Tag: Kushalnagara

  • ಕೊಲೆಯಾಗಿದ್ದ ಮಹಿಳೆ ಪತ್ತೆ ಕೇಸ್; 2 ವರ್ಷ ಜೈಲುಶಿಕ್ಷೆ ಅನುಭವಿಸಿ ನಿರಪರಾಧಿಯಾಗಿ ಬಿಡುಗಡೆಯಾದ ಸುರೇಶ್

    ಕೊಲೆಯಾಗಿದ್ದ ಮಹಿಳೆ ಪತ್ತೆ ಕೇಸ್; 2 ವರ್ಷ ಜೈಲುಶಿಕ್ಷೆ ಅನುಭವಿಸಿ ನಿರಪರಾಧಿಯಾಗಿ ಬಿಡುಗಡೆಯಾದ ಸುರೇಶ್

    ಮಡಿಕೇರಿ: ಪತ್ನಿಯನ್ನು ಕೊಲೆ ಮಾಡಿದ್ದಾನೆ ಎಂದು ಶಿಕ್ಷೆ ವಿಧಿಸಿದ್ದ ನ್ಯಾಯಾಲಯವೇ, `ಪೊಲೀಸರು ಸುಳ್ಳು ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಆತ ತಪ್ಪು ಮಾಡಿಲ್ಲ’ ಎಂದು ಸ್ಪಷ್ಟಪಡಿಸಿ ನಿರಪರಾಧಿ ಎಂದು ಘೋಷಿಸಿದೆ. ತಪ್ಪು ಮಾಡದೇ 2 ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ್ದ ವ್ಯಕ್ತಿ ಇದೀಗ ನ್ಯಾಯ ದೊರಕಿಸಿಕೊಟ್ಟ ವಕೀಲರಿಗೂ ಹಾಗೂ ನ್ಯಾಯಾಧೀಶರಿಗೂ ಕೃತ್ಯಜ್ಞತೆ ಸಲ್ಲಿಸಿದ್ದಾರೆ.

    ಏನಿದು ಪ್ರಕರಣ?
    4 ವರ್ಷದ ಹಿಂದೆ, ಮೈಸೂರು (Mysuru) ಜಿಲ್ಲೆಯ ಬೆಟ್ಟದಪುರದ ಶಾನುಭೋಗನಹಳ್ಳಿಯಲ್ಲಿ ಮಹಿಳೆಯ ಶವವು ಪತ್ತೆಯಾಗಿತ್ತು. ಮೃತ ಮಹಿಳೆಯನ್ನು ಕೊಡಗಿನ (Kodagu) ಕುಶಾಲನಗರದ ನಿವಾಸಿ ಮಲ್ಲಿಗೆ ಎಂದು ಗುರುತಿಸಲಾಗಿತ್ತು. ಆ ಮಹಿಳೆಯನ್ನು ಆಕೆಯ ಗಂಡ ಸುರೇಶ್ ಕೊಲೆ ಮಾಡಿದ್ದಾನೆ ಎಂದು ಆರೋಪಿಸಿ ಬೆಟ್ಟದಪುರ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಇದನ್ನೂ ಓದಿ: ಕೊಲೆಗೈದು ಅಂತ್ಯಸಂಸ್ಕಾರ ಮಾಡಿ ಜೈಲುಪಾಲಾಗಿದ್ದ ಪತಿಗೆ ಶಾಕ್‌ – 4 ವರ್ಷದ ಬಳಿಕ ಪ್ರಿಯಕರನ ಜೊತೆ ಪತ್ನಿ ಪ್ರತ್ಯಕ್ಷ!

    ವಿಚಾರಣೆ ನಡೆಸಿದ ಜಿಲ್ಲಾ ನ್ಯಾಯಾಲಯವು ಆರೋಪಿಗೆ ಜೈಲು ಶಿಕ್ಷೆ ವಿಧಿಸಿತ್ತು. ನಂತರ ಅವರು ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು. ಏ. 1ರಂದು ಮಹಿಳೆಯು ಆಕೆಯ ಪ್ರಿಯತಮ ಗಣೇಶ್‌ನೊಂದಿಗೆ ಮಡಿಕೇರಿ ನಗರದಲ್ಲೇ ಪತ್ತೆಯಾದ ಬಳಿಕ ಪ್ರಕರಣ ತಿರುವು ಪಡೆದುಕೊಂಡಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ ಮೈಸೂರಿನ 5ನೇ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ ನ್ಯಾಯಾಲಯವು ಪೊಲೀಸ್ ತನಿಖಾಧಿಕಾರಿಗಳ ಕರ್ತವ್ಯ ಲೋಪವನ್ನು ಎತ್ತಿಹಿಡಿದು, ಏ.23ಕ್ಕೆ ಆದೇಶ ಕಾಯ್ದಿರಿಸಿತ್ತು. ಬುಧವಾರ ಈ ಪ್ರಕರಣ ಕೈಗೆತ್ತಿಕೊಂಡ ನ್ಯಾಯಾಲಯ ಕೊಲೆ ಮಾಡದೇ 2 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ಸುರೇಶ್ ಎಂಬುವವರನ್ನು ನಿರಪರಾಧಿ ಎಂದು ಘೋಷಣೆ ಮಾಡಿ ಗೌರವಯುತವಾಗಿ ಬಿಡುಗಡೆ ಮಾಡಿದೆ. ಇದನ್ನೂ ಓದಿ: ಏ.27ರೊಳಗೆ ಭಾರತ ಬಿಟ್ಟು ತೊಲಗಿ – ಪಾಕ್ ಪ್ರಜೆಗಳಿಗೆ ಭಾರತ ಖಡಕ್ ವಾರ್ನಿಂಗ್

    ಈ ಕೊಲೆ ಆರೋಪದಲ್ಲಿ ಜೈಲುವಾಸ ಅನುಭವಿಸಿದ್ದ ಕುಶಾಲನಗರದ ಬಸವನಹಳ್ಳಿ ನಿವಾಸಿ ಸುರೇಶ್ ಅವರನ್ನು ನಿರಪರಾಧಿ ಎಂದು ಘೋಷಿಸುತ್ತಿದ್ದಂತೆ ಕುಟುಂಬಸ್ಥರು ಕಣ್ಣಿರು ಹಾಕಿದರು. ಪ್ರಕರಣ ಸಂಬಂಧ, ಪೊಲೀಸ್ ದಾಖಲೆಗಳಿಂದ ಅವರ ಹೆಸರನ್ನು ತೆಗೆದು ಹಾಕುವಂತೆ ಬೆಟ್ಟದಪುರ ಪೊಲೀಸರಿಗೆ ನ್ಯಾಯಾಧೀಶರಾದ ಗುರುರಾಜ್ ಸೋಮಕ್ಕಳವರ್ ಸೂಚನೆ ನೀಡಿದರು. ಆರೋಪಿಯ ಜಾಮೀನು ಬಾಂಡ್ ಮತ್ತು ಅವರ ಶೂರಿಟಿ ಬಾಂಡ್ ಅನ್ನು ರದ್ದುಗೊಳಿಸಲಾಗಿದೆ. ಅವರಿಗೆ 1 ಲಕ್ಷ ಪರಿಹಾರ ನೀಡುವಂತೆ ಸರ್ಕಾರದ ಗೃಹ ಇಲಾಖೆಯ ಮುಖ್ಯ ಕಾರ್ಯದರ್ಶಿಗೆ ಆದೇಶಿಸಿದರು. ಇದನ್ನೂ ಓದಿ: ನೀರು ನಿಲ್ಲಿಸೋದು ಯುದ್ಧಕ್ಕೆ ಆಹ್ವಾನಿಸಿದಂತೆ – ಭಾರತದ ಪ್ರತೀಕಾರ ನಿರ್ಧಾರದಿಂದ ಕೋಪಗೊಂಡ ಪಾಕ್‌

