Tag: KSNDMC

  • ಕರುನಾಡಿಗೆ ಬಿಗ್ ಶಾಕ್, ಡ್ಯಾಂ ನೀರಿನ ಮಟ್ಟ ಭಾರೀ ಕುಸಿತ – ಕಳೆದ ವರ್ಷ ಎಷ್ಟಿತ್ತು? ಈ ಬಾರಿ ಎಷ್ಟಿದೆ?

    ಕರುನಾಡಿಗೆ ಬಿಗ್ ಶಾಕ್, ಡ್ಯಾಂ ನೀರಿನ ಮಟ್ಟ ಭಾರೀ ಕುಸಿತ – ಕಳೆದ ವರ್ಷ ಎಷ್ಟಿತ್ತು? ಈ ಬಾರಿ ಎಷ್ಟಿದೆ?

    ಬೆಂಗಳೂರು: ರಾಜ್ಯದ ಜಲಾಶಯಗಳ (Karnataka Dam) ನೀರಿನ ಮಟ್ಟ ಭಾರೀ ಕುಸಿತಗೊಂಡಿದ್ದು, ಮಳೆ (Rain) ಬಾರದೇ ಇದ್ದರೆ ಈ ಬಾರಿ ಬೇಸಿಗೆಯಲ್ಲಿ ನೀರಿಗೆ ಸಮಸ್ಯೆಯಾಗುವುದು (Water Scarcity) ಖಚಿತ.

    ಹೌದು ಕಳೆದ ಬಾರಿ ಹೋಲಿಕೆ ಮಾಡಿದರೆ ಜಲಾಶಯಗಳ ನೀರಿನ ಮಟ್ಟ 42% ಕುಸಿತಗೊಂಡಿದೆ. ಕಳೆದ ವರ್ಷದ ಜ.11 ರಂದು ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹಾಗೂ ಈ ವರ್ಷದ ನೀರಿನ ಮಟ್ಟದ ಹೋಲಿಕೆ ಮಾಡಿ ಕರ್ನಾಟಕ ಪ್ರಾಕೃತಿಕ ವಿಕೋಪ ನಿರ್ವಹಣಾ ಕೇಂದ್ರದಿಂದ (KSNDMC) ದಾಖಲೆ ಬಿಡುಗಡೆ ಮಾಡಿದೆ.  ಇದನ್ನೂ ಓದಿ: ರಾಮಮಂದಿರ ಪ್ರಾಣಪ್ರತಿಷ್ಠೆಗೆ 55 ರಾಷ್ಟ್ರಗಳ 100ಕ್ಕೂ ಹೆಚ್ಚು ಗಣ್ಯರಿಗೆ ಆಹ್ವಾನ – ಯಾವ್ಯಾವ ದೇಶಕ್ಕೆ ಆಮಂತ್ರಣ?

    ಒಟ್ಟು 895 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯ ರಾಜ್ಯದ ಜಲಾಶಯಗಳಿಗಿದೆ. ಸದ್ಯ ಈಗ 378 ಟಿಎಂಸಿ ನೀರು ಸಂಗ್ರಹವಿದೆ. ಕಳೆದ ವರ್ಷ ಈ ಅವಧಿಯಲ್ಲಿ ಬರೋಬ್ಬರಿ 619 ಟಿಎಂಸಿ ನೀರಿನ ಸಂಗ್ರಹವಿತ್ತು. ಕೆಲವೊಂದು ಜಲಾಶಯಗಳು 69% ರಷ್ಟು ನೀರಿನ ಕೊರತೆಯನ್ನು ಎದುರಿಸುತ್ತಿದೆ ಎಂದು ಹೇಳಿದೆ. ಇದನ್ನೂ ಓದಿ:ಮೇಯರ್‌ ಚುನಾವಣೆ : ಮಾಲ್ಡೀವ್ಸ್‌ ಆಡಳಿತ ಪಕ್ಷಕ್ಕೆ ಹೀನಾಯ ಸೋಲು – ಭಾರತದ ಪರ ಪಕ್ಷಕ್ಕೆ ಭರ್ಜರಿ ಜಯ

    ಕಳೆದ ವರ್ಷ ಲಿಂಗನಮಕ್ಕಿ ಜಲಾಶಯದಲ್ಲಿ 95.19 ಟಿಎಂಸಿ ನೀರಿದ್ದರೆ ಈ ಬಾರಿ 52.98 ಟಿಎಂಸಿ ನೀರು ಸಂಗ್ರಹವಾಗಿದೆ. ಕೆಎಆರ್‌ಎಸ್‌ನಲ್ಲಿ ಕಳೆದ ವರ್ಷ 41.13 ಟಿಎಂಸಿ ನೀರಿದ್ದರೆ ಈ ಬಾರಿ 19.81 ಟಿಂಎಂಸಿ ನೀರು ಸಂಗ್ರಹವಾಗಿದೆ.

