Tag: Kshame

  • ಅದು ನನ್ನ ಸಿನಿಮಾವಲ್ಲ, ನನ್ನ ಕ್ಷಮಿಸಿ: ‘ರಂಗನಾಯಕ’ ಬಗ್ಗೆ ಜಗ್ಗೇಶ್ ಅಚ್ಚರಿ ಹೇಳಿಕೆ

    ಅದು ನನ್ನ ಸಿನಿಮಾವಲ್ಲ, ನನ್ನ ಕ್ಷಮಿಸಿ: ‘ರಂಗನಾಯಕ’ ಬಗ್ಗೆ ಜಗ್ಗೇಶ್ ಅಚ್ಚರಿ ಹೇಳಿಕೆ

    ರಂಗನಾಯಕ ಸಿನಿಮಾ ಕುರಿತಂತೆ ಸಾಕಷ್ಟು ಮೆಚ್ಚುಗೆ ಮಾತುಗಳನ್ನು ಆಡಿದ್ದ ನಟ ಜಗ್ಗೇಶ್ (Jaggesh), ಆ ಸಿನಿಮಾದ ಬಗ್ಗೆ ನೆಗೆಟಿವ್ ಕಾಮೆಂಟ್ಸ್ ಬರುತ್ತಿದ್ದಂತೆಯೇ ಅಚ್ಚರಿಯ ಹೇಳಿಕೆಯನ್ನು ಕೊಟ್ಟಿದ್ದಾರೆ. ನಿನ್ನೆ ಅವರ ಹುಟ್ಟು ಹಬ್ಬ. ಪ್ರತಿ ವರ್ಷದಂತೆ ಈ ಬಾರಿಯೂ ಅವರು ರಾಯರ ಸನ್ನಿಧಿಯಲ್ಲಿ ಹುಟ್ಟು ಹಬ್ಬ ಆಚರಿಸಿಕೊಂಡು ಅಲ್ಲಿಂದಲೇ ಫೇಸ್ ಬುಕ್ ಲೈವ್ ಮಾಡಿದ್ದಾರೆ. ಹಲವಾರು ವಿಚಾರಗಳನ್ನು ಮಾತನಾಡುತ್ತಾ, ರಂಗನಾಯಕ (Ranganayaka) ಬಗ್ಗೆಯೂ ಮಾತನಾಡಿದ್ದಾರೆ.

    ಮೊನ್ನೆಯಷ್ಟೇ ಒಂದು ಸಿನಿಮಾ ಮಾಡಿದ್ದೆ. ಅದು ನಿಮಗೆ ಇಷ್ಟವಾಗಿಲ್ಲ. ಅದು ನನ್ನ ಸಿನಿಮಾವಲ್ಲ, ಅದು ನಿರ್ದೇಶಕರ ಸಿನಿಮಾ. ಒಬ್ಬರನ್ನು ನಂಬಿ ನಾನು ಕೆಲಸ ಮಾಡುತ್ತೇನೆ. ಆ ನಿರ್ದೇಶಕರು ತಮ್ಮ ಆಸೆಯಂತೆ ಸಿನಿಮಾ ಮಾಡಿದ್ದಾರೆ. ಪ್ರಿಮಿಯರ್ ಪದ್ಮಿನಿ ಸೇರಿದಂತೆ ಹಲವಾರು ಹಿಟ್ ಚಿತ್ರಗಳನ್ನು ಕೊಟ್ಟಿದ್ದೇನೆ. ಹಾಗೆ ಸಿನಿಮಾ ಇಷ್ಟವಾಗದೇ ಇದ್ದಾಗ ಕ್ಷಮೆ ಕೇಳುತ್ತೇನೆ ಎಂದಿದ್ದಾರೆ ಜಗ್ಗೇಶ್.

    ಲೈವ್‌ನಲ್ಲಿ ಜಗ್ಗೇಶ್, ತಮ್ಮ ಬೆಳವಣಿಗೆಗೆ ಮುಖ್ಯ ಕಾರಣ ನನ್ನ ಗುರುಗಳು ರಾಘವೇಂದ್ರ ಸ್ವಾಮಿಗಳು ಎಂದು ಹೇಳಿದ್ದಾರೆ. ಮುಖ್ಯ ವಿಚಾರಕ್ಕೆ ಬರುತ್ತೇನೆ ಎಂದ ಜಗ್ಗೇಶ್, ನಾನು ನೇರವಾಗಿ ಮಾತಾಡುವ ಮನುಷ್ಯ, ಹಳ್ಳಿಯ ಸೊಗಡಿನವನು, ನನ್ನ ಮಾತುಗಳಲ್ಲಿ ಹಳ್ಳಿ ಪದಗಳು ಬಂದು ಬಿಡುತ್ತವೆ ಎಂದು ಪರೋಕ್ಷವಾಗಿ ವರ್ತೂರು ಸಂತೋಷ್ ಅವರಿಗೆ ಬೈದದನ್ನೂ ನೆನಪಿಸಿಕೊಂಡಿದ್ದಾರೆ.

    ನಾನು ಎಂದಿಗೂ ಯಾರಿಗೂ ಕೆಟ್ಟದ್ದನ್ನು ಬಯಸುವುದಿಲ್ಲ ಎಂದು ಮಾತನಾಡಿದ್ದಾರೆ. ಬಳಿಕ ಜಗ್ಗೇಶ್, ಮೈಕ್ ಹಿಡಿದ ಮಾತಾಡುವಾಗ ನನ್ನ ಮಾತಿನಿಂದ ಯಾರಿಗಾದ್ರೂ ಬೇಜಾರಾಗಿದ್ದರೆ ಕ್ಷಮಿಸಿಬಿಡಿ. ನಿಮ್ಮ ತಂದೆಯ ವಯಸ್ಸಿನವನು ಅಂದುಕೊಂಡು ಕ್ಷಮಿಸಿ ಎಂದು ಮಾತನಾಡಿದ್ದಾರೆ.

     

    ಸಿನಿಮಾವೊಂದರ ಪ್ರಚಾರದ ವೇಳೆ, ಹುಲಿ ಉಗುರು ಪ್ರಕರಣದ ಬಗ್ಗೆ ಮಾತನಾಡುತ್ತಾ, ಬಿಗ್ ಬಾಸ್ ಸ್ಪರ್ಧಿ (Bigg Boss Kannada 10) ವರ್ತೂರು ಸಂತೋಷ್ ಅವರನ್ನು ‘ಕಿತ್ತೋದ್ ನನ್ ಮಗ’ ಎಂಬ ಪದ ಬಳಸಿದ್ದರು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಆದರೆ ಈಗ ಜಗ್ಗೇಶ್, ವರ್ತೂರು ಸಂತೋಷ್ (Varthur Santhosh) ಹೆಸರು ಹೇಳದೇ ಕ್ಷಮೆ ಕೇಳಿದ್ದಾರೆ.

