Tag: Kudligi

  • ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟ್ರ್ಯಾಕ್ಟರ್, ಓರ್ವ ಕಾರ್ಮಿಕ ಸಾವು, 8 ಜನರಿಗೆ ಗಾಯ

    ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟ್ರ್ಯಾಕ್ಟರ್, ಓರ್ವ ಕಾರ್ಮಿಕ ಸಾವು, 8 ಜನರಿಗೆ ಗಾಯ

    ಬಳ್ಳಾರಿ: ಟ್ರಾಕ್ಟರ್ (Tractor) ಪಲ್ಟಿಯಾಗಿ ಸ್ಥಳದಲ್ಲೇ ಓರ್ವ ಮೃತಪಟ್ಟು, 8 ಜನರಿಗೆ ಗಾಯಗಳಾಗಿರುವ ಘಟನೆ ವಿಜಯನಗರ (Vijayanagara) ಜಿಲ್ಲೆಯ ಕೂಡ್ಲಿಗಿ (Kudligi) ತಾಲೂಕಿನ ನಾಗಲಾಪುರ ಗ್ರಾಮದ ಬಳಿ ನಡೆದಿದೆ.

    ಘಟನೆಯಲ್ಲಿ ಜಾರ್ಖಂಡ್ ಮೂಲದ ಕಾರ್ಮಿಕ ಜ್ಯೋತಿಲಾಲ್ ತುಡು (35) ಸಾವನ್ನಪ್ಪಿದ್ದಾರೆ. ವಿಂಡ್ ಫ್ಯಾನ್‌ ಕೆಲಸಕ್ಕೆಂದು ಬಂದಿದ್ದ ಬಿಹಾರ ಹಾಗೂ ಜಾರ್ಖಂಡ್ ಮೂಲದ ಕೂಲಿ ಕಾರ್ಮಿಕರು ಟ್ರಾಕ್ಟರ್ ನಲ್ಲಿ ಹೋಗುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಇದನ್ನೂ ಓದಿ: ನಿಮ್ಗೆ ಹುಚ್ಚು ಹಿಡಿದಿದ್ಯಾ? – ಪಾಕಿಸ್ತಾನದಲ್ಲಿ ಈಗ ಸೇನೆ Vs ಪೊಲೀಸ್‌ ಕಿತ್ತಾಟ

     

    ಘಟನೆಯಲ್ಲಿ ಮೂರ್ನಾಲ್ಕು ಜನರಿಗೆ ಕೈ, ಕಾಲು ಮುರಿದಿದ್ದು, ಗಂಭೀರ ಗಾಯಗಳಾಗಿವೆ. ಉಳಿದಂತೆ ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಕೂಡ್ಲಿಗಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸಲಾಗ್ತಿದೆ. ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಸಿಡಿಲು ಬಡಿದು ಯುವಕ ಸಾವು

    ಸಿಡಿಲು ಬಡಿದು ಯುವಕ ಸಾವು

    ಬಳ್ಳಾರಿ: ಸಿಡಿಲು ಬಡಿದು ಯುವಕ ಸಾವನ್ನಪ್ಪಿರುವ ಘಟನೆ ವಿಜಯನಗರ (Vijayanagara) ಜಿಲ್ಲೆಯ ಕೂಡ್ಲಿಗಿ (Kudligi) ತಾಲೂಕಿನ ಬಂಡೆಬಸಾಪುರ ತಾಂಡಾದಲ್ಲಿ ನಡೆದಿದೆ.

    ಬಂಡೆಬಸಾಪುರ ಗ್ರಾಮದ ಪಾಂಡುನಾಯ್ಕ್(18) ಮೃತ ಯುವಕ. ಗುರುವಾರ ಸಂಜೆ ಗ್ರಾಮದಲ್ಲಿ ಭಾರೀ ಮಳೆಯಾಗಿದ್ದು, ಮಳೆ ಬರುತ್ತಿದ್ದ ಸಮಯದಲ್ಲಿ ಪಾಂಡುನಾಯ್ಕ್ ಮನೆ ಬಳಿ ನಿಂತಿದ್ದ. ಈ ವೇಳೆ ಸಿಡಿಲು ಬಡಿದು ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇದನ್ನೂ ಓದಿ: ಬೊಲೆರೋ, ಬಸ್ ನಡುವೆ ಭೀಕರ ಅಪಘಾತ – ನಾಲ್ವರು ದುರ್ಮರಣ

    ಸಿಡಿಲಿನ ತೀವ್ರತೆಗೆ ಮನೆಯ ಗೋಡೆಗಳಿಗೆ ಹಾನಿಯಾಗಿದೆ. ಕೂಡ್ಲಿಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: 18 ದಿನಗಳ ಕಾಲ NIA ಕಸ್ಟಡಿಗೆ ರಾಣಾ – ಮಧ್ಯರಾತ್ರಿ ಕೋರ್ಟ್‌ನಲ್ಲಿ ವಾದ ಏನಿತ್ತು?

