ಕೊಪ್ಪಳ (Koppal) ಜಿಲ್ಲೆಯ ಕುಷ್ಟಗಿ (Kushtagi) ಮಾರ್ಗ ಮಧ್ಯೆ ಸರ್ಕಾರಿ ಬಸ್‌ನಲ್ಲಿ ಹೋಗುವಾಗ ಗಲಾಟೆಯಾಗಿದೆ. ಬಸ್ ಕುಷ್ಟಗಿಯಿಂದ ಕೊಪ್ಪಳಕ್ಕೆ ಹೊರಟಿತ್ತು. ಈ ವೇಳೆ ಬಸ್‌ನಲ್ಲಿದ್ದ ಮಹಿಳೆಯರು ಹಾಗೂ ಓರ್ವ ಪುರುಷನ ನಡುವೆ ಗಲಾಟೆ ಆರಂಭವಾಗಿದೆ. ಗಲಾಟೆ ನಡುವೆಯೇ ಮಹಿಳೆಯರು ಪುರುಷನಿಗೆ ಥಳಿಸಿದ್ದು, ಗಲಾಟೆಗೆ ನಿಖರವಾದ ಕಾರಣ ಏನು ಎಂದು ತಿಳಿದುಬಂದಿಲ್ಲ.
ಗದಗ: ಸ್ಕೂಟರ್ ಅತೀ ವೇಗದಿಂದ ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಬೈಕ್ ಸವಾರನ ಮೇಲೆ ಸರ್ಕಾರಿ ಬಸ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಗರದ ಮುಳಗುಂದ (Mulagund) ನಾಕಾ ಬಳಿ ಬಸ್ ಡಿಪೋ ಎದುರು ನಡೆದಿದೆ.
ಈರಪ್ಪ ಅವರು ಗದಗ ಮಾರ್ಕೆಟ್ ಕಡೆಯಿಂದ ಮುಳಗುಂದ ನಾಕಾ ಕಡೆಗೆ ಸ್ಕೂಟರ್‌ನಲ್ಲಿ ಬರುತ್ತಿದ್ದರು. ಏಕಾಏಕಿ ಸ್ಕೂಟರ್ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದು, ಹಿಂದಿನಿAದ ಬಂದ ಬಸ್ ಅವರ ತಲೆ ಮೇಲೆ ಹರಿದಿದೆ. ಇದನ್ನೂ ಓದಿ: ಫ್ಯಾಮಿಲಿ ಜೊತೆ ಹೋಳಿ ಹಬ್ಬ ಆಚರಿಸಿದ ಕತ್ರಿನಾ ಕೈಫ್
ಬಸ್ ಗದಗದಿಂದ ಹಾನಗಲ್ ಕಡೆ ಹೊರಟಿದ್ದು, ಬಸ್ ಹರಿದ ಪರಿಣಾಮ ತಲೆ ಭಾಗ ಗುರುತು ಸಿಗದಂತೆ ಛಿದ್ರ ಛಿದ್ರವಾಗಿದೆ. ಈ ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ರನ್ಯಾಗೇ ಜೈಲೇ ಗತಿ -ಜಾಮೀನು ಅರ್ಜಿ ವಜಾ
ಗದಗ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗದಗ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
– ಬೆನ್ನುನೋವಿದ್ದರೂ ಪಂಚರ್ ಕೆಲಸಕ್ಕೆ ಹಾಕಿದ್ದ ಅಧಿಕಾರಿಗಳು; ಡ್ಯೂಟಿ ಬದಲಿಸಲಿಲ್ಲ ಅಂತ ಬೇಸರ
ಬೆಳಗಾವಿ: ಡ್ಯೂಟಿ ಬದಲಿಸಲಿಲ್ಲ ಅಂತ ಕೆಎಸ್‌ಆರ್‌ಟಿಸಿ ಮೆಕ್ಯಾನಿಕ್ ಬಸ್‌ನಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಬೆಳಗಾವಿಯ ಡಿಪೋ 1 ರಲ್ಲಿ ಅಳ್ನಾವರ್ ಬೆಳಗಾವಿ ಬಸ್‌ನಲ್ಲಿ ಮೆಕ್ಯಾನಿಕ್ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಮೃತ ನೌಕರನನ್ನು ಕೇಶವ ಕಮಡೊಳಿ (57) ಎಂದು ಗುರುತಿಸಲಾಗಿದೆ. ಬೆಳಗಾವಿಯ ಹಳೆ ಗಾಂಧಿ ನಗರದ ನಿವಾಸಿ ಕೇಶವ್, ಬಸ್ ವಾಶಿಂಗ್‌ನಲ್ಲಿ ಬಸ್‌ಗಳ ಪಂಚರ್ ತೆಗೆಯುವ ಕೆಲಸ ಮಾಡುತ್ತಿದ್ದರು. ಬೆನ್ನು ನೋವಿದ್ದರೂ ಸಹ ಪಂಚರ್ ತೆಗೆಯುವ ಕೆಲಸವನ್ನು ಅಧಿಕಾರಿಗಳು ಹಚ್ಚಿದ್ದರು ಎನ್ನಲಾಗಿದೆ.
