Tag: Kukke Subramanya

  • ರಾಜ್ಯದ 9 ಮುಜರಾಯಿ ದೇಗುಲಗಳ ಸೇವಾಶುಲ್ಕ ಏರಿಕೆ – ಅ.1ರಿಂದ ಜಾರಿ

    ರಾಜ್ಯದ 9 ಮುಜರಾಯಿ ದೇಗುಲಗಳ ಸೇವಾಶುಲ್ಕ ಏರಿಕೆ – ಅ.1ರಿಂದ ಜಾರಿ

    – ಸೇವಾಶುಲ್ಕ ಹೆಚ್ಚಳ ಸರ್ಕಾರದ ತೀರ್ಮಾನವಲ್ಲ, ಆಡಳಿತ ಮಂಡಳಿ ನಿರ್ಧಾರವೆಂದ ಸಚಿವ

    ಬೆಂಗಳೂರು: ಕರ್ನಾಟಕದ ಮುಜರಾಯಿ ಇಲಾಖೆ (Muzrai Department) ವ್ಯಾಪ್ತಿಯ ಕೆಲ ದೇವಾಲಯಗಳ ಸೇವಾಶುಲ್ಕ ಸದ್ದಿಲ್ಲದೇ ಏರಿಕೆಯಾಗಿದ್ದು, ಇನ್ಮೇಲೆ ದೇವರ ಸೇವೆ ಭಕ್ತಾದಿಗಳ ಜೇಬು ಸುಡಲಿದೆ.

    ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯಡಿ 35 ಸಾವಿರ ದೇವಾಲಯಗಳಿದ್ದು, ಈ ದೇವಾಲಯಗಳ (Temples) ಪೈಕಿ 9 ದೇವಸ್ಥಾನಗಳ ಸೇವಾಶುಲ್ಕ ಏರಿಕೆ ಮಾಡಲಾಗಿದೆ. ಅಕ್ಟೋಬರ್‌ 1ರಿಂದ ಪರಿಷ್ಕೃತ ದರ ಅನ್ವಯವಾಗಲಿದೆ. ಕಳೆದ 4-5 ವರ್ಷದಿಂದ ಸೇವಾಶುಲ್ಕ ಪರಿಷ್ಕರಣೆ ಮಾಡದ, ಯಾವ ದೇವಾಲಯಗಳು ಸೇವಾಶುಲ್ಕ ‌ಪರಿಷ್ಕರಣೆಗೆ ಮನವಿ ಸಲ್ಲಿಸಿದ್ದವೋ ಆ ದೇವಾಲಯಗಳ ಸೇವಾಶುಲ್ಕವನ್ನ, ಆಗಮ ಪಂಡಿತರ ಪರಿಶೀಲನೆ ‌ನಂತರ 5-10% ವರೆಗೂ ಮುಜರಾಯಿ ಇಲಾಖೆ ಆಯುಕ್ತರು ಏರಿಕೆ ಮಾಡಿದ್ದಾರೆ. ಇದು ದೇವಾಲಯಗಳ ಆಡಳಿತ ಮಂಡಳಿ ತೀರ್ಮಾನವೇ ಹೊರತು ಸರ್ಕಾರದ ನಿರ್ಧಾರವಲ್ಲವೆಂದು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಇದನ್ನೂ ಓದಿ: ಸೆ.22 ರಿಂದ ಜಾತಿ ಜನಗಣತಿ ಆರಂಭ – ಸರ್ಕಾರದಿಂದ ಅಧಿಕೃತ ಆದೇಶ ಜಾರಿ

    ಯಾವ್ಯಾವ ದೇವಸ್ಥಾನಗಳಲ್ಲಿ ಶುಲ್ಕ ಏರಿಕೆ?
    ಬೆಂಗಳೂರು ನಗರ
    * ಯೋಗ ನರಸಿಂಹಸ್ವಾಮಿ ದೇವಾಲಯ, ಮಲ್ಲೇಶ್ವರಂ
    * ನಂದಿ ತೀರ್ಥ ದೇವಾಲಯ, ಮಲ್ಲೇಶ್ವರಂ
    * ಮಹಾಗಣಪತಿ ದೇವಾಲಯ, ಮಲ್ಲೇಶ್ವರಂ

    ಚಿಕ್ಕಬಳ್ಳಾಪುರ
    * ವಿಧುರಾಶ್ವಥ ನಾರಾಯಣ ಸ್ವಾಮಿ ದೇವಾಲಯ
    * ವೆಂಕಟರಮಣ ದೇವಾಲಯ, ತಲಕಾಯ ಬೆಟ್ಟ

    ದಕ್ಷಿಣ ಕನ್ನಡ
    * ಮಹಾಲಿಂಗೇಶ್ವರ ದೇವಾಲಯ, ಪುತ್ತೂರು
    * ಕುಕ್ಕೆ ಸುಬ್ರಹ್ಮಣ್ಯ ದೇವಾಲಯ
    * ಸೌತಡ್ಕ ಮಹಾಗಣಪತಿ ದೇವಾಲಯ
    * ಸೂರ್ಯನಾರಾಯಣ ಸ್ವಾಮಿ ದೇವಾಲಯ, ಮರೋಳಿ

    ಇನ್ನೂ ನಾಗಾರಾಧನೆ, ದೈವರಾಧನೆಗೆ ಹೆಸರಾದ ಕುಕ್ಕೆ ಸುಬ್ರಹ್ಮಣ್ಯದಲ್ಲಿ 2010ರಲ್ಲಿ ಸೇವಾಶುಲ್ಕ ಏರಿಕೆ ಮಾಡಲಾಗಿತ್ತು. 15 ವರ್ಷಗಳ ನಂತರ ಇದೀಗ ಸೇವಾಶುಲ್ಕ ಏರಿಕೆ ಮಾಡಲಾಗಿದೆ. ಕುಕ್ಕೆಯಲ್ಲಿ ಆಶ್ಲೇಷ ಪೂಜೆ ಸೇವೆಗೆ ಈ ಹಿಂದೆ ಇದ್ದ ದರ 400 ರೂಪಾಯಿ, ಪರಿಷ್ಕೃತ ದರ 500 ರೂ.ಗೆ ಏರಿಕೆಯಾಗಿದೆ. ನಾಗಪ್ರತಿಷ್ಠೆಗೆ ಈ ಹಿಂದೆ ಇದ್ದ ದರ 400 ರೂಪಾಯಿ. ಆದರೆ ಧಾರ್ಮಿಕ ದತ್ತಿ ಇಲಾಖೆ ಪರಿಷ್ಕೃತ ದರ 500 ರೂಪಾಯಿ ಹೆಚ್ಚಿಸಿದೆ. ಹೀಗೆ ಉಳಿದ‌ ಸೇವೆಗಳಲ್ಲೂ‌ ಭಾರೀ‌ ಹೆಚ್ಚಳ ಮಾಡಲಾಗಿದೆ. ಇದನ್ನೂ ಓದಿ: ಧಾರವಾಡ | ನಕಲಿ ದಾಖಲೆ ಸೃಷ್ಟಿಸಿ ಹಿಂದೂ ಯುವತಿ ಜೊತೆ ಮದ್ವೆ – ಯುಟ್ಯೂಬರ್‌ ಮುಕಳೆಪ್ಪ ವಿರುದ್ಧ ದೂರು

  • ಆಶ್ಲೇಷ ಬಲಿ ಯಾಕೆ ಮಾಡುತ್ತಾರೆ? ಸುಬ್ರಹ್ಮಣ್ಯನಿಗೂ ನಾಗನಿಗೂ ಏನು ಸಂಬಂಧ?