  • ಸೇಬು ತುಂಬಿದ್ದ ಲಾರಿ ಪಲ್ಟಿ – ಕ್ಷಣಮಾತ್ರದಲ್ಲೇ ಹಣ್ಣುಗಳನ್ನು ತುಂಬಿಕೊಂಡು ಕಾಲ್ಕಿತ್ತ ಜನ

    ಸೇಬು ತುಂಬಿದ್ದ ಲಾರಿ ಪಲ್ಟಿ – ಕ್ಷಣಮಾತ್ರದಲ್ಲೇ ಹಣ್ಣುಗಳನ್ನು ತುಂಬಿಕೊಂಡು ಕಾಲ್ಕಿತ್ತ ಜನ

    ಬಳ್ಳಾರಿ: ಸೇಬುಗಳನ್ನು (Apple) ತುಂಬಿದ್ದ ಲಾರಿ ಪಲ್ಟಿಯಾಗಿ (Lorry Overturn) ಚೆಲ್ಲಾಪಿಲ್ಲಿಯಾಗಿ ರಸ್ತೆಯಲ್ಲಿ ಬಿದ್ದಿದ್ದ ಸೇಬುಗಳನ್ನು ಕ್ಷಣಮಾತ್ರದಲ್ಲೇ ಸಾರ್ವಜನಿಕರು ತುಂಬಿಕೊಂಡು ಹೋಗಿರುವ ಘಟನೆ ವಿಜಯನಗರ (Vijayanagar) ಜಿಲ್ಲೆಯಲ್ಲಿ ನಡೆದಿದೆ.

    ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಬಣವಿಕಲ್ಲು ಗ್ರಾಮದ ಬಳಿ ಸೇಬುಗಳನ್ನು ತುಂಬಿದ್ದ ಲಾರಿ ಪಲ್ಟಿಯಾಗಿದೆ. ಪೊಲೀಸರು ಸ್ಥಳಕ್ಕಾಗಮಿಸಿದರೂ ಸ್ಥಳೀಯರು ಕ್ಯಾರೆ ಎನ್ನದೆ ಸೇಬುಗಳನ್ನು ಚೀಲಗಳಲ್ಲಿ ತುಂಬಿಕೊಂಡಿದ್ದಾರೆ. ಈ ವೇಳೆ ಪೊಲೀಸರು ಏನೂ ಮಾಡಲಾಗದೆ ಅಸಹಾಯಕರಂತೆ ನಿಂತಿದ್ದಾರೆ. ಇದನ್ನೂ ಓದಿ: ಭಾರೀ ಗಾತ್ರದ ವಾಹನ ಸಂಚಾರದಿಂದ ಕುಸಿದ ರಸ್ತೆ

    ನಾ ಮುಂದು, ತಾ ಮುಂದು ಎಂದು ಹೆಣ್ಣು ಮಕ್ಕಳು, ಗಂಡು ಮಕ್ಕಳು ಸೇರಿ ನೂರಾರು ಜನರು ಸೇಬುಗಳನ್ನು ತುಂಬಿಕೊಂಡಿದ್ದಾರೆ. ಕ್ಷಣಮಾತ್ರದಲ್ಲೇ ಹಣ್ಣಿನ ಲೋಡ್ ಅನ್ನು ಖಾಲಿ ಮಾಡಿದ ಸಾರ್ವಜನಿಕರು ಅಲ್ಲಿಂದ ಕಾಲ್ಕಿತ್ತಿದ್ದಾರೆ. ಇದನ್ನೂ ಓದಿ: ಮಾಜಿ ಶಾಸಕನ ಕಿಸೆಯಿಂದ ಹಣ ಎಗರಿಸಲು ಮುಂದಾದವನಿಗೆ ಧರ್ಮದೇಟು

  • ಲಾರಿ ಹರಿದು 40ಕ್ಕೂ ಹೆಚ್ಚು ಕುರಿಗಳ ಮಾರಣಹೋಮ

    ಲಾರಿ ಹರಿದು 40ಕ್ಕೂ ಹೆಚ್ಚು ಕುರಿಗಳ ಮಾರಣಹೋಮ

    ವಿಜಯನಗರ: ಕುರಿ ಮಂದೆಯ ಮೇಲೆ ಲಾರಿ ಹರಿದು 40 ಕ್ಕೂ ಅಧಿಕ ಕುರಿಗಳ ಸಾವಿಗೀಡಾದ ಘಟನೆ ಕೂಡ್ಲಿಗಿಯ (Kudligi) ಶಿವಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.

