Tag: Kulgam

  • ಪಹಲ್ಗಾಮ್‌ ಉಗ್ರರಿಗೆ ಸಹಾಯ ಮಾಡಿದ್ದ ವ್ಯಕ್ತಿ ಅರೆಸ್ಟ್‌ – ಶಿಕ್ಷಕನಾಗಿ ಕೆಲಸ, ಲಷ್ಕರ್‌ ಗುಂಪಿನೊಂದಿಗೆ ಸಂಪರ್ಕ

    ಪಹಲ್ಗಾಮ್‌ ಉಗ್ರರಿಗೆ ಸಹಾಯ ಮಾಡಿದ್ದ ವ್ಯಕ್ತಿ ಅರೆಸ್ಟ್‌ – ಶಿಕ್ಷಕನಾಗಿ ಕೆಲಸ, ಲಷ್ಕರ್‌ ಗುಂಪಿನೊಂದಿಗೆ ಸಂಪರ್ಕ

    ಶ್ರೀನಗರ: ಏಪ್ರಿಲ್ 22 ರಂದು ಪಹಲ್ಗಾಮ್ ಭಯೋತ್ಪಾದಕ ದಾಳಿಯ (Pahalgam Attack) ಉಗ್ರರಿಗೆ ಸಹಾಯ ಮಾಡಿದ್ದ ಜಮ್ಮು ಮತ್ತು ಕಾಶ್ಮೀರದ‌ ವ್ಯಕ್ತಿಯನ್ನ ಪೊಲೀಸರು ಬಂಧಿಸಿದ್ದಾರೆ.

    ಬಂಧಿತನನ್ನ 26 ವರ್ಷದ ಮೊಹಮ್ಮದ್ ಯೂಸುಫ್ ಕಟಾರಿ (Mohammad Yousuf Katari) ಎಂದು ಗುರುತಿಸಲಾಗಿದೆ. ಗುಪ್ತಚರ ಮಾಹಿತಿ ಮೇರೆಗೆ ದಕ್ಷಿಣ ಕಾಶ್ಮೀರದ ಕುಲ್ಗಾಮ್‌ ಜಿಲ್ಲೆಯಲ್ಲಿ ಕಟಾರಿಯನ್ನ ಬಂಧಿಸಲಾಗಿದ್ದು, ವಿಚಾರಣೆ ವೇಳೆ ಜಮ್ಮು-ಕಾಶ್ಮೀರ ಪೊಲೀಸರು ಕಟಾರಿ ಬಗ್ಗೆ ಹಲವು ರಹಸ್ಯಗಳನ್ನು ಬಯಲಿಗೆಳೆದಿದ್ದಾರೆ.

    ಯೂಸೂಫ್‌ ಕಟಾರಿ ಯಾರು?
    ಕುಲ್ಗಾಮ್‌ ಜಿಲ್ಲೆಯಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಕಟಾರಿ, ಶಿಕ್ಷಕನಾಗಿಯೂ ಕೆಲಸ ಮಾಡ್ತಿದ್ದ. ಈತ ಪಾಕಿಸ್ತಾನದ ಲಷ್ಕರ್‌ ಎ ತೈಬಾ (LTE) ಭಯೋತ್ಪಾದಕ ಗುಂಪಿನೊಂದಿಗೆ ಸಂಪರ್ಕದಲ್ಲಿದ್ದ. ಏಪ್ರಿಲ್‌ 22ರಂದು ನಡೆದ ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದ ಉಗ್ರರಿಗೆ ಎಲ್ಲಾ ರೀತಿಯ ಸಹಾಯ ಮಾಡಿದ್ದ ಅನ್ನೋದು ಗೊತ್ತಾಗಿದೆ.

    ಪಹಲ್ಗಾಮ್‌ ಉಗ್ರರನ್ನ ಕೆಲ ದಿನಗಳ ಹಿಂದೆ ನಡೆದ ಆಪರೇಷನ್‌ ಮಹಾದೇವ್‌ (Operation Mahadev) ಕಾರ್ಯಾಚರಣೆಯಲ್ಲಿ ಚಿನಾರ್‌ ಕಾರ್ಪ್ಸ್‌ ಬೆಟಾಲಿಯನ್‌ ಹತ್ಯೆಗೈದಿತ್ತು. ಆ ಬಳಿಕ ಉಗ್ರರಿಗೆ ಸೇರಿದ್ದ ಉಪಕರಣಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಇದೆಲ್ಲದರ ವಿಶ್ಲೇಷಣೆಯ ಬಳಿಕ ಕಟಾರಿಯನ್ನ ಬಂಧಿಸಲಾಗಿದೆ.

    ಆಪರೇಷನ್‌ ಮಹಾದೇವ್‌ನಲ್ಲಿ ಮಾಸ್ಟರ್‌ ಮೈಂಡ್‌ ಹತ್ಯೆ
    ಮೇ 22ರಿಂದ 2-3 ವಾರಗಳ ಕಾಲ ಸತತವಾಗಿ ಆಪರೇಷನ್‌ ಮಹಾದೇವ್‌ ಕಾರ್ಯಾಚರಣೆ ನಡೆಸಲಾಯಿತು. ಈ ವೇಳೆ ಶ್ರೀನಗರ ಬಳಿಯ ದಚಿಗಮ್‌ ಅರಣ್ಯ ಪ್ರದೇಶದಲ್ಲಿ ಉಗ್ರರನ್ನ ಹತ್ಯೆಗೈಯಲಾಗಿತ್ತು. ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೇರಿ ಮೂವರು ಭಯೋತ್ಪಾದಕರು ಕಾರ್ಯಾಚರಣೆಯಲ್ಲಿ ಹತ್ಯೆಯಾಗಿದ್ದರು. ಹತ್ಯೆಗೀಡಾದ ಉಗ್ರರ ಬಳಿಯಿದ್ದ ಎಕೆ-47 ರೈಫಲ್‌ ಹಾಗೂ M-9 ಅಸಾಲ್ಟ್‌ ರೈಫಲ್‌ಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಬಳಿಕ ಆ ರೈಫಲ್‌ಗಳನ್ನ ಪಹಲ್ಗಾಮ್‌ ದಾಳಿಯಲ್ಲಿ ಬಖಲೆ ಮಾಡಲಾಗಿದೆ ಅನ್ನೋದು ಚಂಡೀಗಢದ ಪ್ರಯೋಗಾಲಯದಲ್ಲಿ ಪರೀಕ್ಷೆ ನಡೆಸಿದ ಬಳಿಕ ಗೊತ್ತಾಯಿತು.

  • ಆಪರೇಷನ್ ಅಖಾಲ್ | ಭದ್ರತಾ ಸಿಬ್ಬಂದಿ, ಉಗ್ರರ ನಡುವೆ ಗುಂಡಿನ ಚಕಮಕಿ – ಇಬ್ಬರು ಯೋಧರು ಹುತಾತ್ಮ

    ಆಪರೇಷನ್ ಅಖಾಲ್ | ಭದ್ರತಾ ಸಿಬ್ಬಂದಿ, ಉಗ್ರರ ನಡುವೆ ಗುಂಡಿನ ಚಕಮಕಿ – ಇಬ್ಬರು ಯೋಧರು ಹುತಾತ್ಮ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಆಪರೇಷನ್ ಅಖಾಲ್ (Operation Akhal) ಹೆಸರಿನಲ್ಲಿ ನಡೆಯುತ್ತಿರುವ ಕಾರ್ಯಚರಣೆಯಲ್ಲಿ ಉಗ್ರರು ಹಾಗೂ ಭದ್ರತಾ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದು, ಇಬ್ಬರು ಯೋಧರು (Soldiers) ಹುತಾತ್ಮರಾಗಿದ್ದಾರೆ.

    ಕುಲ್ಗಾಮ್‌ನಲ್ಲಿ (Kulgam) ಶುಕ್ರವಾರ ರಾತ್ರಿಯಿಡೀ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಸೈನಿಕರು ಹುತಾತ್ಮರಾಗಿದ್ದು, ನಾಲ್ವರು ಸೈನಿಕರು ಗಾಯಗೊಂಡಿದ್ದಾರೆ. ಮೃತ ಯೋಧರನ್ನು ಲ್ಯಾನ್ಸ್ ನಾಯಕ್ ಪ್ರೀತ್ಪಾಲ್ ಸಿಂಗ್ ಮತ್ತು ಸಿಪಾಯಿ ಹರ್ಮಿಂದರ್ ಸಿಂಗ್ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಧರ್ಮಸ್ಥಳದಲ್ಲಿ ಸಮಾಧಿ ಶೋಧ ಮ್ಯಾರಥಾನ್ – ಐದು ಅಡಿ ಅಗೆದರೂ ಸಿಕ್ಕಿದ್ದು ಬರೀ ಮಣ್ಣು