    ಆಶ್ಲೇಷ ಬಲಿ ಯಾಕೆ ಮಾಡುತ್ತಾರೆ? ಸುಬ್ರಹ್ಮಣ್ಯನಿಗೂ ನಾಗನಿಗೂ ಏನು ಸಂಬಂಧ?

    ಹಿಂದೂ ಧರ್ಮದಲ್ಲಿ ದೇವರಂತೆ ನಾಗದೇವರನ್ನೂ ಪೂಜಿಸಲಾಗುತ್ತದೆ. ಜಾತಕದಲ್ಲಿ ನಾಗದೋಷ, ಕುಟುಂಬದಲ್ಲಿ ಸಮಸ್ಯೆ, ನಾಗರ ಹಾವನ್ನು ಹತ್ಯೆ.. ಇತ್ಯಾದಿ ಕಾರಣಕ್ಕೆ ಆಶ್ಲೇಷ ಬಲಿ ಸೇವೆಯನ್ನು ಭಕ್ತರು ಮಾಡುತ್ತಾರೆ. ಸಾಧಾರಣವಾಗಿ ಕುಕ್ಕೆ ಸುಬ್ರಹ್ಮಣ್ಯ (Kukke Subramanya) ಕ್ಷೇತ್ರದಲ್ಲಿ ಹೆಚ್ಚಾಗಿ ಆಶ್ಲೇಷ ಬಲಿ (Ashlesha Bali ಸೇವೆಯನ್ನು ಮಾಡುತ್ತಾರೆ. ಒಂದು ವೇಳೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೋಗಲು ಸಾಧ್ಯವಾಗದೇ ಇದ್ದವರು ಸಮೀಪದ ಸುಬ್ರಹ್ಮಣ್ಯ ದೇವಸ್ಥಾನ ಅಥವಾ ನಾಗನ ಕಟ್ಟೆಗಳಲ್ಲೂ ಆಶ್ಲೇಷ ಬಲಿ ಸೇವೆ ಮಾಡುತ್ತಾರೆ. 

     

    ಸುಬ್ರಹ್ಮಣ್ಯನಿಗೂ ನಾಗನಿಗೂ ಏನು ಸಂಬಂಧ?
    ಸುಬ್ರಹ್ಮಣ್ಯನಿಗೂ ನಾಗನಿಗೂ ಏನು ಸಂಬಂಧ ಎಂದು ತಿಳಿಯಬೇಕಾದರೆ ಪುರಾಣ ಕಥೆಗೆ ಹೋಗಬೇಕಾಗುತ್ತದೆ. ಕದ್ರು ಮತ್ತು ವಿನತೆ ಇಬ್ಬರೂ ಕಶ್ಯಪ ಮಹರ್ಷಿಗಳ ಪತ್ನಿಯರು. ಅವರು ಮಕ್ಕಳನ್ನು ಪಡೆಯಲು ಬಯಸಿದಾಗ, ಕದ್ರು ಸಾವಿರ ನಾಗಗಳಿಗೆ ಜನ್ಮ ನೀಡಿದರೆ, ವಿನತೆ ಇಬ್ಬರು ಮಕ್ಕಳಾದ ಅರುಣ ಮತ್ತು ಗರುಡನಿಗೆ ಜನ್ಮ ನೀಡುತ್ತಾಳೆ.

    ಒಂದು ದಿನ ಉಚ್ಚೈಶ್ರವಸ್ ಎಂಬ ಕುದುರೆಯ ಬಾಲದ ಬಣ್ಣದ ಬಗ್ಗೆ ಕದ್ರು ಮತ್ತು ವಿನತೆಯರ ನಡುವೆ ಪಣ ಏರ್ಪಡುತ್ತದೆ. ಕದ್ರು ಬಾಲ ಕಪ್ಪು ಎಂದು ವಾದಿಸಿದರೆ, ವಿನತೆ ಬಾಲ ಬಿಳಿ ಎಂದು ಹೇಳುತ್ತಾಳೆ. ಕದ್ರು ತನ್ನ ನಾಗಪುತ್ರರನ್ನು ಕುದುರೆಯ ಬಾಲಕ್ಕೆ ಅಂಟಿಕೊಂಡು ಕಪ್ಪಾಗಿ ಕಾಣುವಂತೆ ಮಾಡುತ್ತಾಳೆ, ಇದರಿಂದ ವಿನತೆ ಸೋತು ಗುಲಾಮಳಾಗುತ್ತಾಳೆ. ಕದ್ರು ವಿನತೆಯನ್ನು ತನ್ನ ಗುಲಾಮೆಯನ್ನಾಗಿ ನಡೆಸಿಕೊಳ್ಳುತ್ತಾಳೆ. ತಾಯಿಯನ್ನು ಗುಲಾಮೆಯನ್ನಾಗಿ ನಡೆಸಿದ್ದಕ್ಕೆ ಸಿಟ್ಟಾದ ಗರುಡ ನಾಗಪುತ್ರರನ್ನು ತಿನ್ನಲು ಮುಂದಾಗುತ್ತಾನೆ. ಈ ಸಂದರ್ಭದಲ್ಲಿ ಗರುಡನಿಂದ ಪಾರಾಗಲು ನಾಗಗಳು ಸುಬ್ರಹ್ಮಣ್ಯನ ಮೊರೆ ಹೋಗುತ್ತವೆ. ಸುಬ್ರಹ್ಮಣ್ಯ ನಾಗಗಳನ್ನು ರಕ್ಷಿಸುತ್ತಾನೆ. ಇದನ್ನೂ ಓದಿ: ನಾಗರ ಪಂಚಮಿಯಂದು ಹೀಗೆ ಮಾಡಿ – ಕಾಳ ಸರ್ಪದೋಷಕ್ಕೆ ಸಿಗುತ್ತೆ ಪರಿಹಾರ

    kukke subramanya

     

    ಸ್ಕಂದ ಪುರಾಣದ ಪ್ರಕಾರ ಒಮ್ಮೆ ಸುಬ್ರಹ್ಮಣ್ಯ ಬ್ರಹ್ಮನ ಮುಂದೆ ನಿನಗಿಂತ ನನಗೆ ಹೆಚ್ಚು ಜ್ಞಾನವಿದೆ ಎಂದು ಹೇಳಿ ಅಪಹಾಸ್ಯ ಮಾಡಿದ್ದ. ಈ ವಿಚಾರ ತಂದೆಯಾದ ಶಿವನಿಗೆ ತಿಳಿಯುತ್ತದೆ. ಸುಬ್ರಹ್ಮಣ್ಯನನ್ನು ಕರೆದು, ಸೃಷ್ಟಿಕರ್ತನನ್ನು ಅವಮಾನ ಮಾಡಿದ್ದಕ್ಕೆ ನಿನಗೆ ನೀನೇ ಶಿಕ್ಷಿ ವಿಧಿಸಬೇಕೆಂದು ಸೂಚಿಸುತ್ತಾನೆ. ತಂದೆಯ ಮಾತಿನಂತೆ ಸುಬ್ರಹ್ಮಣ್ಯ ಸರ್ಪದ ರೂಪವನ್ನು ತಾಳಿ ಹಲವು ವರ್ಷ ಬದುಕಿದ್ದ ಎಂಬ ಕಥೆಯೂ ಇದೆ.

