Tag: kumaradhara river

  • ನಾಳೆ ದಕ್ಷಿಣ ಕನ್ನಡದ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ – ಎಲ್ಲೆಲ್ಲಿ ಏನಾಗಿದೆ?

    ನಾಳೆ ದಕ್ಷಿಣ ಕನ್ನಡದ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ – ಎಲ್ಲೆಲ್ಲಿ ಏನಾಗಿದೆ?

    ಮಂಗಳೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಾದ್ಯಂತ ನಿರಂತರ ಮಳೆ (Rain) ಸುರಿಯುತ್ತಿರುವ ಹಿನ್ನೆಲೆ ನಾಳೆ(ಜೂ.28) ಜಿಲ್ಲೆಯ ಎಲ್ಲಾ ಪ್ರಾಥಮಿಕ-ಪ್ರೌಢಶಾಲೆಗಳಿಗೆ (School) ರಜೆ (Holiday) ಘೋಷಣೆ ಮಾಡಲಾಗಿದೆ.

    ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಘೋಷಣೆ ಮಾಡಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ನಾಳೆಯು ದಕ್ಷಿಣಕನ್ನಡ ಜಿಲ್ಲೆಗೆ ಹವಾಮಾನ ಇಲಾಖೆ (Weather Report) ರೆಡ್ ಅಲರ್ಟ್ (Red Alert) ಘೋಷಣೆ ಮಾಡಿದೆ.

     

    ಎಲ್ಲೆಲ್ಲಿ ಏನಾಗಿದೆ?
    ಮಂಗಳೂರಿನಲ್ಲಿ,ವಿದ್ಯುತ್ ತಂತಿ ತಲುಗಿ ಇಬ್ಬರು ಸಾವನ್ನಪ್ಪಿದ್ದು, ಮನೆ ಮೇಲೆ ಮಣ್ಣಿನ ದಿಬ್ಬ ಕುಸಿದು ಮಣ್ಣಿನಡಿ ಸಿಲುಕಿ ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ. ಮಳೆಯಿಂದ ಜಿಲ್ಲೆಯ ನಾನಾ ಕಡೆಗಳಲ್ಲಿ ಅವಾಂತರ ಉಂಟಾಗಿದ್ದು,ಸೇತುವೆಯಿಂದ ಕಾರು‌ ನದಿಗೆ ಬಿದ್ದು ಇಬ್ಬರು ಪ್ರಾಣಾಪಾಯದಿಂದ‌ ಪಾರಾಗಿದ್ದಾರೆ.ಇನ್ನೊಂದೆಡೆ ಕಾಸರಗೋಡಿನ ಮಧೂರು ದೇವಸ್ಥಾನ ಜಲಾವೃತಗೊಂಡಿದೆ. ಇದನ್ನೂ ಓದಿ: ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಕೇಸ್ – ಆರೋಪಿ ಅರುಣ್ ಚೌಗಲೆ ಜಾಮೀನು ಅರ್ಜಿ ವಜಾ

    ಮಂಗಳೂರಿನ, ರೊಸಾರಿಯೊ ಶಾಲೆಯ ಬಳಿ ವಿದ್ಯುತ್ ತಂತಿ ಸ್ಪರ್ಶಗೊಂಡು ಪುತ್ತೂರು ಹಾಗೂ ಸಕಲೇಶಪುರ ಮೂಲದ ಇಬ್ಬರು ರಿಕ್ಷಾ ಚಾಲಕರು ಮೃತಪಟ್ಟಿದ್ದಾರೆ. ಬೆಳಗ್ಗೆ ಜಾವ 4:30ರ ಸುಮಾರಿಗೆ ರಿಕ್ಷಾ ಸ್ವಚ್ಚಗೊಳಿಸಲೆಂದು ಹೊರಬಂದಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ದುರ್ಘಟನೆ ಸಂಭವಿಸಿದೆ.

    ಪುತ್ತೂರಿನ ಜೈನರ ಗುರಿಯಲ್ಲಿ ಮನೆ ಮೇಲೆ ಧರೆ ಕುಸಿದು ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ. ಪುತ್ತೂರಿನ ಸಿಂಗಾಣಿಯಲ್ಲಿ‌ ಗುಡ್ಡ ಕುಸಿದು ‌ಹಲವು ಮನೆಗಳು ಅಪಾಯದಲ್ಲಿದೆ. ಚೆಲ್ಯಡ್ಕ ಸೇತುವೆ ಮುಳುಗಡೆಯಾಗಿ ಸಂಪರ್ಕ ಕಡಿತಗೊಂಡಿದೆ.