    ಸಾವಿಗೀಡಾದ ಕುರಿಗಳು ಶಿವಪುರದ ಬಾಲಪ್ಪ ಎಂಬ ರೈತನಿಗೆ ಸೇರಿದ್ದಾಗಿವೆ. ಹೊಸಪೇಟೆ (Hosapete) ಕಡೆಯಿಂದ ಬೆಂಗಳೂರು (Bengaluru) ಕಡೆಗೆ ಬರುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಕುರಿಗಳ ಮೇಲೆ ಹರಿದಿದೆ. ಡಿಕ್ಕಿಯಾದ ರಭಸಕ್ಕೆ ರಸ್ತೆಯ ತುಂಬೆಲ್ಲಾ ಕುರಿಗಳು ಛಿದ್ರವಾಗಿ ಬಿದ್ದಿವೆ. ಇದನ್ನೂ ಓದಿ: ಪಿಎಸ್‍ಐ ಹಗರಣ – ಎಡಿಜಿಪಿ ಅಮೃತ್ ಪೌಲ್‌ಗೆ ಮತ್ತೊಂದು ಸಂಕಷ್ಟ

    ಅತಿವೇಗವಾದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಆರೋಪಿಸಲಾಗಿದೆ. ಲಾರಿ ಚಾಲಕ ಅಪಘಾತ ನಡೆಸಿ, ಅಲ್ಲಿಂದ ಲಾರಿ ನಿಲ್ಲಿಸದೇ ಮುಂದೆ ಸಾಗಿದ್ದಾನೆ. ಗ್ರಾಮಸ್ಥರು ಲಾರಿ ತಡೆದು ನಿಲ್ಲಿಸಿದ್ದಾರೆ. ಈ ವೇಳೆ ರಸ್ತೆ ಪಕ್ಕದ ಕಬ್ಬಿಣದ ತಡೆಗೋಡೆಗೆ ಲಾರಿ ಡಿಕ್ಕಿಯಾಗಿದೆ. ಸ್ಥಳಕ್ಕೆ ಕೂಡ್ಲಿಗಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ. ಇದನ್ನೂ ಓದಿ: ವಿಪಕ್ಷ ನಾಯಕನಿಲ್ಲದೆ ಕಲಾಪ ನಡೆದಿದ್ದು ದುರ್ದೈವ: ಹೆಚ್.ಕೆ ಪಾಟೀಲ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗಾಬರಿ ಪಡುವಂತಹದ್ದೇನಿಲ್ಲ, ಗಟ್ಟಿಮುಟ್ಟಾಗಿದ್ದೇನೆ- ಸಿದ್ದರಾಮಯ್ಯ

    ಗಾಬರಿ ಪಡುವಂತಹದ್ದೇನಿಲ್ಲ, ಗಟ್ಟಿಮುಟ್ಟಾಗಿದ್ದೇನೆ- ಸಿದ್ದರಾಮಯ್ಯ

    ಬೆಂಗಳೂರು: ದಿನನಿತ್ಯ ಓಡಾಡುವ ಕಾರು ಬದಲಾಗಿರುವ ಕಾರಣ ಸೈಡ್ ಸ್ಟೆಪ್ ಇಲ್ಲದೆ ಕಾಲು ಜಾರಿ ಹಿಂದಕ್ಕೆ ಬೀಳಲು ಆಗಿದ್ದೆ. ಗಾಬರಿ ಪಡುವಂತಹದ್ದೇನಿಲ್ಲ, ನಾನು ಆರೋಗ್ಯವಾಗಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಟ್ವೀಟ್‍ನಲ್ಲಿ ತಿಳಿಸಿದ್ದಾರೆ.