    ಆಶ್ಲೇಷ ಬಲಿ ಯಾಕೆ ಮಾಡುತ್ತಾರೆ?
    ವ್ಯಕ್ತಿಯ ಜಾತಕದಲ್ಲಿ ಕಾಳಸರ್ಪದೋಷ ಇರುವವರು ಮಾಡುತ್ತಾರೆ. ಹಿಂದೆ ತಿಳಿದೋ ಅಥವಾ ತಿಳಿಯದೆಯೋ ಸರ್ಪಗಳಿಗೆ ಹಾನಿ ಮಾಡಿದ್ದರೆ, ಅಂತಹ ದೋಷಗಳನ್ನು ಪರಿಹರಿಸಲು ಆಶ್ಲೇಷಾ ಪೂಜೆ ಮಾಡಲಾಗುತ್ತದೆ.

    ಅಷ್ಟೇ ಅಲ್ಲದೇ ಮಕ್ಕಳ ವಿದ್ಯಾಭ್ಯಾಸ, ಆರೋಗ್ಯ ಸಮಸ್ಯೆ, ವಿವಾಹ, ಭೂ, ಜಲ, ಬೆಳೆ ಅಭಿವೃದ್ಧಿಗಾಗಿ ಈ ಸೇವೆಯನ್ನು ಮಾಡಿದರೆ ಶುಭವಾಗುತ್ತದೆ ಎಂಬ ನಂಬಿಕೆಯಿದೆ. ಮನೆಯಲ್ಲಿ ಶಾಂತಿ ನೆಲೆಸಲು, ವಿವಾಹ ಸಮಸ್ಯೆಗಳು ನಿವಾರಣೆಯಾಗಲು ಮತ್ತು ಸಂತಾನ ಭಾಗ್ಯಕ್ಕಾಗಿ ಈ ಪೂಜೆ ಮಾಡಲಾಗುತ್ತದೆ.  ವಿಶೇಷವಾಗಿ ಆಶ್ಲೇಷ ನಕ್ಷತ್ರದಂದು ಈ ಪೂಜೆಯನ್ನು ಮಾಡುವುದರಿಂದ ಸರ್ಪ ದೋಷಗಳು ನಿವಾರಣೆಯಾಗುತ್ತವೆ ಮತ್ತು ಜೀವನದಲ್ಲಿ ಸುಖ-ಸಮೃದ್ಧಿ ಉಂಟಾಗುತ್ತದೆ ಎಂಬ ನಂಬಿಕೆಯಿದೆ.

  • ಕುಕ್ಕೆಯಲ್ಲಿ ಆಶ್ಲೇಷ ಬಲಿ ಪೂಜೆ ನೆರವೇರಿಸಿದ ಅಣ್ಣಾಮಲೈ

    ಕುಕ್ಕೆಯಲ್ಲಿ ಆಶ್ಲೇಷ ಬಲಿ ಪೂಜೆ ನೆರವೇರಿಸಿದ ಅಣ್ಣಾಮಲೈ

    ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ (Kukke Subramanya) ತಮಿಳುನಾಡು (Tamil Nadu) ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ (Annamalai) ಕುಟುಂಬ ಸಮೇತರಾಗಿ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರ.

    ಕುಕ್ಕೆಯ ಶ್ರೀ ಸಂಪುಟ ನರಸಿಂಹ ಸ್ವಾಮಿ ಮಠದಲ್ಲಿ ಆಶ್ಲೇಷ ಬಲಿ ಪೂಜೆ (Ashlesha Bali Pooja) ನೆರವೇರಿಸಿ ಅಣ್ಣಾಮಲೈ ಬಳಿಕ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿಯನ್ನು ಭೇಟಿಯಾಗಿ ಆಶೀರ್ವಾದ ಪಡೆದರು.  ಇದನ್ನೂ ಓದಿ: ಇಂದು ಸುರ್ಜೇವಾಲ ಜೊತೆ ಒನ್ ಟು ಒನ್ ಮೀಟಿಂಗ್‌ 8 ಶಾಸಕರಿಗೆ ಬುಲಾವ್‌

    ಭೇಟಿ ಬಳಿಕ ಮಾತನಾಡಿದ ಅವರು, ನಾನು ಕಳೆದ ಹತ್ತು ಹದಿನೈದು ವರ್ಷಗಳಿಂದ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಬರುತ್ತಿದ್ದೇಮೆ. ಆಶ್ಲೇಷ ನಕ್ಷತ್ರದ ಈ ಪುಣ್ಯದಿನದಂದು ದೇವರಲ್ಲಿ ಪ್ರಾರ್ಥನೆ ಮಾಡಿದ್ದೇನೆ. ತಮಿಳುನಾಡಿನ ಜನ, ಕರ್ನಾಟಕದ ಜನ ಹಾಗೂ ಇಡೀ ಭಾರತದ ಜನರು ಸುಖ ಶಾಂತಿ ನೆಮ್ಮದಿಯಾಗಿ ಇರಬೇಕು. ಎಲ್ಲಾ ಜನರಿಗೂ ಒಳ್ಳೆದಾಗಬೇಕು ಎಂದು ಪ್ರಾರ್ಥನೆ ಮಾಡಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ಮೊದಲ ಬಾರಿಗೆ ಜೂನ್ ತಿಂಗಳಲ್ಲಿ KRS ಭರ್ತಿ  ಇಂದು ಬಾಗಿನ ಅರ್ಪಿಸಿ ಹೊಸ ದಾಖಲೆ ಬರೆಯಲಿದ್ದಾರೆ ಸಿಎಂ

    ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರಿಗೆ ತಮಿಳುನಾಡಿನ ಜವಾಬ್ದಾರಿಯ ಜೊತೆಗೆ ರಾಷ್ಟ್ರೀಯ ಮಟ್ಟದ ಹುದ್ದೆಯನ್ನು ನೀಡಲು ಬಿಜೆಪಿ ಮುಂದಾಗಿದೆ.