     

    ಕುಮಾರಧಾರ ಸ್ನಾನಘಟ್ಟ ಮುಳುಗಡೆ: ಪಶ್ಚಿಮಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ. ಪಶ್ಚಿಮ ಘಟ್ಟ ಪ್ರದೇಶ, ಕುಮಾರಪರ್ವತ ಸೇರಿದಂತೆ ಸುಬ್ರಹ್ಮಣ್ಯ ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಕುಮಾರಧಾರ ಕಿಂಡಿ ಅಣೆಕಟ್ಟು ಸಂಪೂರ್ಣ ಮುಳುಗಡೆಯಾಗಿದೆ. ಕುಮಾರಧಾರ ನದಿಯ ಉಪನದಿ ದರ್ಪಣ ತೀರ್ಥ ಕೂಡಾ ತುಂಬಿ ಹರಿಯುತ್ತಿದೆ. ಹೀಗಿದ್ದರೂ ನದಿ ದಡದಲ್ಲೇ ಭಕ್ತಾಧಿಗಳು ತೀರ್ಥ ಸ್ನಾನ ಮಾಡುತ್ತಿದ್ದು, ಕುಮಾರಧಾರ ನದಿಗೆ ಇಳಿಯದಂತೆ ಭಕ್ತಾಧಿಗಳಿಗೆ ಸೂಚನೆ ನೀಡಲಾಗಿದೆ. ಸದ್ಯ ಕುಮಾರಧಾರ ನದಿ ತೀರದಲ್ಲಿ ದೇವಳದ ಭದ್ರತಾ ಸಿಬ್ಬಂದಿ, ಹೋಮ್ ಗಾರ್ಡ್ಸ್  ನಿಯೋಜನೆ ಮಾಡಲಾಗಿದೆ.

     

    ಮಧೂರು ದೇವಸ್ಥಾನ ಜಲಾವೃತ: ಮಂಗಳೂರಿನ ಗಡಿ ಭಾಗ ಕಾಸರಗೋಡಿನಲ್ಲೂ ಮಳೆ ಅಬ್ಬರಿಸುತ್ತಿದ್ದು, ಮಧೂರು ದೇವಸ್ಥಾನ ಜಲಾವೃತಗೊಂಡಿದೆ. ಮಧುವಾಹಿನಿ‌ ನದಿ‌ ತುಂಬಿ‌ ಹರಿಯುತ್ತಿದ್ದು ದೇವಸ್ಥಾನದ ಒಳಭಾಗಕ್ಕೂ ನದಿ ನೀರು ನುಗ್ಗಿ, ದೇವಸ್ಥಾನ ದ್ವೀಪದಂತಾಗಿದೆ. ಪಳ್ಳಂಜಿ -ಪಾಂಡ್ಯ ಎಂಬಲ್ಲಿ ತಡೆಬೇಲಿಯಿಲ್ಲದ ಸೇತುವೆಯಿಂದ ಕಾರೊಂದು ನದಿಗೆ ಬಿದ್ದಿದೆ.ಸವಾರರು ಇಬ್ಬರಿಬ್ಬರನ್ನು ಅಗ್ನಿಶಾಮಕ ದಳದವರು ರಕ್ಷಣೆ ಮಾಡಿದ್ದು ಕಾರು ನೀರು ಪಾಲಾಗಿದೆ.

  • ಬಲೂನ್ ಕಟ್ಟಿಕೊಂಡು ಕುಮಾರಧಾರ ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ

    ಬಲೂನ್ ಕಟ್ಟಿಕೊಂಡು ಕುಮಾರಧಾರ ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ

    ಮಂಗಳೂರು: ಬಲೂನ್ ಕಟ್ಟಿಕೊಂಡು ಕುಮಾರಧಾರ ನದಿಗೆ (Kumaradhara River) ಹಾರಿ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡದ (Dakshina Kannada) ಕುದ್ಮಾರು ಗ್ರಾಮದ ಶಾಂತಿಮೊಗರು ಎಂಬಲ್ಲಿ ನಡೆದಿದೆ.

    ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ನಿರ್ದೇಶಕ ಹಾಗೂ ಮಾಜಿ ಅಧ್ಯಕ್ಷ ಚಂದ್ರಶೇಖರ ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದು ಬಂದಿದೆ. ಶಾಂತಿಮೊಗರು ಸೇತುವೆಯ (Shanthimogaru Bridge) ಮೇಲೆ ಕಾರು ನಿಲ್ಲಿಸಿ ಬಳಿಕ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಕೃಷಿ, ಜಲ ಸಂಪನ್ಮೂಲ ಅಭಿವೃದ್ಧಿಯಲ್ಲಿ ದೇಶದಲ್ಲೇ ರಾಯಚೂರಿಗೆ ಫಸ್ಟ್ ರ‍್ಯಾಂಕ್

    ತೇಲುತ್ತಿದ್ದ ಬಲೂನ್ ಗುರುತಿನ ಆಧಾರದಲ್ಲಿ ಮೃತದೇಹವನ್ನು ಸ್ಥಳೀಯರು ಪತ್ತೆ ಮಾಡಿದ್ದಾರೆ. ಬಳಿಕ ಸ್ಥಳೀಯರು ಮೃತ ದೇಹವನ್ನು ಮೇಲಿತ್ತಿದ್ದಾರೆ. ಮೃತದೇಹ ಬೇಗ ಸಿಗಲಿ ಎಂಬ ಉದ್ದೇಶದಿಂದ ಬಲೂನ್ ಕಟ್ಟಿ ಹಾರಿರುವ ಶಂಕೆ ವ್ಯಕ್ತವಾಗಿದೆ.