    ಈ ವಿಚಾರವನ್ನು ಅತಿ ರಂಜಿತವಾಗಿ ವರದಿ ಮಾಡಿ ಜನ ಗಾಬರಿ ಪಡುವಂತೆ ಮಾಡಬೇಡಿ ಎಂದು ಸಿದ್ದು ಸುದ್ದಿಗಾರರಿಗೆ ವಿನಂತಿ ಮಾಡಿದ್ದಾರೆ.

    ವಿಧಾನಸಭಾ ಚುನಾವಣೆ  (Karnataka Election) ಹಿನ್ನೆಲೆ ಕುಡ್ಲಿಗಿಯಲ್ಲಿ (Kudligi) ಕಾಂಗ್ರೆಸ್ (Congress) ಅಭ್ಯರ್ಥಿ ಡಾ.ಎನ್.ಟಿ ಶ್ರೀನಿವಾಸ್ ಅವರ ಪರವಾಗಿ ಪ್ರಚಾರಕ್ಕೆ ಶನಿವಾರ ಹೆಲಿಕಾಪ್ಟರ್ ಮೂಲಕ ಆಗಮಿಸಿದ್ದರು. ಈ ವೇಳೆ ಅವರು ಕಾರು ಹತ್ತುವಾಗ ಕುಸಿದು ಬಿದ್ದರು. ಅಲ್ಲೇ ಇದ್ದ ವೈದ್ಯರು ಅವರ ಕೈಹಿಡಿದು ಕಾರಿನಲ್ಲಿ ಕೂರಿಸಿದ್ದರು.

    ಬಳಿಕ ಕಾರಿನೊಳಗೆ ಕೂರಿಸಿ ಗ್ಲೂಕೋಸ್ ನೀಡಿದರು. ಗ್ಲೂಕೋಸ್ ಕುಡಿದ ಬಳಿಕ ಚೇತರಿಸಿಕೊಂಡ ಸಿದ್ದರಾಮಯ್ಯ ಜನರತ್ತ ಕೈ ಬೀಸಿ ಕಾರ್ಯಕ್ರಮಕ್ಕೆ ತೆರಳಿದ್ದರು.

  • ದೋಸ್ತಿಗಳ ನಡುವೆ ಜಂಗಿ ಕುಸ್ತಿ – ಬಳ್ಳಾರಿ ಅಖಾಡ ಹೇಗಿದೆ?

    ದೋಸ್ತಿಗಳ ನಡುವೆ ಜಂಗಿ ಕುಸ್ತಿ – ಬಳ್ಳಾರಿ ಅಖಾಡ ಹೇಗಿದೆ?

    ಬಳ್ಳಾರಿ: ಒಂದು ಕಾಲದಲ್ಲಿ ಒಬ್ಬನೇ ನಾಯಕನಿಂದ ರಾಜಕೀಯ ನಲೆ ಕಂಡು ಕೊಂಡ ಇಬ್ಬರು ನಾಯಕರು ಈ ಬಾರಿ ಬಳ್ಳಾರಿ ಗ್ರಾಮೀಣ ಕ್ಷೇತ್ರದ ಚುನಾವಣೆಯಲ್ಲಿ (Election) ಬೇರೆ ಬೇರೆ ಪಕ್ಷದಿಂದ ಸ್ಪರ್ಧೆ ಮಾಡುತ್ತಿದ್ದಾರೆ.

    ಶ್ರೀರಾಮುಲು (B.Sriramulu) ಹಾಗೂ ನಾಗೇಂದ್ರ (Nagendra) ಒಂದು ಕಾಲದಲ್ಲಿ ಆಪ್ತ ಗೆಳೆಯರು. ಜಿಲ್ಲೆಯಲ್ಲಿ ಬಿಜೆಪಿ ಸಂಘಟನೆಗೊಳ್ಳಲು ಈ ಇಬ್ಬರು ಸೇರಿ ಕೆಲಸ ಮಾಡಿದವರು. ಮಾಜಿ ಸಚಿವ ಜನಾರ್ದನ ರೆಡ್ಡಿ ಗರಡಿಯಲ್ಲಿಯೇ ಇಬ್ಬರೂ ಪಳಗಿದವರು. 2008ರಲ್ಲಿ ಕೂಡ್ಲಿಗಿಯಲ್ಲಿ (Kudligi) ಬಿಜೆಪಿಯಿಂದ ಸ್ಪರ್ಧಿಸಿ ನಾಗೇಂದ್ರ ಗೆಲುವು ಪಡೆದಿದ್ದರು. 2013ರಲ್ಲಿ ಕೂಡ್ಲಿಗಿ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಗೇಂದ್ರ ಗೆದ್ದರು. ಮತ್ತೆ 2018ರಲ್ಲಿ ಬಳ್ಳಾರಿ (Bellary) ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸಿ ಜಯ ದಾಖಲಿಸಿದ್ದರು. ಇದನ್ನೂ ಓದಿ: ಚಿಕ್ಕಪೇಟೆಯಲ್ಲಿ ‘ಕೈ’ ಬಂಡಾಯ ಶಮನ – ಗಂಗಾಂಬಿಕೆ ನಾಮಪತ್ರ ವಾಪಸ್‌

