Tag: Kumar Vishwas

  • ಕೇಜ್ರಿವಾಲ್ ವಿರುದ್ಧ ಪ್ರತ್ಯೇಕತಾವಾದಿ ಹೇಳಿಕೆ ನೀಡಿದ್ದ ಕುಮಾರ್ ವಿಶ್ವಾಸ್‍ಗೆ ವೈ ಪ್ಲಸ್ ಭದ್ರತೆ

    ಕೇಜ್ರಿವಾಲ್ ವಿರುದ್ಧ ಪ್ರತ್ಯೇಕತಾವಾದಿ ಹೇಳಿಕೆ ನೀಡಿದ್ದ ಕುಮಾರ್ ವಿಶ್ವಾಸ್‍ಗೆ ವೈ ಪ್ಲಸ್ ಭದ್ರತೆ

    ನವದೆಹಲಿ: ಆಪ್ ಪಕ್ಷದ ಮಾಜಿ ನಾಯಕ ಕುಮಾರ್ ವಿಶ್ವಾಸ್ ಅವರ ಭದ್ರತೆಯನ್ನು ಗೃಹ ಸಚಿವಾಲಯವು ವೈನಿಂದ ಇದೀಗ ವೈ ಪ್ಲಸ್‍ಗೆ ಹೆಚ್ಚಳ ಮಾಡಿದೆ.

    ಭದ್ರತೆ ಮತ್ತು ಗುಪ್ತಚರದ ವರದಿಯನ್ನು ಆಧರಿಸಿ ಎಂಎಚ್‍ಎ ಕುಮಾರ್ ವಿಶ್ವಾಸ್ ಅವರ ಭದ್ರತೆಯನ್ನು ಹೆಚ್ಚಿಸಲಾಗಿದೆ. ಮೂಲಗಳ ಪ್ರಕಾರ, ಈ ವೈ ಪ್ಲಸ್ ಭದ್ರತೆಯನ್ನು ಅವರಿಗೆ ದೇಶಾದ್ಯಂತ ನೀಡಲಾಗುವುದು.

    ಈ ಹಿಂದೆ ಕುಮಾರ್ ವಿಶ್ವಾಸ್ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಪ್ರತ್ಯೇಕತಾವಾದಿ ಎಂದು ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಆಮ್ ಆದ್ಮಿ ಪಕ್ಷದ (ಎಎಪಿ) ಕುಮಾರ್ ವಿಶ್ವಾಸ್ ಅವರಿಗೆ ವೈ ಶ್ರೇಣಿ ಭದ್ರತೆ ನೀಡಿತ್ತು. ಇದನ್ನೂ ಓದಿ: ನೇಪಾಳದಲ್ಲಿ ಮೊದಲ ಪೌರತ್ವ ತಿದ್ದುಪಡಿ ಅಂಗೀಕಾರ

    ಎಎಪಿ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ಆರೋಪ ಮಾಡಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ವಿಶ್ವಾಸ್ ಅವರಿಗೆ ಬೆದರಿಕೆ ಇದೆ ಎಂದು ಭದ್ರತೆ ಮತ್ತು ಗುಪ್ತಚರ ಮಾಹಿತಿ ಆಧರಿಸಿ ಭದ್ರತೆ ಒದಗಿಸುತ್ತಿದ್ದೇವೆ ಎಂದು ತಿಳಿಸಿತ್ತು.

    Arvind Kejriwal

    ವೈ ಪ್ಲಸ್ ಭದ್ರತೆಯಲ್ಲಿ 11 ಸಶಸ್ತ್ರ ಪೊಲೀಸ್ ಕಮಾಂಡೋಗಳನ್ನು ನಿಯೋಜಿಸಲಾಗಿದೆ. 11 ಮಂದಿಯಲ್ಲಿ ಐವರು ಸ್ಟ್ಯಾಟಿಕ್ ಪೊಲೀಸ್ ಸಿಬ್ಬಂದಿ, ಭದ್ರತೆಗಾಗಿ ವಿಐಪಿ ಮನೆ ಮತ್ತು ಸುತ್ತಮುತ್ತ ವಾಸಿಸಲಿದ್ದಾರೆ. ಅಲ್ಲದೆ, ಮೂರು ಪಾಳಿಗಳಲ್ಲಿ 6 ರಕ್ಷಣಾ ಸೇವಾ ಅಧಿಕಾರಿಗಳು (ಪಿಎಸ್‍ಒ) ಸಿಬ್ಬಂದಿ ಇರುತ್ತಾರೆ. ಇದನ್ನೂ ಓದಿ: ಶ್ರೀಲಂಕಾದಲ್ಲಿ ಕ್ಷಣಕ್ಷಣಕ್ಕೂ ವಿಷಮ ಸ್ಥಿತಿ – ಓರ್ವ ನಾಗರಿಕ ಸಾವು, 35 ಮಂದಿಗೆ ಗಾಯ

    Live Tv
    [brid partner=56869869 player=32851 video=960834 autoplay=true]

  • ಉಗ್ರರ ಪತ್ತೆಗೆ ಗಾಜಿಯಾಬಾದ್ ಕವಿಯನ್ನು ನೇಮಿಸಿಕೊಳ್ಳಿ: ಕೇಜ್ರಿವಾಲ್ ವ್ಯಂಗ್ಯ

    ಉಗ್ರರ ಪತ್ತೆಗೆ ಗಾಜಿಯಾಬಾದ್ ಕವಿಯನ್ನು ನೇಮಿಸಿಕೊಳ್ಳಿ: ಕೇಜ್ರಿವಾಲ್ ವ್ಯಂಗ್ಯ

    ಲಕ್ನೋ: ಪ್ರಧಾನಿ ಮೋದಿ ಅವರು ಎಲ್ಲಾ ತನಿಖಾ ಸಂಸ್ಥೆಗಳನ್ನು ತೆಗೆದು ಹಾಕಿ ಕುಮಾರ್ ವಿಶ್ವಾಸ್ ಅವರನ್ನು ಮಾತ್ರ ನೇಮಿಸಿಕೊಳ್ಳಿ. ಅವರೇ ಉಗ್ರರನ್ನು ಹುಡುಕಿಕೊಡುತ್ತಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವ್ಯಂಗ್ಯವಾಡಿದರು.

    ಚುನಾವಣಾ ರ‍್ಯಾಲಿಯಲ್ಲಿ  ಮಾತನಾಡಿದ ಅವರು, ಬಿಜೆಪಿಯು ತನ್ನ ಎಲ್ಲಾ ತನಿಖಾ ಸಂಸ್ಥೆಯಿಂದ ದಾಳಿ ನಡೆಸಿತ್ತು. ಆದರೆ ಅವರಿಗೆ ಏನೂ ಸಿಗಲಿಲ್ಲ. ಆದರೆ ಗಾಜಿಯಾಬಾದ್‍ನ ಕವಿ ಕೇಜ್ರಿವಾಲ್ ಉಗ್ರ ಎಂಬ ಕನಸನ್ನು ಕಾಣುತ್ತಿದ್ದಾರೆ. ನಾನು ಮೋದಿ ಅವರಲ್ಲಿ ಕೇಳಿಕೊಳ್ಳುತ್ತೇನೆ. ಎಲ್ಲಾ ತನಿಖಾ ಸಂಸ್ಥೆಗಳನ್ನು ತೆಗೆದು ಹಾಕಿ ಗಾಜಿಯಾಬಾದ್‍ನ ಕವಿಯನ್ನು ಮಾತ್ರ ನೇಮಿಸಿ. ಅವರು ಯಾರು ಉಗ್ರರು ಎಂದು ಹೇಳುತ್ತಾರೆ ಎಂದು ಟೀಕಿಸಿದರು.

    ಇತ್ತೀಚೆಗೆ ಪ್ರಧಾನಿ ಮೋದಿ ಅವರು ಮಾತನಾಡಿ, ಈ ರೀತಿ ದೇಶದ್ರೋಹದಲ್ಲಿ ತೊಡಗಿರುವವರ ವಿರುದ್ಧ ಗಂಭೀರ ಪ್ರಕರಣ ದಾಖಲಿಸಬೇಕು. ಈ ಬಗ್ಗೆ ಸರಿಯಾಗಿ ತನಿಖೆ ನಡೆಸುತ್ತೇವೆ ಎಂದಿದ್ದರು. ಅಷ್ಟೇ ಅಲ್ಲದೇ ರಾಹುಲ್ ಗಾಂಧಿ ಸೇರಿದಂತೆ ಅನೇಕ ನಾಯಕರು ಗಂಭೀರವಾಗಿ ತನಿಖೆ ನಡೆಸಲು ಒತ್ತಾಯಿಸಿದ್ದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡಿ, ಈ ಪ್ರಕರಣದ ಕುರಿತು ತಾವೇ ಖುದ್ದಾಗಿ ತನಿಖೆ ನಡೆಸುತ್ತೇನೆ ಎಂದು ತಿಳಿಸಿದ್ದರು. ಇದನ್ನೂ ಓದಿ: ಐದು ರಾಜ್ಯಗಳಲ್ಲಿ ಬಿಜೆಪಿಗೆ ಬಹುಮತ ಸಿಗುವುದಿಲ್ಲ: ಪೃಥ್ವಿರಾಜ್ ಚವಾಣ್

    ಈ ಹಿಂದೆ ಅರವಿಂದ್ ಕೇಜ್ರಿವಾಲ್ ಪಂಜಾಬ್‍ನ್ನು ಬೇರೆ ರಾಷ್ಟ್ರವಾಗಿ ಅಲ್ಲಿಯ ಪ್ರಧಾನಿ ಆಗಲು ಬಯಸುತ್ತಿದ್ದಾರೆ. ಅವರಿಗೆ ಖಾಲಿಸ್ತಾನಿದ ಉಗ್ರರ ನಂಟಿದೆ ಎಂದು ಎಂದು ಆಪ್‍ನ ಮಾಜಿ ನಾಯಕ ಕುಮಾರ್ ವಿಶ್ವಾಸ್ ಆರೋಪಿಸಿದ್ದರು. ಅಲ್ಲದೇ ಆಪ್‍ಗೆ ಸಿಖ್ ಫಾರ್ ಜಸ್ಟಿಸ್ ಎಂಬ ಖಾಲಿಸ್ತಾನ ಸಂಘಟನೆ ಬೆಂಬಲ ವ್ಯಕ್ತಪಡಿಸಿ ಬರೆದಿರುವ ಪತ್ರವನ್ನು ಗಮನ ಸೆಳೆದಿದ್ದರು. ಇದನ್ನೂ ಓದಿ: ಹಿಜಬ್‌ ವಿವಾದ – ಶೀರೂರು ಮಠ, ಶಬರಿ ಮಲೆ, ತ್ರಿವಳಿ ತಲಾಖ್‌ ಪ್ರಕರಣ ಪ್ರಸ್ತಾಪಿಸಿ ಎಜಿ ವಾದ

  • ಕೇಜ್ರಿವಾಲ್‌ ವಿರುದ್ಧ ಹೇಳಿಕೆ – ಎಎಪಿ ಮಾಜಿ ನಾಯಕನಿಗೆ ʼವೈʼ ಶ್ರೇಣಿ ಭದ್ರತೆ

    ಕೇಜ್ರಿವಾಲ್‌ ವಿರುದ್ಧ ಹೇಳಿಕೆ – ಎಎಪಿ ಮಾಜಿ ನಾಯಕನಿಗೆ ʼವೈʼ ಶ್ರೇಣಿ ಭದ್ರತೆ

    ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಪ್ರತ್ಯೇಕತಾವಾದಿ ಎಂದು ಹೇಳಿಕೆ ನೀಡಿದ್ದ ಆಮ್‌ ಆದ್ಮಿ ಪಕ್ಷದ (ಎಎಪಿ) ಕುಮಾರ್‌ ವಿಶ್ವಾಸ್‌ ಅವರಿಗೆ ʼವೈʼ ಶ್ರೇಣಿ ಭದ್ರತೆ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

    ಎಎಪಿ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರ ವಿರುದ್ಧ ಆರೋಪ ಮಾಡಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ವಿಶ್ವಾಸ್‌ ಅವರಿಗೆ ಬೆದರಿಕೆ ಇದೆ ಎಂದು ಭದ್ರತೆ ಮತ್ತು ಗುಪ್ತಚರ ಮಾಹಿತಿ ಆಧರಿಸಿ ಭದ್ರತೆ ಒದಗಿಸಲು ಮುಂದಾಗಿದೆ. ಇದನ್ನೂ ಓದಿ: ಕೇಜ್ರಿವಾಲ್‍ಗೆ ಖಾಲಿಸ್ತಾನ್ ಉಗ್ರರ ನಂಟು – ತನಿಖೆ ನಡೆಸುತ್ತೇವೆ ಎಂದ ಅಮಿತ್ ಶಾ

    ಪರಿಶೀಲನೆಯ ನಂತರ, ಕೇಂದ್ರ ಮೀಸಲು ಪೊಲೀಸ್‌ ಪಡೆ (ಸಿಆರ್‌ಪಿಎಫ್‌) ಮೂಲಕ ವಿಶ್ವಾಸ್‌ ಅವರಿಗೆ ʼವೈʼ ಶ್ರೇಣಿಯ ಭದ್ರತೆ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

    ಪಂಜಾಬ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಕೇಜ್ರಿವಾಲ್‌ ಅವರು ಪ್ರತ್ಯೇಕತಾವಾದಿಗಳನ್ನು ಬೆಂಬಲಿಸುತ್ತಾರೆ ಎಂದು ವಿಶ್ವಾಸ್‌ ಆರೋಪಿಸಿದ್ದರು. ಆದರೆ ಈ ಆರೋಪಗಳನ್ನು ಕೇಜ್ರಿವಾಲ್‌ ತಳ್ಳಿಹಾಕಿದ್ದಾರೆ. ಇದನ್ನೂ ಓದಿ: ಪಂಜಾಬ್‍ನನ್ನು ಕಾಂಗ್ರೆಸ್ ಲೂಟಿ ಮಾಡುತ್ತಿದೆ: ಅರವಿಂದ್ ಕೇಜ್ರಿವಾಲ್

    ಪಂಜಾಬ್‌ ವಿಧಾನಸಭಾ ಚುನಾವಣೆಗೆ ಫೆ.20 ರಂದು ಮತದಾನ ನಡೆಯಲಿದೆ. ಮಾ.10 ರಂದು ಫಲಿತಾಂಶ ಹೊರ ಬೀಳಲಿದೆ.

  • ಆಪ್‍ನಲ್ಲಿ ಬಿರುಕು: ಕೇಜ್ರಿವಾಲ್ ವಿರುದ್ಧ ಬಂಡಾಯದ ಕಹಳೆ

    ಆಪ್‍ನಲ್ಲಿ ಬಿರುಕು: ಕೇಜ್ರಿವಾಲ್ ವಿರುದ್ಧ ಬಂಡಾಯದ ಕಹಳೆ

    ನವದೆಹಲಿ: ದೇಶದ ರಾಜಕೀಯ ಪುಟದಲ್ಲಿ ಯಾರೂ ನಿರೀಕ್ಷೆ ಮಾಡದಂತೆ ಮೇಲೆದ್ದು ಬಂದ ಆಮ್ ಆದ್ಮಿ ಪಾರ್ಟಿಯಲ್ಲಿ ದೊಡ್ಡ ಬಿರುಕು ಕಾಣಿಸಿದೆ. ದೆಹಲಿ  ಪಾಲಿಕೆ ಚುನಾವಣೆಯಲ್ಲಿ ಹೀನಾಯ ಸೋಲಿನ ಬಳಿಕ ಕೇಜ್ರಿವಾಲ್ ಅವರನ್ನು ಮುಖ್ಯಮಂತ್ರಿ ಕುರ್ಚಿಯಿಂದ ಕೆಳಗೆ ಇಳಿಸಲು  ವಿರೋಧ ಬಣ ಸಜ್ಜಾಗಿದೆ.

