ಲೋಕಸಭಾ ಚುನಾವಣೆ ಪ್ರಚಾರ ಆರಂಭಿಸಿದೆ: ಈಶ್ವರಪ್ಪ ವ್ಯಂಗ್ಯ

    ಶಿವಮೊಗ್ಗ: ಜನರ ದುಡ್ಡಲ್ಲಿ ದೆಹಲಿಯ ಜಂತರ್ ಮಂತರ್‌ನಲ್ಲಿ ಲೋಕಸಭಾ ಚುನಾವಣೆಯ ಮೊದಲ ಪ್ರಚಾರವನ್ನು ಕಾಂಗ್ರೆಸ್ (Congress) ಆರಂಭ ಮಾಡಿದೆ ಎಂದು ಹೇಳುವ ಮೂಲಕ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ (KS Eshwarappa) ರಾಜ್ಯ ಸರ್ಕಾರದ ಪ್ರತಿಭಟನೆಯನ್ನು ವ್ಯಂಗ್ಯವಾಡಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ದುಡ್ಡಲ್ಲಿ ಪ್ರಚಾರ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಲೋಕಸಭಾ ಚುನಾವಣೆ ಪ್ರಚಾರ ಆರಂಭಿಸಿದ್ದೇವೆ ಎಂದು ತೋರಿಸಿದ್ದಾರೆ. ಏರ್ ಟಿಕೆಟ್, ಊಟ ತಿಂಡಿ, ರೂಮ್ ಬಾಡಿಗೆಗೆ ಜನರ ತೆರಿಗೆ ದುಡ್ಡು ಬಳಸಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಅಮ್ಮಾ ನಿರ್ಮಲಾ, ನಮ್ಮ ದುಡ್ಡು ನೀಡಮ್ಮ: ಸಿದ್ದರಾಮಯ್ಯ

    ಪ್ರತ್ಯೇಕ ರಾಷ್ಟ್ರ ಕೇಳಬೇಕಾಗುತ್ತದೆ ಎಂದು ವಿನಯ್ ಕುಲಕರ್ಣಿ ವಾದ ಮಂಡಿಸಿದ್ದಾರೆ. ಇದರ ಪೀಠಿಕೆಯನ್ನು ಡಿ.ಕೆ ಸುರೇಶ್ ಹಾಕಿದ್ದರು. ಅಧಿಕಾರಕ್ಕಾಗಿ ದೇಶವನ್ನು ಹಿಂದೂಸ್ತಾನ ಹಾಗೂ ಪಾಕಿಸ್ತಾನ ಎಂದು ಒಡೆದಿದ್ದೀರಿ. ಈ ಬಗ್ಗೆ ನಾನು ಖರ್ಗೆ ಅವರನ್ನು ಪ್ರಶ್ನೆ ಮಾಡುತ್ತೇನೆ. ರಾಜ್ಯಸಭೆಯಲ್ಲಿ ಅಖಂಡ ಭಾರತವನ್ನು ಒಡೆಯಲು ಬಿಡಲ್ಲ ಎಂದು ನೀವು ಹೇಳಿದ್ದೀರಿ. ನಿಮ್ಮ ಮಾತಿಗೆ ಸ್ವಲ್ಪವೂ ಕಿಮ್ಮತ್ತಿಲ್ಲ. ನೀವು ಹೇಳಿದರೂ ನಿಮ್ಮ ಆ ರಾಷ್ಟ್ರ ದ್ರೋಹಿಗಳು ಮಾತನಾಡ್ತಾರೆ. ಡಿ.ಕೆ ಸುರೇಶ್ ಹಾಗೂ ವಿನಯ್ ಕುಲಕರ್ಣಿಯವರನ್ನು ಅಮಾನತು ಮಾಡಬೇಕು. ಇಲ್ಲದಿದ್ದರೆ ಖರ್ಗೆಯವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಅವರು ಕಿಡಿಕಾರಿದರು.

    ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮುಖಕ್ಕೆ ಹೊಡೆದಂತೆ ಕಾಂಗ್ರೆಸ್ಸಿಗರಿಗೆ ಉತ್ತರ ಕೊಟ್ಟಿದ್ದಾರೆ. ಡಿಕೆಶಿ ದೆಹಲಿಗೆ ಬಂದಾಗ ತುಂಬ ಸ್ಪಷ್ಟವಾಗಿ ಉತ್ತರ ಕೊಟ್ಟಿದ್ದೇನೆ. ಅನುದಾನ ನಿಗದಿ ಮಾಡುವುದು ಕೇಂದ್ರ ಹಣಕಾಸು ಆಯೋಗ. ಇದರಲ್ಲಿ ನಮಗೆ ಅಧಿಕಾರ ಇಲ್ಲ ಎಂದು ಅವರು ತಿಳಿಸಿದ್ದರು. ಕಾಂಗ್ರೆಸ್‍ನ ನಿಯೋಗ ಹೋಗಿರುವುದು ಪ್ರಧಾನಿ ಬಳಿಗಲ್ಲ, ಜಂತರ್ ಮಂತರ್‍ನಲ್ಲಿ ಪ್ರದರ್ಶನಕ್ಕೆ ಎಂದು ಅವರು ವ್ಯಂಗ್ಯವಾಡಿದರು. ಇದನ್ನೂ ಓದಿ: ಗ್ಯಾರಂಟಿಯನ್ನು ಪೂರ್ಣ ಜಾರಿ ಮಾಡದೇ ಕೇಂದ್ರದ ಮೇಲೆ ಗೂಬೆ: ವಿಜಯೇಂದ್ರ ಕಿಡಿ

  • ಮಠಕ್ಕೆ ಅನುದಾನ ಬೇಕಿದ್ರೆ ಶೇ.30 ಕಮಿಷನ್ ಕೊಡಿ ಅಂತಾರೆ ಅಧಿಕಾರಿಗಳು: ದಿಂಗಾಲೇಶ್ವರ ಸ್ವಾಮೀಜಿ

    ಮಠಕ್ಕೆ ಅನುದಾನ ಬೇಕಿದ್ರೆ ಶೇ.30 ಕಮಿಷನ್ ಕೊಡಿ ಅಂತಾರೆ ಅಧಿಕಾರಿಗಳು: ದಿಂಗಾಲೇಶ್ವರ ಸ್ವಾಮೀಜಿ

    ಬಾಗಲಕೋಟೆ: ಸದ್ಯ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಕೆ.ಎಸ್.ಈಶ್ವರಪ್ಪ ಅವರ ಪರ್ಸೆಂಟೇಜ್ ಪ್ರಕರಣ ಕಾವು ಪಡೆದುಕೊಂಡಿರುವ ಹೊತ್ತಿನಲ್ಲೇ ಶಿರಹಟ್ಟಿ ಜಗದ್ಗುರು ದಿಂಗಾಲೇಶ್ವರ ಸ್ವಾಮೀಜಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಗುಡುಗಿದ್ದಾರೆ.

    DINGALESWARA

    ಈ ಕುರಿತು ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿರುವ ಅವರು, ಈಚೆಗೆ ಸರ್ಕಾರದ ಯೋಜನೆಗಳು ಸಮರ್ಪಕವಾಗಿ ಕೆಲಸ ಮಾಡುವುದಿಲ್ಲ. ಅವು ಏನಾಗ್ತಿವೆ ಎಂದು ಎಲ್ಲರಿಗೂ ಗೊತ್ತಿದೆ. ಒಬ್ಬ ಸ್ವಾಮೀಜಿಗೆ ಅನುದಾನ ಬಿಡುಗಡೆ ಮಾಡಬೇಕಿದ್ರೆ 30 ಪರ್ಸೆಂಟ್ ಕಮಿಷನ್ ಕೊಡಬೇಕು. ಆಗಲೇ ಮಠಗಳಳಲ್ಲಿ ಕಟ್ಟಡ ಕೆಲಸ ಶುರುವಾಗುತ್ತದೆ. ನೀವು ಇಷ್ಟು ದುಡ್ಡು ಕಟ್ಟದಿದ್ರೆ ನಿಮ್ಮ ಕೆಲಸ ಆಗಲ್ಲ ಎಂದು ಅಧಿಕಾರಿಗಳೇ ಹೇಳುವ ಪರಿಸ್ಥಿತಿ ಬಂದಿದೆ ಅಂದರೆ, ಭ್ರಷ್ಟಾಚಾರ ಎಲ್ಲಿಗೆ ಬಂದಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಇಬ್ಬರು, ಮೂವರು ಸಚಿವರನ್ನು ಬಿಟ್ಟು ಎಲ್ರೂ 40% ಕಮಿಷನ್ ಪಡೆಯುತ್ತಿದ್ದಾರೆ: ಎಂ.ಬಿ ಪಾಟೀಲ್