    2008ರಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದ ಬಳ್ಳಾರಿ ಗ್ರಾಮೀಣ ಎಸ್‍ಟಿ ಮೀಸಲು ಕ್ಷೇತ್ರ ಅತ್ಯಂತ ಕಡಿಮೆ ಅವಧಿಯಲ್ಲಿ ಜಿಲ್ಲೆಯಲ್ಲೇ ಅತೀ ಹೆಚ್ಚು ಚುನಾವಣೆಗಳನ್ನು ಎದುರಿಸಿದ ಕ್ಷೇತ್ರವಾಗಿದೆ.

    ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ 2008ರಲ್ಲಿ ಬಿಜೆಪಿಯಿಂದ ಗೆಲುವು ದಾಖಲಿಸಿದ್ದ ಬಿ.ಶ್ರೀರಾಮುಲು, 2011ರಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಬಂಧನದಿಂದ ಶಾಸಕ ಸ್ಥಾನಕ್ಕೆ ಹಾಗೂ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. ಅದಾದ ಬಳಿಕ 2011ರಲ್ಲಿ ನಡೆದ ಉಪಚುನಾವಣೆ, 2013ರಲ್ಲಿ ನಡೆದ ಸಾರ್ವತ್ರಿಕ ಚುನಾವಣೆ ಎರಡರಲ್ಲೂ ಶ್ರೀರಾಮುಲು ಬಿಎಸ್‍ಆರ್ ಪಕ್ಷದಿಂದ ಸ್ಪರ್ಧಿಸಿ ಮರು ಆಯ್ಕೆಯಾಗಿದ್ದರು. ಬಳಿಕ ಬಿಜೆಪಿ ಪಕ್ಷಕ್ಕೆ ವಾಪಸ್ ಬಂದು 2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆಲ್ಲುವ ಮೂಲಕ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಇದರಿಂದ ತೆರವಾದ ಶಾಸಕ ಸ್ಥಾನಕ್ಕೆ 2014ರಲ್ಲಿ ಪುನಃ ಉಪಚುನಾವಣೆ ನಡೆದು ಕಾಂಗ್ರೆಸ್‍ನ ಎನ್.ವೈ.ಗೋಪಾಲಕೃಷ್ಣ ಶಾಸಕರಾಗಿ ಆಯ್ಕೆಯಾಗಿದ್ದರು. 2018ರಲ್ಲಿ ಕೂಡ್ಲಿಗಿಯಿಂದ ಗ್ರಾಮೀಣ ಕ್ಷೇತ್ರಕ್ಕೆ ವಲಸೆ ಬಂದ ಬಿ.ನಾಗೇಂದ್ರ ಕಾಂಗ್ರೆಸ್‍ನಿಂದ ಗೆಲ್ಲುವ ಮೂಲಕ ಹ್ಯಾಟ್ರಿಕ್ ಗೆಲುವು ಸಾಧಿಸಿ ಬಳ್ಳಾರಿ ಗ್ರಾಮೀಣ ಕ್ಷೇತ್ರದ ಶಾಸಕರಾಗಿದ್ದಾರೆ.