    ಆಲಮಟ್ಟಿಯಲ್ಲಿ 2023ರಲ್ಲಿ87.23 ಟಿಎಂಸಿ ಇದ್ದರೆ ಈ ಬಾರಿ 54.76 ಟಿಎಂಸಿ ನೀರು ಸಂಗ್ರಹವಾಗಿದೆ. ತುಂಗಾಭದ್ರ ಜಲಾಶಯದಲ್ಲಿ ಕಳೆದ ವರ್ಷ 67.75 ಟಿಎಂಸಿ ನೀರಿದ್ದರೆ ಈ ಬಾರಿ 10.20 ಟಿಎಂಸಿ ನೀರು ಸಂಗ್ರಹವಾಗಿದೆ.

     

  • ಹೊಳೆನರಸೀಪುರ ತಾಲೂಕಿನಲ್ಲಿ 3.4 ತೀವ್ರತೆಯ ಭೂಕಂಪ – ಭಯಪಡುವ ಅಗತ್ಯವಿಲ್ಲ ಎಂದ KSNDMC

    ಹೊಳೆನರಸೀಪುರ ತಾಲೂಕಿನಲ್ಲಿ 3.4 ತೀವ್ರತೆಯ ಭೂಕಂಪ – ಭಯಪಡುವ ಅಗತ್ಯವಿಲ್ಲ ಎಂದ KSNDMC

    ಬೆಂಗಳೂರು: ಹಾಸನ ಜಿಲ್ಲೆಯ ಹಲವೆಡೆ ಬೆಳಗಿನ ಜಾವ 4:30ರ ಸುಮಾರಿಗೆ 3.4 ತೀವ್ರತೆಯ ಕಂಪನವಾಗಿದೆ ಎಂದು ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ(ಕೆಸ್‍ಎನ್‍ಡಿಎಂಸಿ) ಅಧಿಕೃತವಾಗಿ ತಿಳಿಸಿದೆ.

    ಇಂದು ಬೆಳಗ್ಗೆ ಹಾಸನದ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದ್ದು ಜನ ಭಯಭೀತರಾಗಿದ್ದರು. ಹೊಳೇನರಸಿಪುರ, ಅರಕಲಗೂಡು, ಹಾಸನ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಭೂಮಿ ಕಂಪಿಸಿತ್ತು. ಇದನ್ನೂ ಓದಿ:  ಹಾಸನ, ಅರಕಲಗೂಡು, ಹೊಳೆನರಸೀಪುರ ತಾಲೂಕಿನಲ್ಲಿ ಕಂಪಿಸಿದ ಭೂಮಿ – ಜನರಲ್ಲಿ ತೀವ್ರ ಆತಂಕ

    ಹೇಳಿಕೆಯಲ್ಲಿ ಏನಿದೆ?
    ಹೊಳೆನರಸೀಪುರ ತಾಲೂಕಿನ ಮಲುಗನಹಳ್ಳಿ ಗ್ರಾಮ ಕಂಪನದ ಕೇಂದ್ರಬಿಂದು ಆಗಿದ್ದು ಭೂಮಿ ಅಡಿ 0.800 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ. ಮಧ್ಯಮ ಕ್ರಮಾಂಕ ಕಂಪನ ಇದಾಗಿದ್ದು ಕೇಂದ್ರ ಬಿಂದುವಿನ 40-50 ಕಿ.ಮೀ ವ್ಯಾಪ್ತಿಯ ಪ್ರದೇಶದಲ್ಲಿ ಕಂಪನದ ಅನುಭವವಾಗಿದೆ. ಇದನ್ನೂ ಓದಿ: ಅರ್ಚಕನ ಜೊತೆ ಪರಾರಿಯಾಗಿದ್ದ ವಿವಾಹಿತೆ ಕಾಡಂಚಿನಲ್ಲಿ ಪ್ರತ್ಯಕ್ಷ – ಮದ್ವೆಯಾಗೋದಾಗಿ ನಂಬಿಸಿ ಮೋಸ

    ಈ ಭೂಕಂಪನದಿಂದ ಯಾವುದೇ ಹಾನಿಯಾಗುವುದಿಲ್ಲ. ಸೆಸ್ಮಿಕ್ ವಲಯ 2ರಲ್ಲಿ ಈ ಜಾಗ ಬರುವುದರಿಂದ ಹಾನಿಯ ಸಾಧ್ಯತೆ ಕಡಿಮೆ. ಜನತೆ ಭಯಪಡುವ ಅಗತ್ಯವಿಲ್ಲ ಎಂದು ಕೆಎಸ್‍ಎನ್‍ಡಿಎಂಸಿ ತಿಳಿಸಿದೆ.