ಡಿಪೋ ಮ್ಯಾನೇಜರ್ ಲಿಂಗರಾಜ್ ಲಾಠಿ, ಸಹಾಯಕ ಕಾರ್ಯ ಅಧೀಕ್ಷಕ ಅನಿಲ್ ಬಾಂದೇಕರ್‌ಗೆ ಕುಟುಂಬಸ್ಥರು ಮನವಿ ಮಾಡಿದ್ದರು ಎನ್ನಲಾಗಿದೆ. ಕೆಲಸದ ಒತ್ತಡ ತಡೆದಕೊಳ್ಳಲಾಗದೇ ಕೇಶವ ಆತ್ಮಹತ್ಯೆ ಮಾಡಿದಕೊಂಡಿದ್ದಾರೆ ಎನ್ನಲಾಗಿದ್ದು, ಅಧಿಕಾರಿಗಳ ವಿರುದ್ಧ ಮೃತ ಕೇಶವ್ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ.
ಸ್ಥಳಕ್ಕೆ ಮಾರ್ಕೆಟ್ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಚಾಮರಾಜನಗರ: ಮಾರ್ಚ್‌ನಿಂದ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.
ಈ ಕುರಿತು ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ಮಾಹಿತಿ ನೀಡಿದ್ದಾರೆ. ಮಾ.1 ರಿಂದ ದ್ವಿತೀಯ ಪಿಯುಸಿ, ಮಾ.21 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಮಾಡಬಹುದು ಎಂದು ತಿಳಿಸಿದ್ದಾರೆ.
ಚಾಮರಾಜನಗರ ಜಿಲ್ಲೆಯಲ್ಲಿ ಪಿಯುಸಿಗೆ 17 ಪರೀಕ್ಷಾ ಕೇಂದ್ರ, ಎಸ್‌ಎಸ್‌ಎಲ್‌ಸಿಗೆ 47 ಪರೀಕ್ಷಾ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳಿರುವ ಸ್ಥಳಗಳಿಗೆ ಕೆಎಸ್‌ಆರ್‌ಟಿಸಿ ಹೆಚ್ಚುವರಿ ಬಸ್ ಸಂಚಾರಕ್ಕೆ ಕ್ರಮ ಕೈಗೊಳ್ಳಲಾಗುವುದು. ಪರೀಕ್ಷಾ ಕೇಂದ್ರದ ಪ್ರತಿ ಕೊಠಡಿಗೂ ಸಿಸಿ ಕ್ಯಾಮೆರಾಗಳ ಅಳವಡಿಕೆ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಒಟ್ಟು 7,364 ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು 12,432 ವಿದ್ಯಾರ್ಥಿಗಳು ಬರೆಯಲಿದ್ದಾರೆ. ಪರೀಕ್ಷೆ ನಡೆಸಲು ಜಿಲ್ಲಾಡಳಿತ ಸಜ್ಜಾಗಿದೆ ಎಂದು ಡಿಸಿ ತಿಳಿಸಿದ್ದಾರೆ.