  • ತ್ರಿಶಾನ ‘ರೆಸಾರ್ಟ್’ಗೆ ಕರೆಯಿಸಿಕೊಂಡಿದ್ದೆ: ಮಾತಿಗೆ ಕ್ಷಮೆ ಕೇಳಿದ ರಾಜು

    ತ್ರಿಶಾನ ‘ರೆಸಾರ್ಟ್’ಗೆ ಕರೆಯಿಸಿಕೊಂಡಿದ್ದೆ: ಮಾತಿಗೆ ಕ್ಷಮೆ ಕೇಳಿದ ರಾಜು

    ಹಿರಿಯ ರಾಜಕಾರಣಿಗಾಗಿ ನಟಿ ತ್ರಿಶಾರನ್ನು 25 ಲಕ್ಷ ರೂಪಾಯಿ ಕೊಟ್ಟು ರೆಸಾರ್ಟ್ ಗೆ ಕರೆಯಿಸಿಕೊಂಡಿದ್ದೆವು ಎಂದು ಎಐಎಡಿಎಂಕೆ ಉಚ್ಚಾಟಿತ ಮುಖಂಡ ಎ.ವಿ.ರಾಜು ಅಸಂಬದ್ಧ ಹೇಳಿಕೆ ನೀಡಿದ್ದರು. ಈ ಮಾತು ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ತಮಿಳು ಸಿನಿಮಾ ರಂಗದ ಅನೇಕರು ರಾಜು ವಿರುದ್ಧ ಹರಿಹಾಯ್ದಿದ್ದರು. ತ್ರಿಶಾ ಕೂಡ ಕಾನೂನು ರೀತಿಯ ಕ್ರಮಕ್ಕೆ ಮುಂದಾಗುವ ಕುರಿತು ಪ್ರತಿಕ್ರಿಯೆ ನೀಡಿದ್ದರು.

    ಭಾರೀ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ರಾಜು ಕ್ಷಮೆ ಕೇಳಿದ್ದಾರೆ. ತಮ್ಮ ಮಾತನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದಿದ್ದಾರೆ. ನಾನು ತ್ರಿಶಾ ರೀತಿಯ ನಟಿಯನ್ನು ಎಂದು ಹೇಳಿದ್ದು, ತ್ರಿಶಾ ಅವರನ್ನೇ ಅಂತ ಹೇಳಿಲ್ಲ. ಆದರೂ, ನಾನು ಕ್ಷಮೆ (Kshame) ಕೇಳುತ್ತೇನೆ. ಯಾರನ್ನೂ ನೋಯಿಸುವ ಉದ್ದೇಶ ತಮಗೆ ಇರಲಿಲ್ಲವೆಂದು ಹೇಳಿದ್ದಾರೆ.

    ಪದೇ ಪದೇ ನಟಿ ತ್ರಿಶಾ (Trisha) ಅವರ ಮೇಲೆ ಮಾನಹಾನಿ ಮಾಡುವಂತಹ ಘಟನೆಗಳು ತಮಿಳು ನಾಡಿನಲ್ಲಿ ನಡೆಯುತ್ತಿವೆ. ಈ ಹಿಂದೆ ಮನ್ಸೂರ್ ಅಲಿ ಖಾನ್ ಕೂಡ ತ್ರಿಶಾರ ಬಗ್ಗೆ ಅವಹೇಳನ ಮಾಡುವಂತ ಮಾತುಗಳನ್ನು ಆಡಿದ್ದರು. ಇದೀಗ ತಮಿಳು ನಾಡಿನ ರಾಜಕೀಯ ಮುಖಂಡ  ಎ.ವಿ.ರಾಜು (A.V. Raju)ನಾಲಿಗೆ ಹರಿಬಿಟ್ಟಿದ್ದರು.

    ಲೈಂಗಿಕ ಕೆಲಸಕ್ಕಾಗಿ ಎ.ವೆಂಕಟಾಚಲಂ (A. Venkatachalam) ಅವರು ತ್ರಿಶಾರಿಗೆ 25 ಲಕ್ಷ ರೂಪಾಯಿ ಆಫರ್ ನೀಡಿದ್ದರು. ಶಾಸಕರೊಬ್ಬರು ಅದಕ್ಕೆ ಒಪ್ಪಿಸಿದ್ದರು ಎಂದು ರಾಜು ಹೇಳಿದ್ದರು. ಇಂತಹ ಅನೇಕ ನಟಿಯರು ನಮ್ಮಲ್ಲಿ ಇದ್ದಾರೆ ಎಂದು ರಾಜು ಹೇಳಿಕೆ ನೀಡಿದ್ದರು. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

    ಈ ವಿಡಿಯೋ ಭಾರೀ ಸದ್ದು ಮಾಡುತ್ತಿದ್ದಂತೆಯೇ ಇದ್ದಕ್ಕೆ ನಟಿ ತ್ರಿಶಾ ಕೂಡ ಪ್ರತಿಕ್ರಿಯೆ ನೀಡಿದ್ದರು. ಪ್ರಚಾರಕ್ಕಾಗಿ ಹೀಗೆ ನಾಲಿಗೆ ಹರಿಬಿಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ನಮ್ಮ ಲೀಗಲ್ ಟೀಮ್ ತಕ್ಕ ಪಾಠ ಕಲಿಸೋಕೆ ಸಜ್ಜಾಗಿದೆ ಎಂದು ತ್ರಿಷಾ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು.

    ಪ್ರಚಾರಕ್ಕಾಗಿ ಇಂತ ಕೀಳು ಮಟ್ಟದ ವ್ಯಕ್ತಿಗಳನ್ನು ಎದುರುಗೊಳ್ಳೋಕೆ ಅಸಹ್ಯವಾಗುತ್ತಿದೆ. ಇದನ್ನು ಎಂದಿಗೂ ಸಹಿಸಲ್ಲ ಮತ್ತು ಸುಮ್ಮನೆ ಕೂರುವುದಿಲ್ಲ. ನನ್ನ ಲೀಗಲ್ ಟೀಮ್ ಎಲ್ಲವನ್ನೂ ನೋಡಿಕೊಳ್ಳುತ್ತದೆ ಎಂದು ಪ್ರತಿಕ್ರಿಯೆ ನೀಡಿದ್ದರು.