    ಅವರ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಪ್ರಕರಣ ಸಂಬಂಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಧಾರವಾಡದಲ್ಲಿ ಡಬಲ್ ಮರ್ಡರ್ – ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

  • ಭಾರೀ ಮಳೆ – ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಭಾಗಶಃ ಮುಳುಗಡೆ

    ಭಾರೀ ಮಳೆ – ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಭಾಗಶಃ ಮುಳುಗಡೆ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿರುವ ಶ್ರೀ ಕ್ಷೇತ್ರ ಸುಬ್ರಹ್ಮಣ್ಯದಲ್ಲಿರುವ ಕುಮಾರಧಾರ ಸ್ನಾನಘಟ್ಟ ಭಾಗಶಃ ಮುಳುಗಡೆಯಾಗಿದೆ.

    ಪಶ್ಚಿಮಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಘಟ್ಟ ಪ್ರದೇಶದಿಂದ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಈ ಹಿನ್ನೆಲೆ ಕುಮಾರಧಾರ ನದಿಯ ನೀರಿನ ಹರಿವಿನಲ್ಲಿ ಹೆಚ್ಚಳವಾಗಿದೆ. ಇದನ್ನೂ ಓದಿ: ಭಾರೀ ಮಳೆಗೆ ಕಳಸ, ಹೊರನಾಡು ಸಂಪರ್ಕ ಕಡಿತ – ಬೆಳ್ತಂಗಡಿ ಶಾಲಾ, ಕಾಲೇಜುಗಳಿಗೆ ರಜೆ

    ಸ್ನಾನಘಟ್ಟ ಪ್ರದೇಶ ನೀರಿನಿಂದ ಆವೃತವಾಗಿದ್ದು, ಇದೀಗ ಮುನ್ನೆಚ್ಚರಿಕಾ ಕ್ರಮವಾಗಿ ಭಕ್ತಾದಿಗಳಿಗೆ ಸ್ನಾನಘಟ್ಟದಲ್ಲಿ ನೀರಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ವಾಡಿಕೆಗಿಂತ ಶೇ.20 ರಷ್ಟು ಮಳೆ ಕಡಿಮೆ

    Live Tv
    [brid partner=56869869 player=32851 video=960834 autoplay=true]

  • ಸುಬ್ರಹ್ಮಣ್ಯದ ಕುಮಾರಧಾರ ನದಿಯಲ್ಲಿ ನಿಂತಿಲ್ಲ ಅಕ್ರಮ ಮರಳು ದಂಧೆ

    ಸುಬ್ರಹ್ಮಣ್ಯದ ಕುಮಾರಧಾರ ನದಿಯಲ್ಲಿ ನಿಂತಿಲ್ಲ ಅಕ್ರಮ ಮರಳು ದಂಧೆ

    ಮಂಗಳೂರು: ರಾಜ್ಯದ ಪ್ರಸಿದ್ಧ ಯಾತ್ರಾ ಸ್ಥಳವಾಗಿರುವ ಸುಬ್ರಹ್ಮಣ್ಯದ ತುಂಬಾ ಅಕ್ರಮ ಮರಳು ದಂಧೆಯದ್ದೇ ಕಾರುಬಾರು. ದೇಗುಲಕ್ಕೆ ಆಗಮಿಸುವ ಭಕ್ತರು ತೀರ್ಥ ಸ್ನಾನಗೈಯುವ ಪರಮ ಪವಿತ್ರ ಕುಮಾರಧಾರ ನದಿಯ ಎಲ್ಲೆಂದರಲ್ಲಿ ಮರಳಿಗಾಗಿ ಅಕ್ರಮ ದಂಧೆಕೋರರು ಹಿಟಾಚಿ, ಡ್ರೆಜ್ಜಿಂಗ್ ಮೆಷಿನ್ ಬಳಸಿ ನದಿಯೊಡಲು ಬರಿದು ಮಾಡುತ್ತಿದ್ದು ಅಕ್ರಮ ಮಟ್ಟ ಹಾಕಬೇಕಾದ ಸುಬ್ರಹ್ಮಣ್ಯ ಪೊಲೀಸರು, ಗಣಿ ಇಲಾಖೆ ಅಧಿಕಾರಿಗಳು ಎಲ್ಲಾ ಗೊತ್ತಿದ್ದೂ ಮೌನವಹಿಸಿರುವ ಆರೋಪ ಕೇಳಿಬಂದಿದೆ.