ಬೆಂಗಳೂರು/ಬೆಳಗಾವಿ: ನಿರ್ವಾಹಕನ ಮೇಲಿನ ಪ್ರಕರಣದ ಬಳಿಕ ಪೋಕ್ಸೋ ಕೇಸ್ ಹಾಕಿದ್ದರು, ಅದು ಸುಳ್ಳು ಕೇಸ್ ಎಂದು ನಾನು ಮೊದಲೇ ಹೇಳಿದ್ದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಹೇಳಿದರು.
ಸಿಎಂ ಸಿದ್ದರಾಮಯ್ಯಗೆ (CM Siddaramaiah) ವರದಿ ನೀಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದ್ವೇಷಕ್ಕಾಗಿ ಒತ್ತಡ ಹೇರಿ ನಿರ್ವಾಹಕನ ಮೇಲೆ ಪೋಕ್ಸೋ ಕೇಸ್ ಹಾಕಿಸಿದ್ದರು. ಲಕ್ಷ್ಮಿ ಹೆಬ್ಬಾಳ್ಕರ್ ಕೂಡ ಪೋಕ್ಸೋ ಕೇಸ್ ಸರಿ ಇಲ್ಲ ಎಂದಿದ್ದರು. ಈಗ ವಾಪಸ್ ಪಡೆದಿದ್ದಾರೆ ಎಂದು ಹೇಳಿದ್ದಾರೆ.ಇದನ್ನೂ ಓದಿ: ಬೆಳಗಾವಿ ಕಂಡಕ್ಟರ್ ಮೇಲೆ ಹಲ್ಲೆ : ಸಾರಿಗೆ ಸಚಿವರಿಂದ ಮಾಹಿತಿ ಪಡೆದ ಸಿಎಂ
ನಿನ್ನೆ ಬೆಳಗಾವಿಗೆ ಹೋಗಿದ್ದೆ, ನಿರ್ವಾಹಕನ ಆರೋಗ್ಯ ವಿಚಾರಿಸಿದೆ. ಅಧಿಕಾರಿಗಳ ಜೊತೆ ಸಭೆ ನಡೆಸಿದ್ದೇವೆ. ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ 509 ಬಸ್ಸುಗಳು ಓಡಾಡುತ್ತಿವೆ. ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ 130 ಬಸ್‌ಗಳು ಓಡಾಡ್ತಿವೆ. ನಮ್ಮಲ್ಲಿ ಒಂದು ಬಸ್‌ಗೆ ಮಸಿ ಬಳಿದಿದ್ದಾರೆ. ಅದಾದ ಬಳಿಕ ಕನ್ನಡ ಸಂಘಟನೆಗಳು ಮಸಿ ಬಳಿದಿಲ್ಲ. ಆದರೆ ಮಹಾರಾಷ್ಟ್ರದಲ್ಲಿ ಬಸ್‌ಗಳ ಮೇಲೆ ಮಸಿ ಬಳಿಯುವುದು, ನಿರ್ವಾಹಕನಿಗೆ ಮಸಿ ಬಳಿಯುವುದು ಮಾಡ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಗಮನಕ್ಕೆ ಎಲ್ಲವನ್ನೂ ತಂದಿದ್ದೇನೆ ಎಂದರು.
