ಬೆಂಗಳೂರು: ಆಡಳಿತ ಪಕ್ಷ ಬಿಜೆಪಿ ಮತ್ತು ವಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್‍ಗೆ ಪ್ರತಿಷ್ಠೆಯಾಗಿದ್ದ ರಾಜರಾಜೇಶ್ವರಿ ನಗರದ ಫಲಿತಾಂಶ ಏನಾಗಬಹುದು ಎಂಬುದು ಎಕ್ಸಿಟ್ ಪೋಲ್‍ನಲ್ಲಿ ಬಯಲಾಗಿದೆ. ಆರ್‍ಆರ್ ನಗರದ 9 ವಾರ್ಡ್‍ಗಳಲ್ಲಿ ಪಬ್ಲಿಕ್ ಟಿವಿ ಸಮೀಕ್ಷೆಯಲ್ಲಿ ನಡೆಸಿದ್ದು, ಅದರ ಪ್ರಕಾರ ಈ ಕ್ಷೇತ್ರ ಬಿಜೆಪಿ ತೆಕ್ಕೆಗೆ ಜಾರುವುದು ಬಹುತೇಕ ಪಕ್ಕಾ ಆಗಿದೆ.
ರಾಜರಾಜೇಶ್ವರಿ ನಗರದ ಮತದಾರರು ಮುನಿರತ್ನ ಅವರ ಜನಪರ ಕೆಲಸಗಳಿಗೆ ಮೆಚ್ಚಿ ಮತ್ತೆ ಮನ್ನಣೆ ನೀಡಿದಂತೆ ಕಾಣುತ್ತಿದೆ. ಈ ಮೂಲಕ ಮೂರನೇ ಬಾರಿಗೆ ಮುನಿರತ್ನ ಅವರು ವಿಧಾನಸಭೆ ಆಯ್ಕೆ ಆಗಲಿದ್ದಾರೆ.
ರಾಜ್ಯದ ಗುಪ್ತಚರ ಇಲಾಖೆ ತನ್ನದೇ ಮೂಲಗಳಿಂದ ಈ ಬಾರಿ ಆರ್ ಆರ್ ನಗರದಲ್ಲಿ ಯಾರು ಗೆಲ್ಲಬಹುದು ಎಂಬ ಲೆಕ್ಕ ಹಾಕಿದ್ದು ಬಿಜೆಪಿ ಗೆಲ್ಲಲ್ಲಿದೆ ಎಂದು ಸರ್ಕಾರಕ್ಕೆ ವರದಿ ನೀಡಿದೆ.
ರಾಜರಾಜೇಶ್ವರಿ ನಗರ
ಒಟ್ಟು ಮತದಾರರು: 4,62,201
ಚಲಾವಣೆಯಾದ ಮತ: 2,09,333
ಶೇಕಡಾವಾರು ಮತ: 45.3%
ಚಿಕ್ಕಮಗಳೂರು: ಕಾಂಗ್ರೆಸ್ಸಿನಂತಹ ಜನರನ್ನು ನೀವು ಎಲ್ಲೂ ನೋಡಿರಲು ಸಾಧ್ಯವಿಲ್ಲ. ಏಕೆಂದರೆ ಅವರು ಚುನಾವಣೆಯಲ್ಲಿ ಗೆದ್ದರೆ ಜನಾದೇಶ ಅಂತಾರೆ, ಸೋತರೆ ಇವಿಎಂ ಮೇಲೆ ಆರೋಪಿಸುತ್ತಾರೆ. ಈ ರೀತಿಯ ಜನರನ್ನು ನೀವೆಲ್ಲೂ ನೋಡಲು ಆಗುವುದಿಲ್ಲ ಎಂದು ಸಚಿವ ಸಿ.ಟಿ ರವಿ ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದ್ದಾರೆ.
ಚಿಕ್ಕಮಗಳೂರಿನಲ್ಲಿ ಎಐಟಿ ಕಾಲೇಜು ಬಳಿ ಹಿಂದುಳಿದ ವರ್ಗಗಳ ಬಾಲಕರ ವಿದ್ಯಾರ್ಥಿ ನಿಲಯದ ಶಂಕುಸ್ಥಾಪನೆ ಬಳಿಕ ಮಾತನಾಡಿದ ಅವರು, ಆರ್.ಆರ್.ನಗರದಲ್ಲಿ 25 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಹಾಗೂ ಶಿರಾದಲ್ಲಿ 10 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತೇವೆ ಎಂದು ಭವಿಷ್ಯ ನುಡಿದಿದ್ದಾರೆ. ಈಗಾಗಲೇ ಕಾಂಗ್ರೆಸ್ ಸೋಲು ಗ್ಯಾರಂಟಿಯಿಂದ ಇವಿಎಂ ಮೇಲೆ ಆರೋಪಿಸುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.
ಇವಿಎಂಗೆ ಇಂಟರ್ ನೆಟ್ ಕನೆಕ್ಷನ್ ಇರುವುದಿಲ್ಲ. ಅವರು ಈ ಆರೋಪಗಳಿಗೆ ಸಾಕ್ಷಿ ಕೂಡ ನೀಡಿಲ್ಲ. ಈ ರೀತಿಯ ಆರೋಪ ಮಾಡಿದಾಗ ಚುನಾವಣಾ ಆಯೋಗ ನೀಡಿದ ನೋಟಿಸ್‍ಗೆ ಉತ್ತರಿಸಲಾಗದೆ ತಡಪಡಿಸಿದ್ದಾರೆ. ನ್ಯಾಯಾಲಯದ ತೀರ್ಪ ಬಂದರೆ ನ್ಯಾಯಾಧೀಶರನ್ನೇ ಅನುಮಾನಿಸೋದು, ಚುನಾವಣೆಯಲ್ಲಿ ಸೋತರೆ ಇವಿಎಂ ಮೇಲೆ ಗೂಬೆ ಕೂರಿಸೋದು, ಕಾಂಗ್ರೆಸ್ಸಿನವರಿಗೆ ಇದೊಂದು ಕೆಟ್ಟ ಖಾಯಿಲೆ. 2018ರ ಚುನಾವಣೆಯಲ್ಲಿ ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಗೆದ್ದಾಗ ಯಾವುದು ಕೆಲಸ ಮಾಡಿತ್ತು. ಇದೇ ಇವಿಎಂನಲ್ಲಿ ತಾನೇ ಗೆದ್ದದ್ದು ಎಂದು ಕಾಂಗ್ರೆಸ್ ನಾಯಕರನ್ನು ಪ್ರಶ್ನಿಸಿ ಆಕ್ರೋಶ ಹೊರಹಾಕಿದ್ದಾರೆ.
ಇದೇ ವೇಳೆ ಡಿ.ಕೆ.ರವಿ ತಾಯಿ ಸೊಸೆಯನ್ನು ಗೆಲ್ಲಿಸುವಂತೆ ಮಾಡಿದ ಮನವಿಗೆ ಪ್ರತಿಕ್ರಿಯಿಸಿರುವ ಸಚಿವ ಸಿ.ಟಿ.ರವಿ, ಅತ್ತೆ ಸೊಸೆ, ತಾಯಿ ಮಗಳಂತೆ ಇರಲಿ. ಅತ್ತೆ-ಸೊಸೆ ಜಗಳವಾಡಲಿ ಎಂದು ನಾವು ಹೇಳೂ ಇಲ್ಲ, ಬಯಸಿದ್ದೂ ಇಲ್ಲ. ಚುನಾವಣೆ ಮುಗಿದ ಮೇಲೂ ಚೆನ್ನಾಗಿರಲಿ. ಮುಖವನ್ನೇ ನೋಡುವುದಿಲ್ಲ ಎಂದವರು ನೋಡುವಂತಾಗಿರೋದು ಸಂತೋಷದ ಸಂಗತಿ ಎಂದಿದ್ದಾರೆ. ನಾವು ನಮ್ಮ ಪಕ್ಷ ಗೆಲ್ಲಬೇಕು ಎಂದು ಬಯಸುತ್ತೇವೆ. ನಮ್ಮ ತಾತ್ವಿಕ ಹೋರಾಟ ಕಾಂಗ್ರೆಸ್-ಜೆಡಿಎಸ್ ವಿರುದ್ಧ ಎಂದು ತಿಳಿಸಿದರು.
ಬೆಂಗಳೂರು: ನಮ್ಮ ಅಭ್ಯರ್ಥಿ ಹೆಣ್ಣು ಮಗಳ ಮೇಲೆ ಹಾಗೂ ಸಿದ್ದರಾಮಯ್ಯ ಎಸ್ಕಾರ್ಟ್ ಡ್ರೈವರ್ ಮೇಲೆ ಎಫ್‍ಐಆರ್ ಆಗಿದೆ. ಈ ಎಫ್ಐಆರ್ಗೆ ನಾವು ಬೇಲ್ ಪಡೆಯಲ್ಲ, ಸ್ಟೇಷನ್‍ಗೂ ಹೋಗಲ್ಲ. ಇದಕ್ಕೆ ನಾವು ಹೆದರೋ ಪ್ರಶ್ನೆಯೇ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಿಕೆಶಿ, ಪ್ರಜಾಪ್ರಭುತ್ವದಲ್ಲಿ ಇಷ್ಟು ನೀಚವಾದ ರಾಜಕಾರಣ ನಾನು ಯಾವತ್ತೂ ನೋಡಿಲ್ಲ. ಕಾಂಗ್ರೆಸ್ ಪಕ್ಷದ ವಿದ್ಯಾವಂತ ಹೆಣ್ಣುಮಗಳು ಕಾನೂನು ಅರಿವಿರುವ ಹಾಗೂ ನೊಂದು-ಬೆಂದಿರುವ ಹೆಣ್ಣು ಮಗಳನ್ನ ನಾವು ಅಭ್ಯರ್ಥಿ ಮಾಡಿದ್ದೇವೆ ಎಂದರು.
ನಾವು ಸಮಯ ತೆಗೆದುಕೊಂಡು ನಾಮಪತ್ರ ಸಲ್ಲಿಸಲು ಹೋಗಿದ್ದೆವು. ನಾಮಿನೇಷನ್ ಫೈಲ್ ಮಾಡಿದ್ದೇವೆ. 1,100 ಕೇಸು ಬಿಜೆಪಿ ಕಾರ್ಯಕರ್ತರ ಮೇಲಿದೆ. ಕಾಂಗ್ರೆಸ್ಸಿಗರ ಮೇಲೆ ಸುಮಾರು 400ಕ್ಕೂ ಹೆಚ್ಚು ಕೇಸು ಹಾಕಿದ್ದಾರೆ. 3 ಜನ ಹೆಣ್ಣು ಮಕ್ಕಳು ಕಾರ್ಪೊರೇಟರ್ ಗಳ ಮೇಲೆ ದೌರ್ಜನ್ಯವಾಗಿದೆ. ಆಗ ನಾವು ಅಸಾಹಯಕರಾಗಿ ಇದ್ದೆವು. ಜೆಡಿಎಸ್ ಮೇಲೆ ಆರ್‍ಆರ್ ನಗರದಲ್ಲಿ 200ಕ್ಕೂ ಹೆಚ್ಚು ಕೇಸುಗಳಾಗಿವೆ. ಪೊಲೀಸರನ್ನ ಹಾಗೂ ಬಿಬಿಎಂಪಿ ಅಧಿಕಾರಿಗಳನ್ನ ವಶದಲ್ಲಿ ಇಟ್ಟುಕೊಂಡು ಈ ರೀತಿ ಮಾಡಲಾಗಿದೆ ಎಂದು ಡಿಕೆಶಿ ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಆರ್.ಆರ್.ನಗರ ಉಪಚುನಾವಣೆ – ಕೋಟ್ಯಧೀಶೆ, ಸಾಲಗಾರ್ತಿ ಆಗಿದ್ದಾರೆ ಕುಸುಮಾ