    ಈ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮಾತನಾಡಿ, ತಮಿಳುನಾಡಿನಲ್ಲಿಯೂ ಅವರ ಕೆಲಸ ಮುಂದುವರಿಯುವುದು ಇದರ ಜೊತೆಗೆ ರಾಷ್ಟ್ರೀಯ ಜವಾಬ್ದಾರಿಗಳನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.

  • ಕುಡಿತದ ಮತ್ತಿನಲ್ಲಿದ್ದ ವ್ಯಕ್ತಿಯನ್ನ ಎತ್ತಿ ಎಸೆದ  ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಆನೆ

    ಕುಡಿತದ ಮತ್ತಿನಲ್ಲಿದ್ದ ವ್ಯಕ್ತಿಯನ್ನ ಎತ್ತಿ ಎಸೆದ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಆನೆ

    ಮಂಗಳೂರು: ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯನ್ನು ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ (Kukke Subramanya Temple) ಕ್ಷೇತ್ರದ ಆನೆ ಯಶಸ್ವಿನಿ (Elephant Yashaswini) ಎತ್ತಿ ಬಿಸಾಡಿದ ಘಟನೆ ನಡೆದಿದೆ.

    ಪೋಲೀಸರು ಆನೆಯೊಂದಿಗೆ ಫೋಟೋ ತೆಗೆಯುತ್ತಿದ್ದ ಸಂದರ್ಭದಲ್ಲಿ ಕುಡಿತದ ಮತ್ತಿನಲ್ಲಿದ್ದ ವ್ಯಕ್ತಿಯೋರ್ವ ಆನೆಯ ಎದುರು ಸಾಗಿದ್ದ. ವ್ಯಕ್ತಿಯನ್ನು‌ ನೋಡಿದ ಕೂಡಲೇ ಆನೆ ತನ್ನ ಸೊಂಡಿಲಿನಿಂದ ಎತ್ತಿ ಎಸೆದಿದೆ. ಇದನ್ನೂ ಓದಿ: ನಾವು ಭಾರತದ ಜೊತೆಗಿದ್ದೇವೆ: ಪಾಕಿಸ್ತಾನ ಉಪ ಪ್ರಧಾನಿ

     

    ಎಸೆದ ರಭಸಕ್ಕೆ ವ್ಯಕ್ತಿ ನೆಲಕ್ಕೆ ಅಪ್ಪಳಿಸಿದ್ದು ಯಾವುದೇ ಗಾಯಗಳಾಗದೇ ಪಾರಾಗಿದ್ದಾರೆ. ವ್ಯಕ್ತಿ ಕುಡಿತದ ಮತ್ತಿನಲ್ಲೇ ತೂರಾಡಿಕೊಂಡು ಬಂದಿರೋದ್ರಿಂದಲೇ ಆನೆ ಕೋಪಗೊಂಡು ಎತ್ತಿ ಬಿಸಾಡಿದೆ ಎನ್ನಲಾಗಿತ್ತಿದೆ.

  • ನೀರಿನ ಬೆಲೆಯೂ ಲೀಟರ್‌ಗೆ 25 ರೂ.‌ಆಗಿದೆ, ರೈತರಿಂದ ಒತ್ತಡವಿತ್ತು: ಡಿಕೆಶಿ ಸಮರ್ಥನೆ

    ನೀರಿನ ಬೆಲೆಯೂ ಲೀಟರ್‌ಗೆ 25 ರೂ.‌ಆಗಿದೆ, ರೈತರಿಂದ ಒತ್ತಡವಿತ್ತು: ಡಿಕೆಶಿ ಸಮರ್ಥನೆ

    ಮಂಗಳೂರು: ಹಾಲಿನ ಬೆಲೆ (Milk Price) ಜಾಸ್ತಿ ಮಾಡಬೇಕೆಂದು ರೈತರ (Farmers) ಒತ್ತಡವಿತ್ತು. ರೈತರ ಒತ್ತಡದ‌ ಮೇಲೆ ಬೆಲೆ ಏರಿಕೆ ಮಾಡಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಹೇಳಿದ್ದಾರೆ.

    ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ (Kukke Subramanya Temple) ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ನೀರಿನ ಬೆಲೆಯೂ ಲೀಟರ್‌ಗೆ 25 ರೂ.‌ಆಗಿದೆ ಎಂದು ಹೇಳುವ ಮೂಲಕ ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡರು.

     

    ಪ್ರಜ್ವಲ್ ರೇವಣ್ಣ (Prajwal Revanna) ವೀಡಿಯೋ ವೈರಲ್ ಪ್ರಕರಣದಲ್ಲಿ ಹಾಸನದ ಮಾಜಿ ಬಿಜೆಪಿ ಶಾಸಕ ಪ್ರೀತಂ ಗೌಡ (Preetham J. Gowda) ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದಕ್ಕೆ ಪ್ರತಿಕ್ರಿಯಿಸಿ, ಈ ವಿಚಾರ ನನ್ನ ಗಮನಕ್ಕೆ‌ ಬಂದಿಲ್ಲ. ಮಂಗಳೂರಿನಿಂದ ಸುಬ್ರಹ್ಮಣ್ಯದವರೆಗೆ ಮಲಗಿಕೊಂಡೇ ಬಂದಿದ್ದೇನೆ. ನನಗೆ ಯಾರೂ ಈ ವಿಚಾರ ತಿಳಿಸಿಲ್ಲ. ನನಗೆ ಏನೂ ಗೊತ್ತಿಲ್ಲ ಎಂದರು. ಇದನ್ನೂ ಓದಿ: ಬೆಂಗಳೂರು ನ್ಯಾಯಾಲಯಕ್ಕೆ ಹಾಜರ್‌ – ಉದಯನಿಧಿ ಸ್ಟಾಲಿನ್‍ಗೆ ಬಿಗ್ ರಿಲೀಫ್

    ಕುಟುಂಬ ಸಮೇತ ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡಿದ್ದೇನೆ. ರಾಜ್ಯಕ್ಕೆ ಮತ್ತು ಜನರಿಗೆ ದೇವರು ಒಳ್ಳೆಯದು ಮಾಡಲಿ ಎಂದು ಪ್ರಾರ್ಥಿಸಿದ್ದೇನೆ. ರಾಜ್ಯದಲ್ಲಿ ಮಳೆ ಈಗಷ್ಟೇ ಪ್ರಾರಂಭವಾಗಿದ್ದು ಡ್ಯಾಂಗಳಲ್ಲಿ ಜಾಸ್ತಿ ನೀರು ಬರುತ್ತಿದೆ. ಆದರೂ ತಮಿಳುನಾಡಿನವರು ಈಗಲೇ ನೀರು ಬಿಡುವಂತೆ ಬೇಡಿಕೆ ಇಟ್ಟಿದ್ದಾರೆ. ಡ್ಯಾಂಗಳಲ್ಲಿ ಇನ್ನೂ ನೀರು ಬರಲು ಪ್ರಾರಂಭವಾಗಿಲ್ಲ. ಹಾಗಾಗಿ ಮಳೆ ಹೆಚ್ಚಾಗಿ ಬರಲಿ ಎಂದು ಪ್ರಾರ್ಥನೆ ಮಾಡೋಣ ಎಂದರು.