ಮಹಾರಾಷ್ಟ್ರಕ್ಕೆ ನಮ್ಮ ರಾಜ್ಯದಿಂದ ಬಸ್ ಹೋಗ್ತಿಲ್ಲ, ಅಲ್ಲಿನ ಸಿಎಸ್, ಡಿಜಿಪಿ ಜೊತೆ ನಮ್ಮ ಸಿಎಸ್ ಮಾತನಾಡಿದ ಬಳಿಕ ಮಹಾರಾಷ್ಟ್ರಕ್ಕೆ ಬಸ್ ಬಿಡುವ ಬಗ್ಗೆ ನಿರ್ಧಾರ ಮಾಡುತ್ತೇವೆ. ನಮ್ಮ ಬಸ್‌ಗಳಿಗೆ, ಡ್ರೈವರ್, ಕಂಡಕ್ಟರ್‌ಗಳಿಗೆ ಅವರು ರಕ್ಷಣೆ ಕೊಡಬೇಕು, ಅವರ ಬಸ್‌ಗಳು, ಕಂಡಕ್ಟರ್, ಡ್ರೈವರ್‌ಗಳಿಗೆ ನಾವು ರಕ್ಷಣೆ ಕೊಡ್ತೀವಿ ಎಂದು ಹೇಳಿದರು.ಇದನ್ನೂ ಓದಿ: ಹೈಪರ್‌ಲೂಪ್ ಪರೀಕ್ಷಾರ್ಥ ಹಳಿ ಪೂರ್ಣ – ಭಾರತದಲ್ಲಿ ಕ್ಷಿಪ್ರ ಸಾರಿಗೆ ಕ್ರಾಂತಿಗೆ ಬಲ
ಬಾಗಲಕೋಟೆ: ಬಲವಂತವಾಗಿ ಬಸ್‌ನಿಂದ ಕೆಳಗಿಳಿಸಿ, ಕೇಸರಿ ಬಣ್ಣ ಬಳಿದು ಹಾರ ಹಾಕಿ, ಜೈ ಮಹಾರಾಷ್ಟ್ರ ಹೇಳುವಂತೆ ಒತ್ತಾಯಿಸಿದರು ಎಂದು ಇಳಕಲ್ ಬಸ್ ಚಾಲಕ ಹಾಗೂ ನಿರ್ವಾಹಕ ಬೇಸರ ವ್ಯಕ್ತಪಡಿಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಇಳಕಲ್ ಡಿಪೋದ ಕೆಎಸ್‌ಆರ್‌ಟಿಸಿ ಬಸ್‌ನ್ನು ಮಹಾರಾಷ್ಟ್ರ ಪುಂಡರು ತಡೆಹಿಡಿದು, ಕಂಡಕ್ಟರ್ ಹಾಗೂ ಚಾಲಕನನ್ನು ಬಲವಂತವಾಗಿ ಕೆಳಗಿಳಿಸಿ ಕೇಸರಿ ಬಣ್ಣ ಬಳಿದು, ಜೈ ಮಹಾರಾಷ್ಟ್ರ ಎನ್ನುವಂತೆ ಅವಮಾನ ಮಾಡಿರುವ ಘಟನೆ ಸೋಲಾಪುರ ಬಳಿ ನಡೆದಿದೆ.ಇದನ್ನೂ ಓದಿ: ಶ್ರೀಶೈಲಂ ಸುರಂಗ ಕುಸಿತ – ರಕ್ಷಣಾ ಕಾರ್ಯಕ್ಕೆ ಉತ್ತರಾಖಂಡದ ರ‍್ಯಾಟ್ ಮೈನರ್‌ಗಳ ಸಾಥ್
ಸೋಲಾಪುರದಿಂದ ಸಾಥ್ ರಸ್ತೆ ಮಾರ್ಗವಾಗಿ ಹಿಂತಿರುಗುತ್ತಿರುವಾಗ, ಕರ್ನಾಟಕದ ಬಸ್ ಕಂಡ ಮಹಾರಾಷ್ಟ್ರದ ಸುಮಾರು 15 ಜನ ದುರುಳರು, ಬಸ್ ತೆಡೆದು ಜೈ ಮಹಾರಾಷ್ಟ್ರ ಎನ್ನುವಂತೆ ಕಿರಿಕಿರಿ ಇಟ್ಟಿದ್ದಾರೆ. ಇದಕ್ಕೆ ಬಸ್ ಚಾಲಕ ಶಿವಪ್ಪ ಚಳಗೇರಿ ಹಾಗೂ ಕಂಡಕ್ಟರ್ ಬೇಸರ ವ್ಯಕ್ತಪಡಿಸಿದ್ದು, ನಮಗೆ ಭದ್ರತೆ ಇಲ್ಲದಂತಾಗಿದೆ ಎಂದಿದ್ದಾರೆ.