    ಒಂದು ಕಾಲದ ದೋಸ್ತಿಗಳು ಇಂದು ಒಂದೇ ಕ್ಷೇತ್ರದ ಅಧಿಪತ್ಯಕ್ಕೆ ಇಂದು ಗುದ್ದಾಟ ನಡೆಸಿದ್ದಾರೆ. ಈ ಮೂಲಕ ಇಬ್ಬರು ತಮ್ಮ ಶಕ್ತಿ ಮೀರಿ ಪ್ರಯತ್ನ ಮಾಡಿ ಗೆಲ್ಲಲೇ ಬೇಕು ಎನ್ನುವ ಹಟಕ್ಕೆ ಬಿದ್ದಿದ್ದಾರೆ. ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಈಗ ಹಾಲಿ ಸಚಿವ ಶ್ರೀರಾಮುಲು ಹಾಗೂ ಹಾಲಿ ಶಾಸಕ ನಾಗೇಂದ್ರ ನಡುವೆ ನೇರಾ ನೇರಾ ಸ್ಪರ್ಧೆ ಏರ್ಪಟ್ಟಿದೆ. ಇಬ್ಬರು ಒಂದೇ ಸಮುದಾಯದ ನಾಯಕರು ಮೇಲಾಗಿ ಒಬ್ಬನೇ ನಾಯಕನಿಂದ ರಾಜಕೀಯ ಜೀವನ ಕಂಡುಕೊಂಡವರು.

    ಮೇಲ್ನೋಟಕ್ಕೆ ಇಬ್ಬರೂ ಸಮಬಲ ಹೊಂದಿದ್ದಾರೆ. ಕಳೆದ ಐದು ವರ್ಷದಲ್ಲಿ ಹಾಲಿ ಶಾಸಕ ನಾಗೇಂದ್ರ ಕ್ಷೇತ್ರದಲ್ಲಿ ಒಳ್ಳೆಯ ಹೆಸರು ಮಾಡಿದ್ದಾರೆ. ಮೇಲಾಗಿ ಗ್ರಾಮೀಣ ಕ್ಷೇತ್ರ ಗಡಿ ಭಾಗ ಆಂಧ್ರಪ್ರದೇಶದ ಜೊತೆ ಹಂಚಿಕೆ ಮಾಡಿಕೊಂಡಿದೆ. ಇದೇ ಕಾರಣದಿಂದ ಪಕ್ಕದ ಜಿಲ್ಲೆಯಲ್ಲಿ ನಾಗೇಂದ್ರ ಅವರ ಸಹೋದರ ಮಂತ್ರಿಯಾಗಿದ್ದಾರೆ. ಹೀಗಾಗಿ ಅವರಿಗೆ ಇದು ದೊಡ್ಡ ಶಕ್ತಿಯಾಗಿದೆ. ಇನ್ನು ಬಳ್ಳಾರಿ ನಗರದ ಟಿಕೆಟ್ ನಾರಾ ಭರತ್ ರೆಡ್ಡಿಗೆ ಸಿಕ್ಕಿದೆ. ಇದರಿಂದಾಗಿ ನಾರಾ ಸೂರ್ಯನಾರಾಯಣ ರೆಡ್ಡಿ ಅವರ ಅವರ ಬೆಂಬಲ ಕೂಡಾ ದೊರೆಯಲಿದೆ. ರೆಡ್ಡಿ ಬಳಗ ಬಿಟ್ಟ ಬಳಿಕ ಜಿಲ್ಲೆಯ ಮತ್ತೊಬ್ಬ ಪ್ರಭಾವಿತ ರೆಡ್ಡಿ ಕುಟುಂಬ ಎಂದರೆ ಅದು ಸೂರ್ಯ ನಾರಾಯಣ ರೆಡ್ಡಿ ಅವರು ಕುಟುಂಬ. ಬಳ್ಳಾರಿ ನಗರ ಹಾಗೂ ಬಳ್ಳಾರಿ ಗ್ರಾಮೀಣ ಹಾಗೂ ಪಕ್ಕದ ಕಂಪ್ಲಿ ಕ್ಷೇತ್ರದಲ್ಲಿ ಸೂರ್ಯನಾರಾಯಣ ರೆಡ್ಡಿ ಹಿಡಿತ ಹೊಂದಿದ್ದಾರೆ. ಇತ್ತ ಸಚಿವ ಶ್ರೀರಾಮುಲು ಮೊಳಕಾಲ್ಮೂರು ಕ್ಷೇತ್ರದಿಂದ ಮತ್ತೆ ತವರು ಜಿಲ್ಲೆಗೆ ಬಂದು ರಾಜಕಾರಣ ಆರಂಭ ಮಾಡಿದ್ದಾರೆ.

