Tag: Kurnool

  • ಈರುಳ್ಳಿ ಮೂಟೆಯಲ್ಲಿ ಶ್ರೀಗಂಧ ತುಂಡುಗಳ ಕಳ್ಳಸಾಗಣೆ – 18 ಮೂಟೆಗಳಲ್ಲಿ 750 ಕೆಜಿ ಶ್ರೀಗಂಧ ವಶಕ್ಕೆ

    ಈರುಳ್ಳಿ ಮೂಟೆಯಲ್ಲಿ ಶ್ರೀಗಂಧ ತುಂಡುಗಳ ಕಳ್ಳಸಾಗಣೆ – 18 ಮೂಟೆಗಳಲ್ಲಿ 750 ಕೆಜಿ ಶ್ರೀಗಂಧ ವಶಕ್ಕೆ

    ಬೆಂಗಳೂರು: ಪುಷ್ಪ ಸಿನಿಮಾದಲ್ಲಿ ರಕ್ತಚಂದನ ಸ್ಮಗ್ಲಿಂಗ್ ಹೇಗೆಲ್ಲಾ ಮಾಡ್ತಾರೆ ಅಂತಾ ನೋಡಿರುತ್ತೀರಿ. ಇದನ್ನೇ ಪ್ರೇರಣೆಯಾಗಿ ತೆಗೆದುಕೊಂಡು ಖತರ್ನಾಕ್ ಶ್ರೀಗಂಧ (Sandalwood) ಕಳ್ಳರು ಈರುಳ್ಳಿ ಮೂಟೆಯಲ್ಲಿ ಶ್ರೀಗಂಧ ಸಾಗಿಸಿ ಲಾಕ್ ಆಗಿದ್ದಾರೆ.

    ಈರುಳ್ಳಿ ಮೂಟೆಗಳನ್ನ ಸಾಗಿಸುತ್ತಿದ್ದ ವ್ಯಾನ್ ಪರಿಶೀಲನೆ ನಡೆಸಿದ ಪೊಲೀಸರೇ ಒಂದು ಕ್ಷಣ ದಂಗಾಗಿ ಹೋಗಿದ್ದಾರೆ. ಯಾಕಂದ್ರೆ ಖತರ್ನಾಕ್ ಕಳ್ಳರು ಈರುಳ್ಳಿ ಮೂಟೆಯಲ್ಲಿ ಶ್ರೀಗಂಧ ಸಾಗಿಸುತ್ತಿದ್ದರು. ಪುಷ್ಪಾ ಸಿನಿಮಾ ಸ್ಟೈಲ್‌ ರೀತಿಯಲ್ಲೇ ಶ್ರೀಗಂಧದ ಮರದ ತುಂಡುಗಳನ್ನ ಚೀಲದ ಅಡಿಯಲ್ಲಿ ಹಾಕಿ ಮೇಲೆ ಈರುಳ್ಳಿ ತುಂಬಿ ಸಾಗಿಸಲಾಗುತ್ತಿತ್ತು. ಆಂಧ್ರಪ್ರದೇಶದ (Andhra Pradesh) ಕರ್ನೂಲ್‌ನಿಂದ (Kurnool) ಬೆಂಗಳೂರಿಗೆ ಶ್ರೀಗಂಧವನ್ನ ತಂದು ಇನ್ನೇನು ಡೆಸ್ಟಿನೇಷನ್‌ಗೆ ರೀಚ್ ಆಗಬೇಕು ಅನ್ನುವಷ್ಟರಲ್ಲಿ ನಾಕಾಬಂದಿ ಹಾಕಿ ತಪಾಸಣೆ ಮಾಡುತ್ತಿದ್ದ ಸಿದ್ದಾಪುರ ಪೊಲೀಸರಿಗೆ ಶ್ರೀಗಂಧದ ಮರಗಳ ಸಮೇತ ನಾಲ್ವರು ಲಾಕ್ ಆಗಿದ್ದಾರೆ. ಇದನ್ನೂ ಓದಿ: ಪ್ರೀತಿಸುವಂತೆ ಫ್ಯಾಷನ್ ಡಿಸೈನರ್‌ಗೆ ಕಿರುಕುಳ – ಇವಿಪಿ ಫಿಲ್ಮ್ ಸಿಟಿ ಮಾಲೀಕನ ವಿರುದ್ಧ ಎಫ್‍ಐಆರ್

    ಸಿರಾಜ್ ಎಂಬಾತ ತನ್ನ ಗ್ಯಾಂಗ್‌ನೊಂದಿಗೆ ಆಂಧ್ರದ ಕರ್ನೂಲ್ ಕಾಡುಗಳಲ್ಲಿ ಶ್ರೀಗಂಧ ಕಡಿದು ಈರುಳ್ಳಿ ಮಾರಾಟಗಾರರ ವೇಷದಲ್ಲಿ ಬೆಂಗಳೂರಿಗೆ ತಂದು ಇಲ್ಲಿಂದ ಚೀನಾಗೆ ಸಪ್ಲೈ ಮಾಡುತ್ತಿದ್ದ. ಸಿದ್ಧಾಪುರ ಪೊಲೀಸರು ನಾಕಾಬಂದಿ ಹಾಕಿ ಪರಿಶೀಲನೆ ನಡೆಸಿದಾಗ ಈರುಳ್ಳಿ ಮೂಟೆಗಳಲ್ಲಿ 18 ಶ್ರೀಗಂಧದ ಮರದ ತುಂಡುಗಳ ಬ್ಯಾಗ್ ಜಪ್ತಿಯಾಗಿದೆ. ಆಂಧ್ರದ ಸಿರಾಜ್ ತನ್ನ ಗ್ಯಾಂಗ್ ಸದಸ್ಯರೊಂದಿಗೆ ಶ್ರೀಗಂಧ ಕಡಿದು, ಅಕ್ರಮವಾಗಿ ಖರಿದಿ ಮಾಡಿ ಬೆಂಗಳೂರಿನ ಡೀಲರ್‌ಗೆ ತಲುಪಿಸಿ ಬಳಿಕ ಚೀನಾಗೆ ತಲುಪಿಸುತ್ತಿದ್ದರು. ಈ ಸಂಬಂಧ ಶೇಖ್ ಶಾರೂಕ್, ಶೇಖ್ ಅಬ್ದುಲ್, ಪರಮೇಶ್, ರಾಮ್ ಭೂಪಾಲ್ ಎಂಬ ನಾಲ್ವರು ಶ್ರೀಗಂಧ ಸ್ಮಗ್ಲರ್ಸ್ಗಳನ್ನು ಬಂಧಿಸಲಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಉದ್ಯಮ ವಲಯಕ್ಕೆ ಮೂಲ ಸೌಕರ್ಯಗಳ ಕೊರತೆ; ಸರ್ಕಾರದ ಗಮನಕ್ಕೆ ತರಲು ಮುಂದಾದ FKCCI