    ಪ್ರಕರಣದ ತನಿಖಾಧಿಕಾರಿಯಾಗಿದ್ದ ಅಂದಿನ ಬೈಲಕುಪ್ಪೆ ಸರ್ಕಲ್ ಇನ್‌ಸ್ಪೆಕ್ಟರ್ ಬಿ.ಜಿ.ಪ್ರಕಾಶ್ ವಿರುದ್ಧ ಐಪಿಸಿ ಸೆಕ್ಷನ್ 193, 195ರ ಅಡಿ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಜಿಲ್ಲಾ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿಗೆ ಸೂಚಿಸಿದ್ದಾರೆ. ಅಲ್ಲದೇ ತನಿಖಾ ತಂಡದಲ್ಲಿದ್ದ ಅಂದಿನ ಪ್ರೊಬೇಷನರಿ ಐಪಿಎಸ್ ಅಧಿಕಾರಿ ಜಿತೇಂದ್ರ ಕುಮಾರ್, ಬೆಟ್ಟದಪುರ ಪಿಎಸ್‌ಐ ಮಹೇಶ್ ಕುಮಾರ್, ಎಸ್‌ಐ ಪ್ರಕಾಶ್ ಯತ್ತಿಮನಿ ವಿರುದ್ಧ ಇಲಾಖಾ ತನಿಖೆ ನಡೆಸಬೇಕು ಎಂದು ಮೈಸೂರು ಐಜಿಪಿಗೆ ಆದೇಶಿಸಿದ್ದಾರೆ. ಹಾಗೆಯೇ ಪ್ರಸ್ತುತ ಪ್ರಕರಣದಲ್ಲಿ ದಾಖಲಾದ ಯುಡಿಆರ್ ಕುರಿತು ತನಿಖೆ ನಡೆಸಿ, ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚಿಸಿದ್ದಾರೆ. ಇದನ್ನೂ ಓದಿ: ಟಾಲಿವುಡ್‌ ಸಿನಿಮಾದಲ್ಲಿ ಸುದೀಪ್‌ ಪುತ್ರಿ ಸಾನ್ವಿ- ಫ್ಯಾನ್ಸ್‌ಗೆ ಗುಡ್‌ ನ್ಯೂಸ್