    ಎಸ್‍ಟಿ ಮೀಸಲಾತಿ ನೀಡಿರುವುದು ಗ್ರಾಮೀಣ ಕ್ಷೇತ್ರದ ಚುನಾವಣೆಗೆ ಅಸ್ತ್ರವಾಗಲಿದೆ. ಅಲ್ಲದೇ ಸುಮಾರು 60 ಸಾವಿರ ಮುಸ್ಲಿಂ ಮತದಾರರು, ಹಾಗೂ 15 ಸಾವಿರ ಕ್ರಿಶ್ಚಿಯನ್ ಮತದಾರರು ಹೊಂದಿರುವ ಕ್ಷೇತ್ರದಲ್ಲಿ ಇವರೇ ನಿರ್ಣಾಯಕ ಮತದಾರು. ಅದಕ್ಕಾಗಿಯೇ ಮುಸ್ಲಿಂ ಮತದಾರರನ್ನು ಸೆಳೆಯಲು ಶ್ರೀರಾಮುಲು ಸರ್ಕಸ್ ಮಾಡುತಿದ್ದಾರೆ.

    ಕಳೆದ ಐದು ವರ್ಷಗಳಿಂದ ಕ್ಷೇತ್ರ ಹಾಗೂ ಜಿಲ್ಲೆಯ ರಾಜಕೀಯದಿಂದ ದೂರ ಇರುವ ಶ್ರೀರಾಮುಲು ಅವರಿಗೆ ಗ್ರಾಮೀಣ ಕ್ಷೇತ್ರ ಗೆಲ್ಲುವುದು ಅಷ್ಟ ಸುಲಭವಿಲ್ಲ. ತಮ್ಮ ಎಲ್ಲಾ ರಾಜಕೀಯ ಅಸ್ತ್ರಗಳನ್ನು ಪ್ರಯೋಗ ಮಾಡಲೇಬೇಕು. ಯಾಕೆಂದರೆ ನಾಗೇಂದ್ರ ಅವರಿಗೆ ಕ್ಷೇತ್ರದ ಮೇಲೆ ಸಾಕಷ್ಟು ಹಿಡಿತವಿದೆ.

    ಕ್ಷೇತ್ರದಲ್ಲಿ ಬಿಜೆಪಿಗೆ ವರದಾನ ಆಗಬಹುದಾದ ಅಂಶಗಳನ್ನು ನೋಡುವುದಾದರೆ, ಬಳ್ಳಾರಿ ಜಿಲ್ಲಾ ರಾಜಕಾರಣಕ್ಕೆ ಮತ್ತೆ ಶ್ರೀರಾಮಲು ಬಂದಿರುವುದು ಜಿಲ್ಲಾ ರಾಜಕೀಯದಲ್ಲಿ ಒಂದು ಶಕ್ತಿ ಬಂದ ಹಾಗೆ ಆಗಿದೆ. ಇನ್ನು ಎಸ್‍ಸಿ ಎಸ್‍ಟಿ ಮೀಸಲಾತಿ ಹೆಚ್ಚಳ ಮಾಡಿದ್ದು ಶ್ರೀರಾಮುಲು ಅವರಿಗೆ ಅನುಕೂಲವಾಗಲಿದೆ. ಆದರೆ ಶ್ರೀರಾಮುಲು ಅವರಿಗೆ ಜಿಲ್ಲೆಯಲ್ಲಿ ಸಾಕಷ್ಟು ವಿರೋಧವಿದೆ. ಜಿಲ್ಲೆ ಅಭಿವೃದ್ಧಿಯಲ್ಲಿ ಸಾಕಷ್ಟು ಹಿಂದೆದೆ. ಐದು ವರ್ಷಗಳಲ್ಲಿ ಹೇಳಿಕೊಳ್ಳುವ ಅಭಿವೃದ್ಧಿ ಕೆಲಸ ಆಗದೇ ಇರುವುದು, ಜನರ ಜ್ವಲಂತ ಸಮಸ್ಯೆಗಳಾದ ಕುಡಿಯುವ ನೀರು, ರಸ್ತೆ ಅವ್ಯವಸ್ಥೆಗೆ ಜನರು ರೋಸಿ ಹೋಗಿದ್ದಾರೆ. ರೆಡ್ಡಿ ಹಾಗೂ ರಾಮುಲು ನಡುವಿನ ಒಳ ಜಗಳ ಪರೋಕ್ಷವಾಗಿ ನಾಗೇಂದ್ರ ಅವರಿಗೆ ಅನುಕೂಲವಾಲಿದೆ. ಇದು ಕಾಂಗ್ರೆಸ್‍ಗೆ ಒಂದು ವರವಾಗಲಿದೆ.

