Tag: KSIC

  • ರೇಷ್ಮೆ ಉತ್ಪಾದನೆ ದ್ವಿಗುಣಗೊಳಿಸಿ, ಮಾರುಕಟ್ಟೆ ವಿಸ್ತರಿಸಿ: ಡಾ. ನಾರಾಯಣಗೌಡ

    ರೇಷ್ಮೆ ಉತ್ಪಾದನೆ ದ್ವಿಗುಣಗೊಳಿಸಿ, ಮಾರುಕಟ್ಟೆ ವಿಸ್ತರಿಸಿ: ಡಾ. ನಾರಾಯಣಗೌಡ

    ಬೆಂಗಳೂರು: ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮದಲ್ಲಿ (ಕೆಎಸ್‍ಐಸಿ) ವಹಿವಾಟು ವಿಸ್ತರಣೆಗೆ ಕ್ರಮವಹಿಸಿ, ಉತ್ಪಾದನೆಯನ್ನು ದ್ವಿಗುಣಗೊಳಿಸಲು ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಹಾಗೂ ಹಾಲಿ ಇರುವ ನೌಕರರನ್ನೇ ಬಳಸಿಕೊಂಡು, ಮಾರುಕಟ್ಟೆ ವಿಸ್ತರಣೆಗೆ ಕ್ರಮ ವಹಿಸಬೇಕು ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ನಾರಾಯಣಗೌಡ ಸೂಚಿಸಿದ್ದಾರೆ.

    ವಿಕಾಸಸೌಧದಲ್ಲಿ ಇಂದು ನಡೆಸಿದ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಕೆಎಸ್‍ಐಸಿ ಯಲ್ಲಿನ ಅಧಿಕಾರಿಗಳ ಕಾರ್ಯವೈಖರಿಗೆ ಪ್ರಶ್ನಿಸಿ ತರಾಟೆ ತೆಗೆದುಕೊಂಡರು. ಈ ಹಿಂದೆಯೇ ಕೆಎಸ್‍ಎಮ್‍ಬಿ ಇಂದ ಕಚ್ಚಾ ರೇಷ್ಮೆ ಖರೀದಿಸಬೇಕು ಎಂದು ಕೆ.ಎಸ್.ಐ.ಸಿ.ಗೆ ಸೂಚನೆ ನೀಡಲಾಗಿತ್ತು. ಆದರೆ ಇಲ್ಲದ ನೆಪವೊಡ್ಡಿ ಕೆಎಸ್‍ಎಂಬಿಯಿಂದ ಖರೀದಿಸದೆ ಖಾಸಗಿಯವರಿಂದ ಖರೀದಿಸುತ್ತಿದ್ದಾರೆ. ಇನ್ನು ಮುಂದೆ ಅಗತ್ಯವಿರುವ ಕಚ್ಚಾ ರೇಷ್ಮೆಯನ್ನು ಕೆಎಸ್‍ಎಂಬಿ ಖರೀದಿಸಬೇಕು ಎಂದು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. ಇದನ್ನೂ ಓದಿ: ಕಾಂಗ್ರೆಸ್ ಸೇರ್ಪಡೆಗೆ ಎಷ್ಟು ಜನ ಆಸಕ್ತರು ಎಂದು ಹೇಳಲ್ಲ: ಡಿಕೆಶಿ

