ಹುಷಾರಿಲ್ಲದೇ ಕೆಲಸಕ್ಕೆ ಬಾರದಿದ್ದಕ್ಕೆ ಹಾಜರಾತಿಯಲ್ಲಿ ಗೈರು ಹಾಕಿದ್ದಾರೆ. ನನ್ನ ಖಾತೆಯಲ್ಲಿ ಸಾಕಷ್ಟು ರಜೆ ಇದೆ. ಆದ್ರೂ ಗೈರು ಹಾಕಿದ್ದಾರೆ. ಆದರೆ ಹಣ ಕೊಟ್ಟವರಿಗೆ ಎಷ್ಟು ದಿನ ರಜೆ ಬೇಕಾದ್ರೂ ಕೊಡ್ತಾರೆ ಎಂದು ಎಟಿಎಸ್ ಪುಟ್ಟಸ್ವಾಮಿ ವಿರುದ್ಧ ಆರೋಪ ಮಾಡಿದ್ದಾರೆ.
ಸದ್ಯ ಆತ್ಮಹತ್ಯೆಗೆ ಯತ್ನಿಸಿದ ಚಾಲಕ ಚಂದ್ರುನನ್ನ ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುಟ್ಟಸ್ವಾಮಿಯಿಂದ ನೌಕರರ ಮೇಲಾಗುತ್ತಿರುವ ದೌರ್ಜನ್ಯ ಸರಿಪಡಿಸುವಂತೆ ಮನವಿ ಮಾಡಿದ್ದಾರೆ. ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮಂಡ್ಯ: ಕೆಎಸ್‌ಆರ್‌ಟಿಸಿ ಚಾಲಕ (KSRTC Driver) ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ (Suicide Attempt) ಪ್ರಕರಣಕ್ಕೆ ಈಗ ಒಂದು ದೊಡ್ಡ ಟ್ವಿಸ್ಟ್ ಸಿಕ್ಕಿದೆ. ಮಾಜಿ ಶಾಸಕ ಸುರೇಶ್ ಗೌಡ (Suresh Gowda) ಹಾಗೂ ಜೆಡಿಎಸ್ (JDS) ಕಾರ್ಯಕರ್ತರು ಅಂಬುಲೆನ್ಸ್ (Ambulence) ಅನ್ನು ತಡೆದಿದ್ದರು ಎಂದು ಸಚಿವ ಚಲುವರಾಯಸ್ವಾಮಿ (Chaluvaraya Swamy) ಆರೋಪಿಸಿದ್ದರು. ಇದಕ್ಕೆ ಸಂಬಂಧಿಸಿದ ಸಿಸಿಟಿವಿ ದೃಶ್ಯವನ್ನು ಜೆಡಿಎಸ್ ಬಿಡುಗಡೆ ಮಾಡಿ ಸ್ಪಷ್ಟನೆ ನೀಡಿದೆ.
ಸಿಸಿಟಿವಿ ದೃಶ್ಯದಲ್ಲೇನಿದೆ?
ನಾಗಮಂಗಲದ ಕೆಎಸ್‌ಆರ್‌ಟಿಸಿ ಡ್ರೈವರ್ ಜಗದೀಶ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಅವರನ್ನು ಆಸ್ಪತ್ರೆಗೆ ಸಾಗಿಸಲಾಗುತ್ತಿದ್ದ ಅಂಬುಲೆನ್ಸ್ ಅನ್ನು ಮಾಜಿ ಶಾಸಕ ಸುರೇಶ್ ಗೌಡ ಹಾಗೂ ಬೆಂಬಲಿಗರು ಅಡ್ಡಗಟ್ಟುವ ದೃಶ್ಯ ಪತ್ತೆಯಾಗಿದೆ. ನಾಗಮಂಗಲ ಟಿಬಿ ವೃತ್ತದ ಬಳಿ ಸುರೇಶ್‌ಗೌಡ ಅಡ್ಡಗಟ್ಟಿ ನಿಲ್ಲಿಸಿದ್ದರು. ಬಳಿಕ ಅಂಬುಲೆನ್ಸ್‌ನಲ್ಲಿದ್ದವರೊಂದಿಗೆ ಸುರೇಶ್ ಗೌಡ ಮಾತನಾಡಿದ್ದರು. ಈ ಘಟನೆ ಜುಲೈ 6ರ ಮಧ್ಯರಾತ್ರಿ 1 ಗಂಟೆ ವೇಳೆ ನಡೆದಿದೆ.