    ಬಿಡುಗಡೆ ಬಳಿಕ ಮಾತನಾಡಿರುವ ಸುರೇಶ್ ಅವರು, ತಾನು ಮಾಡದೇ ಇರುವ ತಪ್ಪಿಗೆ 2 ವರ್ಷ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಯಿತು. ತಮಿಳು ಚಿತ್ರದ `ಜೈಭೀಮ್’ ಚಿತ್ರದಲ್ಲಿ ಹೇಗೆ ಪೊಲೀಸರು ಟ್ರೀಟ್‌ಮೆಂಟ್ ನೀಡಿದ್ರೋ ಹಾಗೇ ನನ್ನ ನಿಜ ಜೀವನದಲ್ಲಿ ಅಂತಹ ಟ್ರೀಟ್‌ಮೇಟ್ ಪೋಲಿಸರು ಕೊಟ್ಟಿದ್ದಾರೆ. ಕರೆಂಟ್ ಶಾಕ್, ಹಗ್ಗದಲ್ಲಿ ಕಟ್ಟಿ ಹಾಕಿ ಮಾಡದೇ ಇರುವ ಕೊಲೆಯನ್ನು ತನ್ನ ತಲೆಯ ಮೇಲೆ ಹಾಕಿದರು. ಗೊತ್ತಿಲ್ಲದ ಸ್ಥಳದಲ್ಲಿ ಮಹಜರು ಮಾಡಿದರು. ನನಗೆ ಶಿಕ್ಷೆ ಕೊಟ್ಟ ಹಾಗೆ ಬಡವರ್ಗದ ಹಲವು ಜನರಿಗೂ ಶಿಕ್ಷೆ ನೀಡಿ ಮಾಡದೇ ಇರುವ ತಪ್ಪುಗಳನ್ನು ಬೇರೆ ಯಾರೋ ಮೇಲೆ ಕೇಸ್ ಹಾಕಿದ್ದಾರೋ ಗೊತ್ತಿಲ್ಲ. ಈ ಪ್ರಕರಣದ ಬಗ್ಗೆ ಸಮಗ್ರ ತನಿಖೆಯಾಗಬೇಕು. ಅಲ್ಲದೇ ತನ್ನ ಪರ ನ್ಯಾಯಾಲಯದಲ್ಲಿ ವಕೀಲರಾದ ಪಾಡು ಪೂಜಾರಿ ಅವರು ವಾದ ಮಾಡಿ ತನ್ನ ಬಳಿ 1 ರೂ. ಹಣವನ್ನೂ ಪಡೆಯದೇ ತನಗೆ ನ್ಯಾಯ ಕೊಡಿಸಿದ್ದಾರೆ ಅವರಿಗೆ ಧನ್ಯವಾದಗಳು ಎಂದರು. ಇದನ್ನೂ ಓದಿ: ಬಸ್‌ ನಿಲ್ಲಿಸದಿದ್ದಕ್ಕೆ ಕಲ್ಲೆಸೆದು ಅನ್ಯಕೋಮಿನ ಯುವಕರಿಂದ ದಾಂಧಲೆ – ಸಾರ್ವಜನಿಕರಿಂದ ಬಿತ್ತು ಗೂಸಾ

    ಪತ್ನಿ ನಾಪತ್ತೆ ಆಗಿದ್ದಾಳೆ ಎಂದು ಪೊಲೀಸ್ ಠಾಣೆಗೆ ದೂರು ನೀಡಲು ಹೋಗಿ, ನನ್ನನ್ನೇ ಕೊಲೆ ಆರೋಪಿಯನ್ನಾಗಿ ಮಾಡಿದ್ದರು. ಮಾಡದ ತಪ್ಪಿಗೆ 2 ವರ್ಷ ಜೈಲು ಶಿಕ್ಷೆ ಅನುಭವಿಸುವಂತೆ ಮಾಡಿದ ಪೋಲಿಸರಿಗೆ ತಕ್ಕ ಶಿಕ್ಷೆ ಆಗುತ್ತದೆ ಅನ್ನೋ ನಿರೀಕ್ಷೆಯಲ್ಲಿ ಸುರೇಶ್ ಇದ್ದಾರೆ.

  • ಮನೆಮುಂದೆ ನಿಲ್ಲಿಸಿದ್ದ ಕಾರನ್ನು ಹೆದ್ದಾರಿಗೆ ತಳ್ಳಿಕೊಂಡು ಬಂದ ಕಾಡಾನೆ

    ಮನೆಮುಂದೆ ನಿಲ್ಲಿಸಿದ್ದ ಕಾರನ್ನು ಹೆದ್ದಾರಿಗೆ ತಳ್ಳಿಕೊಂಡು ಬಂದ ಕಾಡಾನೆ

    ಮಡಿಕೇರಿ: ಕಾಡಾನೆಯೊಂದು (Wild Elephant) ದಾಳಿ ಮಾಡಿ ಮನೆಮುಂದೆ ನಿಲ್ಲಿಸಿದ್ದ ಕಾರನ್ನು (Car) ಹೆದ್ದಾರಿಗೆ ತಳ್ಳಿಕೊಂಡು ಬಂದಿರುವ ಘಟನೆ ಕುಶಾಲನಗರ (Kushalnagara) ತಾಲೂಕಿನ ಸುಂಟಿಕೊಪ್ಪ (Suntikoppa) ಸಮೀಪದ 7ನೇ ಹೊಸಕೋಟೆಯ ಮೆಟ್ನಳ್ಳದಲ್ಲಿ ನಡೆದಿದೆ.