    ಭೂಮಿ ಕಂಪನವಾದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಮನೆಯಿಂದ ಜೀವ ಭಯದಲ್ಲಿ ಹೊರಬಂದಿದ್ದಾರೆ. ಸುಮಾರು 6 ಸೆಕೆಂಡ್ ಭೂಮಿ ಕಂಪಿಸಿದ ಅನುಭವವಾಗಿ, ಮಲಗಿದ್ದವರು ಮಕ್ಕಳೊಂದಿಗೆ ಹೊರಬಂದು ರಸ್ತೆಯಲ್ಲಿ ನಿಂತಿದ್ದಾರೆ.

    ಹೊಳೇನರಸಿಪುರ ತಾಲೂಕಿನ ಬೆಟ್ಟದ ಸಾತನಹಳ್ಳಿ, ಹಳ್ಳಿ ಮೈಸೂರು, ಕಲ್ಲಹಳ್ಳಿ, ದಾಳಗೌಡನಹಳ್ಳಿ, ದೊಡ್ಡ ಕಾಡನೂರು, ಪೂಜೆ ಕೊಪ್ಪಲು, ಮಾಕವಳ್ಳಿ, ತೇಜೂರು, ಗೋಹಳ್ಳಿ, ಕುರಿ ಕಾವಲು, ಓಡನಹಳ್ಳಿ, ನಿಡುವಣಿ, ಅರಕಲಗೂಡು ತಾಲೂಕಿನ ಬೆಳವಾಡಿ, ಹೊಳೆನರಸೀಪುರ ಪಟ್ಟಣದ ಚಿಟ್ಟನಹಳ್ಳಿ ಬಡಾವಣೆ, ನರಸಿಂಹನಾಯಕ ನಗರ ನಗರ, ಹೌಸಿಂಗ್ ಬೋರ್ಡ್, ಸೇರಿದಂತೆ ತಾಲೂಕಿನ ಹಲವೆಡೆ ಭೂಮಿ ಕಂಪನವಾಗಿದೆ.

    ಭೂಮಿ ಕಂಪಿಸಿದ ಹಿನ್ನೆಲೆಯಲ್ಲಿ ಮನೆಯಲ್ಲಿದ್ದ ಪಾತ್ರೆಗಳು ಹಾಗೂ ಮನೆಯ ಎಲ್ಲಾ ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ. ಕೆಲವು ವಸ್ತುಗಳು ಕಂಪನದ ಹಿನ್ನೆಲೆಯಲ್ಲಿ ಒಡೆದು ಹೋಗಿದೆ.

    Live Tv

  • ಕರಾವಳಿ, ಮಲೆನಾಡು ಭಾಗಗಳಲ್ಲಿ ಇಂದು ರಾತ್ರಿ ಭಾರೀ ಮಳೆ ಸಾಧ್ಯತೆ- ಶ್ರೀನಿವಾಸ್ ರೆಡ್ಡಿ

    ಕರಾವಳಿ, ಮಲೆನಾಡು ಭಾಗಗಳಲ್ಲಿ ಇಂದು ರಾತ್ರಿ ಭಾರೀ ಮಳೆ ಸಾಧ್ಯತೆ- ಶ್ರೀನಿವಾಸ್ ರೆಡ್ಡಿ

    ಬೆಂಗಳೂರು: ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಇಂದು ರಾತ್ರಿಯೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ(ಕೆಎಸ್‍ಎನ್‍ಡಿಎಂಸಿ)ದ ನಿರ್ದೇಶಕ ಡಾ.ಶ್ರೀನಿವಾಸ್ ರೆಡ್ಡಿ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ರಾತ್ರಿ ಭಾರೀ ಮಳೆಯಾಗುವ ಮನ್ಸೂಚನೆ ಇದೆ. ಕಳೆದ 60 ವರ್ಷಗಳಿಗೆ ಹೋಲಿಸಿದರೆ, ರಾಜ್ಯದಲ್ಲಿ ಪ್ರಸ್ತುತ ಬರುತ್ತಿರುವುದು ಅತ್ಯಧಿಕ ಮಳೆಯಾಗಿದೆ. ಬೆಳಗಾವಿಯಲ್ಲಿ ವಾಡಿಕೆಗಿಂತ ಶೇ.65ರಷ್ಟು ಹೆಚ್ಚು ಮಳೆಯಾಗಿದೆ. ಕಳೆದ 60 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಹಾವೇರಿ ಜಿಲ್ಲೆಯಲ್ಲಿ ದಾಖಲೆಯ ಪ್ರಮಾಣದಲ್ಲಿ ಮಳೆಯಾಗಿದೆ ಎಂದು ತಿಳಿಸಿದರು.