ಘಟನೆಗೆ ಸಂಬಂಧಿಸಿದಂತೆ ಸಚಿವ ಚಲುವರಾಯಸ್ವಾಮಿ, ಮಾಜಿ ಶಾಸಕ ಸುರೇಶ್‌ಗೌಡ ಹಾಗೂ ಜೆಡಿಎಸ್ ಕಾರ್ಯಕರ್ತರು ಅಂಬುಲೆನ್ಸ್ ತಡೆದಿದ್ದರು. ಜಗದೀಶ್‌ನ್ನು ಬಿಜಿಎಸ್ ಆಸ್ಪತ್ರೆಯಿಂದ ಮೈಸೂರಿಗೆ ರವಾನೆ ಮಾಡುವಾಗ ತಡೆದಿದ್ದಾರೆ. ಅವರಿಗೆ ಜಗದೀಶ್ ಬದುಕಿಸುವ ಉದ್ದೇಶ ಇರಲಿಲ್ಲ ಎಂದು ಚಲುವರಾಯಸ್ವಾಮಿ ಆರೋಪಿಸಿದ್ದರು. ಇದನ್ನೂ ಓದಿ: ಜೈನ ಮುನಿ ಕೊಲೆ ಮಾಡಿದ್ದು ಒಬ್ಬರಲ್ಲ ಇಬ್ಬರು – ಎಫ್‌ಐಆರ್‌ನಲ್ಲಿ ಬಹಿರಂಗ
ಇದಾದ ಬಳಿಕ ನಮ್ಮ ಕಾರ್ಯಕರ್ತರು ಅಂಬುಲೆನ್ಸ್ ಅಡ್ಡಗಟ್ಟಿಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದರು. ಇದೀಗ ಘಟನೆಗೆ ಸಂಬಂಧಿಸಿಂತೆ ವೀಡಿಯೋ ಬಿಡುಗಡೆ ಮಾಡಿರುವ ಜೆಡಿಎಸ್, ನಾವು ಜಗದೀಶ್‌ನನ್ನು ಎಲ್ಲಿಗೆ ಕರೆದುಕೊಂಡು ಹೋಗುತ್ತಿದ್ದಾರೆ ಎಂದು ವಿಚಾರಿಸಲು ಅಂಬುಲೆನ್ಸ್ ಅನ್ನು ನಿಲ್ಲಿಸಿದ್ದೆವು ಎಂದು ಸ್ಪಷ್ಟಪಡಿಸಿದೆ. ಜಗದೀಶ್‌ನ ಎಲ್ಲಿಗೆ ಕರೆದುಕೊಂಡು ಹೋಗ್ತಾ ಇದ್ದೀರಾ? ಬಿಜಿಎಸ್‌ನಲ್ಲಿ ಚಿಕಿತ್ಸೆ ಕೊಡೋಕೆ ಆಗಲ್ವಾ? ಮಣಿಪಾಲ್‌ಗೆ ಕರೆದುಕೊಂಡು ಹೋಗ್ತಾ ಇದ್ದೀರಾ? ಸರಿ ಹೋಗಿ ಎಂದು ಸುರೇಶ್ ಗೌಡ ಮಾತನಾಡಿರುವ ವೀಡಿಯೋ ರಿಲೀಸ್ ಆಗಿದೆ.
ಈ ಬಗ್ಗೆ ಪಬ್ಲಿಕ್ ಟಿವಿಗೆ ಪ್ರಕ್ರಿಯೆ ನೀಡಿರುವ ಸುರೇಶ್ ಗೌಡ, ನನಗೆ ಯಾವ ದುರುದ್ದೇಶವಿಲ್ಲ. ನಾನು ಜಗದೀಶ್ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಹೋಗುವಾಗ ಅವರ ಕುಟುಂಬಸ್ಥರು ಫೋನ್ ಮಾಡಿ ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋಗ್ತಾ ಇದ್ದೀವಿ, ನೀವು ನಾಗಮಂಗಲದಲ್ಲಿಯೇ ಇರಿ. ಅಲ್ಲಿ ನಿಲ್ಲಿಸುತ್ತೇವೆ ಎಂದಿದ್ದರು. ಹಾಗೆ ನಾಗಮಂಗಲದಲ್ಲಿ ಅಂಬುಲೆನ್ಸ್ ನಿಲ್ಲಿಸಿದ್ರು. ಬಳಿಕ ನಾನು ಹೋಗಿ ಎಂದಾಗ ಅವರು ಹೋದರು ಎಂದು ತಿಳಿಸಿದರು. ಇದನ್ನೂ ಓದಿ: ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು – ಖತರ್ನಾಕ್ ರಾಬರ್ ಕಾಲಿಗೆ ಪೊಲೀಸರ ಗುಂಡೇಟು
ಜಗದೀಶ್ ಆಸ್ಪತ್ರೆಗೆ ಸೇರಿಸಿದ್ದು ಜೆಡಿಎಸ್ ಕಾರ್ಯಕರ್ತರೆ, ಆತನನ್ನು ಮೈಸೂರಿಗೆ ಕರೆದುಕೊಂಡು ಹೋಗಿದ್ದು ನಮ್ಮ ಕಾರ್ಯಕರ್ತರೆ. ನನಗೆ ಯಾವುದೇ ದುರುದ್ದೇಶವಿಲ್ಲ, ಹಾಗೆ ಏನಾದ್ರು ಇದ್ರೆ ದೊಡ್ಡ ಸರ್ಕಲ್‌ನಲ್ಲಿ ಅದು ಸಿಸಿಟಿವಿ ಇರೋ ಪ್ರದೇಶದಲ್ಲೇ ಏಕೆ ನಿಲ್ಲುತ್ತಿದ್ದೆವು ಎಂದು ಹೇಳಿದ್ದಾರೆ.
ಬೆಂಗಳೂರು: ನಾಗಮಂಗಲದಲ್ಲಿ (Nagamangala) ಕೆಎಸ್‌ಆರ್‌ಟಿಸಿ ಚಾಲಕ (KSRTC Driver) ಆತ್ಮಹತ್ಯೆಗೆ ಯತ್ನಿಸಿದ್ದು ಯಾವ ಕಾರಣಕ್ಕೆ ಎಂಬ ಬಗ್ಗೆ ಮಾಹಿತಿ ಇಲ್ಲ. ವರ್ಗಾವಣೆ (Transfer) ಯಾವ ಕಾರಣಕ್ಕೆ ಎಂಬ ಮಾಹಿತಿ ತರಿಸಿಕೊಳ್ಳುತ್ತೇನೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಹೇಳಿಕೆ ನೀಡಿದ್ದಾರೆ.
ಮಂಡ್ಯ (Mandya) ಜಿಲ್ಲೆಯ ನಾಗಮಂಗಲ ಬಸ್ ಡಿಪೋದ ಚಾಲಕ ಜಗದೀಶ್, ಸಚಿವ ಚಲುವರಾಯಸ್ವಾಮಿ ಸೂಚನೆಯಂತೆ ವರ್ಗಾವಣೆ ಮಾಡಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ತೀವ್ರ ಅಸ್ವಸ್ಥರಾಗಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ರಾಮಲಿಂಗಾ ರೆಡ್ಡಿ, ಯಾವ ಕಾರಣಕ್ಕೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ಮಾಹಿತಿಯಿಲ್ಲ. ಯಾರಾದ್ರೂ ಕಂಡಕ್ಟರ್, ಡ್ರೈವರ್ ವರ್ಗಾವಣೆಗೆ ನಮ್ಮವರೆಗೂ ಬರುತ್ತಾರಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: KSRTC ನೌಕರ ಆತ್ಮಹತ್ಯೆಗೆ ಪ್ರಯತ್ನಿಸಿದ್ದಕ್ಕೂ ಸರ್ಕಾರಕ್ಕೂ ಸಂಬಂಧವಿಲ್ಲ – ಚಲುವರಾಯಸ್ವಾಮಿ ಸ್ಪಷ್ಟನೆ
ಘಟನೆಯ ಕುರಿತು ಎಂಡಿ ಬೆಳಗ್ಗೆ ಕರೆ ಮಾಡಿ ವಿಚಾರ ತಿಳಿಸಿದ್ದಾರೆ. ವರ್ಗಾವಣೆ ಯಾವ ಕಾರಣಕ್ಕೆ ಎಂಬ ಮಾಹಿತಿಯನ್ನು ತರಿಸಿಕೊಳ್ಳುತ್ತೇನೆ. ಸಚಿವ ಚಲುವರಾಯಸ್ವಾಮಿ (Chaluvarayaswamy) ಒತ್ತಡ ಇತ್ತಾ ಎನ್ನುವುದರ ಬಗ್ಗೆ ಮಾಹಿತಿ ಇಲ್ಲ. ಡೆತ್‌ನೋಟ್ ಬರೆದಿದ್ದಾರೆ ಅಂತಾ ಮಾಹಿತಿ ಕೊಟ್ಟಿದ್ದಾರೆ. ಆತ್ಮಹತ್ಯೆ ಯತ್ನದ ನಂತರ ಚಿಕಿತ್ಸೆ ನಡೆಯುತ್ತಿದೆ. ಯಾರು ಒತ್ತಡ ಹಾಕಿದರು, ವರ್ಗಾವಣೆಗೆ ಕಾರಣ ಏನು ಎನ್ನುವ ಬಗ್ಗೆ ಮಾಹಿತಿ ತರಿಸಿಕೊಳ್ಳುತ್ತೇನೆ ಎಂದರು. ಇದನ್ನೂ ಓದಿ: ಸರ್ಕಾರ ರಾಜಕೀಯ ತೆವಲಿಗಾಗಿ ಜೀವದ ಜೊತೆ ಚೆಲ್ಲಾಟವಾಡ್ತಿದೆ – KSRTC ನೌಕರನ ಆರೋಗ್ಯ ವಿಚಾರಿಸಿದ ಮಾಜಿ ಸಿಎಂ
ಮಂಡ್ಯ: ಸರ್ಕಾರ ಬದಲಾದಾಗ ಎಲ್ಲರ ಕಾಲದಲ್ಲೂ ವರ್ಗಾವಣೆ ಆಗಿರುತ್ತದೆ. ಕೆಎಸ್‌ಆರ್‌ಟಿಸಿ ಚಾಲಕ (KSRTC Driver) ಆತ್ಮಹತ್ಯೆಗೆ ಪ್ರಯತ್ನಿಸಿರುವ (Suicide Attempt) ಘಟನೆಗೂ ಸರ್ಕಾರಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಸಚಿವ ಚಲುವರಾಯಸ್ವಾಮಿ (Chaluvaraya Swamy) ಪ್ರಯಿಕ್ರಿಯೆ ನೀಡಿದ್ದಾರೆ.
ಮಂಡ್ಯ (Mandya) ಜಿಲ್ಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಚಲುವರಾಯಸ್ವಾಮಿ, ಕೆಲವರು ಅನಾವಶ್ಯಕವಾಗಿ ಈ ರೀತಿ ರಾಜಕೀಯ ಮಾಡುವುದು ಪರಿಪಾಟಲು. ವರ್ಗಾವಣೆ ಸಹಜ ಪ್ರಕ್ರಿಯೆ. ಸರ್ಕಾರ ಬದಲಾದಾಗ ಎಲ್ಲರ ಕಾಲದಲ್ಲೂ ವರ್ಗಾವಣೆ ಆಗಿರುತ್ತೆ. ಹಿಂದೆಯೂ ಸಾಕಷ್ಟು ವರ್ಗಾವಣೆ ಆಗಿದೆ. ಹಾಗಂತ ಜೆಡಿಎಸ್‌ನವರೆಲ್ಲರನ್ನೂ ವರ್ಗಾವಣೆ ಮಾಡೋಕಾಗುತ್ತಾ ಎಂದು ಪ್ರಶ್ನಿಸಿದರು.