    prahlad joshi

    ಈಗ ಕಿಡಿಗೇಡಿಗಳ ಸರ್ಕಾರವೇ ಬರುತ್ತಿದೆ. ಉತ್ತರ ಕರ್ನಾಟಕಕ್ಕಾಗಿ ಕಾಕಾಗಳು (ಖಾದಿ -ಖಾವಿ) ಒಂದಾಗಿವೆ. ಆದರೆ, ಎಂದಿಗೂ ನಮ್ಮ ಹಕ್ಕು, ಸ್ವತ್ತನ್ನು ಕಳೆದುಕೊಳ್ಳಬಾರದು, ಅನ್ನೋದು ಎಸ್.ಆರ್.ಪಾಟೀಲ್ ಅವ್ರ ತಂಡದ ಮಾತಾಗಿದೆ. ಇನ್ನೇನು ಕೃಷ್ಣಾ ಮಹದಾಯಿ, ನವಲಿ ಯೋಜನೆಗಳು ಕಾರ್ಯರೂಪಕ್ಕೆ ಬಂದ್ರೆ ನಿಮ್ಮ ಭಾಗದ ಜನರ ಬಾಳು ಹಸನಾಗುತ್ತದೆ. ಒಂದು ವೇಳೆ ನಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸದಿದ್ದರೆ ಜನರೇ ತಕ್ಕಪಾಠ ಕಲಿಸುತ್ತಾರೆ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಹೆಣ್ಣುಮಕ್ಕಳು ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು: ಡಾ.ನಾರಾಯಣ ಗೌಡ

    SR PATIL

    ಕೆಲಸ ಮಾಡದಿದ್ರೆ ಏನ್ ಉಪಯೋಗ?: ಈ ಭಾಗದ ಮಂತ್ರಿಯೊಬ್ಬ ಸದಾ ಪ್ರಧಾನಮಂತ್ರಿ ಅವರೊಂದಿಗೆ ಇರ್ತಾನೆ. ಆದರೆ, ಕೇಂದ್ರದಿಂದ ರಾಜ್ಯಕ್ಕೆ ಏನೂ ಕೊಡುಗೆ ನೀಡ್ತಿಲ್ಲ. ಪ್ರಧಾನಿ ಹಿಂದೆ ಓಡಾಡೋದೆ ದೊಡ್ಡ ಕೆಲಸ ಅನ್ಕೊಂಡಿದ್ದಾನೆ. ನೀನು ಪಿಎಂ ಜೊತೆ ಅಡ್ಡಾಡಿದ್ರೂ, ಈ ಭಾಗಕ್ಕೆ ಏನು ಮಾಡದೇ ಇದ್ರೆ, ಪ್ರಯೋಜನ ಇಲ್ಲ ಎಂದು ಪರೋಕ್ಷವಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ವಿರುದ್ಧ ಏಕವಚನದಲ್ಲೇ ಸ್ವಾಮೀಜಿ ಲೇವಡಿ ಮಾಡಿದರು.