ಇಳಕಲ್ ಡಿಪೋಗೆ ಬಂದಿಳಿದ ನಂತರ ಮಾತನಾಡಿದ ಅವರು, ಸೋಲಾಪುರ ಬಳಿ ಬಸ್ ತಡೆದು ನಮ್ಮನ್ನು ಬಲವಂತವಾಗಿ ಬಸ್‌ನಿಂದ ಕೆಳಗಿಳಿಸಿ, ಹಾರ ಹಾಕಿ, ಜೈ ಮಹಾರಾಷ್ಟ್ರ ಎನ್ನುವಂತೆ ಒತ್ತಾಯಿಸಿದರು, ನಂತರ ಬಸ್ ಮೇಲೆ ಜೈ ಮಹಾರಾಷ್ಟ್ರ ಎಂದು ಬರೆದು, ನಮಗೆ ಕೇಸರಿ ಬಣ್ಣ ಬಳಿದು ಅವಮಾನಮಾಡಿ, ಬಳಿಕ ನಮ್ಮನ್ನು ಹೊರಡಲು ಬಿಟ್ಟರು ಎಂದರು.
ಬಸ್‌ನ ಮಹಿಳಾ ಕಂಡಕ್ಟರ್ ಮಾತನಾಡಿ, ಮಹಾರಾಷ್ಟ್ರದ ಸುಮಾರು 15 ಜನ ಏಕಾಏಕಿ ನಮ್ಮ ಬಸ್ ತಡೆದು ಹೀಗೆ ಮಾಡುತ್ತಾರೆ ಎಂದರೆ ನಮಗೆ ಭದ್ರತೆ ಇಲ್ಲದಂತಾಗಿದೆ. ಬೇರೆ ಬೇರೆ ರಾಜ್ಯಗಳಿಗೆ ಓಡಾಡುವ ಬಸ್ಸುಗಳಿಗೆ ಈ ರೀತಿಯಾದರೆ ಹೇಗೆ? ಜೈ ಮಹಾರಾಷ್ಟ್ರ ಎನ್ನುವಂತೆ ಒತ್ತಾಯಿಸಿ, ಮೀಡಿಯಾದವರನ್ನು ಕರೆದು, ನಮ್ಮಿಂದ ಜೈ ಮಹಾರಾಷ್ಟ್ರ ಎಂದು ಘೋಷಣೆ ಹಾಕಿಸುತ್ತಾರೆ. ನಂತರ ನಮ್ಮ ಜೊತೆ ಫೋಟೊ ತೆಗೆಸಿಕೊಂಡು ಬಳಿಕ ಹೊರಡಲು ಬಿಡುತ್ತಾರೆ ಎಂದು ಅಸಮಾಧಾನ ಹೊರಹಾಕಿದರು.
ಅವರಿಗೆ ನಾವು ಭಾರತೀಯರು ಎಂಬ ಭಾವನೆಯೇ ಇಲ್ಲ. ಭಾರತ ಮಾತೆಯ ಮಕ್ಕಳು ಅಂದರೆ ಎಲ್ಲರೂ ಭಾರತೀಯರು, ಅದನ್ನ ಬಿಟ್ಟು ಜೈ ಮಹಾರಾಷ್ಟ್ರ, ಜೈ ಕರ್ನಾಟಕ ಎನ್ನುವುದು ಸರಿನಾ? ನಾವೆಲ್ಲರೂ ಭಾರತೀಯರು, ಜೈ ಭಾರತ್ ಎನ್ನುವ ಬದಲು, ಜೈ ಮಹಾರಾಷ್ಟ್ರ ಎಂದು ಉಪಟಳವಿಟ್ಟರು ಎಂದರು.ಇದನ್ನೂ ಓದಿ: 2028ರ ಚುನಾವಣೆಗೆ ಸಜ್ಜಾಗಿ – ಪರಾಜಿತ ಅಭ್ಯರ್ಥಿಗಳಿಗೆ ಡಿಕೆಶಿ ಸೂಚನೆ
ಚಾಮರಾಜನಗರ: ಚಾಲಕನಿಗೆ ಮೂರ್ಛೆ ರೋಗ ಬಂದಿದ್ದರಿಂದ ನಿಯಂತ್ರಣ ತಪ್ಪಿ ಬಸ್ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ ನಡೆದಿದೆ.
ಹನೂರು ತಾಲೂಕಿನ ಒಡೆಯರಪಾಳ್ಯ ಗ್ರಾಮದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಇದಾಗಿದ್ದು, ಚಾಲಕನಿಗೆ ದಿಢೀರ್ ಮೂರ್ಛೆರೋಗ ಕಾಣಿಸಿಕೊಂಡ ಪರಿಣಾಮ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ.