    ಹುತಾತ್ಮ ಯೋಧರ ಧೈರ್ಯ ಮತ್ತು ಸಮರ್ಪಣೆ ನಮಗೆ ಶಾಶ್ವತ ಸ್ಫೂರ್ತಿ ನೀಡುತ್ತದೆ. ಭಾರತೀಯ ಸೇನೆಯು ತೀವ್ರ ಸಂತಾಪ ವ್ಯಕ್ತಪಡಿಸುತ್ತದೆ. ಮೃತ ಕುಟುಂಬಗಳೊಂದಿಗೆ ಸೇನೆ ಸದಾ ನಿಲ್ಲುತ್ತದೆ ಎಂದು ಚಿನಾರ್ ಕಾರ್ಪ್ಸ್ ಶನಿವಾರ ಎಕ್ಸ್ನಲ್ಲಿ ತಿಳಿಸಿದೆ. ಇದನ್ನೂ ಓದಿ: ಪುಟಿನ್‌ ಭೇಟಿಗೆ ಟ್ರಂಪ್‌ ಮುಹೂರ್ತ ಫಿಕ್ಸ್‌ – ಉಕ್ರೇನ್‌ನಲ್ಲಿ ಶಾಂತಿ ಸ್ಥಾಪನೆಗೆ ಮಾತುಕತೆ

    ಆಪರೇಷನ್ ಅಖಾಲ್ ಕಾರ್ಯಚರಣೆ ಒಂಬತ್ತನೇ ದಿನಕ್ಕೆ ಕಾಲಿಟ್ಟಿದೆ. ಕಾರ್ಯಾಚರಣೆಯ ಆರಂಭದಿಂದ ಇಲ್ಲಿಯವರೆಗೆ ಹನ್ನೊಂದು ಭದ್ರತಾ ಸಿಬ್ಬಂದಿಗಳು ಗಾಯಗೊಂಡಿದ್ದಾರೆ. ಆಗಸ್ಟ್ 1 ರಂದು ದಕ್ಷಿಣ ಕಾಶ್ಮೀರ ಜಿಲ್ಲೆಯ ಅಖಾಲ್‌ನಲ್ಲಿರುವ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ನಂತರ ಭದ್ರತಾ ಪಡೆಗಳು ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದರು.

  • J&K | ಮೂರು ಬಸ್‌ಗಳ ನಡುವೆ ಅಪಘಾತ – 10ಕ್ಕೂ ಹೆಚ್ಚು ಅಮರನಾಥ ಯಾತ್ರಿಕರಿಗೆ ಗಾಯ

    J&K | ಮೂರು ಬಸ್‌ಗಳ ನಡುವೆ ಅಪಘಾತ – 10ಕ್ಕೂ ಹೆಚ್ಚು ಅಮರನಾಥ ಯಾತ್ರಿಕರಿಗೆ ಗಾಯ

    ಶ್ರೀನಗರ: ಮೂರು ಬಸ್‌ಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ 10ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು (Amarnath Yatra) ಗಾಯಗೊಂಡಿರುವ ಘಟನೆ ಜಮ್ಮು ಕಾಶ್ಮೀರದ (Jammu And Kashmir) ಕುಲ್ಗಾಮ್ (Kulgam) ಜಿಲ್ಲೆಯಲ್ಲಿ ನಡೆದಿದೆ.

    ಗಾಯಾಳು ಯಾತ್ರಿಕರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಎಲ್ಲಾ ಗಾಯಾಳುಗಳ ಸ್ಥಿತಿ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ರಾಯಚೂರು | ಕಸ ವಿಲೇವಾರಿ ವಾಹನಗಳನ್ನು ಕದ್ದೊಯ್ದ ಕಳ್ಳರು

    ಅಮರನಾಥ ಯಾತ್ರೆಗಾಗಿ ಬೇಸ್ ಕ್ಯಾಂಪ್‌ಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮೂರು ಬಸ್‌ಗಳು ಹಾನಿಗೊಳಗಾಗಿವೆ. ಬಸ್ಸಿನಲ್ಲಿದ್ದ ಉಳಿದ ಯಾತ್ರಿಕರಿಗೆ ಮೀಸಲು ಬಸ್ ವ್ಯವಸ್ಥೆ ಮಾಡಲಾಗಿದ್ದು, ಯಾತ್ರಿಕರು ಪ್ರಯಾಣ ಮುಂದುವರಿಸಿದ್ದಾರೆ. ಇದನ್ನೂ ಓದಿ: ಜಸ್ಟ್‌ 5 ಸಾವಿರಕ್ಕೆ ಸ್ನೇಹಿತರಿಂದಲೇ ಉತ್ತರ ಕರ್ನಾಟಕದ ಯುವ ಗಾಯಕ ಮಾರುತಿ ಲಠ್ಠೆ ಬರ್ಬರ ಕೊಲೆ

  • ಉಗ್ರರಿಗೆ ಆಹಾರ, ಆಶ್ರಯ ನೀಡಿದ್ದ ವ್ಯಕ್ತಿ ನದಿಗೆ ಹಾರಿ ನೀರಿನಲ್ಲಿ ಮುಳುಗಿ ಸಾವು

    ಉಗ್ರರಿಗೆ ಆಹಾರ, ಆಶ್ರಯ ನೀಡಿದ್ದ ವ್ಯಕ್ತಿ ನದಿಗೆ ಹಾರಿ ನೀರಿನಲ್ಲಿ ಮುಳುಗಿ ಸಾವು

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ ಜಿಲ್ಲೆಯಲ್ಲಿ ಉಗ್ರರಿಗೆ ಆಹಾರ ಮತ್ತು ಆಶ್ರಯ ನೀಡಿ ಸಹಾಯ ಮಾಡಿದ್ದ ವ್ಯಕ್ತಿಯೊಬ್ಬ ಭದ್ರತಾ ಪಡೆಗಳಿಂದ ತಪ್ಪಿಸಿಕೊಳ್ಳುವಾಗ ನದಿಗೆ ಹಾರಿ, ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.