  • ಕ್ಷಮೆ ಕೇಳಿದರೂ ಆದಿಪುರುಷ ರೈಟರ್ ವಿರುದ್ದ ಟ್ರೋಲ್: ಸಂಭಾವನೆ ದಾನ ಮಾಡುವಂತೆ ಆಗ್ರಹ

    ಕ್ಷಮೆ ಕೇಳಿದರೂ ಆದಿಪುರುಷ ರೈಟರ್ ವಿರುದ್ದ ಟ್ರೋಲ್: ಸಂಭಾವನೆ ದಾನ ಮಾಡುವಂತೆ ಆಗ್ರಹ

    ದಿಪುರುಷ ಸಿನಿಮಾದ ಬರವಣಿಗೆ ವಿಚಾರದಲ್ಲಿ ತಮ್ಮಿಂದ ತಪ್ಪಾಗಿದೆ. ದಯವಿಟ್ಟು ಕ್ಷಮಿಸಿ ಎಂದು ಕೈ ಜೋಡಿಸಿ ಬೇಡಿಕೊಂಡಿದ್ದರು ಚಿತ್ರದ ಸಂಭಾಷಣೆಕಾರ ಮನೋಜ್ ಮುಂತಾಶಿರ್ ಅವರು ಕ್ಷಮೆ ಕೇಳಿದರೂ, ಟ್ರೋಲಿಗರು ಮಾತ್ರ ಕ್ಷಮಿಸಿದಂತೆ ಕಾಣುತ್ತಿಲ್ಲ. ಕ್ಷಮೆಗೆ ಅರ್ಹರಲ್ಲ ನೀವು, ಒಂದು ವೇಳೆ ಕ್ಷಮಿಸಬೇಕು ಎಂದರೆ ಚಿತ್ರಕ್ಕಾಗಿ ಪಡೆದುಕೊಂಡಿರುವ ಸಂಭಾವನೆಯನ್ನು ದಾನ ಮಾಡಿ ಎಂದು ಆಗ್ರಹಿಸುತ್ತಿದ್ದಾರೆ.

    ಆದಿಪುರುಷ ಸಿನಿಮಾದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಹೋರಾಟ ಮಾಡಿದರೂ ಚಿತ್ರತಂಡವಾಗಲಿ ಅಥವಾ ಸಿನಿಮಾದ ಸಂಭಾಷಣೆಯನ್ನು ಬರೆದ ಮನೋಜ್ ಮುಂತಾಶಿರ್ (Manoj Muntashir) ಆಗಲಿ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಸಿನಿಮಾ ಬ್ಯಾನ್ ಮಾಡುವ ಮಟ್ಟಕ್ಕೆ ಬಂದರೂ ಮತ್ತೆ ತಮ್ಮ ಮೊಂಡುತನವನ್ನೇ ಮುಂದುವರೆಸಿಕೊಂಡು ಹೋಗಿತ್ತು ಚಿತ್ರತಂಡ. ಕೋರ್ಟ್ ಕಟಕಟೆ ಏರಿದ ನಂತರ ಇದೀಗ ತಣ್ಣಗಾಗಿದೆ.

    ಈ ಹಿಂದೆ ಅಲಹಾಬಾದ್ (Allahabad) ಹೈಕೋರ್ಟ್ ಚಿತ್ರತಂಡಕ್ಕೆ ಛೀಮಾರಿ ಹಾಕಿತ್ತು. ಧಾರ್ಮಿಕ ನಂಬಿಕೆಗಳನ್ನು ಘಾಸಿಗೊಳಿಸಿದ್ದರ ಬಗ್ಗೆ ತೀವ್ರ ರೀತಿಯಲ್ಲೇ ಅಸಮಾಧಾನ ಹೊರಹಾಕಿತ್ತು. ಕೋರ್ಟಿಗೆ ಖುದ್ದಾಗಿ ಹಾಜರಾಗಬೇಕು ಎಂದು ಮನೋಜ್ ಮುಂತಾಶಿರ್ ಸೇರಿದಂತೆ ನಿರ್ಮಾಪಕರಿಗೆ ಮತ್ತು ನಿರ್ದೇಶಕರಿಗೆ ನೋಟಿಸ್ ಜಾರಿ ಮಾಡಿತ್ತು. ಕೋರ್ಟ್ ಬಿಸಿ ತಾಗುತ್ತಿದ್ದಂತೆಯೇ ಬರಹಗಾರ ಮನೋಜ್ ಟ್ವೀಟ್ ಮಾಡಿದ್ದಾರೆ.

    ತಮ್ಮಿಂದ ಚಿತ್ರದಲ್ಲಿ ತಪ್ಪಾಗಿದೆ ಎಂದು ಒಪ್ಪಿಕೊಂಡಿರುವ ಮನೋಜ್, ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ್ದಕ್ಕೆ ಜನರಲ್ಲಿ ಕ್ಷಮೆ ಕೇಳಿದ್ದಾರೆ. ಜನರಿಗೆ ನೋವು ಆಗಿದ್ದನ್ನು ಒಪ್ಪಿಕೊಳ್ಳುತ್ತೇನೆ. ನಾನು ಎರಡೂ ಕೈಗಳನ್ನು ಮುಗಿದು ಕ್ಷಮೆ ಕೇಳುತ್ತೇನೆ. ಪ್ರಭು ಬಜರಂಗ ಬಲಿ ನಮಗೆ ಮತ್ತಷ್ಟು ಶಕ್ತಿ ನೀಡಲಿ. ಪವಿತ್ರ ಸನಾತನ ಹಾಗೂ ನಮ್ಮ ರಾಷ್ಟ್ರ ಸೇವೆ ಮಾಡಲು ಮತ್ತಷ್ಟು ಶಕ್ತಿ ತುಂಬಲಿ ಎಂದು ಅವರು ಟ್ವಿಟರ್ ನಲ್ಲಿ ಬರೆದುಕೊಂಡಿದ್ದರು.

    ಈ ಹಿಂದೆ ಆದಿಪುರುಷ (Adipurush) ಸಿನಿಮಾವನ್ನು ನೇಪಾಳ ಸರಕಾರ ಬ್ಯಾನ್ ಮಾಡಿತ್ತು. ಚಿತ್ರದಲ್ಲಿ ಸೀತೆ ಬಗ್ಗೆ ಹೇಳಲಾದ ಡೈಲಾಗ್ ಸರಿಯಾಗಿಲ್ಲ ಎಂದು ಕಠ್ಮಂಡು ಮೇಯರ್ ಕೋರ್ಟ್ ಮೆಟ್ಟಿಲು ಏರಿದ್ದರು. ಸಿನಿಮಾವನ್ನು ಬ್ಯಾನ್ ಮಾಡುವುದು ಸರಿಯಲ್ಲ ಎಂದು ಅಲ್ಲಿನ ಹೈಕೋರ್ಟ್ ಹೇಳಿದ್ದರೂ, ಇತಿಹಾಸಕ್ಕೆ ಅಪಚಾರ ಮಾಡಬಾರದು ಎನ್ನುವುದನ್ನು ಎತ್ತಿ ಹಿಡಿದಿತ್ತು. ನಂತರ ಅಲಹಾಬಾದ್ (Allahabad) ಹೈಕೋರ್ಟ್ ಮೊನ್ನೆಯಷ್ಟೇ ಚಿತ್ರದ ಬಗ್ಗೆ ಅಸಮಾಧಾನ ಹೊರಹಾಕಿದೆ.

