Tag: Kukke Shri Subrahmanya

  • ಕುಕ್ಕೆ ಸುಬ್ರಹ್ಮಣ್ಯಸ್ವಾಮಿ ದರ್ಶನ ಪಡೆದ ಅಮೆರಿಕದ ನಿಯೋಜಿತ ಅಧ್ಯಕ್ಷ ಟ್ರಂಪ್ ಬಿಸಿನೆಸ್ ಪಾರ್ಟ್ನರ್

    ಕುಕ್ಕೆ ಸುಬ್ರಹ್ಮಣ್ಯಸ್ವಾಮಿ ದರ್ಶನ ಪಡೆದ ಅಮೆರಿಕದ ನಿಯೋಜಿತ ಅಧ್ಯಕ್ಷ ಟ್ರಂಪ್ ಬಿಸಿನೆಸ್ ಪಾರ್ಟ್ನರ್

    ಮಂಗಳೂರು: ಅಮೆರಿಕದ ಚುನಾಯಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರ ವ್ಯಾವಹಾರಿಕ ಪಾಲುದಾರ ಶಶಿಭೂಷಣ್ ಅವರು ಮಂಗಳೂರಿಗೆ ಭೇಟಿ ನೀಡಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ (Kukke Shri Subrahmanya Temple) ದರ್ಶನ ಪಡೆದರು.

    ಚಂಪಾಷಷ್ಠಿ ದಿನ ಶಶಿಭೂಷಣ್ ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಅಮೆರಿಕಾದಲ್ಲಿ ನೆಲೆಸಿರುವ ಇವರು ಹೈದರಾಬಾದ್‌ನ ಮೂಲದವರು. ಶಶಿಭೂಷಣ್ ಅಮೆರಿಕದಲ್ಲಿ 500 ಎಕರೆ ಜಾಗದಲ್ಲಿ 3,000 ಕೋಟಿ ವೆಚ್ಚದಲ್ಲಿ ಶಂಕರಾಚಾರ್ಯರ ಆಧ್ಯಾತ್ಮಿಕ ಕೇಂದ್ರ ಮತ್ತು ದೇವಸ್ಥಾನ ಕಟ್ಟಿಸುತ್ತಿದ್ದಾರೆ.

    ಅಮೆರಿಕನ್ ಪೊಲಿಟಿಕಲ್ ಆಕ್ಷನ್ ಕಮಿಟಿಯ ‘ಎ’ ಪ್ಯಾಕ್ ಮುನ್ನಡೆಸಿದ್ದರು. ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ಗೆಲುವಿನಲ್ಲಿ ಸಾಕಷ್ಟು ಶ್ರಮ ವಹಿಸಿದ್ದರು. ಈಗ ಅತ್ಯಂತ ಇತಿಹಾಸ ಪ್ರಸಿದ್ಧ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದಾರೆ.

  • ಕುಕ್ಕೆ ಸುಬ್ರಹ್ಮಣ್ಯಕ್ಕೆ ಸುದೀಪ್ ಕುಟುಂಬ ಸಮೇತರಾಗಿ ಭೇಟಿ

    ಕುಕ್ಕೆ ಸುಬ್ರಹ್ಮಣ್ಯಕ್ಕೆ ಸುದೀಪ್ ಕುಟುಂಬ ಸಮೇತರಾಗಿ ಭೇಟಿ

    ಮಂಗಳೂರು: ಸ್ಯಾಂಡಲ್‍ವುಡ್ ನಟ ಸುದೀಪ್ ಅವರು ಕುಟುಂಬ ಸಮೇತರಾಗಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿಕೊಟ್ಟು, ದೇವರಿಗೆ ಪೂಜೆ ಸಲ್ಲಿಸಿದ್ದಾರೆ.