ಬಸ್ಸಿನಲ್ಲಿ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಮುಂಭಾಗದಲ್ಲಿ ಕುಳಿತಿದ್ದ ಐದು ಮಂದಿಗೆ ಗಾಯಗಳಾಗಿದೆ. ಅದೃಷ್ಟವಶಾತ್ ಹೆಚ್ಚಿನ ಅನಾಹುತ ಸಂಭವಿಸಿಲ್ಲ.
ಚಿಕ್ಕಬಳ್ಳಾಪುರ: ಕರ್ನಾಟಕ ಹಾಗೂ ಆಂಧ್ರ ಸಾರಿಗೆ ಬಸ್‌ಗಳು ಓವರ್‌ಟೆಕ್ ಪೈಪೋಟಿಗೆ ಬಿದ್ದ ಪರಿಣಾಮ ಬೈಕ್‌ನಲ್ಲಿ ಹೊರಟಿದ್ದ 8 ವರ್ಷದ ಬಾಲಕಿ, ಆಕೆಯ ಸೋದರ ಮಾವ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ದೊಡ್ಡಬಳ್ಳಾಪುರ (Doddaballapura) ತಾಲೂಕಿನ ಗೊಲ್ಲಹಳ್ಳಿ ಗೇಟ್ ಬಳಿ ನಡೆದಿದೆ.
ಮೃತರನ್ನು 8 ವರ್ಷದ ಮೋನಿಕಾ ಹಾಗೂ ಕೆಳಗಿನಜೋಗಹಳ್ಳಿ ನಿವಾಸಿ ವೆಂಕಟೇಶ್ ಎಂದು ಗುರುತಿಸಲಾಗಿದೆ. ಗೌರಿಬಿದನೂರು-ಬೆಂಗಳೂರು ಹೆದ್ದಾರಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಹಿಂದೂಪುರದಿಂದ ಬೆಂಗಳೂರಿಗೆ ಬರುತ್ತಿತ್ತು. ಇದೇ ವೇಳೆ ಎಪಿಎಸ್‌ಆರ್‌ಟಿಸಿ ಬಸ್ ಬಂದಿದ್ದು, ಎರಡು ಬಸ್‌ಗಳ ನಡುವೆ ಓವರ್‌ಟೆಕ್ ಪೈಪೋಟಿ ನಡೆದಿದೆ.ಇದನ್ನೂ ಓದಿ: ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ – 8ನೇ ವೇತನ ಆಯೋಗ ರಚನೆಗೆ ಸಂಪುಟ ಅನುಮೋದನೆ
ಇದೇ ಸಮಯದಲ್ಲಿ 8 ವರ್ಷದ ಬಾಲಕಿ, ಆಕೆಯ ಸೋದರ ಮಾವನ ಜೊತೆ ಬೈಕ್‌ನಲ್ಲಿ ಹೊರಟಿದ್ದರು. ಬಸ್‌ಗಳ ಮಧ್ಯೆ ಬೈಕ್ ಸವಾರ ಸಿಲುಕಿದ್ದು, ಎಪಿಎಸ್‌ಆರ್‌ಟಿಸಿ ಬಸ್ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ನೆಲಕ್ಕುರುಳಿದ್ದು, ಬೈಕ್ ಮೇಲೆ ಕೆಎಸ್‌ಆರ್‌ಟಿಸಿ ಬಸ್ ಹರಿದಿದೆ.
ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಬಾಲಕಿ ತಲೆಗೆ ಗಂಭೀರ ಗಾಯವಾಗಿತ್ತು. ಬಾಲಕಿಯನ್ನು ಕೂಡಲೇ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾಳೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಎರಡು ಬಸ್‌ಗಳನ್ನ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಇದನ್ನೂ ಓದಿ: ನಾನು ಕ್ಷೇಮವಾಗಿದ್ದೇನೆ: ಚೂರಿ ಇರಿತದ ಬಳಿಕ ಸೈಫ್ ಅಲಿ ಖಾನ್ ಫಸ್ಟ್ ರಿಯಾಕ್ಷನ್
ರಾಮನಗರ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಎರಡು ಮಕ್ಕಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ರಾಮನಗರ (Ramanagar) ತಾಲೂಕಿನ ಅಚ್ಚಲುದೊಡ್ಡಿ ಗ್ರಾಮದ ಬಳಿ ನಡೆದಿದೆ.