    ಮಲೆನಾಡು ಭಾಗದ ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಹಲವೆಡೆ ಹೆಚ್ಚು ಮಳೆಯಾಗಿದೆ. ಆದರೆ, ನಾಳೆಯಿಂದ ಬೆಳಗಾವಿ ಸೇರಿದಂತೆ ರಾಜ್ಯದ ಎಲ್ಲ ಕಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಈಗಾಗಲೇ ಮಳೆಯ ಪ್ರಮಾಣ ಕಡಿಮೆಯಾಗುತ್ತಾ ಬರುತ್ತಿದೆ. ಆದರೆ, ರಾಜ್ಯದಲ್ಲಾಗುತ್ತಿರುವ ಮಳೆ ಕೇರಳದ ಕಡೆ ತಿರುಗಿಕೊಂಡಿದ್ದು, ಮುಂದಿನ ದಿನಗಳಲ್ಲಿ ಕೇರಳ ಭಾಗದಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇರುವುದಾಗಿ ಮಾಹಿತಿ ನೀಡಿದರು.

    ಜೂನ್, ಜುಲೈ ತಿಂಗಳ ಅಂತ್ಯಕ್ಕೆ ರಾಜ್ಯದಲ್ಲಿ ಶೇ.18 ರಷ್ಟು ಮಳೆ ಕೊರತೆ ಉಂಟಾಗಿತ್ತು. ಆದರೆ, ಕಳೆದ 10 ದಿನಗಳಲ್ಲಿ ಸುರಿದ ಮಳೆಯಿಂದಾಗಿ ವಾಡಿಕೆಗಿಂತ ಶೇ.13 ರಷ್ಟು ಹೆಚ್ಚು ಮಳೆಯಾಗಿದೆ. ಆಗಸ್ಟ್ ತಿಂಗಳಲ್ಲಿ ಮಳೆಯ ಪ್ರಮಾಣ ನೋಡಿದಲ್ಲಿ ರಾಜ್ಯದ 24 ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಿದೆ. ಆದರೆ, ರಾಜ್ಯದಲ್ಲಿ ಭಾರೀ ಪ್ರಮಾಣದ ಮಳೆ ಸುರಿಯುತ್ತಿದ್ದರೂ ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಕೊಪ್ಪಳ, ರಾಯಚೂರು, ಯಾದಗಿರಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ವಾಡಿಕೆಯ ಮಳೆಯೂ ಆಗಿಲ್ಲ ಎಂದು ತಿಳಿಸಿದರು.

    ಕೇರಳಕ್ಕೆ ಮಳೆ ತಿರುಗುವುದರಿಂದ ಬೆಂಗಳೂರಿಗೆ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ. ಬೆಂಗಳೂರಿನಲ್ಲಿ ದೊಡ್ಡ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆ. ಒಂದು ವೇಳೆ ಬಂದರೂ ಚದುರಿದ ಮಳೆಯಾಗಲಿದೆ ಎಂದು ಅವರು ವಿವರಿಸಿದರು.