    ಆದಿಪುರುಷ ಸಿನಿಮಾದ ಚಿತ್ರಕಥೆ ಮತ್ತು ಸಂಭಾಷಣೆ ಕುರಿತಂತೆ  ಸಲ್ಲಿಸಲಾದ ಅರ್ಜಿಯನ್ನು ಕೈಗೆತ್ತಿಕೊಂಡ ಅಲಹಾಬಾದ್ ಹೈಕೋರ್ಟಿನ (High Court) ಲಕ್ನೋ ಪೀಠವು ಚಿತ್ರತಂಡದ ಜೊತೆ ಸೆನ್ಸಾರ್ ಮಂಡಳಿಯನ್ನು ತೀವ್ರವಾಗಿ ಟೀಕಿಸಿತ್ತು. ‘ಭಾರತೀಯರು ಸಹಿಷ್ಟುಗಳು ಎನ್ನುವ ಕಾರಣಕ್ಕೆ ಸಹನೆ ಪರೀಕ್ಷೆ ಮಾಡಲಾಗುತ್ತಿದೆಯೇ?’ ಎಂದು ಪ್ರಶ್ನೆ ಮಾಡಿತ್ತು.

    ರಾಮಾಯಣವನ್ನು ಜನರು ಪವಿತ್ರ ಎಂದು ದಿನವೂ ಪಠಿಸುತ್ತಾರೆ. ರಾಮಚರಿತಮಾನಸವನ್ನು ಓದುತ್ತಾರೆ. ಇಂತಹ ರಾಮಾಯಣವನ್ನೇ ಸಿನಿಮಾ ಮಾಡಿ, ಆ ನಂತರ ಸಿನಿಮಾಗೂ ರಾಮಾಯಣಕ್ಕೂ ಸಂಬಂಧವಿಲ್ಲ ಎಂದರೆ ಮಾಡಿದ ತಪ್ಪು ಮುಚ್ಚಿದಂತೆ ಆಗುತ್ತದೆ? ಚಿತ್ರದಲ್ಲಿನ ಸಂಭಾಷಣೆಗಳು ಕೂಡ ಅಪಮಾನ ಮಾಡುವಂತಿವೆ. ಈ ಸಿನಿಮಾ ನೋಡಿದ ಮೇಲೂ ಜನರು ತಾಳ್ಮೆ ಕಳೆದುಕೊಂಡಿಲ್ಲ ಎನ್ನುವುದು ಅವರ ಸಹಿಷ್ಣುತೆಯನ್ನು ತೋರಿಸುತ್ತದೆ’ ಎಂದು ಅಭಿಪ್ರಾಯ ವ್ಯಕ್ತ ಪಡಿಸಿತ್ತು.

     

    ದೇವರು ಎಂದು ಪೂಜಿಸುವ ಭಗವಾನ್ ಹನುಮಾನ್ ಮತ್ತು ಸೀತೆಯನ್ನು ಸಿನಿಮಾದಲ್ಲಿ ಏನೂ ಅಲ್ಲ ಎನ್ನುವಂತೆ ತೋರಿಸಿದ್ದೀರಿ. ಕೆಲವು ದೃಶ್ಯಗಳು ವಯಸ್ಕ ವರ್ಗಕ್ಕೆ ಸೇರುವಂತಹವು ಆಗಿವೆ. ನೀವು ಏನನ್ನು ತೋರಿಸಲು ಹೊರಟಿದ್ದೀರಿ ಎಂದು ಪ್ರಶ್ನೆ ಮಾಡಿದ್ದಲ್ಲದೇ, ಸಂಭಾಷಣೆ ಬರೆದಿರುವ ಮನೋಜ್ (Manoj) ಅವರಿಗೂ ನೋಟಿಸ್ ನೀಡಿ, ಕಕ್ಷಿದಾರನನ್ನಾಗಿ ಮಾಡಿ ಎಂದು ನಿರ್ದೇಶನ ನೀಡಿತ್ತು. ಈ ನಿರ್ದೇಶನದ ಹಿನ್ನೆಲೆಯಲ್ಲಿ ಬರಹಗಾರ ಮನೋಜ್ ಕ್ಷಮೆ ಕೇಳಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಆದಿಪುರುಷ’ ಚಿತ್ರದಲ್ಲಿ ತಪ್ಪಾಗಿದೆ ಕ್ಷಮಿಸಿ: ಕೈ ಮುಗಿದು ಕ್ಷಮೆ ಕೇಳಿದ ರೈಟರ್

    ‘ಆದಿಪುರುಷ’ ಚಿತ್ರದಲ್ಲಿ ತಪ್ಪಾಗಿದೆ ಕ್ಷಮಿಸಿ: ಕೈ ಮುಗಿದು ಕ್ಷಮೆ ಕೇಳಿದ ರೈಟರ್

    ದಿಪುರುಷ ಸಿನಿಮಾದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಹೋರಾಟ ಮಾಡಿದರೂ ಚಿತ್ರತಂಡವಾಗಲಿ ಅಥವಾ ಸಿನಿಮಾದ ಸಂಭಾಷಣೆಯನ್ನು ಬರೆದ ಮನೋಜ್ ಮುಂತಾಶಿರ್ (Manoj Muntashir) ಆಗಲಿ ಯಾವುದೇ ಪ್ರತಿಕ್ರಿಯೆ ನೀಡಿರಲ್ಲ. ಸಿನಿಮಾ ಬ್ಯಾನ್ ಮಾಡುವ ಮಟ್ಟಕ್ಕೆ ಬಂದರೂ ಮತ್ತೆ ತಮ್ಮ ಮೊಂಡುತನವನ್ನೇ ಮುಂದುವರೆಸಿಕೊಂಡು ಹೋಗಿತ್ತು ಚಿತ್ರತಂಡ. ಕೋರ್ಟ್ ಕಟಕಟೆ ಏರಿದ ನಂತರ ಇದೀಗ ತಣ್ಣಗಾಗಿದೆ.

    ಈ ಹಿಂದೆ ಅಲಹಾಬಾದ್ (Allahabad) ಹೈಕೋರ್ಟ್ ಚಿತ್ರತಂಡಕ್ಕೆ ಛೀಮಾರಿ ಹಾಕಿತ್ತು. ಧಾರ್ಮಿಕ ನಂಬಿಕೆಗಳನ್ನು ಘಾಸಿಗೊಳಿಸಿದ್ದರ ಬಗ್ಗೆ ತೀವ್ರ ರೀತಿಯಲ್ಲೇ ಅಸಮಾಧಾನ ಹೊರಹಾಕಿತ್ತು. ಕೋರ್ಟಿಗೆ ಖುದ್ದಾಗಿ ಹಾಜರಾಗಬೇಕು ಎಂದು ಮನೋಜ್ ಮುಂತಾಶಿರ್ ಸೇರಿದಂತೆ ನಿರ್ಮಾಪಕರಿಗೆ ಮತ್ತು ನಿರ್ದೇಶಕರಿಗೆ ನೋಟಿಸ್ ಜಾರಿ ಮಾಡಿತ್ತು. ಕೋರ್ಟ್ ಬಿಸಿ ತಾಗುತ್ತಿದ್ದಂತೆಯೇ ಬರಹಗಾರ ಮನೋಜ್ ಟ್ವೀಟ್ ಮಾಡಿದ್ದಾರೆ.

    ತಮ್ಮಿಂದ ಚಿತ್ರದಲ್ಲಿ ತಪ್ಪಾಗಿದೆ ಎಂದು ಒಪ್ಪಿಕೊಂಡಿರುವ ಮನೋಜ್, ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ್ದಕ್ಕೆ ಜನರಲ್ಲಿ ಕ್ಷಮೆ ಕೇಳಿದ್ದಾರೆ. ಜನರಿಗೆ ನೋವು ಆಗಿದ್ದನ್ನು ಒಪ್ಪಿಕೊಳ್ಳುತ್ತೇನೆ. ನಾನು ಎರಡೂ ಕೈಗಳನ್ನು ಮುಗಿದು ಕ್ಷಮೆ ಕೇಳುತ್ತೇನೆ. ಪ್ರಭು ಬಜರಂಗ ಬಲಿ ನಮಗೆ ಮತ್ತಷ್ಟು ಶಕ್ತಿ ನೀಡಲಿ. ಪವಿತ್ರ ಸನಾತನ ಹಾಗೂ ನಮ್ಮ ರಾಷ್ಟ್ರ ಸೇವೆ ಮಾಡಲು ಮತ್ತಷ್ಟು ಶಕ್ತಿ ತುಂಬಲಿ ಎಂದು ಅವರು ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ:ಪ್ಯಾರಿಸ್‌ನ ರೊಮ್ಯಾಂಟಿಕ್‌ ಫೋಟೋ ಹಂಚಿಕೊಂಡ ಅದಿತಿ ಪ್ರಭುದೇವ

    ಈ ಹಿಂದೆ ಆದಿಪುರುಷ (Adipurush) ಸಿನಿಮಾವನ್ನು ನೇಪಾಳ ಸರಕಾರ ಬ್ಯಾನ್ ಮಾಡಿತ್ತು. ಚಿತ್ರದಲ್ಲಿ ಸೀತೆ ಬಗ್ಗೆ ಹೇಳಲಾದ ಡೈಲಾಗ್ ಸರಿಯಾಗಿಲ್ಲ ಎಂದು ಕಠ್ಮಂಡು ಮೇಯರ್ ಕೋರ್ಟ್ ಮೆಟ್ಟಿಲು ಏರಿದ್ದರು. ಸಿನಿಮಾವನ್ನು ಬ್ಯಾನ್ ಮಾಡುವುದು ಸರಿಯಲ್ಲ ಎಂದು ಅಲ್ಲಿನ ಹೈಕೋರ್ಟ್ ಹೇಳಿದ್ದರೂ, ಇತಿಹಾಸಕ್ಕೆ ಅಪಚಾರ ಮಾಡಬಾರದು ಎನ್ನುವುದನ್ನು ಎತ್ತಿ ಹಿಡಿದಿತ್ತು. ನಂತರ ಅಲಹಾಬಾದ್ (Allahabad) ಹೈಕೋರ್ಟ್ ಮೊನ್ನೆಯಷ್ಟೇ ಚಿತ್ರದ ಬಗ್ಗೆ ಅಸಮಾಧಾನ ಹೊರಹಾಕಿದೆ.

    ಆದಿಪುರುಷ ಸಿನಿಮಾದ ಚಿತ್ರಕಥೆ ಮತ್ತು ಸಂಭಾಷಣೆ ಕುರಿತಂತೆ  ಸಲ್ಲಿಸಲಾದ ಅರ್ಜಿಯನ್ನು ಕೈಗೆತ್ತಿಕೊಂಡ ಅಲಹಾಬಾದ್ ಹೈಕೋರ್ಟಿನ (High Court) ಲಕ್ನೋ ಪೀಠವು ಚಿತ್ರತಂಡದ ಜೊತೆ ಸೆನ್ಸಾರ್ ಮಂಡಳಿಯನ್ನು ತೀವ್ರವಾಗಿ ಟೀಕಿಸಿತ್ತು. ‘ಭಾರತೀಯರು ಸಹಿಷ್ಟುಗಳು ಎನ್ನುವ ಕಾರಣಕ್ಕೆ ಸಹನೆ ಪರೀಕ್ಷೆ ಮಾಡಲಾಗುತ್ತಿದೆಯೇ?’ ಎಂದು ಪ್ರಶ್ನೆ ಮಾಡಿತ್ತು.

    ರಾಮಾಯಣವನ್ನು ಜನರು ಪವಿತ್ರ ಎಂದು ದಿನವೂ ಪಠಿಸುತ್ತಾರೆ. ರಾಮಚರಿತಮಾನಸವನ್ನು ಓದುತ್ತಾರೆ. ಇಂತಹ ರಾಮಾಯಣವನ್ನೇ ಸಿನಿಮಾ ಮಾಡಿ, ಆ ನಂತರ ಸಿನಿಮಾಗೂ ರಾಮಾಯಣಕ್ಕೂ ಸಂಬಂಧವಿಲ್ಲ ಎಂದರೆ ಮಾಡಿದ ತಪ್ಪು ಮುಚ್ಚಿದಂತೆ ಆಗುತ್ತದೆ? ಚಿತ್ರದಲ್ಲಿನ ಸಂಭಾಷಣೆಗಳು ಕೂಡ ಅಪಮಾನ ಮಾಡುವಂತಿವೆ. ಈ ಸಿನಿಮಾ ನೋಡಿದ ಮೇಲೂ ಜನರು ತಾಳ್ಮೆ ಕಳೆದುಕೊಂಡಿಲ್ಲ ಎನ್ನುವುದು ಅವರ ಸಹಿಷ್ಣುತೆಯನ್ನು ತೋರಿಸುತ್ತದೆ’ ಎಂದು ಅಭಿಪ್ರಾಯ ವ್ಯಕ್ತ ಪಡಿಸಿತ್ತು.

     

    ದೇವರು ಎಂದು ಪೂಜಿಸುವ ಭಗವಾನ್ ಹನುಮಾನ್ ಮತ್ತು ಸೀತೆಯನ್ನು ಸಿನಿಮಾದಲ್ಲಿ ಏನೂ ಅಲ್ಲ ಎನ್ನುವಂತೆ ತೋರಿಸಿದ್ದೀರಿ. ಕೆಲವು ದೃಶ್ಯಗಳು ವಯಸ್ಕ ವರ್ಗಕ್ಕೆ ಸೇರುವಂತಹವು ಆಗಿವೆ. ನೀವು ಏನನ್ನು ತೋರಿಸಲು ಹೊರಟಿದ್ದೀರಿ ಎಂದು ಪ್ರಶ್ನೆ ಮಾಡಿದ್ದಲ್ಲದೇ, ಸಂಭಾಷಣೆ ಬರೆದಿರುವ ಮನೋಜ್ (Manoj) ಅವರಿಗೂ ನೋಟಿಸ್ ನೀಡಿ, ಕಕ್ಷಿದಾರನನ್ನಾಗಿ ಮಾಡಿ ಎಂದು ನಿರ್ದೇಶನ ನೀಡಿತ್ತು. ಈ ನಿರ್ದೇಶನದ ಹಿನ್ನೆಲೆಯಲ್ಲಿ ಬರಹಗಾರ ಮನೋಜ್ ಕ್ಷಮೆ ಕೇಳಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕನ್ನಡಪರ ಹೋರಾಟಗಾರರಿಗೆ ಕ್ಷಮೆ ಕೇಳಿ ಕಣ್ಣೀರು ಹಾಕಿದ ಪ್ರಶಾಂತ್ ಸಂಬರ್ಗಿ

    ಕನ್ನಡಪರ ಹೋರಾಟಗಾರರಿಗೆ ಕ್ಷಮೆ ಕೇಳಿ ಕಣ್ಣೀರು ಹಾಕಿದ ಪ್ರಶಾಂತ್ ಸಂಬರ್ಗಿ

    ಬಿಗ್ ಬಾಸ್ (Big Boss) ಮನೆಗೆ ಹೋದಾಗಿನಿಂದ ರೂಪೇಶ್ ರಾಜಣ್ಣ ಮತ್ತು ಪ್ರಶಾಂತ್ ಸಂಬರ್ಗಿ ನಡುವೆ ಮುಸುಕಿನ ಗುದ್ದಾಟ ನಡೆದೇ ಇತ್ತು. ಒಂದೊಂದು ಸಾರಿ ಈ ಗುದ್ದಾಟ ಅತಿರೇಕಕ್ಕೂ ಹೋಗಿದ್ದು ಇದೆ. ಇಬ್ಬರೂ ಒಬ್ಬರಿಗೊಬ್ಬರಿಗೆ ಬಾಯಿಗೆ ಬಂದಂತೆ ಮಾತನಾಡುವುದನ್ನು ರೂಢಿ ಮಾಡಿಕೊಂಡಿದ್ದರು. ಹಾಗಾಗಿ ಮನೆಯಲ್ಲಿ ವೈಯಕ್ತಿಕವಾಗಿ ಜಗಳ ಆಗುತ್ತಲೇ ಇತ್ತು. ಈ ಜಗಳವು ಕನ್ನಡಪರ (Kannada) ಸಂಘಟನೆಯ ಕಾರ್ಯಕರ್ತರನ್ನು ಕೆರಳಿಸುವಂತೆ ಮಾಡಿತ್ತು.

    ರೂಪೇಶ್ ರಾಜಣ್ಣ (Rupesh Rajanna) ಅವರ ಕನ್ನಡಪರ ಹೋರಾಟಗಳನ್ನು ಟೀಕಿಸುತ್ತಲೇ ಬಂದಿದ್ದ ಪ್ರಶಾಂತ್ ಸಂಬರ್ಗಿ (Prashant Sambargi), ಏಕಾಏಕಿ ಇತರ ಹೋರಾಟಗಾರರನ್ನು ನಿಂದಿಸಿದ್ದರು. ಯಾವ ಹೋರಾಟಗಾರರನ್ನು ಹೇಗೆ ಹತ್ತಿಕ್ಕಬೇಕು, ನೋಡಿಕೊಳ್ಳಬೇಕು ಎಂದು ನನಗೆ ಗೊತ್ತಿದೆ. ಎಷ್ಟೋ ಜನರನ್ನು ಮೂಲೆಗುಂಪು ಮಾಡಿದ್ದೇನೆ ಎನ್ನುವ ಅರ್ಥದಲ್ಲಿ ಮಾತನಾಡಿದ್ದರು. ಸಂಬರ್ಗಿ ಅವರ ಈ ಮಾತು ಕನ್ನಡಪರ ಹೋರಾಟಗಾರರನ್ನು ಕೆರಳಿಸಿತ್ತು. ಹೀಗಾಗಿಯೇ ಅನೇಕರು ವಾಹಿನಿಯ ಮುಂದೆ ಮತ್ತು ಬಿಗ್ ಬಾಸ್ ಶೂಟಿಂಗ್ ನಡೆಯುವ ಸ್ಥಳಕ್ಕೂ ಹೋಗಿ ಪ್ರತಿಭಟನೆ ಮಾಡಿದ್ದರು. ಇದನ್ನೂ ಓದಿ:ತಾಯ್ನಾಡಿಗೆ ಪ್ರಿಯಾಂಕಾ ಚೋಪ್ರಾ ಕಾಲಿಟ್ಟ ಬೆನ್ನಲ್ಲೇ ನಟಿಯ ವಿರುದ್ಧ ಗಂಭೀರ ಆರೋಪ

    ಹೋರಾಟಗಾರರ ಪ್ರತಿಭಟನೆ ತಾರಕಕ್ಕೇ ಏರುತ್ತಿದ್ದಂತೆಯೇ ವಾಹಿನಿ ಕೂಡ ಎಚ್ಚೆತ್ತುಕೊಂಡಿದೆ. ಬಿಗ್ ಬಾಸ್ ಮನೆಯಿಂದ ಸಂಬರ್ಗಿಯನ್ನು ಆಚೆ ಕರೆತರದಿದ್ದರೆ, ಅವರನ್ನು ಹೇಗೆ ಆಚೆ ಕರೆದುಕೊಂಡು ಬರಬೇಕು ಎನ್ನುವುದು ನಮಗೂ ಗೊತ್ತಿದೆ ಎಂದು ಹೋರಾಟಗಾರರು ಎಚ್ಚರಿಕೆಯನ್ನು ಕೊಟ್ಟಿದ್ದರು. ಈ ವಿಷಯವನ್ನು ಬಿಗ್ ಬಾಸ್ ಮನೆಯಲ್ಲಿರುವ ಸಂಬರ್ಗಿಗೆ ಮುಟ್ಟಿಸಲಾಗಿದೆ. ಹೀಗಾಗಿಯೇ ಸಂಬರ್ಗಿ ಕ್ಷಮೆ ಕೇಳಿದ್ದಾರೆ.

    ಬಿಗ್ ಬಾಸ್ ಕನ್ಪೆಷನ್ ರೂಂಗೆ ಸಂಬರ್ಗಿ ಕರೆಯಿಸಿಕೊಂಡು ಅಸಲಿ ವಿಚಾರವನ್ನು ಮುಂದಿಟ್ಟರು. ಅದನ್ನು ಕೇಳುತ್ತಿದ್ದಂತೆಯೇ ನಾನು ಆ ರೀತಿಯಲ್ಲಿ ಮಾತನಾಡಿಲ್ಲ, ಯಾರಿಗೂ ಅವಮಾನಿಸಿಲ್ಲ. ಹಾಗೆನಿಸಿದ್ದರೆ ಕ್ಷಮಿಸಿ ಎಂದು ಕಣ್ಣಿರಿಡುತ್ತಾ ಹೇಳಿದರು. ಆಡಿದ ಅಷ್ಟೂ ಮಾತುಗಳನ್ನು ನಾನು ಹಿಂಪಡೆಯುತ್ತೇನೆ. ಯಾವುದೇ ಕಾರಣಕ್ಕೂ ಯಾರನ್ನೂ ನೋಯಿಸುವ ಉದ್ದೇಶ ನನಗಿಲ್ಲ ಎಂದು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕ್ರಿಕೆಟಿಗ ರಿಷಭ್ ಪಂತ್ ಗೆ ನಾನು ಕ್ಷಮೆ ಕೇಳಿಲ್ಲ, ಕೇಳೋದು ಇಲ್ಲ: ನಟಿ ಊರ್ವಶಿ ರೌಟೇಲಾ

    ಕ್ರಿಕೆಟಿಗ ರಿಷಭ್ ಪಂತ್ ಗೆ ನಾನು ಕ್ಷಮೆ ಕೇಳಿಲ್ಲ, ಕೇಳೋದು ಇಲ್ಲ: ನಟಿ ಊರ್ವಶಿ ರೌಟೇಲಾ

    ಟೀಮ್ ಇಂಡಿಯಾ ಆಟಗಾರ (Cricket) ರಿಷಭ್ ಪಂತ್ ಮತ್ತು ನಟಿ ಊರ್ವಶಿ ರೌಟೇಲಾ (Urvashi Rautela) ನಡುವಿನ ಕೋಳಿ ಜಗಳ ಸದ್ಯಕ್ಕೆ ನಿಲ್ಲುವಂತೆ ಕಾಣುತ್ತಿಲ್ಲ. ಸೋಷಿಯಲ್ ಮೀಡಿಯಾ ಮೂಲಕವೇ ಇಬ್ಬರೂ ತಿಕ್ಕಾಟ ಶುರು ಮಾಡಿದ್ದಾರೆ. ಅವರೊಂದು ಬರೆದರೆ, ಇವರೊಂದು ಕೌಂಟರ್ ಕೊಡುತ್ತಾ ಅಭಿಮಾನಿಗಳಿಗಿಂತೂ ಸಖತ್ ಮಜಾ ನೀಡುತ್ತಿದ್ದಾರೆ.

    ಮೊದ ಮೊದಲು ಊರ್ವಶಿ ರೌಟೇಲಾ ಮತ್ತು ರಿಷಭ್ ಪಂತ್ (Rishabh Pant) ಡೇಟಿಂಗ್ ನಲ್ಲಿ ಇದ್ದಾರೆ ಎಂದು ಹೇಳಲಾಗಿತ್ತು. ಇಬ್ಬರೂ ಹಲವಾರು ಪಾರ್ಟಿಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡ ಬಗ್ಗೆಯೂ ಗಾಸಿಪ್ ಇದ್ದವು. ಆಗಾಗ್ಗೆ ಇಬ್ಬರೂ ಪಾರ್ಟಿ ಮಾಡುತ್ತಾರೆ ಎಂದು ಹೇಳಲಾಗಿತ್ತು. ಸಡನ್ನಾಗಿ ಸಂದರ್ಶನವೊಂದರಲ್ಲಿ ಊರ್ವಶಿ ಸತ್ಯವೊಂದನ್ನು ಹೇಳಿದ್ದರು. ಅದು ರಿಷಭ್ ಕೋಪಕ್ಕೆ ಕಾರಣವಾಗಿತ್ತು. ಇದನ್ನೂ ಓದಿ:ವಿಚಾರಣೆ ವೇಳೆ ‘ಬೆತ್ತಲೆ ಫೋಟೋ’ ನಂದಲ್ಲ ಎಂದ ಬಾಲಿವುಡ್ ನಟ ರಣವೀರ್ ಸಿಂಗ್

    ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ‘ರಿಷಭ್ ಪಂತ್ ನನ್ನನ್ನು ಭೇಟಿ ಮಾಡಲು 10 ಗಂಟೆ ಕಾದಿದ್ದರು’ ಎಂದು ಊರ್ವಶಿ ಹೇಳಿಕೊಂಡಿದ್ದರು. ನನಗಾಗಿ ಸ್ಟಾರ್ ಕ್ರಿಕೆಟಿಗ ಒಬ್ಬ ಅಷ್ಟೊಂದು ಹೊತ್ತು ಕಾದಿದ್ದ ಎಂದು ಹೇಳಿದ್ದರು.  ಅದಕ್ಕೆ ರಿಷಭ್ ಸಖತ್ ತಿರುಗೇಟು ಕೊಟ್ಟಿದ್ದರು. ಅಲ್ಲಿಂದ ಇಬ್ಬರ ಮಧ್ಯ ಕೋಲ್ಡ್ ವಾರ್ ಶುರುವಾಗಿತ್ತು. ಮೊನ್ನೆಯಷ್ಟೇ ತನ್ನ ಹೇಳಿಕೆಗಾಗಿ ಪಂತ್ ಅವರಲ್ಲಿ ಕ್ಷಮೆ (Kshame) ಕೇಳುತ್ತೇನೆ ಎನ್ನುವ ಸುದ್ದಿ ಕೂಡ ಆಗಿತ್ತು.

