Tag: Kushalnagar Police

  • ಕುಟುಂಬಸ್ಥರ ಶವಸಂಸ್ಕಾರ ಮುಗಿಸಿ ನಾಲೆಯಲ್ಲಿ ಸ್ನಾನಕ್ಕೆ ತೆರಳಿದ ಯುವಕ ನೀರುಪಾಲು

    ಕುಟುಂಬಸ್ಥರ ಶವಸಂಸ್ಕಾರ ಮುಗಿಸಿ ನಾಲೆಯಲ್ಲಿ ಸ್ನಾನಕ್ಕೆ ತೆರಳಿದ ಯುವಕ ನೀರುಪಾಲು

    ಮಡಿಕೇರಿ: ಕುಟುಂಬ ಸದಸ್ಯರೊಬ್ಬರ ಅಂತ್ಯಸಂಸ್ಕಾರ ಮುಗಿಸಿ ನಾಲೆಯಲ್ಲಿ ಸ್ನಾನಕ್ಕೆ ತರಳಿದ್ದ ಯುವಕನೋರ್ವ ನೀರಿನ ರಭಸಕ್ಕೆ ಕೊಚ್ಚಿಹೋಗಿ ಮೃತಪಟ್ಟಿರುವ ಘಟನೆ ಕೊಡಗು (Kodagu) ಜಿಲ್ಲೆಯ ಕುಶಾಲನಗರ ತಾಲೂಕಿನ ಹುದುಗೂರು ಗ್ರಾಮದಲ್ಲಿ ನಡೆದಿದೆ.

    ಸಂತೋಷ (28) ಮೃತ ದುರ್ದೈವಿ. ಮೂಲತಃ ಕುಶಾಲನಗರ ತಾಲೂಕಿನ ಕೂಡಿಗೆ ಗ್ರಾಮದ ನಿವಾಸಿ ಸ‌ಂತೋಷ್ ಕೂಡಿಗೆ ಡೈರಿಯಲ್ಲಿ ವಾಹನ ಚಾಲಕ ವೃತ್ತಿ ಮಾಡಿಕೊಂಡು ಅಂಗಡಿ ಮುಗ್ಗಟ್ಟುಗಳಿಗೆ ಹಾಲು ಮೊಸರು ಹಾಕುತ್ತಿದ್ದ. ಹುದುಗೂರು ಗ್ರಾಮದಲ್ಲಿ ತಮ್ಮ ಸಂಬಂಧಿಕರೊಬ್ಬರು ಮೃತಪಟ್ಟ ವಿಚಾರ ತಿಳಿದು ಸಂತೋಷ್ ನೇರವಾಗಿ ಅಂತ್ಯಸಂಸ್ಕಾರಕ್ಕೆ ತೆರಳಿದ್ದ. ಅಂತ್ಯಕ್ರಿಯೆ ಮುಗಿದ ಬಳಿಕ ಸ್ನಾನಕ್ಕೆಂದು ಹಾರಂಗಿ ನಾಲೆಗೆ (Harangi Canal) ತೆರಳಿದ್ದ, ಈ ವೇಳೆ ನೀರಿನ ರಭಸಕ್ಕೆ ಸಿಕ್ಕಿ ಕೊಚ್ಚಿ ಹೋಗಿದ್ದಾನೆ.

    ಘಟನೆಗೆ ಸಂಬಂಧಿಸಿದಂತೆ ಗ್ರಾಮಸ್ಥರು ಪೊಲೀಸರಿಗೆ ಹಾಗೂ ಹಾರಂಗಿ ಇಲಾಖೆಯ ಆದಿಕಾರಿಗಳಿಗೆ ಮಾಹಿತಿ ತಿಳಿಸಿದ್ದಾರೆ. ತಕ್ಷಣವೇ ಕುಶಾಲನಗರ ಗ್ರಾಮಾಂತರ ಠಾಣೆಯ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಹಾರಂಗಿಯ ಮುಖ್ಯ ನಾಲೆ ಬಳಿ ತೆರಳಿ ಸಂತೋಷ್ ಮೃತದೇಹವನ್ನ ಶೋಧ ಕಾರ್ಯಚರಣೆ ಮಾಡಲು ಮುಂದಾಗಿದ್ದಾರೆ. ಅಲ್ಲದೇ ಹಾರಂಗಿಯ ಇಂಜಿನಿಯರ್ ಗಳೊಂದಿಗೆ ಮಾತಾನಾಡಿ ನಾಲೆಯಲ್ಲಿ ನೀರಿನ ಸರಬರಾಜು ಮಾಡುವುದನ್ನು ತಕ್ಷಣವೇ ನಿಲ್ಲಿಸಿ ಮೃತದೇಹದ ಶೋಧಕಾರ್ಯಕ್ಕೆ ಸಹಕಾರ ನೀಡಿ ಎಂದು ಮನವಿ ಮಾಡಿದ್ದಾರೆ. ಅದರಂತೆ ಹಾರಂಗಿ ಜಲಾಶಯದ ಅಧಿಕಾರಿಗಳು ನೀರು ಸರಬರಾಜನ್ನ ನಿಲ್ಲಿಸಿದ್ದರು. ಸ್ವಲ್ಪ ಹೊತ್ತು ಕಳೆದ ಬಳಿಕ ಒಂದು ಕಿಲೋಮೀಟರ್ ಅಂತರದಲ್ಲಿ ಮೃತದೇಹ ಪತ್ತೆಯಾಗಿದೆ.