     

  • ಕರಾವಳಿಯಲ್ಲಿ ಮತ್ತೆ ಧರ್ಮ ದಂಗಲ್- ಕುಕ್ಕೆಯಲ್ಲಿ ಅನ್ಯಮತೀಯರ ವ್ಯಾಪಾರಕ್ಕೆ ಬಹಿಷ್ಕಾರ

    ಕರಾವಳಿಯಲ್ಲಿ ಮತ್ತೆ ಧರ್ಮ ದಂಗಲ್- ಕುಕ್ಕೆಯಲ್ಲಿ ಅನ್ಯಮತೀಯರ ವ್ಯಾಪಾರಕ್ಕೆ ಬಹಿಷ್ಕಾರ

    ಮಂಗಳೂರು: ಕರಾವಳಿಯಲ್ಲಿ ಮತ್ತೆ ವ್ಯಾಪಾರ ಧರ್ಮ ದಂಗಲ್ ಆರಂಭವಾಗಿದೆ. ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ದೇವಸ್ಥಾನದಲ್ಲಿ ವ್ಯಾಪಾರ ಧರ್ಮ ದಂಗಲ್ ಮುಂದುವರಿದಿದೆ.

    ಕುಕ್ಕೆ ಸುಬ್ರಹ್ಮಣ್ಯದಲ್ಲಿ (Kukke Subramanya Temple) ಅನ್ಯಮತೀಯರ ವ್ಯಾಪಾರಕ್ಕೆ ಬಹಿಷ್ಕಾರ ಹಾಕಿದ್ದಾರೆ. ಡಿ.18 ರಂದು ಕುಕ್ಕೆಯಲ್ಲಿ ಚಂಪಾ ಷಷ್ಠಿ ನಡೆಯಲಿದ್ದು, ಈ ಸಂದರ್ಭದಲ್ಲಿ ಅನ್ಯಮತೀಯರ ವ್ಯಾಪಾರಕ್ಕೆ ಅವಕಾಶ ನೀಡದಂತೆ ಹಿಂದೂ ಸಂಘಟನೆಗಳು ಒತ್ತಾಯ ಮಾಡಿವೆ. ಅಲ್ಲದೆ ಈ ಸಂಬಂಧ ಹಿಂದೂ ಸಂಘಟನೆ ಮುಖಂಡರು ದೇವಳದ ಕಾರ್ಯನಿರ್ವಹಣಾಧಿಕಾರಿಯವರಿಗೆ ಮನವಿ ಕೂಡ ಸಲ್ಲಿಸಿದ್ದಾರೆ.

    ಇತ್ತ ಸುಬ್ರಹ್ಮಣ್ಯದ ಕುಮಾರಧಾರ ಬಳಿ ಬ್ಯಾನರ್ ಕೂಡ ಹಾಕಿದ್ದಾರೆ. ಹಿಂದೂ ಹಿತರಕ್ಷಣಾ ವೇದಿಕೆ ಸುಬ್ರಹ್ಮಣ್ಯ ಅನ್ನೋ ಹೆಸರಲ್ಲಿ ಬ್ಯಾನರ್ ಹಾಕಲಾಗಿದೆ. ಇತಿಹಾಸ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಚಂಪಾಷಷ್ಠಿಯ ಸಂದರ್ಭದಲ್ಲಿ ಈ ಪರಿಸರದಲ್ಲಿ ಅನ್ಯಮತೀಯ ವ್ಯಾಪಾರ ವಹಿವಾಟುಗಳನ್ನು ನಿಷೇಧಿಸಲಾಗಿದೆ ಅಂತ ಬ್ಯಾನರ್ ನಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಸಿಪಿವೈ ಬಾವ ಮಹದೇವಯ್ಯ ಹತ್ಯೆ ಕೇಸ್ – ತಮಿಳುನಾಡು ಮೂಲದ ಓರ್ವ ಅರೆಸ್ಟ್

    ಶ್ರೀ ಕ್ಷೇತ್ರ ಸುಬ್ರಹ್ಮಣ್ಯ ದೇವಸ್ಥಾನವು ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ್ದಾಗಿದೆ.

  • ಚಂದ್ರಯಾನ-3 ಯಶಸ್ಸಿಗಾಗಿ ಕುಕ್ಕೆಯಲ್ಲಿ ವಿಶೇಷ ಪೂಜೆ

    ಚಂದ್ರಯಾನ-3 ಯಶಸ್ಸಿಗಾಗಿ ಕುಕ್ಕೆಯಲ್ಲಿ ವಿಶೇಷ ಪೂಜೆ

    ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ (Kukke Subramanya) ಇಂದು ಚಂದ್ರಯಾನ-3 ಯಶಸ್ಸಿಗಾಗಿ ವಿಶೇಷ ಪೂಜೆ ಸಲ್ಲಿಸಲಾಯಿತು.

    ನಾಗರಪಂಚಮಿಯಂದು ಶ್ರೀ ಕ್ಷೇತ್ರದಲ್ಲಿ ಚಂದ್ರಯಾನ-3 ನೌಕೆ ಯಶಸ್ವಿಯಾಗಿ ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿದು ಇತಿಹಾಸ ನಿರ್ಮಿಸಲೆಂದು ಪ್ರಾರ್ಥಿಸಲಾಯಿತು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ಆಡಳಿತ ಮಂಡಳಿ ಹಾಗೂ ಊರ ಹಿರಿಯರು ನಾಗದೇವರಿಗೆ ಹಾಲೆರೆದು ಮಹಾ ಪೂಜೆ, ಕಾರ್ತಿಕ ಪೂಜೆ ನೆರವೇರಿಸಿದರು.

    ಭಾರತ ಚಂದ್ರಯಾನ-3 (Chandrayaan-3) ಕಾರ್ಯಾಚರಣೆಯ ಕೊನೆ ಹಂತದ ಭಾಗವಾಗಿ ಬಾಹ್ಯಾಕಾಶ ನೌಕೆಯಿಂದ ಲ್ಯಾಂಡರ್ ಮತ್ತು ರೋವರ್ ಬೇರ್ಪಡಿಸುವ ಕಾರ್ಯ ಗುರುವಾರ ಯಶಸ್ವಿಯಾಗಿ ನಡೆದಿತ್ತು. ಈ ಬೆನ್ನಲ್ಲೇ ವಿಕ್ರಮ್ ಲ್ಯಾಂಡರ್ ಡಿಬೂಸ್ಟಿಂಗ್ ಕಾರ್ಯಾಚರಣೆಯನ್ನು ಇಸ್ರೋ ಯಶಸ್ವಿಗೊಳಿಸಿದೆ. ಆಗಸ್ಟ್ 23ರಂದು ಚಂದ್ರಯಾನ ನೌಕೆ ಚಂದ್ರನ ಮೇಲೆ ಇಳಿಯಲಿದೆ. ಇದನ್ನೂ ಓದಿ: ಚಂದ್ರನ ಪ್ರೀ ಲ್ಯಾಂಡಿಂಗ್ ಕಕ್ಷೆ ಪ್ರವೇಶಿಸುವಲ್ಲಿ ರಷ್ಯಾದ ಲೂನಾ-25 ಲ್ಯಾಂಡರ್ ವಿಫಲ