    23 ವರ್ಷದ ಇಮಿತಿಯಾಜ್ ಅಹ್ಮದ್ ಮ್ಯಾಗ್ರೆ ನದಿಗೆ ಹಾರಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಹೌತಿ ಬಂಡುಕೋರ ಮೇಲೆ ಸರಣಿ ದಾಳಿ ನಡೆಸಿ ಪೆಟ್ಟು ಕೊಡ್ತೇವೆ: ಬೆಂಜಮಿನ್ ನೆತನ್ಯಾಹು

    ಶನಿವಾರ (ಮೇ 3) ಪೊಲೀಸರು ಮ್ಯಾಗ್ರೆನನ್ನ ಬಂಧಿಸಿದ್ದರು. ವಿಚಾರಣೆ ವೇಳೆ ಕುಲ್ಗಾಮ್‌ನ ತಂಗ್‌ಮಾರ್ಗ್‌ನಲ್ಲಿರುವ ಕಾಡಿನಲ್ಲಿ ಅಡಗಿರುವ ಭಯೋತ್ಪಾದಕರಿಗೆ ಆಹಾರ ಮತ್ತು ಆಶ್ರಯ ನೀಡಿರುವುದಾಗಿ ಆತ ಒಪ್ಪಿಕೊಂಡಿದ್ದ. ಬಳಿಕ ಭಯೋತ್ಪಾದಕರ ಅಡಗುತಾಣಗಳ ಮೇಲೆ ದಾಳಿ ಮಾಡಲು ಭದ್ರತಾ ಪಡೆ ಅಧಿಕಾರಿಗಳು ಆರೋಪಿಯನ್ನು ಕರೆದೊಯ್ದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ದೇಶದ ಶಸ್ತ್ರಾಸ್ತ್ರ ಕಾರ್ಖಾನೆಗಳಿಗೆ ರಜೆ ರದ್ದು – ಅತ್ತ DRDOದಿಂದ ಏರ್‌ಶಿಪ್‌ ಪ್ರಯೋಗ ಯಶಸ್ವಿ

    ಭಾನುವಾರ ಬೆಳಗ್ಗೆ ಪೊಲೀಸರು ಮತ್ತು ಸೇನೆ ಜಂಟಿ ಕಾರ್ಯಾಚರಣೆ ನಡೆಸುವ ವೇಳೆ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ವೇಶಾವ್‌ ನದಿಗೆ ಹಾರಿದ್ದಾನೆ. ಆದರೆ ನೀರಿನ ರಭಸಕ್ಕೆ ಸಿಲುಕಿ, ನೀರಿನಲ್ಲೇ ಮುಳುಗಿ ಸಾವನ್ನಪ್ಪಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆತ ನೀರಿನಲ್ಲಿ ಮುಳುಗುತ್ತಿರುವ ದೃಶ್ಯಾವಳಿಗಳು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

  • ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಐವರು ಉಗ್ರರು ಬಲಿ, ಇಬ್ಬರು ಸೈನಿಕರಿಗೆ ಗಾಯ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಐವರು ಉಗ್ರರು ಬಲಿ, ಇಬ್ಬರು ಸೈನಿಕರಿಗೆ ಗಾಯ

    ಶ್ರೀನಗರ: ಭದ್ರತಾ ಪಡೆ (Security Force) ಮತ್ತು ಭಯೋತ್ಪಾದಕರ (Terrorits) ನಡುವೆ ನಡೆದ ಎನ್‌ಕೌಂಟರ್‌ನಲ್ಲಿ (Encounter) ಐವರು ಉಗ್ರರು ಬಲಿಯಾಗಿದ್ದು, ಇಬ್ಬರು ಭದ್ರತಾ ಪಡೆ ಸಿಬ್ಬಂದಿ ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ (Jammu And Kashmir) ಕುಲ್ಗಾಮ್ (Kulgam) ಜಿಲ್ಲೆಯಲ್ಲಿ ನಡೆದಿದೆ.

    ಬುಧವಾರ ರಾತ್ರಿ, ಜಿಲ್ಲೆಯ ಬೆಹಿಬಾಗ್ ಪ್ರದೇಶದ ಕಡ್ಡರ್‌ನಲ್ಲಿ ಶಂಕಿತ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಗುಪ್ತಚರ ಮಾಹಿತಿ ಪಡೆದ ತಕ್ಷಣ ಭದ್ರತಾ ಪಡೆ ಸಿಬ್ಬಂದಿ ಹಾಗೂ ಜಮ್ಮು ಕಾಶ್ಮೀರ ಪೊಲೀಸರು ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದರು. ಇದನ್ನೂ ಓದಿ: Mumbai Boat Accident | ಸ್ಪೀಡ್‌ ಬೋಟ್‌ ಫೆರ್ರಿಗೆ ಡಿಕ್ಕಿ ಹೊಡೆಯಲು ಕಾರಣ ಏನು? ದುರಂತ ಹೇಗಾಯ್ತು?

    ಗುರುವಾರ ಮುಂಜಾನೆ ಭಯೋತ್ಪಾದಕರು ಏಕಾಏಕಿ ಭದ್ರತಾ ಪಡೆಯ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ಗುಂಡಿನ ಚಕಮಕಿ ನಡೆಸಿ ಐವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಈ ವೇಳೆ ಇಬ್ಬರು ಭದ್ರತಾ ಸಿಬ್ಬಂದಿಗಳು ಗಾಯಗೊಂಡಿದ್ದಾರೆ. ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ ಎಕ್ಸ್‌ನಲ್ಲಿ ತಿಳಿಸಿದೆ. ಇದನ್ನೂ ಓದಿ: ಮುಂದಿನ ಮೂರು ದಿನಗಳ ಕಾಲ ಭಾರೀ ಶೀತಗಾಳಿ – ಬೀದರ್‌ನಲ್ಲಿ ರೆಡ್ ಅಲರ್ಟ್ ಘೋಷಣೆ

  • ಕಾಶ್ಮೀರದಲ್ಲಿ ಭಯೋತ್ಪಾದಕರು-ಭದ್ರತಾಪಡೆಗಳ ನಡುವೆ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ

    ಕಾಶ್ಮೀರದಲ್ಲಿ ಭಯೋತ್ಪಾದಕರು-ಭದ್ರತಾಪಡೆಗಳ ನಡುವೆ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu Kashmir) ಕುಲ್ಗಾಮ್ (Kulgam) ಜಿಲ್ಲೆಯಲ್ಲಿ ಭದ್ರತಾ ಪಡೆಗಳು (Security Force) ಮತ್ತು ಭಯೋತ್ಪಾದಕರ (Terrorist) ನಡುವೆ ಶನಿವಾರ ಎನ್‌ಕೌಂಟರ್ ನಡೆದಿದ್ದು, ಓರ್ವ ಸೇನಾ ಸಿಬ್ಬಂದಿ ಗಾಯಗೊಂಡು ಚಿಕಿತ್ಸೆ ಫಲಿಸದೆ ಹುತಾತ್ಮರಾಗಿದ್ದಾರೆ.

    ಮೊದರ್ಗಾಮ್ ಗ್ರಾಮದಲ್ಲಿ ಭಯೋತ್ಪಾದಕರ ಉಪಟಳದ ಬಗ್ಗೆ ಗುಪ್ತಚರ ಮಾಹಿತಿಯ ಮೇರೆಗೆ ಸಿಆರ್‌ಪಿಎಫ್, ಸೇನೆ ಮತ್ತು ಸ್ಥಳೀಯ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯ ನಂತರ ಎನ್‌ಕೌಂಟರ್ (Encounter) ನಡೆದಿದೆ. ಈ ವೇಳೆ ಸೇನಾ ಸಿಬ್ಬಂದಿ ಗಾಯಗೊಂಡಿದ್ದರು. ಆರಂಭಿಕ ಗುಂಡಿನ ದಾಳಿಯಲ್ಲಿ ಗಾಯಗೊಂಡ ಸಿಬ್ಬಂದಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಡೆಂಗ್ಯೂನಿಂದ ಜನ ಸಾಯ್ತಿದ್ರೆ, ಸಚಿವರು ಸ್ವಿಮ್ಮಿಂಗ್ ಪೂಲ್‍ನಲ್ಲಿದ್ದಾರೆ: ಛಲವಾದಿ ನಾರಾಯಣಸ್ವಾಮಿ ಕಿಡಿ