ಕಳೆದ ಒಂದು ವರ್ಷದ ಹಿಂದೆ ತಮಿಳುನಾಡಿನಿಂದ ಇಬ್ಬರು ಮಕ್ಕಳು ಹಾಗೂ ಕುಟುಂಬಸ್ಥರೊಡನೆ ಇಲ್ಲಿಗೆ ಬಂದು ವಾಸವಾಗಿದ್ದರು. ಇಂದು ಬೆಳಿಗ್ಗೆ ಗೋವಿಂದ ಹಾಗೂ ಮಧು ಎಂಬವರ ಜೊತೆ ತನ್ನ ಇಬ್ಬರು ಮಕ್ಕಳನ್ನು ಬೈಕ್‌ನಲ್ಲಿ ಸಂಬಂಧಿಕರ ಮನೆಗೆ ಕಳುಹಿಸಿದ್ದಾರೆ. ಈ ವೇಳೆ ಅಚ್ಚಲುದೊಡ್ಡಿ ಗ್ರಾಮದ ರಸ್ತೆ ತಿರುವಿನಲ್ಲಿ ಬೈಕ್‌ಗೆ ಬಸ್ ಡಿಕ್ಕಿಯಾಗಿ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನಿಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆ ಮುಂದುವರೆದಿದೆ.
ಇನ್ನೂ ಅಪಘಾತಕ್ಕೆ ರಸ್ತೆ ತಿರುವಿನಲ್ಲಿರುವ ಗಿಡಗೆಂಟೆಗಳನ್ನು ತೆರವು ಮಾಡದಿರುವುದೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ತಿರುವಿನಲ್ಲಿ ಎದುರಿಗೆ ಬರುವ ವಾಹನಗಳು ಗೊತ್ತಾಗದೇ ಅಪಘಾತ ಸಂಭವಿಸಿದೆ. ಜೊತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳ ವೇಗಕ್ಕೆ ಮಿತಿ ಇಲ್ಲ, ಅತಿ ವೇಗವಾಗಿ ಬಸ್ ಚಲಾವಣೆ ಮಾಡಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ದೂರಿದ್ದಾರೆ.
ಬೆಂಗಳೂರು: ಇತ್ತೀಚೆಗಷ್ಟೇ ನೆಲಮಂಗಲದ ಬಳಿ ಸರಣಿ ಅಪಘಾತವೊಂದು ನಡೆದು ಒಂದೇ ಕುಟುಂಬದ 6 ಮಂದಿ ಸಾವನ್ನಪ್ಪಿದ್ದ ಘಟನೆ ನಡೆದಿತ್ತು. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಸರಣಿ ಅಪಘಾತ ನಗರದ ಜ್ಞಾನಭಾರತಿ ಮೆಟ್ರೋ ನಿಲ್ದಾಣದ ಬಳಿ ನಡೆದಿದೆ.
ಅಪಘಾತದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಗಾಜು ಪುಡಿಪುಡಿಯಾಗಿದೆ, ಡೋರ್ ಸಂಪೂರ್ಣ ಹಾನಿಯಾಗಿದೆ. 1 ಎಲೆಕ್ಟ್ರಿಕ್ ಕೆಎಸ್‌ಆರ್‌ಟಿಸಿ, ಇನ್ನೊಂದು ರೆಡ್ ಬಸ್ ಕೆಎಸ್‌ಆರ್‌ಟಿಸಿ, ಒಂದು ಕಾರು, ಆಟೋ ಸಂಪೂರ್ಣ ಜಖಂಗೊಂಡಿದೆ. ಸದ್ಯ ಇಬ್ಬರು ಚಾಲಕರಿಗೂ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: Uttar Pradesh | ಖಾಲಿಸ್ತಾನ್ ಕಮಾಂಡೋ ಫೋರ್ಸ್‌ನ ಮೂವರು ಭಯೋತ್ಪಾದಕರು ಎನ್‌ಕೌಂಟರ್
ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ಘಟನೆ ನಡೆದಿದೆ.