ಕೊರೊನಾ ಸಂದರ್ಭದಲ್ಲಿ ಆರ್‍ಎಸ್‍ಎಸ್ ಕಾರ್ಯಕರ್ತನ ವಿರುದ್ಧ ಆನೇಕಲ್ ಸೇರಿದಂತೆ ಮೂರು ಕಡೆ ಕೇಸಾಗಿದೆ. ನಮ್ಮ ಅಭ್ಯರ್ಥಿ ಹೆಣ್ಣು ಮಗಳ ಮೇಲೆ ಹಾಗೂ ಸಿದ್ದರಾಮಯ್ಯ ಎಸ್ಕಾರ್ಟ್ ಡ್ರೈವರ್ ಮೇಲೆ ಎಫ್‍ಐಆರ್ ಆಗಿದೆ. ಸಿದ್ದರಾಮಯ್ಯ ಮೇಲೆ ಎಫ್‍ಐಆರ್ ಹಾಕ್ರಿ. ಅಲ್ಲಿದ್ದ ಪೊಲೀಸರ ಮೇಲೆ ಹಾಕ್ರಿ, ಆ ಅಭ್ಯರ್ಥಿ ಹೆಣ್ಣುಮಗಳ ಮೇಲೆ ಕೇಸು ಹಾಕಿ ಹೆದರಿಸಲು ಹೊರಟಿದ್ದಾರೆ. ಸರ್ಕಾರ ಇದಕ್ಕೆ ಕುಮ್ಮಕ್ಕಾಗಿ ನಿಂತಿದೆ. ನಾಮಪತ್ರ ಹಾಕಲು ಬಂದ ಅಭ್ಯರ್ಥಿ ಮೇಲೆ ಕೇಸು ಹಾಕುವಂತ ಸಣ್ಣ ಹಾಗೂ ನೀಚತನದ ರಾಜಕಾರಣ ಇನ್ನೊಂದಿಲ್ಲ. ಇದಕ್ಕೆ ಪೊಲೀಸರು ಹಾಗೂ ಸರ್ಕಾರವೇ ನೇರ ಕಾರಣ ಎಂದು ದೂರಿದರು.
ಈ ಎಫ್ಐಆರ್ಗೆ ನಾವು ಬೇಲ್ ಪಡೆಯಲ್ಲ, ಸ್ಟೇಷನ್ ಗೆ ಕೂಡ ಹೋಗಲ್ಲ. ಇದಕ್ಕೆ ಹೆದರೋದು ಇಲ್ಲ. ನೂರು ಮೀಟರ್ ಒಳಗೆ ಶಾಸಕರು ಸಚಿವರು ಇದ್ದರಲ್ಲ ಅವರ ಮೇಲೆ ಯಾಕೆ ಕೇಸು ಹಾಕಿಲ್ಲ?. ಬಿಜೆಪಿಯವರು ಜನತಾ ದಳದವರು ಯಾರು ಬರಲಿಲ್ವ? ಅವರ ಮೇಲೆ ಯಾಕೆ ಎಫ್‍ಐಆರ್ ಹಾಕಲಿಲ್ಲ?. ಈ ಸಂಬಂಧ ಚುನಾವಣಾ ಆಯೋಗಕ್ಕೆ ದೂರು ಕೊಡುತ್ತೇವೆ. ಹೆಣ್ಣು ಮಗಳ ಮೇಲಿನ ಶೋಷಣೆಯನ್ನು ಎದುರಿಸುತ್ತೇವೆ ಎಂದು ವಾಗ್ದಾಳಿ ನಡೆಸಿದರು.
ಎಫ್‍ಐಆರ್ ಹಾಕಿದ ಇನ್ಸ್ ಪೆಕ್ಟರನ್ನ ವರ್ಗಾವಣೆ ಮಾಡಬೇಕು. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಆ ಅಭ್ಯರ್ಥಿಯನ್ನ ನಾವೇ ಬೆಳೆಸಿದ್ದು. ನಾವು ಬೆಳೆಸಿ ತಪ್ಪು ಮಾಡಿದ್ದೇವೆ ಎಂದು ಕಿಡಿಕಾರಿದರು.
ಬೆಂಗಳೂರು: ರಾಜರಾಜೇಶ್ವರಿ ನಗರ ಹಾಗೂ ತುಮಕೂರಿನ ಶಿರಾ ಕ್ಷೇತ್ರಗಳ ಉಪ ಚುನಾವಣಾ ಅಖಾಡ ಇಂದಿನಿಂದ ಮತ್ತಷ್ಟು ಕಾವೇರಿದೆ. ಆರ್ಆರ್ ನಗರದ ಬಿಜೆಪಿ ಅಭ್ಯರ್ಥಿ, ಮಾಜಿ ಶಾಸಕ ಮುನಿರತ್ನ ಇಂದು ನಾಮಪತ್ರ ಸಲ್ಲಿಸಿದರು.
ಬಿಜೆಪಿ ನಾಯಕರಾದ ಡಿಸಿಎಂ ಅಶ್ವಥ್ ನಾರಾಯಣ, ಸಚಿವ ಅಶೋಕ್ ಜೊತೆಯಲ್ಲಿ ತೆರಳಿದ ಮುನಿರತ್ನ, ಚುನಾವಣಾಧಿಕಾರಿ ಹೆಚ್.ಎಲ್. ನಾಗರಾಜ್‍ಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಎಲ್ಲಾ ದಾಖಲೆಗಳು ಸರಿಯಾಗಿ ಸಲ್ಲಿಕೆಯಾದ್ದೇಯಾ ಅಂತ ಮುನಿರತ್ನ ಮಾಹಿತಿ ಪಡೆದರು. ಆರ್ ಆರ್ ನಗರದ ಜಂಟಿ ಆಯುಕ್ತರ ಕಚೇರಿವರೆಗೆ ಎಸ್.ಟಿ. ಸೋಮಶೇಖರ್, ಬೈರತಿ ಬಸವರಾಜ್ ಕೂಡ ಸಾಥ್ ನೀಡಿದ್ದರು.