  • ಕೆಆರ್‌ಎಸ್‌ಗೆ ಯಾವುದೇ ತೊಂದರೆ ಇಲ್ಲ- ಭಾರೀ ಶಬ್ದಕ್ಕೆ 3 ಕಾರಣ ಕೊಟ್ಟ ಕೆಎಸ್‍ಎನ್‍ಡಿಎಂಸಿ

    ಕೆಆರ್‌ಎಸ್‌ಗೆ ಯಾವುದೇ ತೊಂದರೆ ಇಲ್ಲ- ಭಾರೀ ಶಬ್ದಕ್ಕೆ 3 ಕಾರಣ ಕೊಟ್ಟ ಕೆಎಸ್‍ಎನ್‍ಡಿಎಂಸಿ

    ಮಂಡ್ಯ: ಜಿಲ್ಲೆಯ ಜೀವನಾಡಿ ಕೆಆರ್‌ಎಸ್‌ ಅಣೆಕಟ್ಟೆಗೆ ಯಾವುದೇ ತೊಂದರೆಯಾಗಿಲ್ಲ. ಭಾರೀ ಪ್ರಮಾಣದ ಶಬ್ದ ಕೇಳಿಬಂದ ಕುರಿತು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‍ಎನ್‍ಡಿಎಂಸಿ) ಮೂರು ಕಾರಣಗಳು ನೀಡಿದೆ ಎಂದು ಕಾರ್ಯನಿರ್ವಾಹಕ ಎಂಜಿನಿಯರ್ ಬಸವರಾಜೇಗೌಡ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಅವರು, ಸೆಪ್ಟೆಂಬರ್ 25ರಂದು ಶಬ್ದ ಕೇಳಿ ಬಂದ ತಕ್ಷಣವೇ ನಾವು ನಮ್ಮ ಸಿಬ್ಬಂದಿ ಅಣೆಕಟ್ಟೆಯನ್ನು ಸಂಪೂರ್ಣ ಪರಿಶೀಲಿಸಿದ್ದು, ಯಾವುದೇ ತೊಂದರೆಯಾಗಿಲ್ಲ. ಈ ಕುರಿತು ವರದಿ ತಯಾರಿಸಿ, ಮೈಸೂರು ಜಿಲ್ಲಾಧಿಕಾರಿಗೆ ನೀಡಿದ್ದೇವೆ. ಇತ್ತ ಕೆಎಸ್‍ಎನ್‍ಡಿಎಂಸಿ ಕೂಡಾ ವಿಸ್ತಾರವಾದ ವರದಿಯನ್ನು ಕೊಟ್ಟಿದೆ ಎಂದರು.

    ಕೆಎನ್‍ಡಿಎಂಸಿ ವರದಿಯಲ್ಲಿ ಗಣಿಗಾರಿಕೆ ಉದ್ದೇಶದಿಂದ ಸ್ಫೋಟಗಳ ಬಳಕೆ, ಭೂ ಕುಸಿತ ಅಥವಾ ಗಾಳಿಯ ಒತ್ತಡದಿಂದ ಶಬ್ದ ಕೇಳಿ ಬಂದಿರಬಹುದು ಎನ್ನಲಾಗಿದೆ. ಆದರೆ ಮುಖ್ಯ ಕಾರಣ ಗಣಿಗಾರಿಕೆ ಉದ್ದೇಶದಿಂದ ಸ್ಫೋಟ ಮಾಡಲಾಗಿದೆ ಅಂತ ಶಂಕೆ ವ್ಯಕ್ತಪಡಿಸಿದೆ ಎಂದು ಮಾಹಿತಿ ನೀಡಿದರು.

    ಕೆಎಸ್‍ಎನ್‍ಡಿಎಂಸಿ ವರದಿಯ ಬೆನ್ನಲ್ಲೇ ಎಚ್ಚೆತ್ತುಕೊಂಡ ಮಂಡ್ಯ ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಅವರು, ಕೆಆರ್‌ಎಸ್‌ ಡ್ಯಾಂನ 20 ಕಿ.ಮೀ. ವ್ಯಾಪ್ತಿ ಪ್ರದೇಶದಲ್ಲಿ ಸ್ಫೋಟಕ ಬಳಕೆಗೆ ನಿಷೇಧ ಹೇರಿ ಆದೇಶ ಹೊರಡಿಸಿದ್ದಾರೆ. ಕೆಆರ್‌ಎಸ್‌ ಡ್ಯಾಂ ಸುತ್ತಲಿನ ಕೆಲವು ಭಾಗಗಳಲ್ಲಿ ಸ್ಫೋಟಕಗಳನ್ನು ಬಳಸಿ ಗಣಿಕಾರಿಕೆ ನಡೆಸಲಾಗುತ್ತಿದೆ. ಇದರಿಂದಾಗಿ ಭೂಮಿ ಕಂಪನವಾಗುತ್ತಿದ್ದು, ಆ ಪ್ರದೇಶದ ಮನೆಗಳ ಗೋಡೆಗಳು ಬಿರುಕು ಬಿಡುತ್ತಿವೆ. ಅಷ್ಟೇ ಅಲ್ಲದೆ ಶಬ್ದ ಮಾಲಿನ್ಯವೂ ಉಂಟಾಗುತ್ತಿದೆ. ಹೀಗಾಗಿ ಕೆಆರ್‌ಎಸ್‌ ಡ್ಯಾಂ ಸಂರಕ್ಷಣೆ ಉದ್ದೇಶದಿಂದ ಈ ಆದೇಶ ಹೊರಡಿಸಲಾಗಿಲೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv