Tag: KSRTC Workers

  • KSRTC ನೌಕರರಿಗೆ ಗುಡ್‌ನ್ಯೂಸ್ – ಡಬಲ್ ಡ್ಯೂಟಿಯಿಂದ ಮುಕ್ತಿ

    KSRTC ನೌಕರರಿಗೆ ಗುಡ್‌ನ್ಯೂಸ್ – ಡಬಲ್ ಡ್ಯೂಟಿಯಿಂದ ಮುಕ್ತಿ

    – ಇನ್ಮುಂದೆ 8 ಗಂಟೆಗಿಂತ ಹೆಚ್ಚು ಸಮಯ ಕರ್ತವ್ಯ ಮಾಡಿಸುವಂತಿಲ್ಲ
    – ವಾರದಲ್ಲಿ 48 ಗಂಟೆ ಮೀರುವಂತಿಲ್ಲ

    ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ತನ್ನ ನೌಕರರಿಗೆ ಗುಡ್‌ನ್ಯೂಸ್ ಕೊಟ್ಟಿದೆ. ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳನ್ನು ತಪ್ಪಿಸುವ ಉದ್ದೇಶದಿಂದ ನೌಕರರಿಗೆ ಡಬಲ್ ಡ್ಯೂಟಿಯಿಂದ ಮುಕ್ತಿ ನೀಡಿದೆ.

    ಇಂದಿನಿಂದಲೇ (ಮಾ.28) ರಾತ್ರಿ ಮತ್ತು ದೂರ ಪ್ರಯಾಣದಲ್ಲಿ ವಿಶ್ರಾಂತಿ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ಅಲ್ಲದೇ ಕೆಲಸದ ಅವಧಿ ದಿನದಲ್ಲಿ 8 ಗಂಟೆ, ವಾರದಲ್ಲಿ 48 ಗಂಟೆ ಮೀರದಂತೆ ಸೂಚಿಸಿದೆ. ಇದನ್ನೂ ಓದಿ: ನನ್ನಲ್ಲಿ ಸಾಕಷ್ಟು ಹಣವಿಲ್ಲ.. ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ: ಕೇಂದ್ರ ಹಣಕಾಸು ಸಚಿವೆ

    ಇತ್ತೀಚಿನ ದಿನಗಳಲ್ಲಿ ಬಸ್‌ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅಪಘಾತಕ್ಕೆ ಕಾರಣ ತಿಳಿಯಲು ಕೆಎಸ್‌ಆರ್‌ಟಿಸಿ ಪ್ರತ್ಯೇಕ ಸಮಿತಿ ಮೂಲಕ ತನಿಖೆ ನಡೆಸಿತ್ತು. ಇದಕ್ಕೆ ಕಾರಣಗಳನ್ನು ಹುಡುಕಿದಾಗ ಡಬಲ್ ಡ್ಯೂಟಿ ಮತ್ತು ರಾತ್ರಿ ವೇಳೆ ವಿಶ್ರಾಂತಿ ನೀಡದಿರುವುದೇ ಕಾರಣ ಅನ್ನೋದು ತಿಳಿದುಬಂದಿತು. ಸರಿಯಾಗಿ ನಿದ್ರೆ ಇಲ್ಲದೇ, ಬಸ್ ಚಾಲನೆ ಮಾಡಲು ಸಾಧ್ಯವಾಗದೇ, ಅಪಘಾತಗಳು ಸಂಭವಿಸುತ್ತಿವೆ ಎಂದು ಸಮಿತಿ ನೀಡಿದ ವರದಿಯಲ್ಲಿ ತಿಳಿದುಬಂದಿತು ಎಂದು ಸಾರಿಗೆ ನಿಗಮ ತಿಳಿಸಿದೆ. ಅಪಘಾತಗಳನ್ನು ತಡೆಗಟ್ಟುವ ಸಲುವಾಗಿ ತನ್ನ ನೌಕರರಿಗೆ ಡಬಲ್ ಡ್ಯೂಟಿಯಿಂದ ಮುಕ್ತಿ ನೀಡಿದೆ ಎಂದು ಹೇಳಿದೆ. ಇದನ್ನೂ ಓದಿ: ‘ಲೋಕ’ಸಮರಕ್ಕೆ ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಬಿಕ್ಕಟ್ಟು – ಸಿಎಂ, ಡಿಸಿಎಂ ನೇತೃತ್ವದಲ್ಲಿ ಸಂಧಾನ ಸಭೆ

    ಕೆಎಸ್‌ಆರ್‌ಟಿಸಿ ಆದೇಶದಲ್ಲಿ ಏನಿದೆ?
    * ಕೆಎಸ್‌ಆರ್‌ಟಿಸಿ ಡ್ರೈವರ್‌ಗಳಿಗೆ ವಿಶ್ರಾಂತಿ ಕಡ್ಡಾಯ
    * ಇಂದಿನಿಂದ ಡಬಲ್ ಡ್ಯೂಟಿ ಮಾಡಿಸುವಂತಿಲ್ಲ
    * ದಿನದಲ್ಲಿ 8 ಗಂಟೆಗಿಂತ ಹೆಚ್ಚು ಕರ್ತವ್ಯ ಮಾಡಿಸುವಂತಿಲ್ಲ
    * 8 ಗಂಟೆ ಮತ್ತು ರಾತ್ರಿ ವೇಳೆಯಲ್ಲಿ ಹೆಚ್ಚು ಡ್ಯೂಟಿ ಮಾಡಿದರೆ, ಅಂತಹ ಡ್ರೈವರ್‌ಗಳಿಗೆ ನಿದ್ರೆ ಮತ್ತು ವಿಶ್ರಾಂತಿ ಮಾಡಲು 4-5 ಗಂಟೆ ಅವಕಾಶ ನೀಡಬೇಕು.
    * ಇದರಿಂದ ಕೆಎಸ್‌ಆರ್‌ಟಿಸಿ ಬಸ್‌ಗಳ ಅಪಘಾತಗಳು ತಪ್ಪುತ್ತದೆ.

  • KSRTC ನೌಕರರ ಕುಟುಂಬ ಕಲ್ಯಾಣ ಯೋಜನೆ ಪರಿಹಾರ ಮೊತ್ತ 3 ರಿಂದ 10 ಲಕ್ಷಕ್ಕೆ ಹೆಚ್ಚಳ

    KSRTC ನೌಕರರ ಕುಟುಂಬ ಕಲ್ಯಾಣ ಯೋಜನೆ ಪರಿಹಾರ ಮೊತ್ತ 3 ರಿಂದ 10 ಲಕ್ಷಕ್ಕೆ ಹೆಚ್ಚಳ

    ಬೆಂಗಳೂರು: ಕೆಎಸ್‌ಆರ್‌ಟಿಸಿ ನೌಕರರ ಕುಟುಂಬ ಕಲ್ಯಾಣ ಯೋಜನೆಯ ಪರಿಹಾರ ಮೊತ್ತವನ್ನು 3 ಲಕ್ಷದಿಂದ 10 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ತಿಳಿಸಿದೆ.

    ಅಪಘಾತ ಹೊರತುಪಡಿಸಿ ಸೇವಾ ಅವಧಿಯಲ್ಲಿ ಹೃದಯಾಘಾತ, ಕಿಡ್ನಿ ಸಮಸ್ಯೆ, ಕ್ಯಾನ್ಸರ್, ಸ್ಟ್ರೋಕ್‌ನಿಂದ ಮೃತಪಟ್ಟ ನೌಕರರ ಕುಟುಂಬಕ್ಕೆ 10 ಲಕ್ಷ ಪರಿಹಾರ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

    ಈಗಾಗಲೇ ಅಪಘಾತದಿಂದ ಮೃತಪಟ್ಟ ಕೆಎಸ್‌ಆರ್‌ಟಿಸಿ ನೌಕರರ ಅವಲಂಬಿತರಿಗೆ 1 ಕೋಟಿ ರೂ. ವಿಮಾ ಪರಿಹಾರ ಮೊತ್ತ ನೀಡಲಾಗಿದೆ. ದೇಶದ ರಸ್ತೆ ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ ಪ್ರಮಾಣದ ಪರಿಹಾರ ನೀಡಲಾಗಿದೆ.

    ಕ್ಯಾನ್ಸರ್‌, ಸ್ಟ್ರೋಕ್‌, ಹೃದಯಾಘಾತ, ಕಿಡ್ನಿ ವೈಫಲ್ಯ ಸೇರಿದಂತೆ ಇತರೆ ಕಾಯಿಲೆಗಳಿಂದ ತಮ್ಮ ಸೇವಾವಧಿಯಲ್ಲೇ ಮರಣ ಹೊಂದುತ್ತಿರುವ ಸುಮಾರು 100 ಕ್ಕೂ ಹೆಚ್ಚು ಪ್ರಕರಣಗಳು ನಿಗಮದಲ್ಲಿ ಪ್ರತಿವರ್ಷ ದಾಖಲಾಗುತ್ತಿದೆ. ಹೀಗಾಗಿ ಪರಿಹಾರದ ಮೊತ್ತ ಹೆಚ್ಚಿಸಲಾಗಿದೆ.

    ಪರಿಷ್ಕೃತ ಆದೇಶವು ನ.1 ರಿಂದ ಮುಂದುವರಿದ ಮರಣ ಪ್ರಕರಣಗಳಿಗೆ ಅನ್ವಯಿಸುತ್ತದೆ ಎಂದು ನಿಗಮ ತಿಳಿಸಿದೆ. ಸದರಿ ಯೋಜನೆಗೆ ನೌಕರರ ಮಾಸಿಕ ವಂತಿಕೆಯನ್ನು ಪ್ರಸ್ತುತ 100 ರೂ.ನಿಂದ 200 ರೂ.ಗೆ ಹಾಗೂ ನಿಗಮದ ವತಿಯಿಂದ ಪ್ರತಿ ನೌಕರರ ಪರವಾಗಿ ನೀಡಲಾಗುತ್ತಿರುವ 50 ರೂ. ವಂತಿಕೆಯನ್ನು 100 ರೂ.ಗೆ ಹೆಚ್ಚಿಸಿ ಪರಿಷ್ಕರಿಸಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]