    ಘಟನೆ ಸಂಬಂಧ ಕುಶಾಲನಗರ ಗ್ರಾಮಾಂತರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • ಕುಶಾಲನಗರ ಸಂಪತ್ ಕೊಲೆ ಕೇಸ್‌ – ಸ್ನೇಹಿತನಿಗೆ ಚಟ್ಟ ಕಟ್ಟಿದ್ದ ಮೂವರು ಅರೆಸ್ಟ್‌

    ಕುಶಾಲನಗರ ಸಂಪತ್ ಕೊಲೆ ಕೇಸ್‌ – ಸ್ನೇಹಿತನಿಗೆ ಚಟ್ಟ ಕಟ್ಟಿದ್ದ ಮೂವರು ಅರೆಸ್ಟ್‌

    – ಸ್ನೇಹಿತನ್ನ ಕೊಂದು ದೇಹವನ್ನ ಕಾಡಿನಲ್ಲಿ ಬಿಸಾಡಿ ಬಂದಿದ್ದ ಕಿಲ್ಲರ್‌ ಲೇಡಿ

    ಮಡಿಕೇರಿ: ಇದೇ ಮೇ 10ರಂದು ನಾಪತ್ತೆಯಾಗಿದ್ದ ಕೊಡಗಿನ (Kodagu) ಸೋಮವಾರಪೇಟೆಯ ನಿವಾಸಿ ಸಂಪತ್‌ ನಾಯರ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಕುಶಾಲನಗರ ಪೊಲೀಸರು ಬಂಧಿಸಿದ್ದಾರೆ.

    ಸೋಮವಾರಪೇಟೆ ತಾಲ್ಲೂಕಿನ ಹಾನಗಲ್‌ ಗ್ರಾಮದ ಬಿ.ಎಂ ಕಿರಣ್ (44), ಆತನ ಪತ್ನಿ ಸಂಗೀತಾ (35) ಹಾಗೂ ಚೌಡ್ಲು ಗ್ರಾಮದ ಪಿ.ಎಂ ಗಣಪತಿ (43) ಬಂಧಿತ ಆರೋಪಿಗಳಾಗಿದ್ದಾರೆ. ಈ ಮೂವರೂ ಕೊಲೆಯಾದ ಸಂಪತ್‌ ಸ್ನೇಹಿತರೇ ಎಂಬುದು ಗಮನಾರ್ಹ. ಇದನ್ನೂ ಓದಿ: Madikeri | ನಾಲ್ಕೈದು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