    ಇತ್ತ ಆಗಸ್ಟ್ 10 ರಂದು ರಷ್ಯಾ (Russia) ಲೂನಾ-25 ಗಗನ ನೌಕೆಯನ್ನು ಉಡಾವಣೆ ಮಾಡುವ ಮೂಲಕ ನಾಸಾ ಹಾಗೂ ಇತರ ಬಾಹ್ಯಾಕಾಶ ಸಂಸ್ಥೆಗಳೊಂದಿಗೆ ಸ್ಪರ್ಧೆಗಿಳಿದಿತ್ತು. ಆಗಸ್ಟ್ 21 ರಂದು ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಸಲು ನಿರ್ಧರಿಸಲಾಗಿತ್ತು. ಸುಮಾರು 50 ವರ್ಷಗಳ ಬಳಿಕ ಉಡಾವಣೆ ಮಾಡಿದ ಮೊದಲ ಚಂದ್ರಯಾನ ನೌಕೆ ಲೂನಾ- 25,ಚಂದ್ರನಲ್ಲಿ ನಿಗದಿಯಲ್ಲಿ ಇಳಿಯುವ ಮುನ್ನ ಸೇರಬೇಕಾದ ಕಕ್ಷೆಯನ್ನು ಪ್ರವೇಶಿಸುವಲ್ಲಿ ವಿಫಲವಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಭಾರೀ ಮಳೆಯಿಂದ ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಮುಳುಗಡೆ

    ಭಾರೀ ಮಳೆಯಿಂದ ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಮುಳುಗಡೆ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ (Rain In Dakshina Kannada) ಮುಂದುವರಿದಿದ್ದು, ಶನಿವಾರ ರಾತ್ರಿಯಿಂದಲೂ ಗಾಳಿ ಮಳೆಯಾಗುತ್ತಿದೆ. ಹೀಗಾಗಿ ಅಲ್ಲಲ್ಲಿ ಸಾಕಷ್ಟು ಅವಾಂತರ ಸೃಷ್ಟಿಯಾಗಿದ್ದು ಸಾಕಷ್ಟು ಹಾನಿಯೂ ಆಗಿದೆ.

    ಪಶ್ಚಿಮ ಘಟ್ಟ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದ (Kukke Subramanya) ಕುಮಾರಧಾರ ಸ್ನಾನಘಟ್ಟ (Kumaradhara) ಮುಳುಗಡೆಯಾಗಿದೆ. ಘಟ್ಟ ಪ್ರದೇಶದಿಂದ ಭಾರೀ ಪ್ರಮಾಣದಲ್ಲಿ ನೀರು ಹರಿದುಬರುತ್ತಿದ್ದು, ಕುಮಾರಧಾರಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗುತ್ತಿದೆ.

    ನದಿ ಬದಿಗೆ ಹೋಗದಂತೆ ದೇವಾಲಯದ ಭಕ್ತರಿಗೆ ಸೂಚನೆ ನೀಡಲಾಗುತ್ತಿದೆ. ಅಲ್ಲದೆ ಪೊಲೀಸರು, ಗೃಹರಕ್ಷಕ ದಳದಿಂದ ಸ್ನಾನ ಘಟ್ಟ ಬಳಿ ಕಾವಲು ಕಾಯುತ್ತಿದ್ದಾರೆ. ಕುಮಾರಧಾರ ನೀರು ಹೆಚ್ಚಳವಾಗಿ ಸುಬ್ರಹ್ಮಣ್ಯ-ಮಂಜೇಶ್ವರ ಹೆದ್ದಾರಿ ಬಂದ್ ಆಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತಷ್ಟು ಚುರುಕು – ಮುಂದಿನ 5 ದಿನ ಅಬ್ಬರದ ಮಳೆ

    ಇತ್ತ ಮಂಗಳೂರಿನ ಲೇಡಿಹಿಲ್ ನ ನಾರಾಯಣ ಗುರು ಸರ್ಕಲ್ ಬಳಿ ಬೃಹತ್ ಆಲದ ಮರವೊಂದು ರಸ್ತೆಗೆ ಅಡ್ಡಲಾಗಿ ಉರುಳಿ ಬಿದ್ದಿದೆ. ನಿನ್ನೆ ರಾತ್ರಿ ರಸ್ತೆಯಲ್ಲಿ ಸಂಚಾರವಿಲ್ಲದ ವೇಳೆ ಮರ ಬಿದ್ದಿರೋದ್ರಿಂದ ಭಾರೀ ಅನಾಹುತ ತಪ್ಪಿದೆ. ಇಂದು ಮರ ತೆರವು ಕಾರ್ಯಾಚರಣೆ ನಡದಿದೆ.

    ಜಿಲ್ಲೆಯ ಬೆಳ್ತಂಗಡಿ, ಸುಳ್ಯ, ಬಂಟ್ವಾಳ ಹಾಗೂ ಪುತ್ತೂರು ತಾಲೂಕು ಸೇರಿದಂತೆ ಜಿಲ್ಲೆಯಾದ್ಯಂತ ಮಳೆಯಾಗುತ್ತಿದೆ. ನಿರಂತರ ಮಳೆಯ ಹಿನ್ನಲೆಯಲ್ಲಿ ತಗ್ಗು ಪ್ರದೇಶದ ಅಡಿಕೆ ತೋಟಗಳು ಜಲಾವೃತಗೊಂಡಡಿವೆ. ಜುಲೈ 28ರವರೆಗೂ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಜ್ಯದ ಶ್ರೀಮಂತ ದೇವಸ್ಥಾನಗಳ ಪಟ್ಟಿ ಬಿಡುಗಡೆ – ಯಾವ ದೇವಾಲಯದ ಆದಾಯ, ಖರ್ಚು ಎಷ್ಟು?

    ರಾಜ್ಯದ ಶ್ರೀಮಂತ ದೇವಸ್ಥಾನಗಳ ಪಟ್ಟಿ ಬಿಡುಗಡೆ – ಯಾವ ದೇವಾಲಯದ ಆದಾಯ, ಖರ್ಚು ಎಷ್ಟು?