    ಪತ್ನಿ ಪ್ರಿಯಾ ಜೊತೆ ಕ್ಷೇತ್ರಕ್ಕೆ ಆಗಮಿಸಿದ ಸುದೀಪ್ ಅವರು ಸುಬ್ರಹ್ಮಣ್ಯದ ಸಂಪುಟ ನರಸಿಂಹ ಮಠದಲ್ಲಿ ಆಶ್ಲೇಷ, ನಾಗ ಪ್ರತಿಷ್ಠೆ ಪೂಜೆ ಮಾಡಿದ್ದಾರೆ. ಬಳಿಕ ಕುಕ್ಕೆ ಸುಬ್ರಹ್ಮಣ್ಯ ದರ್ಶನವನ್ನು ಪಡೆದಿದ್ದಾರೆ. ಇದನ್ನೂ ಓದಿ: ಫೆಬ್ರವರಿ 24ಕ್ಕೆ ತೆರೆ ಮೇಲೆ ವಿಕ್ರಾಂತ್ ರೋಣ

    ಸುದೀಪ್ ಅವರು ಚಿತ್ರರಂಗದಲ್ಲಿ ಸದಾ ಬ್ಯುಸಿ ಆಗಿರುತ್ತಾರೆ. ಆದರೆ ಸಿನಿಮಾ ಕೆಲಸಗಳ ಜೊತೆ ಕುಟುಂಬಕ್ಕೂ ಪ್ರಾಮುಖ್ಯತೆ ನೀಡುತ್ತಾ ಸಮಯ ಕಳೆಯುತ್ತಾರೆ. ಈಗ ಅವರು ಪತ್ನಿ ಪ್ರಿಯಾ ಜೊತೆಗೆ ನಾಗ ಕ್ಷೇತ್ರವಾಗಿರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ,  ದೇವರ ದರ್ಶನವನ್ನು ಪಡೆದಿದ್ದಾರೆ. ಇದನ್ನೂ ಓದಿ:  ಅಪ್ಪು ಕನಸು ನನಸು – ರಾಜ್ ಮನೆ ಇದೀಗ ಮ್ಯೂಸಿಯಂ

    ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಕುಕ್ಕೆ ಸುಬ್ರಹ್ಮಣ್ಯ ಇದೆ. ಸುದೀಪ್ ಸದ್ಯ, ವಿಕ್ರಾಂತ್ ರೋಣ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಈಗಾಗಲೇ ಚಿತ್ರತಂಡ ಸಿನಿಮಾವನ್ನು 2022ರ ಫೆ.24ರಂದು ಸಿನಿಮಾ ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದೆ. ಇದನ್ನೂ ಓದಿ: ದೆಹಲಿಯಿಂದ ಮನೆಗಳತ್ತ ಮುಖಮಾಡಿದ ರೈತರು- ಪೊಲೀಸರಿಂದ ಬ್ಯಾರಿಕೇಡ್ ತೆರವು

  • ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಆ.30ರವರೆಗೆ ಯಾವುದೇ ಸೇವೆಗಳಿಗೆ ಅವಕಾಶವಿಲ್ಲ

    ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಆ.30ರವರೆಗೆ ಯಾವುದೇ ಸೇವೆಗಳಿಗೆ ಅವಕಾಶವಿಲ್ಲ

    ಮಂಗಳೂರು: ಕೊರೊನಾ ಹೆಚ್ಚಾಗುತ್ತೀರುವ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಆ.30ರವರೆಗೆ ಯಾವುದೇ ಸೇವೆಗಳಿಗೆ ಅವಕಾಶವಿಲ್ಲ ಎಂದು ದೇವಳದ ಪ್ರಕಟಣೆ ತಿಳಿಸಿದೆ.

    ಕೇರಳ ರಾಜ್ಯಕ್ಕೆ ಹೊಂದಿಕೊಂಡಿರುವ ಗಡಿ ಜಿಲ್ಲೆಯಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಹೆಚ್ಚಾಗುತ್ತಿರುವುದರಿಂದ ಜಿಲ್ಲಾಧಿಕಾರಿಗಳ ಆದೇಶದಂತೆ ರಾಜ್ಯದ ನಂಬರ್‍ವನ್ ಆದಾಯದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.30 ರವರೆಗೆ ಯಾವುದೇ ಸೇವೆಗಳು ನಡೆಯುವುದಿಲ್ಲ. ಕೇವಲ ದೇವರ ದರ್ಶನಕ್ಕೆ ಮಾತ್ರ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ ತೀರ್ಥಪ್ರಸಾದ ವಿತರಣೆ, ಅನ್ನಸಂತರ್ಪಣೆ ಇರುವುದಿಲ್ಲ. ಶನಿವಾರ ಮತ್ತು ಆದಿತ್ಯವಾರ ವಾರಾಂತ್ಯದ ದಿನಗಳಲ್ಲಿ ಶ್ರೀ ದೇವರ ದರ್ಶನಕ್ಕೂ ಅವಕಾಶ ನಿಬರ್ಂಧಿಸಲಾಗಿದೆ ಎಂದು ದೇವಳದ ಪ್ರಕಟಣೆ ತಿಳಿಸಿದೆ.

    ದ.ಕ ಜಿಲ್ಲೆಯಲ್ಲಿ ಪ್ರಸ್ತುತ ಕೊರೊನಾ ಪ್ರಕರಣಗಳು ಅಧಿಕವಾಗಿರುವುದರಿಂದ ಭಕ್ತರ ಆರೋಗ್ಯ ಹಿತದೃಷ್ಠಿಯಿಂದ ಜಿಲ್ಲಾಧಿಕಾರಿಗಳ ಆದೇಶದಂತೆ ರಾಜ್ಯದ ಪ್ರಸಿದ್ಧ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಆ.30ರವರೆಗೂ ಸರ್ಪಸಂಸ್ಕಾರ, ಆಶ್ಲೇಷ ಬಲಿ, ನಾಗಪ್ರತಿಷ್ಠೆ, ತುಲಾಭಾರ, ಚವಲ, ಪಂಚಾಮೃತ ಮಹಾಭಿಷೇಕ, ಪ್ರಾರ್ಥನೆ ಸೇರಿದಂತೆ ಯಾವುದೇ ಸೇವೆಗಳು ನಡೆಯುವುದಿಲ್ಲ. ಇದನ್ನೂ ಓದಿ: ರಾಷ್ಟ್ರೀಯ ನಾಯಕರು ನಮ್ಮವರೇ, ಯಾರೂ ಹಗುರವಾಗಿ ಮಾತನಾಡಬಾರದು : ಶೋಭಾ ಕರಂದ್ಲಾಜೆ

    ಬೆಳಗ್ಗೆ 7.00ರಿಂದ ಮಧ್ಯಾಹ್ನ 11.30 ತನಕ, ಮಧ್ಯಾಹ್ನ 12.15-1.30 ಹಾಗೂ 2.30ರಿಂದ ರಿಂದ ಸಂಜೆ 7.00 ತನಕ ಭಕ್ತರು ಶ್ರೀ ದೇವರ ದರುಶನ ಮಾಡಬಹುದು. ಅಲ್ಲದೆ ಈ ಸಂದರ್ಭ ಮಂಗಳಾರತಿ ಸೇವೆ ಸಲ್ಲಿಸಲು ಮಾತ್ರ ಅವಕಾಶ ಕಲ್ಪಿಸಲಾಗಿದೆ. ವಾರಾಂತ್ಯ ದಿನಗಳನ್ನು ಹೊರತು ಪಡಿಸಿ ಇತರ ದಿನಗಳಲ್ಲಿ ವಸತಿ ಗೃಹದಲ್ಲಿ ತಂಗಲು ಅವಕಾಶವಿದೆ. ತಂಗುವ ಭಕ್ತರು 72 ಗಂಟೆಯೊಳಗೆ ಆರ್‌ಟಿಪಿಸಿಆರ್‌ ಪರೀಕ್ಷೆ ಮಾಡಿಸಿ ನೆಗೆಟಿವ್ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು.

  • ಕುಕ್ಕೆ ಸುಬ್ರಹ್ಮಣ್ಯನ ದರ್ಶನ ಪಡೆದ ಮನೀಶ್ ಪಾಂಡೆ ದಂಪತಿ

    ಕುಕ್ಕೆ ಸುಬ್ರಹ್ಮಣ್ಯನ ದರ್ಶನ ಪಡೆದ ಮನೀಶ್ ಪಾಂಡೆ ದಂಪತಿ

    ಮಂಗಳೂರು: ಭಾರತ ಕ್ರಿಕೆಟ್ ತಂಡದ ಆಟಗಾರ ಹಾಗೂ ಕರ್ನಾಟಕ ಏಕದಿನ ತಂಡದ ನಾಯಕ ಮನೀಶ್ ಪಾಂಡೆ ತಮ್ಮ ಪತ್ನಿ ಜೊತೆ ತುಳುನಾಡಿನ ಪ್ರಸಿದ್ಧ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಾಸ್ಥಾನಕ್ಕೆ ಭೇಟಿ ನೀಡಿದ್ದಾರೆ.

    ಮನೀಶ್ ಪಾಂಡೆ ತಮ್ಮ ಪತ್ನಿ ಆಶ್ರಿತಾ ಶೆಟ್ಟಿ ಜೊತೆ ಇಂದು ಶ್ರೀಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಪಡೆದರು. ಕಳೆದ ಡಿಸೆಂಬರ್ ತಿಂಗಳಿನಲ್ಲಿ ಮನೀಶ್ ಪಾಂಡೆ ವಿವಾಹ ತುಳುನಾಡಿನ ಬೆಡಗಿ, ತಮಿಳು ಹಾಗೂ ತುಳು ನಟಿ ಆಶ್ರಿತಾ ಶೆಟ್ಟಿ ಜೊತೆ ಮುಂಬೈಯಲ್ಲಿ ನಡೆದಿತ್ತು. ವಿವಾಹದ ಬಳಿಕ ದಂಪತಿ ಮೊದಲ ಬಾರಿಗೆ ಕುಕ್ಕೆ ಕ್ಷೇತ್ರಕ್ಕೆ ಬಂದಿದ್ದಾರೆ. ಇದನ್ನೂ ಓದಿ: ರಾತ್ರಿ ಟ್ರೋಫಿ ಗೆದ್ದು ಮರುದಿನ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮನೀಶ್ ಪಾಂಡೆ

    ಮಾರ್ಚ್ 6 ರಂದು ಕುಕ್ಕೆ ಸುಬ್ರಹಣ್ಯಕ್ಕೆ ತಮ್ಮ ಗೆಳೆಯನ ಜೊತೆ ಆಗಮಿಸಿದ ದಂಪತಿ ಇಲ್ಲಿನ ಖಾಸಗಿ ಹೋಟೆಲ್ ಒಂದರಲ್ಲಿ ತಂಗಿದ್ದರು. ಇಂದು ಬೆಳಿಗ್ಗೆ ದಂಪತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ನಾಗದೇವರಿಗೆ ವಿಶೇಷ ಪೂಜೆಯಾದ ಆಶ್ಲೇಷ ಪೂಜೆಯನ್ನು ನೆರೆವೇರಿಸಿದರು. ಬಳಿಕ ಆದಿ ಸುಬ್ರಹ್ಮಣ್ಯ ಹಾಗೂ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ದೇವರ ದರ್ಶನ ಪಡೆದರು.

  • ‘ಭಕ್ತರೇ ಪ್ರಾಣಿಗಳನ್ನ ರಕ್ಷಿಸಿ’- ವನ್ಯಜೀವಿಗಳ ದೇಹ ಸೇರುತ್ತಿದೆ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ತ್ಯಾಜ್ಯ

    ‘ಭಕ್ತರೇ ಪ್ರಾಣಿಗಳನ್ನ ರಕ್ಷಿಸಿ’- ವನ್ಯಜೀವಿಗಳ ದೇಹ ಸೇರುತ್ತಿದೆ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ತ್ಯಾಜ್ಯ

    ಮಂಗಳೂರು: ಪಾಪವನ್ನು ಕಳೆದು ವರವನ್ನು ಕರುಣಿಸಲು ನಾಗನ ರೂಪದಲ್ಲಿ ನಿಂತ ಸುಬ್ರಹ್ಮಣ್ಯ ಸ್ವಾಮಿಯ ಸನ್ನಿಧಿ ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನಲ್ಲಿರುವ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭಕ್ತರು ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಷಷ್ಠಿ, ಚಂಪಾಷಷ್ಠಿಯಂತಹ ವಿಶೇಷ ದಿನ, ರಜಾ ದಿನಗಳಲ್ಲಿ ಲಕ್ಷಾಂತರ ಭಕ್ತರು, ಪ್ರವಾಸಿಗರು ಇಲ್ಲಿಗೆ ಆಗಮಿಸುತ್ತಾರೆ.

    ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರುವ ಪ್ರವಾಸಿಗರು ಮತ್ತು ಭಕ್ತರು ತಾವು ತಂದ ಕಸವನ್ನು ಇಲ್ಲಿ ಎಸೆದು ಹೋಗುತ್ತಾರೆ. ಈ ಕಸ ನೇರವಾಗಿ ಸೇರುವುದು ಇಲ್ಲಿಂದ ಸ್ವಲ್ಪ ದೂರ ಇರುವ ತ್ಯಾಜ್ಯ ವಿಲೇವಾರಿ ಘಟಕಕ್ಕೆ. ಹೌದು ಇಲ್ಲೊಂದು ತ್ಯಾಜ್ಯ ವಿಲೇವಾಗಿ ಘಟಕವಿದೆ. ಈ ಘಟಕದಲ್ಲಿ ತ್ಯಾಜ್ಯವನ್ನು ವಿಲೇವಾರಿ ಮಾಡಿ ಮರು ಬಳಕೆಯನ್ನು ಮಾಡಲಾಗುತ್ತೆ. ಆದರೆ ಈ ತ್ಯಾಜ್ಯ ವಿಲೇವಾರಿ ಘಟಕ ಇರೋದು ಅರಣ್ಯದ ಪಕ್ಕದಲ್ಲಿ. ಅರಣ್ಯದ ಸ್ವಲ್ಪ ದೂರದಲ್ಲಿ ಬಿಸಿಲೆ ರಕ್ಷಿತಾರಣ್ಯವಿರೋದ್ರಿಂದ ವನ್ಯಜೀವಿಗಳು ಇಲ್ಲಿಗೆ ನಿತ್ಯ ಆಗಮಿಸುತ್ತವೆ. ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಇಡಲ್ಪಟ್ಟಿರುವ ಕಸವನ್ನು ತಿನ್ನುತ್ತವೆ. ಕಡವೆಗಳು, ಜಿಂಕೆಗಳು, ಮಂಗಗಳು ಹೀಗೆ ವಿವಿಧ ವನ್ಯಜೀವಿಗಳು ಇಲ್ಲಿ ಕಸವನ್ನು ತಿನ್ನವ ಪರಿಸ್ಥಿತಿ ಬಂದಿದೆ.

    ಸುಬ್ರಹ್ಮಣ್ಯ ಪಂಚಾಯತ್‍ನಿಂದ ತ್ಯಾಜ್ಯ ವಿಲೇವಾರಿ ಘಟಕ ನಿರ್ವಹಿಸಲ್ಪಡುತ್ತದೆ. ಪಂಚಾಯತ್‍ನವರು ಕೂಡ ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರೂ ಅರಣ್ಯ ಇಲಾಖೆ ಅಧಿಕಾರಿಗಳು ಮಾತ್ರ ಇತ್ತ ಗಮನಹರಿಸಿಲ್ಲ. ಈ ವಿಚಾರ ಗೊತ್ತಿದ್ದರೂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಅಷ್ಟೇ ಅಲ್ಲದೆ ಅರಣ್ಯಕ್ಕೆ ಫೆನ್ಸಿಂಗ್ ಹಾಕಿದರೆ ವನ್ಯ ಪ್ರಾಣಿಗಳು ಇತ್ತ ಬರಲಾಗದೇ ಕಸವನ್ನು ತಿನ್ನುವುದು ತಪ್ಪಿದಂತಾಗುತ್ತದೆ. ತ್ಯಾಜ್ಯ ಘಟಕಕ್ಕೆ ಒಂದು ಫೆನ್ಸಿಂಗ್ ಹಾಕಿದ್ದರೂ ಸಮಸ್ಯೆ ಬಗೆ ಹರಿಯುತ್ತದೆ ಆ ಕೆಲಸವನ್ನು ಕೂಡ ಪಂಚಾಯತ್ ಅಧಿಕಾರಿಗಳು ಮಾಡಿಲ್ಲ.

    ಈ ಕುರಿತು ಅರಣ್ಯಾಧಿಕಾರಿಗಳನ್ನು ಕೇಳಿದರೆ, ಈ ಬಗ್ಗೆ ನಮ್ಮ ಗಮನಕ್ಕೆ ಬಂದಿಲ್ಲ. ಅಲ್ಲಿನ ಸ್ಥಳೀಯ ಸಂಸ್ಥೆಯಿಂದ ಯಾವುದೇ ಮಾಹಿತಿ ಬಂದಿಲ್ಲ. ಅಲ್ಲದೇ ಆ ಜಾಗ ವೈಲ್ಡ್ ಲೈಫ್ ಫಾರೆಸ್ಟ್ ನ ಬದಿಯಲ್ಲಿದ್ದು, ಅದು ಅರಣ್ಯ ಜಾಗ ಹೌದಾ ಅಲ್ಲವಾ ಎನ್ನುವ ಬಗ್ಗೆ ಮಾಹಿತಿ ಕಲೆ ಹಾಕುವ ಅವಶ್ಯಕತೆ ಇದೆ. ಮೊದಲಿಗೆ ಅಲ್ಲಿಗೆ ಭೇಟಿ ನೀಡಲು ವಲಯ ಅರಣ್ಯಾಧಿಕಾರಿಯವರಿಗೆ ಸೂಚಿಸುತ್ತೇನೆ ಎನ್ನುತ್ತಾರೆ.

    ಎಲ್ಲಾ ವಿಚಾರಗಳು ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರುವ ಭಕ್ತಾದಿಗಳ ಗಮನದಲ್ಲಿ ಇದ್ದರೇ ಕೂಡ ಉತ್ತಮ. ಯಾಕಂದ್ರೆ ಅವರು ತರುವ ಪ್ಲಾಸ್ಟಿಕ್ ಮತ್ತಿತರ ಕಸವನ್ನು ಎಲ್ಲಂದರಲ್ಲಿ ಎಸೆದರೂ ಅದು ವನ್ಯಜೀವಿಗಳ ಹೊಟ್ಟೆ ಸೇರಲಿದೆ. ಆದ್ದರಿಂದ ಆದಷ್ಟು ಕಸವನ್ನು ಹೊರ ಹಾಕದಂತೆ ಎಚ್ಚರ ವಹಿಸಿದರೆ ಒಳ್ಳೆಯದು ಎಂದು ಪರಿಸರ ಪ್ರೇಮಿಗಳ ಮನವಿ ಮಾಡಿಕೊಂಡಿದ್ದಾರೆ.

  • ಕುಮಾರಪರ್ವತದಲ್ಲಿ ನಾಪತ್ತೆ – ತೀರ್ಥದ ಪೈಪ್‍ನಿಂದಾಗಿ ಕುಕ್ಕೆ ಸೇರಿದ ಬೆಂಗ್ಳೂರು ಯುವಕ

    ಕುಮಾರಪರ್ವತದಲ್ಲಿ ನಾಪತ್ತೆ – ತೀರ್ಥದ ಪೈಪ್‍ನಿಂದಾಗಿ ಕುಕ್ಕೆ ಸೇರಿದ ಬೆಂಗ್ಳೂರು ಯುವಕ

    ಮಡಿಕೇರಿ: ಟ್ರೆಕ್ಕಿಂಗ್‍ಗೆ ಬಂದ 12 ಯುವಕರ ತಂಡದಲ್ಲಿ ನಾಪತ್ತೆಯಾಗಿದ್ದ ಬೆಂಗಳೂರಿನ ಗಾಯತ್ರಿ ನಗರದ ಯುವಕ ಸುರಕ್ಷಿತವಾಗಿ ಪತ್ತೆಯಾಗಿದ್ದಾರೆ.

    ಕೊಡಗು ಜಿಲ್ಲೆಯ ಪುಷ್ಪಗಿರಿ ಬೆಟ್ಟದಲ್ಲಿ ದಾರಿ ತಪ್ಪಿರುವ 25 ವರ್ಷದ ಸಂತೋಷ್ ಇಂದು ಮಧ್ಯಾಹ್ನ 12.30ರ ಸುಮಾರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಆದಿ ಸುಬ್ರಹ್ಮಣ್ಯದ ಬಳಿಯಿಂದಾಗಿ ಕುಕ್ಕೆ ಸುಬ್ರಹ್ಮಣ್ಯ ತಲುಪಿದ್ದಾರೆ.

    ಕುಕ್ಕೆ ಸೇರಿದ್ದು ಹೇಗೆ?
    ಕುಮಾರಪರ್ವತ ಬಳಿಯ ಗುಡ್ಡದಿಂದ ದೇವಾಲಯಕ್ಕೆ ತೀರ್ಥದ ಉದ್ದೇಶದಿಂದ ಪೈಪ್ ಲೈನ್ ಅಳವಡಿಸಲಾಗಿತ್ತು. ಈ ಪೈಪ್ ಅನ್ನು ದಾರಿ ಸೂಚಕವಾಗಿ ಬಳಸಿ ಮತ್ತೆ ಸುಬ್ರಹ್ಮಣ್ಯ ತಲುಪಿದೆ ಎಂದು ಸಂತೋಷ್ ತಿಳಿಸಿದ್ದಾರೆ. ಸಂತೋಷ್ ವಾಪಸ್ ಬಂದ ಕೂಡಲೇ ಸ್ಥಳೀಯರು ಅವರಿಗೆ ನೀರು, ಹಣ್ಣು ನೀಡಿ ಉಪಚರಿಸಿದ್ದಾರೆ.

    ನಾಪತ್ತೆಯಾಗಿದ್ದು ಹೇಗೆ?
    ಬೆಂಗಳೂರಿನಿಂದ 12 ಮಂದಿ ಯುವಕರ ತಂಡವೊಂದು ಭಾನುವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಂದಿದೆ. ಹೀಗೆ ಬಂದ ತಂಡ ಸುಬ್ರಮಣ್ಯದ ಗಿರಿಗದ್ದೆಯಿಂದ ಕುಮಾರಪರ್ವತದ ಮೂಲಕ ಸೋಮವಾರಪೇಟೆ ತಾಲೂಕಿನ ಪುಷ್ಪಗಿರಿ ಬೆಟ್ಟಕ್ಕೆ ತೆರಳಿತ್ತು. ಬೆಳಗ್ಗೆ 11 ಗಂಟೆ ಸುಮಾರಿಗೆ ಶೇಷ ಪರ್ವತಕ್ಕೆ ತಲುಪಿದ 12 ಮಂದಿ ಯುವಕರು ಅಲ್ಲಿಂದ ಹಿಂದಿರುಗಿ ಗಿರಿಗದ್ದೆಗೆ ಬಂದಿದ್ದಾರೆ. ಅಲ್ಲಿ ಮಧ್ಯಾಹ್ನದ ಊಟ ಮುಗಿಸಿ ಸುಬ್ರಹ್ಮಣ್ಯ ಕಡೆ ಪ್ರಯಾಣಿಸಿದ್ದಾರೆ. ಈ ವೇಳೆ 12 ಮಂದಿಯ ತಂಡ 6 ಮಂದಿಯಂತೆ 2 ವಿಭಾಗಗಳಾಗಿದೆ. ಇದರಲ್ಲಿ 6 ಜನರ ತಂಡ ಮೊದಲು ಆಗಮಿಸಿತ್ತು. ಸ್ವಲ್ಪ ಸಮಯದ ಬಳಿಕ ಗಿರಿಗದ್ದೆ ಮನೆಯಿಂದ ಉಳಿದ 6 ಜನರ ತಂಡ ಸುಬ್ರಹಣ್ಯಕ್ಕೆ ಬರುತ್ತಿದ್ದ ಸಂದರ್ಭದಲ್ಲಿ ಜೋರಾಗಿ ಮಳೆ ಸುರಿಯಲಾರಂಭಿಸಿದೆ. ಈ ವೇಳೆ ಸಂತೋಷ್ ತನ್ನ ಜಾಕೆಟ್ ತೆಗೆದು ರೈನ್ ಕೋಟ್ ಹಾಕಿಕೊಂಡಿದ್ದಾರೆ. ಅಲ್ಲಿಯವರೆಗೆ ಸ್ನೇಹಿತರ ಜೊತೆಗಿದ್ದ ಸಂತೋಷ್ ಆ ಬಳಿಕದಿಂದ ಕಾಣೆಯಾಗಿದ್ದರು.

    ತಮ್ಮ ತಂಡದಲ್ಲಿ ಸಂತೋಷ್ ಇಲ್ಲದಿರುವುದನ್ನು ಗಮನಿಸಿದ ಇತರ ಸ್ನೇಹಿತರು ಕೂಡಲೇ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇತ್ತ ಈ ಕುರಿತು ಮಾಹಿತಿ ಪಡೆದ ಪುಷ್ಪಗಿರಿ ವನ್ಯಜೀವಿ ವಿಭಾಗದ ಸಿಬ್ಬಂದಿ ಭಾನುವಾರ ಸಂಜೆಯಿಂದ ತೀವ್ರ ಶೋಧಕಾರ್ಯ ನಡೆಸಿದ್ದರು.