    ಆದರೆ ಕುರ್ಚಿಯಿಂದ ಕೆಳಗೆ ಇಳಿಯೋಕೆ ಕೇಜ್ರಿವಾಲ್ ಅಷ್ಟು ಸುಲಭವಾಗಿ ಒಪ್ಪಿಬಿಡ್ತರಾ..? ಒಂದ್ವೇಳೆ ಕೇಜ್ರಿವಾಲ್ ಅವರನ್ನು ಬಲವಂತವಾಗಿ ಕೆಳಗೆ ಇಳಿಸಿದ್ರೆ ಮುಂದಿನ ಸಿಎಂ ಯಾರಾಗ್ತಾರೆ ಅನ್ನೋ ಪ್ರಶ್ನೆ ಕಾಡ್ತಿದೆ.

    ಸಂಜೆ ದಿಢೀರ್ ಸುದ್ದಿಗೋಷ್ಠಿ ನಡೆಸಿದ ಆಪ್ ಮುಖಂಡ ಕುಮಾರ್ ವಿಶ್ವಾಸ್, ಆಮ್ ಆದ್ಮಿ ಭ್ರಷ್ಟಚಾರದ ಹಾದಿ ಹಿಡಿದಿದೆ ಅಂತಾ ಗಂಭೀರ ಆರೋಪ ಮಾಡಿದ್ರು. ನನಗೆ ಆಮ್ ಆದ್ಮಿ ಮೇಲೆ ವಿಶ್ವಾಸವಿಲ್ಲ ಅಂತಾ ನೇರವಾಗಿ ಕೇಜ್ರಿವಾಲ್ ಮೇಲೆ ಆರೋಪ ಮಾಡಿದ್ರು. ಬೇರೆ ಪಕ್ಷದಿಂದ ಬಂದವರಿಗೆ ಮಣೆ ಹಾಕ್ತಾರೆ. ಮೂಲ ಆಮ್ ಆದ್ಮಿಗಳನ್ನ ಕಡೆಗಣಿಸ್ತಿದ್ದಾರೆ ಅಂತಾ ಆರೋಪ ಮಾಡಿದ್ರು.

    ಇದೇ ವೇಳೆ ನಾನು ಆಪ್ ನಲ್ಲಿ ಮುಂದುವರಿಯಬೇಕೇ? ಬೇಡವೇ ಎನ್ನುವುದನ್ನು ಬುಧವಾರ ತಿಳಿಸುತ್ತೇನೆ. ಪಕ್ಷಕ್ಕೆ ರಾಜೀನಾಮೆ ನೀಡಿದರೂ ಬೇರೆ ಯಾವುದೇ ಪಕ್ಷಕ್ಕೆ ಸೇರ್ಪಡೆಯಾಗಲ್ಲ ಎಂದು ಅವರು ತಿಳಿಸಿದರು.

    ಮೂಲಗಳ ಪ್ರಕಾರ ಕೇಜ್ರಿವಾಲ್ ಅವರನ್ನು ಸಿಎಂ ಕುರ್ಚಿಯಿಂದ ಕೆಳಗೆ ಇಳಿಸ್ತಾರೆ ಎನ್ನಲಾಗಿದೆ. ಈ ನಡುವೆ ದಿಲ್ಲಿ ಪಾಲಿಕೆ ಚುನಾವಣೆ ಗೆಲುವೇ ನಮಗೆ ಮುಂದಿನ ಚುನಾವಣೆಗೆ ಮೆಟ್ಟಿಲು ಅಂತಾ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಹೇಳಿದ್ದಾರೆ.