    ವಿವಿಧ ಇಲಾಖೆಗಳಿಗೆ ತಿಂಗಳ ಮಾಮೂಲಿಯಿಂದಲೇ ನಡೆಯುತ್ತಿರುವ ದಂಧೆಗೆ ಬ್ರೇಕ್ ಹಾಕೋರು ಯಾರು ಅನ್ನೋದು ಸುಬ್ರಹ್ಮಣ್ಯ ಕ್ಷೇತ್ರದ ಭಕ್ತರ ಪ್ರಶ್ನೆಯಾಗಿದೆ. ಪಂಜ ಏನೆಕಲ್ಲು ಮಾರ್ಗವಾಗಿ ಸಾಗುವಾಗ ಕುಮಾರಧಾರ ಸೇತುವೆಗಿಂತ ಮುಂದೆ ಪರ್ವತ ಮುಖಿ ಬಳಿಯ ಸರಕಾರಿ ಆಸ್ಪತ್ರೆಯ ಮಾರು ದೂರದಲ್ಲೇ ಅಕ್ರಮ ಮರಳುಗಾರಿಕೆ ನಿತ್ಯ ನಿರಂತರ ನಡೆಯುತ್ತಿದೆ. ಸಂಜೆ 6 ಗಂಟೆಯಿಂದ ಶುರುವಾಗುವ ಮರಳು ಸಾಗಾಟ ಮುಂಜಾನೆ 6 ಗಂಟೆಯವರೆಗೂ ನಡೆಯುತ್ತಿದೆ. ಇಲ್ಲಿಂದ ಪ್ರತಿನಿತ್ಯ ನೂರಾರು ಲೋಡ್‍ಗಳಷ್ಟು ಮರಳು ಸಕಲೇಶಪುರ ಮಾರ್ಗವಾಗಿ ಹಾಸನ, ಬೆಂಗಳೂರು ಕಡೆಗೂ ಸಾಗಾಟವಾಗುತ್ತಿದೆ. ಇಲ್ಲಿ ಬಟಾಬಯಲಾಗಿ ಮರಳು ಹೊತ್ತ ಲಾರಿಗಳು ಸಾಗುತ್ತಿದ್ದರೂ ಪೊಲೀಸ್ ಇಲಾಖೆ, ಗಣಿ ಇಲಾಖೆ ಅಧಿಕಾರಿಗಳು ದಂಧೆ ನಿಲ್ಲಿಸಲು ಮುಂದಾಗದೇ ಇರುವುದು ಜನರ ಸಂದೇಹಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಮಾರ್ಚ್‍ನಲ್ಲಿ GST ದಾಖಲೆ ಸಂಗ್ರಹ – ಯಾವ ರಾಜ್ಯದಲ್ಲಿ ಎಷ್ಟು ಸಂಗ್ರಹ?

    ಇಲ್ಲಿ ಮಾತ್ರವಲ್ಲದೆ ಸುಬ್ರಹ್ಮಣ್ಯ ಸುತ್ತಮುತ್ತ ಹತ್ತಾರು ಕಡೆಗಳಲ್ಲಿ ನದಿಯಿಂದ ಮರಳು ತೆಗೆಯಲಾಗುತ್ತಿದೆ. ಕುಲ್ಕುಂದ ಸಮೀಪದ ಮೈಸೂರು ಕೆಫೆ ಲಾಡ್ಜ್ ಪಕ್ಕದಲ್ಲಿ ಹಾದುಹೋಗುವ ರಸ್ತೆಯಲ್ಲಿ ಮರಳು ಲಾರಿಗಳ ಆರ್ಭಟ ಮಿತಿಮೀರಿದ್ದು ನದಿಯಲ್ಲಿ ಸಂಜೆಯಾಗುತ್ತಿದ್ದಂತೆ ಮರಳು ಲೋಡ್ ಮಾಡಲಾಗುತ್ತಿದೆ. ಲಾರಿಗಳ ಬೇಕಾಬಿಟ್ಟಿ ಓಡಾಟದಿಂದ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಸಾರ್ವಜನಿಕರ ವಾಹನ ಓಡಾಟಕ್ಕೆ ಸಂಚಕಾರ ಉಂಟಾಗಿದೆ. ಸ್ಥಳೀಯರು ಅನೇಕ ಬಾರಿ ಪೊಲೀಸ್ ಇಲಾಖೆ, ಗ್ರಾಮ ಪಂಚಾಯತ್‍ಗೆ ದೂರು ನೀಡಿದ್ದರೂ ಯಾವುದೇ ರೀತಿಯಲ್ಲಿ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ವ್ಯಕ್ತವಾಗಿದೆ. ಇದನ್ನೂ ಓದಿ: ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದ ಎಂದು ವಿದ್ಯಾರ್ಥಿಯ ಕೈ ಕಚ್ಚಿದ ಉಪನ್ಯಾಸಕ