    ಖಾಸಗಿಯವರಿಗೆ ಸ್ಪರ್ಧೆ ನೀಡುವ ರೀತಿಯಲ್ಲಿ ಕೆಎಸ್‍ಐಸಿ ಮಾರ್ಕೆಟಿಂಗ್ ಮಾಡುವ ಕೆಲಸ ಮಾಡುತ್ತಿಲ್ಲ. ಮಾರುಕಟ್ಟೆ ನಿರ್ವಹಣೆಗೆ ಜವಾಬ್ದಾರಿ ವಹಿಸಿ ಒಬ್ಬರನ್ನು ನೇಮಿಸಬೇಕು. ಮಾರುಕಟ್ಟೆ ವಿಸ್ತರಣೆ ಆಗಬೇಕು. ಲಕ್ಷಾಂತರ ರೂಪಾಯಿ ಬೆಲೆಬಾಳುವ ರೇಷ್ಮೆ ಸೀರೆಯನ್ನು ಖರೀದಿಸಿದವರಿಗೆ ಅತ್ಯುತ್ತಮವಾದ ಬ್ಯಾಗ್ ಅಥವಾ ಸೂಟ್‍ಕೇಸ್‍ನಲ್ಲಿ ಸೀರೆಯನ್ನು ಹಾಕಿ ಕೊಡಬೇಕು. ಗುಣಮಟ್ಟದ ಮತ್ತು ಆಕರ್ಷಕ ರೀತಿಯ ಮಾರ್ಕೆಟಿಂಗ್ ಅತಿ ಮುಖ್ಯ ಎಂದು ಹೇಳಿದರು.

    ಮಾರ್ಕೆಟಿಂಗ್ ಜೊತೆಗೆ ಹೊಸ ಹೊಸ ಡಿಸೈನ್ಸ್ ಕೂಡ ಬರಬೇಕು. ಅದಕ್ಕಾಗಿ ಓರ್ವ ಡಿಸೈನರ್ ನೇಮಿಸಿ ಅಥವಾ ಇಲಾಖೆಯಲ್ಲಿ ಇರುವವರಿಗೆ ಆ ಜವಾಬ್ದಾರಿ ನೀಡಬೇಕು. ಮೈಸೂರು ರೇಷ್ಮೆ ಬೇಡಿಕೆ ಇದೆ. ಆದರೆ ಉತ್ಪಾದನೆ ಕಡಿಮೆ ಪ್ರಮಾಣದಲ್ಲಿದೆ. ಎರಡು ಪಾಳಿಯಲ್ಲಿ ಕೆಲಸ ಮಾಡುವ ಮೂಲಕ, ಉತ್ಪಾದನೆಯನ್ನು ದ್ವಿಗುಣಗೊಳಿಸುವ ಕೆಲಸ ಮಾಡಬೇಕು. ಅದಕ್ಕಾಗಿ ಯುನಿಯನ್ ಲೀಡರ್‍ಗಳ ಜೊತೆ ಸಭೆ ಕರೆದು ಚರ್ಚೆ ನಡೆಸಬೇಕು. ರೇಷ್ಮೆ ಸೀರೆ ಎಲ್ಲಾ ವರ್ಗದವರಿಗೆ ಸಿಗುವ ಹಾಗೆ ವಿವಿಧ ಗುಣಮಟ್ಟದಲ್ಲಿ ಸಿದ್ಧಪಡಿಸಬೇಕು ಎಂದು ಹೇಳಿದರು. ಇದನ್ನೂ ಓದಿ: ಜೆಡಿಎಸ್‍ನದ್ದು ಮಿಷನ್ 123, ಬಿಜೆಪಿ 150, ನಮ್ಮದು 224: ಡಿಕೆಶಿ

     