    ಬೆಂಗಳೂರು: ಸರ್ಕಾರಕ್ಕೆ ಅತಿ ಹೆಚ್ಚು ಆದಾಯ ತರುವ ರಾಜ್ಯದ ಟಾಪ್ 10 ದೇವಾಲಯಗಳ ಪಟ್ಟಿಯನ್ನು (Top 10 Temples In Karnataka With Highest Revenue) ಮುಜರಾಯಿ ಇಲಾಖೆ ಬಿಡುಗಡೆ ಮಾಡಿದೆ. 2022-23ರ ಅವಧಿಯಲ್ಲಿ ದೇವಾಲಯ ಗಳಿಸಿರುವ ಒಟ್ಟು ಆದಾಯ ಮತ್ತು ಒಟ್ಟು ವೆಚ್ಚದ ಪಟ್ಟಿಯನ್ನು ಬಿಡುಗಡೆ ಮಾಡಿದೆ.

    ಎಂದಿನಂತೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿರುವ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ (Kukke Subramanya Temple) ಮೊದಲ ಸ್ಥಾನ ಪಡೆದಿದೆ. ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನ, ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನವನ್ನು ಪಡೆದಿದೆ.

    ಯಾವ ದೇವಸ್ಥಾನದ ಆದಾಯ ಎಷ್ಟು?
    1. ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ
    ಆದಾಯ : 123.64 ಕೋಟಿ ರೂ.
    ವೆಚ್ಚ : 63.77 ಕೋಟಿ ರೂ.

    2. ಶ್ರೀ ಮೂಕಾಂಬಿಕಾ ದೇವಸ್ಥಾನ, ಕೊಲ್ಲೂರು
    ಆದಾಯ : 59.47 ಲಕ್ಷ ರೂ.
    ವೆಚ್ಚ: 33.32 ಲಕ್ಷ ರೂ.

    3. ಶ್ರೀ ಚಾಮುಂಡೇಶ್ವರಿ ದೇವಸ್ಥಾನ, ಮೈಸೂರು
    ಆದಾಯ: 52.40 ಲಕ್ಷ ರೂ.
    ವೆಚ್ಚ: 52.40 ಲಕ್ಷ ರೂ.

    4. ಶ್ರೀ ಸಿದ್ಧಲಿಂಗೇಶ್ವರ ದೇವಸ್ಥಾನ, ಎಡೆಯೂರು
    ಆದಾಯ: 36.48 ಲಕ್ಷ ರೂ.
    ವೆಚ್ಚ: 35.68 ಲಕ್ಷ ರೂ.

    5. ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಕಟೀಲು
    ಆದಾಯ: 32.10 ಕೋಟಿ ರೂ.
    ವೆಚ್ಚ: 25.97 ಕೋಟಿ ರೂ.  ಇದನ್ನೂ ಓದಿ: ಅನ್ನಭಾಗ್ಯದ ದುಡ್ಡಿಗಾಗಿ ಬ್ಯಾಂಕ್ ಖಾತೆ ಜೊತೆ ಆಧಾರ್ ಲಿಂಕ್ ಕಡ್ಡಾಯ

    6. ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯ, ನಂಜನಗೂಡು
    ಆದಾಯ: 26.71 ಕೋಟಿ ರೂ.
    ವೆಚ್ಚ: 18. 74 ಕೋಟಿ ರೂ.

    7. ಶ್ರೀ ರೇಣುಕಾ ಎಲ್ಲಮ್ಮ ದೇವಸ್ಥಾನ, ಸವದತ್ತಿ
    ಆದಾಯ: 22.52 ಕೋಟಿ ರೂ.
    ವೆಚ್ಚ: 11.51 ಕೋಟಿ ರೂ.

    8. ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಮಂದಾರ್ತಿ
    ಆದಾಯ: 14 .55 ಕೋಟಿ ರೂ.
    ವೆಚ್ಚ: 13.02ಕೋಟಿ ರೂ.

    9 . ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯ, ದೊಡ್ಡಬಳ್ಳಾಪುರ
    ಆದಾಯ : 12.25 ಕೋಟಿ ರೂ.
    ವೆಚ್ಚ: 7.40 ಕೋಟಿ ರೂ.

    10. ಶ್ರೀ ಬನಶಂಕರಿ ದೇವಸ್ಥಾನ, ಬೆಂಗಳೂರು
    ಆದಾಯ: 10.58 ಕೋಟಿ ರೂ.
    ವೆಚ್ಚ: 19.41 ಕೋಟಿ ರೂ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸರ್ಕಾರಿ ಬಸ್ಸಿನಲ್ಲಿ ನಾರಿಯರ ತೀರ್ಥಯಾತ್ರೆ- ಕುಕ್ಕೆ, ಧರ್ಮಸ್ಥಳ ಕ್ಷೇತ್ರದಲ್ಲಿ ಮಹಿಳಾ ಜನಸಾಗರ

    ಸರ್ಕಾರಿ ಬಸ್ಸಿನಲ್ಲಿ ನಾರಿಯರ ತೀರ್ಥಯಾತ್ರೆ- ಕುಕ್ಕೆ, ಧರ್ಮಸ್ಥಳ ಕ್ಷೇತ್ರದಲ್ಲಿ ಮಹಿಳಾ ಜನಸಾಗರ

    ಮಂಗಳೂರು: ರಾಜ್ಯ ಸರ್ಕಾರದ ಉಚಿತ ಬಸ್ ಪ್ರಯಾಣ ಯೋಜನೆಯಿಂದ ಮಹಿಳೆಯರಿಗೆ ದೇವರ ದರ್ಶನ ಪಡೆಯೋ ಭಾಗ್ಯ ಸಿಕ್ಕಿದಂತಾಗಿದೆ. ಉಚಿತ ಪ್ರಯಾಣ ಜಾರಿಗೆ ಬಂದ ಮೊದಲ ವೀಕೆಂಡ್ ಆದ ಶನಿವಾರ ಕರಾವಳಿಯ ತೀರ್ಥ ಕ್ಷೇತ್ರಗಳಿಗೆ ಮಹಿಳೆಯರ ದಂಡೇ ಹರಿದು ಬಂದಿದೆ. ಸರ್ಕಾರಿ ಬಸ್ ಫುಲ್ ರಶ್ ಆಗುತ್ತಿದ್ದು, ಕರಾವಳಿಯ ಪುಣ್ಯಕ್ಷೇತ್ರಗಳಲ್ಲಿ ಮಹಿಳೆಯರೇ ತುಂಬಿಕೊಂಡಿದ್ದಾರೆ.