    ಜಿಲ್ಲೆಯಲ್ಲಿ ಕಾನೂನು ರೀತಿಯಲ್ಲಿ ಸರ್ಕಾರಕ್ಕೆ ರಾಜಾಧನ ಪಾವತಿಸಿ ಮರಳುಗಾರಿಕೆ ನಡೆಸುತ್ತಿರುವವರು ಅಕ್ರಮ ದಂಧೆಕೋರರ ಹಾವಳಿಯಿಂದ ಕಂಗಲಾಗಿದ್ದಾರೆ. ಪರ್ಮಿಟ್, ಟ್ಯಾಕ್ಸ್ ಎಲ್ಲಾ ಕಟ್ಟಿಯೂ ಕೂಡಾ ಇಲಾಖೆ ಅಕ್ರಮ ವ್ಯವಹಾರ ನಡೆಸುವವರ ಪರವಾಗಿ ನಿಂತಿದೆ ಎಂದು ಆರೋಪಿಸುತ್ತಿದ್ದಾರೆ. ಮಾರ್ಚ್ ತಿಂಗಳ ಅಂತ್ಯಕ್ಕೆ ವಾರ್ಷಿಕ ಲೆಕ್ಕದ ಕಾರಣಕ್ಕೆ ಮರಳುಗಾರಿಕೆ ಪರ್ಮಿಟ್ ಮೂರು ದಿನಗಳ ಕಾಲ ಇಲಾಖೆ ಬ್ಲಾಕ್ ಮಾಡಿದ್ದರೂ ಇಲ್ಲಿ ಮಾತ್ರ ಯಥಾಪ್ರಕಾರ ಮರಳು ಸಾಗಾಟವಾಗಿದೆ. ಉಪ್ಪಿನಂಗಡಿ, ಕಡಬ, ಬೆಳ್ತಂಗಡಿ, ಸುಬ್ರಹ್ಮಣ್ಯ, ಸುಳ್ಯ ಭಾಗದಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ಕಂಡು ಜನರು ಪ್ರಶ್ನೆ ಮಾಡುವಷ್ಟರ ಮಟ್ಟಿಗೆ ರೋಸಿಹೋಗಿದ್ದು ಜಿಲ್ಲಾಡಳಿತ, ಪೊಲೀಸ್ ಅಧಿಕಾರಿಗಳು ಈ ಕೂಡಲೇ ದಂಧೆಯನ್ನು ಸಂಪೂರ್ಣ ಮಟ್ಟ ಹಾಕುವ ಮೂಲಕ ಜನರ ವಿಶ್ವಾಸವನ್ನು ಉಳಿಸಬೇಕಾಗಿದೆ.

  • ಕರಾವಳಿಯಲ್ಲಿ ಮುಂದುವರಿದ ಮಳೆಯ ಆರ್ಭಟ- ಕುಕ್ಕೆ ಸುಬ್ರಹ್ಮಣ್ಯದ ಸ್ನಾನ ಘಟ್ಟ ಮುಳುಗಡೆ

    ಕರಾವಳಿಯಲ್ಲಿ ಮುಂದುವರಿದ ಮಳೆಯ ಆರ್ಭಟ- ಕುಕ್ಕೆ ಸುಬ್ರಹ್ಮಣ್ಯದ ಸ್ನಾನ ಘಟ್ಟ ಮುಳುಗಡೆ

    ಮಂಗಳೂರು: ಪಶ್ಚಿಮ ಘಟ್ಟಗಳು ಸೇರಿದಂತೆ ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಕುಕ್ಕೆ ಸುಬ್ರಮಣ್ಯದಲ್ಲಿರುವ ಕುಮಾರಧಾರ ನದಿ ತುಂಬಿ ಹರಿಯುತ್ತಿದೆ.

    ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ಪರಿಸರದಲ್ಲೂ ರಾತ್ರಿಯಿಂದ ನಿರಂತರ ಮಳೆಯಾಗುತ್ತಿದ್ದು, ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ. ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ಕುಮಾರಧಾರ ನದಿಯ ಹೊಸಮಠ ಹಾಗೂ ನೇತ್ರಾವತಿ ನದಿಯಲ್ಲೂ ನೀರಿನ ಮಟ್ಟ ಏರಿಕೆಯಾಗಿ ಹರಿಯುತ್ತಿದೆ. ಇದೇ ರೀತಿ ಮಳೆ ಮುಂದುವರಿದರೆ ತಗ್ಗು ಪ್ರದೇಶದ ಹಲವಾರು ಸೇತುವೆಗಳು ಮುಳುಗಡೆಯಾಗಿ ರಸ್ತೆ ಸಂಪರ್ಕ ಕಡಿತಗೊಳ್ಳುವ ಸಾಧ್ಯತೆ ಇದೆ. ಇದನ್ನೂ ಓದಿ: ಕೊಡಗು ಜಿಲ್ಲೆಯಲ್ಲಿ ಮಳೆ ಅರ್ಭಟ- ಜನರಲ್ಲಿ ಭೂಕುಸಿತದ ಆತಂಕ

    ಈಗಾಗಲೇ ನದಿ ತೀರದ ಬಹುತೇಕ ಎಲ್ಲಾ ಕೃಷಿ ಭೂಮಿಗಳಿಗೂ ನೀರು ನುಗ್ಗಿ ಮುಳುಗುತ್ತಿವೆ. ಇನ್ನು ಬಂಟ್ವಾಳ ತಾಲೂಕಲ್ಲಿ ನೇತ್ರಾವತಿ ತುಂಬಿ ಹರಿಯುತ್ತಿದ್ದು, ಜಿಲ್ಲೆಯ ಹಲವೆಡೆ ಭಾರೀ ಮಳೆಯಾಗುತ್ತಿದೆ. ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇನ್ನೆರಡು ದಿನ ಮಳೆ ಮುಂದುವೆರೆಯುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಇದನ್ನೂ ಓದಿ: KRS ಡ್ಯಾಂಗೆ ಒಂದೇ ದಿನ 20,488 ಕ್ಯೂಸೆಕ್ ಒಳಹರಿವು

  • ಮಳೆಯ ಅಬ್ಬರಕ್ಕೆ ತುಂಬಿದ ಕುಮಾರಧಾರಾ- ಮತ್ತೆ ಹೊಸ್ಮಠ ಸೇತುವೆ ಮುಳುಗಡೆ

    ಮಳೆಯ ಅಬ್ಬರಕ್ಕೆ ತುಂಬಿದ ಕುಮಾರಧಾರಾ- ಮತ್ತೆ ಹೊಸ್ಮಠ ಸೇತುವೆ ಮುಳುಗಡೆ

    ಮಂಗಳೂರು: ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಕುಮಾರಧಾರಾ ನದಿ ತುಂಬಿದ್ದು ನೀರಿನ ಮಟ್ಟ ಹೆಚ್ಚಾಗಿದೆ.

    ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಕುಮಾರಧಾರಾ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದ್ದು, ಭಕ್ತರಿಗೆ ನದಿಗಿಳಿಯದಂತೆ ಸೂಚನೆ ನೀಡಲಾಗಿದೆ. ಇದರಿಂದಾಗಿ ಕ್ಷೇತ್ರಕ್ಕೆ ಬಂದ ಭಕ್ತರು ಸ್ನಾನಘಟ್ಟಕ್ಕೆ ಹೋಗಲಾಗದೆ ಮೇಲ್ಭಾಗದ ನೀರಿನಲ್ಲೇ ಸ್ನಾನ ಮಾಡಬೇಕಾಗಿದೆ. ಭಕ್ತಾದಿಗಳು ಸ್ನಾನಘಟ್ಟದ ಹೊರಗೆ ಬಂದಂತಹ ನೀರಿನಲ್ಲೇ ತೀರ್ಥಸ್ನಾನವನ್ನು ಮಾಡುತ್ತಿದ್ದಾರೆ.

    ಉಪ್ಪಿನಂಗಡಿ -ಸುಬ್ರಹ್ಮಣ್ಯ ಸಂಪರ್ಕ ರಸ್ತೆಯ ಕಡಬ ಬಳಿಯ ಹೊಸ್ಮಠ ಸೇತುವೆಯೂ ನೀರಿನಿಂದ ಮುಳುಗಡೆಯಾಗಿದ್ದು, ಈ ರಸ್ತೆಯ ಮೂಲಕ ಸಂಚರಿಸುವ ಪ್ರಯಾಣಿಕರಿಗೆ ತೊಂದರೆಯಾಗಿದೆ.

    ದಕ್ಷಿಣಕನ್ನಡ ಜಿಲ್ಲೆಯ ಪ್ರಮುಖ ನದಿಗಳಾದ ನೇತ್ರಾವತಿ ಹಾಗೂ ಕುಮಾರಧಾರದಲ್ಲಿ ನೀರಿನ ಮಟ್ಟ ಹೆಚ್ಚಿದ್ದು, ಈ ಮಳೆಗಾಲದಲ್ಲಿ ಮೊದಲ ಬಾರಿಗೆ ಮೈದುಂಬಿಕೊಂಡು ಹರಿಯುತ್ತಿದೆ.

    ಬ್ರಿಟಿಷರ ಕಾಲದಲ್ಲಿ ನಿರ್ಮಾಣಗೊಂಡಿದ್ದ ಹೊಸ್ಮಠ ಸೇತುವೆ ಪ್ರತೀ ಮಳೆಗಾಲದಲ್ಲಿ ಹಲವು ಬಾರಿ ಮುಳುಗಡೆಯಾಗುತ್ತಿದೆ. ಇದರಿಂದ ರಸ್ತೆ-ಸಂಚಾರ ಹಾಗೂ ಶಾಲಾ ಕಾಲೇಜುಗಳಿಗೆ ಅಡಚಣೆಯಾಗುತ್ತಿದೆ. ಸದ್ಯ ಇದರ ಪಕ್ಕದಲ್ಲೇ ನೂತನ ಸೇತುವೆ ನಿರ್ಮಾಣವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹಳೆಯ ಸೇತುವೆ ಕಡೆಯಿಂದ ನೀರು ಹರಿಯಲು ಬಿಡಲಾಗುತ್ತಿದ್ದು, ಜಿಲ್ಲೆಯಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರೀ ಪ್ರಮಾಣದ ನೀರು ಹರಿದು ಇತ್ತೀಚೆಗಷ್ಟೇ ಹಳೆ ಸೇತುವೆ ಕುಸಿದಿತ್ತು.

    ಭಕ್ತರಿಗೆ ಸೂಚನೆ: ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕುಮಾರಧಾರಾ ನದಿ ತುಂಬಿದ್ದು, ನೀರಿನ ಮಟ್ಟ ಹೆಚ್ಚಾಗಿದೆ. ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಕುಮಾರಧಾರಾ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದ್ದು ಭಕ್ತರಿಗೆ ನದಿಗಿಳಿಯದಂತೆ ಸೂಚನೆ ನೀಡಲಾಗಿದೆ. ಇದರಿಂದಾಗಿ ಕ್ಷೇತ್ರಕ್ಕೆ ಬಂದ ಭಕ್ತರು ಸ್ನಾನಘಟ್ಟಕ್ಕೆ ಹೋಗಲಾಗದೆ ಮೇಲ್ಭಾಗದ ನೆರೆನೀರಿನಲ್ಲೇ ಸ್ನಾನ ಮಾಡಬೇಕಾಗಿದೆ. ಸ್ನಾನಘಟ್ಟದ ಹೊರಗೆ ಬಂದಂತಹ ನೀರಿನಲ್ಲೇ ಭಕ್ತಾಧಿಗಳು ತೀರ್ಥಸ್ನಾನ ಮಾಡುತ್ತಿದ್ದಾರೆ.

  • ಕುಮಾರಾಧಾರಾ ನದಿಯಲ್ಲಿ ಮುಳುಗಿ ಇಬ್ಬರು ಯುವಕರು ಸಾವು

    ಕುಮಾರಾಧಾರಾ ನದಿಯಲ್ಲಿ ಮುಳುಗಿ ಇಬ್ಬರು ಯುವಕರು ಸಾವು

    ಮಂಗಳೂರು: ಈಜಲು ಹೋಗಿ ನದಿಯಲ್ಲಿ ಮುಳುಗಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಡಬದ ಶಾಂತಿಮೊಗರುವಿನಲ್ಲಿ ನಡೆದಿದೆ.

    ಹರಿ, ಸತ್ಯ ಮೃತ ಯುವಕರು. ಕುಮಾರಾಧಾರಾ ನದಿಯಲ್ಲಿ ಸ್ನಾನಕ್ಕಿಳಿದಿದ್ದಾಗ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತದೇಹಕ್ಕಾಗಿ ಅಗ್ನಿಶಾಮಕದಳದಿಂದ ಶೋಧ ಕಾರ್ಯ ನಡೆಯುತ್ತಿದ್ದೆ.

    ಈ ಕುರಿತು ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

     