    ರೇಷ್ಮೆ ನೂಲು ತೆಗೆಯುವ ಯಂತ್ರ ಹಾಸನ, ಬೆಳಗಾವಿ, ಗುಲ್ಬರ್ಗ, ಕೂಡ್ಲಗಿಯಲ್ಲಿ ಬಳಕೆಯಾಗದೆ ನಿರುಪಯುಕ್ತವಾಗಿ ಬಿದ್ದಿದೆ. ಅದನ್ನು ಸರಿಪಡಿಸಿ ಮೈಸೂರು, ಕನಕಪುರ, ಚನ್ನಪಟ್ಟಣ ಹಾಗೂ ಟಿ.ನರಸಿಪುರದಲ್ಲಿರುವ ಕೆಎಸ್‍ಐಸಿಯ ಘಟಕಗಳಿಗೆ ತರಬೇಕು. ದುರಸ್ತಿ ಮಾಡಿ ಆ ಯಂತ್ರಗಳನ್ನು ಬಳಕೆ ಮಾಡಿಕೊಳ್ಳಬೇಕು. ಅನುಪಯುಕ್ತ ರೇಷ್ಮೆಯನ್ನು ಸರಿಯಾದ ರೀತಿಯಲ್ಲಿ ಹರಾಜು ಮಾಡದಿರುವುದು ಗಮನಕ್ಕೆ ಬಂದಿದೆ. ಇ ಟೆಂಡರ್ ಮೂಲಕವೇ ಎಲ್ಲವನ್ನೂ ಹರಾಜು ಹಾಕಬೇಕು ಎಂದು ಸೂಚಿಸಿದರು.

    ಬೆಂಗಳೂರು ಹಾಗೂ ದೆಹಲಿ ವಿಮಾನ ನಿಲ್ದಾಣದಲ್ಲಿ ರೇಷ್ಮೆ ಉತ್ಪಾದನಾ ಮಾರಾಟ ಮಳಿಗೆ ಶೀಘ್ರವೇ ತೆರೆಯಬೇಕು. ಅದಕ್ಕಾಗಿ ಮುಖ್ಯಕಾರ್ಯದರ್ಶಿಯವರ ನೇತೃತ್ವದಲ್ಲಿ ಅಧಿಕಾರಿಗಳು ಸಭೆ ನಡೆಸಬೇಕು. ಮುಂಬೈನಲ್ಲಿ ಅತಿ ಹೆಚ್ಚು ಕನ್ನಡಿಗರು ಇರುವ ದಾದರ ಹಾಗೂ ಮಾಟುಂಗಾ ಪ್ರದೇಶದಲ್ಲಿ ಮಳಿಗೆ ಆರಂಭಿಸುವ ಬಗ್ಗೆ ಪರಿಶೀಲಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು. ಹುಬ್ಬಳ್ಳಿಯಲ್ಲಿ ರೇಷ್ಮೆ ಟೆಸ್ಟಿಂಗ್ ಲ್ಯಾಬ್, ಗುಲ್ಬರ್ಗದಲ್ಲಿ ಪರ್ಚೇಸಿಂಗ್ ಸೆಂಟರ್, ಸ್ಥಾಪಿಸುವ ಸಂಬಂಧ ಸಚಿವರು ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು.

    ರೇಷ್ಮೆ ಬೆಳೆಗೆ ತ್ರಿಪ್ಸ್ ಅಂಡ್ ಮೈಟ್ಸ್ ಕೀಟದ ಬಾಧೆ ಕೆಲವು ಕಡೆಗಳಲ್ಲಿ ಶುರುವಾಗಿದೆ. ಅಂತಹ ಸ್ಥಳಗಳನ್ನು ಗುರುತಿಸಿ ಇಲಾಖೆಯಿಂದಲೇ ಔಷಧಿ ಸಿಂಪಡಿಸುವ ಕೆಲಸ ವಾರದೊಳಗೆ ಮಾಡಬೇಕು ಎಂದು ನಾರಾಯಣಗೌಡ ಹೇಳಿದರು.

    ನಿನ್ನೆ ಶಿವಮೊಗ್ಗದ ಕಾಚಿನಕಟ್ಟೆಯಲ್ಲಿ ರೈತರೊಂದಿಗೆ ಸಂವಾದ ನಡೆಸಿದರು. ರೈತರು ರೇಷ್ಮೆಗೆ ತ್ರಿಪ್ಸ್ ಅಂಡ್ ಮೈಟ್ಸ್ ಕೀಟದಿಂದ ಸಮಸ್ಯೆ ಆಗುತ್ತಿದೆ ಎಂದು ತಮ್ಮ ಅಳಲನ್ನು ತೋಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ರೇಷ್ಮೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಆಯುಕ್ತ ಪೆದ್ದಪ್ಪಯ್ಯ ಅವರಿಗೆ ರೈತರ ಸಚಿವರು ಸೂಚನೆ ನೀಡಿದರು.