    ಶನಿವಾರ ಮುಂಜಾನೆ 4:30ರ ಸುಮಾರಿಗೆ ಈ ಘಟನೆ ನಡೆದಿದ್ದು, ಮೆಟ್ನಳ್ಳದ ರಾಷ್ಟ್ರೀಯ ಹೆದ್ದಾರಿ (National Highway) ಬದಿಯ ಮನೆಯ ಸಮೀಪದ ಖಾಲಿ ಜಾಗದಲ್ಲಿ ಸ್ವಿಫ್ಟ್ ಮತ್ತು ಸ್ಯಾಂಟ್ರೋ ಕಾರುಗಳು ನಿಲುಗಡೆಗೊಳಿಸಲಾಗಿತ್ತು. ಮೊದಲು ಕಾಡಾನೆ ಸ್ಯಾಂಟ್ರೋ ಕಾರಿನ ಮೇಲೆರಗಿದೆ. ನಂತರ ಸಾನಿಪ್ ಎಂಬವರ ಸ್ವಿಫ್ಟ್ ಕಾರಿನ ಮೇಲೆ ದಾಳಿ (Attack) ಮಾಡಿ ಹೆದ್ದಾರಿವರೆಗೆ ತಳ್ಳಿಕೊಂಡು ಬಂದಿದೆ. ಬಳಿಕ ಕಾರನ್ನು ಅಲ್ಲಿಯೇ ಬಿಟ್ಟು ಕಾಡಾನೆ ಅಲ್ಲಿಂದ ಕಾಲ್ಕಿತ್ತಿದೆ. ಇದರಿಂದಾಗಿ ಕಾರಿಗೆ ಸಣ್ಣಪುಟ್ಟ ಡ್ಯಾಮೇಜ್ ಆಗಿದೆ. ಇದನ್ನೂ ಓದಿ: ಕುಖ್ಯಾತ ಮನೆಗಳ್ಳರ ಅರೆಸ್ಟ್ – 20 ಲಕ್ಷ ಮೌಲ್ಯದ ವಸ್ತುಗಳು ಜಪ್ತಿ 

    ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸಿ ಕಾರಿನ ಮಾಲಿಕರಿಗೆ ಪರಿಹಾರಕ್ಕೆ ಅರ್ಜಿ ಹಾಕುವಂತೆ ಹೇಳಿ ತೆರಳಿದ್ದಾರೆ. ಇದನ್ನೂ ಓದಿ: ಮತದಾರರಿಗೆ ಗಿಫ್ಟ್ ಆಮಿಷ ಆರೋಪ – ಕಾಂಗ್ರೆಸ್ ಅಭ್ಯರ್ಥಿ ಕುಸುಮಾ, ಡಿ.ಕೆ ಸುರೇಶ್ ವಿರುದ್ಧ ಕೇಸ್

  • ಕುಶಾಲನಗರ ನೂತನ ತಾಲೂಕು ಅಸ್ತಿತ್ವಕ್ಕೆ ಆರ್ ಅಶೋಕ್ ಚಾಲನೆ

    ಕುಶಾಲನಗರ ನೂತನ ತಾಲೂಕು ಅಸ್ತಿತ್ವಕ್ಕೆ ಆರ್ ಅಶೋಕ್ ಚಾಲನೆ

    ಮಡಿಕೇರಿ: ಕಂದಾಯ ಸಚಿವರಾದ ಆರ್ ಅಶೋಕ್ ಅವರು ನೂತನವಾಗಿ ರಚನೆಗೊಂಡಿರುವ ಕೊಡಗು ಜಿಲ್ಲೆಯ ಐದನೇ ತಾಲೂಕು ಕುಶಾಲನಗರದ ಅಧಿಕೃತ ಕಾರ್ಯಾರಂಭಕ್ಕೆ ಚಾಲನೆ ನೀಡಿದರು.