    ಕಾಶ್ಮೀರ ವಲಯ ಪೊಲೀಸರು ಈ ಕುರಿತು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಕುಲ್ಗಾಮ್ ಜಿಲ್ಲೆಯ ಮೊದರ್ಗಾಮ್ ಗ್ರಾಮದಲ್ಲಿ ಎನ್‌ಕೌಂಟರ್ ಪ್ರಾರಂಭವಾಯಿತು. ಪೊಲೀಸ್ ಮತ್ತು ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸುತ್ತಿವೆ. ಇದನ್ನೂ ಓದಿ: ಚನ್ನಪಟ್ಟಣ ಮೈತ್ರಿ ಕಗ್ಗಂಟು- ಟಿಕೆಟ್ ಸಿಗದಿದ್ದರೆ ಪಕ್ಷೇತರ ಸ್ಪರ್ಧೆ ಸುಳಿವು ನೀಡಿದ ಸಿಪಿವೈ

  • ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಐವರು ಲಷ್ಕರ್ ಭಯೋತ್ಪಾದಕರ ಹತ್ಯೆ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಐವರು ಲಷ್ಕರ್ ಭಯೋತ್ಪಾದಕರ ಹತ್ಯೆ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಕುಲ್ಗಾಮ್ (Kulgam) ಜಿಲ್ಲೆಯಲ್ಲಿ ಶುಕ್ರವಾರ ಭದ್ರತಾ ಪಡೆ (Security Force) ಎನ್‌ಕೌಂಟರ್ (Encounter) ನಡೆಸಿದ್ದು, ಐವರು ಲಷ್ಕರ್ ಭಯೋತ್ಪಾದಕರನ್ನು (Lashkar Terrorists) ಹತ್ಯೆ ಮಾಡಲಾಗಿದೆ.

    ಐವರು ಭಯೋತ್ಪಾದಕರನ್ನು ಕುಲ್ಗಾಮ್ ಪೋಲೀಸ್, ಸೇನೆ ಮತ್ತು ಸಿಆರ್‌ಪಿಎಫ್ ತಟಸ್ಥಗೊಳಿಸಿದೆ. ಭಯೋತ್ಪಾದಕರ ಬಳಿಯಿದ್ದ ಶಸ್ತ್ರಾಸ್ತ್ರಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ ಅಂತಿಮ ಹಂತದಲ್ಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ವಿಶ್ವಕಪ್ ಫೈನಲ್ಸ್ ಬೆಟ್ಟಿಂಗ್ ಭರಾಟೆ – 15 ದಿನದಲ್ಲಿ 30 ಕೇಸ್, 42 ಮಂದಿ ಅರೆಸ್ಟ್

    ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆ ಶುಕ್ರವಾರ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಭಯೋತ್ಪಾದಕರು ತಪ್ಪಿಸಿಕೊಳ್ಳದಂತೆ ಭದ್ರತಾ ಪಡೆ ಪ್ರದೇಶವನ್ನು ಸುತ್ತುವರೆದಿದೆ. ಕುಲ್ಗಾಮ್‌ನ ದಮ್ಹಾಲ್ ಹಂಜಿ ಪೋರಾ ಪ್ರದೇಶದಲ್ಲಿ ಎನ್‌ಕೌಂಟರ್ ಆರಂಭವಾಗಿದೆ ಎಂದು ಕಾಶ್ಮೀರ ವಲಯ ಪೊಲೀಸರು ಎಕ್ಸ್‌ನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಮಹಿಳೆಯಿಂದ ಬ್ಲ್ಯಾಕ್‌ಮೇಲ್ – ಎಂಪಿ ದೇವೇಂದ್ರಪ್ಪ ಪುತ್ರನಿಂದ ದೂರು, ಎಫ್‌ಐಆರ್ ದಾಖಲು

    ಗುರುವಾರ ಈ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ನಂತರ ಭದ್ರತಾ ಪಡೆ ಕಾರ್ಯಾಚರಣೆಯನ್ನು ಪ್ರಾರಂಭಿಸಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭದ್ರತಾ ಸಿಬ್ಬಂದಿ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದರಿಂದ ಶೋಧ ಕಾರ್ಯಾಚರಣೆ ಗುಂಡಿನ ಚಕಮಕಿಯಾಗಿ ಮಾರ್ಪಟ್ಟಿದೆ. ಕುಲ್ಗಾಮ್‌ನ ನೆಹಮಾ ಪ್ರದೇಶದ ಸಾಮ್ನೋದಲ್ಲಿ ಶುಕ್ರವಾರ ಮುಂಜಾನೆ ಗುಂಡಿನ ದಾಳಿ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಬಳ್ಳಾರಿ ಸಂಸದ ದೇವೇಂದ್ರಪ್ಪ ಮಗನಿಂದ ಪ್ರೀತಿ, ಸೆಕ್ಸ್‌ ಹೆಸರಲ್ಲಿ ವಂಚನೆ