    ಶಿವಮೊಗ್ಗ ಹಾಗೂ ದಾವಣೆಗೆರೆ ಭಾಗದ ರೇಷ್ಮೆ ಬೆಳೆಗಾರರು ರೇಷ್ಮೆ ಗೂಡನ್ನು ಮಾರುಕಟ್ಟೆಗೆ ಸಾಗಿಸುವಾಗ ಪೆÇಲೀಸರು ಹಾಗೂ ದಲ್ಲಾಳಿಗಳಿಂದ ಕಿರಿಕಿರಿ ಆಗುತ್ತಿದೆ. ವಿನಾಕಾರಣ ತಪಾಸಣೆ ನೆಪದಲ್ಲಿ ತೊಂದರೆ ಅನುಭವಿಸುತ್ತಿದ್ದಾರೆ. ಈ ಸಮಸ್ಯೆಗಳಿಂದ ಮುಕ್ತಿ ನೀಡಿ ಎಂದು ರೈತರು ನಿನ್ನೆ ಶಿವಮೊಗ್ಗದಲ್ಲಿ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ವಿಶೇಷ ಐಡಿ ಕಾರ್ಡ್ ನೀಡುವ ಭರವಸೆ ಕೊಟ್ಟಿದ್ದ ಸಚಿವರು, ಇಂದು ಆಯುಕ್ತರಿಗೆ ತಕ್ಷಣ ವಿಶೇಷ ಗುರುತಿನ ಚೀಟಿ ಮಾಡಿ ರೈತರಿಗೆ ನೀಡಬೇಕು ಎಂದು ಸೂಚಿಸಿದರು.

    ಈ ವಿಚಾರದಲ್ಲಿ ದೂರು ಬರಬಾರದು. ಅಲ್ಲದೆ ಈ ಮೊದಲು ಶಿವಮೊಗ್ಗ, ದಾವಣಗೆರೆಯ ರೈತರು ಮಾರುಕಟ್ಟೆಗೆ ರೇಷ್ಮೆ ತಂದಾಗ ಪ್ರತಿ ಕೆ.ಜಿ.ಗೆ 10 ರೂಪಾಯಿ ಸಾರಿಗೆ ವೆಚ್ಚ ನೀಡಲಾಗುತ್ತಿತ್ತು. ಈಗ ಅದನ್ನು ನಿಲ್ಲಿಸಿದ್ದಾರೆ. ಇದರಿಂದ ರೈತರಿಗೆ ನಷ್ಟವಾಗುತ್ತಿದೆ. ತಕ್ಷಣವೇ ಸಾರಿಗೆ ವೆಚ್ಚ ಪ್ರತಿ ಕೆಜಿಗೆ 10 ರೂ. ನೀಡುವುದನ್ನು ಪುನಾರಂಭಿಸಬೇಕು. ರೇಷ್ಮೆ ಇಲಾಖೆ ಆಯುಕ್ತರು ಈ ಬಗ್ಗೆ ಕ್ರಮ ವಹಿಸಿ ಮಾಹಿತಿ ನೀಡಬೇಕು ಎಂದು ಸಚಿವರು ಸೂಚಿಸಿದರು.

  • ಕಳ್ಳಾಟ ಆಡಿದ್ರೆ ಬಂಧೀಖಾನೆ ನೋಡೋಕೆ ಕಳಿಸ್ತೀನಿ- ಅಧಿಕಾರಿಗೆ ಸೋಮಣ್ಣ ಕ್ಲಾಸ್

    ಕಳ್ಳಾಟ ಆಡಿದ್ರೆ ಬಂಧೀಖಾನೆ ನೋಡೋಕೆ ಕಳಿಸ್ತೀನಿ- ಅಧಿಕಾರಿಗೆ ಸೋಮಣ್ಣ ಕ್ಲಾಸ್

    ಮೈಸೂರು: ಸರಿಯಾಗಿ ಕೆಲಸ ಮಾಡದಿದ್ದರೆ ಬಂಧೀಖಾನೆ ಹೇಗಿದೆ ಅಂತ ನೋಡೋಕೆ ಕಳುಹಿಸುತ್ತೇನೆ ಎಂದು ರೇಷ್ಮೆ ಸಚಿವ ವಿ. ಸೋಮಣ್ಣ ಅವರು ಕೆಎಸ್‌ಐಸಿ ಜನರಲ್ ಮ್ಯಾನೇಜರ್‌ಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

    ಮೈಸೂರಿನ ಕರ್ನಾಟಕ ಸಿಲ್ಕ್ ಇಂಡಸ್ಟ್ರೀಸ್ ಕಾರ್ಪೊರೇಷನ್ ಲಿಮಿಟೆಡ್‌ಗೆ(ಕೆಎಸ್‌ಐಸಿ) ಸಚಿವ ಸೋಮಣ್ಣ, ಸಂಸದ ಪ್ರತಾಪ್ ಸಿಂಹ ಅವರು ಭೇಟಿ ಕೊಟ್ಟಿದ್ದರು. ಈ ವೇಳೆ ಅಲ್ಲಿನ ಅವ್ಯವಸ್ಥೆ, ನೌಕಕರರ ಸಮಸ್ಯೆ ಕೇಳಿ ಸೋಮಣ್ಣ ಅವರು ಸಿಟ್ಟಾದರು. ನೌಕರರ ಮುಂದೆಯೇ ಜನರಲ್ ಮ್ಯಾನೇಜರ್ ಕೃಷ್ಣ ಅವರನ್ನು ತರಾಟೆಗೆ ತೆಗೆದುಕೊಂಡರು.

    ‘ನೀ ಬಾರೀ ಕಿಲಾಡಿ ಇದ್ದೀಯಾ. ಒಂದು ಹೇಳ್ತೀನಿ ಕೇಳು, ನಾನು ಏನ್ಮಾಡೋಕೂ ತಯಾರಿದ್ದೇನೆ. ನಿನ್ನಾಟ ನನ್ನ ಹತ್ತಿರ ನಡೆಯಲ್ಲ. ಕೇಳಿಲ್ಲಿ, ನಾನು ಫಸ್ಟ್ 1994-95 ಬಂಧೀಖಾನೆ ಮಂತ್ರಿಯಾಗಿದ್ದೆ. ಸರಿಯಾಗಿ ಕೆಲಸ ಮಾಡದೇ ಇದ್ದರೆ ಬಂಧೀಖಾನೆ ಹೇಗಿದೆ ಅಂತ ನೋಡಿಕೊಂಡು ಬರೋಕೆ ಕಳುಹಿಸುತ್ತೇನೆ’ ಎಂದು ಜನರಲ್ ಮ್ಯಾನೇಜರ್‌ಗೆ ಎಚ್ಚರಿಕೆ ಕೊಟ್ಟರು.

    ಇಲ್ಲಿನ ನೌಕರರ ಸಮಸ್ಯೆ ಬಗೆಹರಿಯಬೇಕು, ಉತ್ಪಾದನೆ ಜಾಸ್ತಿ ಆಗಬೇಕು ಅಷ್ಟೆ. ಯಾವ ಕಳ್ಳಾಟ ನಡೆಯೋಕೆ ಬಿಡಲ್ಲ ಎಂದು ಖಡಕ್ ಆಗಿ ಸಚಿವರು ಎಚ್ಚರಿಸಿದರು. ಬಳಿಕ ನೌಕರರ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.