    ಶ್ರೀಗಂಧ ಅಕ್ರಮ ಸಾಗಾಟದ ಜಾಲದ ಹಿಂದೆ ಬಿದ್ದಿರುವ ಪೊಲೀಸರು ತಲೆಮರೆಸಿಕೊಂಡಿರುವ ಬೆಂಗಳೂರಿನ ಡೀಲರ್‌ಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ಕೈದಿಗೆ 20,000ಕ್ಕೆ ಮೊಬೈಲ್ ಮಾರಲು ಯತ್ನ – ಪರಪ್ಪನ ಅಗ್ರಹಾರ ಜೈಲು ವೀಕ್ಷಕ ಬಂಧನ

  • Kurnool Bus Fire | ಸೂರ್ಯೋದಯಕ್ಕೂ ಮುನ್ನ ಸಾವಿನ ಮನೆ ಕದ ತಟ್ಟಿದ ಸುಂದರ ಕುಟುಂಬ

    Kurnool Bus Fire | ಸೂರ್ಯೋದಯಕ್ಕೂ ಮುನ್ನ ಸಾವಿನ ಮನೆ ಕದ ತಟ್ಟಿದ ಸುಂದರ ಕುಟುಂಬ

    – ಬೆಂಗ್ಳೂರಲ್ಲಿ ನೆಲೆಸಿದ್ದ ನೆಲ್ಲೂರು ಮೂಲದ ಕುಟುಂಬ

    ಹೈದರಾಬಾದ್‌: ಕರ್ನೂಲ್‌ನಲ್ಲಿ ನಡೆದ ಭೀಕರ ಬಸ್‌ ದುರಂತದಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಮೃತಪಟ್ಟಿದ್ದಾರೆ. ಈ ದುರಂತದಲ್ಲಿ ಬೆಂಗಳೂರಿನಲ್ಲಿ ನೆಲೆಸಿದ್ದ ನೆಲ್ಲೂರು ಜಿಲ್ಲೆಯ ಒಂದೇ ಕುಟುಂಬದ ನಾಲ್ವರು ಸಜೀವದಹನವಾಗಿದ್ದಾರೆ. ನಿದ್ರೆ ಮಂಪರಿನಲ್ಲಿದ್ದ ಸುಂದರ ಕುಟುಂಬ ಬೆಳಗಿನ ಸೂರ್ಯೋದಯ ನೋಡುವುದಕ್ಕೆ ಮುನ್ನವೇ ಸಾವಿನ ಮನೆಗೆ ಪ್ರಯಾಣಿಸಿದೆ.

    ಗೊಲ್ಲ ರಮೇಶ್ (35), ಅನುಷಾ (30), ಮಾನ್ವಿತಾ (10) ಹಾಗೂ ಮನೀಶ್ (12) ಮೃತ ದುರ್ದೈವಿಗಳು. ಇವರು ಮೂಲತಃ ನೆಲ್ಲೂರು ಜಿಲ್ಲೆಯ ವಿಂಜಾಮುರು ಮಂಡಲದ ಗೊಲ್ಲವರಿಪಳ್ಳಿಯವರು. ಇದನ್ನೂ ಓದಿ: ಭೀಕರ ದುರಂತಕ್ಕೆ 20 ಬಲಿ – ಬೆಂಗಳೂರಿಗೆ ಬರುತ್ತಿದ್ದ ಬಸ್ಸಿಗೆ ಬೆಂಕಿ ಹೊತ್ತಿದ್ದು ಹೇಗೆ? ಬೈಕ್‌ ಗುದ್ದಿದ್ದಾಗ ಏನಾಯ್ತು?

    ಗೊಲ್ಲ ರಮೇಶ್‌ ಕುಟುಂಬವು ಬೆಂಗಳೂರಿನಲ್ಲಿ ನೆಲೆಸಿತ್ತು. ಹೈದರಾಬಾದ್‌ನಿಂದ ಬೆಂಗಳೂರಿಗೆ ಬಸ್‌ನಲ್ಲಿ ಬರುವಾಗ ಶುಕ್ರವಾರ ಮುಂಜಾನೆ ಕರ್ನೂಲ್ ಜಿಲ್ಲೆಯ NH-44 ರಲ್ಲಿ ಬಸ್ ಬೈಕ್‌ಗೆ ಡಿಕ್ಕಿ ಹೊಡೆದ ನಂತರ ದುರಂತ ಸಂಭವಿಸಿದೆ. ಘಟನೆಯಲ್ಲಿ ಇಡೀ ಕುಟುಂಬ ಸಜೀವದಹನವಾಗಿದೆ. ವಿಷಯ ತಿಳಿದು ಗೊಲ್ಲವರಿಪಳ್ಳಿಯ ಕುಟುಂಬದಲ್ಲಿ ಆಕ್ರಂದನ ಮುಗಿಲುಮುಟ್ಟಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಗೊಲ್ಲ ರಮೇಶ್‌ ಕುಟುಂಬ ದೀಪಾವಳಿ ಹಬ್ಬ ಆಚರಣೆಗೆ ನೆಲ್ಲೂರಿಗೆ ತೆರಳಿತ್ತು ಎನ್ನಲಾಗಿದೆ.