ಈ ವೇಳೆ ಮಾತನಾಡಿದ ಮುನಿರತ್ನ, ಎಲ್ಲಾ ಒಳ್ಳೇ ರೀತಿಯಲ್ಲಿ ನಡೆದಿದೆ. ಕ್ಷೇತ್ರದ ಜನತೆಯ ಋಣ ನನ್ನ ಮೇಲಿದೆ ಅದನ್ನ ತೀರಿಸ್ತೇನೆ. ಬಿಜೆಪಿ ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ. ಒಟ್ಟಾಗಿ ಚುನಾವಣೆ ಎದುರಿಸ್ತೇವೆ ಅಂತ ಹೇಳಿದ್ರು.
ಸಚಿವ ಅಶೋಕ್ ಪ್ರತಿಕ್ರಿಯಿಸಿ, ಮುನಿರತ್ನ ಅವರು 40-50 ಸಾವಿರ ಲೀಡ್‍ನಲ್ಲಿ ಗೆಲ್ತಾರೆ. ರಾಜರಾಜೇಶ್ವರಿ ನಗರದಲ್ಲಿ ಮುನಿರತ್ನಗೆ ಎದುರಾಳಿಯೇ ಇಲ್ಲ. ಸಚಿವರು, ಶಾಸಕರ ಸಹಕಾರದಿಂದ ಎಲ್ಲಾ ದೃಷ್ಟಿಯಿಂದ ನಮಗೆ ಜಯ ಖಚಿತ ಅಂತ ವಿಶ್ವಾಸ ವ್ಯಕ್ತಪಡಿಸಿದ್ರು.
ಕುಸುಮಾ ನಾಮಪತ್ರ ಸಲ್ಲಿಕೆ: ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹನುಮಂತಪ್ಪ ಸಹ ಉಮೇದುವಾರಿಕೆ ಸಲ್ಲಿಸಿದ್ರು. ಕುಸುಮಾ ನಾಮಪತ್ರ ಸಲ್ಲಿಕೆ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಮುಖಂಡರು ಸಾಥ್ ನೀಡಿದ್ರು.
ನಾಮಪತ್ರ ಸಲ್ಲಿಕೆಗೂ ಮುನ್ನ ಆಂಜನೇಯ ದೇಗುಲಕ್ಕೆ ಭೇಟಿ ನೀಡಿದ ಕುಸುಮಾ, ಇಂದು ನನ್ನ ಪಾಲಿಗೆ ಅತ್ಯಂತ ಮಹತ್ವದ ದಿನ. ನನ್ನ ಇಷ್ಟದ ದೇವರು ಆಂಜನೇಯನ ದರ್ಶನ ಮಾಡಿರುವುದರಿಂದ ಹೊಸ ಶಕ್ತಿ ಬಂದಿದೆ ಎಂದ್ರು. ಸಿದ್ದರಾಮಯ್ಯ ಮಾತನಾಡಿ, ನಾನು ಅಹಿಂದ ರಾಮಯ್ಯನೇ. ಯಾವಾಗಲು ಅಹಿಂದ ವರ್ಗದ ಪರ ಇದ್ದೇನೆ ಅಂದ್ರು. ಡಿಕೆಶಿಯಂತೂ ನೊಣವಿನಕೆರೆ ಅಜ್ಜಯ್ಯನ ಆಶೀರ್ವಾದ ಪಡೆದ ಬಳಿಕವೇ ಅಭ್ಯರ್ಥಿ ನಾಮಪತ್ರ ಸಲ್ಲಿಕೆಗೆ ಹಾಜರಾಗಿದ್ರು. ನಾಮಪತ್ರ ಸಲ್ಲಿಕೆ ಬಳಿಕ ಚುನಾವಣಾ ರಣತಂತ್ರದ ಬಗ್ಗೆ ಸಭೆ ನಡೆಸಿದ್ರು.
ಜೆಡಿಎಸ್ ನಾಮಪತ್ರ ಸಲ್ಲಿಕೆ: ಆರ್.ಆರ್.ನಗರದಲ್ಲಿ ಜೆಡಿಎಸ್ ಅಭ್ಯರ್ಥಿ ವಿ.ಕೃಷ್ಣಮೂರ್ತಿ ಕೂಡ ನಾಮಿನೇಷನ್ ಫೈಲ್ ಮಾಡಿದರು. ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ತಮ್ಮ ಅಭ್ಯರ್ಥಿಗೆ ಸಾಥ್ ನೀಡಿದ್ರು. ನಾಮಪತ್ರ ಸಲ್ಲಿಕೆ ಬಳಿಕ ಕೃಷ್ಣಮೂರ್ತಿ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ರು.
ಆರ್.ಆರ್.ನಗರದಲ್ಲಿ ನಿಜಕ್ಕೂ ಕುಮಾರಸ್ವಾಮಿ ಅವರೇ ಅಭ್ಯರ್ಥಿ. ಕಾಂಗ್ರೆಸ್-ಬಿಜೆಪಿಯಲ್ಲಿ ಪ್ರಬಲ ಅಭ್ಯರ್ಥಿಗಳೇ ಇಲ್ಲ. ಜಾತಿ ರಾಜಕಾರಣ ಮಾಡಲ್ಲ. ನಾನು ಮನೆ ಮಗ. ಜನ ಅಭಿವೃದ್ಧಿಗೆ ಮತ ಕೊಡ್ಬೇಕು. ಈ ಬಾರಿ ಜನ ಜೆಡಿಎಸ್ ಕೈ ಹಿಡಿಯುತ್ತಾರೆ ಎಂದು ಕೃಷ್ಣಮೂರ್ತಿ ವಿಶ್ವಾಸ ವ್ಯಕ್ತಪಡಿಸಿದ್ರು.
ಯಾವ ಅಭ್ಯರ್ಥಿಯ ಆಸ್ತಿ ಎಷ್ಟು?