    Madikeri Death Sampath 1 1

    ಆರೋಪಿ ಸಿಕ್ಕಿಬಿದ್ದಿದ್ದೇ ರೋಚಕ
    ವೈಯಕ್ತಿಕ ದ್ವೇಷದಿಂದ ಕೊಲೆ ಮಾಡಲು ಆರೋಪಿ ಸಂಗೀತಾ ಸಂಚು ರೂಪಿಸಿದ್ದಳು. ಅದಕ್ಕಾಗಿ ಮೇ 9ರಂದು ಸಂಪತ್‌ ನಾಯರ್‌ನನ್ನ ಸೋಮವಾರಪೇಟೆಯ ಹಾನಗಲ್‌ನಲ್ಲಿರುವ ತನ್ನ ಮನೆಗೆ ಬರಲು ಹೇಳಿದ್ದಳು. ಸಾಲದ ಹಣ ವಾಪಸ್‌ ಕೊಡುತ್ತೇನೆ ಎಂದು ಕರೆಸಿಕೊಂಡಿದ್ದಳು. ಸಂಪತ್‌ ಮನೆಗೆ ಬಂದ ಮೇಲೆ ಸಂಗೀತಾಳ ಗಂಡ ಕಿರಣ್‌ ಹಾಗೂ ಸ್ನೇಹಿತ ಗಣಪತಿ ಮೂವರು ಸೇರಿ ದೊಣ್ಣೆಯಿಂದ ಹೊಡೆದು, ಕತ್ತಿಯಿಂದ ಇರಿದು ಕೊಲೆ ಮಾಡಿದ್ದಾರೆ. ಕೊಲೆಯನ್ನು ಮರೆಮಾಚಲು ಮೃತ ದೇಹವನ್ನ ಸಂಪತ್ ನಾಯರ್ ತಂದಿದ್ದ ಫಿಯೆಟ್ ಪುಂಟೋ ಕಾರಿನಲ್ಲೇ ಹಾಕಿಕೊಂಡು ಸಕಲೇಶಪುರ ತಾಲೂಕು ಒಳಗೂರು ಅರಣ್ಯದಲ್ಲಿ ಬಿಸಾಡಿದ್ದಾರೆ. ಬಳಿಕ ಕಲ್ಲಳ್ಳಿ ಬಳಿ ಆತನ ಕಾರು ನಿಲ್ಲಿಸಿ ಬೇರೊಂದು ಕಾರಿನಲ್ಲಿ ಬೆಂಗಳೂರಿಗೆ ತೆರಳಿದ್ದರು. ಮೇ 16 ರಂದು ಪೊಲೀಸರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ ಕಿರಣ್‌ನನ್ನ ಬೆಂಗಳೂರಿನಲ್ಲಿ ಬಂಧಿಸಲಾಯಿತು. ಇನ್ನೂ ಮೇ 17ರಂದು ಬೆಳ್ತಂಗಡಿಯ ಅಂಗಡಿಯಲ್ಲಿ ಮತ್ತೊಬ್ಬ ಆರೋಪಿ ಗಣಪತಿ ಹಾಗೂ ಮೇ 18ರಂದು (ಇಂದು) ಆರೋಪಿ ಸಂಗೀತಾಳನ್ನ ಸೋಮವಾರ ಪೇಟೆಯಲ್ಲಿ ಬಂಧಿಸಲಾಯಿತು.

    Madikeri Death Sampath

    ಪೊಲೀಸರು ವಿಚಾರಣೆ ನಡೆಸಿದ ಬಳಿಕ ತಪ್ಪೊಪ್ಪಿಕೊಂಡು ಘಟನೆಯ ವಿವರಣೆ ನೀಡಿದ್ದಾರೆ. ಈ ಸಂಬಂಧ ಕೃತ್ಯಕ್ಕೆ ಬಳಸಲಾದ ದೊಣ್ಣೆ, ಕತ್ತಿ ಹಾಗೂ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಪ್ರಕರಣದ ತನಿಖೆ ಮುಂದುವರಿಸಲಾಗಿದೆ. ಈ ಕುರಿತು ಮಾತನಾಡಿರುವ ಎಸ್ಪಿ ರಾಮರಾಜನ್, ಆರೋಪಿಗಳು ತಲೆಮರಿಸಿಕೊಳ್ಳಲು ಸಹಕರಿಸಿದ ಇತರರನ್ನ ಸದ್ಯದಲ್ಲೇ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 2006ರಲ್ಲಿ RSS ಕಚೇರಿ ಮೇಲಿನ ದಾಳಿಯ ಪ್ರಮುಖ ಸಂಚುಕೋರ, ಲಷ್ಕರ್ ಉಗ್ರ ಪಾಕ್‌ನಲ್ಲಿ ಹತ್ಯೆ