    ನಾಗೇಂದ್ರ ಅವರು ಕೂಡ ರಾಮುಲು ಅವರಿಗೆ ಠಕ್ಕರ್ ಕೊಡಲು ತಯಾರಾಗಿದ್ದಾರೆ. ಹಣ ಬಲ, ತೋಳ್ಬಲದಲ್ಲಿ ಶಾಸಕ ನಾಗೇಂದ್ರ ಶ್ರೀರಾಮುಲು ಅವರಿಗೆ ನೇರ ಸ್ಪರ್ಧಿ. ಕಾಂಗ್ರೆಸ್ ನಗರ ಟಿಕೆಟ್‍ನ್ನು ಭರತ್ ರೆಡ್ಡಿ ಅವರಿಗೆ ನೀಡಿದ್ದು, ಗ್ರಾಮೀಣ ಕ್ಷೇತ್ರದ ಮೇಲೆ ಪ್ರಭಾವ ಬೀರಲಿದೆ. ಸೂರ್ಯನಾರಾಯಣ ರೆಡ್ಡಿ ಗ್ರಾಮೀಣ ಕ್ಷೇತ್ರದ ಮೇಲೆ ಹಿಡಿತ ಹೊಂದಿದ್ದಾರೆ. ಮುಸಲ್ಮಾನ ಮತಗಳ ಕಾಂಗ್ರೆಸ್ ಪರವಾಗಿದ್ದು, ಕಾಂಗ್ರೆಸ್ ಗೆಲುವಿನ ದೊಡ್ಡ ಶಕ್ತಿ ಮುಸ್ಲಿಂ ಮತದಾರರಾಗಿದ್ದಾರೆ. ಆದರೆ ಕೊನೆಯ ಹಂತದಲ್ಲಿ ಯಾರ ಪರವಾಗಿ ಮತದಾರರು ಒಲವು ತೊರುತ್ತಾರೆಂದು ಕಾದು ನೋಡಬೇಕಿದೆ. ಇದನ್ನೂ ಓದಿ: ಜೆಡಿಎಸ್‌ಗೆ ಶಾಕ್‌ – ʼಕೈʼ ಅಭ್ಯರ್ಥಿಗೆ ವೋಟ್‌ ಹಾಕಿ ಎಂದ MLC ಭೋಜೇಗೌಡ

  • ಲಾರಿಗೆ ಡಿಕ್ಕಿ ಹೊಡೆದ ಕಾರ್ – 7 ಮಂದಿಗೆ ಗಂಭೀರ ಗಾಯ

    ಲಾರಿಗೆ ಡಿಕ್ಕಿ ಹೊಡೆದ ಕಾರ್ – 7 ಮಂದಿಗೆ ಗಂಭೀರ ಗಾಯ

    ಬಳ್ಳಾರಿ: ಲಾರಿಗೆ ಹಿಂಬದಿಯಿಂದ ಬಂದ್ ಕಾರ್ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಗಾಯಗೊಂಡಿದ್ದಾರೆ. ಬಳ್ಳಾರಿ ಜಿಲ್ಲೆತ ಕೂಡ್ಲಿಗಿ ಪಟ್ಟಣದ ರಾಷ್ಟ್ರೀಯ ಹೆದ್ದಾರಿ 50ರ ಗೌಡ್ರು ಪೆಟ್ರೋಲ್ ಬಂಕ್ ಬಳಿ ಅಪಘಾತ ಸಂಭವಿಸಿದೆ.

    ಮಲ್ಲಪ್ಪ (40), ವೀರೇಶ್ (17), ಶರಣಪ್ಪ (15), ಸಾಬಮ್ಮ(19), ಮಹದೇವಮ್ಮ (52), ಮರಿಯಮ್ಮ (35) ಹಾಗೂ ಕಾರ್ ಚಾಲಕ ಸಿದ್ದು (22) ಗಾಯಗೊಂಡಿದ್ದರು. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಗಾಯಾಳುಗಳ ಪೈಕಿ ಮೂವರನ್ನ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನುಳಿದವರಿಗೆ ಕೂಡ್ಲಿಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

    ಗಾಯಾಳುಗಳು ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ನಾಲ್ವಾ ಗ್ರಾಮದ ನಿವಾಸಿಗಳಿಂದ ತಿಳಿದು ಬಂದಿದೆ. ಎಲ್ಲರೂ ಕೆಲಸ ಅರಸಿ ಬೆಂಗಳೂರಿನತ್ತ ಹೊರಟಿದ್ದರು. ಅಪಘಾತದ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.