> ಮುನಿರತ್ನ (ಬಿಜೆಪಿ) ಆರ್.ಆರ್.ನಗರ
ಒಟ್ಟು ಆಸ್ತಿ – 89 ಕೋಟಿ 13 ಲಕ್ಷದ 47 ಸಾವಿರದ 877 ರೂ.
ಸಾಲ – 46 ಕೋಟಿ 41 ಲಕ್ಷದ 61 ಸಾವಿರದ 785 ರೂ.
> ಕುಸುಮಾ (ಕಾಂಗ್ರೆಸ್) ಆರ್.ಆರ್.ನಗರ
ಚರಾಸ್ತಿ – 1 ಕೋಟಿ 13 ಲಕ್ಷದ 2 ಸಾವಿರದ 197.38 ರೂ.
ಚಿನ್ನ,ಬೆಳ್ಳಿ – 45 ಲಕ್ಷ ರೂ. ( ಮೌಲ್ಯದ 1,100 ಗ್ರಾಂ)
ಬೆಂಗಳೂರು: ರಾಜರಾಜೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಕೋಟ್ಯಧೀಶೆ ಮತ್ತು ಸಾಲಗಾರ್ತಿ ಆಗಿದ್ದಾರೆ.
ನಾಮಪತ್ರ ಸಲ್ಲಿಸುವಾಗ ಚುನಾವಣಾ ಆಯೋಗಕ್ಕೆ ತಮ್ಮ ಬಳಿ ಇರುವ ಆಸ್ತಿ ವಿವರಗಳನ್ನು ಕುಸುಮಾ ಸಲ್ಲಿಸಿದ್ದಾರೆ. ಪತಿ ಹಾಗೂ ಕುಟುಂಬಸ್ಥರ ಹೆಸರನ್ನು ಕುಸುಮಾ ಅಫಿಡವಿಟ್‌ನಲ್ಲಿ ಎಲ್ಲಿಯೂ ಉಲ್ಲೇಖಿಸಿಲ್ಲ.
1,100 ಗ್ರಾಂ ಚಿನ್ನಾಭರಣ ಹೊಂದಿರುವ ಕುಸುಮಾ 1 ಕೋಟಿಗೂ ಹೆಚ್ಚು ಮೌಲ್ಯದ ಆಸ್ತಿಯ ಒಡತಿ ಆಗಿದ್ದಾರೆ. ನಗದು ರೂಪದಲ್ಲಿ 1,41,050 ರೂ. ಹೊಂದಿರುವ ಅವರು ನಾಲ್ಕು ಬ್ಯಾಂಕ್ ಅಕೌಂಟ್ ಗಳಲ್ಲಿ ಸುಮಾರು 6 ಲಕ್ಷ ಹಣ ಹೊಂದಿದ್ದಾರೆ. 1,13,02,197.38 ರೂ. ಮೌಲ್ಯದ ಚರಾಸ್ತಿ ಹೊಂದಿರುವ ಇರುವ ನನ್ನ ಬಳಿ ಯಾವುದೇ ಕೃಷಿ ಭೂಮಿ ಇಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮುನಿರತ್ನಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂ ತೀರ್ಪಿನಲ್ಲಿ ಏನಿದೆ?
ಸುಮಾರು 2,45,000 ರೂ. ಗಳನ್ನು ವಿವಿಧ ಬಾಂಡ್, ಶೇರುಗಳಲ್ಲಿ ಹೂಡಿಕೆ ಮಾಡಿರುವ ಕುಸುಮಾ ಬಳಿ ಯಾವುದೇ ಸ್ವಂತ ವಾಹನ ಹೊಂದಿಲ್ಲ. ಅನಿಲ್ ಗೌಡ ಎಚ್ ಅವರಿಂದ 2,05,000 ರೂ.ಮತ್ತು ಎ ಬಿಎಚ್ ಇನ್ಫ್ರಾಸ್ಟ್ರಕ್ಚರ್ಸ್ ನಿಂದ 56, 58, 316 ರೂ. ಸಾಲ ಪಡೆದಿದ್ದಾರೆ. 45,00,000 ರೂ. ಮೌಲ್ಯದ 1,100 ಗ್ರಾಂ ಚಿನ್ನ, ಬೆಳ್ಳಿ ಆಭರಣಗಳು ತನ್ನ ಬಳಿ ಇದೆ ಎಂದು ಉಲ್ಲೇಖಿಸಿದ್ದಾರೆ.
ಬಿಬಿಎಂಪಿ ವಾರ್ಡ್ 40 ರಲ್ಲಿ 1500 ಚದರ ಅಡಿ ಹಾಗೂ 2380 ಚದರಡಿ ವಿಸ್ತೀರ್ಣದ ಎರಡು ನಿವೇಶನ ಇದ್ದು, ಇದರ ಸದ್ಯದ ಮಾರುಕಟ್ಟೆ ಮೌಲ್ಯ ಒಟ್ಟು 1,37, 10,000 ರೂ. ಆಗಿದೆ ಎಂದು ವಿವರಿಸಿದ್ದಾರೆ.
ಬೆಂಗಳೂರು: ರಾಜರಾಜೇಶ್ವರಿ ಉಪಚುನಾವಣೆ ದಿನಾಂಕ ಪ್ರಕಟವಾದ ಬಳಿಕ ರಾಜಕೀಯ ಚಟುವಟಿಕೆ ಜೋರಾಗಿದ್ದು ಇಂದು ಹನುಮಂತ ರಾಯಪ್ಪ ಹಾಗೂ ಪುತ್ರಿ ಕುಸುಮಾ ಕಾಂಗ್ರೆಸ್ಸಿಗೆ ಸೇರ್ಪಡೆಯಾಗಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿನ ಡಿಕೆ ಶಿವಕುಮಾರ್ ಕಚೇರಿಯಲ್ಲಿ ಕಾರ್ಯಕ್ರಮದಲ್ಲಿ ಇಬ್ಬರು ಕಾಂಗ್ರೆಸ್ಸಿಗೆ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಯಲ್ಲಿ ಪಕ್ಷ ಸೇರ್ಪಡೆ ವೇದಿಕೆ ಕಾರ್ಯಕ್ರಮ ರದ್ದುಗೊಳಿಸಿ ಸರಳವಾಗಿ ಈ ಕಾರ್ಯಕ್ರಮ ನಡೆಯಿತು.