    ದೆಹಲಿ ಸರ್ಕಾರಕ್ಕೆ ಟಾಂಗ್: ನಮ್ಮ ಉತ್ತರ ಕರ್ನಾಟಕದವರು ಸ್ವಲ್ಪ ಜಾಗೃತರಾಗಿ ಸರ್ಕಾರಕ್ಕೆ ಬಿಸಿ ಮುಟ್ಟಿಸಬೇಕು. ಕೆಲ ಭಾಗಗಳಲ್ಲಿ ಸ್ವಾಮೀಜಿಗಳಲ್ಲೇ ಇರುವ ತಾರತಮ್ಯ ನಿಲ್ಲಬೇಕು. ಈ ಹೋರಾಟ ಇಲ್ಲಿಗೆ ನಿಲ್ಲೋದು ಬೇಡ. ಇದು ಮುಂದುವರಿಯಬೇಕು. ಎಲ್ಲಿಯ ತನಕ ಈ ಭಾಗ ಅಭಿವೃದ್ಧಿ ಆಗುವವರೆಗೆ ನಿಮ್ಮ ಹೋರಾಟ ನಿಲ್ಲಬಾರದು. ನಾವೆಲ್ಲ ನಿಮ್ಮ ಜೊತೆಗಿರುತ್ತೇವೆ ಎಂದು ಹೋರಾಟಕ್ಕೆ ಬೆಂಬಲ ಘೋಷಿಸಿದರು.

  • ಈಶ್ವರಪ್ಪನನ್ನು ಸಂಪುಟದಿಂದ ವಜಾಗೊಳಿಸಿ, ಕೂಡಲೇ ಬಂಧಿಸಬೇಕು: ಸಿದ್ದರಾಮಯ್ಯ

    ಈಶ್ವರಪ್ಪನನ್ನು ಸಂಪುಟದಿಂದ ವಜಾಗೊಳಿಸಿ, ಕೂಡಲೇ ಬಂಧಿಸಬೇಕು: ಸಿದ್ದರಾಮಯ್ಯ

    ಬೆಂಗಳೂರು: ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಈಶ್ವರಪ್ಪ ಅವರೇ ನೇರ ಕಾಣರಾದ್ದರಿಂದ ಅವರನ್ನು ಸಂಪುಟದಿಂದ ವಜಾಗೊಳಿಸಿ ಅವರ ವಿರುದ್ಧ ಕೇಸ್ ದಾಖಲಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ನಮ್ಮ ಸರ್ಕಾರವಿದ್ದಾಗ ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಮಾಡಿಕೊಂಡಾಗ ಜಾರ್ಜ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಈಶ್ವರಪ್ಪ ಅವರೇ ಸಾವಿಗೆ ಕಾರಣ ಎಂದು ನೇರ ಆರೋಪ ಮಾಡಿರುವ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿರುವುದರಿಂದ ಈಶ್ವರಪ್ಪ ಅವರ ವಿರುದ್ಧ ಸೆಕ್ಷನ್ 302 ರಡಿ ಕೇಸ್ ದಾಖಲಿಸಬೇಕು ಮತ್ತು ತಕ್ಷಣ ಈಶ್ವರಪ್ಪ ಅವರನ್ನು ಬಂಧಿಸಬೇಕು. ಈ ಕೂಡಲೇ ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.

    ಕೊಲೆ ಆರೋಪ ಎದುರಿಸುತ್ತಿರುವ ಈಶ್ವರಪ್ಪ ಅವರು ಸಚಿವ ಸಂಪುಟದಲ್ಲಿ ಮುಂದುವರಿಯಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವಕಾಶ ನೀಡಬಾರದು. ಈ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಮತ್ತು ದಂಡ ವಿಧಿಸಬಹುದು, ಆದ್ದರಿಂದ ಇದೊಂದು ಗಂಭೀರ ಪ್ರಕರಣವಾಗಿದೆ. ಸಂತೋಷ್ ಪಾಟೀಲ್ ಸಾವಿಗೆ ಈಶ್ವರಪ್ಪ ಅವರೇ ಕಾರಣ ಎಂದು ಆರೋಪಿಸಿದರು. ಇದನ್ನೂ ಓದಿ: ಈಶ್ವರಪ್ಪ ವಜಾಗೊಳಿಸಿ ನಿವೃತ್ತ ನ್ಯಾಯಾಧೀಶರಿಂದ ತನಿಖೆ ನಡೆಸಲಿ: ಪ್ರಿಯಾಂಕ್ ಖರ್ಗೆ