    ಅನೈತಿಕ ಸಂಬಂಧ?
    ಕಿರಣ್, ಗಣಪತಿ, ಸಂಪತ್ ನಾಯರ್ ಸ್ನೇಹಿತರಾಗಿದ್ದು, ಮೂವರು, ಹಣಕಾಸು ವ್ಯವಹಾರದಲ್ಲಿ ಪಾಲುದಾರರಾಗಿದ್ದರು. ಆದ್ರೆ ಸಂಪತ್‌ ಕಿರಣ್‌ ಪತ್ನಿ ಸಂಗೀತಾಳ ವಿಡಿಯೋ ಒಂದನ್ನ ಇಟ್ಟುಕೊಂಡು ಆಗಾಗ್ಗೆ ಬ್ಲ್ಯಾಕ್‌ಮೇಲ್‌ ಮಾಡ್ತಿದ್ದ. ಅಲ್ಲದೇ ಈ ಹಿಂದೆ ಸಂಗೀತಾ ಕೆಲವು ತಿಂಗಳ ಕಾಲ ಸಂಪತ್‌ನ ಜೊತೆಗಿದ್ದಳು. ಪುನಃ ತನ್ನ ಗಂಡ ಕಿರಣ್‌ಜೊತೆಗೆ ಬಾಳ್ವೆ ನಡೆಸುತ್ತಿದ್ದಳು. ಆಕೆ ಸಂಪತ್‌ನೊಂದಿಗೆ ಇದ್ದ ಸಂದರ್ಭದಲ್ಲಿ 20 ಲಕ್ಷ ಹಣ ಪಡೆದುಕೊಂಡಿದ್ದಳು. ಅದನ್ನು ವಾಪಸ್‌ ನೀಡದೇ ಇದ್ದಿದ್ದಕ್ಕೆ ಸಂಪತ್ ಬ್ಲ್ಯಾಕ್‌ಮೇಲ್‌ ಮಾಡಲು ಶುರು ಮಾಡಿದ್ದ. ಇದರಿಂದ ರೊಚ್ಚಿಗೆದ್ದ ಕಿರಣ್‌, ಸಂಗೀತಾ ಆಕೆಯ ಸಂಬಂಧಿ ಗಣಪತಿಯೊಂದಿಗೆ ಸೇರಿ ಸ್ಕೆಚ್ ಹಾಕಿ, ಸಂಪತ್‌ನನ್ನ ಮುಗಿಸಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಪಾಕ್‌ಗೆ ಪುರಿ ಜಗನ್ನಾಥ ದೇವಾಲಯದ ಫೋಟೋ, ವಿಡಿಯೋ ಸೋರಿಕೆ ­- ಜ್ಯೋತಿ ಸಂಪರ್ಕದಲ್ಲಿದ್ದ ಮತ್ತೊಬ್ಬ ಯೂಟ್ಯೂಬರ್‌ಗೆ IB ಡ್ರಿಲ್‌

  • Kodagu | ವಧುವಿಗೆ ತೊಡಿಸಲು ಇಟ್ಟಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು

    Kodagu | ವಧುವಿಗೆ ತೊಡಿಸಲು ಇಟ್ಟಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು

    ಮಡಿಕೇರಿ: ವಧುವಿಗೆ ತೊಡಿಸಲೆಂದು ಇಟ್ಟಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ (Gold jewellery) ಮದುವೆ ಮನೆಯಲ್ಲೇ ಕಳ್ಳತನವಾಗಿರುವ ಘಟನೆ ಕೊಡಗು (Kodagu) ಜಿಲ್ಲೆಯ ಕುಶಾಲನಗರ ತಾಲೂಕಿನ ರೈತ ಭವನದಲ್ಲಿ ನಡೆದಿದೆ.

    ಸಂಬಂಧಿಕರ ಸೋಗಿನಲ್ಲಿ ಬಂದ ಯುವಕನಿಂದಲೇ ಕಳ್ಳತನ ಆಗಿದೆ. ಅಂದಾಜು 45,000 ರೂ. ಮೌಲ್ಯದ ಚಿನ್ನ, 50 ಸಾವಿರ ರೂ. ಮೌಲ್ಯದ ಚಿನ್ನದ ಕಡಗ, 23,000 ಮೌಲ್ಯದ ಒಂದು ಜೊತೆ ಚಿನ್ನದ ಓಲೆ, ಜೊತೆಗೆ 5,000 ರೂ. ಕದ್ದು ಪರಾರಿಯಾಗಿದ್ದಾನೆ ಎಂದು ವಧುವಿನ ಕುಟುಂಬಸ್ಥರು ಆರೋಪಿಸಿದ್ದಾರೆ. ಇದನ್ನೂ ಓದಿ: ಡಿ.1 ರಿಂದ ಒಟಿಪಿ ಬರುತ್ತಾ? ಬರಲ್ವಾ? – ಎಲ್ಲಾ ಗೊಂದಲಗಳಿಗೆ ತೆರೆ ಎಳೆದ ಟ್ರಾಯ್‌

    ಘಟನೆ ಸಂಬಂಧ ಕುಶಾಲನಗರ ನಗರ ಠಾಣೆಗೆ ವಧುವಿನ ಪೋಷಕರು ದೂರು ನೀಡಿದ್ದಾರೆ. ನಂತರ ಮದುವೆ ಮಂಟಪಕ್ಕೆ ತೆರಳಿದ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನ ಪರಿಶೀಲಿಸಿದ್ದಾರೆ. ಮುಂದಿನ ತನಿಖೆ ಕೈಗೊಂಡಿದ್ದು, ಕಳ್ಳನಿಗಾಗಿ ಬಲೆ ಬೀಸಿದ್ದಾರೆ. ಇದನ್ನೂ ಓದಿ: ಒಳ್ಳೆಯ ರಾಜಕಾರಣದ ಬಗ್ಗೆ ಮಾನ ಮರ್ಯಾದೆ ಇರುವವರ ಬಳಿ ಪ್ರಶ್ನೆ ಕೇಳಿ – ಯತ್ನಾಳ್ ಟಾಂಗ್