ಕೆಪಿಸಿಸಿ ಅಧ್ಯಕ್ಷರ ಕಚೇರಿಯಲ್ಲಿ ಸದಸ್ಯತ್ವ ಸ್ವೀಕರಿಸುವ ಮೂಲಕ ಸರಳವಾಗಿ ಅಪ್ಪ, ಮಗಳು ಪಕ್ಷ ಸೇರ್ಪಡೆಯಾದರು. ಈ ವೇಳೆ ಸಿದ್ದರಾಮಯ್ಯ, ಪರಮೇಶ್ವರ್ ಉಪಸ್ಥಿತರಿದ್ದರು.
ಆರ್‌ಆರ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕುಸುಮಾ ಸ್ಪರ್ಧಿಸಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ಆದರೆ ಇನ್ನೂ ಅಧಿಕೃತ ಘೋಷಣೆಯಾಗಿಲ್ಲ.
ಈ ಸಂದರ್ಭದಲ್ಲೇ ಶಿರಾ ಕ್ಷೇತ್ರದ ಬಿಜೆಪಿ ಹಾಗೂ ಜೆಡಿಎಸ್ ನ ಸಾಕಷ್ಟು ಮುಖಂಡರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ರವಿಕುಮಾರ್ ಸೇರ್ಪಡೆಯಾಗಿದ್ದಾರೆ. ಶಿರಾ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ, ಕೆ.ಎನ್.ರಾಜಣ್ಣ ಉಪಸ್ಥಿತರಿದ್ದರು. ಆರ್.ಆರ್ ನಗರ, ಶಿರಾದಲ್ಲಿ ನವೆಂಬರ್ 3ಕ್ಕೆ ಮತದಾನ ನಡೆಯಲಿದ್ದರೆ 10ರಂದು ಫಲಿತಾಂಶ ಪ್ರಕಟವಾಗಲಿದೆ.
ಈ ವೇಳೆ ಮಾತನಾಡಿದ ಡಿಕೆ ಶಿವಕುಮಾರ್, ದೆಹಲಿಗೆ ಇಂದು ಅಭ್ಯರ್ಥಿ ಪಟ್ಟಿಯನ್ನು ಶಿಫಾರಸು ಮಾಡುತ್ತೇವೆ. ನಾವು ಟಿಕೆಟ್ ಕೊಡಲ್ಲ. ಹೈಕಮಾಂಡ್ ಟಿಕೆಟ್ ಪ್ರಕಟಿಸುತ್ತದೆ. ಶಿರಾ, ರಾಜರಾಜೇಶ್ವರಿ ನಗರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಟಿಕೆಟ್ ಅಂತಿಮ ಆಗುತ್ತದೆ. ಶಿರಾ ಕ್ಷೇತ್ರದಲ್ಲಿ ಈ ಹಿಂದೆ ಜಯಚಂದ್ರ 10 ಸಾವಿರ ಮತಗಳ ಅಂತರದಲ್ಲಿ ಸೋತಿದ್ದರು. ಇಡೀ ಜಿಲ್ಲೆಯ ನಾಯಕರು ಒಂದಾಗಿದ್ದಾರೆ.ರಾಜ್ಯ ಸರ್ಕಾರದ ಕಾರ್ಯಕ್ರಮ ಮತ್ತು ಆಗ್ತಿರುವ ಬೆಳವಣಿಗೆ ನೋಡಿದ್ದೇವೆ. ಮುಂದೆ ಕಾಂಗ್ರೆಸ್ ಮಾತ್ರ ಅನಿವಾರ್ಯ ಎಂದು ತಿಳಿದು ಶಿರಾ ತಾಲ್ಲೂಕಿನ ಹಲವು ಮುಖಂಡರು ಕಾಂಗ್ರೆಸ್ ಸೇರ್ಪಡೆ ಆಗುತ್ತಿದ್ದಾರೆ ಎಂದು ತಿಳಿಸಿದರು.
ತುಮಕೂರು: ಆರ್‌ಆರ್‌ನಗರ ಉಪಾಚುನಾವಣೆಯಲ್ಲಿ ಡಿಕೆ ರವಿ ಪತ್ನಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್ ಹಾಗೂ ಜೆಡಿಎಸ್ ಪ್ಲಾನ್ ಮಾಡಿಕೊಂಡಿವೆ ಎಂದು ಹೇಳಲಾಗುತ್ತಿದೆ. ಈ ವಿಚಾರ ಬೆಳಕಿಗೆ ಬರುತ್ತಿದ್ದಂತೆಯೇ ಸೊಸೆ ವಿರುದ್ಧ ರವಿ ತಾಯಿ ಗೌರಮ್ಮ ತಮ್ಮ ಆಕ್ರೋಶ ಹೊರಹಾಕಿದ್ದಾರೆ.
ಕುಣಿಗಲ್‍ನ ದೊಡ್ಡಕೊಪ್ಪಲಿನಲ್ಲಿ ಮಾತನಾಡಿರುವ ಅವರು, ನನ್ನ ಮಗನ ಜೊತೆ ಅವಳೂ ಹೋಗಿ ಬಿಟ್ಲು ಅಂತ ತಿಳಿಕೊಂಡಿದ್ದೇನೆ. ನನ್ನ ಮಗನ ದುಡ್ಡಲ್ಲಿ ಒಂದು ರೂಪಾಯಿ ನಮ್ಮ ಕಷ್ಟಕ್ಕೆ ಕೊಡಲಿಲ್ಲ. ಲೋಫರ್ ಅವ್ಳು, ನನ್ನ ಮಗನ ಹೇಸರೇಳಿಕೊಂಡು ಯಾಕೆ ಚುನಾವಣೆಗೆ ನಿಂತ್ಕೋಬೇಕು ಎಂದು ಕಿಡಿಕಾರಿದ್ದಾರೆ.