    ಅಕ್ಟೋಬರ್‌ನಲ್ಲಿ ಕುಲ್ಗಾಮ್‌ನಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದರು. ಅವರು ಹಿಜ್ಬುಲ್ ಮುಜಾಹಿದ್ದೀನ್ ಜೊತೆ ಸಂಪರ್ಕ ಹೊಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: 15 ನಿಮಿಷದಲ್ಲಿ 4 ಕೊಲೆ, ಇದು ವಿಶ್ವ ದಾಖಲೆ – ಸ್ಟೇಟಸ್ ಹಾಕಿದಾತನಿಗೆ ಬಿಸಿ ಮುಟ್ಟಿಸಿದ ಪೊಲೀಸರು

  • ಕಾಶ್ಮೀರದಲ್ಲಿ ಉಗ್ರರಿಂದ ಗುಂಡಿನ ದಾಳಿ – ಮೂವರು ಯೋಧರು ಹುತಾತ್ಮ

    ಕಾಶ್ಮೀರದಲ್ಲಿ ಉಗ್ರರಿಂದ ಗುಂಡಿನ ದಾಳಿ – ಮೂವರು ಯೋಧರು ಹುತಾತ್ಮ

    ಶ್ರೀನಗರ: ಸೇನೆ (Indian Army) ಹಾಗೂ ಉಗ್ರರ (Terrorists) ನಡುವೆ ನಡೆದ ಗುಂಡಿನ ಚಕಮುಕಿಯಲ್ಲಿ ಮೂವರು ಯೋಧರು (Soldiers) ಹುತಾತ್ಮರಾದ ಘಟನೆ ಜಮ್ಮು ಮತ್ತು ಕಾಶ್ಮೀರದ (Jammu and Kashmir) ಕುಲ್ಗಾಮ್‍ನಲ್ಲಿ (Kulgam) ನಡೆದಿದೆ.

    ಹಾಲನ್ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಖಚಿತ ಮಾಹಿತಿಯ ಮೇಲೆ ಸೇನೆ ಹಾಗೂ ಪೊಲೀಸರು ಶುಕ್ರವಾರ ಸಂಜೆಯಿಂದಲೇ ಎನ್‍ಕೌಂಟರ್ ಪ್ರಾರಂಭಿಸಿದ್ದಾರೆ. ಈ ವೇಳೆ ನಡೆದ ಗುಂಡಿನ ದಾಳಿಯಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಅಲ್ಲದೇ ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರೆಯುತ್ತಿದೆ ಎಂದು ಭಾರತೀಯ ಸೇನೆ ತಿಳಿಸಿದೆ. ಇದನ್ನೂ ಓದಿ: ಮೈಸೂರಿಗೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

    ಗುಂಡಿನ ದಾಳಿ ನಡೆಸಿ ಬಳಿಕ ಭಯೋತ್ಪಾದಕರಿಂದ ಯಾವುದೇ ಪ್ರತಿಕ್ರಿಯೆ ಇಲ್ಲದಿರುವಾಗ ಉಗ್ರರು ಮೃತಪಟ್ಟಿದ್ದಾರೆ ಎಂದು ಸೇನೆ ಹುಡುಕಾಟ ಆರಂಭಿಸಿದೆ. ಈ ವೇಳೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಯೋಧರನ್ನು ನಿಯೋಜಿಸಲಾಗಿದೆ. ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ.

    ಕಳೆದ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಪೂಂಚ್ ಮತ್ತು ರಜೌರಿ ಜಿಲ್ಲೆಗಳಲ್ಲಿ ನಡೆದ ಎರಡು ಪ್ರತ್ಯೇಕ ದಾಳಿಯಲ್ಲಿ ಐವರು ಮುಖ್ಯ ಕಮಾಂಡೋಗಳು ಸೇರಿದಂತೆ 10 ಸೈನಿಕರು ಹುತಾತ್ಮರಾಗಿದ್ದರು. ಇದನ್ನೂ ಓದಿ: ಬೇಲ್ ಮೇಲೆ ರಿಲೀಸ್ ಆಗ್ತಿದ್ದಂತೆ ರೌಡಿಶೀಟರ್ ಮರ್ಡರ್ – ಮಗ ಬರ್ತಾನೆ ಅಂತ ಮಟನ್ ಚಾಪ್ಸ್ ಮಾಡ್ತಿದ್ಲು ತಾಯಿ!

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಭಯೋತ್ಪಾದಕರ ಎನ್‍ಕೌಂಟರ್ ವೇಳೆ ಸೇನಾ ಸಿಬ್ಬಂದಿಗೆ ಗಂಭೀರ ಗಾಯ

    ಭಯೋತ್ಪಾದಕರ ಎನ್‍ಕೌಂಟರ್ ವೇಳೆ ಸೇನಾ ಸಿಬ್ಬಂದಿಗೆ ಗಂಭೀರ ಗಾಯ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಬುಧವಾರ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್‍ಕೌಂಟರ್‌ನಲ್ಲಿ ಸೇನಾ ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದಾರೆ.

    ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆ ಭಯೋತ್ಪಾದಕರಿದ್ದ ಕುಲ್ಗಾಮ್ ಸ್ಥಳಕ್ಕೆ ಪ್ರವೇಶಿಸಿ ಗುಂಡಿನ ದಾಳಿ ಪ್ರಾರಂಭಿಸಿದೆ. ಈ ವೇಳೆ 34 ಆರ್‌ಆರ್‌ನ  ಸೇನಾ ಯೋಧ ಜೈ ಕುಮಾರ್ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಸ್ತುತ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: 2 ಲಡಾಖ್ ಪರ್ವತವನ್ನು ಹತ್ತಿದ 13 ವರ್ಷದ ಪೋರ  

    ದಕ್ಷಿಣ ಕಾಶ್ಮೀರದ ಕುಲ್ಗಾಮ್‍ನ ಯರಿಪೋರಾದ ಬ್ರೈಹಾರ್ಡ್ ಕಥ್ಪೋರಾ ಪ್ರದೇಶದಲ್ಲಿ ಎನ್‍ಕೌಂಟರ್ ನಡೆಯಿತು. ಈ ವೇಳೆ 2 ರಿಂದ 3 ಉಗ್ರರು ಸಿಕ್ಕಿಬಿದ್ದಿದ್ದಾರೆ. ಇನ್ನೂ ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಕುಲ್ಗಾಮ್‍ನಲ್ಲಿ ನಾಲ್ವರು ಉಗ್ರರನ್ನು ಸೆದೆಬಡಿದ ಭಾರತೀಯ ಸೇನೆ

    ಕುಲ್ಗಾಮ್‍ನಲ್ಲಿ ನಾಲ್ವರು ಉಗ್ರರನ್ನು ಸೆದೆಬಡಿದ ಭಾರತೀಯ ಸೇನೆ

    ಶ್ರೀನಗರ: ದಕ್ಷಿಣ ಕಾಶ್ಮೀರ ಜಿಲ್ಲೆಯ ಕುಲ್ಗಾಮ್‍ನಲ್ಲಿ ಇಂದು ಭಾರತೀಯ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಉಗ್ರರನ್ನು ಸೇನೆ ಸೆದೆಬಡಿದಿದೆ.

    ಕುಲ್ಗಾಮ್‍ನ ಡಿಹೆಚ್ ಪೊರಾದಲ್ಲಿ ಉಗ್ರರು ಅಡಗಿರುವ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆ ಜಮ್ಮು-ಕಾಶ್ಮೀರ ಪೊಲೀಸರು, ಸೇನೆ ಮತ್ತು ಸಿಆರ್‌ಪಿಎಫ್ ಮತ್ತು ವಿಶೇಷ ಕಾರ್ಯಾಚರಣೆ ತಂಡ(ಎಸ್‍ಒಜಿ) ಇಂದು ಬೆಳಗ್ಗಿನ ಜಾವ ಜಂಟಿ ಶೋಧ ಕಾರ್ಯಾಚರಣೆ ಕೈಗೊಂಡಿತ್ತು ಎಂದು ಮೂಲಗಳಿಂದ ತಿಳಿದು ಬಂದಿದೆ.

    ಕಾರ್ಯಾಚರಣೆ ವೇಳೆ ಉಗ್ರರು ಸ್ವಯಂಚಾಲಿತ ಶಸ್ತ್ರಾಸ್ತ್ರಗಳಿಂದ ಪೊಲೀಸರು ಹಾಗೂ ಸೇನೆಯ ಮೇಲೆ ಗುಂಡು ಹಾರಿಸಲು ಆರಂಭಿಸಿದರು. ಆಗ ಭದ್ರತಾ ಪಡೆಗಳು ಕೂಡ ಪ್ರತಿದಾಳಿ ನಡೆಸಿದ್ದು, ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ಆರಂಭವಾಯ್ತು.

    ಈ ದಾಳಿಯಲ್ಲಿ ನಾಲ್ವರು ಉಗ್ರರನ್ನು ಭದ್ರತಾ ಪಡೆ ಹೊಡೆದುರುಳಿಸಿತ್ತು. ಸದ್ಯ ಲಭ್ಯವಿರುವ ಮಾಹಿತಿಗಳ ಪ್ರಕಾರ, ಸ್ಥಳಕ್ಕೆ ಹೆಚ್ಚುವರಿ ಭದ್ರತಾ ಪಡೆಗಳು ಧಾವಿಸಿದ್ದು, ಈ ಪ್ರದೇಶವನ್ನು ಸುತ್ತುವರಿದಿವೆ.