    ಅಷ್ಟೇ ಅಲ್ಲದೇ ಇದೊಂದು ಭ್ರಷ್ಟಾಚಾರ ಪ್ರಕರಣವೂ ಆಗಿದೆ. ಸಂತೋಷ್ ಪಾಟೀಲ್ ಅವರು ಈಗಾಗಲೇ ಈಶ್ವರಪ್ಪ ಅವರಿಗೆ ಕಮಿಷನ್ ನೀಡಿದ್ದರು. ಗುತ್ತಿಗೆ ಕಾಮಗಾರಿಯ ಬಾಕಿ ಅನುದಾನ ಬಿಡುಗಡೆ ಮಾಡಲು ಸಚಿವರು ಹೆಚ್ಚಿನ ಕಮಿಷನ್‍ಗೆ ಬೇಡಿಕೆ ಇಟ್ಟಿದ್ದಾರೆ. ಆತನಿಗೆ ಈ ಹಣ ಹೊಂದಿಸಲು ಸಾಧ್ಯವಾಗದ ಕಾರಣಕ್ಕೆ ಮನನೊಂದು ಸಂತೋಷ್ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಹೇಳಿದರು.

    ಈಶ್ವರಪ್ಪ ಅವರು ಸಂತೋಷ್ ಪಾಟೀಲ್ ಮೇಲೆ ಮಾನನಷ್ಟ ಮೊಕದ್ದಮೆ ದಾಖಲಿಸಿರುವುದಕ್ಕೂ, ಇದಕ್ಕೂ ಯಾವುದೇ ಸಂಬಂಧವಿಲ್ಲ. ಆತ್ಮಹತ್ಯೆಗೆ ಶರಣಾಗುವ ಮುನ್ನ ಆತ ಈಶ್ವರಪ್ಪ ಅವರೇ ನನ್ನ ಸಾವಿಗೆ ನೇರ ಕಾರಣ ಎಂದು ಆರೋಪ ಮಾಡಿರುವುದರಿಂದ ಇದಕ್ಕಿಂತ ಬೇರೆ ಸಾಕ್ಷಿ ಬೇಕಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ವರ್ಕ್‌ ಆರ್ಡರ್‌ ಇಲ್ಲದೇ 4 ಕೋಟಿ ಕಾಮಗಾರಿ ಮಾಡಿದ್ದ ಸಂತೋಷ್‌ – ಆತ್ಮಹತ್ಯೆಗೆ ಕಾರಣ ಏನು?

    ಈಗ ಈಶ್ವರಪ್ಪ ಅವರು ಏನು ಪ್ರತಿಕ್ರಿಯೆ ಕೊಡುತ್ತಾರೆ ಎನ್ನುವುದು ಮುಖ್ಯವಲ್ಲ, ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಮಾಡಿರುವ ಆರೋಪ ಮುಖ್ಯ. ಹಾಗಾಗಿ ಈಶ್ವರಪ್ಪ ಅವರ ಮೇಲೆ ಸೆಕ್ಷನ್ 302 ರಡಿ ಕೊಲೆ ಪ್ರಕರಣ ದಾಖಲಿಸಿ, ತಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಿದರು.

    ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಈಶ್ವರಪ್ಪ ವಿರುದ್ಧ ಭ್ರಷ್ಟಾಚಾರ ಹಾಗೂ ಕೊಲೆ ಪ್ರಕರಣ ದಾಖಲಿಸಬೇಕು. ಸಂಪುಟದಿಂದ ವಜಾಗೊಳಿಸಿ ಅವರ ಬಂಧನಕ್ಕೆ ಕ್ರಮ ಕೈಗೊಳ್ಳಬೇಕು. ಇವ್ಯಾವುದನ್ನು ಅವರು ಮಾಡಿಲ್ಲ. ಈ ಬಗ್ಗೆ ನಾವು ಧ್ವನಿ ಎತ್ತುತ್ತೇವೆ. ಈಶ್ವರಪ್ಪ ಹೇಳಿಕೆಗೆ ನಾವು ಮಹತ್ವ ನೀಡಲ್ಲ, ಅವರೊಬ್ಬ ಕೊಲೆ ಆರೋಪ ಹೊತ್ತಿರುವ ವ್ಯಕ್ತಿ, ಅವರು ಎಷ್ಟು ದೊಡ್ಡ ಭ್ರಷ್ಟ ಎಂದು ಇಡೀ ರಾಜ್ಯಕ್ಕೆ ಗೊತ್ತಿದೆ ಎಂದು ವಾಗ್ದಾಳಿ ನಡೆಸಿದರು.

  • ಕಾಂಗ್ರೆಸ್ಸಿನವರು ಬೆಂಕಿ ಹಚ್ಚಲು ಮಂಗ್ಳೂರು ಹೊರಟಿದ್ದು: ಈಶ್ವರಪ್ಪ

    ಕಾಂಗ್ರೆಸ್ಸಿನವರು ಬೆಂಕಿ ಹಚ್ಚಲು ಮಂಗ್ಳೂರು ಹೊರಟಿದ್ದು: ಈಶ್ವರಪ್ಪ

    ಹಾವೇರಿ: ಕಾಂಗ್ರೆಸ್ಸಿನವರಿಗೆ ದೇಶ ಒಂದಾಗೋದು ಬೇಕಾಗಿಲ್ಲ. ಅವರು ಮಂಗಳೂರಿಗೆ ಹೊರಟಿದ್ದು ಸಾಂತ್ವನ ಹೇಳಲು ಅಲ್ಲ, ಬದಲಾಗಿ ಬೆಂಕಿ ಹಚ್ಚಲು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ನಗರದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಮತ್ತು ಖಾದರ್ ಸೇರಿ ಕೆಲವರು ಬೆಂಕಿ ಹಚ್ಚಬೇಕಾಗುತ್ತೆ ಅನ್ನೋ ಮಾತನಾಡುತ್ತಿದ್ದಾರೆ. ಮನಸ್ಸಿನಲ್ಲಿ ಗಲಭೆ ಹಚ್ಚೋ ತೀರ್ಮಾನ ಕಾಂಗ್ರೆಸ್ ನವರು ಮಾಡಿದ್ದಾರೆ. ಈಗಾಗಲೇ ಎರಡು ಹೆಣಗಳು ಬಿದ್ದಿವೆ. ಇನ್ನೆಷ್ಟು ಹೆಣಗಳು ಬೀಳಬೇಕು ಎಂದು ಕಿಡಿಕಾರಿದರು.

    ಬ್ರಿಟಿಷರು ಭಾರತ ಮತ್ತು ಪಾಕಿಸ್ತಾನ ಒಡೆದು ಛಿದ್ರಛಿದ್ರ ಮಾಡಿದರು. ಈಗಿನ ಕಾಂಗ್ರೆಸ್ಸಿನವರು ಹಿಂದೂ-ಮುಸ್ಲಿಂ ಧರ್ಮವನ್ನ ಒಡೆದು ಛಿದ್ರ ಛಿದ್ರ ಮಾಡೋ ಪ್ರಯತ್ನ ಮಾಡುತ್ತಿದ್ದಾರೆ ಎಂದು ಗರಂ ಆದರು.

    ಪೌರತ್ವ ಕಾಯ್ದೆ ಇಡೀ ದೇಶವನ್ನ ಒಂದು ಮಾಡುತ್ತದೆ. ಕಾಂಗ್ರೆಸ್ಸಿನವರು ಇದನ್ನ ದುರುಪಯೋಗ ಮಾಡಿಕೊಂಡು ಗಲಭೆ ಸೃಷ್ಟಿಸಲು ಪ್ರಯತ್ನ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

     

  • ಬಿಜೆಪಿಗೆ ಶರತ್ ಬಚ್ಚೇಗೌಡ ಅಗತ್ಯವಿಲ್ಲ: ಈಶ್ವರಪ್ಪ

    ಬಿಜೆಪಿಗೆ ಶರತ್ ಬಚ್ಚೇಗೌಡ ಅಗತ್ಯವಿಲ್ಲ: ಈಶ್ವರಪ್ಪ

    ಶಿವಮೊಗ್ಗ: ಬಿಜೆಪಿಗೆ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡರ ಅಗತ್ಯವಿಲ್ಲ ಎಂಬುದಾಗಿ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಹೇಳಿದ್ದಾರೆ.