ಚುನಾವಣೆ ನಿಂತುಕೊಂಡರೂ ನನ್ನ ಮಗನ ಹೆಸರು ಹಾಗೂ ಫೋಟೋ ಹಾಕಬಾರದು. ಒಂದು ವೇಳೆ ಹಾಕಿಕೊಂಡರೆ ನಾನೇ ಹುಡುಗನ್ನ ಕರೆದುಕೊಂಡು ಹೋಗಿ ಬೆಂಕಿ ಹಚ್ಚಿಸ್ತೀನಿ. ನಾನು ಕಷ್ಟಪಟ್ಟು ಓದಿಸಿದ್ರೆ, ನನ್ನ ಮಗನ ದುಡ್ಡೆಲ್ಲ ನುಂಗಿ ನೀರು ಕುಡಿದ್ಳು ಎಂದು ಕುಸುಮಾ ವಿರುದ್ಧ ಡಿಕೆ ರವಿ ತಾಯಿ ಗೌರಮ್ಮ ವಾಗ್ದಾಳಿ ನಡೆಸಿದ್ದಾರೆ.
ಒಟ್ಟಿನಲ್ಲಿ ಆರ್.ಆರ್.ನಗರದ ಉಪಸಮರದಲ್ಲಿ ಡಿಕೆ ರವಿ ಪತ್ನಿಗೆ ಟಿಕೆಟ್ ಸಾಧ್ಯತೆ ಇದ್ದು, ಇದಕ್ಕೆ ಡಿಕೆ ರವಿ ತಾಯಿ ಕುಟುಂಬಸ್ಥರು ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಕಾಂಗ್ರೆಸ್-ಜೆಡಿಎಸ್‍ನಲ್ಲಿ ಉಪಚುನಾವಣೆಯ ಕಾವು ಜೋರಾಗಿದೆ. ಆರ್.ಆರ್ ನಗರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್‍ಗೆ ಸೂಕ್ತ ಅಭ್ಯರ್ಥಿಗಳು ಇಲ್ಲದ ಕಾರಣ, ಡಿಕೆ ರವಿ ಪತ್ನಿ ಕುಸುಮಾರನ್ನು ಕಣಕ್ಕಿಳಿಸಿ ಅದೃಷ್ಟ ಪರೀಕ್ಷೆ ಮಾಡಿಕೊಳ್ಳಲು ಒಂದೆಡೆ ಮಾಜಿ ಸಿಎಂ ಕುಮಾರಸ್ವಾಮಿ, ಮತ್ತೊಂದೆಡೆ ಡಿಕೆ ಬ್ರದರ್ಸ್ ಕೂಡ ಪ್ರಯತ್ನ ಮಾಡ್ತಿದ್ದಾರೆ ಎಂದು ತಿಳಿದುಬಂದಿದೆ.
ಈ ಬೆಳವಣಿಗೆ ನಡುವೆ ಡಿಕೆ ರವಿ ಪತ್ನಿ ಕುಸುಮಾ ತಂದೆ ಹನುಮಂತರಾಯಪ್ಪ ಜೊತೆಗೆ ಆದಿಚುಂಚನಗಿರಿ ಮಠದ ನಿರ್ಮಲಾನಂದ ಶ್ರೀಗಳನ್ನು ಭೇಟಿ ಮಾಡಿರೋದು ಕುತೂಹಲ ಮೂಡಿಸಿದೆ. ಸಂಸದ ಡಿಕೆ ಸುರೇಶ್, ಆರ್ ಆರ್ ನಗರದ ಕಾಂಗ್ರೆಸ್ ಮುಖಂಡರೊಂದಿಗೆ ಸಭೆ ನಡೆಸಿ, ಅಭಿಪ್ರಾಯ ಸಂಗ್ರಹಿಸುವ ಕೆಲಸ ಮಾಡಿದ್ದಾರೆ.
ಸಭೆ ಬಳಿಕ ಮಾತನಾಡಿದ್ದ ಡಿಕೆ ಸುರೇಶ್, ಎಲ್ಲರನ್ನು ಒಗ್ಗೂಡಿಸಿಕೊಂಡು ಹೋಗೋ ಸಮರ್ಥರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡುತ್ತೇವೆ. ಕುಸುಮಾ ರವಿ ಹೆಸರು ಪ್ರಸ್ತಾಪವಾಗ್ತಿದೆ. ಆದರೆ ಈ ಬಗ್ಗೆ ನನಗೆ ಹೆಚ್ಚಿನ ಮಾಹಿತಿಯಿಲ್ಲ. ಇತ್ತ ಜೆಡಿಎಸ್ ಜೊತೆ ಮೈತ್ರಿಯಿಲ್ಲ ಎಂದ ಸಿದ್ದರಾಮಯ್ಯಗೆ ಮಾಜಿ ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಮೈತ್ರಿಗೆ ಕಾಂಗ್ರೆಸ್ ಯೋಗ್ಯವಾದ ಪಕ್ಷವಲ್ಲ. ನಾವ್ಯಾರು ಕಾಂಗ್ರೆಸ್ ಮನೆ ಬಾಗಿಲಿಗೆ ಹೋಗಿಲ್ಲ ಎಂದು ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದರು.
ರಾಜರಾಜೇಶ್ವರಿ ನಗರ ಉಪ ಚುನಾವಣೆಯಲ್ಲಿ ಮಾಜಿ ಶಾಸಕ ಮುನಿರತ್ನಗೆ ಟಿಕೆಟ್ ನೀಡಲೇಬೇಕೆಂದು ನಿನ್ನೆ ನಡೆದ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದರು.