    ಬಳಿಕ ಮಾತನಾಡಿದ ಆರ್. ಅಶೋಕ ಅವರು “ಕುಶಾಲನಗರ ತಾಲೂಕು ಕೇಂದ್ರವಾಗಬೇಕು ಎಂದು ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು 20-30 ಬಾರಿ ಕಚೇರಿಗೆ ಬಂದು ವಿನಂತಿಸಿದ್ದಾರೆ. ಅಪ್ಪಚ್ಚು ರಂಜನ್ ಅವರ ಪ್ರಯತ್ನದಿಂದ ಕುಶಾಲನಗರ ತಾಲೂಕು ಕೇಂದ್ರವಾಗಿದೆ. ಇಲ್ಲಿನ ಶಾಸಕರ ಹೋರಾಟದ ಫಲವಾಗಿ ಕುಶಾಲನಗರ ತಾಲ್ಲೂಕು ಅಸ್ತಿತ್ವಕ್ಕೆ ಬಂದಿದೆ” ಎಂದು ಕಂದಾಯ ಸಚಿವರು ಹೇಳಿದರು.

    “ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಪೊನ್ನಂಪೇಟೆ ಮತ್ತು ಕುಶಾಲನಗರ ನೂತನ ತಾಲೂಕು ಕೇಂದ್ರವಾಗಬೇಕು ಎಂದು ಅಧಿಸೂಚನೆ ಹೊರಡಿಸಿತ್ತು. ಅದರಂತೆ ಇಂದು ಕುಶಾಲನಗರ ತಾಲೂಕು ಅಸ್ತಿತ್ವಕ್ಕೆ ಬಂದಿದೆ. ತಾಲ್ಲೂಕು ಕೇಂದ್ರದಲ್ಲಿ ಗ್ರೇಡ್-1 ತಹಶೀಲ್ದಾರರು ಸೇರಿದಂತೆ ಒಟ್ಟು 12 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಜೊತೆಗೆ 50 ಲಕ್ಷ ರೂ. ಹಣ ಬಿಡುಗಡೆ ಮಾಡಲಾಗಿದೆ” ಎಂದು ಸಚಿವರು ತಿಳಿಸಿದರು. ಇದನ್ನೂ ಓದಿ: KRS ಸುರಕ್ಷಿತವಾಗಿದೆ, ಯಾವುದೇ ತೊಂದರೆ ಇಲ್ಲ: ಅಶೋಕ್

    “ಸರ್ಕಾರ 2020-21 ನೇ ಸಾಲಿನಲ್ಲಿ ವಿಪತ್ತು ನಿರ್ವಹಣೆ, ಬೆಳೆ ಹಾನಿ ಪರಿಹಾರ, ಕೋವಿಡ್ ನಿರ್ವಹಣೆ ಹೀಗೆ ಹಲವು ವಿಪತ್ತನ್ನು ಎದುರಿಸಲು ಹೆಚ್ಚಿನ ಹಣ ಬಿಡುಗಡೆ ಮಾಡಿದೆ, ಕುಶಾಲನಗರ ತಾಲ್ಲೂಕು ಅಭಿವೃದ್ಧಿಗೆ ಸಂಬಂಧಿಸಿದಂತೆ ಎಲ್ಲಾ ರೀತಿಯ ನೆರವು ನೀಡಲಾಗುವುದು. ಹಂತ ಹಂತವಾಗಿ ಮೂಲ ಸೌಲಭ್ಯಗಳನ್ನು ಅಭಿವೃದ್ಧಿ ಪಡಿಸಲಾಗುವುದು” ಎಂದು ಭರವಸೆ ನೀಡಿದರು.