    ಆದರೆ, ಈ ಸುದ್ದಿಯನ್ನು ಊರ್ವಶಿ ನಿರಾಕರಿಸಿದ್ದಾರೆ. ಯಾವುದೇ ಕಾರಣಕ್ಕೂ ನಾನು ಕ್ಷಮೆ ಕೇಳಿಲ್ಲ. ಕೇಳಿರುವ ಕ್ಷಮೆ ರಿಷಭ್ ಪಂತ್ ಗೆ ಅಲ್ಲ. ನನ್ನ ಫ್ಯಾನ್ಸ್ ಗೆ (Fans) ಮತ್ತು ನನ್ನ ಆಪ್ತರಿಗೆ ಎಂದು ಮತ್ತೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ ಊರ್ವಶಿ. ಅಲ್ಲಿಗೆ ಈ ಜಗಳ ಮತ್ತೆ ಮುಂದುವರೆದಿದೆ. ಯಾವ ಹಂತ ಪಡೆದುಕೊಳ್ಳತ್ತೋ ಅವರಿಬ್ಬರಿಗೆ ಗೊತ್ತು.

    Live Tv
    [brid partner=56869869 player=32851 video=960834 autoplay=true]

  • ಮಾಧ್ಯಮ ಪ್ರತಿನಿಧಿಗಳಿಗೆ ಕ್ಷಮೆ ಕೇಳಿದ ಕಿಚ್ಚ ಸುದೀಪ್

    ಮಾಧ್ಯಮ ಪ್ರತಿನಿಧಿಗಳಿಗೆ ಕ್ಷಮೆ ಕೇಳಿದ ಕಿಚ್ಚ ಸುದೀಪ್

    ಅಂದುಕೊಂಡಂತೆ ಆಗಿದ್ದರೆ, ಇಂದಿನಿಂದ ಕಿಚ್ಚ ಸುದೀಪ್ ಚೆನ್ನೈ, ಕೊಚ್ಚಿ ಮತ್ತು ಹೈದರಾಬಾದ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಳ್ಳಬೇಕಿತ್ತು. ವಿಕ್ರಾಂತ್ ರೋಣ ಸಿನಿಮಾಗಾಗಿ ಹಮ್ಮಿಕೊಂಡಿದ್ದ ಈ ಮಾಧ್ಯಮ ಗೋಷ್ಠಿಯಲ್ಲಿ ಕಿಚ್ಚನ ಎದುರುಗೊಳ್ಳಲು ಮಾಧ್ಯಮ ಪ್ರತಿನಿಧಿಗಳು ಸಿದ್ಧರಾಗಿದ್ದಾರೆ. ಆದರೆ, ನಿನ್ನೆ ಸುದೀಪ್ ಅವರಿಗೆ ಜ್ವರ ಕಾಣಿಸಿಕೊಂಡಿದೆ. ಹಾಗಾಗಿ ಪತ್ರಿಕಾ ಗೋಷ್ಠಿಗಳನ್ನು ರದ್ದು ಮಾಡಿದ್ದಾರೆ. ಮಾಧ್ಯಮ ಪ್ರತಿನಿಧಿಗಳಿಗೆ ಟ್ವೀಟ್ ಮೂಲಕ ಕ್ಷಮೆ ಯಾಚಿಸಿದ್ದಾರೆ.

    ಪತ್ರಿಕಾಗೋಷ್ಠಿಯನ್ನು ರದ್ದುಗೊಳಿಸಿದ್ದಕ್ಕೆ ಕೊಚ್ಚಿ, ಚೆನ್ನೈ ಮತ್ತು ಹೈದರಾಬಾದ್ ಮಾಧ್ಯಮದ ಗೆಳೆಯರಿಗೆ ಕ್ಷಮೆ ಕೇಳುತ್ತೇನೆ. ಹುಷಾರಿಲ್ಲದ ಕಾರಣದಿಂದಾಗಿ ನನಗೆ ಪ್ರಯಾಣ ಮಾಡುವುದು  ಕಷ್ಟಸಾಧ್ಯ. ಹಾಗಾಗಿ ಬರಲಾಗುತ್ತಿಲ್ಲ. ಮುಂದಿನ ದಿನಗಳಲ್ಲಿ ಮತ್ತೆ ದಿನಾಂಕ ನಿಗದಿಪಡಿಸಿ, ನಿಮ್ಮೊಂದಿಗೆ ಮಾತನಾಡಲು ಉತ್ಸುಕನಾಗಿದ್ದೇನೆ. ಆದಷ್ಟು ಬೇಗ ಸಿಗೋಣ ಎಂದು ಕಿಚ್ಚ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ:ಮಗನ ಜೊತೆ ಮೊದಲ ಬಾರಿಗೆ ರೀಲ್ಸ್ ಮಾಡಿದ ಸಂಜನಾ ಗಲ್ರಾನಿ

    ನಿನ್ನೆ ಸುದೀಪ್ ಅವರಿಗೆ ಕೋವಿಡ್ ಪಾಸಿಟಿವ್ ಆಗಿದೆ ಎಂದು ಸುದ್ದಿ ಆಗಿತ್ತು. ತಕ್ಷಣವೇ ವಿಕ್ರಾಂತ್ ರೋಣ ಸಿನಿಮಾ ನಿರ್ಮಾಪಕ ಜಾಕ್ ಮಂಜು, ಈ ಕುರಿತು ಸ್ಪಷ್ಟನೆ ನೀಡಿ, ಅವರಿಗೆ ಜ್ವರ ಬಂದಿದೆ ಅಷ್ಟೇ ಕೋವಿಡ್ ಸೋಂಕು ತಗುಲಿಲ್ಲ ಎಂದು ವಿಡಿಯೋ ಮೂಲಕ ಸ್ಪಷ್ಟನೆ ನೀಡಿದರು. ಬೇಗ ಚೇತರಿಸಿಕೊಳ್ಳಲಿದ್ದಾರೆ ಎಂದು ಹೇಳಿದ್ದರು. ಇದೀಗ ಕಿಚ್ಚನ ಆರೋಗ್ಯ ಸುಧಾರಿಸುತ್ತಿದ್ದು, ಮತ್ತೆ ಅತೀ ಶೀಘ್ರದಲ್ಲೇ ಸಿನಿಮಾ ಪ್ರಚಾರದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ ಎಂದಿದ್ದಾರೆ.

    Live Tv
    [brid partner=56869869 player=32851 video=960834 autoplay=true]