ಬಳ್ಳಾರಿ: ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ತಂದೆಯ ಜೊತೆ ಪಂಕ್ಚರ್ ಅಂಗಡಿಯಲ್ಲಿ ಕೆಲಸದ ಜೊತೆ ಓದಿದ ಗ್ರಾಮೀಣ ವಿದ್ಯಾರ್ಥಿನಿ ಕುಸುಮ ಕಲಾ ವಿಭಾಗದಲ್ಲಿ ಪಿಯು ಟಾಪರ್ ಆಗಿ ಹೊರಹೊಮ್ಮಿದ್ದಾರೆ.
ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕೊಟ್ಟೂರಿನ ಇಂದು ಪಿಯು ಕಾಲೇಜಿನ ವಿದ್ಯಾರ್ಥಿನಿ ಕುಸುಮ ಉಜ್ಜಿನಿ ಕಲಾ ವಿಭಾಗದಲ್ಲಿ 594 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದ್ದಾರೆ.
ವಿದ್ಯಾರ್ಥಿನಿ ಕುಸುಮ ಅವರ ತಂದೆ ದೇವೇಂದ್ರಪ್ಪ ಕೊಟ್ಟೂರು ಪಟ್ಟಣದಲ್ಲಿ ಪಂಕ್ಚರ್ ಅಂಗಡಿ ಇಟ್ಟುಕೊಂಡಿದ್ದಾರೆ. ವಾಹನಗಳಿಗೆ ಪಂಕ್ಚರ್ ಹಾಕುವ ಮೂಲಕ ಜೀವನ ಸಾಗಿಸುತ್ತಿದ್ದಾರೆ. ವಿದ್ಯಾರ್ಥಿನಿ ಕುಸುಮ ಕೂಡ ವಿದ್ಯಾಭ್ಯಾಸದ ಜೊತೆ ಅಪ್ಪನ ಕೆಲಸದಲ್ಲಿ ಭಾಗಿಯಾಗಿ ಓದಿನಲ್ಲಿ ವಿಶೇಷ ಸಾಧನೆ ನಿರ್ಮಿಸಿದ್ದಾರೆ. ಮುಂದೆ ಏನಾಗಬೇಕು ಎಂದು ಕೇಳಿದ್ದಕ್ಕೆ, ಐಎಎಸ್ ಅಥವಾ ಕೆಎಎಸ್ ಪರೀಕ್ಷೆ ಬರೆದು ಅಧಿಕಾರಿಯಾಗಬೇಕೆಂದು ಕುಸುಮ ಹೇಳಿದ್ದಾರೆ.
ಕುಸುಮ ಬೈಕ್ ಟಯರ್ ಗೆ ಪಂಕ್ಚರ್ ಹಾಕುವ ವಿಡಿಯೋವೊಂದು ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಪಂಕ್ಚರ್ ಆದ ಗಾಡಿ ಬಂದರೆ ಕೈಯಲ್ಲಿ ಸ್ಪ್ಯಾಪರ್ ಹಿಡಿದು ಯಾರ ಸಹಾಯವಿಲ್ಲದೇ ಬೈಕ್ ಟಯರ್ ಬಿಚ್ಚುತ್ತಾರೆ.
ಕಾಲೇಜಿನಲ್ಲಿ ಶಿಕ್ಷಕರು ಟಾಪರ್ ಬಂದಿರುವ ವಿದ್ಯಾರ್ಥಿಗಳಿಗೆ ಅವರ ಪೋಷಕರ ಮುಂದೆ ಸಿಹಿ ತಿನ್ನಿಸುವ ಮೂಲಕ ಸಂಭ್ರಮಿಸಿದ್ದಾರೆ. ತಮ್ಮ ಮಗಳ ಸಾಧನೆಯನ್ನು ಕಂಡು ಪೋಷಕರು ಕೂಡ ಹೆಮ್ಮೆ ಪಟ್ಟಿದ್ದಾರೆ.
ಈ ಬಾರಿ ಇಂದೂ ಪಿಯು ಕಾಲೇಜಿನ ಮೊದಲ 10 ಸ್ಥಾನಗಳ ಪೈಕಿ 9 ಸ್ಥಾನಗಳನ್ನು ಇಂದೂ ಕಾಲೇಜಿನ ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆ. ಕುಸುಮ ಉಜ್ಜಿನಿ ಕಲಾ ವಿಭಾಗದಲ್ಲಿ 594 ಅಂಕ ಪಡೆಯುವ ಮೂಲಕ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. ಕುಸುಮ ಕನ್ನಡ ಮತ್ತು ಸಂಸ್ಕೃತದಲ್ಲಿ 96 ಅಂಕ ಪಡೆದುಕೊಂಡಿದ್ದಾರೆ. ಇನ್ನೂ ಐಚ್ಛಿಕ ಕನ್ನಡ, ಇತಿಹಾಸ ಮತ್ತು ರಾಜಕೀಯ ವಿಜ್ಞಾನ ಮೂರು ವಿಷಯದಲ್ಲೂ 100ಕ್ಕೆ 100 ಅಂಕಗಳನ್ನು ಪಡೆದುಕೊಂಡಿದ್ದಾರೆ. ಕೊನೆಯದಾಗಿ ಶಿಕ್ಷಣದಲ್ಲಿ 99 ಅಂಕವನ್ನು ಪಡೆದುಕೊಂಡಿದ್ದಾರೆ.
ಕಲಾ ವಿಭಾಗದಲ್ಲಿ 2,00,022 ಮಂದಿ ಹಾಜರಾಗಿದ್ದರೆ, 1,01,073 ಮಂದಿ ಪಾಸ್ ಆಗಿದ್ದು, ಶೇ.50.53 ಫಲಿತಾಂಶ ದಾಖಲಾಗಿದೆ. ಕಲಾ ವಿಭಾಗದಲ್ಲಿ ಅತೀ ಹೆಚ್ಚು ಬಳ್ಳಾರಿ ಜಿಲ್ಲೆಯ ವಿದ್ಯಾರ್ಥಿಗಳು ಅತಿ ಹೆಚ್ಚು ಅಂಕ ಪಡೆದುಕೊಂಡಿದ್ದಾರೆ.