    ಕಳೆದ ಭಾನುವಾರ ಸರ್ಕಾರಿ ಬಸ್ಸಿನಲ್ಲಿ ಮಹಿಳೆಯರಿಗೆ ಫ್ರೀ ಯೋಜನೆ ಜಾರಿಗೆ ಬಂದಿತ್ತು. ಅದರ ನಂತರದ ವೀಕೆಂಡ್ ಇಂದು ಆಗಿರೋ ಕಾರಣ ಉಚಿತ ಬಸ್ ನಲ್ಲಿ ವೀಕೆಂಡ್ ರಜೆಯೊಂದಿಗೆ ಕರಾವಳಿಯ ತೀರ್ಥ ಕ್ಷೇತ್ರಗಳಿಗೆ ಮಹಿಳೆಯರು ಬಂದಿದ್ದಾರೆ. ಉತ್ತರ ಕರ್ನಾಟಕದಿಂದ ಗುಳೇ ಹೊರಟಂತೆ ಎಲ್ಲಾ ಮಹಿಳೆಯರು ಮಕ್ಕಳು ಮರಿಗಳ ಜೊತೆ ತೀರ್ಥಕ್ಷೇತ್ರ ದರ್ಶನ ಮಾಡ್ತಾ ಇದ್ದಾರೆ. ಉತ್ತರ ಕರ್ನಾಟಕ, ಮಧ್ಯ ಕರ್ನಾಟಕದ ಜನರೆಲ್ಲ ಕರಾವಳಿಯ ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ ಕ್ಷೇತ್ರಗಳಲ್ಲಿ ಭಾರೀ ಭಕ್ತರ ಸಂಖ್ಯೆ ಏರ್ಪಟ್ಟಿದ್ದು ಜನಸಾಗರವೇ ಹರಿದು ಬರುತ್ತಿದೆ. ಮಹಿಳೆಯರು ಗುಂಪು ಗುಂಪಾಗಿ ಬಂದು ಸೇರುತ್ತಿದ್ದು, ಕೆಎಸ್‍ಆರ್‍ಟಿಸಿ ಬಸ್‍ಗಳೆಲ್ಲ ಫುಲ್ ರಶ್ ಆಗಿದೆ.

    ಕೆಎಸ್‍ಆರ್‍ಟಿಸಿ ಬಸ್ಸಿನಲ್ಲಿ ಉಚಿತ ಪ್ರಯಾಣದ ಯೋಜನೆ ಜಾರಿಯಾದ ದಿನದಿಂದಲೇ ಹಳ್ಳಿಗಾಡಿನ ಜನರು ಸರ್ಕಾರಿ ಬಸ್ ಹತ್ತತೊಡಗಿದ್ದಾರೆ. ಹಬ್ಬಳ್ಳಿ, ಧಾರವಾಡ, ಗದಗ, ಚಿತ್ರದುರ್ಗ, ಬೀದರ್, ಬಿಜಾಪುರ ಹಾಗೂ ಬಾಗಲಕೋಟೆ ಸೇರಿದಂತೆ ಬೆಂಗಳೂರು, ಕೋಲಾರ ಹಾಗೂ ತುಮಕೂರುನ ಮಹಿಳೆಯರು ಕರಾವಳಿಯ ತೀರ್ಥಕ್ಷೇತ್ರಕ್ಕೆ ಬಂದಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಸರಕಾರಿ ಬಸ್ಸುಗಳಲ್ಲಿ ಮಹಿಳೆಯರು ಬರುತ್ತಿದ್ದು ದೇವಸ್ಥಾನ ಪರಿಸರದಲ್ಲಿ ಮಹಿಳಾ ಮಣಿಯರ ದಂಡೇ ಸೇರುತ್ತಿದೆ. ಬಸ್ ಫ್ರೀ ಆಗಿದ್ದರಿಂದ ಒಂದು ಬಾರಿಯೂ ಈ ದೇವಸ್ಥಾನಗಳನ್ನು ನೋಡದವರು ದೇವರ ದರ್ಶನ ಪಡೆದು ಸರ್ಕಾರ ದೇವರನ್ನು ನೋಡುವ ಭಾಗ್ಯ ಕರುಣಿಸಿದೆ ಎಂದಿದ್ದಾರೆ.

    ಧರ್ಮಸ್ಥಳಕ್ಕೆ ಬಂದು ಅಲ್ಲಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುವ ಬಸ್ಸುಗಳಲ್ಲೂ ಕಾಲಿಡುವುದಕ್ಕೂ ಸಾಧ್ಯವಾಗದ ಸ್ಥಿತಿಯಿದೆ. ದೂರದ ಜಿಲ್ಲೆಗಳಿಂದ ಕರಾವಳಿಯ ತೀರ್ಥ ಕ್ಷೇತ್ರಗಳಿಗೆ ಬರುವುದಕ್ಕೆ ಸಾಮಾನ್ಯವಾಗಿ ಸಾವಿರಾರು ರೂಪಾಯಿ ಬೇಕಿದ್ದರೆ, ಈಗ ಉಚಿತ ಪ್ರಯಾಣ ಯೋಜನೆಯಿಂದ ಹಳ್ಳಿ ಮಹಿಳೆಯರು ಮಕ್ಕಳು, ಇಡೀ ಕುಟುಂಬವನ್ನು ಕಟ್ಟಿಕೊಂಡು ದೇವರ ದರ್ಶನಕ್ಕೆ ಬಂದಿದ್ದಾರೆ. ಇಂತಹ ಯೋಜನೆ ಕೊಟ್ಟ ಸರ್ಕಾರಕ್ಕೆ ಮಹಿಳೆಯರು ಜೈ ಎಂದಿದ್ದಾರೆ. ಇದನ್ನೂ ಓದಿ: ಅಕ್ಕಿ ಮಾರಾಟಕ್ಕೆ ಕೇಂದ್ರ ನಿರ್ಬಂಧ ಹೇರಿರುವ ಬಗ್ಗೆ ತೇಜಸ್ವಿ ಸೂರ್ಯ ಸ್ಪಷ್ಟೀಕರಣ

    ಮಾಮೂಲಿಯಾಗಿ ಜೂನ್ ತಿಂಗಳಲ್ಲಿ ಕರಾವಳಿಯ ತೀರ್ಥ ಕ್ಷೇತ್ರಗಳಲ್ಲಿ ಹೆಚ್ಚಿನ ಭಕ್ತರು ಇರೋದಿಲ್ಲ. ಆದರೆ ಈ ಬಾರಿ ಜೂನ್ ತಿಂಗಳಲ್ಲೇ ಫ್ರೀ ಬಸ್ ಯೋಜನೆ ಜಾರಿಯಾಗಿರೋದ್ರಿಂದ ಎಲ್ಲಾ ದೇವಸ್ಥಾನಗಳಲ್ಲೂ ಫುಲ್ ರಶ್ ಆಗಿದೆ. ಜನರ ದಟ್ಟಣೆಯಿಂದಾಗಿ ಕರಾವಳಿಯ ದೇವಸ್ಥಾನಗಳಲ್ಲಿ ಮಹಿಳೆಯರೇ ತುಂಬಿಕೊಂಡಿದ್ದಾರೆ. ಪ್ರವಾಸಿ ತಾಣ, ದೇವಸ್ಥಾನ ಪರಿಸರದಲ್ಲಿ ವ್ಯಾಪಾರವೂ ಜೋರಾಗಿದೆ. ಒಟ್ಟಿನಲ್ಲಿ ಉಚಿತ ಬಸ್ ಯೋಜನೆ ಎಲ್ಲರಿಗೂ ಸಹಕಾರಿಯಾದಂತಿದೆ.