    ನಗರದಲ್ಲಿ ಇಂದು ಹೊಸಕೋಟೆಯಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿರುವ ಶರತ್ ಬಚ್ಚೇಗೌಡ ಅವರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಸದ್ಯಕ್ಕೆ ಬಿಜೆಪಿಗೆ ಶರತ್ ಬಚ್ಚೇಗೌಡ ಅಗತ್ಯವಿಲ್ಲ ಎಂಬುದಾಗಿ ತಿಳಿಸಿದರು.

    ಇದೇ ವೇಳೆ ಕ್ಯಾಬಿನೆಟ್ ವಿಸ್ತರಣೆ ಹಾಗೂ ಖಾತೆ ಬದಲಾವಣೆ ಕುರಿತು ಬಿಜೆಪಿಯಲ್ಲಿ ಯಾವುದೇ ಗೊಂದಲವಿಲ್ಲ. ಬಿಜೆಪಿಗೆ ಈ ಮೊದಲೇ ಪೂರ್ಣ ಬಹುಮತ ಬಂದಿದ್ದರೆ ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ. ಹೀಗಾಗಿ ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು ಎಂದರು. ಇದನ್ನೂ ಓದಿ: ಹೊಸಕೋಟೆ ಅಭಿವೃದ್ಧಿಗೆ ಸಿಎಂ ಭೇಟಿ ಮಾಡ್ತೀನಿ – ಶರತ್ ಬಚ್ಚೇಗೌಡ

    ಕ್ಯಾಬಿನೆಟ್ ವಿಸ್ತರಣೆ ಸಂದರ್ಭದಲ್ಲಿ ಮೂಲ ಬಿಜೆಪಿಗರು, ವಲಸೆ ಬಿಜೆಪಿಗರು ಎಂಬ ಪ್ರಶ್ನೆಯೇ ಬರುವುದಿಲ್ಲ. ಅಲ್ಲದೇ ಶಾಸಕರಲ್ಲಿ ಯಾವುದೇ ಅಸಮಾಧಾನವಿಲ್ಲ. ನಮ್ಮನ್ನು ನಂಬಿ 17 ಮಂದಿ ಶಾಸಕರು ಬಿಜೆಪಿಗೆ ಬಂದಿದ್ದಾರೆ. ನಾವು ಅವರ ಋಣ ತೀರಿಸಬೇಕಿದೆ ಎಂದು ಹೇಳಿದರು. ಇದನ್ನೂ ಓದಿ: ಶರತ್ ಬಚ್ಚೇಗೌಡರನ್ನ ಪಕ್ಷಕ್ಕೆ ಸೇರಿಸಲ್ಲ: ಬಿಜೆಪಿ ಮುಖಂಡ

    ಸರ್ಕಾರದಲ್ಲಿ ಇನ್ನೂ ಅರ್ಧ ಕ್ಯಾಬಿನೆಟ್ ಪೆಂಡಿಂಗ್ ಇದೆ. ಕ್ಯಾಬಿನೆಟ್ ವಿಸ್ತರಣೆ ಹಾಗೂ ಖಾತೆ ಹಂಚಿಕೆಯನ್ನು ಹೈಕಮಾಂಡ್ ನಿರ್ಧರಿಸಲಿದೆ. ಇನ್ನೂ ಮೂರೂವರೆ ವರ್ಷ ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರ ನಡೆಸಲಿದೆ ಎಂದು ಸಚಿವರು ತಿಳಿಸಿದರು.