    ಕರ್ನೂಲ್‌ ಡಿಸಿ ಹೇಳಿದ್ದೇನು?
    ಕರ್ನೂಲ್ ಬಸ್ ದುರಂತದ ಕುರಿತು ಮಾತನಾಡಿರುವ ಜಿಲ್ಲಾಧಿಕಾರಿ ಡಾ.ಎ ಸಿರಿ, ಖಾಸಗಿ ಬಸ್ ದುರಂತ ಬೆಳಗ್ಗಿನ ಜಾವ 3 ರಿಂದ 3:10ರ ಸುಮಾರಿಗೆ ಆಗಿದೆ. ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಂಧನ ಸೋರಿಕೆಯಾಗಿ ಬೆಂಕಿ ಕಾಣಿಸಿಕೊಂಡಿದೆ. ಬಸ್‌ನಲ್ಲಿದ್ದ 41 ಪ್ರಯಾಣಿಕರಲ್ಲಿ 23 ಜನರನ್ನ ರಕ್ಷಿಸಲಾಗಿದೆ. ಇಲ್ಲಿಯವರೆಗೆ ಮೃತರಲ್ಲಿ 11 ಜನರನ್ನು ಗುರುತಿಸಲಾಗಿದೆ, ಉಳಿದವರ ಗುರುತು ಪತ್ತೆ ಮಾಡುವ ಕಾರ್ಯ ಮಾಡ್ತಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬೈಕ್‌ ಡಿಕ್ಕಿ, ಧಗಧಗಿಸಿದ ಬೆಂಗಳೂರಿಗೆ ಬರುತ್ತಿದ್ದ ಬಸ್ಸು – 20ಕ್ಕೂ ಹೆಚ್ಚು ಮಂದಿ ಸಜೀವ ದಹನ

    ದುರಂತ ಹೇಗಾಯ್ತು?
    ಬೈಕ್‌ನಲ್ಲಿದ್ದ ವ್ಯಕ್ತಿಯನ್ನು ಶಿವಶಂಕರ್ ಎಂದು ಗುರುತಿಸಲಾಗಿದೆ. ಬಸ್ಸು ಮತ್ತು ಬೈಕ್‌ ಒಂದೇ ದಿಕ್ಕಿನಲ್ಲಿ ಪ್ರಯಾಣಿಸುತ್ತಿತ್ತು. ವೇಗವಾಗಿ ಬರುತ್ತಿದ್ದ ಬಸ್ಸು ಮೊದಲು ಹಿಂಬದಿಯಿಂದ ಬೈಕಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ ಕೆಳಗಡೆ ಬಿದ್ದಿದೆ. ಬೈಕ್‌ ಕೆಳಗಡೆ ಬಿದ್ದರೂ ಚಾಲಕ ಬಸ್ಸನ್ನು ವೇಗವಾಗಿ ಚಲಾಯಿಸಿದ್ದಾನೆ.

    ಕೆಳಭಾಗದಲ್ಲಿ ಸಿಲುಕಿಕೊಂಡಿದ್ದ ಬೈಕನ್ನು ಬಸ್ಸು 300 ಮೀ. ದೂರದವರೆಗೆ ಎಳೆದುಕೊಂಡು ಹೋಗಿದೆ. ಈ ವೇಳೆ ಬೈಕಿನಲ್ಲಿದ್ದ ಪೆಟ್ರೋಲ್‌ ಕೆಳಕ್ಕೆ ಚೆಲ್ಲಿದೆ. ರಸ್ತೆಯಲ್ಲಿ ಬೈಕನ್ನು ಎಳೆದುಕೊಂಡು ಹೋಗಿದ್ದರಿಂದ ಘರ್ಷಣೆಯಿಂದಾಗಿ ಕಿಡಿ ಹೊತ್ತಿದೆ. ಬೆಂಕಿಯ ಕಿಡಿ ಡೀಸೆಲ್‌ ಟ್ಯಾಂಕ್‌ ಮೇಲೆ ಚಿಮ್ಮಿದೆ. ಟ್ಯಾಂಕ್‌ಗೆ ಕಿಡಿ ಚಿಮ್ಮಿದ ಕೂಡಲೇ ಬೆಂಕಿ ಹೊತ್ತಿಕೊಂಡು ಟ್ಯಾಂಕ್‌ ಸ್ಫೋಟಗೊಂಡಿದೆ. ಸ್ಫೋಟದ ರಭಸಕ್ಕೆ ಡೀಸೆಲ್‌ ಮೇಲುಗಡೆ ಹಾರಿದ್ದರಿಂದ ಸುಲಭವಾಗಿ ಬೆಂಕಿ ಹರಡಿ ಕ್ಷಣಮಾತ್ರದಲ್ಲಿ ಬಸ್ಸು ಧಗಧಗಿಸಿದೆ. ಇದನ್ನೂ ಓದಿ: ಐಸಿಸ್‌ ಮಾಡ್ಯೂಲ್‌ ಭೇದಿಸಿದ ದೆಹಲಿ ಪೊಲೀಸ್‌ – ಇಬ್ಬರು ಶಂಕಿತ ಭಯೋತ್ಪಾದಕರು ಅರೆಸ್ಟ್‌

  • ಭೀಕರ ದುರಂತಕ್ಕೆ 20 ಬಲಿ – ಬೆಂಗಳೂರಿಗೆ ಬರುತ್ತಿದ್ದ ಬಸ್ಸಿಗೆ ಬೆಂಕಿ ಹೊತ್ತಿದ್ದು ಹೇಗೆ? ಬೈಕ್‌ ಗುದ್ದಿದ್ದಾಗ ಏನಾಯ್ತು?