ನಾನು ಆ ಚಾಲಕನ ವರ್ಗಾವಣೆಗೆ ಲೆಟರ್ ಕೊಟ್ಟಿಲ್ಲ. ವರ್ಗಾವಣೆ ಮಾಡಿ ಎಂದು ನಾನು ಹೇಳಿಲ್ಲ. ಆದರೆ ವರ್ಗಾವಣೆ ಆಗಿದೆ. ಆ ಚಾಲಕನ ಬಾವ ನನಗೆ ಫೋನ್ ಮಾಡಿದ್ರು. ಹೀಗಾಗಿ ನಾನೇ ಹೋಲ್ಡ್ ಮಾಡುವಂತೆ ಹೇಳಿದ್ದೇನೆ. ಏನಾದ್ರೂ ತಪ್ಪಿದ್ರೆ ತನಿಖೆ ಮಾಡಿ ಆಮೇಲೆ ವರ್ಗಾವಣೆ ಮಾಡಿ ಎಂದು ಹೇಳಿದ್ದೆ. ಅದನ್ನು ಕ್ಯಾನ್ಸಲ್ ಮಾಡಿ ಅಂತ ಇವರು ನಿನ್ನೆ ಹೋಗಿ ಈ ರೀತಿ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು.
ಬಾಗಲಕೋಟೆ: ಸರಿಯಾಗಿ ವೇತನ ಸಿಗದಿದ್ದಕ್ಕೆ ಬೇಸರಗೊಂಡು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕೆಎಸ್‌ಆರ್‌ಟಿಸಿ ವಾಯುವ್ಯ ವಿಭಾಗದ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಬಾಗಲಕೋಟೆ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ.
ನ.2ರಂದು ಮನೆಯಲ್ಲಿ ವಿಷ ಸೇವಿಸಿದ್ದರು. ಅವರನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಶುಕ್ರವಾರ ಬೆಳಗ್ಗೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಸಮಯಕ್ಕೆ ಸರಿಯಾಗಿ ವೇತನ ಸಿಗದೇ ಲಕ್ಷಾಂತರ ರೂ. ಸಾಲ ತೀರಿಸುವುದು ಹೇಗೆಂದು ಮನನೊಂದು ವಿಷ ಸೇವಿಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮೈಸೂರು ಚಾಮುಂಡಿಬೆಟ್ಟದಲ್ಲಿ ಮತ್ತೆ ಭೂಕುಸಿತ; ಹೆಚ್ಚಿದ ಆತಂಕ
ಬೆಂಗಳೂರು: ಕೊರೊನಾ ಸೋಂಕು ತಗುಲಿದ್ದರೂ ನಾನು ಆಸ್ಪತ್ರೆಗೆ ಬರಲ್ಲ ಎಂದು ಸೋಂಕಿತನೊಬ್ಬ ರಂಪಾಟ ಮಾಡಿರುವ ಘಟನೆ ಬೆಂಗಳೂರಿನ ಹೊರವಲಯದಲ್ಲಿ ನಡೆದಿದೆ.