  • ಮಲಿನವಾಗ್ತಿದೆ ಮಲೆನಾಡಿನ ಕುಮಾರಧಾರಾ- ಪ್ರತಿನಿತ್ಯ ನದಿ ಸೇರ್ತಿದೆ ವಿಷಯುಕ್ತ ತ್ಯಾಜ್ಯ

    ಮಲಿನವಾಗ್ತಿದೆ ಮಲೆನಾಡಿನ ಕುಮಾರಧಾರಾ- ಪ್ರತಿನಿತ್ಯ ನದಿ ಸೇರ್ತಿದೆ ವಿಷಯುಕ್ತ ತ್ಯಾಜ್ಯ

    ಮಂಗಳೂರು: ಶ್ರೀ ಕುಕ್ಕೆಸುಬ್ರಹ್ಮಣ್ಯ ಸಕಲ ಪಾಪ ಪರಿಹಾರ ಮಾಡೋ ಪವಿತ್ರ ಕ್ಷೇತ್ರವಾಗಿ ಪ್ರಸಿದ್ಧಿ ಪಡೆದಿದೆ. ದೇಶದ ನಾನಾ ಮೂಲೆಗಳಿಂದ ಲಕ್ಷಾಂತರ ಭಕ್ತರು ಈ ದೇವಸ್ಥಾನಕ್ಕೆ ಭೇಟಿ ನೀಡ್ತಾರೆ. ಇಂತಹ ಪವಿತ್ರ ಕ್ಷೇತ್ರ ಈಗ ಮಲಿನ ಕ್ಷೇತ್ರ ಅಂತಲೂ ಕುಖ್ಯಾತಿ ಪಡೆಯುತ್ತಿದೆ.

    ದಕ್ಷಿಣ ಕನ್ನಡ ಜಿಲ್ಲೆಯ ಪವಿತ್ರ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹರಿಯುವ ಕುಮಾರಧಾರಾ ನದಿ ಸಂಪೂರ್ಣ ಮಲಿನವಾಗಿದೆ. ಇಲ್ಲಿನ ವ್ಯಾಪಾರಸ್ಥರು, ಹೋಟೆಲ್‍ನವರು ತ್ಯಾಜ್ಯಗಳನ್ನು ನೇರವಾಗಿ ನದಿಗೆ ಹಾಕುತ್ತಿರೋದ್ರಿಂದ ನೀರು ಕಲುಷಿತಗೊಂಡಿದೆ. ಕೆಲವೆಡೆ ಚರಂಡಿ ನೀರೂ ಕೂಡ ನದಿಗೆ ಸೇರ್ತಿದೆ. ಕ್ಷೇತ್ರಕ್ಕೆ ಬರುವ ಭಕ್ತರು ಹರಕೆ ಮುಡಿ ನೀಡ್ತಾರೆ. ಹೆಚ್ಚಿನವರು ಸರ್ಪಸಂಸ್ಕಾರದಂತಹ ಸೇವೆಗಳನ್ನು ಮಾಡಿ ಕುಮಾರಧಾರಾ ನದಿಯಲ್ಲಿ ತೀರ್ಥ ಸ್ನಾನ ಮಾಡುವುದು ವಾಡಿಕೆ. ಆದ್ರೆ ಇಂತಹ ಕಲುಷಿತ ನೀರಲ್ಲಿ ಪಾಪ ಪರಿಹಾರ ಆಗೋ ಬದಲು ರೋಗ ರುಜಿನಗಳು ಅಂಟಿಕೊಳ್ಳುವ ಭೀತಿ ಎದುರಾಗಿದೆ.

    ಸುಬ್ರಹ್ಮಣ್ಯ ಕ್ಷೇತ್ರದ ಅಭಿವೃದ್ಧಿಗೆ ರಾಜ್ಯ ಸರ್ಕಾರ 180 ಕೋಟಿ ರೂಪಾಯಿ ವೆಚ್ಚದ ಪ್ಲಾನ್ ಮಂಜೂರು ಮಾಡಿತ್ತು. ಅದರಂತೆ ವಸತಿಗೃಹ, ಬಸ್ ನಿಲ್ದಾಣ, ರಸ್ತೆ ಮೇಲ್ದರ್ಜೆಗೇರಿದ್ದರೂ ಚರಂಡಿ ವ್ಯವಸ್ಥೆ ಸರಿಯಾಗಿಲ್ಲ. ಇದರ ಮಧ್ಯೆ ಭಕ್ತರು ಕೂಡ ಸ್ನಾನ ಮಾಡಿ ಬಟ್ಟೆಗಳನ್ನು ನದಿಯಲ್ಲೇ ಹಾಕುತ್ತಿದ್ದು, ಇದನ್ನು ಸ್ವಚ್ಛ ಮಾಡುವ ವ್ಯವಸ್ಥೆ ಇಲ್ಲ.

    ಕುಕ್ಕೆ ಸುಬ್ರಹ್ಮಣ್ಯ ರಾಜ್ಯ ಸರ್ಕಾರಕ್ಕೆ ಅತಿ ಹೆಚ್ಚು ಆದಾಯ ತರುತ್ತಿರುವ ದೇವಸ್ಥಾನ. ಆದ್ರೆ ಪರಿಒಸ್ಥಿತಿ ಇದೇ ರೀತಿ ಮುಂದುವರಿದರೆ ಕ್ಷೇತ್ರದ ಹೆಸರು ಹಾಳಾಗಬಹುದು. ಆದ್ದರಿಂದ ಜಿಲ್ಲಾಡಳಿತ ಈ ಬಗ್ಗೆ ಗಮನ ಹರಿಸಬೇಕಾಗಿದೆ.