    ಭೀಕರ ದುರಂತಕ್ಕೆ 20 ಬಲಿ – ಬೆಂಗಳೂರಿಗೆ ಬರುತ್ತಿದ್ದ ಬಸ್ಸಿಗೆ ಬೆಂಕಿ ಹೊತ್ತಿದ್ದು ಹೇಗೆ? ಬೈಕ್‌ ಗುದ್ದಿದ್ದಾಗ ಏನಾಯ್ತು?

    ಹೈದರಾಬಾದ್‌: ಕರ್ನೂಲ್‌ನಲ್ಲಿ (Kurnool) ನಡೆದ ಭೀಕರ ಬಸ್ಸು ದುರಂತದಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಮೃತಪಟ್ಟಿದ್ದಾರೆ. ಆದರೆ ಈ ದುರಂತಕ್ಕೆ ಕಾರಣವಾದ ಬೈಕ್‌ (Bike) ಮತ್ತು ಬಸ್ಸಿನ (Bus) ನಡುವೆ ಅಪಘಾತ ಹೇಗೆ ಸಂಭವಿಸಿದೆ ಎನ್ನುವುದರ ಬಗ್ಗೆ ಈಗ ತನಿಖೆ ನಡೆಯುತ್ತಿದೆ.

    ದುರಂತ ಹೇಗಾಯ್ತು?
    ಬೈಕ್‌ನಲ್ಲಿದ್ದ ವ್ಯಕ್ತಿಯನ್ನು ಶಿವಶಂಕರ್ ಎಂದು ಗುರುತಿಸಲಾಗಿದೆ. ಬಸ್ಸು ಮತ್ತು ಬೈಕ್‌ ಒಂದೇ ದಿಕ್ಕಿನಲ್ಲಿ ಪ್ರಯಾಣಿಸುತ್ತಿತ್ತು. ವೇಗವಾಗಿ ಬರುತ್ತಿದ್ದ ಬಸ್ಸು ಮೊದಲು ಹಿಂಬದಿಯಿಂದ ಬೈಕಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ ಕೆಳಗಡೆ ಬಿದ್ದಿದೆ. ಬೈಕ್‌ ಕೆಳಗಡೆ ಬಿದ್ದರೂ ಚಾಲಕ ಬಸ್ಸನ್ನು ವೇಗವಾಗಿ ಚಲಾಯಿಸಿದ್ದಾನೆ.

    ಕೆಳಭಾಗದಲ್ಲಿ ಸಿಲುಕಿಕೊಂಡಿದ್ದ ಬೈಕನ್ನು ಬಸ್ಸು 300 ಮೀ. ದೂರದವರೆಗೆ ಎಳೆದುಕೊಂಡು ಹೋಗಿದೆ. ಈ ವೇಳೆ ಬೈಕಿನಲ್ಲಿದ್ದ ಪೆಟ್ರೋಲ್‌  ಕೆಳಕ್ಕೆ ಚೆಲ್ಲಿದೆ.  ರಸ್ತೆಯಲ್ಲಿ ಬೈಕನ್ನು ಎಳೆದುಕೊಂಡು ಹೋಗಿದ್ದರಿಂದ ಘರ್ಷಣೆಯಿಂದಾಗಿ ಕಿಡಿ ಹೊತ್ತಿದೆ. ಬೆಂಕಿಯ ಕಿಡಿ ಡೀಸೆಲ್‌ ಟ್ಯಾಂಕ್‌ ಮೇಲೆ ಚಿಮ್ಮಿದೆ. ಟ್ಯಾಂಕ್‌ಗೆ ಕಿಡಿ ಚಿಮ್ಮಿದ ಕೂಡಲೇ  ಹೊತ್ತಿಕೊಂಡು ಟ್ಯಾಂಕ್‌ ಸ್ಫೋಟಗೊಂಡಿದೆ. ಸ್ಫೋಟದ ರಭಸಕ್ಕೆ ಡೀಸೆಲ್‌ ಮೇಲುಗಡೆ ಹಾರಿದ್ದರಿಂದ ಸುಲಭವಾಗಿ ಬೆಂಕಿ ಹರಡಿ ಕ್ಷಣಮಾತ್ರದಲ್ಲಿ ಬಸ್ಸು  ಧಗಧಗಿಸಿದೆ.

    ಬೆಂಗಳೂರು ಮತ್ತು ಹೈದರಾಬಾದ್‌ ಮಧ್ಯೆ 575 ಕಿ.ಮೀ ಅಂತರವಿರುವುದರಿಂದ ಇಬ್ಬರು ಚಾಲಕರು ಬಸ್ಸಿನಲ್ಲಿದ್ದರು. ಸಾಧಾರಣವಾಗಿ ದೀರ್ಘ ಪ್ರಯಾಣಕ್ಕೆ ಇಬ್ಬರು ಚಾಲಕರನ್ನು ನಿಯೋಜಿಸಲಾಗುತ್ತದೆ. ದುರಂತ ನಡೆದ ಬಳಿಕ ಬಸ್ಸು ಚಾಲನೆ ಮಾಡುತ್ತಿದ್ದ ಚಾಲಕ ಪರಾರಿಯಾಗಿದ್ದರೆ ಮತ್ತೊಬ್ಬ ಚಾಲಕನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

    ಸ್ಲೀಪರ್‌ ಕೋಚ್‌ ಬಸ್ಸುಗಳ ಮಲಗುವ ಜಾಗಗಳನ್ನು ಮರದ ಪ್ಲೈವುಡ್‌ ಬಳಸಿ ಸಿದ್ಧಪಡಿಸುತ್ತಾರೆ. ಇದರ ಮೇಲೆ ಕಿರು ಹಾಸಿಗೆ ಇರುತ್ತದೆ.  ಮರ, ಹಾಸಿಗೆ ಎರಡೂ ಬೆಂಕಿ ತಗುಲಿದ ಕೂಡಲೇ ಜ್ವಾಲೆ ಮತ್ತಷ್ಟು ಹೆಚ್ಚಾಗಿದೆ.

    ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್) ತಂಡವು ಆಗಮಿಸಿ ತನಿಖೆ ನಡೆಸುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ವಿಕ್ರಾಂತ್ ತಿಳಿಸಿದ್ದಾರೆ. ಒಂದು ವೇಳೆ ಬೈಕ್‌ಗೆ ಗುದ್ದಿದ ಕೂಡಲೇ ಬಸ್ಸನ್ನು ನಿಲ್ಲಿಸಿದ್ದರೆ ಈ ದುರಂತ ಸಂಭವಿಸುತ್ತಿರಲಿಲ್ಲ. ಚಾಲಕ ನಿಲ್ಲಸದೇ ಬೇಜವಾಬ್ದಾರಿ ವರ್ತನೆ ತೋರಿದ್ದರಿಂದ ಅಮಾಯಕರ ಜೀವಗಳು ಬಲಿಯಾಗಿದೆ.

    ಆಂಧ್ರದ ಕರ್ನೂಲ್‌ (Kurnool) ಬಳಿಯ ಚಿನ್ನಟೇಕೂರು ಈ ದುರಂತ ಸಂಭವಿಸಿ 20 ಮಂದಿ ಮೃತಪಟ್ಟಿದ್ದಾರೆ. ಸ್ಲೀಪರ್‌ ಕೋಚ್‌ ಬಸ್ಸು ಆಗಿದ್ದ ಕಾರಣ ಪ್ರಯಾಣಿಕರು ನಿದ್ದೆ ಮಾಡುತ್ತಿದ್ದರು. ಸಾಧಾರಣವಾಗಿ ವೋಲ್ವೋ ಬಸ್ಸಿನಲ್ಲಿ ಕಿಟಕಿಯ ಗಾಜುಗಳು ಸಂಪೂರ್ಣವಾಗಿ ಲಾಕ್‌ ಆಗಿರುತ್ತದೆ. ಹೀಗಿದ್ದರೂ ಬೆಂಕಿ ಕಾಣಿಸಿದ ಕೂಡಲೇ ಕೆಲ ಪ್ರಯಾಣಿಕರು ಗಾಜನ್ನು ಒಡೆದು ಕೆಳಗೆ ಹಾರಿ ಜೀವ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

  • ಮುತ್ತು ಕೊಡುವ ವೇಳೆ ನೆನಪಾದ ಸೇಡು – ಗಂಡನ ನಾಲಿಗೆಗೆ ಹಲ್ಲಿನಲ್ಲೇ ಕತ್ತರಿ

    ಮುತ್ತು ಕೊಡುವ ವೇಳೆ ನೆನಪಾದ ಸೇಡು – ಗಂಡನ ನಾಲಿಗೆಗೆ ಹಲ್ಲಿನಲ್ಲೇ ಕತ್ತರಿ

    ಅಮರಾವತಿ: ಮುತ್ತು ಕೊಡುವ ವೇಳೆ ಗಂಡನ (Husband) ನಾಲಿಗೆಯನ್ನು ಪತ್ನಿ ಕಚ್ಚಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ಆಂಧ್ರಪ್ರದೇಶದ (Andhra Pradesh) ಕರ್ನೂಲ್‍ನಲ್ಲಿ (Kurnool) ನಡೆದಿದೆ. ಗಂಡನ ಮೇಲಿನ ಸಿಟ್ಟನ್ನು ಹೆಂಡತಿ (Wife) ಈ ರೀತಿ ವಿಚಿತ್ರವಾಗಿ ತೀರಿಸಿಕೊಂಡಿದ್ದಾಳೆ. ಈಗ ಇಬ್ಬರ ಗಲಾಟೆ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ.

    ಆಂಧ್ರದ ಥಾರಚಂದ್ ನಾಯ್ಕ್ ಹಾಗೂ ಪುಷ್ಪಾವತಿ 2015ರಲ್ಲೇ ಪ್ರೀತಿಸಿ ಮದುವೆಯಾಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಯಲ್ಲಮ್ಮಗುಟ್ಟಾ ಥಂಡಾದಲ್ಲಿ ಇವರಿಬ್ಬರು ವಾಸವಾಗಿದ್ದರು. ಅನ್ಯೋನ್ಯವಾಗಿದ್ದ ಗಂಡ, ಹೆಂಡ್ತಿ ಮಧ್ಯೆ ಕಳೆದ ಎರಡು ವರ್ಷಗಳಿಂದ ಆಗಾಗ ಜಗಳಗಳು ನಡೆಯುತ್ತಿತ್ತು. ಇದರಿಂದ ಬೇಸತ್ತಿದ್ದ ಹೆಂಡತಿ ಈ ನಿರ್ಧಾರ ಕೈಗೊಂಡಿದ್ದಾಳೆ ಎನ್ನಲಾಗಿದೆ. ಇದನ್ನೂ ಓದಿ: ಅಮೆರಿಕಾದಲ್ಲಿ 80 ಕೋಟಿ ರೂ. ವೆಚ್ಚದ ಕಾಲಭೈರವೇಶ್ವರ ದೇಗುಲ ನಿರ್ಮಾಣ- ಕಾಮಗಾರಿ ಪರಿಶೀಲನೆ

    ಇತ್ತೀಚೆಗೆ ದಂಪತಿ ನಡುವೆ ಜೋರು ಜಗಳ ನಡೆದಿದೆ. ಈ ವೇಳೆ ಇವರಿಬ್ಬರ ಕಿತ್ತಾಟ ಇಡೀ ಬೀದಿಯ ಜನರಿಗೆಲ್ಲಾ ಕೇಳಿಸಿದೆ. ಸ್ವಲ್ಪ ಸಮಯದ ಬಳಿಕ ಇಬ್ಬರ ಕೋಪ ತಣ್ಣಗಾಗಿ ಜಗಳವೂ ನಿಂತಿದೆ. ಬಳಿಕ ಪತಿ ಪುಷ್ಪಾವತಿಗೆ ಮುತ್ತು ಕೊಡಲು ಹೋಗಿದ್ದಾನೆ. ಇದರಿಂದ ಕೋಪಗೊಂಡ ಪುಷ್ಪಾವತಿ ಪತಿಯ ನಾಲಿಗೆಯನ್ನು ರಕ್ತ ಬರುವ ಹಾಗೆ ಕಚ್ಚಿದ್ದಾಳೆ. ಇದರಿಂದ ಆತನ ನಾಲಿಗೆ ತೀವ್ರವಾಗಿ ಗಾಯಗೊಂಡಿದೆ. ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

    ಇಷ್ಟೆಲ್ಲಾ ಆದ ಮೇಲೆ ಪುಷ್ಪಾವತಿ ಸ್ಥಳೀಯ ಪೊಲೀಸ್ ಠಾಣೆಗೆ ಹೋಗಿ ನನ್ನ ಗಂಡ ನನ್ನಿಂದ ಬಲವಂತವಾಗಿ ಮುತ್ತು ಸ್ವೀಕರಿಸಲು ಯತ್ನಿಸಿದ. ಹೀಗಾಗಿ ನಾಲಿಗೆ ಕಚ್ಚಿದ್ದೇನೆ ಎಂದಿದ್ದಾಳೆ. ಪತಿ ಕೂಡ ಹೆಂಡತಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ಆಕೆಗೆ ಅಕ್ರಮ ಸಂಬಂಧವಿದೆ ಎಂದು ಆರೋಪಿಸಿದ್ದಾನೆ. ಇದನ್ನೂ ಓದಿ: ಮಹಾರಾಷ್ಟ್ರ ಭೂಕುಸಿತದಲ್ಲಿ ಪೋಷಕರನ್ನು ಕಳೆದುಕೊಂಡ ಮಕ್ಕಳನ್ನು ದತ್ತು ಪಡೆದ ಸಿಎಂ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕರ್ನೂಲಿನ 27 ವಿದ್ಯಾರ್ಥಿಗಳಿಗೆ ಸೋಂಕು – 4 ಶಾಲೆಗಳು ಬಂದ್‌

    ಕರ್ನೂಲಿನ 27 ವಿದ್ಯಾರ್ಥಿಗಳಿಗೆ ಸೋಂಕು – 4 ಶಾಲೆಗಳು ಬಂದ್‌

    ಕರ್ನೂಲ್‌: ಆಂಧ್ರದ ಕರ್ನೂಲಿನ 27 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿದ ಹಿನ್ನೆಲೆಯಲ್ಲಿ 4 ಖಾಸಗಿ ಶಾಲೆಗಳನ್ನು 10 ದಿನ ಬಂದ್‌ ಮಾಡಲಾಗಿದೆ.

    ಶ್ರಿಶೈಲಂ ಮಂಡಲದ ಸುನ್ನಿಪೆಂಟಾ ಪ್ರದೇಶದ 4 ಶಾಲೆಗಳ 9-10ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ 10 ದಿನ ಶಾಲೆಯನ್ನು ಮುಚ್ಚಿ ಸ್ಯಾನಿಟೈಸ್‌ ಮಾಡುವಂತೆ ಜಿಲ್ಲಾಧಿಕಾರಿ ಆದೇಶ ಪ್ರಕಟಿಸಿದ್ದಾರೆ.

    ವಿದ್ಯಾರ್ಥಿಗಳು ಅಟೋ ರಿಕ್ಷಾದಲ್ಲಿ ಶಾಲೆಗೆ ಆಗಮಿಸುವ ವೇಳೆ ಸೋಂಕು ಬಂದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ 4 ಶಾಲೆಗಳ ಎಲ್ಲ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕೊರೊನಾ ಪರೀಕ್ಷೆ ನಡೆಸಲು ಜಿಲ್ಲಾಡಳಿತ ತೀರ್ಮಾನಿಸಲಾಗಿದೆ.

    ಈ ಬಗ್ಗೆ ಕರ್ನೂಲ್‌ ಜಿಲ್ಲಾ ಶಿಕ್ಷಣ ಅಧಿಕಾರಿ ಸಾಯಿರಾಮ್‌ ಪ್ರತಿಕ್ರಿಯಿಸಿ, ಪೋಷಕರ ಒಪ್ಪಿಗೆಯ ಹಿನ್ನೆಲೆಯಲ್ಲಿ ಪ್ರೌಢಶಾಲೆ ಮತ್ತು ಕಾಲೇಜುಗಳ 25 -30 ಸಾವಿರ ವಿದ್ಯಾರ್ಥಿಗಳು ತರಗತಿಗೆ ಹಾಜರಾಗಿದ್ದಾರೆ. ಕೋವಿಡ್‌ 19 ನಿಯಮಗಳನ್ನು ಉಲ್ಲಂಘಿಸುವ ಶಾಲೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

    ಕೇಂದ್ರ ಸರ್ಕಾರ ಅನ್‌ಲಾಕ್‌ ಮಾರ್ಗಸೂಚಿಯಂತೆ ಆಂಧ್ರ ಪ್ರದೇಶದಲ್ಲಿ 9, 10, ಪದವಿ ಪೂರ್ವ ತರಗತಿಗಳು ಸೆ. 21ರಿಂದ ಆರಂಭಗೊಂಡಿತ್ತು.