ಕೊರೊನಾ ಸೋಂಕಿತ ಕೆ.ಎಸ್.ಆರ್.ಟಿ.ಸಿ ಡ್ರೈವರ್ ಆಗಿದ್ದು, ಅಗಸ್ಟ್ 21ರಂದು ಬಂದ ವರದಿಯಲ್ಲಿ ಕೊರೊನಾ ಪಾಸಿಟಿವ್ ಬಂದಿದೆ. ಇಂದು ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಬರಲು ಬಿನ್ನಿಪೇಟೆಯಲ್ಲಿರುವ ಆತನ ಮನೆಗೆ ಅಧಿಕಾರಿಗಳು ಹೋಗಿದ್ದಾರೆ. ಈ ವೇಳೆ ಬೆಂಗಳೂರಿನ ಮಾಗಡಿ ರಸ್ತೆಯ ಕೆಪಿ ಅಗ್ರಹಾರದ ಬಿಬಿಎಂಪಿ ಮೆಡಿಕಲ್ ಆಫೀಸರ್ ಜೊತೆ ಸೋಂಕಿತ ಜಗಳವಾಡಿ ಕಿರಿಕ್ ಮಾಡಿದ್ದಾನೆ. ಇದನ್ನು ಓದಿ: ದೇವರು ಬಂದಿದೆ, ಪೊಲೀಸರು ಕಾಲಿಗೆ ಬೀಳ್ಬೇಕು – ಸೋಂಕಿತೆಯ ಹೈಡ್ರಾಮ
ಸದ್ಯ ಕರ್ತವ್ಯದಲ್ಲಿರುವ ಚಾಲಕ, ಹಲವರ ಸಂಪರ್ಕಕ್ಕೆ ಬಂದಿದ್ದಾನೆ. ಹೀಗಾಗಿ ಕೂಡಲೇ ಆಸ್ಪತ್ರೆಗೆ ಬನ್ನಿ ಎಂದು ಆರೋಗ್ಯಾಧಿಕಾರಿಗಳು ಮನೆ ಬಳಿ ಹೋಗಿದ್ದಾರೆ. ಈ ವೇಳೆ ಆತ ನನಗೆ ಏನು ಆಗಿಲ್ಲ. ನಾನು ಬರುವುದಿಲ್ಲ. ಇನ್ನೊಮ್ಮೆ ಟೆಸ್ಟ್ ಮಾಡಿ ಎಂದು ಕಿರಿಕ್ ಮಾಡಿದ್ದಾನೆ. ಜೊತೆಗೆ ನಾನು ಬರಲ್ಲ ಅಂದರೆ ಬರಲ್ಲ. ಏನು ಮಾಡ್ತೀರಾ ಮಾಡಿಕೊಳ್ಳಿ ಎಂದು ಅವಾಜ್ ಹಾಕಿದ್ದಾನೆ.
– ವಾಲ್ಮೀಕಿ ಜಯಂತಿ ಮೆರವಣಿಗೆ ವೇಳೆ ದುಷ್ಕೃತ್ಯ
– ಎಂಟು ಮಂದಿಯಿಂದ ಓರ್ವನ ಹತ್ಯೆ
– ಅಳಿಯನ ಮೇಲಿನ ಕೋಪಕ್ಕೆ ಮಾವ ಬಲಿ
ಬಾಗಲಕೋಟೆ: ವಾಲ್ಮೀಕಿ ಜಯಂತಿ ಮೆರವಣಿಗೆ ವೇಳೆ ಯುವಕನ ಕಾಲು ತುಳಿದ ಕಾರಣಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ನಿಮ್ಮ ಅಳಿಯ ಕಾಲು ತುಳಿದ ಎಂದು ನೆಪವಿಟ್ಟುಕೊಂಡು ಜಗಳಕ್ಕಿಳಿದ 8 ಮಂದಿ ದುಷ್ಕರ್ಮಿಗಳು ಕೆಎಸ್ಆರ್‌ಟಿಸಿ ಚಾಲಕರ ಎದೆಗೆ ಕುಡುಗೋಲಿನಿಂದ ಕೊಚ್ಚಿ ಕೊಲೆ ಮಾಡಿ ಕ್ರೌರ್ಯ ಮೆರೆದಿದ್ದಾರೆ.
ಬಾಗಲಕೋಟೆ ತಾಲೂಕಿನ ಬೇವೂರು ಗ್ರಾಮದಲ್ಲಿ ಸೋಮವಾರ ರಾತ್ರಿ ಈ ಘಟನೆ ನಡೆದಿದೆ. ಕೆಎಸ್ಆರ್‌ಟಿಸಿ ಬಸ್ ಚಾಲಕ ಶಿವಪ್ಪ ಪೂಜಾರಿ(43) ಕೊಲೆಯಾದ ದುರ್ದೈವಿ. ಶೇಖರಪ್ಪ ಪೂಜಾರಿ, ಗ್ಯಾನೆಪ್ಪ ಪೂಜಾರಿ, ಶಿವಪ್ಪ ಯಲ್ಲಪ್ಪ ಇದ್ದಲಗಿ, ಮುತ್ತಪ್ಪ ಪೂಜಾರಿ, ಶ್ರೀಶೈಲ್ ಪೂಜಾರಿ ಸೇರಿದಂತೆ 8 ಜನರು ಕೊಲೆ ಮಾಡಿರುವ ಆರೋಪಿಗಳಾಗಿದ್ದಾರೆ. ಕೇವಲ ಕಾಲು ತುಳಿದ ಎಂಬ ಕಾರಣವನ್ನಿಟ್ಟುಕೊಂಡು ಶುರುವಾದ ಜಗಳ, ಮಾರಾಮಾರಿಗೆ ತಿರುಗಿ ಕೊನೆಗೆ 8 ಜನರು ಸೇರಿ ಶಿವಪ್ಪ ಅವರನ್ನು ಕೊಲೆ ಮಾಡಿದ್ದಾರೆ. ಇದನ್ನೂ ಓದಿ:ಸಿನಿಮಾ ಶೈಲಿಯಲ್ಲಿ ಯುವಕನ ಕೊಲೆಗೆ ಸಂಚು – ಕೈಗೆ ಚಾಕು ಇರಿತ
ಸೋಮವಾರ ರಾತ್ರಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದ ಮೆರವಣಿಗೆ ವೇಳೆ ಶಿವಪ್ಪ ಅವರ ಅಳಿಯ ಅಯ್ಯಪ್ಪ ಪೂಜಾರಿ ಹಾಗೂ ಕೆಲ ಯುವಕರು ಕುಣಿಯುತ್ತಿದ್ದರು. ಈ ವೇಳೆ ಗ್ಯಾನಪ್ಪಗೆ ಅಯ್ಯಪ್ಪ ಅವರ ಕಾಲು ಬಡಿದಿತ್ತು. ಇಷ್ಟಕ್ಕೆ ಸಿಟ್ಟಿಗೆದ್ದ ಗ್ಯಾನಪ್ಪ ಅಯ್ಯಪ್ಪ ಅವರ ಜೊತೆ ಜಗಳಕ್ಕೆ ನಿಂತುಕೊಂಡನು. ಆದರೆ ಅಲ್ಲಿದ್ದ ಹಿರಿಯರು ಇಬ್ಬರನ್ನೂ ಸಮಾಧಾನ ಮಾಡಿ ಕಳುಹಿಸಿದ್ದರು. ಇದನ್ನೂ ಓದಿ:ತುಂಬು ಗರ್ಭಿಣಿಗೆ ವರದಕ್ಷಿಣೆ ಕಿರುಕುಳ-ಪ್ರಶ್ನಿಸಿದ್ದಕ್ಕೆ ಅತ್ತೆ ಮೇಲೆ ಲಾಂಗ್ ಅಟ್ಯಾಕ್
ಆದರೆ ಇಷ್ಟಕ್ಕೆ ಸುಮ್ಮನಾಗದ ಗ್ಯಾನಪ್ಪ, ನಿಮ್ಮ ಅಳಿಯನಿಗೆ ಬುದ್ಧಿ ಹೇಳು ಎಂದು ಶಿವಪ್ಪ ಅವರ ಜೊತೆ ಮಾತುಕತೆ ಶುರುಮಾಡಿದ್ದನು. ಆಗ ಮಾತುಕತೆ ಜಗಳಕ್ಕೆ ತಿರುಗಿ, ಮಾರಾಮಾರಿಯಾಗಿ ಕೊನೆಗೆ ಶಿವಪ್ಪ ಕೊಲೆಯಾಗಿದ್ದಾರೆ. ಜಗಳದಲ್ಲಿ ಅಳಿಯನ ಪರ ಮಾತಾಡೋಕೆ ಬಂದ ಶಿವಪ್ಪರನ್ನು 8 ಜನ ಸೇರಿ ಕೊಲೆ ಮಾಡಿದ್ದಾರೆ. ಕಟ್ಟಿಗೆಗಳಿಂದ ಹೊಡೆದು, ಕುಡಗೋಲಿನಿಂದ ಶಿವಪ್ಪನ ಎದೆಗೆ ಕೊಚ್ಚಿ ಕೊಲೆಗೈದಿದ್ದಾರೆ. ಇದನ್ನೂ ಓದಿ:ಪಬ್‍ಜಿ ಕೊಲೆ ಪ್ರಕರಣ – ತರಕಾರಿ ಕತ್ತರಿಸಿದಂತೆ ತಂದೆಯ ರುಂಡ, ಕಾಲು ಕತ್ತರಿಸಿದ ಮಗ
ಸದ್ಯ ಬಾಗಲಕೋಟೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, 8 ಮಂದಿ ಆರೋಪಿಗಳನ್ನ ಪೊಲೀಸರು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಿದ್ದಾರೆ.