  • ಸಂಸಾರ ನಡೆಸೋಣ ಬಾ ಎಂದ ಪತಿಯ ಮರ್ಮಾಂಗವನ್ನೇ ಕತ್ತರಿಸಿದ ಪತ್ನಿ

    ಸಂಸಾರ ನಡೆಸೋಣ ಬಾ ಎಂದ ಪತಿಯ ಮರ್ಮಾಂಗವನ್ನೇ ಕತ್ತರಿಸಿದ ಪತ್ನಿ

    ಅಮರಾವತಿ: ಸಂಸಾರ ನಡೆಸೋಣ ಬಾ ಎಂದು ಕರೆದ ಪತಿಯ ಮರ್ಮಾಂಗವನ್ನು ಪತ್ನಿ ಕತ್ತರಿಸಿರುವ ಅಮಾನವೀಯ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ನಡೆದಿದೆ.

    ಪಾಣ್ಯಂ ತಾಲೂಕಿನ ಎಸ್.ಕೊಟ್ಟಾಲ ಗ್ರಾಮದ ಯೂನುಸ್ (23) ಪತ್ನಿಯಿಂದ ಹಲ್ಲೆಗೆ ಒಳಗಾದ ಪತಿ. ಹಸೀನಾಳ ಪತಿಯ ಮರ್ಮಾಂಗ ಕತ್ತರಿಸಿದ ಪತ್ನಿ. ಕರ್ನೂಲ್ ಜಿಲ್ಲೆಯ ಗಡಿವೆಮುಲ ತಾಲೂಕಿನ ಸೋಮಾಪುರಂನಲ್ಲಿ ಗುರುವಾರ ಘಟನೆ ನಡೆದಿದೆ.

    ಯೂನುಸ್ ಎರಡು ವರ್ಷಗಳ ಹಿಂದೆಯಷ್ಟೇ ಸೋಮಾಪುರಂ ಗ್ರಾಮದ ಹಸೀನಾಳನ್ನು ಮದುವೆಯಾಗಿದ್ದ. ಮದುವೆಯಾಗಿ ಕೆಲವೇ ದಿನಗಳಲ್ಲಿ ಪತಿ-ಪತ್ನಿ ಸಣ್ಣ ವಿಚಾರಕ್ಕೆ ಜಗಳವಾಡಿ ದೂರವಾಗಿದ್ದರು. ಪತಿ ಮನೆ ಬಿಟ್ಟು ಬಂದಿದ್ದ ಹಸೀನಾ ತವರು ಮನೆ ಸೇರಿದ್ದಳು. ಇಂದಲ್ಲ ನಾಳೆ ಪತ್ನಿ ಬರುತ್ತಾಳೆ ಅಂತ ಯೂನಸ್ ಎರಡು ವರ್ಷಗಳಿಂದ ಕಾಯುತ್ತಲೇ ಇದ್ದ. ಆದರೆ ಹಸೀನಾ ಮಾತ್ರ ತವರು ಮನೆಯಲ್ಲಿಯೇ ಉಳಿದಿದ್ದಳು.

    ಯೂನುಸ್ ಎರಡು ವರ್ಷಗಳ ಬಳಿಕ ಸೋಮಾಪುರಂನಲ್ಲಿರುವ ಅತ್ತೆಯ ಮನೆಗೆ ತೆರಳಿ ಪತ್ನಿ ಹಸೀನಾಳನ್ನು ಸಂಸಾರ ಮಾಡೋಣ ಬಾ ಎಂದು ಕರೆದಿದ್ದಾನೆ. ಪತಿಯ ಮಾತು ಕೇಳಿದ ಹಾಸೀನಾ ಕೋಪಗೊಂಡಿದ್ದಾಳೆ. ಮಾತಿಗೆ ಮಾತು ಬೆಳೆದು, ಕೈ ಕೈ ಮಿಲಾಯಿಸಿದ್ದಾರೆ. ಕುಟುಂಬಸ್ಥರ ಜೊತೆ ಸೇರಿ ಹಸೀನಾ ಪತಿ ಯೂನುಸ್‍ನನ್ನು ಕಂಬಕ್ಕೆ ಕಟ್ಟಿ ಹಾಕಿ ಮನ ಬಂದಂತೆ ಥಳಿಸಿದ್ದಾಳೆ. ಈ ವೇಳೆ ಹಸೀನಾ ಪತಿಯ ಮರ್ಮಾಂಗವನ್ನು ಕತ್ತರಿಸಿ ಹಾಕಿದ್ದಾಳೆ.

    ಗಂಭೀರವಾಗಿ ಗಾಯಗೊಂಡ ಯೂನುಸ್ ಕಾಪಾಡುವಂತೆ ಕೂಗಿ ಅಳುತ್ತಿದ್ದ ಧ್ವನಿಯನ್ನು ಕೇಳಿದ ಸ್ಥಳೀಯರು ಘಟನಾ ಸ್ಥಳಕ್ಕೆ ದೌಡಾಯಿಸಿದ್ದಾರೆ. ತಕ್ಷಣವೇ ಯೂನುಸ್‍ನನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಯೂನುಸ್ ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕಿತ್ಸೆ ನೀಡಲಾಗುತ್ತದೆ ಎಂದು ವರದಿಯಾಗಿದೆ.

  • ಪ್ರವಾಸಿ ಬಸ್-ಕ್ರೂಸರ್ ಮುಖಾಮುಖಿ ಡಿಕ್ಕಿ: 13 ಸಾವು

    ಪ್ರವಾಸಿ ಬಸ್-ಕ್ರೂಸರ್ ಮುಖಾಮುಖಿ ಡಿಕ್ಕಿ: 13 ಸಾವು

    ಹೈದರಾಬಾದ್: ಖಾಸಗಿ ಪ್ರವಾಸಿ ಬಸ್ ಹಾಗೂ ಕ್ರೂಸರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 13 ಜನ ಸ್ಥಳದಲ್ಲಿಯೇ ಮೃತಪಟ್ಟ ಧಾರುಣ ಘಟನೆ ಇಂದು ಸಂಜೆ ಆಂಧ್ರ ಪ್ರದೇಶದಲ್ಲಿ ನಡೆದಿದೆ.

    ಕರ್ನೂಲ್ ಜಿಲ್ಲೆಯ ವೆಲ್‍ದುರ್ತಿಯಲ್ಲಿ ಎಸ್‌ಆರ್‌ಎಸ್‌ ಟ್ರಾವೆಲ್ಸ್ ಬಸ್ ಹಾಗೂ ಕ್ರೂಸರ್ ಮುಖಾಮುಖಿ ಡಿಕ್ಕಿ ಹೊಡೆದಿದೆ. ಚಾಲಕ ಸೇರಿದಂತೆ ಕ್ರೂಸರ್ ಮುಂಭಾಗದಲ್ಲಿ ಕುಳಿತಿದ್ದ ಪ್ರಯಾಣಿಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

    ಕೆಲ ಪ್ರಯಾಣಿಕರು ವಾಹನಗಳನ್ನು ನಿಲ್ಲಿಸಿ ಗಾಯಾಳುಗಳನ್ನು ಕರ್ನೂಲ್ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮರೆದಿದ್ದಾರೆ. ಘಟನೆಯಿಂದಾಗಿ ಕೆಲ ಹೊತ್ತು ಸಂಚಾರ ಅಸ್ತವ್ಯಸ್ತವಾಗಿತ್ತು. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು, ಪರಿಶೀಲನೆ ನಡೆಸಿ, ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ.

    ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಈ ಘಟನೆಯ ಬಗ್ಗೆ ಸಂತಾಪ ಸೂಚಿಸಿದ್ದು, ಗಾಯಾಳುಗಳಿಗೆ ಅಗತ್ಯ ವೈದ್ಯಕೀಯ ಸೌಲಭ್ಯ ಒದಗಿಸಬೇಕು ಎಂದು ಕರ್ನೂಲ್ ಆಸ್ಪತ್ರೆಯ ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

  • ಪ್ಲಾಸ್ಟಿಕ್ ಬಾಟಲ್ ತಯಾರಿಸೋ ಫ್ಯಾಕ್ಟರಿಯಲ್ಲಿ ಕಬ್ಬಿಣದ ರಾಡ್ ಎದೆಗೆ ಚುಚ್ಚಿ ವ್ಯಕ್ತಿ ಸಾವು

    ಪ್ಲಾಸ್ಟಿಕ್ ಬಾಟಲ್ ತಯಾರಿಸೋ ಫ್ಯಾಕ್ಟರಿಯಲ್ಲಿ ಕಬ್ಬಿಣದ ರಾಡ್ ಎದೆಗೆ ಚುಚ್ಚಿ ವ್ಯಕ್ತಿ ಸಾವು

    ಹೈದರಾಬಾದ್: ಫ್ಯಾಕ್ಟರಿಯಲ್ಲಿ ವ್ಯಕ್ತಿಯೊಬ್ಬರ ಎದೆಗೆ ಯಂತ್ರದ ಕಬ್ಬಿಣದ ರಾಡ್ ಚುಚ್ಚಿಕೊಂಡು ಸಾವನ್ನಪ್ಪಿರೋ ಘಟನೆ ಆಂಧ್ರಪ್ರದೇಶದ ಕರ್ನೂಲ್‍ನಲ್ಲಿ ನಡೆದಿದೆ.

    ಇಲ್ಲಿನ ಪ್ಲಾಸ್ಟಿಕ್ ಬಾಟಲ್ ತಯಾರಿಕಾ ಘಟಕದಲ್ಲಿ ಬುಧವಾರದಂದು ಈ ಅವಘಡ ಸಂಭವಿಸಿದೆ. ಮೃತ ವ್ಯಕ್ತಿಯನ್ನು 22 ವರ್ಷದ ಯಲ್ಲಪ್ಪ ಎಂದು ಗುರುತಿಸಲಾಗಿದೆ. ಯಲ್ಲಪ್ಪ ಅವರು ಇತರೆ ಕೆಲವರೊಂದಿಗೆ ಜಿತೇಶ್ ಪ್ಲಾಸ್ಟಿಕ್ ಬಾಟಲ್ ತಯಾರಿಕಾ ಸಂಸ್ಥೆಯಲ್ಲಿ ಕಾರ್ಕ್ ಮೇಕಿಂಗ್ ಮಷೀನ್ ರಿಪೇರಿ ಮಾಡುತ್ತಿದ್ದರು. ಯಂತ್ರವನ್ನು ಜರುಗಿಸಲು ಪ್ರಯತ್ನಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಯಂತ್ರ ತಿರುಗಿ ಗೋಡೆ ಮತ್ತು ಯಂತ್ರದ ನಡುವೆ ಯಲ್ಲಪ್ಪ ಸಿಲುಕಿದ್ದರು.

    ಯಂತ್ರದಲ್ಲಿದ್ದ ಕಬ್ಬಿಣದ ರಾಡ್ ಯಲ್ಲಪ್ಪ ಅವರ ಎದೆಗೆ ಚುಚ್ಚಿಕೊಂಡು ತೀವ್ರ ರಕ್ತಸ್ರಾವವಾಗಿತ್ತು. ಯಂತ್ರವನ್ನ ತೆಗೆದು ಯಲ್ಲಪ್ಪ ಅವರನ್ನು ಹೊರಗೆಳೆಯುವ ಮುನ್ನವೇ ಅವರು ಸಾವನ್ನಪ್ಪಿದ್ದರು.

    ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.